Arvind Kejriwal: ಕೇಜ್ರಿವಾಲ್‌ ಬಂಧನ: ಮತ್ತೆ ಅಮೆರಿಕ ಕ್ಯಾತೆ; ಕಾಂಗ್ರೆಸ್‌ ಬ್ಯಾಂಕ್‌ ಅಕೌಂಟ್‌ ನಿರ್ಬಂಧ ಕುರಿತೂ ಕಿರಿಕ್ - Vistara News

ಪ್ರಮುಖ ಸುದ್ದಿ

Arvind Kejriwal: ಕೇಜ್ರಿವಾಲ್‌ ಬಂಧನ: ಮತ್ತೆ ಅಮೆರಿಕ ಕ್ಯಾತೆ; ಕಾಂಗ್ರೆಸ್‌ ಬ್ಯಾಂಕ್‌ ಅಕೌಂಟ್‌ ನಿರ್ಬಂಧ ಕುರಿತೂ ಕಿರಿಕ್

Arvind Kejriwal: ಅರವಿಂದ ಕೇಜ್ರಿವಾಲ್‌ ಬಂಧನದ ಜೊತೆಗೆ, ಕಾಂಗ್ರೆಸ್‌ ಪಕ್ಷದ ಬ್ಯಾಂಕ್‌ ಅಕೌಂಟ್‌ ನಿರ್ಬಂಧದ ಬಗ್ಗೆಯೂ ಅಮೆರಿಕ ಅಡ್ಡಮಾತು ಆಡಿದೆ.

VISTARANEWS.COM


on

arvind kejriwal & Matthew Miller
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನ್ಯೂಯಾರ್ಕ್‌: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ (Arvind Kejriwal) ಅವರ ಬಂಧನ ಕುರಿತ ಮಾಡಿದ ಟೀಕೆಗಾಗಿ ಭಾರತವು (MEA) ನಿನ್ನೆ ಅಮೆರಿಕದ ಹಿರಿಯ ರಾಜತಾಂತ್ರಿಕರನ್ನು (US Diplomat) ಕರೆಸಿ ಪ್ರತಿಭಟಿಸಿದ್ದು, ಇಂದು ಮತ್ತೆ ಅಮೆರಿಕ ಈ ಬಗ್ಗೆ ಪ್ರತಿಹೇಳಿಕೆ ನೀಡಿದೆ. ಈ ಬಾರಿ ಕೇಜ್ರಿವಾಲ್‌ ಬಂಧನದ ಜೊತೆಗೆ, ಕಾಂಗ್ರೆಸ್‌ ಪಕ್ಷದ ಬ್ಯಾಂಕ್‌ ಅಕೌಂಟ್‌ ನಿರ್ಬಂಧದ (Congress bank account seizure) ಬಗ್ಗೆಯೂ ಅಡ್ಡಮಾತು ಆಡಿದೆ.

“ದಿಲ್ಲಿ ಸಿಎಂ ಅರವಿಂದ ಕೇಜ್ರಿವಾಲ್ ಬಂಧನ ಸೇರಿದಂತೆ ನಡೆದಿರುವ ಕ್ರಮಗಳನ್ನು ನಾವು ನಿಕಟವಾಗಿ ಅನುಸರಿಸುತ್ತಿದ್ದೇವೆ” ಎಂದು ಯುಎಸ್ ವಿದೇಶಾಂಗ ಇಲಾಖೆ ವಕ್ತಾರ ಮ್ಯಾಥ್ಯೂ ಮಿಲ್ಲರ್ ಹೇಳಿದ್ದಾರೆ. “ಅಮೆರಿಕ ನ್ಯಾಯಯುತ, ಪಾರದರ್ಶಕ, ಸಮಯೋಚಿತ ಕಾನೂನು ಪ್ರಕ್ರಿಯೆಗಳನ್ನು ಉತ್ತೇಜಿಸುತ್ತದೆ. ಮತ್ತು ಯಾರೂ ಈ ಕ್ರಮಗಳನ್ನು ಆಕ್ಷೇಪಿಸಬಾರದು ಎಂದು ನಾವು ಭಾವಿಸುವುದಿಲ್ಲ” ಎಂದು ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳನ್ನು ಫ್ರೀಜ್ ಮಾಡಿರುವ ಬಗ್ಗೆ ಮತ್ತು ದೆಹಲಿಯಲ್ಲಿ ಅಮೆರಿಕದ ಹಂಗಾಮಿ ಡೆಪ್ಯುಟಿ ಚೀಫ್ ಆಫ್ ಮಿಷನ್ ಗ್ಲೋರಿಯಾ ಬರ್ಬೆನಾ ಅವರನ್ನು ಕರೆಸಿ ವಿದೇಶಾಂಗ ಇಲಾಖೆ ಮಾತನಾಡಿರುವ ಬಗ್ಗೆ ಪ್ರಶ್ನೆಯೊಂದಕ್ಕೆ ಮಿಲ್ಲರ್ ಅವರು ಪ್ರತಿಕ್ರಿಯಿಸಿದರು.

“ಮುಂಬರುವ ಚುನಾವಣೆಯಲ್ಲಿ ಪರಿಣಾಮಕಾರಿಯಾಗಿ ಪ್ರಚಾರ ಮಾಡಲು ಸವಾಲಾಗುವ ರೀತಿಯಲ್ಲಿ ತೆರಿಗೆ ಅಧಿಕಾರಿಗಳು ಅವರ ಕೆಲವು ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದ್ದಾರೆ ಎಂಬ ಕಾಂಗ್ರೆಸ್ ಪಕ್ಷದ ಆರೋಪಗಳ ಬಗ್ಗೆ ನಮಗೆ ಮಾಹಿತಿ ಇದೆ. ಇವುಗಳಲ್ಲಿ ಪ್ರತಿಯೊಂದಕ್ಕೂ ನಾವು ನ್ಯಾಯಯುತ, ಪಾರದರ್ಶಕ ಮತ್ತು ಸಮಯೋಚಿತ ಕಾನೂನು ಪ್ರಕ್ರಿಯೆಗಳನ್ನು ಪ್ರೋತ್ಸಾಹಿಸುತ್ತೇವೆ” ಎಂದಿದ್ದಾರೆ.

“ರಾಯಭಾರಿಯನ್ನು ಕರೆಸಿರುವ ಬಗ್ಗೆ, ನಾನು ಯಾವುದೇ ಖಾಸಗಿ ರಾಜತಾಂತ್ರಿಕ ಸಂಭಾಷಣೆಗಳ ಬಗ್ಗೆ ಮಾತನಾಡಲು ಹೋಗುವುದಿಲ್ಲ. ಆದರೆ ನಾವು ಸಾರ್ವಜನಿಕವಾಗಿ ಹೇಳಬಹುದಾದದ್ದು ನಾನು ಇಲ್ಲಿಂದ ಹೇಳಿದ್ದೇನೆ. ನಾವು ನ್ಯಾಯಯುತ, ಪಾರದರ್ಶಕ, ಸಮಯೋಚಿತ ಕಾನೂನು ಪ್ರಕ್ರಿಯೆಗಳನ್ನು ಪ್ರೋತ್ಸಾಹಿಸುತ್ತೇವೆ. ಯಾರೂ ಅದನ್ನು ಆಕ್ಷೇಪಿಸಬಾರದು ಎಂದು ಭಾವಿಸಬೇಡಿ. ನಾವು ಅದೇ ವಿಷಯವನ್ನು ಖಾಸಗಿಯಾಗಿಯೂ ಸ್ಪಷ್ಟಪಡಿಸುತ್ತೇವೆ,” ಎಂದು ಮಿಲ್ಲರ್ ಹೇಳಿದರು.

ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಅಧಿಕಾರಿಗಳು ಅಮೆರಿಕದ ಹಂಗಾಮಿ ಡೆಪ್ಯುಟಿ ಚೀಫ್ ಆಫ್ ಮಿಷನ್ ಗ್ಲೋರಿಯಾ ಬರ್ಬೆನಾ ಅವರನ್ನು ದೆಹಲಿಯ ಸೌತ್ ಬ್ಲಾಕ್‌ನಲ್ಲಿರುವ ಕಚೇರಿಗೆ ನಿನ್ನೆ ಕರೆಸಿದ್ದರು. ಕೇಜ್ರಿವಾಲ್ ಅವರ ಬಂಧನದ ಕುರಿತು ಯುಎಸ್ ಸ್ಟೇಟ್ ಡಿಪಾರ್ಟ್ಮೆಂಟ್ ಅಧಿಕಾರಿಯ ಹೇಳಿಕೆಗಳ ವಿರುದ್ಧ ತೀವ್ರ ಪ್ರತಿಭಟನೆಯನ್ನು ಸಲ್ಲಿಸಿದ್ದರು. ಸುಮಾರು 30 ನಿಮಿಷಕ್ಕೂ ಹೆಚ್ಚು ಕಾಲ ಸಭೆ ನಡೆದಿತ್ತು.

ದಿಲ್ಲಿಯ ಅಬಕಾರಿ ನೀತಿ ಜಾರಿ ಸಂದರ್ಭದಲ್ಲಿ ನಡೆದಿರುವ ಭ್ರಷ್ಟಾಚಾರ, ಅಕ್ರಮ ಹಣ ವರ್ಗಾವಣೆಗೆ ಇತ್ಯಾದಿಗಳಿಗೆ ಸಂಬಂಧಿಸಿ ಜಾರಿ ನಿರ್ದೇಶನಾಲಯವು ಕೇಜ್ರಿವಾಲ್ ಅವರನ್ನು ಬಂಧಿಸಿದೆ. ಕೇಜ್ರಿವಾಲ್‌ ಒಂಬತ್ತು ಬಾರಿ ಇಡಿ ಸಮನ್ಸ್‌ಗಳನ್ನು ತಿರಸ್ಕರಿಸಿದ್ದರು. ಆದ್ದರಿಂದ, ಕೇಜ್ರಿವಾಲ್‌ ಅವರಿಗೆ ಯಾವುದೇ ಜಾಮೀನು ರಕ್ಷಣೆ ನೀಡಲು ದಿಲ್ಲಿ ಹೈಕೋರ್ಟ್‌ ನಿರಾಕರಿಸಿತ್ತು.

ಈ ಪ್ರಕರಣವು 2021-22ರ ದೆಹಲಿ ಸರ್ಕಾರದ ಅಬಕಾರಿ ನೀತಿಯನ್ನು ರೂಪಿಸುವಲ್ಲಿ ಮತ್ತು ಕಾರ್ಯಗತಗೊಳಿಸುವಲ್ಲಿ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದೆ. ನೀತಿಯನ್ನು ನಂತರ ರದ್ದುಗೊಳಿಸಲಾಯಿತು.

ನಿನ್ನೆ ಅಮೆರಿಕದ ಟೀಕೆಗೆ ಉತ್ತರಿಸಿದ್ದ ಭಾರತ ವಿದೇಶಾಂಗ ಇಲಾಖೆ, “ನಮ್ಮಲ್ಲಿನ ಕೆಲವು ಕಾನೂನು ಪ್ರಕ್ರಿಯೆಗಳ ಕುರಿತು ಯುಎಸ್ ಸ್ಟೇಟ್ ಡಿಪಾರ್ಟ್ಮೆಂಟ್‌ನ ವಕ್ತಾರರ ಹೇಳಿಕೆಗಳಿಗೆ ದೆಹಲಿ ತೀವ್ರ ಆಕ್ಷೇಪಣೆಯನ್ನು ಹೊಂದಿದೆ” ಎಂದು ಹೇಳಿದೆ.

“ರಾಜತಾಂತ್ರಿಕತೆಯಲ್ಲಿ, ರಾಜ್ಯಗಳು ಇತರರ ಸಾರ್ವಭೌಮತ್ವ ಮತ್ತು ಆಂತರಿಕ ವ್ಯವಹಾರಗಳನ್ನು ಗೌರವಿಸಬೇಕು ಎಂದು ನಿರೀಕ್ಷಿಸಲಾಗಿದೆ. ಈ ಜವಾಬ್ದಾರಿಯು ಪ್ರಜಾಪ್ರಭುತ್ವಗಳ ವಿಷಯದಲ್ಲಿ ಇನ್ನೂ ಹೆಚ್ಚಾಗಿರುತ್ತದೆ. ಇಲ್ಲದಿದ್ದರೆ ಅನಾರೋಗ್ಯಕರ ಪೂರ್ವನಿದರ್ಶನಗಳು ಸೃಷ್ಟಿಯಾಗಬಹುದು” ಎಂದು ಸಚಿವಾಲಯ ಹೇಳಿದೆ.

“ಭಾರತದ ಕಾನೂನು ಪ್ರಕ್ರಿಯೆಗಳು ಸ್ವತಂತ್ರ ನ್ಯಾಯಾಂಗವನ್ನು ಆಧರಿಸಿವೆ. ವಸ್ತುನಿಷ್ಠ ಮತ್ತು ಸಮಯೋಚಿತ ಫಲಿತಾಂಶಗಳಿಗೆ ಬದ್ಧವಾಗಿದೆ. ಅದರ ಮೇಲೆ ನಮ್ಮ ನಿರೀಕ್ಷೆಗಳನ್ನು ಹೇರುವುದು ಅನಗತ್ಯ” ಎಂದು MEA ಹೇಳಿದೆ.

ಇದನ್ನೂ ಓದಿ: Arvind Kejriwal: ಕೇಜ್ರಿವಾಲ್‌ಗಿಲ್ಲ ಮಧ್ಯಂತರ ರಿಲೀಫ್‌; ಇನ್ನೂ 7 ದಿನ ಜೈಲೇ ಗತಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Prajwal Revanna Case: ಎಚ್‌.ಡಿ ರೇವಣ್ಣ ಈಗ ಕೈದಿ ನಂಬರ್‌ 4567, ನಿದ್ದೆ ಮಾಡದೆ ಮೌನಿಯಾಗಿ ಕುಳಿತ ಮಾಜಿ ಸಚಿವ

ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣದಲ್ಲಿ (Hassan Pen Drive) ಹಾಗೂ ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪ ಹೊತ್ತಿರುವ ರೇವಣ್ಣ ಅವರ ಜಾಮೀನು ಅರ್ಜಿ (bail plea) ವಿಚಾರಣೆ ಬುಧವಾರ (ಮೇ 8) ನಡೆದಿದ್ದು, ಏಳು ದಿನ ಅಂದರೆ ಮೇ 14ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಲಾಗಿದೆ.

