Water Crisis: ಇನ್ನೆರಡು ತಿಂಗಳು ಕಾವೇರಿ ನೀರು ಹೊಸ ಕನೆಕ್ಷನ್‌ ಇಲ್ಲ; 11 ಸಾವಿರ ಮಂದಿ ಕಂಗಾಲು - Vistara News

ಪ್ರಮುಖ ಸುದ್ದಿ

Water Crisis: ಇನ್ನೆರಡು ತಿಂಗಳು ಕಾವೇರಿ ನೀರು ಹೊಸ ಕನೆಕ್ಷನ್‌ ಇಲ್ಲ; 11 ಸಾವಿರ ಮಂದಿ ಕಂಗಾಲು

Water Crisis: ನೀರಿನ ಅಲಭ್ಯತೆಯಿಂದಾಗಿ ಮುಂದಿನ ಎರಡು ತಿಂಗಳು ಕಾವೇರಿ (Kaveri Water) ಹೊಸ ಕನೆಕ್ಷನ್ ಇಲ್ಲ ಎಂದು ಜಲಮಂಡಳಿ ತಿಳಿಸಿದೆ.

VISTARANEWS.COM


on

Bwssb
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜಧಾನಿಯ ನೀರಿನ ಸಮಸ್ಯೆ (Bangalore Water Crisis) ಇನ್ನೊಂದು ಮಜಲನ್ನು ಮುಟ್ಟಿದೆ. ಬೋರ್‌ವೆಲ್ ನೀರು (Borewell water) ನಂಬಿಕೊಂಡಿದ್ದ ಬೆಂಗಳೂರಿನ ಸುಮಾರು 11 ಸಾವಿರ ಮಂದಿಗೆ ಈಗ ಗಂಡಾಂತರ ಒದಗಿದೆ.

ನೀರಿನ ಅಲಭ್ಯತೆಯಿಂದಾಗಿ ಮುಂದಿನ ಎರಡು ತಿಂಗಳು ಕಾವೇರಿ (Kaveri Water) ಹೊಸ ಕನೆಕ್ಷನ್ ಇಲ್ಲ ಎಂದು ಜಲಮಂಡಳಿ ತಿಳಿಸಿದೆ. ಈಗಾಗಲೇ ಇರುವ ಸಂಪರ್ಕಗಳಿಗೇ ವಾರದಲ್ಲಿ ಎರಡು ದಿನ ಮಾತ್ರ ನೀರು ಬಿಡಲಾಗುತ್ತಿದೆ. ಹೀಗಾಗಿ ಹೊಸ ಸಂಪರ್ಕ ಸಾಧ್ಯತೆಯೇ ಇಲ್ಲ ಎನ್ನಲಾಗಿದೆ.

ಆದರೆ ನಗರದಲ್ಲಿ 50 ಲಕ್ಷ ಬೋರ್‌ವೆಲ್‌ಗಳ ಅಂತರ್ಜಲ ಕುಸಿತವಾಗಿದೆ. ಇಲ್ಲಿ ನೀರು ಮೇಲೆ ಬರುತ್ತಿಲ್ಲ. ಬೋರ್‌ವೆಲ್ ಕೈಕೊಟ್ಟ ಹಿನ್ನೆಲೆಯಲ್ಲಿ ಸುಮಾರು 11 ಸಾವಿರ ಮನೆ ಮಾಲೀಕರು ಕಾವೇರಿ ನೀರು ಕನೆಕ್ಷನ್‌ಗೆ ಅರ್ಜಿ ಹಾಕಿದ್ದಾರೆ. ಬೋರ್‌ವೆಲ್ ನೀರು ಇಲ್ಲ ಹಾಗೂ ಕಾವೇರಿ ನೀರಿನ ಸಂಪರ್ಕವೂ ಇಲ್ಲದ ಕಾರಣ ಹೊಸದಾಗಿ ಕನೆಕ್ಷನ್ ಪಡೆಯಲು ಜಲಮಂಡಳಿಗೆ ಅರ್ಜಿ ಹಾಕಿದ್ದಾರೆ.

ಆದರೆ ಇವರ ಅರ್ಜಿಗಳನ್ನು ಇನ್ನು 2 ತಿಂಗಳು ಕಾಲ ಜಲಮಂಡಳಿ ತಡೆಹಿಡಿದಿದೆ. ಹೀಗಾಗಿ ಈ ಬೇಸಿಗೆ ಮುಗಿಯುವರೆಗೂ ಇವರಿಗೆ ನೀರಿಲ್ಲ ಎಂಬಂತಾಗಿದೆ. ಇವರು ಸದ್ಯ ಟ್ಯಾಂಕರ್‌ಗಳನ್ನು ಮಾತ್ರ ಆಶ್ರಯಿಸಬೇಕಾಗಿದೆ. ಜೂನ್‌ನಲ್ಲಿ ಮಳೆ ಬಂದ ನಂತರ ಪರಿಸ್ಥಿತಿ ಸುಧಾರಿಸಬಹುದು ಎಂಬುದು ಜಲಮಂಡಳಿ ಲೆಕ್ಕಾಚಾರ.

