5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಂದ ಪಾಪಿ; ಸಿನಿಮೀಯ ರೀತಿಯಲ್ಲಿ ಬಂಧಿಸಿದ ಪೊಲೀಸರು - Vistara News

ಕ್ರೈಂ

5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಂದ ಪಾಪಿ; ಸಿನಿಮೀಯ ರೀತಿಯಲ್ಲಿ ಬಂಧಿಸಿದ ಪೊಲೀಸರು

Crime News: ಇಡೀ ದೆಹಲಿ ನಗರವೇ ಹೋಳಿ ಆಚರಣೆಯ ಸಿದ್ಧತೆಯಲ್ಲಿ ತೊಡಗಿದ್ದಾಗ ಘೋರ ಘಟನೆಯೊಂದು ನಡೆದಿತ್ತು. ಪಾಪಿಯೊಬ್ಬ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಂದು ಪರಾರಿಯಾಗಿದ್ದ. ಕೂಡಲೇ ಕಾರ್ಯ ಪ್ರವೃತ್ತರಾದ ಪೊಲೀಸರು ಆತನ ಹೆಡೆಮುರಿ ಕಟ್ಟಿ ಬಂಧಿಸಿದ್ದಾರೆ.

VISTARANEWS.COM

on

crime news
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಹೋಳಿ ಹಬ್ಬದ ಮುನ್ನಾ ದಿನ (ಮಾರ್ಚ್‌ 24) ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಬವಾನಾ ಪ್ರದೇಶದಲ್ಲಿ 5 ವರ್ಷದ ಬಾಲಕಿಯ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ನಡೆಸಿ ಕೊಲೆ ಮಾಡಿ, ಪರಾರಿಯಾಗುವ ಮೊದಲು ಮಗುವಿನ ಶವವನ್ನು ಕಾರ್ಖಾನೆಯಲ್ಲಿ ಬಚ್ಚಿಟ್ಟಿದ್ದ. ಸದ್ಯ ಆತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ (Crime News). 

ಘಟನೆ ಹಿನ್ನೆಲೆ

ಮಾರ್ಚ್ 24ರಂದು ಎಲ್ಲರೂ ಹೋಳಿ ಪೂರ್ವದ ಆಚರಣೆ (ಹೋಲಿಕಾ ದಹನ್)ಯಲ್ಲಿ ತೊಡಗಿದ್ದಾಗ ದೆಹಲಿಯ ಬವಾನಾ ಪೊಲೀಸ್ ಠಾಣೆಗೆ ಬಾಲಕಿ ನಾಪತ್ತೆಯಾಗಿದ್ದಾಳೆ ಎಂದು ರಾತ್ರಿ 10.27ರ ಸುಮಾರಿಗೆ ಕರೆ ಬಂದಿತ್ತು. ಬವಾನಾ ಸೆಕ್ಟರ್ 1ರಿಂದ 5 ವರ್ಷದ ಬಾಲಕಿಯನ್ನು ಅಪಹರಿಸಲಾಗಿದೆ ಎಂದು ಕರೆ ಮಾಡಿದ ವ್ಯಕ್ತಿ ತಿಳಿಸಿದ್ದ. ಚಹಾ ಅಂಗಡಿ ನಡೆಸುತ್ತಿರುವ ಬಾಲಕಿಯ ಪೋಷಕರು, ಸಂಜೆ 5 ಗಂಟೆ ಸುಮಾರಿಗೆ ಬಾಲಕಿಯನ್ನು ಕೊನೆಯದಾಗಿ ನೋಡಿದ್ದಾಗಿಯೂ ಬಳಿಕ ಅವಳನ್ನು ಹುಡುಕಲು ಪ್ರಯತ್ನಿಸಿದರೂ ಕಂಡಿ ಬಂದಿಲ್ಲ ಎಂದು ಪೊಲೀಸರಿಗೆ ತಿಳಿಸಿದ್ದರು.

ಪ್ರಕರಣ ದಾಖಲಿಸಿದ ಪೊಲೀಸರು ಪೋಷಕರೊಂದಿಗೆ ಶೋಧವನ್ನು ಪ್ರಾರಂಭಿಸಿದ್ದರು. ಬಾಲಕಿಯನ್ನು ಕೊನೆಯದಾಗಿ ನೋಡಿದ ಪ್ರದೇಶಗಳ ಸುತ್ತಲೂ ಇಡೀ ರಾತ್ರಿ ಹುಡಕಾಡಿದರೂ ಪತ್ತೆಯಾಗಿರಲಿಲ್ಲ. ಮಾರನೇ ದಿನ ಮಾರ್ಚ್ 25ರಂದು ಬೆಳಗ್ಗೆ ಪೊಲೀಸರು ಆ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದರು. ಅದರಲ್ಲಿ ಆ ಬಾಲಕಿ ಒಬ್ಬ ವ್ಯಕ್ತಿಯೊಂದಿಗೆ ನಡೆದುಕೊಂಡು ಹೋಗುತ್ತಿರುವುದನ್ನು ಕಂಡುಬಂತು. ಹುಡುಗಿಯ ಪೋಷಕರು ಆ ವ್ಯಕ್ತಿಯನ್ನು ಗುರುತಿಸಿದ್ದರು ತೋಟಾನ್ ಎಂದು ಗುರುತಿಸಿದ್ದರು.

ಕೂಡಲೇ ಪೊಲೀಸರು ತೋಟಾನ್ ಕೆಲಸ ಮಾಡುತ್ತಿದ್ದ ಸ್ಥಳಕ್ಕೆ ತೆರಳಿದರು. ಆದರೆ ಆತ ಅಲ್ಲಿಂದ ತಪ್ಪಿಸಿಕೊಂಡಿದ್ದ. ಅಲ್ಲಿದ್ದವರನ್ನು ತೀವ್ರ ವಿಚಾರಣೆಗೆ ಒಳಪಡಿಸಿದಾಗ ಆತ ನವದೆಹಲಿ ರೈಲ್ವೆ ನಿಲ್ದಾಣದಿಂದ ಹೌರಾಗೆ ತೆರಳುವ ಪೂರ್ವಾ ಎಕ್ಸ್‌ಪ್ರೆಸ್‌ ರೈಲಿಗಾಗಿ ಹೋಗಿದ್ದಾನೆ ಎನ್ನುವುದು ತಿಳಿದು ಬಂತು.

