Public Exam: ಫಲಿತಾಂಶ ಪ್ರಕಟವಾದ ಬಳಿಕ 5, 8, 9, 11ನೇ ತರಗತಿ ಬೋರ್ಡ್‌ ಪರೀಕ್ಷೆಗೆ ಸುಪ್ರೀಂ ಕೋರ್ಟ್ ತಡೆ! - Vistara News

ಪ್ರಮುಖ ಸುದ್ದಿ

Public Exam: ಫಲಿತಾಂಶ ಪ್ರಕಟವಾದ ಬಳಿಕ 5, 8, 9, 11ನೇ ತರಗತಿ ಬೋರ್ಡ್‌ ಪರೀಕ್ಷೆಗೆ ಸುಪ್ರೀಂ ಕೋರ್ಟ್ ತಡೆ!

5, 8, 9, 11ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆಗೆ ಅಸ್ತು ಎಂದು ಹೈ ಕೋರ್ಟ್ ಹೇಳಿತ್ತು. ಸದ್ಯ ಹೈ ಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.

VISTARANEWS.COM


on

Students writing SSLC Exam in Examination centre
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: 5, 8, 9, 11ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ (Public Exam, Board Exam) ನಡೆಸಲು ಅನುಮತಿ ನೀಡಿದ್ದ ಕರ್ನಾಟಕ ಹೈ ಕೋರ್ಟ್ (Karnataka High Court) ಆದೇಶಕ್ಕೆ ಸುಪ್ರೀಂ ಕೋರ್ಟ್‌ (Supreme Court) ತಡೆಯಾಜ್ಞೆ ನೀಡಿದೆ. ಇಂದು ಬೆಳಗ್ಗೆ ತಾನೇ ಎಲ್ಲ ಶಾಲೆಗಳೂ ಬೋರ್ಡ್‌ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದ್ದು, ಇದಾದ ಬಳಿಕ ಈ ಆದೇಶ ಹೊರಬಿದ್ದಿದೆ.

5, 8, 9, 11ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆಗೆ ಅಸ್ತು ಎಂದು ಹೈ ಕೋರ್ಟ್ ಹೇಳಿತ್ತು. ಸದ್ಯ ಹೈ ಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. “ಸದ್ಯ ಯಾವುದೇ ಶಾಲೆಗಳು ಸಹ ಫಲಿತಾಂಶ ಪ್ರಕಟಿಸಬಾರದು. ಮುಂದಿನ ಆದೇಶದ ವರೆಗೆ ಕಾಯಬೇಕು” ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ‌

ಏನಿದು ಪಬ್ಲಿಕ್‌ ಪರೀಕ್ಷೆ ಮತ್ತು ಅದರ ಸುತ್ತಲಿನ ವಿವಾದ?

ಬಿಜೆಪಿ ಸರ್ಕಾರದಲ್ಲಿ ಶಿಕ್ಷಣ ಸಚಿವರಾಗಿದ್ದ ಬಿ.ಸಿ ನಾಗೇಶ್ 5ನೇ ತರಗತಿ ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್‌ ಮಾದರಿಯ ಮೌಲ್ಯಾಂಕನ ಪರೀಕ್ಷೆ ಜಾರಿಗೆ ತಂದಿದ್ದರು. ಕಾಂಗ್ರೆಸ್‌ ಸರ್ಕಾರ ಬಂದ ಮೇಲೆ 9ನೇ ತರಗತಿ ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೂ ಬೋರ್ಡ್‌ ಎಕ್ಸಾಮ್‌ ನಡೆಸುವ ಚಿಂತನೆ ಮಾಡಲಾಗಿತ್ತು. 9ನೇ ತರಗತಿ ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೂ ಪಬ್ಲಿಕ್‌ ಪರೀಕ್ಷೆ ನಡೆಸುವುದರಿಂದ ವಿದ್ಯಾರ್ಥಿಗಳ ಕಲಿಕೆಯಲ್ಲಿ ಗಂಭೀರತೆ ಕಾಣಬಹುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ವಾದವಾಗಿತ್ತು.

ಆದರೆ, 2023ರ ಡಿಸೆಂಬರ್‌ನಲ್ಲಿ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಗಳನ್ನು ಪ್ರಶ್ನಿಸಿ ಕರ್ನಾಟಕ ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ಸಂಘ (ರುಪ್ಸಾ) ಸಂಘಟನೆ ಕೋರ್ಟ್ ಮೆಟ್ಟಲೇರಿತ್ತು. ವಾದ ಆಲಿಸಿದ ಹೈಕೋರ್ಟ್ ಸರ್ಕಾರ ಸುತ್ತೋಲೆ ರದ್ದುಗೊಳಿಸಿ ಆದೇಶಿಸಿತ್ತು. ತಕ್ಷಣವೇ ರಾಜ್ಯದ ಶಿಕ್ಷಣ ಇಲಾಖೆ ವತಿಯಿಂದ ಹೈಕೋರ್ಟ್‌ನ ದ್ವಿಸದಸ್ಯ ಪೀಠದ ಮುಂದೆ ಮೇಲ್ಮನವಿ ಸಲ್ಲಿಸಿತು. ಎರಡೂ ಕಡೆಯವರ ವಾದ ಮಾತ್ರವಲ್ಲ, ಪರೀಕ್ಷೆಗಳು ಹೇಗೆ ನಡೆಯುತ್ತವೆ ಎಂಬಿತ್ಯಾದಿ ಅಂಶಗಳನ್ನು ಕೇಳಿಸಿಕೊಂಡ ಹೈಕೋರ್ಟ್‌ ಪರೀಕ್ಷೆ ನಡೆಸಲು ಷರತ್ತುಬದ್ಧ ಅನುಮತಿಯನ್ನು ನೀಡಿತ್ತು.

ಒಂದು ಹಂತದಲ್ಲಿ ಮಾರ್ಚ್‌ 13ರಂದು ನಡೆಯಬೇಕಾಗಿದ್ದ ಪರೀಕ್ಷೆಯನ್ನು ರದ್ದುಪಡಿಸಿದ್ದ ಹೈಕೋರ್ಟ್‌ ಮಾರ್ಚ್‌ 14ರಂದು ತೀರ್ಪು ನೀಡಿ ಪರೀಕ್ಷೆಗೆ ಅನುಮತಿ ನೀಡಿತು. ಜತೆಗೆ ಮಾರ್ಚ್‌ 27ರಿಂದಲೇ ಪರೀಕ್ಷೆಯನ್ನು ಮರುನಿಗದಿ ಮಾಡಲು ಸೂಚಿಸಿತು. ಜತೆಗೆ ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗಳನ್ನು ಕೇಳಬಾರದು, ಯಾರನ್ನೂ ಅನುತ್ತೀರ್ಣಗೊಳಿಸಬಾರದು ಮತ್ತು ಫಲಿತಾಂಶವನ್ನು ಶಾಲಾ ಮಟ್ಟದಲ್ಲಿ ಮಾತ್ರ ಪ್ರಕಟಿಸಬೇಕು ಎಂಬ ಷರತ್ತುಗಳನ್ನು ವಿಧಿಸಿತು. ಇದಕ್ಕೆ ರಾಜ್ಯ ಸರ್ಕಾರವೂ ಒಪ್ಪಿ ಮಾರ್ಚ್‌ 27ರಿಂದ ಪರೀಕ್ಷೆಯನ್ನು ಆರಂಭಿಸಿತ್ತು.

