Lok Sabha Election 2024: ಬಿಜೆಪಿ ಕಚೇರಿಗೆ ಅಮ್ಮನ ಕರೆತರುವೆ; ಯಾರಿಗೆ ಹುಟ್ಟಿದ್ದೇನೆಂದು ಕೇಳಿ: ಸಿ.ಟಿ.ರವಿಗೆ ತಂಗಡಗಿ ಸವಾಲು - Vistara News

Lok Sabha Election 2024

Lok Sabha Election 2024: ಬಿಜೆಪಿ ಕಚೇರಿಗೆ ಅಮ್ಮನ ಕರೆತರುವೆ; ಯಾರಿಗೆ ಹುಟ್ಟಿದ್ದೇನೆಂದು ಕೇಳಿ: ಸಿ.ಟಿ.ರವಿಗೆ ತಂಗಡಗಿ ಸವಾಲು

Lok Sabha Election 2024: ಮೋದಿ.. ಮೋದಿ ಅಂದವರ ಕಪಾಳಕ್ಕೆ ಹೊಡೆಯಿರಿ ಎಂಬ ಸಚಿವ ಶಿವರಾಜ್‌ ತಂಗಡಗಿ ಹೇಳಿಕೆಗೆ ಕಿಡಿಕಾರಿದ್ದ ಸಿ.ಟಿ. ರವಿ ತೀವ್ರ ವಾಗ್ದಾಳಿ ನಡೆಸಿದ್ದರು. ಇದಕ್ಕೀಗ ತಂಗಡಗಿ ತಿರುಗೇಟು ನೀಡಿದ್ದು, ತಮ್ಮ ತಾಯಿಯನ್ನೇ ಬಿಜೆಪಿ ಕಚೇರಿಗೆ ಕರೆ ತರುವುದಾಗಿ ಸವಾಲು ಹಾಕಿದ್ದಾರೆ.

VISTARANEWS.COM


on

Shivaraj Tangadagi attack on CT Ravi and PM Narendra Modi photo in background
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಪ್ರಚಾರ ಭಾಷಣದಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ಅವರ ಸಂಪುಟ ಸಚಿವ ಶಿವರಾಜ್‌ ತಂಗಡಗಿ (Shivaraj Tangadagi) ಪ್ರಧಾನಿ ನರೇಂದ್ರ ಮೋದಿ (PM Narendra Modi) ವಿರುದ್ಧ ನಾಲಿಗೆ ಹರಿಬಿಟ್ಟಿರುವುದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ಇದಕ್ಕೆ ಬಿಜೆಪಿಯ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಕಿಡಿಕಾರಿದ್ದರು. ಈಗ ಅವರಿಗೆ ತಂಗಡಗಿ ತಿರುಗೇಟು ನೀಡಿದ್ದಾರೆ. “ನಾನು ಯಾರಿಗೆ ಹುಟ್ಟಿದ್ದೇನೆ ಎಂಬ ಬಗ್ಗೆ ತಿಳಿಯಬೇಕಾ? ದಿನಾಂಕ ಫಿಕ್ಸ್ ಮಾಡಿ, ಬಿಜೆಪಿ ಕಚೇರಿಗೆ ನನ್ನ ತಾಯಿಯನ್ನು ಕರೆದುಕೊಂಡು ಬರುತ್ತೇನೆ ಎಂದು ಸವಾಲು ಹಾಕಿದ್ದಾರೆ.

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಶಿವರಾಜ್‌ ತಂಗಡಗಿ, ಕರ್ನಾಟಕಕ್ಕೆ ಅನ್ಯಾಯವಾದಾಗ ಪ್ರಧಾನಿ ನರೇಂದ್ರ ಮೋದಿ ಬರಲಿಲ್ಲ. ಉತ್ತರ ಕರ್ನಾಟಕ ಮುಳುಗಿದಾಗ ಮೋದಿ ಬರಲಿಲ್ಲ. ಈಗ ಬಂದರೆ ನಮ್ಮ ಯುವಕರು ಕೇಳ್ತಾರಾ? ನಾನು ತಂದೆಯ ಸ್ಥಾನದಲ್ಲಿ ಇದ್ದು, ಸಹೋದರನ ಸ್ಥಾನದಲ್ಲಿ ಇದ್ದು ನಮ್ಮ ಯುವಕರಿಗೆ ಕಿವಿ ಮಾತು ಹೇಳಿದ್ದೇನೆ. ಸಿ.ಟಿ. ರವಿ ಅವರು ನನಗೆ ನಿಮ್ಮ ಅಪ್ಪನಿಗೆ ಹುಟ್ಟಿದರೆ ಅಂತ ಕೇಳಿದ್ದಾರೆ. ನಾನು ಸಿ.ಟಿ. ರವಿಗೆ ಈ ಮಾತನ್ನು ತಿರುಗಿ ಕೇಳಲ್ಲ. ನೀವು ಯಾರಿಗೆ ಹುಟ್ಟಿದ್ದೀರಿ ಅಂತ ಕೇಳಲ್ಲ. ನನ್ನ ಮತ್ತು ನಮ್ಮ ತಾಯಿ ಬಗ್ಗೆ ನಿಮಗೆ ಅನುಮಾನವಿದ್ದರೆ ದಿನಾಂಕ ಫಿಕ್ಸ್ ಮಾಡಿ. ನಾನು ಬಿಜೆಪಿ ಕಚೇರಿಗೆ ನನ್ನ ತಾಯಿಯನ್ನು ಕರೆದುಕೊಂಡು ಬರುತ್ತೇನೆ. ನೀವು ರೆಡಿನಾ ಸಿಟಿ ರವಿ? ನೀನು ಲೂಟಿ ರವಿ ಎಂದು ಕಿಡಿಕಾರಿದ್ದಾರೆ.

ನಿಮ್ಮ ಮೋದಿಯವರನ್ನ ಹೊಗಳಬೇಕಾ?

ಎಷ್ಟು ಜನ ನೀವು ಚಾಕು, ಚೂರಿ ಇಟ್ಟುಕೊಂಡು ಓಡಾಡಿದ್ದೀರಿ? ನಮ್ಮ ಮಕ್ಕಳು ಸಹ ಇವುಗಳನ್ನು ಇಟ್ಟುಕೊಂಡು ಓಡಾಡಬೇಕಾ? ನಮ್ಮ ಯುವಕರು ದಾರಿ ತಪ್ಪಬಾರದು ಅಂತ ಹೇಳಿದ್ದೇನೆ. ನಿಮ್ಮ ಹೇಳಿಕೆಯನ್ನು ಸಮರ್ಥನೆ ಮಾಡಿ ಎಂದು ಹಲವು ಯುವಕರು ಕರೆ ಮಾಡಿ ಹೇಳಿದ್ದಾರೆ. ಆ ನಂಬರ್ ಕೊಡ್ಲಾ? ನಾನು ವಿರೋಧ ಪಕ್ಷದ ನಾಯಕನಾಗಿ ನಿಮ್ಮ ತಪ್ಪುಗಳನ್ನು ಹೇಳದೇ ನಿಮ್ಮ ಮೋದಿಯವರನ್ನ ಹೊಗಳಬೇಕಾ? ಬಿಜೆಪಿ ಕಚೇರಿಗೆ ನನ್ನ ತಾಯಿಯನ್ನು ಕರೆದುಕೊಂಡು ಬರುತ್ತೇನೆ ಎಂದು ಶಿವರಾಜ್‌ ತಂಗಡಗಿ ಸವಾಲು ಹಾಕಿದರು.

ಸುಳ್ಳು ಸತ್ಯದ ನಡುವಿನ ಯುದ್ಧ

ಈ ಚುನಾವಣೆ ಸುಳ್ಳು ಸತ್ಯದ ನಡುವೆ ನಡೆಯುತ್ತಿರುವ ಯುದ್ಧವಾಗಿದೆ. ನಮ್ಮ ರಾಜ್ಯಕ್ಕೆ ಬರ ಬಂದಿದೆ. ಬರದ ಹಣವನ್ನು ಬಿಡುಗಡೆ ಮಾಡಿದರಾ? ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ರಾಹುಲ್ ಗಾಂಧಿ ಬಗ್ಗೆ ಏನು ಮಾತನಾಡಿದರು? ರಾಜ್ಯದ ಭದ್ರಾ ಮೇಲ್ದಂಡೆ ಯೋಜನೆ ಘೋಷಣೆ ಮಾಡಿದಿರಿ. ಆದರೆ, ಹಣ ಬಿಡುಗಡೆ ಮಾಡಿದಿರಾ? ಎಂದು ಶಿವರಾಜ್‌ ತಂಗಡಗಿ ಪ್ರಶ್ನೆ ಮಾಡಿದರು.