ತಕ್ಷಣ ಪೊಲೀಸರು ಕಾರ್ಯ ಪ್ರವೃತ್ತರಾದರೂ ಅವರು ಅಲ್ಲಿಗೆ ತಲುಪುವಾಗ ರೈಲು ಹೊರಟಿತ್ತು. ಬಳಿಕ ಮಾರ್ಚ್ 26ರ ಬೆಳಗ್ಗೆ ಪೊಲೀಸ್ ತಂಡವೊಂದು ಕೋಲ್ಕತಾ ವಿಮಾನ ನಿಲ್ದಾಣಕ್ಕೆ ತೆರಳಿತು. ನಂತರ ಪೊಲೀಸರು ಅಸನ್ಸೋಲ್ ರೈಲ್ವೆ ನಿಲ್ದಾಣಕ್ಕೆ ತಲುಪಿದರು. ಪೂರ್ವಾ ಎಕ್ಸ್‌ಪ್ರೆಸ್‌ ಅನ್ನು ಕೂಲಂಕುಷವಾಗಿ ಪರಿಶೀಲಿಸಿದಾಗ ಅದರಲ್ಲಿ ಆರೋಪಿ ಪತ್ತೆಯಾಗಿದ್ದ. ಮಾರ್ಚ್ 27ರಂದು ಆತನನ್ನು ದೆಹಲಿಗೆ ಕರೆತರಲಾಯಿತು.

ಇದನ್ನೂ ಓದಿ: ಮರೆಯಾದ ಮಾನವೀಯತೆ: ಮಹಿಳೆ ಮೇಲೆ ಹಲ್ಲೆ ನಡೆಸಿ ವಿವಸ್ತ್ರಗೊಳಿಸಿ ಮೆರವಣಿಗೆ; ನಾಲ್ವರು ಮಹಿಳೆಯರ ಬಂಧನ

ತಪ್ಪೊಪ್ಪಿಗೆ

ವಿಚಾರಣೆ ವೇಳೆ ಆರೋಪಿ ತೋಟಾನ್ ತಪ್ಪೊಪ್ಪಿಕೊಂಡಿದ್ದಾನೆ. ಮಾರ್ಚ್ 24ರಂದು ಸಂಜೆ 7.30ರ ಸುಮಾರಿಗೆ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಂದು ಶವವನ್ನು ಬವಾನಾದ ಕಾರ್ಖಾನೆಯಲ್ಲಿ ಎಸೆದಿದ್ದಾಗಿ ತಿಳಿಸಿದ್ದಾನೆ. ಪರಿಶೋಧನೆ ಬಳಿಕ ಬಾಲಕಿಯ ದೇಹವು ಬ್ಲೇಡ್ ಮತ್ತು ಇಟ್ಟಿಗೆಯೊಂದಿಗೆ ಪತ್ತೆಯಾಗಿದೆ. ಹೋಳಿ ಆಚರಣೆ ಹಿನ್ನೆಲೆಯಲ್ಲಿ ಕಾರ್ಖಾನೆಗೆ ರಜೆ ಸಾರಿದ್ದು ಆತನಿಗೆ ಅನುಕೂಲವಾಗಿ ಮಾರ್ಪಟ್ಟಿತ್ತು. ಸದ್ಯ ತೋಟಾನ್ ವಿರುದ್ಧ ಪೋಕ್ಸೊ ಕಾಯ್ದೆಯ ಸೆಕ್ಷನ್ 302 (ಕೊಲೆ) ಮತ್ತು 376 (ಅತ್ಯಾಚಾರ) ದಾಖಲಿಸಲಾಗಿದೆ. ಪೊಲೀಸರು ಪ್ರಕರಣದ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿದೇಶ

Gold Heist Case: ಬಹುಕೋಟಿ ಚಿನ್ನ, ವಿದೇಶಿ ಕರೆನ್ಸಿ ದರೋಡೆ; ಭಾರತೀಯ ಮೂಲದ ವ್ಯಕ್ತಿ ಲಾಕ್‌!

Gold Heist Case: ಕಳೆದ ವರ್ಷ ಏಪ್ರಿಲ್‌ 17ರಂದು 22 ಕೆನಾಡಿಯನ್‌ ಡಾಲರ್ಸ್‌ ಮೌಲ್ಯದ ವಿದೇಶಿ ಕರೆನ್ಸಿ ಮತ್ತು ಗೋಲ್ಡ್‌ ಬಿಸ್ಕೇಟ್ಸ್‌ ಇದ್ದ ಏರ್‌ ಕಾರ್ಗೋ ಕಂಟೈನರ್‌ ಅನ್ನು ನಕಲಿ ದಾಖಲೆ ಬಳಸಿ ದರೋಡೆ ಮಾಡಲಾಗಿತ್ತು. ಈ ಕಂಟೈನರ್‌ ಏರ್‌ ಕೆನಡಾ ವಿಮಾನದ ಮೂಲಕ ಸ್ವಿಡ್ಜರ್‌ಲ್ಯಾಂಡ್‌ನ ಜೂರಿಚ್‌ ಇಂದ ಟೊರೊಂಟೋ ವಿಮಾನ ನಿಲ್ದಾಣಕ್ಕೆ ಬಂದಿತ್ತು. ವಿಮಾನ ಲ್ಯಾಂಡ್‌ ಆಗ್ತಿದ್ದಂತೆ ಕಾರ್ಗೋವನ್ನು ವಿಮಾನ ನಿಲ್ದಾಣದ ಬೇರೆ ಪ್ರದೇಶಕ್ಕೆ ಸಾಗಿಲಾಗಿತ್ತು. ಇದಾದ ಬಳಿಕ ಅದು ನಿಗೂಡವಾಗಿ ಕಣ್ಮರೆ ಆಗಿತ್ತು.

