Lok Sabha Election 2024: ಬಿಜೆಪಿಯಲ್ಲಿ ಕೆಆರ್‌ಪಿಪಿ ನಾಳೆ ವಿಲೀನ; ಅಧಿಕೃತ ಘೋಷಣೆ ಮಾಡಿದ ಜನಾರ್ದನ ರೆಡ್ಡಿ - Vistara News

Lok Sabha Election 2024

Lok Sabha Election 2024: ಬಿಜೆಪಿಯಲ್ಲಿ ಕೆಆರ್‌ಪಿಪಿ ನಾಳೆ ವಿಲೀನ; ಅಧಿಕೃತ ಘೋಷಣೆ ಮಾಡಿದ ಜನಾರ್ದನ ರೆಡ್ಡಿ

Lok Sabha Election 2024: ಬಿಜೆಪಿ ಜತೆ ಕೆಆರ್‌ಪಿಪಿಯನ್ನು ವಿಲೀನ ಮಾಡುವುದಾಗಿ ಪಕ್ಷದ ಸಂಸ್ಥಾಪಕ ಗಾಲಿ ಜನಾರ್ದನ ರೆಡ್ಡಿ ಘೋಷಿಸಿದ್ದಾರೆ. ಅಲ್ಲದೆ, ಈ ನಿರ್ಧಾರವನ್ನು ಕೈಗೊಂಡಿದ್ದರ ಬಗ್ಗೆಯೂ ಕಾರಣ ನೀಡಿದ್ದಾರೆ.

VISTARANEWS.COM


on

Lok Sabha Election 2024 KRPP to merge with BJP tomorrow Janardhan Reddy makes official announcement
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಸಮೀಪಿಸುತ್ತಿರುವ ಹೊತ್ತಿನಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ (Kalyana Rajya Pragati Party) ಸಂಸ್ಥಾಪಕ, ಮಾಜಿ ಸಚಿವ ಹಾಗೂ ಹಾಲಿ ಶಾಸಕ ಗಾಲಿ ಜನಾರ್ದನ ರೆಡ್ಡಿ (Gali Janardhan Reddy) ಬಿಜೆಪಿ ಸೇರ್ಪಡೆಯಾಗುವುದಾಗಿ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಅಲ್ಲದೆ,‌ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಸೂಚನೆ ಮೇರೆಗೆ ತಮ್ಮ ಪಕ್ಷವನ್ನು ಬಿಜೆಪಿ ಜತೆ ವಿಲೀನ ಮಾಡುವುದಾಗಿ ಹೇಳಿದ್ದಾರೆ. ಶಾ ಭೇಟಿ ಬೆನ್ನಲ್ಲೇ ಈ ಮಹತ್ವದ ಬೆಳವಣಿಗೆ ನಡೆದಿದೆ.

ಚಾಲುಕ್ಯ ಸರ್ಕಲ್ ಬಳಿ ಇರುವ ತಮ್ಮ ನಿವಾಸ ಪಾರಿಜಾತದಲ್ಲಿ ಕೆಆರ್‌ಪಿಪಿ ಕಾರ್ಯಕರ್ತರೊಂದಿಗೆ ಸಭೆ ನಡೆಸಿದ ಜನಾರ್ದನ ರೆಡ್ಡಿ ಬಿಜೆಪಿ ಜತೆ ಪಕ್ಷವನ್ನು ವಿಲೀನ ಮಾಡುವ ಕುರಿತು ಚರ್ಚೆ ನಡೆಸಿದ್ದಾರೆ. ಈ ವೇಳೆ ಬಿಜೆಪಿ ನಾಯಕ ಗೋವಿಂದ ಕಾರಜೋಳ ಸಹ ಉಪಸ್ಥಿತರಿದ್ದರು.

ಬಿಜೆಪಿಗೆ ಜತೆಗಿನ ಸಂಬಂಧದ ಬಗ್ಗೆ ಮಾತನಾಡಿದ ರೆಡ್ಡಿ

ಜನಾರ್ದನ ರೆಡ್ಡಿ ಅವರು ತಮ್ಮ ರಾಜಕೀಯ ಇತಿಹಾಸದ ಬಗ್ಗೆ ಹಾಗೂ ಬಿಜೆಪಿ ಜತೆಗಿನ ಭಾವನಾತ್ಮಕ ಸಂಬಂಧದ ಬಗ್ಗೆ ಮಾಹಿತಿಯನ್ನು ಸಭೆಯಲ್ಲಿ ಆಪ್ತರೊಂದಿಗೆ ಹಂಚಿಕೊಂಡಿದ್ದಾರೆ. ಮಾಜಿ ಸಚಿವೆ ದಿ. ಸುಷ್ಮಾ‌ ಸ್ವರಾಜ್ ಅವರೊಂದಿಗಿನ ಸಂಬಂಧ ಹಾಗೂ ರಾಜಕೀಯ ಏಳು ಬೀಳುಗಳ ಕುರಿತು ಸಭೆಯಲ್ಲಿ ಪ್ರಸ್ತಾಪ ಮಾಡಿದ್ದಾರೆ. ರಾಜಕೀಯವಾಗಿ ನನಗೆ ಗಂಗಾವತಿ ಪುನರ್ಜನ್ಮ ಕೊಟ್ಟಿದೆ. ನನ್ನ ಕೊನೇ ಉಸಿರು ಇರುವವರೆಗೂ ಗಂಗಾವತಿ ಕ್ಷೇತ್ರವನ್ನು ಬಿಡಲ್ಲ. ಕಷ್ಟಕಾಲದಲ್ಲಿ ನನಗೆ ಕ್ಷೇತ್ರದ‌ ಜನರು ಕೈಹಿಡಿದಿದ್ದಾರೆ ಎಂದು ಗಂಗಾವತಿ ಕ್ಷೇತ್ರದ ಕುರಿತು ರೆಡ್ಡಿ ಇದೇ ವೇಳೆ ಭಾವುಕರಾದರು.

