Lok Sabha Election 2024: ಸೋಲಿಸಿದರೆ ಸಮಸ್ಯೆಗಳಿಗೆ ನೀವೇ ಕಾರಣರಾಗುತ್ತೀರಿ; ಅಪಾರ್ಟ್‌ಮೆಂಟ್‌ನಲ್ಲಿ ಡಿಕೆಶಿ ಮತಯಾಚನೆ - Vistara News

Lok Sabha Election 2024

Lok Sabha Election 2024: ಸೋಲಿಸಿದರೆ ಸಮಸ್ಯೆಗಳಿಗೆ ನೀವೇ ಕಾರಣರಾಗುತ್ತೀರಿ; ಅಪಾರ್ಟ್‌ಮೆಂಟ್‌ನಲ್ಲಿ ಡಿಕೆಶಿ ಮತಯಾಚನೆ

VISTARANEWS.COM


on

Lok Sabha Election 2024 DK Shivakumar campaigns in apartments
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಲೋಕಸಭಾ ಚುನಾವಣಾ (Lok Sabha Election 2024) ಕಣ ರಂಗೇರುತ್ತಿದೆ. ರಾಜಕೀಯ ಪಕ್ಷಗಳ ನಾಯಕರು ಮತಯಾಚನೆಯನ್ನು ಮಾಡುತ್ತಿದ್ದಾರೆ. ಈ ವೇಳೆ ಆರ್ ಆರ್ ನಗರದ ವಿಧಾನಸಭಾ ಕ್ಷೇತ್ರದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್‌ (DK Shivakumar) ಅವರು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ (Bangalore Rural Lok Sabha constituency) ಕಾಂಗ್ರೆಸ್‌ ಅಭ್ಯರ್ಥಿ, ಸಹೋದರ ಡಿ.ಕೆ. ಸುರೇಶ್‌ (DK Suresh) ಪರವಾಗಿ ಮತಯಾಚನೆಯಲ್ಲಿ ನಿರತರಾಗಿದ್ದಾರೆ. ಅಪಾರ್ಟ್‌ಮೆಂಟ್‌ಗಳನ್ನು ಟಾರ್ಗೆಟ್‌ ಮಾಡಿ ಪ್ರಚಾರ ಕೈಗೊಂಡಿದ್ದಾರೆ. ಈ ವೇಳೆ, ಕಾಂಗ್ರೆಸ್‌ ಅಭ್ಯರ್ಥಿಯನ್ನು ಗೆಲ್ಲಿಸಬೇಕು. ಆ ಗಾಳಿ, ಈ ಗಾಳಿ ಎಂದು ನಿರ್ಧಾರ ತೆಗೆದುಕೊಂಡರೆ ಮುಂದಿನ ಸಮಸ್ಯೆಗಳಿಗೆ ನೀವೇ ಜವಾಬ್ದಾರಿ ಎಂದು ಹೇಳಿದ್ದಾರೆ.

ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಅಪಾರ್ಟ್‌ಮೆಂಟ್‌ವೊಂದರಲ್ಲಿ ಡಿ.ಕೆ. ಶಿವಕುಮಾರ್‌ ಮತಯಾಚನೆ ಕಾರ್ಯಕ್ರಮ ನಡೆಸಿದ್ದಾರೆ. ಈ ವೇಳೆ ಹಿಂದಿನ ಸೋಲಿನ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ಈ ಬಾರಿ ತಮ್ಮ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದ್ದಾರೆ. ಅಲ್ಲದೆ, ಅಪಾರ್ಟ್‌ಮೆಂಟ್‌ ನಿವಾಸಿಗಳ ಮತ ಬಾರದ ಕಾರಣಕ್ಕೆ ಕಳೆದ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷ ಸೋಲು ಕಾಣಬೇಕಾಯಿತು ಎಂದೂ ವಿವರಿಸಿದ್ದಾರೆ.

ಇದನ್ನೂ ಓದಿ: Lok Sabha Election 2024: ಏಪ್ರಿಲ್‌ 17ಕ್ಕೆ ರಾಯಚೂರಲ್ಲಿ ಪವನ್‌ ಕಲ್ಯಾಣ್‌ ರೋಡ್‌ ಶೋ! ಬಳ್ಳಾರಿ, ಚಿಕ್ಕಬಳ್ಳಾಪುರದಲ್ಲೂ ಹವಾ

ಅಪಾರ್ಟ್‌ಮೆಂಟ್‌ವೊಂದರಲ್ಲಿ ಚುನಾವಣಾ ಪ್ರಚಾರ ಭಾಷಣ ಮಾಡಿದ ಡಿ.ಕೆ. ಶಿವಕುಮಾರ್‌, ನಿಮ್ಮ ಕಡೆ ಮತ ಬರದಿರುವುದರಿಂದ ಎರಡು ಬಾರಿ ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದೇವೆ. ಈ ಬಾರಿ ಹಾಗೆ ಆಗಬಾರದು. ಸರ್ಕಾರವಾಗಿ ನಾನು ಇಲ್ಲಿ ಬಂದಿದ್ದೇನೆ. ನಿಮ್ಮ ಪರ ಕೆಲಸ ಮಾಡಿಕೊಡುತ್ತೇನೆ. ಆ ಗಾಳಿ ಈ ಗಾಳಿ ಇದೆ ಅಂತ ನಿರ್ಧಾರ ತೆಗೆದುಕೊಂಡರೆ ಮುಂದಿನ ಸಮಸ್ಯೆಗಳಿಗೆ ನೀವೇ ಕಾರಣರಾಗುತ್ತೀರಿ. ಇಲ್ಲಿ ಕಾಂಗ್ರೆಸ್ ಗೆಲ್ಲಬೇಕು. ಹೀಗಾಗಿ ಖುದ್ದು ನಾನೇ ಬಂದಿದ್ದೇನೆ ಎಂದು ಹೇಳಿದ್ದಾರೆ.

