ವಿಸ್ತಾರ ಸಂಪಾದಕೀಯ: ಭಯೋತ್ಪಾದನೆಯ ಫಲ ಉಣ್ಣುತ್ತಿರುವ ಪಾಕಿಸ್ತಾನ - Vistara News

ಸಂಪಾದಕೀಯ

ವಿಸ್ತಾರ ಸಂಪಾದಕೀಯ: ಭಯೋತ್ಪಾದನೆಯ ಫಲ ಉಣ್ಣುತ್ತಿರುವ ಪಾಕಿಸ್ತಾನ

ಪಾಕಿಸ್ತಾನವು ಭಯೋತ್ಪಾದನೆಯ ರಾಜಧಾನಿ ಎನ್ನುವುದು ಈ ಹಿಂದೆಯೇ ಸಾಬೀತಾದ ಸಂಗತಿ. ಭಯೋತ್ಪಾದನೆಯ ಬೀಜವನ್ನು ಬಿತ್ತಿ, ಬೆಳೆಸಿದ್ದೇ ಪಾಕ್. ಈಗ ಪಾಕ್ ಸ್ವತಃ ಇದರ ಫಲ ಅನುಭವಿಸುತ್ತಿದೆ.

VISTARANEWS.COM


on

Pakistan News
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಆರ್ಥಿಕ ಕುಸಿತದಿಂದ ತತ್ತರಿಸುತ್ತಿರುವ, ಸರಿಯಾದ ಆಡಳಿತಾತ್ಮಕ ಸರ್ಕಾರವೂ ಇಲ್ಲದ ಪಾಕಿಸ್ತಾನದಲ್ಲಿ (Pakistan) ಮಂಗಳವಾರ ಎರಡು ಭಯೋತ್ಪಾದಕ ದಾಳಿಗಳು ನಡೆದಿವೆ. ಒಂದೇ ವಾರದಲ್ಲಿ ಮೂರು ಉಗ್ರ ದಾಳಿಗಳು ಘಟಿಸಿವೆ. ಪಾಕಿಸ್ತಾನದ ಎರಡನೇ ಅತಿದೊಡ್ಡ ನೌಕಾ ವಿಮಾನ ನಿಲ್ದಾಣವಾದ ಟರ್ಬತ್‌ನಲ್ಲಿರುವ ಪಿಎನ್‌ಎಸ್ ಸಿದ್ದಿಕ್ ಮೇಲೆ ಬಲೂಚಿ ಬಂಡುಕೋರರು ಸೋಮವಾರ ದಾಳಿ ನಡೆಸಿದ್ದಾರೆ. ಪಾಕಿಸ್ತಾನದಲ್ಲಿ ನಿಷೇಧಿತವಾಗಿರುವ ಬಲೂಚಿಸ್ತಾನ್ ಲಿಬರೇಶನ್ ಆರ್ಮಿ(ಬಿಎಲ್‌ಎ)ಯ ಮಜೀದ್ ಬ್ರಿಗೇಡ್ ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ.

ಬಲೂಚಿಸ್ತಾನದಲ್ಲಿ ಚೀನಾದ ಹಸ್ತಕ್ಷೇಪವನ್ನು ವಿರೋಧಿಸುತ್ತಿರುವ ಸಂಘಟನೆ ಬಿಎಲ್‌ಎ. ಇಂದು ಇನ್ನೊಂದು ಕಡೆ, ವಾಯವ್ಯ ಪಾಕಿಸ್ತಾನದಲ್ಲಿ ಮಂಗಳವಾರ ಆತ್ಮಾಹುತಿ ಬಾಂಬರ್ ನಡೆಸಿದ ದಾಳಿಯಲ್ಲಿ ಐವರು ಚೀನೀ ಪ್ರಜೆಗಳು ಸಾವನ್ನಪ್ಪಿದ್ದಾರೆ. ಇಸ್ಲಾಮಾಬಾದ್​ನಲ್ಲಿ ಖೈಬರ್ ಪಖ್ತುಂಕ್ವಾ ಪ್ರಾಂತ್ಯದಲ್ಲಿರುವ ದಾಸು ಶಿಬಿರಕ್ಕೆ ಪ್ರಯಾಣಿಸುತ್ತಿದ್ದ ಚೀನಾದ ಎಂಜಿನಿಯರ್‌ಗಳ ಬೆಂಗಾವಲು ವಾಹನಕ್ಕೆ ಆತ್ಮಾಹುತಿ ಬಾಂಬರ್ ಸ್ಫೋಟಕ ತುಂಬಿದ ವಾಹನವನ್ನು ಡಿಕ್ಕಿ ಹೊಡೆಸಿದ್ದಾನೆ. ಈ ದಾಳಿಯಲ್ಲಿ ಐವರು ಚೀನೀ ಪ್ರಜೆಗಳು ಮತ್ತು ಅವರ ಪಾಕಿಸ್ತಾನಿ ಚಾಲಕ ಮೃತಪಟ್ಟಿದ್ದಾನೆ. ಇದೂ ಕೂಡ ಚೀನೀ ಪ್ರಜೆಗಳನ್ನೇ ಗುರಿಯಾಗಿರಿಸಿಕೊಂಡ ದಾಳಿಯಾದ್ದರಿಂದ ಬಲೂಚಿ ದಾಳಿಕೋರರೇ ಇದನ್ನು ನಡೆಸಿರಬಹುದು ಎನ್ನಲಾಗಿದೆ. ಮಾರ್ಚ್ 20ರಂದು ಇದೇ ಸಂಘಟನೆ ಗ್ವಾದರ್‌ನಲ್ಲಿರುವ ಮಿಲಿಟರಿ ಗುಪ್ತಚರ ಪ್ರಧಾನ ಕಚೇರಿಯ ಮೇಲೆ ದಾಳಿ ನಡೆಸಿತ್ತು. ಇಬ್ಬರು ಪಾಕಿಸ್ತಾನಿ ಸೈನಿಕರು ಮತ್ತು ಎಂಟು ಭಯೋತ್ಪಾದಕರು ಕೊಲ್ಲಲ್ಪಟ್ಟಿದ್ದರು.

ಪಾಕಿಸ್ತಾನದಲ್ಲಿ, ವಿಶೇಷವಾಗಿ ಖೈಬರ್ ಪಖ್ತುಂಖ್ವಾ ಮತ್ತು ಬಲೂಚಿಸ್ತಾನದಲ್ಲಿ ಭಯೋತ್ಪಾದಕ ಚಟುವಟಿಕೆಗಳು ನವೆಂಬರ್ 2022ರಿಂದ ಉಲ್ಬಣಗೊಂಡಿದೆ. ಅಲ್ಲಿಯವರೆಗೆ ಸರ್ಕಾರ ಮತ್ತು ನಿಷೇಧಿತ ಉಗ್ರಗಾಮಿ ಗುಂಪು ತೆಹ್ರೀಕ್-ಇ-ತಾಲಿಬಾನ್ ಪಾಕಿಸ್ತಾನದ ನಡುವೆ ಕದನ ವಿರಾಮವಿತ್ತು. ಒಂದು ವಾರದಲ್ಲಿ ಪಾಕಿಸ್ತಾನದಲ್ಲಿ ಚೀನಾದ ಹಿತಾಸಕ್ತಿಗಳ ಮೇಲೆ ನಡೆದ ಮೂರನೇ ಪ್ರಮುಖ ದಾಳಿ ಇದಾಗಿದೆ. ಮೊದಲ ಎರಡು ದಾಳಿಗಳು ಬಲೂಚಿಸ್ತಾನದ ನೈಋತ್ಯ ಪ್ರಾಂತ್ಯದ ವಾಯುನೆಲೆ ಮತ್ತು ಆಯಕಟ್ಟಿನ ಬಂದರಿನಲ್ಲಿ ನಡೆದಿದ್ದವು. ಅಲ್ಲಿ ಚೀನಾ ಮೂಲಸೌಕರ್ಯ ಯೋಜನೆಗಳಲ್ಲಿ ಶತಕೋಟಿ ಹೂಡಿಕೆ ಮಾಡುತ್ತಿದೆ. ಪಶ್ಚಿಮ ಪ್ರಾಂತ್ಯದ ಖೈಬರ್-ಪಖ್ತುಂಕ್ವಾದಲ್ಲಿ ರಸ್ತೆ ನಿರ್ಮಾಣ ಯೋಜನೆಯ ಭಾಗವಾಗಿ ಚೀನಾದ ಎಂಜಿನಿಯರ್​ಗಳು ಮತ್ತು ಪಾಕಿಸ್ತಾನಿ ನಿರ್ಮಾಣ ಕಾರ್ಮಿಕರು ಹಲವಾರು ವರ್ಷಗಳಿಂದ ಜಲವಿದ್ಯುತ್ ಯೋಜನೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಮಹತ್ವದ ಅಣೆಕಟ್ಟು ಯೋಜನೆಗೆ ನೆಲೆಯಾಗಿರುವ ದಾಸು ಈ ಹಿಂದೆಯೂ ದಾಳಿಗೆ ಗುರಿಯಾಗಿದ್ದವು. 2021ರಲ್ಲಿ ದಾಸುವಿನಲ್ಲಿ ನಡೆದ ದಾಳಿಯಲ್ಲಿ ಒಂಬತ್ತು ಚೀನೀ ಪ್ರಜೆಗಳು ಮತ್ತು ಇಬ್ಬರು ಪಾಕಿಸ್ತಾನಿ ಮಕ್ಕಳು ಸಾವನ್ನಪ್ಪಿದ್ದರು. ದಾಸು ಜಲವಿದ್ಯುತ್ ಯೋಜನೆಯ ಸ್ಥಳಕ್ಕೆ ಚೀನಾದ ಎಂಜಿನಿಯರ್​ಗಳು ಮತ್ತು ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಬಸ್ ಅನ್ನು ಗುರಿಯಾಗಿಸಿಕೊಂಡು ಈ ಘಟನೆ ನಡೆದಿತ್ತು.