ಅಂತರ್ಜಲ ಹೆಚ್ಚಳಕ್ಕೆ ಕ್ರಮ

ನಗರದಲ್ಲಿ ಉಂಟಾಗಿರುವ ನೀರಿನ ಸಮಸ್ಯೆಯಿಂದ ಹೊರಬರಲು ಜಲಮಂಡಳಿ ಸಿದ್ಧತೆ ಮಾಡಿಕೊಳ್ಳುತ್ತಿದೆ. ಜುಲೈ 1ಕ್ಕೆ ನೀರು ಹೆಚ್ಚಾಗಲು ಯೋಜನೆ ರೂಪಿಸಿ ನೀರಿನ ಉಳಿತಾಯ ಹಾಗೂ ಅಂತರ್ಜಜಲ ಮಟ್ಟ ಹೆಚ್ಚಳಕ್ಕೆ ಮೂರು ರೀತಿಯ ಕ್ರಮಗಳಿಗೆ ಮುಂದಾಗಿದೆ. ಬಳಕೆಗೆ ಬರುವ ಕಾವೇರಿ, ಬೋರ್ ನೀರು ಉಳಿತಾಯ ಮಾಡುವುದು, ಈ ಮೂಲಕ ಶೇ 30-40% ನೀರಿನ ಉಳಿತಾಯ, 1300 ಎಮ್‌ಎಲ್‌ಡಿ ನೀರು ಎಸ್‌ಟಿಪಿ ಮೂಲಕ ಸಂಸ್ಕರಿಸಿ ಈ ನೀರನ್ನು ಕಮರ್ಶಿಯಲ್, ಇಂಡಸ್ಟ್ರಿಗಳಿಗೆ ಉಪಯೋಗ ಮಾಡಬಹುದು. ಹಾಗೂ ಮರು ಬಳಕೆ ನೀರನ್ನು ಕೆರೆಗೆ ತುಂಬಿಸಿ ಅಂತರ್ಜಲ ಹೆಚ್ಚು ಮಾಡಲು ಜಲಮಂಡಳಿ ಯೋಜನೆ ಹಾಕಿಕೊಂಡಿದೆ ಎಂದು ಬೆಂಗಳೂರು ಜಲಮಂಡಳಿ ಅಧ್ಯಕ್ಷರಾದ ರಾಮ್‌ ಪ್ರಸಾತ್‌ ಮನೋಹರ್‌ ತಿಳಿಸಿದ್ದಾರೆ.

ನೀರು ದುರುಪಯೋಗಕ್ಕೆ 1 ಲಕ್ಷ ರೂ. ದಂಡ

ಕಾವೇರಿ ನೀರು ದುರುಪಯೋಗ ಮಾಡಿದ ಸುಮಾರು 2000 ಮಂದಿಯಿಂದ ಇದುವರೆಗೆ 1,05,000 ದಂಡ ವಸೂಲಿ ಮಾಡಲಾಗಿದೆ ಎಂದು ಜಲಮಂಡಳಿ ಮೂಲಗಳು ತಿಳಿಸಿವೆ. ಕುಡಿಯುವ ನೀರಿನ ಅಭಾವದ ಹಿನ್ನೆಲೆಯಲ್ಲಿ ಕಾವೇರಿ ನೀರು ದುರುಪಯೋಗ ಮಾಡದಂತೆ ಸೂಚನೆ ನೀಡಲಾಗಿತ್ತು. ಜಲಮಂಡಳಿ ಸೂಚನೆ ನೀಡಿದರೂ ಅದನ್ನು ಹಲವರು ಕಡೆಗಣಿಸಿ ಕಾವೇರಿ ನೀರಿನಿಂದ ಕಾರ್ ವಾಶ್, ಗಾರ್ಡನ್ ಕ್ಲೀನ್, ಫುಟ್‌ಪಾತ್ ಕ್ಲೀನ್ ಮಾಡಿಸಿದ್ದರು. ಹೀಗಾಗಿ ಕಾವೇರಿ ನೀರು ದುರುಪಯೋಗ ಮಾಡಿದವರ ವಿರುದ್ಧ ಮಂಡಳಿ ದಂಡಾಸ್ತ್ರ ಪ್ರಯೋಗಿಸಿದೆ.

ಇದನ್ನೂ ಓದಿ: Water Crisis: ಬೆಂಗಳೂರಿನ 14 ಕೆರೆಗಳಿಗೆ ಸಂಸ್ಕರಿಸಿದ ತ್ಯಾಜ್ಯ ನೀರು; ಕುಡಿಯಲು, ಗೃಹ ಬಳಕೆಗೆ ಬಳಸುವಂತಿಲ್ಲ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉದ್ಯೋಗ

Job Alert: ನೈವೇಲಿ ಲಿಗ್ನೈಟ್ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಅರ್ಜಿ ಸಲ್ಲಿಕೆಗೆ ಇಂದು ಕೊನೆ ದಿನ

Job Alert: ಭಾರತ ಸರ್ಕಾರದ ಕಲ್ಲಿದ್ದಲು ಸಚಿವಾಲಯದ ಆಡಳಿತಾತ್ಮಕ ನಿಯಂತ್ರಣದಲ್ಲಿರುವ ಕೇಂದ್ರ ಸಾರ್ವಜನಿಕ ವಲಯದ ಸಂಸ್ಥೆ ನೈವೇಲಿ ಲಿಗ್ನೈಟ್ ಕಾರ್ಪೋರೇಷನ್ ಲಿಮಿಟೆಡ್‌ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಇಂದು (ಮೇ 20). ಸಂಜೆ 5 ಗಂಟೆಯೊಳಗೆ ಅಪ್ಲೈ ಮಾಡಿ. ದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 70,000-1,00,000 ರೂ. ಮಾಸಿಕ ವೇತನ ದೊರೆಯಲಿದೆ.

VISTARANEWS.COM


on

Job Alert
Koo

ಬೆಂಗಳೂರು: ಭಾರತ ಸರ್ಕಾರದ ಕಲ್ಲಿದ್ದಲು ಸಚಿವಾಲಯದ ಆಡಳಿತಾತ್ಮಕ ನಿಯಂತ್ರಣದಲ್ಲಿರುವ ಕೇಂದ್ರ ಸಾರ್ವಜನಿಕ ವಲಯದ ಸಂಸ್ಥೆ ನೈವೇಲಿ ಲಿಗ್ನೈಟ್ ಕಾರ್ಪೋರೇಷನ್ ಲಿಮಿಟೆಡ್‌ (Neyveli Lignite Corporation Limited) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (NLC Recruitment 2024). ಸುಮಾರು 36 ಎಕ್ಸಿಕ್ಯೂಟಿವ್‌ ಹುದ್ದೆಗಳಿದ್ದು, ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಇಂದು (ಮೇ 20) (Job Alert). ಗಮನಿಸಿ ಸಂಜೆ 5 ಗಂಟೆಯೊಳಗೆ ನಿಮ್ಮ ಅರ್ಜಿ ಸಲ್ಲಿಕೆಯಾಗಬೇಕು.

