Physical Abuse: 4 ವರ್ಷದ ಬಾಲಕಿ ಮೇಲೆ ಮೊಹಮ್ಮದ್‌ ಎಂಬಾತನಿಂದ ಅತ್ಯಾಚಾರ; ಮಗು ಸ್ಥಿತಿ ಗಂಭೀರ - Vistara News

ದೇಶ

Physical Abuse: 4 ವರ್ಷದ ಬಾಲಕಿ ಮೇಲೆ ಮೊಹಮ್ಮದ್‌ ಎಂಬಾತನಿಂದ ಅತ್ಯಾಚಾರ; ಮಗು ಸ್ಥಿತಿ ಗಂಭೀರ

Physical Abuse: ದೆಹಲಿಯ ಪಾಂಡವ ನಗರದಲ್ಲಿ 34 ವರ್ಷದ ವ್ಯಕ್ತಿಯೊಬ್ಬ 4 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ. ಇದಾದ ಬಳಿಕ ನೂರಾರು ಜನ ಪ್ರತಿಭಟನೆ ನಡೆಸಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

VISTARANEWS.COM


on

Physical abuse
ಸಾಂದರ್ಭಿಕ ಚಿತ್ರ.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (Delhi) ಹೆಣ್ಣುಮಕ್ಕಳ ಸುರಕ್ಷತೆ ಎಂಬುದು ಮರೀಚಿಕೆಯಾಗಿಯೇ ಉಳಿದಿದೆ. ಮಹಿಳೆಯರು, ಯುವತಿಯರು ಹಾಗೂ ಮಕ್ಕಳ ಮೇಲೆ ಅತ್ಯಾಚಾರ, ಲೈಂಗಿಕ ಕಿರುಕುಳದಂತಹ ಸುದ್ದಿಗಳು ಸಾಮಾನ್ಯ ಎಂಬಂತಾಗಿವೆ. ಇದಕ್ಕೆ ನಿದರ್ಶನ ಎಂಬಂತೆ, ದೆಹಲಿಯ ಪಾಂಡವ ನಗರದಲ್ಲಿ 34 ವರ್ಷದ ಮೊಹಮ್ಮದ್‌ ಎಂಬಾತ 4 ವರ್ಷದ ಬಾಲಕಿ ಮೇಲೆ ಅತ್ಯಾಚಾರ (Physical Abuse) ಎಸಗಿದ್ದಾನೆ. ಬಾಲಕಿಯ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಆಕೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಪಾಂಡವ ನಗರದಲ್ಲಿ ಬಾಲಕಿಯು ಟ್ಯೂಷನ್‌ಗೆ ತೆರಳಿದ್ದಾಳೆ. ಟ್ಯೂಷನ್‌ನಲ್ಲಿ ಟೀಚರ್‌ ಇಲ್ಲದ ಕಾರಣ ಆಕೆ ಸುಮ್ಮನೆ ಕುಳಿತಿದ್ದಾಳೆ. ಇದೇ ವೇಳೆ ಟ್ಯೂಷನ್‌ ಸೆಂಟರ್‌ನಲ್ಲಿದ್ದ ಟೀಚರ್‌ ಸಹೋದರನು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಅತ್ಯಾಚಾರದ ಬಳಿಕ ಬಾಲಕಿಯನ್ನು ಹೆದರಿಸಿದ ಆತ, ಯಾರಿಗೂ ಈ ಕುರಿತು ಹೇಳಬಾರದು ಎಂದು ತಾಕೀತು ಮಾಡಿದ್ದಾನೆ. ಬಾಲಕಿಯು ಅಳುತ್ತ ಮನೆಗೆ ಬಂದಾಗ ಕೃತ್ಯ ಬಹಿರಂಗವಾಗಿದೆ. ಶನಿವಾರ (ಮಾರ್ಚ್‌ 23) ಬಾಲಕಿಯ ಪೋಷಕರು ಮಾಂಡವಲಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

“ನಾಲ್ಕು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ಆಕೆಯ ಪೋಷಕರು ಮಾಂಡವಲಿ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ. 34 ವರ್ಷದ ಮೊಹಮ್ಮದ್‌ ಅಪ್ಪು ಎಂಬಾತನು ಅತ್ಯಾಚಾರ ಎಸಗಿದ್ದಾನೆ ಎಂಬುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಮೊಹಮ್ಮದ್‌ನನ್ನು ಬಂಧಿಸಿದ್ದಾರೆ” ಎಂದು ಹಿರಿಯ ಪೊಲೀಸ್‌ ಅಧಿಕಾರಿ ಸಾಗರ್‌ ಸಿಂಗ್‌ ಮಾಹಿತಿ ನೀಡಿದ್ದಾರೆ. ಬಾಲಕಿಯ ಗುಪ್ತಾಂಗದಲ್ಲಿ ಬಾವು ಕಾಣಿಸಿಕೊಂಡಿದ್ದನ್ನು ಗಮನಿಸಿದ ಪೋಷಕರು ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ, ಬಾಲಕಿಗೆ ಏಮ್ಸ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ: Physical Abuse : ಮನೆಯಲ್ಲಿ ಒಬ್ಬಂಟಿಯಾಗಿದ್ದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ

ಜನರಿಂದ ಪ್ರತಿಭಟನೆ, ಕಾರುಗಳು ಧ್ವಂಸ

ನಾಲ್ಕು ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಲಾಗಿದೆ ಎಂಬ ಪ್ರಕರಣ ಬಯಲಾಗುತ್ತಲೇ ಪಾಂಡವ ನಗರದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಬಾಲಕಿಯ ಸಂಬಂಧಿಕರು ಸೇರಿ ನೂರಾರು ಜನ ಪೊಲೀಸ್‌ ಠಾಣೆ ಸೇರಿ ಹಲವೆಡೆ ಪ್ರತಿಭಟನೆ ನಡೆಸಿದ್ದು, ಕಾರುಗಳನ್ನು ಧ್ವಂಸಗೊಳಿಸಿದ್ದಾರೆ. ಆರೋಪಿ ಅರ್ಮಾನ್‌ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆಯಲ್ಲಿ ಪೊಲೀಸರು ಬಿಗಿ ಬಂದೋಬಸ್ತ್‌ ಏರ್ಪಡಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Sushil Kumar Modi : ಬಿಹಾರದ ಮಾಜಿ ಡಿಸಿಎಂ ಸುಶೀಲ್ ಕುಮಾರ್ ಮೋದಿ ನಿಧನ

