Road Accident : ಬಸ್‌ ಗುದ್ದಿದ ರಭಸಕ್ಕೆ ಅಪ್ಪಚ್ಚಿಯಾದ ಓಮ್ನಿ ಕಾರು; ಮೂವರು ದಾರುಣ ಸಾವು - Vistara News

ಶಿವಮೊಗ್ಗ

Road Accident : ಬಸ್‌ ಗುದ್ದಿದ ರಭಸಕ್ಕೆ ಅಪ್ಪಚ್ಚಿಯಾದ ಓಮ್ನಿ ಕಾರು; ಮೂವರು ದಾರುಣ ಸಾವು

Road Accident : ನ್ಯಾಮತಿಯ ಚಿನ್ನಕಟ್ಟೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಶಿವಮೊಗ್ಗ ಮೂಲದ ಮೂವರು ದಾರುಣವಾಗಿ ಮೃತಪಟ್ಟಿದ್ದಾರೆ. ಬಸ್‌ ಡಿಕ್ಕಿ ಹೊಡೆದ ರಭಸಕ್ಕೆ ಓಮ್ನಿ ಕಾರು ಗುರುತು ಸಿಗದಂತೆ ಅಪ್ಪಚ್ಚಿ ಆಗಿತ್ತು.

VISTARANEWS.COM


on

Road Accident
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶಿವಮೊಗ್ಗ/ದಾವಣಗೆರೆ: ದಾವಣಗೆರೆಯ ನ್ಯಾಮತಿ ತಾಲೂಕಿನ ಚಿನ್ನಿಕಟ್ಟಿ ಗ್ರಾಮದ ಬಳಿ ಭೀಕರ ಅಪಘಾತ (Road Accident) ಸಂಭವಿಸಿದೆ. ಕೆಎಸ್‌ಆರ್‌ಟಿಸಿ ಬಸ್ ಮತ್ತು ಓಮ್ನಿ ಕಾರು ಮಧ್ಯೆ ಡಿಕ್ಕಿಯಾಗಿದ್ದು, ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರನ್ನು ನಂಜುಂಡಪ್ಪ (83), ರಾಕೇಶ್ (27), ದೇವರಾಜ್ (30) ಎಂದು ಗುರುತಿಸಲಾಗಿದೆ. ಈ ಮೂವರು ಶಿವಮೊಗ್ಗ ಗ್ರಾಮಾಂತರ ತಾಲೂಕಿನ ಹರಮಘಟ್ಟ ಗ್ರಾಮದವರು ಎಂದು ತಿಳಿದು ಬಂದಿದೆ.

ಕೆಎಸ್‌ಆರ್‌ಟಿಸಿ ಬಸ್‌ ಶಿಕಾರಿಪುರದ ಕಡೆಯಿಂದ ಬರುತ್ತಿತ್ತು. ಶಿವಮೊಗ್ಗದ ಕಡೆಯಿಂದ ಹೊರಟಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಬಸ್‌-ಕಾರು ಮುಖಾಮುಖಿ ಡಿಕ್ಕಿಯಾಗಿ ಓಮ್ನಿ ಕಾರು ಗುರುತು ಸಿಗದಂತೆ ಅಪ್ಪಚ್ಚಿ ಆಗಿತ್ತು. ಡಿಕ್ಕಿ ರಭಸಕ್ಕೆ ಕಾರಿನಲ್ಲಿ ಸಿಲುಕಿದ್ದ ಮೂವರು ಚೆಲ್ಲಾಪಿಲ್ಲಿಯಾಗಿದ್ದರು. ಇನ್ನೂ ಬಸ್ಸಿನ ಮುಂಭಾಗವು ಛಿದ್ರಗೊಂಡಿತ್ತು.

ಘಟನೆಯಲ್ಲಿ ಆರಕ್ಕೂ ಹೆಚ್ಚು ಮಂದಿಗೆ ಗಾಯವಾಗಿದ್ದು, ತೀವ್ರ ಗಾಯಗೊಂಡ ಇಬ್ಬರನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸಣ್ಣ ಪುಟ್ಟ ಗಾಯಗೊಂಡವರನ್ನು ನ್ಯಾಮತಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ನ್ಯಾಮತಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಮೂವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ನ್ಯಾಮತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನ್ಯಾಮತಿ ತಾಲೂಕಿನ ಚಿನ್ನಕಟ್ಟೆ-ಶಿವಪುರ ಬಳಿ ರಾಜ್ಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Honeybee Attack : ಹುಲಿ ‌ಸೆರೆ ಕಾರ್ಯಾಚರಣೆ ವೇಳೆ ಹೆಜ್ಜೇನು ದಾಳಿ; ಬೆದರಿ ಓಡಿ‌ದ ಸಾಕಾನೆ ಭೀಮ

