Lok Sabha Election 2024: ಕಲಬುರಗಿಯಲ್ಲಿ ನಡೆಯುತ್ತಾ ʼದೊಡ್ಡಮನಿʼ ಆಟ? ಸಂಸದ ಜಾದವ್‌ ಪ್ಲ್ಯಾನ್‌ ಏನು? - Vistara News

Lok Sabha Election 2024

Lok Sabha Election 2024: ಕಲಬುರಗಿಯಲ್ಲಿ ನಡೆಯುತ್ತಾ ʼದೊಡ್ಡಮನಿʼ ಆಟ? ಸಂಸದ ಜಾದವ್‌ ಪ್ಲ್ಯಾನ್‌ ಏನು?

Lok Sabha Election 2024: ರಾಧಾಕೃಷ್ಣ ದೊಡ್ಡಮನಿ ಅವರು ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯ. ಅಲ್ಲದೆ, ಪೀಪಲ್‌ ಆಫ್ ಎಜುಕೇಶನ್ ಟ್ರಸ್ಟ್ ಅಧ್ಯಕ್ಷರಾಗಿದ್ದಾರೆ. ಅಲ್ಲದೆ, ಮಾವ ಮಲ್ಲಿಕಾರ್ಜುನ ಖರ್ಗೆಯವರ ರಾಜಕೀಯ ವ್ಯವಹಾರ ಸೇರಿದಂತೆ ಅವರ ಇನ್ನಿತರ ವಹಿವಾಟುಗಳ ನಿರ್ವಹಣೆಯನ್ನು ಮಾಡುತ್ತಿದ್ದರು. ಈಗ ಲೋಕಸಭಾ ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದು, ಕ್ಷೇತ್ರದ ಜನರನ್ನು ಹೇಗೆ ಮ್ಯಾನೇಜ್‌ ಮಾಡುತ್ತಾರೆ ಎಂಬುದು ಕುತೂಹಲವಾಗಿದೆ. ಅತ್ತ ಬಿಜೆಪಿ ಅಭ್ಯರ್ಥಿ ಉಮೇಶ್‌ ಜಾದವ್‌ ಸಹ ಟಕ್ಕರ್‌ ಕೊಡಲು ರೆಡಿಯಾಗಿದ್ದು, ರಾಜಕೀಯ ಹಣಾಹಣಿ ಕುತೂಹಲವನ್ನು ಮೂಡಿಸಿದೆ.

VISTARANEWS.COM


on

Lok Sabha Election 2024 and Fight between Radhakrishna Doddamani and Umesh Jadhav in Kalaburagi and Mallikarjuna Kharge strategy for election campaign
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಿಶ್ವಕುಮಾರ್ ಭೋಗನಳ್ಳಿ, ಕಲಬುರಗಿ
ಲೋಕಸಭಾ ಚುನಾವಣೆ (Lok Sabha Election 2024) ಸಮೀಪಿಸುತ್ತಿದ್ದಂತೆ ರಾಜಕೀಯ ಚಟುವಟಿಕೆ ಗರಿಗೆದರಿವೆ. ಎಲ್ಲ ರಾಜಕೀಯ ಪಕ್ಷಗಳು ಅಭ್ಯರ್ಥಿಗಳ ಆಯ್ಕೆಯಲ್ಲಿ ಬಹಳ ಕಸರತ್ತು ನಡೆಸಿವೆ. ಯಾರನ್ನು ಕಣಕ್ಕಿಳಿಸಿದರೆ ಇಲ್ಲಿ ಗೆಲುವು ಸುಲಭ? ಜಾತಿ ಲೆಕ್ಕಾಚಾರವೇನು? ಎದುರಾಳಿಯನ್ನು ಕಟ್ಟಿಹಾಕುವುದು ಹೇಗೆ? ಎಂಬಿತ್ಯಾದಿ ಅಂಶಗಳ ಆಧಾರದ ಮೇಲೆ ಟಿಕೆಟ್‌ ನೀಡಲಾಗಿದೆ. ಅದೇ ರೀತಿಯಾಗಿ ಕಲಬುರಗಿ ಲೋಕಸಭಾ ಕ್ಷೇತ್ರದ (Kalaburagi Lok Sabha constituency) ಕಾಂಗ್ರೆಸ್‌ ಅಭ್ಯರ್ಥಿಯ ಆಯ್ಕೆಯನ್ನು ಮಾಡಲಾಗಿದೆ. ಕುಟುಂಬ ರಾಜಕಾರಣದ ಅಪಖ್ಯಾತಿ ನಡುವೆಯೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjuna Kharge) ಅವರು ತಮ್ಮ ಅಳಿಯ ರಾಧಾಕೃಷ್ಣ ದೊಡ್ಡಮನಿ (Radhakrishna Doddamani) ಅವರನ್ನು ಕಣಕ್ಕಿಳಿಸಿದ್ದಾರೆ. ಆದರೆ, ಇಲ್ಲಿ ಕೈಪಡೆಗೆ ಪ್ರಚಾರದ ಸರಕಿನ ಕೊರತೆ ಇದೆಯೇ? ಎಂಬ ಪ್ರಶ್ನೆ ಎದುರಾಗಿದೆ. ಇನ್ನು ಬಿಜೆಪಿ ಸಂಸದ, ಹಾಲಿ ಅಭ್ಯರ್ಥಿ ಉಮೇಶ್‌ ಜಾದವ್‌ ಸಹ ಟಕ್ಕರ್‌ ಕೊಡಲು ಸಿದ್ಧರಾಗಿದ್ದು, ಗೆಲುವಿನ ಗುರಿ ಮುಟ್ಟಲು ಅವರು ಸಾಕಷ್ಟು ಬೆವರು ಹರಿಸಬೇಕಿದೆ.

ಲೋಕಸಭಾ ಚುನಾವಣೆ ಕಾವು ಆರಂಭವಾದಾಗಿನಿಂದಲೂ ಕಲಬುರಗಿ ಕಾಂಗ್ರೆಸ್ ಅಭ್ಯರ್ಥಿ ಯಾರಾಗುತ್ತಾರೆ ಎಂಬುದು ಬಹಳ ಚರ್ಚೆಗೆ ಬಂದಿದ್ದ ವಿಷಯವಾಗಿತ್ತು. ಇಲ್ಲಿ ಎಐಸಿಸಿ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರೇ ಸ್ಪರ್ಧೆ ಮಾಡಿದರೆ ಸೂಕ್ತ. ಅವರೇ ಹಾಲಿ ಸಂಸದ ಉಮೇಶ್‌ ಜಾದವ್‌ಗೆ ಟಕ್ಕರ್‌ ಕೊಡಲು ಸೂಕ್ತ ಅಭ್ಯರ್ಥಿ ಎಂದು ಕಾಂಗ್ರೆಸ್‌ ವಲಯದಲ್ಲಿ ಚರ್ಚೆ ನಡೆದಿತ್ತು. ಆದರೆ, ಖರ್ಗೆ ಮಾತ್ರ ಗುಟ್ಟು ಬಿಟ್ಟುಕೊಟ್ಟಿರಲಿಲ್ಲ. ಟಿಕೆಟ್‌ ಆಯ್ಕೆ ವಿಷಯ ಬಂದಾಗ ತಮ್ಮ ಅಳಿಯನಿಗೆ ಟಿಕೆಟ್‌ ಕೊಟ್ಟಿದ್ದಾರೆ. ಹೀಗಾಗಿ ಮುಂದಿನ ರಾಜಕೀಯದಾಟ ಕುತೂಹಲವನ್ನು ಕೆರಳಿಸಿದೆ.

ಖರ್ಗೆ ಸ್ಪರ್ಧೆಗೆ ಹೆದರಿದರೇ?

ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರವಿದೆ. ಗ್ಯಾರಂಟಿ ಯೋಜನೆಗಳು ಜಾರಿ ಮಾಡಿದ್ದು, ಜನಪ್ರಿಯತೆಯನ್ನು ಹೊಂದಿದೆ. ಇಷ್ಟಾದರೂ ಮಲ್ಲಿಕಾರ್ಜುನ ಖರ್ಗೆ ಅವರು ಸ್ಪರ್ಧೆ ಮಾಡಲು ಹಿಂದೇಟು ಹಾಕಿದ್ದು ಏಕೆ? ಎಂಬ ಪ್ರಶ್ನೆ ಹಲವರನ್ನು ಕಾಡಿತ್ತು. ಆದರೆ, ಖರ್ಗೆ ಅವರು ಈಗ ಸಾಮಾನ್ಯ ಸ್ಥಾನದಲ್ಲಿಲ್ಲ. ಅವರೀಗ ಎಐಸಿಸಿ ಅಧ್ಯಕ್ಷರು. ಇಡೀ ಕಾಂಗ್ರೆಸ್‌ ಪಕ್ಷವನ್ನು ಮುನ್ನಡೆಸುತ್ತಿರುವ ವ್ಯಕ್ತಿಯಾಗಿದ್ದಾರೆ. ಇಂಥ ಸಂದರ್ಭದಲ್ಲಿ ಸ್ಪರ್ಧೆ ಮಾಡಿ ಒಂದು ವೇಳೆ ಸೋಲು ಕಂಡರೆ ಅದು ಅವರೊಬ್ಬರ ಸೋಲಾಗಿ ಉಳಿಯುವುದಿಲ್ಲ. ಇಡೀ ಕಾಂಗ್ರೆಸ್‌ನ ಸೋಲು ಎಂದೇ ಬಿಂಬಿಸಲಾಗುತ್ತದೆ. ಅಲ್ಲದೆ, ತಮಗೆ ಈಗಾಗಲೇ ಸಾಕಷ್ಟು ವಯಸ್ಸಾಗಿದೆ. ಈ ವಯಸ್ಸಿನಲ್ಲಿ ಅಭ್ಯರ್ಥಿಯಾದರೆ ಪ್ರಚಾರ ಕಾರ್ಯಕ್ಕಾಗಿ ಕ್ಷೇತ್ರ ಸಂಚಾರವನ್ನು ಮಾಡಬೇಕು. ಜತೆಗೆ ಇಡೀ ದೇಶದ ಕಾಂಗ್ರೆಸ್‌ ಚುನಾವಣೆಗೆ ರಣತಂತ್ರ ರೂಪಿಸುವುದು, ಕಾರ್ಯತಂತ್ರವನ್ನು ಹೆಣೆಯುವುದು ಸೇರಿದಂತೆ ಇನ್ನಿತರ ಜವಾಬ್ದಾರಿಯನ್ನು ನಿಭಾಯಿಸಬೇಕು. ಹೀಗಾಗಿ ಸ್ಪರ್ಧೆಯ ಉಸಾಬರಿ ಬೇಡ ಎಂಬ ತೀರ್ಮಾನಕ್ಕೆ ಬಂದಿದ್ದಾರೆನ್ನಲಾಗಿದೆ.

ಯಾರು ಈ ರಾಧಾಕೃಷ್ಣ ದೊಡ್ಡಮನಿ?

ರಾಧಾಕೃಷ್ಣ ದೊಡ್ಡಮನಿ ಅವರು ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯ. ಅಲ್ಲದೆ, ಪೀಪಲ್‌ ಆಫ್ ಎಜುಕೇಶನ್ ಟ್ರಸ್ಟ್ ಅಧ್ಯಕ್ಷರಾಗಿದ್ದಾರೆ. ಅಲ್ಲದೆ, ಮಾವ ಮಲ್ಲಿಕಾರ್ಜುನ ಖರ್ಗೆಯವರ ರಾಜಕೀಯ ವ್ಯವಹಾರ ಸೇರಿದಂತೆ ಅವರ ಇನ್ನಿತರ ವಹಿವಾಟುಗಳ ನಿರ್ವಹಣೆಯನ್ನು ಮಾಡುತ್ತಿದ್ದರು. ಈ ಸಂಬಂಧ ಕಲಬುರಗಿಗೆ ಅವರು ಆಗಾಗ ಬಂದು ಹೋಗುತ್ತಿದ್ದರು. ಹೀಗಾಗಿ ಅವರಿಗೆ ಕಾಂಗ್ರೆಸ್‌ನ ಕೆಲವು ಮುಖಂಡರ ಪರಿಚಯವಿದೆಯೇ ವಿನಃ ಬೇರೆ ಜನಸಾಮಾನ್ಯರ ನಡುವೆ ಒಡನಾಟ ಇಲ್ಲ. ಹೀಗಾಗಿ ಈಗ ಜನಸಾಮಾನ್ಯರೊಂದಿಗೆ ಅವರು ಯಾವ ರೀತಿ ಬೆಸೆದುಕೊಳ್ಳಲಿದ್ದಾರೆ? ಏಕಾಏಕಿ ಜನರ ಮನಸ್ಸನ್ನು ಗೆಲ್ಲಲು ಯಾವ ರೀತಿ ಕಾರ್ಯತಂತ್ರವನ್ನು ರೂಪಿಸಲಾಗುತ್ತಿದೆ ಎಂಬುದು ಕುತೂಹಲವನ್ನು ಮೂಡಿಸಿದೆ.

ಗ್ಯಾರಂಟಿ ಮಾತ್ರವೇ ಪ್ರಚಾರದ ಸರಕು?

ರಾಧಾಕೃಷ್ಣ ದೊಡ್ಡಮನಿ ಅವರಿಗೆ ಪ್ರಚಾರ ಕಾರ್ಯವನ್ನೇನೋ ಶುರು ಮಾಡಿದ್ದಾರೆ. ಆದರೆ, ಅವರಿಗೆ ಈಗ ಪ್ರಚಾರದ ಸರಕು ಏನು ಎಂಬುದು ಪ್ರಶ್ನೆಯಾಗಿದೆ. ಕಾರಣ ಅವರ ಈ ಭಾಗದಲ್ಲಿ ಹಾಕಲಾದ ಬ್ಯಾನರ್‌ಗಳಲ್ಲಿ ಆರ್ಟಿಕಲ್‌ 371 (J) ಹಾಗೂ ಪಂಚ ಗ್ಯಾರಂಟಿಗಳ ಬಗ್ಗೆ ಮಾತ್ರವೇ ಹಾಕಿರುವುದು ಅನುಮಾನಕ್ಕೆ ಕಾರಣವಾಗಿದೆ. ರಾಜ್ಯದಲ್ಲಿ ಜಾರಿಯಾಗಿರುವ ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಜನರಿಗೆ ಹೇಳಿದರೆ ಸಾಲದು, ಜತೆಗೆ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ಹೇಳಿದ ಅಂಶಗಳನ್ನೂ ತಿಳಿಸಿ ಮನಗೆಲ್ಲಬೇಕಿದೆ. ಇದರ ಹೊರತಾಗಿ ಕ್ಷೇತ್ರದ ಅಭಿವೃದ್ಧಿ ಬಗ್ಗೆ ತಮ್ಮ ಮುಂದಿನ ಪ್ಲ್ಯಾನ್‌ ಬಗ್ಗೆಯೂ ಹೇಳಬೇಕಿದೆ. ಇದರಲ್ಲಿ ಎಷ್ಟರಮಟ್ಟಿಗೆ ಯಶ ಕಾಣುತ್ತಾರೆ ಎಂಬುದು ಮುಖ್ಯವಾಗಿದೆ. ಆದರೆ, ತಮ್ಮ ಅಳಿಯ ಅಭ್ಯರ್ಥಿಯಾಗಿರುವುದರಿಂದ ಖರ್ಗೆ ಕುಟುಂಬಕ್ಕೆ ಸಹ ಇದು ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಈ ಸಂಬಂಧ ಈಗಾಗಲೇ ಖರ್ಗೆ ಅವರು ಕ್ಷೇತ್ರಕ್ಕೆ ಹಲವು ಸುತ್ತಿನ ಸಂಬಂಧಿಸಿ ಹಲವು ಸುತ್ತಿನ ಸಭೆಗಳನ್ನು ನಡೆಸಿದ್ದಾರೆ. ಕಲಬುರಗಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಹೆಚ್ಚಿನ ಲೀಡ್‌ ಬೇಕು ಎಂದು ಹಲವರಿಗೆ ಈಗಾಗಲೇ ಜವಾಬ್ದಾರಿ ವಹಿಸಿದ್ದಾರೆನ್ನಲಾಗಿದೆ. ಇನ್ನು ಪುತ್ರ ಪ್ರಿಯಾಂಕ್‌ ಖರ್ಗೆ ಸಹ ಅಖಾಡಕ್ಕೆ ಇಳಿಯಲಿದ್ದಾರೆ.