ನಿರ್ಮಲಾನಂದನಾಥ ಶ್ರೀ ಹೆಸರನ್ನು ರಾಜಕೀಯಕ್ಕೆ ಎಳೆದಿಲ್ಲ: ಡಿಕೆಶಿ ಸ್ಪಷ್ಟನೆ

ಈ ಲೋಕಸಭಾ ಚುನಾವಣೆಯಲ್ಲಿ ಜನರಿಗೆ ಯಾರಿಗೆ ಮತ ಹಾಕಬೇಕು ಎಂಬುದು ಚೆನ್ನಾಗಿ ಗೊತ್ತಿದೆ. ಜನರು ದಡ್ಡರಲ್ಲ, ತಮ್ಮ ಬದುಕು ಯಾರು ಕಟ್ಟಿಕೊಡುತ್ತಾರೋ ಅವರಿಗೆ ಬೆಂಬಲ ನೀಡುತ್ತಾರೆ. ಕಾಂಗ್ರೆಸ್ (Congress Karnataka) ಪಕ್ಷ ಜನರ ಬದುಕು ಕಟ್ಟಿಕೊಡುವ ಕೆಲಸ ಮಾಡುತ್ತಿದ್ದು, ಒಕ್ಕಲಿಗರೂ ಸೇರಿದಂತೆ ಎಲ್ಲ ವರ್ಗದ ಜನ ಕಾಂಗ್ರೆಸ್‌ಗೆ ಬೆಂಬಲ ನೀಡಲಿದ್ದಾರೆ. ಇನ್ನು ಆದಿ ಚುಂಚನಗಿರಿ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮೀಜಿ (Nirmalanandanatha Swamiji) ಹೆಸರನ್ನು ನಾನು ರಾಜಕೀಯಕ್ಕೆ ಎಳೆದು ತರುತ್ತಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಸ್ಪಷ್ಟನೆ ನೀಡಿದರು.

ಸದಾಶಿವನಗರ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ವಿಧಾನಸಭೆ ಚುನಾವಣೆ ವೇಳೆ ಶೇ.5ರಷ್ಟು ಒಕ್ಕಲಿಗ ಮತಗಳು ಕಾಂಗ್ರೆಸ್ ಕಡೆ ವಾಲಿದ್ದವು. ಈ ಬಾರಿ ಒಕ್ಕಲಿಗರು ಯಾರನ್ನು ಬೆಂಬಲಿಸಲಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದರು.

ಒಕ್ಕಲಿಗರಾಗಲಿ, ಬೇರೆ ಸಮುದಾಯದವರಾಗಲಿ ಯಾರೂ ದಡ್ಡರಲ್ಲ. ತಮಗೆ ಯಾರು ಅನುಕೂಲ ಮಾಡಿಕೊಡಲಿದ್ದಾರೆ ಹಾಗೂ ದೇಶಕ್ಕೆ ಯಾರು ಸೂಕ್ತ ಎಂದು ನೋಡುತ್ತಾರೆ. ತಮಗೆ, ರಾಜ್ಯಕ್ಕೆ, ದೇಶಕ್ಕೆ ಯಾರು ಉತ್ತಮರು ಎಂದು ಜನ ಆಲೋಚನೆ ಮಾಡುತ್ತಾರೆ. ಜನ ಅವರ ಬದುಕು ನೋಡುತ್ತಾರೆ ಹೊರತು, ಭಾವನೆ ನೋಡುವುದಿಲ್ಲ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

ಇದನ್ನೂ ಓದಿ: Lok Sabha Election 2024: ಸುಳ್ಳು ಹೇಳಿದ ರಾಹುಲ್‌ ಗಾಂಧಿ ಕ್ಷಮೆ ಕೋರಲಿ: ಬಿ.ಎಸ್.‌ ಯಡಿಯೂರಪ್ಪ ಆಗ್ರಹ

ನಾನು ಕೇಳಿದ್ದು ಹಾಗಲ್ಲ, ಹೀಗೆ

ಸರ್ಕಾರ ಬೀಳಿಸಿದವರನ್ನೇ ನಿರ್ಮಲಾನಂದನಾಥ ಸ್ವಾಮೀಜಿಗಳ ಬಳಿ ಕರೆದುಕೊಂಡು ಹೋದರೆ ಸಮಾಜಕ್ಕೆ ಏನು ಉತ್ತರ ನೀಡುತ್ತಾರೆ? ಈ ವಿಚಾರವಾಗಿ ಸ್ವಾಮೀಜಿಗಳು ಉತ್ತರ ನೀಡಬೇಕು ಎಂದು ನಾನು ಕೇಳಿಲ್ಲ. ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹಾಗೂ ಕೆಲವು ಮಂತ್ರಿಗಳು ಸ್ವಾಮೀಜಿಗಳ ಕಾರ್ಯಕ್ರಮಕ್ಕೆ ಹೋಗಿದ್ದರು. ಅವರು ವಾಪಸ್ ಬರುವ ವೇಳೆಗೆ ಆಪರೇಷನ್ ಕಮಲ ನಡೆದಿತ್ತು. ಸ್ವಾಮೀಜಿಗಳಿಗೂ ಒಕ್ಕಲಿಗ ವ್ಯಕ್ತಿ ಸಿಎಂ ಆಗಿರುವ ಬಗ್ಗೆ ಅಭಿಮಾನ ಇರುತ್ತದೆ. ಆದರೆ, ಈಗ ಒಕ್ಕಲಿಗ ಸಿಎಂ ಅನ್ನು ತೆಗೆದವರನ್ನೇ ಜತೆಗೆ ಕರೆದುಕೊಂಡು ಹೋದರೆ ಹೇಗೆ? ಸ್ವಾಮೀಜಿಗಳ ಆಶೀರ್ವಾದ ಎಲ್ಲರಿಗೂ ಬೇಕು. ಹೀಗಾಗಿ ಸಚಿವ ಎನ್. ಚೆಲುವರಾಯಸ್ವಾಮಿ (N Chaluvarayaswamy) ಅವರು ನಮ್ಮ ಅಭ್ಯರ್ಥಿಗಳನ್ನು ಕರೆದುಕೊಂಡು ಹೋಗಿದ್ದರು. ಅದೇ ರೀತಿ ಇವರು ಕೂಡ ಆಶೀರ್ವಾದ ಪಡೆಯಲು ಹೋಗಿದ್ದಾರೆ. ಕುಮಾರಸ್ವಾಮಿ, ಡಾ. ಸಿ.ಎನ್.‌ ಮಂಜುನಾಥ್ ಅವರು ಸ್ವಾಮೀಜಿಗಳ ಆಶೀರ್ವಾದ ಕೇಳಿದ್ದರಲ್ಲಿ ತಪ್ಪೇನಿಲ್ಲ. ಆದರೆ, ಸರ್ಕಾರ ತೆಗೆದವರನ್ನೇ ಜತೆಯಲ್ಲಿ ಕರೆದುಕೊಂಡು ಹೋಗಿದ್ದಾರೆ. ಇದರಿಂದ ಅವರು ಸಮಾಜಕ್ಕೆ ಏನು ಉತ್ತರ ನೀಡುತ್ತಾರೆ ಎಂದಷ್ಟೇ ನಾನು ಕೇಳಿದ್ದೇನೆ ಎಂದು ಡಿ.ಕೆ. ಶಿವಕುಮಾರ್‌ ತಿಳಿಸಿದರು.

