Lok Sabha Election 2024: ಶುರುವಾಯ್ತಾ ಕಣ್ಣೀರು ಪಾಲಿಟಿಕ್ಸ್‌? ಪ್ರಚಾರದಲ್ಲಿ ಅತ್ತೇಬಿಟ್ಟರು ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಡಾ. ಸುಧಾಕರ್! - Vistara News

Lok Sabha Election 2024

Lok Sabha Election 2024: ಶುರುವಾಯ್ತಾ ಕಣ್ಣೀರು ಪಾಲಿಟಿಕ್ಸ್‌? ಪ್ರಚಾರದಲ್ಲಿ ಅತ್ತೇಬಿಟ್ಟರು ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಡಾ. ಸುಧಾಕರ್!

Lok Sabha Election 2024: ನಾನು ಸಾಮಾನ್ಯ ಮೇಷ್ಟ್ರ ಮಗ. ಅದರ ಬಗ್ಗೆ ಟೀಕೆ ಮಾಡುತ್ತಾರೆ. ಒಂದು ಗ್ಲಾಸ್ ನೀರು ಕೊಡಲು ಆಗದೇ ಇರುವವರು ಈ ಕ್ಷೇತ್ರಕ್ಕೆ ಶಾಸಕರಾಗಿದ್ದಾರೆ. 22 ಸಾವಿರ ನಿವೇಶನಗಳನ್ನು ಈ ಕ್ಷೇತ್ರದ ಜನರಿಗೆ ಕೊಟ್ಡಿದ್ದೇನೆ‌. ಈಗ ಕಾಂಗ್ರೆಸ್‌ನವರು ಜಾತಿಯನ್ನೇ ಬಂಡವಾಳ ಮಾಡಿಕೊಂಡಿದ್ದಾರೆ. ನಾನು ಒಕ್ಕಲಿಗ. ಆದರೆ ಎಲ್ಲರನ್ನೂ ಜತೆಯಲ್ಲಿ ಕರೆದುಕೊಂಡು ಹೋಗುತ್ತೇನೆ ಎಂದು ರೋಡ್ ಶೋದಲ್ಲಿ ಡಾ. ಕೆ. ಸುಧಾಕರ್ ಕಣ್ಣೀರು ಹಾಕಿದ್ದಾರೆ.

VISTARANEWS.COM


on

Lok Sabha Election 2024 Bjp Chikkaballapur candidate Dr Sudhakar breaks down in tears while campaigning
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು/ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆ‌ (Lok Sabha Election 2024) ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳ ನಾಯಕರ, ಅಭ್ಯರ್ಥಿಗಳ ಪ್ರಚಾರ ಭರಾಟೆ ಜೋರಾಗಿದೆ. ಈ ವೇಳೆ ಕೆಲವು ನಾಯಕರಿಂದ “ಕಣ್ಣೀರು ಪಾಲಿಟಿಕ್ಸ್”‌ ಶುರುವಾಗಿದೆ. ಗುರುವಾರ (ಏಪ್ರಿಲ್‌ 4) ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಸಿ.ಎನ್.‌ ಮಂಜುನಾಥ್‌ ಪರ ಪ್ರಚಾರ ಮಾಡುವ ವೇಳೆ ಜೆಡಿಎಸ್‌ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ (Nikhil Kumaraswamy) ಕಣ್ಣೀರು ಹಾಕಿದ್ದಾರೆ. ಇತ್ತ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಕೆ. ಸುಧಾಕರ್‌ (Dr K Sudhakar) ಸಹ ಮತಯಾಚನೆ ವೇಳೆ ಅತ್ತುಬಿಟ್ಟಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಪ್ರಚಾರ ಕಾರ್ಯದಲ್ಲಿ ನಿರತರಾಗಿದ್ದ ಬಿಜೆಪಿ ಅಭ್ಯರ್ಥಿ ಡಾ. ಕೆ. ಸುಧಾಕರ್‌, ಚಿಕ್ಕಬಳ್ಳಾಪುರದಲ್ಲಿ ನನ್ನ ವಿರುದ್ಧ ಅಪಪ್ರಚಾರ ಮಾಡಿದ್ದಾರೆ. ನನ್ನ ಬಗ್ಗೆ ಬೆಳಗ್ಗೆಯಿಂದ ಸಂಜೆಯವರೆಗೂ ಬಯ್ಯೋದೇ ಕೆಲಸವಾಗಿದೆ. ನಾನು ಸಾಮಾನ್ಯ ಮೇಷ್ಟ್ರ ಮಗ. ಅದರ ಬಗ್ಗೆ ಟೀಕೆ ಮಾಡುತ್ತಾರೆ. ಒಂದು ಗ್ಲಾಸ್ ನೀರು ಕೊಡಲು ಆಗದೇ ಇರುವವರು ಈ ಕ್ಷೇತ್ರಕ್ಕೆ ಶಾಸಕರಾಗಿದ್ದಾರೆ. 22 ಸಾವಿರ ನಿವೇಶನಗಳನ್ನು ಈ ಕ್ಷೇತ್ರದ ಜನರಿಗೆ ಕೊಟ್ಡಿದ್ದೇನೆ‌. ಈಗ ಕಾಂಗ್ರೆಸ್‌ನವರು ಜಾತಿಯನ್ನೇ ಬಂಡವಾಳ ಮಾಡಿಕೊಂಡಿದ್ದಾರೆ. ನಾನು ಒಕ್ಕಲಿಗ. ಆದರೆ ಎಲ್ಲರನ್ನೂ ಜತೆಯಲ್ಲಿ ಕರೆದುಕೊಂಡು ಹೋಗುತ್ತೇನೆ ಎಂದು ರೋಡ್ ಶೋದಲ್ಲಿ ಡಾ. ಕೆ. ಸುಧಾಕರ್ ಕಣ್ಣೀರು ಹಾಕಿದರು. ಅಲ್ಲದೆ, ನಾನು ಏನು ತಪ್ಪು ಮಾಡದೇ ಇದ್ದರೂ ನನ್ನನ್ನು ಹತ್ತು ತಿಂಗಳಿಂದ ದೂರ ಮಾಡಿದ್ದೀರಿ ಎಂದು ಮತದಾರರನ್ನು ಪ್ರಶ್ನೆ ಮಾಡಿದರು.

