Bharat Ratna 2024: ಅಡ್ವಾಣಿ, ಪಿವಿಎನ್‌ ಸೇರಿ ಐವರು ಮಹನೀಯರಿಗೆ ಭಾರತರತ್ನ ಪ್ರದಾನ - Vistara News

ಪ್ರಮುಖ ಸುದ್ದಿ

Bharat Ratna 2024: ಅಡ್ವಾಣಿ, ಪಿವಿಎನ್‌ ಸೇರಿ ಐವರು ಮಹನೀಯರಿಗೆ ಭಾರತರತ್ನ ಪ್ರದಾನ

Bharat Ratna 2024: ಬಿಜೆಪಿ ಹಿರಿಯ ನಾಯಕ ಎಲ್‌.ಕೆ.ಅಡ್ವಾಣಿ, ಬಿಹಾರ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್, ಮಾಜಿ ಪ್ರಧಾನಿಗಳಾದ ಪಿ.ವಿ.ನರಸಿಂಹರಾವ್‌, ಚೌಧರಿ ಚರಣ್‌ ಸಿಂಗ್‌ ಹಾಗೂ ಹಸಿರು ಕ್ರಾಂತಿ ಪಿತಾಮಹ ಎಂ.ಎಸ್.ಸ್ವಾಮಿನಾಥನ್‌ ಅವರಿಗೆ ಕೇಂದ್ರ ಸರ್ಕಾರವು ಭಾರತರತ್ನ ಪ್ರಶಸ್ತಿ ಘೋಷಿಸಿದೆ. ದೆಹಲಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಐವರಲ್ಲಿ ನಾಲ್ವರಿಗೆ ಮರಣೋತ್ತರವಾಗಿ ಪ್ರಶಸ್ತಿ ನೀಡಲಾಗಿದೆ.

VISTARANEWS.COM


on

Bharat Ratna 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ದೇಶದ ಕೃಷಿ, ಆಡಳಿತ, ಸಮಾಜಸೇವೆ ಸೇರಿ ಹಲವು ಕ್ಷೇತ್ರಗಳಲ್ಲಿ ಗಣನೀಯ ಕೊಡುಗೆ ನೀಡಿದ ಐವರು ಮಹನೀಯರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತರತ್ನ ನೀಡಿ ಗೌರವಿಸಿದ್ದಾರೆ. ಬಿಜೆಪಿ ಹಿರಿಯ ನಾಯಕ ಎಲ್‌.ಕೆ.ಅಡ್ವಾಣಿ (LK Advani), ಬಿಹಾರ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್, ಮಾಜಿ ಪ್ರಧಾನಿಗಳಾದ ಪಿ.ವಿ.ನರಸಿಂಹರಾವ್‌ (PV Narasimha Rao), ಚೌಧರಿ ಚರಣ್‌ ಸಿಂಗ್‌ (Charan singh chaudhary) ಹಾಗೂ ಹಸಿರು ಕ್ರಾಂತಿ ಪಿತಾಮಹ ಎಂ.ಎಸ್.ಸ್ವಾಮಿನಾಥನ್‌ (MS Swaminathan) ಅವರಿಗೆ ಭಾರತರತ್ನ ನೀಡಲಾಗಿದೆ. ಮರಣೋತ್ತರವಾಗಿ ಪ್ರಶಸ್ತಿ ಘೋಷಿಸಿದ ಕಾರಣ ಅಡ್ವಾಣಿ ಹೊರತುಪಡಿಸಿ ಉಳಿದ ನಾಲ್ವರ ಕುಟುಂಬಸ್ಥರು ಪ್ರಶಸ್ತಿ ಸ್ವೀಕರಿಸಿದರು. ಮೂಲಗಳ ಪ್ರಕಾರ, ಎಲ್‌.ಕೆ. ಅಡ್ವಾಣಿ ಅವರಿಗೆ ಮಾರ್ಚ್‌ 31ರಂದು ಅವರ ನಿವಾಸದಲ್ಲಿಯೇ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.

ಪಿ.ವಿ. ನರಸಿಂಹರಾವ್‌ ಅವರ ಪುತ್ರ ಪಿ.ವಿ. ಪ್ರಭಾಕರ್‌ ರಾವ್‌, ಎಂ.ಎಸ್.ಸ್ವಾಮಿನಾಥನ್‌ ಅವರ ಪುತ್ರಿ ನಿತ್ಯಾ ರಾವ್‌, ಚೌಧರಿ ಚರಣ್‌ ಸಿಂಗ್‌ ಅವರ ಮೊಮ್ಮಗ ಜಯಂತ್‌ ಸಿಂಗ್‌, ಕರ್ಪೂರಿ ಠಾಕೂರ್‌ ಅವರ ಪುತ್ರ ರಾಮನಾಥ್‌ ಠಾಕೂರ್‌ ಅವರು ಪ್ರಶಸ್ತಿ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿ ಹಲವರು ಇದ್ದರು.

ಎಲ್‌.ಕೆ. ಅಡ್ವಾಣಿ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನ ಪುರಸ್ಕಾರ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ 3ರಂದು ಬೆಳಗ್ಗೆ ಘೋಷಿಸಿದ್ದರು. “ಎಲ್.ಕೆ.ಅಡ್ವಾಣಿ ಅವರಿಗೆ ಭಾರತ ರತ್ನ ನೀಡಲಾಗುವುದು ಎಂದು ಹಂಚಿಕೊಳ್ಳಲು ನನಗೆ ತುಂಬಾ ಸಂತೋಷವಾಗಿದೆ. ನಾನು ಅವರೊಂದಿಗೆ ಮಾತನಾಡಿದ್ದೇನೆ ಮತ್ತು ಈ ಗೌರವವನ್ನು ಪಡೆದಿರುವುದಕ್ಕೆ ಅವರನ್ನು ಅಭಿನಂದಿಸಿದ್ದೇನೆ” ಎಂದು ಪೋಸ್ಟ್‌ ಮಾಡಿದ್ದರು.

ಬಿಹಾರದ ಮಾಜಿ ಸಿಎಂ, ಜನ ನಾಯಕ ಎಂದು ಖ್ಯಾತರಾಗಿದ್ದ ಕರ್ಪೂರಿ ಠಾಕೂರ್ ಅವರಿಗೆ ಮರಣೋತ್ತರವಾಗಿ ಭಾರತರತ್ನ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿದೆ. ಕರ್ಪೂರಿ ಠಾಕೂರ್ ಅವರು 1970ರಿಂದ 1971ರವರೆಗೆ ಬಿಹಾರದ ಮುಖ್ಯಮಂತ್ರಿಯಾಗಿದ್ದರು. ಆಗ ಅವರು ಸಮಾಜವಾದಿ ಮತ್ತು ಭಾರತೀಯ ಕ್ರಾಂತಿ ದಳ ಪಕ್ಷದಲ್ಲಿದ್ದರು. ಮತ್ತೆ 1977ರಿಂದ 1979ರವರೆಗೆ ಎರಡನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿದ್ದರು. ಆಗ ಜನತಾ ಪಾರ್ಟಿಯಲ್ಲಿದ್ದರು.