2022ರಲ್ಲಿ ವಿಶ್ವಾದ್ಯಂತ ಭಯೋತ್ಪಾದನೆ ಸಂಬಂಧಿತ ಸಾವುಗಳಲ್ಲಿ ಪಾಕಿಸ್ತಾನವು ಎರಡನೇ ಅತಿದೊಡ್ಡ ಹೆಚ್ಚಳವನ್ನು ದಾಖಲಿಸಿದೆ. 2021ರಲ್ಲಿ 292 ಇದ್ದ ಸಾವಿನ ಸಂಖ್ಯೆ ಕಳೆದ ವರ್ಷದ ಶೇ.120 ಏರಿಕೆ ದಾಖಲಿಸಿದ್ದು, ಒಟ್ಟು 643 ಸಾವು ವರದಿಯಾಗಿದೆ. ಇದು ವರ್ಷದಿಂದ ವರ್ಷಕ್ಕೆ ಅತಿದೊಡ್ಡ ಹೆಚ್ಚಳವನ್ನು ಕಾಣುತ್ತಿದೆ. ಭಯೋತ್ಪಾದನೆ ಸಂಬಂಧಿಸಿ ಜನರು ಸಾವನ್ನಪ್ಪುತ್ತಿರುವ ಪಟ್ಟಿಯಲ್ಲಿ ಪಾಕಿಸ್ತಾನ ನಾಲ್ಕು ಸ್ಥಾನ ಮೇಲಕ್ಕೆ ಹೋಗಿದ್ದು ಸದ್ಯ ಆರನೇ ಸ್ಥಾನದಲ್ಲಿದೆ. ಇದೆಲ್ಲವೂ ಆಸ್ಟ್ರೇಲಿಯಾ ಮೂಲದ ಇನ್‌ಸ್ಟಿಟ್ಯೂಟ್ ಫಾರ್ ಎಕನಾಮಿಕ್ಸ್ ಅಂಡ್ ಪೀಸ್ ಬಿಡುಗಡೆ ಮಾಡಿರುವ ವಾರ್ಷಿಕ ಜಾಗತಿಕ ಭಯೋತ್ಪಾದನಾ ಸೂಚ್ಯಂಕ(ಜಿಟಿಐ) ವರದಿಯಲ್ಲಿದೆ.

ಇದನ್ನೂ ಓದಿ: ವಿಸ್ತಾರ ಸಂಪಾದಕೀಯ: ಚೀನಾದ ತಗಾದೆಗೆ ಭಾರತದ ಉತ್ತರ ಒಂದೇ- ಅರುಣಾಚಲ ನಮ್ಮದು

ಪಾಕಿಸ್ತಾನವು ಭಯೋತ್ಪಾದನೆಯ ರಾಜಧಾನಿ ಎನ್ನುವುದು ಈ ಹಿಂದೆಯೇ ಸಾಬೀತಾದ ಸಂಗತಿ. ಭಯೋತ್ಪಾದನೆಯ ಬೀಜವನ್ನು ಬಿತ್ತಿ, ಬೆಳೆಸಿದ್ದೇ ಪಾಕ್. ಈಗ ಪಾಕ್ ಸ್ವತಃ ಇದರ ಫಲ ಉಣ್ಣುತ್ತಿದೆ. ಪಾಕಿಸ್ತಾನದ ಭಯೋತ್ಪಾದನೆಯ ರಫ್ತು ನೀತಿ ದಾರುಣ ವೈಫಲ್ಯ ಕಂಡಿರುವುದಕ್ಕೆ ಹಲವು ಉದಾಹರಣೆಗಳನ್ನು ನೀಡಬಹುದು. ತನ್ನದೇ ನೆಲವಾದ ಬಲೂಚಿಸ್ತಾನದಲ್ಲಿ ಪಾಕ್‌ನ ಉಗ್ರವಾದದ ನೀತಿ ಅದಕ್ಕೇ ತಿರುಗಿ ಬಿತ್ತು. ಅಲ್ಲಿಯೇ ಪ್ರತ್ಯೇಕತಾವಾದಿಗಳು ಹುಟ್ಟಿಕೊಂಡು ಪಾಕ್‌ನ ವಿರುದ್ಧವೇ ಸಾರಿರುವ ಸಮರ ಈಗ ಉಲ್ಬಣಾವಸ್ಥೆಯಲ್ಲಿದೆ. ಅಲ್ಲಿನ ಭಯೋತ್ಪಾದನೆ ಸಂಬಂಧಿತ ಸಾವುಗಳಿಗೆ ಅತಿ ದೊಡ್ಡ ಕಾರಣವಾಗಿರುವುದು ಬಲೂಚಿಸ್ತಾನ್ ಲಿಬರೇಶನ್ ಆರ್ಮಿ(ಬಿಎಲ್‌ಎ). ಕಳೆದ ವರ್ಷ ಅಲ್ಲಿ ಭಯೋತ್ಪಾದನೆ ಸಂಬಂಧಿಸಿ ಆದ ಸಾವುಗಳಲ್ಲಿ ಶೇ. 36 ಪಾಲು ಈ ಉಗ್ರ ಸಂಘಟನೆಯದ್ದಿದೆ. ಮತ್ತೊಂದೆಡೆ ಆಫ್ಘನ್ ಮೂಲದ ತಾಲಿಬಾನ್‌ಗಳು ಸರಣಿ ದಾಳಿ ನಡೆಸುತ್ತಿದ್ದಾರೆ. ತಾಲಿಬಾನಿಗಳಿಗೆ ದೊಡ್ಡ ಬೆಂಬಲ ನೀಡಿದ್ದೇ ಪಾಕ್.‌ ಈಗ ಅದು ಭಸ್ಮಾಸುರನಾಗಿದೆ. ಇಂದು ಸಿರಿಯಾ ಮುಂತಾದೆಡೆಗೆ, ಯುರೋಪ್‌ನ ಹಲವೆಡೆಗೆ ವ್ಯಾಪಿಸಿರುವ ಭಯೋತ್ಪಾದನೆಯ ಕಾಳ್ಗಿಚ್ಚಿನ ಹಿಂದೆ ಪಾಕ್‌ನ ದೊಡ್ಡ ಪಾಲಿದೆ.

ಭಾರತವನ್ನು ದ್ವೇಷಿಸುತ್ತ ಪಾಕ್‌ ಹುಟ್ಟುಹಾಕಿದ ಮತಾಂಧ ಭಯೋತ್ಪಾದನೆ ಇಂದು ಅದನ್ನೇ ತಿನ್ನುತ್ತಿದೆ. ಇನ್ನಾದರೂ ಪಾಕ್ ಆಡಳಿತಗಾರರಿಗೆ, ಸೇನಾಧಿಕಾರಿಗಳಿಗೆ ಬುದ್ಧಿ ಬರಲಿ. ಪಾಕ್‌ನ ಸ್ಥಿತಿ ಭಾರತಕ್ಕೆ ಎಚ್ಚರಿಕೆಯ ಗಂಟೆ ಕೂಡ. ನೆರೆಮನೆಗೆ ಬಿದ್ದ ಬೆಂಕಿ ನಮ್ಮ ಮನೆಗೂ ವ್ಯಾಪಿಸದಂತೆ ಎಚ್ಚರಿಕೆ ವಹಿಸಬೇಕಾದ ಅಗತ್ಯವಿದೆ. ಅಲ್ಲಿನ ಅಸ್ಥಿರತೆ ಭಾರತದ ಭದ್ರತೆಗೆ ತೊಂದರೆ ಉಂಟುಮಾಡದಂತೆ ಎಚ್ಚರಿಕೆಯನ್ನು ತೆಗೆದುಕೊಳ್ಳಬೇಕಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಂಪಾದಕೀಯ

ವಿಸ್ತಾರ ಸಂಪಾದಕೀಯ: ಹೋರ್ಡಿಂಗ್ ಕುಸಿತ ಬೆಂಗಳೂರಿಗರಿಗೂ ಎಚ್ಚರಿಕೆಯ ಗಂಟೆ

ಬೆಂಗಳೂರಿನಲ್ಲೂ ಇಂಥ ಜಾಹೀರಾತು ಫಲಕಗಳ ಹಾವಳಿ ಸಾಕಷ್ಟಿದೆ. ಇವುಗಳಲ್ಲಿ ಅನಧಿಕೃತ ಎಷ್ಟು, ಅನಧಿಕೃತ ಎಷ್ಟು ಯಾರೂ ಹೇಳಲಾರರು. ಕಳೆದ ವರ್ಷ ಹೈಕೋರ್ಟ್, ಅನಧಿಕೃತ ಫ್ಲೆಕ್ಸ್, ಬ್ಯಾನರ್, ಹೋರ್ಡಿಂಗ್‌ಗಳ ಬಗ್ಗೆ ಬಿಬಿಎಂಪಿಯನ್ನು ತರಾಟೆಗೆ ತೆಗೆದುಕೊಂಡಿತ್ತು. ಪರಿಣಾಮ ನಗರವನ್ನು ತರಾತುರಿಯಿಂದ ಕ್ಲೀನ್ ಮಾಡಲಾಗಿತ್ತು. ಇದೀಗ ಬಿಬಿಎಂಪಿ ನೂತನ ಬೈಲಾ ತಂದಿದೆ. ಅದರಂತೆ ದೊಡ್ಡ ಹೋರ್ಡಿಂಗ್‌ಗಳಿಗೆ ಅವಕಾಶ ಕಲ್ಪಿಸಲಾಗುತ್ತಿದೆ. ಇದರ ಅಪಾಯ ಇದ್ದೇ ಇದೆ.

