Baba Ramdev: ಬಾಬಾ ರಾಮದೇವ್‌ ಕ್ಷಮೆ ತಿರಸ್ಕರಿಸಿದ ಸುಪ್ರೀಂ; ಕಠಿಣ ಕ್ರಮದ ಎಚ್ಚರಿಕೆ! - Vistara News

ದೇಶ

Baba Ramdev: ಬಾಬಾ ರಾಮದೇವ್‌ ಕ್ಷಮೆ ತಿರಸ್ಕರಿಸಿದ ಸುಪ್ರೀಂ; ಕಠಿಣ ಕ್ರಮದ ಎಚ್ಚರಿಕೆ!

Baba Ramdev: ತನ್ನ ಕಂಪನಿಗಳ ಔಷಧಿಗಳ ಕುರಿತು ಎಲ್ಲ ಎಲೆಕ್ಟ್ರಾನಿಕ್ ಮತ್ತು ಮುದ್ರಣ ಮಾಧ್ಯಮದಲ್ಲಿ ಬರುವ, ತಪ್ಪು ಮಾಹಿತಿ ನೀಡುವ ಎಲ್ಲ ಜಾಹೀರಾತುಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಲ್ಲಿಸುವಂತೆ ಸುಪ್ರೀಂ ಕೋರ್ಟ್ ಪತಂಜಲಿಗೆ ಫೆಬ್ರವರಿ 27ರಂದು ಸೂಚಿಸಿತ್ತು. ಇದಾದ ಬೆನ್ನಲ್ಲೇ, ನ್ಯಾಯಾಂಗ ನಿಂದನೆಯ ನೋಟಿಸ್‌ಅನ್ನು ಕೂಡ ಜಾರಿಗೊಳಿಸಿತ್ತು. ಇದರಿಂದಾಗಿ ಸುಪ್ರೀಂ ಕೋರ್ಟ್‌ ಕೆಂಡಾಮಂಡಲವಾಗಿತ್ತು.

VISTARANEWS.COM


on

Baba Ramdev
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಜನರ ದಾರಿತಪ್ಪಿಸುವ ಜಾಹೀರಾತು ಪ್ರಕರಣಕ್ಕೆ ಸಂಬಂಧಿಸಿದಂತೆ ಪತಂಜಲಿ ಆಯುರ್ವೇದ ಸಂಸ್ಥೆ (Patanjali Ayurved) ಮುಖ್ಯಸ್ಥ ಬಾಬಾ ರಾಮದೇವ್‌ (Baba Ramdev) ಹಾಗೂ ವ್ಯವಸ್ಥಾಪಕ ನಿರ್ದೇಶಕ ಆಚಾರ್ಯ ಬಾಲಕೃಷ್ಣ (Acharya Balkrishna) ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ (Supreme Court) ಮತ್ತೆ ಹಿನ್ನಡೆಯಾಗಿದೆ. ಸುಪ್ರೀಂ ಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿದ ಬಳಿಕ ಬಾಬಾ ರಾಮದೇವ್‌ ಹಾಗೂ ಆಚಾರ್ಯ ಬಾಲಕೃಷ್ಣ ಅವರು ಬೇಷರತ್‌ ಆಗಿ ಕೇಳಿದ ಕ್ಷಮೆಯನ್ನು ಸುಪ್ರೀಂ ಕೋರ್ಟ್‌ ತಿರಸ್ಕರಿಸಿದೆ. ಅಷ್ಟೇ ಅಲ್ಲ, “ಬಾಬಾ ರಾಮದೇವ್‌ ಹಾಗೂ ಆಚಾರ್ಯ ಬಾಲಕೃಷ್ಣ ಅವರು ಉದ್ದೇಶಪೂರ್ವಕವಾಗಿಯೇ ಸರ್ವೋಚ್ಚ ನ್ಯಾಯಾಲಯಕ್ಕೆ ಅಗೌರವ ತೋರಿದ್ದಾರೆ” ಎಂದು ಚಾಟಿ ಬೀಸಿದೆ. ಹಾಗೆಯೇ, ಕಠಿಣ ಕ್ರಮದ ಎಚ್ಚರಿಕೆಯನ್ನೂ ನೀಡಿದೆ.

ಪತಂಜಲಿ ಪರ ವಾದ ಮಂಡಿಸಿದ ಮುಕುಲ್‌ ರೋಹಟಗಿ, “ಮನುಷ್ಯ ಎಂದ ಮೇಲೆ ತಪ್ಪು ಮಾಡುವುದು ಸಹಜ. ಪತಂಜಲಿ ಸಂಸ್ಥೆಯ ಬಾಬಾ ರಾಮದೇವ್‌ ಹಾಗೂ ಆಚಾರ್ಯ ಬಾಲಕೃಷ್ಣ ಅವರು ಅಫಿಡವಿಟ್‌ ಮೂಲಕ ಕ್ಷಮೆಯಾಚಿಸಿದ್ದಾರೆ” ಎಂದು ತಿಳಿಸಿದರು. ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಕೋರ್ಟ್‌, “ಪ್ರಕರಣವನ್ನು ಅವರು ಗಂಭೀರವಾಗಿ ತೆಗೆದುಕೊಂಡಿಲ್ಲ. ವಿದೇಶಕ್ಕೆ ತೆರಳಲು ವಿಮಾನದ ಟಿಕೆಟ್‌ ಬುಕ್‌ ಮಾಡಲಾಗಿದೆ ಎಂದು ಹೇಳುತ್ತಾರೆ. ಇದಾದ ಬಳಿಕ ಟಿಕೆಟ್‌ ಬುಕ್‌ ಮಾಡಿಲ್ಲ ಎನ್ನುತ್ತಾರೆ. ಇದು ನ್ಯಾಯಾಂಗ ನಿಂದನೆಯಾಗಿದೆ. ಕೋರ್ಟ್‌ಗೆ ಸುಳ್ಳು ಸಾಕ್ಷ್ಯ ನೀಡಿದಂತಾಗಿದೆ. ನಾವು ಕ್ಷಮೆಯನ್ನು ತಿರಸ್ಕರಿಸುತ್ತಿದ್ದೇವೆ” ಎಂದು ಕೋರ್ಟ್‌ ಸ್ಪಷ್ಟಪಡಿಸಿತು. ಅಷ್ಟೇ ಅಲ್ಲ, ಏಪ್ರಿಲ್‌ 16ಕ್ಕೆ ವಿಚಾರಣೆಯನ್ನು ಮುಂದೂಡಲಾಯಿತು. ಬಾಬಾ ರಾಮದೇವ್‌ ಹಾಗೂ ಆಚಾರ್ಯ ಬಾಲಕೃಷ್ಣ ಅವರು ಅಂದು ಕೋರ್ಟ್‌ಗೆ ಹಾಜರಾಗಬೇಕು ಎಂದು ಸೂಚಿಸಿತು.