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಎಕ್ಸಿಕ್ಯೂಟಿವ್‌-ಆಪರೇಷನ್‌: 24 ಮತ್ತು ಎಕ್ಸಿಕ್ಯೂಟಿವ್‌-ಮೈಂಟೆನೆನ್ಸ್‌: 12 ಹುದ್ದೆಗಳಿವೆ.
ಎಕ್ಸಿಕ್ಯೂಟಿವ್‌-ಆಪರೇಷನ್‌ ಹುದ್ದೆಗೆ ಕೆಮಿಕಲ್/ ಸಿ&ಐ/ ಇ&ಐ/ ಇಸಿಇ/ ಎಲೆಕ್ಟ್ರಿಕಲ್/ ಇಇಇ/ ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು.
ಎಕ್ಸಿಕ್ಯೂಟಿವ್‌-ಮೈಂಟೆನೆನ್ಸ್‌ ಹುದ್ದೆಗೆ ಸಿವಿಲ್/ ಕೆಮಿಕಲ್/ ಸಿ&ಐ/ ಇ&ಐ/ ಇಸಿಇ/ ಎಲೆಕ್ಟ್ರಿಕಲ್/ ಇಇಇ/ ಮೆಕ್ಯಾನಿಕಲ್ ಇಂಜಿನಿಯರಿಂಗ್‌ನಲ್ಲಿ ಪದವಿ ಪಡೆದವರು ಅರ್ಹರು.

ವಯೋಮಿತಿ ಮತ್ತು ಅರ್ಜಿ ಶುಲ್ಕ

Neyveli Lignite Corporation Limited recruitment ಅಧಿಸೂಚನೆ ಪ್ರಕಾರ ಗರಿಷ್ಠ ವಯೋಮಿತಿ 63 ವರ್ಷ. ಅರ್ಜಿ ಶುಲ್ಕವಾಗಿ ಮಾಜಿ ಯೋಧರು / ಎಸ್‌ಸಿ / ಎಸ್‌ಟಿ ವರ್ಗಕ್ಕೆ ಸೇರಿದವರು 354 ರೂ. ಮತ್ತು ಸಾಮಾನ್ಯ / ಇಡಬ್ಲ್ಯುಎಸ್‌ / ಒಬಿಸಿ ವಿಭಾಗದವರು 854 ರೂ. ಪಾವತಿಸಬೇಕು. ಇದಕ್ಕಾಗಿ ಆನ್‌ಲೈನ್‌ ಪಾವತಿ ಮಾರ್ಗ ಅನುಸರಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 70,000-1,00,000 ರೂ. ಮಾಸಿಕ ವೇತನ ದೊರೆಯಲಿದೆ. ಒಂದು ವರ್ಷದ ಅವಧಿಗೆ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ಹೆಸರು ನೊಂದಾಯಿಸಿ.
  • NLC Executive Apply Online ಆಯ್ಕೆ ಕ್ಲಿಕ್‌ ಮಾಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ಡಾಕ್ಯುಮೆಂಟ್‌, ಫೋಟೊಗಳನ್ನು ಸೂಚಿಸಿದ ಗಾತ್ರದಲ್ಲಿ ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ.
  • ಎಲ್ಲ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ. ಅಪ್ಲಿಕೇಷನ್‌ ನಂಬರ್‌ ಅಥವಾ ರಿಕ್ವೆಸ್ಟ್‌ ನಂಬರ್‌ ನೋಟ್‌ ಮಾಡಿಟ್ಟುಕೊಳ್ಳಿ.

ಅಪ್‌ಲೋಡ್‌ ಮಾಡಬೇಕಾದ ದಾಖಲೆಗಳು

  • ಫೋಟೊ ಹೈ ಕ್ವಾಲಿಟಿಯಲ್ಲಿದ್ದು, 2023ರ ಅಕ್ಟೋಬರ್‌ 1ರ ಬಳಿಕ ತೆಗೆದಿರಬೇಕು.
  • ಅತ್ಯುತ್ತಮ ಕ್ಲಾಲಿಟಿಯ ಅಭ್ಯರ್ಥಿಯ ಸಹಿಯ ಫೋಟೊ.
  • ಹುಟ್ಟಿದ ದಿನಾಂಕವನ್ನು ಖಾತರಿಪಡಿಸುವ ದಾಖಲೆ.
  • ಎಸ್ಸೆಸ್ಸೆಲ್ಸಿ / ಶೈಕ್ಷಣಿಕ ಪ್ರಮಾಣ ಪತ್ರ.
  • ಆಧಾರ್‌ ಕಾರ್ಡ್‌ನ ಪ್ರತಿ.
  • ಜಾತಿ ಸರ್ಟಿಫಿಕೆಟ್‌.
  • ಮಾಜಿ ಯೋಧರಾಗಿದ್ದರೆ ಅದರ ದಾಖಲೆ.
  • ಫೋಟೊ ಮತ್ತು ಸಹಿಯ ಫೋಟೊ JPEG ಫಾರ್ಮಾಟ್‌ನಲ್ಲಿರಬೇಕು.
  • ದಾಖಲೆಗಳು, ಡಾಕ್ಯುಮೆಂಟ್‌ JPEG ಅಥವಾ PDF ಫಾರ್ಮಾಟ್‌ನಲ್ಲಿರುವುದು ಕಡ್ಡಾಯ.

ಇದನ್ನೂ ಓದಿ: Job Alert: ಬಂಧನ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ದ್ವಿತೀಯು ಪಿಯು ಪಾಸಾದವರೂ ಅಪ್ಲೈ ಮಾಡಿ

Continue Reading

ದೇಶ

Lok Sabha Election: ಇಂದು 5ನೇ ಹಂತದ ಮತದಾನ; ರಾಹುಲ್‌ ಗಾಂಧಿ, ಸ್ಮೃತಿ ಸೇರಿ ಹಲವರ ಭವಿಷ್ಯ ನಿರ್ಧಾರ

Lok Sabha Election: ಉತ್ತರ ಪ್ರದೇಶದ 14, ಮಹಾರಾಷ್ಟ್ರದ 13, ಪಶ್ಚಿಮ ಬಂಗಾಳ 7, ಬಿಹಾರ ಹಾಗೂ ಒಡಿಶಾದಲ್ಲಿ ತಲಾ 5, ಜಾರ್ಖಂಡ್‌ನಲ್ಲಿ 3, ಜಮ್ಮು ಕಾಶ್ಮೀರ ಮತ್ತು ಲಡಾಕ್‌ನ ತಲಾ 1 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಶಾಂತಿಯುತ ಮತ್ತು ಪಾರದರ್ಶಕ ಮತದಾನಕ್ಕಾಗಿ ಚುನಾವಣೆ ಆಯೋಗವು ಸಕಲ ಸಿದ್ಧತೆ ಮಾಡಿಕೊಂಡಿದೆ.