ಕಣ್ಣೀರು ಹಾಕಿದ ನಿಖಿಲ್‌ ಕುಮಾರಸ್ವಾಮಿ

ರಾಜ್ಯದಲ್ಲಿ ನನ್ನ ತಂದೆ ಎಚ್‌.ಡಿ. ಕುಮಾರಸ್ವಾಮಿ (HD Kumaraswamy), ತಾತ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ (HD Devegowda) ಅವರ ಹೆಸರಿನಲ್ಲಿ ಬಹಳಷ್ಟು ಜನ ಶಾಸಕರಾಗಿ, ನಾಯಕರಾಗಿ ಹೊರಹೊಮ್ಮಿದ್ದಾರೆ. ನಾನು ರಾಮನಗರದಲ್ಲಿ ಸ್ಪರ್ಧೆ ಮಾಡಿದ್ದೆ. ಕ್ಷೇತ್ರದ ಜನ ನನ್ನ ಕೈ ಬಿಟ್ಟಿರಲಿಲ್ಲ. ಆದರೆ, ಕಾಂಗ್ರೆಸ್ ಮುಖಂಡರು ಮಧ್ಯರಾತ್ರಿ 2 ಗಂಟೆಗೆ ಐದು ಸಾವಿರ ರೂಪಾಯಿ ಟೋಕನ್ ಹಂಚಿ ನನಗೆ ಮೋಸ ಮಾಡಿದರು. ಎರಡು ಬಾರಿ ಸೋಲಾಗಿದೆ, ಒಪ್ಪಿಕೊಳ್ಳುತ್ತೇನೆ. ಇದರ ಬಗ್ಗೆ ನನಗೆ ನೋವಿದೆ ಎಂದು ಜೆಡಿಎಸ್‌ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಕಣ್ಣೀರು ಹಾಕಿದ್ದಾರೆ. ಅಲ್ಲದೆ, ತಾವು ಇನ್ನು ಚುನಾವಣೆಗೆ ಸ್ಪರ್ಧೆ ಮಾಡುವುದಿದ್ದರೆ ರಾಮನಗರದಲ್ಲಿಯೇ, ಈ ಜಿಲ್ಲೆಯನ್ನು ಬಿಟ್ಟು ಬೇರೆ ಎಲ್ಲಿಯೂ ಸ್ಪರ್ಧೆ ಮಾಡಲಾರೆ ಎಂದು ಹೇಳಿದ್ದಾರೆ. ಈ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ಸ್ಪರ್ಧೆ ಮಾಡುತ್ತಿರುವ ಎಚ್‌.ಡಿ. ಕುಮಾರಸ್ವಾಮಿ ಅವರು ಗೆಲುವು ಸಾಧಿಸಿದರೆ, ಇಲ್ಲಿ ತೆರವಾಗುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ನಡೆಯುವ ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಸುಳಿವು ನೀಡಿದ್ದಾರೆ.

ಇದನ್ನೂ ಓದಿ: Lok Sabha Election 2024: ಡಿ.ಕೆ. ಸುರೇಶ್‌ ಮಣಿಸಲು ಬಿಜೆಪಿ ಹೈಕಮಾಂಡ್‌ ಪ್ಲ್ಯಾನ್;‌ ಟಾರ್ಗೆಟ್‌ ಡಿಕೆಶಿ!

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಸಿ.ಎನ್.‌ ಮಂಜುನಾಥ್‌ ಪರ ಪ್ರಚಾರ ಭಾಷಣದ ವೇಳೆ ನಿಖಿಲ್ ಕುಮಾರಸ್ವಾಮಿ ಕಣ್ಣೀರು ಹಾಕಿದ್ದಾರೆ. ರಾಜ್ಯದಲ್ಲಿ ತಂದೆಯವರ, ದೇವೇಗೌಡರ ಹೆಸರಿನಲ್ಲಿ ಬಹಳಷ್ಟು ಜನ ಶಾಸಕರಾಗಿ, ನಾಯಕರಾಗಿ ಹೊರ ಹೊಮ್ಮಿದ್ದಾರೆ. ನನ್ನ ನಡವಳಿಕೆಯಲ್ಲೇನಾದರೂ ಸಮಸ್ಯೆ ಇದೆಯೇ? ನಾನು ಚುನಾವಣೆಗೆ ಸ್ಪರ್ಧೆ ಮಾಡಿದರೆ ಅದು ರಾಮನಗರ ಜಿಲ್ಲೆಯಲ್ಲೇ, ಜಿಲ್ಲೆ ಬಿಟ್ಟು ಬೇರೆ ಎಲ್ಲೂ ಸ್ಪರ್ಧೆ ಮಾಡಲ್ಲ ಎಂದು ಹೇಳಿದ್ದಾರೆ. ‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

Kangana Ranaut: ಬಾಲಿವುಡ್‌ ʼಕ್ವೀನ್‌ʼ ಕಂಗನಾ ಹೆಸರಿನಲ್ಲಿದೆ 50 ಎಲ್ಐಸಿ ಪಾಲಿಸಿ; ಏಜೆಂಟ್‌ ಅತ್ಯಂತ ಲಕ್ಕಿ ಎಂದ ನೆಟ್ಟಿಗರು

Kangana Ranaut: ಬಾಲಿವುಡ್‌ ʼಕ್ವೀನ್‌ʼ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಟಿ ಕಂಗನಾ ರಣಾವತ್​ ಈಗ ರಾಜಕೀಯದತ್ತ ಮುಖ ಮಾಡಿದ್ದಾರೆ. ಅವರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹಿಮಾಚಲ ಪ್ರದೇಶದ ಮಂಡಿಯಿಂದ ಸ್ಪರ್ಧಿಸುತ್ತಿದ್ದಾರೆ. ಮೇ 14ರಂದು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆ ವೇಳೆ ಅವರು ತಮ್ಮ ಬಳಿ 91 ಕೋಟಿ ರೂ.ಗಳ ಆಸ್ತಿ ಇರುವುದಾಗಿ ಘೋಷಿಸಿದ್ದಾರೆ. ಅವರ ಹೆಸರಿನಲ್ಲಿ 50 ಜೀವ ವಿಮಾ ನಿಗಮ (ಎಲ್ಐಸಿ) ಪಾಲಿಸಿಗಳಿವೆ. ಸದ್ಯ ಇದು ನೆಟ್ಟಿಗರ ಗಮನ ಸೆಳೆದಿದೆ. ಈ ಬಗ್ಗೆ ನಾನಾ ರೀತಿಯ ಕಮೆಂಟ್‌ ಮಾಡುತ್ತಿದ್ದಾರೆ.

VISTARANEWS.COM


on

Kangana Ranaut
Koo

ಧರ್ಮಶಾಲಾ: ಒಂದಲ್ಲ ಒಂದು ವಿವಾದದ ಮೂಲಕವೇ ಸದಾ ಸುದ್ದಿಯಲ್ಲಿರುವ ಬಾಲಿವುಡ್‌ ನಟಿ ಕಂಗನಾ ರಣಾವತ್​ (Kangana Ranaut) ಈಗ ರಾಜಕೀಯದತ್ತ ಮುಖ ಮಾಡಿದ್ದಾರೆ. ಅವರು ಈ ಬಾರಿಯ ಲೋಕಸಭಾ ಚುನಾವಣೆ (Lok Sabha Election 2024)ಯಲ್ಲಿ ಸ್ಪರ್ಧಿಸುತ್ತಿದ್ದು, ಹಿಮಾಚಲ ಪ್ರದೇಶದ ಮಂಡಿಯಿಂದ ಮೇ 14ರಂದು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆ ವೇಳೆ ಅವರು ತಮ್ಮ ಬಳಿ 91 ಕೋಟಿ ರೂ.ಗಳ ಆಸ್ತಿ ಇರುವುದಾಗಿ ಘೋಷಿಸಿದ್ದಾರೆ. ಅವರ ಆಸ್ತಿಯಲ್ಲಿ 28.7 ಕೋಟಿ ರೂ.ಗಳ ಚರಾಸ್ತಿ ಮತ್ತು 62.9 ಕೋಟಿ ರೂ.ಗಳ ಸ್ಥಿರಾಸ್ತಿ ಸೇರಿವೆ. ಜತೆಗೆ ಅವರ ಹೆಸರಿನಲ್ಲಿ 50 ಜೀವ ವಿಮಾ ನಿಗಮ (ಎಲ್ಐಸಿ) ಪಾಲಿಸಿಗಳಿವೆ. ಸದ್ಯ ಇದು ನೆಟ್ಟಿಗರ ಗಮನ ಸೆಳೆದಿದೆ. ಈ ಬಗ್ಗೆ ನಾನಾ ರೀತಿಯ ಕಮೆಂಟ್‌ ಮಾಡುತ್ತಿದ್ದಾರೆ.