VISTARANEWS.COM

on

Koo

ಒಟ್ಟವಾ: ಕೆನಡಾ(Canada)ದಲ್ಲಿ ಬಹುಕೋಟಿ ಡಾಲರ್‌ ಮೌಲ್ಯದ ಚಿನ್ನ ದರೋಡೆ ಪ್ರಕರಣ(Gold Heist Case)ಕ್ಕೆ ಸಂಬಂಧಿಸಿದಂತೆ ಭಾರತೀಯ ಮೂಲದ ವ್ಯಕ್ತಿಯನ್ನು ಟೊರೊಂಟೋ ವಿಮಾನ ನಿಲ್ದಾಣ(Pearson International Airport)ದಲ್ಲಿ ಅರೆಸ್ಟ್‌ ಮಾಡಲಾಗಿದೆ. ದೇಶದ ಇತಿಹಾಸದಲ್ಲೇ ಇದೊಂದು ಅತಿ ದೊಡ್ಡ ದರೋಡೆ ಪ್ರಕರಣವಾಗಿದ್ದು, ಈಗಾಗಲೇ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಅರೆಸ್ಟ್‌ ಮಾಡಿದೆ. ಇನ್ನು ಬಂಧಿತನನ್ನು ಅರ್ಚಿತ್‌ ಗ್ರೋವರ್‌ ಎಂದು ಗುರುತಿಸಲಾಗಿದ್ದು, ಈತನ ಬಂಧನಕ್ಕಾಗಿ ಕೆನಡಾದಾದ್ಯಂತ ವಾರೆಂಟ್‌ ಜಾರಿಗೊಳಿಸಲಾಗಿತ್ತು. ಗ್ರೋವರ್‌ ವಿರುದ್ಧ 5,000ಡಾಲರ್‌ ಕಳ್ಳತನ ಮತ್ತು ದರೋಡೆಗೆ ಸಂಚು ರೂಪಿಸಿದ ಪ್ರಕರಣ ದಾಖಲಾಗಿದೆ. ಅಲ್ಲದೇ ಅಮೆರಿಕದ ಮಿಲಿಟರಿ ಶಸ್ತ್ರಾಸ್ತ್ರ ಸಾಗಾಟ ಪ್ರಕರಣದಲ್ಲೂ ಈತನ ಹೆಸರು ಕೇಳಿ ಬಂದಿದೆ.

ಏನಿದು ದರೋಡೆ ಪ್ರಕರಣ?

ಕಳೆದ ವರ್ಷ ಏಪ್ರಿಲ್‌ 17ರಂದು 22 ಕೆನಾಡಿಯನ್‌ ಡಾಲರ್ಸ್‌ ಮೌಲ್ಯದ ವಿದೇಶಿ ಕರೆನ್ಸಿ ಮತ್ತು ಗೋಲ್ಡ್‌ ಬಿಸ್ಕೇಟ್ಸ್‌ ಇದ್ದ ಏರ್‌ ಕಾರ್ಗೋ ಕಂಟೈನರ್‌ ಅನ್ನು ನಕಲಿ ದಾಖಲೆ ಬಳಸಿ ದರೋಡೆ ಮಾಡಲಾಗಿತ್ತು. ಈ ಕಂಟೈನರ್‌ ಏರ್‌ ಕೆನಡಾ ವಿಮಾನದ ಮೂಲಕ ಸ್ವಿಡ್ಜರ್‌ಲ್ಯಾಂಡ್‌ನ ಜೂರಿಚ್‌ ಇಂದ ಟೊರೊಂಟೋ ವಿಮಾನ ನಿಲ್ದಾಣಕ್ಕೆ ಬಂದಿತ್ತು. ವಿಮಾನ ಲ್ಯಾಂಡ್‌ ಆಗ್ತಿದ್ದಂತೆ ಕಾರ್ಗೋವನ್ನು ವಿಮಾನ ನಿಲ್ದಾಣದ ಬೇರೆ ಪ್ರದೇಶಕ್ಕೆ ಸಾಗಿಲಾಗಿತ್ತು. ಇದಾದ ಬಳಿಕ ಅದು ನಿಗೂಡವಾಗಿ ಕಣ್ಮರೆ ಆಗಿತ್ತು. ಇನ್ನು ಕಾರ್ಗೋದಲ್ಲಿ 400 ಕೆಜಿ ತೂಕದ 6600 ಚಿನ್ನದ ಗಟ್ಟಿ ಇದ್ದಿದ್ದು, ಅದರ ಮೌಲ್ಯ ಸುಮಾರು 20 ಮಿಲಿಯನ್‌ ಡಾಲರ್‌ ಎಂದು ಅಂದಾಜಿಸಲಾಗಿದೆ. ಇನ್ನು ಕಾರ್ಗೋದಲ್ಲಿ 2.5 ಮಿಲಿಯನ್‌ ಡಾಲರ್‌ ಮೌಲ್ಯದ ವಿದೇಶಿ ಕರೆನ್ಸಿ ಇತ್ತು ಎನ್ನಲಾಗಿದೆ.