ಇದನ್ನೂ ಓದಿ: Lok Sabha Election 2024: ಬಿಜೆಪಿ ಬಂಡಾಯ ಶಮನಕ್ಕೆ ಹೊರಟ ದಿಗ್ಗಜರು; ಹಳೇ ಮೈಸೂರಿಗೆ ವಿಜಯೇಂದ್ರ, ಉತ್ತರ ಕರ್ನಾಟಕಕ್ಕೆ ಬಿಎಸ್‌ವೈ

ಸಿ.ಟಿ. ರವಿ ಹೇಳಿದ್ದೇನು?

ಬೆಂಗಳೂರಿನಲ್ಲಿ ಮಾಧ್ಯಮದವರಿಗೆ ಸೋಮವಾರ ಹೇಳಿಕೆ ನೀಡಿದ್ದ ಸಿ.ಟಿ. ರವಿ, ಸಂಸ್ಕೃತಿಯೇ ಗೊತ್ತಿಲ್ಲದವರಿಗೆ ಕನ್ನಡ ಸಂಸ್ಕೃತಿ ಇಲಾಖೆಯ ಜವಾಬ್ದಾರಿ ನೀಡಿದ್ದಾರೆ. ಸಚಿವರ ಹೇಳಿಕೆ ಇದು ಕನ್ನಡ ಸಂಸ್ಕೃತಿ ಇಲಾಖೆಗೆ ಮಾಡಿದ ಅಪಚಾರವಾಗಿದೆ. ಅವರ ಹೇಳಿಕೆಗೆ ಪ್ರತಿಯಾಗಿ, ‘ಬಾರಪ್ಪ ನಿಮ್ಮಪ್ಪನಿಗೆ ಹುಟ್ಟಿದ್ದರೆ ಹೊಡಿ’ ಎಂದು ಹೇಳಬೇಕು ಅಂದುಕೊಂಡಿದ್ದೆ. ಆದರೆ, ತಂಗಡಗಿ ಮಟ್ಟಕ್ಕೆ ನಾವು ಇಳಿದು ಮಾತನಾಡಲು ಹೋಗಲ್ಲ. ಇಂಥವರನ್ನು ಸಂಪುಟದಲ್ಲಿ ಇಟ್ಟುಕೊಳ್ಳಬಾರದು ಎಂದು ಕಿಡಿಕಾರಿದ್ದರು. ಈಗ ಇದಕ್ಕೆ ಶಿವರಾಜ್‌ ತಂಗಡಗಿ ಪ್ರತಿಕ್ರಿಯೆ ನೀಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

Navneet Rana: 15 ಸೆಕೆಂಡು ಕೊಟ್ಟರೆ ಸಾಕು, ನಮ್ಮ ಶಕ್ತಿ ಏನೆಂದು ತೋರಿಸುತ್ತೇವೆ; ಓವೈಸಿ ಸಹೋದರರ ವಿರುದ್ಧ ಬಿಜೆಪಿ ನಾಯಕಿ ಗುಡುಗು

Navneet Rana: 2013ರಲ್ಲಿ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ನಾಯಕ ಅಕ್ಬರುದ್ದೀನ್ ಓವೈಸಿ ನೀಡಿದ್ದ ಪ್ರಚೋದನಕಾರಿ ಹೇಳಿಕೆಯನ್ನು ಉಲ್ಲೇಖಿಸಿದ ಬಿಜೆಪಿ ನಾಯಕಿ ನವನೀತ್ ರಾಣಾ ಹೈದರಾಬಾದ್‌ನಲ್ಲಿ ಖಡಕ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಹಿಂದೆ ಅಕ್ಬುರುದ್ದೀನ್ ಓವೈಸಿ 15 ನಿಮಿಷ ಪೊಲೀಸರನ್ನು ತೆರವುಗೊಳಿಸಿದರೆ, ನಾವೇನೆಂದು ತೋರಿಸುತ್ತೇವೆ ಎಂದು ಹೇಳಿಕೆ ನೀಡಿದ್ದರು. ನಾವು ಹೇಳುತ್ತೇವೆ. ನಮಗೆ 15 ನಿಮಿಷ ಬೇಡ, 15 ಸೆಕೆಂಡು ಸಾಕು. 15 ಸೆಕೆಂಡು ಕಾಲ ಪೊಲೀಸರನ್ನು ತೆರವುಗೊಳಿಸಿದರೂ ಸಾಕು, ಅಣ್ಣ ತಮ್ಮಂದಿರಿಬ್ಬರು ಎಲ್ಲಿಂದ ಬಂದಿದ್ದಾರೆ, ಎಲ್ಲಿಗೆ ಹೋದರು ಎಂಬುದೂ ತಿಳಿಯಬಾರದು. ಹಾಗೆ ಮಾಡುತ್ತೇವೆʼʼ ಎಂದು ಹೇಳಿದ್ದಾರೆ.

VISTARANEWS.COM


on

Navneet Rana
Koo

ಹೈದರಾಬಾದ್‌: 2013ರಲ್ಲಿ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ನಾಯಕ ಅಕ್ಬರುದ್ದೀನ್ ಓವೈಸಿ (Akbaruddin Owaisi) ನೀಡಿದ್ದ ಪ್ರಚೋದನಕಾರಿ ಹೇಳಿಕೆಯನ್ನು ಉಲ್ಲೇಖಿಸಿದ ಬಿಜೆಪಿ ನಾಯಕಿ ನವನೀತ್ ರಾಣಾ (Navneet Rana) ಹೈದರಾಬಾದ್‌ನಲ್ಲಿ ಖಡಕ್‌ ಪ್ರತಿಕ್ರಿಯೆ ನೀಡಿದ್ದಾರೆ. ದೇಶದಲ್ಲಿನ ʼಹಿಂದೂ-ಮುಸ್ಲಿಂ ಅನುಪಾತವನ್ನುʼ ಸಮತೋಲನಗೊಳಿಸಲು ’15 ನಿಮಿಷʼ ಪೊಲೀಸರನ್ನು ತೆರವುಗೊಳಿಸಿದರೆ ಸಾಕು ಎಂದು ಅಕ್ಬರುದ್ದೀನ್ ಓವೈಸಿ ಅಂದು ಹೇಳಿಕೆ ನೀಡಿದ್ದರು. ಇದಕ್ಕೆ ಹೈದರಾಬಾದ್‌ನಲ್ಲಿ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಪರ ಪ್ರಚಾರ ನಡೆಸಿದ ನವನೀತ್‌ ರಾಣಾ ಈ ಹೇಳಿಕೆಯನ್ನು ಉಲ್ಲೇಖಿಸಿ ಪ್ರತಿಕ್ರಿಯೆ ನೀಡಿದ್ದಾರೆ. ʼʼನಮಗೆ 15 ನಿಮಿಷ ಬೇಡ, 15 ಸೆಕೆಂಡುಗಳ ಕಾಲ ಪೊಲೀಸರನ್ನು ತೆರವುಗೊಳಿಸಿದರೂ ಸಾಕು. ನಮ್ಮ ಶಕ್ತಿ ಏನೆಂದು ತೋರಿಸುತ್ತೇವೆʼʼ ಎಂದಿದ್ದಾರೆ.

