karnataka Weather : ಬೆಂಗಳೂರು ಸೇರಿ ಹಲವೆಡೆ ಸುಡುತ್ತಿದೆ ಉರಿ ಬಿಸಿಲು; ಮತ್ಯಾವಾಗ ಮಳೆ - Vistara News

ಮಳೆ

karnataka Weather : ಬೆಂಗಳೂರು ಸೇರಿ ಹಲವೆಡೆ ಸುಡುತ್ತಿದೆ ಉರಿ ಬಿಸಿಲು; ಮತ್ಯಾವಾಗ ಮಳೆ

Dry Weather : ರಾಜ್ಯಾದ್ಯಂತ ಒಣ ಹವೆ ಮುಂದುವರಿಯಲಿದ್ದು, ಮಲೆನಾಡಿನಲ್ಲಿ ಮಳೆ (Rain News) ಸಿಂಚನವಾದರೆ, ಉತ್ತರ ಒಳನಾಡಿನಲ್ಲಿ ಬಿಸಿಲಿನ ತಾಪಮಾನ ವಿಪರೀತವಾಗಿರಲಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.

VISTARANEWS.COM

on

Karnataka Weather
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸೋಮವಾರ ರಾಜ್ಯಾದ್ಯಂತ ಒಣ ಹವೆ (Dry Weather) ಇತ್ತು. ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 41.8 ಡಿ.ಸೆ (Karnataka Weather Forecast) ದಾಖಲಾಗಿತ್ತು. ಮಂಗಳವಾರ ಸಂಜೆ ಬಾಗಲಕೋಟೆ, ಬಳ್ಳಾರಿ, ಬೀದರ್‌ ಹಾಗೂ ಹಾವೇರಿಯ ಒಂದೆರಡು ಕಡೆಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ (Rain News) ಮಳೆಯಾಗಲಿದೆ.

ಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಜತೆಗೆ ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನದಲ್ಲೂ ಸಣ್ಣ ಪ್ರಮಾಣದಲ್ಲಿ ಮಳೆಯಾಗುವ ನಿರೀಕ್ಷೆ ಇದೆ.

ಕೊಪ್ಪಳದಲ್ಲಿ ಮಂಗಳವಾರ ಮೋಡ ಕವಿದ ವಾತಾವರಣವಿತ್ತು. ಉರಿಉರಿ ಬಿಸಿಲಿನ ಬದಲು ಕೂಲ್ ಕೂಲ್ ವಾತಾವರಣಕ್ಕೆ ಜನರು ಫಿದಾ ಆಗಿದ್ದಾರೆ. ಬಿರುಗಾಳಿಯೊಂದಿಗೆ ಸಣ್ಣ ಪ್ರಮಾಣದ ಮಳೆಗಳ‌ ಹನಿ ಶುರುವಾಗಿದೆ. ಜೋರಾದ ಗಾಳಿಯೊಂದಿಗೆ ಆಗಾಗ ಗುಡುಗು, ಮಿಂಚು ಅಬ್ಬರಿಸುತ್ತಿದೆ.

ಇನ್ನೂ ಮುಂದಿನ 48 ಗಂಟೆಯಲ್ಲಿ ಚಿಕ್ಕಮಗಳೂರಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ. ಏಪ್ರಿಲ್‌ 11ರಂದು ಬೀದರ್‌, ಕಲಬುರಗಿ, ವಿಜಯಪುರ, ಕೊಡಗು, ಮೈಸೂರು, ಮಂಡ್ಯದಲ್ಲಿ ಮಳೆಯಾಗಹುದು. ಬೆಂಗಳೂರು ನಗರದಲ್ಲಿ ಮುಖ್ಯವಾಗಿ ಆಕಾಶವು ನಿರ್ಮಲವಾಗಿರಲಿದೆ. ಗರಿಷ್ಠ ಉಷ್ಣಾಂಶ 36 ಹಾಗೂ ಕನಿಷ್ಠ ಉಷ್ಣಾಂಶ 22 ಡಿ.ಸೆ ಇರಲಿದೆ.

ಇದನ್ನೂ ಓದಿ: Protection From Heatwave: ಮತ್ತಷ್ಟು ದಿನ ಬಿಸಿಲ ತಾಪ; ಅಲ್ಲಿಯವರೆಗೆ ತಂಪಾಗಿರಲು ಹೀಗೆ ಮಾಡಿ

ಕರಾವಳಿಯಲ್ಲಿ ಬಿಸಿ ಗಾಳಿ

ಮುಂದಿನ ಮೂರು ದಿನಗಳಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾಸನ ಮತ್ತು ಕೋಲಾರದಲ್ಲಿ ಬಿಸಿ ಗಾಳಿ ಬೀಸಲಿದೆ. ಗರಿಷ್ಠ ತಾಪಮಾನವು ಉತ್ತರ ಒಳನಾಡಿನ ಬೆಳಗಾವಿ, ವಿಜಯಪುರ, ಧಾರವಾಡ, ಗದಗ, ಹಾವೇರಿ ಮತ್ತು ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಶಿವಮೊಗ್ಗ, ಮೈಸೂರಲ್ಲಿ 2-4 ಡಿ.ಸೆ ಸೆಲ್ಸಿಯಸ್‌ ಏರಿಕೆಯಾಗುವ ಸಾಧ್ಯತೆ ಇದೆ.

ಶಾಖದ ಅಲೆಯ ಎಚ್ಚರಿಕೆ

ಬಾಗಲಕೋಟೆ, ಕಲಬುರಗಿ, ರಾಯಚೂರು, ಕೊಪ್ಪಳ, ಯಾದಗಿರಿ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಶಾಖಘಾತ ಆಗಲಿದೆ.

ಇದನ್ನೂ ಓದಿ: Ugadi 2024: ಯುಗಾದಿ ಹಬ್ಬಕ್ಕೆ ಟ್ರೆಂಡಿಯಾದ ಟ್ರೆಡಿಷನಲ್‌ ಜಡೆ ಸಿಂಗಾರ-ಬಂಗಾರ

ಬೇಸಿಗೆ ಧಗೆಗೆ ನಿಂಬೆಹಣ್ಣಿನ ಪಾನಕಗಳ ಥರಹೇವಾರಿ ಐಡಿಯಾಗಳು ಇಲ್ಲಿವೆ!