VISTARANEWS.COM


on

Hoarding
Koo

ಮುಂಬಯಿಯ ಘಾಟ್‌ಕೋಪರ್‌ನಲ್ಲಿ ಅಪ್ಪಳಿಸಿದ ಭಾರಿ ಧೂಳು ಬಿರುಗಾಳಿ ಮತ್ತು ಮಳೆಯಿಂದಾಗಿ ಬೃಹತ್ ಜಾಹೀರಾತು ಫಲಕ ಕುಸಿದು 14 ಮಂದಿ ಸಾವನ್ನಪ್ಪಿದ್ದಾರೆ. 59 ಜನರು ಗಾಯಗೊಂಡಿದ್ದಾರೆ. ಸೋಮವಾರ ಮಧ್ಯಾಹ್ನ ವೇಗವಾಗಿ ಧೂಳಿನ ಸಮೇತ ಬಂದ ಬಿರುಗಾಳಿ, ಭಾರೀ ಮಳೆ ಹಿನ್ನೆಲೆ ಮುಂಬೈ ನಗರದಲ್ಲಿ ಅನಾಹುತಗಳು ಸಂಭವಿಸುತ್ತಿವೆ. ಜನಸಂದಣಿ ಇರುವ ಪ್ರದೇಶದಲ್ಲಿ ಬೃಹದಾಕಾರದ ಹೋರ್ಡಿಂಗ್ ಬಿರುಗಾಳಿಗೆ ಕುಸಿದು ಬಿದ್ದಿದೆ. ಬೃಹದಾಕಾರದ ಹೋರ್ಡಿಂಗ್ ನ ಕಬ್ಬಿಣದ ರಾಡ್ ಗಳು ಹಿಂದಕ್ಕೆ ವಾಲಿಕೊಂಡು ಸಂಪೂರ್ಣವಾಗಿ ನೆಲಕಚ್ಚಿದೆ. ದುರ್ಘಟನೆಯಲ್ಲಿ ನೂರಕ್ಕೂ ಹೆಚ್ಚು ಮಂದಿ ಹೋರ್ಡಿಂಗ್​ ಕೆಳಗೆ ಸಿಲುಕಿಕೊಂಡಿದ್ದಾರೆ. ಹೋರ್ಡಿಂಗ್ ಬಿದ್ದ ಪರಿಣಾಮ ಅಲ್ಲಿದ್ದ ಅಂಗಡಿಗಳು, ವಾಹನಗಳು ಸಹ ಜಖಂ ಆಗಿದೆ. ಇನ್ನೊಂದು ಇಂಥದೇ ಘಟನೆಯಲ್ಲಿ, ವಡಾಲಾದಲ್ಲಿ ಅಟ್ಟಣಿಗೆಯೊಂದು ಕುಸಿದಿದೆ. ಹಲವಾರು ವಾಹನಗಳನ್ನು ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದು, ಹಲವರು ಕಾರಿನೊಳಗೆ ಸಿಲುಕಿಕೊಂಡಿದ್ದಾರೆ.

ಇದು ಅಪರೂಪದ ಪ್ರಕರಣವಲ್ಲ. ಈ ಹಿಂದೆಯೂ ಇಂಥ ಘಟನೆಗಳು ಆದದ್ದುಂಟು. ಈ ಬೃಹತ್ ಜಾಹೀರಾತು ಫಲಕಗಳು ನಾಲ್ಕು- ಐದು ಮಹಡಿ ಕಟ್ಟಡಗಳಷ್ಟು ಎತ್ತರವಾಗಿರುತ್ತವೆ. ವೈಜ್ಞಾನಿಕವಾಗಿ ಇದನ್ನು ನಿರ್ಮಿಸದೇ ಹೋದರೆ ಇವು ಬಿದ್ದಾಗ ಹಲವು ಜೀವಗಳಿಗೆ ಮಾರಣಾಂತಿಕ ಆಗುವ ಸಂಭವ ಇದ್ದೇ ಇರುತ್ತದೆ. ಜೊತೆಗೆ ಅನಧಿಕೃತ ಫ್ಲೆಕ್ಸ್, ಹೋರ್ಡಿಂಗ್‌ಗಳ ಕಾಟವೂ ಇದೆ. ಇವು ನಗರಗಳ ಸೌಂದರ್ಯವನ್ನು ಊನಗೊಳಿಸುವಲ್ಲಿ ಕುಖ್ಯಾತವಾಗಿವೆ.

ಬೆಂಗಳೂರಿನಲ್ಲೂ ಇಂಥ ಜಾಹೀರಾತು ಫಲಕಗಳ ಹಾವಳಿ ಸಾಕಷ್ಟಿದೆ. ಇವುಗಳಲ್ಲಿ ಅನಧಿಕೃತ ಎಷ್ಟು, ಅನಧಿಕೃತ ಎಷ್ಟು ಯಾರೂ ಹೇಳಲಾರರು. ಕಳೆದ ವರ್ಷ ಹೈಕೋರ್ಟ್, ಅನಧಿಕೃತ ಫ್ಲೆಕ್ಸ್, ಬ್ಯಾನರ್, ಹೋರ್ಡಿಂಗ್‌ಗಳ ಬಗ್ಗೆ ಬಿಬಿಎಂಪಿಯನ್ನು ತರಾಟೆಗೆ ತೆಗೆದುಕೊಂಡಿತ್ತು. ಪರಿಣಾಮ ನಗರವನ್ನು ತರಾತುರಿಯಿಂದ ಕ್ಲೀನ್ ಮಾಡಲಾಗಿತ್ತು. ಇದೀಗ ಬಿಬಿಎಂಪಿ ನೂತನ ಬೈಲಾ ತಂದಿದೆ. ಅದರಂತೆ ದೊಡ್ಡ ಹೋರ್ಡಿಂಗ್‌ಗಳಿಗೆ ಅವಕಾಶ ಕಲ್ಪಿಸಲಾಗುತ್ತಿದೆ. ಹೋರ್ಡಿಂಗ್‌ನ ಗಾತ್ರವು ರಸ್ತೆಯ ಅಗಲ, ವೃತ್ತ ಅಥವಾ ಜಂಕ್ಷನ್ ಮತ್ತು ಪ್ರದೇಶವನ್ನು ಅವಲಂಬಿಸಿರುತ್ತದೆ. ಉದಾಹರಣೆಗೆ, 80 ರಿಂದ 100 ಅಡಿ ಅಗಲದ ರಸ್ತೆಯಲ್ಲಿ (ಒಳಗಿನ ವರ್ತುಲ ರಸ್ತೆ) 1,000 ಚದರ ಅಡಿ ಹೋರ್ಡಿಂಗ್ ಅನ್ನು ಪ್ರದರ್ಶಿಸಲು ಅನುಮತಿಸಲಾಗಿದೆ. ಜಾಹೀರಾತುದಾರರು ಪ್ರತಿ 100 ಮೀಟರ್‌ಗಳಿಗೆ ಅಂತಹ ಬೋರ್ಡ್‌ಗಳನ್ನು ಸ್ಥಾಪಿಸಬಹುದು. ಕನಿಷ್ಠ ಜಾಹೀರಾತು ಪ್ರದೇಶವು 800 ಚದರ ಅಡಿಗಳಾಗಿದ್ದರೆ, ಗರಿಷ್ಠ 3,000 ಚದರ ಅಡಿ. ಗರಿಷ್ಠ ಎತ್ತರ 75 ಅಡಿಗಳವರೆಗೂ ಹೋಗಬಹುದು. ಅಂದರೆ ಸುಮಾರು ಏಳು ಮಹಡಿ ಎತ್ತರ!

ಇಂಥ ಒಂದು ಬೃಹತ್ ಫಲಕ ಗಾಳಿಗೆ ಬಿದ್ದರೆ ಎಂಥ ಅನಾಹುತ ಆದೀತು ಎಂಬುದನ್ನು ಊಹಿಸಬಹುದು. ನೂತನ ಹೋರ್ಡಿಂಗ್ ನೀತಿಯಿಂದ ವಾರ್ಷಿಕ 500 ಕೋಟಿ ರೂಪಾಯಿ ಗಳಿಸುವ ಇರಾದೆ ಬಿಬಿಎಂಪಿಗೆ ಇದೆ. ಆದರೆ ಅದರಡಿ ಓಡಾಡುವ ಜನರ ಸುರಕ್ಷತೆಯ ಬಗ್ಗೆ ಯಾವ ಕ್ರಮ ತೆಗೆದುಕೊಳ್ಳಲಾಗುತ್ತದೆ? ಇಂಥ ಅಪಘಾತದ ಸಂತ್ರಸ್ತರಿಗೆ ಗರಿಷ್ಠ ವಿಮೆ ನೀಡುವ ಕಾಯಿದೆ ಇರಬೇಕಲ್ಲವೆ? ಇದರ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ. ಇಂಥ ಅಪಘಾತಗಳು ಸಂಭವಿಸಿದಾಗ, ನಮ್ಮ ಸುತ್ತಮುತ್ತಲೂ ಯಾವಾಗ ಬೇಕಾದರೂ ಸಂಭವನೀಯ ಅಪಾಯಗಳ ಕುರಿತು ಕೂಡ ನಾವು ಚಿಂತಿಸಿ ಕಾರ್ಯಪ್ರವೃತ್ತರಾಗಬೇಕಿದೆ.