VISTARANEWS.COM


on

hd revanna jailed prajwal revanna case
Koo

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ (HD Revanna Jailed) ಅವರಿಗೆ ವಿಚಾರಣಾಧೀನ ಕೈದಿ ನಂಬರ್ ಅನ್ನು ಜೈಲಾಧಿಕಾರಿಗಳು ನೀಡಿದ್ದು, ಅವರ ನಂಬರ್‌ 4567 ಆಗಿದೆ. ನಿನ್ನೆ ರಾತ್ರಿ ಎಲ್ಲ ಕೈದಿಗಳಂತೆ ಜೈಲಿನ ಊಟ ಸೇವಿಸಿದ್ದ ರೇವಣ್ಣ ನಿದ್ರಿಸದೆ ಮೌನಿಯಾಗಿ ಯೋಚಿಸುತ್ತಾ ಕುಳಿತಿದ್ದರು ಎಂದು ತಿಳಿದುಬಂದಿದೆ. ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣದಲ್ಲಿ (Hassan Pen Drive) ಹಾಗೂ ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪ ಹೊತ್ತಿರುವ ರೇವಣ್ಣ ಅವರ ಜಾಮೀನು ಅರ್ಜಿ (bail plea) ವಿಚಾರಣೆ ಬುಧವಾರ (ಮೇ 8) ನಡೆದಿದ್ದು, ಏಳು ದಿನ ಅಂದರೆ ಮೇ 14ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಲಾಗಿದೆ.

ಜೈಲಿಗೆ ಬರುವ ಎಲ್ಲಾ ಆರೋಪಿಗಳಿಗೆ ಎಂಟ್ರಿ ನಂಬರ್ ನೀಡಲಾಗುತ್ತದೆ. ಅದರಂತೆಯೇ ರೇವಣ್ಣಗೆ ವಿಚಾರಣಾಧೀನ ಬಂಧಿ 4567 ನಂಬರ್ ನೀಡಲಾಗಿದೆ. ಜೈಲಿನಲ್ಲಿ ಎಲ್ಲ ಕೈದಿಗಳಿಗೆ ನೀಡುವ ಊಟ ಸವಿಯಬೇಕಾದ ಪರಿಸ್ಥಿತಿ ಅವರದ್ದಾಗಿದೆ. ಜೈಲಿನ ಮೆನುವಿನಂತೆಯೇ ಅಧಿಕಾರಿಗಳು ಚಪಾತಿ, ಪಲ್ಯ, ಮುದ್ದೆ, ಅನ್ನ, ಸಾಂಬಾರ್ ಊಟ ನೀಡಿದ್ದಾರೆ. ಕೋರ್ಟ್ ಅನುಮತಿ ಇದ್ದರೆ ಮಾತ್ರ ಹೊರಗಿನ ಊಟ ತರಿಸಲು ಅವಕಾಶವಿದೆ. ಆದರೆ ರೇವಣ್ಣಗೆ ಹೊರಗಿನ ಊಟಕ್ಕೆ ಯಾವುದೇ ಅನುಮತಿ ಇಲ್ಲ. ಆದರೆ ರಾತ್ರಿ ಊಟ ನೀಡಿ ಒಂದು ಗಂಟೆ ಕಳೆದರೂ ಊಟ ಮಾಡದೆ ರೇವಣ್ಣ ಮೌನಕ್ಕೆ ಜಾರಿದ್ದಾರೆ ಎಂದು ತಿಳಿದುಬಂದಿದೆ.

ರಾಜ್ಯ ಸಚಿವರಾಗಿ ಐಷಾರಾಮಿ ಜೀವನ ನಡೆಸಿದ್ದ ರೇವಣ್ಣ ಒಂದು ರಾತ್ರಿಯನ್ನು ಸಾಮಾನ್ಯ ಕೈದಿಗಳಂತೆ ಜೈಲಿನಲ್ಲಿ ಕಳೆದಿದ್ದು, ರಾತ್ರಿ ನೀಡಿದ್ದ ಮುದ್ದೆ, ಚಪಾತಿ, ರೈಸ್ ಸಾಂಬಾರ್ ತಡವಾಗಿ ತಿಂದಿದ್ದಾರೆ. ಮನೆಯವರು ತಂದು ಕೊಟ್ಟಿರುವ ಬಟ್ಟೆ ಪಡೆದಿದ್ದಾರೆ. ರಾತ್ರಿ ಒಂದು ಗಂಟೆಯವರೆಗೂ ನಿದ್ರೆ ಮಾಡದೆ ಯೋಚಿಸುತ್ತಿದ್ದರು ಎನ್ನಲಾಗಿದೆ. ರೇವಣ್ಣ ಆರೋಗ್ಯ ಸರಿ‌ ಇಲ್ಲದ ಕಾರಣ ಜೈಲಾಧಿಕಾರಿಗಳು ಹೆಚ್ಚು ನಿಗಾ ಇಟ್ಟಿದ್ದಾರೆ. ರೇವಣ್ಣ ಇರುವ ಕೊಠಡಿ ಬಳಿ ಒಬ್ಬ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಇಂದು ಬೆಳಿಗ್ಗೆ 5.30ಕ್ಕೆ ನಿದ್ರೆಯಿಂದ ಎದ್ದ ರೇವಣ್ಣ ಅವರಿಗೆ ಕಾಫಿ-ಟೀ ನೀಡಲಾಗಿದೆ. ಕೈದಿಗಳಿಗೆ ಟಿವಿ ವ್ಯವಸ್ಥೆ ಇಲ್ಲ. ಹೊರಗಿನ ಸುದ್ದಿ ತಿಳಿಯಲು ನ್ಯೂಸ್ ಪೇಪರ್ ವ್ಯವಸ್ಥೆ ಮಾಡಲಾಗಿದೆ. ರೇವಣ್ಣಗೆ ಓದಲು ಕನ್ನಡ-ಇಂಗ್ಲೀಷ್ ಪೇಪರ್ ನೀಡಲಾಗಿದೆ. ಪೇಪರ್ ಕಡೆ ಕಣ್ಣಾಡಿಸಿ ನಿನ್ನೆಯ ವಿದ್ಯಮಾನಗಳನ್ನು ರೇವಣ್ಣ ಓದಿದ್ದಾರೆ. ಜೈಲಿನ ಮೆನುವಿನಂತೆ ರೇವಣ್ಣಗೆ ಇಂದು ಬೆಳಗ್ಗಿನ ತಿಂಡಿಗೆ ಪುಳಿಯೋಗರೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