ಕರ್ಪೂರಿ ಠಾಕೂರ್ ಅವರು ಉತ್ತರ ಭಾರತದಲ್ಲಿ ಹಿಂದುಳಿದ ವರ್ಗಗಳ ನಾಯಕರಾಗಿ ಗುರುತಿಸಿಕೊಂಡಿದ್ದರು. ಬಿಹಾರದ ರಾಜಕಾರಣದಲ್ಲಿ ಅಗ್ರಮಾನ್ಯರಾಗಿದ್ದರು. ನಾಯ್ (ಕ್ಷೌರಿಕ) ಸಮುದಾಯದಲ್ಲಿ ಗೋಕುಲ್ ಠಾಕೂರ್ ಮತ್ತು ರಾಮ್ದುಲಾರಿ ದೇವಿ ದಂಪತಿಗೆ ಜನಿಸಿದ ಕರ್ಪೂರಿ ಅವರು ಜನಿಸಿದರು. ಈಗ ಕರ್ಪುರಿ ಗ್ರಾಮ ಎಂದು ಕರೆಯಲಾಗುವ ಪಿತೌಂಜಿಯಾ ಗ್ರಾಮದಿಂದ ಹಿಡಿದು ಬಿಹಾರದ ಮುಖ್ಯಮಂತ್ರಿಯಾಗುವವರೆಗಿನ ಅವರ ಪಯಣವು ಸಮರ್ಪಣೆ, ಸಾರ್ವಜನಿಕ ಸೇವೆಗೆ ಸಾಕ್ಷಿಯಾಗಿದೆ.

ಇದನ್ನೂ ಓದಿ: LK Advani: ನನ್ನ ತತ್ವಗಳಿಗೆ ಸಂದ ಗೌರವ; ಭಾರತರತ್ನ ಬಳಿಕ ಅಡ್ವಾಣಿ ಭಾವುಕ ನುಡಿ

ಹಸಿರು ಕ್ರಾಂತಿ ಮೂಲಕ ಭಾರತದ ಕೃಷಿಗೆ ಮಹೋನ್ನತ ಕೊಡುಗೆ ನೀಡಿದ ಎಂ.ಎಸ್.ಸ್ವಾಮಿನಾಥನ್‌, ದೇಶದ ಆರ್ಥಿಕತೆಗೆ ಭದ್ರ ಬುನಾದಿ ಹಾಕಿದ ಪಿ.ವಿ.ನರಸಿಂಹರಾವ್‌ ಹಾಗೂ ಸ್ವಾತಂತ್ರ್ಯ ಹೋರಾಟ, ದೇಶದಲ್ಲಿ ಉತ್ತಮ ಆಡಳಿತ ನೀಡಿದ ಚೌಧರಿ ಚರಣ್‌ ಸಿಂಗ್‌ ಅವರಿಗೆ ಭಾರತರತ್ನ ಘೋಷಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದರು. ಈಗ ಐವರಿಗೂ ರಾಷ್ಟ್ರಪತಿ ಅವರು ಭಾರತರತ್ನ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Actor darshan Arrested : ದರ್ಶನ್​ಗೆ ಎಣ್ಣೆ ಹೊಡೆಯಲು, ಸಿಗರೇಟ್​ ಸೇದಲು ಪೊಲೀಸ್​ ಠಾಣೆಗೆ ಶಾಮಿಯಾನ​ವೇ?

Actor darshan Arrested : ಪೊಲೀಸ್​ ಠಾಣೆಯ ಲಾಕ್​ಅಪ್​ನಲ್ಲಿರುವವರಿಗೆ ಕಾನೂನು ಪ್ರಕಾರ ಊಟ, ತಿಂಡಿ ಬಿಟ್ಟರೆ ಇನ್ಯಾವುದೂ ಇಲ್ಲ. ಆದರೆ, ಸೆಲೆಬ್ರಿಟಿಗಳು ಹಣ ಬಲ ಬಳಸಿ ಇಂಥದ್ದನ್ನೆಲ್ಲ ಪಡೆದುಕೊಳ್ಳುತ್ತಾರೆ. ಅಂತೆಯೇ ದರ್ಶನ್ ಬಳಗ ಈ ಒಂದು ಐಡಿಯಾ ಮಾಡಿರಬಹುದು ಎನ್ನಲಾಗಿದೆ. ಇಲ್ಲದಿದ್ದರೆ ಸಾಮಾನ್ಯರ ಪೊಲೀಸ್ ಠಾಣೆಯನ್ನು ಟೆಂಟ್ ಶಾಮಿಯಾನಗಳಿಂದ ಮುಚ್ಚುವ ಪ್ರಮೇಯ ಏನಿದೆ ಎಂದು ಜನ ಪ್ರಶ್ನಿಸಿದ್ದಾರೆ.

VISTARANEWS.COM


on

Actor darshan Arrested
Koo

ಬೆಂಗಳೂರು: ಚಿತ್ರದುರ್ಗದ ಮೂಲದ ರೇಣುಕಾ ಸ್ವಾಮಿ ಎಂಬುವರನ್ನು ಕೊಲೆ ಮಾಡಿದ ಆರೋಪದಲ್ಲಿ ನಟ ದರ್ಶನ್ ಬಂಧಿಸಿಟ್ಟಿರುವ (Actor darshan Arrested) ಅನ್ನಪೂರ್ಣೇಶ್ವರಿ ನಗರ ಪೊಲೀಸ್​ ಠಾಣೆಗೆ ಟೆಂಟ್ ಹಾಕಿ ಮುಚ್ಚಲಾಗಿದೆ! ಪೊಲೀಸರು ಟೆಂಟ್​ ಹಾಕಿದ್ದಕ್ಕೆ ಕಾರಣ ಕೊಟ್ಟಿಲ್ಲ. ಹೀಗಾಗಿ ದರ್ಶನ್​ಗೆ ‘ಸಕಲ ಸೇವೆಗಳನ್ನು’ ನೀಡಲು ಟೆಂಟ್​​ನ ಕವಚ ಎಂದು ಸಾರ್ವಜನಿಕರು ಮಾತನಾಡಿಕೊಳ್ಳುತ್ತಿದ್ದಾರೆ. ಬಂಧನವಾದ ದಿನದಿಂದಲೂ ದರ್ಶನ್ ಸರಿಯಾಗಿ ಊಟ ಮಾಡದೇ ಎಣ್ಣೆ ಕೊಡಿ, ಸಿಗರೇಟು ಕೊಡಿ ಎಂದಷ್ಟೇ ಕೇಳುತ್ತಿದ್ದಾರೆ ಎಂಬುದಾಗಿಯೂ ವರದಿಯಾಗಿತ್ತು. ಮೈ ನಡುಕ ಉಂಟಾಗಿದೆ. ಸಿಗರೇಟು ಬೇಕು, ಕುಡಿಯಲು ಎಣ್ಣೆ ಬೇಕು ಎಂದು ಅವರು ಡಿಮ್ಯಾಂಡ್ ಮಾಡುತ್ತಿದ್ದಾರೆ. ತೆರೆದ ಪೊಲೀಸ್​ ಠಾಣೆಯಲ್ಲಿ ಅವರಿಗೆ ಇಂಥ ‘ಅಗತ್ಯ’ ವಸ್ತುಗಳನ್ನು ಕೊಟ್ಟರೆ ಸಾರ್ವಜನಿಕರಿಗೆ ಮತ್ತು ಮಾಧ್ಯಮದವರಿಗೆ ಗೊತ್ತಾದರೆ ಸಮಸ್ಯೆಯಾಗುತ್ತದೆ ಎಂದು ಪೊಲೀಸರು ಟೆಂಟ್​ನ ಐಡಿಯಾ ಮಾಡಿದ್ದಾರೆ.