ಬೇಸಿಗೆ ಬಂತೆಂದರೆ ಸಾಕು, ಧಗೆ ತಣಿಸಲು, ಆಗಾಗ ಆಗುವ ಬಾಯಾರಿಕೆಗೆ, ಸುಸ್ತಿನಿಂದ ಮುಕ್ತಿಗೆ ಹಲವು ಬಗೆಯ ಜ್ಯೂಸುಗಳು, ಪಾನಕಗಳ ಮೊರೆ ಹೋಗುವುದು ಸಾಮಾನ್ಯ. ಬಹಳ ಸುಲಭವಾಗಿ ಮಾಡಬಹುದಾದ, ಹಾಗೂ ಎಲ್ಲ ಕಡೆಯೂ ಸುಲಭವಾಗಿ ಸಿಗುವ ಜ್ಯೂಸ್‌ಗಳ ಪೈಕಿ ನಿಂಬೆಹಣ್ಣಿನ ಜ್ಯೂಸ್‌ ಮುಂಚೂಣಿಯಲ್ಲಿ ನಿಲ್ಲುತ್ತದೆ. ಜೊತೆಗೆ ಫಟಾಫಟ್‌ ರಿಪ್ರೆಶಿಂಗ್‌ ಅನುಭವವನ್ನೂ ನೀಡುವ, ದಣಿವನ್ನಾರಿಸುವ ಜ್ಯೂಸ್‌ಗಳ ಪೈಕಿ ಇದಕ್ಕೆ ಪ್ರಮುಖ ಸ್ಥಾನ. ಆದರೆ, ನಿತ್ಯವೂ ಲೆಮನೇಡ್‌ ಕುಡಿಯಲು ಬೋರಾಗುತ್ತದೆಯೇ? ನಿಂಬೆಹಣ್ಣಿಗೆ ಪುದಿನ ಸೇರಿಸಿ, ಅಥವಾ ಸೋಡಾ ಸೇರಿಸಿ, ಚಾಟ್‌ ಮಸಾಲಾ ಉದುರಿಸಿ, ಹೀಗೆ ಏನೇನೋ ಸರ್ಕಸ್‌ಗಳನ್ನು ಮಾಡಿ, ನಿಂಬೆಹಣ್ಣಿನ ಪಾನಕಕ್ಕೆ ಬೇರೆಯ ರುಚಿಯನ್ನು, ಘಮವನ್ನು ನೀಡಲು ಪ್ರಯತ್ನಿಸುವುದು ಸಹಜ. ಬನ್ನಿ, ಈ ಬೇಸಿಗೆಯಲ್ಲಿ ನಿಂಬೆಹಣ್ಣಿನ ಜ್ಯೂಸ್‌ ಮಾಡುವಾಗ ಯಾವೆಲ್ಲ ಮಸಾಲೆಗಳನ್ನು ಸೇರಿಸುವ ಮೂಲಕ ಬೇರೆಯದೇ ರಿಫ್ರೆಶಿಂಗ್‌ ರುಚಿ (summer drinks), ಘಮವನ್ನು ಪಡೆಯಬಹುದು ಎಂಬುದನ್ನು ನೋಡೋಣ.

cinnamon

ಚೆಕ್ಕೆ

ಪಲಾವು, ಬೇಕಿಂಗ್‌ ರೆಸಿಪಿಗಳಲ್ಲಿ ನೀವು ಚೆಕ್ಕೆಯನ್ನು ಸೇರಿಸಿರಬಹುದು. ಆದರೆ, ನಿಂಬೆಹಣ್ಣಿನ ಜ್ಯೂಸಿಗೆ ಸೇರಿಸಿದ್ದೀರಾ? ಇಲ್ಲ ಎಂದಾದಲ್ಲಿ ಒಮ್ಮೆ ಸೇರಿಸಿ ನೋಡಿ. ಚೆಕ್ಕೆ ಪುಡಿಯನ್ನು ನಿಮ್ಮ ನಿಂಬೆಹಣ್ಣಿನ ಪಾನಕಕ್ಕೆ ಕೊಂಚವೇ ಉದುರಿಸಿ ನೋಡಿ. ಇದು ಒಂದು ಬಗೆಯ ಸಿಹಿಯಾದ ವಿಶೇಷವಾದ ರುಚಿಯನ್ನು ನಿಮ್ಮ ನಿಂಬೆಹಣ್ಣಿನ ಪಾನಕಕ್ಕೆ ನೀಡುತ್ತದೆ. ಒಮ್ಮೆ ಟ್ರೈ ಮಾಡಿ ನೋಡಿ.

Ginger Sore Throat

ಶುಂಠಿ

ತಂಪಾದ ನಿಂಬೆಹಣ್ಣಿನ ಜ್ಯೂಸ್‌ ಜೊತೆ ಕೊಂಚ ಶುಂಠಿ ರಸ ಸೇರಿಸಿದರೆ, ಬೆಸಿಲಿನ ಧಗೆಗೆ ತಣ್ಣಗಿನ ಜ್ಯೂಸ್‌ನಿಂದ ಆಗಬಹುದಾದ ನೆಗಡಿಯ ಭಯವೇ ಇಲ್ಲ. ಶುಂಠಿಯ ಖಾರವಾದ ರುಚಿ, ನಿಂಬೆಹಣ್ಣಿನ ಜ್ಯೂಸ್‌ಗೆ ಎಷ್ಟು ಹೊಂದಿಕೆಯಾಗುತ್ತದೆ ಎಂದರೆ, ರಿಫ್ರೆಶಿಂಗ್‌ ಅನುಭವಕ್ಕೆ ಇನ್ನೂ ಹೆಚ್ಚಿನ ಕಿಕ್‌ ನೀಡುತ್ತದೆ.

Cardamom pods Benefits Of Cardamom

ಏಲಕ್ಕಿ

ಏಲಕ್ಕಿಯನ್ನು ನಿಂಬೆಹಣ್ಣಿನ ಜ್ಯೂಸ್‌ಗೆ ಸೇರಿಸುತ್ತಾರಾ ಎಂದು ಆಶ್ಚರ್ಯಪಡಬೇಡಿ. ಒಮ್ಮೆ ಕುಟ್ಟಿ ಪುಟಿ ಮಾಡಿದ ಏಲಕ್ಕಿ ಪುಡಿಯನ್ನು ನಿಮ್ಮ ನಿಂಬೆಹಣ್ಣಿನ ಪಾನಕಕ್ಕೆ ಸೇರಿಸಿ. ಇದೊಂದು ಅದ್ಭುತವಾದ ರುಚಿಯನ್ನೂ ಘಮವನ್ನೂ ನಿಮ್ಮ ಲೆಮನೇಡ್‌ಗೆ ನೀಡದಿದ್ದರೆ ಕೇಳಿ!

Chewing cloves or gargling in its decoction Bad Breath

ಲವಂಗ

ಲವಂಗವನ್ನು ಜಜ್ಜಿ ನಿಂಬೆಹಣ್ಣಿನ ಪಾನಕಮಾಡುವ ಸಂದರ್ಭ ಹಾಖಿಟ್ಟು ಕೊಂಚ ಹೊತ್ತು ಬಿಟ್ಟು ಕುಡಿದಾಗ ಅದರ ಘಮ ಸರಿಯಾದ ಪ್ರಮಾಣದಲ್ಲಿ ಲೆಮನೇಡ್‌ ಜೊತೆಗೆ ಮಿಳಿತಗೊಂಡು ಅದ್ಭುತ ಘಮವನ್ನೂ ರುಚಿಯನ್ನೂ ಕೊಡುತ್ತದೆ. ಒಮ್ಮೆ ಟ್ರೈ ಮಾಡಿ ನೋಡಿ!