ನಾನೇನೂ ಮಾಡಿಲ್ಲ: ರೇವಣ್ಣ

ವಾದ – ಪ್ರತಿವಾದ ಆಲಿಸಿದ 17ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರು, ರೇವಣ್ಣ ಅವರನ್ನುದ್ದೇಶಿಸಿ ನಿಮಗೆ ಪೊಲೀಸರಿಂದ ತೊಂದರೆ ಆಗಿದೆಯಾ? ಎಂದು ಪ್ರಶ್ನೆ ಮಾಡಿದರು. ಅದಕ್ಕೆ ರೇವಣ್ಣ, ಕಸ್ಟಡಿಗೆ ಬಂದು 3 ದಿನ ಆಗಿದೆ. ಮಾತ್ರೆ ತೆಗೆದುಕೊಳ್ಳಲು ತಡ ಆಗುತ್ತಿದೆ. ನನ್ನನ್ನು ಸುಮ್ಮನೆ ಸತಾಯಿಸುತ್ತಿದ್ದಾರೆ. ಪ್ರಕರಣ ದಾಖಲಾಗಿದ್ದು ನನಗೆ ಗೊತ್ತಿಲ್ಲ. ನನಗೆ ಕೇಳಿದ್ದನ್ನು ಹೇಳಿದ್ದೇನೆ. ಎಲ್ಲವೂ ದಾಖಲಿಸಿಕೊಂಡಿದ್ದಾರೆ. ಮೂರು ದಿನದಿಂದ ಹೊಟ್ಟೆ ನೋವು ಇದೆ. ಮಲಗಲು ಕೂಡ ಆಗಿಲ್ಲ. ಎಲ್ಲ ವಿಚಾರಣೆಯೂ ಮುಗಿದಿದೆ ಎಂದು ತನಿಖಾಧಿಕಾರಿ ನಿನ್ನೆಯೇ ಹೇಳಿದ್ದರು. ಆದರೆ, ಇಂದು ಮತ್ತೆ ವಿಚಾರಣೆ ಮಾಡಬೇಕಿದೆ ಎಂದು ಹೇಳುತ್ತಿದ್ದಾರೆ. ನನಗೆ ಹೊಟ್ಟೆ ನೋವಿದೆ. ಮೂರು ದಿನಗಳಿಂದ ಸತತವಾಗಿ ನಿದ್ದೆ ಮಾಡಿಲ್ಲ ಸರ್. ನಾನು ತಪ್ಪೇ ಮಾಡಿಲ್ಲ ಅಂದಾಗ ಯಾಕೆ ಒಪ್ಪಿಕೊಳ್ಳಬೇಕು? ದುರುದ್ದೇಶದಿಂದ ಎಲ್ಲವನ್ನೂ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಮಾತು ಮುಂದುವರಿಸಿದ ಎಚ್.ಡಿ. ರೇವಣ್ಣ, ಪ್ರಜ್ವಲ್ ತಪ್ಪು ಮಾಡಿರಬಹುದು. ಅದರ ಬಗ್ಗೆ ನನಗೇನು ಗೊತ್ತಿಲ್ಲ. ಬೇಕು ಎಂದೇ ನನ್ನ ಮೇಲೆ ಈ ರೀತಿ ಮಾಡುತ್ತಿದ್ದಾರೆ. ನನಗೆ ಹುಷಾರಿಲ್ಲ, ಬೆಳಗ್ಗೆ ಡ್ರಿಪ್ಸ್ ಹಾಕಿದ್ದಾರೆ. ಹುಷಾರಿಲ್ಲ ಹೊಟ್ಟೆ ಉರಿ ಬಂದಿದೆ. ಗ್ಲುಕೋಸ್ ಹಾಕಿದ್ದಾರೆ. ನಾನು ಶಾಸಕನಾಗಿ 25 ವರ್ಷ ಕಳೆದಿದೆ. ಬೇಕಂತಲೇ ಈ ರೀತಿ ಮಾಡಲಾಗಿದೆ. ವಾರಂಟ್ ಇಲ್ಲದೆಯೆ ಮನೆಗೆ ಬಂದು ಅರೆಸ್ಟ್ ಮಾಡಿದರು ಎಂದೆಲ್ಲ ಮಾಹಿತಿ ನೀಡಿದರು. ವಾದ – ಪ್ರತಿವಾದ ಆಲಿಸಿದ ನ್ಯಾಯಾದೀಶರು, ಮೇ 14ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದರು.

ಇದನ್ನೂ ಓದಿ: Prajwal Revanna Case: ಎಚ್‌.ಡಿ. ರೇವಣ್ಣಗೆ 7 ದಿನ ನ್ಯಾಯಾಂಗ ಬಂಧನ; ಅಮಾವಾಸ್ಯೆ ದಿನವೇ ಜೈಲಿಗೆ ಶಿಫ್ಟ್‌!

Continue Reading

ಶಿಕ್ಷಣ

SSLC Exam Result 2024: ಇಂದು ಎಸ್‌ಎಸ್‌ಎಲ್‌ಸಿ ರಿಸಲ್ಟ್‌ ಪ್ರಕಟ; ಎಷ್ಟು ಗಂಟೆಗೆ? ಎಲ್ಲಿ ನೋಡಬಹುದು? ಇಲ್ಲಿದೆ ಡಿಟೇಲ್ಸ್‌

SSLC Exam Result 2024: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ಮಾ.25ರಿಂದ ಏ.6ರ ವರೆಗೆ ನಡೆದಿತ್ತು. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಒಟ್ಟು 2750 ಪರೀಕ್ಷಾ ಕೇಂದ್ರಗಳಲ್ಲಿ 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. ಇದರಲ್ಲಿ 4.41 ಲಕ್ಷ ಬಾಲಕರು ಮತ್ತು 4.28 ಲಕ್ಷ ಬಾಲಕಿಯರು ಇದ್ದಾರೆ. ಸಾಮಾನ್ಯ ವಿದ್ಯಾರ್ಥಿಗಳ ಜೊತೆಯಲ್ಲಿ 18,225 ಖಾಸಗಿ ವಿದ್ಯಾರ್ಥಿಗಳು ಮತ್ತು 41,375 ರೀ ಎಕ್ಸಾಮ್ ಬರೆದಿದ್ದ ವಿದ್ಯಾರ್ಥಿಗಳು ಕೂಡ ಇದ್ದಾರೆ. ಗುರುವಾರ ಫಲಿತಾಂಶ ಪ್ರಕಟವಾಗಲಿದೆ.

VISTARANEWS.COM


on

SSLC Exam Result 2024 to be declared tomorrow Here are the details
Koo

ಬೆಂಗಳೂರು: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ (SSLC Exam Result 2024) ಫಲಿತಾಂಶ ಇಂದು ಪ್ರಕಟವಾಗಲಿದೆ. ಮೇ 9ರ ಬೆಳಗ್ಗೆ 10.30ಕ್ಕೆ ಫಲಿತಾಂಶ ಪ್ರಕಟಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ, ಮಾರ್ಚ್/ಏಪ್ರಿಲ್ 2024ರ ಎಸ್.ಎಸ್.ಎಲ್.ಸಿ ಪರೀಕ್ಷೆ-1 ಅನ್ನು ದಿನಾಂಕ: 25.03.2024 ರಿಂದ 06.04.2024 ರವರೆಗೆ ನಡೆಸಲಾಯಿತು. ಎಲ್ಲ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿರುತ್ತದೆ. ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬಂಧ ದಿನಾಂಕ: 09.05.2024 ರಂದು ಬೆಳಗ್ಗೆ 10.30ಕ್ಕೆ ಮಲ್ಲೇಶ್ವರದಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ ಎಂದು ಹೇಳಿದೆ.

SSLC Exam Result 2024 to be declared tomorrow Here are the details

ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ವೆಬ್‌ಸೈಟ್‌ನಲ್ಲಿ ಮೇ 9ರ ಬೆಳಗ್ಗೆ 10.30ರ ನಂತರ ವೀಕ್ಷಿಸಬಹುದಾಗಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಈ ಬಾರಿ ಫಲಿತಾಂಶ ಬಿಡುಗಡೆ ತಡವಾಗಿದೆ.

ಮಾ.25ರಿಂದ ಏ.6ರ ವರೆಗೆ ನಡೆದಿದ್ದ ಪರೀಕ್ಷೆ

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ಮಾ.25ರಿಂದ ಏ.6ರ ವರೆಗೆ ನಡೆದಿತ್ತು. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಒಟ್ಟು 2750 ಪರೀಕ್ಷಾ ಕೇಂದ್ರಗಳಲ್ಲಿ 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. ಇದರಲ್ಲಿ 4.41 ಲಕ್ಷ ಬಾಲಕರು ಮತ್ತು 4.28 ಲಕ್ಷ ಬಾಲಕಿಯರು ಇದ್ದಾರೆ. ಸಾಮಾನ್ಯ ವಿದ್ಯಾರ್ಥಿಗಳ ಜೊತೆಯಲ್ಲಿ 18,225 ಖಾಸಗಿ ವಿದ್ಯಾರ್ಥಿಗಳು ಮತ್ತು 41,375 ರೀ ಎಕ್ಸಾಮ್ ಬರೆದಿದ್ದ ವಿದ್ಯಾರ್ಥಿಗಳು ಕೂಡ ಇದ್ದಾರೆ.