ಪ್ರಧಾನಿ ನರೇಂದ್ರ ಮೋದಿಗಾಗಿ ನಾನು ಬಿಜೆಪಿಯೊಂದಿಗೆ ಕೈಜೋಡಿಸುತ್ತೇನೆ ಎಂದು ಈ ಹಿಂದೆಯೇ ಹೇಳಿದ್ದೆ. ಆದರೆ ಅಮಿತ್ ಶಾ ಅವರು ನೀವು ಬರಲೇಬೇಕು ಎಂದಿದ್ದಾರೆ. ಪಕ್ಷ ವಿಲೀನ ಮಾಡಿ ಬಿಜೆಪಿಗೆ ಸೇರಿ ಎಂದು ಹೇಳಿದ್ದಾರೆ. ಹೀಗಾಗಿ ತಮ್ಮ ಅಭಿಪ್ರಾಯ ಕೇಳಲು ಸಭೆ ಕರೆದಿದ್ದೇನೆ ಎಂದು ಹೇಳಿದರು. ಬಳಿಕ ಪಕ್ಷವನ್ನು ವಿಲೀನಗೊಳಿಸಲು ಮುಖಂಡರ ಒಪ್ಪಿಗೆಯನು ಪಡೆದುಕೊಂಡರು.

ನಾಳೆ ಬೆಳಗ್ಗೆ ಬಿಜೆಪಿ ಸೇರ್ಪಡೆ ಸಾಧ್ಯತೆ

ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಚಿವ ಜನಾರ್ದನ ರೆಡ್ಡಿ‌, ಬಿಜೆಪಿಗೆ ಅತಿ ಚಿಕ್ಕ ವಯಸ್ಸಿನಿಂದಲೂ ಕೆಲಸ ಮಾಡಿದ್ದೇನೆ. ಮಧ್ಯದಲ್ಲಿ ಏನೆಲ್ಲ ಆಯಿತು ಎಂಬುದು ನಿಮಗೂ ಗೊತ್ತು. ನಾನು ಕೂಡ ತಾಯಿ ಸಮಾನವಾಗಿರುವ ಬಿಜೆಪಿ ಸೇರ್ಪಡೆಯಾಗುವುದಕ್ಕೂ ಮುನ್ನ ಬೆಂಬಲಿಗರ ಜತೆ ಸಭೆ ಮಾಡಿದ್ದೇನೆ. ಪಕ್ಷದ ಬೆಂಬಲಿಗರು ಬಿಜೆಪಿ ಸೇರಲು ಒಪ್ಪಿದ್ದಾರೆ. ನಾಳೆ ಬೆಳಗ್ಗೆ 10 ಗಂಟೆಗೆ ಬಿ.ವೈ. ವಿಜಯೇಂದ್ರ, ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ನೇತೃತ್ವದಲ್ಲಿ ‌ಸೇರ್ಪಡೆಯಾಗುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ: Lok Sabha Election 2024: ಯದುವೀರ್‌ ಟಾರ್ಗೆಟ್‌ ಬೇಡ; ಮಾತನಾಡುವಾಗ ಬಿ ಕೇರ್‌ಫುಲ್‌: ಸಿಎಂ ಖಡಕ್‌ ಸೂಚನೆ

ಕಳೆದ ಹತ್ತು ವರ್ಷದಲ್ಲಿ ದೇಶಕ್ಕೆ ಒಳ್ಳೆಯ ಹೆಸರು ಬಂದಿದೆ. ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಬೇಕು. ಮತ್ತೆ ಪಕ್ಷಕ್ಕಾಗಿ ಕೆಲಸ ಮಾಡಬೇಕು. ಶ್ರೀರಾಮುಲು ಜತೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಶ್ರೀರಾಮುಲು ಚಿಕ್ಕ ಮಗುವಿನಿಂದಲೂ ಜತೆಗಿದ್ದವರು. ನಾನು ಕೆಆರ್‌ಪಿಪಿ‌ ಕಟ್ಟಿದಾಗ ಯಾರಿಗೂ ಪಕ್ಷಕ್ಕೆ ಬನ್ನಿ ಎಂದಿರಲಿಲ್ಲ. ನನ್ನ ಸ್ವಂತ ಸಹೋದರರಿಗೂ ಹೇಳಿರಲಿಲ್ಲ. ಪಕ್ಷ ಘೋಷಣೆ ಮಾಡುವ ಮುನ್ನ ಯಾರನ್ನೂ ಕರೆದಿಲ್ಲ. ಮತ್ತೆ ತಾಯಿ‌ ಪಕ್ಷಕ್ಕೆ ಮರಳುತ್ತೇನೆ. ಇನ್ನೂ ಮಾತನಾಡುವುದಿದೆ. ನಾಳೆ ಮಾತನಾಡುತ್ತೇನೆ ಎಂದು ಜನಾರ್ದನ ರೆಡ್ಡಿ ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Narendra Modi: ರಾಹುಲ್‌ ಗಾಂಧಿ, ಕೇಜ್ರಿವಾಲ್‌ಗೆ ಪಾಕ್‌ ಬೆಂಬಲ; ತನಿಖೆಯಾಗಲಿ ಎಂದ ಮೋದಿ

Narendra Modi: ಅರವಿಂದ ಕೇಜ್ರಿವಾಲ್‌ ಹಾಗೂ ರಾಹುಲ್‌ ಗಾಂಧಿ ಅವರಿಗೆ ಪಾಕಿಸ್ತಾನದ ನಾಯಕರು ಬಾಹ್ಯ ಬೆಂಬಲ ನೀಡುತ್ತಿರುವ ಕುರಿತು ತನಿಖೆಯಾಗಬೇಕಿದೆ ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ ಸಂದರ್ಶನವೊಂದರಲ್ಲಿ ಹೇಳಿದ್ದಾರೆ. ಇತ್ತೀಚೆಗೆ, ಪಾಕಿಸ್ತಾನದ ಕೆಲ ನಾಯಕರು ಇಬ್ಬರ ಪರವಾಗಿ ಪೋಸ್ಟ್‌ ಮಾಡಿದ್ದರು. ಹಾಗಾಗಿ, ಮೋದಿ ಅವರು ವಾಗ್ದಾಳಿ ನಡೆಸಿದ್ದಾರೆ.