Rich in Vitamins Benefits of Green Chilli

ಹಸಿ ಮೆಣಸು

ಹೌದು, ಹಸಿ ಮೆಣಸನ್ನು ಕತ್ತರಿಸಿ ಲೆಮನೇಡ್‌ ಮಾಡುವ ಸಂದರ್ಭ ಅದಕ್ಕೆ ಹಾಕಿ, ಸಕ್ಕರೆ ಹಾಕಿ ಕುಲುಕಿ, ಆಮೇಲೆ ಹಸಿಮೆಣಸನ್ನು ತೆಗೆದುಬಿಡಿ. ಹಸಿಮೆಣಸಿನ ಖಾರವಾದ ಘಮ ನಿಂಬೆಹಣ್ಣಿನ ಜೊತೆಗೆ ಸೇರಿಕೊಂಡು ಅದ್ಬುತವಾದ ರುಚಿಯನ್ನು ಕೊಡುತ್ತದೆ.

ಸೋಂಪು, ಜೀರಿಗೆ

ಜೀರಿಗೆ ಹಾಗೂ ಸೋಂಪನ್ನು ಕೊಂಚ ಜಜ್ಜಿಕೊಂಡು ನಿಂಬೆಹಣ್ಣಿನ ಜ್ಯೂಸ್‌ಗೆ ಸೇರಿಸಿ ಸ್ವಲ್ಪ ಹೊತ್ತು ಹಾಗೆಯೇ ಇರಲು ಬಿಟ್ಟು ನಂತರ ಸೋಸಿಕೊಂಡು ಕುಡಿದರೆ ಅದ್ಭುತ ರುಚಿ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Karnataka Weather: ಇಂದು, ನಾಳೆ ಗುಡುಗು, ಮಿಂಚು ಸಹಿತ ಭಾರಿ ಮಳೆ; ಉತ್ತರ ಒಳನಾಡಿನಲ್ಲಿ ಆರೆಂಜ್ ಅಲರ್ಟ್

Karnataka Weather: ಮೇ 19 ರವರೆಗೆ ರಾಜ್ಯದಾದ್ಯಂತ ಗುಡುಗು, ಮಿಂಚು, ಜೋರಾದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

VISTARANEWS.COM

on

Karnataka Weather
ವಿಜಯನಗರ ಜಿಲ್ಲೆಯ ಕೊಟ್ಟೂರಿನಲ್ಲಿ ಬುಧವಾರ ಸುರಿದ ಭಾರಿ ಮಳೆಯಿಂದ ಬಸ್ ನಿಲ್ದಾಣ ಸಂಪೂರ್ಣ ಜಲಾವೃತವಾಗಿದೆ.
Koo

ಬೆಂಗಳೂರು: ಮೇ 15 ಮತ್ತು 16 ರಂದು ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಗುಡುಗು, ಮಿಂಚು, ಜೋರಾದ ಗಾಳಿಯೊಂದಿಗೆ ಭಾರೀ ಮಳೆಯಾಗುವ (Karnataka Weather) ಸಾಧ್ಯತೆ ಇದ್ದು, ಈ ಭಾಗದಲ್ಲಿ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ 50-60 ಕಿ.ಮೀ ವೇಗದ ಬಿರುಗಾಳಿಯೊಂದಿಗೆ 64.5ರಿಂದ 115.5 ಮಿ.ಮೀ ಮಳೆ (Rain News) ಸುರಿಯುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.

ಮೇ 16ರಂದು ಕಲಬುರ್ಗಿ, ವಿಜಯಪುರ, ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಭಾರೀ ಗಾಳಿಯೊಂದಿಗೆ (50-60 kmph) ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕೊಡಗು, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಜೋರಾದ ಗಾಳಿಯೊಂದಿಗೆ (40-50 kmph) ಭಾರೀ ಮಳೆಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಭಾರೀ ಮಳೆಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಬಾಗಲಕೋಟೆ, ಬೀದ‌ರ್, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (50-60 kmph) ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗುಡುಗು ಸಹಿತ ಗಾಳಿ (40-50 kmph) ಬೀಸುವ ಸಂಭವವಿದೆ.

ಮೇ 22ರವರೆಗೆ ರಾಜ್ಯದ ಹಲವೆಡೆ ಮಳೆ ಮುಂದುವರಿಯಲಿದ್ದು, ಮುಂದಿನ 5 ದಿನಗಳಲ್ಲಿ ರಾಜ್ಯದ ಮೇಲೆ 2-4 ಡಿಗ್ರಿ ಸೆ. ಇಳಿಕೆ ಕಾಣುವ ಸಾಧ್ಯತೆ ಇದೆ.

ಇದನ್ನೂ ಓದಿ | Karnataka Weather : ಮೇ 18ರವರೆಗೆ ಮಳೆ ಅಬ್ಬರ; 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ

ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಸಂಜೆ, ರಾತ್ರಿ ವೇಳೆಗೆ ಹಗುರದಿಂದ ಸಾಧಾರಣ ಮಳೆ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 33°C ಮತ್ತು 23°C ಇರುವ ಸಾಧ್ಯತೆ ಇದೆ.

Continue Reading

ಶಿವಮೊಗ್ಗ

Karnataka Weather: ಭಾರೀ ಗಾಳಿ ಮಳೆಗೆ ಧರೆಗುರುಳಿದ ಬೃಹತ್‌ ಮರ, ವಿದ್ಯುತ್‌ ಕಂಬ

Karnataka Weather: ಬಿರುಗಾಳಿ ಸಮೇತ ಸುರಿದ ಮಳೆಗೆ ವಿದ್ಯುತ್ ಕಂಬಗಳು ಹಾಗೂ ಬೃಹತ್‌ ಮರವೊಂದು ಧರೆಗುರುಳಿದ ಘಟನೆ ಸೊರಬ ತಾಲೂಕಿನ ಚಂದ್ರಗುತ್ತಿ ಸಮೀಪದ ಜೋಳದ ಗುಡ್ಡೆ ಗ್ರಾಮದ ಮುಖ್ಯರಸ್ತೆಯಲ್ಲಿ ಮಂಗಳವಾರ ಸಂಜೆ ನಡೆದಿದೆ. ಗಾಳಿ-ಮಳೆಗೆ ಜೋಳದ ಗುಡ್ಡೆ ಗ್ರಾಮದಲ್ಲಿ ಬೃಹತ್ ಮರವೊಂದು ವಿದ್ಯುತ್ ತಂತಿ ಮೇಲೆ ಉರುಳಿ ರಸ್ತೆಗೆ ಅಡ್ಡಲಾಗಿ ಧರೆಗುರುಳಿದ ಪರಿಣಾಮ ಸುಮಾರು ಮೂರು ವಿದ್ಯುತ್ ಕಂಬಗಳು ಮುರಿದು ಹೋಗಿವೆ.

VISTARANEWS.COM

on

heavy wind and rain damaged tree and electricity poles In Jholada Gudde village
Koo

ಸೊರಬ: ಬಿರುಗಾಳಿ ಸಮೇತ ಸುರಿದ ಮಳೆಗೆ (Karnataka Weather) ವಿದ್ಯುತ್ ಕಂಬಗಳು ಹಾಗೂ ಬೃಹತ್‌ ಮರವೊಂದು ಧರೆಗುರುಳಿದ ಘಟನೆ ಚಂದ್ರಗುತ್ತಿ ಸಮೀಪದ ಜೋಳದ ಗುಡ್ಡೆ ಗ್ರಾಮದ ಮುಖ್ಯರಸ್ತೆಯಲ್ಲಿ ಮಂಗಳವಾರ ಸಂಜೆ ಜರುಗಿದೆ. ಮಧ್ಯಾಹ್ನದ ವರೆಗೆ ಬಿರು ಬಿಸಿಲಿನಿಂದ ಕೂಡಿದ ವಾತಾವರಣ ನಂತರ ಮೋಡ ಕವಿದು ಬಿರುಗಾಳಿ ಸಮೇತ ಮಳೆ ಸುರಿದಿದೆ.