ಅವರೇ ಜೆಡಿಎಸ್‌ಗೆ ಮುಕ್ತಿ ಕೊಟ್ಟಿದ್ದಾರೆ

ಸ್ವಾಮೀಜಿಗಳು ಕೃಷ್ಣನಂತೆ ಅವರು ಪಾಂಡವರಂತೆ ಇರುವ ಜೆಡಿಎಸ್ ಪರವಾಗಿ ನಿಲ್ಲಲಿದ್ದಾರೆ ಎಂಬ ಹೇಳಿಕೆ ಬಗ್ಗೆ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್‌, ಜೆಡಿಎಸ್ ಎಲ್ಲಿದೆ? ಜೆಡಿಎಸ್‌ಗೆ ಅವರೇ ಮುಕ್ತಿ ಕೊಟ್ಟಿದ್ದಾರೆ. ಜೆಡಿಎಸ್ ಇರಬೇಕು ಎಂಬ ಆಸೆ ನನಗಿದೆ. ಆದರೆ, ಅಳಿಯನನ್ನೇ ಬಿಜೆಪಿಗೆ ಕಳುಹಿಸಿ ಜೆಡಿಎಸ್ ವಿಸರ್ಜನೆ ಮಾಡುವ ಸ್ಥಿತಿಗೆ ಹೋಗಿದ್ದಾರೆ. ನಾವು ಹಿಂದೆ ಒಂದು ತಪ್ಪು ಮಾಡಿದ್ದೆವು. ಆದರೆ, ಈಗ ಅದಕ್ಕಿಂತ ದೊಡ್ಡ ತಪ್ಪು ಜೆಡಿಎಸ್‌ನವರು ಮಾಡಿದ್ದಾರೆ ಎಂದು ಲೇವಡಿ ಮಾಡಿದರು.

ನೀವಾಗಲಿ, ಎಚ್.ಡಿ. ಕುಮಾರಸ್ವಾಮಿ ಅವರಾಗಲಿ ರಾಜಕಾರಣಕ್ಕೆ ಸ್ವಾಮೀಜಿಗಳನ್ನು ಯಾಕೆ ಎಳೆಯುತ್ತಿದ್ದೀರಿ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್‌, ನಾನು ಸ್ವಾಮೀಜಿಗಳನ್ನು ರಾಜಕೀಯಕ್ಕೆ ಎಳೆಯುತ್ತಿಲ್ಲ. ಸ್ವಾಮೀಜಿಗಳಿಗೆ ಕೊಡಬೇಕಾದ ಗೌರವವನು ನಾವು ಕೊಡಬೇಕು ಎಂದು ಹೇಳುತ್ತಿದ್ದೇನೆ ಎಂದು ಡಿ.ಕೆ. ಶಿವಕುಮಾರ್‌ ತಿಳಿಸಿದರು.

ಸರ್ಕಾರವನ್ನು ಒಂದು ಜಾತಿಗೆ ಸೀಮಿತವಾಗಿಸುತ್ತಿರುವುದೇಕೆ ಎಂದು ಕೇಳಿದಾಗ, “ನೀವು ನಾವು ಬೇಡ ಎಂದರೂ ಜಾತಿ ನಮ್ಮನ್ನು ಬಿಡುವುದಿಲ್ಲ. ನಾವು ಅರ್ಜಿ ಹಾಕಿ ಹುಟ್ಟದಿದ್ದರೂ ನಾವು ಸಾಯುವಾಗ ಧರ್ಮ, ಜಾತಿ ಬಂದೇ ಬರುತ್ತದೆ. ಧರ್ಮ ಬೇಡ ಎಂದರೂ ನಾಮಕರಣ ಹಾಗೂ ವಿವಿಧ ಕಾರ್ಯಗಳಲ್ಲಿ ಧರ್ಮ ಅಡಗಿದೆ” ಎಂದರು.

ಮೈತ್ರಿ ಸರ್ಕಾರ ಕೆಡವಲು ಶಾಸಕರನ್ನು ಬಿಜೆಪಿಗೆ ಕಳುಹಿಸಿದವರು ಯಾರು ಎಂಬ ಅಶ್ವತ್ಥ್ ನಾರಾಯಣ ಅವರ ಪ್ರಶ್ನೆಗೆ, “ಯಾರು ಕಳುಹಿಸಿದ್ದಾರೆ ಎಂದು ನನಗೆ ಗೊತ್ತಿಲ್ಲ. ಅವರೇ ಹೇಳಲಿ” ಎಂದು ತಿಳಿಸಿದರು.