ಇದನ್ನೂ ಓದಿ: ICC World Cup 2023 : ಜಸ್ಟ್​ ಮಿಸ್​; ಪ್ರೇಕ್ಷಕರ ಸೀಟ್​​ಗಳ ಮೇಲೆ ಬಿದ್ದ ಬೃಹತ್​ ಹೋರ್ಡಿಂಗ್​

Continue Reading

ಸಂಪಾದಕೀಯ

ವಿಸ್ತಾರ ಸಂಪಾದಕೀಯ: ಸೌರ ವಿದ್ಯುತ್‌ ಉತ್ಪಾದನೆಯಲ್ಲಿ ಭಾರತ ಆತ್ಮನಿರ್ಭರ ಸಾಧನೆ ಶ್ಲಾಘನೀಯ

ಶುದ್ಧ ವಿದ್ಯುತ್‌ ಉತ್ಪಾದನೆ ಹೆಚ್ಚಳ, ವಿದ್ಯುತ್‌ ವಲಯದಲ್ಲಿ ಹೊರಸೂಸುವ ಇಂಗಾಲದ ಪ್ರಮಾಣ ಕಡಿಮೆ ಮಾಡುವುದು ಸೌರ ವಿದ್ಯುತ್‌ ಉತ್ಪಾದನೆಯ ಪ್ರಮುಖ ಅನುಕೂಲಗಳವಾಗಿವೆ. ಇದು ಹವಾಮಾನ ಬದಲಾವಣೆ ನಿಯಂತ್ರಣಕ್ಕೂ ಕಾರಣವಾಗಲಿದೆ. ಇದರ ಬೆನ್ನಲ್ಲೇ, ಭಾರತವು ಸೌರ ವಿದ್ಯುತ್‌ ಉತ್ಪಾದನೆಯಲ್ಲಿ ಐತಿಹಾಸಿಕ ಸಾಧನೆಯೊಂದನ್ನು ಮಾಡಿದೆ. ಜಪಾನ್‌ಅನ್ನೂ ಹಿಂದಿಕ್ಕಿ, ಜಗತ್ತಿನಲ್ಲೇ ಹೆಚ್ಚು ಸೌರ ವಿದ್ಯುತ್‌ ಉತ್ಪಾದನೆ ಮಾಡುವ ಮೂರನೇ ರಾಷ್ಟ್ರ ಎಂಬ ಖ್ಯಾತಿಯನ್ನು ಭಾರತ ಗಳಿಸಿದೆ. ಇದು ನಿಜಕ್ಕೂ ಶ್ಲಾಘನೀಯ ಸಾಧನೆಯಾಗಿದೆ.

VISTARANEWS.COM


on

Solar
Koo

ಹವಾಮಾನ ಬದಲಾವಣೆ (Climate Change), ಜಾಗತಿಕ ತಾಪಮಾನ ಏರಿಕೆ ಕುರಿತು ಜಗತ್ತಿನಾದ್ಯಂತ ಚರ್ಚೆಗಳು, ಪರಿಹಾರಕ್ಕಾಗಿ ಯೋಜನೆ ರೂಪಿಸುವುದು ಸೇರಿ ಹತ್ತಾರು ಕಾರ್ಯಚಟುವಟಿಕೆಗಳು ನಡೆಯುತ್ತಿವೆ. ಅತಿವೃಷ್ಟಿ, ಅನಾವೃಷ್ಟಿ, ಚಳಿಗಾಲದಲ್ಲೂ ಬಿರುಬಿಸಿಲು, ಬೇಸಿಗೆಯಲ್ಲಿ ಅಕಾಲಿಕ ಮಳೆ, ಕಾಡುಗಳು ಇರುವ ಪ್ರದೇಶದಲ್ಲೂ ಹೆಚ್ಚಿದ ತಾಪ ಸೇರಿ ಹಲವು ಪರಿಣಾಮಗಳು ಹವಾಮಾನ ಬದಲಾವಣೆಗೆ ಹಿಡಿದ ಕನ್ನಡಿಯೇ ಆಗಿದೆ. ಇದರ ಬೆನ್ನಲ್ಲೇ, ಭಾರತವು ಸೌರ ವಿದ್ಯುತ್‌ ಉತ್ಪಾದನೆಯಲ್ಲಿ (Solar Power Generation) ಐತಿಹಾಸಿಕ ಸಾಧನೆಯೊಂದನ್ನು ಮಾಡಿದೆ. ಜಪಾನ್‌ಅನ್ನೂ ಹಿಂದಿಕ್ಕಿ, ಜಗತ್ತಿನಲ್ಲೇ ಹೆಚ್ಚು ಸೌರ ವಿದ್ಯುತ್‌ ಉತ್ಪಾದನೆ ಮಾಡುವ ಮೂರನೇ ರಾಷ್ಟ್ರ ಎಂಬ ಖ್ಯಾತಿಯನ್ನು ಭಾರತ ಗಳಿಸಿದೆ. ಹಾಗಾಗಿ, ಇದು ಮರುಮಾತೇ ಇಲ್ಲದೆ ಶ್ಲಾಘನೀಯ ಸಾಧನೆ ಎಂದು ಹೇಳಬಹುದಾಗಿದೆ.

2015ರಲ್ಲಿ ಸೌರ ವಿದ್ಯುತ್‌ ಉತ್ಪಾದನೆಯಲ್ಲಿ ಭಾರತವು 9ನೇ ಸ್ಥಾನದಲ್ಲಿತ್ತು. ಆದರೆ, 2015ರಿಂದ 2023ರ ಅವಧಿಯಲ್ಲಿ ಭಾರತವು ಆರು ಪಟ್ಟು ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸಿಕೊಂಡಿರುವುದೇ ಮೂರನೇ ಸ್ಥಾನಕ್ಕೇರಲು ಕಾರಣವಾಗಿದೆ. 2023ರಲ್ಲಿ ಜಾಗತಿಕ ವಿದ್ಯುತ್‌ ವಲಯದಲ್ಲಿ ದಾಖಲೆಯ ಶೇ. 5.5ರಷ್ಟು ಸೌರ ಶಕ್ತಿಯನ್ನು ಉತ್ಪಾದಿಸಲಾಗಿದೆ. ಆದರೆ, ಭಾರತದಲ್ಲಿ ಸೌರ ಶಕ್ತಿಯಿಂದ ಶೇ. 5.8ರಷ್ಟು ವಿದ್ಯುತ್‌ ಉತ್ಪಾದಿಸಲಾಗಿದೆ ಎಂದು ಜಾಗತಿಕ ಇಂಧನ ಚಿಂತಕರ ಚಾವಡಿ ಎಂಬರ್‌ (Ember) ತಿಳಿಸಿದೆ. ಇದು ಭಾರತವು ಸೌರ ವಿದ್ಯುತ್‌ ಶಕ್ತಿಯನ್ನು ಉತ್ಪಾದಿಸುವಲ್ಲಿ ಕಂಡುಕೊಂಡರುವ ವೇಗಕ್ಕೆ ಸಾಕ್ಷಿಯಾಗಿದೆ.

ಸೌರ ವಿದ್ಯುತ್‌ ಉತ್ಪಾದನೆಯು 2015ರಲ್ಲಿದ್ದ ಶೇ. 0.5ರಿಂದ 2023ಕ್ಕೆ ಶೇ. 5.8ಕ್ಕೆ ಏರಿಕೆಯಾಗಿದೆ ಎಂದು ಎಂಬರ್‌ ತನ್ನ ವರದಿಯಲ್ಲಿ ಕಂಡುಕೊಂಡಿದೆ. ಇಂಟರ್‌ ನ್ಯಾಷನಲ್‌ ಎನರ್ಜಿ ಏಜೆನ್ಸಿಯ(IEA) ಪ್ರಕಾರ, 2030ರ ವೇಳೆಗೆ ಸೌರ ವಿದ್ಯುತ್ ಉತ್ಪಾದನೆಯು ಜಾಗತಿಕ ವಿದ್ಯುತ್ ಉತ್ಪಾದನೆಯ ಶೇ. 22ಕ್ಕೆ ಏರಿಕೆಯಾಗಲಿದೆ. ಭಾರತದ ವಾರ್ಷಿಕ ಇಂಗಾಲದ ಡೈ ಆಕ್ಸೈಡ್ ಹೊರಸೂಸುವಿಕೆಗೆ ಅರ್ಧದಷ್ಟು (2023ರಲ್ಲಿ 1.18 ಗಿಗಾಟನ್) ವಿದ್ಯುತ್ ಉತ್ಪಾದನೆ ಕಾರಣವಾಗುತ್ತಿರುವುದರಿಂದ ಪರ್ಯಾಯ ಮಾರ್ಗಗಳನ್ನು ಕಂಡುಕೊಳ್ಳುವುದು ಅನಿವಾರ್ಯ ಎನಿಸಿಕೊಂಡಿದೆ. ಆದರೆ, ಭಾರತವು ಗಣನೀಯವಾಗಿ ಸೌರ ವಿದ್ಯುತ್‌ ಉತ್ಪಾದನೆ ಮಾಡುತ್ತಿರುವುದರಿಂದ ಪರಿಸರದ ಮೇಲಿನ ಪರಿಣಾಮಕ್ಕೂ ಭಾರತ ಪರಿಹಾರ ಕಂಡುಕೊಳ್ಳುವಂತಾಗಿದೆ.