ಫಲಿತಾಂಶ ಎಲ್ಲಿ ನೋಡಬಹುದು?

ಕರ್ನಾಟಕದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಫಲಿತಾಂಶವನ್ನು ಕರ್ನಾಟಕ ಶಾಲೆ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (KSEAB) ವೆಬ್‌ಸೈಟ್‌ನಲ್ಲಿ ನೋಡಬಹುದು. ಪರೀಕ್ಷಾ ಪ್ರವೇಶ ಪತ್ರದಲ್ಲಿ ನೀಡಿರುವ ರಿಜಿಸ್ಟರ್ ನಂಬರ್ (ನೋಂದಣಿ ಸಂಖ್ಯೆ) ಮತ್ತು ಜನ್ಮ ದಿನಾಂಕ ನಮೂದಿಸುವ ಮೂಲಕ ವೆಬ್‌ಸೈಟ್‌ನಲ್ಲಿ ಫಲಿತಾಂಶ ವೀಕ್ಷಿಸಬಹುದು. ಇದಕ್ಕೆ ನೀವು kseab.karnataka.gov.in ಗೆ ಭೇಟಿ ನೀಡಬಹುದು. ಜತೆಗೆ karresults.nic.in ವೆಬ್‌ಸೈಟ್‌ನಲ್ಲೂ ಫಲಿತಾಂಶ ವೀಕ್ಷಿಸಬಹುದಾಗಿದೆ.

ಶೈಕ್ಷಣಿಕ ಗುಣಮಟ್ಟದ ವಿಚಾರದಲ್ಲಿ ಕರ್ನಾಟಕ ದೇಶದಲ್ಲಿ ದೊಡ್ಡ ಹೆಸರು ಪಡೆದಿದೆ. ಹೀಗಾಗಿ ಕರ್ನಾಟಕದ ಎಸ್‌ಎಸ್‌ಎಲ್‌ ಫಲಿತಾಂಶವು, ಇಡೀ ದೇಶದ ಗಮನವನ್ನ ಸೆಳೆಯುತ್ತಿದೆ. ಕರ್ನಾಟಕದಲ್ಲಿ ಮುಖ್ಯವಾಗಿ ಬೆಂಗಳೂರಿನಲ್ಲಿ ಬೇರೆ ಬೇರೆ ರಾಜ್ಯದ ವಿದ್ಯಾರ್ಥಿಗಳು ಕೂಡ ಓದುತ್ತಿದ್ದಾರೆ. ಪ್ರತಿಯೊಬ್ಬ ವಿದ್ಯಾರ್ಥಿಯ ಬದುಕಿನಲ್ಲೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಮುಖ ಹಂತವಾಗಿರುವುದರಿಂದ ಕಾತರ ಹೆಚ್ಚಿದೆ.

ಇದನ್ನೂ ಓದಿ | Village Administrative Officer: ತಾಂತ್ರಿಕ ಸಮಸ್ಯೆ; ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಕೆ ಅವಧಿ ಮೇ 15ರವರೆಗೆ ವಿಸ್ತರಣೆ

ಇನ್ನು ಕಳೆದ ಶೈಕ್ಷಣಿಕ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಫಲಿಶಾಂಶವನ್ನು ಮೇ 08 ರಂದು ಬಿಡುಗಡೆ ಮಾಡಲಾಗಿತ್ತು. ಘೋಷಿಸಿತ್ತು. ಒಟ್ಟಾರ ಉತ್ತೀರ್ಣ ಪ್ರಮಾಣ ಶೇ 83.89 ದಾಖಲಾಗಿತ್ತು. ಪರೀಕ್ಷೆಗೆ ರಾಜ್ಯಾದ್ಯಂತ ಒಟ್ಟು 8,69,968 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಅದರದಲ್ಲಿ 4,41,910 ಬಾಲಕರಾದರೆ, 4,28,058 ಬಾಲಕಿಯರು. ಒಟ್ಟು ವಿದ್ಯಾರ್ಥಿಗಳ ನೋಂದಣಿಯಲ್ಲಿ 8,10,368 ಸರ್ಕಾರಿ ಶಾಲಾ ವಿದ್ಯಾರ್ಥಿಗಳು, 18,225 ಖಾಸಗಿ ವಿದ್ಯಾರ್ಥಿಗಳು ಹಾಗೂ 41,375 ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು.

Continue Reading

ಕರ್ನಾಟಕ

Karnataka Weather: ಇಂದು ಕೊಡಗು, ಹಾಸನ, ಚಿಕ್ಕಮಗಳೂರು ಸೇರಿ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ!

Karnataka Weather: ಬೆಂಗಳೂರು, ಕೋಲಾರ, ಚಿಕ್ಕಮಗಳೂರು, ಕೊಡಗು ಸೇರಿದಂತೆ ವಿವಿಧೆಡೆ ಬುಧವಾರ ಭಾರಿ ಮಳೆ ಸುರಿದಿತ್ತು. ಅದೇ ರೀತಿ ಇಂದು(ಮೇ 9) ಕೂಡ ರಾಜ್ಯದ ವಿವಿಧೆಡೆ ಧಾರಾಕಾರ ಮಳೆ ಸುರಿಯುವ ಮುನ್ಸೂಚನೆ ಇದೆ.

VISTARANEWS.COM


on

Karnataka Weather
Koo

ಬೆಂಗಳೂರು: ರಾಜ್ಯದ ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಮೇ 9ರಂದು ಬಿರುಗಾಳಿಯೊಂದಿಗೆ ಗಾಳಿಯೊಂದಿಗೆ (30-40 kmph) ಗುಡುಗು ಸಹಿತ ಭಾರಿ ಮಳೆಯಾಗುವ (Karnataka Weather) ಸಾಧ್ಯತೆಯಿದೆ. ಅದೇ ರೀತಿ ಬಳ್ಳಾರಿ, ಬೆಂಗಳೂರು ನಗರ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (30-40 kmph) ಸಾಧಾರಣ ಮಳೆಯಾಗಲಿದೆ (Rain News) ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು ತುಮಕೂರು ಮತ್ತು ವಿಜಯನಗರ ಜಿಲ್ಲೆಗಳು, ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೀದರ್, ಕಲಬುರ್ಗಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರವಾದ ಮಳೆ/ ಗುಡುಗು ಸಹಿತ ಗಾಳಿ (30-40 kmph) ಉಂಟಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ ಎಂದು ತಿಳಿಸಿದೆ.

ಮೇ 10ರಂದು ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (30-40 ಕಿಮೀ) ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ತುಮಕೂರು, ಕೊಡಗು, ಹಾಸನ, ಚಿಕ್ಕಮಗಳೂರು, ವಿಜಯನಗರ, ಬೀದರ್, ಕಲಬುರ್ಗಿ, ವಿಜಯಪುರ, ಬೆಳಗಾವಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳು. ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಇದೇ ರೀತಿ ಮೇ 15ರವರೆಗೆ ರಾಜ್ಯದ ಎಲ್ಲಾ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿರಿ ನೀಡಿದೆ.

ಇದನ್ನೂ ಓದಿ | Rain News: ರಾಜ್ಯದ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆ; ಬೆಂಗಳೂರಿನಲ್ಲಿ ಹೊಳೆಯಂತಾದ ರಸ್ತೆಗಳು!