ಮೋದಿಗೆ ತಮ್ಮ ಮೇಲೆ ವಿಶ್ವಾಸವಿಲ್ಲ

ಕಾಂಗ್ರೆಸ್ ಪಕ್ಷದಲ್ಲಿ ನಂಬಿಕಸ್ಥ ನಾಯಕರಿಲ್ಲ. ಹೀಗಾಗಿ ರಾಹುಲ್ ಗಾಂಧಿ ಹೆಸರಲ್ಲಿ ಮತ ಕೇಳುತ್ತಿಲ್ಲ ಎಂಬ ಬಿ.ಎಸ್.‌ ಯಡಿಯೂರಪ್ಪ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್‌, ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಹೆಸರು ಹೇಳಿ ಮತ ಕೇಳಲಿಲ್ಲ. ಶಿವಮೊಗ್ಗಕ್ಕೆ ಬಂದಿದ್ದ ಅವರು ಅಭ್ಯರ್ಥಿ ರಾಘವೇಂದ್ರ ಅವರಿಗೆ ಮತ ಕೊಡಿ ಎಂದು ಕೇಳಿದರೇ ಹೊರತು ತಮಗೆ ಕೊಡಿ ಎಂದು ಕೇಳಲೇ ಇಲ್ಲ. ಮೋದಿ ಅವರಿಗೆ ತಮ್ಮ ಮೇಲೆ ವಿಶ್ವಾಸವಿಲ್ಲ. ನಿಮಗೇನಾದರೂ ಅವರ ಪರವಾದ ಅಲೆ ಕಾಣುತ್ತಿದೆಯೇ?” ಎಂದು ಡಿ.ಕೆ. ಶಿವಕುಮಾರ್‌ ಪ್ರಶ್ನೆ ಮಾಡಿದರು.

ಬರ ಪರಿಹಾರ, ತೆರಿಗೆ ಅನ್ಯಾಯದ ಬಗ್ಗೆ ಯಡಿಯೂರಪ್ಪ ಮಾತನಾಡಲಿ

ಎಚ್ಎಎಲ್ ಮುಚ್ಚಲಾಗುತ್ತದೆ ಎಂದಿದ್ದ ರಾಹುಲ್ ಗಾಂಧಿ ಅವರಿಂದ ಡಿ.ಕೆ. ಶಿವಕುಮಾರ್ ಅವರು ಕ್ಷಮೆ ಕೇಳಿಸುತ್ತಾರಾ ಎಂಬ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿಕೆ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಡಿ.ಕೆ. ಶಿವಕುಮಾರ್‌, ಯಡಿಯೂರಪ್ಪ ಅವರು ವಿಷಯಾಂತರ ಮಾಡುವುದು ಬೇಡ. ಯಡಿಯೂರಪ್ಪ ಅವರು ಬರ ಪರಿಹಾರ ವಿಚಾರವಾಗಿ ನಿರ್ಮಲಾ ಸೀತಾರಾಮನ್ ಅವರ ಹೇಳಿಕೆ, ನಮ್ಮ ಬೇಡಿಕೆ, ನರೇಗಾ ಯೋಜನೆಯಲ್ಲಿ ಕೂಲಿ ದಿನಗಳ ಸಂಖ್ಯೆ ಹೆಚ್ಚಳ ಹಾಗೂ ನಮ್ಮ ತೆರಿಗೆ ಪಾಲಿನ ಬಗ್ಗೆ ಮಾತನಾಡಲಿ. ಹಾಗೂ ಅಧಿಕಾರ ಬಿಟ್ಟುಕೊಡುವಾಗ ಯಡಿಯೂರಪ್ಪ ಅವರು ಯಾಕೆ ಕಣ್ಣೀರು ಹಾಕಿದರು ಎಂದು ಪ್ರಶ್ನಿಸಿದರು.

ಇದನ್ನೂ ಓದಿ: Lok Sabha Election 2024: ಈಶ್ವರಪ್ಪನವರ ಉದ್ಧಟತನದ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಲ್ಲ; ಬಿ.ವೈ. ವಿಜಯೇಂದ್ರ ಕಿಡಿ

ಕಾಂಗ್ರೆಸ್‌ಗೆ ಹಾಕುವ ಮತ ಭಯೋತ್ಪಾದನೆಗೆ ಹಾಕುವ ಮತ ಎಂಬ ಯಡಿಯೂರಪ್ಪ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್‌, “ಚುನಾವಣಾ ಆಯೋಗ ಅದಕ್ಕೆ ಉತ್ತರ ನೀಡಲಿದೆ ಎಂದು ತಿಳಿಸಿದರು.

ಎಸ್‌ಟಿಎಸ್, ಹೆಬ್ಬಾರ್ ಬಿಜೆಪಿ ಶಾಸಕರು

ಎಸ್.ಟಿ ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳಲಾಗಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್‌, ನಾನು ಅವರನ್ನು ಎಲ್ಲಿ ಸೇರಿಸಿಕೊಂಡಿದ್ದೇನೆ. ಅವರು ತಮ್ಮ ಕ್ಷೇತ್ರದ ವಿಚಾರವಾಗಿ ನಮ್ಮ ಜತೆ ಚರ್ಚೆ ಮಾಡಿದ್ದಾರೆ. ಆ ಕ್ಷೇತ್ರಕ್ಕೆ ಹೋಗಿ ಅಲ್ಲಿ ಕೇಳಿ. ಸೋಮಶೇಖರ್ ಹಾಗೂ ಹೆಬ್ಬಾರ್ ಅವರು ಬಿಜೆಪಿಯ ಅಧಿಕೃತ ಶಾಸಕರು. ಅವರು ತಮ್ಮದೇ ಆದ ಲೆಕ್ಕಾಚಾರ, ನಂಬಿಕೆ ಮೇಲೆ ಯಾವ ಪಕ್ಷಕ್ಕೆ ಸಹಾಯ ಮಾಡುತ್ತಿದ್ದಾರೋ ನನಗೆ ಗೊತ್ತಿಲ್ಲ ಎಂದು ತಿಳಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Narendra Modi: ಗುರಿ ದೊಡ್ಡದಿದೆ, 3ನೇ ಅವಧಿಯ ಆಡಳಿತಕ್ಕೆ ಪ್ಲಾನ್‌ ರೆಡಿ ಇದೆ; ಮೋದಿ ವಿಶ್ವಾಸ

Narendra Modi: ದೇಶದ ಚುನಾವಣೆ ಫಲಿತಾಂಶ ಏನಾಗಲಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಅದರನ್ನು ನಾನು ಬಿಡಿಸಿ ಹೇಳಬೇಕಿಲ್ಲ. ನಮ್ಮ ಕೈ ಖಂಡಿತವಾಗಿಯೂ ಮೇಲಾಗಲಿದೆ ಎಂಬುದು ಪ್ರತಿಯೊಬ್ಬರಿಗೂ ತಿಳಿದ ಸಂಗತಿಯಾಗಿದೆ. ಹಾಗಾಗಿ, ನಾವು ಮೂರನೇ ಅವಧಿಯ ಆಡಳಿತಕ್ಕೆ ಸಿದ್ಧವಾಗುತ್ತಿದ್ದೇವೆ ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Narendra Modi
Koo