ನೆಟ್ಟಿಗರು ಏನಂದ್ರು?

ʼʼಕಂಗನಾ ರಾಣಾವತ್‌ 50 ಎಲ್‌ಐಸಿ ಪಾಲಿಸಿ ಹಿಂದಿದ್ದಾರೆ. ಏಜೆಂಟ್‌ ಉತ್ತಮ ಕೆಲಸ ಮಾಡಿದ್ದಾರೆʼʼ ಎಂದು ಒಬ್ಬರು ಹೇಳಿದ್ದಾರೆ. ʼʼಕಂಗನಾ ರಾಣಾವತ್‌ 50 ಎಲ್ಐಸಿ ಪಾಲಿಸಿಗಳನ್ನು ಹೊಂದಿದ್ದಾರೆ! ಇದು ಭಾರತದಲ್ಲಿ ಆರ್ಥಿಕ ಸಾಕ್ಷರತೆಯ ವ್ಯಾಪಕ ಕೊರತೆಯನ್ನು ಎತ್ತಿ ತೋರಿಸುತ್ತದೆ. ಅನೇಕ ಎಲ್ಐಸಿ ಪಾಲಿಸಿಗಳನ್ನು ಖರೀದಿಸುವ ಮನಸ್ಥಿತಿಯನ್ನು ಯಾರೂ ವಿರೋಧಿಸಲು ಸಾಧ್ಯವಿಲ್ಲ ಎನ್ನುವುದು ಈ ಮೂಲಕ ಸಾಬೀತಾಗಿದೆ. ನಿಮ್ಮ ಸುತ್ತಮುತ್ತ ಇದೇ ರೀತಿಯ ಅನೇಕ ಪಾಲಿಸಿ ಖರೀದಿಗಳ ಪ್ರಕರಣಗಳನ್ನು ಗಮನಿಸಿದ್ದೀರಾ?ʼʼ ಎಂದು ಇನ್ನೊಬ್ಬರು ಪ್ರಶ್ನಿಸಿದ್ದಾರೆ.

ʼʼಕಂಗನಾ ಅವರ ಎಲ್‌ಐಸಿ ಏಜೆಂಟ್‌ ಅದೃಷ್ಟವಂತ. ಅವರು ಫುಲ್‌ ಖುಷಿಯಾಗಿರಬಹುದು. ಬಹುಶಃ ಏಜೆಂಟ್‌ ಅವರ ಸಂಬಂಧಿಕರಿರಬಹುದುʼʼ ಎಂದು ಮತ್ತೊಬ್ಬರು ಕಾಲೆಳೆದಿದ್ದಾರೆ. ʼʼಕಂಗನಾ ರಾಣಾವತ್‌ 50 ಎಲ್‌ಐಸಿ ಪಾಲಿಸಿ ಮಾಡಿಸುವ ಮೂಲಕ ಆರ್ಥಿಕ ಸಾಕ್ಷರತೆಯ ಉತ್ತುಂಗದಲ್ಲಿದ್ದಾರೆʼʼ ಎಂದು ಇನ್ನೊಬ್ಬರು ಕಮೆಂಟ್‌ ಮಾಡಿದ್ದಾರೆ. ʼʼಕಂಗನಾ ಅವರ ಆಸ್ತಿ ಮೌಲ್ಯ 90 ಕೋಟಿ ರೂ. ಅವರು ಯಾವುದೇ ಸ್ಟಾಕ್‌ ಅಥವಾ ಮ್ಯೂಚುವಲ್‌ ಫಂಡ್‌ನಲ್ಲಿ ಹೂಡಿಕೆ ಮಾಡಿಲ್ಲ. ಆದರೆ 50 ಎಲ್‌ಐಸಿ ಪಾಲಿಸಿ ಹೊಂದಿದ್ದಾರೆʼʼ ಎಂದು ಮಗದೊಬ್ಬರು ತಿಳಿಸಿದ್ದಾರೆ. ಒಟ್ಟಿನಲ್ಲಿ ಈ ವಿಚಾರ ಸೋಷಿಯಲ್‌ ಮೀಡಿಯಾದಲ್ಲಿ ವ್ಯಾಪಕ ಚರ್ಚೆಯನ್ನೇ ಹುಟ್ಟು ಹಾಕಿದೆ.

5 ಕೋಟಿ ರೂ. ಮೌಲ್ಯದ ಚಿನ್ನಾಭರಣ

ಬಾಲಿವುಡ್‌ನ ಟಾಪ್‌ ನಟಿಯಲ್ಲಿ ಒಬ್ಬರೆನಿಸಿಕೊಂಡಿರುವ ಕಂಗನಾ ಪ್ರತೀ ಚಿತ್ರಕ್ಕೆ ದುಬಾರಿ ಸಂಭಾವನೆ ಪಡೆಯುತ್ತಾರೆ. ಇತ್ತೀಚಿನ ಅವರ ಚಿತ್ರಗಳು ಹಿಟ್‌ ಆಗದಿದ್ದರೂ ಅವರ ಬೇಡಿಕೆ ಒಂದಿನಿತೂ ಕಡಿಮೆ ಆಗಲಿಲ್ಲ. ಜಾಹೀರಾತು ಮೂಲಕವೂ ಅವರು ಆದಾಯ ಗಳಿಸುತ್ತಿದ್ದಾರೆ. ಅವರ ಬಳಿ 5 ಕೋಟಿ ರೂ. ಮೌಲ್ಯದ 6.7 ಕೆಜಿ ಚಿನ್ನ, 50 ಲಕ್ಷ ರೂ. ಮೌಲ್ಯದ 60 ಕೆಜಿ ಬೆಳ್ಳಿ, 3 ಕೋಟಿ ರೂ. ಮೌಲ್ಯದ 14 ಕ್ಯಾರೆಟ್ ವಜ್ರದ ಆಭರಣಗಳಿವೆ. 2 ಲಕ್ಷ ರೂ. ನಗದು ಮತ್ತು ಸುಮಾರು 1.35 ಕೋಟಿ ರೂ.ಗಳ ಬ್ಯಾಂಕ್ ಬ್ಯಾಲೆನ್ಸ್ ಹೊಂದಿರುವುದಾಗಿ ಕಂಗನಾ ತಿಳಿಸಿದ್ದಾರೆ.

