IPL 2024: ಕೋಲ್ಕೊತಾ ನೈಟ್​ ರೈಡರ್ಸ್​ ಸವಾಲು ಮೀರುವುದೇ ಡೆಲ್ಲಿ ಕ್ಯಾಪಿಟಲ್ಸ್​? - Vistara News

ಪ್ರಮುಖ ಸುದ್ದಿ

IPL 2024: ಕೋಲ್ಕೊತಾ ನೈಟ್​ ರೈಡರ್ಸ್​ ಸವಾಲು ಮೀರುವುದೇ ಡೆಲ್ಲಿ ಕ್ಯಾಪಿಟಲ್ಸ್​?

IPL 2024: ಅಂಕಪಟ್ಟಿಯಲ್ಲಿ ಕೆಕೆಆರ್ ಎರಡನೇ ಸ್ಥಾನದಲ್ಲಿದ್ದರೆ , ಡಿಸಿ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಕೆಕೆಆರ್ ಪ್ರಸ್ತುತ ಪಾಯಿಂಟ್ಸ್ ಟೇಬಲ್​ನಲ್ಲಿ ಎರಡನೇ ಸ್ಥಾನದಲ್ಲಿದೆ. ಆಡಿರುವ 2 ಪಂದ್ಯಗಳಲ್ಲಿ 2 ಗೆಲುವು ಸಾಧಿಸಿರುವ ಕೆಕೆಆರ್ 4 ಅಂಕಗಳನ್ನು ಹೊಂದಿದ್ದು, +1.047 ನೆಟ್ ರನ್ ರೇಟ್ ಹೊಂದಿದೆ. ಡಿಸಿ ಆಡಿದ ಮೂರು ಪಂದ್ಯಗಳಲ್ಲಿ ಒಂದನ್ನು ಮಾತ್ರ ಗೆದ್ದಿದೆ.

VISTARANEWS.COM


on

IPL 2024- Delhi Capitals
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಐಪಿಎಲ್ 2024 (IPL 2024) ರ 16 ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ಮತ್ತು ಕೋಲ್ಕೊತಾ ನೈಟ್ ರೈಡರ್ಸ್ (KKR) ತಂಡಗಳು ಪರಸ್ಪರ ಸೆಣಸಲಿವೆ. ಎರಡೂ ತಂಡಗಳು ಈ ಹಿಂದಿನ ತಮ್ಮ ತಮ್ಮ ಪಂದ್ಯಗಳಲ್ಲಿ ಉತ್ತಮ ಗೆಲುವು ದಾಖಲಿಸಿದೆ. ಡಿಸಿ (DC) ತನ್ನ ಹಿಂದಿನ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (Chennai Supre kIngs) ವಿರುದ್ದ ಗೆದ್ದರೆ, ಕೆಕೆಆರ್ ತಂಡ ಆರ್​ಸಿಬಿಯನ್ನೇ ಅವರ ತವರು ಮೈದಾನದಲ್ಲಿ ಮಣಿಸಿತ್ತು. ಹೀಗಾಗಿ ಎರಡೂ ತಂಡಗಳ ಆಟಗಾರರಲ್ಲಿ ಆತ್ಮವಿಶ್ವಾಸ ಹೆಚ್ಚಾಗಿರುತ್ತದೆ. ಕೆಕೆಆರ್ ಟೂರ್ನಿಯಲ್ಲಿ ಉತ್ತಮ ಆರಂಭ ಪಡೆದ ಕಾರಣ ಪಾಯಿಂಟ್ಸ್ ಟೇಬಲ್​ನಲ್ಲಿ ಡಿಸಿಗಿಂತ ಉತ್ತಮ ಸ್ಥಾನದಲ್ಲಿದೆ. ಆರ್​ಸಿಬಿ ಮತ್ತು ಎಸ್​ಆರ್​ ಎಚ್ ವಿರುದ್ಧ ಗೆಲುವು ಸಾಧಿಸಿದೆ.

ಅಂಕಪಟ್ಟಿಯಲ್ಲಿ ಕೆಕೆಆರ್ ಎರಡನೇ ಸ್ಥಾನದಲ್ಲಿದ್ದರೆ , ಡಿಸಿ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಕೆಕೆಆರ್ ಪ್ರಸ್ತುತ ಪಾಯಿಂಟ್ಸ್ ಟೇಬಲ್​ನಲ್ಲಿ ಎರಡನೇ ಸ್ಥಾನದಲ್ಲಿದೆ. ಆಡಿರುವ 2 ಪಂದ್ಯಗಳಲ್ಲಿ 2 ಗೆಲುವು ಸಾಧಿಸಿರುವ ಕೆಕೆಆರ್ 4 ಅಂಕಗಳನ್ನು ಹೊಂದಿದ್ದು, +1.047 ನೆಟ್ ರನ್ ರೇಟ್ ಹೊಂದಿದೆ. ಡಿಸಿ ಆಡಿದ ಮೂರು ಪಂದ್ಯಗಳಲ್ಲಿ ಒಂದನ್ನು ಮಾತ್ರ ಗೆದ್ದಿದೆ. ಅವರು ಒಟ್ಟು ಎರಡು ಅಂಕಗಳನ್ನು ಹೊಂದಿದ್ದಾರೆ ಹಾಗೂ -0.016 ನೆಟ್ ರನ್ ರೇಟ್ ಹೊಂದಿದ್ದಾರೆ.

ಈ ಪಂದ್ಯವು ಏಪ್ರಿಲ್ 3, 2024 ರಂದು ಸಂಜೆ 7:30 ಕ್ಕೆ (ಭಾರತೀಯ ಕಾಲಮಾನ) ವಿಶಾಖಪಟ್ಟಣಂನ ಎಸಿಎ-ವಿಡಿಸಿಎ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಎರಡೂ ತಂಡಗಳು ವಿಶ್ವದ ಅತ್ಯುತ್ತಮ ಆಟಗಾರರನ್ನು ಹೊಂದಿವೆ. ಕೆಕೆಆರ್ ತಂಡದಲ್ಲಿ ಫಿಲ್ ಸಾಲ್ಟ್, ಸುನಿಲ್ ನರೈನ್, ಶ್ರೇಯಸ್ ಅಯ್ಯರ್, ರಿಂಕು ಸಿಂಗ್, ಆಂಡ್ರೆ ರಸೆಲ್ ಮತ್ತು ಮಿಚೆಲ್ ಸ್ಟಾರ್ಕ್ ಇದ್ದಾರೆ. ಅವರೆಲ್ಲರಿಗೂ ಉತ್ತರ ನೀಡಬಲ್ಲ ಆಟಗಾರರು ಡೆಲ್ಲಿ ಕ್ಯಾಪಿಟಲ್ಸ್​ನಲ್ಲಿದ್ದಾರೆ.

ಇದನ್ನೂ ಓದಿ: IPL 2024: ಐಪಿಎಲ್​ ಮಧ್ಯೆ ಫ್ರಾಂಚೈಸಿಗಳ ದಿಢೀರ್‌ ಸಭೆ ಕರೆದ ಬಿಸಿಸಿಐ​; ಕಾರಣವೇನು?

ಡಾ.ವೈ.ಎಸ್.ರಾಜಶೇಖರ ರೆಡ್ಡಿ ಎಸಿಎ-ವಿಡಿಸಿಎ ಕ್ರಿಕೆಟ್ ಸ್ಟೇಡಿಯಂ ಪಿಚ್ ವರದಿ

ಡಾ.ವೈ.ಎಸ್.ರಾಜಶೇಖರ ರೆಡ್ಡಿ ಎಸಿಎ-ವಿಡಿಸಿಎ ಕ್ರಿಕೆಟ್ ಕ್ರೀಡಾಂಗಣದ ಮೇಲ್ಮೈ ಸ್ಪಿನ್ನರ್​ಗಳಿಗೆ ಸಾಕಷ್ಟು ನೆರವು ನೀಡುತ್ತದೆ . ಈ ಪಿಚ್ನಲ್ಲಿ ಚೆಂಡು ಸಾಕಷ್ಟು ತಿರುಗುತ್ತದೆ ಎಂದು ತಿಳಿದುಬಂದಿದೆ, ಬ್ಯಾಟ್ಸ್ಮನ್ಗಳಿಗೆ ಹೆಚ್ಚು ಅಗತ್ಯವಿರುವ ಸಹಾಯವೂ ಸಿಗುತ್ತದೆ. ಮೊದಲು ಬ್ಯಾಟಿಂಗ್ ಮಾಡಲು ಆಯ್ಕೆ ಮಾಡುವುದು ಮತ್ತು ದೊಡ್ಡ ಮೊತ್ತವನ್ನು ದಾಖಲಿಸುವುದು ಉತ್ತಮ ನಿರ್ಧಾರವಾಗುತ್ತದೆ.