ನವದೆಹಲಿ: ಲೋಕಸಭೆ ಚುನಾವಣೆಯ (Lok Sabha Election 2024) ನಾಲ್ಕನೇ ಹಂತದ ಮತದಾನ ಮುಗಿದಿದೆ. ಇನ್ನೂ ಮೂರು ಹಂತದ ಮತದಾನ ಬಾಕಿ ಇರುವ ಕಾರಣ ಪ್ರಧಾನಿ ನರೇಂದ್ರ ಮೋದಿ (Narendra Modi), ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಸೇರಿ ಎಲ್ಲ ನಾಯಕರು ಅಬ್ಬರದ ಪ್ರಚಾರ ಮಾಡುತ್ತಿದ್ದಾರೆ. ಇದರ ಬೆನ್ನಲ್ಲೇ ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಎನ್‌ಡಿಟಿವಿಗೆ ನೀಡಿದ ಸಂದರ್ಶನದಲ್ಲಿ ಅವರು ವಿಶ್ವಾಸದ ಮಾತುಗಳನ್ನಾಡಿದ್ದಾರೆ.

“ನಮ್ಮ ಗುರಿ ತುಂಬ ದೊಡ್ಡದಿದೆ. ಇಷ್ಟೊಂದು ದೊಡ್ಡ ದೇಶದಲ್ಲಿ ಜನರ ಯಾರಿಗೆ ಮತ ಹಾಕಬೇಕು ಎಂಬುದನ್ನು ಸುಲಭವಾಗಿ ತೀರ್ಮಾನಿಸುತ್ತಾರೆ. ಜನರಿಗೆ ಇರುವ ಅನುಭವವು ಅವರು ಸುಲಭವಾಗಿ ತೀರ್ಮಾನ ತೆಗೆದುಕೊಳ್ಳುತ್ತಾರೆ. ದೇಶದ ಜನರಿಗೆ ಎಲ್ಲವೂ ಗೊತ್ತಿದೆ. ಯಾವುದೇ ಪಕ್ಷ, ವ್ಯಕ್ತಿ ಇರಲಿ, ಜನರು ಯಾರನ್ನು ಗೆಲ್ಲಿಸಬೇಕು ಎಂಬುದನ್ನು ನಿರ್ಧರಿಸುತ್ತಾರೆ. ಹಾಗಾಗಿಯೇ, ನಾವು ಮುಂದಿನ ದಿನಗಳಲ್ಲಿ ದೊಡ್ಡ ಗುರಿಯನ್ನು ಇಟ್ಟುಕೊಂಡಿದ್ದೇವೆ. ದೇಶದ ಆಡಳಿತ, ಅಭಿವೃದ್ಧಿಯ ನೀಲನಕ್ಷೆ ನಮ್ಮ ಬಳಿ ಇದೆ” ಎಂದು ಮೋದಿ ಹ್ಯಾಟ್ರಿಕ್‌ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದರು.

“ದೇಶದ ಚುನಾವಣೆ ಫಲಿತಾಂಶ ಏನಾಗಲಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಅದರನ್ನು ನಾನು ಬಿಡಿಸಿ ಹೇಳಬೇಕಿಲ್ಲ. ನಮ್ಮ ಕೈ ಖಂಡಿತವಾಗಿಯೂ ಮೇಲಾಗಲಿದೆ ಎಂಬುದು ಪ್ರತಿಯೊಬ್ಬರಿಗೂ ತಿಳಿದ ಸಂಗತಿಯಾಗಿದೆ. ಹಾಗಾಗಿ, ನಾವು ಮೂರನೇ ಅವಧಿಯ ಆಡಳಿತಕ್ಕೆ ಸಿದ್ಧವಾಗುತ್ತಿದ್ದೇವೆ. ಅಧಿಕಾರಕ್ಕೆ ಬಂದ 100 ದಿನಗಳಲ್ಲಿ ಏನೆಲ್ಲ ತೀರ್ಮಾನ ತೆಗೆದುಕೊಳ್ಳಬೇಕು ಎಂಬುದರ ಬಗ್ಗೆ ಕಾರ್ಯಸೂಚಿಯನ್ನು ಹಾಕಿಕೊಂಡು ಬನ್ನಿ ಎಂಬುದಾಗಿ ನಮ್ಮ ಸಚಿವರಿಗೆ ಸೂಚಿಸಿದ್ದೇನೆ” ಎಂದು ಮೋದಿ ತಿಳಿಸಿದರು.

“ನಮ್ಮ ಮುಂದಿನ ಆಡಳಿತವು ಒಂದು ಪ್ರದೇಶ, ಕೆಲವು ಭಾಗಗಳಿಗೆ ಸೀಮಿತವಾಗಿರುವುದಿಲ್ಲ. ದೊಡ್ಡ ಗುರಿಯನ್ನು ಕ್ಷಿಪ್ರವಾಗಿ ಸಾಧಿಸುವ ಛಲವನ್ನು ನಾವು ಹೊಂದಿದ್ದೇವೆ. ಗುರಿ ದೊಡ್ಡದಾಗಿ ಇಟ್ಟುಕೊಂಡು, ಅದರ ವೇಗಕ್ಕೆ ತಕ್ಕಂತೆ ಮುನ್ನಡೆಯುವುದು ನಮ್ಮ ಉದ್ದೇಶವಾಗಿದೆ. ಗುರಿ, ಉದ್ದೇಶ ಹಾಗೂ ವೇಗದ ಜತೆ ಸಾಗುವುದು ಕೂಡ ಒಂದು ಕೌಶಲವಾಗಿದೆ. ಆ ದಿಸೆಯಲ್ಲಿ ನಾವು ಮಹತ್ವದ ಸಂಗತಿಗಳನ್ನು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ” ಎಂದು ನರೇಂದ್ರ ಮೋದಿ ಹೇಳಿದರು.