VISTARANEWS.COM


on

Narendra Modi
Koo

ನವದೆಹಲಿ: ಲೋಕಸಭೆ ಚುನಾವಣೆ (Lok Sabha Election 2024) ಕೊನೆಯ ಹಂತಕ್ಕೆ ಬಂದರೂ ರಾಜಕೀಯ ನಾಯಕರ ಅಬ್ಬರದ ಹೇಳಿಕೆ, ಟೀಕೆ, ವ್ಯಂಗ್ಯ, ವಾಗ್ವಾದಗಳು ನಿಲ್ಲುತ್ತಿಲ್ಲ. ಇದಕ್ಕೆ ನಿದರ್ಶನ ಎಂಬಂತೆ, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಹಾಗೂ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್‌ (Arvind Kejriwal) ಅವರ ವಿರುದ್ಧ ಪ್ರಧಾನಿ ನರೇಂದ್ರ ಮೋದಿ (Narendra Modi) ವಾಗ್ದಾಳಿ ನಡೆಸಿದ್ದಾರೆ. “ಅರವಿಂದ ಕೇಜ್ರಿವಾಲ್‌ ಹಾಗೂ ರಾಹುಲ್‌ ಗಾಂಧಿ ಅವರಿಗೆ ಪಾಕಿಸ್ತಾನದ ನಾಯಕರು ಬೆಂಬಲ ನೀಡುತ್ತಿರುವ ಕುರಿತು ತನಿಖೆಯಾಗಬೇಕಿದೆ” ಎಂಬುದಾಗಿ ಪ್ರಧಾನಿ ಹೇಳಿದ್ದಾರೆ.

ಐಎಎನ್‌ಎಸ್‌ ಸುದ್ದಿಸಂಸ್ಥೆಗೆ ಸಂದರ್ಶನ ನೀಡುವ ವೇಳೆ ಮೋದಿ ಅವರು ಈ ವಿಷಯ ಪ್ರಸ್ತಾಪಿಸಿದ್ದಾರೆ. ಪಾಕಿಸ್ತಾನದ ನಾಯಕರ ಬೆಂಬಲದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮೋದಿ, “ನಾನು ಪ್ರಧಾನಿ ಸ್ಥಾನ ಹೊಂದಿದ್ದು, ಅಂತಹ ವಿಷಯಗಳ ಬಗ್ಗೆ ಮಾತನಾಡಬಾರದು. ಆದರೆ, ನಿಮ್ಮ ಕಾಳಜಿ ನನಗೆ ಅರ್ಥವಾಗುತ್ತದೆ. ಕೆಲವರು ನಮ್ಮ ವಿರುದ್ಧ ದ್ವೇಷ ಕಾರುತ್ತಾರೆ. ಆ ದ್ವೇಷ ಕಾರುವವರೇ ನಮ್ಮ ನಾಯಕರಿಗೆ ಬೆಂಬಲ ಸೂಚಿಸುತ್ತಾರೆ. ಆಯ್ಕೆಯ ಆಧಾರದ ಮೇಲೆಯೇ ದ್ವೇಷ ಕಾರುವವರು ಬೆಂಬಲ ನೀಡುತ್ತಾರೆ. ಈ ಕುರಿತು ತನಿಖೆಯಾಗಬೇಕಿದೆ” ಎಂಬುದಾಗಿ ನರೇಂದ್ರ ಮೋದಿ ಹೇಳಿದರು.

ಏನಿದು ಪ್ರಕರಣ?

ಮೇ ತಿಂಗಳ ಆರಂಭದಲ್ಲಿ ಪಾಕಿಸ್ತಾನದ ಮಾಜಿ ಸಚಿವ ಚೌಧರಿ ಫವಾದ್‌ ಅವರು ರಾಹುಲ್‌ ಗಾಂಧಿ ಅವರ ಪೋಸ್ಟ್‌ಅನ್ನು ಹಂಚಿಕೊಂಡು, ಅವರ ಕುರಿತು ಮೆಚ್ಚುಗೆಯ ಮಾತುಗಳನ್ನಾಡಿದ್ದರು. ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಜಾಮೀನು ಸಿಕ್ಕಾಗಲೂ ಚೌಧರಿ ಫವಾದ್‌ ಪ್ರತಿಕ್ರಿಯಿಸಿದ್ದರು. ಆಗ ಅವರು, “ಅರವಿಂದ್‌ ಕೇಜ್ರಿವಾಲ್‌ ಬಿಡುಗಡೆಯಾಗಿದ್ದಾರೆ. ಇದರಿಂದ ಮೋದಿ ಮತ್ತೊಂದು ಯುದ್ಧ ಸೋತಂತಾಗಿದೆ. ಇದು ಭಾರತಕ್ಕೆ ಶುಭ ಸುದ್ದಿ” ಎಂದಿದ್ದರು. ಚುನಾವಣೆ ವೇಳೆಯೂ, “ದ್ವೇಷ ಹಾಗೂ ತೀವ್ರವಾದದ ವಿರುದ್ಧ ಶಾಂತಿ ಹಾಗೂ ಸಾಮರಸ್ಯ ಗೆಲ್ಲುತ್ತದೆ ಎಂಬ ವಿಶ್ವಾಸವಿದೆ” ಎಂದು ಚೌಧರಿಯು ಕೇಜ್ರಿವಾಲ್‌ ಅವರ ಪೋಸ್ಟ್‌ಗೆ ಪ್ರತಿಕ್ರಿಯಿಸಿದ್ದರು.