ಗಾಳಿ-ಮಳೆಗೆ ಜೋಳದ ಗುಡ್ಡೆ ಗ್ರಾಮದಲ್ಲಿ ಬೃಹತ್ ಮರವೊಂದು ವಿದ್ಯುತ್ ತಂತಿ ಮೇಲೆ ಉರುಳಿ ರಸ್ತೆಗೆ ಅಡ್ಡಲಾಗಿ ಧರೆಗೆ ಉರುಳಿದ ಪರಿಣಾಮ ಸುಮಾರು ಮೂರು ವಿದ್ಯುತ್ ಕಂಬಗಳು ಮುರಿದು ಹೋಗಿದ್ದು, ಕೆಲ ಸಮಯ ಸೊರಬ ಚಂದ್ರಗುತ್ತಿ ಮಾರ್ಗದಲ್ಲಿ ವಾಹನಗಳ ಸಂಚಾರಕ್ಕೆ ತೊಡಕಾಯಿತು.

ಇದನ್ನೂ ಓದಿ: Uttara Kannada News: ಬದುಕಿನ ಪುರುಷಾರ್ಥಗಳ ಸಾಧನೆಗೆ ರಾಮಾಯಣ ಸಾಧನ; ಶ್ರೀರಾಘವೇಶ್ವರ ಭಾರತೀ ಸ್ವಾಮೀಜಿ

ವಿಷಯ ತಿಳಿದು ಸ್ಥಳಕ್ಕೆ ಮೆಸ್ಕಾಂ ಸಿಬ್ಬಂದಿ ಆಗಮಿಸಿದರು. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳೀಯರ ನೆರವಿನೊಂದಿಗೆ ಮರವನ್ನು ತೆರವುಗೊಳಿಸಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಗ್ರಾಪಂ ಸದಸ್ಯ ಲೋಕೇಶ್ ಸೇರಿದಂತೆ ಇತರರು ಅಧಿಕಾರಿಗಳಿಗೆ ಸಹಕಾರ ನೀಡಿದರು.

ಚಂದ್ರಗುತ್ತಿ ಹೋಬಳಿ ವ್ಯಾಪ್ತಿಯ ಬಹುತೇಕ ಕಡೆ ಮಳೆಯಾಗಿದ್ದು, ಬಿಸಿಲಿನಿಂದ ಕಾದ ಇಳೆಗೆ ಮಳೆ ತಂಪೆರೆಚಿದಂತಾಗಿದೆ.

Karnataka weather: ಸಿಡಿಲಿಗೆ ಸಿದ್ದಾಪುರದ ವ್ಯಕ್ತಿ ಬಲಿ; ಇನ್ನೂ ನಾಲ್ಕು ದಿನ ಇದೆ ಭಾರಿ ಮಳೆ ಎಚ್ಚರಿಕೆ!

ಬೆಂಗಳೂರು: ರಾಜ್ಯಾದ್ಯಂತ ಮಳೆಯಾರ್ಭಟ ಜೋರಾಗಿದೆ. ಗುಡುಗು – ಸಿಡಿಲಿನಿಂದ ಕೂಡಿದ ಮಳೆಯಾಗುತ್ತಿದೆ. ಕುಂದಾಪುರ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಸಿಡಿಲು ಬಡಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಇನ್ನು ಮೇ 18ರ ವರೆಗೆ ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು (Karnataka weather Forecast) ಹವಾಮಾನ ಇಲಾಖೆ ನೀಡಿದೆ.

ಸಿದ್ದಾಪುರ ಗ್ರಾಮದ ಸುರೇಶ್‌ ಶೆಟ್ಟಿ (38) ಮೃತ ದುರ್ದೈವಿ. ಇಂದು ಸಂಜೆ ಹೊತ್ತಿಗೆ ಜಿಲ್ಲೆಯಾದ್ಯಂತ ಭಾರಿ ಮಳೆ ಸುರಿದಿದೆ. ಈ ವೇಳೆ ಸುರೇಶ್‌ ಶೆಟ್ಟಿ ಅವರಿಗೆ ಸಿಡಿಲು ಬಡಿದಿದ್ದು, ತೀವ್ರವಾಗಿ ಅಸ್ವಸ್ಥಗೊಂಡು ಮೃತಪಟ್ಟಿದ್ದಾರೆ.

ಚಿಕ್ಕಮಗಳೂರಿನ ಶೃಂಗೇರಿಯಲ್ಲಿ ಗಾಳಿ ಸಹಿತ ಭಾರಿ (Heavy Rain) ಮಳೆಯಾಗಿದೆ. ಮಂಗಳವಾರ ಸಂಜೆ ಶುರುವಾದ ಮಳೆಯು ಕಳೆದ ಒಂದು ಗಂಟೆಗೂ ಹೆಚ್ಚು ಸಮಯ ಸುರಿದಿದೆ. ಶೃಂಗೇರಿ ಪಟ್ಟಣ ಸೇರಿದಂತೆ ಸುತ್ತಮುತ್ತಲಿನಲ್ಲಿ ಧಾರಾಕಾರ ಮಳೆ‌ಯಾಗಿದ್ದು, ಪ್ರವಾಸಿಗರು ಹಾಗೂ ಜನ-ಜೀವನ ಅಸ್ತವ್ಯಸ್ತವಾಗಿದೆ. ಬಲವಾದ ಗಾಳಿ – ಮಳೆಗೆ ಶೃಂಗೇರಿ ತಾಲೂಕಿನ ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಸತತ ಮಳೆಯಿಂದಾಗಿ (Rain News) ತುಂಗಾ ನದಿಯ ಹರಿವು ಕೊಂಚ ಏರಿಕೆಯಾಗುವ ಸಾಧ್ಯತೆ ಇದೆ. ಧಾರವಾಡದಲ್ಲಿಯೂ ಭಾರಿ ಮಳೆಯಾಗಿದೆ.