ಇದನ್ನೂ ಓದಿ: ಹಿಂದು ಧರ್ಮದ ಆಶಯದಂತೆ ಕಾಂಗ್ರೆಸ್‌ ಸ್ವಾತಂತ್ರ್ಯಕ್ಕಾಗಿ ಹೋರಾಡಿತ್ತು ಎಂದ ಪ್ರಿಯಾಂಕಾ ವಾದ್ರಾ!

Continue Reading

ಪ್ರಮುಖ ಸುದ್ದಿ

ಹಿಂದು ಧರ್ಮದ ಆಶಯದಂತೆ ಕಾಂಗ್ರೆಸ್‌ ಸ್ವಾತಂತ್ರ್ಯಕ್ಕಾಗಿ ಹೋರಾಡಿತ್ತು ಎಂದ ಪ್ರಿಯಾಂಕಾ ವಾದ್ರಾ!

ಸ್ವಾತಂತ್ರ್ಯ ಹೋರಾಟದ ವೇಳೆ ದೇಶಕ್ಕಾಗಿ ಎಲ್ಲರೂ ತ್ಯಾಗ ಮಾಡಿದರು. ಜವಾಹರ ಲಾಲ್‌ ನೆಹರು ಸೇರಿ ಹಲವು ನಾಯಕರು 13-14 ವರ್ಷ ಜೈಲು ಶಿಕ್ಷೆ ಅನುಭವಿಸಿದರು. ಮಹಾತ್ಮ ಗಾಂಧೀಜಿ ಅವರಿಗೆ ಗುಂಡು ತಗುಲಿ, ಅವರು ಇನ್ನೇನು ಪ್ರಾಣ ಬಿಡಬೇಕು ಎನ್ನುವ ಮೊದಲು, ಅವರು ಹೇ ರಾಮ್‌ ಎಂದು ಹೇಳಿದ್ದರು ಎಂಬುದಾಗಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ. ಆ ಮೂಲಕ ಕಾಂಗ್ರೆಸ್‌ ಪಕ್ಷವು ಹಿಂದು ವಿರೋಧಿ ಎನ್ನುವ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.

VISTARANEWS.COM


on

Priyanka Vadra
Koo

ನವದೆಹಲಿ: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಧರ್ಮ, ಜಾತಿ, ರಾಮಮಂದಿರ, ಮೀಸಲಾತಿ ಸೇರಿ ಹತ್ತಾರು ವಿಷಯಗಳು ಮುನ್ನೆಲೆಗೆ ಬಂದಿವೆ. ಅದರಲ್ಲೂ, ಕಾಂಗ್ರೆಸ್‌ ಹಿಂದು ವಿರೋಧಿ ಎಂಬುದಾಗಿ ಬಿಜೆಪಿ ನಾಯಕರು ಆರೋಪಿಸುತ್ತಿದ್ದಾರೆ. ಇದಕ್ಕೆ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ವಾದ್ರಾ (Priyanka Vadra) ತಿರುಗೇಟು ನೀಡಿದ್ದಾರೆ. “ಮಹಾತ್ಮ ಗಾಂಧೀಜಿ (Mahatma Gandhi) ಅವರು ಕೊನೆಯುಸಿರೆಳೆಯುವ ಮೊದಲೂ ಹೇ ರಾಮ್‌ ಎಂದಿದ್ದರು. ಕಾಂಗ್ರೆಸ್‌ ಹೇಗೆ ಹಿಂದು ವಿರೋಧಿಯಾಗುತ್ತದೆ? ಹಾಗೆಯೇ, ಹಿಂದು ಧರ್ಮದ ಆಶಯಗಳಂತೆ ಸ್ವಾತಂತ್ರ್ಯ ಹೋರಾಟ ಮಾಡಲಾಗಿದೆ” ಎಂದಿದ್ದಾರೆ.

ಇಂಡಿಯಾ ಟುಡೇಗೆ ಸಂದರ್ಶನ ನೀಡಿದ ವೇಳೆ ಅವರು ಈ ರೀತಿಯ ಪ್ರಸ್ತಾಪ ಮಾಡಿದ್ದಾರೆ. “ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದಲೂ ಕಾಂಗ್ರೆಸ್‌ ಹಿಂದು ವಿರೋಧಿ ಎಂಬಂತೆ ಬ್ರ್ಯಾಂಡ್‌ ಮಾಡಲಾಗುತ್ತಿದೆ. ಅಷ್ಟಕ್ಕೂ ನಮ್ಮ ಪಕ್ಷದ ದೊಡ್ಡ ನಾಯಕ ಯಾರು? ಮಹಾತ್ಮ ಗಾಂಧೀಜಿ ಅವರು ನಮ್ಮ ಪಕ್ಷದ ಧುರೀಣರು. ಸತ್ಯ ಹಾಗೂ ಅಹಿಂಸೆಯ ಆಧಾರದ ಮೇಲೆ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಯಿತು. ಸತ್ಯಮೇವ ಜಯತೆ ಎಂಬ ತತ್ವದಂತೆ ಹೋರಾಟ ಮಾಡಲಾಯಿತು. ಹಿಂದು ಧರ್ಮದ ಬೋಧನೆ, ಆಶಯಗಳಂತೆ ಹೋರಾಟ ಮಾಡಲಾಯಿತು” ಎಂದು ಹೇಳಿದರು.