ಘಟಾನುಘಟಿಗಳ ಸ್ಪರ್ಧೆಯ ಕಾರಣದಿಂದ ಹೈದರಾಬಾದ್‌ ಲೋಕಸಭಾ ಕ್ಷೇತ್ರ ಈ ಬಾರಿ ದೇಶದ ಗಮನ ಸೆಳೆದಿದೆ. ಇಲ್ಲಿ ಬಿಜೆಪಿಯ ಫೈರ್‌ ಬ್ರ್ಯಾಂಡ್‌ ಮಾಧವಿ ಲತಾ ಅವರು ಎಐಎಂಐಎಂ ಮುಖ್ಯಸ್ಥ, ಹಾಲಿ ಸಂಸದ ಅಸಾದುದ್ದೀನ್‌ ಓವೈಸಿ (Asaduddin Owaisi)  ವಿರುದ್ಧ ಕಣಕ್ಕಿಳಿದಿದ್ದಾರೆ. ಅಸಾದುದ್ದೀನ್‌ ಓವೈಸಿ ಅವರ ಸಹೋದರ ಈ ಅಕ್ಬರುದ್ದೀನ್ ಓವೈಸಿ. ಅವರು 2013ರಲ್ಲಿ ಬಹಿರಂಗ ಸಭೆಯಲ್ಲಿ ಮಾತನಾಡಿ, ʼʼ15 ನಿಮಿಷ ಪೊಲೀಸರನ್ನು ತೆರವುಗೊಳಿಸಿ ನೋಡಿ. 100 ಕೋಟಿ ಹಿಂದುಗಳಿಗೆ ನಾವು ಏನು ಎಂಬುದನ್ನು ತೋರಿಸುತ್ತೇವೆ” ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದು ದೇಶಾದ್ಯಂತ ಚರ್ಚೆ ಹುಟ್ಟು ಹಾಕಿತ್ತು.

ಇದಕ್ಕೆ ಪ್ರತಿಕ್ರಿಯೆ ನೀಡಿದ ನವನೀತ್‌ ರಾಣಾ ಈ 15 ಸೆಕೆಂಡ್‌ಗಳ ಹೇಳಿಕೆ ನೀಡಿದ್ದಾರೆ. ʼʼಅಸಾದುದ್ದೀನ್ ಓವೈಸಿ ಮತ್ತು ಅಕ್ಬರುದ್ದೀನ್ ಓವೈಸಿ ಅವರಿಬ್ಬರೂ ಅಣ್ಣ-ತಮ್ಮಂದಿರು ತಾನೇ. ಈ ಹಿಂದೆ ಅಕ್ಬುರುದ್ದೀನ್ ಓವೈಸಿ 15 ನಿಮಿಷ ಪೊಲೀಸರನ್ನು ತೆರವುಗೊಳಿಸಿದರೆ, ನಾವೇನೆಂದು ತೋರಿಸುತ್ತೇವೆ ಎಂದು ಹೇಳಿಕೆ ನೀಡಿದ್ದರು. ನಾವು ಹೇಳುತ್ತೇವೆ. ನಮಗೆ 15 ನಿಮಿಷ ಬೇಡ, 15 ಸೆಕೆಂಡು ಸಾಕು. 15 ಸೆಕೆಂಡು ಕಾಲ ಪೊಲೀಸರನ್ನು ತೆರವುಗೊಳಿಸಿದರೂ ಸಾಕು, ಅಣ್ಣ ತಮ್ಮಂದಿರಿಬ್ಬರು ಎಲ್ಲಿಂದ ಬಂದಿದ್ದಾರೆ, ಎಲ್ಲಿಗೆ ಹೋದರು ಎಂಬುದೂ ತಿಳಿಯಬಾರದು. ಹಾಗೆ ಮಾಡುತ್ತೇವೆʼʼ ಎಂದು ಹೇಳಿದ್ದಾರೆ.

ಎಐಎಂಐಎಂ ಆಕ್ಷೇಪ

ನವನೀತ್ ರಾಣಾ ಅವರ ಹೇಳಿಕೆಗೆ ಎಐಎಂಐಎಂ ಆಕ್ಷೇಪ ವ್ಯಕ್ತಪಡಿಸಿದೆ. ಈ ಬಗ್ಗೆ ಮಾತನಾಡಿದ ಮುಖಂಡ ವಾರಿಸ್ ಪಠಾಣ್, ʼʼನವನಿತ್ ರಾಣಾ ಅವರಿಗೆ ಈ ಬಾರಿ ಅಮರಾವತಿಯಲ್ಲಿ ಹೀನಾಯ ಸೋಲು ಖಚಿತವಾಗಿದೆ. ಹೀಗಾಗಿಯೇ ಅವರು ಈ ಆಘಾತವನ್ನು ತಾಳಲಾರದೆ ಹೀಗೆಲ್ಲ ಅಸಂಬದ್ಧವಾಗಿ ಮಾತನಾಡುತ್ತಿದ್ದಾರೆ. ಈ ರೀತಿಯ ಮಾತುಗಳಿಗೆ ಚುನಾವಣಾ ಆಯೋಗ ಯಾಕೆ ಕ್ರಮ ಕೈಗೊಂಡಿಲ್ಲ?ʼʼ ಎಂದು ಪ್ರಶ್ನಿಸಿದ್ದಾರೆ. ʼʼಬಿಜೆಪಿಯವರು ಕೋಮು ಸಾಮರಸ್ಯವನ್ನು ಕದಡಲು ಯತ್ನಿಸುತ್ತಿದ್ದಾರೆʼʼ ಎಂದೂ ಅವರು ದೂರಿದ್ದಾರೆ.

ಇದನ್ನೂ ಓದಿ: Madhavi Lata: ಹೈದರಾಬಾದ್‌ನಲ್ಲಿ ಓವೈಸಿ ವಿರುದ್ಧ ಸ್ಪರ್ಧಿಸುತ್ತಿರುವ ಬಿಜೆಪಿಯ ಮಾಧವಿ ಲತಾಗೆ ವೈ+ಭದ್ರತೆ ಒದಗಿಸಿದ ಕೇಂದ್ರ

ಹಿಂದು ಧರ್ಮದ ಕುರಿತು ಪ್ರಖರವಾಗಿ ಮಾತನಾಡುವ, ಹೈದರಾಬಾದ್‌ನಲ್ಲಿ ಎಐಎಂಐಎಂ ಪಕ್ಷದ ವೈಫಲ್ಯಗಳನ್ನು ತೋರಿಸುವ ಛಾತಿ ಹೊಂದಿರುವ ಡಾ. ಮಾಧವಿ ಲತಾ ಕೊಂಪೆಲ್ಲ ಅವರು ಹಿಂದು ಫೈರ್‌ ಬ್ರ್ಯಾಂಡ್‌ ಎನಿಸಿದ್ದಾರೆ. ಇವರಿಗೆ ಅಚ್ಚರಿಯ ರೀತಿಯಲ್ಲಿ ಬಿಜೆಪಿಯು ಹೈದರಾಬಾದ್‌ ಲೋಕಸಭೆ ಕ್ಷೇತ್ರದಿಂದ ಟಿಕೆಟ್‌ ನೀಡಿದೆ. ಹಾಗಾಗಿ, ಈ ಬಾರಿ ಹೈದರಾಬಾದ್‌ನಲ್ಲಿ ಡಾ. ಮಾಧವಿ ಲತಾ ಕೊಂಪೆಲ್ಲ ಅವರು ಅಸಾದುದ್ದೀನ್‌ ಓವೈಸಿ ಅವರಿಗೆ ತೀವ್ರ ಪೈಪೋಟಿ ನೀಡುವುದು ನಿಶ್ಚಿತ ಎಂದೇ ಹೇಳಲಾಗುತ್ತಿದೆ.

Continue Reading

ದೇಶ

Mahender Pratap Singh: ಪುಲ್ವಾಮಾ ದಾಳಿ ಪಾಕ್‌ ಕುಕೃತ್ಯ ಅಲ್ವಂತೆ; ನಾಲಿಗೆ ಹರಿಬಿಟ್ಟ ಕಾಂಗ್ರೆಸ್‌ ಅಭ್ಯರ್ಥಿ

Mahender Pratap Singh:ಹರಿಯಾಣದ ಫರಿದಾಬಾದ್‌ ಲೋಕಸಭಾ ಕ್ಷೇತ್ರ ಅಭ್ಯರ್ಥಿ ಮಹೇಂದರ್‌ ಪ್ರತಾಪ್‌ ಸಿಂಗ್‌ 2019ರಲ್ಲಿ ನಡೆದ ಪುಲ್ವಾಮಾ ದಾಳಿ ಪಾಕಿಸ್ತಾನ ನಡೆಸಿರುವುದಲ್ಲ, ಬದಲಿಗೆ ಭಾರತ ಸರ್ಕಾರ ನಡೆಸಿರುವುದು ಎಂದು ಹೇಳುವ ಮೂಲಕ ವಿವಾದದ ಕಿಡಿ ಹೊತ್ತಿದ್ದಾರೆ.