ನೈಟ್‌ ಪಾರ್ಟಿಗೆ ಬೈಕ್‌ನಲ್ಲಿ ಹೊರಟಿದ್ದ ಸವಾರ ಸಾವು, ಮತ್ತೊಬ್ಬ ಗಂಭೀರ

ಧಾರವಾಡ: ಸ್ನೇಹಿತನೊಟ್ಟಿಗೆ ಪಾರ್ಟಿಗೆ ತೆರಳುತ್ತಿದ್ದ ಯುವಕನೊಬ್ಬ ರಸ್ತೆ ಅಪಘಾತದಲ್ಲಿ (Road Accident) ಮೃತಪಟ್ಟಿದ್ದಾನೆ. ಧಾರವಾಡದ (Dharwad News) ಮುಮ್ಮಿಗಟ್ಟಿ ಬಳಿ ಬುಧವಾರ ರಾತ್ರಿ ಘಟನೆ ನಡೆದಿದೆ. ಯುವಕರಿಬ್ಬರು ಪಾರ್ಟಿಗೆಂದು ಬೈಕ್‌ನಲ್ಲಿ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಓಂಕಾರ ಸಂಗಣ್ಣವರ (18) ಮೃತ ದುರ್ದೈವಿ.

ಧಾರವಾಡದ ಶೆಟ್ಟರ್ ಕಾಲೋನಿಯ ನಿವಾಸಿ ಓಂಕಾರ ಗೆಳೆಯನ ಜತೆಯಾಗಿ ಬೈಕ್‌ನಲ್ಲಿ ತೆರಳುತ್ತಿದ್ದಾ, ನಿಂತಿದ್ದ ಟ್ರಾಕ್ಟರ್‌ ಕಾಣದೇ ಗುದ್ದಿದ್ದಾನೆ. ಗುದ್ದಿದ ರಭಸಕ್ಕೆ ಕೆಳೆಗೆ ಬಿದ್ದ ಓಂಕಾರ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಓಂಕಾರ ಜತೆಗಿದ್ದ ಮತ್ತೊಬ್ಬ ಯುವಕ ವೃತ್ವಿಕ್ ಸಜ್ಜನ್ನವರ ಎಂಬಾತ ಗಂಭೀರ ಗಾಯಗೊಂಡಿದ್ದಾನೆ.

ರಕ್ತದ ಮಡುವಿನಲ್ಲಿ ಬಿದ್ದಿದ್ದ ವೃತ್ವಿಕ್‌ನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ವಿಷಯ ತಿಳಿಯುತ್ತಿದ್ದ ಸ್ಥಳಕ್ಕಾಗಮಿಸಿದ ಗರಗ ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಮಳೆ

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Rain News : ರಾಜ್ಯಾದ್ಯಂತ ಮಳೆಯು ಅವಾಂತರವನ್ನೇ ಸೃಷ್ಟಿಸಿದೆ. ಬಿಸಿಲಿನಿಂದ ಕಂಗೆಟ್ಟ ಜನತೆಗೆ ಮಳೆಯು ತತ್ತರಿಸುವಂತೆ ಮಾಡಿದೆ. ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆಯಾಗುವ (Heavy Rain) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

VISTARANEWS.COM


on

By

Karnataka weather Forecast
Koo

ಬೆಂಗಳೂರು : ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗಲಿದ್ದು, ರಾಜ್ಯಾದ್ಯಂತ ಪ್ರತ್ಯೇಕ ಕಡೆಯಲ್ಲಿ ಭಾರಿ ಮಳೆಯಾಗುವ (Heavy Rain) ಸಾಧ್ಯತೆಯಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಮತ್ತು 30-40 ಕಿ.ಮೀ ವ್ಯಾಪ್ತಿಯಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು (Rain News) ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ತುಮಕೂರು, ರಾಮನಗರದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಚಾಮರಾಜನಗರ, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ. ಉಳಿದ ಉಳಿದ ಭಾಗಗಳಲ್ಲಿ ಹಗುರ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಅನುಕ್ರಮವಾಗಿ 33 ಮತ್ತು 23 ಡಿ.ಸೆ ಇರಲಿದೆ.

ಉತ್ತರ ಒಳನಾಡಿನ ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇತರ ಪ್ರದೇಶಗಳಲ್ಲಿ ಸಣ್ಣ ಪ್ರಮಾಣದಲ್ಲಿ ಇರಲಿದೆ. ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.

ಇಲ್ಲೆಲ್ಲ ಭಯಂಕರ ಮಳೆ

ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಏಳು ಜಿಲ್ಲೆಗಳಲ್ಲಿ ಭಾರೀ ಮಳೆಯೊಂದಿಗೆ ಗುಡುಗು ಮತ್ತು ಗಂಟೆಗೆ 40-50 ಕಿ.ಮೀ ವ್ಯಾಪ್ತಿಯಲ್ಲಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಇದನ್ನೂ ಓದಿ: Murder Case : ತಂಗಿಯನ್ನು ಬೈಕ್‌ನಲ್ಲಿ ಸುತ್ತಾಡಿಸುತ್ತಿದ್ದವನನ್ನು ಸ್ಕ್ರೂಡ್ರೈವರ್‌ನಿಂದ ಚುಚ್ಚಿ ಕೊಂದ

ಕೊಟ್ಟೂರು ಬಸ್ ಸ್ಟ್ಯಾಂಡ್‌ನಲ್ಲಿ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