ಈ ನಡುವೆ ಖಾಸಗಿ ಶಾಲೆಗಳ ಒಕ್ಕೂಟವು ಸುಪ್ರೀಂಕೋರ್ಟ್‌ ಮೊರೆ ಹೋಗಿತ್ತು. ಅರ್ಜಿಯ ವಿಚಾರಣೆ ನಡೆದು, ಪರೀಕ್ಷೆ ಈಗಾಗಲೇ ಆರಂಭಗೊಂಡಿರುವುದರಿಂದ ಈಗ ತಡೆಯಾಜ್ಞೆ ನೀಡಲಾಗದು ಎಂದು ಹೇಳಿತ್ತು. ಬಳಿಕ ಮೇಲ್ಮನವಿಯ ವಿಚಾರಣೆ ನಡೆದಿದ್ದು. ಇಂದು ಪಬ್ಲಿಕ್‌ ಪರೀಕ್ಷೆಯ ವಿರುದ್ಧ ತಡೆಯಾಜ್ಞೆ ನೀಡಿದೆ.

ಇದನ್ನೂ ಓದಿ: Public Exam : 5,8,9ನೇ ಕ್ಲಾಸ್‌ ಪಬ್ಲಿಕ್‌ ಪರೀಕ್ಷೆ ಪರಿಷ್ಕೃತ ಟೈಮ್‌ ಟೇಬಲ್‌ ಪ್ರಕಟ; ಯಾವಾಗ ಯಾವ ಪರೀಕ್ಷೆ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಪ್ರಮುಖ ಸುದ್ದಿ

CM Siddaramaiah: ಖರ್ಗೆಯೂ ಪಿಎಂ ಆಗಲ್ಲ! ಸಿದ್ದರಾಮಯ್ಯ ಯಾಕಿಂಥಾ ಮಾತಾಡಿದ್ರು?

CM Siddaramaiah: ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, “ರಾಜ್ಯದಿಂದ ಯಾರೂ ಪಿಎಂ ಸ್ಥಾನದ ಆಕಾಂಕ್ಷಿಗಳಿಲ್ಲ. ನಾನು ಪಿಎಂ ಸ್ಥಾನದ ಆಕಾಂಕ್ಷಿಯಲ್ಲ. ನಾನೇ ಅಲ್ಲ , ನಮ್ಮ ರಾಜ್ಯದಲ್ಲಿ ಯಾರೂ ಸಹ ಪಿಎಂ ಸ್ಥಾನದ ಆಕಾಂಕ್ಷಿಗಳಿಲ್ಲ” ಎಂದು ಹೇಳಿದ್ದಾರೆ. ಇದರ ಮೂಲಕ, ಖರ್ಗೆ ಕೂಡ ಪಿಎಂ ಆಗುವುದಿಲ್ಲ ಎಂಬ ಸಂದೇಶವನ್ನು ಅವರು ರವಾನಿಸಿದ್ದಾರೆ.

VISTARANEWS.COM


on

Mallikarjuna Kharge siddaramaiah
Koo

ಬೆಂಗಳೂರು: ಈ ಲೋಕಸಭೆ ಚುನಾವಣೆ (Lok Sabha Election 2024) ಫಲಿತಾಂಶದಲ್ಲಿ ಕಾಂಗ್ರೆಸ್ (congress) ಗೆದ್ದು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (AICC President Mallikarjun Kharge) ಪ್ರಧಾನ ಮಂತ್ರಿ (Prime minister) ಆಗಬಹುದು ಎಂಬ ಒಂದು ಸಣ್ಣ ಆಸೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಚಿವುಟಿ ಹಾಕಿದ್ದಾರೆ. “ರಾಜ್ಯದ ಯಾವ ನಾಯಕನೂ ಪಿಎಂ ಆಗಲ್ಲ” ಎನ್ನುವ ಮೂಲಕ ಅವರು ಈ ಚರ್ಚೆಗೆ ತೆರೆ ಎಳೆದಿದ್ದಾರೆ.

ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, “ರಾಜ್ಯದಿಂದ ಯಾರೂ ಪಿಎಂ ಸ್ಥಾನದ ಆಕಾಂಕ್ಷಿಗಳಿಲ್ಲ. ನಾನು ಪಿಎಂ ಸ್ಥಾನದ ಆಕಾಂಕ್ಷಿಯಲ್ಲ. ನಾನೇ ಅಲ್ಲ , ನಮ್ಮ ರಾಜ್ಯದಲ್ಲಿ ಯಾರೂ ಸಹ ಪಿಎಂ ಸ್ಥಾನದ ಆಕಾಂಕ್ಷಿಗಳಿಲ್ಲ” ಎಂದು ಹೇಳಿದ್ದಾರೆ. ಇದರ ಮೂಲಕ, ಖರ್ಗೆ ಕೂಡ ಪಿಎಂ ಆಗುವುದಿಲ್ಲ ಎಂಬ ಸಂದೇಶವನ್ನು ಅವರು ರವಾನಿಸಿದ್ದಾರೆ.

ಹಾಗಾದರೆ ರಾಜ್ಯದಿಂದ ಪಿಎಂ ಸ್ಥಾನದ ಅರ್ಹರು, ಆಕಾಂಕ್ಷಿಗಳು ಕಾಂಗ್ರೆಸ್‌ನಲ್ಲಿ ಯಾರು ಇಲ್ಲವೇ? ಸ್ವತಃ ಎಐಸಿಸಿ ಅಧ್ಯಕ್ಷರೇ ಇದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಈ ಬಾರಿ ಕಾಂಗ್ರೆಸ್ ಲೋಕಸಭಾ ಚುನಾವಣೆ ಎದುರಿಸಿದೆ. ಕಾಂಗ್ರೆಸ್ ಒಕ್ಕೂಟ ಅಧಿಕ ಸ್ಥಾನ ಗೆದ್ದರೆ ಪಿಎಂ ರೇಸ್‌ನಲ್ಲಿ‌‌ ಖರ್ಗೆಯೂ ಪರಿಗಣನೆಗೆ ಒಳಗಾಗುವವರೇ. ರೇಸ್‌ನಲ್ಲಿ ನಾನಿಲ್ಲ ಎಂದು ಅವರು ಹೇಳಿಲ್ಲ. ಆದರೆ ರಾಹುಲ್‌ ಗಾಂಧಿಯವರನ್ನು ಓವರ್‌ಟೇಕ್‌ ಮಾಡಿ ಮುಂದೆ ಹೋಗಲು ಸ್ವತಃ ಖರ್ಗೆಯವರೇ ತಯಾರಿಲ್ಲ.