ಇದನ್ನೂ ಓದಿ: Lok Sabha Election 2024: ಮಹಿಳೆಯರು ಅಡುಗೆ ಮಾಡಲು ಲಾಯಕ್ಕು ಎಂದ ಶಾಮನೂರು; ಆಕಾಶದಲ್ಲಿ ಹಾರಾಡೋಕೂ ಗೊತ್ತೆಂದ ಗಾಯತ್ರಿ

ಉಮೇಶ್‌ ಜಾದವ್‌ ಪ್ರತಿತಂತ್ರ

ಇತ್ತ ಬಿಜೆಪಿಯ ಹಾಲಿ ಸಂಸದ ಡಾ.ಉಮೇಶ್ ಜಾದವ್ ಸಹ ಪ್ರತಿತಂತ್ರವನ್ನು ಹೆಣೆಯುತ್ತಿದ್ದಾರೆ. ತಾವು ಕ್ಷೇತ್ರದಲ್ಲಿ ಮಾಡಿದ ಅಭಿವೃದ್ಧಿ ರಿಪೋರ್ಟ್‌ ಕಾರ್ಡ್‌ ಜತೆಗೆ ಮೋದಿ ಸರ್ಕಾರದ ಸಾಧನೆಯ ಪಟ್ಟಿಯನ್ನೂ ಹಿಡಿದು ಮತ ಕೇಳಲು ಹೊರಟಿದ್ದಾರೆ. ಇದಲ್ಲದೆ, ಮಲ್ಲಿಕಾರ್ಜುನ ಖರ್ಗೆ ಕುಟುಂಬದ ಬಗ್ಗೆ ಆಗಾಗ ಕಿಡಿಕಾರುತ್ತಲೇ ಇರುವ ಅವರು ಪ್ರಿಯಾಂಕ್‌ ಖರ್ಗೆ ಮೇಲೆ ಹರಿಹಾಯುತ್ತಲೇ ಬರುತ್ತಿದ್ದಾರೆ. ತಾವು ಕಾಂಗ್ರೆಸ್‌ ಪಕ್ಷ ಬಿಡಲು ಪ್ರಿಯಾಂಕ್‌ ಖರ್ಗೆ ಅವರೇ ಕಾರಣ ಎಂದು ಸಾಕಷ್ಟು ಬಾರಿ ಹೇಳಿಕೊಂಡು ಬಂದಿದ್ದಾರೆ. ಅಲ್ಲದೆ, ಕಾಂಗ್ರೆಸ್‌ ಪಕ್ಷದಲ್ಲಿ ಸಾಮಾಜಿಕ ನ್ಯಾಯವಿಲ್ಲ. ಕಲ್ಯಾಣ ಕರ್ನಾಟಕವೆಂದರೆ ಖರ್ಗೆ ಆ್ಯಂಡ್‌ ಕಂಪನಿಯಾಗಿದೆ. ಇದರಿಂದ ಈ ಭಾಗವನ್ನು ಹೊರಗೆ ತರುವುದೇ ತಮ್ಮ ಗುರಿ ಎಂದು ಹೇಳಿದ್ದಾರೆ. ಇನ್ನು ಬಿಜೆಪಿ ನಾಯಕರನ್ನು ಟಾರ್ಗೆಟ್‌ ಮಾಡುತ್ತಿದ್ದಾರೆ ಎಂದೂ ಸಹ ಜಾದವ್‌ ಆರೋಪ ಮಾಡಿದ್ದಾರೆ. ಇದು ಬಿಜೆಪಿ ಕಾರ್ಯಕರ್ತರ ಸಹಿತ ಹಲವರ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ.

ಜಾದವ್‌ಗೆ ಹಾದಿ ಸುಲಭ ಇದೆಯೇ?

ಹಾಗಂತ ಉಮೇಶ್‌ ಜಾದವ್‌ಗೆ ಹಾದಿ ಸುಲಭವೇನಿಲ್ಲ. ಈಗ ಆಡಳಿತರೂಢ ಕಾಂಗ್ರೆಸ್‌ ಪಕ್ಷವು ಕ್ಷೇತ್ರದಲ್ಲಿ ಒಂದು ಮಟ್ಟಿನ ಹಿಡಿತವನ್ನು ತೆಗೆದುಕೊಳ್ಳಲು ಮುಂದಾಗಿದೆ. ಅಲ್ಲದೆ, ಗ್ಯಾರಂಟಿ ಯೋಜನೆಗೆ ಅನುಷ್ಠಾನ ಸಮಿತಿಯನ್ನು ರಚನೆ ಮಾಡಿದೆ. ಈ ತಂಡ ಸಹ ಮನೆ ಮನೆಗೆ ಭೇಟಿ ನೀಡಿ ಪ್ರಚಾರ ಮಾಡುವುದು, ಈ ಯೋಜನೆಗಳನ್ನು ಕಾಂಗ್ರೆಸ್‌ ತಂದಿದೆ ಎಂದು ಮನದಟ್ಟು ಮಾಡುವುದರ ಜತೆಗೆ ಕೇಂದ್ರ ಸರ್ಕಾರದಿಂದ ಅನುದಾನದಲ್ಲಿ ತಾರತಮ್ಯ ನೀತಿ ಅನುಸರಿಸಲಾಗುತ್ತಿದೆ ಎಂಬ ಅಂಶವನ್ನೂ ಹೇಳಲು ಮುಂದಾಗಿದೆ ಎನ್ನಲಾಗಿದೆ. ಹೀಗಾಗಿ ಕಾಂಗ್ರೆಸ್‌ ರೂಪಿಸುವ ಚಕ್ರವ್ಯೂಹವನ್ನು ಉಮೇಶ್‌ ಜಾದವ್‌ ಹೇಗೆ ಭೇದಿಸುತ್ತಾರೆ ಎಂಬುದು ಸದ್ಯದ ಕುತೂಹಲವಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Robert Vadra: ಸ್ವಂತ ಬಲದಿಂದ ರಾಜಕೀಯಕ್ಕೆ ಬರುವೆ, ಗಾಂಧಿ ಹೆಸರು ಬಳಸಲ್ಲ; ರಾಬರ್ಟ್‌ ವಾದ್ರಾ ಶಪಥ!

Robert Vadra: ಸೋನಿಯಾ ಗಾಂಧಿ ಅಳಿಯ ರಾಬರ್ಟ್‌ ವಾದ್ರಾ ಅವರು ಅಮೇಥಿ ಅಥವಾ ರಾಯ್‌ಬರೇಲಿ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಆದರೆ, ಅವರೀಗ ರಾಜಕೀಯ ಪ್ರವೇಶಿಸುವ ಕುರಿತು ಸ್ಪಷ್ಟನೆ ನೀಡಿದ್ದಾರೆ. “ನಾನು ರಾಜಕೀಯಕ್ಕೆ ಬರುವುದಾದರೆ, ನನ್ನ ಹೆಸರು ಬಳಸಿಕೊಂಡು ಬರುತ್ತೇನೆ. ಗಾಂಧಿ ಕುಟುಂಬದ ಹೆಸರಿನಲ್ಲಿ ರಾಜಕೀಯ ಮಾಡಲ್ಲ” ಎಂದಿದ್ದಾರೆ.