VISTARANEWS.COM


on

Sushil Kumar Modi
Koo

ನವದೆಹಲಿ: ಬಿಹಾರದ ಮಾಜಿ ಉಪಮುಖ್ಯಮಂತ್ರಿ ಮತ್ತು ಬಿಜೆಪಿಯ ಹಿರಿಯ ಮುಖಂಡ ಸುಶೀಲ್ ಕುಮಾರ್ ಮೋದಿ (72) ಸೋಮವಾರ ನಿಧನನ ಹೊಂದಿದ್ದಾರೆ. ಸುಶೀಲ್ ಕುಮಾರ್ ಮೋದಿ ಅವರು ಕ್ಯಾನ್ಸರ್​​ ಸಮಸ್ಯೆಯಿಂದ ಬಳಲುತ್ತಿದ್ದರು. ತಮ್ಮ ಆರೋಗ್ಯ ಸ್ಥಿತಿಯಿಂದಾಗಿ 2024 ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಈ ವರ್ಷದ ಏಪ್ರಿಲ್​​ನಲ್ಲಿ ಘೋಷಿಸಿದ್ದರು. ಮಾಜಿ ರಾಜ್ಯಸಭಾ ಸಂಸದರಾಗಿದ್ದ ಅವರ ಪಾರ್ಥಿವ ಶರೀರವನ್ನು ನಾಳೆ (ಮೇ 14) ಪಾಟ್ನಾದ ರಾಜೇಂದ್ರ ನಗರ ಪ್ರದೇಶದಲ್ಲಿರುವ ಅವರ ನಿವಾಸಕ್ಕೆ ತರಲಾಗುವುದು ಎಂದು ಮೂಲಗಳು ತಿಳಿಸಿವೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ, ಬಿಹಾರದ ಉಪಮುಖ್ಯಮಂತ್ರಿಗಳಾದ ಸಾಮ್ರಾಟ್ ಚೌಧರಿ ಮತ್ತು ವಿಜಯ್ ಕುಮಾರ್ ಸಿನ್ಹಾ ಸೇರಿದಂತೆ ಹಲವಾರು ಬಿಜೆಪಿ ನಾಯಕರು ಸುಶೀಲ್ ಕುಮಾರ್ ಮೋದಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಪಕ್ಷದಲ್ಲಿ ನನ್ನ ಮೌಲ್ಯಯುತ ಸಹೋದ್ಯೋಗಿ ಮತ್ತು ದಶಕಗಳಿಂದ ನನ್ನ ಸ್ನೇಹಿತ ಸುಶೀಲ್ ಮೋದಿ ಜಿ ಅವರ ಅಕಾಲಿಕ ನಿಧನದಿಂದ ನಾನು ತೀವ್ರ ದುಃಖಿತನಾಗಿದ್ದೇನೆ. ಬಿಹಾರದಲ್ಲಿ ಬಿಜೆಪಿಯ ಏಳಿಗೆ ಮತ್ತು ಅದರ ಯಶಸ್ಸಿನ ಹಿಂದೆ ಅವರ ಕೊಡುಗೆ ಅಮೂಲ್ಯವಾಗಿದೆ. ತುರ್ತು ಪರಿಸ್ಥಿತಿಯನ್ನು ಬಲವಾಗಿ ವಿರೋಧಿಸಿದ ಅವರು ವಿದ್ಯಾರ್ಥಿ ರಾಜಕಾರಣದಿಂದ ತಮ್ಮನ್ನು ಪ್ರೇರಿತರಾಗಿದ್ದರು. ಅವರು ತುಂಬಾ ಶ್ರಮಜೀವಿ ಮತ್ತು ಸ್ನೇಹಪರ ಶಾಸಕ ಎಂದು ಹೆಸರುವಾಸಿಯಾಗಿದ್ದರು. ರಾಜಕೀಯಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಅವರ ತಿಳುವಳಿಕೆ ಬಹಳ ಆಳವಾಗಿತ್ತು. ಅವರು ಆಡಳಿತಗಾರರಾಗಿ ಪ್ರಶಂಸನೀಯ ಕೆಲಸವನ್ನೂ ಮಾಡಿದರು. ಜಿಎಸ್ಟಿ ಅಂಗೀಕಾರದಲ್ಲಿ ಅವರ ಸಕ್ರಿಯ ಪಾತ್ರವನ್ನು ಯಾವಾಗಲೂ ನೆನಪಿಸಿಕೊಳ್ಳಲಾಗುತ್ತದೆ. ಈ ದುಃಖದ ಸಮಯದಲ್ಲಿ ಅವರ ಕುಟುಂಬ ಮತ್ತು ಬೆಂಬಲಿಗರೊಂದಿಗೆ ನನ್ನ ಸಂತಾಪವಿದೆ. ಓಂ ಶಾಂತಿ! ಎಂದು ಪ್ರಧಾನಿ ಮೋದಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Tejasvi Surya: ಈ ದಲಿತ ನಾಯಕನ ಜತೆ ಚರ್ಚೆಗೆ ಬನ್ನಿ ರಾಹುಲ್‌ ಗಾಂಧಿ; ತೇಜಸ್ವಿ ಸೂರ್ಯ ಪಂಥಾಹ್ವಾನ!

ರಾಷ್ಟ್ರೀಯ ಜನತಾ ದಳ (ಆರ್​ಜೆಡಿ) ಮುಖಂಡ ತೇಜಸ್ವಿ ಯಾದವ್ ಕೂಡ ಎಕ್ಸ್ ನಲ್ಲಿ ಸಂತಾಪ ವ್ಯಕ್ತಪಡಿಸಿದ್ದಾರೆ.

ಸುಶೀಲ್ ಕುಮಾರ್ ಮೋದಿ ಯಾರು?