ಇನ್ನು ಸಿದ್ದರಾಮಯ್ಯ. ಸ್ವತಃ ಅವರು ರಾಜ್ಯದ ರಾಜಕಾರಣ ಬಿಟ್ಟು ಹೋಗಲು ತಯಾರಿಲ್ಲ. ಬೇರೆ ರಾಜ್ಯಗಳಿಗೆ ಚುನಾವಣಾ ಪ್ರಚಾರಕ್ಕೆ ಹೋಗುವುದು ಕೂಡ ನನ್ನಿಂದ ಸಾಧ್ಯವಿಲ್ಲ ಎಂದು ಅವರು ಇತ್ತೀಚೆಗೆ ಹೇಳಿದ್ದರು. ಸ್ವತಃ ರಾಜ್ಯದ ಕಾಂಗ್ರೆಸ್‌ ನಾಯಕತ್ವವನ್ನು ಗಟ್ಟಿಯಾಗಿ ಹಿಡಿದಿರುವ ಸಿದ್ದರಾಮಯ್ಯ, ಅದನ್ನು ಸುತರಾಂ ಬಿಟ್ಟುಕೊಡಲು ಸಿದ್ಧರಿಲ್ಲ. ಇದನ್ನೇ ಅವರು ʼನಾನು ಪಿಎಂ ಸ್ಥಾನ ಆಕಾಂಕ್ಷಿಯಲ್ಲʼ ಎನ್ನುವ ಮೂಲಕ ತಿಳಿಸಿದ್ದಾರೆ.

ಸಿದ್ದು ಹೇಳಿಕೆ ಮಲ್ಲಿಕಾರ್ಜುನ ಖರ್ಗೆಯವರಿಗೆ ನೀಡಿದ ಚೆಕ್‌ಮೇಟ್‌ ಕೂಡ ಎಂದು ವಿಶ್ಲೇಷಿಸಲಾಗುತ್ತಿದೆ. ಪಿಎಂ ಸ್ಥಾನಕ್ಕೆ ಹೋಗಬಹುದಾದ ಖರ್ಗೆಯವರನ್ನು ಹೆಸರಿಸಿ, ಆ ಮೂಲಕ ಇನ್ನೊಂದು ಶಕ್ತಿ ಕೇಂದ್ರವನ್ನು ಪಕ್ಷದೊಳಗೆ ಬೆಂಬಲಿಸಲು ಸಿದ್ದು ಸಿದ್ಧರಿಲ್ಲ. ಹಾಗೆಯೇ ಅವರು ಈ ಮಾತು ರಾಹುಲ್ ಗಾಂಧಿಗೆ ಬೆಂಬಲ ಕೂಡ ಇರಬಹುದು ಅಂತಿದಾರೆ ವಿಶ್ಲೇಷಕರು. ಯಾಕೆಂದರೆ ಸದ್ಯ ಕಾಂಗ್ರೆಸ್‌ನಲ್ಲಿ ರಾಷ್ಟ್ರಮಟ್ಟದ ಹಲವು ನಾಯಕರು ರಾಹುಲ್‌ ಅವರನ್ನೇ ಬೆಂಬಲಿಸುತ್ತಿದ್ದಾರೆ.

ಇದನ್ನೂ ಓದಿ: CM Siddaramaiah: ಲೋಕಸಭಾ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರಕಾರ ಕಾಂಗ್ರೆಸ್‌ಗೆ ಎಷ್ಟು ಸೀಟ್‌? ಸಂಪುಟ ಪುನಾರಚನೆ ಇಲ್ಲ!

Continue Reading

ಚಿಕ್ಕೋಡಿ

Sallekhana: ಸಲ್ಲೇಖನ ವ್ರತ ಸ್ವೀಕರಿಸಿ ಸಮಾಧಿಸೇನ ಮುನಿ ಜಿನೈಕ್ಯ

Sallekhana: ಸಮಾಧಿಸೇನ ಮುನಿಗಳಿಗೆ 79 ವರ್ಷ ವಯಸ್ಸಾಗಿತ್ತು. ಮೇ 17ರಿಂದ ಅವರು ಆಹಾರ ತ್ಯಾಗ ಮಾಡಿದ್ದರು. ಆಶ್ರಮದ ಆವರಣದಲ್ಲಿಯೇ ಮಂಗಳವಾರ ಅಂತ್ಯಕ್ರಿಯೆ ನೆರವೇರಿದೆ. ಚಿಕ್ಕೋಡಿ, ನಿಪ್ಪಾಣಿ, ಕಾಗವಾಡ, ಅಥಣಿ ತಾಲೂಕು, ಮಹಾರಾಷ್ಟ್ರದ ಕೊಲ್ಲಾಪುರ, ಸಾಂಗ್ಲಿ ಜಿಲ್ಲೆಯಿಂದಲೂ ಅಪಾರ ಸಂಖ್ಯೆಯ ಭಕ್ತರು ಆಶ್ರಮಕ್ಕೆ ಬಂದು ಮುನಿಗಳ ಅಂತಿಮ ದರ್ಶನ ಪಡೆದರು.

VISTARANEWS.COM


on

jain monk samadhi sena chikkodi sallekhana
Koo

ಚಿಕ್ಕೋಡಿ: ಜೈನಮುನಿಗಳಾದ (Jain Muni) ಬೆಳಗಾವಿ ಜಿಲ್ಲೆ ಚಿಕ್ಕೋಡಿ (Chikkodi news) ತಾಲೂಕಿನ ಕೋಥಳಿಯ ಸಮಾಧಿಸೇನ ಮುನಿಗಳು (Samadhisena Muni) ಜೈನ ಸಂಪ್ರದಾಯದಂತೆ (Jain tradition) ಯಮ ಸಲ್ಲೇಖನ ವ್ರತ (Sallekhana Vrata) ಸ್ವೀಕರಿಸಿ ಕೀರ್ತಿಶೇಷರಾಗಿದ್ದಾರೆ. ಇವರು ಕೋಥಳಿಯ ದೇಶಭೂಷಣ ಮನಿಗಳ ಜೈನ ಆಶ್ರಮದಲ್ಲಿ ಕಳೆದ ನಾಲ್ಕು ದಿನಗಳಿಂದ ಸಲ್ಲೇಖನ ವ್ರತ ನಿರತರಾಗಿದ್ದರು. ಸೋಮವಾರ ರಾತ್ರಿ ಅವರು ಜಿನೈಕ್ಯರಾಗಿದ್ದಾರೆ.

ಸಮಾಧಿಸೇನ ಮುನಿಗಳಿಗೆ 79 ವರ್ಷ ವಯಸ್ಸಾಗಿತ್ತು. ಮೇ 17ರಿಂದ ಅವರು ಆಹಾರ ತ್ಯಾಗ ಮಾಡಿದ್ದರು. ಆಶ್ರಮದ ಆವರಣದಲ್ಲಿಯೇ ಮಂಗಳವಾರ ಅಂತ್ಯಕ್ರಿಯೆ ನೆರವೇರಿದೆ. ಚಿಕ್ಕೋಡಿ, ನಿಪ್ಪಾಣಿ, ಕಾಗವಾಡ, ಅಥಣಿ ತಾಲೂಕು, ಮಹಾರಾಷ್ಟ್ರದ ಕೊಲ್ಲಾಪುರ, ಸಾಂಗ್ಲಿ ಜಿಲ್ಲೆಯಿಂದಲೂ ಅಪಾರ ಸಂಖ್ಯೆಯ ಭಕ್ತರು ಆಶ್ರಮಕ್ಕೆ ಬಂದು ಮುನಿಗಳ ಅಂತಿಮ ದರ್ಶನ ಪಡೆದರು.