ಇದನ್ನೂ ಓದಿ: Lok Sabha election 2024: 4ನೇ ಹಂತದ ಮತದಾನ..ಮೈತ್ರಿಕೂಟದಲ್ಲಿ ಬಿಕ್ಕಟ್ಟು ನೂರು.. ಗೆಲುವಿನ ಲೆಕ್ಕಾಚಾರದಲ್ಲಿ ಎನ್‌ಡಿಎ ಮತ್ತು ಇಂಡಿಯಾ

ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ತಿಂಗಳು ಭಾರತ ಮೂಲದ ಪರಂಪಾಲ್‌ ಸಿಧು, ಅಮಿತ್‌ ಜಲೋಟಾ, ಅಮ್ಮದ್‌ ಚೌಧರಿ, ಅಲಿರಾಝಾ ಮತ್ತು ಪ್ರಶಾಂತ್‌ ಪರಮಲಿಂಗಂ ಎಂಬುವವರನ್ನು ಪೊಲೀಸರು ಅರೆಸ್ಟ್‌ ಮಾಡಿದ್ದರು. ಇನ್ನು ನಾಪತ್ತೆಯಾಗಿರುವ ಸಿಮ್ರನ್‌ ಪ್ರಿತ್‌ ಪನೇಸರ್‌ ಮತ್ತು ಅರ್ಸಲನ್‌ ಚೌಧರಿ ಪತ್ತೆಗೆ ಪೊಲೀಸರರು ಕೆನಡಾದಾದ್ಯಂತ ಅರೆಸ್ಟ್‌ ವಾರೆಂಟ್‌ ಜಾರಿಗೊಳಿಸಿದ್ದಾರೆ. ಇನ್ನು ಈ ಭಾರೀ ದರೋಡೆಗೆ ಕೆನಡಾ ಏರ್‌ಲೈನ್‌ ನೌಕರರು ಸಹಾಯ ಮಾಡಿರುವ ಆರೋಪ ಕೇಳಿ ಬಂದಿತ್ತು. ಒಬ್ಬನನ್ನು ಈಗಾಗಲೇ ಅರೆಸ್ಟ್‌ ಮಾಡಿದ್ದು, ಇನ್ನೊಬ್ಬನ ಬಂಧನಕ್ಕೆ ವಾರೆಂಟ್‌ ಹೊರಡಿಸಿದೆ. ಪೊಲೀಸರ ಮಾಹಿತಿ ಪ್ರಕಾರ ತನಿಖಾಧಿಕಾರಿಗಳು ಸುಮಾರು ಕೆನಡಾದ ಡಾಲರ್ 89,000 ಮೌಲ್ಯದ ಒಂದು ಕಿಲೋಗ್ರಾಂ ಚಿನ್ನ, ಸುಮಾರು 434,000 ಡಾಲರ್‌ ಮೌಲ್ಯದ ಕೆನಡಾದ ಕರೆನ್ಸಿಯನ್ನೂ ವಶಕ್ಕೆ ಪಡೆಯಲಾಗಿದೆ.

Continue Reading

ಹುಬ್ಬಳ್ಳಿ

Murder case : ಸರ್ಕಾರಿ ಶಾಲೆಯಲ್ಲಿ ಹರಿದ ನೆತ್ತರು; ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ

Murder case : ಹುಬ್ಬಳ್ಳಿಯಲ್ಲಿ‌ ವ್ಯಕ್ತಿಯೊಬ್ಬನ ಬರ್ಬರ ಹತ್ಯೆಯಾಗಿದೆ. ಸರ್ಕಾರಿ ಶಾಲೆಯೊಂದರ ಕೊಠಡಿಯೊಳಗೆ ವ್ಯಕ್ತಿ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

VISTARANEWS.COM

on

By

Murder Case in hubballi
Koo

ಹುಬ್ಬಳ್ಳಿ: ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ಕೊಲೆಯಾಗಿ (Murder case) ಹೋಗಿದ್ದಾನೆ. ದುಷ್ಕರ್ಮಿಗಳು ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾರೆ. ಹುಬ್ಬಳ್ಳಿ (Hubballi News) ತಾಲೂಕಿನ ಹಳ್ಯಾಳ ಗ್ರಾಮದಲ್ಲಿ ಘಟನೆ ನಡೆದಿದೆ.

ಶರೀಫ್‌ಸಾಬ್ ಕಮಡೊಳ್ಳಿ ಎಂಬಾತ ಹತ್ಯೆಯಾದವನು. ಹಳ್ಯಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹೊಸ ಕೊಠಡಿಯಲ್ಲೆ ಶರೀಪ್‌ಸಾಬ್‌ನ ಕೊಲೆಯಾಗಿದೆ. ಶಶಿಧರ ಚೆನ್ನೋಜಿ ಎಂಬಾತ ಕೊಲೆ ಆರೋಪಿ ಎಂದು ಶಂಕಿಸಲಾಗಿದೆ.

ಸದ್ಯ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ರಕ್ತಸಿಕ್ತವಾಗಿದ್ದ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಪೊಲೀಸರು ಹುಡುಕಾಟವನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ: Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

ಮೂರು ಮಂದಿಯನ್ನು ಕೊಂದು ಅಬ್ಬರಿಸಿದ ರೌಡಿ ಶೀಟರ್‌ ಕಾಲಿಗೆ ಗುಂಡೇಟು, ಬಂಧನ

ಶಿವಮೊಗ್ಗ: ಶಿವಮೊಗ್ಗದಲ್ಲಿ ನಡೆದಿದ್ದ ಗ್ಯಾಂಗ್ ವಾರ್ (Shimogga Gang War) ಪ್ರಕರಣದಲ್ಲಿ ಮೂವರನ್ನು ನಡುಬೀದಿಯಲ್ಲಿ ಕೊಚ್ಚಿ ಕೊಲೆ (Triple Murder Case) ಮಾಡಿದ್ದ ಆರೋಪಿಗಳಲ್ಲಿ ಒಬ್ಬ ರೌಡಿ ಶೀಟರ್‌ (Rowdy Sheeter) ಕಾಲಿಗೆ ಪೊಲೀಸರು ಗುಂಡು ಹಾರಿಸಿ (Shoot out) ಬಂಧಿಸಿದ್ದಾರೆ.