ವಿಜಯನಗರದ ಕೊಟ್ಟೂರು ಪಟ್ಟಣದಲ್ಲಿ ಸುರಿದ ಭಾರಿ ಮಳೆಗೆ (Heavy Rain) ಕೊಟ್ಟೂರು ಬಸ್ ನಿಲ್ದಾಣ ಸಂಪೂರ್ಣ ಜಲಾವೃತ ಆಗಿತ್ತು. ಈ ವೇಳೆ ಬಸ್ ನಿಲ್ದಾಣ ಬಳಿಯ ದೊಡ್ಡ ಚರಂಡಿಗೆ ರಭಸವಾಗಿ ಮಳೆ ನೀರು ಹರಿದು ಹೋಗುತ್ತಿತ್ತು. ಅದೇ ಚರಂಡಿ ಪಕ್ಕದಲ್ಲಿ ನಿಧಾನವಾಗಿ ನಡೆದುಕೊಂಡು ಬರುವಾಗ ತಾಯಿ -ಮಗ ಇಬ್ಬರು ಆಯ ತಪ್ಪಿ ಬಿದ್ದಿದ್ದಾರೆ. ಒಂದು ಕೈಯಲ್ಲಿ ಮಗ, ಇನ್ನೊಂದು ಕೈಯಲ್ಲಿ ಲಗೇಜ್‌ ಹಿಡಿದು ಬರುವಾಗ ಬಿದ್ದಿದ್ದರು.

ಈ ಸಂದರ್ಭದಲ್ಲಿ ಆಚೆ – ಇಚೆ ಹೆಜ್ಜೆ ಇಟ್ಟಿದ್ದರೂ ಚರಂಡಿ ನೀರಲ್ಲಿ ಕೊಚ್ಚಿ ಹೋಗುತ್ತಿದ್ದರು. ಕೊಟ್ಟೂರು ಬಸ್ ನಿಲ್ದಾಣದಲ್ಲಿ ತಾಯಿ – ಮಗುವಿನ ಪರದಾಟದ ವಿಡಿಯೋ ಅಲ್ಲಿದ್ದ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿತ್ತು.

Karnataka Weather Forecast

ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಬಳಿಯೇ ಸರ್ಕಾರಿ ಆಸ್ಪತ್ರೆ ಇದೆ. ನೂರಾರು ಜನರು ಇದೇ ಮಾರ್ಗದಲ್ಲಿ ಓಡಾಡುತ್ತಾರೆ. ಬಾಯ್ತೆರೆದಿರುವ ದೊಡ್ಡ ಚರಂಡಿ ಬಲಿಗಾಗಿ ಕಾಯುತ್ತಿದೆ. ಇದನ್ನೂ ಮುಚ್ಚಿಸಿಬೇಕಿದ್ದ ಅಧಿಕಾರಿಗಳು ಮೌನಕ್ಕೆ ಶರಣಾಗಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದರು.

ಇತ್ತ ಕೊಟ್ಟೂರು ಬಸ್ ನಿಲ್ದಾಣದಲ್ಲಿ ಮಳೆಯಿಂದ ಅವಾಂತರದ ಸುದ್ದಿ ಪ್ರಸಾರ ಆಗುತ್ತಿದ್ದಂತೆ ಸ್ಥಳಕ್ಕೆ ಹಗರಿಬೊಮ್ಮನಹಳ್ಳಿ ಶಾಸಕ ನೇಮಿರಾಜ್ ನಾಯಕ್, ವಿಜಯನಗರ ಡಿಸಿ ಜಗದೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಸ್ ನಿಲ್ದಾಣ ಅವ್ಯವಸ್ಥೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ಬಸ್ ನಿಲ್ದಾಣದ ಸುತ್ತಮುತ್ತಲಿನ ಪ್ರದೇಶಗಳ ವೀಕ್ಷಿಸಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Karnataka Weather Forecast : ರಾಜ್ಯದ ವಿವಿಧೆಡೆ ಮಳೆಯು ಅಬ್ಬರಿಸುತ್ತಿದೆ. ಭಾರಿ ಮಳೆಗೆ ಕೊಟ್ಟೂರು ಬಸ್ ನಿಲ್ದಾಣವು ಕೆರೆಯಾಗಿ ಪರಿವರ್ತನೆ ಆಗಿತ್ತು. ಬಲಿಗಾಗಿ ಕಾಯುತ್ತಿದ್ದ ದೊಡ್ಡ ಚರಂಡಿಯೊಂದು ಬಾಯ್ತೆರೆದಿತ್ತು. ಸ್ವಲ್ಪ ಯಾಮಾರಿದ್ರೂ ತಾಯಿ-ಮಗ ನೀರಲ್ಲಿ ಕೊಚ್ಚಿ ಹೋಗುತ್ತಿದ್ದರು.