ಸೌರ ವಿದ್ಯುತ್‌ ಉತ್ಪಾದನೆಯಲ್ಲಿ ಈಗ ಚೀನಾ ಮೊದಲ ಸ್ಥಾನದಲ್ಲಿದ್ದರೆ, ಅಮೆರಿಕ ಎರಡನೇ ಸ್ಥಾನದಲ್ಲಿದೆ. ಹಾಗಾಗಿ, ಮುಂದಿನ ದಿನಗಳಲ್ಲಿ ಭಾರತವು ಇನ್ನಷ್ಟು ಸಾಧನೆ ಮಾಡಿದರೂ ಅಚ್ಚರಿ ಇಲ್ಲ. ಶುದ್ಧ ವಿದ್ಯುತ್‌ ಉತ್ಪಾದನೆ ಹೆಚ್ಚಳ, ವಿದ್ಯುತ್‌ ವಲಯದಲ್ಲಿ ಹೊರಸೂಸುವ ಇಂಗಾಲದ ಪ್ರಮಾಣ ಕಡಿಮೆ ಮಾಡುವುದು ಸೌರ ವಿದ್ಯುತ್‌ ಉತ್ಪಾದನೆಯ ಪ್ರಮುಖ ಮುನ್ನಡೆಯಾಗಿವೆ. ಅದರಲ್ಲೂ, ಭಾರತದ ಜನಸಂಖ್ಯೆ ಜಾಸ್ತಿ ಇರುವುದರಿಂದ ಬೇಡಿಕೆಗೆ ತಕ್ಕಷ್ಟು ವಿದ್ಯುತ್‌ ಪೂರೈಸುವುದು ಕಷ್ಟವಾಗುವ ಜತೆಗೆ ಖಜಾನೆಗೂ ಹೊರೆಯಾಗುತ್ತದೆ. ಇದಕ್ಕೆ ಸೌರ ವಿದ್ಯುತ್‌ ಉತ್ಪಾದನೆಯೇ ರಾಜಮಾರ್ಗವಾಗಿದೆ.

ಹವಾಮಾನ ಬದಲಾವಣೆ ಕುರಿತು ಭಾರತ ಜಾಗತಿಕ ವೇದಿಕೆಗಳಲ್ಲಿ ಭಾರತವು ಪ್ರಬಲವಾಗಿ ಪ್ರತಿಪಾದನೆ ಮಾಡುತ್ತದೆ. ಹವಾಮಾನ ನಿಯಂತ್ರಣದ ಕುರಿತು ನರೇಂದ್ರ ಮೋದಿ ಅವರು ಮಾತನಾಡುತ್ತಾರೆ. ಹವಾಮಾನ ಬದಲಾವಣೆ ವಿರುದ್ಧದ ಸಮರದ ತಂಡದಲ್ಲಿ ಭಾರತವೂ ಪ್ರಮುಖ ಸದಸ್ಯವಾಗಿದೆ. ಇದೇ ಕಾರಣಕ್ಕಾಗಿ, ಸೌರ ವಿದ್ಯುತ್‌ ಉತ್ಪಾದನೆಯ ಸಾಧನೆಯು ಜಗತ್ತಿಗೇ ಮಾದರಿಯಾಗಿದೆ. ಇನ್ನು ನರೇಂದ್ರ ಮೋದಿ ಅವರು 2047ರ ವೇಳೆಗೆ ವಿಕಸಿತ ಭಾರತದ ನಿರ್ಮಾಣದ ಕನಸು ಕಾಣುತ್ತಿದ್ದಾರೆ. ವಿಕಸಿತ ಭಾರತದ ನಿರ್ಮಾಣಕ್ಕಿರುವ ಮಾನದಂಡಗಳಲ್ಲಿ ಸೌರ ವಿದ್ಯುತ್‌ ಕ್ಷೇತ್ರದ ಸಾಧನೆಯು ಪ್ರಮುಖವಾಗಿದೆ. ಹಾಗಾಗಿ, ಜಪಾನ್‌ಗಿಂತ ಭಾರತ ಮುಂದೆ ಹೋಗಿರುವುದು ವಿಕಸಿತ ಭಾರತದತ್ತ ದಾಪುಗಾಲು ಇಡುತ್ತಿರುವುದಕ್ಕೆ ಸಾಕ್ಷಿಯಾಗಿದೆ.

ಇದನ್ನೂ ಓದಿ: Selco India: ಸೌರವಿದ್ಯುತ್ ಪ್ರವರ್ತಕ ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

Continue Reading

ಸಂಪಾದಕೀಯ

ವಿಸ್ತಾರ ಸಂಪಾದಕೀಯ: ಭಾರತದ ಚುನಾವಣೆಯಲ್ಲಿ ಅಮೆರಿಕದ ಹಸ್ತಕ್ಷೇಪ ಖಂಡನೀಯ

ಅಮೆರಿಕದ ಹಿತಾಸಕ್ತಿ ಭಾರತದಲ್ಲಿ ಬಹಳಷ್ಟಿದೆ. ಅಲ್ಲಿನ ಮೆಡಿಕಲ್ ಲಾಬಿ, ಸೋಯಾ ಲಾಬಿ, ತೈಲ ಲಾಬಿ, ಶಸ್ತ್ರಾಸ್ತ್ರ ಲಾಬಿ ಇತ್ಯಾದಿಗಳು ಇಲ್ಲಿ ಪ್ರಭಾವ ಬೀರಲು ಯತ್ನಿಸುತ್ತಲೇ ಇರುತ್ತವೆ. ಉದಾಹರಣೆಗೆ, ರಷ್ಯಾದಿಂದ ತೈಲ ಆಮದು ಮಾಡಿಕೊಳ್ಳಬೇಡಿ ಎಂದು ಇತ್ತೀಚೆಗೆ ಬೆದರಿಕೆ ಒಡ್ಡಿತ್ತು. ಶಸ್ತ್ರಾಸ್ತ್ರಗಳಲ್ಲಿ ಸ್ವಾವಲಂಬನೆ, ಬಾಹ್ಯಾಕಾಶ ವಿಜ್ಞಾನದಲ್ಲಿ ಬೆಳವಣಿಗೆ, ಸುಸ್ಥಿರ ಇಂಧನದಲ್ಲಿ ಮುನ್ನಡೆ, ರಾಷ್ಟ್ರೀಯವಾದಿ ಚಿಂತನೆಯ ಆಡಳಿತ ಇತ್ಯಾದಿಗಳು ಅಮೆರಿಕದ ಕಣ್ಣು ಕುಕ್ಕಿರಲೂಬಹುದು.

VISTARANEWS.COM


on

Joe Biden
Koo

ಅಮೆರಿಕದಲ್ಲಿ ಖಲಿಸ್ತಾನಿ ನಾಯಕ (Khalistan Leader) ಗುರುಪತ್‌ವಂತ್ ಸಿಂಗ್ ಪನ್ನುನ್ (Gurpatwant Singh Pannun) ಹತ್ಯೆಯ ಸಂಚಿನಲ್ಲಿ (Murder plot) ಭಾರತದ ʼರಾʼ (RAW) ಅಧಿಕಾರಿಯ ಕೈವಾಡದ ಕುರಿತು ಅಮೆರಿಕ(America)ದ ಆರೋಪಕ್ಕೆ ತಿರುಗೇಟು ನೀಡಿದ್ದ ರಷ್ಯಾ(America v/s Russia), ಅಮೆರಿಕವು ಭಾರತದ ಚುನಾವಣೆಯಲ್ಲಿ ಹಸ್ತಕ್ಷೇಪ ಮಾಡಲು ಯತ್ನಿಸುತ್ತಿದೆ ಎಂದು ಹೇಳಿತ್ತು. ಪನ್ನುನ್ ಹತ್ಯೆ ಪ್ರಕರಣದಲ್ಲಿ ಭಾರತದ ಕೈವಾಡ ಇದೆ ಎಂದು ಆರೋಪಿಸಿದ್ದ ಅಮೆರಿಕಕ್ಕೆ ಟಾಂಗ್‌ ನೀಡಿದ್ದ ರಷ್ಯಾ, ಭಾರತದಲ್ಲಿ ಆಂತರಿಕ ರಾಜಕೀಯ ಸ್ಥಿತಿಗತಿಯನ್ನು ಅಲ್ಲೋಲ ಕಲ್ಲೋಲ ಮಾಡಲು ಅಮೆರಿಕ ಯತ್ನಿಸುತ್ತಿದೆ. ಭಾರತೀಯ ರಾಷ್ಟ್ರೀಯತೆ ಮನಸ್ಥಿತಿ ಮತ್ತು ಇತಿಹಾಸವನ್ನು ಅರ್ಥಮಾಡಿಕೊಳ್ಳದ ಅಮೆರಿಕ ಸುಖಾಸುಮ್ಮನೆ ಭಾರತದ ಧಾರ್ಮಿಕ ಸ್ವಾತಂತ್ರ್ಯದ ಬಗ್ಗೆ ಆರೋಪ ಮಾಡುತ್ತಿದೆ. ಭಾರತದ ಆಂತರಿಕ ವಿಚಾರದಲ್ಲಿ ಅಮೆರಿಕ ನಿರಂತರವಾಗಿ ಮೂಗು ತೂರಿಸುವ ಪ್ರಯತ್ನ ನಡೆಸುತ್ತಲೇ ಇದೆ. ಭಾರತವನ್ನು ಗೌರವಿಸುವ ಮನಸ್ಸು ಅಮೆರಿಕಕ್ಕೆ ಇಲ್ಲ. ಅಮೆರಿಕದ ಆರೋಪಗಳು ಸುಳ್ಳು ಮತ್ತು ನಿರಾಧಾರವಾಗಿದ್ದು, ಅದನ್ನು ಒಪ್ಪಿಕೊಳ್ಳಲು ಸಾಧ್ಯವೇ ಇಲ್ಲ ಎಂದು ಖಡಕ್ಕಾಗಿ ಹೇಳಿದೆ.