ಮಣಿಶಂಕರ್‌ ಅಯ್ಯರ್‌ಗೆ ಟಾಂಗ್‌ ಕೊಟ್ಟಿದ್ದ ಮೋದಿ

ಕೆಲ ದಿನಗಳ ಹಿಂದೆ ಇಂಡಿಯಾ ಟಿವಿ ಚಾನೆಲ್‌ ಜತೆ ಸಂವಾದ ನಡೆಸುವ ವೇಳೆ, ಮಣಿಶಂಕರ್‌ ಅಯ್ಯರ್‌ ಹೇಳಿಕೆ ಕುರಿತು ಸಂದರ್ಶಕ ಕೇಳಿದ ಪ್ರಶ್ನೆಗೆ ನರೇಂದ್ರ ಮೋದಿ ಅವರು ಮಾರ್ಮಿಕವಾಗಿ ಉತ್ತರ ನೀಡಿದರು. “ನಾನೇ ಲಾಹೋರ್‌ಗೆ ತೆರಳಿ ಆ ಪಾಕಿಸ್ತಾನದ ಶಕ್ತಿ ಎಷ್ಟಿದೆ ಎಂಬುದನ್ನು ನೋಡಿಕೊಂಡು ಬಂದಿದ್ದೇನೆ. ನನ್ನನ್ನು ನೋಡಿ, ಪಾಕಿಸ್ತಾನದ ಒಬ್ಬ ಪತ್ರಕರ್ತ ಆಶ್ಚರ್ಯದಿಂದ ಕೇಳಿದ. ‘ವೀಸಾ ಇಲ್ಲದೆ ನೀವೇಗೆ ಇಲ್ಲಿಗೆ ಬಂದಿದ್ದೀರಿ’ ಎಂದ. ಅದಕ್ಕೆ ನಾನು, ‘ಪಾಕಿಸ್ತಾನ ಒಂದು ಕಾಲಕ್ಕೆ ನಮ್ಮದೇ ದೇಶದ ಭಾಗವಾಗಿತ್ತು’ ಎಂಬುದಾಗಿ ಉತ್ತರಿಸಿದೆ” ಎಂಬುದಾಗಿ ನರೇಂದ್ರ ಮೋದಿ ಹೇಳಿದ್ದಾರೆ. ಆ ಮೂಲಕ ಮಣಿಶಂಕರ್‌ ಅಯ್ಯರ್‌ ಹೇಳಿಕೆಗೆ ವ್ಯಂಗ್ಯವಾಗಿಯೇ ಉತ್ತರ ಕೊಟ್ಟಿದ್ದರು.

ಇದನ್ನೂ ಓದಿ: Varanasi: ಮೋದಿ ಕುರಿತು ವಾರಾಣಸಿಯಲ್ಲಿರುವ ಕನ್ನಡಿಗರು ಏನಂತಾರೆ? ಇಲ್ಲಿದೆ ‘ವಿಸ್ತಾರ ನ್ಯೂಸ್’ ಗ್ರೌಂಡ್‌ ರಿಪೋರ್ಟ್!

Continue Reading

ದೇಶ

INDIA Bloc: ಜೂನ್‌ 1ರಂದು ‘ಇಂಡಿಯಾ’ ಸಭೆಗೆ ಮಮತಾ ಬ್ಯಾನರ್ಜಿ ಗೈರು; ಆದ್ಯತೆ ಬೇರೆ ಎಂದ ದೀದಿ

INDIA Bloc: ಜೂನ್ 4ರಂದು‌ ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಲಿದ್ದು, ಇದಕ್ಕಾಗಿ ಜೂನ್‌ 1ರ ಸಭೆಯು ಮಹತ್ವ ಪಡೆದುಕೊಂಡಿದೆ. ಇನ್ನು, 1ರಂದು ಇಂಡಿಯಾ ಒಕ್ಕೂಟದ ಸಭೆ ನಡೆಸಲು ತೀರ್ಮಾನಿಸಲಾಗಿದೆ ಎಂಬುದಾಗಿ ಮೊದಲೇ ತಿಳಿದಿತ್ತು. ಆದರೆ, ಸಭೆ ನಡೆಯುವ ದಿನವೇ ಬೇರೆ ರಾಜ್ಯಗಳಂತೆ ಪಶ್ಚಿಮ ಬಂಗಾಳದಲ್ಲೂ ಮತದಾನ ನಡೆಯುವ ಕಾರಣ ಬರಲು ಆಗುವುದಿಲ್ಲ ಎಂಬುದಾಗಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

VISTARANEWS.COM


on

INDIA Bloc
Koo

ನವದೆಹಲಿ: ಲೋಕಸಭೆ ಚುನಾವಣೆ (Lok Sabha Election 2024) ಕೊನೆಯ ಹಂತಕ್ಕೆ ಬಂದು ನಿಂತಿದೆ. ಆರು ಹಂತಗಳ ಮತದಾನ ಮುಕ್ತಾಯಗೊಂಡಿದ್ದು, ಜೂನ್‌ 1ರಂದು ಏಳನೇ ಅಥವಾ ಕೊನೆಯ ಹಂತದ ಮತದಾನದ ಮೂಲಕ ಸಾರ್ವತ್ರಿಕ ಚುನಾವಣೆ ಮುಗಿಯಲಿದೆ. ಇನ್ನು, ಕೊನೆಯ ಹಂತದ ಮತದಾನದ ದಿನವಾದ ಜೂನ್‌ 1ರಂದೇ ಇಂಡಿಯಾ ಒಕ್ಕೂಟದ (INDIA Bloc) ಪಕ್ಷಗಳ ಸಭೆ ನಡೆಯಲಿದೆ. ಆದರೆ, ಇಂಡಿಯಾ ಒಕ್ಕೂಟದ ಮಹತ್ವದ ಸಭೆಗೆ ಗೈರಾಗಲು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ತಿಳಿಸಿದ್ದಾರೆ. ಇದು ಈಗ ಭಾರಿ ಚರ್ಚೆಗೆ ಕಾರಣವಾಗಿದೆ.

ಇಂಡಿಯಾ ಒಕ್ಕೂಟದ ಪಕ್ಷಗಳ ಸಭೆಗೆ ಗೈರಾಗುವ ಕುರಿತು ಕೋಲ್ಕೊತಾದಲ್ಲಿ ನಡೆದ ಚುನಾವಣೆ ಸಮಾವೇಶದಲ್ಲಿ ಮಮತಾ ಬ್ಯಾನರ್ಜಿ ಅವರೇ ಹೇಳಿದ್ದಾರೆ. “ಜೂನ್‌ 1ರಂದು ಇಂಡಿಯಾ ಒಕ್ಕೂಟದ ಸಭೆ ನಡೆಸಲು ತೀರ್ಮಾನಿಸಲಾಗಿದೆ ಎಂಬುದಾಗಿ ಮೊದಲೇ ತಿಳಿದಿತ್ತು. ಆದರೆ, ಜೂನ್‌ 1ರಂದು ಬೇರೆ ರಾಜ್ಯಗಳಂತೆ ಪಶ್ಚಿಮ ಬಂಗಾಳದಲ್ಲೂ ಮತದಾನ ನಡೆಯುವ ಕಾರಣ ಬರಲು ಆಗುವುದಿಲ್ಲ ಎಂಬುದಾಗಿ ತಿಳಿಸಿದ್ದೇನೆ. ಈಗ ರೆಮಾಲ್‌ ಚಂಡಮಾರುತವು ಕೂಡ ರಾಜ್ಯವನ್ನು ಬಾಧಿಸುತ್ತಿದೆ. ಇಂಡಿಯಾ ಒಕ್ಕೂಟದ ಸಭೆಯಲ್ಲಿ ಪಾಲ್ಗೊಳ್ಳುವ ಬದಲು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತೇನೆ. ರಾಜ್ಯದ ಜನರೇ ನನ್ನ ಮೊದಲ ಆದ್ಯತೆ” ಎಂಬುದಾಗಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಇಂಡಿಯಾ ಒಕ್ಕೂಟದ ಸಭೆ ಏಕೆ?