ಪೊಲೀಸ್​ ಠಾಣೆಯ ಲಾಕ್​ಅಪ್​ನಲ್ಲಿರುವವರಿಗೆ ಕಾನೂನು ಪ್ರಕಾರ ಊಟ, ತಿಂಡಿ ಬಿಟ್ಟರೆ ಇನ್ಯಾವುದೂ ಇಲ್ಲ. ಆದರೆ, ಸೆಲೆಬ್ರಿಟಿಗಳು ಹಣ ಬಲ ಬಳಸಿ ಇಂಥದ್ದನ್ನೆಲ್ಲ ಪಡೆದುಕೊಳ್ಳುತ್ತಾರೆ. ಅಂತೆಯೇ ದರ್ಶನ್ ಬಳಗಕ್ಕೆ ಉಪಕಾರ ಮಾಡಲು ಐಡಿಯಾ ಮಾಡಿರಬಹುದು ಎನ್ನಲಾಗಿದೆ. ಇಲ್ಲದಿದ್ದರೆ ಸಾಮಾನ್ಯರಿಗಾಗಿ ಇರುವ ಪೊಲೀಸ್ ಠಾಣೆಯನ್ನು ಟೆಂಟ್ ಶಾಮಿಯಾನಗಳಿಂದ ಮುಚ್ಚುವ ಪ್ರಮೇಯ ಏನಿದೆ ಎಂದು ಜನ ಪ್ರಶ್ನಿಸಿದ್ದಾರೆ.

ಠಾಣೆಯ ಸುತ್ತಲೂ ಶಾಮಿಯಾನದ ಜತೆಗೆ ಹಾಕುವ ಸೈಡ್​ವಾಲ್​ (ಪರದೆಗಳನ್ನು) ಹಾಕಲಾಗಿದ್ದು, ಪೊಲೀಸ್​ ಠಾಣೆಯನ್ನು ಯಾರಿಗೂ ಕಾಣದಂತೆ ಮಾಡಲಾಗಿದೆ. ಈ ಸ್ಟೇಷನ್​ಗೆ ಯಾರಿಗೂ ಪ್ರವೇಶ ಇಲ್ಲದಂತೆ ಮಾಡಲಾಗಿದೆ. ಸಣ್ಣ ಪುಟ್ಟ ಅಹವಾಲುಗಳನ್ನು ತೆಗೆದುಕೊಂಡು ಬರುವ ಜನರನ್ನು ಶಾಮಿಯಾನದಿಂದ ಮುಚ್ಚಿದ ಗೇಟ್​ನಿಂದಲೇ ಪೊಲೀಸರು ಮಾತನಾಡಿಸಿ ಕಳುಹಿಸುತ್ತಿದ್ದಾರೆ. ಒಟ್ಟಿನಲ್ಲಿ ಸಾರ್ವಜನಿಕರ ಸೇವೆಗೆ ಇರುವ ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆ ದರ್ಶನ್​ ಗ್ಯಾಂಗ್​ಗೆ ರೆಸಾರ್ಟ್ ಆಗಿ ಪರಿವರ್ತನೆಗೊಂಡಿದೆ. ದರ್ಶನ್​ ಬಳಗ ಆ ಠಾಣೆಯಲ್ಲಿ ಇರುವ ತನಕ ಸಾರ್ಜನಿಕರ ಸೇವೆಗೆ ದೊರೆಯುವುದು ಅನುಮಾನ.

ಬೋರ್ಡ್​ ಕಾಣದ ಹಾಗೆ ಶಾಮಿಯಾನ

ಬೋರ್ಡ್​ ಹಾಕಿದ ಅಂದಕ್ಕೆ ಠಾಣೆಯ ಬೋರ್ಡ್​ ಕೂಡ ಕಾಣುತ್ತಿಲ್ಲ. ಅಗತ್ಯಕ್ಕಾಗಿ ಠಾಣೆಗೆ ಬರುವ ಮಂದಿಗೆ ಠಾಣೆ ಎಲ್ಲಿ ಎಂದು ಹುಡುಕುವ ಪರಿಸ್ಥಿತಿ ಶುರುವಾಗಿದೆ. ಹಾಗಾದರೆ ಜನಸಾಮಾನ್ಯರ ಪೊಲೀಸ್​ ಠಾಣೆ ವಿಐಪಿ ಆರೋಪಿಗಳ ಅಡಗುದಾಣವಾಗಿರುವುದು ವಿಪರ್ಯಾಸ ಎಂದು ಸಾರ್ವಜನಿಕರು ಮಾತನಾಡುತ್ತಿದ್ದಾರೆ.

ಠಾಣೆಯ ಸುತ್ತ ಮುತ್ತ ನಿಷೇದಾಜ್ಞೆ

ದರ್ಶನ್​ ಬಂಧಿಸಿಟ್ಟಿರುವ ಠಾಣೆಯ ಸುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಅಭಿಮಾನಿಗಳು ಹಾಗೂ ಮಾಧ್ಯಮಗಳ ಕ್ಯಾಮೆರಾಮನ್​ಗಳು ತುಂಬಿಕೊಳ್ಳುತ್ತಿದ್ದ ಜಾಗದಲ್ಲಿ ಈಗ ನಾಲ್ಕು ಮಂದಿಗಿಂತ ಹೆಚ್ಚು ಜನ ಸೇರುವಂತಿಲ್ಲ. ಗುರುವಾರ ನಗರ ಪೊಲೀಶ್​ ಕಮಿಷನರ್ ದಯಾನಂದ್ ಅವರು ಠಾಣೆಗೆ ಭೇಟಿ ನೀಡಿದ್ದರು. ಆ ಬಳಿಕದಿಂದ ಠಾಣೆಯ ಸುತ್ತ ನಿಷೇದಾಜ್ಞೆ ಜಾರಿ ಮಾಡಿ ಪರದೆಯಿಂದ ಮುಚ್ಚಲಾಗಿದೆ.