ತ್ರಿಬಲ್ ಮರ್ಡರ್ ಪ್ರಕರಣದ ಆರೋಪಿ, ರೌಡಿ ಶೀಟರ್ ಶೋಹಿಬ್ ಕಾಲಿಗೆ ಪೊಲೀಸರು ಶೂಟ್‌ ಮಾಡಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯ ಬೀರನಕೆರೆ ಬಳಿ ರೌಡಿ ಶೀಟರ್ ಶೋಹಿಬ್‌ನನ್ನು ಬಂಧಿಸಲು ಹೋದಾಗ ಆತ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದ. ಪಿಎಸ್ಐ ಕುಮಾರ್ ಹಾಗೂ ಹೆಡ್ ಕಾನ್ಸ್‌ಟೇಬಲ್ ಅಣ್ಣಪ್ಪ ಮೇಲೆ ಹಲ್ಲೆಗೆ ಯತ್ನಿಸಿದ್ದ ಶೋಹಿಬ್‌ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಗಾಯಗೊಳಿಸಿ ಬಂಧಿಸಿದರು.

ಶಿವಮೊಗ್ಗ ನಗರದ ಲಷ್ಕರ್ ಮೊಹಲ್ಲಾ ಸರ್ಕಲ್ ಬಳಿ ಗ್ಯಾಂಗ್‌ ವಾರ್‌ ನಡೆದಿತ್ತು. ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್‌ಗಳನ್ನು ಕೊಚ್ಚಿ ಕೊಲೆ (Murder Case) ಮಾಡಲಾಗಿತ್ತು. ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಭೀಕರವಾಗಿ ದುಷ್ಕರ್ಮಿಗಳು ಕೊಲೆ ಮಾಡಿದ್ದರು. ತುಂಗಾನಗರ ಠಾಣಾ ವ್ಯಾಪ್ತಿಯ ರೌಡಿಶೀಟರ್ ಶೋಹೆಬ್ ಅಲಿಯಾಸ್ ಸೇಬು‌, ದೊಡ್ಡಪೇಟೆ ಠಾಣಾ ವ್ಯಾಪ್ತಿಯ ರೌಡಿಶೀಟರ್ ಗೌಸ್ ಹತ್ಯೆಯಾಗಿತ್ತು. ಚಾಕುವಿನಿಂದ ತಿವಿತಕ್ಕೊಳಗಾಗಿ ತೀವ್ರವಾಗಿ ಗಾಯಗೊಂಡಿದ್ದ ಯಾಸೀನ್‌ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ.

ಮೊದಲಿಗೆ ಮೃತ ಯುವಕರ ಕಡೆಯ ಗುಂಪು ರೌಡಿ ಶೀಟರ್ ಯಾಸೀನ್ ಕುರೇಶಿ ಎಂಬಾತನ ಮೇಲೆ ದಾಳಿ ಮಾಡಿದೆ. ಹೀಗಾಗಿ ಯಾಸೀನ್ ಕುರೇಶಿ ಗ್ಯಾಂಗ್ ಪ್ರತಿದಾಳಿ ನಡೆಸಿ, ಹಲ್ಲೆ ಮಾಡಲು ಬಂದಿದ್ದ ಶೋಹೆ‌ಬ್, ಗೌಸ್‌ನನ್ನು ಕೊಲೆ ಮಾಡಿದ್ದಾರೆ. ಬ್ಯಾಟ್, ಲಾಂಗುಗಳಿಂದ ಹೊಡೆದು, ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಘಟನೆ ಹಿನ್ನೆಲೆಯಲ್ಲಿ ಘಟನಾ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Hit and Run: ಆಟೋಗೆ ಗುದ್ದಿ ವಿದ್ಯಾರ್ಥಿನಿಯನ್ನು ಕೊಂದು ಪರಾರಿಯಾದ ಕ್ಯಾಂಟರ್ ಚಾಲಕ

Hit and Run: ಶಿವಮೊಗ್ಗ ತಾಲೂಕಿನ ತಾವರೆ ಚಟ್ನಳ್ಳಿ ಗ್ರಾಮದ ಬಳಿ ದುರ್ಘಟನೆ ನಡೆದಿದೆ. ಅತಿ ವೇಗ ಹಾಗೂ ನಿರ್ಲಕ್ಷ್ಯದಿಂದ ಚಲಾಯಿಸಿದ ಕ್ಯಾಂಟರ್ ಚಾಲಕ ಅಪಘಾತಕ್ಕೆ ಕಾರಣನಾಗಿದ್ದಾನೆ. ಆಟೋಗೆ ಗುದ್ದಿ ಅದು ಪಲ್ಟಿಯಾದರೂ ನಿಲ್ಲಿಸದೆ ಕ್ಯಾಂಟರ್‌ ಚಲಾಯಿಸಿಕೊಂಡು ಪರಾರಿಯಾಗಿದ್ದಾನೆ. ಆಟೋದಲ್ಲಿದ್ದ ವಿದ್ಯಾರ್ಥಿನಿ ಗಾನವಿ (17) ಸಾವಿಗೀಡಾಗಿದ್ದಾಳೆ.

VISTARANEWS.COM

on

shivamogga road accident hit and run
Koo

ಶಿವಮೊಗ್ಗ: ರಸ್ತೆ ಅಪಘಾತವೊಂದರಲ್ಲಿ (Road Accident) ಆಟೋ ರಿಕ್ಷಾಗೆ ಗುದ್ದಿ (Auto hit by Canter) ವಿದ್ಯಾರ್ಥಿನಿ ಸ್ಥಳದಲ್ಲೇ ಸಾವಿಗೀಡಾಗಲು (Student death) ಕಾರಣನಾಗಿ ನಿಲ್ಲಿಸದೆ ಪರಾರಿಯಾದ (Hit and Run) ಕ್ಯಾಂಟರ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಡೆಡ್ಲಿ ಆಕ್ಸಿಡೆಂಟ್ (Shivamogga accident) ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಶಿವಮೊಗ್ಗ ತಾಲೂಕಿನ ತಾವರೆ ಚಟ್ನಳ್ಳಿ ಗ್ರಾಮದ ಬಳಿ ದುರ್ಘಟನೆ ನಡೆದಿದೆ. ಅತಿ ವೇಗ ಹಾಗೂ ನಿರ್ಲಕ್ಷ್ಯದಿಂದ ಚಲಾಯಿಸಿದ ಕ್ಯಾಂಟರ್ ಚಾಲಕ ಅಪಘಾತಕ್ಕೆ ಕಾರಣನಾಗಿದ್ದಾನೆ. ಆಟೋಗೆ ಗುದ್ದಿ ಅದು ಪಲ್ಟಿಯಾದರೂ ನಿಲ್ಲಿಸದೆ ಕ್ಯಾಂಟರ್‌ ಚಲಾಯಿಸಿಕೊಂಡು ಪರಾರಿಯಾಗಿದ್ದಾನೆ. ಆಟೋದಲ್ಲಿದ್ದ ವಿದ್ಯಾರ್ಥಿನಿ ಗಾನವಿ (17) ಸಾವಿಗೀಡಾಗಿದ್ದಾಳೆ.