“ಸ್ವಾತಂತ್ರ್ಯ ಹೋರಾಟದ ವೇಳೆ ದೇಶಕ್ಕಾಗಿ ಎಲ್ಲರೂ ತ್ಯಾಗ ಮಾಡಿದರು. ಜವಾಹರ ಲಾಲ್‌ ನೆಹರು ಸೇರಿ ಹಲವು ನಾಯಕರು 13-14 ವರ್ಷ ಜೈಲು ಶಿಕ್ಷೆ ಅನುಭವಿಸಿದರು. ಮಹಾತ್ಮ ಗಾಂಧೀಜಿ ಅವರಿಗೆ ಗುಂಡು ತಗುಲಿ, ಅವರು ಇನ್ನೇನು ಪ್ರಾಣ ಬಿಡಬೇಕು ಎನ್ನುವ ಮೊದಲು, ಅವರು ಹೇ ರಾಮ್‌ ಎಂದು ಹೇಳಿದ್ದರು. ಇಷ್ಟೆಲ್ಲ ಇರುವಾಗ ಕಾಂಗ್ರೆಸ್‌ ಹೇಗೆ ಹಿಂದು ವಿರೋಧಿಯಾಗುತ್ತದೆ? ಖಂಡಿತವಾಗಿಯೂ ನಾವು ಹಿಂದು ವಿರೋಧಿಗಳು ಅಲ್ಲ. ರಾಹುಲ್‌ ಗಾಂಧಿ ಅವರು ಬೇರೆಯವರಿಗಿಂತ ಹಿಂದುತ್ವವನ್ನು ಚೆನ್ನಾಗಿ ಅರ್ಥ ಮಾಡಿಕೊಂಡಿದ್ದಾರೆ” ಎಂದು ಸಂದರ್ಶನದ ವೇಳೆ ಪ್ರಿಯಾಂಕಾ ವಾದ್ರಾ ಸ್ಪಷ್ಟಪಡಿಸಿದ್ದಾರೆ.

ಅಯೋಧ್ಯೆಯ ರಾಮಮಂದಿರ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಕಾಂಗ್ರೆಸ್‌ ತೆರಳದಿರುವ ಕುರಿತು ಬಿಜೆಪಿ ಆರೋಪಗಳ ಬಗೆಗಿನ ಪ್ರಶ್ನೆಗೂ ಪ್ರಿಯಾಂಕಾ ವಾದ್ರಾ ಉತ್ತರಿಸಿದರು. “ಬಿಜೆಪಿಯು ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಆಹ್ವಾನ ಪಡೆಯಿತು. ಇದಾದ ಬಳಿಕ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮವನ್ನು ರಾಜಕೀಯ ಕಾರಣಗಳಿಗಾಗಿ ಬಳಸಿಕೊಳ್ಳಲಾಯಿತು. ಹಾಗಾಗಿ, ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಕಾಂಗ್ರೆಸ್‌ ಹೋಗದಿರುವುದು ತಪ್ಪು ನಿರ್ಧಾರ ಎಂಬುದಾಗಿ ಹೇಳಲು ಆಗುವುದಿಲ್ಲ” ಎಂದು ಸ್ಪಷ್ಟಪಡಿಸಿದರು. “ದೇಶದಲ್ಲಿ ಧರ್ಮ ಸೇರಿ ಹಲವು ಸೂಕ್ಷ್ಮ ವಿಚಾರಗಳನ್ನು ಬಿಜೆಪಿ, ನರೇಂದ್ರ ಮೋದಿ ರಾಜಕೀಯಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ. ಆದರೆ, ಧರ್ಮರಹಿತವಾಗಿ ಎಲ್ಲರಿಗೂ ಯೋಜನೆಗಳನ್ನು ಕಲ್ಪಿಸುವುದು ಕಾಂಗ್ರೆಸ್‌ ಗ್ಯಾರಂಟಿಯಾಗಿದೆ” ಎಂದರು.

ಇದನ್ನೂ ಓದಿ: Kangana Ranaut: ಚುನಾವಣೆಯಲ್ಲಿ ಗೆದ್ದರೆ ನಟನೆಗೆ ವಿದಾಯ; ನಟಿ ಕಂಗನಾ ರಣಾವತ್‌ ಘೋಷಣೆ

Continue Reading

ದೇಶ

Kangana Ranaut: ಚುನಾವಣೆಯಲ್ಲಿ ಗೆದ್ದರೆ ನಟನೆಗೆ ವಿದಾಯ; ನಟಿ ಕಂಗನಾ ರಣಾವತ್‌ ಘೋಷಣೆ

Kangana Ranaut: ಕಂಗನಾ ರಣಾವತ್‌ ಅವರ ಬಹುನಿರೀಕ್ಷಿತ ಸಿನಿಮಾ ಎಮರ್ಜನ್ಸಿ ಬಿಡುಗಡೆಗೆ ಸಿದ್ಧವಾಗುತ್ತಿದೆ. ತಾವೇ ನಿರ್ದೇಶಿಸಿದ ಸಿನಿಮಾದಲ್ಲಿ ಕಂಗನಾ ರಣಾವತ್‌ ಅವರು ಇಂದಿರಾ ಗಾಂಧಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸಿನಿಮಾ ಬಿಡುಗಡೆಯ ದಿನಾಂಕವನ್ನು ಮುಂದೂಡಲಾಗಿದೆ ಎಂದು ಘೋಷಿಸಿದರೂ ಸಿನಿಮಾ ಬಗ್ಗೆ ಹೆಚ್ಚಿನ ನಿರೀಕ್ಷೆ ಇದೆ. ಇದರ ಬೆನ್ನಲ್ಲೇ ಅವರು, ಚುನಾವಣೆಯಲ್ಲಿ ಗೆದ್ದರೆ ನಟನೆ ಬಿಡುವುದಾಗಿ ಘೋಷಿಸಿದ್ದಾರೆ.

VISTARANEWS.COM


on

Kangana Ranaut
Koo

ನವದೆಹಲಿ: ಬಾಲಿವುಡ್‌ ನಟಿ ಕಂಗನಾ ರಣಾವತ್‌ (Kangana Ranaut) ಅವರು ರಾಜಕೀಯಕ್ಕೆ ಧುಮುಕಿದ್ದು, ಹಿಮಾಚಲ ಪ್ರದೇಶದ (Himachal Pradesh) ಮಂಡಿ (Mandi) ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಜೂನ್‌ 1ರಂದು ಮಂಡಿ ಕ್ಷೇತ್ರದಲ್ಲಿ ಮತದಾನ (Lok Sabha Election 2024) ನಡೆಯುವ ಕಾರಣ ಅಬ್ಬರದ ಪ್ರಚಾರದಲ್ಲಿ ತೊಡಗಿದ್ದಾರೆ. ಇದರ ಬೆನ್ನಲ್ಲೇ, ಕಂಗನಾ ರಣಾವತ್‌ ಅವರು ಮಹತ್ವದ ಘೋಷಣೆ ಮಾಡಿದ್ದಾರೆ. “ಲೋಕಸಭೆ ಚುನಾವಣೆಯಲ್ಲಿ ನಾನು ಗೆದ್ದರೆ ನಟನೆಯನ್ನು ಬಿಟ್ಟುಬಿಡುತ್ತೇನೆ” ಎಂಬುದಾಗಿ ಹೇಳಿದ್ದಾರೆ.