ಜನವರಿ 5, 1952 ರಂದು ಜನಿಸಿದ ಸುಶೀಲ್ ಕುಮಾರ್ ಮೋದಿ ಅವರು ಪಾಟ್ನಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿ ಕಾರ್ಯಕರ್ತನಾಗಿ ತಮ್ಮ ರಾಜಕೀಯ ಪ್ರಯಾಣವನ್ನು ಪ್ರಾರಂಭಿಸಿದರು, ಅಲ್ಲಿ ಅವರು 1973 ರಲ್ಲಿ ವಿದ್ಯಾರ್ಥಿ ಒಕ್ಕೂಟದ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದರು.

ತಮ್ಮ ಮೂರು ದಶಕಗಳ ರಾಜಕೀಯ ಜೀವನದಲ್ಲಿ ಸುಶೀಲ್ ಮೋದಿ ಅವರು ಶಾಸಕ, ಎಂಎಲ್ಸಿ ಮತ್ತು ಲೋಕಸಭೆ ಮತ್ತು ರಾಜ್ಯಸಭಾ ಸದಸ್ಯ ಸೇರಿದಂತೆ ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಅವರು 2005 ರಿಂದ 2013 ರವರೆಗೆ ಮತ್ತು ಮತ್ತೆ 2017 ರಿಂದ 2020 ರವರೆಗೆ ಬಿಹಾರದ ಉಪಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದರು.

ಹಿರಿಯ ರಾಜಕಾರಣಿ 1990 ರಲ್ಲಿ ಪಾಟ್ನಾ ಸೆಂಟ್ರಲ್ ಕ್ಷೇತ್ರದಿಂದ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದರು. 1996 ರಿಂದ 2004 ರವರೆಗೆ ರಾಜ್ಯ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿಯೂ ಸೇವೆ ಸಲ್ಲಿಸಿದರು.

2004 ರಲ್ಲಿ ಸುಶೀಲ್ ಮೋದಿ ಭಾಗಲ್ಪುರದಿಂದ ಲೋಕಸಭೆಗೆ ಆಯ್ಕೆಯಾಗುವ ಮೂಲಕ ರಾಷ್ಟ್ರ ರಾಜಕಾರಣಕ್ಕೆ ಪ್ರವೇಶಿಸಿದ್ದರು. ಆದಾಗ್ಯೂ, 2005 ರಲ್ಲಿ, ಅವರು ತಮ್ಮ ಲೋಕಸಭಾ ಹುದ್ದೆಗೆ ರಾಜೀನಾಮೆ ನೀಡಿ ವಿಧಾನ ಪರಿಷತ್ತಿಗೆ ಸೇರಿ ಬಿಹಾರದ ಉಪಮುಖ್ಯಮಂತ್ರಿಯ ಪಾತ್ರವನ್ನು ವಹಿಸಿಕೊಂಡಿದ್ದರು.

Continue Reading

ಸಂಪಾದಕೀಯ

ವಿಸ್ತಾರ ಸಂಪಾದಕೀಯ: ಹೋರ್ಡಿಂಗ್ ಕುಸಿತ ಬೆಂಗಳೂರಿಗರಿಗೂ ಎಚ್ಚರಿಕೆಯ ಗಂಟೆ

ಬೆಂಗಳೂರಿನಲ್ಲೂ ಇಂಥ ಜಾಹೀರಾತು ಫಲಕಗಳ ಹಾವಳಿ ಸಾಕಷ್ಟಿದೆ. ಇವುಗಳಲ್ಲಿ ಅನಧಿಕೃತ ಎಷ್ಟು, ಅನಧಿಕೃತ ಎಷ್ಟು ಯಾರೂ ಹೇಳಲಾರರು. ಕಳೆದ ವರ್ಷ ಹೈಕೋರ್ಟ್, ಅನಧಿಕೃತ ಫ್ಲೆಕ್ಸ್, ಬ್ಯಾನರ್, ಹೋರ್ಡಿಂಗ್‌ಗಳ ಬಗ್ಗೆ ಬಿಬಿಎಂಪಿಯನ್ನು ತರಾಟೆಗೆ ತೆಗೆದುಕೊಂಡಿತ್ತು. ಪರಿಣಾಮ ನಗರವನ್ನು ತರಾತುರಿಯಿಂದ ಕ್ಲೀನ್ ಮಾಡಲಾಗಿತ್ತು. ಇದೀಗ ಬಿಬಿಎಂಪಿ ನೂತನ ಬೈಲಾ ತಂದಿದೆ. ಅದರಂತೆ ದೊಡ್ಡ ಹೋರ್ಡಿಂಗ್‌ಗಳಿಗೆ ಅವಕಾಶ ಕಲ್ಪಿಸಲಾಗುತ್ತಿದೆ. ಇದರ ಅಪಾಯ ಇದ್ದೇ ಇದೆ.

VISTARANEWS.COM


on

Hoarding
Koo

ಮುಂಬಯಿಯ ಘಾಟ್‌ಕೋಪರ್‌ನಲ್ಲಿ ಅಪ್ಪಳಿಸಿದ ಭಾರಿ ಧೂಳು ಬಿರುಗಾಳಿ ಮತ್ತು ಮಳೆಯಿಂದಾಗಿ ಬೃಹತ್ ಜಾಹೀರಾತು ಫಲಕ ಕುಸಿದು ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ. 59 ಜನರು ಗಾಯಗೊಂಡಿದ್ದಾರೆ. ಸೋಮವಾರ ಮಧ್ಯಾಹ್ನ ವೇಗವಾಗಿ ಧೂಳಿನ ಸಮೇತ ಬಂದ ಬಿರುಗಾಳಿ, ಭಾರೀ ಮಳೆ ಹಿನ್ನೆಲೆ ಮುಂಬೈ ನಗರದಲ್ಲಿ ಅನಾಹುತಗಳು ಸಂಭವಿಸುತ್ತಿವೆ. ಜನಸಂದಣಿ ಇರುವ ಪ್ರದೇಶದಲ್ಲಿ ಬೃಹದಾಕಾರದ ಹೋರ್ಡಿಂಗ್ ಬಿರುಗಾಳಿಗೆ ಕುಸಿದು ಬಿದ್ದಿದೆ. ಬೃಹದಾಕಾರದ ಹೋರ್ಡಿಂಗ್ ನ ಕಬ್ಬಿಣದ ರಾಡ್ ಗಳು ಹಿಂದಕ್ಕೆ ವಾಲಿಕೊಂಡು ಸಂಪೂರ್ಣವಾಗಿ ನೆಲಕಚ್ಚಿದೆ. ದುರ್ಘಟನೆಯಲ್ಲಿ ನೂರಕ್ಕೂ ಹೆಚ್ಚು ಮಂದಿ ಹೋರ್ಡಿಂಗ್​ ಕೆಳಗೆ ಸಿಲುಕಿಕೊಂಡಿದ್ದಾರೆ. ಹೋರ್ಡಿಂಗ್ ಬಿದ್ದ ಪರಿಣಾಮ ಅಲ್ಲಿದ್ದ ಅಂಗಡಿಗಳು, ವಾಹನಗಳು ಸಹ ಜಖಂ ಆಗಿದೆ. ಇನ್ನೊಂದು ಇಂಥದೇ ಘಟನೆಯಲ್ಲಿ, ವಡಾಲಾದಲ್ಲಿ ಅಟ್ಟಣಿಗೆಯೊಂದು ಕುಸಿದಿದೆ. ಹಲವಾರು ವಾಹನಗಳನ್ನು ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದು, ಹಲವರು ಕಾರಿನೊಳಗೆ ಸಿಲುಕಿಕೊಂಡಿದ್ದಾರೆ.