ತಾಪಮಾನದ ಮುನ್ಸೂಚನೆ

ಮುಂದಿನ 2 ದಿನಗಳಲ್ಲಿ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆ ಇಲ್ಲ ನಂತರ ರಾಜ್ಯದ ಮೇಲೆ 2-3 ಡಿಗ್ರಿ ಇಳಿಕೆಯಾಗಲಿದೆ.

ಮುಂದಿನ 24 ಗಂಟೆಗಳ ಬೆಂಗಳೂರು ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಸಂಜೆ/ರಾತ್ರಿಯ ಸಮಯದಲ್ಲಿ ಮಿಂಚು/ಗಾಳಿ (30- 40kmph) ಸಹಿತ ಲಘುವಾಗಿ ಮಧ್ಯಮ ಮಳೆಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 35°C ಮತ್ತು 22°C ಇರುವ ಸಾಧ್ಯತೆ ಇದೆ.

Continue Reading

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ: ಕಾಂಗ್ರೆಸ್ ನಾಯಕನ ‘ವರ್ಣ ವ್ಯಾಖ್ಯಾನ’ ಅವಿವೇಕತನದ್ದು

ಕಾಂಗ್ರೆಸ್ ನಾಯಕ ಪಿತ್ರೋಡಾ ಈ ರೀತಿ ಹೇಳಿಕೆ ನೀಡಿ ರಾಜಕೀಯ ಬಿರುಗಾಳಿ ಎಬ್ಬಿಸುತ್ತಿರುವುದು ಇದೇ ಮೊದಲಲ್ಲ. ಇತ್ತೀಚೆಗೆ ಅವರು ʼಅಮೆರಿಕದ ಮಾದರಿಯ ಪಿತ್ರಾರ್ಜಿತ ತೆರಿಗೆʼ ಹಾಗೂ ʼಆಸ್ತಿ ಮರುಹಂಚಿಕೆʼ ಉಲ್ಲೇಖ ಮಾಡಿದ್ದರು. ಅಮೆರಿಕದಲ್ಲಿ ಶ್ರೀಮಂತರು ಮರಣ ಹೊಂದಿದಾಗ, ಅವರ ಆಸ್ತಿಯ ಒಂದು ಭಾಗವನ್ನು ಮಾತ್ರ ಅವರ ಮಕ್ಕಳಿಗೆ ವರ್ಗಾಯಿಸಲಾಗುತ್ತದೆ. ಸರ್ಕಾರ ಗಮನಾರ್ಹ ಪಾಲನ್ನು ವಶಪಡಿಸಿಕೊಳ್ಳುತ್ತದೆ. ಭಾರತದಲ್ಲಿ ಈ ರೀತಿಯ ವಿಧಾನ ನ್ಯಾಯಯುತ ಮತ್ತು ಪ್ರಯೋಜನಕಾರಿ ಎಂದಿದ್ದರು.

VISTARANEWS.COM


on

Sam Pitroda
Koo

ಕಳೆದ ಹಲವು ಚುನಾವಣೆಗಳಲ್ಲಿ ಕಾಂಗ್ರೆಸ್‌ಗೆ ತಮ್ಮ ಹೇಳಿಕೆಗಳ ಮೂಲಕ ಹಾನಿಯೆಸಗುವ ಮಣಿಶಂಕರ ಅಯ್ಯರ್‌ ಮುಂತಾದವರ ಪರಂಪರೆಯನ್ನು ಕಾಂಗ್ರೆಸ್‌ ಪಕ್ಷದ ಭಾರತೀಯ ಸಾಗರೋತ್ತರ ವಿಭಾಗದ ಅಧ್ಯಕ್ಷ ಸ್ಯಾಮ್‌ ಪಿತ್ರೋಡಾ ಮುಂದುವರಿಸುತ್ತಿರುವಂತಿದೆ. ದೇಶದ ವೈವಿಧ್ಯತೆಯ ಬಗ್ಗೆ ಮಾತನಾಡುವಾಗ ರಾಷ್ಟ್ರದ ವಿವಿಧ ಭಾಗಗಳ ಜನತೆಯನ್ನು ಚೀನಿಯರು, ಅರಬ್ಬರು, ಬಿಳಿಯರು ಮತ್ತು ಆಫ್ರಿಕನ್ನರಿಗೆ ಹೋಲಿಸಿ ಸ್ಯಾಮ್‌ ಪಿತ್ರೋಡಾ ವಿವಾದ ಹುಟ್ಟುಹಾಕಿದ್ದಾರೆ. “ಭಾರತದಲ್ಲಿ ಪೂರ್ವದಲ್ಲಿರುವ ಜನರು ಚೀನಿಯರಂತೆ ಕಾಣುತ್ತಾರೆ. ಪಶ್ಚಿಮದಲ್ಲಿ ಜನರು ಅರಬ್ಬರಂತೆ, ಉತ್ತರದ ಜನರು ಬಹುಶಃ ಶ್ವೇತವರ್ಣೀಯರಂತೆ ಹಾಗೂ ದಕ್ಷಿಣದ ಜನರು ದಕ್ಷಿಣ ಆಫ್ರಿಕಾದವರಂತೆ ಕಾಣುತ್ತಾರೆ. ಪರವಾಗಿಲ್ಲ, ನಾವೆಲ್ಲರೂ ಸಹೋದರರು ಮತ್ತು ಸಹೋದರಿಯರು” ಎಂದು ಪಿತ್ರೋಡಾ ಹೇಳಿದ್ದಾರೆ.

ಸಹಜವಾಗಿಯೇ ಈ ಮಾತು ವಿವಾದ ಹುಟ್ಟುಹಾಕಿದೆ. ಇಂಥ ಅವಕಾಶವನ್ನು ಎಂದೂ ಕಳೆದುಕೊಳ್ಳದ ಪ್ರಧಾನಮಂತ್ರಿ ನರೇಂದ್ರ ಮೋದಿ, “ಕಪ್ಪು ಚರ್ಮ ಇರುವ ಭಾರತೀಯರು ಆಫ್ರಿಕಾದವರು ಎಂದು ಈ ʼತತ್ವಜ್ಞಾನಿ ಅಂಕಲ್‌ʼ ಹೇಳಿದ್ದಾರೆ. ಇದರರ್ಥ, ನೀವು ದೇಶದ ಹಲವಾರು ಜನರನ್ನು ಅವರ ಚರ್ಮದ ಬಣ್ಣದ ಆಧಾರದ ಮೇಲೆ ನಿಂದಿಸುತ್ತಿದ್ದೀರಿ. ಚರ್ಮದ ಬಣ್ಣದ ಆಧಾರದ ಮೇಲೆ ಭಾರತೀಯರಿಗೆ ಮಾಡುವ ಅವಮಾನವನ್ನು ಈ ದೇಶ ಸಹಿಸುವುದಿಲ್ಲ” ಎಂದು ಪಿತ್ರೋಡಾ ಮೇಲೆ ಹರಿಹಾಯ್ದಿದ್ದಾರೆ. “ಆದಿವಾಸಿ ಕುಟುಂಬದ ಮಗಳಾದ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿ ಪದವಿಯ ಸ್ಪರ್ಧೆಯ ವೇಳೆ ಸೋಲಿಸಲು ಕಾಂಗ್ರೆಸ್ ಏಕೆ ಶ್ರಮಿಸಿತು ಎಂದು ನಾನು ತುಂಬಾ ಯೋಚಿಸುತ್ತಿದ್ದೆ. ಇಂದು ನನಗೆ ಅದರ ಕಾರಣ ತಿಳಿಯಿತು. ಅಮೆರಿಕದಲ್ಲಿರುವ ‘ಶೆಹಜಾದಾ’ನ ಅಂಕಲ್‌ ಹಾಗೂ ಫಿಲಾಸಫಿ ಮಾರ್ಗದರ್ಶಕ (ಪಿತ್ರೋಡಾ) ಈ ‘ಶೆಹಜಾದಾ’ಗೆ ಕ್ರಿಕೆಟ್‌ನ ಮೂರನೇ ಅಂಪೈರ್‌ನಂತೆ ಸಲಹೆ ನೀಡುತ್ತಾರೆ” ಎಂದು ಕುಟುಕಿದ್ದಾರೆ. ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರು, “ಸ್ಯಾಮ್ ಭಾಯ್, ನಾನು ಈಶಾನ್ಯದಿಂದ ಬಂದವನು ಮತ್ತು ನಾನು ಭಾರತೀಯನಂತೆ ಕಾಣುತ್ತೇನೆ. ನಮ್ಮ ದೇಶದ ಬಗ್ಗೆ ಸ್ವಲ್ಪ ತಿಳಿವಳಿಕೆ ಬೆಳೆಸಿಕೊಳ್ಳಿ” ಎಂದಿದ್ದಾರೆ.