ಇದನ್ನೂ ಓದಿ: IPL 2024 : 250 ​ ಪಂದ್ಯಗಳನ್ನಾಡಿದ ಮುಂಬಯಿ ಇಂಡಿಯನ್ಸ್​, ಉಳಿದ ತಂಡಗಳದ್ದೆಷ್ಟು?

ಪಂದ್ಯದ ವಿವರ

  • ಪಂದ್ಯ ಸಂಖ್ಯೆ 16: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಕೋಲ್ಕತಾ ನೈಟ್ ರೈಡರ್ಸ್ ಮುಖಾಮುಖಿ
  • ಸ್ಥಳ: ಡಾ.ವೈ.ಎಸ್.ರಾಜಶೇಖರ ರೆಡ್ಡಿ, ಎಸಿಎ-ವಿಡಿಸಿಎ ಕ್ರಿಕೆಟ್ ಕ್ರೀಡಾಂಗಣ, ವಿಶಾಖಪಟ್ಟಣಂ
  • ದಿನಾಂಕ ಮತ್ತು ಸಮಯ, ಬುಧವಾರ, ಏಪ್ರಿಲ್ 3, ಸಂಜೆ 7:30 (ಭಾರತೀಯ ಕಾಲಮಾನ)
  • ಲೈವ್ ಬ್ರಾಡ್ಕಾಸ್ಟ್ ಮತ್ತು ಸ್ಟ್ರೀಮಿಂಗ್ ವಿವರಗಳು ಸ್ಟಾರ್ ಸ್ಪೋರ್ಟ್ಸ್ ಚಾನೆಲ್ಗಳು, ಜಿಯೋ ಸಿನೆಮಾ ಅಪ್ಲಿಕೇಶನ್ ಮತ್ತು ವೆಬ್ಸೈಟ್

ಇತ್ತಂಡಗಳ ಮುಖಾಮುಖಿ

  • ಆಡಿದ ಪಂದ್ಯಗಳು: 32
  • ಡೆಲ್ಲಿ ಕ್ಯಾಪಿಟಲ್ಸ್ 15 ಗೆಲುವು
  • ಕೋಲ್ಕತಾ ನೈಟ್ ರೈಡರ್ಸ್ ಗೆ 16 ಗೆಲುವು
  • ಫಲಿತಾಂಶ ಇಲ್ಲ 01
  • ಮೊದಲ ಬಾರಿಗೆ ಆಡಿದ್ದು ಮೇ 13, 2008
  • ಕೊನೆಯ ಬಾರಿ ಆಡಿದ್ದು ಏಪ್ರಿಲ್ 20, 2023

ಸಂಭಾವ್ಯ ಪ್ಲೇಯಿಂಗ್ ಇಲೆವೆನ್


ಡೆಲ್ಲಿ ಕ್ಯಾಪಿಟಲ್ಸ್: ಡೇವಿಡ್ ವಾರ್ನರ್, ಪೃಥ್ವಿ ಶಾ, ಮಿಚೆಲ್ ಮಾರ್ಷ್, ರಿಷಭ್ ಪಂತ್ (ನಾಯಕ, ವಿಕೆಟ್​ ಕೀಪರ್​ ), ಟ್ರಿಸ್ಟಾನ್ ಸ್ಟಬ್ಸ್, ಅಭಿಷೇಕ್ ಪೊರೆಲ್, ಅಕ್ಷರ್ ಪಟೇಲ್, ಅನ್ರಿಕ್ ನಾರ್ಟ್ಜೆ, ಮುಖೇಶ್ ಕುಮಾರ್, ಖಲೀಲ್ ಅಹ್ಮದ್, ಕುಲದೀಪ್ ಯಾದವ್.

ಕೋಲ್ಕತಾ ನೈಟ್ ರೈಡರ್ಸ್: ಫಿಲ್ ಸಾಲ್ಟ್ (ವಿಕೆಟ್ ಕೀಪರ್), ಸುನಿಲ್ ನರೈನ್, ವೆಂಕಟೇಶ್ ಅಯ್ಯರ್, ಆಂಗ್ರಿಶ್ ರಘುವಂಶಿ, ಶ್ರೇಯಸ್ ಅಯ್ಯರ್, ರಿಂಕು ಸಿಂಗ್, ರಮಣ್ದೀಪ್ ಸಿಂಗ್, ಆಂಡ್ರೆ ರಸೆಲ್, ಮಿಚೆಲ್ ಸ್ಟಾರ್ಕ್, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಭವಿಷ್ಯ

Dina Bhavishya : ಈ ರಾಶಿಯವರ ಬೆನ್ನ ಹಿಂದೆ ನಡೆಯುತ್ತೆ ಪಿತೂರಿ..ಎಚ್ಚರವಾಗಿರಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಶುಕ್ಲ ಪಕ್ಷದ ದಶಮಿ ದಿನವಾದ ಇಂದು ದ್ವಾದಶಿ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಕನ್ಯಾ ರಾಶಿಯಿಂದ ಶನಿವಾರ ತುಲಾ ರಾಶಿಯನ್ನು ಬೆಳಗ್ಗೆ 06:22ಕ್ಕೆ ಪ್ರವೇಶಿಸುತ್ತಾನೆ. ಮೇಷ, ಕಟಕ, ಕನ್ಯಾ, ವೃಶ್ಚಿಕ, ಧನಸ್ಸು, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ವೃಷಭ ರಾಶಿಯವರು ಶಾಂತ ಮನಸ್ಥಿತಿಯು ಉತ್ಸಾಹ ತುಂಬಿ ಕಾರ್ಯದಲ್ಲಿ ಯಶಸ್ಸು ಸಿಗುವುದು. ದಿನದ ಮಟ್ಟಿಗೆ ಖರ್ಚು ಇರಲಿದೆ. ಪ್ರೀತಿ ಪಾತ್ರರಿಂದ ಕಿರಿಕಿರಿ ಸಾಧ್ಯತೆ ಇದೆ. ಮಿಥುನ ರಾಶಿಯವರು ಜೀವನದಲ್ಲಿ ಅಭದ್ರತೆ ಮಾನಸಿಕ ಒತ್ತಡ ಉಂಟುಮಾಡುವ ಸಾಧ್ಯತೆ ಇದೆ. ಹೂಡಿಕೆಗೆ ಸಂಬಂಧಿಸಿದ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕಛೇರಿ ಕೆಲಸಗಳು ನಿಧಾನವಾಗಿ ಸಾಗುವುದು. ಕಟಕ ರಾಶಿಯವರು ಬಿಡುವಿಲ್ಲದ ಕೆಲಸದಿಂದ ಆಯಾಸ ಆಗಲಿದೆ. ಕುಟುಂಬದ ಸಂತಸ ಹೆಚ್ಚಿಸಲು ಪ್ರಯತ್ನಿಸುವಿರಿ. ಸಭೆ-ಸಮಾರಂಭಗಳಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಸ್ವಲ್ಪ ಖರ್ಚಿನ ದಿನವಿದು. ಬಹುದಿನಗಳ ಕನಸು ನನಸಾಗುವ ಸಮಯವಿದು. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (18-05-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಶುಕ್ಲ ಪಕ್ಷ
ತಿಥಿ: ದಶಮಿ 11:22 ವಾರ: ಶನಿವಾರ
ನಕ್ಷತ್ರ: ಉತ್ತರ ಪಾಲ್ಗುಣಿ 24:22 ಯೋಗ: ಹರ್ಷಣ 10:23
ಕರಣ: ಗರಜ 11:22 ಅಮೃತ ಕಾಲ: ಮಧ್ಯಾಹ್ನ 04:16 ರಿಂದ 06:04
ದಿನದ ವಿಶೇಷ: ಶ್ರೀನಿಮಿಷಾಂಬಾ ಜಯಂತಿ, ಬೆಂಗಳೂರು ಕೋಟೆ ವೆಂಕಟರಮಣ ರಥೋತ್ಸವ