ಜೂನ್​ 13ರಿಂದ 17ನೇ ದಿನಾಂಕದವರೆಗೂ 144ಸೆಕ್ಷನ್ ಜಾರಿ ಮಾಡಿ ಆದೇಶ ಹೊರಡಿಸಲಾಗಿದೆ. ಠಾಣಾ ಸುತ್ತ ಮುತ್ತ 200 ಮೀಟರ್ ಸುತ್ತಲೂ ನಿಷೇಧ ಮಾಡಿ ಆದೇಶ ಹೊರಡಿಸಲಾಗಿದೆ. ದರ್ಶನ್ ಅರೆಸ್ಟ್ ಹಿನ್ನೆಲೆ ಠಾಣೆ ಬಳಿ ಅಭಿಮಾನಿಗಳು ಮಿತಿಮೀರಿ ಜಮಾಯಿಸುತ್ತಿದ್ದರು. ಕೆಲವೊಂದು ಬಾರಿ ಲಾಠಿ ಚಾರ್ಜ್​ ಮಾಡಿದ್ದರು. ಹೀಗಾಗಿ ನಿಷೇಧಾಜ್ಞೆ ಜಾರಿ ಮಾಡಿ ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ರಿಂದ ಆದೇಶ ಹೊರಡಿಸಿದ್ದಾರೆ.

ದರ್ಶನ್‌ಗೆ ನೆರವು ಕೊಟ್ಟ ಮತ್ತೊಬ್ಬ ಸ್ಯಾಂಡಲ್‌ವುಡ್‌ ನಟ ಅರೆಸ್ಟ್‌!

ನಟ ದರ್ಶನ್‌, ಪವಿತ್ರಾ ಗೌಡ ಸೇರಿ ಇತರ ಆರೋಪಿಗಳನ್ನು ಪಟ್ಟಣಗೆರೆಯ ಶೆಡ್‌ಗೆ ಬುಧವಾರ ಕರೆದೊಯ್ದು ಸ್ಥಳ ಮಹಜರು ನಡೆಸಿದರು. ಆರೋಪಿಗಳನ್ನು ತಂಡಗಳಾಗಿ ವಿಂಗಡಿಸಿ, ಶೆಡ್‌ನ ಪ್ರತಿ ಮೂಲೆಯಲ್ಲೂ ಪರಿಶೀಲನೆ ನಡೆಸಿ ಅಗತ್ಯ ಮಾಹಿತಿ ಕಲೆ ಹಾಕಲಾಗಿದೆ. ಇದೀಗ ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Murder Case) ಮತ್ತೊಬ್ಬ ಆರೋಪಿಯನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಬಂಧಿತ ಆರೋಪಿಗಳ ಸಂಖ್ಯೆ 14ಕ್ಕೆ ಏರಿಕೆಯಾಗಿದೆ.

ಬಂಧಿತನನ್ನು ಪ್ರದೋಶ್ (Paradosh) ಎಂದು ಗುರುತಿಲಾಗಿದ್ದು, ಈತ ಕೂಡ ಸ್ಯಾಂಡಲ್ ವುಡ್ ನಟನಾಗಿದ್ದಾನೆ. ಕನ್ನಡದ ಕೆಲ ಚಿತ್ರಗಳಲ್ಲಿ ಅಭಿನಯ ಮಾಡಿರುವ ಈತ ರೇಣುಕಾಸ್ವಾಮಿ ಹತ್ಯೆ ಕೇಸ್‌ನಲ್ಲಿ A14 ಆರೋಪಿಯಾಗಿದ್ದಾನೆ. ರೇಣುಕಾ ಸ್ವಾಮಿ ಮೃತಪಟ್ಟ ಬಳಿಕ ಗಾಬರಿಗೊಂಡ ದರ್ಶನ್‌ 30 ಲಕ್ಷ ರೂ. ನೀಡಿ ಬಾಡಿಯನ್ನು ಎಲ್ಲಾದರು ಬಿಸಾಕುವಂತೆ ಹೇಳುತ್ತಾರೆ. ಆಗ ತನ್ನ ಆಪ್ತ, ಹೋಟೆಲ್ ಉದ್ಯಮಿ ಪ್ರದೋಶ್‌ ದರ್ಶನ್‌ ಹೇಳಿದಾಗ ಪ್ರದೋಶ್ ಮತ್ತಿತರರು ದೇಹವನ್ನು ಸ್ಕಾರ್ಪಿಯೋ ಕಾರಿನಲ್ಲಿ ಒಯ್ದು ಸುಮ್ಮನಹಳ್ಳಿಯ ಅಪಾರ್ಟ್‌ಮೆಂಟ್ ಒಂದರ ಮುಂಭಾಗದ ಮೋರಿ ಬಳಿ ಎಸೆದು ಹೋಗಿದ್ದಾರೆ.

Continue Reading

ಪ್ರಮುಖ ಸುದ್ದಿ

Wild Elephant Attack : ನಾಡಿಗೆ ಬಂದ ಕಾಡಾನೆಯಿಂದ ರೈತನ ಮೇಲೆ ದಾಳಿ, ಕಾಲು ಮುರಿತ

Wild Elephant Attack:ದಿವಾಕರ್ ಅವರನ್ನು ಅಟ್ಟಿಸಿಕೊಂಡು ಬಂದು ಕಾಲಿನ ಮೇಲೆ ತುಳಿದಿದೆ. ಅವರ ಬಲಗಾಲು ಮುರಿದಿದೆ. ಅವರ ಕಿರುಚಾಟಕ್ಕೆ ಹೆದರಿದ ಆನೆ ಕಾಫಿ ತೋಟದ ಮೂಲಕ ವಾಪಸ್​ ಹೋಗಿದೆ. ಹೀಗಾಗಿ ಅವರ ಪ್ರಾಣ ಉಳಿದಿದೆ. ಅವರಿಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಇಟಿಎಫ್ ತಂಡ ಭೇಟಿ, ಪರಿಶೀಲನೆ

VISTARANEWS.COM


on

wild elephant attack
Koo

ಹಾಸನ: ಕೂಲಿ ಕೆಲಸಕ್ಕೆ ಹೋಗುತ್ತಿದ್ದವನ ಮೇಲೆ ಕಾಡಾನೆ ದಾಳಿ ಮಾಡಿದ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ವಾಟೆಹಳ್ಳ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ರೈತನ ಕಾಲು ಮುರಿತವಾಗಿದೆ. ಬೆಳಗ್ಗೆ ಕೂಲಿ ಕೆಲಸಕ್ಕೆ ಹೋಗುತ್ತಿದ್ದ ವೇಳೆ ಆನೆ ದಾಳಿ (Wild Elephant Attack) ಮಾಡಿತ್ತು. 60 ವರ್ಷದ ದಿವಾಕರ್ ಶೆಟ್ಟಿ ಗಾಯಗೊಂಡವರು.