VISTARANEWS.COM


on

Mahender Pratap Singh
Koo

ಹರಿಯಾಣ: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ರಾಜಕೀಯ ನಾಯಕರ ಹೇಳಿಕೆಗಳು ವಿವಾದಗಳ ಸ್ವರೂಪ ಪಡೆಯುತ್ತಿರುವ ಘಟನೆಗಳು ಆಗಾಗ ನಡೆಯುತ್ತಲೇ ಇವೆ. ಅದರಲ್ಲೂ ಕಾಂಗ್ರೆಸ್‌ ದಿನಕ್ಕೊಬ್ಬ ನಾಯಕರಂತೆ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುತ್ತಿದ್ದಾರೆ. ಮಹಾರಾಷ್ಟ್ರ ಪ್ರತಿಪಕ್ಷದ ನಾಯಕರೂ ಆಗಿರುವ ಕಾಂಗ್ರೆಸ್‌ ನಾಯಕ ವಿಜಯ್‌ ನಾಮದೇವರಾವ್ ವಡೆತ್ತಿವಾರ್‌ (Vijay Namdevrao Wadettiwar) ಅವರು ಉಗ್ರ ಅಜ್ಮಲ್‌ ಕಸಬ್‌ (Ajmal Kasab) ಪರವಾಗಿ ಮಾತನಾಡಿರುವ ಬೆನ್ನಲ್ಲೇ ಮತ್ತೊರ್ವ ಕಾಂಗ್ರೆಸ್‌ ನಾಯಕ ಪುಲ್ವಮಾ ದಾಳಿ ಪ್ರಕರಣದಲ್ಲಿ ಪಾಕಿಸ್ತಾನಕ್ಕೆ ಕ್ಲೀನ್‌ ಚಿಟ್‌ ಕೊಟ್ಟಿದ್ದಾರೆ. ಹರಿಯಾಣದ ಫರಿದಾಬಾದ್‌ ಲೋಕಸಭಾ ಕ್ಷೇತ್ರ ಅಭ್ಯರ್ಥಿ ಮಹೇಂದರ್‌ ಪ್ರತಾಪ್‌ ಸಿಂಗ್‌(Mahender Pratap Singh) 2019ರಲ್ಲಿ ನಡೆದ ಪುಲ್ವಾಮಾ ದಾಳಿ(Pulwama attack) ಪಾಕಿಸ್ತಾನ ನಡೆಸಿರುವುದಲ್ಲ, ಬದಲಿಗೆ ಭಾರತ ಸರ್ಕಾರ ನಡೆಸಿರುವುದು ಎಂದು ಹೇಳುವ ಮೂಲಕ ವಿವಾದದ ಕಿಡಿ ಹೊತ್ತಿದ್ದಾರೆ.

ಮಹೇಂದರ್‌ ಪ್ರತಾಪ್‌ ಸಿಂಗ್‌ ಹೇಳಿದ್ದೇನು?

ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಮಹೇಂದರ್‌ ಪ್ರತಾಪ್‌ ಸಿಂಗ್‌, ಪುಲ್ವಾಮಾ ದಾಳಿಯ ರಹಸ್ಯ ಈ ಬಯಲಾಗಿದೆ. ಬಹುದೊಡ್ಡ ದಾಳಿಯ ಸೂಚನೆ ಇರುವುದರಿಂದ ನಮ್ಮ ಯೋಧರು ರಸ್ತೆ ಮೂಲಕ ಬರುವುದು ಅಷ್ಟೊಂದು ಸುರಕ್ಷಿತ ಅಲ್ಲ. ಅವರನ್ನು ಏರ್‌ಲಿಫ್ಟ್‌ ಮಾಡುವ ಎಂದುಪ್ರಧಾನಿಗೆ ಮೊದಲೇ ಮನವಿ ಮಾಡಿದ್ದೆ ಎಂದು ಅವರದ್ದೇ ರಾಜ್ಯಪಾಲ ಸತ್ಯಪಾಲ್‌ ಮಲ್ಲಿಕ್‌ ಈ ಹಿಂದೆಯೇ ಹೇಳಿದ್ದರು. ಹೀಗಾಗಿ ಅದು ಒಂದು ಬಿಜೆಪಿಯ ರಾಜಕೀಯ ಪಿತೂರಿ ಎಂಬುದು ಸ್ಪಷ್ಟವಾಗಿ ಕಾಣುತ್ತದೆ. ಅದು ಎರಡನೇ ಬಾರಿ ಚುನಾವಣೆಯಲ್ಲಿ ಗೆಲುವು ಸಾಧಿಸಲು ನಡೆಸಿದ ಚುನಾವಣಾ ಸ್ಟಂಟ್‌. ಇದೀಗ ಅವರು ಮೂರನೇ ಬಾರಿ ಗೆಲುವಿಗೆ ತಯಾರಿ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ. ಈ ವಿಡಿಯೋವನ್ನು ಬಿಜೆಪಿ ಮುಖಂಡ ವಿಷ್ಣುವರ್ಧನ್‌ ರೆಡ್ಡಿ ಎಕ್ಸ್‌ನಲ್ಲಿ ಶೇರ್‌ ಮಾಡಿದ್ದು, ಪುಲ್ವಾಮಾ ದಾಳಿಯಲ್ಲಿ ಭಾರತ 40ಕ್ಕೂ ಹೆಚ್ಚು ಸೈನಿಕರನ್ನು ಕಳೆದುಕೊಂಡಿದೆ. ಇಡೀ ದೇಶವೇ ಪಾಕಿಸ್ತಾನದ ಕುತಂತ್ರದ ಬಗ್ಗೆ ಕೆಂಡ ಕಾರುತ್ತಿದೆ. ಆದರೆ ಲಜ್ಜೆಗೆಟ್ಟ ಕಾಂಗ್ರೆಸ್‌ ಮಾತ್ರ ಪಾಕಿಸ್ತಾನಕ್ಕೆ ಕ್ಲೀನ್‌ ಚಿನ್‌ ನೀಡುತ್ತಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಇದನ್ನೂ ಓದಿ:Prajwal Revanna Case: ಎಸ್‌ಐಟಿ ಮೇಲೆ ಕೇಸ್‌ ಹಾಕ್ತೇನೆ, ಶೀಘ್ರವೇ ಪೆನ್‌ಡ್ರೈವ್‌ ಪ್ರೊಡ್ಯುಸರ್‌ ಹೆಸರು ಹೇಳ್ತೇನೆ ಎಂದ ದೇವರಾಜೇಗೌಡ

ಕೆಲ ದಿನಗಳ ಹಿಂದೆ ಪೂಂಚ್‌ನಲ್ಲಿ ನಡೆದಿದ್ದ ಉಗ್ರರ ದಾಳಿಯನ್ನು ಕಾಂಗ್ರೆಸ್‌ ಮುಖಂಡ ಚರಣ್‌ಪ್ರಿತ್‌ ಚನ್ನಿ ಬಿಜೆಪಿಯ ಚುನಾವಣಾ ಸ್ಟಂಟ್‌ ಎಂದು ಕರೆಯುವ ಮೂಲಕ ವಿವಾದಕ್ಕೀಡಾಗಿದ್ದರು. ಇದಾದ ಬಳಿಕ ಮಹಾರಾಷ್ಟ್ರ ಪ್ರತಿಪಕ್ಷದ ನಾಯಕರೂ ಆಗಿರುವ ಕಾಂಗ್ರೆಸ್‌ ನಾಯಕ ವಿಜಯ್‌ ನಾಮದೇವರಾವ್ ವಡೆತ್ತಿವಾರ್‌ ಅವರು ಉಗ್ರ ಅಜ್ಮಲ್‌ ಕಸಬ್‌ (Ajmal Kasab) ಪರವಾಗಿ ಮಾತನಾಡಿದ್ದರು. 2008ರ ನವೆಂಬರ್‌ನಲ್ಲಿ ಮುಂಬೈನಲ್ಲಿ ನಡೆದ ಉಗ್ರರ ದಾಳಿ ವೇಳೆ ಮಹಾರಾಷ್ಟ್ರದ ಭಯೋತ್ಪಾದನೆ ನಿಗ್ರಹ ದಳದ (ATS) ಮಾಜಿ ಮುಖ್ಯಸ್ಥ ಹೇಮಂತ್‌ ಕರ್ಕರೆ ಅವರು ಹುತಾತ್ಮರಾಗಿದ್ದು ಅಜ್ಮಲ್‌ ಕಸಬ್‌ ಗುಂಡಿನಿಂದ ಅಲ್ಲ. ಆರ್‌ಎಸ್‌ಎಸ್‌ ಜತೆ ಲಿಂಕ್‌ ಇರುವ ಪೊಲೀಸ್‌ ಅಧಿಕಾರಿಯೊಬ್ಬರು ಹೇಮಂತ್‌ ಕರ್ಕರೆ ಅವರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆಗೈದಿದ್ದಾರೆ ಎಂಬುದಾಗಿ ಹೇಳಿದ್ದರು