ಗದಗ ಜಿಲ್ಲೆಯ ಗಜೇಂದ್ರ ಗಢದವರಾದ ಸಮಾಧಿಸೇನ ಮುನಿಗಳು ಗುಲಾಬಭೂಷಣ ಮುನಿಯವರ ಶಿಷ್ಯರಾಗಿದ್ದರು. ಸಂಸಾರಿಯಾಗಿದ್ದ ಅವರು 2004ರಲ್ಲಿ ಮನೆ ತೊರೆದು ತ್ಯಾಗಿಯಾಗಿ ದೀಕ್ಷೆ ಪಡೆದು ಜೈನ ಧರ್ಮದ ಪ್ರಸಾರ ಕಾರ್ಯದಲ್ಲಿ ತೊಡಗಿದ್ದರು. 2014ರಲ್ಲಿ ಮಹಾರಾಷ್ಟ್ರದ ಚಿಪರಿ ಆಶ್ರಮದ ಧರ್ಮಸೇನಾ ಮುನಿಗಳಿಂದ ಕ್ಷುಲ್ಲಕ ದೀಕ್ಷೆ ಪಡೆದಿದ್ದರು. 2021ರಲ್ಲಿ ಗುಲಾಬಭೂಷಣ ಮುನಿಗಳಿಂದ ಮುನಿ ದೀಕ್ಷೆ ಪಡೆದಿದ್ದ ರು. ಕೋಥಳಿಯ ಆಶ್ರಮದಲ್ಲಿ ದೇಶಭೂಷಣ ಮುನಿಗಳು ಸೇರಿ ಇದುವರೆಗೆ 40ಕ್ಕೂ ಅಧಿಕ ಜೈನಮುನಿಗಳು ಯಮ ಸಲ್ಲೇಖನ ವ್ರತ ಕೈಗೊಂಡು ದೇಹ ತ್ಯಾಗ ಮಾಡಿದ್ದಾರೆ.

ಸಲ್ಲೇಖನ ಎಂದರೇನು?

ಸಲ್ಲೇಖನ ಜೈನ ಧರ್ಮೀಯರ ಒಂದು ಕಠಿಣ ವ್ರತ. ಜೈನ ಧರ್ಮದ ಅನುಸಾರವಾಗಿ ಮೋಕ್ಷ ಅಥವಾ ಸದ್ಗತಿಗಾಗಿ ಧರ್ಮಪೂರ್ವಕವಾಗಿ ಆಹಾರಾದಿಗಳನ್ನು ತ್ಯಜಿಸಿ ಶರೀರ ತ್ಯಾಗ ಮಾಡುವ ವಿಧಿಗೆ ಸಲ್ಲೇಖನ ವ್ರತ ಎನ್ನಲಾಗುತ್ತದೆ. ಇದಕ್ಕೆ ಸಮಾಧಿ ಮರಣ ಎಂಬ ಹೆಸರೂ ಇದೆ. ಸಲ್ಲೇಖನ ವ್ರತವು ಮುನಿಗೆ ಶ್ರೇಷ್ಠವಾದುದು ಹಾಗೂ ಗೃಹಸ್ಥರಿಗೆ ಸಂಪೂರ್ಣ ಐಚ್ಛಿಕ ಕ್ರಿಯೆಯಾಗಿದೆ.

ಕೋಟ್ಯಂತರ ರೂ. ಆಸ್ತಿ ತ್ಯಜಿಸಿ ಜೈನ ಸನ್ಯಾಸ ದೀಕ್ಷೆ ಪಡೆದ ಬೆಂಗಳೂರಿನ ಉದ್ಯಮಿಯ ಪತ್ನಿ, 11 ವರ್ಷದ ಮಗ!

ಬೆಂಗಳೂರು ಮೂಲದ ಉದ್ಯಮಿ ಮನೀಶ್‌ ಎಂಬುವವರ ಪತ್ನಿ ಸ್ವೀಟಿ (30) ಹಾಗೂ 11 ವರ್ಷದ ಮಗ ಹೃಧನ್ ಇತ್ತೀಚೆಗೆ ಜೈನ ಸನ್ಯಾಸ ದೀಕ್ಷೆ ಪಡೆದಿದ್ದಾರೆ. ತಾಯಿ-ಮಗನ ದೀಕ್ಷಾ ಸಮಾರಂಭವು ಗುಜರಾತ್‌ನ ಸೂರತ್‌ನಲ್ಲಿ ಜನವರಿಯಲ್ಲಿ ಬಹಳ ವಿಜೃಂಭಣೆಯಿಂದ ನಡೆದಿದೆ. ಇವರಿಬ್ಬರೂ ಈಗ ಸೂರತ್‌ನಲ್ಲಿ ನೆಲೆಸಿದ್ದಾರೆ.

ಜೈನ ದೀಕ್ಷೆಯ ನಂತರ ತಾಯಿ ಸ್ವೀಟಿಗೆ ಭಾವಶುದ್ಧಿ ರೇಖಾ ಶ್ರೀ ಜಿ ಹಾಗೂ ಮಗ ಹೃದನ್‌ಗೆ ಹಿತಶಯ್ ರತನವಿಜಯ್ ಜಿ. ಎಂದು ಮರು ನಾಮಕರಣ ಮಾಡಲಾಗಿದೆ. ಇದೀಗ ತಾಯಿ-ಮಗ ದೀಕ್ಷೆ ಸ್ವೀಕಾರ ಮಾಡಿರುವ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದೆ. ಸದ್ಯ ಈ ವಿಡಿಯೊ ಎಲ್ಲೆಡೆ ವೈರಲ್‌ ಆಗಿದೆ.

ಸನ್ಯಾಸ ದೀಕ್ಷೆ ಸ್ವೀಕರಿಸುವಾಗ ಮಗನ ತಲೆಯನ್ನು ತಾಯಿ ನೇವರಿಸುತ್ತಾ ಭಾವುಕರಾಗಿದ್ದಾರೆ. ಪರಸ್ಪರ ಹಣೆಗೆ ಕುಂಕುಮ ಇಟ್ಟುಕೊಂಡು, ಅಕ್ಷತೆ ಹಾಕಿಕೊಂಡಿದ್ದು, ನಂತರ ಇಬ್ಬರೂ ಶ್ವೇತ ವಸ್ತ್ರಗಳಲ್ಲಿ ಕಾಣಿಸಿಕೊಂಡಿರುವುದು ವಿಡಿಯೊದಲ್ಲಿದೆ.

ಕುಟುಂಬದ ಸಂಬಂಧಿ ವಿವೇಕ್‌ ಪ್ರತಿಕ್ರಿಯಿಸಿ, ಭಾವಶುದ್ಧಿ ರೇಖಾ ಶ್ರೀ ಜಿ ಅವರು ಗರ್ಭಿಣಿಯಾಗಿದ್ದಾಗಲೇ ಸನ್ಯಾಸಿಯಾಗಲು ಬಯಸಿದ್ದರು. ಅದೇ ಸಮಯದಲ್ಲಿ, ತನ್ನ ಮಗು ಕೂಡ ತನ್ನನ್ನು ಅನುಸರಿಸಿ ಜೈನ ಸನ್ಯಾಸಿಯಾಗಬೇಕೆಂದು ನಿರ್ಧರಿಸಿದ್ದರು. ನಂತರ ಮಗ ಕೂಡ ತಾಯಿ ಹಾದಿಯಲ್ಲೇ ನಡೆಯುವುದಾಗಿ ಹೇಳಿದ್ದ. ಭಾವಶುದ್ಧಿ ರೇಖಾ ಶ್ರೀ ಜಿ ಅವರ ಸಂಕಲ್ಪ ಕೇಳಿದ ನಂತರ ಅವರ ಪತಿ ಮನೀಶ್ ಕೂಡ ಬೆಂಬಲಿಸಿದರು. ಅವರು ದೀಕ್ಷೆ ಪಡೆದಿರುವುದು ಮನೀಶ್ ಮತ್ತು ಕುಟುಂಬದ ಇತರರಿಗೆ ಹೆಮ್ಮೆಯ ವಿಷಯವಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | Akshay Kumar: ಜೈನ ಸನ್ಯಾಸಿಯ 180 ದಿನಗಳ ಉಪವಾಸ ಬ್ರೇಕ್‌ ಮಾಡಿದ ಅಕ್ಷಯ್ ಕುಮಾರ್!