ಇನ್ನು ಆಟೋದಲ್ಲಿದ್ದ ಗಾನವಿಯ ತಾಯಿ ಹಾಗೂ ಅಜ್ಜಿಗೆ ಗಂಭೀರ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಆಟೋ ಚಾಲಕನಿಗೂ ಗಾಯಗಳಾಗಿವೆ. ಗಾನವಿ ತಾವರೆ ಚಟ್ನಳ್ಳಿಯ ಪೇಸ್ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದಳು. ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ನಿವಾಸಿಯಾಗಿರುವ ಈಕೆ ರಜೆ ಊರಿಗೆ ತೆರಳಿದ್ದು, ಕಾರ್ಯಕ್ರಮ ಮುಗಿಸಿ ಕಾಲೇಜಿಗೆ ವಾಪಸ್ ಆಗುವಾಗ ಅಪಘಾತ ಸಂಭವಿಸಿದೆ.

ಏಕಾಏಕಿ ಬಂದ ಕ್ಯಾಂಟರ್ ಆಟೋಗೆ ಡಿಕ್ಕಿ ಹೊಡೆದಿದ್ದು, ಡಿಕ್ಕಿ ರಭಸಕ್ಕೆ ಆಟೋ ಸಂಪೂರ್ಣ ಜಖಂ ಆಗಿದೆ. ಹಿಂಡ್ ಆಂಡ್ ರನ್ ಮಾಡಿದ ಕ್ಯಾಂಟರ್‌ ಚಾಲಕನನ್ನು ಪೊಲೀಸರು ಚೀಲೂರಿನಲ್ಲಿ ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗದ ಪೂರ್ವ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂರು ಮಂದಿಯನ್ನು ಕೊಂದು ಅಬ್ಬರಿಸಿದ ರೌಡಿ ಶೀಟರ್‌ ಕಾಲಿಗೆ ಗುಂಡೇಟು

ಶಿವಮೊಗ್ಗ: ಶಿವಮೊಗ್ಗದಲ್ಲಿ ನಡೆದಿದ್ದ ಗ್ಯಾಂಗ್ ವಾರ್ (Shimogga Gang War) ಪ್ರಕರಣದಲ್ಲಿ ಮೂವರನ್ನು ನಡುಬೀದಿಯಲ್ಲಿ ಕೊಚ್ಚಿ ಕೊಲೆ (Triple Murder Case) ಮಾಡಿದ್ದ ಆರೋಪಿಗಳಲ್ಲಿ ಒಬ್ಬ ರೌಡಿ ಶೀಟರ್‌ (Rowdy Sheeter) ಕಾಲಿಗೆ ಪೊಲೀಸರು ಗುಂಡು ಹಾರಿಸಿ (Shoot out) ಬಂಧಿಸಿದ್ದಾರೆ.

ತ್ರಿಬಲ್ ಮರ್ಡರ್ ಪ್ರಕರಣದ ಆರೋಪಿ, ರೌಡಿ ಶೀಟರ್ ಶೋಹಿಬ್ ಕಾಲಿಗೆ ಪೊಲೀಸರು ಶೂಟ್‌ ಮಾಡಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯ ಬೀರನಕೆರೆ ಬಳಿ ರೌಡಿ ಶೀಟರ್ ಶೋಹಿಬ್‌ನನ್ನು ಬಂಧಿಸಲು ಹೋದಾಗ ಆತ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದ. ಪಿಎಸ್ಐ ಕುಮಾರ್ ಹಾಗೂ ಹೆಡ್ ಕಾನ್ಸ್‌ಟೇಬಲ್ ಅಣ್ಣಪ್ಪ ಮೇಲೆ ಹಲ್ಲೆಗೆ ಯತ್ನಿಸಿದ್ದ ಶೋಹಿಬ್‌ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಗಾಯಗೊಳಿಸಿ ಬಂಧಿಸಿದರು.

ಶಿವಮೊಗ್ಗ ನಗರದ ಲಷ್ಕರ್ ಮೊಹಲ್ಲಾ ಸರ್ಕಲ್ ಬಳಿ ಗ್ಯಾಂಗ್‌ ವಾರ್‌ ನಡೆದಿತ್ತು. ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್‌ಗಳನ್ನು ಕೊಚ್ಚಿ ಕೊಲೆ (Murder Case) ಮಾಡಲಾಗಿತ್ತು. ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಭೀಕರವಾಗಿ ದುಷ್ಕರ್ಮಿಗಳು ಕೊಲೆ ಮಾಡಿದ್ದರು. ತುಂಗಾನಗರ ಠಾಣಾ ವ್ಯಾಪ್ತಿಯ ರೌಡಿಶೀಟರ್ ಶೋಹೆಬ್ ಅಲಿಯಾಸ್ ಸೇಬು‌, ದೊಡ್ಡಪೇಟೆ ಠಾಣಾ ವ್ಯಾಪ್ತಿಯ ರೌಡಿಶೀಟರ್ ಗೌಸ್ ಹತ್ಯೆಯಾಗಿತ್ತು. ಚಾಕುವಿನಿಂದ ತಿವಿತಕ್ಕೊಳಗಾಗಿ ತೀವ್ರವಾಗಿ ಗಾಯಗೊಂಡಿದ್ದ ಯಾಸೀನ್‌ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ.