Continue Reading

Lok Sabha Election 2024

Reservation Row: ಎಸ್‌ಸಿ / ಎಸ್‌ಟಿ ಮೀಸಲಾತಿಗೆ ನೆಹರೂ ವಿರೋಧ ವ್ಯಕ್ತಪಡಿಸಿದ್ದರು: ಸಾಕ್ಷಿ ಸಮೇತ ಬಹಿರಂಗಪಡಿಸಿದ ಬಿಜೆಪಿ

Reservation Row: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ಚರ್ಚೆ ನಡೆಯುತ್ತಿದೆ. ಈ ಮಧ್ಯೆ ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಅವರು ಮೀಸಲಾತಿಯ ಬಗ್ಗೆ ಕಾಂಗ್ರೆಸ್ ಹೊಂದಿದ್ದ ಮನೋಭಾವವನ್ನು ಎತ್ತಿ ತೋರಿಸುವ ಆರ್ಕೈವಲ್ ಪತ್ರಿಕೆಯ ಹಳೆಯ ತುಣುಕನ್ನು ಉಲ್ಲೇಖಿಸಿ ವಾಗ್ದಾಳಿ ನಡೆಸಿದ್ದಾರೆ. ʼʼಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸದಸ್ಯರಿಗೆ ಉದ್ಯೋಗಗಳನ್ನು ಕಾಯ್ದಿರಿಸುವುದನ್ನು ವಿರೋಧಿಸುತ್ತೇನೆ. ಯಾಕೆಂದರೆ ಮೀಸಲಾತಿ ಅವರಲ್ಲಿ ಕೀಳರಿಮೆಯನ್ನು ಸೃಷ್ಟಿಸುತ್ತದೆʼʼ ಎಂದು ಹೇಳಿದ್ದ ನೆಹರೂ ಹೇಳಿಕೆಯನ್ನು ಉಲ್ಲೇಖಿಸಿದ್ದಾರೆ.

VISTARANEWS.COM


on

Reservation Row
Koo

ನವದೆಹಲಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ಚರ್ಚೆ ನಡೆಯುತ್ತಿದೆ (Reservation Row). ಈ ಮಧ್ಯೆ ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ (Amit Malviya) ಅವರು ಮೀಸಲಾತಿಯ ಬಗ್ಗೆ ಕಾಂಗ್ರೆಸ್ ಹೊಂದಿದ್ದ ಮನೋಭಾವವನ್ನು ಎತ್ತಿ ತೋರಿಸುವ ಆರ್ಕೈವಲ್ ಪತ್ರಿಕೆಯ ಹಳೆಯ ತುಣುಕನ್ನು ಉಲ್ಲೇಖಿಸಿ ವಾಗ್ದಾಳಿ ನಡೆಸಿದ್ದಾರೆ. ʼʼಈ ವರದಿಯು ಮಾಜಿ ಪ್ರಧಾನಿ ಜವಾಹರಲಾಲ್ ನೆಹರು (Jawaharlal Nehru) ಅವರು ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ ಉದ್ಯೋಗದಲ್ಲಿ ಮೀಸಲಾತಿಯ ನೀಡುವ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದರು ಎನ್ನುವುದಕ್ಕೆ ಸಾಕ್ಷಿ ಒದಗಿಸುತ್ತದೆʼʼ ಎಂದು ಅಮಿತ್ ಮಾಳವೀಯ ಹೇಳಿದ್ದಾರೆ.

ಮಹಾರಾಷ್ಟ್ರದ ಸೋಲಾಪುರದಲ್ಲಿ ನಡೆದ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ್ದ ನೆಹರೂ, ʼʼಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸದಸ್ಯರಿಗೆ ಉದ್ಯೋಗಗಳನ್ನು ಕಾಯ್ದಿರಿಸುವುದನ್ನು ವಿರೋಧಿಸುತ್ತೇನೆ. ಯಾಕೆಂದರೆ ಮೀಸಲಾತಿ ಅವರಲ್ಲಿ ಕೀಳರಿಮೆಯನ್ನು ಸೃಷ್ಟಿಸುತ್ತದೆʼʼ ಎಂದು ಹೇಳಿದ್ದರು ಎನ್ನುವುದನ್ನು ಆರ್ಕೈವಲ್ ಪತ್ರಿಕೆಯು ವರದಿ ಮಾಡಿತ್ತು. ಇದನ್ನು ಮಾಳವೀಯ ಉಲ್ಲೇಖಿಸಿದ್ದಾರೆ.

ಇದನ್ನು ಪೋಸ್ಟ್‌ ಮಾಡಿ ಎಸ್‌ಸಿ / ಎಸ್‌ಟಿ ಮತ್ತು ಒಬಿಸಿ ಸಮುದಾಯಗಳ ಸಬಲೀಕರಣವನ್ನು ಕಾಂಗ್ರೆಸ್ ಐತಿಹಾಸಿಕವಾಗಿ ವಿರೋಧಿಸಿದೆ ಎಂದು ಮಾಳವೀಯ ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಪ್ರತಿಪಾದಿಸಿದ್ದಾರೆ. “ಕಾಂಗ್ರೆಸ್ ಯಾವಾಗಲೂ ಎಸ್‌ಸಿ / ಎಸ್‌ಟಿ ಮತ್ತು ಒಬಿಸಿಗಳ ಸಬಲೀಕರಣದ ವಿರುದ್ಧವಾಗಿದೆ. ಆದರೆ ಮೀಸಲಾತಿಯ ಸಾಂವಿಧಾನಿಕ ನಿಬಂಧನೆಗಳನ್ನು ಯಾರೂ ಹಾಳು ಮಾಡದಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ನೋಡಿಕೊಳ್ಳುತ್ತದೆʼʼ ಎಂದು ಬರೆದುಕೊಂಡಿದ್ದಾರೆ. ಈ ಮೂಲಕ ಕಾಂಗ್ರೆಸ್‌ ಬಹುದೊಡ್ಡ ಹಿನ್ನಡೆ ಎದುರಾದಂತಾಗಿದೆ.

2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದರೆ ಪ್ರಸ್ತುತ ಜಾರಿಯಲ್ಲಿರುವ ಶೇ. 50ರಷ್ಟು ಮೀಸಲಾತಿ ಮಿತಿಯನ್ನು ಹೆಚ್ಚಿಸಲಾಗುವುದು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸೋಮವಾರ ಹೇಳಿದ್ದರು. “ಇಂದು ಮೀಸಲಾತಿಗೆ ಶೇ. 50ರಷ್ಟು ಮಿತಿ ಇದೆ. ನಾವು ಈ ಮಿತಿಯನ್ನು ತೆಗೆದು ಹಾಕುತ್ತೇವೆ. ಬಡವರಿಗೆ ಮೀಸಲಾತಿ ಮಿತಿಯನ್ನು ಹೆಚ್ಚಿಸುತ್ತೇವೆ ” ಎಂದು ರಾಬರೇಲಿ ಕಾಂಗ್ರೆಸ್ ಅಭ್ಯರ್ಥಿ ರಾಹುಲ್‌ ಗಾಂಧಿ ಘೋಷಿಸಿದ್ದರು.

ಪ್ರಣಾಳಿಕೆಯಲ್ಲಿಯೂ ಘೋಷಣೆ

2024ರ ಲೋಕಸಭಾ ಚುನಾವಣೆಯ ತನ್ನ ಪ್ರಣಾಳಿಕೆಯಲ್ಲಿ, ಎಸ್‌ಟಿ, ಎಸ್‌ಟಿ ಮತ್ತು ಒಬಿಸಿಗಳ ಮೀಸಲಾತಿಯ ಶೇ. 50ರಷ್ಟು ಮಿತಿಯನ್ನು ಹೆಚ್ಚಿಸಲು ಸಾಂವಿಧಾನಿಕ ತಿದ್ದುಪಡಿಯನ್ನು ಅಂಗೀಕರಿಸುವುದಾಗಿ ಕಾಂಗ್ರೆಸ್ ಭರವಸೆ ನೀಡಿತ್ತು. ಇತ್ತ ಕಾಂಗ್ರೆಸ್ ವಿರುದ್ಧ ಹೇಳಿಕೆ ನೀಡಿದ್ದ ಬಿಜೆಪಿ ಮುಖಂಡರು ಪ್ರಧಾನಿ ನರೇಂದ್ರ ಮೋದಿ ಇರುವವರೆಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕೊನೆಗೊಳ್ಳುವುದಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.