VISTARANEWS.COM


on

Robert Vadra
Koo

ನವದೆಹಲಿ: ದೇಶದ ಕುತೂಹಲ ಕೆರಳಿಸಿರುವ ಲೋಕಸಭೆ ಚುನಾವಣೆಯು (Lok Sabha Election 2024) ಕೊನೆಯ ಹಂತಕ್ಕೆ ಬಂದಿದೆ. ಈಗಾಗಲೇ ಐದು ಹಂತದ ಮತದಾನ ಮುಕ್ತಾಯಗೊಂಡಿದ್ದು, ಇನ್ನೂ ಎರಡು ಹಂತದ ಮತದಾನ ಬಾಕಿ ಇದೆ. ಜೂನ್‌ 1ರಂದು ಚುನಾವಣೆ ಮುಗಿಯಲಿದ್ದು, ಜೂನ್‌ 4ರಂದು ಫಲಿತಾಂಶ ಪ್ರಕಟವಾಗಲಿದೆ. ಇದರ ಮಧ್ಯೆಯೇ, ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ (Priyanka Vadra) ಅವರ ಪತಿ ರಾಬರ್ಟ್‌ ವಾದ್ರಾ (Robert Vadra) ಅವರು ರಾಜಕೀಯ ಪ್ರವೇಶಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲ, “ನನ್ನ ಹೆಸರು, ನನ್ನ ಕೆಲಸದಿಂದ ರಾಜಕೀಯ ಪ್ರವೇಶಿಸುತ್ತೇನೆ. ಗಾಂಧಿ ಕುಟುಂಬದ (Gandhi Family) ಹೆಸರು ಬಳಸಿ ರಾಜಕೀಯಕ್ಕೆ ಬರಲ್ಲ” ಎಂದಿದ್ದಾರೆ.

ಎಎನ್‌ಐ ಜತೆ ಮಾತನಾಡುವಾಗ, ನೀವು ರಾಜಕೀಯ ಪ್ರವೇಶಿಸಲು ಬಯಸುತ್ತೀರಾ ಎಂಬ ಪ್ರಶ್ನೆಗೆ ಅವರು ಉತ್ತರಿಸಿದರು. “ನಾನು ದೇಶದ ಸೇವೆ ಮಾಡುತ್ತಿದ್ದೇನೆ. ನಾನು ರಾಜಕೀಯ ಪ್ರವೇಶಿಸುವುದಿದ್ದರೆ, ನನ್ನ ಸಮಾಜ ಸೇವೆ, ನನ್ನ ಕೆಲಸ ಹಾಗೂ ನನ್ನ ಹೆಸರು ಬಳಸಿ ಪ್ರವೇಶಿಸುತ್ತೇನೆ. ಗಾಂಧಿ ಕುಟುಂಬದ ಹೆಸರು ಬಳಸಿಕೊಂಡು ನಾನು ರಾಜಕೀಯ ಪ್ರವೇಶಿಸುವುದಿಲ್ಲ. ಹೀಗೆ ಹೇಳಿದ ಮಾತ್ರಕ್ಕೆ ನಾನು ಗಾಂಧಿ ಕುಟುಂಬದ ಸದಸ್ಯ ಅಲ್ಲ ಎಂಬ ಅರ್ಥವಲ್ಲ. ಆದರೆ, ನನ್ನ ಹೆಸರು ಬಳಸಿಯೇ ನಾನು ರಾಜಕೀಯ ಪ್ರವೇಶಿಸುತ್ತೇನೆ” ಎಂದು ಹೇಳಿದರು.

“ರಾಜಕೀಯದಲ್ಲಿ ಬದಲಾವಣೆಯಾಗಬೇಕಿದೆ. ನಾನು ರೈತರು, ಬಡವರ ಸೇವೆಯಲ್ಲಿ ತೊಡಗಿಸಿಕೊಂಡಿದ್ದೇನೆ. ಹೌದು, ಸೋನಿಯಾ ಗಾಂಧಿ ಸೇರಿ ಗಾಂಧಿ ಕುಟುಂಬದ ಹೆಸರು ಬಳಸಿದರೆ, ಅವರಿಂದ ಸಲಹೆ ಪಡೆದರೆ ನನಗೆ ಅನುಕೂಲವಾಗಬಹುದು. ಆದರೆ, ನನ್ನ ಕೆಲಸದಿಂದ ನಾನು ರಾಜಕೀಯಕ್ಕೆ ಬರಲು ಇಷ್ಟಪಡುತ್ತೇನೆ. ಹಾಗಂತ, ರಾಜಕೀಯ ಪ್ರವೇಶಿಸಲು ನಾನು ಸಮಾಜ ಸೇವೆ ಮಾಡುತ್ತಿಲ್ಲ. ಸೇವೆಯು ನನಗೆ ಖುಷಿ ಕೊಡುವ ವಿಚಾರವಾಗಿದೆ” ಎಂದು ಸಂದರ್ಶನದ ವೇಳೆ ಹೇಳಿದರು.

ಇದೇ ವೇಳೆ, ಕೇಂದ್ರ ಸರ್ಕಾರದ ವಿರುದ್ಧ ಕೂಡ ರಾಬರ್ಟ್‌ ವಾದ್ರಾ ವಾಗ್ದಾಳಿ ನಡೆಸಿದರು. “ಕಳೆದ 10 ವರ್ಷಗಳಿಂದ ದೇಶದ ರಾಜಕೀಯ ವ್ಯವಸ್ಥೆಯನ್ನು ಜನ ನೋಡಿದ್ದಾರೆ. ಅಭಿವೃದ್ಧಿ ಹೊರತುಪಡಿಸಿ, ಧರ್ಮದ ಆಧಾರದ ಮೇಲೆ ರಾಜಕೀಯ ನಡೆಯುತ್ತಿದೆ. ನಾನು ಉದ್ಯಮದಲ್ಲಿ ತೊಡಗಿಸಿಕೊಳ್ಳಲು ಬಿಡುತ್ತಿಲ್ಲ. ಚುನಾವಣೆ ಸಂದರ್ಭದಲ್ಲಿ ಇ.ಡಿ ದಾಳಿ ನಡೆಯುತ್ತದೆ. ಆದರೆ, ಇದೆಲ್ಲದರ ಮಧ್ಯೆ ನಾನು ಸೇವೆ ಮುಂದುವರಿಸಿದ್ದೇನೆ. ನಾನು ರಾಜಕೀಯಕ್ಕೆ ಬಂದ ತಕ್ಷಣ ಎಲ್ಲವೂ ಬದಲಾಗಲಿದೆ ಎಂದು ಹೇಳುವುದಿಲ್ಲ. ಸೇವೆಗಾಗಿ ನಾನು ರಾಜಕೀಯ ಪ್ರವೇಶಿಸಲು ಬಯಸುತ್ತೇನೆ” ಎಂದು ಹೇಳಿದರು. ರಾಬರ್ಟ್‌ ವಾದ್ರಾ ಅವರು ಅಮೇಥಿ ಅಥವಾ ರಾಯ್‌ಬರೇಲಿ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು.