ಇದನ್ನೂ ಓದಿ: Kangana Ranaut: ವಿಶೇಷ ಗೆಟಪ್ ನಲ್ಲಿ ಮತದಾರರ ಸೆಳೆಯುತ್ತಿರುವ ಕಂಗನಾ ರಣಾವತ್

17 ಕೋಟಿ ರೂ. ಸಾಲ

ಕಂಗನಾ ಚಂಡೀಗಢದಲ್ಲಿ ನಾಲ್ಕು ವಾಣಿಜ್ಯ ಸಂಕೀರ್ಣಗಳು, ಮುಂಬೈನಲ್ಲಿ ವಾಣಿಜ್ಯ ಆಸ್ತಿ ಮತ್ತು ಮನಾಲಿಯಲ್ಲಿ ವಾಣಿಜ್ಯ ಕಟ್ಟಡ ಸೇರಿದಂತೆ ದೇಶಾದ್ಯಂತ ವಿವಿಧ ಆಸ್ತಿಗಳನ್ನು ಹೊಂದಿದ್ದಾರೆ. ಅವರು ಮುಂಬೈನಲ್ಲಿ 16 ಕೋಟಿ ರೂ ಮೌಲ್ಯದ ಮೂರು ಫ್ಲ್ಯಾಟ್ ಗಳನ್ನು ಮತ್ತು ಮನಾಲಿಯಲ್ಲಿ 15 ಕೋಟಿ ರೂ ಮೌಲ್ಯದ ಬಂಗಲೆಯನ್ನು ಹೊಂದಿದ್ದಾರೆ. ಅಲ್ಲದೆ ಮೂರು ಐಷಾರಾಮಿ ಕಾರುಗಳನ್ನು ಹೊಂದಿದ್ದಾರೆ. 98 ಲಕ್ಷ ರೂ ಮೌಲ್ಯದ ಬಿಎಂಡಬ್ಲ್ಯು, 58 ಲಕ್ಷ ರೂ ಮೌಲ್ಯದ ಮರ್ಸಿಡಿಸ್ ಬೆಂಜ್ ಮತ್ತು 3.91 ಕೋಟಿ ರೂ ಮೌಲ್ಯದ ಮರ್ಸಿಡಿಸ್ ಮೇಬ್ಯಾಕ್ ಅವರಲ್ಲಿದೆ. ಜತೆಗೆ 17 ಕೋಟಿ ರೂ.ಗಳ ಸಾಲ ಇರುವುದಾಗಿಯೂ ಘೋಷಿಸಿಕೊಂಡಿದ್ದಾರೆ.

Continue Reading

ಪ್ರಮುಖ ಸುದ್ದಿ

ಚುನಾವಣೆ ಫಲಿತಾಂಶಕ್ಕೆ ಮೊದಲೇ ಇಂಡಿಯಾ ಒಕ್ಕೂಟಕ್ಕೆ ದೀದಿ ಶಾಕ್; ಬಾಹ್ಯ ಬೆಂಬಲವಷ್ಟೇ ಎಂದು ಘೋಷಣೆ!

ಇಂಡಿಯಾ ಒಕ್ಕೂಟದ ಸದಸ್ಯ ಪಕ್ಷಗಳಲ್ಲಿಯೇ ಒಮ್ಮತದ ಅಭಿಪ್ರಾಯ ಮೂಡದ ಕಾರಣ ಪಶ್ಚಿಮ ಬಂಗಾಳದಲ್ಲಿ ಟಿಎಂಸಿ, ಪಂಜಾಬ್‌ನಲ್ಲಿ ಆಮ್‌ ಆದ್ಮಿ ಪಕ್ಷ ಸೇರಿ ಹಲವೆಡೆ ಹಲವು ಪಕ್ಷಗಳು ಸ್ವತಂತ್ರವಾಗಿ ಸ್ಪರ್ಧಿಸಿವೆ. ಕೆಲವು ಕಡೆಯಂತೂ, ಇಂಡಿಯಾ ಒಕ್ಕೂಟದ ಪಕ್ಷಗಳ ಮಧ್ಯೆಯೇ ಪೈಪೋಟಿ ಇದೆ. ಇದರ ಮಧ್ಯೆಯೇ, ಮಮತಾ ಬ್ಯಾನರ್ಜಿ ಅವರು ಹೊಸ ಬಾಂಬ್‌ ಸಿಡಿಸಿದ್ದಾರೆ.

VISTARANEWS.COM


on

Mamata Banerjee
Koo

ನವದೆಹಲಿ: ಲೋಕಸಭೆ ಚುನಾವಣೆಯ (Lok Sabha Election 2024) ನಾಲ್ಕನೇ ಹಂತದ ಮತದಾನ ಮುಕ್ತಾಯವಾಗಿದೆ. ಐದನೇ ಹಂತದ ಮತದಾನಕ್ಕೆ ಚುನಾವಣೆ ಆಯೋಗ (Election Commission Of India) ಸಿದ್ಧತೆ ಮಾಡಿಕೊಳ್ಳುತ್ತಿದೆ. ರಾಜಕೀಯ ಪಕ್ಷಗಳು ಸೋಲು-ಗೆಲುವಿನ ಲೆಕ್ಕಾಚಾರದಲ್ಲಿ ಮುಳುಗಿವೆ. ಅಭ್ಯರ್ಥಿಗಳೂ ಇದೇ ಲೆಕ್ಕಾಚಾರದಲ್ಲಿದ್ದಾರೆ. ಇದರ ಬೆನ್ನಲ್ಲೇ, ಕೇಂದ್ರದ ಬಿಜೆಪಿ ಸರ್ಕಾರವನ್ನು ಕೆಳಗಿಳಿಸಬೇಕು ಎಂದೇ ಪ್ರತಿಪಕ್ಷಗಳು ಒಗ್ಗೂಡಿ ರಚಿಸಿರುವ ಇಂಡಿಯಾ ಒಕ್ಕೂಟಕ್ಕೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಶಾಕ್‌ ನೀಡಿದ್ದಾರೆ. “ಇಂಡಿಯಾ ಒಕ್ಕೂಟಕ್ಕೆ ನಮ್ಮದೇನಿದ್ದರೂ ಬಾಹ್ಯ ಬೆಂಬಲ” ಎಂದಿದ್ದಾರೆ.