VISTARANEWS.COM


on

By

Karnataka Weather Forecast
Koo

ವಿಜಯನಗರ/ಚಿಕ್ಕಮಗಳೂರು: ರಾಜ್ಯಾದ್ಯಂತ ಮಳೆಯಾಟ (Karnataka Weather Forecast) ಜೋರಾಗಿದೆ. ನಿನ್ನೆ ಬುಧವಾರ ಕೊಟ್ಟೂರು ಪಟ್ಟಣದಲ್ಲಿ ಸುರಿದ ಭಾರಿ ಮಳೆಗೆ (Heavy Rain) ಕೊಟ್ಟೂರು ಬಸ್ ನಿಲ್ದಾಣ ಸಂಪೂರ್ಣ ಜಲಾವೃತ ಆಗಿತ್ತು. ಈ ವೇಳೆ ಬಸ್ ನಿಲ್ದಾಣ ಬಳಿಯ ದೊಡ್ಡ ಚರಂಡಿಗೆ ರಭಸವಾಗಿ ಮಳೆ ನೀರು ಹರಿದು ಹೋಗುತ್ತಿತ್ತು. ಅದೇ ಚರಂಡಿ ಪಕ್ಕದಲ್ಲಿ ನಿಧಾನವಾಗಿ ನಡೆದುಕೊಂಡು ಬರುವಾಗ ತಾಯಿ -ಮಗ ಇಬ್ಬರು ಆಯ ತಪ್ಪಿ ಬಿದ್ದಿದ್ದಾರೆ. ಒಂದು ಕೈಯಲ್ಲಿ ಮಗ, ಇನ್ನೊಂದು ಕೈಯಲ್ಲಿ ಲಗೇಜ್‌ ಹಿಡಿದು ಬರುವಾಗ ಬಿದ್ದಿದ್ದಾರೆ.

ಈ ಸಂದರ್ಭದಲ್ಲಿ ಆಚೆ – ಇಚೆ ಹೆಜ್ಜೆ ಇಟ್ಟಿದ್ದರೂ ಚರಂಡಿ ನೀರಲ್ಲಿ ಕೊಚ್ಚಿ ಹೋಗುತ್ತಿದ್ದರು. ಕೊಟ್ಟೂರು ಬಸ್ ನಿಲ್ದಾಣದಲ್ಲಿ ತಾಯಿ – ಮಗುವಿನ ಪರದಾಟದ ವಿಡಿಯೋ ಅಲ್ಲಿದ್ದ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಬಸ್ ನಿಲ್ದಾಣದಲ್ಲಿ ಇಷ್ಟೆಲ್ಲ ಅವ್ಯವಸ್ಥೆ ಇದ್ದರೂ ತಿರುಗಿ ನೋಡದ ಅಧಿಕಾರಿಗಳು, ಶಾಸಕರ ವಿರುದ್ಧ ಪ್ರಯಾಣಿಕರು ಕಿಡಿಕಾರಿದರು.

Karnataka Weather Forecast

ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಬಳಿಯೇ ಸರ್ಕಾರಿ ಆಸ್ಪತ್ರೆ ಇದೆ. ನೂರಾರು ಜನರು ಇದೇ ಮಾರ್ಗದಲ್ಲಿ ಓಡಾಡುತ್ತಾರೆ. ಬಾಯ್ತೆರೆದಿರುವ ದೊಡ್ಡ ಚರಂಡಿ ಬಲಿಗಾಗಿ ಕಾಯುತ್ತಿದೆ. ಇದನ್ನೂ ಮುಚ್ಚಿಸಿಬೇಕಿದ್ದ ಅಧಿಕಾರಿಗಳು ಮೌನಕ್ಕೆ ಶರಣಾಗಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.

ಇತ್ತ ಕೊಟ್ಟೂರು ಬಸ್ ನಿಲ್ದಾಣದಲ್ಲಿ ಮಳೆಯಿಂದ ಅವಾಂತರದ ಸುದ್ದಿ ಪ್ರಸಾರ ಆಗುತ್ತಿದ್ದಂತೆ ಸ್ಥಳಕ್ಕೆ ಹಗರಿಬೊಮ್ಮನಹಳ್ಳಿ ಶಾಸಕ ನೇಮಿರಾಜ್ ನಾಯಕ್, ವಿಜಯನಗರ ಡಿಸಿ ಜಗದೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಸ್ ನಿಲ್ದಾಣ ಅವ್ಯವಸ್ಥೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ಬಸ್ ನಿಲ್ದಾಣದ ಸುತ್ತಮುತ್ತಲಿನ ಪ್ರದೇಶಗಳ ವೀಕ್ಷಿಸಿದರು.

ಇದನ್ನೂ ಓದಿ: Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

ಹಾವೇರಿಯಲ್ಲಿ ಸಿಡಿಲಿಗೆ ಯುವಕ ಬಲಿ

ಹಾವೇರಿ ಜಿಲ್ಲೆಯಾದ್ಯಂತ ಗುಡುಗು ಸಿಡಿಲಿನ ಆರ್ಭಟಕ್ಕೆ ಯುವಕ ಬಲಿಯಾಗಿದ್ದಾನೆ. ಹಾವೇರಿ ತಾಲೂಕಿನ ಕುರುಬಗೊಂಡ ಗ್ರಾಮದಲ್ಲಿ ಘಟನೆ ನಡೆದಿದೆ. ದಯಾನಂದ (22) ಸಿಡಿಲು ಬಡಿದು ಮೃತಪಟ್ಟಿದ್ದಾನೆ. ಭಾರಿ ಮಳೆಯೊಂದಿಗೆ ಗುಡುಗು ಸಿಡಿಲಿನ ಆರ್ಭಟಕ್ಕೆ ದಯಾನಂದ ಮರದ ಕೆಳಗೆ ನಿಂತಿದ್ದ. ಈ ವೇಳೆ ಸಿಡಿಲು ಬಡಿದು ಸ್ಥಳದಲ್ಲೇ ದಯಾನಂದ ಮೃತಪಟ್ಟಿದ್ದಾನೆ. ಹಾವೇರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಚಿಕ್ಕಮಗಳೂರಲ್ಲಿ ಮಲ್ಲಿಗೆ ಹೂವಿನಂತೆ ಸುರಿದ ಆಲಿಕಲ್ಲು