ರೋಗಗಳ ನಿವಾರಣೆ ಕುರಿತು ಪತಂಜಲಿ ಸಂಸ್ಥೆಯು ಜನರ ದಾರಿತಪ್ಪಿಸುವ ರೀತಿ ಜಾಹೀರಾತು ನೀಡುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಂಜಲಿ ಸಂಸ್ಥೆ ಸಹ ಸಂಸ್ಥಾಪಕ ಬಾಬಾ ರಾಮದೇವ್‌ ಹಾಗೂ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ, ಬಾಬಾ ರಾಮದೇವ್‌ ಆಪ್ತ ಆಚಾರ್ಯ ಬಾಲಕೃಷ್ಣ ಅವರ ವಿರುದ್ಧ ಸುಪ್ರೀಂ ಕೋರ್ಟ್‌ ನ್ಯಾಯಾಂಗ ನಿಂದನೆ ನೋಟಿಸ್‌ ಹೊರಡಿಸಿತ್ತು. ಇಷ್ಟಾದರೂ, ಬಾಬಾ ರಾಮದೇವ್‌ ಆಗಲಿ, ಆಚಾರ ಬಾಲಕೃಷ್ಣ ಆಗಲಿ ನ್ಯಾಯಾಲಯಕ್ಕೆ ಪ್ರತಿಕ್ರಿಯೆ ನೀಡಿರಲಿಲ್ಲ. ಇದರಿಂದ ಕೆಂಡಾಮಂಡಲವಾದ ಸುಪ್ರೀಂ ಕೋರ್ಟ್‌, ಏಪ್ರಿಲ್‌ 2ರಂದು ಇಬ್ಬರೂ ಕೋರ್ಟ್‌ಗೆ ಖುದ್ದಾಗಿ ಹಾಜರಾಗಬೇಕು ಎಂದು ಸೂಚಿಸಿತ್ತು. ಹಾಗೆಯೇ, ನಿಮ್ಮ ವಿರುದ್ಧ ನ್ಯಾಯಾಂಗ ನಿಂದನೆ ವಿಚಾರಣೆಯನ್ನೇಕೆ ಆರಂಭಿಸಬಾರದು ಎಂದು ಕುಟುಕಿತ್ತು. ಇದಾದ ಬಳಿಕ ಇಬ್ಬರೂ ಸುಪ್ರೀಂ ಕೋರ್ಟ್‌ಗೆ ಬೇಷರತ್‌ ಕ್ಷಮೆಯಾಚಿಸಿದ್ದರು.

ಏನಿದು ಪ್ರಕರಣ?

ಪತಂಜಲಿ ಸಂಸ್ಥೆ ವಿರುದ್ಧ ಭಾರತೀಯ ವೈದ್ಯಕೀಯ ಸಂಘವು (IMA) ಅರ್ಜಿ ಸಲ್ಲಿಸಿದೆ. ಪತಂಜಲಿ ಸಂಸ್ಥೆಯು ಕೊರೊನಾ ನಿರೋಧಕ ಲಸಿಕೆ ಹಾಗೂ ಆಧುನಿಕ ಔಷಧ ಪದ್ಧತಿ ಬಗ್ಗೆ ಸುಳ್ಳು ಅಭಿಯಾನ ಆರಂಭಿಸಿದೆ. ಅಷ್ಟೇ ಅಲ್ಲ, ಅಲೋಪಥಿ ಸೇರಿ ಹಲವು ವಿಷಯಗಳಿಗೆ ಸಂಬಂಧಿಸಿದಂತೆ ಜನರ ದಾರಿ ತಪ್ಪಿಸುವ ರೀತಿ ಪತಂಜಲಿ ಸಂಸ್ಥೆಯು ಜಾಹೀರಾತುಗಳನ್ನು ನೀಡುತ್ತಿದೆ. ಇದು ಡ್ರಗ್ಸ್‌ ಆ್ಯಂಡ್‌ ಮ್ಯಾಜಿಕ್‌ ರೆಮೆಡೀಸ್‌ (ಆಕ್ಷೇಪಾರ್ಹ ಜಾಹೀರಾತುಗಳು) ಕಾಯ್ದೆಯ ಉಲ್ಲಂಘನೆಯಾಗಿದೆ ಎಂದು ಐಎಂಎ ಅರ್ಜಿ ಸಲ್ಲಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್‌ ವಿಚಾರಣೆ ನಡೆಸುವಾಗ ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ ಹಾಗೂ ಅಹ್ಸಾನುದ್ದೀನ್‌ ಅಮಾನುಲ್ಲಾ ಅವರು ಬಾಬಾ ರಾಮದೇವ್‌ ಹಾಗೂ ಆಚಾರ್ಯ ಬಾಲಕೃಷ್ಣ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: Patanjali Advertising Case: ವಿಚಾರಣೆಗೆ ಖುದ್ದು ಹಾಜರಾಗುವಂತೆ ಬಾಬಾ ರಾಮ್‌ದೇವ್‌ಗೆ ಸೂಚಿಸಿದ ಸುಪ್ರೀಂ ಕೋರ್ಟ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Corona Virus: ಸಿಂಗಾಪುರದಲ್ಲಿ ಕೋವಿಡ್‌-19 ಹೊಸ ಅಲೆ, ರಾಜ್ಯದಲ್ಲಿ ಅಲರ್ಟ್‌, ಇಂದು ಆರೋಗ್ಯ ಇಲಾಖೆ ಸಭೆ

Corona Virus: ಸಿಂಗಾಪುರದಲ್ಲಿ ಒಂದೇ ವಾರದಲ್ಲಿ 25 ಸಾವಿರ ಕೋವಿಡ್ ಕೇಸ್ ಖಚಿತವಾಗಿದ್ದು, ಇದರಿಂದ ಸಿಲಿಕಾನ್ ಸಿಟಿ ಬೆಂಗಳೂರು ಅಲರ್ಟ್‌ ಆಗಿದೆ. ಇದರ ಜೊತೆಗೆ ಮಹಾರಾಷ್ಟ್ರದಲ್ಲಿಯೂ ಕೋವಿಡ್ ಒಮಿಕ್ರಾನ್ ರೂಪಾಂತರಿ ವೈರಸ್‌ನ 91 ಕೇಸ್‌ ಪತ್ತೆಯಾಗಿವೆ. ಹೀಗಾಗಿ, ಮುನ್ನೆಚ್ಚರಿಕೆ ವಹಿಸಲು ಇಂದು ಕೇಂದ್ರ ಆರೋಗ್ಯ ಇಲಾಖೆಯ ಜೊತೆಗೆ ರಾಜ್ಯ ಆರೋಗ್ಯ ಇಲಾಖೆ ಸಭೆ ನಡೆಯುತ್ತಿದೆ.

VISTARANEWS.COM


on

corona virus wave in singapore
Koo

ಬೆಂಗಳೂರು: ಸಿಂಗಾಪುರದಲ್ಲಿ (Singapore) ಹೊಸ ಕೋವಿಡ್‌- 19 (Covid 19 wave) ಅಲೆ ಪತ್ತೆಯಾಗಿದೆ. ಒಂದೇ ವಾರದಲ್ಲಿ ಕೊರೊನಾ ವೈರಸ್‌ (Corona Virus) ಕೇಸುಗಳ ಸಂಖ್ಯೆ ದ್ವಿಗುಣಗೊಂಡಿದ್ದು, ಮತ್ತೆ ಮಾಸ್ಕ್‌ (Mask) ಧರಿಸಲು ಸಲಹೆ ನೀಡಲಾಗಿದೆ. ರಾಜ್ಯದಲ್ಲೂ ಆರೋಗ್ಯ ಇಲಾಖೆ (Health department) ಅಲರ್ಟ್‌ ಆಗಿದ್ದು, ಪರಿಸ್ಥಿತಿಯನ್ನು ಗಮನಿಸುತ್ತಿದೆ.