ಈ ಹಿಂದೆ, ಗುಜರಾತ್‌ನ ಶ್ರೀಮಂತ ಜೈನ ದಂಪತಿ ಸುಮಾರು 200 ಕೋಟಿ ರೂ. ಆಸ್ತಿ ತ್ಯಜಿಸಿ ಸನ್ಯಾಸ ದೀಕ್ಷೆ ಪಡೆದಿದ್ದರು. ಭಾವೇಶ್ ಭಂಡಾರಿ ಮತ್ತು ಪತ್ನಿ ಫೆಬ್ರವರಿಯಲ್ಲಿ ಸನ್ಯಾಸ ಜೀವನಕ್ಕೆ ಕಾಲಿಟ್ಟಿದ್ದರು. ದಂಪತಿಗೆ ಒಬ್ಬ ಮಗ ಮತ್ತು ಮಗಳಿದ್ದು, ಅವರು ಕೂಡ 2022ರಲ್ಲಿಯೇ ದೀಕ್ಷೆ ತೆಗೆದುಕೊಂಡಿದ್ದರು.

ಇದನ್ನೂ ಓದಿ: Srinidhi Shetty: ಕೋಲ ಸೇವೆ ಸಲ್ಲಿಸಿದ ಕೆಜಿಎಫ್‌ ಬೆಡಗಿ; ಶ್ರೀನಿಧಿ ಶೆಟ್ಟಿಗೆ ದೈವ ಅಭಯ ನೀಡಿದ್ದೇನು?

Continue Reading

ಪ್ರಮುಖ ಸುದ್ದಿ

Corona Virus: ಸಿಂಗಾಪುರದಲ್ಲಿ ಕೋವಿಡ್‌-19 ಹೊಸ ಅಲೆ, ರಾಜ್ಯದಲ್ಲಿ ಅಲರ್ಟ್‌, ಇಂದು ಆರೋಗ್ಯ ಇಲಾಖೆ ಸಭೆ

Corona Virus: ಸಿಂಗಾಪುರದಲ್ಲಿ ಒಂದೇ ವಾರದಲ್ಲಿ 25 ಸಾವಿರ ಕೋವಿಡ್ ಕೇಸ್ ಖಚಿತವಾಗಿದ್ದು, ಇದರಿಂದ ಸಿಲಿಕಾನ್ ಸಿಟಿ ಬೆಂಗಳೂರು ಅಲರ್ಟ್‌ ಆಗಿದೆ. ಇದರ ಜೊತೆಗೆ ಮಹಾರಾಷ್ಟ್ರದಲ್ಲಿಯೂ ಕೋವಿಡ್ ಒಮಿಕ್ರಾನ್ ರೂಪಾಂತರಿ ವೈರಸ್‌ನ 91 ಕೇಸ್‌ ಪತ್ತೆಯಾಗಿವೆ. ಹೀಗಾಗಿ, ಮುನ್ನೆಚ್ಚರಿಕೆ ವಹಿಸಲು ಇಂದು ಕೇಂದ್ರ ಆರೋಗ್ಯ ಇಲಾಖೆಯ ಜೊತೆಗೆ ರಾಜ್ಯ ಆರೋಗ್ಯ ಇಲಾಖೆ ಸಭೆ ನಡೆಯುತ್ತಿದೆ.

VISTARANEWS.COM


on

corona virus wave in singapore
Koo

ಬೆಂಗಳೂರು: ಸಿಂಗಾಪುರದಲ್ಲಿ (Singapore) ಹೊಸ ಕೋವಿಡ್‌- 19 (Covid 19 wave) ಅಲೆ ಪತ್ತೆಯಾಗಿದೆ. ಒಂದೇ ವಾರದಲ್ಲಿ ಕೊರೊನಾ ವೈರಸ್‌ (Corona Virus) ಕೇಸುಗಳ ಸಂಖ್ಯೆ ದ್ವಿಗುಣಗೊಂಡಿದ್ದು, ಮತ್ತೆ ಮಾಸ್ಕ್‌ (Mask) ಧರಿಸಲು ಸಲಹೆ ನೀಡಲಾಗಿದೆ. ರಾಜ್ಯದಲ್ಲೂ ಆರೋಗ್ಯ ಇಲಾಖೆ (Health department) ಅಲರ್ಟ್‌ ಆಗಿದ್ದು, ಪರಿಸ್ಥಿತಿಯನ್ನು ಗಮನಿಸುತ್ತಿದೆ.

ಸಿಂಗಾಪುರದಲ್ಲಿ ಒಂದೇ ವಾರದಲ್ಲಿ 25 ಸಾವಿರ ಕೋವಿಡ್ ಕೇಸ್ ಖಚಿತವಾಗಿದ್ದು, ಇದರಿಂದ ಸಿಲಿಕಾನ್ ಸಿಟಿ ಬೆಂಗಳೂರು ಅಲರ್ಟ್‌ ಆಗಿದೆ. ಇದರ ಜೊತೆಗೆ ಮಹಾರಾಷ್ಟ್ರದಲ್ಲಿಯೂ ಕೋವಿಡ್ ಒಮಿಕ್ರಾನ್ ರೂಪಾಂತರಿ ವೈರಸ್‌ನ 91 ಕೇಸ್‌ ಪತ್ತೆಯಾಗಿವೆ. ಹೀಗಾಗಿ, ಮುನ್ನೆಚ್ಚರಿಕೆ ವಹಿಸಲು ಇಂದು ಕೇಂದ್ರ ಆರೋಗ್ಯ ಇಲಾಖೆಯ ಜೊತೆಗೆ ರಾಜ್ಯ ಆರೋಗ್ಯ ಇಲಾಖೆ ಸಭೆ ನಡೆಯುತ್ತಿದೆ.

ಸಿಂಗಾಪುರದಿಂದ ಬೆಂಗಳೂರು ಹಾಗೂ ಮುಂಬಯಿಗೆ ಆಗಮಿಸುವ ವಿಮಾನಯಾನಿಗಳ ಸಂಖ್ಯೆ ಹೆಚ್ಚು ಇದ್ದು, ಈ ಹಿನ್ನೆಲೆಯಲ್ಲಿ ಮುಂದಿನ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಚರ್ಚೆ ನಡೆಯಲಿದೆ. ಆಯ್ದ ಯಾನಿಗಳ ಆರೋಗ್ಯ ತಪಾಸಣೆ, ಮಾಸ್ಕ್‌ ಧಾರಣೆ ಸೇರಿದಂತೆ ಹಲವು ಕ್ರಮಗಳ ಬಗೆಗೆ ಚರ್ಚಿಸಲಾಗುತ್ತಿದೆ.