ಚಿಕ್ಕಮಗಳೂರಿನಲ್ಲಿ ಗುರುವಾರ ಸಂಜೆ ಆಲಿಕಲ್ಲು ಸಹಿತ ಭಾರಿ ಮಳೆಯಾಗಿದೆ. ಮುತ್ತೋಡಿ ಅಭಯಾರಣ್ಯದ ಬಳಿ ಭಾರಿ ಆಲಿಕಲ್ಲು ಮಳೆಯು ಮಲ್ಲಿಗೆ ಹೂವಿನಂತೆ ಕಂಡು ಬಂತು. ಚಿಕ್ಕಮಗಳೂರು ತಾಲೂಕಿನ ಮಲ್ಲಂದೂರು ವ್ಯಾಪ್ತಿಯಲ್ಲಿ ಆಲಿಕಲ್ಲು ಮಳೆಯಾಗುತ್ತಿದ್ದು, ಪ್ರವಾಸಿಗರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಮಳೆ ನೀರಿಗಿಂತ ಆಲಿಕಲ್ಲು ಆರ್ಭಟ ಜೋರಾಗಿತ್ತು.

ಚಿಕ್ಕಮಗಳೂರಲ್ಲಿ ಮಳೆಗೆ ಮನೆ ಮೇಲೆ ಮರ ಬಿದ್ದು ಜಖಂ

ಚಿಕ್ಕಮಗಳೂರಿನಲ್ಲಿ ಗುರುವಾರವೂ ಮಳೆಯು ಆರ್ಭಟಿಸಿದೆ. ಭಾರಿ ಮಳೆಗೆ ತೆಂಗಿನ ಮರವೊಂದು ಮನೆಯ ಮೇಲೆ ಬಿದ್ದು ಅವಾಂತರವೇ ಸೃಷ್ಟಿಯಾಗಿತ್ತು. ಮನೆಯಲ್ಲಿದ್ದ ವಸ್ತುಗಳು, ದವಸ ಧಾನ್ಯಗಳು ನಾಶವಾಗಿದ್ದವು. ಗಾಳಿ- ಮಳೆಗೆ ಮನೆಯ ಹೆಂಚುಗಳು ಹಾರಿ ಹೋಗಿದ್ದವು. ಕಳಸ ಪಟ್ಟಣದಲ್ಲಿ ರಸ್ತೆಗೆ ಅಡ್ಡಲಾಗಿ ಮರ ಬಿದ್ದು ಹಲವೆಡೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ಕಳಸ-ಕುದುರೆಮುಖ, ಬಾಳೆಹೊನ್ನೂರು-ಕಳಸ ಹೆದ್ದಾರಿಯಲ್ಲಿ ಸುಮಾರು 15 ಹೆಚ್ಚು ಕಡೆ ಮರ ಬಿದ್ದು, ಪ್ರಯಾಣಿಕರು ಪರದಾಟ ಅನುಭವಿಸಿದರು.

ಕಳಸ ತಾಲೂಕಿನ ನೆಲ್ಲಿಕೆರೆ, ಕಲ್ಮಕ್ಕಿ, ಕೈಮರ ಗ್ರಾಮಗಳಲ್ಲಿ ಹಲವು ಮನೆಗಳ ಮೇಲೆ ಬೃಹತ್ ಗಾತ್ರದ ಮರಗಳು ಬಿದ್ದಿತ್ತು. ಮನೆಗಳ ಹೆಂಚುಗಳು, ಕೊಟ್ಟಿಗೆಯ ಚಾವಣಿ ಹಾನಿಯಾಗಿತ್ತು. ಇನ್ನೂ ಮರಗಳ ಕೊಂಬೆ ತಂತಿಯ ಮೇಲೆ ಬಿದ್ದು ವಿದ್ಯುತ್ ಸ್ಥಗಿತವಾಗಿತ್ತು. ಧಾರವಾಡದಲ್ಲೂ ಗುಡುಗು, ಮಿಂಚು ಸಹಿತ ಮಳೆ ಸುರಿಯುತ್ತಿದೆ. ಗುರುವಾರ ಮಧ್ಯಾಹ್ನದ ವೇಳೆಗೆ ಮೋಡ ಕವಿದ ವಾತಾವರಣ ಇತ್ತು. ನೋಡ ನೋಡುತ್ತಿದ್ದಂತೆ ಮಳೆ ಸುರಿದಿದೆ.