ಸಿಂಗಾಪುರದಲ್ಲಿ ಒಂದೇ ವಾರದಲ್ಲಿ 25 ಸಾವಿರ ಕೋವಿಡ್ ಕೇಸ್ ಖಚಿತವಾಗಿದ್ದು, ಇದರಿಂದ ಸಿಲಿಕಾನ್ ಸಿಟಿ ಬೆಂಗಳೂರು ಅಲರ್ಟ್‌ ಆಗಿದೆ. ಇದರ ಜೊತೆಗೆ ಮಹಾರಾಷ್ಟ್ರದಲ್ಲಿಯೂ ಕೋವಿಡ್ ಒಮಿಕ್ರಾನ್ ರೂಪಾಂತರಿ ವೈರಸ್‌ನ 91 ಕೇಸ್‌ ಪತ್ತೆಯಾಗಿವೆ. ಹೀಗಾಗಿ, ಮುನ್ನೆಚ್ಚರಿಕೆ ವಹಿಸಲು ಇಂದು ಕೇಂದ್ರ ಆರೋಗ್ಯ ಇಲಾಖೆಯ ಜೊತೆಗೆ ರಾಜ್ಯ ಆರೋಗ್ಯ ಇಲಾಖೆ ಸಭೆ ನಡೆಯುತ್ತಿದೆ.

ಸಿಂಗಾಪುರದಿಂದ ಬೆಂಗಳೂರು ಹಾಗೂ ಮುಂಬಯಿಗೆ ಆಗಮಿಸುವ ವಿಮಾನಯಾನಿಗಳ ಸಂಖ್ಯೆ ಹೆಚ್ಚು ಇದ್ದು, ಈ ಹಿನ್ನೆಲೆಯಲ್ಲಿ ಮುಂದಿನ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಚರ್ಚೆ ನಡೆಯಲಿದೆ. ಆಯ್ದ ಯಾನಿಗಳ ಆರೋಗ್ಯ ತಪಾಸಣೆ, ಮಾಸ್ಕ್‌ ಧಾರಣೆ ಸೇರಿದಂತೆ ಹಲವು ಕ್ರಮಗಳ ಬಗೆಗೆ ಚರ್ಚಿಸಲಾಗುತ್ತಿದೆ.

ಸಿಂಗಾಪುರದಲ್ಲಿ ಏನಾಗಿದೆ?

ಸಿಂಗಾಪುರದ ಆರೋಗ್ಯ ಸಚಿವ ಓಂಗ್ ಯೆ ಕುಂಗ್, ಸಾರ್ವಜನಿಕ ತಾಣಗಳಲ್ಲಿ ಮುಖವಾಡಗಳನ್ನು ಧರಿಸುವಂತೆ ಸಲಹೆ ನೀಡಿದ್ದಾರೆ. ಸಾಮಾಜಿಕ ನಿರ್ಬಂಧಗಳ ಕುರಿತು ಮಾತನಾಡಿದ ಸಚಿವ ಓಂಗ್, ಸದ್ಯಕ್ಕೆ ಯಾವುದೇ ರೀತಿಯ ಸಾಮಾಜಿಕ ನಿರ್ಬಂಧಗಳ ಯೋಚನೆಯಿಲ್ಲ ಎಂದಿದ್ದಾರೆ. ಏಕೆಂದರೆ ಸಿಂಗಾಪುರದಲ್ಲಿ ಕೋವಿಡ್ -19 ಅನ್ನು ಸ್ಥಳೀಯ ಕಾಯಿಲೆ ಎಂದು ಪರಿಗಣಿಸಲಾಗುತ್ತದೆ.

ಕೋವಿಡ್‌ನ ಹೊಸ ಅಲೆಯ ಪಥವನ್ನು ಸರ್ಕಾರವು ನಿಕಟವಾಗಿ ಗಮನಿಸುತ್ತಿದೆ ಎಂದು ಸಿಂಗಾಪುರದ ಆರೋಗ್ಯ ಸಚಿವಾಲಯ ಹೇಳಿದೆ. ಸಚಿವಾಲಯದ ಪ್ರಕಾರ, ಕೋವಿಡ್ -19 ಪ್ರಕರಣಗಳ ಅಂದಾಜು ಸಂಖ್ಯೆಯು ಹಿಂದಿನ ವಾರದಲ್ಲಿದ್ದ 13,700ರಿಂದ 25,900ಕ್ಕೆ ದ್ವಿಗುಣಗೊಂಡಿದೆ. ಅದೇ ಅವಧಿಯಲ್ಲಿ ಸರಾಸರಿ ದೈನಂದಿನ ಕೋವಿಡ್ -19 ಆಸ್ಪತ್ರೆಗೆ ದಾಖಲು ಕೇಸ್‌ಗಳು 181ರಿಂದ ಸರಿಸುಮಾರು 250ಕ್ಕೆ ಏರಿದೆ ಎಂದು ಸಚಿವಾಲಯ ವರದಿ ಮಾಡಿದೆ.

ಆಸ್ಪತ್ರೆಯ ಹಾಸಿಗೆ ಸಾಮರ್ಥ್ಯವನ್ನು ಸಂರಕ್ಷಿಸಲು, ಸಾರ್ವಜನಿಕ ಆಸ್ಪತ್ರೆಗಳಿಗೆ ತುರ್ತು-ಅಲ್ಲದ ಶಸ್ತ್ರಚಿಕಿತ್ಸೆಗಳನ್ನು ಕಡಿಮೆ ಮಾಡಲು ಮತ್ತು ಸೂಕ್ತವಾದ ರೋಗಿಗಳನ್ನು ಆರೈಕೆ ಸೌಲಭ್ಯಗಳಿಗೆ ವರ್ಗಾಯಿಸಲು ಸೂಚನೆ ನೀಡಲಾಗಿದೆ. “ನಾವು ಅಲೆಯ ಆರಂಭಿಕ ಭಾಗದಲ್ಲಿದ್ದೇವೆ. ಪ್ರಮಾಣ ಸ್ಥಿರವಾಗಿ ಏರುತ್ತಿದೆ” ಎಂದು ಆರೋಗ್ಯ ಸಚಿವ ಓಂಗ್ ಯೆ ಕುಂಗ್ ಹೇಳಿದ್ದಾರೆ.