ಉತ್ತರ ಕನ್ನಡದಲ್ಲೂ ವರುಣಾರ್ಭಟ

ಉತ್ತರ ಕನ್ನಡದ ಘಟ್ಟದ ಮೇಲಿನ ತಾಲೂಕುಗಳಲ್ಲೂ ವರುಣಾರ್ಭಟ ಜೋರಾಗಿದೆ. ಶಿರಸಿ, ಸಿದ್ದಾಪುರ ಭಾಗದಲ್ಲೂ ಭಾರಿ ಗಾಳಿ ಸಹಿತ ಮಳೆಯಾಗಿದೆ. ಶಿರಸಿಯಲ್ಲಿ ಭಾರಿ ಮಳೆಗೆ ಮರಗಳು ಧರೆಗುರುಳಿವೆ. ನಗರದ ಸಹ್ಯಾದ್ರಿ ಕಾಲೋನಿಯಲ್ಲಿ ಮರ ಬಿದ್ದು, ವಿದ್ಯುತ್ ಕಂಬ ಮುರಿದು ರಸ್ತೆ ಸಂಪೂರ್ಣ ಬ್ಲಾಕ್ ಆಗಿದೆ. ಹತ್ತಕ್ಕೂ ಅಧಿಕ ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: Victoria Hospital: ವಿಕ್ಟೋರಿಯಾ ಆಸ್ಪತ್ರೆಯಿಂದ ವಜಾಗೊಂಡಿದ್ದ 55 ಸಿಬ್ಬಂದಿ ಮರು ನೇಮಕ

ಕುಮಟಾ ತಾಲೂಕಿನ ವಿವಿಧೆಡೆ ಗುಡುಗು ಸಹಿತ ಧಾರಾಕಾರ ಮಳೆಯಾಗುತ್ತಿದೆ. ಬಿಸಿಲಿಗೆ ಕಾದಿದ್ದ ಇಳೆಗೆ ವರುಣ ತಂಪೆರೆದಿದ್ದಾನೆ. ಅರ್ಧ ಗಂಟೆಗೂ ಅಧಿಕ ಕಾಲ ಧಾರಾಕಾರ ಮಳೆಯಾಗಿದೆ. ಘಟ್ಟದ ಮೇಲಿನ ತಾಲೂಕುಗಳಲ್ಲಿ ಮಳೆಯಾದರೂ ಕರಾವಳಿಗೆ ವರುಣ ಕಾಲಿಟ್ಟಿರಲಿಲ್ಲ. ಇದೀಗ ವರುಣಾಗಮನದಿಂದ ಕರಾವಳಿ ಜನತೆ ಖುಷಿಯಾಗಿದ್ದಾರೆ. ಭಟ್ಕಳ, ಹೊನ್ನಾವರ, ಅಂಕೋಲಾ, ಕಾರವಾರ ಭಾಗದಲ್ಲಿ ಮೋಡ ಕವಿದ ವಾತಾವರಣವಿದೆ.

ಧಾರವಾಡದಲ್ಲಿ ಮಳೆಯ ಅಬ್ಬರ

ಧಾರವಾಡದಲ್ಲಿ ಮಂಗಳವಾರ ಬೆಳಗ್ಗೆಯಿಂದಲ್ಲೂ ಮೋಡ ಕವಿದ ವಾತಾವರಣವಿತ್ತು. ಇಳಿ ಸಂಜೆಯಾಗುತ್ತಿದ್ದಂತೆ ಧಾರವಾಡ ನಗರಕ್ಕೆ ವರುಣನ ಆಗಮನವಾಗಿದೆ. ಕಳೆದ ಎರಡು ದಿನಗಳ ಹಿಂದೆ ಸುರಿದಿದ್ದ ಮಳೆಯು ಸ್ವಲ್ಪ ಸಮಯ ಬ್ರೇಕ್‌ ಕೊಟ್ಟಿತ್ತು. ಇಂದು ಮತ್ತೆ ಮಳೆ ಸುರಿದಿದ್ದು, ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು.

ಮೇ 18ರ ವರೆಗೆ ಮಳೆ ಸಾಧ್ಯತೆ
ಮೇ 18ರ ವರೆಗೆ ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ತಜ್ಞರು ನೀಡಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಕೆಲವು ಕಡೆ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆಯಾಗಲಿದೆ.

ಕೊಡಗು, ಮೈಸೂರು, ಮಂಡ್ಯದ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿ (40-50 ಕಿಮೀ)ಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹಾಸನ, ಚಾಮರಾಜನಗರದಲ್ಲಿ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಕನ್ನಡ, ಧಾರವಾಡ, ಗದಗ, ಕೊಪ್ಪಳ, ಹಾವೇರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (40-50 kmph) ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ ಜಿಲ್ಲೆಯಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಒಣ ಹವೆ ಹೆಚ್ಚಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: Viral News: ಗಾಜಾದಲ್ಲಿ ಆಹಾರ ಸಿಗದೆ ನಾಣ್ಯ, ಕಲ್ಲು, ಬ್ಯಾಟರಿ ತಿನ್ನುತ್ತಿರುವ ಮಕ್ಕಳು!

ಶ್ರೀರಂಗಪಟ್ಟಣದಲ್ಲಿ 16 ಸೆಂ.ಮೀ ಮಳೆ

ನಿನ್ನೆ ಸೋಮವಾರ (ಮೇ 13) ರಾಜ್ಯಾದ್ಯಂತ ಮಳೆಯಾಗಿದ್ದು, ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಶ್ರೀರಂಗಪಟ್ಟಣದಲ್ಲಿ 16 ಸೆಂ.ಮೀ ಮಳೆಯಾಗಿದ್ದು, ಮಂಡ್ಯದ ಪಿಟಿಒನಲ್ಲಿ 9 ಸೆಂ.ಮೀ ಮಳೆಯಾಗಿರುವ ವರದಿ ಆಗಿದೆ. ಶಿರಾಳಿಯಲ್ಲಿ ಗರಿಷ್ಠ ಉಷ್ಣಾಂಶ 38.4 ಡಿ.ಸೆನಷ್ಟು ದಾಖಲಾಗಿದೆ.

Continue Reading

ಕರ್ನಾಟಕ

Karnataka weather: ಸಿಡಿಲಿಗೆ ಸಿದ್ದಾಪುರದ ವ್ಯಕ್ತಿ ಬಲಿ; ಇನ್ನೂ ನಾಲ್ಕು ದಿನ ಇದೆ ಭಾರಿ ಮಳೆ ಎಚ್ಚರಿಕೆ!

Karnataka weather: ಚಿಕ್ಕಮಗಳೂರಿನ ಶೃಂಗೇರಿಯಲ್ಲಿ ಗಾಳಿ ಸಹಿತ ಭಾರಿ ಮಳೆಯಾಗಿದೆ. ಮಂಗಳವಾರ ಸಂಜೆ ಶುರುವಾದ ಮಳೆಯು ಕಳೆದ ಒಂದು ಗಂಟೆಗೂ ಹೆಚ್ಚು ಸಮಯ ಸುರಿದಿದೆ. ಶೃಂಗೇರಿ ಪಟ್ಟಣ ಸೇರಿದಂತೆ ಸುತ್ತಮುತ್ತಲಿನಲ್ಲಿ ಧಾರಾಕಾರ ಮಳೆ‌ಯಾಗಿದ್ದು, ಪ್ರವಾಸಿಗರು ಹಾಗೂ ಜನ-ಜೀವನ ಅಸ್ತವ್ಯಸ್ತವಾಗಿದೆ. ಬಲವಾದ ಗಾಳಿ – ಮಳೆಗೆ ಶೃಂಗೇರಿ ತಾಲೂಕಿನ ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.