ವಿಜಯನಗರದಲ್ಲಿ ಗಾಳಿ ಮಳೆಯ ಅವಾಂತರ

ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಗಾಳಿ ಮಳೆಯ ಅವಾಂತರಕ್ಕೆ ಗುರುವಾರ ಸಂಜೆ ಸಾರ್ವಜನಿಕ ಗ್ರಂಥಾಲಯ ಮುಂಭಾಗ ವಿದ್ಯುತ್ ಕಂಬ ಧರೆಗೆ ಉರುಳಿದೆ. ಅದೇ ರೀತಿ ಪಟ್ಟಣದ ಕುಡಿಯುವ ನೀರಿನ ಘಟಕದ ಬಳಿ ಬೃಹತ್ ಮರ ಬಿದ್ದಿದೆ. ಇತ್ತ ಸಮುದಾಯ ಆರೋಗ್ಯ ಕೇಂದ್ರಕ್ಕೆ ಮಳೆ ನೀರು ನುಗ್ಗಿ ಚಿಕಿತ್ಸೆಗೆ ಬಂದಿದ್ದವರು ತೊಂದರೆ ಅನುಭವಿಸಿದರು. ಗಾಳಿಯ ರಭಸಕ್ಕೆ ವಿದ್ಯುತ್ ಕಂಬಗಳ ಮೇಲೆ ಮರಗಳು ಬಿದ್ದು ವಿದ್ಯುತ್ ಸಂಪರ್ಕದಲ್ಲಿ ವ್ಯತ್ಯಯ ಉಂಟಾಗಿತ್ತು.

ಕೆರೆಯಲ್ಲಿ ಮರಿಯಾನೆಯೊಂದಿಗೆ ಮಳೆಯಾಟ

ಮೈಸೂರಿನಲ್ಲೂ ಮಳೆಯಾಗುತ್ತಿದ್ದು, ಹನಿಗಳ ನಡುವೆ ಕೆರೆಯಲ್ಲಿ ಕಾಡಾನೆಗಳ ಜಲಕ್ರೀಡೆ ನೋಡುಗರ ಸೆಳೆದವು. ನಾಗರಹೊಳೆಯ ಕುಟ್ಟ ಬಳಿ ಕೆರೆಯಲ್ಲಿ ಆನೆಯು ಮರಿಯೊಂದಿಗೆ ಆಟವಾಡುತ್ತಿರುವ ದೃಶ್ಯ ಕಂಡು ಬಂತು. ಖ್ಯಾತ ವನ್ಯಜೀವಿ ಫೋಟೋಗ್ರಾಫರ್ ರವಿಶಂಕರ್ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ನಾಗರಹೊಳೆ ಅಭಯಾರಣ್ಯದಲ್ಲಿ ಸಫಾರಿಗರನ್ನು ಕೈಬೀಸಿ ಕರೆಯುತ್ತಿದೆ.

ಮೇ 21ರವರೆಗೆ ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

ಮುಂದಿನ ಐದು ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಬಿರುಗಾಳಿ ವೇಗವು 40-50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ. ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ಕೊಡಗು, ಮೈಸೂರು, ಮಂಡ್ಯ, ಹಾಸನದಲ್ಲಿ ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ.

ಗದಗ, ಕೊಪ್ಪಳ, ರಾಯಚೂರು, ಬಾಗಲಕೋಟೆ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಬೆಳಗಾವಿ, ಬೀದರ್‌, ಧಾರವಾಡ, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿಯಲ್ಲಿ ರಭಸವಾಗಿ ಗಾಳಿ ಬೀಸಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಗರಿಷ್ಠ ಉಷ್ಣಾಂಶ ಇಳಿಕೆ

ಮುಂದಿನ 5 ದಿನ ಗರಿಷ್ಠ ಉಷ್ಣಾಂಶ 2-3 ಡಿ.ಸೆ ಕಡಿಮೆಯಾಗುವ ಸಾಧ್ಯತೆ ಇದೆ. ಇದರಿಂದಾಗಿ ವಾತಾವರಣವು ತಂಪಾಗಿ ಇರಲಿದೆ.

ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವೆಡೆ ಸಂಜೆ ಅಥವಾ ರಾತ್ರಿ ನಂತರ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಹಾಗೂ ಕನಿಷ್ಠ ತಾಪಮಾನವು ಕ್ರಮವಾಗಿ 30 ಹಾಗೂ 22 ಡಿ.ಸೆ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದಾವಣಗೆರೆ

Murder case : ಕೊಳೆತ ಶವದಲ್ಲಿದ್ದ ಕಿವಿಯೋಲೆಯಿಂದಲೇ ಸಿಕ್ಕಿಬಿದ್ದರು ಹಂತಕರು

Murder case : ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಶವದ ಕಿವಿ ಓಲೆಯಿಂದ‌ಲೇ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಅಡಿಕೆ ಮರಗಳನ್ನು ನಾಶ ಮಾಡಿದವಳನ್ನು ಆರೋಪಿಗಳು ಕೊಂದು ಮುಗಿಸಿದ್ದಾಗಿ ತಿಳಿದು ಬಂದಿದೆ.