ಕೋವಾಕ್ಸಿನ್‌ ಲಸಿಕೆ ಪಡೆದವರಿಗೂ ಬಿಗ್‌ ಶಾಕ್‌! ಆಘಾತಕಾರಿ ವರದಿ ಔಟ್‌

ನವದೆಹಲಿ: ಕೊರೋನಾ ವೈರಸ್‌(Corona Virus) ಎದುರಿಸಲು ತೆಗೆದುಕೊಂಡಿರುವ ಕೋವಿಶೀಲ್ಡ್‌(Covishield Vaccine) ಲಸಿಕೆ ಅಡ್ಡಪರಿಣಾಮ(Side Effects) ಹೊಂದಿದೆ ಎಂಬುದು ಬಯಲಾದ ಬೆನ್ನಲ್ಲಿ ಕೋವಾಕ್ಸಿನ್‌ (Covaxin) ತೆಗೆದುಕೊಂಡಿರುವ ಜನ ತಮಗೇನು ಅಪಾಯವಿಲ್ಲ ಎಂದು ನಿರಾಳವಾಗಿದ್ದರು. ಆದರೆ ಇದೀಗ ವರದಿಯೊಂದು ಹೊರಬಿದ್ದಿದ್ದು, ಕೋವಾಕ್ಸಿನ್‌ ಪಡೆದಿರುವ ಜನರಿಗೆ ಬಿಗ್‌ ಶಾಕ್‌ ಕೊಟ್ಟಿದೆ. ಕೋವಾಕ್ಸಿನ್‌ ಲಸಿಕೆಯೂ ಅಡ್ಡಪರಿಣಾಮ ಹೊಂದಿದೆ ಎಂಬುದು ಅಧ್ಯಯನದಲ್ಲಿ ಬಯಲಾಗಿದೆ.

ಇತ್ತೀಚೆಗೆ ಕೋವಿಶೀಲ್ಡ್ ಅನ್ನು ಅಭಿವೃದ್ಧಿಪಡಿಸಿದ ಬ್ರಿಟಿಷ್ ಕಂಪನಿಯಾದ ಅಸ್ಟ್ರಾಜೆನೆಕಾ ಇತ್ತೀಚೆಗೆ ಅಲ್ಲಿನ ನ್ಯಾಯಾಲಯದಲ್ಲಿ ಅದರ ಲಸಿಕೆ ಕೆಲವು ಜನರಲ್ಲಿ ಗಂಭೀರ ಕಾಯಿಲೆಗೆ ಕಾರಣವಾಗಬಹುದು ಎಂದು ಒಪ್ಪಿಕೊಂಡಿತ್ತು. ಇದೀಗ ಅದೇ ರೀತಿ ನಮ್ಮ ದೇಶದಲ್ಲಿ ಭಾರತ್ ಬಯೋಟೆಕ್ ಕಂಪನಿ ಅಭಿವೃದ್ಧಿಪಡಿಸಿರುವ ‘ಕೋವಾಕ್ಸಿನ್’ ಲಸಿಕೆಯ ಅಡ್ಡ ಪರಿಣಾಮಗಳ ಬಗ್ಗೆ ವರದಿ ಬಂದಿದೆ. ಈ ಲಸಿಕೆಯನ್ನು ಪಡೆದ ಸುಮಾರು ಒಂದು ವರ್ಷದ ನಂತರ, ಅದರ ಅಡ್ಡಪರಿಣಾಮಗಳು ಸಾಕಷ್ಟು ಜನರಲ್ಲಿ ಕಂಡುಬಂದಿದೆ ಎಂದು ಹೇಳಲಾಗಿದೆ.

BHU ಅಧ್ಯಯನ ವರದಿಯಲ್ಲಿ ಬಹಿರಂಗ

ಬನಾರಸ್‌ ಹಿಂದೂ ವಿಶ್ವವಿದ್ಯಾಲಯ ನಡೆಸಿದ ಅಧ್ಯಯನದಲ್ಲಿ ಈ ಅಂಶ ಬೆಳಕಿಗೆ ಬಂದಿದ್ದು, ಈ ವರದಿಯ ಪ್ರಕಾರ, ಕೊವಾಕ್ಸಿನ್‌ ತೆಗೆದುಕೊಂಡಿರುವ ಹದಿ ಹರೆಯದವರು ಮತು ಯುವಕರಲ್ಲಿ ಈ ಅಡ್ಡ ಪರಿಣಾಮ ಹೆಚ್ಚಾಗಿ ಕಂಡು ಬಂದಿದೆ. ಈ ಸಂಶೋಧನೆಗಾಗಿ ಒಟ್ಟು 1024 ಜನರನ್ನು ಅಧ್ಯಯನಕ್ಕೆ ಒಳಪಡಿಸಲಾಗಿತ್ತು. ಅವರಲ್ಲಿ 635 ಹದಿಹರೆಯದವರು ಮತ್ತು 391 ಯುವಕರು ಇದ್ದರು. 304 ಹದಿಹರೆಯದವರು ಅಥವಾ ಸುಮಾರು 48 ಪ್ರತಿಶತದಷ್ಟು ಜನರು ಶ್ವಾಸನಾಳದ ಸೋಂಕುಗೆ ತುತ್ತಾಗಿರುವುದು ಅಧ್ಯಯನದಲ್ಲಿ ಬಯಲಾಗಿದೆ.

ಇದನ್ನೂ ಓದಿ: CoWIN Certificates: ಕೋವಿಡ್‌ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಔಟ್‌; ಕೇಂದ್ರ ಹೇಳೋದೇನು?

Continue Reading

ದೇಶ

ISIS Terrorists: ಬಿಜೆಪಿ, ಆರ್ ಎಸ್ ಎಸ್ ನಾಯಕರ ಮೇಲೆ ಆತ್ಮಾಹುತಿ ದಾಳಿಗೆ ಸಂಚು ಮಾಡಿದ್ದ ಐಸಿಸ್ ಉಗ್ರರು; ಸೆರೆ ಸಿಕ್ಕಿದ್ದು ಹೇಗೆ?

ISIS Terrorists: ಚೆನ್ನೈ ಮೂಲಕ ದೇಶದೊಳಗೆ ಐಸಿಸ್‌ ಉಗ್ರರು ಲಗ್ಗೆ ಇಟ್ಟಿರುವ ಬಗ್ಗೆ ಗುಪ್ತಚರ ಇಲಾಖೆಯಿಂದ ATSಗೆ ಮಾಹಿತಿ ಸಿಕ್ಕಿತ್ತು. ಇದಾದ ಬಳಿಕ ATS ಎಲ್ಲಾ ರೈಲು, ವಿಮಾನ ಹಾಗೂ ರಸ್ತೆ ಮಾರ್ಗಗಳ ಮೇಲೆ ತೀವ್ರ ನಿಗಾ ಇರಿಸಿತ್ತು. ಚೆನ್ನೈನಿಂದ ಅಹಮದಾಬಾದ್‌ಗೆ ಇಂಡಿಗೋ 6E 848 ವಿಮಾನದಲ್ಲಿ ಬರುತ್ತಿರುವುದು ಖಚಿತಗೊಳ್ಳುತ್ತಿದ್ದಂತೆ ATS ಸಿಬ್ಬಂದಿ ಅಲರ್ಟ್‌ ಆಗಿದ್ದರು. ಅಹಮದಾಬಾದ್‌ನಲ್ಲಿ ವಿಮಾನ ಲ್ಯಾಂಡ್‌ ಆಗುತ್ತಿದ್ದಂತೆ ನಾಲ್ವರನ್ನೂ ಹೆಡೆಮುರಿಕಟ್ಟುವಲ್ಲಿ ATS ಯಶಸ್ವಿಯಾಯ್ತು.