ಕಾಂಗ್ರೆಸ್ ನಾಯಕ ಪಿತ್ರೋಡಾ ಈ ರೀತಿ ಹೇಳಿಕೆ ನೀಡಿ ರಾಜಕೀಯ ಬಿರುಗಾಳಿ ಎಬ್ಬಿಸುತ್ತಿರುವುದು ಇದೇ ಮೊದಲಲ್ಲ. ಇತ್ತೀಚೆಗೆ ಅವರು ʼಅಮೆರಿಕದ ಮಾದರಿಯ ಪಿತ್ರಾರ್ಜಿತ ತೆರಿಗೆʼ ಹಾಗೂ ʼಆಸ್ತಿ ಮರುಹಂಚಿಕೆʼ ಉಲ್ಲೇಖ ಮಾಡಿದ್ದರು. ಅಮೆರಿಕದಲ್ಲಿ ಶ್ರೀಮಂತರು ಮರಣ ಹೊಂದಿದಾಗ, ಅವರ ಆಸ್ತಿಯ ಒಂದು ಭಾಗವನ್ನು ಮಾತ್ರ ಅವರ ಮಕ್ಕಳಿಗೆ ವರ್ಗಾಯಿಸಲಾಗುತ್ತದೆ. ಸರ್ಕಾರ ಗಮನಾರ್ಹ ಪಾಲನ್ನು ವಶಪಡಿಸಿಕೊಳ್ಳುತ್ತದೆ. ಭಾರತದಲ್ಲಿ ಈ ರೀತಿಯ ವಿಧಾನ ನ್ಯಾಯಯುತ ಮತ್ತು ಪ್ರಯೋಜನಕಾರಿ ಎಂದಿದ್ದರು. ಕಾಂಗ್ರೆಸ್‌ ಪಕ್ಷ ಈ ಹೇಳಿಕೆಯಿಂದ ಉಂಟಾದ ಕೋಲಾಹಲದಿಂದ ಬೆಚ್ಚಿಬಿದ್ದು, ಪಿತ್ರೋಡಾ ಹೇಳಿಕೆಯಿಂದ ಅಂತರ ಕಾಪಾಡಿಕೊಂಡಿತ್ತು.

ಪಿತ್ರೋಡಾ ಅವರು ತಮ್ಮ ಮಾತನ್ನು ವಿಶ್ಲೇಷಣೆ ಎಂದುಕೊಂಡಿರುವಂತಿದೆ. ಆದರೆ ವಿಶ್ಲೇಷಣೆಗೂ ಜನಾಂಗೀಯ ನಿಂದನೆಗೂ ಅವರು ವ್ಯತ್ಯಾಸ ಗುರುತಿಸಿಕೊಳ್ಳಬೇಕಿದೆ. ದಕ್ಷಿಣ ಭಾರತೀಯರು ತುಸು ಕಪ್ಪಗಿದ್ದಾರೆ ಸರಿ; ಅಷ್ಟಕ್ಕೇ ಅವರು ಆಫ್ರಿಕನ್ನರಿಗೆ ಸಮವೋ? ಭಾರತದಲ್ಲಿ ಅತಿ ಹೆಚ್ಚಿನ ತೆರಿಗೆ ಉತ್ಪತ್ತಿಯಾಗುವುದು, ಜಿಡಿಪಿಗೆ ಹೆಚ್ಚಿನ ಕೊಡುಗೆ ನೀಡುವವರು ದಕ್ಷಿಣ ಭಾರತೀಯರು. ಇಲ್ಲಿನ ಸಂಸ್ಕೃತಿ ಅಲ್ಲಿಗಿಂತ ವಿಭಿನ್ನ. ಪೂರ್ವಭಾಗದವರು ಚೀನೀಯರಂತೆ ಕಾಣುತ್ತಾರೆ ಎನ್ನುವ ಮೂಲಕ, ʼಅರುಣಾಚಲ ನಮ್ಮದುʼ ಎನ್ನುತ್ತಿರುವ ಚೀನಾಕ್ಕೆ ಪಿತ್ರೋಡಾ ಸಹಾಯ ಮಾಡುತ್ತಿರುವಂತಿದೆ. ಭೌಗೋಳಿಕ ಹಾಗೂ ಸಾಂಸ್ಕೃತಿಕ ಭಿನ್ನತೆಗಳು ಪ್ರತಿ ದೇಶದಲ್ಲೂ ಇದ್ದೇ ಇರುತ್ತವೆ. ಭಾರತ ವಿಶಾಲ ದೇಶವಾದುದರಿಂದ ಇಲ್ಲಿ ಹೆಚ್ಚಿನ ವೈವಿಧ್ಯವಿದೆ. ಆ ಕಾರಣಕ್ಕೇ ಇದು ಸಾಂಸ್ಕೃತಿಕವಾಗಿ ಶ್ರೀಮಂತವೂ ಆಗಿದೆ. ಇದು ಭಾರತದ ಶಕ್ತಿಯೇ ಹೊರತು, ಇನ್ನೊಂದರ ನಕಲು ಅಲ್ಲ. ನಾವು ನಮ್ಮನ್ನು ಬೇರೆ ದೇಶಗಳಿಗೆ ಚರ್ಮದ ಬಣ್ಣದಿಂದ ಹೋಲಿಸಿಕೊಳ್ಳಬೇಕಿಲ್ಲ. ಬೇಕಿದ್ದರೆ ಭೂತಾನಿನ ಆನಂದದ ಸ್ವಭಾವದ ಸೂಚ್ಯಂಕಕ್ಕೆ, ಜಪಾನಿನ ಪರಿಶ್ರಮದ ಗುಣಕ್ಕೆ, ಕೆರಿಬಿಯನ್ನರ ದೈಹಿಕ ಬಲಕ್ಕೆ ಹೋಲಿಸಿಕೊಳ್ಳೋಣ.