VISTARANEWS.COM


on

By

Murder case in davangere
Koo

ದಾವಣಗೆರೆ/ಶಿವಮೊಗ್ಗ: ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಶವದ ಕಿವಿ ಓಲೆಯಿಂದ‌ಲೇ ಕೊಲೆವೊಂದನ್ನು (Murder case) ಪೊಲೀಸರು ಪತ್ತೆ ಹಚ್ಚಿದ್ದಾರೆ. ಕಳೆದ ಮೇ 9ರಂದು ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ‌ ಕಣಿವೆ ಬಿಳಚಿ ಬಳಿ ಭದ್ರಾ ನಾಲೆಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿತ್ತು. ಕೈ-ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆಯಾದ ಹಿನ್ನೆಲೆ ಬಸವಾ ಪಟ್ಟಣ ಠಾಣೆಯ ಪೊಲೀಸರು ಇದೊಂದು ಕೊಲೆ ಎಂದು ಭಾವಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆಗಿಳಿದಿದ್ದರು.

ಆದರೆ ಶವ ಸಂಪೂರ್ಣ ಕೊಳೆತ ಹಿನ್ನೆಲೆಯಲ್ಲಿ ಗುರುತು ಹಿಡಿಯಲು ಕಷ್ಟವಾಗಿತ್ತು. ಶವ ಸಿಕ್ಕ ಜಾಗದಲ್ಲಿ ಎಲ್ಲ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದರು. ಆದರೆ ಶವದ ಗುರುತಾಗಲಿ ಜತೆಗೆ ಆರೋಪಿಗಳ ಸುಳಿವು ಯಾವುದು ಸಿಕ್ಕಿರಲಿಲ್ಲ. ಇತ್ತ ಎಲ್ಲ ಠಾಣೆಗಳಲ್ಲೂ ಯಾವುದಾದರೂ ಮಿಸ್ಸಿಂಗ್‌ ಕಂಪ್ಲೇಟ್‌ ಬಂದಿದ್ಯಾ ಎಂದು ಕ್ರಾಸ್‌ ಚೆಕ್‌ ಮಾಡಿಕೊಂಡಿದ್ದರು.

ಆಗ ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಹಿಳೆಯೊಬ್ಬರು ನಾಪತ್ತೆ ಆಗಿದ್ದಾರೆ ಎಂಬ ಪ್ರಕರಣ ದಾಖಲಿಸಿಕೊಂಡಿದ್ದರು. ಭದ್ರಾ ನಾಲೆಯಲ್ಲಿ ಸಿಕ್ಕ ಶವಕ್ಕೂ ಇಲ್ಲಿ ಮಿಸ್ಸಿಂಗ್‌ ಆಗಿದ್ದ ಮಹಿಳೆಗೂ ತಾಳೆ ಮಾಡಿ ನೋಡಿದ್ದರು. ಆಗ ಶವದಲ್ಲಿದ್ದ ಕಿವಿ ಓಲೆಯಿಂದ ಮೃತಳ ಗುರುತನ್ನು ಪತ್ತೆ ಮಾಡಿದ್ದರು. ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯ ಅರಕೆರೆ ಗ್ರಾಮದ ನಿವಾಸಿ ನೇತ್ರಾವತಿ (47) ಕೊಲೆಯಾದವರು.

ಇದನ್ನೂ ಓದಿ:Murder case : ಮನೆ ಓನರ್ ಕೊಲೆ ಕೇಸ್; ಇದು ಕಳ್ಳಿ ಕೊಲೆಗಾರ್ತಿಯಾದ ಕಥೆ

ಕುಮಾರ ಎಚ್ ಜಿ (38) ಹಾಗೂ ಚಿದಾನಂದಪ್ಪ (54) ಎಂಬುವವರು ನೇತ್ರಾವತಿಯನ್ನು ಕೊಂದು ನಾಲೆಗೆ ಬೀಸಾಕಿ ಹೋಗಿದ್ದರು. ಆರೋಪಿಗಳ ಜಮೀನಿನಲ್ಲಿ ನೇತ್ರಾವತಿ ಅಡಿಕೆ ಮರಗಳನ್ನು ಕಡಿದು ಹಾಕಿದ್ದಳು. ಇದೇ ಸಿಟ್ಟಿನಲ್ಲಿ ನೇತ್ರಾವತಿಯನ್ನು ಕೊಲೆ‌ ಮಾಡಿ ಬಳಿಕ ಕೈ-ಕಾಲು ಕಟ್ಟಿ ಭದ್ರಾ ಕಾಲುವೆಗೆ ಎಸೆದಿದ್ದರು. ಆದರೆ ಮಹಿಳೆಯ ಕಿವಿಯೋಲೆಯಿಂದ ಸಿಕ್ಕಿಬಿದ್ದರು.

Murder Case
ಕೊಲೆಯಾದ ನೇತ್ರಾವತಿ ಹಾಗೂ ಕೊಲೆ ಆರೋಪಿಗಳು

ಸದ್ಯ ಇಬ್ಬರು ಆರೋಪಿಗಳನ್ನು ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಪ್ರಕರಣ ಭೇದಿಸಿದ ಬಸವಾ ಪಟ್ಟಣ ಠಾಣೆಯ ಪೊಲೀಸರ ಕಾರ್ಯಕ್ಕೆ ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಉಡುಪಿ

Karnataka Weather : ಮೇ 18ರವರೆಗೆ ಮಳೆ ಅಬ್ಬರ; 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Rain News : ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ ಇದ್ದು, 7 ಜಿಲ್ಲೆಗಳಿಗೆ ಹವಾಮಾನ ಇಲಾಖೆಯು (Karnataka Weather Forecast) ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ (Heavy Rain) ಸಾಧ್ಯತೆಯಿದೆ. ಮಲೆನಾಡು, ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗಲಿದೆ (Rain News) ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಮತ್ತು 30-40 ಕಿ.ಮೀ ವ್ಯಾಪ್ತಿಯಲ್ಲಿ ಗಾಳಿ ಬೀಸಲಿದೆ.