VISTARANEWS.COM


on

ISIS Terrorists
Koo

ಅಹಮದಾಬಾದ್: ಗುಜರಾತ್‌ ಭಯೋತ್ಪಾದನಾ ನಿಗ್ರಹ ದಳವು (ATS) ಸರ್ದಾರ್‌ ವಲ್ಲಭಭಾಯಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Ahmedabad Airport) ಶ್ರೀಲಂಕಾದ ನಾಲ್ವರು ಉಗ್ರರನ್ನು (ISIS Terrorists) ಬಂಧಿಸಿದ್ದು, ನಾಲ್ವರೂ ತಮ್ಮ ಹ್ಯಾಂಡ್ಲರ್‌ಗಾಗಿ ಕಾಯುತ್ತಿರುವಾಗಲೇ ಅವರನ್ನು ಬಲೆಗೆ ಹಾಕಿದ್ದಾರೆ. ನಾಲ್ವರನ್ನೂ ವಿಚಾರಣೆಗೊಳಪಡಿಸಲಾಗಿದ್ದು ಸ್ಫೋಟಕ ವಿಚಾರಗಳನ್ನು ಬಾಯ್ಬಿಟ್ಟಿದ್ದಾರೆ ಎನ್ನಲಾಗಿದೆ. ಇನ್ನು ಈ ನಾಲ್ವರನ್ನು ಚೆನ್ನೈ ಮೂಲಕ ಶ್ರೀಲಂಕಾದಿಂದ ಭಾರತಕ್ಕೆ ಕಳುಹಿಸಲಾಗಿದ್ದು, ಲೋಕಸಭಾ ಚುನಾವಣೆ ಸಂದರ್ಭದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸುವ ಉದ್ದೇಶ ಇವರದ್ದಾಗಿತ್ತು ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಉಗ್ರರು ಸೆರೆ ಸಿಕ್ಕಿದ್ದು ಹೇಗೆ?

ಚೆನ್ನೈ ಮೂಲಕ ದೇಶದೊಳಗೆ ಐಸಿಸ್‌ ಉಗ್ರರು ಲಗ್ಗೆ ಇಟ್ಟಿರುವ ಬಗ್ಗೆ ಗುಪ್ತಚರ ಇಲಾಖೆಯಿಂದ ATSಗೆ ಮಾಹಿತಿ ಸಿಕ್ಕಿತ್ತು. ಇದಾದ ಬಳಿಕ ATS ಎಲ್ಲಾ ರೈಲು, ವಿಮಾನ ಹಾಗೂ ರಸ್ತೆ ಮಾರ್ಗಗಳ ಮೇಲೆ ತೀವ್ರ ನಿಗಾ ಇರಿಸಿತ್ತು. ಚೆನ್ನೈನಿಂದ ಅಹಮದಾಬಾದ್‌ಗೆ ಇಂಡಿಗೋ 6E 848 ವಿಮಾನದಲ್ಲಿ ಬರುತ್ತಿರುವುದು ಖಚಿತಗೊಳ್ಳುತ್ತಿದ್ದಂತೆ ATS ಸಿಬ್ಬಂದಿ ಅಲರ್ಟ್‌ ಆಗಿದ್ದರು. ಅಹಮದಾಬಾದ್‌ನಲ್ಲಿ ವಿಮಾನ ಲ್ಯಾಂಡ್‌ ಆಗುತ್ತಿದ್ದಂತೆ ನಾಲ್ವರನ್ನೂ ಹೆಡೆಮುರಿಕಟ್ಟುವಲ್ಲಿ ATS ಯಶಸ್ವಿಯಾಯ್ತು. ನಾಲ್ವರನ್ನು ವಿಚಾರಣೆಗೊಳಪಡಿಸಿದಾಗ ಅಹಮದಾಬಾದ್‌ನ ಚೊಟ್ಟಾ ಚಿಲೋಡಾ ಪ್ರದೇಶದಲ್ಲಿ ಶಸ್ತ್ರಾಸ್ತ್ರಗಳನ್ನು ಅಡಗಿಸಿಟ್ಟಿರುವ ಬಗ್ಗೆ ಬಾಯ್ಬಿಟ್ಟಿದ್ದಾರೆ. ಇದೀಗ ಅವುಗಳನ್ನೂ ವಶಕ್ಕೆ ಪಡೆಯಲಾಗಿದೆ. ಅಲ್ಲದೇ ಈ ನಾಲ್ವರು ಭಾರತಕ್ಕೆ ತಲುಪಲು ಸಹಾಯ ಮಾಡಿದ್ದವರ ಬೆನ್ನು ಹತ್ತಿ ATS ಕಾರ್ಯಾಚರಣೆ ಶುರು ಮಾಡಿದೆ.

36 ಗಂಟೆಗಳ ಸುದೀರ್ಘ ಕಾರ್ಯಾಚರಣೆ

ಗುಜರಾತ್‌ ಡಿಜಿಪಿ ವಿಕಾಸ್‌ ಸಹಯ್‌ ಈ ಬಗ್ಗೆ ಮಾಹಿತಿ ನೀಡಿದ್ದು, ಶ್ರೀಲಂಕಾ ಮೂಲದ ಉಗ್ರರು ಮೊಹಮ್ಮದ್‌ ನುಸ್ರತ್‌, ಮೊಹಮ್ಮದ್‌ ಫರಿಶ್‌, ಮೊಹಮ್ಮದ್‌ ನಸ್ರನ್‌ ಮತ್ತು ಮೊಹಮ್ಮದ್‌ ರಶೀದ್‌ ಐಸಿಸ್‌ ಉಗ್ರ ಸಂಘಟನೆಗೆ ಸೇರಿದವರಾಗಿದ್ದು, ಇವರಿಗೆ ಮೇ 19ರಂದು ಭಾರತಕ್ಕೆ ತೆರಳಲು ಸೂಚನೆ ನೀಡಲಾಗಿದೆ ಎಂಬ ಬಗ್ಗೆ ATS ಡೆಪ್ಯೂಟಿ ಎಸ್‌ಪಿ ಹರ್ಷ್‌ ಉಪಾಧ್ಯಾಯ ಅವರಿಗೆ ಮಾಹಿತಿ ಲಭಿಸಿತ್ತು. ಹೀಗಾಗಿ ಕಾರ್ಯಪ್ರವೃತರಾಗಿದ್ದ ATSಅಧಿಕಾರಿಗಳು 36ಗಂಟೆಗಳ ಸುದೀರ್ಘ ಕಾರ್ಯಾಚರಣೆ ನಡೆಸಿ ಉಗ್ರರನ್ನು ವಶಕ್ಕೆ ಪಡೆದಿದ್ದಾರೆ.