ಇದನ್ನೂ ಓದಿ: Narendra Modi: ಡ್ರಮ್‌, ಜಾಗಟೆ ಬಾರಿಸಿ, ಹಾಡು ಹಾಡಿ; ಮತದಾನ ಹೆಚ್ಚಿಸಲು ಸ್ತ್ರೀಯರಿಗೆ ಕರೆ ಕೊಟ್ಟ ಮೋದಿ

Continue Reading

ದೇಶ

Narendra Modi: ಡ್ರಮ್‌, ಜಾಗಟೆ ಬಾರಿಸಿ, ಹಾಡು ಹಾಡಿ; ಮತದಾನ ಹೆಚ್ಚಿಸಲು ಸ್ತ್ರೀಯರಿಗೆ ಕರೆ ಕೊಟ್ಟ ಮೋದಿ

Narendra Modi: ವಾರಾಣಸಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ನಡೆಯಬೇಕು. ಇದಕ್ಕಾಗಿ ಮಹಿಳೆಯರು ಕೈಜೋಡಿಸಬೇಕು. ಮತದಾನ ನಡೆಯುವ ದಿನ ಸುಮಾರು 20-25 ಮಹಿಳೆಯರು ಒಗ್ಗೂಡಿ ಮತಗಟ್ಟೆಗಳ ಬಳಿ ತೆರಳಿ. ಡ್ರಮ್‌ ಹಾಗೂ ತಟ್ಟೆಗಳನ್ನು ಬಾರಿಸಿ, ಹಾಡು ಹಾಡಿ ಎಂಬುದಾಗಿ ಮಹಿಳೆಯರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಜೂನ್‌ 1ರಂದು ವಾರಾಣಸಿಯಲ್ಲಿ ಮತದಾನ ನಡೆಯಲಿದೆ.

VISTARANEWS.COM


on

Narendra Modi
Koo

ವಾರಾಣಸಿ: ಲೋಕಸಭೆ ಚುನಾವಣೆಯ (Lok Sabha Election 2024) 5 ಹಂತದ ಮತದಾನ ಮುಕ್ತಾಯವಾಗಿದೆ. ಇದರೊಂದಿಗೆ ದೇಶಾದ್ಯಂತ 400ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಮತದಾನ ಮುಕ್ತಾಯವಾದಂತಾಗಿದೆ. ಇನ್ನೂ ಎರಡು ಹಂತದ ಮತದಾನ ಬಾಕಿ ಇರುವ ಕಾರಣ ಪ್ರಧಾನಿ ನರೇಂದ್ರ ಮೋದಿ (Narendra Modi) ಸೇರಿ ಎಲ್ಲ ಪಕ್ಷಗಳ ಪ್ರಮುಖ ನಾಯಕರು, ಅಭ್ಯರ್ಥಿಗಳು ಪ್ರಚಾರ ಕೈಗೊಳ್ಳುತ್ತಿದ್ದಾರೆ. ಇದರ ಬೆನ್ನಲ್ಲೇ, ಮತದಾನ ಪ್ರಮಾಣ ಹೆಚ್ಚಿಸಲು ಮಹಿಳೆಯರಿಗೆ ನರೇಂದ್ರ ಮೋದಿ ಅವರು ಕರೆ ನೀಡಿದ್ದಾರೆ. “ಡ್ರಮ್‌ ಹಾಗೂ ತಟ್ಟೆಗಳನ್ನು ಬಾರಿಸುವ ಮೂಲಕ ಮತದಾನ ಹೆಚ್ಚಿಸಿ” ಎಂದು ವಾರಾಣಸಿ (Varanasi) ಮಹಿಳೆಯರಿಗೆ ಮೋದಿ ಸಲಹೆ ನೀಡಿದ್ದಾರೆ.

“ವಾರಾಣಸಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ನಡೆಯಬೇಕು. ಇದಕ್ಕಾಗಿ ಮಹಿಳೆಯರು ಕೈಜೋಡಿಸಬೇಕು. ಮತದಾನ ನಡೆಯುವ ದಿನ ಸುಮಾರು 20-25 ಮಹಿಳೆಯರು ಒಗ್ಗೂಡಿ ಮತಗಟ್ಟೆಗಳ ಬಳಿ ತೆರಳಿ. ಡ್ರಮ್‌ ಹಾಗೂ ತಟ್ಟೆಗಳನ್ನು ಬಾರಿಸಿ, ಹಾಡು ಹಾಡಿ. ಬೆಳಗ್ಗೆ 10 ಗಂಟೆಯೊಳಗೆ ಮತಗಟ್ಟೆಯ ಬಳಿ ಹೀಗೆ ಮಾಡಿದರೆ ಖಂಡಿತವಾಗಿಯೂ ಹೆಚ್ಚಿನ ಪ್ರಮಾಣದ ಮತದಾನ ದಾಖಲಾಗುತ್ತದೆ. ಪ್ರತಿಯೊಂದು ಮತಗಟ್ಟೆಗಳಲ್ಲೂ ಹೆಣ್ಣುಮಕ್ಕಳು ಹೀಗೆ ಮಾಡುವ ಮೂಲಕ ಮತದಾನದ ಜಾಗೃತಿ ಮೂಡಿಸಬೇಕು” ಎಂದು ವಾರಾಣಸಿಯಲ್ಲಿ ಮಹಿಳೆಯರಿಗೆ ಮೋದಿ ಕರೆ ನೀಡಿದ್ದಾರೆ.

ಇಂಡಿಯಾ ಒಕ್ಕೂಟದ ವಿರುದ್ಧ ವಾಗ್ದಾಳಿ

ವಾರಾಣಸಿಯಲ್ಲಿ ನಡೆದ ಚುನಾವಣೆ ರ‍್ಯಾಲಿಯಲ್ಲಿ ನರೇಂದ್ರ ಮೋದಿ ಅವರು ಇಂಡಿಯಾ ಒಕ್ಕೂಟದ ವಿರುದ್ಧ ವಾಗ್ದಾಳಿ ನಡೆಸಿದರು. “ಇಂಡಿಯಾ ಒಕ್ಕೂಟವು ಎಂದಿಗೂ ಮಹಿಳಾ ವಿರೋಧಿ ಮನಸ್ಥಿತಿ ಹೊಂದಿದೆ. ಅವರು ಮಹಿಳೆಯರಿಗೆ ಮೀಸಲಾತಿ ನೀಡುವುದನ್ನು ವಿರೋಧಿಸಿದರು. ಇಂಡಿಯಾ ಒಕ್ಕೂಟದ ಯಾವುದೇ ಪಕ್ಷದ ಸರ್ಕಾರ ಅಧಿಕಾರಕ್ಕೆ ಬಂದರೆ, ಮಹಿಳೆಯರಿಗೇ ಹೆಚ್ಚು ತೊಂದರೆಯಾಗುತ್ತದೆ. ಹೆಣ್ಣುಮಕ್ಕಳಿಗೆ ತೊಂದರೆಯಾದರೆ, ಹುಡುಗರು ಎಂದ ಮೇಲೆ ತಪ್ಪು ಮಾಡುತ್ತಾರೆ ಎಂದು ಹೇಳುತ್ತಾರೆ. ಆದರೆ, ಯೋಗಿ ಆದಿತ್ಯನಾಥ್‌ ಅವರು ಸಿಎಂ ಆದ ಮೇಲೆ ತಪ್ಪು ಮಾಡುವ ಹುಡುಗರಿಗೆ ತಕ್ಕ ಪಾಠ ಕಲಿಸಿದ್ದಾರೆ. ಇದರಿಂದ ನಮ್ಮ ಸಹೋದರ-ಸಹೋದರಿಯರು ಸುರಕ್ಷಿತವಾಗಿದ್ದಾರೆ” ಎಂದರು.