ಇದು ಅಪರೂಪದ ಪ್ರಕರಣವಲ್ಲ. ಈ ಹಿಂದೆಯೂ ಇಂಥ ಘಟನೆಗಳು ಆದದ್ದುಂಟು. ಈ ಬೃಹತ್ ಜಾಹೀರಾತು ಫಲಕಗಳು ನಾಲ್ಕು- ಐದು ಮಹಡಿ ಕಟ್ಟಡಗಳಷ್ಟು ಎತ್ತರವಾಗಿರುತ್ತವೆ. ವೈಜ್ಞಾನಿಕವಾಗಿ ಇದನ್ನು ನಿರ್ಮಿಸದೇ ಹೋದರೆ ಇವು ಬಿದ್ದಾಗ ಹಲವು ಜೀವಗಳಿಗೆ ಮಾರಣಾಂತಿಕ ಆಗುವ ಸಂಭವ ಇದ್ದೇ ಇರುತ್ತದೆ. ಜೊತೆಗೆ ಅನಧಿಕೃತ ಫ್ಲೆಕ್ಸ್, ಹೋರ್ಡಿಂಗ್‌ಗಳ ಕಾಟವೂ ಇದೆ. ಇವು ನಗರಗಳ ಸೌಂದರ್ಯವನ್ನು ಊನಗೊಳಿಸುವಲ್ಲಿ ಕುಖ್ಯಾತವಾಗಿವೆ.

ಬೆಂಗಳೂರಿನಲ್ಲೂ ಇಂಥ ಜಾಹೀರಾತು ಫಲಕಗಳ ಹಾವಳಿ ಸಾಕಷ್ಟಿದೆ. ಇವುಗಳಲ್ಲಿ ಅನಧಿಕೃತ ಎಷ್ಟು, ಅನಧಿಕೃತ ಎಷ್ಟು ಯಾರೂ ಹೇಳಲಾರರು. ಕಳೆದ ವರ್ಷ ಹೈಕೋರ್ಟ್, ಅನಧಿಕೃತ ಫ್ಲೆಕ್ಸ್, ಬ್ಯಾನರ್, ಹೋರ್ಡಿಂಗ್‌ಗಳ ಬಗ್ಗೆ ಬಿಬಿಎಂಪಿಯನ್ನು ತರಾಟೆಗೆ ತೆಗೆದುಕೊಂಡಿತ್ತು. ಪರಿಣಾಮ ನಗರವನ್ನು ತರಾತುರಿಯಿಂದ ಕ್ಲೀನ್ ಮಾಡಲಾಗಿತ್ತು. ಇದೀಗ ಬಿಬಿಎಂಪಿ ನೂತನ ಬೈಲಾ ತಂದಿದೆ. ಅದರಂತೆ ದೊಡ್ಡ ಹೋರ್ಡಿಂಗ್‌ಗಳಿಗೆ ಅವಕಾಶ ಕಲ್ಪಿಸಲಾಗುತ್ತಿದೆ. ಹೋರ್ಡಿಂಗ್‌ನ ಗಾತ್ರವು ರಸ್ತೆಯ ಅಗಲ, ವೃತ್ತ ಅಥವಾ ಜಂಕ್ಷನ್ ಮತ್ತು ಪ್ರದೇಶವನ್ನು ಅವಲಂಬಿಸಿರುತ್ತದೆ. ಉದಾಹರಣೆಗೆ, 80 ರಿಂದ 100 ಅಡಿ ಅಗಲದ ರಸ್ತೆಯಲ್ಲಿ (ಒಳಗಿನ ವರ್ತುಲ ರಸ್ತೆ) 1,000 ಚದರ ಅಡಿ ಹೋರ್ಡಿಂಗ್ ಅನ್ನು ಪ್ರದರ್ಶಿಸಲು ಅನುಮತಿಸಲಾಗಿದೆ. ಜಾಹೀರಾತುದಾರರು ಪ್ರತಿ 100 ಮೀಟರ್‌ಗಳಿಗೆ ಅಂತಹ ಬೋರ್ಡ್‌ಗಳನ್ನು ಸ್ಥಾಪಿಸಬಹುದು. ಕನಿಷ್ಠ ಜಾಹೀರಾತು ಪ್ರದೇಶವು 800 ಚದರ ಅಡಿಗಳಾಗಿದ್ದರೆ, ಗರಿಷ್ಠ 3,000 ಚದರ ಅಡಿ. ಗರಿಷ್ಠ ಎತ್ತರ 75 ಅಡಿಗಳವರೆಗೂ ಹೋಗಬಹುದು. ಅಂದರೆ ಸುಮಾರು ಏಳು ಮಹಡಿ ಎತ್ತರ!