VISTARANEWS.COM

on

Karnataka weather Man from Siddapura killed in lightning Heavy rain warning for four more days
Koo

ಬೆಂಗಳೂರು: ರಾಜ್ಯಾದ್ಯಂತ ಮಳೆಯಾರ್ಭಟ ಜೋರಾಗಿದೆ. ಗುಡುಗು – ಸಿಡಿಲಿನಿಂದ ಕೂಡಿದ ಮಳೆಯಾಗುತ್ತಿದೆ. ಕುಂದಾಪುರ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಸಿಡಿಲು ಬಡಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಇನ್ನು ಮೇ 18ರ ವರೆಗೆ ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು (Karnataka weather Forecast) ಹವಾಮಾನ ಇಲಾಖೆ ನೀಡಿದೆ.

ಸಿದ್ದಾಪುರ ಗ್ರಾಮದ ಸುರೇಶ್‌ ಶೆಟ್ಟಿ (38) ಮೃತ ದುರ್ದೈವಿ. ಇಂದು ಸಂಜೆ ಹೊತ್ತಿಗೆ ಜಿಲ್ಲೆಯಾದ್ಯಂತ ಭಾರಿ ಮಳೆ ಸುರಿದಿದೆ. ಈ ವೇಳೆ ಸುರೇಶ್‌ ಶೆಟ್ಟಿ ಅವರಿಗೆ ಸಿಡಿಲು ಬಡಿದಿದ್ದು, ತೀವ್ರವಾಗಿ ಅಸ್ವಸ್ಥಗೊಂಡು ಮೃತಪಟ್ಟಿದ್ದಾರೆ.

ಚಿಕ್ಕಮಗಳೂರಿನ ಶೃಂಗೇರಿಯಲ್ಲಿ ಗಾಳಿ ಸಹಿತ ಭಾರಿ (Heavy Rain) ಮಳೆಯಾಗಿದೆ. ಮಂಗಳವಾರ ಸಂಜೆ ಶುರುವಾದ ಮಳೆಯು ಕಳೆದ ಒಂದು ಗಂಟೆಗೂ ಹೆಚ್ಚು ಸಮಯ ಸುರಿದಿದೆ. ಶೃಂಗೇರಿ ಪಟ್ಟಣ ಸೇರಿದಂತೆ ಸುತ್ತಮುತ್ತಲಿನಲ್ಲಿ ಧಾರಾಕಾರ ಮಳೆ‌ಯಾಗಿದ್ದು, ಪ್ರವಾಸಿಗರು ಹಾಗೂ ಜನ-ಜೀವನ ಅಸ್ತವ್ಯಸ್ತವಾಗಿದೆ. ಬಲವಾದ ಗಾಳಿ – ಮಳೆಗೆ ಶೃಂಗೇರಿ ತಾಲೂಕಿನ ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಸತತ ಮಳೆಯಿಂದಾಗಿ (Rain News) ತುಂಗಾ ನದಿಯ ಹರಿವು ಕೊಂಚ ಏರಿಕೆಯಾಗುವ ಸಾಧ್ಯತೆ ಇದೆ. ಧಾರವಾಡದಲ್ಲಿಯೂ ಭಾರಿ ಮಳೆಯಾಗಿದೆ.

ಉತ್ತರ ಕನ್ನಡದಲ್ಲೂ ವರುಣಾರ್ಭಟ

ಉತ್ತರ ಕನ್ನಡದ ಘಟ್ಟದ ಮೇಲಿನ ತಾಲೂಕುಗಳಲ್ಲೂ ವರುಣಾರ್ಭಟ ಜೋರಾಗಿದೆ. ಶಿರಸಿ, ಸಿದ್ದಾಪುರ ಭಾಗದಲ್ಲೂ ಭಾರಿ ಗಾಳಿ ಸಹಿತ ಮಳೆಯಾಗಿದೆ. ಶಿರಸಿಯಲ್ಲಿ ಭಾರಿ ಮಳೆಗೆ ಮರಗಳು ಧರೆಗುರುಳಿವೆ. ನಗರದ ಸಹ್ಯಾದ್ರಿ ಕಾಲೋನಿಯಲ್ಲಿ ಮರ ಬಿದ್ದು, ವಿದ್ಯುತ್ ಕಂಬ ಮುರಿದು ರಸ್ತೆ ಸಂಪೂರ್ಣ ಬ್ಲಾಕ್ ಆಗಿದೆ. ಹತ್ತಕ್ಕೂ ಅಧಿಕ ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ.

ಕುಮಟಾ ತಾಲೂಕಿನ ವಿವಿಧೆಡೆ ಗುಡುಗು ಸಹಿತ ಧಾರಾಕಾರ ಮಳೆಯಾಗುತ್ತಿದೆ. ಬಿಸಿಲಿಗೆ ಕಾದಿದ್ದ ಇಳೆಗೆ ವರುಣ ತಂಪೆರೆದಿದ್ದಾನೆ. ಅರ್ಧ ಗಂಟೆಗೂ ಅಧಿಕ ಕಾಲ ಧಾರಾಕಾರ ಮಳೆಯಾಗಿದೆ. ಘಟ್ಟದ ಮೇಲಿನ ತಾಲೂಕುಗಳಲ್ಲಿ ಮಳೆಯಾದರೂ ಕರಾವಳಿಗೆ ವರುಣ ಕಾಲಿಟ್ಟಿರಲಿಲ್ಲ. ಇದೀಗ ವರುಣಾಗಮನದಿಂದ ಕರಾವಳಿ ಜನತೆ ಖುಷಿಯಾಗಿದ್ದಾರೆ. ಭಟ್ಕಳ, ಹೊನ್ನಾವರ, ಅಂಕೋಲಾ, ಕಾರವಾರ ಭಾಗದಲ್ಲಿ ಮೋಡ ಕವಿದ ವಾತಾವರಣವಿದೆ.

ಧಾರವಾಡದಲ್ಲಿ ಮಳೆಯ ಅಬ್ಬರ

ಧಾರವಾಡದಲ್ಲಿ ಮಂಗಳವಾರ ಬೆಳಗ್ಗೆಯಿಂದಲ್ಲೂ ಮೋಡ ಕವಿದ ವಾತಾವರಣವಿತ್ತು. ಇಳಿ ಸಂಜೆಯಾಗುತ್ತಿದ್ದಂತೆ ಧಾರವಾಡ ನಗರಕ್ಕೆ ವರುಣನ ಆಗಮನವಾಗಿದೆ. ಕಳೆದ ಎರಡು ದಿನಗಳ ಹಿಂದೆ ಸುರಿದಿದ್ದ ಮಳೆಯು ಸ್ವಲ್ಪ ಸಮಯ ಬ್ರೇಕ್‌ ಕೊಟ್ಟಿತ್ತು. ಇಂದು ಮತ್ತೆ ಮಳೆ ಸುರಿದಿದ್ದು, ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು.

ಮೇ 18ರ ವರೆಗೆ ಮಳೆ ಸಾಧ್ಯತೆ

ಮೇ 18ರ ವರೆಗೆ ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ತಜ್ಞರು ನೀಡಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಕೆಲವು ಕಡೆ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆಯಾಗಲಿದೆ.

ಕೊಡಗು, ಮೈಸೂರು, ಮಂಡ್ಯದ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿ (40-50 ಕಿಮೀ)ಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹಾಸನ, ಚಾಮರಾಜನಗರದಲ್ಲಿ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

ಉತ್ತರ ಕನ್ನಡ, ಧಾರವಾಡ, ಗದಗ, ಕೊಪ್ಪಳ, ಹಾವೇರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (40-50 kmph) ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ ಜಿಲ್ಲೆಯಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಒಣ ಹವೆ ಹೆಚ್ಚಾಗುವ ಸಾಧ್ಯತೆ ಇದೆ.

ಶ್ರೀರಂಗಪಟ್ಟಣದಲ್ಲಿ 16 ಸೆಂ.ಮೀ ಮಳೆ

ನಿನ್ನೆ ಸೋಮವಾರ (ಮೇ 13) ರಾಜ್ಯಾದ್ಯಂತ ಮಳೆಯಾಗಿದ್ದು, ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಶ್ರೀರಂಗಪಟ್ಟಣದಲ್ಲಿ 16 ಸೆಂ.ಮೀ ಮಳೆಯಾಗಿದ್ದು, ಮಂಡ್ಯದ ಪಿಟಿಒನಲ್ಲಿ 9 ಸೆಂ.ಮೀ ಮಳೆಯಾಗಿರುವ ವರದಿ ಆಗಿದೆ. ಶಿರಾಳಿಯಲ್ಲಿ ಗರಿಷ್ಠ ಉಷ್ಣಾಂಶ 38.4 ಡಿ.ಸೆನಷ್ಟು ದಾಖಲಾಗಿದೆ.

Continue Reading

ಮಳೆ

Karnataka Weather : ಭಾರಿ ಗಾಳಿ, ಮಳೆಗೆ ಶೃಂಗೇರಿಯಲ್ಲಿ ವಿದ್ಯುತ್‌ ಕಡಿತ; ಶಿರಸಿಯಲ್ಲಿ ಉರುಳಿ ಬಿದ್ದ ಮರ

Karnataka Weather Forecast : ಮಂಗಳವಾರ ಸಂಜೆ ಚಿಕ್ಕಮಗಳೂರು, ಕಾರವಾರ ಸುತ್ತಮುತ್ತ ಭಾರಿ ಮಳೆಯಾಗುತ್ತಿದ್ದು, ಹಲವೆಡೆ ವಿದ್ಯುತ್‌ ಕಂಬಗಳು ಉರುಳಿ ಬಿದ್ದರೆ, ಗಾಳಿ ಮಳೆಗೆ ಮರಗಳು ಧರೆಗುರುಳಿವೆ. ಈ ವಾರ ಪೂರ್ತಿ ಗುಡುಗು ಸಹಿತ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Rain News) ನೀಡಿದೆ.

VISTARANEWS.COM

on

By

Karnataka Weather Forecast
Koo

ಚಿಕ್ಕಮಗಳೂರು/ಬೆಂಗಳೂರು: ಚಿಕ್ಕಮಗಳೂರಿನ ಶೃಂಗೇರಿಯಲ್ಲಿ ಗಾಳಿ ಸಹಿತ ಭಾರಿ (Heavy Rain) ಮಳೆಯಾಗುತ್ತಿದೆ. ಮಂಗಳವಾರ ಸಂಜೆ ಶುರುವಾದ ಮಳೆಯು ಕಳೆದ ಒಂದು ಗಂಟೆಗೂ ಹೆಚ್ಚು ಸಮಯದಿಂದ ಸುರಿಯುತ್ತಿದೆ. ಶೃಂಗೇರಿ ಪಟ್ಟಣ ಸೇರಿದಂತೆ ಸುತ್ತಮುತ್ತಲಿನಲ್ಲಿ ಧಾರಕಾರ ಮಳೆ‌ಯಾಗುತ್ತಿದ್ದು, ಪ್ರವಾಸಿಗರು ಹಾಗೂ ಜನ-ಜೀವನ ಅಸ್ತವ್ಯಸ್ತವಾಗಿತ್ತು. ಇನ್ನೂ ಗಾಳಿ ಮಳೆಗೆ ಶೃಂಗೇರಿ ತಾಲೂಕಿನ ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಸತತ ಮಳೆಯಿಂದಾಗಿ (Rain News) ತುಂಗಾ ನದಿ ಹರಿವು ಕೊಂಚ ಏರಿಕೆಯಾಗುವ (Karnataka weather Forecast) ಸಾಧ್ಯತೆ ಇದೆ.

ಉತ್ತರಕನ್ನಡದಲ್ಲೂ ವರುಣಾರ್ಭಟ

ಉತ್ತರಕನ್ನಡದ ಘಟ್ಟದ ಮೇಲಿನ ತಾಲೂಕುಗಳಲ್ಲೂ ವರುಣಾರ್ಭಟ ಜೋರಾಗಿದೆ. ಶಿರಸಿ, ಸಿದ್ದಾಪುರ ಭಾಗದಲ್ಲೂ ಭಾರೀ ಗಾಳಿ ಸಹಿತ ಮಳೆಯಾಗುತ್ತಿದೆ. ಶಿರಸಿಯಲ್ಲಿ ಭಾರೀ ಮಳೆಗೆ ಮರಗಳು ಧರೆಗುರುಳಿದೆ. ನಗರದ ಸಹ್ಯಾದ್ರಿ ಕಾಲೋನಿಯಲ್ಲಿ ಮರ ಬಿದ್ದು, ವಿದ್ಯುತ್ ಕಂಬ ಮುರಿದು ರಸ್ತೆ ಸಂಪೂರ್ಣ ಬ್ಲಾಕ್ ಆಗಿದೆ. ಹತ್ತಕ್ಕೂ ಅಧಿಕ ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ.

ಕುಮಟಾ ತಾಲೂಕಿನ ವಿವಿಧೆಡೆ ಗುಡುಗು ಸಹಿತ ಧಾರಾಕಾರ ಮಳೆಯಾಗುತ್ತಿದೆ. ಬಿಸಿಲಿಗೆ ಕಾದಿದ್ದ ಇಳೆಗೆ ವರುಣ ತಂಪೆರೆದಿದ್ದಾನೆ. ಅರ್ಧ ಗಂಟೆಗೂ ಅಧಿಕ ಕಾಲ ಧಾರಾಕಾರ ಮಳೆಯಾಗಿದೆ. ಘಟ್ಟದ ಮೇಲಿನ ತಾಲ್ಲೂಕುಗಳಲ್ಲಿ ಮಳೆಯಾದರೂ ಕರಾವಳಿಗೆ ವರುಣ ಕಾಲಿಟ್ಟಿರಲಿಲ್ಲ. ಇದೀಗ ವರುಣಾಗಮನದಿಂದ ಕರಾವಳಿ ಜನತೆ ಖುಷಿಯಾಗಿದ್ದಾರೆ. ಭಟ್ಕಳ, ಹೊನ್ನಾವರ, ಅಂಕೋಲಾ, ಕಾರವಾರ ಭಾಗದಲ್ಲಿ ಮೋಡ ಕವಿದ ವಾತಾವರಣವಿದೆ.