ಬಿಜೆಪಿ, ಆರ್ ಎಸ್ ಎಸ್ ನಾಯಕರ ಮೇಲೆ ಆತ್ಮಾಹುತಿ ದಾಳಿಗೆ ಸಂಚು

ಇನ್ನು ವಿಚಾರಣೆ ವೇಳೆ ಉಗ್ರರು ಸ್ಫೋಟಕ ವಿಚಾರವೊಂದನ್ನು ಬಾಯ್ಬಿಟ್ಟಿದ್ದಾರೆ. ಲೋಕಸಭಾ ಚುನಾವಣೆಯನ್ನೇ ಗುರಿಯನ್ನಾಗಿಸಿ ಭಾರತಕ್ಕೆ ಕಾಲಿಟ್ಟಿದ್ದ ಈ ಉಗ್ರರು ಬಿಜೆಪಿ, ಆರ್ ಎಸ್ ಎಸ್ ನಾಯಕರ ಮೇಲೆ ಆತ್ಮಾಹುತಿ ದಾಳಿಗೆ ಸಂಚು ಮಾಡಿದ್ದರು ಎನ್ನಲಾಗಿದೆ. ಈ ನಾಲ್ವರು ಕೊಲಂಬೋ ಮೂಲದವರಾಗಿದ್ದು, ತಮಿಳು ಮಾತನಾಡುತ್ತಾರೆ. ಅವರ ಬ್ಯಾಗ್‌ಗಳಿಂದ ಐಸಿಸ್‌ ಧ್ವಜ, ಮೊಬೈಲ್‌ ಫೋನ್‌ಗಳು, ಪಾಸ್‌ಪೋರ್ಟ್‌ಗಳನ್ನು ಎಟಿಎಸ್‌ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇನ್ನು ಈ ನಾಲ್ವರು ಪಾಕಿಸ್ತಾನ ಮೂಲದ ಅಬು ಜೊತೆ ಸಂಪರ್ಕ ಹೊಂದಿದ್ದರು ಎಂಬುದು ತನಿಖೆಯಲ್ಲಿ ಬಯಲಾಗಿದೆ.

ಇದನ್ನೂ ಓದಿ:MS Dhoni Bike Riding: ಐಪಿಎಲ್​ ಮುಗಿಸಿ ತವರಿಗೆ ಮರಳಿದ್ದೇ ತಡ, ಬೈಕ್ ರೈಡಿಂಗ್​ ಮಾಡಿದ ಧೋನಿ​

Continue Reading

ದೇಶ

Kangana Ranaut: ಕಂಗನಾ ರಣಾವತ್‌ ಮೇಲೆ ಕಲ್ಲು ತೂರಾಟ; ಚು.ಆಯೋಗಕ್ಕೆ ದೂರು

Kangana Ranaut: ಮಂಡಿ ಲೋಕಸಭಾ ಕ್ಷೇತ್ರದ ಲಾಹೌಲ್‌ ಮತ್ತು ಸ್ಪಿತಿ ಪ್ರದೇಶಗಳಲ್ಲಿ ಪ್ರಚಾರ ಕಾರ್ಯಕ್ರಮ ಕೈಗೊಂಡಿದ್ದ ಕಂಗನಾ ಅಲ್ಲಿ ತಲುಪುತ್ತಿದ್ದಂತೆ ಸ್ಥಳೀಯರಿಂದ ಭಾರೀ ವಿರೋಧ ವ್ಯಕ್ತವಾಗಿತ್ತು. ಕೈಯಲ್ಲಿ ಕಪ್ಪು ಬಾವುಟ ಹಿಡಿದು ಕಂಗನಾ ವಿರುದ್ಧ ಗೋ ಬ್ಯಾಕ್‌ ಘೋಷಣೆಗಳನ್ನು ಕೂಗಿದ್ದರು. ಇದಾ ಬಳಿಕ ಕಾಂಗ್ರೆಸ್‌ ಕಾರ್ಯಕರ್ತರು ಅವರ ಕಾರಿನ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ.

VISTARANEWS.COM


on

Kangana Ranaut
Koo

ಹಿಮಾಚಲಪ್ರದೇಶ:ಮಂಡಿ(Mandi) ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕಂಗನಾ ರಣಾವತ್‌(Kangana Ranaut) ಹಾಗೂ ಬಿಜೆಪಿ ಕಾರ್ಯಕರ್ತರ(BJP Workers) ಮೇಲೆ ಕಾಂಗ್ರೆಸ್‌ ಕಾರ್ಯಕರ್ತರು ಕಲ್ಲು ತೂರಾಟ(Stone Pelting) ನಡೆಸಿರುವ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಬಿಜೆಪಿ ಚುನಾವಣಾ ಆಯೋಗಕ್ಕೆ ಅಧಿಕೃತ ದೂರು ನೀಡಿದೆ. ನಿನ್ನೆ ಸಂಜೆ ಲಾಹೌಲ್‌ ಮತ್ತು ಸ್ಪಿತಿ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಘಟನೆಯಲ್ಲಿ ಪಕ್ಷದ ಇಬ್ಬರು ಕಾರ್ಯಕರ್ತರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಬಿಜೆಪಿ ದೂರಿದೆ.

ನಿನ್ನೆ ಮಂಡಿ ಲೋಕಸಭಾ ಕ್ಷೇತ್ರದ ಲಾಹೌಲ್‌ ಮತ್ತು ಸ್ಪಿತಿ ಪ್ರದೇಶಗಳಲ್ಲಿ ಪ್ರಚಾರ ಕಾರ್ಯಕ್ರಮ ಕೈಗೊಂಡಿದ್ದ ಕಂಗನಾ ಅಲ್ಲಿ ತಲುಪುತ್ತಿದ್ದಂತೆ ಸ್ಥಳೀಯರಿಂದ ಭಾರೀ ವಿರೋಧ ವ್ಯಕ್ತವಾಗಿತ್ತು. ಕೈಯಲ್ಲಿ ಕಪ್ಪು ಬಾವುಟ ಹಿಡಿದು ಕಂಗನಾ ವಿರುದ್ಧ ಗೋ ಬ್ಯಾಕ್‌ ಘೋಷಣೆಗಳನ್ನು ಕೂಗಿದ್ದರು. ಇದಾ ಬಳಿಕ ಕಾಂಗ್ರೆಸ್‌ ಕಾರ್ಯಕರ್ತರು ಅವರ ಕಾರಿನ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ.

ಘಟನೆ ಬಗ್ಗೆ ಸ್ವತಃ ಕಂಗನಾ ಪ್ರತಿಕ್ರಿಯಿಸಿದ್ದು, ನಮ್ಮ ವಾಹನಗಳ ಮೇಲೆ ಕಲ್ಲು ತೂರಾಟ ನಡೆದಿದೆ. ಕಾಂಗ್ರೆಸ್‌ ಹಿಂಸಾಚಾರ ನಡೆಸುವುದಕ್ಕಾಗಿಯೇ ಪ್ರತಿಭಟನೆ ಹಮ್ಮಿಕೊಂಡಿತ್ತು. ಇಲ್ಲಿನ ಸ್ಥಾನ ಕೈ ತಪ್ಪುವುದು ಅವರಿಗೆ ಖಚಿತವಾಗಿದೆ. ಹೀಗಾಗಿ ಅವರು ಬೀದಿಗಿಳಿದು ಪ್ರೊಟೆಸ್ಟ್‌ ಮಾಡುತ್ತಿದ್ದಾರೆ. ಹಿಂಸಾಚಾರಕ್ಕೆ ಮುಂದಾಗಿದ್ದಾರೆ. ಇನ್ನು ನಮ್ಮ ಪಕ್ಷದ ಇಬ್ಬರು ಕಾರ್ಯಕರ್ತರು ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾಂಗ್ರೆಸ್‌ನ ಈ ವರ್ತನೆ ಅತೀವ ಬೇಸರ ತಂದಿದೆ ಎಂದು ಹೇಳಿದ್ದಾರೆ. ಇನ್ನು ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಇನ್ನು ಘಟನೆ ಬಗ್ಗೆ ಚುನಾವಣಾ ಆಯೋಗಕ್ಕೆ ಪತ್ರ ಬರೆದಿರುವ ಬಿಜೆಪಿ ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ. ಇನ್ನು ಬಿಜೆಪಿ ಆರೋಪದ ಬಗ್ಗೆ ಕಾಂಗ್ರೆಸ್‌ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿಲ್ಲ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್ ರೇವಣ್ಣ ಪಾಸ್‌ ಪೋರ್ಟ್ ರದ್ದು ಮಾಡಲು ವಿದೇಶಾಂಗ ಇಲಾಖೆಗೆ ಎಸ್‌ಐಟಿ ಪತ್ರ