ಇಂಥ ಒಂದು ಬೃಹತ್ ಫಲಕ ಗಾಳಿಗೆ ಬಿದ್ದರೆ ಎಂಥ ಅನಾಹುತ ಆದೀತು ಎಂಬುದನ್ನು ಊಹಿಸಬಹುದು. ನೂತನ ಹೋರ್ಡಿಂಗ್ ನೀತಿಯಿಂದ ವಾರ್ಷಿಕ 500 ಕೋಟಿ ರೂಪಾಯಿ ಗಳಿಸುವ ಇರಾದೆ ಬಿಬಿಎಂಪಿಗೆ ಇದೆ. ಆದರೆ ಅದರಡಿ ಓಡಾಡುವ ಜನರ ಸುರಕ್ಷತೆಯ ಬಗ್ಗೆ ಯಾವ ಕ್ರಮ ತೆಗೆದುಕೊಳ್ಳಲಾಗುತ್ತದೆ? ಇಂಥ ಅಪಘಾತದ ಸಂತ್ರಸ್ತರಿಗೆ ಗರಿಷ್ಠ ವಿಮೆ ನೀಡುವ ಕಾಯಿದೆ ಇರಬೇಕಲ್ಲವೆ? ಇದರ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ. ಇಂಥ ಅಪಘಾತಗಳು ಸಂಭವಿಸಿದಾಗ, ನಮ್ಮ ಸುತ್ತಮುತ್ತಲೂ ಯಾವಾಗ ಬೇಕಾದರೂ ಸಂಭವನೀಯ ಅಪಾಯಗಳ ಕುರಿತು ಕೂಡ ನಾವು ಚಿಂತಿಸಿ ಕಾರ್ಯಪ್ರವೃತ್ತರಾಗಬೇಕಿದೆ.

ಇದನ್ನೂ ಓದಿ: ICC World Cup 2023 : ಜಸ್ಟ್​ ಮಿಸ್​; ಪ್ರೇಕ್ಷಕರ ಸೀಟ್​​ಗಳ ಮೇಲೆ ಬಿದ್ದ ಬೃಹತ್​ ಹೋರ್ಡಿಂಗ್​

Continue Reading

ದೇಶ

Tejasvi Surya: ಈ ದಲಿತ ನಾಯಕನ ಜತೆ ಚರ್ಚೆಗೆ ಬನ್ನಿ ರಾಹುಲ್‌ ಗಾಂಧಿ; ತೇಜಸ್ವಿ ಸೂರ್ಯ ಪಂಥಾಹ್ವಾನ!

Tejasvi Surya: ರಾಹುಲ್‌ ಗಾಂಧಿ ಅವರೇ, ನಮ್ಮ ಅಭಿನವ್‌ ಪ್ರಕಾಶ್‌ ಅವರು ನಿಮ್ಮೊಂದಿಗೆ ಬಹಿರಂಗ ಚರ್ಚೆಗೆ ಬರಲಿದ್ದಾರೆ. ಇವರು ಪಾಸಿ (ಎಸ್‌ಸಿ-ದಲಿತ) ಸಮುದಾಯದ ಪ್ರಮುಖ ನಾಯಕರಾಗಿದ್ದು, ಉನ್ನತ ಶಿಕ್ಷಣ ಪಡೆದಿದ್ದಾರೆ. ನೀವು ಪ್ರತಿನಿಧಿಸುತ್ತಿರುವ ರಾಯ್‌ಬರೇಲಿಯಲ್ಲಿ ಈ ಸಮುದಾಯದ ಶೇ.30ರಷ್ಟು ಜನರಿದ್ದಾರೆ. ನೀವು ಇವರ ಜತೆ ಚರ್ಚೆಗೆ ಬನ್ನಿ ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ.

VISTARANEWS.COM


on

Tejasvi Surya
Koo

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಜತೆ ನಾನು ಬಹಿರಂಗ ಚರ್ಚೆಗೆ ಸಿದ್ಧ ಎಂದು ರಾಹುಲ್‌ ಗಾಂಧಿ (Rahul Gandhi) ಎಸೆದ ಸವಾಲಿಗೆ ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ (Tejasvi Surya) ಪಾಟಿಸವಾಲು ಎಸೆದಿದ್ದಾರೆ. “ರಾಹುಲ್‌ ಗಾಂಧಿಯವರೇ, ನೀವು ಬಿಜೆಪಿಯು ಯುವ ಮೋರ್ಚಾ ರಾಷ್ಟ್ರೀಯ ಉಪಾಧ್ಯಕ್ಷ ಅಭಿನವ್‌ ಪ್ರಕಾಶ್‌ ಅವರೊಂದಿಗೆ ಚರ್ಚೆಗೆ ಬನ್ನಿ” ಎಂದು ಸವಾಲು ಎಸೆಯುವ ಜತೆಗೆ ರಾಹುಲ್‌ ಗಾಂಧಿ ಅವರಿಗೆ ಸುದೀರ್ಘ ಪತ್ರ ಬರೆದಿದ್ದಾರೆ.

“ರಾಹುಲ್‌ ಗಾಂಧಿ ಅವರೇ, ನಮ್ಮ ಅಭಿನವ್‌ ಪ್ರಕಾಶ್‌ ಅವರು ನಿಮ್ಮೊಂದಿಗೆ ಬಹಿರಂಗ ಚರ್ಚೆಗೆ ಬರಲಿದ್ದಾರೆ. ಇವರು ಪಾಸಿ (ಎಸ್‌ಸಿ-ದಲಿತ) ಸಮುದಾಯದ ಪ್ರಮುಖ ನಾಯಕರಾಗಿದ್ದು, ಉನ್ನತ ಶಿಕ್ಷಣ ಪಡೆದಿದ್ದಾರೆ. ನೀವು ಪ್ರತಿನಿಧಿಸುತ್ತಿರುವ ರಾಯ್‌ಬರೇಲಿಯಲ್ಲಿ ಈ ಸಮುದಾಯದ ಶೇ.30ರಷ್ಟು ಜನರಿದ್ದಾರೆ. ರಾಜಕೀಯ ಕುಡಿ (ರಾಹುಲ್‌ ಗಾಂಧಿ) ಹಾಗೂ ಸಾಮಾನ್ಯ ಯುವಕನ (ಅಭಿನವ್‌ ಪ್ರಕಾಶ್)‌ ಮಧ್ಯೆ ಒಂದೊಳ್ಳೆ ಚರ್ಚೆ ನಡೆಯಲಿ. ನೀವು ಚರ್ಚೆಯ ಆಹ್ವಾನವನ್ನು ಸ್ವೀಕರಿಸುತ್ತೀರಿ ಎಂಬುದಾಗಿ ಭಾವಿಸಿದ್ದೇನೆ” ಎಂದು ತೇಜಸ್ವಿ ಸೂರ್ಯ ಪೋಸ್ಟ್‌ ಮಾಡಿದ್ದಾರೆ.