ಸಿಂಗಾಪುರದಲ್ಲಿ ಏನಾಗಿದೆ?

ಸಿಂಗಾಪುರದ ಆರೋಗ್ಯ ಸಚಿವ ಓಂಗ್ ಯೆ ಕುಂಗ್, ಸಾರ್ವಜನಿಕ ತಾಣಗಳಲ್ಲಿ ಮುಖವಾಡಗಳನ್ನು ಧರಿಸುವಂತೆ ಸಲಹೆ ನೀಡಿದ್ದಾರೆ. ಸಾಮಾಜಿಕ ನಿರ್ಬಂಧಗಳ ಕುರಿತು ಮಾತನಾಡಿದ ಸಚಿವ ಓಂಗ್, ಸದ್ಯಕ್ಕೆ ಯಾವುದೇ ರೀತಿಯ ಸಾಮಾಜಿಕ ನಿರ್ಬಂಧಗಳ ಯೋಚನೆಯಿಲ್ಲ ಎಂದಿದ್ದಾರೆ. ಏಕೆಂದರೆ ಸಿಂಗಾಪುರದಲ್ಲಿ ಕೋವಿಡ್ -19 ಅನ್ನು ಸ್ಥಳೀಯ ಕಾಯಿಲೆ ಎಂದು ಪರಿಗಣಿಸಲಾಗುತ್ತದೆ.

ಕೋವಿಡ್‌ನ ಹೊಸ ಅಲೆಯ ಪಥವನ್ನು ಸರ್ಕಾರವು ನಿಕಟವಾಗಿ ಗಮನಿಸುತ್ತಿದೆ ಎಂದು ಸಿಂಗಾಪುರದ ಆರೋಗ್ಯ ಸಚಿವಾಲಯ ಹೇಳಿದೆ. ಸಚಿವಾಲಯದ ಪ್ರಕಾರ, ಕೋವಿಡ್ -19 ಪ್ರಕರಣಗಳ ಅಂದಾಜು ಸಂಖ್ಯೆಯು ಹಿಂದಿನ ವಾರದಲ್ಲಿದ್ದ 13,700ರಿಂದ 25,900ಕ್ಕೆ ದ್ವಿಗುಣಗೊಂಡಿದೆ. ಅದೇ ಅವಧಿಯಲ್ಲಿ ಸರಾಸರಿ ದೈನಂದಿನ ಕೋವಿಡ್ -19 ಆಸ್ಪತ್ರೆಗೆ ದಾಖಲು ಕೇಸ್‌ಗಳು 181ರಿಂದ ಸರಿಸುಮಾರು 250ಕ್ಕೆ ಏರಿದೆ ಎಂದು ಸಚಿವಾಲಯ ವರದಿ ಮಾಡಿದೆ.

ಆಸ್ಪತ್ರೆಯ ಹಾಸಿಗೆ ಸಾಮರ್ಥ್ಯವನ್ನು ಸಂರಕ್ಷಿಸಲು, ಸಾರ್ವಜನಿಕ ಆಸ್ಪತ್ರೆಗಳಿಗೆ ತುರ್ತು-ಅಲ್ಲದ ಶಸ್ತ್ರಚಿಕಿತ್ಸೆಗಳನ್ನು ಕಡಿಮೆ ಮಾಡಲು ಮತ್ತು ಸೂಕ್ತವಾದ ರೋಗಿಗಳನ್ನು ಆರೈಕೆ ಸೌಲಭ್ಯಗಳಿಗೆ ವರ್ಗಾಯಿಸಲು ಸೂಚನೆ ನೀಡಲಾಗಿದೆ. “ನಾವು ಅಲೆಯ ಆರಂಭಿಕ ಭಾಗದಲ್ಲಿದ್ದೇವೆ. ಪ್ರಮಾಣ ಸ್ಥಿರವಾಗಿ ಏರುತ್ತಿದೆ” ಎಂದು ಆರೋಗ್ಯ ಸಚಿವ ಓಂಗ್ ಯೆ ಕುಂಗ್ ಹೇಳಿದ್ದಾರೆ.

ಕೋವಾಕ್ಸಿನ್‌ ಲಸಿಕೆ ಪಡೆದವರಿಗೂ ಬಿಗ್‌ ಶಾಕ್‌! ಆಘಾತಕಾರಿ ವರದಿ ಔಟ್‌

ನವದೆಹಲಿ: ಕೊರೋನಾ ವೈರಸ್‌(Corona Virus) ಎದುರಿಸಲು ತೆಗೆದುಕೊಂಡಿರುವ ಕೋವಿಶೀಲ್ಡ್‌(Covishield Vaccine) ಲಸಿಕೆ ಅಡ್ಡಪರಿಣಾಮ(Side Effects) ಹೊಂದಿದೆ ಎಂಬುದು ಬಯಲಾದ ಬೆನ್ನಲ್ಲಿ ಕೋವಾಕ್ಸಿನ್‌ (Covaxin) ತೆಗೆದುಕೊಂಡಿರುವ ಜನ ತಮಗೇನು ಅಪಾಯವಿಲ್ಲ ಎಂದು ನಿರಾಳವಾಗಿದ್ದರು. ಆದರೆ ಇದೀಗ ವರದಿಯೊಂದು ಹೊರಬಿದ್ದಿದ್ದು, ಕೋವಾಕ್ಸಿನ್‌ ಪಡೆದಿರುವ ಜನರಿಗೆ ಬಿಗ್‌ ಶಾಕ್‌ ಕೊಟ್ಟಿದೆ. ಕೋವಾಕ್ಸಿನ್‌ ಲಸಿಕೆಯೂ ಅಡ್ಡಪರಿಣಾಮ ಹೊಂದಿದೆ ಎಂಬುದು ಅಧ್ಯಯನದಲ್ಲಿ ಬಯಲಾಗಿದೆ.

ಇತ್ತೀಚೆಗೆ ಕೋವಿಶೀಲ್ಡ್ ಅನ್ನು ಅಭಿವೃದ್ಧಿಪಡಿಸಿದ ಬ್ರಿಟಿಷ್ ಕಂಪನಿಯಾದ ಅಸ್ಟ್ರಾಜೆನೆಕಾ ಇತ್ತೀಚೆಗೆ ಅಲ್ಲಿನ ನ್ಯಾಯಾಲಯದಲ್ಲಿ ಅದರ ಲಸಿಕೆ ಕೆಲವು ಜನರಲ್ಲಿ ಗಂಭೀರ ಕಾಯಿಲೆಗೆ ಕಾರಣವಾಗಬಹುದು ಎಂದು ಒಪ್ಪಿಕೊಂಡಿತ್ತು. ಇದೀಗ ಅದೇ ರೀತಿ ನಮ್ಮ ದೇಶದಲ್ಲಿ ಭಾರತ್ ಬಯೋಟೆಕ್ ಕಂಪನಿ ಅಭಿವೃದ್ಧಿಪಡಿಸಿರುವ ‘ಕೋವಾಕ್ಸಿನ್’ ಲಸಿಕೆಯ ಅಡ್ಡ ಪರಿಣಾಮಗಳ ಬಗ್ಗೆ ವರದಿ ಬಂದಿದೆ. ಈ ಲಸಿಕೆಯನ್ನು ಪಡೆದ ಸುಮಾರು ಒಂದು ವರ್ಷದ ನಂತರ, ಅದರ ಅಡ್ಡಪರಿಣಾಮಗಳು ಸಾಕಷ್ಟು ಜನರಲ್ಲಿ ಕಂಡುಬಂದಿದೆ ಎಂದು ಹೇಳಲಾಗಿದೆ.