ಮೊದಲಿಗೆ ಮೃತ ಯುವಕರ ಕಡೆಯ ಗುಂಪು ರೌಡಿ ಶೀಟರ್ ಯಾಸೀನ್ ಕುರೇಶಿ ಎಂಬಾತನ ಮೇಲೆ ದಾಳಿ ಮಾಡಿದೆ. ಹೀಗಾಗಿ ಯಾಸೀನ್ ಕುರೇಶಿ ಗ್ಯಾಂಗ್ ಪ್ರತಿದಾಳಿ ನಡೆಸಿ, ಹಲ್ಲೆ ಮಾಡಲು ಬಂದಿದ್ದ ಶೋಹೆ‌ಬ್, ಗೌಸ್‌ನನ್ನು ಕೊಲೆ ಮಾಡಿದ್ದಾರೆ. ಬ್ಯಾಟ್, ಲಾಂಗುಗಳಿಂದ ಹೊಡೆದು, ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಘಟನೆ ಹಿನ್ನೆಲೆಯಲ್ಲಿ ಘಟನಾ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ಸ್ಯಾಂಡಲ್ ವುಡ್ ನಟ ಚೇತನ್ ಚಂದ್ರ ಮೇಲೆ ಹಲ್ಲೆ

ಬೆಂಗಳೂರು: ಸ್ಯಾಂಡಲ್ ವುಡ್ ನಟ ಚೇತನ್ ಚಂದ್ರ ಅವರ ಮೇಲೆ ಹಲ್ಲೆ ಮಾಡಿರುವ ಘಟನೆ (Chetan Chandra) ನಗರದ ಕನಕಪುರ ರಸ್ತೆಯ ಕಗ್ಗಲಿಪುರದಲ್ಲಿ ನಡೆದಿದೆ. ಪಿಯುಸಿ, ರಾಜಧಾನಿ, ಜರಾಸಂಧ, ಪ್ರಭುತ್ವ ಚಿತ್ರಗಳ ಮೂಲಕ ಖ್ಯಾತವಾಗಿರುವ ನಟನ ಮೇಲೆ ಭಾನುವಾರ ಹಲ್ಲೆ ನಡೆದಿದೆ.

ಕಾರಿನಲ್ಲಿದ್ದ ನಟ ಚೇತನ್ ಚಂದ್ರ ಅವರನ್ನು ರಕ್ತ ಬರುವಂತೆ ಥಳಿಸಲಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ನಟ ಚೇತನ್ ಚಂದ್ರ ಮಾಹಿತಿ ಹಂಚಿಕೊಂಡಿದ್ದಾರೆ. ನಟನ ಮೇಲೆ 20ಕ್ಕೂ ಹೆಚ್ಚು ಮಂದಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದ್ದು, ಈ ಪೈಕಿ ಒಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ನಟ ಚೇತನ್‌ ಚಂದ್ರ ಅವರಿಗೆ ಕಗ್ಗಲಿಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.

ಇದನ್ನೂ ಓದಿ | Ram Charan: ಚುನಾವಣಾ ಪ್ರಚಾರದ ವೇಳೆ ರಾಮ್ ಚರಣ್ ಶರ್ಟ್‌ ಹರಿದ ಫ್ಯಾನ್ಸ್‌: ಅಲ್ಲು ಸುತ್ತ ಜನವೋ ಜನ!

ಭಾನುವಾರ ಅಮ್ಮಂದಿರ ದಿನವಾಗಿದ್ದರಿಂದ ನಟ ಚೇತನ್ ಚಂದ್ರ ಅವರು ದೇವಸ್ಥಾನಕ್ಕೆ ಹೋಗಿ ಬರುವಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ಬೈಕ್‌ನಲ್ಲಿ ಬಂದ ಕೆಲ ಕಿಡಿಗೇಡಿಗಳು ಕಾರಿಗೆ ಅಡ್ಡ ಹಾಕಿ, ದುಡ್ಡು ಕೀಳಲು ಮುಂದಾಗಿದ್ದಾರೆ. ಹಣ ಕೊಡೋದಿಲ್ಲ ಎಂದಿದ್ದಕ್ಕೆ ಗಲಾಟೆ ಮಾಡಿ, ನಟ ಚೇತನ್ ಚಂದ್ರ ಅವರ ಮುಖಕ್ಕೆ ರಕ್ತ ಬರುವ ಹಾಗೆ ಕಿಡಿಗೇಡಿಗಳು ಹೊಡೆದಿದ್ದಾರೆ.

ಇದನ್ನೂ ಓದಿ: Murder Case: ಶಿವಮೊಗ್ಗದಲ್ಲಿ ಗ್ಯಾಂಗ್ ವಾರ್; ಹಾಡಹಗಲೇ ಇಬ್ಬರು ರೌಡಿಶೀಟರ್‌ಗಳ ಭೀಕರ ಹತ್ಯೆ

Continue Reading

ಕ್ರೈಂ

Murder Case: ಮೂರು ಮಂದಿಯನ್ನು ಕೊಂದು ಅಬ್ಬರಿಸಿದ ರೌಡಿ ಶೀಟರ್‌ ಕಾಲಿಗೆ ಗುಂಡೇಟು, ಬಂಧನ

Murder Case: ತ್ರಿಬಲ್ ಮರ್ಡರ್ ಪ್ರಕರಣದ ಆರೋಪಿ, ರೌಡಿ ಶೀಟರ್ ಶೋಹಿಬ್ ಕಾಲಿಗೆ ಪೊಲೀಸರು ಶೂಟ್‌ ಮಾಡಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯ ಬೀರನಕೆರೆ ಬಳಿ ರೌಡಿ ಶೀಟರ್ ಶೋಹಿಬ್‌ನನ್ನು ಬಂಧಿಸಲು ಹೋದಾಗ ಆತ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದ.