ಅಲ್ಲದೆ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಲು ʼನಾರಿ ಶಕ್ತಿ ವಂದನ್ ಅಧಿನಿಯಮ್ʼ ಅನ್ನು ಜಾರಿಗೆ ತರುವ ಮೂಲಕ ಮಹಿಳೆಯರನ್ನು ಸಬಲೀಕರಣಗೊಳಿಸುವುದಾಗಿ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ. ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳಿಗೆ ಕಲ್ಯಾಣ ಯೋಜನೆಗಳು ತಲುಪುವುದನ್ನು ಖಚಿತಪಡಿಸಿಕೊಳ್ಳಲಾಗುವುದು ಎಂದೂ ಬಿಜೆಪಿ ಹೇಳಿದೆ.

ಇದನ್ನೂ ಓದಿ: ಎಲ್ಲ ಮೀಸಲಾತಿಯನ್ನು ಮುಸ್ಲಿಮರಿಗೇ ಕೊಡಬೇಕು ಎಂದ ಲಾಲು ಪ್ರಸಾದ್‌ ಯಾದವ್;‌ ಕೆಂಡವಾದ ಮೋದಿ!

Continue Reading

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ: ಕಾಂಗ್ರೆಸ್ ನಾಯಕನ ‘ವರ್ಣ ವ್ಯಾಖ್ಯಾನ’ ಅವಿವೇಕತನದ್ದು

ಕಾಂಗ್ರೆಸ್ ನಾಯಕ ಪಿತ್ರೋಡಾ ಈ ರೀತಿ ಹೇಳಿಕೆ ನೀಡಿ ರಾಜಕೀಯ ಬಿರುಗಾಳಿ ಎಬ್ಬಿಸುತ್ತಿರುವುದು ಇದೇ ಮೊದಲಲ್ಲ. ಇತ್ತೀಚೆಗೆ ಅವರು ʼಅಮೆರಿಕದ ಮಾದರಿಯ ಪಿತ್ರಾರ್ಜಿತ ತೆರಿಗೆʼ ಹಾಗೂ ʼಆಸ್ತಿ ಮರುಹಂಚಿಕೆʼ ಉಲ್ಲೇಖ ಮಾಡಿದ್ದರು. ಅಮೆರಿಕದಲ್ಲಿ ಶ್ರೀಮಂತರು ಮರಣ ಹೊಂದಿದಾಗ, ಅವರ ಆಸ್ತಿಯ ಒಂದು ಭಾಗವನ್ನು ಮಾತ್ರ ಅವರ ಮಕ್ಕಳಿಗೆ ವರ್ಗಾಯಿಸಲಾಗುತ್ತದೆ. ಸರ್ಕಾರ ಗಮನಾರ್ಹ ಪಾಲನ್ನು ವಶಪಡಿಸಿಕೊಳ್ಳುತ್ತದೆ. ಭಾರತದಲ್ಲಿ ಈ ರೀತಿಯ ವಿಧಾನ ನ್ಯಾಯಯುತ ಮತ್ತು ಪ್ರಯೋಜನಕಾರಿ ಎಂದಿದ್ದರು.

VISTARANEWS.COM


on

Sam Pitroda
Koo

ಕಳೆದ ಹಲವು ಚುನಾವಣೆಗಳಲ್ಲಿ ಕಾಂಗ್ರೆಸ್‌ಗೆ ತಮ್ಮ ಹೇಳಿಕೆಗಳ ಮೂಲಕ ಹಾನಿಯೆಸಗುವ ಮಣಿಶಂಕರ ಅಯ್ಯರ್‌ ಮುಂತಾದವರ ಪರಂಪರೆಯನ್ನು ಕಾಂಗ್ರೆಸ್‌ ಪಕ್ಷದ ಭಾರತೀಯ ಸಾಗರೋತ್ತರ ವಿಭಾಗದ ಅಧ್ಯಕ್ಷ ಸ್ಯಾಮ್‌ ಪಿತ್ರೋಡಾ ಮುಂದುವರಿಸುತ್ತಿರುವಂತಿದೆ. ದೇಶದ ವೈವಿಧ್ಯತೆಯ ಬಗ್ಗೆ ಮಾತನಾಡುವಾಗ ರಾಷ್ಟ್ರದ ವಿವಿಧ ಭಾಗಗಳ ಜನತೆಯನ್ನು ಚೀನಿಯರು, ಅರಬ್ಬರು, ಬಿಳಿಯರು ಮತ್ತು ಆಫ್ರಿಕನ್ನರಿಗೆ ಹೋಲಿಸಿ ಸ್ಯಾಮ್‌ ಪಿತ್ರೋಡಾ ವಿವಾದ ಹುಟ್ಟುಹಾಕಿದ್ದಾರೆ. “ಭಾರತದಲ್ಲಿ ಪೂರ್ವದಲ್ಲಿರುವ ಜನರು ಚೀನಿಯರಂತೆ ಕಾಣುತ್ತಾರೆ. ಪಶ್ಚಿಮದಲ್ಲಿ ಜನರು ಅರಬ್ಬರಂತೆ, ಉತ್ತರದ ಜನರು ಬಹುಶಃ ಶ್ವೇತವರ್ಣೀಯರಂತೆ ಹಾಗೂ ದಕ್ಷಿಣದ ಜನರು ದಕ್ಷಿಣ ಆಫ್ರಿಕಾದವರಂತೆ ಕಾಣುತ್ತಾರೆ. ಪರವಾಗಿಲ್ಲ, ನಾವೆಲ್ಲರೂ ಸಹೋದರರು ಮತ್ತು ಸಹೋದರಿಯರು” ಎಂದು ಪಿತ್ರೋಡಾ ಹೇಳಿದ್ದಾರೆ.

ಸಹಜವಾಗಿಯೇ ಈ ಮಾತು ವಿವಾದ ಹುಟ್ಟುಹಾಕಿದೆ. ಇಂಥ ಅವಕಾಶವನ್ನು ಎಂದೂ ಕಳೆದುಕೊಳ್ಳದ ಪ್ರಧಾನಮಂತ್ರಿ ನರೇಂದ್ರ ಮೋದಿ, “ಕಪ್ಪು ಚರ್ಮ ಇರುವ ಭಾರತೀಯರು ಆಫ್ರಿಕಾದವರು ಎಂದು ಈ ʼತತ್ವಜ್ಞಾನಿ ಅಂಕಲ್‌ʼ ಹೇಳಿದ್ದಾರೆ. ಇದರರ್ಥ, ನೀವು ದೇಶದ ಹಲವಾರು ಜನರನ್ನು ಅವರ ಚರ್ಮದ ಬಣ್ಣದ ಆಧಾರದ ಮೇಲೆ ನಿಂದಿಸುತ್ತಿದ್ದೀರಿ. ಚರ್ಮದ ಬಣ್ಣದ ಆಧಾರದ ಮೇಲೆ ಭಾರತೀಯರಿಗೆ ಮಾಡುವ ಅವಮಾನವನ್ನು ಈ ದೇಶ ಸಹಿಸುವುದಿಲ್ಲ” ಎಂದು ಪಿತ್ರೋಡಾ ಮೇಲೆ ಹರಿಹಾಯ್ದಿದ್ದಾರೆ. “ಆದಿವಾಸಿ ಕುಟುಂಬದ ಮಗಳಾದ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿ ಪದವಿಯ ಸ್ಪರ್ಧೆಯ ವೇಳೆ ಸೋಲಿಸಲು ಕಾಂಗ್ರೆಸ್ ಏಕೆ ಶ್ರಮಿಸಿತು ಎಂದು ನಾನು ತುಂಬಾ ಯೋಚಿಸುತ್ತಿದ್ದೆ. ಇಂದು ನನಗೆ ಅದರ ಕಾರಣ ತಿಳಿಯಿತು. ಅಮೆರಿಕದಲ್ಲಿರುವ ‘ಶೆಹಜಾದಾ’ನ ಅಂಕಲ್‌ ಹಾಗೂ ಫಿಲಾಸಫಿ ಮಾರ್ಗದರ್ಶಕ (ಪಿತ್ರೋಡಾ) ಈ ‘ಶೆಹಜಾದಾ’ಗೆ ಕ್ರಿಕೆಟ್‌ನ ಮೂರನೇ ಅಂಪೈರ್‌ನಂತೆ ಸಲಹೆ ನೀಡುತ್ತಾರೆ” ಎಂದು ಕುಟುಕಿದ್ದಾರೆ. ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರು, “ಸ್ಯಾಮ್ ಭಾಯ್, ನಾನು ಈಶಾನ್ಯದಿಂದ ಬಂದವನು ಮತ್ತು ನಾನು ಭಾರತೀಯನಂತೆ ಕಾಣುತ್ತೇನೆ. ನಮ್ಮ ದೇಶದ ಬಗ್ಗೆ ಸ್ವಲ್ಪ ತಿಳಿವಳಿಕೆ ಬೆಳೆಸಿಕೊಳ್ಳಿ” ಎಂದಿದ್ದಾರೆ.