ಜೂನ್‌ 1ರಂದು ಲೋಕಸಭೆ ಚುನಾವಣೆ ಸಮಾರೋಪಗೊಳ್ಳಲಿದೆ. ಕಾಂಗ್ರೆಸ್‌, ಸಿಪಿಎಂ ಸೇರಿ ಹಲವು ಪಕ್ಷಗಳು ಒಗ್ಗೂಡಿ ಇಂಡಿಯಾ ಒಕ್ಕೂಟವನ್ನು ರಚಿಸಲಾಗಿದೆ. ಜೂನ್‌ 4ರಂದು ಚುನಾವಣೆ ಫಲಿತಾಂಶ ಪ್ರಕಟವಾಗಲಿದ್ದು, ಇದಕ್ಕಾಗಿ ಜೂನ್‌ 1ರ ಸಭೆಯು ಮಹತ್ವ ಪಡೆದುಕೊಂಡಿದೆ. ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟವು ಹೆಚ್ಚು ಸ್ಥಾನಗಳನ್ನು ಗೆದ್ದರೆ ಮುಂದೆ ಹೇಗೆ ತೀರ್ಮಾನ ತೆಗೆದುಕೊಳ್ಳಬೇಕು? ಎಲ್ಲ ಪ್ರತಿಪಕ್ಷಗಳು ಒಗ್ಗಟ್ಟಿನಿಂದ ಹೇಗೆ ಇರಬೇಕು? ಹಿನ್ನಡೆಯಾದರೆ ಏನು ಮಾಡಬೇಕು ಎಂಬುದು ಸೇರಿ ಹಲವು ವಿಷಯಗಳ ಕುರಿತು ಇಂಡಿಯಾ ಒಕ್ಕೂಟದ ಮಿತ್ರಪಕ್ಷಗಳ ನಾಯಕರು ಚರ್ಚಿಸಲಿದ್ದಾರೆ ಎಂದು ತಿಳಿದುಬಂದಿದೆ.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೆಲ ದಿನಗಳ ಹಿಂದಷ್ಟೇ ಫಲೋಡಿ ಸಟ್ಟಾ ಬಜಾರ್‌ ಸಮೀಕ್ಷೆ ಪ್ರಕಟಿಸಿದೆ. ಬಿಜೆಪಿಯೊಂದೇ 304-306 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ಇನ್ನು ಎನ್‌ಡಿಎ ಮೈತ್ರಿಕೂಟವು ಸುಲಭವಾಗಿ 325-330 ಕ್ಷೇತ್ರಗಳಲ್ಲಿ ಜಯಿಸಲಿದೆ. ಮತ್ತೊಂದೆಡೆ ಕಾಂಗ್ರೆಸ್‌ ಪಕ್ಷವು 60-62 ಕ್ಷೇತ್ರಗಳಲ್ಲಿ ಜಯಿಸಲಿದೆ ಎಂಬುದಾಗಿ ಸಮೀಕ್ಷಾ ವರದಿ ತಿಳಿಸಿದೆ. ಹಾಗಾಗಿ, ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರವೇ ಸತತ ಮೂರನೇ ಬಾರಿಗೆ ಅಧಿಕಾರಕ್ಕೆ ಬರಲಿದೆ ಎಂಬುದು ವರದಿಯ ಸಾರಾಂಶವಾಗಿದೆ.

ಇದನ್ನೂ ಓದಿ: PM Narendra Modi: ಪ್ರಧಾನಿ ಮೋದಿ ಉಳಿದುಕೊಂಡಿದ್ದ ಹೋಟೆಲ್ ಬಿಲ್ ಪಾವತಿಸಲು ರಾಜ್ಯ ಸರ್ಕಾರ ನಿರ್ಧಾರ; ಎಷ್ಟು ಖರ್ಚಾಗಿತ್ತು?

Continue Reading

ದೇಶ

Rahul Gandhi: ರಾಹುಲ್‌ ಗಾಂಧಿ ಜಿಂದಾಬಾದ್‌ ಎನ್ನುತ್ತಲೇ ಕುಸಿದ ವೇದಿಕೆ; ತಬ್ಬಿಬ್ಬಾದ ಕಾಂಗ್ರೆಸ್‌ ನಾಯಕ, ವಿಡಿಯೊ ಇಲ್ಲಿದೆ

Rahul Gandhi: ನಾಯಕರು ವೇದಿಕೆ ಮೇಲೆ ನಿಂತು, ಜನರತ್ತ ಕೈಬೀಸಿ ಬಲ ಪ್ರದರ್ಶನ ಮಾಡುವಾಗಲೇ ವೇದಿಕೆ ಕುಸಿದಿದೆ. ಕೆಲ ಸೆಕೆಂಡ್‌ಗಳವರೆಗೆ ಗಾಬರಿಯಾದ ರಾಹುಲ್‌ ಗಾಂಧಿ ಅವರು ಕೂಡಲೇ ಮೀಸಾ ಭಾರ್ತಿ ಅವರು ಸರಿಯಾಗಿ ನಿಲ್ಲಲು ನೆರವು ನೀಡಿದರು. ಕೆಲವೇ ಕ್ಷಣಗಳಲ್ಲಿ ವೇದಿಕೆಯು ಎರಡು ಬಾರಿ ಕುಸಿದ ಕಾರಣ ಜನರಲ್ಲೂ ಕೆಲ ಕಾಲ ಆತಂಕ ಮೂಡಿತ್ತು.