VISTARANEWS.COM

on

shivamogga triple murder case

Advertisement
CBSE 12th results 2024
ಪ್ರಮುಖ ಸುದ್ದಿ30 mins ago

CBSE 12th Results 2024: ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಪ್ರಕಟ, 87.98% ಪಾಸ್‌

ವಿದೇಶ39 mins ago

Gold Heist Case: ಬಹುಕೋಟಿ ಚಿನ್ನ, ವಿದೇಶಿ ಕರೆನ್ಸಿ ದರೋಡೆ; ಭಾರತೀಯ ಮೂಲದ ವ್ಯಕ್ತಿ ಲಾಕ್‌!

Murder Case in hubballi
ಹುಬ್ಬಳ್ಳಿ45 mins ago

Murder case : ಸರ್ಕಾರಿ ಶಾಲೆಯಲ್ಲಿ ಹರಿದ ನೆತ್ತರು; ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ

Kareena Kapoor Saif Ali Khan share a kiss in front of paparazzi
ಬಾಲಿವುಡ್45 mins ago

Kareena Kapoor: ರೊಮ್ಯಾಂಟಿಕ್‌ ಮೂಡ್‌ನಲ್ಲಿ ಸೈಫ್-ಕರೀನಾ: ಫೋಟೊಗ್ರಾಫರ್‌ಗಳ ಮುಂದೆಯೇ ಕಿಸ್ಸಿಂಗ್‌!

shivamogga road accident hit and run
ಕ್ರೈಂ1 hour ago

Hit and Run: ಆಟೋಗೆ ಗುದ್ದಿ ವಿದ್ಯಾರ್ಥಿನಿಯನ್ನು ಕೊಂದು ಪರಾರಿಯಾದ ಕ್ಯಾಂಟರ್ ಚಾಲಕ

Karnataka Rain
ಮಳೆ1 hour ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

Lok Sabha Election 2024
ದೇಶ2 hours ago

Lok Sabha election 2024: 4ನೇ ಹಂತದ ಮತದಾನ..ಮೈತ್ರಿಕೂಟದಲ್ಲಿ ಬಿಕ್ಕಟ್ಟು ನೂರು.. ಗೆಲುವಿನ ಲೆಕ್ಕಾಚಾರದಲ್ಲಿ ಎನ್‌ಡಿಎ ಮತ್ತು ಇಂಡಿಯಾ

Lok Sabha Elections 2024 Jr NTR, Allu Arjun, Chiranjeevi cast votes
ಟಾಲಿವುಡ್2 hours ago

Lok Sabha Elections 2024: ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಟಾಲಿವುಡ್ ಸ್ಟಾರ್ಸ್‌​!

shivamogga triple murder case
ಕ್ರೈಂ2 hours ago

Murder Case: ಮೂರು ಮಂದಿಯನ್ನು ಕೊಂದು ಅಬ್ಬರಿಸಿದ ರೌಡಿ ಶೀಟರ್‌ ಕಾಲಿಗೆ ಗುಂಡೇಟು, ಬಂಧನ

Turbo Trailer Out mammoottys raj b shetty looks menacing
ಮಾಲಿವುಡ್2 hours ago

Turbo Trailer Out: ಮಮ್ಮುಟ್ಟಿ ನಟನೆಯ ‘ಟರ್ಬೋ’ ಟ್ರೈಲರ್‌ ಔಟ್‌: ರಾಜ್‌ ಬಿ ಶೆಟ್ಟಿ ಖದರ್‌ಗೆ ಫ್ಯಾನ್ಸ್‌ ಫಿದಾ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 hour ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

karnataka weather forecast karnataka rains
ಮಳೆ6 hours ago

Karnataka Weather : ವಾಯುಭಾರ ಕುಸಿತ; ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ7 hours ago

Dina Bhavishya : ಇಂದು ಹೂಡಿಕೆ ಮಾಡಿದರೆ ಗಳಿಸುವಿರಿ ಭಾರಿ ಲಾಭ; ಅನಿರೀಕ್ಷಿತ ಸುದ್ದಿಯಿಂದ ಸಂತಸ

Prajwal Revanna Case I was never kidnapped and son has made a false complaint Video of victim goes viral
ಕ್ರೈಂ18 hours ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

Karnataka Weather Forecast Heavy rain in chikkmagalur
ಮಳೆ19 hours ago

Karnataka Weather : ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ; ಬೃಹತ್‌ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

Prajwal Revanna Case Naveen Gowda post against MLA A Manju
ರಾಜಕೀಯ19 hours ago

Prajwal Revanna Case: ಪ್ರಜ್ವಲ್‌ ಪೆನ್‌ಡ್ರೈವ್‌ ವಿಡಿಯೊ ವೈರಲ್‌ಗೆ ಟ್ವಿಸ್ಟ್‌; ಶಾಸಕ ಎ. ಮಂಜು ವಿರುದ್ಧ ನವೀನ್‌ ಗೌಡ ಪೋಸ್ಟ್‌!

Prajwal Revanna Case: Beware of making a statement Parameshwara warns to HD Kumaraswamy
ಕ್ರೈಂ22 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಕೇಸ್‌; ನಿಮ್ಮನ್ನೂ ವಿಚಾರಣೆಗೆ ಕರೆಯಬೇಕಾಗುತ್ತದೆ: ಎಚ್‌ಡಿಕೆಗೆ ಪರಮೇಶ್ವರ್‌ ವಾರ್ನಿಂಗ್‌!

Prajwal Revanna Case Two people of pen drive allottees arrested
ಕ್ರೈಂ24 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಕೇಸ್‌; ಇಬ್ಬರು ಪೆನ್‌ಡ್ರೈವ್‌ ಹಂಚಿಕೆದಾರರ ಅರೆಸ್ಟ್‌

Dina Bhavishya
ಭವಿಷ್ಯ1 day ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

Bengaluru News
ಬೆಂಗಳೂರು2 days ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

ಟ್ರೆಂಡಿಂಗ್‌