“ಕೇಂದ್ರದಲ್ಲಿ ಇಂಡಿಯಾ ಒಕ್ಕೂಟದ ಸರ್ಕಾರ ಅಸ್ತಿತ್ವಕ್ಕೆ ಬಂದರೆ ಟಿಎಂಸಿಯು ನಾಯಕತ್ವದ ಸಹಕಾರ ನೀಡುತ್ತದೆ. ಬಾಹ್ಯವಾಗಿಯೇ ಇಂಡಿಯಾ ಒಕ್ಕೂಟಕ್ಕೆ ಟಿಎಂಸಿಯು ಬೆಂಬಲ ನೀಡಲಿದೆ. ಪ್ರತಿಯೊಂದು ವಿಚಾರದಲ್ಲಿಯೂ ಇಂಡಿಯಾ ಒಕ್ಕೂಟಕ್ಕೆ ನಾವು ಸಹಕಾರ ನೀಡುತ್ತೇವೆ. ಅಷ್ಟೇ ಅಲ್ಲ, ಕೇಂದ್ರದಲ್ಲಿ ಇಂಡಿಯಾ ಮೈತ್ರಿಕೂಟದ ಸರ್ಕಾರ ಅಧಿಕಾರಕ್ಕೆ ಬಂದರೆ, ಪಶ್ಚಿಮ ಬಂಗಾಳದ ಜನರಿಗೆ ಯಾವುದೇ ಸಮಸ್ಯೆ ಇರುವುದಿಲ್ಲ. ಅದರಲ್ಲೂ, 100 ದಿನಗಳ ಉದ್ಯೋಗ ಯೋಜನೆ ಅಡಿಯಲ್ಲಿ ಕೆಲಸ ಮಾಡುತ್ತಿರುವವರಿಗಂತೂ ಯಾವುದೇ ಸಮಸ್ಯೆ ಆಗುವುದಿಲ್ಲ” ಎಂದು ಹೇಳಿದ್ದಾರೆ.

ಇದೇ ವೇಳೆ, ಇಂಡಿಯಾ ಒಕ್ಕೂಟಕ್ಕೂ ಮಮತಾ ಬ್ಯಾನರ್ಜಿ ಅವರು ವ್ಯಾಖ್ಯಾನ ನೀಡಿದರು. “ಯಾವುದು ಇಂಡಿಯಾ ಒಕ್ಕೂಟ, ಎಲ್ಲಿ ಮೈತ್ರಿ ಎಂಬುದನ್ನು ನೀವು ಅರ್ಥ ಮಾಡಿಕೊಳ್ಳಬೇಕು. ಪಶ್ಚಿಮ ಬಂಗಾಳದ ಕಾಂಗ್ರೆಸ್‌ ಅಥವಾ ಸಿಪಿಎಂ ಬಗ್ಗೆ ಯೋಚನೆ ಮಾಡದಿರಿ. ಈ ಪಕ್ಷಗಳ ಲೆಕ್ಕಾಚಾರ ತೆಗೆದುಕೊಳ್ಳದಿರಿ. ಈ ಎರಡೂ ಪಕ್ಷಗಳು ಬಿಜೆಪಿ ಜತೆಗಿವೆ. ನಾನು ಮಾತನಾಡುತ್ತಿರುವುದು ದೆಹಲಿ ಮೈತ್ರಿಯ ಬಗ್ಗೆ ಮಾತ್ರ” ಎಂದು ಹೇಳಿದರು. ಆ ಮೂಲಕ ಚುನಾವಣೆ ಫಲಿತಾಂಶದ ಬಳಿಕದ ಮೈತ್ರಿಯ ಬಗ್ಗೆ ಸೂಚನೆ ನೀಡಿದರು.

ನರೇಂದ್ರ ಮೋದಿ ನೇತೃತ್ವದ ಸರ್ಕಾರದವನ್ನು ಅಧಿಕಾರದಿಂದ ಕೆಳಗಿಳಿಸುವ ಏಕಮಾತ್ರ ಉದ್ದೇಶದಿಂದ ಹಲವು ಪ್ರತಿಪಕ್ಷಗಳು ಒಗ್ಗೂಡಿ ಇಂಡಿಯಾ ಒಕ್ಕೂಟವನ್ನು ರಚಿಸಿವೆ. ಆದರೆ, ಚುನಾವಣೆ ಸಂದರ್ಭದಲ್ಲಿ ಇಂಡಿಯಾ ಒಕ್ಕೂಟದ ಸದಸ್ಯ ಪಕ್ಷಗಳಲ್ಲಿಯೇ ಒಮ್ಮತದ ಅಭಿಪ್ರಾಯ ಮೂಡದ ಕಾರಣ ಪಶ್ಚಿಮ ಬಂಗಾಳದಲ್ಲಿ ಟಿಎಂಸಿ, ಪಂಜಾಬ್‌ನಲ್ಲಿ ಆಮ್‌ ಆದ್ಮಿ ಪಕ್ಷ ಸೇರಿ ಹಲವೆಡೆ ಹಲವು ಪಕ್ಷಗಳು ಸ್ವತಂತ್ರವಾಗಿ ಸ್ಪರ್ಧಿಸಿವೆ. ಕೆಲವು ಕಡೆಯಂತೂ, ಇಂಡಿಯಾ ಒಕ್ಕೂಟದ ಪಕ್ಷಗಳ ಮಧ್ಯೆಯೇ ಪೈಪೋಟಿ ಇದೆ. ಇದರ ಮಧ್ಯೆಯೇ, ನಮ್ಮದೇನಿದ್ದರೂ ಬಾಹ್ಯ ಬೆಂಬಲ ಎಂದು ಹೇಳುವ ಮೂಲಕ ಮಮತಾ ಬ್ಯಾನರ್ಜಿ ಅವರು ಶಾಕ್‌ ಕೊಟ್ಟಿದ್ದಾರೆ.

ಇದನ್ನೂ ಓದಿ: Amit Shah: ಭಾರತದ ಜತೆ ಪಿಒಕೆ ವಿಲೀನ ಮಾಡುವುದೇ ನಮ್ಮ ಗುರಿ, ಬದ್ಧತೆ; ಅಮಿತ್‌ ಶಾ ಘೋಷಣೆ

Continue Reading

ದೇಶ

Amit Shah: ಪ್ರಚಾರದ ವೇಳೆ ಕೇಜ್ರಿವಾಲ್‌ ನೀಡಿದ ಹೇಳಿಕೆಯಿಂದ ನ್ಯಾಯಾಂಗ ನಿಂದನೆ; ಅಮಿತ್‌ ಶಾ ವಾಗ್ದಾಳಿ

Amit Shah: ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಜಾಮೀನು ನೀಡಿದ ಕೋರ್ಟ್‌ ತೀರ್ಮಾನದ ಕುರಿತೂ ಅಮಿತ್‌ ಶಾ ವಿಶ್ಲೇಷಣೆ ಮಾಡಿದರು. “ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಎಲ್ಲ ಸಾಮಾನ್ಯ ಪ್ರಕರಣದಂತೆ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳು ಜಾಮೀನು ಮಂಜೂರು ಮಾಡಿಲ್ಲ. ಕೇಜ್ರಿವಾಲ್‌ ಅವರಿಗೆ ವಿಶೇಷ ಕೇಸ್‌ ಎಂದು ಪರಿಗಣಿಸಿ ಜಾಮೀನು ನೀಡಲಾಗಿದೆ” ಎಂದು ಹೇಳಿದರು.