Continue Reading

ದೇಶ

Sambit Patra: ಭಗವಾನ್‌ ಜಗನ್ನಾಥನೇ ಮೋದಿಯ ಭಕ್ತ ಎಂದ ಬಿಜೆಪಿ ನಾಯಕ; ಭುಗಿಲೆದ್ದ ವಿವಾದ

Sambit Patra: “ಪುರಿ ಜಗನ್ನಾಥನು ಕೂಡ ನರೇಂದ್ರ ಮೋದಿ ಅವರ ಭಕ್ತನಾಗಿದ್ದಾನೆ” ಎಂದು ಸಂಬಿತ್‌ ಪಾತ್ರಾ ನೀಡಿದ ಹೇಳಿಕೆ ಈಗ ಭಾರಿ ವಿವಾದ ಸೃಷ್ಟಿಸಿದೆ. ಸಾಮಾಜಿಕ ಜಾಲತಾಣಗಳಲ್ಲೂ ಸಂಬಿತ್‌ ಪಾತ್ರಾ ಹೇಳಿಕೆಗೆ ಭಾರಿ ವಿರೋಧ ವ್ಯಕ್ತವಾಗಿದೆ. ಪ್ರತಿಪಕ್ಷಗಳ ನಾಯಕರಂತೂ ಸಂಬಿತ್‌ ಪಾತ್ರಾ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸುತ್ತಿದ್ದಾರೆ.

VISTARANEWS.COM


on

Sambita Patra
Koo

ಭುವನೇಶ್ವರ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಕೋಟ್ಯಂತರ ಭಾರತೀಯರು ಇಷ್ಟಪಡುತ್ತಾರೆ. ಸೆಲೆಬ್ರಿಟಿಗಳಿಂದ ಹಿಡಿದು ಹಿರಿಯರವರೆಗೆ ಮೋದಿ ಅವರನ್ನು ಇಷ್ಟಪಡುತ್ತಾರೆ. ವಿದೇಶಗಳಲ್ಲೂ ಮೋದಿ ಅವರಿಗೆ ಅಭಿಮಾನಿಗಳಿದ್ದಾರೆ. ಇದೇ ಕಾರಣಕ್ಕಾಗಿ ಬಿಜೆಪಿ ನಾಯಕರು ಮೋದಿ ಅವರ ಹೆಸರು ಹೇಳಿಕೊಂಡು ಮತ ಕೇಳುತ್ತಾರೆ. ಆದರೆ, ಬಿಜೆಪಿ ನಾಯಕ, ಒಡಿಶಾದ ಪುರಿ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಸಂಬಿತ್‌ ಪಾತ್ರಾ (Sambit Patra) ಅವರು ಮೋದಿ ಅವರನ್ನು ಹೊಗಳುವ ಭರದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. “ಪುರಿ ಜಗನ್ನಾಥನು (Lord Jagannath) ನರೇಂದ್ರ ಮೋದಿ ಅವರ ಭಕ್ತನಾಗಿದ್ದಾನೆ” ಎಂದು ಸಂಬಿತ್‌ ಪಾತ್ರಾ ನೀಡಿದ ಹೇಳಿಕೆ ಈಗ ಭಾರಿ ವಿವಾದ ಸೃಷ್ಟಿಸಿದೆ.

ಸಂಬಿತ್‌ ಪಾತ್ರಾ ಹೇಳಿದ್ದೇನು?

“ಪ್ರಧಾನಿ ನರೇಂದ್ರ ಮೋದಿ ಅವರನ್ನು ನೋಡಲು ಲಕ್ಷಾಂತರ ಜನ ಸೇರಿದ್ದಾರೆ. ಜಗನ್ನಾಥನೇ ನರೇಂದ್ರ ಮೋದಿ ಅವರ ಭಕ್ತನಾಗಿದ್ದಾನೆ. ನಾವೆಲ್ಲರೂ ಮೋದಿ ಅವರ ಕುಟುಂಬಸ್ಥರು. ನಾನು ನನ್ನ ಭಾವನೆಗಳನ್ನು ಹಿಡಿದಿಟ್ಟುಕೊಳ್ಳಲು ಆಗುತ್ತಿಲ್ಲ. ಇದು ಒಡಿಶಾದ ಎಲ್ಲ ಜನರಿಗೂ ಐತಿಹಾಸಿಕ ದಿನವಾಗಿದೆ” ಎಂದು ಸುದ್ದಿಗಾರರೊಂದಿಗೆ ಮಾತನಾಡುವಾಗ ಸಂಬಿತ್‌ ಪಾತ್ರ ಹೇಳಿದ್ದರು. ನರೇಂದ್ರ ಮೋದಿ ಅವರು ಪುರಿ ಜಗನ್ನಾಥ ದೇವಾಲಯಕ್ಕೆ ತೆರಳಿ, ವಿಶೇಷ ಪ್ರಾರ್ಥನೆ ಸಲ್ಲಿಸಿದ ಬಳಿಕ ಸಂಬಿತ್‌ ಪಾತ್ರಾ ಇಂತಹ ಹೇಳಿಕೆ ನೀಡಿದ್ದಾರೆ. ವಿವಾದದ ಬಳಿಕ ಬಿಜೆಪಿ ನಾಯಕರು ಪ್ರತಿಕ್ರಿಯಿಸಿದ್ದು, ಇದು ಬಾಯ್ತಪ್ಪಿನಿಂದ ನೀಡಿದ ಹೇಳಿಕೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಕುಟುಕಿದ ನವೀನ್‌ ಪಟ್ನಾಯಕ್‌

ಸಂಬಿತ್‌ ಪಾತ್ರ ಹೇಳಿಕೆಗೆ ಒಡಿಶಾ ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌ ಅವರು ತಿರುಗೇಟು ನೀಡಿದ್ದಾರೆ. “ಭಗವಾನ್‌ ಶ್ರೀ ಜಗನ್ನಾಥನು ಇಡೀ ಸೃಷ್ಟಿಗೆ ದೇವರಾಗಿದ್ದಾನೆ. ದೇವರನ್ನೇ ಮನುಷ್ಯನ ಭಕ್ತ ಎಂದು ಕರೆದಿರುವುದು ಅಪಸವ್ಯ ಹಾಗೂ ದೇವರಿಗೆ ಮಾಡಿದ ಅವಮಾನವಾಗಿದೆ. ಇದು ಒಡಿಶಾ ಹಾಗೂ ಜಗತ್ತಿನಾದ್ಯಂತ ಇರುವ ಜಗನ್ನಾಥನ ಭಕ್ತರ ಭಾವನೆಗಳಿಗೆ ಧಕ್ಕೆ ತರುವ ಹೇಳಿಕೆಯಾಗಿದೆ” ಎಂದು ಟೀಕಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲೂ ಸಂಬಿತ್‌ ಪಾತ್ರಾ ಹೇಳಿಕೆಗೆ ಭಾರಿ ವಿರೋಧ ವ್ಯಕ್ತವಾಗಿದೆ. ಪ್ರತಿಪಕ್ಷಗಳ ನಾಯಕರಂತೂ ಸಂಬಿತ್‌ ಪಾತ್ರಾ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸುತ್ತಿದ್ದಾರೆ.