ಸೂರ್ಯೋದಯ : 05:54   ಸೂರ್ಯಾಸ್ತ : 06:39

ರಾಹುಕಾಲ :ಬೆಳಗ್ಗೆ 9.00 ರಿಂದ 10.30
ಗುಳಿಕಕಾಲ: ಬೆಳಗ್ಗೆ 6.00 ರಿಂದ 7.30
ಯಮಗಂಡಕಾಲ: ಮಧ್ಯಾಹ್ನ 1.30 ರಿಂದ 3.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಹಣಕಾಸು ಪ್ರಗತಿ ಸಾಧಾರಣವಾಗಿರಲಿದೆ. ಹೊಸದೊಂದು ವಸ್ತು ಖರೀದಿಯಿಂದ ಸಂತೋಷಗೊಳ್ಳುವಿರಿ. ಆರೋಗ್ಯದಲ್ಲಿ ಉತ್ತಮವಾಗಿರಲಿದೆ. ಉದ್ಯೋಗದಲ್ಲಿ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

Horoscope Today

ವೃಷಭ: ಶಾಂತ ಮನಸ್ಥಿತಿಯು ಉತ್ಸಾಹ ತುಂಬಿ ಕಾರ್ಯದಲ್ಲಿ ಯಶಸ್ಸು ಸಿಗುವುದು. ದಿನದ ಮಟ್ಟಿಗೆ ಖರ್ಚು ಇರಲಿದೆ. ಪ್ರೀತಿ ಪಾತ್ರರಿಂದ ಕಿರಿಕಿರಿ ಸಾಧ್ಯತೆ ಇದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಕಾಣಲಿದೆ. ದಿನದ ಕೊನೆಯಲ್ಲಿ ಯಾವುದಾದರೂ ಸುದ್ದಿ ದುಃಖ ತರುವುದು.ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 2

Horoscope Today

ಮಿಥುನ: ಜೀವನದಲ್ಲಿ ಅಭದ್ರತೆ ಮಾನಸಿಕ ಒತ್ತಡ ಉಂಟುಮಾಡುವ ಸಾಧ್ಯತೆ ಇದೆ. ಹೂಡಿಕೆಗೆ ಸಂಬಂಧಿಸಿದ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕಛೇರಿ ಕೆಲಸಗಳು ನಿಧಾನವಾಗಿ ಸಾಗುವುದು. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಕಟಕ: ಬಿಡುವಿಲ್ಲದ ಕೆಲಸದಿಂದ ಆಯಾಸ ಆಗಲಿದೆ. ಕುಟುಂಬದ ಸಂತಸ ಹೆಚ್ಚಿಸಲು ಪ್ರಯತ್ನಿಸುವಿರಿ. ಸಭೆ-ಸಮಾರಂಭಗಳಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಸ್ವಲ್ಪ ಖರ್ಚಿನ ದಿನವಿದು. ಬಹುದಿನಗಳ ಕನಸು ನನಸಾಗುವ ಸಮಯವಿದು. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

Horoscope Today

ಸಿಂಹ: ಆಪ್ತರು ನಿಮ್ಮ ತಾಳ್ಮೆ ಪರೀಕ್ಷಿಸುವವರು. ಯಾವುದೇ ವಿಷಯಗಳಲ್ಲಿ ದೃಢ ನಿರ್ಧಾರ ಇರಲಿ, ರಾಜಿಯಾಗದ ಗುಣ ನಿಮ್ಮದು. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ದಿನದ ಮಧ್ಯಭಾಗದಲ್ಲಿ ಸ್ವಲ್ಪ ಮನೋ ಒತ್ತಡ ಇರಲಿದೆ. ಉದ್ಯೋಗ ಆರೋಗ್ಯದಲ್ಲಿ ಉತ್ತಮ ಇರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ಕನ್ಯಾ: ಆಪ್ತರೊಂದಿಗೆ ಅನೇಕ ವಿಚಾರಗಳನ್ನು ಹಂಚಿಕೊಳ್ಳುವಿರಿ. ಅತಿಯಾದ ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ. ಹಣಕಾಸು ಪ್ರಗತಿ ಸಾಧಾರಣವಾಗಿರಲಿದೆ. ಉದ್ಯೋಗದ ಸ್ಥಳದಲ್ಲಿ ಪ್ರಶಂಸೆ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆರೋಗ್ಯ ಉತ್ತಮವಾಗಿರಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಸಾಧ್ಯತೆಯಿದೆ. ಕುಟುಂಬದ ಸದಸ್ಯರ ಮಧ್ಯೆ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆಯಿದೆ. ನಿಮ್ಮ ಬೆನ್ನ ಹಿಂದೆ ಪಿತೂರಿ ಮಾಡುವ ಜನರ ಬಗ್ಗೆ ಎಚ್ಚರಿಕೆ ಇರಲಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 3

Horoscope Today

ವೃಶ್ಚಿಕ: ಆಹಾರದ ವ್ಯತ್ಯಾಸದಿಂದ ಆರೋಗ್ಯ ಹದಗೆಡುವ ಸಾಧ್ಯತೆಯಿದೆ. ಆಪ್ತರೊಂದಿಗಿನ ಮಾತುಕತೆಯಲ್ಲಿ ವ್ಯತಿರಿಕ್ತವಾದ ಪರಿಣಾಮದಿಂದಾಗಿ ಜಗಳವಾಗುವ ಸಾಧ್ಯತೆಯಿದೆ, ಆದಷ್ಟು ಮಾತು ನಿಯಂತ್ರಣದಲ್ಲಿರಲಿ. ಇದರ ಮಧ್ಯೆ ಉದ್ಯೋಗದ ಸ್ಥಳದಲ್ಲಿ ಕೌಶಲ್ಯದ ಕೆಲಸ ನಿಮಗೆ ಯಶಸ್ಸು ತಂದು ಕೊಡುವುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಧನಸ್ಸು: ಅತಿಯಾದ ಒತ್ತಡದ ಕಾರ್ಯ ನಿಮ್ಮ ಮನಸ್ಸಿಗೆ ಘಾಸಿ ಮಾಡುವ ಸಾಧ್ಯತೆ ಇದೆ. ಆಪ್ತರೊಂದಿಗೆ ಪ್ರಯಾಣ ಮಾಡುವಿರಿ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಮಕರ: ನಿಸ್ಪೃಹ ಮನೋಭಾವದ ಕಾರ್ಯ ಸಿದ್ಧಿ ಮಾಡುವುದು. ಈ ಹಿಂದೆ ಮಾಡಿದ ಹೂಡಿಕೆ ವ್ಯವಹಾರವು ಇಮ್ಮಡಿ ಲಾಭ ತರುವ ಸಾಧ್ಯತೆಗಳು ಹೆಚ್ಚು.ಅನಗತ್ಯವಾಗಿ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಕುಂಭ: ಆರೋಗ್ಯದ ಕಡೆಗೆ ಕಾಳಜಿ ವಹಿಸುವುದು ಅಗತ್ಯ.ಅಧಿಕ ರಕ್ತದೊತ್ತಡ ಹಾಗೂ ಸಕ್ಕರೆ ಕಾಯಿಲೆ ಇರುವವರು ಹೆಚ್ಚು ಆರೋಗ್ಯದ ಕಡೆಗೆ ಕಾಳಜಿ ವಹಿಸಬೇಕು. ವ್ಯಾಪಾರದಲ್ಲಿ ಪ್ರಗತಿ ಇರಲಿದೆ. ಹೊಸದಾಗಿ ಕಾರ್ಯ ಪ್ರಾರಂಭಿಸುವುದು ದಿನದ ಮಟ್ಟಿಗೆ ಬೇಡ. ಜೀವನದ ಭವಿಷ್ಯದ ಬಗ್ಗೆ ಅತಿಯಾಗಿ ಚಿಂತಿಸಿ ಮನಸ್ಥಿತಿಯನ್ನು ಹಾಳು ಮಾಡಿಕೊಳ್ಳುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 9