ನರೇಂದ್ರ ಮೋದಿ ಅವರು 2014ರಿಂದಲೂ ವಾರಾಣಸಿ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಇವರ ವಿರುದ್ಧ ಈ ಬಾರಿ ಕಾಂಗ್ರೆಸ್‌ ಅಜಯ್‌ ರಾಯ್‌ ಅವರನ್ನು ಕಣಕ್ಕಿಳಿಸಿದೆ. ಅಖಿಲ ಭಾರತ ಹಿಂದು ಮಹಾಸಭಾ (ABHM) ಪಕ್ಷದಿಂದ ಮಂಗಳಮುಖಿಯಾಗಿರುವ ಕಿನ್ನಾರ್‌ ಮಹಾಮಂಡಲೇಶ್ವರ್‌ ಹೇಮಾಂಗಿ ಸಖಿ ಅವರು ಕೂಡ ಸ್ಪರ್ಧಿಸುತ್ತಿದ್ದಾರೆ. ಬಿಎಸ್‌ಪಿಯು ಅಥರ್‌ ಜಮಾಲ್‌ ಲರಿ ಅವರಿಗೆ ಟಿಕೆಟ್‌ ನೀಡಿದೆ. ಕ್ಷೇತ್ರದಲ್ಲಿ ಜೂನ್‌ 1ರಂದು ಮತದಾನ ನಡೆಯಲಿದೆ. ವಾರಾಣಸಿ ಲೋಕಸಭೆ ಕ್ಷೇತ್ರದಲ್ಲಿ 19.62 ಲಕ್ಷ ಮತದಾರರಿದ್ದಾರೆ. ಇವರಲ್ಲಿ 10.65 ಲಕ್ಷ ಪುರುಷರಿದ್ದರೆ, 8.97 ಲಕ್ಷ ಮಹಿಳೆಯರಿದ್ದಾರೆ. 135 ಮಂಗಳಮುಖಿಯರೂ ಮತದಾನ ಮಾಡಲಿದ್ದಾರೆ.

ಇದನ್ನೂ ಓದಿ: Narendra Modi: ಅಂಬೇಡ್ಕರ್‌ ಇರದಿದ್ದರೆ ಮೀಸಲಾತಿ ಜಾರಿಗೆ ನೆಹರು ಬಿಡುತ್ತಿರಲಿಲ್ಲ ಎಂದ ಮೋದಿ!

Continue Reading

ಪ್ರಮುಖ ಸುದ್ದಿ

Narendra Modi: ಅಂಬೇಡ್ಕರ್‌ ಇರದಿದ್ದರೆ ಮೀಸಲಾತಿ ಜಾರಿಗೆ ನೆಹರು ಬಿಡುತ್ತಿರಲಿಲ್ಲ ಎಂದ ಮೋದಿ!

Narendra Modi: ಬಿಹಾರದಲ್ಲಿ ನಡೆದ ಚುನಾವಣೆ ರ‍್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು. ಇದೇ ವೇಳೆ ಅವರು ಮೀಸಲಾತಿ ವಿಷಯ ಪ್ರಸ್ತಾಪಿಸಿದರು. “ಡಾ.ಬಿ.ಆರ್.ಅಂಬೇಡ್ಕರ್ ಅವರು ಇರದಿದ್ದರೆ ಮೀಸಲಾತಿ ಜಾರಿಗೊಳಿಸಲು ಜವಾಹರ ಲಾಲ್‌ ನೆಹರು ಬಿಡುತ್ತಿರಲಿಲ್ಲ” ಎಂದು ಆರೋಪಿಸಿದ್ದಾರೆ.

VISTARANEWS.COM


on

Narendra Modi
Koo

ಪಟನಾ: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಕಾಂಗ್ರೆಸ್‌ ವಿರುದ್ಧ ಪ್ರತಿ ರ‍್ಯಾಲಿಯಲ್ಲೂ ವಾಗ್ದಾಳಿ, ಆರೋಪ, ಟೀಕೆ, ವ್ಯಂಗ್ಯ ಮಾಡುತ್ತಿದ್ದಾರೆ. ಈಗ, ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಹಾಗೂ ಜವಾಹರ ಲಾಲ್‌ ನೆಹರು (Jawaharlal Nehru) ಅವರನ್ನು ಪ್ರಸ್ತಾಪಿಸಿ ಮೋದಿ ಅವರು ವಾಗ್ದಾಳಿ ನಡೆಸಿದ್ದಾರೆ. ಬಿಹಾರದ ಮೋತಿಹರಿಯಲ್ಲಿ ನಡೆದ ಚುನಾವಣೆ ಸಮಾವೇಶದಲ್ಲಿ ಮಾತನಾಡಿದ ಮೋದಿ, “ಅಂಬೇಡ್ಕರ್‌ ಅವರು ಇರದಿದ್ದರೆ ಜವಾಹರ ಲಾಲ್‌ ನೆಹರು ಅವರು ಮೀಸಲಾತಿ ಜಾರಿಗೊಳಿಸಲು ಬಿಡುತ್ತಿರಲಿಲ್ಲ” ಎಂದಿದ್ದಾರೆ.

“ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗದವರಿಗೆ (OBC) ಮೀಸಲಾತಿ ನೀಡಲು ಜವಾಹರಲಾಲ್‌ ನೆಹರು ಅವರಿಗೆ ಸುತಾರಾಂ ಇಷ್ಟವಿರಲಿಲ್ಲ. ಇದೇ ಕಾರಣಕ್ಕಾಗಿ ಆಗಿನ ಮುಖ್ಯಮಂತ್ರಿಗಳಿಗೆ ತಮ್ಮ ಅಭಿಪ್ರಾಯವನ್ನು ತಿಳಿಸಿ ಪತ್ರ ಬರೆದಿದ್ದರು. ಹಾಗೊಂದು ವೇಳೆ, ಡಾ.ಬಿ.ಆರ್‌. ಅಂಬೇಡ್ಕರ್‌ ಅವರು ಇರದಿದ್ದರೆ, ಎಸ್‌ಸಿ, ಎಸ್‌ಟಿ ಹಾಗೂ ಒಬಿಸಿಗಳಿಗೆ ಮೀಸಲಾತಿ ನೀಡಲು ಜವಾಹರ ಲಾಲ್‌ ನೆಹರು ಅವರು ಬಿಡುತ್ತಿರಲಿಲ್ಲ” ಎಂದು ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.

“ಕಾಂಗ್ರೆಸ್‌ನಿಂದ ಆಯ್ಕೆಯಾದ ಪ್ರಧಾನಿಗಳು ಎಸ್‌ಸಿ, ಎಸ್‌ಟಿ ಹಾಗೂ ಒಬಿಸಿಯವರಿಗೆ ದ್ರೋಹ ಎಸಗಿದರು. ಇಂದಿರಾ ಗಾಂಧಿ ಆಗಲಿ, ರಾಜೀವ್‌ ಗಾಂಧಿ ಇರಲಿ, ಇವರೆಲ್ಲ ಮೀಸಲಾತಿಯನ್ನು ವಿರೋಧಿಸಿದವರೇ. ಕಾಂಗ್ರೆಸ್‌ನಿಂದ ಎಸ್‌ಸಿ, ಎಸ್‌ಟಿ ಹಾಗೂ ಒಬಿಸಿಯವರಿಗೆ ಎಂದಿಗೂ ಗೌರವ ಸಿಕ್ಕಿಲ್ಲ. ಇಂತಹ ಕಾಂಗ್ರೆಸ್‌ ನಾಯಕರು ಈಗ, ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ಬದಲಿಸುತ್ತದೆ. ಮೀಸಲಾತಿಯನ್ನು ಕಿತ್ತು ಎಸೆಯಲಾಗುತ್ತಿದೆ ಎಂಬುದಾಗಿ ಸುಳ್ಳು ಹರಡುತ್ತಿದ್ದಾರೆ” ಎಂದು ಹೇಳಿದರು.