“ಜಗನ್ನಾಥನು ಸರ್ವಶ್ರೇಷ್ಠನಾಗಿದ್ದು, ಒಡಿಶಾದ ಅಸ್ಮಿತೆಯಾಗಿದ್ದಾನೆ. ಇಂತಹ ಜಗನ್ನಾಥನ ಬಗ್ಗೆ ಹೇಳಿಕೆ ಕೊಡುವುದು, ಮನುಷ್ಯರೊಬ್ಬರ ಭಕ್ತ ಎಂದು ಹೇಳುವುದು ಖಂಡನೀಯವಾಗಿದೆ. ಬಿಜೆಪಿ ನಾಯಕರೂ ಆದ ಪುರಿ ಲೋಕಸಭೆ ಕ್ಷೇತ್ರದ ಅಭ್ಯರ್ಥಿಯು ಹೀಗೆ ಹೇಳಿರುವುದನ್ನು ನಾನು ಖಂಡಿಸುತ್ತೇನೆ. ರಾಜಕೀಯ ಲಾಭಕ್ಕಾಗಿ ದೇವರನ್ನು ಬಳಸಿಕೊಳ್ಳುವುದು, ಹೀನವಾದ ಹೇಳಿಕೆ ನೀಡುವುದನ್ನು ಬಿಜೆಪಿ ನಾಯಕರು ಬಿಡಬೇಕು. ಒಡಿಶಾದ ಜನರು ದೀರ್ಘ ಅವಧಿಗೆ ಇದನ್ನು ನೆನಪಿನಲ್ಲಿ ಇಟ್ಟುಕೊಳ್ಳುತ್ತಾರೆ ಹಾಗೂ ಎಂದಿಗೂ ಕ್ಷಮಿಸಲ್ಲ” ಎಂದು ನವೀನ್‌ ಪಟ್ನಾಯಕ್‌ ಪೋಸ್ಟ್‌ ಮಾಡಿದ್ದಾರೆ.

ಇದನ್ನೂ ಓದಿ: Arvind Kejriwal: “ತಾಕತ್‌ ಇದ್ರೆ ಅರೆಸ್ಟ್‌ ಮಾಡಿ…”; ಪ್ರಧಾನಿ ಮೋದಿಗೆ ಕೇಜ್ರಿವಾಲ್‌ ಓಪನ್‌ ಚಾಲೆಂಜ್‌

Continue Reading
Advertisement
Star Kids with Sanskrit Names From Yami Gautam to Priyanka Chopra
ಬಾಲಿವುಡ್49 seconds ago

Star Kids with Sanskrit Names: ಮಕ್ಕಳಿಗೆ ಸಂಸ್ಕೃತ ಮೂಲದ ಹೆಸರನ್ನೇ ಇಟ್ಟ ಸ್ಟಾರ್ಸ್‌ಗಳಿವರು!

Rohit Sharma
ಕ್ರೀಡೆ1 min ago

Rohit Sharma: ಖಾಸಗಿತನಕ್ಕೆ ಧಕ್ಕೆ ಆರೋಪ ಮಾಡಿದ ರೋಹಿತ್​ಗೆ ಸ್ಪಷ್ಟನೆ ನೀಡಿದ ಸ್ಟಾರ್‌ಸ್ಪೋರ್ಟ್ಸ್

corona virus wave in singapore
ಪ್ರಮುಖ ಸುದ್ದಿ21 mins ago

Corona Virus: ಸಿಂಗಾಪುರದಲ್ಲಿ ಕೋವಿಡ್‌-19 ಹೊಸ ಅಲೆ, ರಾಜ್ಯದಲ್ಲಿ ಅಲರ್ಟ್‌, ಇಂದು ಆರೋಗ್ಯ ಇಲಾಖೆ ಸಭೆ

KKR vs SRH
ಕ್ರೀಡೆ26 mins ago

KKR vs SRH: ಇಂದು ಮೊದಲ ಕ್ವಾಲಿಫೈಯರ್‌ ಪಂದ್ಯ: ಅಯ್ಯರ್​-ಕಮಿನ್ಸ್​ ಪಡೆಗಳ ಫೈನಲ್‌ ರೇಸ್‌

ISIS Terrorists
ದೇಶ28 mins ago

ISIS Terrorists: ಬಿಜೆಪಿ, ಆರ್ ಎಸ್ ಎಸ್ ನಾಯಕರ ಮೇಲೆ ಆತ್ಮಾಹುತಿ ದಾಳಿಗೆ ಸಂಚು ಮಾಡಿದ್ದ ಐಸಿಸ್ ಉಗ್ರರು; ಸೆರೆ ಸಿಕ್ಕಿದ್ದು ಹೇಗೆ?

Shocking News
ವಿದೇಶ35 mins ago

Shocking News: ಎಚ್‌ಐವಿ ಪಾಸಿಟಿವ್‌ ವಿಚಾರ ಮುಚ್ಚಿಟ್ಟ ಲೈಂಗಿಕ ಕಾರ್ಯಕರ್ತೆ; 211 ಮಂದಿಗೆ ಎದುರಾಯ್ತು ಸಂಕಷ್ಟ

Darshan And Vijayalakshmi Celebrate Wedding Anniversary In Dubai pavitra gowda posted karma status
ಸ್ಯಾಂಡಲ್ ವುಡ್35 mins ago

Actor Darshan: ದುಬೈನಲ್ಲಿ ʻಡಿ ಬಾಸ್‌ʼ ವೆಡ್ದಿಂಗ್‌ ಆ್ಯನಿವರ್ಸರಿ ಸೆಲೆಬ್ರೇಷನ್‌: ಇತ್ತ ಪವಿತ್ರಾ ಗೌಡ ಕರ್ಮದ ಬಗ್ಗೆ ಪಾಠ!

KKR vs SRH:
ಕ್ರೀಡೆ50 mins ago

KKR vs SRH: ಕೆಕೆಆರ್​-ಹೈದರಾಬಾದ್​ ಕ್ವಾಲಿಫೈಯರ್​ ಪಂದ್ಯದ ಹವಾಮಾನ ವರದಿ ಹೇಗಿದೆ?

board exam public exam
ಪ್ರಮುಖ ಸುದ್ದಿ1 hour ago

Board Exam: ಮಕ್ಕಳೇ ನೀವು ಪಾಸ್!‌ 5, 8 ಮತ್ತು 9ನೇ ತರಗತಿಯ ಎಲ್ಲ ಮಕ್ಕಳು ಉತ್ತೀರ್ಣ

Kangana Ranaut
ದೇಶ1 hour ago

Kangana Ranaut: ಕಂಗನಾ ರಣಾವತ್‌ ಮೇಲೆ ಕಲ್ಲು ತೂರಾಟ; ಚು.ಆಯೋಗಕ್ಕೆ ದೂರು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ20 hours ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ2 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ4 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ5 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು5 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