ಧಾರವಾಡದಲ್ಲಿ ಮಳೆಯ ಅಬ್ಬರ

ಧಾರವಾಡದಲ್ಲಿ ಮಂಗಳವಾರ ಬೆಳಗ್ಗೆನಿಂದಲ್ಲೂ ಮೋಡ ಕವಿದ ವಾತಾವರಣವಿತ್ತು. ಇಳಿ ಸಂಜೆಯಾಗುತ್ತಿದ್ದಂತೆ ಧಾರವಾಡ ನಗರಕ್ಕೆ ವರುಣನ ಆಗಮನವಾಗಿದೆ. ಕಳೆದ ಎರಡು ದಿನಗಳ ಹಿಂದೆ ಸುರಿದಿದ್ದ ಮಳೆಯು ಸ್ವಲ್ಪ ಸಮಯ ಬ್ರೇಕ್‌ ಕೊಟ್ಟಿತ್ತು. ಇಂದು ಮತ್ತೆ ಮಳೆ ಸುರಿದಿದ್ದು, ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು.

ಇದನ್ನೂ ಓದಿ: Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

ಮೇ 18ರ ವರೆಗೆ ಮಳೆ ಸಾಧ್ಯತೆ

ಮೇ 18ರ ವರೆಗೆ ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ತಜ್ಞರು ನೀಡಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಕೆಲವು ಕಡೆ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆಯಾಗಲಿದೆ.

ಕೊಡಗು, ಮೈಸೂರು, ಮಂಡ್ಯದ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿ (40-50 ಕಿಮೀ)ಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹಾಸನ, ಚಾಮರಾಜನಗರದಲ್ಲಿ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಕನ್ನಡ, ಧಾರವಾಡ, ಗದಗ, ಕೊಪ್ಪಳ, ಹಾವೇರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (40-50 kmph) ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ ಜಿಲ್ಲೆಯಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಒಣ ಹವೆ ಹೆಚ್ಚಾಗುವ ಸಾಧ್ಯತೆ ಇದೆ.

ಶ್ರೀರಂಗಪಟ್ಟಣದಲ್ಲಿ 16 ಸೆಂ.ಮೀ ಮಳೆ

ನಿನ್ನೆ ಸೋಮವಾರ (ಮೇ 13) ರಾಜ್ಯಾದ್ಯಂತ ಮಳೆಯಾಗಿದ್ದು, ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಶ್ರೀರಂಗಪಟ್ಟಣದಲ್ಲಿ 16 ಸೆಂ.ಮೀ ಮಳೆಯಾಗಿದ್ದು, ಮಂಡ್ಯದ ಪಿಟಿಒನಲ್ಲಿ 9 ಸೆಂ.ಮೀ ಮಳೆಯಾಗಿರುವ ವರದಿ ಆಗಿದೆ. ಶಿರಾಳಿಯಲ್ಲಿ ಗರಿಷ್ಠ ಉಷ್ಣಾಂಶ 38.4 ಡಿ.ಸೆನಷ್ಟು ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Sunil Chhetri
ಕ್ರೀಡೆ7 mins ago

Sunil Chhetri: 20 ವರ್ಷಗಳ ಫುಟ್ಬಾಲ್ ವೃತ್ತಿಜೀವನಕ್ಕೆ ತೆರೆ ಎಳೆಯಲು ನಿರ್ಧರಿಸಿದ ಸುನೀಲ್‌ ಚೆಟ್ರಿ; ಕುವೈತ್ ವಿರುದ್ಧ ಅಂತಿಮ ಪಂದ್ಯ

Aishwarya Rai Injured heads to Cannes Film Festival with daughter
ಬಾಲಿವುಡ್15 mins ago

Cannes 2024: ಐಶ್ವರ್ಯಾ ರೈ ಕೈಗೆ ಪೆಟ್ಟು: ಮಗಳ ಜತೆ ಕಾನ್ ಫಿಲ್ಮ್ ಫೆಸ್ಟಿವಲ್‌ನತ್ತ ಹೊರಟ ನಟಿ!

Robert Fico
ವಿದೇಶ17 mins ago

Robert Fico: ಸ್ಲೊವಾಕಿಯಾ ಪ್ರಧಾನಿ ರಾಬರ್ಟ್ ಫಿಕೊ ಮೇಲೆ ಗುಂಡಿನ ದಾಳಿ ನಡೆಸಿದ್ದು ಓರ್ವ ಕವಿ; ಯಾಕೀ ದ್ವೇಷ?

self harming gym trainer
ಕ್ರೈಂ22 mins ago

Self Harming: ಪತ್ನಿಗೆ ಹೆದರಿಸಲು ಹೋಗಿ ಉರುಳು ಬಿಗಿದು ಸತ್ತ ಜಿಮ್‌ ಟ್ರೇನರ್; ವಿಡಿಯೋ ಕಾಲ್‌ನಲ್ಲೇ ಆತ್ಮಹತ್ಯೆ

GT vs SRH
ಕ್ರೀಡೆ32 mins ago

GT vs SRH: ಇಂದು ಲ್ಯಾವೆಂಡರ್ ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ ಗುಜರಾತ್​ ತಂಡ; ಇದರ ಉದ್ದೇಶವೇನು?

mlc election congress candidate gift boxes
ಬೆಂಗಳೂರು57 mins ago

MLC Election: ಮತದಾರರಿಗೆ ಬೆಂಗಳೂರು ಕಾಂಗ್ರೆಸ್‌ ಅಭ್ಯರ್ಥಿ ಆಮಿಷ? ಸಾವಿರಾರು ಗಿಫ್ಟ್‌ ಬಾಕ್ಸ್‌ಗಳು ಪತ್ತೆ

Pakistan
ವಿದೇಶ58 mins ago

Pakistan: “ಭಾರತ ಚಂದ್ರನ ಮೇಲೆ ಕಾಲಿಟ್ಟಿದೆ, ಆದರೆ ನಾವು..” ಪಾಕ್‌ ಸಂಸದನ ಭಾಷಣ ವೈರಲ್‌

Kangana Ranaut's Emergency gets postponed again
ಬಾಲಿವುಡ್1 hour ago

Kangana Ranaut: ಲೋಕಸಭಾ ಚುನಾವಣೆ: ಕಂಗನಾ ʻಎಮರ್ಜೆನ್ಸಿʼ ಸಿನಿಮಾ ಮತ್ತೆ ಪೋಸ್ಟ್‌ಪೋನ್‌!

T20 World Cup 2024
ಕ್ರೀಡೆ1 hour ago

KMF Nandini Logo: ನಂದಿನಿ ಲೋಗೋ ಇರುವ ಜೆರ್ಸಿ ಅನಾವರಣಗೊಳಿಸಿದ ಸ್ಕಾಟ್ಲೆಂಡ್

Job Alert
ಉದ್ಯೋಗ1 hour ago

Job Alert: ಗುಡ್‌ನ್ಯೂಸ್‌: 277 ಗ್ರೂಪ್‌ ಬಿ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಿಸಿದ ಕೆಪಿಎಸ್‌ಸಿ; ಇಲ್ಲಿದೆ ಹೊಸ ವೇಳಾಪಟ್ಟಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ1 day ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ1 day ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ2 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20242 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20242 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ2 days ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು2 days ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ2 days ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ3 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ3 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