ನಾನು ರೆಡಿ ಎಂದ ಅಭಿನವ್‌ ಪ್ರಕಾಶ್‌

ತೇಜಸ್ವಿ ಸೂರ್ಯ ಅವರು ಪ್ರಸ್ತಾಪಿಸುತ್ತಲೇ ಅಭಿನವ್‌ ಪ್ರಕಾಶ್‌ ಅವರು ಚರ್ಚೆಗೆ ನಾನು ಸಿದ್ಧ ಎಂದಿದ್ದಾರೆ. “ರಾಹುಲ್‌ ಗಾಂಧಿ ವಿರುದ್ಧ ಚರ್ಚಿಸಲು ನನ್ನ ಹೆಸರು ಪ್ರಸ್ತಾಪಿಸಿದ್ದಕ್ಕೆ ಮೊದಲಿಗೆ ತೇಜಸ್ವಿ ಸೂರ್ಯ ಅವರಿಗೆ ಧನ್ಯವಾದಗಳು. ರಾಹುಲ್‌ ಗಾಂಧಿ ಹಾಗೂ ಅವರ ಕುಟುಂಬಸ್ಥರು ದೀರ್ಘಾವಧಿಗೆ ಪ್ರತಿನಿಧಿಸಿದ ಉತ್ತರ ಪ್ರದೇಶದ ನಾಗರಿಕ ನಾನು. ಅಮೇಥಿಯಿಂದ ದೂರ ಸರಿದಂತೆ ರಾಹುಲ್‌ ಗಾಂಧಿ ಅವರು ಈ ಚರ್ಚೆಯಿಂದಲೂ ಓಡಿ ಹೋಗುವುದಿಲ್ಲ ಎಂಬುದಾಗಿ ಭಾವಿಸಿದ್ದೇನೆ. ಇಲ್ಲದಿದ್ದರೆ ಅವರ ರಾಯ್‌ಬರೇಲಿಯಿಂದಲೂ ಓಡಿಹೋಗಬೇಕಾಗುತ್ತದೆ” ಎಂದು ಹೇಳಿದ್ದಾರೆ.

ರಾಹುಲ್‌ ಗಾಂಧಿ ಹೇಳಿದ್ದೇನು?

“ನಾನು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಬಹಿರಂಗವಾಗಿ ಚರ್ಚಿಸಲು ನೂರಕ್ಕೆ ನೂರರಷ್ಟು ಸಿದ್ಧನಿದ್ದೇನೆ” ಎಂಬುದಾಗಿ ಕೆಲ ದಿನಗಳ ಹಿಂದೆ ರಾಹುಲ್‌ ಗಾಂಧಿ ಹೇಳಿದ್ದರು. ಇದಕ್ಕೆ, ಕೇಂದ್ರ ಸಚಿವೆ ಸ್ಮೃತಿ ಇರಾನಿ ತಿರುಗೇಟು ನೀಡಿದ್ದಾರೆ. ಯಾವ ಸಾಮರ್ಥ್ಯ ಇದೆ ಎಂದು ನೀವು ಮೋದಿ ಅವರನ್ನು ಚರ್ಚೆಗೆ ಕರೆಯುತ್ತಿದ್ದೀರಿ ಎಂದಿದ್ದರು. ಬಿಜೆಪಿಯ ಹಲವು ನಾಯಕರು ಟೀಕಿಸುತ್ತ, ನೀವೇನು ಪ್ರಧಾನಿ ಅಭ್ಯರ್ಥಿಯೇ ಎಂದು ಕುಟುಕಿದ್ದರು. “ರಾಹುಲ್‌ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರು ಬಿಜೆಪಿ ವಕ್ತಾರ ಸುಧಾಂಶು ತ್ರಿವೇದಿ ಅವರ ಜತೆ ಒಮ್ಮೆಗೆ ಚರ್ಚೆಗೆ ಬನ್ನಿ” ಎಂದು ಸ್ಮೃತಿ ಇರಾನಿ ಸವಾಲು ಎಸೆದಿದ್ದರು.

ಇದನ್ನೂ ಓದಿ: Narendra Modi: ವಾರಾಣಸಿಯಲ್ಲಿ ಹೊಸ ಅಲೆ ಸೃಷ್ಟಿಸಿದ ಮೋದಿ, ಶಕ್ತಿ ಪ್ರದರ್ಶನ; ರೋಡ್‌ ಶೋ Photos ಇಲ್ಲಿವೆ

Continue Reading

ದೇಶ

Lok Sabha Election: 28 ವರ್ಷಗಳಲ್ಲೇ ಶ್ರೀನಗರದಲ್ಲಿ ಅಧಿಕ ಮತದಾನ; 370ನೇ ವಿಧಿ ರದ್ದು ಎಫೆಕ್ಟ್?

Lok Sabha Election: ಶ್ರೀನಗರದಲ್ಲಿ ಹೆಚ್ಚಿನ ಮತದಾನ ದಾಖಲಾಗಿದೆ. ಸೋಮವಾರ ಶ್ರೀನಗರದಲ್ಲಿ ಮತದಾನ ನಡೆದಿದ್ದು, ಶೇ.35.97ರಷ್ಟು ಮತದಾನ ದಾಖಲಾಗಿದೆ. ಇದು 1996ರ ಲೋಕಸಭೆ ಚುನಾವಣೆ ಬಳಿಕ ದಾಖಲಾದ ಗರಿಷ್ಠ ಮತದಾನ ಎಂದು ಆಯೋಗ ತಿಳಿಸಿದೆ. ಇದಕ್ಕೆ 370ನೇ ವಿಧಿ ರದ್ದುಗೊಳಿಸಿದ್ದೇ ಕಾರಣ ಎನ್ನಲಾಗುತ್ತಿದೆ.