Horoscope Today

ಮೀನ: ಕುಟುಂಬದ ಸದಸ್ಯರೊಂದಿಗೆ ಭಿನ್ನಾಭಿಪ್ರಾಯದಿಂದ ಮಾನಸಿಕ ಅಸಮತೋಲನ ಆಗಲಿದೆ. ನಡೆದು ಹೋದ ಘಟನೆಗಳ ಬಗ್ಗೆ ಚಿಂತಿಸಿ ಫಲವಿಲ್ಲ. ಅತಿಥಿಗಳ ಆಗಮನ ಹರ್ಷ ತರುವುದು. ಉದ್ಯೋಗದ ಬಗ್ಗೆ ಸಾಧಾರಣವಾಗಿರಲಿದೆ.ಕೌಟುಂಬಿಕ ವ್ಯಾಜ್ಯಗಳು ಹುಟ್ಟುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಪ್ರಮುಖ ಸುದ್ದಿ

IPL 2024 : ಲಕ್ನೊ ವಿರುದ್ಧವೂ ಸೋತ ಮುಂಬೈ; ಹತ್ತನೇ ಸ್ಥಾನ ಕಾಯಂ

IPL 2024: ಮೊದಲ ಬ್ಯಾಟ್ ಮಾಡಿದ ಲಕ್ನೊ ತಂಡ ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 214 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿ ಮುಂಬೈ ತನ್ನೆಲ್ಲ ಓವರ್​ಗಳು ಮುಕ್ತಾಯಗೊಂಡಾಗ 6 ವಿಕೆಟ್​ ನಷ್ಟಕ್ಕೆ 196 ರನ್​ ಬಾರಿಸಿ ಸೋಲೊಪ್ಪಿಕೊಂಡಿತು.

VISTARANEWS.COM


on

ipl 2024
Koo

ಮುಂಬೈ: ಹಾರ್ದಿಕ್​ ಪಾಂಡ್ಯಗೆ ನಾಯಕತ್ವ ನೀಡಿದ್ದ ಮುಂಬೈ ಇಂಡಿಯನ್ಸ್ ತಂಡದ ಯೋಜನೆ ಸಂಪೂರ್ಣವಾಗಿ ಬುಡಮೇಲಾಗಿದೆ. ಹೀಗಾಗಿ ಐಪಿಎಲ್ 17ನೇ ಆವೃತ್ತಿಯ (IPL 2024) 14 ಪಂದ್ಯಗಳಲ್ಲಿ 10 ಸೋಲು ಮತ್ತು ಕೇವಲ 4 ಗೆಲುವಿನೊಂದಿಗೆ 8 ಅಂಕಗಳೊಂದಿಗೆ ಅಭಿಯಾನ ಮುಗಿಸಿದೆ. ತವರಿನಲ್ಲಿ ನಡೆದ ಕೊನೇ ಪಂದ್ಯದಲ್ಲಿ ಲಕ್ನೊ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿಯೂ 18 ರನ್​ಗಳ ಸೋಲಿಗೆ ಒಳಗಾಗಿದೆ. ಎರಡೂ ತಂಡಗಳಿಗೆ ಇದು ಕೊನೇ ಪಂದ್ಯವಾಗಿತ್ತು. ಈ ಪಂದ್ಯದಲ್ಲಿ ಗೆದ್ದಿರುವ ಲಕ್ನೊ ಸೂಪರ್ ಜೈಂಟ್ಸ್ ತಂಡ ಒಟ್ಟು 7 ಗೆಲುವಿನೊಂದಿಗೆ 14 ಅಂಕಗಳ ಸಮೇತ ಏಳನೇ ಸ್ಥಾನ ಪಡೆದುಕೊಂಡಿದೆ. ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್​ ಬ್ಯಾಟರ್​ಗಳು ಮತ್ತೊಂದು ಬಾರಿ ತಮ್ಮ ಅಸಮರ್ಥತೆಯನ್ನು ಪ್ರದರ್ಶಿಸಿ ಅತ್ಯಂತ ನಿರಾಶಾದಾಯಕ ಸೀಸನ್ ಅನ್ನು ಎದುರಿಸಿದರು.

ಇಲ್ಲಿನ ವಾಖೆಂಡೆ ಕ್ರಿಕೆಟ್ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ತಂಡ ಚೇಸಿಂಗ್ ಸುಲಭ ಎಂಬ ಯೋಜನೆಯೊಂದಿಗೆ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲ ಬ್ಯಾಟ್ ಮಾಡಿದ ಲಕ್ನೊ ತಂಡ ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 214 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿ ಮುಂಬೈ ತನ್ನೆಲ್ಲ ಓವರ್​ಗಳು ಮುಕ್ತಾಯಗೊಂಡಾಗ 6 ವಿಕೆಟ್​ ನಷ್ಟಕ್ಕೆ 196 ರನ್​ ಬಾರಿಸಿ ಸೋಲೊಪ್ಪಿಕೊಂಡಿತು. ಚೇಸಿಂಗ್ ಸುಲಭ ಎಂದುಕೊಂಡಿದ್ದ ಮುಂಬೈ ತಂಡಕ್ಕೆ ಮಧ್ಯದಲ್ಲಿ ಸುರಿದ ಮಳೆ ಅಡಚಣೆ ಮಾಡಿತು. ಏಕಾಏಕಿ ವಾತಾವರಣ ತಂಪುಗೊಂಡ ಕಾರಣ ಇಬ್ಬನಿ ಪರಿಣಾಮವನ್ನು ಅನುಭವಿಸಿ ಸುಲಭವಾಗಿ ಸ್ಕೋರ್ ಬಾರಿಸಿ ಗೆಲ್ಲುವ ಯೋಜನೆ ವಿಫಲಗೊಂಡಿತು.

ದೊಡ್ಡ ಗುರಿಯನ್ನು ಬೆನ್ನಟ್ಟಲು ಹೊರಟ ಮುಂಬೈ ತಂಡ ಅದ್ಭುತ ಆರಂಭ ಪಡೆಯಿತು. ರೋಹಿತ್ ಶರ್ಮಾ 38 ಎಸೆತಕ್ಕೆ 6 ರನ್ ಬಾರಿಸಿ ಮಿಂಚಿದರು. ಡೀವಾಲ್ಡ್​ ಬ್ರೇವಿಸ್​ 23 ರನ್ ಹೊಡೆದರು. ಈ ಜೋಡಿ 8. 4 ಓವರ್​ಗಳಲ್ಲಿ ಮೊದಲ ವಿಕೆಟ್​ಗೆ 84 ರನ್ ಬಾರಿಸಿ ಗೆಲುವಿನ ನಿರೀಕ್ಷೆ ಹುಟ್ಟಿಸಿತು. ಆದರೆ, ಆ ಬಳಿಕ ಮುಂಬೈ ತಂಡ ಬ್ಯಾಟಿಂಗ್ ವೈಫಲ್ಯ ಪ್ರದರ್ಶನಗೊಂಡಿತು. ಸೂರ್ಯಕುಮಾರ್ ಶೂನ್ಯಕ್ಕೆ ಔಟಾದರೆ ಇಶಾನ್ ಕಿಶನ್ 14 ರನ್ ಬಾರಿಸಿದರು. ಹಾರ್ದಿಕ್ ಪಾಂಡ್ಯ ಕೊಡುಗೆ ಕೇವಲ 16 ರನ್​. ನೆಹಲ್ ವದೇರಾ 1 ರನ್​ಗೆ ಔಟಾಗುವ ಮೂಲಕ ಮುಂಬೈ ಆಸೆ ಕಮರಿತು. ಏತನ್ಮದ್ಯೆ ಮಧ್ಯಮ ಕ್ರಮಾಂಕದಲ್ಲಿ ಅಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ ನಮನ್​ ಧಿರ್ 28 ಎಸೆತಕ್ಎಕ 68 ರನ್ ಬಾರಿಸಿದರು. ಅದರೆ ಅವರಿಗೆ ಗೆಲುವು ತಂದು ಕೊಡಲು ಸಾಧ್ಯವಾಗಲಿಲ್ಲ.