VISTARANEWS.COM


on

Lok Sabha Election
Koo

ಲಖನೌ: ಲೋಕಸಭೆ ಚುನಾವಣೆಯ (Lok Sabha Election 2024) ಐದನೇ ಹಂತದ ಮತದಾನವು ಸೋಮವಾರ (ಮೇ 20) ನಡೆಯಲಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ 49 ಕ್ಷೇತ್ರಗಳಲ್ಲಿ ಸೋಮವಾರ ಬೆಳಗ್ಗೆಯಿಂದಲೇ ಮತದಾನ (Fifth Phase Voting) ನಡೆಯಲಿದ್ದು, ಶಾಂತಿಯುತ ಮತ್ತು ಪಾರದರ್ಶಕ ಮತದಾನಕ್ಕಾಗಿ ಚುನಾವಣೆ ಆಯೋಗವು (Election Commission) ಸಕಲ ಸಿದ್ಧತೆ ಮಾಡಿಕೊಂಡಿದೆ. ಹಾಗೆಯೇ, ಸೂಕ್ಷ್ಮ ಮತಗಟ್ಟೆಗಳಲ್ಲಿ ಹೆಚ್ಚಿನ ಬಿಗಿ ಭದ್ರತೆ ಒದಗಿಸಲಾಗಿದೆ.

ಉತ್ತರ ಪ್ರದೇಶದ 14, ಮಹಾರಾಷ್ಟ್ರದ 13, ಪಶ್ಚಿಮ ಬಂಗಾಳ 7, ಬಿಹಾರ ಹಾಗೂ ಒಡಿಶಾದಲ್ಲಿ ತಲಾ 5, ಜಾರ್ಖಂಡ್‌ನಲ್ಲಿ 3, ಜಮ್ಮು ಕಾಶ್ಮೀರ ಮತ್ತು ಲಡಾಕ್‌ನ ತಲಾ 1 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಕೇಂದ್ರ ಸಚಿವರಾದ ರಾಜನಾಥ್‌ ಸಿಂಗ್‌ (ಲಖನೌ), ಸ್ಮೃತಿ ಇರಾನಿ (ಅಮೇಥಿ), ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (ರಾಯ್‌ಬರೇಲಿ), ಜಮ್ಮು-ಕಾಶ್ಮೀರ ಮಾಜಿ ಸಿಎಂ ಒಮರ್‌ ಅಬ್ದುಲ್ಲಾ (ಬಾರಾಮುಲ್ಲಾ) ಸೇರಿ ಹಲವು ಗಣ್ಯರ ಭವಿಷ್ಯವು ಸೋಮವಾರ ಮತಯಂತ್ರಗಳಲ್ಲಿ ಭದ್ರವಾಗಲಿದೆ. ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದೆ.

ದೇಶದಲ್ಲಿ ಈಗಾಗಲೇ ನಾಲ್ಕು ಹಂತಗಳಲ್ಲಿ 379 ಕ್ಷೇತ್ರಗಳಲ್ಲಿ ಮತದಾನ ನಡೆದಿದೆ. ಬಹುತೇಕ ಕಡೆಗಳಲ್ಲಿ ಶಾಂತಿಯುತವಾಗಿ ಮತದಾನ ನಡೆದಿದ್ದು, ಈಗ ಐದನೇ ಹಂತದ ಮತದಾನಕ್ಕೆ ಚುನಾವಣೆ ಆಯೋಗವು ಸಿದ್ಧಗೊಂಡಿದೆ. ಇನ್ನು ಸೋಮವಾರವೇ ಅಯೋಧ್ಯೆಯ ಜಿಲ್ಲೆಯನ್ನು ಒಳಗೊಂಡಿರುವ ಫೈಜಾಬಾದ್‌ ಲೋಕಸಭೆ ಕ್ಷೇತ್ರದಲ್ಲಿ ಮತದಾನ ನಡೆಯಲಿದ್ದು, ಬಿಜೆಪಿಯ ಹಾಲಿ ಸಂಸದ ಲಲ್ಲು ಸಿಂಗ್‌ ಅವರೇ ಮತ್ತೆ ಕಣಕ್ಕಿಳಿದಿದ್ದಾರೆ. ರಾಮಮಂದಿರ ಉದ್ಘಾಟನೆಯ ಹಿನ್ನೆಲೆಯಲ್ಲಿ ಇಲ್ಲಿಯು ಬಿಜೆಪಿ ಅಭ್ಯರ್ಥಿಯ ಗೆಲುವು ನಿಶ್ಚಿತ ಎಂದು ಹೇಳಲಾಗುತ್ತಿದೆ.

4ನೇ ಹಂತದಲ್ಲಿ ಹೆಚ್ಚಿದ ಮತದಾನ

ನಾಲ್ಕನೇ ಹಂತದಲ್ಲಿ ಶೇ.69.16ರಷ್ಟು ಮತದಾನ ದಾಖಲಾಗಿದ್ದು, ಕಳೆದ ಮೂರು ಹಂತಗಳಿಗಿಂತ ಗರಿಷ್ಠ ಮತದಾನ ದಾಖಲಾಗಿದೆ. ಮೊದಲ ಹಂತದಲ್ಲಿ ನಡೆದ ಮತದಾನ ಪ್ರಮಾಣವು ಶೇ.66.14ರಷ್ಟಿದ್ದರೆ, ಎರಡನೇ ಹಂತದಲ್ಲಿ ಶೇ.66.71ರಷ್ಟು ಮತದಾನ ದಾಖಲಾಗಿತ್ತು. ಮೂರನೇ ಹಂತದಲ್ಲಿ ಒಟ್ಟು ಶೇ.65.68ರಷ್ಟು ಮತದಾನ ದಾಖಲಾಗಿತ್ತು. ಮೂರೂ ಹಂತಗಳಲ್ಲಿ 2019ಕ್ಕಿಂತ ಕಡಿಮೆ ಮತದಾನ ದಾಖಲಾಗಿದ್ದು ಚರ್ಚೆಗೆ ಗ್ರಾಸವಾಗಿತ್ತು. ಆದರೀಗ, 4ನೇ ಹಂತದಲ್ಲಿ ಶೇ.69.16ರಷ್ಟು ಮತದಾನ ದಾಖಲಾಗಿದ್ದು, ಕಳೆದ ಬಾರಿಗಿಂತ ಕೇವಲ 0.40ರಷ್ಟು ಕಡಿಮೆಯಾಗಿದೆ. ಹಾಗಾಗಿ, ನಾಲ್ಕನೇ ಹಂತದ ಮತದಾನವು ಸಕಾರಾತ್ಮಕ ಬೆಳವಣಿಗೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Voter Turnout: 4ನೇ ಹಂತದಲ್ಲಿ ಹೆಚ್ಚಿದ ಮತದಾನ; ಪುರುಷರಿಗಿಂತ ಸ್ತ್ರೀಯರಿಂದಲೇ ಹೆಚ್ಚು ಮತ ಚಲಾವಣೆ; ಹೀಗಿದೆ ಆಯೋಗದ ಮಾಹಿತಿ