ದಿವಾಕರ್​ ಅವರು ಬೆಳಗ್ಗೆ ಕಾಫಿ ತೋಟದ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಕಾಡಿನಿಂದ ಬಂದಿದ್ದ ಒಂಟಿ ಸಲಗವು ದಾಳಿ ಮಾಡಿದೆ. ದಿವಾಕರ್ ಅವರನ್ನು ಅಟ್ಟಿಸಿಕೊಂಡು ಬಂದು ಕಾಲಿನ ಮೇಲೆ ತುಳಿದಿದೆ. ಅವರ ಬಲಗಾಲು ಮುರಿದಿದೆ. ಅವರ ಕಿರುಚಾಟಕ್ಕೆ ಹೆದರಿದ ಆನೆ ಕಾಫಿ ತೋಟದ ಮೂಲಕ ವಾಪಸ್​ ಹೋಗಿದೆ. ಹೀಗಾಗಿ ಅವರ ಪ್ರಾಣ ಉಳಿದಿದೆ. ಅವರಿಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಇಟಿಎಫ್ ತಂಡ ಭೇಟಿ, ಪರಿಶೀಲನೆ

ಕಾಫಿ ತೋಟದಲ್ಲಿ ಬೀಡುಬಿಟ್ಟಿರುವ ಕಾಡಾನೆ

ಕಾಡಿನಿಂದ ನಾಡಿಗೆ ಮುಖ ಮಾಡಿರುವ ಆನೆಗಳು ಕಾಫಿ ತೋಟಗಳ ನಡುವೆ ನಿಂತಿವೆ. ಹೀಗಾಗಿ ಜೀವ ಭಯದಿಂದ ಕಾಫಿ ತೋಟದ ಕೆಲಸಕ್ಕೆ ಬರಲು ಕೂಲಿ ಕಾರ್ಮಿಕರು ಹಿಂದೇಟು ಹಾಕುತ್ತಿದ್ದಾರೆ. ಆನೆಗಳು ಮತ್ತು ಮಾನವನ ಸಂಘರ್ಷ ಹಲವಾರು ಸಮಯದಿಂದ ಈ ಪ್ರದೇಶದಲ್ಲಿ ನಡೆಯುತ್ತಿದೆ. ಅದಕ್ಕೊಂದು ಪರಿಹಾರ ಸಿಗುತ್ತಿಲ್ಲ. ಕಾಫಿ ತೋಟಗಳಿಗೆ ಆನೆಗಳು ಲಗ್ಗೆ ಇಡುವ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಆನೆಗಳ ದಾಳಿಯಿಂದಾಗಿ ಹಲವಾರು ಕಾರ್ಮಿಕರು ಜರ್ಜರಿತರಾಗಿದ್ದಾರೆ. ಹೀಗಾಗಿ ಇದಕ್ಕೊಂದು ಪರಿಹಾರ ಇಲ್ಲ ಎನ್ನುವಂತಾಗಿದೆ.

ಇದನ್ನೂ ಓದಿ: Dengue Fever : ಡೆಂಗ್ಯೂ ಜ್ವರಕ್ಕೆ ಆರೋಗ್ಯ ಇಲಾಖೆ ಸಿಬ್ಬಂದಿ ಬಲಿ

ಹಂಪಿಗೆ ಬಂದ ಕರಡಿ

ಹಂಪಿ ಪರಿಸರದಲ್ಲಿ ಮತ್ತೆ ಕರಡಿ ಪ್ರತ್ಯಕ್ಷಗೊಂಡಿದ್ದು, ಇಲ್ಲಿನ ಪರಿಸರದ ಜನರಿಗೆ ಕರಡಿ ದಾಳಿಯ ಭಯ ಶುರುವಾಗಿದೆ. ಅಕ್ಕ – ತಂಗಿಯರ ಗುಡ್ಡದಿಂದ ಕಡ್ಡಿರಾಂಪುರಕ್ಕೆ ಹೋಗುವ ರಸ್ತೆಯಲ್ಲಿ ಕರಡಿಯೊಂದು ಕಂಡು ಬಂದಿದೆ. ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನಲ್ಲಿ ಹಂಪಿ- ಕಡ್ಡಿರಾಂಪುರ ರಸ್ತೆಯಿದ್ದು ಕಾಡು ಪ್ರಾಣಿಯ ದಾಳಿಯ ಭಯ ಹೆಚ್ಚಾಗಿದೆ. ಸೋಮವಾರ ಸಂಜೆ ವೇಳೆ ವಿಜಯ ವಿಠ್ಠಲ ಬಜಾರ್ ನಲ್ಲಿ ಕರಡಿ ಪ್ರತ್ಯಕ್ಷ ಆಗಿತ್ತು. ಇದೀಗ ಕಡ್ಡಿರಾಂಪೂರ ಗ್ರಾಮದ ರಸ್ತೆಯಲ್ಲಿ ಕರಡಿ ಪ್ರತ್ಯಕ್ಷವಾಗಿದೆ ಕರಡಿ ಪದೇ ಪದೇ ಬರುತ್ತಿರುವ ಕಾರಣ ಹೊಲ, ಗದ್ದೆಗಳಿಗೆ ಹೋಗುವ ರೈತರಲ್ಲಿ ಹೆಚ್ಚಿದ ಆತಂಕ ಶುರುವಾಗಿದೆ.

Continue Reading

ಪ್ರಮುಖ ಸುದ್ದಿ

NEET UG : 1563 ಅಭ್ಯರ್ಥಿಗಳ ಗ್ರೇಸ್ ಮಾರ್ಕ್​ ರದ್ದು, ಜೂನ್​ 23ರಂದು ಮರುಪರೀಕ್ಷೆ

NEET UG : ನೀಟ್-ಯುಜಿ ಪರೀಕ್ಷೆಗೆ ಹಾಜರಾಗುವಾಗ ಅನುಭವಿಸಿದ ಸಮಯದ ನಷ್ಟವನ್ನು ಸರಿದೂಗಿಸಲು ‘ಗ್ರೇಸ್ ಅಂಕ’ ಪಡೆದ 1,563 ಕ್ಕೂ ಹೆಚ್ಚು ಅಭ್ಯರ್ಥಿಗಳ ಫಲಿತಾಂಶಗಳನ್ನು ಪರಿಶೀಲಿಸಲು ಸಮಿತಿಯನ್ನು ರಚಿಸಲಾಗಿದೆ ಎಂದು ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿದೆ.

VISTARANEWS.COM


on

NEET UG
Koo

ನವದೆಹಲಿ: ನೀಟ್​ ಯುಜಿ (NEET UG) ಪರೀಕ್ಷೆಯಲ್ಲಿ ಗ್ರೇಸ್ ಮಾರ್ಕ್​ (ಕೃಪಾಂಕ) ಪಡೆದಿರುವ 1,563 ಅಭ್ಯರ್ಥಿಗಳಿಗೆ ಜೂನ್​ 23ರಂದು ಮರು ಪರೀಕ್ಷೆ ನಡೆಸುವುದಾಗಿ ಕೇಂದ್ರ ಸರ್ಕಾರ ಮತ್ತು ಎನ್​ಟಿಎ (National Testing Agency) ಗುರುವಾರ ಸುಪ್ರೀಂ ಕೋರ್ಟ್​ಗೆ ತಿಳಿಸಿದೆ. ನೀಟ್-ಯುಜಿ ಪರೀಕ್ಷೆಗೆ ಹಾಜರಾಗುವಾಗ ಅನುಭವಿಸಿದ ಸಮಯದ ನಷ್ಟವನ್ನು ಸರಿದೂಗಿಸಲು ‘ಗ್ರೇಸ್ ಅಂಕ’ ಪಡೆದ 1,563 ಕ್ಕೂ ಹೆಚ್ಚು ಅಭ್ಯರ್ಥಿಗಳ ಫಲಿತಾಂಶಗಳನ್ನು ಪರಿಶೀಲಿಸಲು ಸಮಿತಿ ರಚಿಸಲಾಗಿದೆ ಎಂದು ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿದೆ.