BHU ಅಧ್ಯಯನ ವರದಿಯಲ್ಲಿ ಬಹಿರಂಗ

ಬನಾರಸ್‌ ಹಿಂದೂ ವಿಶ್ವವಿದ್ಯಾಲಯ ನಡೆಸಿದ ಅಧ್ಯಯನದಲ್ಲಿ ಈ ಅಂಶ ಬೆಳಕಿಗೆ ಬಂದಿದ್ದು, ಈ ವರದಿಯ ಪ್ರಕಾರ, ಕೊವಾಕ್ಸಿನ್‌ ತೆಗೆದುಕೊಂಡಿರುವ ಹದಿ ಹರೆಯದವರು ಮತು ಯುವಕರಲ್ಲಿ ಈ ಅಡ್ಡ ಪರಿಣಾಮ ಹೆಚ್ಚಾಗಿ ಕಂಡು ಬಂದಿದೆ. ಈ ಸಂಶೋಧನೆಗಾಗಿ ಒಟ್ಟು 1024 ಜನರನ್ನು ಅಧ್ಯಯನಕ್ಕೆ ಒಳಪಡಿಸಲಾಗಿತ್ತು. ಅವರಲ್ಲಿ 635 ಹದಿಹರೆಯದವರು ಮತ್ತು 391 ಯುವಕರು ಇದ್ದರು. 304 ಹದಿಹರೆಯದವರು ಅಥವಾ ಸುಮಾರು 48 ಪ್ರತಿಶತದಷ್ಟು ಜನರು ಶ್ವಾಸನಾಳದ ಸೋಂಕುಗೆ ತುತ್ತಾಗಿರುವುದು ಅಧ್ಯಯನದಲ್ಲಿ ಬಯಲಾಗಿದೆ.

ಇದನ್ನೂ ಓದಿ: CoWIN Certificates: ಕೋವಿಡ್‌ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಔಟ್‌; ಕೇಂದ್ರ ಹೇಳೋದೇನು?

Continue Reading

ಪ್ರಮುಖ ಸುದ್ದಿ

Board Exam: ಮಕ್ಕಳೇ ನೀವು ಪಾಸ್!‌ 5, 8 ಮತ್ತು 9ನೇ ತರಗತಿಯ ಎಲ್ಲ ಮಕ್ಕಳು ಉತ್ತೀರ್ಣ

Board Exam: ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಈಗಾಗಲೇ ಶಾಲೆಗಳಲ್ಲಿ ನಡೆದಿರುವ FA-1, FA-2, FA-3, FA-4, SA-1 ಗಳ ಮೌಲ್ಯಾಂಕನ ಆಧಾರದ ಮೇಲೆ ಮಕ್ಕಳನ್ನು ಮುಂದಿನ ಶೈಕ್ಷಣಿಕ ತರಗತಿಗೆ ಮುಂದುವರೆಸಲು ಅವಕಾಶ ಕಲ್ಪಿಸುವಂತೆ ಶಿಕ್ಷಣ ಇಲಾಖೆಯು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಗೆ ಸೂಚಿಸಿ ಆದೇಶ ಹೊರಡಿಸಿದೆ.

VISTARANEWS.COM


on

board exam public exam
Koo

ಬೆಂಗಳೂರು: 5, 8 ಮತ್ತು 9ನೇ ತರಗತಿಯ (5, 8, 9 class exam) ಎಲ್ಲ ಮಕ್ಕಳನ್ನು ಉತ್ತೀರ್ಣಗೊಳಿಸಿ ಶಿಕ್ಷಣ ಇಲಾಖೆ (Education department) ಆದೇಶ ನೀಡಿದೆ. ಈ ತರಗತಿಗಳ ಪಬ್ಲಿಕ್‌ ಪರೀಕ್ಷೆ ಫಲಿತಾಂಶ (board exam result) ಪ್ರಕಟಕ್ಕೆ ಸುಪ್ರೀಂ ಕೋರ್ಟ್ (supreme court) ತಡೆ ನೀಡಿರುವ ಹಿನ್ನೆಲೆಯಲ್ಲಿ ಈ ತರಗತಿಯ ಮಕ್ಕಳ ಮುಂದಿನ ಶೈಕ್ಷಣಿಕ ವರ್ಷದ (academic year) ಭವಿಷ್ಯ ಅತಂತ್ರಕ್ಕೆ ಸಿಲುಕಿತ್ತು. ಇಲಾಖೆಯ ನೂತನ ಆದೇಶದಂತೆ ಈ ಎಲ್ಲಾ ವಿದ್ಯಾರ್ಥಿಗಳು ಮುಂದಿನ ತರಗತಿಗೆ ಪ್ರವೇಶ ಪಡೆಯಲು ಅವಕಾಶ ಪಡೆದುಕೊಂಡಿದ್ದಾರೆ.

5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಈ ಸಂತಸದ ಸುದ್ದಿಯನ್ನು ನೀಡಿದೆ. ತರಗತಿವಾರು ಮೌಲ್ಯಾಂಕನದ ವಿಶ್ಲೇಷಣೆ ಮಾಡಿ, ವಿದ್ಯಾರ್ಥಿಗಳನ್ನು ಮುಂದಿನ ತರಗತಿಗಳಿಗೆ ದಾಖಲಿಸುವಂತೆ ಅವಕಾಶ ಕಲ್ಪಿಸಿ ಇಲಾಖೆ ಆದೇಶಿಸಿದೆ.

2023-24ನೇ ಸಾಲಿನ 5, 8 ಮತ್ತು 9ನೇ ತರಗತಿ SA-2 ಮೌಲ್ಯಾಂಕನ ಕಾರ್ಯ ಮುಗಿದಿದ್ದು, ರಾಜ್ಯದ ಎಲ್ಲ ಶಾಲೆಗಳಲ್ಲಿ 8.4.2024ರಂದು ಫಲಿತಾಂಶವನ್ನು ಪ್ರಕಟಿಸಲು ತಿಳಿಸಲಾಗಿತ್ತು. ನಂತರದಲ್ಲಿ ಫಲಿತಾಂಶವನ್ನು ಪ್ರಕಟಿಸಲು ಸರ್ವೋಚ್ಛ ನ್ಯಾಯಾಲಯವು ತಡೆಯಾಜ್ಞೆ ನೀಡಿತ್ತು. ಈ ಬಗ್ಗೆ ಅಂತಿಮ ತೀರ್ಪು ಬಾಕಿ ಇದೆ. ಇದರಿಂದಾಗಿ ಅತಂತ್ರಕ್ಕೆ ಸಿಲುಕಿದ್ದ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ರಿಲೀಫ್ ನೀಡಿದ್ದು, ಮುಂದಿನ ತರಗತಿಗಳಿಗೆ ಪ್ರವೇಶ ಪಡೆಯಲು ಅವಕಾಶ ಕಲ್ಪಿಸಿದೆ.