VISTARANEWS.COM


on

Lok Sabha Election
Koo

ನವದೆಹಲಿ: ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುತ್ತಿದ್ದ 370ನೇ ವಿಧಿ ರದ್ದಾದ ಬಳಿಕ ಕಣಿವೆಯಲ್ಲಿ ಭಾರಿ ಬದಲಾವಣೆ ಆಗಿದೆ, ಕಲ್ಲು ತೂರಾಟ ನಿಂತಿದೆ, ಸಚಿನ್‌ ತೆಂಡೂಲ್ಕರ್‌ ಅಲ್ಲಿನ ಬೀದಿಗಳಲ್ಲಿ ಕ್ರಿಕೆಟ್‌ ಆಡುವಷ್ಟು, ಜಿ-20 ಸಭೆ ಆಯೋಜಿಸುವಷ್ಟು ಬದಲಾಗಿದೆ. ಅಷ್ಟೇ ಅಲ್ಲ, ಜಮ್ಮು-ಕಾಶ್ಮೀರದ (Jammu Kashmir) ಶ್ರೀನಗರದಲ್ಲಿ ಕಳೆದ 28 ವರ್ಷಗಳಲ್ಲಿಯೇ ಗರಿಷ್ಠ ಮತದಾನ (Lok Sabha Election) ದಾಖಲಾಗಿದೆ ಎಂದು ಚುನಾವಣೆ ಆಯೋಗ (Election Commission) ಮಾಹಿತಿ ನೀಡಿದೆ. ಇದಕ್ಕೆ 370ನೇ ವಿಧಿ ರದ್ದುಗೊಳಿಸಿದ್ದೇ ಕಾರಣ ಎನ್ನಲಾಗುತ್ತಿದೆ.

ಶ್ರೀನಗರದಲ್ಲಿ ಹೆಚ್ಚಿನ ಮತದಾನ ದಾಖಲಾಗಿದೆ. ಸೋಮವಾರ ಶ್ರೀನಗರದಲ್ಲಿ ಮತದಾನ ನಡೆದಿದ್ದು, ಶೇ.35.97ರಷ್ಟು ಮತದಾನ ದಾಖಲಾಗಿದೆ. ಇದು 1996ರ ಲೋಕಸಭೆ ಚುನಾವಣೆ ಬಳಿಕ ದಾಖಲಾದ ಗರಿಷ್ಠ ಮತದಾನ ಎಂದು ಆಯೋಗ ತಿಳಿಸಿದೆ. ಶ್ರೀನಗರದಲ್ಲಿ 2019ರಲ್ಲಿ ಶೇ.14.43ರಷ್ಟು ಹಾಗೂ 2014ರಲ್ಲಿ ಶೇ.25.86ರಷ್ಟು ಮತದಾನ ದಾಖಲಾಗಿತ್ತು. ಶ್ರೀನಗರದಲ್ಲಿ 17.48 ಲಕ್ಷ ಮತದಾರರು ನೋಂದಣಿ ಮಾಡಿಕೊಂಡಿದ್ದರು.

ಜಮ್ಮು-ಕಾಶ್ಮೀರದಲ್ಲಿ 370ನೇ ವಿಧಿ ರದ್ದುಗೊಳಿಸಿದ ಬಳಿಕ ಇದೇ ಮೊದಲ ಬಾರಿಗೆ ಚುನಾವಣೆ ನಡೆದಿದ್ದು, ಉತ್ತಮ ಮತದಾನವೂ ದಾಖಲಾಗಿರುವುದು ಸಕಾರಾತ್ಮಕ ಬೆಳವಣಿಗೆಯಾಗಿದೆ. ಉಗ್ರರ ದಾಳಿ ಭೀತಿ, ಕಲ್ಲುತೂರಾಟ ಮಾಡುವ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿರುವ ಕಾರಣ ಹೆಚ್ಚಿನ ಜನ ಮತದಾನ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

ಯಾವ ರಾಜ್ಯದಲ್ಲಿ ಎಷ್ಟು ಮತದಾನ?

ಸಂಜೆ 5 ಗಂಟೆ ಸುಮಾರಿಗೆ ಆಂಧ್ರಪ್ರದೇಶದಲ್ಲಿ ಶೇ.68.04, ಬಿಹಾರ ಶೇ.54.14, ಜಾರ್ಖಂಡ್ ಶೇ.63.14, ಮಧ್ಯಪ್ರದೇಶ ಶೇ.68.01, ಮಹಾರಾಷ್ಟ್ರ ಶೇ.52.49, ಒಡಿಶಾ ಶೇ.62.96, ತೆಲಂಗಾಣ ಶೇ.61.16, ಉತ್ತರ ಪ್ರದೇಶ ಶೇ.56.35, ಪಶ್ಚಿಮ ಬಂಗಾಳದಲ್ಲಿ ಶೇ.75.66ರಷ್ಟು ಮತದಾನ ದಾಖಲಾಗಿದೆ. ದೇಶದ ಹಲವೆಡೆ ಮೊದಲ ಹಂತದಲ್ಲಿ ನಡೆದ ಮತದಾನ ಪ್ರಮಾಣವು ಶೇ.66.14ರಷ್ಟಿದ್ದರೆ, ಎರಡನೇ ಹಂತದಲ್ಲಿ ಶೇ.66.71ರಷ್ಟು ಮತದಾನ ದಾಖಲಾಗಿತ್ತು. ಮೂರನೇ ಹಂತದಲ್ಲಿ ಒಟ್ಟು ಶೇ.65.68ರಷ್ಟು ಮತದಾನ ದಾಖಲಾಗಿತ್ತು.

ನಾಲ್ಕನೇ ಹಂತದಲ್ಲಿ ಆಂಧ್ರಪ್ರದೇಶದ 25, ಬಿಹಾರ 5, ಜಮ್ಮು-ಕಾಶ್ಮೀರ 1, ಜಾರ್ಖಂಡ್ 4, ಮಧ್ಯಪ್ರದೇಶ 8, ಮಹಾರಾಷ್ಟ್ರ 11, ಒಡಿಶಾ 4, ತೆಲಂಗಾಣ 17, ಉತ್ತರ ಪ್ರದೇಶ 13 ಹಾಗೂ ಪಶ್ಚಿಮ ಬಂಗಾಳದ 8 ಕ್ಷೇತ್ರಗಳಲ್ಲಿ ಮತದಾನ ನಡೆದಿದೆ. ಐದನೇ ಹಂತದ ಮತದಾನವು ಮೇ 20ರಂದು ನಡೆಯಲಿದೆ. ಜೂನ್‌ 1ರಂದು ಕೊನೆಯ ಅಥವಾ ಏಳನೇ ಹಂತದ ಮತದಾನ ನಡೆಯಲಿದ್ದು, ಜೂನ್‌ 4ರಂದು ಫಲಿತಾಂಶ ಪ್ರಕಟವಾಗಲಿದೆ.