VISTARANEWS.COM


on

Rahul Gandhi
Koo

ಪಟನಾ: ಲೋಕಸಭೆ ಚುನಾವಣೆಯ (Lok Sabha Election 2024) ಆರು ಹಂತಗಳ ಮತದಾನ ಮುಕ್ತಾಯಗೊಂಡಿದ್ದು, ಜೂನ್‌ 1ರಂದು ಕೊನೆಯ ಹಂತದ ಮತದಾನ ನಡೆಯಲಿದೆ. ಹಾಗಾಗಿ, ಕೊನೆಯ ಹಂತದ ಚುನಾವಣೆಗಾಗಿ ರಾಜಕೀಯ ನಾಯಕರು ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಇದೇ ರೀತಿ, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಅವರು ಬಿಹಾರದಲ್ಲಿ (Bihar) ಚುನಾವಣೆ ಪ್ರಚಾರ ಕೈಗೊಂಡಿದ್ದಾರೆ. ಇನ್ನು ರಾಹುಲ್‌ ಗಾಂಧಿ ಅವರು ಸಮಾವೇಶದಲ್ಲಿ ಪಾಲ್ಗೊಳ್ಳುವ ವೇಳೆ ಅವರಿದ್ದ ವೇದಿಕೆ ಕುಸಿದಿದ್ದು, ಸ್ವಲ್ಪರದರಲ್ಲಿಯೇ ಕಾಂಗ್ರೆಸ್‌ ನಾಯಕ ಪಾರಾಗಿದ್ದಾರೆ.

ಪಟನಾ ಹೊರವಲಯದಲ್ಲಿರುವ ಪಾಲಿಗಂಜ್‌ನಲ್ಲಿ ಚುನಾವಣೆ ಸಮಾವೇಶ ಆಯೋಜಿಸಲಾಗಿತ್ತು. ಬೃಹತ್‌ ಸಮಾವೇಶದ ಹಿನ್ನೆಲೆಯಲ್ಲಿ ಸಾವಿರಾರು ಜನ ಪಾಲ್ಗೊಂಡಿದ್ದರು. ಇಂಡಿಯಾ ಒಕ್ಕೂಟದ ಮಿತ್ರಪಕ್ಷ, ಆರ್‌ಜೆಡಿ ಅಭ್ಯರ್ಥಿ ಮೀಸಾ ಭಾರ್ತಿ ಪರವಾಗಿ ಮತಯಾಚಿಸಲು ರಾಹುಲ್‌ ಗಾಂಧಿ ಆಗಮಿಸಿದ್ದರು. ಇದೇ ವೇಳೆ, ರಾಹುಲ್‌ ಗಾಂಧಿ ಹಾಗೂ ಮೀಸಾ ಭಾರ್ತಿ ಸೇರಿ ಹಲವು ನಾಯಕರು ವೇದಿಕೆ ಮೇಲೆ ನಿಂತಿದ್ದರು. ಆಗ, ವೇದಿಕೆಯು ಕುಸಿದಿದೆ. ಈ ವಿಡಿಯೊ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ವೇದಿಕೆ ಕುಸಿದ ವಿಡಿಯೊ ಇಲ್ಲಿದೆ

ನಾಯಕರು ವೇದಿಕೆ ಮೇಲೆ ನಿಂತು, ಜನರತ್ತ ಕೈಬೀಸಿ ಬಲ ಪ್ರದರ್ಶನ ಮಾಡುವಾಗಲೇ ವೇದಿಕೆ ಕುಸಿದಿದೆ. ಕೆಲ ಸೆಕೆಂಡ್‌ಗಳವರೆಗೆ ಗಾಬರಿಯಾದ ರಾಹುಲ್‌ ಗಾಂಧಿ ಅವರು ಕೂಡಲೇ ಮೀಸಾ ಭಾರ್ತಿ ಅವರು ಸರಿಯಾಗಿ ನಿಲ್ಲಲು ನೆರವು ನೀಡಿದರು. ಇನ್ನೇನು ಸ್ಟೇಜ್‌ನಿಂದ ಹೊರಡಬೇಕು ಎನ್ನುವರಷ್ಟರಲ್ಲಿ ವೇದಿಕೆಯು ಮತ್ತಷ್ಟು ಕುಸಿಯಿತು. ಆಗ ರಾಹುಲ್‌ ಗಾಂಧಿ ಅವರು ನಗುತ್ತಲೇ ಜನರತ್ತ ಕೈಬೀಸಿದರು. ವೇದಿಕೆಯು ತುಂಬ ಎತ್ತರದಲ್ಲಿ ಇರದ ಕಾರಣ ಯಾರಿಗೂ ಗಾಯಗಳಾಗಿಲ್ಲ ಎಂಬುದಾಗಿ ತಿಳಿದುಬಂದಿದೆ.

ಬಿಹಾರದಲ್ಲಿ ಇಂಡಿಯಾ ಒಕ್ಕೂಟದ ಮಿತ್ರಪಕ್ಷಗಳು ಒಗ್ಗೂಡಿ ಚುನಾವಣೆ ಕಣಕ್ಕಿಳಿದಿವೆ. ಆರ್‌ಜೆಡಿಯು 26 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದರೆ, ಕಾಂಗ್ರೆಸ್‌ 9, ಸಿಪಿಐ (ಎಂಎಲ್) ಹಾಗೂ ಸಿಪಿಎಂ ಪಕ್ಷಗಳು ತಲಾ ಒಂದು ಕ್ಷೇತ್ರದಲ್ಲಿ ಸ್ಪರ್ಧೆಗೆ ಇಳಿದಿವೆ. ನಾಲ್ಕೂ ಪಕ್ಷಗಳು ಒಗ್ಗೂಡಿ ಎನ್‌ಡಿಎ ಮೈತ್ರಿಕೂಟಕ್ಕೆ ಸೆಡ್ಡು ಹೊಡೆಯಲು ತೀರ್ಮಾನಿಸಿವೆ. ಹಾಗಾಗಿ, ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಅವರು ಬಿಹಾರದಲ್ಲಿ ಮೀಸಾ ಭಾರ್ತಿ ಅವರ ಪರವಾಗಿ ಪ್ರಚಾರ ಕೈಗೊಂಡಿದ್ದಾರೆ. ಜೂನ್‌ 1ರಂದು ಕೊನೆಯ ಹಂತದ ಮತದಾನ ನಡೆಯಲಿದ್ದು, ಜೂನ್‌ 4ರಂದು ಫಲಿತಾಂಶ ಪ್ರಕಟವಾಗಲಿದೆ.