ಇದನ್ನೂ ಓದಿ: Rohit Sharma : ಆಡಿಯೊ ಬಂದ್ ಮಾಡಪ್ಪ; ಕ್ಯಾಮೆರಾಮನ್​ಗೆ ಕೈಮುಗಿದು ಬೇಡಿಕೊಂಡ ರೋಹಿತ್​ ಶರ್ಮಾ

ಪೂರನ್ ಅಬ್ಬರ್​

ಅದಕ್ಕಿಂತ ಮೊದಲು ಬ್ಯಾಟ್ ಮಾಡಿದ ಲಕ್ನೊ ಪರ ಆರಂಭಿಕ ಬ್ಯಾಟರ್ ರಾಹುಲ್​ ಕಷ್ಟಪಟ್ಟು 55 ರನ್ ಬಾರಿಸಿದರು. ಆದರೆ ಮಧ್ಯಮ ಕ್ರಮಾಂಕದಲ್ಲಿ ನಿಕೋಲಸ್​ ಪೂರನ್ 29 ಎಸೆತಗಳಿಗೆ 75 ರನ್​ ಬಾರಿಸಿ ದೊಡ್ಡ ಮೊತ್ತ ಪೇರಿಸಲು ನೆರವಾದರು. ಕನ್ನಡಿಗ ದೇವದತ್​ ಪಡಿಕ್ಕಲ್​ ಮತ್ತೊಂದ ಬಾರಿ ವಿಫಲಗೊಂಡು ಶೂನ್ಯಕ್ಕೆ ಔಟಾದರೆ ಸ್ಟೊಯ್ನಿಸ್ 28 ರನ್ ಚಚ್ಚಿದರು. ದೀಪಕ್​ ಹೂಡ 11 ರನ್ ಹೊಡೆದರೆ ಕೊನೆಯಲ್ಲಿ ಆಯುಷ್ ಬದೊನಿ 22 ರನ್​ ಔಟಾದರೆ. ಕೃಣಾಲ್ ಪಾಂಡ್ಯ 12 ರನ್​ಗೆ ಔಟಾದರು.

Continue Reading

ದೇಶ

Kanhaiya Kumar: ಪ್ರಚಾರದ ವೇಳೆ ಕಾಂಗ್ರೆಸ್‌ ಅಭ್ಯರ್ಥಿ ಕನ್ಹಯ್ಯ ಕುಮಾರ್‌ ಮೇಲೆ ಹಲ್ಲೆ; ವಿಡಿಯೊ ಇಲ್ಲಿದೆ

Kanhaiya Kumar: ದೆಹಲಿಯ ಕರ್ತಾರ್‌ ನಗರದಲ್ಲಿರುವ ಪಕ್ಷದ ಕಚೇರಿಯಿಂದ ಕನ್ಹಯ್ಯ ಕುಮಾರ್‌ ಅವರು ಹೊರಗೆ ಹೋಗುತ್ತಿದ್ದರು. ಇದೇ ವೇಳೆ ಏಳೆಂಟು ಜನ ಹಾರ ಹಿಡಿದುಕೊಂಡು ಬಂದರು. ಹಾರ ಹಾಕುವ ನೆಪದಲ್ಲಿ ಅವರು ಕನ್ಹಯ್ಯ ಕುಮಾರ್‌ ಮೇಲೆ ಹಲ್ಲೆ ನಡೆಸಿದರು. ಅವರ ಮೇಲೆ ಮಸಿ ಎರಚುವ ಜತೆಗೆ ತಳ್ಳಿದರು. ಘಟನೆಯಲ್ಲಿ ನಾಲ್ವರು ಮಹಿಳೆಯರಿಗೆ ಗಾಯಗಳಾಗಿವೆ. ಪತ್ರಕರ್ತರೊಬ್ಬರು ಬಿದ್ದು ಗಾಯ ಮಾಡಿಕೊಂಡಿದ್ದಾರೆ ಎಂಬುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.

VISTARANEWS.COM


on

Kanhaiya Kumar
Koo

ನವದೆಹಲಿ: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಈಶಾನ್ಯ ದೆಹಲಿ ಕಾಂಗ್ರೆಸ್‌ ಅಭ್ಯರ್ಥಿ ಕನ್ಹಯ್ಯ ಕುಮಾರ್‌ (Kanhaiya Kumar) ಅವರು ಪ್ರಚಾರ ಮಾಡುವ ವೇಳೆ ಅವರ ಮೇಲೆ ಕೆಲ ಕಿಡಿಗೇಡಿಗಳು ಹಲ್ಲೆ ನಡೆಸಿದ್ದಾರೆ. ಪೂರ್ವ ದೆಹಲಿಯ ನ್ಯೂ ಉಸ್ಮಾನ್‌ಪುರ ಪ್ರದೇಶದಲ್ಲಿ ಕನ್ಹಯ್ಯ ಕುಮಾರ್‌ ಅವರು ಚುನಾವಣೆ ಪ್ರಚಾರ ನಡೆಸುತ್ತಿದ್ದರು. ಇದೇ ವೇಳೆ, ಏಳೆಂಟು ಜನ ಅವರಿಗೆ ಹಾರ ಹಾಕಲು ಬಂದಿದ್ದು, ಹಾರ ಹಾಕಿದ ಕೂಡಲೇ ಕಾಂಗ್ರೆಸ್‌ ಅಭ್ಯರ್ಥಿ ಮೇಲೆ ಹಲ್ಲೆ ನಡೆಸಿದ್ದಾರೆ. ಕೆಲವು ಜನ ಅವರ ಮೇಲೆ ಮಸಿ ಎರಚಿದ್ದಾರೆ.

ಕನ್ಹಯ್ಯ ಕುಮಾರ್‌ ಅವರ ಮೇಲೆ ಹಲ್ಲೆ ನಡೆದ ಬಳಿಕ ಬ್ರಹ್ಮಪುರಿಯ ಆಪ್‌ ಕೌನ್ಸಿಲರ್‌ ಛಾಯಾ ಗೌರವ್‌ ಶರ್ಮಾ ಅವರು ದೂರು ದಾಖಲಿಸಿದ್ದಾರೆ. “ಕರ್ತಾರ್‌ ನಗರದಲ್ಲಿರುವ ಪಕ್ಷದ ಕಚೇರಿಯಿಂದ ಕನ್ಹಯ್ಯ ಕುಮಾರ್‌ ಅವರು ಹೊರಗೆ ಹೋಗುತ್ತಿದ್ದರು. ಇದೇ ವೇಳೆ ಏಳೆಂಟು ಜನ ಹಾರ ಹಿಡಿದುಕೊಂಡು ಬಂದರು. ಹಾರ ಹಾಕುವ ನೆಪದಲ್ಲಿ ಅವರು ಕನ್ಹಯ್ಯ ಕುಮಾರ್‌ ಮೇಲೆ ಹಲ್ಲೆ ನಡೆಸಿದರು. ಅವರ ಮೇಲೆ ಮಸಿ ಎರಚುವ ಜತೆಗೆ ತಳ್ಳಿದರು. ಘಟನೆಯಲ್ಲಿ ನಾಲ್ವರು ಮಹಿಳೆಯರಿಗೆ ಗಾಯಗಳಾಗಿವೆ. ಪತ್ರಕರ್ತರೊಬ್ಬರು ಬಿದ್ದು ಗಾಯ ಮಾಡಿಕೊಂಡಿದ್ದಾರೆ” ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಕನ್ಹಯ್ಯ ಕುಮಾರ್‌ ಮೇಲೆ ದಾಳಿ ನಡೆಸಿದ ಏಳೆಂಟು ಜನರಲ್ಲಿ ಇಬ್ಬರು ವಿಡಿಯೊ ಬಿಡುಗಡೆ ಮಾಡಿದ್ದಾರೆ. ಕೆಲ ವರ್ಷಗಳ ಹಿಂದೆ ಕನ್ಹಯ್ಯ ಕುಮಾರ್‌ ದೇಶ ಒಡೆಯುವ (ಟುಕ್ಡೆ ಗ್ಯಾಂಗ್‌ ಎಂದೇ ಖ್ಯಾತಿ) ಹೇಳಿಕೆ ನೀಡಿದ್ದು, ಸೇನೆಯ ವಿರುದ್ಧ ಮಾತನಾಡಿದ ಹಿನ್ನೆಲೆಯಲ್ಲಿ ಅವರು ಕನ್ಹಯ್ಯ ಕುಮಾರ್‌ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬದಾಗಿ ಹೇಳಿದ್ದಾರೆ ಎನ್ನಲಾಗಿದೆ. ಆದಾಗ್ಯೂ, ದಾಳಿಗೆ ನಿಖರ ಕಾರಣ ಗೊತ್ತಾಗಿಲ್ಲ.