VISTARANEWS.COM


on

Amit Shah
Koo

ನವದೆಹಲಿ: ಅಬಕಾರಿ ನೀತಿ ಜಾರಿ ಹಗರಣದಲ್ಲಿ (Delhi Excise Policy Case) ತಿಹಾರ ಜೈಲು ಸೇರಿ, ಮಧ್ಯಂತರ ಜಾಮೀನಿನ ಬಿಡುಗಡೆಯಾಗಿರುವ, ಬಿಡುಗಡೆಯಾಗಿ ಬರುತ್ತಲೇ ಅಬ್ಬರದ ಚುನಾವಣೆ ಪ್ರಚಾರದ ಜತೆಗೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಅವರಿಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ತಿರುಗೇಟು ನೀಡಿದ್ದಾರೆ. “ಚುನಾವಣೆ ಪ್ರಚಾರದ ವೇಳೆ ಅರವಿಂದ್‌ ಕೇಜ್ರಿವಾಲ್‌ ನೀಡಿದ ಹೇಳಿಕೆಯು ನ್ಯಾಯಾಂಗ ನಿಂದನೆಯ ಪ್ರಕರಣವಾಗಿದೆ” ಎಂದಿದ್ದಾರೆ.

ಎಎನ್‌ಐ ಸುದ್ದಿಸಂಸ್ಥೆಗೆ ಸಂದರ್ಶನ ನೀಡಿರುವ ಅಮಿತ್‌ ಶಾ, ಅರವಿಂದ್‌ ಕೇಜ್ರಿವಾಲ್‌ ವಿರುದ್ಧ ಹರಿಹಾಯ್ದರು. “ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಬ್ಯಾಡ್‌ ನ್ಯೂಸ್‌ ಇದೆ. 2029ರವರೆಗೆ ನರೇಂದ್ರ ಮೋದಿ ಅವರೇ ಪ್ರಧಾನಿಯಾಗಿ ಆಡಳಿತ ನಡೆಸಲಿದ್ದಾರೆ. ಇನ್ನು, ಯಾರಾದರೂ ಬಿಜೆಪಿಗೆ ಮತ ನೀಡಿದರೆ, ಕಮಲದ ಗುರುತಿಗೆ ಮತ ಹಾಕಿದರೆ, ಮತ್ತೆ ನನ್ನನ್ನು ಜೈಲಿಗೆ ಕಳುಹಿಸಲಾಗುತ್ತದೆ ಎಂಬುದಾಗಿ ಕೇಜ್ರಿವಾಲ್‌ ಹೇಳಿರುವುದು ಸಂಪೂರ್ಣವಾಗಿ ನ್ಯಾಯಾಂಗ ನಿಂದನೆಯ ಕೇಸ್‌ ಆಗಿದೆ. ಇದು ಸುಪ್ರೀಂ ಕೋರ್ಟ್‌ ತೀರ್ಪಿಗೆ ಮಾಡಿದ ಅಗೌರವ” ಎಂದು ಹೇಳಿದರು.

ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಜಾಮೀನು ನೀಡಿದ ಕೋರ್ಟ್‌ ತೀರ್ಮಾನದ ಕುರಿತೂ ಅಮಿತ್‌ ಶಾ ವಿಶ್ಲೇಷಣೆ ಮಾಡಿದರು. “ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಎಲ್ಲ ಸಾಮಾನ್ಯ ಪ್ರಕರಣದಂತೆ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳು ಜಾಮೀನು ಮಂಜೂರು ಮಾಡಿಲ್ಲ. ಕೇಜ್ರಿವಾಲ್‌ ಅವರಿಗೆ ವಿಶೇಷ ಕೇಸ್‌ ಎಂದು ಪರಿಗಣಿಸಿ ಜಾಮೀನು ನೀಡಲಾಗಿದೆ. ಅಷ್ಟಕ್ಕೂ, ಅರವಿಂದ್‌ ಕೇಜ್ರಿವಾಲ್‌ ಅಪರಾಧಿ ಎಂದು ಸಾಬೀತಾದರೂ ಕೋರ್ಟ್‌ ಅವರನ್ನು ಜೈಲಿಗೆ ಕಳುಹಿಸುವುದಿಲ್ಲ. ತಮ್ಮ ತೀರ್ಪು ಸದ್ಬಳಕೆಯಾಗಿದೆಯೋ, ದುರ್ಬಳಕೆ ಮಾಡಿಕೊಳ್ಳಲಾಗಿದೆಯೋ ಎಂಬುದನ್ನು ತಿಳಿಯಲು ಕೋರ್ಟ್‌ ಜಾಮೀನು ನೀಡಿದೆ” ಎಂದರು.

ಫಾರೂಕ್‌ ಅಬ್ದುಲ್ಲಾಗೆ ಚಾಟಿ

ಪಾಕಿಸ್ತಾನವನ್ನು ಗೌರವಿಸಬೇಕು ಎಂದು ಹೇಳಿದ ಫಾರೂಕ್‌ ಅಬ್ದುಲ್ಲಾ ಅವರಿಗೆ ಅಮಿತ್‌ ಶಾ ತಿರುಗೇಟು ನೀಡಿದ್ದಾರೆ. “ಪಾಕಿಸ್ತಾನ ಅಣುಬಾಂಬ್‌ ಹೊಂದಿದೆ. ಅದಕ್ಕೆ ಭಾರತ ಗೌರವ ನೀಡಬೇಕು ಎಂಬುದಾಗಿ ಫಾರೂಕ್‌ ಅಬ್ದುಲ್ಲಾ ಹಾಗೂ ಕಾಂಗ್ರೆಸ್‌ ನಾಯಕರು ಹೇಳಿದ್ದಾರೆ. ಅದರೆ, ಅಣ್ವಸ್ತ್ರ ಸಾಮರ್ಥ್ಯ ಹೊಂದಿರುವ, 130 ಕೋಟಿ ಜನಸಂಖ್ಯೆಯ ಭಾರತವು ತನ್ನ ಹಕ್ಕನ್ನು ಪ್ರತಿಪಾದಿಸಲು ಪಾಕಿಸ್ತಾನಕ್ಕೆ ಹೆದರಬೇಕೇ? ರಾಹುಲ್‌ ಗಾಂಧಿ ಅವರು ಇದಕ್ಕೆ ಉತ್ತರ ನೀಡಬೇಕು. ಪಾಕಿಸ್ತಾನವನ್ನು ಗೌರವಿಸಬೇಕಾ? ಪಾಕ್‌ ಆಕ್ರಮಿತ ಕಾಶ್ಮೀರವನ್ನು ಬಿಟ್ಟುಕೊಡಬೇಕಾ ಎಂಬುದರ ಕುರಿತು ರಾಹುಲ್‌ ಗಾಂಧಿ ಉತ್ತರಿಸಲಿ” ಎಂದರು.

ಇದನ್ನೂ ಓದಿ: Narendra Modi: 75 ವರ್ಷ ದಾಟಿದರೂ ಮೋದಿ ಪ್ರಧಾನಿ ಸ್ಥಾನದಲ್ಲಿರುತ್ತಾರಾ? ಅಮಿತ್‌ ಶಾ ಹೇಳಿದ್ದಿಷ್ಟು

Continue Reading

ದೇಶ

Shyam Rangeela: ವಾರಾಣಸಿಯಲ್ಲಿ ಮೋದಿ ವಿರುದ್ಧ ಕಣಕ್ಕಿಳಿದ ಕಲಾವಿದನ ನಾಮಪತ್ರ ತಿರಸ್ಕಾರ!