“ತುಳಿತಕ್ಕೊಳಗಾದ ಸಮುದಾಯಗಳ ಹಕ್ಕುಗಳ ರಕ್ಷಣೆಗೆ ಬಿಜೆಪಿಯು ಬದ್ಧವಾಗಿದೆ. ಎಸ್‌ಸಿ, ಎಸ್‌ಟಿ ಹಾಗೂ ಒಬಿಸಿ ಸಮುದಾಯದವರ ಹಕ್ಕುಗಳನ್ನು ಎನ್‌ಡಿಎ ಸರ್ಕಾರವು ರಕ್ಷಿಸುತ್ತಿದೆ. ಆದರೆ, ಇಂಡಿಯಾ ಒಕ್ಕೂಟವು ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡಲು ಹೊರಟಿದೆ. ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡುವುದನ್ನು ಅಂಬೇಡ್ಕರ್‌ ಅವರೂ ವಿರೋಧಿಸಿದ್ದರು. ಆದರೆ, ಮತ ಬ್ಯಾಂಕ್‌ಗಾಗಿ ಕಾಂಗ್ರೆಸ್‌ ಸೇರಿ ಇಂಡಿಯಾ ಒಕ್ಕೂಟದ ಪಕ್ಷಗಳು ಎಸ್‌ಸಿ, ಎಸ್‌ಟಿ ಹಾಗೂ ಒಬಿಸಿಯವರಿಗೆ ದ್ರೋಹ ಎಸಗುತ್ತಿವೆ” ಎಂದು ತಿಳಿಸಿದರು.

ಇದನ್ನೂ ಓದಿ: ‘ಪುರಿ ಜಗನ್ನಾಥನೇ ಮೋದಿಯ ಭಕ್ತ’ ಹೇಳಿಕೆ; ಪ್ರಾಯಶ್ಚಿತ್ತವಾಗಿ ಸಂಬಿತ್‌ ಪಾತ್ರಾ 3 ದಿನ ಉಪವಾಸ!

Continue Reading

ದೇಶ

‘ಪುರಿ ಜಗನ್ನಾಥನೇ ಮೋದಿಯ ಭಕ್ತ’ ಹೇಳಿಕೆ; ಪ್ರಾಯಶ್ಚಿತ್ತವಾಗಿ ಸಂಬಿತ್‌ ಪಾತ್ರಾ 3 ದಿನ ಉಪವಾಸ!

ದೇವರೇ ಮನುಷ್ಯನಿಗೆ ಭಕ್ತನಾಗಲು ಸಾಧ್ಯವಿಲ್ಲ. ನಾನು ಸುದ್ದಿ ವಾಹಿನಿ ಜತೆ ಮಾತನಾಡುವಾಗ ಬಾಯ್ತಪ್ಪಿನಿಂದಾಗಿ ಜಗನ್ನಾಥನೇ ಮೋದಿ ಅವರ ಭಕ್ತ ಎಂಬುದಾಗಿ ಹೇಳಿದೆ. ನಿಜವಾಗಿಯೂ, ಭಕ್ತರ ಭಾವನೆಗಳಿಗೆ ಧಕ್ಕೆ ತರುವುದು ನನ್ನ ಉದ್ದೇಶ ಆಗಿರಲಿಲ್ಲ ಎಂಬುದಾಗಿ ಬಿಜೆಪಿ ನಾಯಕ ಸಂಬಿತ್‌ ಪಾತ್ರಾ ಅವರು ಕ್ಷಮೆಯಾಚಿಸುವ ಜತೆಗೆ ಮೂರು ದಿನ ಉಪವಾಸ ಕೈಗೊಳ್ಳುವುದಾಗಿ ಘೋಷಿಸಿದ್ದಾರೆ. ಆ ಮೂಲಕ ತಮ್ಮ ತಪ್ಪಿಗೆ ಪ್ರಾಯಶ್ಚಿತ್ತ ಮಾಡಿಕೊಳ್ಳಲು ಅವರು ಮುಂದಾಗಿದ್ದಾರೆ.

VISTARANEWS.COM


on

Sambit Patra
Koo

ಭುವನೇಶ್ವರ: “ಒಡಿಶಾದಲ್ಲಿರುವ ಐತಿಹಾಸಿಕ ಪುರಿ ಜಗನ್ನಾಥನೇ (Lord Jagannath) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಭಕ್ತ” ಎಂಬುದಾಗಿ ಬಿಜೆಪಿ ನಾಯಕ, ಪುರಿ ಅಭ್ಯರ್ಥಿ ಸಂಬಿತ್‌ ಪಾತ್ರಾ (Sambit Patra) ನೀಡಿದ ಹೇಳಿಕೆ ಭಾರಿ ವಿವಾದಕ್ಕೆ ಕಾರಣವಾಗಿದೆ. ವಿವಾದ ಉಂಟಾದ ಬೆನ್ನಲ್ಲೇ, “ಸಂಬಿತ್‌ ಪಾತ್ರಾ ಅವರು ತಮ್ಮ ಹೇಳಿಕೆ ಕುರಿತಂತೆ ಕ್ಷಮೆ ಕೇಳಿದ್ದಾರೆ. ಹಾಗೆಯೇ, ಅಂತಹ ಹೇಳಿಕೆ ನೀಡಿದ್ದಕ್ಕೆ ಪ್ರಾಯಶ್ಚಿತ್ತವಾಗಿ ಮೂರು ದಿನ ಉಪವಾಸ ಕೂಡ ಕೈಗೊಳ್ಳಲು ತೀರ್ಮಾನಿಸಿದ್ದಾರೆ.

ವಿವಾದಾತ್ಮಕ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎನ್‌ಐ ಸುದ್ದಿ ಸಂಸ್ಥೆ ಜತೆ ಮಾತನಾಡಿರುವ ಹಾಗೂ ವಿಡಿಯೊ ಹೇಳಿಕೆ ಕೂಡ ಬಿಡುಗಡೆ ಮಾಡಿರುವ ಸಂಬಿತ್‌ ಪಾತ್ರಾ ಅವರು, ಮೊದಲು ಕ್ಷಮೆಯಾಚಿಸಿದ್ದಾರೆ. “ದೇವರೇ ಮನುಷ್ಯನಿಗೆ ಭಕ್ತನಾಗಲು ಸಾಧ್ಯವಿಲ್ಲ. ನಾನು ಸುದ್ದಿ ವಾಹಿನಿ ಜತೆ ಮಾತನಾಡುವಾಗ ಬಾಯ್ತಪ್ಪಿನಿಂದಾಗಿ ಜಗನ್ನಾಥನೇ ಮೋದಿ ಅವರ ಭಕ್ತ ಎಂಬುದಾಗಿ ಹೇಳಿದೆ. ನಿಜವಾಗಿಯೂ, ಭಕ್ತರ ಭಾವನೆಗಳಿಗೆ ಧಕ್ಕೆ ತರುವುದು ನನ್ನ ಉದ್ದೇಶ ಆಗಿರಲಿಲ್ಲ. ನನ್ನ ಹೇಳಿಕೆಯಿಂದ ಯಾರಿಗಾದರೂ ನೋವುಂಟಾದರೆ ಕ್ಷಮೆ ಕೇಳುತ್ತೇನೆ. ಅಲ್ಲದೆ, ಪ್ರಾಯಶ್ಚಿತ್ತವಾಗಿ ನಾನು ಮೂರು ದಿನ ಉಪವಾಸ ಕೈಗೊಳ್ಳುತ್ತೇನೆ” ಎಂದು ತಿಳಿಸಿದ್ದಾರೆ.

ಸಂಬಿತ್‌ ಪಾತ್ರಾ ಹೇಳಿದ್ದೇನು?