ಕನ್ಹಯ್ಯ ಸ್ಪರ್ಧೆಗೆ ಪಕ್ಷದಲ್ಲೇ ವಿರೋಧ

ಕನ್ಹಯ್ಯ ಕುಮಾರ್‌ ಅವರಿಗೆ ಕಾಂಗ್ರೆಸ್‌ ಟಿಕೆಟ್‌ ನೀಡಿರುವುದಕ್ಕೆ ಕೆಲ ದಿನಗಳ ಹಿಂದೆ ಕಾಂಗ್ರೆಸ್‌ನಲ್ಲಿಯೇ ವಿರೋಧ ವ್ಯಕ್ತವಾಗಿತ್ತು. ಪಕ್ಷದ ಪ್ರಧಾನ ಕಚೇರಿ ಎದುರು ಜಮಾನಿಸಿದ ನೂರಾರು ಕಾಂಗ್ರೆಸ್‌ ಕಾಂಗ್ರೆಸಿಗರು ಹೊರಗಿನವರು ಬೇಡ, ಸ್ಥಳೀಯರನ್ನೇ ಕಣಕ್ಕಿಳಿಸಿ ಎಂದು ಒತ್ತಾಯಿಸಿದ್ದರು. ಮೌಜ್‌ಪುರ ಮೆಟ್ರೋ ಸ್ಟೇಷನ್ ಬಳಿ ಪ್ರತಿಭಟನೆ ನಡೆದಿದ್ದು, ನಮಗೆ ಸ್ಥಳೀಯ ನಾಯಕರೇ ಬೇಕು ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದಿದ್ದರು.‌

ಈಶಾನ್ಯ ದೆಹಲಿಯಿಂದ ಕನ್ಹಯ್ಯ ಕುಮಾರ್ ಸ್ಪರ್ಧಿಸುತ್ತಿದ್ದು, ಬಿಜೆಪಿಯ ಮನೋಜ್ ತಿವಾರಿ ವಿರುದ್ಧ ಕಣಕ್ಕೆ ಇಳಿದಿದ್ದಾರೆ. 37 ವರ್ಷದ ಕುಮಾರ್ ಎರಡನೇ ಬಾರಿಗೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. 2019ರಲ್ಲಿ, ಅವರು ಬಿಹಾರದ ಬೆಗುಸರಾಯ್​ನಿಂದ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಅಲ್ಲಿ ಅವರು ಕೇಂದ್ರ ಸಚಿವ ಮತ್ತು ಭಾರತೀಯ ಜನತಾ ಪಕ್ಷದ ನಾಯಕ ಗಿರಿರಾಜ್ ಸಿಂಗ್ ವಿರುದ್ಧ ಸೋತಿದ್ದರು. ಅವರು 2021ರಲ್ಲಿ ಕಾಂಗ್ರೆಸ್ ಸೇರಿದ್ದರು.

ಇದನ್ನೂ ಓದಿ: Amit Shah: ಪ್ರಚಾರದ ವೇಳೆ ಕೇಜ್ರಿವಾಲ್‌ ನೀಡಿದ ಹೇಳಿಕೆಯಿಂದ ನ್ಯಾಯಾಂಗ ನಿಂದನೆ; ಅಮಿತ್‌ ಶಾ ವಾಗ್ದಾಳಿ

Continue Reading

ಸಂಪಾದಕೀಯ

ವಿಸ್ತಾರ ಸಂಪಾದಕೀಯ: ಗ್ರೇಸ್‌ ಮಾರ್ಕ್ಸ್‌ ಅಲ್ಲ, ಗುಣಮಟ್ಟದ ಶಿಕ್ಷಣವೇ ಫಲಿತಾಂಶಕ್ಕೆ ದಾರಿ

ಕೃಪಾಂಕಗಳನ್ನು ನೀಡಿ ವಿದ್ಯಾರ್ಥಿಗಳ ಆತ್ಮವಿಶ್ವಾಸ ಹೆಚ್ಚಿಸಬಹುದು ಎಂದು ಇಲಾಖೆ ಭಾವಿಸಿದರೆ, ಅದು ಸಾಧ್ಯವಾಗದ ಮಾತು. ಕೃಪಾಂಕ ಪಡೆದು ಪಿಯುಸಿಗೋ ಇತರ ಕೋರ್ಸ್‌ಗಳಿಗೋ ಹೋದ ವಿದ್ಯಾರ್ಥಿ ಅಲ್ಲಿ ಕಂಗಾಲಾಗುತ್ತಾನೆ. ಇದು ವಿದ್ಯಾರ್ಥಿಗಳ ಭವಿಷ್ಯಕ್ಕೇ ತೊಂದರೆ. ಇಲ್ಲಿ ಕೃಪಾಂಕ ಪಡೆದವರು ಅಲ್ಲೂ ಅದನ್ನೇ ನಿರೀಕ್ಷಿಸಿದರೆ ಆಶ್ಚರ್ಯವಿಲ್ಲ. ಆದರೆ ಅಲ್ಲಿ ಹಾಗೆ ನಡೆಯುವುದಿಲ್ಲ. ಜೀವನದಲ್ಲಿಯೂ ಯಾರೂ ಗ್ರೇಸ್‌ ಮಾರ್ಕ್ಸ್‌ ಕೊಡುವುದಿಲ್ಲ. ಪ್ರತಿಭೆಯಿಂದಲೇ ಮೇಲೆ ಬರಬೇಕಾಗುತ್ತದೆ.