Continue Reading

ಭವಿಷ್ಯ

Dina Bhavishya : ಮಾನಸಿಕ ಒತ್ತಡದಿಂದ ಮುಕ್ತರಾಗುವಿರಿ; ಹೂಡಿಕೆ ವ್ಯವಹಾರವು ಹೆಚ್ಚು ಲಾಭ ತರುವುದು

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಶುಕ್ಲ ಪಕ್ಷದ ದ್ವಾದಶಿ ದಿನವಾದ ಇಂದು ದ್ವಾದಶಿ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ತುಲಾ ರಾಶಿಯಿಂದ ಸೋಮವಾರ ಸಂಜೆ 06:34ಕ್ಕೆ ವೃಶ್ಚಿಕ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ಮೇಷ, ವೃಷಭ, ಸಿಂಹ, ತುಲಾ, ಧನಸ್ಸು, ಮಕರ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ಮೇಷ ರಾಶಿಯವರು ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಮಾನಸಿಕ ಒತ್ತಡದಿಂದ ಮುಕ್ತರಾಗಿ, ದೊಡ್ಡ ಯೋಜನೆಯತ್ತ ಗಮನ ಹರಿಸುವಿರಿ. ಬಹಳ ದಿನಗಳ ನಂತರ ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ವೃಷಭ ರಾಶಿಯವರು ಕುಟುಂಬ ಸದಸ್ಯರ ವರ್ತನೆ ನಿಮಗೆ ಹಿಡಿಸದಿರಬಹುದು, ಆದರೆ ವಿನಾ ಕಾರಣ ಮಾತಿಗಿಳಿದು ಮನಸ್ಸು ಕೆಡಿಸಿಕೊಳ್ಳುವುದು ಬೇಡ. ನಂಬಿದ ವ್ಯಕ್ತಿಗಳು ನಿಮ್ಮನ್ನು ನಿರಾಸೆ ಮಾಡಬಹುದು. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (20-05-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಶುಕ್ಲ ಪಕ್ಷ
ತಿಥಿ: ದ್ವಾದಶಿ 15:58 ವಾರ:ಸೋಮವಾರ
ನಕ್ಷತ್ರ: ಚಿತ್ತಾ 29:45 ಯೋಗ:ಸಿದ್ಧಿ 12:08
ಕರಣ: ಕೌಲವ 28:52 ಅಮೃತ ಕಾಲ: ರಾತ್ರಿ 10:42ರಿಂದ 12:28ರವರಗೆ
ದಿನದ ವಿಶೇಷ: ಶ್ರೀರಂಗಪಟ್ಟಣ ರಥ, ತೊರವಿ ನರಸಿಂಹ ರಥ, ಕೊಳ್ಳೇಗಾಲದ ವಿಶ್ವೇಶ್ವರ ರಥ

ಸೂರ್ಯೋದಯ : 05:53   ಸೂರ್ಯಾಸ್ತ : 06:39

ರಾಹುಕಾಲ : ಬೆಳಗ್ಗೆ 7.30 ರಿಂದ 9.00
ಗುಳಿಕಕಾಲ: ಮಧ್ಯಾಹ್ನ 1.30 ರಿಂದ 3.00
ಯಮಗಂಡಕಾಲ: ಬೆಳಗ್ಗೆ 10.30 ರಿಂದ 12.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಮಾನಸಿಕ ಒತ್ತಡದಿಂದ ಮುಕ್ತರಾಗಿ, ದೊಡ್ಡ ಯೋಜನೆಯತ್ತ ಗಮನ ಹರಿಸುವಿರಿ. ಬಹಳ ದಿನಗಳ ನಂತರ ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಹಣಕಾಸು ಪ್ರಗತಿ ಸಾಮಾನ್ಯವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ವೃಷಭ:ಕುಟುಂಬ ಸದಸ್ಯರ ವರ್ತನೆ ನಿಮಗೆ ಹಿಡಿಸದಿರಬಹುದು, ಆದರೆ ವಿನಾ ಕಾರಣ ಮಾತಿಗಿಳಿದು ಮನಸ್ಸು ಕೆಡಿಸಿಕೊಳ್ಳುವುದು ಬೇಡ. ನಂಬಿದ ವ್ಯಕ್ತಿಗಳು ನಿಮ್ಮನ್ನು ನಿರಾಸೆ ಮಾಡಬಹುದು. ಉದ್ಯೋಗದ ಸ್ಥಳದಲ್ಲಿ ನಿಮ್ಮ ಕಾರ್ಯದ ಯಶಸ್ಸು ಬೇರೆಯವರ ಪಾಲಾಗದಂತೆ ಎಚ್ಚರಿಕೆ ವಹಿಸಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಹಣಕಾಸು ಪ್ರಗತಿ ಮಧ್ಯಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ಮಿಥುನ: ಆರೋಗ್ಯದ ಕಡೆಗೆ ಹೆಚ್ಚು ಗಮನ ಹರಿಸುವುದು ಉತ್ತಮ. ಅದರಲ್ಲೂ ಗರ್ಭಿಣಿಯರು ಹೆಚ್ಚು ಕಾಳಜಿ ವಹಿಸಿ. ಹೊಸ ಒಪ್ಪಂದ ಮಾಡುವುದು ಇಂದಿನ ಮಟ್ಟಿಗೆ ಬೇಡ. ಆತುರದಲ್ಲಿ ಯಾವ ತೀರ್ಮಾನಗಳನ್ನು ಮಾಡಬೇಡಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಕಟಕ: ಬಿಡುವಿಲ್ಲದ ಕಾರ್ಯ ಯೋಜನೆ, ಅಪಾರ ಯಶಸ್ಸನ್ನು ಹಾಗೂ ಕೀರ್ತಿಯನ್ನು ತಂದು ಕೊಡುವುದು. ಪ್ರಯಾಣದ ಕುರಿತಾಗಿ ಯೋಜನೆ ಮಾಡುವಿರಿ. ಹೂಡಿಕೆ ವ್ಯವಹಾರವು ಹೆಚ್ಚು ಲಾಭ ತರುವುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ಸಿಂಹ: ದಿನದ ಮಟ್ಟಿಗೆ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ ಇದೆ. ವಿಶ್ವಾಸದಿಂದ ಕಾರ್ಯ ಸಿದ್ಧಿ. ಲಾಭದ ಹೂಡಿಕೆ ಕುರಿತಾಗಿ ಆಲೋಚನೆ ಮಾಡುವಿರಿ. ಕುಟುಂಬದ ಜತೆಗೆ ಕಾಲ ಕಳೆಯಲು ಹೆಚ್ಚು ಸಮಯ ವಿನಿಯೋಗಿಸುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 9