ಕಾಂಗ್ರೆಸ್ ನಾಯಕ ಪಿತ್ರೋಡಾ ಈ ರೀತಿ ಹೇಳಿಕೆ ನೀಡಿ ರಾಜಕೀಯ ಬಿರುಗಾಳಿ ಎಬ್ಬಿಸುತ್ತಿರುವುದು ಇದೇ ಮೊದಲಲ್ಲ. ಇತ್ತೀಚೆಗೆ ಅವರು ʼಅಮೆರಿಕದ ಮಾದರಿಯ ಪಿತ್ರಾರ್ಜಿತ ತೆರಿಗೆʼ ಹಾಗೂ ʼಆಸ್ತಿ ಮರುಹಂಚಿಕೆʼ ಉಲ್ಲೇಖ ಮಾಡಿದ್ದರು. ಅಮೆರಿಕದಲ್ಲಿ ಶ್ರೀಮಂತರು ಮರಣ ಹೊಂದಿದಾಗ, ಅವರ ಆಸ್ತಿಯ ಒಂದು ಭಾಗವನ್ನು ಮಾತ್ರ ಅವರ ಮಕ್ಕಳಿಗೆ ವರ್ಗಾಯಿಸಲಾಗುತ್ತದೆ. ಸರ್ಕಾರ ಗಮನಾರ್ಹ ಪಾಲನ್ನು ವಶಪಡಿಸಿಕೊಳ್ಳುತ್ತದೆ. ಭಾರತದಲ್ಲಿ ಈ ರೀತಿಯ ವಿಧಾನ ನ್ಯಾಯಯುತ ಮತ್ತು ಪ್ರಯೋಜನಕಾರಿ ಎಂದಿದ್ದರು. ಕಾಂಗ್ರೆಸ್‌ ಪಕ್ಷ ಈ ಹೇಳಿಕೆಯಿಂದ ಉಂಟಾದ ಕೋಲಾಹಲದಿಂದ ಬೆಚ್ಚಿಬಿದ್ದು, ಪಿತ್ರೋಡಾ ಹೇಳಿಕೆಯಿಂದ ಅಂತರ ಕಾಪಾಡಿಕೊಂಡಿತ್ತು.

ಪಿತ್ರೋಡಾ ಅವರು ತಮ್ಮ ಮಾತನ್ನು ವಿಶ್ಲೇಷಣೆ ಎಂದುಕೊಂಡಿರುವಂತಿದೆ. ಆದರೆ ವಿಶ್ಲೇಷಣೆಗೂ ಜನಾಂಗೀಯ ನಿಂದನೆಗೂ ಅವರು ವ್ಯತ್ಯಾಸ ಗುರುತಿಸಿಕೊಳ್ಳಬೇಕಿದೆ. ದಕ್ಷಿಣ ಭಾರತೀಯರು ತುಸು ಕಪ್ಪಗಿದ್ದಾರೆ ಸರಿ; ಅಷ್ಟಕ್ಕೇ ಅವರು ಆಫ್ರಿಕನ್ನರಿಗೆ ಸಮವೋ? ಭಾರತದಲ್ಲಿ ಅತಿ ಹೆಚ್ಚಿನ ತೆರಿಗೆ ಉತ್ಪತ್ತಿಯಾಗುವುದು, ಜಿಡಿಪಿಗೆ ಹೆಚ್ಚಿನ ಕೊಡುಗೆ ನೀಡುವವರು ದಕ್ಷಿಣ ಭಾರತೀಯರು. ಇಲ್ಲಿನ ಸಂಸ್ಕೃತಿ ಅಲ್ಲಿಗಿಂತ ವಿಭಿನ್ನ. ಪೂರ್ವಭಾಗದವರು ಚೀನೀಯರಂತೆ ಕಾಣುತ್ತಾರೆ ಎನ್ನುವ ಮೂಲಕ, ʼಅರುಣಾಚಲ ನಮ್ಮದುʼ ಎನ್ನುತ್ತಿರುವ ಚೀನಾಕ್ಕೆ ಪಿತ್ರೋಡಾ ಸಹಾಯ ಮಾಡುತ್ತಿರುವಂತಿದೆ. ಭೌಗೋಳಿಕ ಹಾಗೂ ಸಾಂಸ್ಕೃತಿಕ ಭಿನ್ನತೆಗಳು ಪ್ರತಿ ದೇಶದಲ್ಲೂ ಇದ್ದೇ ಇರುತ್ತವೆ. ಭಾರತ ವಿಶಾಲ ದೇಶವಾದುದರಿಂದ ಇಲ್ಲಿ ಹೆಚ್ಚಿನ ವೈವಿಧ್ಯವಿದೆ. ಆ ಕಾರಣಕ್ಕೇ ಇದು ಸಾಂಸ್ಕೃತಿಕವಾಗಿ ಶ್ರೀಮಂತವೂ ಆಗಿದೆ. ಇದು ಭಾರತದ ಶಕ್ತಿಯೇ ಹೊರತು, ಇನ್ನೊಂದರ ನಕಲು ಅಲ್ಲ. ನಾವು ನಮ್ಮನ್ನು ಬೇರೆ ದೇಶಗಳಿಗೆ ಚರ್ಮದ ಬಣ್ಣದಿಂದ ಹೋಲಿಸಿಕೊಳ್ಳಬೇಕಿಲ್ಲ. ಬೇಕಿದ್ದರೆ ಭೂತಾನಿನ ಆನಂದದ ಸ್ವಭಾವದ ಸೂಚ್ಯಂಕಕ್ಕೆ, ಜಪಾನಿನ ಪರಿಶ್ರಮದ ಗುಣಕ್ಕೆ, ಕೆರಿಬಿಯನ್ನರ ದೈಹಿಕ ಬಲಕ್ಕೆ ಹೋಲಿಸಿಕೊಳ್ಳೋಣ.