“ಪ್ರಧಾನಿ ನರೇಂದ್ರ ಮೋದಿ ಅವರನ್ನು ನೋಡಲು ಲಕ್ಷಾಂತರ ಜನ ಸೇರಿದ್ದಾರೆ. ಜಗನ್ನಾಥನೇ ನರೇಂದ್ರ ಮೋದಿ ಅವರ ಭಕ್ತನಾಗಿದ್ದಾನೆ. ನಾವೆಲ್ಲರೂ ಮೋದಿ ಅವರ ಕುಟುಂಬಸ್ಥರು. ನಾನು ನನ್ನ ಭಾವನೆಗಳನ್ನು ಹಿಡಿದಿಟ್ಟುಕೊಳ್ಳಲು ಆಗುತ್ತಿಲ್ಲ. ಇದು ಒಡಿಶಾದ ಎಲ್ಲ ಜನರಿಗೂ ಐತಿಹಾಸಿಕ ದಿನವಾಗಿದೆ” ಎಂದು ಸುದ್ದಿಗಾರರೊಂದಿಗೆ ಮಾತನಾಡುವಾಗ ಸಂಬಿತ್‌ ಪಾತ್ರ ಹೇಳಿದ್ದರು. ನರೇಂದ್ರ ಮೋದಿ ಅವರು ಪುರಿ ಜಗನ್ನಾಥ ದೇವಾಲಯಕ್ಕೆ ತೆರಳಿ, ವಿಶೇಷ ಪ್ರಾರ್ಥನೆ ಸಲ್ಲಿಸಿದ ಬಳಿಕ ಸಂಬಿತ್‌ ಪಾತ್ರಾ ಇಂತಹ ಹೇಳಿಕೆ ನೀಡಿದ್ದರು. ವಿವಾದದ ಬಳಿಕ ಬಿಜೆಪಿ ನಾಯಕರು ಪ್ರತಿಕ್ರಿಯಿಸಿದ್ದು, ಇದು ಬಾಯ್ತಪ್ಪಿನಿಂದ ನೀಡಿದ ಹೇಳಿಕೆ ಎಂದು ಸ್ಪಷ್ಟನೆ ನೀಡಿದ್ದರು

ಸಂಬಿತ್‌ ಪಾತ್ರ ಹೇಳಿಕೆಗೆ ಒಡಿಶಾ ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌ ಅವರು ತಿರುಗೇಟು ನೀಡಿದ್ದರು. “ಭಗವಾನ್‌ ಶ್ರೀ ಜಗನ್ನಾಥನು ಇಡೀ ಸೃಷ್ಟಿಗೆ ದೇವರಾಗಿದ್ದಾನೆ. ದೇವರನ್ನೇ ಮನುಷ್ಯನ ಭಕ್ತ ಎಂದು ಕರೆದಿರುವುದು ಅಪಸವ್ಯ ಹಾಗೂ ದೇವರಿಗೆ ಮಾಡಿದ ಅವಮಾನವಾಗಿದೆ. ಇದು ಒಡಿಶಾ ಹಾಗೂ ಜಗತ್ತಿನಾದ್ಯಂತ ಇರುವ ಜಗನ್ನಾಥನ ಭಕ್ತರ ಭಾವನೆಗಳಿಗೆ ಧಕ್ಕೆ ತರುವ ಹೇಳಿಕೆಯಾಗಿದೆ” ಎಂದು ಟೀಕಿಸಿದ್ದರು. ಸಾಮಾಜಿಕ ಜಾಲತಾಣಗಳಲ್ಲೂ ಸಂಬಿತ್‌ ಪಾತ್ರಾ ಹೇಳಿಕೆಗೆ ಭಾರಿ ವಿರೋಧ ವ್ಯಕ್ತವಾಗಿದೆ. ಪ್ರತಿಪಕ್ಷಗಳ ನಾಯಕರಂತೂ ಸಂಬಿತ್‌ ಪಾತ್ರಾ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದರು.

ಇದನ್ನೂ ಓದಿ: Prashant Kishor: ಮೋದಿ ಮೇಲೆ ಜನರಿಗೆ ಎಳ್ಳಷ್ಟೂ ಸಿಟ್ಟಿಲ್ಲ ಎಂದ ಪ್ರಶಾಂತ್‌ ಕಿಶೋರ್;‌ ಕೊಟ್ಟ ಕಾರಣ ಹೀಗಿದೆ

Continue Reading
Advertisement
Mobile
ದೇಶ4 hours ago

ಪರೀಕ್ಷೆಗೆ ಓದುವುದು ಬಿಟ್ಟು ಮೊಬೈಲ್‌ನಲ್ಲೇ ತಲ್ಲೀನ; 22 ವರ್ಷದ ಮಗಳನ್ನೇ ಕೊಂದ ತಾಯಿ

Rameshwaram Cafe Blast
ಕರ್ನಾಟಕ4 hours ago

Rameshwaram Cafe Blast: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ; ಹುಬ್ಬಳ್ಳಿಯಲ್ಲಿ ಇಬ್ಬರು ಎನ್‌ಐಎ ವಶಕ್ಕೆ

LPL 2024
ಪ್ರಮುಖ ಸುದ್ದಿ4 hours ago

LPL 2024 : ಐಪಿಎಲ್ ಎಫೆಕ್ಟ್​, ಸಿಕ್ಕಾಪಟ್ಟೆ ದುಡ್ಡು ಬಾಚಿದ ಮಹೀಶ್ ಪತಿರಾನಾ

Porsche
ಸಂಪಾದಕೀಯ4 hours ago

ವಿಸ್ತಾರ ಸಂಪಾದಕೀಯ: ಸಬಲರ ಎದುರು ದುರ್ಬಲ ಕಾನೂನು; ಅಮಾಯಕರ ಜೀವಕ್ಕೆ ಬೆಲೆಯೇ ಇಲ್ಲ

Hajj pilgrimage
ಬೆಂಗಳೂರು4 hours ago

Hajj Pilgrimage: ಹಜ್ ಯಾತ್ರಿಗಳನ್ನು ಬೀಳ್ಕೊಟ್ಟ ಸಿಎಂ ಸಿದ್ದರಾಮಯ್ಯ; ಹಜ್ ಭವನ ನಿರ್ಮಾಣಕ್ಕೆ ಅನುದಾನ

IPL 2024
ಕ್ರೀಡೆ4 hours ago

IPL 2024 : ಕೆಕೆಆರ್​ 4ನೇ ಬಾರಿ ಐಪಿಎಲ್​​ನ​ ಫೈನಲ್​ಗೆ, ಎಸ್ಆರ್​ಎಚ್​ಗೆ ಇನ್ನೊಂದು ಅವಕಾಶ

Robert Vadra
ದೇಶ5 hours ago

Robert Vadra: ಸ್ವಂತ ಬಲದಿಂದ ರಾಜಕೀಯಕ್ಕೆ ಬರುವೆ, ಗಾಂಧಿ ಹೆಸರು ಬಳಸಲ್ಲ; ರಾಬರ್ಟ್‌ ವಾದ್ರಾ ಶಪಥ!

IPL 2024
ಕ್ರೀಡೆ5 hours ago

IPL 2024 : ರನ್​ ಔಟ್​​ ಆಗಿದ್ದಕ್ಕೆ ಸಿಟ್ಟಿಗೆದ್ದ ಕಾವ್ಯಾ ಮಾರನ್​, ಕಣ್ಣೀರು ಹಾಕಿದ ರಾಹುಲ್ ತ್ರಿಪಾಠಿ

Talking Digital Safety for Teens programme by Meta in Bengaluru
ಕರ್ನಾಟಕ5 hours ago

Meta: ಮೆಟಾದಿಂದ ಯುವ ಜನರಿಗೆ ಡಿಜಿಟಲ್ ಸುರಕ್ಷಾ ಪಾಠ

MLC Election North East Graduates Constituency Election Prohibitory order imposed in Vijayanagar district from June 1
ವಿಜಯನಗರ5 hours ago

MLC Election: ಈಶಾನ್ಯ ಪದವೀಧರ ಕ್ಷೇತ್ರ ಚುನಾವಣೆ: ವಿಜಯನಗರ ಜಿಲ್ಲೆಯಲ್ಲಿ ಜೂ.1ರಿಂದ ನಿಷೇಧಾಜ್ಞೆ ಜಾರಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ10 hours ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು15 hours ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು16 hours ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ2 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ2 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ3 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ3 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ4 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ5 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

ಟ್ರೆಂಡಿಂಗ್‌