ಎಂಬಿಬಿಎಸ್, ಬಿಡಿಎಸ್ ಮತ್ತು ಇತರ ಕೋರ್ಸ್​ಗಳ ಪ್ರವೇಶಕ್ಕಾಗಿ ನೀಟ್-ಯುಜಿ, 2024 ಪರೀಕ್ಷೆಗೆ ಸಂಬಂಧಿಸಿದ ವಿವಾದಕ್ಕೆ ಕುರಿತ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ. ಈ ಪೀಠಕ್ಕೆ ಕೇಂದ್ರ ಸರ್ಕಾರ ಹಾಗೂ ಎನ್​ಟಿಎ ಮಾಹಿತಿ ನೀಡಿದೆ.

ಗ್ರೇಸ್ ಅಂಕಗಳನ್ನು ನೀಡಿದ 1,563 ನೀಟ್-ಯುಜಿ 2024 ಅಭ್ಯರ್ಥಿಗಳ ಸ್ಕೋರ್ ಕಾರ್ಡ್​ಗಳನ್ನು ರದ್ದುಗೊಳಿಸುವ ನಿರ್ಧಾರವನ್ನು ಸಮಿತಿ ತೆಗೆದುಕೊಂಡಿದೆ. ಈ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ತೆಗೆದುಕೊಳ್ಳುವ ಆಯ್ಕೆಯನ್ನು ನೀಡಲಾಗುವುದು ಎಂದು ಸುಪ್ರೀಂ ಕೋರ್ಟ್​ಗೆ ಏಜೆನ್ಸಿ ತಿಳಿಸಿದೆ. ಪರೀಕ್ಷೆಗಳನ್ನು ಜೂನ್ 23 ರಂದು ನಡೆಸಲಾಗುವುದು ಮತ್ತು ಜೂನ್ 30 ರೊಳಗೆ ಫಲಿತಾಂಶಗಳನ್ನು ಪ್ರಕಟಿಸಲಾಗುವುದು ಎಂದು ಎನ್​​ಟಿಎ ಸುಪ್ರೀಂ ಕೋರ್ಟ್​​ಗೆ ತಿಳಿಸಿದೆ.

ಜುಲೈ 6ರಿಂದ ಕೌನ್ಸೆಲಿಂಗ್​

ಎಂಬಿಬಿಎಸ್, ಬಿಡಿಎಸ್ ಮತ್ತು ಇತರ ಕೋರ್ಸ್​​ಗಳ ಪ್ರವೇಶಕ್ಕಾಗಿ ಕೌನ್ಸೆಲಿಂಗ್ ಜುಲೈ 6 ರಿಂದ ಪ್ರಾರಂಭವಾಗಲಿದೆ ಎಂದು ಎನ್​ಟಿಎ ತಿಳಿಸಿದೆ. ಮರುಪರೀಕ್ಷೆಗೆ ಸಂಬಂಧಿಸಿದಂತೆ ಎನ್​ಟಿಎ ಕೊಟ್ಟಿರುವ ಹೇಳಿಕೆಯನ್ನು ಸುಪ್ರೀಂ ಕೋರ್ಟ್ ಗಣನೆಗೆ ತೆಗೆದುಕೊಂಡಿದೆ. ಇವೆಲ್ಲದರ ನಡುವೆ ಕೌನ್ಸೆಲಿಂಗ್ ಪ್ರಕ್ರಿಯೆಗೆ ತಡೆ ನೀಡುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಪುನರುಚ್ಚರಿಸಿದೆ. ಕೌನ್ಸೆಲಿಂಗ್ ಮುಂದುವರಿಯುತ್ತದೆ ಮತ್ತು ನಾವು ಅದನ್ನು ನಿಲ್ಲಿಸುವುದಿಲ್ಲ. ಪರೀಕ್ಷೆ ನಡೆದ ಬಳಿಕ ಎಲ್ಲವೂ ಒಟ್ಟಾಗಿ ನಡೆಯುತ್ತದೆ. ಆದ್ದರಿಂದ ಭಯಪಡಬೇಕಾಗಿಲ್ಲ ಎಂದು ಸುಪ್ರೀಂ ಕೋರ್ಟ್ ಅಭಯ ನೀಡಿದೆ.

ಬಹು ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ಅಕ್ರಮಗಳ ನಡುವೆ ಮೇ 5 ರಂದು ಪರೀಕ್ಷೆಯನ್ನು ನಡೆಸಲಾಯಿತು ಎಂದು ಎನ್​​ಟಿಎ ವಿರುದ್ಧ ಸುಪ್ರೀಂ ಕೋರ್ಟ್​​ಗೆ ಹಲವು ಅರ್ಜಿಗಳು ಸಲ್ಲಿಕೆಯಾಗಿದ್ದವು. ಪ್ರಶ್ನೆ ಪತ್ರಿಕೆ ಸೋರಿಕೆಯು ಸಂವಿಧಾನದ 14 ನೇ ವಿಧಿಯ (ಸಮಾನತೆಯ ಹಕ್ಕು) ಉಲ್ಲಂಘನೆಯಾಗಿದೆ. ಏಕೆಂದರೆ ಇದು ನ್ಯಾಯಯುತ ರೀತಿಯಲ್ಲಿ ಪರೀಕ್ಷೆ ಬರೆದ ಇತರ ಅಭ್ಯರ್ಥಿಗಳಿಗೆ ಅನ್ಯಾಯ ಮಾಡಿದಂತೆ. ಅಲ್ಲದೆ ಅಕ್ರಮವಾಗಿ ಬರೆದ ಅಭ್ಯರ್ಥಿಗಳಿಗೆ ಅನಗತ್ಯ ಪ್ರಯೋಜನವನ್ನು ನೀಡುತ್ತದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ನೀಟ್​ ಪರೀಕ್ಷೆಯಲ್ಲಿ ಅಕ್ರಮ