ರಷ್ಯಾ ಆರೋಪಕ್ಕೆ ಪ್ರತಿಕ್ರಿಯಿಸಿರುವ ಅಮೆರಿಕ, ಭಾರತದ ಚುನಾವಣೆಯಲ್ಲಿ ಹಸ್ತಕ್ಷೇಪ ಮಾಡಲು ಅಮೆರಿಕ ಎಂದಿಗೂ ಬಯಸುವುದಿಲ್ಲ. ಭಾರತ ಮಾತ್ರ ಅಲ್ಲ ಬೇರೆ ಯಾವುದೇ ರಾಷ್ಟ್ರಗಳ ಆಂತರಿಕ ವಿಚಾರದಲ್ಲಿ ಅಮೆರಿಕ ಮೂಗು ತೂರಿಸುವುದಿಲ್ಲ ಎಂದು ಹೇಳಿದೆ. ಈ ಮಾತಿನಲ್ಲಿ ಸತ್ಯವೆಷ್ಟಿದೆ, ಸುಳ್ಳೆಷ್ಟು ಎಂಬುದು ಇಡೀ ಜಗತ್ತಿಗೇ ಗೊತ್ತು. ಈ ಭೂಮಿಯಲ್ಲಿ ಎಲ್ಲ ದೇಶಗಳ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವ ದೇಶ ಒಂದಿದ್ದರೆ ಅದು ಅಮೆರಿಕ. ರಷ್ಯ ಕೂಡ ಸುಮ್ಮಸುಮ್ಮನೇ ಆರೋಪ‌ ಮಾಡಲಾರದು. ಅದರ ಬೇಹುಗಾರಿಕೆ ಶಕ್ತಿ ಕೂಡ ಬಲವಾಗಿಯೇ ಇದೆ. ಹೀಗಾಗಿ ಅದು ಹಂಚಿಕೊಂಡಿರುವ ಮಾಹಿತಿ ಪೂರ್ತಿ ಸುಳ್ಳು ಎನ್ನಲಾಗುವುದಿಲ್ಲ. ರಷ್ಯ ಹಾಗೂ ಅಮೆರಿಕ ಸಾಂಪ್ರದಾಯಿಕ ವೈರಿಗಳಾಗಿರುವುದರಿಂದ, ಆ ಅಂಶವೂ ರಷ್ಯದ ಹೇಳಿಕೆಯ ಹಿಂದೆ ಸ್ವಲ್ಪ ಕೆಲಸ ಮಾಡಿರಬಹುದು ಅನ್ನೋಣ.

ಅನ್ಯ ದೇಶಗಳ ವಿಚಾರದಲ್ಲಿ ಮೂಗು ತೂರಿಸುವ ಅಮೆರಿಕದ ಚಾಳಿಗೆ ಸಾಕಷ್ಟು ಇತಿಹಾಸವಿದೆ. ಅದು ಕ್ಯೂಬಾದ, ರಷ್ಯದ ಅಧ್ಯಕ್ಷರ ಹತ್ಯೆಗೆ ಯತ್ನಿಸಿದೆ; ಅಫ್ಘಾನಿಸ್ತಾನವನ್ನು ಭಯೋತ್ಪಾದಕರನ್ನು ಬೆಳೆಸಿ ಪೂರ್ತಿ ನಾಶ ಮಾಡಿದೆ. ಪಾಕ್ ಅದೇ ಹಾದಿಯಲ್ಲಿದೆ. ಗಲ್ಫ್ ದೇಶಗಳಲ್ಲಿ ಅಮೆರಿಕದ ಮೂಗಿನ ನೇರಕ್ಕೆ ಕುಣಿಯದ ಇರಾನ್, ಟರ್ಕಿ, ಮುಂತಾದ ದೇಶಗಳನ್ನು ಬೆದರಿಸುತ್ತದೆ. ನ್ಯಾಟೋ ಮೂಲಕ ಯುರೋಪ್ ದೇಶಗಳನ್ನು ಕುಣಿಸುತ್ತಿದೆ. ಲ್ಯಾಟಿನ್ ಅಮೆರಿಕದ ಡ್ರಗ್ಸ್ ಜಾಲವನ್ನು ಗುಮ್ಮನಗುಸಕನಂತೆ ಪೋಷಿಸಿದೆ. ವಿಯೆಟ್ನಾಂ ಮೊದಲಾದ ದೇಶಗಳನ್ನು ನೇರ ಮಿಲಿಟರಿ ದಾಳಿ ಮೂಲಕ ಬಗ್ಗುಬಡಿಯಲು ಯತ್ನಿಸಿದೆ. ಅಮೆರಿಕ ಎಸಗದ ಕುಕೃತ್ಯವೇ ಇಲ್ಲ. ಇಂಥ ದೇಶದ ಮಿಲಿಟರಿ ಮತ್ತು ಬೇಹುಗಾರಿಕೆ ನಮ್ಮ ದೇಶದ ಚುನಾವಣೆಯಲ್ಲಿ ಕರಾಮತ್ತಿಗೆ ಮುಂದಾದರೆ ಆಶ್ಚರ್ಯವಿಲ್ಲ.

ಅಮೆರಿಕದ ಹಿತಾಸಕ್ತಿ ಭಾರತದಲ್ಲಿ ಬಹಳಷ್ಟಿದೆ. ಅಲ್ಲಿನ ಮೆಡಿಕಲ್ ಲಾಬಿ, ಸೋಯಾ ಲಾಬಿ, ತೈಲ ಲಾಬಿ, ಶಸ್ತ್ರಾಸ್ತ್ರ ಲಾಬಿ ಇತ್ಯಾದಿಗಳು ಇಲ್ಲಿ ಪ್ರಭಾವ ಬೀರಲು ಯತ್ನಿಸುತ್ತಲೇ ಇರುತ್ತವೆ. ಉದಾಹರಣೆಗೆ, ರಷ್ಯಾದಿಂದ ತೈಲ ಆಮದು ಮಾಡಿಕೊಳ್ಳಬೇಡಿ ಎಂದು ಇತ್ತೀಚೆಗೆ ಬೆದರಿಕೆ ಒಡ್ಡಿತ್ತು. ಭಾರತದ ರಸಗೊಬ್ಬರ ಸಬ್ಸಿಡಿ, ಭತ್ತದ ಇಳುವರಿಯ ಹೆಚ್ಚಳ ಇತ್ಯಾದಿಗಳ ಬಗ್ಗೆ ಅದರ ಕೊಂಕು ಇದೆ. ಶಸ್ತ್ರಾಸ್ತ್ರಗಳಲ್ಲಿ ಸ್ವಾವಲಂಬನೆ, ಬಾಹ್ಯಾಕಾಶ ವಿಜ್ಞಾನದಲ್ಲಿ ಬೆಳವಣಿಗೆ, ಸುಸ್ಥಿರ ಇಂಧನದಲ್ಲಿ ಮುನ್ನಡೆ, ರಾಷ್ಟ್ರೀಯವಾದಿ ಚಿಂತನೆಯ ಆಡಳಿತ ಇತ್ಯಾದಿಗಳು ಅಮೆರಿಕದ ಕಣ್ಣು ಕುಕ್ಕಿರಲೂಬಹುದು. ಸದ್ಯ ಅದು ಪನ್ನುನ್ ಹತ್ಯೆ ಸಂಚಿನ ನೆಪ ಹಿಡಿದುಕೊಂಡು ಭಾರತಕ್ಕೆ ಮುಜುಗರ ಸೃಷ್ಟಿಸುವ ಯತ್ನದಲ್ಲಿದೆ. ಆದರೆ ಪನ್ನುನ್ ಭಾರತಕ್ಕೆ ಪೀಡಕನಾದ ಒಬ್ಬ ಭಯೋತ್ಪಾದಕ ಎಂಬುದನ್ನು ಒಪ್ಪಿಕೊಳ್ಳಲು ಅದು ಸಿದ್ಧವಿಲ್ಲ.

ಆದರೆ ಭಾರತ ಇದನ್ನೆಲ್ಲ ಅರ್ಥ ಮಾಡಿಕೊಳ್ಳಲು ಆಗದ ದಡ್ಡ ದೇಶವಲ್ಲ. ನಮಗೆ ನಮ್ಮದೇ ರಾಜನೀತಿಯಿದೆ, ಸಂವಿಧಾನವಿದೆ. ನಮ್ಮ ಸಾರ್ವಭೌಮತ್ವವನ್ನು ಯಾರೂ ಪ್ರಶ್ನೆ ಮಾಡಲು ಸಾಧ್ಯವಿಲ್ಲ. ನಮ್ಮ ಚುನಾವಣೆಗಳು ಪಾರದರ್ಶಕ ಹಾಗೂ ಪ್ರಜಾಸತ್ತಾತ್ಮಕ. ಅಮೆರಿಕದ ಕೈವಾಡವನ್ನು ಪತ್ತೆ ಹಚ್ಚುವಷ್ಟು, ಅದನ್ನು ಮೊಳಕೆಯಲ್ಲೇ ನಿಗ್ರಹಿಸುವಷ್ಟು ಶಕ್ತವಾಗಿದೆ ನಮ್ಮ ಬೇಹುಗಾರಿಕೆ ಶಕ್ತಿ.