ದಕ್ಷಿಣ ಒಳನಾಡಿನ ತುಮಕೂರು, ರಾಮನಗರದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಚಾಮರಾಜನಗರ ಮತ್ತು ಮೈಸೂರು, ಬೆಂಗಳೂರು ನಗರ , ಬೆಂಗಳೂರು ಗ್ರಾಮಾಂತರ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ, ವಿಜಯನಗರ, ರಾಯಚೂರು, ಕೊಪ್ಪಳ, ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಉಳಿದ ಭಾಗಗಳಲ್ಲಿ ಮಳೆಯು ವ್ಯಾಪಕವಾಗಿ ಹಗುರದಿಂದ ಕೂಡಿರಲಿದೆ.

ಇದನ್ನು ಓದಿ: Silicon City Hospital: ಲಕ್ಷಕ್ಕೆ ಇಬ್ಬರಿಗೆ ಬರುವ ಮೆದುಳಿನ ರಕ್ತನಾಳ ಒಡೆಯುವ ಕಾಯಿಲೆ; ಯಶಸ್ವಿ ಶಸ್ತ್ರಚಿಕಿತ್ಸೆಯಿಂದ ಬಾಲಕಿ ಪಾರು

ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ.

ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಭಾರೀ ಮಳೆಯೊಂದಿಗೆ ಗುಡುಗು ಮತ್ತು ಗಾಳಿ ವೇಗವು ಗಂಟೆಗೆ 40-50 ಕಿ.ಮೀ ಇರಲಿದೆ. ಹೀಗಾಗಿ ಬಳ್ಳಾರಿ, ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Lok Sabha Election 2024
ದೇಶ22 seconds ago

Lok Sabha Election 2024: ಬಿಜೆಪಿಯ 400+ ಲೆಕ್ಕಾಚಾರ ಉಲ್ಟಾ? ಚುನಾವಣೆ ಹೊತ್ತಲ್ಲೇ ಪಕ್ಷಕ್ಕೆ ಬಿಗ್‌ ಶಾಕ್‌!

Medical Negligence
ದೇಶ2 mins ago

ವೈದ್ಯರ ಸಲಹೆಯಂತೆ 5 ದಿನದ ಹಸುಳೆಯನ್ನು ಬಿಸಿಲಿನಲ್ಲಿ ಮಲಗಿಸಿದರು; ಬೆಂದು ಕರಟಿಹೋಯ್ತು ಕಂದಮ್ಮನ ಜೀವ

anjali murder case girish
ಕ್ರೈಂ14 mins ago

Anjali Murder Case: ಅಂಜಲಿ ಹಂತಕನಿಗೆ ಸಾರ್ವಜನಿಕರಿಂದ ಗೂಸಾ, ಬಂಧನ

techie wife udr case
ಕ್ರೈಂ42 mins ago

UDR Case: ಟೆಕ್ಕಿ ಪತ್ನಿಯ ಅನುಮಾನಾಸ್ಪದ ಸಾವು

Karnataka weather Forecast
ಮಳೆ2 hours ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ3 hours ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

World Hypertension Day Today is Global Blood Pressure Day
ಆರೋಗ್ಯ3 hours ago

World Hypertension Day: ಇಂದು ಜಾಗತಿಕ ರಕ್ತದೊತ್ತಡ ದಿನ; ಈ ಸಮಸ್ಯೆಯ ಅರಿವು ನಿಮಗೆಷ್ಟಿದೆ?

Pakistan
ಸಂಪಾದಕೀಯ8 hours ago

ವಿಸ್ತಾರ ಸಂಪಾದಕೀಯ: ಒಪ್ಪಿಕೊಂಡರೆ ಸಾಲದು, ಪಾಕ್‌ ತನ್ನನ್ನು ಸರಿಪಡಿಸಿಕೊಳ್ಳಲಿ

Kapil Sibal
ದೇಶ8 hours ago

Kapil Sibal: ಸುಪ್ರೀಂ ಕೋರ್ಟ್‌ ಬಾರ್‌ ಅಸೋಸಿಯೇಷನ್‌ ಅಧ್ಯಕ್ಷರಾಗಿ ಕಪಿಲ್‌ ಸಿಬಲ್‌ ಆಯ್ಕೆ

MS Dhoni
ಕ್ರೀಡೆ8 hours ago

MS Dhoni : ಆರ್​​ಸಿಬಿ ವಿರುದ್ಧ ಬೌಲಿಂಗ್ ಮಾಡಲು ಅಭ್ಯಾಸ ನಡೆಸಿದ ಎಂ ಎಸ್​ ಧೋನಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ2 hours ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ3 hours ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ15 hours ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ18 hours ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು21 hours ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ2 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ3 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20243 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20243 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