ಪ್ರಸ್ತುತ 2023-24ನೇ ಸಾಲಿನ ಶೈಕ್ಷಣಿಕ ವರ್ಷ ಅಂತ್ಯಗೊಂಡಿದ್ದು, 29-05-2024ರಿಂದ 2024-25ನೇ ಸಾಲಿನ ಶೈಕ್ಷಣಿಕ ವರ್ಷ ಪ್ರಾರಂಭವಾಗಲಿದೆ. 2023-24ನೇ ಸಾಲಿನಲ್ಲಿ ವ್ಯಾಸಂಗ ಮಾಡಿದ 5, 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಿಸದೇ ಇದ್ದರೆ ಅವರನ್ನು ಮುಂದಿನ ಶೈಕ್ಷಣಿಕ ವರ್ಷಕ್ಕೆ/ತರಗತಿಗೆ ಶಾಲಾ ಪ್ರವೇಶ/ದಾಖಲಾತಿ ಮಾಡಲು, ಪ್ರವೇಶ ಶುಲ್ಕ ಪಾವತಿಸಲು ಹಾಗೂ ಬೇರೆ ಸ್ಥಳಗಳಿಗೆ ವರ್ಗಾವಣೆ ಹೊಂದಿರುವ ಪ್ರಯುಕ್ತ ಮಕ್ಕಳ ವರ್ಗಾವಣೆ ಪ್ರಮಾಣಪತ್ರ, ಪ್ರಗತಿ ಪತ್ರ ಮತ್ತು ವ್ಯಾಸಂಗ ಪ್ರಮಾಣಪತ್ರಗಳನ್ನು ವಿತರಿಸಲು ಸಾಧ್ಯವಾಗದು. ಈ ಹಿನ್ನೆಲೆಯಲ್ಲಿ ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಅಗತ್ಯ ಕ್ರಮ ವಹಿಸುವಂತೆ ಪೋಷಕರು ಮನವಿ ಮಾಡಿದ್ದರು. ಅದರಂತೆ ಮಕ್ಕಳ ಶೈಕ್ಷಣಿಕ ಭವಿಷ್ಯ ಸುಗಮಗೊಳಿಸಲು ಕ್ರಮವಹಿಸಿ ಇಲಾಖೆ ಆದೇಶ ಹೊರಡಿಸಿದೆ.

ಸರ್ವೋಚ್ಛ ನ್ಯಾಯಾಲಯದ ಮಧ್ಯಂತರ ತೀರ್ಪಿನಂತೆ, 2023-24ನೇ ಸಾಲಿನ 5, 8 ಮತ್ತು 9ನೇ ತರಗತಿ SA-2 ಮೌಲ್ಯಾಂಕನವನ್ನು ತಡೆ ಹಿಡಿದಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಈಗಾಗಲೇ ಶಾಲೆಗಳಲ್ಲಿ ನಡೆದಿರುವ FA-1, FA-2, FA-3, FA-4, SA-1 ಗಳ ಮೌಲ್ಯಾಂಕನ ಆಧಾರದ ಮೇಲೆ ಮಕ್ಕಳನ್ನು ಮುಂದಿನ ಶೈಕ್ಷಣಿಕ ತರಗತಿಗೆ ಮುಂದುವರೆಸಲು ಅವಕಾಶ ಕಲ್ಪಿಸುವಂತೆ ಶಿಕ್ಷಣ ಇಲಾಖೆಯು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಗೆ ಸೂಚಿಸಿ ಆದೇಶ ಹೊರಡಿಸಿದೆ.

ಇದನ್ನೂ ಓದಿ: Public Exam: 5, 8, 9ನೇ ತರಗತಿ ಪಬ್ಲಿಕ್‌ ಪರೀಕ್ಷೆ ಮೌಲ್ಯಮಾಪನದಲ್ಲಿ ಲೋಪ; ವಿವರ ಸಲ್ಲಿಕೆಗೆ ಸರ್ಕಾರ ಸೂಚನೆ

Continue Reading
Advertisement
Actress Nayanthara twin sons on auto ride
ಕಾಲಿವುಡ್7 mins ago

Actress Nayanthara: ನಯನತಾರಾ ಅವಳಿ ಮಕ್ಕಳ ಭರ್ಜರಿ ಆಟೋ ಸವಾರಿ!

Mallikarjuna Kharge siddaramaiah
ಪ್ರಮುಖ ಸುದ್ದಿ9 mins ago

CM Siddaramaiah: ಖರ್ಗೆಯೂ ಪಿಎಂ ಆಗಲ್ಲ! ಸಿದ್ದರಾಮಯ್ಯ ಯಾಕಿಂಥಾ ಮಾತಾಡಿದ್ರು?

murder Case in Vijayapura
ವಿಜಯಪುರ18 mins ago

Murder Case : ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ, ಶವದ ಪಕ್ಕದಲ್ಲೇ ನಿದ್ರೆಗೆ ಜಾರಿದ ಕುಡುಕ ಪತಿ

Jayant Sinha
ದೇಶ18 mins ago

Jayant Sinha: ವೋಟೂ ಹಾಕಿಲ್ಲ..ಪ್ರಚಾರಕ್ಕೂ ಬಂದಿಲ್ಲ; ಜಯಂತ್‌ ಸಿನ್ಹಾಗೆ ಬಿಜೆಪಿ ಶೋಕಾಸ್‌ ನೊಟೀಸ್‌

Katrina Kaif And Vicky Kaushal Together In London
ಸಿನಿಮಾ26 mins ago

Katrina Kaif: ಕತ್ರಿನಾ ಕೈಫ್ ಈಗ ಪ್ರೆಗ್ನೆಂಟ್? ಪತಿ ಜತೆ ಲಂಡನ್‌ನಲ್ಲಿ ಜಾಲಿ ಮೂಡ್‌!

gold rate today sruthi hassan
ಚಿನ್ನದ ದರ37 mins ago

Gold Rate Today: ಚಿನ್ನದ ಬೆಲೆಯಲ್ಲಿ ಇಂದು ಇಳಿಕೆ, ಗ್ರಾಹಕರಿಗೆ ತುಸು ನಿರಾಳ

India Head Coach
ಕ್ರೀಡೆ44 mins ago

India Head Coach: ಭಾರತ ತಂಡದ ಕೋಚ್​ ಆಗಲು ಫ್ಲೆಮಿಂಗ್​ಗೆ ಮನವೊಲಿಸುವಂತೆ ಧೋನಿಗೆ ಮನವಿ ಮಾಡಿದ ಬಿಸಿಸಿಐ!

Viral Video
ವೈರಲ್ ನ್ಯೂಸ್53 mins ago

Viral Video: ಪೆಟ್ರೋಲ್ ಬಂಕ್‌ನಲ್ಲಿ ಹೊತ್ತಿಕೊಂಡ ಬೆಂಕಿಯನ್ನು ಈತ ಏಕಾಂಗಿಯಾಗಿ ಹೇಗೆ ನಂದಿಸಿದ ನೋಡಿ!

Contaminated Water
ಮೈಸೂರು1 hour ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Viral video
ವೈರಲ್ ನ್ಯೂಸ್1 hour ago

Chudidar Gang: ಚಡ್ಡಿ ಗ್ಯಾಂಗ್ ಆಯ್ತು, ಈಗ ದರೋಡೆಕೋರರ ಚೂಡಿದಾರ್ ಗ್ಯಾಂಗ್ ಆ್ಯಕ್ಟಿವ್ ಆಗಿದೆ; ಹುಷಾರ್! ವಿಡಿಯೊ ನೋಡಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ23 hours ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ2 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ4 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ5 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು5 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