Lok Sabha Election: Stage Collapses At Rahul Gandhi’s Bihar Poll Rally With Misa Bharti

Continue Reading

ಕರ್ನಾಟಕ

Lok Sabha Election 2024: ಲೋಕಸಭೆ ಚುನಾವಣೆ ಮತ ಎಣಿಕೆ; ಜೂ. 4ರಂದು ಬೆಂಗಳೂರಿನಲ್ಲಿ ನಿಷೇಧಾಜ್ಞೆ

Lok Sabha Election 2024: ಲೋಕಸಭಾ ಚುನಾವಣೆ ಫಲಿತಾಂಶ ಬಿಡುಗಡೆ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಜೂನ್‌ 4ರಂದು ಬೆಂಗಳೂರು ಪೊಲೀಸ್‌ ಕಮೀಷನರೇಟ್‌ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

VISTARANEWS.COM


on

Lok Sabha Election 2024
Koo

ಬೆಂಗಳೂರು: ಲೋಕಸಭೆ ಚುನಾವಣೆ ಮತ ಎಣಿಕೆ (Lok Sabha Election 2024) ಹಿನ್ನೆಲೆಯಲ್ಲಿ ಜೂನ್‌ 4ರಂದು ಬೆಂಗಳೂರು ಪೊಲೀಸ್‌ ಕಮೀಷನರೇಟ್‌ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ (Prohibitory order) ಜಾರಿ ಮಾಡಿ ನಗರ ಪೊಲೀಸ್ ಕಮೀಷನರ್ ಬಿ. ದಯಾನಂದ್ ಆದೇಶ ಹೊರಡಿಸಿದ್ದಾರೆ.

ರಾಜ್ಯದಲ್ಲಿ ಏ. 26 ಮತ್ತು ಮೇ 7ರಂದು ಎರಡು ಹಂತದಲ್ಲಿ ಲೋಕಸಭಾ ಚುನಾವಣೆ ನಡೆದಿತ್ತು. ಹೀಗಾಗಿ ವಸಂತನಗರದ ಮೌಂಟ್ ಕಾರ್ಮೆಲ್ ಕಾಲೇಜು, ವಿಠಲ್ ಮಲ್ಯ ರಸ್ತೆಯ ಸೇಂಟ್ ಜೋಸೆಫ್ ಇಂಡಿಯನ್ ಹೈಸ್ಕೂಲ್ ಹಾಗೂ ಜಯನಗರದ ಎಸ್.ಎಸ್.ಎಂ.ಆರ್.ವಿ. ಕಾಲೇಜಿನಲ್ಲಿ ಮತ ಎಣಿಕೆ ನಡೆಯಲಿದೆ.

ಮತ ಎಣಿಕೆ ನಡೆಯುವ ಸಮಯದಲ್ಲಿ ಕೆಲ ಸಮಾಜಘಾತುಕ ವ್ಯಕ್ತಿಗಳು, ಕಿಡಿಗೇಡಿಗಳು, ಗೆದ್ದ ಹಾಗೂ ಸೋತ ಅಭ್ಯರ್ಥಿಗಳ ಪರ, ವಿರುದ್ಧ ಪ್ರತಿಭಟನೆ ನಡೆಸಿ, ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಹಾಗೂ ಸಾರ್ವಜನಿಕ ಆಸ್ತಿ-ಪಾಸ್ತಿಗಳಿಗೆ ನಷ್ಟವುಂಟುಮಾಡುವ ಸಾಧ್ಯತೆಗಳು ಇರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ನಿಷೇಧಾಜ್ಞೆ ಹಿನ್ನೆಲೆಯಲ್ಲಿ ಯಾವುದೇ ಮಾರಕಾಸ್ತ್ರಗಳೊಂದಿಗೆ ತಿರುಗಾಡಬಾರದು, ಬ್ಯಾನರ್‌ಗಳು ಹಾಕುವಂತಿಲ್ಲ,‌ ಪಟಾಕಿ ಸಿಡಿಸುವಂತಿಲ್ಲ. ಹಾಗೆಯೇ ಐದು ಜನರಿಗಿಂತ ಹೆಚ್ಚು ಜನರು ಗುಂಪುಗೂಡುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ | DK Shivakumar: ಪೊಲೀಸ್‌ ಠಾಣೆ ಮೇಲೆ ದಾಳಿ ಮಾಡಿದವರ ಮೇಲೆ ಕಠಿಣ ಕ್ರಮ; ಡಿ.ಕೆ.ಶಿವಕುಮಾರ್

ಚನ್ನಗಿರಿ ಲಾಕಪ್‌ ಡೆತ್‌ ಪ್ರಕರಣ; ಡಿವೈಎಸ್ಪಿ ಸೇರಿ ಮೂವರು ಪೊಲೀಸ್‌ ಅಧಿಕಾರಿಗಳ ಸಸ್ಪೆಂಡ್

Lockup Death

ದಾವಣಗೆರೆ: ಚನ್ನಗಿರಿ ಯುವಕನ ಲಾಕಪ್‌ ಡೆತ್‌ ಪ್ರಕರಣ (Lockup Death) ಸಂಬಂಧ ಚನ್ನಗಿರಿ ಡಿವೈಎಸ್‌ಪಿ ಪ್ರಶಾಂತ್ ಮುನ್ನೊಳ್ಳಿ, ಸರ್ಕಲ್‌ ಇನ್‌ಸ್ಪೆಕ್ಟರ್ ನಿರಂಜನ. ಬಿ ಹಾಗೂ ಪಿಎಸ್‌ಐ ಅಕ್ತರ್ ಅಮಾನತುಗೊಂಡಿದ್ದಾರೆ. ಮೂವರು ಅಧಿಕಾರಿಗಳನ್ನ ಸೇವೆಯಿಂದ ಬಿಡುಗಡೆ ಮಾಡಿ ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಆದೇಶ ಹೊರಡಿಸಿದ್ದಾರೆ.

ಮೇ 24 ರಂದು ದಾವಣಗೆರೆ ಜಿಲ್ಲೆಯ ಚನ್ನಗಿರಿ ಠಾಣೆಯಲ್ಲಿದ್ದ ಆದಿಲ್ ಎಂಬ ಯುವಕ ಮೃತಪಟ್ಟಿದ್ದರಿಂದ ಕುಟುಂಬಸ್ಥರು ಲಾಕಪ್ ಡೆತ್ ಆರೋಪ ಮಾಡಿ, ಪೊಲೀಸರೇ ಹೊಡೆದು ಯುವಕನನ್ನು ಕೊಂದಿದ್ದರು ಎಂದು ಹೇಳಿದ್ದರು. ನಂತರ ಸಂಬಂಧಿಕರು, ಸ್ಥಳೀಯರು ಚನ್ನಗಿರಿ ಪೊಲೀಸ್‌ ಠಾಣೆ ಎದುರು ಪ್ರತಿಭಟನೆ ನಡೆಸಿದ್ದರು.