VISTARANEWS.COM


on

Siddaramaiah
Koo

ವಿವಿಧ ಇಲಾಖೆ ಅಧಿಕಾರಿಗಳ ಸಭೆ ನಡೆಸಿರುವ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ, ಈ ಬಾರಿಯ ಎಸ್‌ಎಸ್‌ಎಲ್‌ಸಿಯಲ್ಲಿ ಶೇ. 20 ಗ್ರೇಸ್‌ ಮಾರ್ಕ್ಸ್‌ (SSLC Grace Marks) ಕೊಟ್ಟಿದ್ದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಯಾರನ್ನು ಕೇಳಿ ಹೆಚ್ಚುವರಿ ಅಂಕವನ್ನು ಕೊಟ್ಟಿರಿ? ಹೀಗೆ ಅಂಕ ಕೊಡುವ ಅಗತ್ಯತೆ ಏನಿತ್ತು? ಶಿಕ್ಷಣ ಗುಣಮಟ್ಟ ಕುಸಿದಿದ್ದು ಏಕೆ? ಎಂದು ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಶಿಕ್ಷಣದ ಗುಣಮಟ್ಟ ಕುಸಿದಿದ್ದೇಕೆ? ಗ್ರೇಸ್ ಮಾರ್ಕ್ಸ್ ಹೆಚ್ಚಳಕ್ಕೆ ಸಂಬಂಧಪಟ್ಟಂತೆ ಶಿಕ್ಷಣ ತಜ್ಞರು ಸೇರಿ ಹಲವರಿಂದ ವಿರೋಧಗಳು ಕೇಳಿ ಬರುತ್ತಿವೆ. ಗ್ರೇಸ್ ಮಾರ್ಕ್ಸ್ ಕೊಡುವುದು ಅವೈಜ್ಞಾನಿಕ ಎಂಬ ಬಗ್ಗೆ ಅಭಿಪ್ರಾಯಗಳು ಬರುತ್ತಿವೆ. ಹಾಗಾಗಿ ಮುಂದಿನ ಶೈಕ್ಷಣಿಕ ವರ್ಷದಿಂದ ಗ್ರೇಸ್‌ ಮಾರ್ಕ್ಸ್ ಕೊಡುವ ಬಗ್ಗೆ ಮರುಪರಿಶೀಲನೆ ಮಾಡಿ ಎಂದು ಶಿಕ್ಷಣ ಸಚಿವರಿಗೆ ಹಾಗೂ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಶಿಕ್ಷಣ ಸಚಿವರು ಹೇಳುವ ಪ್ರಕಾರ, ಎಸ್‌ಎಸ್‌ಎಲ್‌ಸಿಯಲ್ಲಿ ಈ ಹಿಂದೆಯೂ ಶೇಕಡಾ 5ರಷ್ಟು ಕೃಪಾಂಕಗಳು ಇತ್ತು. ಕೋವಿಡ್ ವೇಳೆ ಅದನ್ನು ಶೇಕಡಾ 10ಕ್ಕೆ ಏರಿಕೆ ಮಾಡಲಾಗಿತ್ತು. ಈ ಬಾರಿ ವಿದ್ಯಾರ್ಥಿಗಳ ಆತ್ಮವಿಶ್ವಾಸ ಹೆಚ್ಚಳಕ್ಕಾಗಿ ಶೇಕಡಾ 20ರಷ್ಟು ಗ್ರೇಸ್‌ ಮಾರ್ಕ್ಸ್‌ ಕೊಡಲಾಗಿದೆ. ಮುಂದಿನ ವರ್ಷದಿಂದ ಇದು ಮುಂದುವರಿಯುವುದಿಲ್ಲ. ಮಕ್ಕಳ ಹಿತದೃಷ್ಟಿಯಿಂದ ಈ ತೀರ್ಮಾನವನ್ನು ತೆಗೆದುಕೊಂಡಿದ್ದಾರೆ.

ಕೃಪಾಂಕಗಳನ್ನು ಯಾಕೆ ಕೊಡಬೇಕಾಯಿತು ಎಂದು ನೋಡೋಣ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಫಲಿತಾಂಶ ಕುಸಿತ (SSLC Result 2024) ಕಂಡಿದೆ. 2022-23ರಲ್ಲಿ 83.89% ಇತ್ತು. ಈ ಬಾರಿ ಗಾಬರಿಗೊಳಿಸುವ ಪ್ರಮಾಣದಲ್ಲಿ, ಅಂದರೆ ಶೇ.30ರಷ್ಟು ಫಲಿತಾಂಶ ಕುಸಿದಿದೆ. ಅಂದರೆ ನಿಜವಾಗಿ ಬಂದಿರುವುದು ಶೇ. 53 ಫಲಿತಾಂಶ ಮಾತ್ರ. ಇದರಿಂದ ಗಾಬರಿಯಾದ ಶಿಕ್ಷಣ ಇಲಾಖೆ, ಮುಖಂಭಂಗ ತಪ್ಪಿಸಿಕೊಳ್ಳುವುದಕ್ಕಾಗಿ ಬರೋಬ್ಬರಿ 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌ ಅನ್ನು ಕೊಟ್ಟಿದೆ. ಈ ವರೆಗೆ ಇದ್ದ ಪಾಸಿಂಗ್‌ ಮಾರ್ಕ್ಸ್‌ ಶೇಕಡಾ 35 ಅನ್ನು ಶೇಕಡಾ 25ಕ್ಕೆ ಇಳಿಸಿದೆ. ಅಂದರೆ 35 ಅಂಕಗಳ ಬದಲಿಗೆ 25 ಅಂಕವನ್ನು ಪಡೆದ ವಿದ್ಯಾರ್ಥಿಯೂ ಪಾಸ್‌ ಎಂದು ಮಾಡಲಾಗಿದೆ. ಅಲ್ಲದೆ, ಕೃಪಾಂಕದ ಪ್ರಮಾಣವನ್ನು ಶೇ. 10ರಿಂದ ಶೇ. 20ಕ್ಕೆ ಹೆಚ್ಚಿಸಲಾಗಿದೆ. ಈ ಎರಡೂ ಕ್ರಮದಿಂದಾಗಿ ಒಟ್ಟಾರೆ 1 ಲಕ್ಷದ 70 ಸಾವಿರ ವಿದ್ಯಾರ್ಥಿಗಳು ಪಾಸ್‌ ಆಗಿದ್ದಾರೆ. ಇಲ್ಲವಾದರೆ ಇಷ್ಟು ಮಕ್ಕಳು ನಪಾಸಾಗುತ್ತಿದ್ದರು. ಇಷ್ಟು ಕೃಪಾಂಕ ನೀಡಿದರೂ ದೊರೆತ ಫಲಿತಾಂಶ ಮಾತ್ರ 73.40% ಅಷ್ಟೇ. ಅಂದರೆ ಕಳೆದ ಸಲಕ್ಕಿಂತ ಶೇಕಡಾ 10.49ರಷ್ಟು ಕಡಿಮೆ. ಫಲಿತಾಂಶ ಹೆಚ್ಚಿಸಲು ಶಿಕ್ಷಣ ಇಲಾಖೆ ಸರ್ಕಸ್ ಮಾಡಿದರೂ ಕಡಿಮೆ ಫಲಿತಾಂಶ ದಾಖಲಾಗಿದೆ.

ಇದೇಕೆ ಹೀಗಾಯಿತು? ಇದು ವೆಬ್‌ ಕಾಸ್ಟಿಂಗ್‌ನಿಂದ ಎಂದು ಶಿಕ್ಷಣ ಇಲಾಖೆಯೇ ಒಪ್ಪಿಕೊಂಡಿದೆ. ಪ್ರಪ್ರಥಮ ಬಾರಿಗೆ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿಗಳ ಮೂಲಕ ವೆಬ್ ಕಾಸ್ಟಿಂಗ್ ಮಾಡುವ ಹೊಸ ಪದ್ಧತಿಯನ್ನು ಪರಿಚಯಿಸಲಾಗಿದೆ. ಪರೀಕ್ಷಾ ಕೊಠಡಿಗಳ ದೃಶ್ಯಾವಳಿಗಳನ್ನು ಮೇಲ್ವಿಚಾರಣೆ ಮಾಡಲು ಎಲ್ಲ ಜಿಲ್ಲೆಗಳಲ್ಲಿ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲಾಗಿತ್ತು. ಹೀಗಾಗಿ ಮೇಲ್ವಿಚಾರಣೆ ಬಿಗಿಯಾಗಿದೆ. ಅಂದರೆ ನಕಲು ಮಾಡಲು ಸಾಧ್ಯವಾಗಲಿಲ್ಲ ಎಂದು ನೇರವಾಗಿ ಹೇಳಬಹುದು. ಅಂದರೆ ಪರೋಕ್ಷವಾಗಿ, ನಕಲು ಮಾಡುವುದಕ್ಕೆ ಅವಕಾಶ ಇದ್ದುದರಿಂದಲೇ ಮೊದಲು ಇಷ್ಟೊಂದು ಫಲಿತಾಂಶ ಬರುತ್ತಿತ್ತು ಎಂದು ಒಪ್ಪಿಕೊಂಡಂತಾಯಿತಲ್ಲವೆ? ಈ ಸಲದ ಫಲಿತಾಂಶ ಕಡಿಮೆ ಎನ್ನುವುದಕ್ಕಿಂತಲೂ, ನಕಲು ಮಾಡಿಯೇ ನಾವು ಹೆಚ್ಚಿನ ಫಲಿತಾಂಶ ಪಡೆಯುತ್ತಿದ್ದೆವು ಎನ್ನುವ ಕಟುವಾಸ್ತವ ನಮ್ಮನ್ನು ಹೆಚ್ಚು ಕುಟುಕಬೇಕು.