Horoscope Today

ಕನ್ಯಾ: ಪ್ರಯತ್ನದಲ್ಲಿ ಯಶಸ್ಸು ಸಿಗಲಿದೆ. ಹಣಕಾಸು ವ್ಯವಹಾರದಲ್ಲಿ ಲಾಭ ಇರಲಿದೆ. ಆತುರದಲ್ಲಿ ಮಾತನಾಡಿ ಅಪಾಯ ತಂದುಕೊಳ್ಳುವುದು ಬೇಡ. ಸಮಸ್ಯೆಗಳು ಪರಿಹಾರವಾಗುವ ಸಾಧ್ಯತೆ ಇದೆ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಪ್ರಗತಿ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಭರವಸೆಯ ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ. ಸೌಂದರ್ಯದ ಕುರಿತು ಕಾಳಜಿ ವಹಿಸುವಿರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಹಣಕಾಸು ವ್ಯವಹಾರದಲ್ಲಿ ಲಾಭ ಇರಲಿದೆ. ಕುಟುಂಬದ ಸದಸ್ಯರಿಂದ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ವೃಶ್ಚಿಕ: ಮಾನಸಿಕ ಒತ್ತಡದಿಂದ ದೂರವಾಗಲು ಧ್ಯಾನ ಮಾಡಿ. ಚಿಂತೆ ನಿಮ್ಮನ್ನು ಮತ್ತಷ್ಟು ಖಿನ್ನತೆಗೆ ಒಳಪಡಿಸಲಿದೆ, ಆದರಿಂದ ಸಕಾರಾತ್ಮಕ ಆಲೋಚನೆಗಳನ್ನು ಮಾಡಿ. ಕೌಟುಂಬಿಕ ಕಲಹದಲ್ಲಿ ಧ್ವನಿ ಸೇರಿಸುವುದು ಬೇಡ, ಮನೆಯ ವಾತಾವರಣ ಹದಗೆಡಬಹುದು. ಮೌನದಿಂದ ಕಾರ್ಯ ಸಿದ್ಧಿಸಿಕೊಳ್ಳಿ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 3

Horoscope Today

ಧನಸ್ಸು: ಪ್ರಭಾವಿ ವ್ಯಕ್ತಿಗಳ ವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಅನಿರೀಕ್ಷಿತ ಖರ್ಚು ಹೊರಾತಾಗಿಯೂ ಲಾಭ ಪಡೆಯುವಿರಿ. ಮಾತಿನ ಮೇಲೆ ಹಿಡಿತವಿರಲಿ. ಸಮಯ ವ್ಯರ್ಥ ಮಾಡದೆ ಕಾರ್ಯದಲ್ಲಿ ಮುನ್ನುಗ್ಗಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಮಕರ: ಘಟಿಸಿದ ಘಟನೆಗಳನ್ನು ಮೆಲುಕು ಹಾಕುತ್ತಾ ಕಾಲಹರಣ ಮಾಡುವ ಬದಲು ಕಾರ್ಯದಲ್ಲಿ ಮುನ್ನುಗ್ಗಿ. ಮಾನಸಿಕ ಒತ್ತಡ ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು. ಸಾಧ್ಯವಾದಷ್ಟು ವಿಶ್ರಾಂತಿ ಪಡೆಯಿರಿ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಉಂಟು ಆಗುವ ಸಾಧ್ಯತೆ ಇದೆ. ಅತಿರೇಕವಾಗಿ ಕೋಪದಿಂದ ಮಾತನಾಡುವುದು ಬೇಡ. ಆರ್ಥಿಕ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 9

Horoscope Today

ಕುಂಭ: ನಿಮ್ಮ ಸಹಾಯ ಮಾಡುವ ಗುಣವು ಇತರರಿಂದ ಪ್ರಶಂಸೆ ಸಿಗಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ಮೀನ: ಉದ್ಯೋಗದಲ್ಲಿ ಹೊಸ ಭರವಸೆ ಮೂಡಲಿದೆ. ಅರೋಗ್ಯ ಪರಿಪೂರ್ಣವಾಗಿರಲಿದೆ. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕುಟುಂಬದ ಸದಸ್ಯರ ವರ್ತನೆ ಮುಜುಗರ ಉಂಟು ಮಾಡುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 4

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ವಿದೇಶ

Ebrahim Raisi: ಪತನದ ಬಳಿಕ ಹೆಲಿಕಾಪ್ಟರ್‌ ನಾಪತ್ತೆ; ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಸಾವು?

Ebrahim Raisi: ಅಜರ್‌ಬೈಜಾನ್‌ನಲ್ಲಿ ಇಬ್ರಾಹಿಂ ರೈಸಿ ಅವರಿದ್ದ ಹೆಲಿಕಾಪ್ಟರ್‌ ಪತನಗೊಂಡಿದೆ ಎಂಬುದಾಗಿ ಸ್ಥಳೀಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ಇರಾನ್‌ ಮಾಧ್ಯಮ ಸಂಸ್ಥೆಯೊಂದು ವರದಿ ಮಾಡಿದೆ. ಆದರೆ, ಹೆಲಿಕಾಪ್ಟರ್ ಗುಡ್ಡಗಾಡು ಪ್ರದೇಶದಲ್ಲಿ ಪತನಗೊಂಡಿರುವ ಕಾರಣ ಹುಡುಕಾಟ ನಡೆಯುತ್ತಲೇ ಇದೆ. ಇದುವರೆಗೆ ಹೆಲಿಕಾಪ್ಟರ್‌ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ.