ಈ ಹಿಂದೆ ಮಣಿಶಂಕರ ಅಯ್ಯರ್‌ ಮುಂತಾದವರು ಹೀಗೆ ʼಸೆಲ್ಫ್‌ ಗೋಲ್‌ʼ ಅಥವಾ ʼಆತ್ಮಹತ್ಯಾ ದಾಳಿʼ ಮಾಡಿಕೊಳ್ಳುತ್ತಿದ್ದರು. ಇಂಥವರು ಸ್ವತಃ ತಮ್ಮ ಪಕ್ಷಕ್ಕೇ ತಮ್ಮ ಹೇಳಿಕೆಗಳಿಂದ ಗಂಡಾಂತರ ತಂದೊಡ್ಡುತ್ತಿರುತ್ತಾರೆ. 2017ರಲ್ಲಿ ಮಣಿಶಂಕರ ಅಯ್ಯರ್‌ ಅವರು ಮೋದಿಯವರನ್ನು ʼನೀಚʼ ಎಂದು ಕರೆದಿದ್ದರು. ಇತ್ತೀಚೆಗೆ ಅವರು ಪಾಕಿಸ್ತಾನದಲ್ಲಿ ನಿಂತು “ಭಾರತದ ಮೂರನೇ ಎರಡು ಭಾಗ ಜನ ಪಾಕ್‌ನತ್ತ ಬರಲು ಸಿದ್ಧರಿದ್ದಾರೆ” ಎಂದಿದ್ದರು. 2007ರಲ್ಲಿ ನರೇಂದ್ರ ಮೋದಿಯವರನ್ನು ಕಾಂಗ್ರೆಸ್‌ ಮುಖ್ಯಸ್ಥೆ ಸೋನಿಯಾ ಗಾಂಧಿ ʼಸಾವಿನ ಸರದಾರʼ ಎಂದು ಕರೆದಿದ್ದರು. ಇತ್ತೀಚೆಗೆ ಗುಜರಾತ್‌ ಚುನಾವಣೆ ಸಂದರ್ಭ ಮೋದಿಯವರಿಗೆ ಮಲ್ಲಿಕಾರ್ಜುನ ಖರ್ಗೆಯವರು ʼರಾವಣʼ ಎಂದಿದ್ದರು. ಆದರೆ ಇಂಥ ಹೇಳಿಕೆಗಳೆಲ್ಲ ಹೇಳಿದವರಿಗೇ ತಿರುಮಂತ್ರವಾಗಿ, ನಿಂದಿಸಲ್ಪಟ್ಟವರು ಭಾರಿ ಬಹುಮತದಿಂದ ಗೆದ್ದಿದ್ದರು. ಮತದಾರರ ಮನಶ್ಶಾಸ್ತ್ರ ಅರ್ಥ ಮಾಡಿಕೊಳ್ಳದ ಜನನಾಯಕರು ಇಂಥ ಮಾತುಗಳನ್ನು ಬಳಸುತ್ತಾರೆ. ನಂತರ ನಾಲಿಗೆ ಕಚ್ಚಿಕೊಳ್ಳುತ್ತಾರೆ. ಇದು ಅವರನ್ನೇ ಇಕ್ಕಟ್ಟಿಗೆ ಸಿಲುಕಿಸುವುದಲ್ಲದೆ, ಅವರ ಚಾರಿತ್ರ್ಯವನ್ನೂ ಹರಾಜಿಗಿಡುತ್ತದೆ.

ಇದನ್ನೂ ಓದಿ: Sam Pitroda: ಭಾರತೀಯರ ಬಣ್ಣದ ಕುರಿತು ಮಾತಾಡಿದ ಸ್ಯಾಮ್‌ ಪಿತ್ರೋಡಾ ತಲೆದಂಡ; ಕಾಂಗ್ರೆಸ್‌ ಸ್ಥಾನಕ್ಕೆ ರಾಜೀನಾಮೆ!

Continue Reading
Advertisement
Akshaya Tritiya Fashion
ಫ್ಯಾಷನ್21 mins ago

Akshaya Tritiya Fashion: ಅಕ್ಷಯ ತೃತೀಯಕ್ಕೆ ಬಂತು ಬಂಗಾರದ ಆಕರ್ಷಕ ಮೂಗಿನ ಸ್ಟಡ್ಸ್

SSLC Result 2024
ಶಿಕ್ಷಣ28 mins ago

SSLC Result 2024: ಎಸ್‌ಎಸ್‌ಎಲ್‌ಸಿ ‌ಉತ್ತರ ಪತ್ರಿಕೆ ಮರು ಮೌಲ್ಯಮಾಪನ, ಮರುಎಣಿಕೆಗೆ ಅರ್ಜಿ ಸಲ್ಲಿಸಲು ಆನ್‌ಲೈನ್‌ನಲ್ಲಷ್ಟೆ ಅವಕಾಶ

MS Dhoni
ಕ್ರೀಡೆ28 mins ago

MS Dhoni: ಧೋನಿಗೆ ವಿಶೇಷ ಉಡುಗೊರೆ ನೀಡಿದ ಅಭಿಮಾನಿ; ವಿಡಿಯೊ ವೈರಲ್​

Janhvi Kapoor Wears Cricket-Themed Dress
ಬಾಲಿವುಡ್35 mins ago

Janhvi Kapoor: ಕ್ರಿಕೆಟ್ ಥಿಮ್‌ ಡ್ರೆಸ್‌ನಲ್ಲಿ ಪೋಸ್‌ ಕೊಟ್ಟ ಜಾನ್ವಿ ಕಪೂರ್; ಚೆಂಡಿದೆ ಬೆನ್ನ ಹಿಂದೆ!

Job Alert
ಉದ್ಯೋಗ1 hour ago

Job Alert: 506 ಹುದ್ದೆಗಳ ಭರ್ತಿಗೆ ಯುಪಿಎಸ್‌ಸಿಯಿಂದ ಅರ್ಜಿ ಆಹ್ವಾನ; ಮೇ 14ರೊಳಗೆ ಅಪ್ಲೈ ಮಾಡಿ

Kannada Serials TRP Puttakkana makkalu TOP one
ಕಿರುತೆರೆ1 hour ago

Kannada Serials TRP: ಟಾಪ್‌ 3ರಲ್ಲಿ ಇವೆ ಎರಡು ಧಾರಾವಾಹಿಗಳು; ʻಪುಟ್ಟಕ್ಕನ ಮಕ್ಕಳುʼ ಸೀರಿಯಲ್‌ನದ್ದೇ ಪಾರುಪತ್ಯ!

Self Harming Man commits suicide after falling from PG in Bengaluru
ಬೆಂಗಳೂರು1 hour ago

Self Harming: ಕಟ್ಟಡದ ಮೇಲಿಂದ ಬಿದ್ದು ಯುವಕ ಸೂಸೈಡ್‌

Atrocity on women
ದೇಶ1 hour ago

Atrocity on women: ಟಿಎಂಸಿ ಮುಖಂಡರ ವಿರುದ್ಧ ಅತ್ಯಾಚಾರ ಕೇಸ್‌; ಯೂ ಟರ್ನ್‌ ಹೊಡೆದ ದೂರುದಾರೆ

Money Guide
ಮನಿ-ಗೈಡ್1 hour ago

Money Guide: ನಿಮ್ಮ ಎನ್‌ಪಿಎಸ್‌ ಖಾತೆ ಸ್ಥಗಿತಗೊಂಡಿದ್ದರೆ ಚಿಂತಿಸಬೇಡಿ; ಮನೆಯಲ್ಲೇ ಕೂತು ಸಕ್ರಿಯಗೊಳಿಸುವ ವಿಧಾನ ಇಲ್ಲಿದೆ

Virender Sehwag
ಕ್ರಿಕೆಟ್1 hour ago

Virender Sehwag: ಏಕದಿನ ವಿಶ್ವಕಪ್​ ಸೋಲಿಗೆ ಕೊಹ್ಲಿ, ರಾಹುಲ್​ ನೇರ ಕಾರಣ ಎಂದ ಮಾಜಿ ಆಟಗಾರ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

SSLC Result 2024 what is the reason for most of the students fail in SSLC
ಕರ್ನಾಟಕ4 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ4 hours ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

SSLC Result 2024 secret behind 20 percent grace marks
ಕರ್ನಾಟಕ4 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

SSLC Result 2024 78 schools get zero results in SSLC exams
ಬೆಂಗಳೂರು5 hours ago

SSLC Result 2024: ಎಸ್‌ಎಸ್‌ಎಲ್‌ಸಿ ಎಕ್ಸಾಂನಲ್ಲಿ ಸಿಕ್ಸರ್‌ ಬಾರಿಸಿದ ಗ್ರಾಮೀಣ ಪ್ರತಿಭೆಗಳು; 78 ಶಾಲೆಗಳಲ್ಲಿ ಶೂನ್ಯ ರಿಸಲ್ಟ್‌!

SSLC Result 2024 SSLC students get 20 percent grace marks but result is very poor
ಶಿಕ್ಷಣ5 hours ago

SSLC Result 2024: ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಸಿಕ್ತು 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌! ಆದ್ರೂ ಫಲಿತಾಂಶ ತೀರಾ ಕಳಪೆ

SSLC Exam Result 2024 Announce
ಬೆಂಗಳೂರು6 hours ago

SSLC Result 2024: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಶೇ. 73.40 ವಿದ್ಯಾರ್ಥಿಗಳು ಪಾಸ್‌, ಉಡುಪಿ ಫಸ್ಟ್‌, ಯಾದಗಿರಿ ಲಾಸ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ2 days ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ2 days ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ2 days ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

ಟ್ರೆಂಡಿಂಗ್‌