ಇದನ್ನೂ ಓದಿ: China Missile : ಪಾಕಿಸ್ತಾನಕ್ಕೆ ಗುಟ್ಟಾಗಿ ಕ್ಷಿಪಣಿ ಕಳುಹಿಸಿದ ಚೀನಾದ ಎರಡು ಕಂಪನಿಗಳಿಗೆ ಅಮೆರಿಕದ ನಿರ್ಬಂಧ

Continue Reading

ಸಂಪಾದಕೀಯ

ವಿಸ್ತಾರ ಸಂಪಾದಕೀಯ: SSLC Result 2024: ಎಸ್ಸೆಸ್ಸೆಲ್ಸಿ ಫಲಿತಾಂಶ ಕುಸಿತದ ಜೊತೆಗೆ ಸಿಹಿ ಸುದ್ದಿಯೂ ಇದೆ

SSLC Result 2024: ನಿಜಕ್ಕೂ ಸಿಹಿ ಸುದ್ದಿ ಎಂದರೆ ಇನ್ನೆರಡು ಬಾರಿ ಪರೀಕ್ಷೆ ಬರೆಯುವ ಅವಕಾಶ. ಅನುತ್ತೀರ್ಣರಾದ ಹಾಗೂ ಉನ್ನತ ಶಿಕ್ಷಣದಿಂದ ವಿದ್ಯಾರ್ಥಿಗಳು ವಂಚಿತರಾಗಬಾರದೆಂಬ ಉದ್ದೇಶದಿಂದ ಇದೇ‌ ಮೊದಲ ಬಾರಿಗೆ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ ಅಂತಿಮ ಪರೀಕ್ಷೆ ಮಾದರಿಯಲ್ಲಿ ಮೂರು ಬಾರಿ ಪೂರಕ ಪರೀಕ್ಷೆ ನಡೆಸಲಾಗುತ್ತಿದೆ. ಮೊದಲ ಪರೀಕ್ಷೆಯ ಅಂಕಗಳು ಸಮಾಧಾನ ತರದಿದ್ದಲ್ಲಿ ಇಡೀ ಪರೀಕ್ಷೆಯನ್ನು ಮರಳಿ ಬರೆಯಬಹುದು.

VISTARANEWS.COM


on

karnataka SSLC result 2024
Koo

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ (SSLC Result 2024) ಫಲಿತಾಂಶವನ್ನು ಗುರುವಾರ (ಮೇ 9) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. ಈ ಬಾರಿಯ ಫಲಿತಾಂಶ ನೋಡಿ ಸಂತೋಷಪಡುವುದಕ್ಕೂ, ಗಾಬರಿಯಾಗುವುದಕ್ಕೂ ಕಾರಣಗಳಿವೆ.

ಮೊದಲನೆಯದಾಗಿ, ಕಳಪೆ ಫಲಿತಾಂಶ. ಒಟ್ಟಾರೆ ಫಲಿತಾಂಶ ಕಳೆದ ವರ್ಷಕ್ಕಿಂತ ಶೇ. 30ರಷ್ಟು ಕಡಿಮೆಯಾಗಿದೆ. 2022-23ರಲ್ಲಿ 83.89% ಇದ್ದರೆ, ಈ ಬಾರಿ 73.40% ಮಂದಿ ಪಾಸ್ ಆಗಿದ್ದಾರೆ. ಅಂದರೆ ಶೇಕಡಾ 10.49%ರಷ್ಟು ಫಲಿತಾಂಶ ಕುಸಿತವಾಗಿದೆ. ಆದರೆ ಇದು ಕೂಡ ನಿಜವಾದ ಕುಸಿತವಲ್ಲ. ಶಿಕ್ಷಣ ಇಲಾಖೆ ಈ ಬಾರಿ ವಿದ್ಯಾರ್ಥಿಗಳಿಗೆ ಬರೋಬ್ಬರಿ 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌ ಅನ್ನು ಕೊಟ್ಟಿದೆ. ಫಲಿತಾಂಶ ಹೆಚ್ಚಿಸಲು ಶಿಕ್ಷಣ ಇಲಾಖೆ ಸರ್ಕಸ್ ಮಾಡಿದ್ದು, ಶೇಕಡಾ 20 ಗ್ರೇಸ್ ಮಾರ್ಕ್ಸ್‌ ಕೊಟ್ಟರೂ ಕಡಿಮೆ ಫಲಿತಾಂಶ ದಾಖಲಾಗಿದೆ. ವಿದ್ಯಾರ್ಥಿ ಹಿತದೃಷ್ಟಿಯಿಂದ ಗ್ರೇಸ್‌ ಮಾರ್ಕ್ಸ್‌ ನೀಡಲಾಗಿದೆ. ಒಟ್ಟು 1 ಲಕ್ಷದ 70 ಸಾವಿರ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್‌ ಸಿಕ್ಕಿದೆ. ಇಷ್ಟಾಗಿಯೂ ಫಲಿತಾಂಶ ಮಾತ್ರ ಕಡಿಮೆಯೇ.

ಕೃಪಾಂಕಗಳ ಹಿಂದೊಂದು ಕತೆಯಿದೆ. ಹಲವು ಕಡೆ ಸಾಮೂಹಿಕ ನಕಲು ಮಾಡಲಾಗುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ, ಪ್ರಪ್ರಥಮ ಬಾರಿಗೆ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿಗಳ ಮೂಲಕ ವೆಬ್ ಕಾಸ್ಟಿಂಗ್ ಮಾಡುವ ಹೊಸ ಪದ್ಧತಿಯನ್ನು ಪರಿಚಯಿಸಲಾಗಿತ್ತು. ಪರೀಕ್ಷಾ ಕೊಠಡಿಗಳ ದೃಶ್ಯಾವಳಿಗಳನ್ನು ಮೇಲ್ವಿಚಾರಣೆ ಮಾಡಲು ಎಲ್ಲ ಜಿಲ್ಲೆಗಳಲ್ಲಿ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲಾಗಿತ್ತು. ಇದರ ಪರಿಣಾಮವೇ ಈ ಫಲಿತಾಂಶ. ಇದರಿಂದ ಒಟ್ಟಾರೆ ಫಲಿತಾಂಶ ಕಳೆದ ವರ್ಷಕ್ಕಿಂತ ಶೇ. 30ರಷ್ಟು ಕಡಿಮೆಯಾಗಿದೆ. ಇದರಿಂದ ಗಾಬರಿ ಬಿದ್ದ ಇಲಾಖೆ, ವಿದ್ಯಾರ್ಥಿಗಳ ಹಾಗೂ ಒಟ್ಟಾರೆ ಶೈಕ್ಷಣಿಕ ಆವರಣದ ನೈತಿಕ ಸ್ಥೈರ್ಯ ಕುಸಿಯದಿರಲಿ ಎಂಬ ದೃಷ್ಟಿಯಿಂದ ಭಾರಿ ಪ್ರಮಾಣದ ಕೃಪಾಂಕ ನೀಡಿದೆ. ಇದೇನೂ ಒಳ್ಳೆಯ ಸುದ್ದಿಯಲ್ಲ. ನಕಲು ನಡೆಯುತ್ತಿದ್ದುದರಿಂದ ಉತ್ತಮ ಫಲಿತಾಂಶ ದೊರೆಯುತ್ತಿತ್ತು ಎಂಬುದನ್ನು ಇಲಾಖೆ ಒಪ್ಪಿಕೊಂಡ ಹಾಗಾಗಿದೆ. ವೆಬ್ ಕಾಸ್ಟಿಂಗ್ ಪರಿಣಾಮ ನಕಲು ನಿಂತುದು ಒಳ್ಳೆಯ ಸಂಗತಿಯೇ. ಆದರೆ ಇದು ಪಾರದರ್ಶಕ ಪರೀಕ್ಷೆಯಲ್ಲಿ ತನ್ಮೂಲಕ ಉತ್ತಮ ಫಲಿತಾಂಶದಲ್ಲಿ ಕೊನೆಯಾಗಬೇಕಿದೆ. ಮುಂಬರುವ ವರ್ಷಗಳಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ನೂತನ ವ್ಯವಸ್ಥೆಗೆ ಉತ್ತಮವಾಗಿ ಹೊಂದಿಕೊಳ್ಳುವುದರಿಂದ ಫಲಿತಾಂಶ ವೃದ್ಧಿಯ ಅಗತ್ಯವಿರುವುದಿಲ್ಲ ಎಂದು ಶಿಕ್ಷಣ ಇಲಾಖೆ ಅಭಿಪ್ರಾಯಪಟ್ಟಿದೆ. ಪರೀಕ್ಷೆಯ ಮೇಲೆ ನಿಗಾ ಇಡಲು ದುಡ್ಡು ಖರ್ಚು ಮಾಡಿದರೆ ಸಾಲದು, ಗ್ರಾಮೀಣ ವಿದ್ಯಾರ್ಥಿಗಳ ಕಲಿಕೆಗೂ ಹಾಗೆಯೇ ವೆಚ್ಚ ಮಾಡಿದರೆ ಉತ್ತಮ ಫಲಿತಾಂಶ ಬಂದೀತು.