VISTARANEWS.COM


on

Ebrahim Raisi
Koo

ಬಾಕು: ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ (Ebrahim Raisi) ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ (Helicopter Crash) ಅಜರ್‌ಬೈಜಾನ್‌ನಲ್ಲಿ (Azerbaijan) ಪತನಗೊಂಡಿದ್ದು, ಹಲವು ಗಂಟೆಗಳ ಕಾರ್ಯಾಚರಣೆ ಬಳಿಕವೂ ಹೆಲಿಕಾಪ್ಟರ್‌ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ಹೆಲಿಕಾಪ್ಟರ್‌ ಪತ್ತೆಗಾಗಿ ಸುಮಾರು 40 ತಂಡಗಳು ಶೋಧ ಕಾರ್ಯ ನಡೆಸುತ್ತಲೇ ಇವೆ. ಇಷ್ಟಾದರೂ ಹೆಲಿಕಾಪ್ಟರ್‌ ಪತ್ತೆಯಾಗಿರುವ ಕಾರಣ ಇಬ್ರಾಹಿಂ ರೈಸಿ ಸೇರಿ ಹಲವರ ಪ್ರಾಣಕ್ಕೆ ಕುತ್ತುಂಟಾಗಿರುವ ಸಾಧ್ಯತೆ ಇದೆ ಎಂದು ಇರಾನ್‌ ಅಧಿಕಾರಿಗಳು ತಿಳಿಸಿದ್ದಾರೆ.

ಅಜರ್‌ಬೈಜಾನ್‌ ಸಮೀಪದ ಜೋಲ್ಫಾ ಎಂಬ ಪ್ರದೇಶ ಬೆಟ್ಟಗಳ ಮಧ್ಯೆ ಹೆಲಿಕಾಪ್ಟರ್‌ ಪತನಗೊಂಡಿರುವ ಕಾರಣ ಶೋಧ ಕಾರ್ಯ ವಿಳಂಬವಾಗುತ್ತಿದೆ ಎಂದು ತಿಳಿದುಬಂದಿದೆ. ಹೆಲಿಕಾಪ್ಟರ್‌ ಪತ್ತೆಗಾಗಿ ಹಲವು ಸಿಬ್ಬಂದಿ ಇರುವ ಸುಮಾರು 40 ತಂಡಗಳನ್ನು ಇರಾನ್‌ ರಚಿಸಿದೆ. ಬೆಟ್ಟಗಳಲ್ಲಿ ಭದ್ರತಾ ಸಿಬ್ಬಂದಿಯು ಎಡೆಬಿಡದೆ ಶೋಧ ಕಾರ್ಯ ಕೈಗೊಂಡರೂ ಮುನ್ನಡೆ ಸಿಗುತ್ತಿಲ್ಲ. ಹೆಲಿಕಾಪ್ಟರ್‌ ಪತನದ ಬಳಿಕ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದ್ದು, ಬದುಕುಳಿಯುವ ಸಾಧ್ಯತೆ ತೀರಾ ಕ್ಷೀಣ ಎಂದು ಹೇಳಲಾಗುತ್ತಿದೆ.

ಹೆಲಿಕಾಪ್ಟರ್‌ನಲ್ಲಿ ಯಾರಿದ್ದರು?

ಹೆಲಿಕಾಪ್ಟರ್‌ನಲ್ಲಿ ಇಬ್ರಾಹಿಂ ರೈಸಿ ಜತೆಗೆ ವಿದೇಶಾಂಗ ವ್ಯವಹಾರಗಳ ಸಚಿವ ಹುಸೇನ್‌ ಅಮೀರಬ್ದೊಲ್ಲೈ, ಪೂರ್ವ ಅಜರ್‌ಬೈಜಾನ್‌ ಗವರ್ನರ್‌ ಮಲೇಕ್‌ ರಹಮತಿ ಹಾಗೂ ಪೂರ್ವ ಅಜರ್‌ಬೈಜಾನ್‌ನಲ್ಲಿರುವ ಇರಾನ್‌ ಸುಪ್ರೀಂ ಲೀಡರ್‌ನ ಪ್ರತಿನಿಧಿ ಅಯೊತೊಲ್ಲಾ ಮೊಹಮ್ಮದ್‌ ಅಲಿ ಅಲೆ-ಹಶೇಮ್‌ ಅವರು ಕೂಡ ಇದ್ದರು. ಇದುವರೆಗೆ ಹೆಲಿಕಾಪ್ಟರ್‌ ಎಲ್ಲಿದೆ ಎಂಬುದರ ಸುಳಿವೇ ಸಿಗದ ಕಾರಣ ಇವರೆಲ್ಲರ ಪ್ರಾಣಕ್ಕೆ ಕುತ್ತು ಎದುರಾಗಿರಬಹುದು ಎಂದು ಹೇಳಲಾಗುತ್ತಿದೆ.

ಇಬ್ರಾಹಿಂ ರೈಸಿಗಾಗಿ ಮೋದಿ ಪ್ರಾರ್ಥನೆ

ಇರಾನ್‌ ಅಧ್ಯಕ್ಷರಿದ್ದ ಹೆಲಿಕಾಪ್ಟರ್‌ ಪತನಗೊಂಡಿರುವ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಕಳವಳ ವ್ಯಕ್ತಪಡಿಸಿದ್ದಾರೆ. “ಇಬ್ರಾಹಿಂ ರೈಸಿ ಅವರ ಹೆಲಿಕಾಪ್ಟರ್‌ ಪತನದ ಸುದ್ದಿ ತಿಳಿದು ಆತಂಕವಾಗಿದೆ. ಇರಾನ್‌ ಜನರ ಭಾವನೆಗಳ ಜತೆ ನಾವಿದ್ದೇವೆ. ಇಬ್ರಾಹಿಂ ರೈಸಿ ಹಾಗೂ ಅವರ ಜತೆಗಿದ್ದ ಎಲ್ಲರೂ ಸುರಕ್ಷಿತವಾಗಿರಲಿ ಎಂಬುದಾಗಿ ಪ್ರಾರ್ಥಿಸುತ್ತೇನೆ” ಎಂದು ಮೋದಿ ಪೋಸ್ಟ್‌ ಮಾಡಿದ್ದಾರೆ.