Shyam Rangeela: ಪ್ರಧಾನಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಂತೆ ತನ್ನದೇ ಶೈಲಿಯಲ್ಲಿ ಮಿಮಿಕ್ರಿ ಮಾಡುತ್ತಿದ್ದ ಹಾಸ್ಯ ಕಲಾವಿದ ಶ್ಯಾಮ್‌ ರಂಗೀಲಾ ಅವರು ಉತ್ತರ ಪ್ರದೇಶದ ವಾರಾಣಸಿಯಲ್ಲಿ ಸ್ಪರ್ಧಿಸಲು ತೀರ್ಮಾನಿಸಿದ್ದರು. ಹಾಗಾಗಿ ಅವರು ನಾಮಪತ್ರ ಸಲ್ಲಿಸಿದ್ದರು. ಈಗ ಚುನಾವಣೆ ಆಯೋಗವು ನಾಮಪತ್ರವನ್ನು ತಿರಸ್ಕರಿಸಿದೆ.

VISTARANEWS.COM


on

Shyam Rangeela
Koo

ವಾರಾಣಸಿ: ಉತ್ತರ ಪ್ರದೇಶದ ವಾರಾಣಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ವಿರುದ್ಧ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದ ಹಾಸ್ಯ ಕಲಾವಿದ ಶ್ಯಾಮ್‌ ರಂಗೀಲಾ (Shyam Rangeela) ಸಲ್ಲಿಸಿದ್ದ ನಾಮಪತ್ರವನ್ನು ಚುನಾವಣೆ ಆಯೋಗವು ತಿರಸ್ಕರಿಸಿದೆ. ನಾಮಪತ್ರ ಸಲ್ಲಿಕೆ ವೇಳೆ ಪ್ರತಿಜ್ಞಾ ವಿಧಿ ಸ್ವೀಕರಿಸದಿರುವುದು ಸೇರಿ ಹಲವು ಶಿಷ್ಟಾಚಾರಗಳನ್ನು ಪಾಲಿಸದ ಹಿನ್ನೆಲೆಯಲ್ಲಿ ಚುನಾವಣೆ ಆಯೋಗವು (Election Commission) ನಾಮಪತ್ರವನ್ನು ತಿರಸ್ಕರಿಸಿದೆ ಎಂದು ತಿಳಿದುಬಂದಿದೆ.

ನಾಮಪತ್ರ ತಿರಸ್ಕಾರಗೊಂಡ ಬಳಿಕ ಶ್ಯಾಮ್‌ ರಂಗೀಲಾ ಅವರು ಅಸಮಾಧಾನ ವ್ಯಕ್ತಪಡಿಸಿದೆ. “ವಾರಾಣಸಿಯಲ್ಲಿ ಚುನಾವಣೆ ಆಯೋಗವು ಪ್ರಜಾಪ್ರಭುತ್ವವನ್ನು ನಿರ್ನಾಮ ಮಾಡಲು ಹೊರಟಿದೆ. ನಾನೇನೂ ಇಲ್ಲಿಗೆ ಮೋದಿ ಅವರನ್ನು ಸೋಲಿಸಲು ಬಂದಿರಲಿಲ್ಲ. ಸ್ಪರ್ಧೆಯಷ್ಟೇ ನನ್ನ ಉದ್ದೇಶವಾಗಿತ್ತು. ಆದರೆ, ವಾರಾಣಸಿಯ ಜನ ನನಗೆ ಬೆಂಬಲ ನೀಡಿದರು. ನನಗಾಗಿ ಹಣ ನೀಡಲು ಬಂದರು. ನಾನು ಸೋತರೂ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ ಎಂದು ಭಾವಿಸಿದ್ದೆ. ಆದರೆ, ನನ್ನನ್ನು ಈಗ ಸ್ಪರ್ಧೆಯಿಂದಲೇ ತಡೆಯಲಾಗಿದೆ. ಇದು ಪ್ರಜಾತಂತ್ರಕ್ಕೆ ಮಾಡಿದ ಅಪಮಾನ” ಎಂದು ಶ್ಯಾಮ್‌ ರಂಗೀಲಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಜಸ್ಥಾನದವರಾದ 29 ವರ್ಷದ ಶ್ಯಾಮ್‌ ರಂಗೀಲಾ ಅವರು ನರೇಂದ್ರ ಮೋದಿ ಹಾಗೂ ರಾಹುಲ್‌ ಗಾಂಧಿ ಅವರನ್ನು ಮಿಮಿಕ್ರಿ ಮಾಡುತ್ತ ಖ್ಯಾತಿ ಗಳಿಸಿದ್ದಾರೆ. ಇವರ ಹಾಸ್ಯಪ್ರಜ್ಞೆಯನ್ನೂ ಜನ ಮೆಚ್ಚಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಜನರಿಗೆ ಪರಿಚಿತರಾಗಿದ್ದಾರೆ. “ದೇಶದಲ್ಲಿ ಪ್ರಜಾಪ್ರಭುತ್ವ ಅಸ್ತಿತ್ವದಲ್ಲಿದೆ ಎಂಬುದನ್ನು ಸಾಬೀತುಪಡಿಸಲು ನಾನು ವಾರಾಣಸಿ ಲೋಕಸಭೆ ಕ್ಷೇತ್ರದಲ್ಲಿ ಸ್ಪರ್ಧಿಸಲು ತೀರ್ಮಾನಿಸಿದ್ದೇನೆ” ಎಂದು ಹೇಳಿದ್ದ ಅವರು ಮೇ 14ರಂದು ನಾಮಪತ್ರ ಸಲ್ಲಿಸಿದ್ದರು.

ಮೋದಿ ವಿರುದ್ಧ ಕಣಕ್ಕಿಳಿದ ನಾಯಕರಿವರು

ನರೇಂದ್ರ ಮೋದಿ ಅವರು 2014ರಿಂದಲೂ ವಾರಾಣಸಿ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಇವರ ವಿರುದ್ಧ ಈ ಬಾರಿ ಕಾಂಗ್ರೆಸ್‌ ಅಜಯ್‌ ರಾಯ್‌ ಅವರನ್ನು ಕಣಕ್ಕಿಳಿಸಿದೆ. ಅಖಿಲ ಭಾರತ ಹಿಂದು ಮಹಾಸಭಾ (ABHM) ಪಕ್ಷದಿಂದ ಮಂಗಳಮುಖಿಯಾಗಿರುವ ಕಿನ್ನಾರ್‌ ಮಹಾಮಂಡಲೇಶ್ವರ್‌ ಹೇಮಾಂಗಿ ಸಖಿ ಅವರು ಕೂಡ ಸ್ಪರ್ಧಿಸುತ್ತಿದ್ದಾರೆ. ಬಿಎಸ್‌ಪಿಯು ಅಥರ್‌ ಜಮಾಲ್‌ ಲರಿ ಅವರಿಗೆ ಟಿಕೆಟ್‌ ನೀಡಿದೆ. ಕ್ಷೇತ್ರದಲ್ಲಿ ಜೂನ್‌ 1ರಂದು ಮತದಾನ ನಡೆಯಲಿದೆ. ವಾರಾಣಸಿ ಲೋಕಸಭೆ ಕ್ಷೇತ್ರದಲ್ಲಿ 19.62 ಲಕ್ಷ ಮತದಾರರಿದ್ದಾರೆ. ಇವರಲ್ಲಿ 10.65 ಲಕ್ಷ ಪುರುಷರಿದ್ದರೆ, 8.97 ಲಕ್ಷ ಮಹಿಳೆಯರಿದ್ದಾರೆ. 135 ಮಂಗಳಮುಖಿಯರೂ ಮತದಾನ ಮಾಡಲಿದ್ದಾರೆ.