ಈ ಹಿಂದೆ ಮಣಿಶಂಕರ ಅಯ್ಯರ್‌ ಮುಂತಾದವರು ಹೀಗೆ ʼಸೆಲ್ಫ್‌ ಗೋಲ್‌ʼ ಅಥವಾ ʼಆತ್ಮಹತ್ಯಾ ದಾಳಿʼ ಮಾಡಿಕೊಳ್ಳುತ್ತಿದ್ದರು. ಇಂಥವರು ಸ್ವತಃ ತಮ್ಮ ಪಕ್ಷಕ್ಕೇ ತಮ್ಮ ಹೇಳಿಕೆಗಳಿಂದ ಗಂಡಾಂತರ ತಂದೊಡ್ಡುತ್ತಿರುತ್ತಾರೆ. 2017ರಲ್ಲಿ ಮಣಿಶಂಕರ ಅಯ್ಯರ್‌ ಅವರು ಮೋದಿಯವರನ್ನು ʼನೀಚʼ ಎಂದು ಕರೆದಿದ್ದರು. ಇತ್ತೀಚೆಗೆ ಅವರು ಪಾಕಿಸ್ತಾನದಲ್ಲಿ ನಿಂತು “ಭಾರತದ ಮೂರನೇ ಎರಡು ಭಾಗ ಜನ ಪಾಕ್‌ನತ್ತ ಬರಲು ಸಿದ್ಧರಿದ್ದಾರೆ” ಎಂದಿದ್ದರು. 2007ರಲ್ಲಿ ನರೇಂದ್ರ ಮೋದಿಯವರನ್ನು ಕಾಂಗ್ರೆಸ್‌ ಮುಖ್ಯಸ್ಥೆ ಸೋನಿಯಾ ಗಾಂಧಿ ʼಸಾವಿನ ಸರದಾರʼ ಎಂದು ಕರೆದಿದ್ದರು. ಇತ್ತೀಚೆಗೆ ಗುಜರಾತ್‌ ಚುನಾವಣೆ ಸಂದರ್ಭ ಮೋದಿಯವರಿಗೆ ಮಲ್ಲಿಕಾರ್ಜುನ ಖರ್ಗೆಯವರು ʼರಾವಣʼ ಎಂದಿದ್ದರು. ಆದರೆ ಇಂಥ ಹೇಳಿಕೆಗಳೆಲ್ಲ ಹೇಳಿದವರಿಗೇ ತಿರುಮಂತ್ರವಾಗಿ, ನಿಂದಿಸಲ್ಪಟ್ಟವರು ಭಾರಿ ಬಹುಮತದಿಂದ ಗೆದ್ದಿದ್ದರು. ಮತದಾರರ ಮನಶ್ಶಾಸ್ತ್ರ ಅರ್ಥ ಮಾಡಿಕೊಳ್ಳದ ಜನನಾಯಕರು ಇಂಥ ಮಾತುಗಳನ್ನು ಬಳಸುತ್ತಾರೆ. ನಂತರ ನಾಲಿಗೆ ಕಚ್ಚಿಕೊಳ್ಳುತ್ತಾರೆ. ಇದು ಅವರನ್ನೇ ಇಕ್ಕಟ್ಟಿಗೆ ಸಿಲುಕಿಸುವುದಲ್ಲದೆ, ಅವರ ಚಾರಿತ್ರ್ಯವನ್ನೂ ಹರಾಜಿಗಿಡುತ್ತದೆ.

ಇದನ್ನೂ ಓದಿ: Sam Pitroda: ಭಾರತೀಯರ ಬಣ್ಣದ ಕುರಿತು ಮಾತಾಡಿದ ಸ್ಯಾಮ್‌ ಪಿತ್ರೋಡಾ ತಲೆದಂಡ; ಕಾಂಗ್ರೆಸ್‌ ಸ್ಥಾನಕ್ಕೆ ರಾಜೀನಾಮೆ!

Continue Reading
Advertisement
SRH vs LSG
ಕ್ರೀಡೆ13 mins ago

SRH vs LSG: ಬಿರುಸಿನ ಅರ್ಧಶತಕ ಬಾರಿಸಿ ಗೇಲ್​, ನರೈನ್​ ದಾಖಲೆ ಮುರಿದ ಟ್ರಾವಿಸ್ ಹೆಡ್​

bagalakote unrest
ಕ್ರೈಂ22 mins ago

Bagalakote Unrest: ಹಿಂದೂ ಯುವಕ- ಮುಸ್ಲಿಂ ಯುವತಿ ನವದಂಪತಿ ರಕ್ಷಣೆಗೆ ನಿಂತ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸ್‌ ಲಾಠಿಚಾರ್ಜ್‌

Do You Know
ಲೈಫ್‌ಸ್ಟೈಲ್33 mins ago

Do You Know: ನಿಮಗಿದು ಗೊತ್ತಾ? ಲವ್‌ ಮಾಡುತ್ತಿದ್ದರೆ ತೂಕ ಜಾಸ್ತಿಯಾಗುತ್ತದೆ!

hd revanna jailed prajwal revanna case
ಕ್ರೈಂ51 mins ago

Prajwal Revanna Case: ಎಚ್‌.ಡಿ ರೇವಣ್ಣ ಈಗ ಕೈದಿ ನಂಬರ್‌ 4567, ನಿದ್ದೆ ಮಾಡದೆ ಮೌನಿಯಾಗಿ ಕುಳಿತ ಮಾಜಿ ಸಚಿವ

Nijjar Killling
ವಿದೇಶ51 mins ago

Nijjar Killing: ಒಂದೇ ದಿನದಲ್ಲಿ ಸ್ಟೂಡೆಂಟ್‌ ವೀಸಾ ಪಡೆದು ಕೆನಡಾಕ್ಕೆ ಬಂದಿದ್ನಂತೆ ನಿಜ್ಜರ್‌ ಹಂತಕ

Maldives
ದೇಶ56 mins ago

Maldives: ರಾಜತಾಂತ್ರಿಕ ಬಿಕ್ಕಟ್ಟಿನ ಮಧ್ಯೆ ಭಾರತಕ್ಕೆ ಆಗಮಿಸಿದ ಮಾಲ್ಡೀವ್ಸ್ ಸಚಿವ ಮೂಸಾ ಜಮೀರ್

SSLC Exam Result 2024 to be declared tomorrow Here are the details
ಶಿಕ್ಷಣ2 hours ago

SSLC Exam Result 2024: ಇಂದು ಎಸ್‌ಎಸ್‌ಎಲ್‌ಸಿ ರಿಸಲ್ಟ್‌ ಪ್ರಕಟ; ಎಷ್ಟು ಗಂಟೆಗೆ? ಎಲ್ಲಿ ನೋಡಬಹುದು? ಇಲ್ಲಿದೆ ಡಿಟೇಲ್ಸ್‌

Cooking Oils
ಆಹಾರ/ಅಡುಗೆ2 hours ago

Cooking Oils: ಭಾರತೀಯ ಅಡುಗೆ ಶೈಲಿಗೆ ಯೋಗ್ಯವಾದ 7 ಅಡುಗೆ ಎಣ್ಣೆಗಳಿವು

Karnataka Weather
ಕರ್ನಾಟಕ2 hours ago

Karnataka Weather: ಇಂದು ಕೊಡಗು, ಹಾಸನ, ಚಿಕ್ಕಮಗಳೂರು ಸೇರಿ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ!

Sam Pitroda
ಪ್ರಮುಖ ಸುದ್ದಿ3 hours ago

ವಿಸ್ತಾರ ಸಂಪಾದಕೀಯ: ಕಾಂಗ್ರೆಸ್ ನಾಯಕನ ‘ವರ್ಣ ವ್ಯಾಖ್ಯಾನ’ ಅವಿವೇಕತನದ್ದು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ1 day ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ1 day ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ2 days ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ2 days ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ3 days ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ3 days ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ3 days ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ4 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ4 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

ಟ್ರೆಂಡಿಂಗ್‌