ಇದನ್ನೂ ಓದಿ: Lok Sabha Election: ನಾಲ್ಕನೇ ಹಂತದಲ್ಲಿ ಶೇ.62.31ರಷ್ಟು ಮತದಾನ; ಬಂಗಾಳದಲ್ಲಿ ಹೆಚ್ಚು

Continue Reading
Advertisement
IPL 2024
ಪ್ರಮುಖ ಸುದ್ದಿ2 hours ago

IPL 2024 : ಆರ್​ಸಿಬಿ, ಆರ್​ಆರ್​ಗೆ ಆಘಾತ; ಐಪಿಎಲ್ ಬೇಡ ಎಂದು ಹೊರಟ ಹಲವು ಆಟಗಾರರು

Prajwal Revanna Case
ಕರ್ನಾಟಕ2 hours ago

Prajwal Revanna Case: ರೇವಣ್ಣಗೆ ಜಾಮೀನು ಹಿನ್ನೆಲೆ ವಿದೇಶದಿಂದ ಪ್ರಜ್ವಲ್‌ ವಾಪಸ್?‌; ಕೋರ್ಟ್‌ಗೆ ಶರಣಾಗುವ ಸಾಧ್ಯತೆ

Hoarding
ಸಂಪಾದಕೀಯ2 hours ago

ವಿಸ್ತಾರ ಸಂಪಾದಕೀಯ: ಹೋರ್ಡಿಂಗ್ ಕುಸಿತ ಬೆಂಗಳೂರಿಗರಿಗೂ ಎಚ್ಚರಿಕೆಯ ಗಂಟೆ

Sushil Kumar Modi
ಪ್ರಮುಖ ಸುದ್ದಿ2 hours ago

Sushil Kumar Modi : ಬಿಹಾರದ ಮಾಜಿ ಡಿಸಿಎಂ ಸುಶೀಲ್ ಕುಮಾರ್ ಮೋದಿ ನಿಧನ

Tejasvi Surya
ದೇಶ2 hours ago

Tejasvi Surya: ಈ ದಲಿತ ನಾಯಕನ ಜತೆ ಚರ್ಚೆಗೆ ಬನ್ನಿ ರಾಹುಲ್‌ ಗಾಂಧಿ; ತೇಜಸ್ವಿ ಸೂರ್ಯ ಪಂಥಾಹ್ವಾನ!

IPL 2024
ಪ್ರಮುಖ ಸುದ್ದಿ3 hours ago

IPL 2024 : ಮಳೆಯಿಂದಾಗಿ ಪಂದ್ಯ ರದ್ದು, ಕೆಕೆಆರ್​ಗೆ ಮೊದಲೆರಡಲ್ಲೊಂದು ಸ್ಥಾನ ಫಿಕ್ಸ್​

Vidyarthi Vidyarthiniyare Movie
ಕರ್ನಾಟಕ3 hours ago

Vidyarthi Vidyarthiniyare Movie: ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರದ ಟ್ರೈಲರ್ ಔಟ್; ಧುಮ್ಮಿಕ್ಕಿದ ಹರೆಯದ ತೊರೆ!

Road Accident Head on collision between bikes One person died on the spot
ಉತ್ತರ ಕನ್ನಡ3 hours ago

Road Accident: ಬೈಕ್‌ಗಳ ನಡುವೆ ಡಿಕ್ಕಿ; ಒಬ್ಬ ಸ್ಥಳದಲ್ಲೇ ಸಾವು, ಇಬ್ಬರಿಗೆ ಗಂಭೀರ ಗಾಯ

Lok Sabha Election
ದೇಶ4 hours ago

Lok Sabha Election: 28 ವರ್ಷಗಳಲ್ಲೇ ಶ್ರೀನಗರದಲ್ಲಿ ಅಧಿಕ ಮತದಾನ; 370ನೇ ವಿಧಿ ರದ್ದು ಎಫೆಕ್ಟ್?

Award Ceremony
ಬೆಂಗಳೂರು4 hours ago

Award Ceremony: ಬೆಂಗಳೂರಿನಲ್ಲಿ ಮೇ 19ರಂದು ಕಾದಂಬರಿ ಸಾರ್ವಭೌಮ ಅ.ನ.ಕೃ. ಪ್ರಶಸ್ತಿ ಪ್ರದಾನ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

HD Revanna Bail Revanna will not leave the country condition imposed by the court
ಕ್ರೈಂ7 hours ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

Prajwal Revanna case HD Revanna finally gets bail What was the argument like
ಕ್ರೈಂ7 hours ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ7 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

Karnataka Weather Forecast
ಮಳೆ8 hours ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

Modi Roadshow Live
ದೇಶ8 hours ago

Modi Roadshow Live: ವಾರಾಣಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ15 hours ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

karnataka weather forecast karnataka rains
ಮಳೆ19 hours ago

Karnataka Weather : ವಾಯುಭಾರ ಕುಸಿತ; ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ21 hours ago

Dina Bhavishya : ಇಂದು ಹೂಡಿಕೆ ಮಾಡಿದರೆ ಗಳಿಸುವಿರಿ ಭಾರಿ ಲಾಭ; ಅನಿರೀಕ್ಷಿತ ಸುದ್ದಿಯಿಂದ ಸಂತಸ

Prajwal Revanna Case I was never kidnapped and son has made a false complaint Video of victim goes viral
ಕ್ರೈಂ1 day ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

Karnataka Weather Forecast Heavy rain in chikkmagalur
ಮಳೆ1 day ago

Karnataka Weather : ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ; ಬೃಹತ್‌ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

ಟ್ರೆಂಡಿಂಗ್‌