ಸರಿ, ಈಗ ಪರೀಕ್ಷಾ ಪದ್ಧತಿ ಬಿಗಿಯಾದಂತಾಯಿತು. ಆದರೆ ಕೃಪಾಂಕಗಳನ್ನು ನೀಡಿ ವಿದ್ಯಾರ್ಥಿಗಳ ಆತ್ಮವಿಶ್ವಾಸ ಹೆಚ್ಚಿಸಬಹುದು ಎಂದು ಇಲಾಖೆ ಭಾವಿಸಿದರೆ, ಅದು ಸಾಧ್ಯವಾಗದ ಮಾತು. ಕೃಪಾಂಕ ಪಡೆದು ಪಿಯುಸಿಗೋ ಇತರ ಕೋರ್ಸ್‌ಗಳಿಗೋ ಹೋದ ವಿದ್ಯಾರ್ಥಿ ಅಲ್ಲಿ ಕಂಗಾಲಾಗುತ್ತಾನೆ. ಇದು ವಿದ್ಯಾರ್ಥಿಗಳ ಭವಿಷ್ಯಕ್ಕೇ ತೊಂದರೆ. ಇಲ್ಲಿ ಕೃಪಾಂಕ ಪಡೆದವರು ಅಲ್ಲೂ ಅದನ್ನೇ ನಿರೀಕ್ಷಿಸಿದರೆ ಆಶ್ಚರ್ಯವಿಲ್ಲ. ಆದರೆ ಅಲ್ಲಿ ಹಾಗೆ ನಡೆಯುವುದಿಲ್ಲ. ಜೀವನದಲ್ಲಿಯೂ ಯಾರೂ ಗ್ರೇಸ್‌ ಮಾರ್ಕ್ಸ್‌ ಕೊಡುವುದಿಲ್ಲ. ಪ್ರತಿಭೆಯಿಂದಲೇ ಮೇಲೆ ಬರಬೇಕಾಗುತ್ತದೆ. ಕೃಪಾಂಕಗಳ ಬದಲು ಸರ್ಕಾರ ಗುಣಮಟ್ಟದ ಬೋಧನೆ, ಅರ್ಹ ಶಿಕ್ಷಕರ ನೇಮಕ, ಸರ್ಕಾರಿ ಶಾಲೆಗಳಲ್ಲಿ ಉತ್ತಮ ಇಂಗ್ಲಿಷ್‌ ಕಲಿಕೆ, ಸ್ಪರ್ಧಾತ್ಮಕ ಶಿಕ್ಷಣದ ಪರಿಚಯ, ಗಟ್ಟಿಮುಟ್ಟಾದ ಶಾಲೆ ಕಟ್ಟಡ ತರಗತಿಗಳು, ಪ್ರಯೋಗಾಲಯ ಹಾಗೂ ಲ್ಯಾಬ್‌ಗಳು, ಅನ್ಯ ಕೆಲಸಗಳಿಂದ ಶಿಕ್ಷಕರಿಗೆ ಮುಕ್ತಿ- ಇವುಗಳನ್ನೆಲ್ಲ ಕಲ್ಪಿಸಬೇಕು. ಆಗ ಉತ್ತಮ ಫಲಿತಾಂಶ ಕೊಡಿ ಎಂದು ಕಟ್ಟುನಿಟ್ಟು ಮಾಡುವುದರಲ್ಲಿ ಅರ್ಥವಿದೆ. ಶಿಕ್ಷಕರಿಂದ ಎಲ್ಲ ಸಾಧ್ಯತೆಗಳನ್ನೂ ಕಿತ್ತುಕೊಂಡು ಒಳ್ಳೆಯ ಫಲಿತಾಂಶ ನೀಡಿ ಎಂದರೆ ಹೇಗೆ ಸಾಧ್ಯ?

ಇದನ್ನೂ ಓದಿ: SSLC Grace Marks: ಯಾರನ್ನು ಕೇಳಿ ಶೇ. 20 ಗ್ರೇಸ್‌ ಮಾರ್ಕ್ಸ್‌ ಕೊಟ್ಟಿರಿ? ಶಿಕ್ಷಣ ಇಲಾಖೆ ವಿರುದ್ಧ ಹರಿಹಾಯ್ದ ಸಿದ್ದರಾಮಯ್ಯ!

Continue Reading
Advertisement
World Aids Vaccine Day
ದೇಶ15 mins ago

World Aids Vaccine Day: ಇಂದು ವಿಶ್ವ ಏಡ್ಸ್ ಲಸಿಕೆ ದಿನ; ಈ ದಿನದ ಹಿನ್ನೆಲೆ ಏನು?

Dina Bhavishya
ಭವಿಷ್ಯ15 mins ago

Dina Bhavishya : ಈ ರಾಶಿಯವರ ಬೆನ್ನ ಹಿಂದೆ ನಡೆಯುತ್ತೆ ಪಿತೂರಿ..ಎಚ್ಚರವಾಗಿರಿ

ipl 2024
ಪ್ರಮುಖ ಸುದ್ದಿ5 hours ago

IPL 2024 : ಲಕ್ನೊ ವಿರುದ್ಧವೂ ಸೋತ ಮುಂಬೈ; ಹತ್ತನೇ ಸ್ಥಾನ ಕಾಯಂ

Anjali Murder Case
ಕರ್ನಾಟಕ5 hours ago

Anjali Murder Case: ಅಂಜಲಿ ಕೊಂದವನ ಎನ್‌ಕೌಂಟರ್ ಮಾಡಿ: ಸಹೋದರಿ ಪೂಜಾ ಆಗ್ರಹ

Kanhaiya Kumar
ದೇಶ5 hours ago

Kanhaiya Kumar: ಪ್ರಚಾರದ ವೇಳೆ ಕಾಂಗ್ರೆಸ್‌ ಅಭ್ಯರ್ಥಿ ಕನ್ಹಯ್ಯ ಕುಮಾರ್‌ ಮೇಲೆ ಹಲ್ಲೆ; ವಿಡಿಯೊ ಇಲ್ಲಿದೆ

Murder Case
ಬೆಂಗಳೂರು5 hours ago

Murder Case: ಯಲಹಂಕದಲ್ಲಿ ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಭೀಕರ ಕೊಲೆ

Siddaramaiah
ಸಂಪಾದಕೀಯ6 hours ago

ವಿಸ್ತಾರ ಸಂಪಾದಕೀಯ: ಗ್ರೇಸ್‌ ಮಾರ್ಕ್ಸ್‌ ಅಲ್ಲ, ಗುಣಮಟ್ಟದ ಶಿಕ್ಷಣವೇ ಫಲಿತಾಂಶಕ್ಕೆ ದಾರಿ

Pavithra Jayaram
ಸಿನಿಮಾ6 hours ago

ನಟಿ ಪವಿತ್ರ ಜಯರಾಮ್‌ ಸಾವಿನ ಬೆನ್ನಲ್ಲೇ ಪ್ರಿಯತಮ ಚಂದ್ರಕಾಂತ್ ಆತ್ಮಹತ್ಯೆ; ಖಿನ್ನತೆಗೆ ನಟ ಬಲಿ?

Rohit Sharma
ಕ್ರೀಡೆ6 hours ago

Rohit Sharma : ಆಡಿಯೊ ಬಂದ್ ಮಾಡಪ್ಪ; ಕ್ಯಾಮೆರಾಮನ್​ಗೆ ಕೈಮುಗಿದು ಬೇಡಿಕೊಂಡ ರೋಹಿತ್​ ಶರ್ಮಾ

Road Accident
ಪ್ರಮುಖ ಸುದ್ದಿ6 hours ago

Road Accident: ಕೊಪ್ಪಳ ಬಳಿ ಟ್ರ್ಯಾಕ್ಟರ್‌ಗೆ ಬಸ್ ಡಿಕ್ಕಿಯಾಗಿ ಮೂವರ ದುರ್ಮರಣ; 20ಕ್ಕೂ ಹೆಚ್ಚು ಮಂದಿಗೆ ಗಾಯ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ9 hours ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ23 hours ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ2 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು2 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ3 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ3 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ3 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20244 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