ಕೆಲವೊಂದು ಸಮಸ್ಯೆಗಳಿಂದಾಗಿ 1,563 ಅಭ್ಯರ್ಥಿಗಳಿಗೆ ಸಮಯ ನಷ್ಟವಾಗಿದೆ ಎಂದು ಕೃಪಾಂಕವನ್ನು ನೀಡಲಾಗಿತ್ತು. ಅಲ್ಲದೆ ಈ ಅಂಕಗಳನ್ನು ಪಡೆದ ಅಭ್ಯರ್ಥಿಗಳ ಗರಿಷ್ಠ ರ್ಯಾಂಕ್​ಗಳನ್ನು ಪಡೆದಿದ್ದರು. ಇದು ಅನುಮಾನಕ್ಕೆ ಕಾರಣವಾಯಿತು. ಪೂರ್ವಯೋಜಿತ ಕೃತ್ಯ ಹಾಗೂ ಪ್ರಶ್ನಾ ಪತ್ರಿಕೆಯ ಸೋರಿಕೆ ಎಂಬುದಾಗಿ ಗದ್ದಲವೆದ್ದಿತು. ದೇಶಾದ್ಯಂತ ಪರೀಕ್ಷೆ ಬರೆದ ಅಭ್ಯರ್ಥಿಗಳು ಮೋಸ ನಡೆದಿದೆ ಎಂದು ಅನುಮಾನ ವ್ಯಕ್ತಪಡಿಸಿದ್ದರು. ಆಮ್ ಆದ್ಮಿ ಪಕ್ಷ ಮತ್ತು ಕಾಂಗ್ರೆಸ್ ಸೇರಿದಂತೆ ಹಲವಾರು ವಿರೋಧ ಪಕ್ಷಗಳು ಈ ಅಕ್ರಮಗಳನ್ನು ಎತ್ತಿ ತೋರಿಸಿದ್ದವು. ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರದ ಬಗ್ಗೆ ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ಎಸ್ಐಟಿ ತನಿಖೆ ನಡೆಸಬೇಕೆಂದು ಎಎಪಿ ಒತ್ತಾಯಿಸಿದೆ.

ಇದನ್ನೂ ಓದಿ: Tollgates: ಇನ್ನು ಫಾಸ್ಟ್‌ಟ್ಯಾಗ್‌‌ ಮರೆತುಬಿಡಿ; ಟೋಲ್‌ ಸಂಗ್ರಹಕ್ಕೆ ಬರುತ್ತಿದೆ ಸ್ಯಾಟಲೈಟ್‌ ಆಧಾರಿತ ವ್ಯವಸ್ಥೆ: ಏನಿದರ ಪ್ರಯೋಜನ?

ಈ ಬಗ್ಗೆ ಟ್ವೀಟ್ ಮಾಡಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, “ಲಕ್ಷಾಂತರ ಮಕ್ಕಳು ನೀಟ್ ನಂತಹ ಪರೀಕ್ಷೆಗಳಿಗೆ ಕಠಿಣ ತಯಾರಿ ನಡೆಸುತ್ತಾರೆ/ ಅದಕ್ಕಾಗಿ ತಯಾರಿ ನಡೆಸಲು ತಮ್ಮ ಜೀವನದ ಅತ್ಯಂತ ಅಮೂಲ್ಯ ಕ್ಷಣಗಳನ್ನು ಕಳೆಯುತ್ತಾರೆ. ಇಡೀ ಕುಟುಂಬವು ಅವರ ಬೆನ್ನಿಗೆ ನಿಲ್ಲುತ್ತದೆ. ಆದರೆ ವರ್ಷದಿಂದ ವರ್ಷಕ್ಕೆ ಈ ಪರೀಕ್ಷೆಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಫಲಿತಾಂಶಗಳಿಗೆ ಸಂಬಂಧಿಸಿದ ಅಕ್ರಮಗಳು ವರದಿಯಾಗುತ್ತಿವೆ ಎಂದು ಹೇಳಿದ್ದರು.

Continue Reading

ಪ್ರಮುಖ ಸುದ್ದಿ

Dengue Fever : ಡೆಂಗ್ಯೂ ಜ್ವರಕ್ಕೆ ಆರೋಗ್ಯ ಇಲಾಖೆ ಸಿಬ್ಬಂದಿ ಬಲಿ

dengue fever: ನಾಗರಾಜ್​ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ನಾಗರಾಜ್ ಅವರು ಸಕ್ಕರೆ ಕಾಯಿಲೆ ಸಮಸ್ಯೆಯೂ ಇತ್ತು. ಜತೆಗೆ ಅವರ ರಕ್ತದಲ್ಲಿನ ಪ್ಲೇಟ್​ಲೆಟ್​ ಸಂಖ್ಯೆ 26,000ಕ್ಕೂ ಕಡಿಮೆಯಾಗಿತ್ತು. ನಾಗರಾಜ್​ ಅವರು ಮೃತಪಟ್ಟ ಸುದ್ದಿಯನ್ನು ಸಾಗರ ತಾಲ್ಲೂಕು ವೈದ್ಯಾಧಿಕಾರಿ ಡಾ.ಪರಪ್ಪ ಅವರು ದೃಢಪಡಿಸಿದ್ದಾರೆ.

VISTARANEWS.COM


on

Dengue Fever
Koo

ಶಿವಮೊಗ್ಗ : ಡೆಂಗ್ಯೂ ಜ್ವರದಿಂದ (Dengue Fever) ಬಳಲುತ್ತಿದ್ದ ಆರೋಗ್ಯ ಇಲಾಖೆ ಸಿಬ್ಬಂದಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಸಾಗರ ತಾಲ್ಲೂಕು ಆಸ್ಪತ್ರೆಯಲ್ಲಿ ಡಯಾಲಿಸಿಸ್ ಸಿಬ್ಬಂದಿ ನಾಗರಾಜ್ (35) ಮೃತಪಟ್ಟವರು. ಈ ಮೂಲಕ ತಾಲೂಕಿನಲ್ಲಿ ಹೊಸ ಡೆಂಗ್ಯೂ ಜ್ವರಗಳ ಪ್ರಕರಣಕ್ಕೆ ಒಂದು ಬಲಿಯಾಗಿದೆ.

ನಾಗರಾಜ್ ಅವರು ಕೆಲವು ದಿನಗಳಿಂದ ಡೆಂಗ್ಯೂನಿಂದ ಬಳಲುತ್ತಿದ್ದರು. ಅವರು ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ನಾಗರಾಜ್ ಅವರು ಸಕ್ಕರೆ ಕಾಯಿಲೆ ಸಮಸ್ಯೆಯೂ ಇತ್ತು. ಜತೆಗೆ ಅವರ ರಕ್ತದಲ್ಲಿನ ಪ್ಲೇಟ್​ಲೆಟ್​ ಸಂಖ್ಯೆ 26,000ಕ್ಕೂ ಕಡಿಮೆಯಾಗಿತ್ತು. ನಾಗರಾಜ್​ ಅವರು ಮೃತಪಟ್ಟ ಸುದ್ದಿಯನ್ನು ಸಾಗರ ತಾಲ್ಲೂಕು ವೈದ್ಯಾಧಿಕಾರಿ ಡಾ.ಪರಪ್ಪ ಅವರು ದೃಢಪಡಿಸಿದ್ದಾರೆ.

ಕಲುಷಿತ ನೀರು ಕುಡಿದು ಒಂದೇ ಗ್ರಾಮದ ನಾಲ್ವರ ಸಾವು, ಇಬ್ಬರ ಸ್ಥಿತಿ ಗಂಭೀರ

ಚಿಕ್ಕಬಳ್ಳಾಪುರ : ಕಲುಷಿತ ನೀರು (Polluted Water ) ಸೇವಿಸಿದ್ದರಿಂದ ಉಂಟಾದ ಅಸ್ವಸ್ಥೆಯಿಂದ ಒಂದೇ ಗ್ರಾಮದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಇಲ್ಲಿನ ವೀರಪ್ಪಲ್ಲಿ ಗ್ರಾಮದಲ್ಲಿ ಕಲುಷಿತ ನೀರು ಸೇವನೆ ಪ್ರಕರಣದಿಂದ ಈ ನಾಲ್ವರು ಮೃತಪಟ್ಟಿದ್ದಾರೆ. ಅದೇ ರೀತಿ ವೀರಾಪುರ ಗ್ರಾಮದಲ್ಲಿಯೂ ‌ಇಬ್ಬರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ. ಗ್ರಾಮದಲ್ಲಿ ಗಂಗಮ್ಮ (70) ಮುನಿನಾರಾಯಣಮ್ಮ (74), ಲಕ್ಷ್ಮಮ್ಮ (70). ನರಸಿಂಹಪ್ಪ (75) ಎಂಬುವರು ಮೃತಪಟ್ಟಿದ್ದರು.