ಗ್ಯಾಂಗ್‌ಸ್ಟರ್‌ ಪತ್ನಿಗೆ ಟಿಕೆಟ್‌

ಉತ್ತರ ಪ್ರದೇಶದ ಜೌನ್‌ಪುರ ಲೋಕಸಭೆ ಕ್ಷೇತ್ರದಲ್ಲಿ ಬಿಎಸ್‌ಪಿಯು ಗ್ಯಾಂಗ್‌ಸ್ಟರ್‌ ಧನಂಜಯ್‌ ಸಿಂಗ್‌ ಪತ್ನಿ ಶ್ರೀಕಲಾ ಸಿಂಗ್‌ ಅವರಿಗೆ ಟಿಕೆಟ್‌ ನೀಡಿದೆ. ಇದು ಈಗ ಭಾರಿ ಚರ್ಚೆಗೂ ಗ್ರಾಸವಾಗಿದೆ. ಇನ್ನು, ಮೈನ್‌ಪುರಿಯಲ್ಲಿ ಅಭ್ಯರ್ಥಿಯನ್ನು ಬದಲಾಯಿಸಿರುವ ಬಿಎಸ್‌ಪಿಯು, ಶಿವಪ್ರಸಾದ್‌ ಯಾದವ್‌ ಅವರಿಗೆ ಮಣೆ ಹಾಕಿದೆ. ಬರೇಲಿಯಲ್ಲಿ ಛೋಟಾಲಾಲ್‌ ಗಂಗ್ವಾರ್‌, ಬಂಡಾದಲ್ಲಿ ಮಯಾಂಕ್‌ ದ್ವಿವೇದಿ, ಘಾಜಿಪುರದಲ್ಲಿ ಉಮೇಶ್‌ ಕುಮಾರ್‌ ಸಿಂಗ್‌ ಸೇರಿ 11 ಕ್ಷೇತ್ರಗಳಲ್ಲಿ ಬಿಎಸ್‌ಪಿಯು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.

ಇದನ್ನೂ ಓದಿ: ಮೋದಿ ಬಲಿಷ್ಠ ನಾಯಕ, ಮತ್ತೆ ಪ್ರಧಾನಿಯಾಗೋದು ನಿಶ್ಚಿತ ಎಂದ ಪಾಕ್‌ ಮೂಲದ ಉದ್ಯಮಿ

Continue Reading
Advertisement
Kangana Ranaut
Lok Sabha Election 202411 mins ago

Kangana Ranaut: ಬಾಲಿವುಡ್‌ ʼಕ್ವೀನ್‌ʼ ಕಂಗನಾ ಹೆಸರಿನಲ್ಲಿದೆ 50 ಎಲ್ಐಸಿ ಪಾಲಿಸಿ; ಏಜೆಂಟ್‌ ಅತ್ಯಂತ ಲಕ್ಕಿ ಎಂದ ನೆಟ್ಟಿಗರು

anjali murder case hubli
ಕ್ರೈಂ17 mins ago

Anjali Murder Case: ಅಂಜಲಿ ಹಂತಕನಿಗೆ ಸ್ನೇಹಿತನೇ ಪ್ರೇರಣೆ? ಅವನೂ ಕೊಲೆ ಆರೋಪಿ!

Viral Video
ವೈರಲ್ ನ್ಯೂಸ್22 mins ago

Viral Video: 160 ಕಿ.ಮೀ. ವೇಗದಲ್ಲಿ ಡ್ರೈವಿಂಗ್‌..ಇನ್‌ಸ್ಟಾಗ್ರಾಂನಲ್ಲಿ ಲೈವ್‌..ಡೆಡ್ಲಿ ಆಕ್ಸಿಡೆಂಟ್‌! ವೈರಲಾಯ್ತು ಶಾಕಿಂಗ್‌ ವಿಡಿಯೋ

Slovakian PM Robert Fico critical after assassination attempt
ಪ್ರಮುಖ ಸುದ್ದಿ41 mins ago

Robert Fico: ಸ್ಲೊವಾಕಿಯಾ ಪ್ರಧಾನ ಮಂತ್ರಿಗೆ ಗುಂಡೇಟು, ಅಮೆರಿಕ ವಿರೋಧಿ ನಾಯಕ ಗಂಭೀರ

Health Tips in Kannada lady finger okra benefits
ಆರೋಗ್ಯ1 hour ago

Health Tips in Kannada: ಬೆಂಡೆಕಾಯಿ ನೀರನ್ನು ಕುಡಿಯೋದರಿಂದ ಏನೆಲ್ಲ ಲಾಭಗಳಿವೆ ತಿಳಿದುಕೊಳ್ಳಿ

ಕರ್ನಾಟಕ2 hours ago

Karnataka Weather: ಇಂದು ಕಲಬುರಗಿ, ವಿಜಯಪುರ ಸೇರಿ ವಿವಿಧೆಡೆ ಗುಡುಗು, ಮಿಂಚು ಸಹಿತ ಭಾರಿ ಮಳೆ ಮುನ್ಸೂಚನೆ

stay awake till late night what is the problem For health
ಆರೋಗ್ಯ2 hours ago

Health Tips in Kannada: ತಡರಾತ್ರಿಯವರೆಗೆ ಎಚ್ಚರದಿಂದ ಇದ್ದರೆ ಆಗುವ ಸಮಸ್ಯೆಗಳೇನು ಗೊತ್ತೇ?

dina bhavishya read your daily horoscope predictions for May 16 2024
ಭವಿಷ್ಯ3 hours ago

Dina Bhavishya : ಇಂದು 12 ರಾಶಿಯವರ ಫಲ ಏನಿದೆ? ಯಾರಿಗೆ ಶುಭ ತರುತ್ತೆ? ಹೂಡಿಕೆಯಲ್ಲಿ ಯಾರಿಗೆ ಲಾಭ?

Mamata Banerjee
ಪ್ರಮುಖ ಸುದ್ದಿ8 hours ago

ಚುನಾವಣೆ ಫಲಿತಾಂಶಕ್ಕೆ ಮೊದಲೇ ಇಂಡಿಯಾ ಒಕ್ಕೂಟಕ್ಕೆ ದೀದಿ ಶಾಕ್; ಬಾಹ್ಯ ಬೆಂಬಲವಷ್ಟೇ ಎಂದು ಘೋಷಣೆ!

Bengaluru News
ಕರ್ನಾಟಕ8 hours ago

Bengaluru News: ಹಸುಗೂಸನ್ನು ರಸ್ತೆ ಬದಿ ಎಸೆದು ಹೋದ ಅನಾಮಿಕರು!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ1 day ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ1 day ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ2 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20242 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20242 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ2 days ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು2 days ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ2 days ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ3 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ3 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