ಇದನ್ನೂ ಓದಿ | Self Harming: ಮೇಲಧಿಕಾರಿಗಳ ಕಿರುಕುಳ, ಹಗರಣದ ಕರಿನೆರಳು: ವಾಲ್ಮೀಕಿ ಅಭಿವೃದ್ಧಿ ನಿಗಮದ ಸೂಪರಿಂಟೆಂಡೆಂಟ್ ಆತ್ಮಹತ್ಯೆ

ಪ್ರತಿಭಟನೆ ವೇಳೆ ಕೆಲ ಕಿಡಿಗೇಡಿಗಳು ಪೊಲೀಸ್‌ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿದ್ದರಿಂದ ಐದು ಪೊಲೀಸ್ ವಾಹನ‌‌ ಜಖಂಗೊಂಡು, ಹನ್ನೊಂದು ಪೊಲೀಸರಿಗೆ ಗಾಯಗಳಾಗಿದ್ದವು. ಹೀಗಾಗಿ ಪ್ರಕರಣ ಸಂಬಂಧ ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಈ ಬಗ್ಗೆ ಪೂರ್ವ ವಲಯ ಐಜಿಪಿ ಡಾ. ತ್ಯಾಗರಾಜನ್ ಮಾಹಿತಿ ನೀಡಿದ್ದಾರೆ.

Continue Reading
Advertisement
Vijayapura news
ಪ್ರಮುಖ ಸುದ್ದಿ1 hour ago

Vijayapura News : ಪ್ರೀತಿಸಿದವಳನ್ನೇ ಮದುವೆಯಾಗಲು ಯುವಕನ ಹಠ; ಪರಸ್ಪರ ಪೆಟ್ರೋಲ್ ಎರಚಿ ಬೆಂಕಿ ಹಚ್ಚಿಕೊಂಡು ಆಸ್ಪತ್ರೆ ಸೇರಿದರು!

Prajwal Revanna Case
ಪ್ರಮುಖ ಸುದ್ದಿ2 hours ago

Prajwal Revanna Case : ಮಾಜಿ ಶಾಸಕ ಪ್ರೀತಂ ಗೌಡ ಆಪ್ತ ಚೇತನ್​ಗೆ ಎಸ್ಐಟಿ ನೋಟಿಸ್

Yuvraj Singh
ಕ್ರೀಡೆ2 hours ago

Yuvraj Singh : ಅಪಾರ್ಟ್​ಮೆಂಟ್ ವಿತರಣೆಯಲ್ಲಿ ಮೋಸ, ರಿಯಲ್ ಎಸ್ಟೇಟ್ ಸಂಸ್ಥೆಗಳಿಗೆ ನೋಟಿಸ್​ ಕೊಟ್ಟ ಯುವರಾಜ್ ಸಿಂಗ್

Kavya Maran
ಪ್ರಮುಖ ಸುದ್ದಿ3 hours ago

Kavya Maran : ಸೋತಾಗ ಕಣ್ಣೀರು ಹಾಕಿದ ಕಾವ್ಯಾ ಮಾರನ್​, ​ ಡ್ರೆಸಿಂಗ್​ ರೂಮ್​ಗೆ ತೆರಳಿ ಆಟಗಾರರನ್ನೇ ನಗಿಸಿದರು; ಇಲ್ಲಿದೆ ವಿಡಿಯೊ

Viral Video
ದೇಶ3 hours ago

Viral Video: ಬೆಂಗಳೂರಿನಲ್ಲಷ್ಟೇ ಅಲ್ಲ, ಮೌಂಟ್ ಎವರೆಸ್ಟ್ ನಲ್ಲೂ ಈಗ ಟ್ರಾಫಿಕ್ ಜಾಮ್!!

Samsung Galaxy F55 5G Smartphone Released With Exciting Classy Veegan Leather Design
ದೇಶ3 hours ago

Samsung Galaxy: ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಎಫ್ 55 5ಜಿ ಸ್ಮಾರ್ಟ್‌ಫೋನ್ ರಿಲೀಸ್‌; ಏನಿದರ ವಿಶೇಷತೆ?

Kannada New Movie
ಕರ್ನಾಟಕ3 hours ago

Kannada New Movie: ʼಬ್ಯಾಂಕ್ ಆಫ್‌ ಭಾಗ್ಯಲಕ್ಷ್ಮಿʼ ಚಿತ್ರದ ಅನಿಮೇಷನ್‌ ಟೀಸರ್‌ ರಿಲೀಸ್‌

Golden Star Ganesh Krishnam Pranaya Sakhi movie first song release in Mysore
ಕರ್ನಾಟಕ3 hours ago

Golden Star Ganesh: ಮೊದಲ ಹಾಡಿನಲ್ಲೇ ಮೋಡಿ ಮಾಡಿದ ʼಕೃಷ್ಣಂ ಪ್ರಣಯ ಸಖಿʼ

Mandya News
ಪ್ರಮುಖ ಸುದ್ದಿ3 hours ago

Mandya News : ಬೆಳ್ಳೂರಿನಲ್ಲಿ ಮುಸ್ಲಿಮ್ ಯುವಕರ ಗುಂಪಿನಿಂದ ಅಭಿಲಾಷ್​ ಎಂಬುವರ ಮೇಲೆ ಮಾರಕ ಹಲ್ಲೆ

11th Annual Mahotsav of Sri Annapurneswari Temple in Belagavi from 29th May
ಬೆಳಗಾವಿ3 hours ago

Belagavi News: ಬೆಳಗಾವಿಯಲ್ಲಿ ಮೇ 29ರಿಂದ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದ 11ನೇ ವಾರ್ಷಿಕ ಮಹೋತ್ಸವ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ8 hours ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 day ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 day ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ5 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ6 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು7 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು7 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ1 week ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಟ್ರೆಂಡಿಂಗ್‌