ಇದನ್ನೂ ಓದಿ: Prajwal Revanna Case : ಭವಾನಿ ರೇವಣ್ಣ ಕಾರಿನ ಚಾಲಕ ಅಜಿತ್ ಸಂಬಂಧಿಕನಿಗೆ ಮನೆಗೆ ನುಗ್ಗಿ ಹಲ್ಲೆ

ಕಲುಷಿತ ನೀರು ಸೇವನೆಯಿಂದ ಅಸ್ವಸ್ಥಗೊಂಡಿರುವ ವರಲಕ್ಷ್ಮೀ ಎಂಬುವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೇ ರಿತಿ ವಾಂತಿ, ಭೇದಿಯಿಂದ ಇಬ್ಬರು ಗ್ರಾಮಸ್ಥರು. ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಯಲ್ಲಿ ವರಲಕ್ಷ್ಮಿ ಲಕ್ಷ್ಮೀದೇವಮ್ಮ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಗ್ರಾಮ ಪಂಚಾಯ್ತಿ ವತಿಯಿಂದ ಪೂರೈಸಿದ್ದ ನೀರು ಕಲುಷಿತ ಗೊಂಡಿದ್ದ ಕಾರಣ ಆರೋಗ್ಯ ಸಮಸ್ಯೆ ಉಂಟಾಗಿದೆ. ನೀರು ಸರಬರಾಜು ಮಾಡಿರುವ ಕೋಟಗಲ್ ಗ್ರಾಮಪಂಚಾಯಿತಿ ವಿರುದ್ಧ ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಂದೇ ವಾರದಲ್ಲಿ ಗ್ರಾಮದಲ್ಲಿ ನಾಲ್ಕು ಸರಣಿ ಸಾವಾದರೂ ಎಚ್ಚೆತ್ತುಕೊಳ್ಳದ ಪಿಡಿಒ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಗ್ರಾಮದಲ್ಲಿ ಚರಂಡಿಗಳು ಕಟ್ಟಿಕೊಂಡು ವಾಸನೆ ಬರುತ್ತಿವೆ. ಅದನ್ನೆಲ್ಲ ರಿಪೇರಿ ಮಾಡದ ಕಾರಣ ಕುಡಿಯುವ ನೀರಿನೊಂದಿಗೆ ಮಿಶ್ರಣಗೊಳ್ಳುತ್ತಿದೆ. ಅದರಿಂದಾಗಿಯೇ ಸಮಸ್ಯೆ ಎದುರಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ

Continue Reading
Advertisement
Actor darshan Arrested
ಪ್ರಮುಖ ಸುದ್ದಿ1 min ago

Actor darshan Arrested : ದರ್ಶನ್​ಗೆ ಎಣ್ಣೆ ಹೊಡೆಯಲು, ಸಿಗರೇಟ್​ ಸೇದಲು ಪೊಲೀಸ್​ ಠಾಣೆಗೆ ಶಾಮಿಯಾನ​ವೇ?

Hamare Baarah Release Supreme Court has imposed a stay
ಬಾಲಿವುಡ್7 mins ago

Hamare Baarah: ಮುಸ್ಲಿಂ ಮಹಿಳೆಯರ ಕುರಿತ ʻಹಮಾರೆ ಬಾರಾʼ ಸಿನಿಮಾ ಬಿಡುಗಡೆಗೆ ಸುಪ್ರೀಂ ಕೋರ್ಟ್ ತಡೆ

Stock Market
ವಾಣಿಜ್ಯ8 mins ago

Stock Market: ಷೇರುಪೇಟೆಯಲ್ಲಿ ಗೂಳಿ ಗುಟುರು; ಸೆನ್ಸೆಕ್ಸ್‌, ನಿಫ್ಟಿ ಏರಿಕೆ

Actor Darshan
ಬೆಂಗಳೂರು8 mins ago

Actor Darshan : ರೇಣುಕಾಸ್ವಾಮಿಯನ್ನು ಕೊಂದು ನಟ ದರ್ಶನ್‌ ಆ್ಯಂಡ್‌ ಗ್ಯಾಂಗ್‌ ಫೋನ್‌ ಮಾಡಿದ್ದು ಯಾರಿಗೆ?

Darshan Old Case Coming Out darshan gang
ಕ್ರೈಂ12 mins ago

Actor Darshan: ಬಡಪಾಯಿ ಕಾರ್ಮಿಕರ ಮೇಲೆ ನಾಯಿ ಛೂ ಬಿಟ್ಟು ಹಿಂಸಿಸಿದ್ದ ದರ್ಶನ್‌ & ಗ್ಯಾಂಗ್‌!

IND vs USA
ಕ್ರೀಡೆ28 mins ago

IND vs USA: ಬೆಸ್ಟ್​ ಫೀಲ್ಡಿಂಗ್​ಗೆ 2ನೇ ಚಿನ್ನದ ಪದಕ ಗೆದ್ದ ಮೊಹಮ್ಮದ್ ಸಿರಾಜ್

Actor Darshan case ram gopal varma Reaction
ಸ್ಯಾಂಡಲ್ ವುಡ್46 mins ago

Actor Darshan: ಆರಾಧನೆ ಅತಿರೇಕವಾದರೆ ದುರಂತ ಖಚಿತ; ದರ್ಶನ್​ ಬಗ್ಗೆ ರಾಮ್​ಗೋಪಾಲ್ ವರ್ಮಾ ಹೇಳಿದ್ದು ಹೀಗೆ…

Gold Rate Today
ಚಿನ್ನದ ದರ59 mins ago

Gold Rate Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ಬೆಲೆ; ಇಂದಿನ ದರ ಚೆಕ್‌ ಮಾಡಿ

Karnataka Rain Effect
ಮಳೆ59 mins ago

Karnataka Rain : ಮಳೆ ಅವಾಂತರ: ತರಗತಿ ನಡೆಯುವಾಗಲೇ ಮಕ್ಕಳ ಮೇಲೆ ಕುಸಿದು ಬಿದ್ದ ಚಾವಣಿ

Lionel Messi Retirement
ಕ್ರೀಡೆ1 hour ago

Lionel Messi Retirement: ನಿವೃತ್ತಿಯ ಸುಳಿವು ನೀಡಿದ ಲಿಯೋನೆಲ್​ ಮೆಸ್ಸಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ2 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ2 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ2 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ2 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ6 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ6 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