ಅರಸ್‌ ನದಿಗೆ ಇರಾನ್‌ ಹಾಗೂ ಅಜರ್‌ಬೈಜಾನ್‌ ಸೇರಿ ಅಣೆಕಟ್ಟು ಕಟ್ಟಿದ್ದು, ಅದನ್ನು ಉದ್ಘಾಟಿಸಲು ಇಬ್ರಾಹಿಂ ರೈಸಿ ಅವರು ಅಜರ್‌ಬೈಜಾನ್‌ಗೆ ತೆರಳಿದ್ದರು. ಇದೇ ವೇಳೆ ಹೆಲಿಕಾಪ್ಟರ್‌ ಪತನಗೊಂಡಿದೆ ಎಂದು ತಿಳಿದುಬಂದಿದೆ. ಹವಾಮಾನ ವೈಪರೀತ್ಯದಿಂದಾಗಿ ಹೆಲಿಕಾಪ್ಟರ್‌ ಪತನಗೊಂಡಿರಬಹುದು ಎಂದು ಇರಾನ್‌ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಹವಾಮಾನ ವೈಪರೀತ್ಯವು ಶೋಧ ಕಾರ್ಯಾಚರಣೆಗೂ ಅಡ್ಡಿಯಾಗಿದೆ ಎಂದು ತಿಳಿದುಬಂದಿದೆ. 2021ರಿಂದಲೂ ಇಬ್ರಾಹಿಂ ರೈಸಿ ಅವರು ಇರಾನ್‌ ಅಧ್ಯಕ್ಷರಾಗಿದ್ದಾರೆ.

ಇದನ್ನೂ ಓದಿ: Helicopter Crash: ಶಿವಸೇನೆ ನಾಯಕಿ ಪ್ರಯಾಣಿಸಬೇಕಿದ್ದ ಹೆಲಿಕಾಪ್ಟರ್‌ ಪತನ;ವಿಡಿಯೋ ವೈರಲ್‌

Continue Reading
Advertisement
Hair Conditioner
ಆರೋಗ್ಯ12 mins ago

Hair Conditioner: ರಾಸಾಯನಿಕ ಹೇರ್‌ ಕಂಡೀಷನರ್‌ ಬಿಡಿ; ಈ 5 ನೈಸರ್ಗಿಕ ಹೇರ್ ಕಂಡೀಷನರ್ ಬಳಸಿ

Devara Fear Song Jr NTR Unleashes Terror In Sync
ಟಾಲಿವುಡ್27 mins ago

Devara Fear Song: ಜ್ಯೂನಿಯರ್‌ ಎನ್‌ಟಿಆರ್ ಬರ್ತ್‌ಡೇ: ʻದೇವರʼ ಫಿಯರ್ ಸಾಂಗ್ ಔಟ್‌!

Lok sabha Election 2024
ದೇಶ34 mins ago

Lok Sabha Election 2024: ಬಿಜೆಪಿ ಅಭ್ಯರ್ಥಿಗೆ ಒಬ್ಬನಿಂದಲೇ 8 ಬಾರಿ ವೋಟಿಂಗ್;‌ ವೈರಲಾಗ್ತಿದೆ ಶಾಕಿಂಗ್‌ ವಿಡಿಯೋ

Healthy Diet
ಆರೋಗ್ಯ40 mins ago

Healthy Diet: ಬೆಣ್ಣೆ ಆರೋಗ್ಯಕ್ಕೆ ಒಳ್ಳೆಯದೇ ಕೆಟ್ಟದ್ದೇ? ಈ ಸಂಗತಿ ತಿಳಿದುಕೊಂಡಿರಿ

lr Shivarame gowda prajwal revanna case
ಕ್ರೈಂ60 mins ago

Prajwal Revanna Case: ಮಾಜಿ ಸಂಸದ ಶಿವರಾಮೇಗೌಡ ಮನೆ ಮೇಲೆ ಮೊಟ್ಟೆ ದಾಳಿ

Triple Talaq
ದೇಶ1 hour ago

Triple Talaq: ವಾಟ್ಸ್‌ಆ್ಯಪ್‌ ವಾಯ್ಸ್‌ ಮೆಸೇಜ್‌ನಲ್ಲಿ ತ್ರಿವಳಿ ತಲಾಕ್ ನೀಡಿದ ಪತಿ; ದೂರು ದಾಖಲು

rave party electronic city
ಕ್ರೈಂ1 hour ago

Rave Party: ರೇವ್‌ ಪಾರ್ಟಿ ಮೇಲೆ ಪೊಲೀಸ್‌ ದಾಳಿ, ತೆಲುಗು ನಟಿ ಹೇಮಾ ಪತ್ತೆ; ನಟಿಯರನ್ನು ಕರೆಸಿಕೊಂಡು ಏನ್‌ ಮಾಡ್ತಿದ್ರು?

Lok Sabha Election 2024
ದೇಶ1 hour ago

Lok Sabha Election 2024: 5ನೇ ಹಂತದ ಮತದಾನ; 49 ಕ್ಷೇತ್ರಗಳಲ್ಲಿ ವೋಟಿಂಗ್ ಶುರು

Job Alert
ಉದ್ಯೋಗ2 hours ago

Job Alert: ನೈವೇಲಿ ಲಿಗ್ನೈಟ್ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಅರ್ಜಿ ಸಲ್ಲಿಕೆಗೆ ಇಂದು ಕೊನೆ ದಿನ

Lok Sabha Election
ದೇಶ3 hours ago

Lok Sabha Election: ಇಂದು 5ನೇ ಹಂತದ ಮತದಾನ; ರಾಹುಲ್‌ ಗಾಂಧಿ, ಸ್ಮೃತಿ ಸೇರಿ ಹಲವರ ಭವಿಷ್ಯ ನಿರ್ಧಾರ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ17 hours ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ18 hours ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ19 hours ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ3 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ3 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ4 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು4 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ5 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

ಟ್ರೆಂಡಿಂಗ್‌