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಟಾಪರ್‌ ಆಗಿ ಹೊರಹೊಮ್ಮಿರುವ, 625ರಲ್ಲಿ ಅಷ್ಟೂ ಅಂಕಗಳನ್ನೂ ಬಾಚಿಕೊಂಡಿರುವ ಅಂಕಿತಾ ಕೊನ್ನೂರ್‌ ಹಳ್ಳಿಯೊಂದರ ರೈತರ ಮಗಳು. ಇದು ಗ್ರಾಮೀಣ ಪ್ರತಿಭೆಯ ದಿಗ್ವಿಜಯ ಎನ್ನಬಹುದು. ಈಕೆಗೆ ಐಎಎಸ್‌ ಅಧಿಕಾರಿಯಾಗುವ ಕನಸು ಇದೆಯಂತೆ. ಬಾಗಲಕೋಟೆ ಮುಧೋಳದ ಮೆಳ್ಳಿಗೇರಿ ಮೊರಾರ್ಜಿ ದೇಸಾಯಿ ವಸತಿ ಶಿಕ್ಷಣ ಸಂಸ್ಥೆ ವಿದ್ಯಾರ್ಥಿನಿ. ಪಠ್ಯದ ಜೊತೆಗೆ ಲೈಬ್ರರಿ ಹಾಗೂ ಯುಟ್ಯೂಬ್ ಮಾಹಿತಿಯನ್ನೂ ಸೂಕ್ತವಾಗಿ ಬಳಸಿಕೊಂಡು ಈಕೆ ಟಾಪರ್ ಆಗಿದ್ದಾಳೆ. ಎಲ್ಲ ಮಕ್ಕಳಿಗೂ ಮಾದರಿಯಾಗಿರುವ ಈಕೆಯ ಅಭಿನಂದನೆಗಳು ಸಲ್ಲುತ್ತವೆ. ನಮ್ಮ ಹಳ್ಳಿಯ ವಿದ್ಯಾರ್ಥಿಗಳಿಗೆ ಸೂಕ್ತ ಸೌಲಭ್ಯ ದೊರೆತರೆ ದೊಡ್ಡ ಸಾಧನೆ ಮಾಡಬಲ್ಲರು ಎಂಬುದನ್ನು ನಾವು ಅರ್ಥ ಮಾಡಿಕೊಂಡರೆ ಸಾಕು.

ನಿಜಕ್ಕೂ ಸಿಹಿ ಸುದ್ದಿ ಎಂದರೆ ಇನ್ನೆರಡು ಬಾರಿ ಪರೀಕ್ಷೆ ಬರೆಯುವ ಅವಕಾಶ. ಅನುತ್ತೀರ್ಣರಾದ ಹಾಗೂ ಉನ್ನತ ಶಿಕ್ಷಣದಿಂದ ವಿದ್ಯಾರ್ಥಿಗಳು ವಂಚಿತರಾಗಬಾರದೆಂಬ ಉದ್ದೇಶದಿಂದ ಇದೇ‌ ಮೊದಲ ಬಾರಿಗೆ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ ಅಂತಿಮ ಪರೀಕ್ಷೆ ಮಾದರಿಯಲ್ಲಿ ಮೂರು ಬಾರಿ ಪೂರಕ ಪರೀಕ್ಷೆ ನಡೆಸಲಾಗುತ್ತಿದೆ. ಮೊದಲ ಪರೀಕ್ಷೆಯ ಅಂಕಗಳು ಸಮಾಧಾನ ತರದಿದ್ದಲ್ಲಿ ಇಡೀ ಪರೀಕ್ಷೆಯನ್ನು ಮರಳಿ ಬರೆಯಬಹುದು. ವಿಷಯವಾರು ಪರೀಕ್ಷೆಯನ್ನೂ ಬರೆಯಬಹುದು. ಎರಡು ಅಥವಾ ಮೂರು ಪರೀಕ್ಷೆಗಳಿಗೂ ಕುಳಿತುಕೊಳ್ಳಬಹುದು. ಯಾವುದೇ ವಿಷಯದಲ್ಲಿ ವಿದ್ಯಾರ್ಥಿ ಪಡೆದ ಗರಿಷ್ಠ ಅಂಕಗಳನ್ನು ಪರಿಗಣಿಸಲಾಗುತ್ತದೆ. ಇದು ಪರೀಕ್ಷಾ ವಿಧಾನದಲ್ಲಿ ಕ್ರಾಂತಿಕರ ಬದಲಾವಣೆ. ಈ ಬಾರಿ ಅನುತ್ತೀರ್ಣರಾದವರಿಗೆ ಹೇಗೂ ಪೂರಕ ಪರೀಕ್ಷೆ ಇದ್ದೇ ಇದೆ. ಆದ್ದರಿಂದ, ಇದೇ ನಿಜವಾಗಿಯೂ ಫಲಿತಾಂಶ ಹೆಚ್ಚಿಸುವ ವೈಜ್ಞಾನಿಕ ವಿಧಾನವಾಗಿದೆ.

ಇದನ್ನೂ ಓದಿ: ವಿಸ್ತಾರ ಸಂಪಾದಕೀಯ: ಕಾಂಗ್ರೆಸ್ ನಾಯಕನ ‘ವರ್ಣ ವ್ಯಾಖ್ಯಾನ’ ಅವಿವೇಕತನದ್ದು

Continue Reading
Advertisement
Job Alert
ಉದ್ಯೋಗ14 mins ago

Job Alert: ಎಎಎಲ್‌ನಿಂದ 200 ಅಪ್ರೆಂಟಿಸ್‌ಗಳ ನೇಮಕ; ಐಟಿಐ ಪಾಸಾದವರು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಿ

Narendra Modi
ದೇಶ21 mins ago

Narendra Modi: ನಾಮಪತ್ರ ಸಲ್ಲಿಕೆಗೂ ಮುನ್ನ ಗಂಗಾರತಿ ಮಾಡಿದ ಮೋದಿ-ಇಲ್ಲಿದೆ ಲೈವ್‌

HD Deve gowda prajwal revanna case
ಪ್ರಮುಖ ಸುದ್ದಿ29 mins ago

‌Prajwal Revanna Case: ಜೀವನದಲ್ಲಿ ಮೊದಲ ಬಾರಿಗೆ ಗಡ್ಡ ಬಿಟ್ಟ ದೇವೇಗೌಡರು; ವೈರಿನಾಶಕ್ಕೆ ಶಪಥ!

Thailand Open
ಕ್ರೀಡೆ56 mins ago

Thailand Open 2024: ಇಂದಿನಿಂದ ಥಾಯ್ಲೆಂಡ್‌ ಓಪನ್‌ ಟೂರ್ನಿ; ಚಿರಾಗ್‌-ಸಾತ್ವಿಕ್‌ ಜೋಡಿ ಮೇಲೆ ಪದಕ ಭರವಸೆ

US Sanction
ವಿದೇಶ1 hour ago

US sanction: ಇರಾನ್‌ ಜೊತೆ ವ್ಯಾಪಾರ ಒಪ್ಪಂದ ಬೇಡ; ಭಾರತಕ್ಕೆ ನಿರ್ಬಂಧದ ಎಚ್ಚರಿಕೆ ಕೊಟ್ಟ ಅಮೆರಿಕ

Prajwal Revanna Case Devaraje Gowda
ಕ್ರೈಂ1 hour ago

Prajwal Revanna Case: ವಕೀಲ ದೇವರಾಜೇಗೌಡ ಇಂದು ಪೊಲೀಸ್‌ ಕಸ್ಟಡಿಗೆ

Federation Cup
ಕ್ರೀಡೆ1 hour ago

Federation Cup: ಫೆಡರೇಷನ್ ಕಪ್‌ ಫೈನಲ್​ನಲ್ಲಿ ಕಣಕ್ಕಿಳಿಯಲು ಸಜ್ಜಾದ ನೀರಜ್ ಚೋಪ್ರಾ

Israel-Hamas Conflict
ವಿದೇಶ2 hours ago

Israel-Hamas Conflict: ಗಾಜಾದಲ್ಲಿ ಭಾರತೀಯ ಮೂಲದ ವಿಶ್ವಸಂಸ್ಥೆ ಸಿಬ್ಬಂದಿ ಸಾವು

IPL 2024 Points Table
ಕ್ರೀಡೆ2 hours ago

IPL 2024 Points Table: ಟೂರ್ನಿಯಿಂದ ಹೊರಬಿದ್ದ ಗುಜರಾತ್​ ಟೈಟಾನ್ಸ್​

jayanagar murder case
ಕ್ರೈಂ2 hours ago

Murder Case: ರಸ್ತೆ ಬದಿ ಮಲಗಿದ್ದ ವ್ಯಕ್ತಿಯ ತಲೆ ಮೇಲೆ‌ ಕಲ್ಲು ಎತ್ತಿ ಹಾಕಿ ಕೊಲೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ6 hours ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ16 hours ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ16 hours ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ16 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

Karnataka Weather Forecast
ಮಳೆ17 hours ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

Modi Roadshow Live
ದೇಶ17 hours ago

Modi Roadshow Live: ವಾರಾಣಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ24 hours ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

karnataka weather forecast karnataka rains
ಮಳೆ1 day ago

Karnataka Weather : ವಾಯುಭಾರ ಕುಸಿತ; ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ1 day ago

Dina Bhavishya : ಇಂದು ಹೂಡಿಕೆ ಮಾಡಿದರೆ ಗಳಿಸುವಿರಿ ಭಾರಿ ಲಾಭ; ಅನಿರೀಕ್ಷಿತ ಸುದ್ದಿಯಿಂದ ಸಂತಸ

Prajwal Revanna Case I was never kidnapped and son has made a false complaint Video of victim goes viral
ಕ್ರೈಂ2 days ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

ಟ್ರೆಂಡಿಂಗ್‌