ಆಜ್‌ ತಕ್‌ ಸುದ್ದಿವಾಹಿನಿಗೆ ಸಂದರ್ಶನ ನೀಡುವ ವೇಳೆ ಕಂಗನಾ ರಣಾವತ್‌ ಅವರು ಈ ಘೋಷಣೆ ಮಾಡಿದ್ದಾರೆ. “ನೀವು ಮಂಡಿ ಲೋಕಸಭೆಯಲ್ಲಿ ಗೆಲುವು ಸಾಧಿಸಿದರೆ ಏನೆಲ್ಲ ಮಾಡುತ್ತೀರಿ” ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಹೌದು, ಮಂಡಿಯಲ್ಲಿ ಗೆಲುವು ಸಾಧಿಸಿದ ಬಳಿಕ ನಾನು ಸಿನಿಮಾಗಳಲ್ಲಿ ನಟಿಸುವುದಿಲ್ಲ. ಆದರೆ, ನಮ್ಮ ಬಳಿ ತುಂಬ ಒಳ್ಳೆಯ ನಟಿ ಇದ್ದಾರೆ. ದಯಮಾಡಿ ನೀವು ಬಿಟ್ಟು ಹೋಗಬೇಡಿ ಎಂಬುದಾಗಿ ಹೆಚ್ಚಿನ ನಿರ್ದೇಶಕರು ಹೇಳುತ್ತಾರೆ. ಹೌದು, ನಾನೊಬ್ಬ ಒಳ್ಳೆ ನಟಿ ನಿಜ. ಇದೇ ಮೆಚ್ಚುಗೆಯನ್ನು ಸ್ವೀಕರಿಸಿ ನಾನು ಮುಂದೆ ಹೋಗುತ್ತೇನೆ” ಎಂದು ತಿಳಿಸಿದ್ದಾರೆ. ಆ ಮೂಲಕ ಬಾಲಿವುಡ್‌, ನಟನೆ ತ್ಯಜಿಸುವುದನ್ನು ಅವರು ದೃಢಪಡಿಸಿದ್ದಾರೆ.

ಕಂಗನಾ ರಣಾವತ್‌ ಅವರ ಬಹುನಿರೀಕ್ಷಿತ ಸಿನಿಮಾ ಎಮರ್ಜನ್ಸಿ ಬಿಡುಗಡೆಗೆ ಸಿದ್ಧವಾಗುತ್ತಿದೆ. ತಾವೇ ನಿರ್ದೇಶಿಸಿದ ಸಿನಿಮಾದಲ್ಲಿ ಕಂಗನಾ ರಣಾವತ್‌ ಅವರು ಇಂದಿರಾ ಗಾಂಧಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸಿನಿಮಾ ಬಿಡುಗಡೆಯ ದಿನಾಂಕವನ್ನು ಮುಂದೂಡಲಾಗಿದೆ ಎಂದು ಘೋಷಿಸಿದರೂ ಸಿನಿಮಾ ಬಗ್ಗೆ ಹೆಚ್ಚಿನ ನಿರೀಕ್ಷೆ ಇದೆ. ಪಂಗಾ, ಮಣಿಕರ್ಣಿಕಾ: ದಿ ಕ್ವೀನ್‌ ಆಫ್‌ ಜಾನ್ಸಿ, ಜಡ್ಜ್‌ಮೆಂಟಲ್‌ ಹೈ ಕ್ಯಾ, ತನು ವೆಡ್ಸ್‌ ಮನು ರಿಟರ್ನ್ಸ್‌ ಸೇರಿ ಹಲವು ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಇವರು ಅಭಿನಯದ ತಲೈವಿ ಸಿನಿಮಾಗೆ ಭಾರಿ ಮೆಚ್ಚುಗೆಯೂ ವ್ಯಕ್ತವಾಗಿತ್ತು.

91 ಕೋಟಿ ರೂ. ಆಸ್ತಿಗೆ ಒಡತಿ

ಮಂಡಿ ಲೋಕಸಭೆ ಕ್ಷೇತ್ರದಲ್ಲಿ ಕಂಗನಾ ರಣಾವತ್‌ ಅವರು ನಾಮಪತ್ರ ಸಲ್ಲಿಸಿದ್ದಾರೆ. ಇವರು ಚುನಾವಣಾ ಅಫಿಡವಿಟ್ ನಲ್ಲಿ 91 ಕೋಟಿ ರೂ.ಗಳ ಆಸ್ತಿಯನ್ನು ಘೋಷಿಸಿದ್ದಾರೆ. ಅವರ ಆಸ್ತಿಯಲ್ಲಿ 28.7 ಕೋಟಿ ರೂ.ಗಳ ಚರಾಸ್ತಿ ಮತ್ತು 62.9 ಕೋಟಿ ರೂ.ಗಳ ಸ್ಥಿರಾಸ್ತಿ ಸೇರಿವೆ. ಅವರ ಬಳಿ 5 ಕೋಟಿ ಮೌಲ್ಯದ 6.7 ಕೆಜಿ ಚಿನ್ನ, 50 ಲಕ್ಷ ಮೌಲ್ಯದ 60 ಕೆಜಿ ಬೆಳ್ಳಿ, 3 ಕೋಟಿ ಮೌಲ್ಯದ 14 ಕ್ಯಾರೆಟ್ ವಜ್ರದ ಆಭರಣಗಳಿವೆ. 2 ಲಕ್ಷ ನಗದು ಮತ್ತು ಸುಮಾರು 1.35 ಕೋಟಿ ರೂ.ಗಳ ಬ್ಯಾಂಕ್ ಬ್ಯಾಲೆನ್ಸ್ ಹೊಂದಿರುವುದಾಗಿ ನಟಿ ಹಾಗೂ ರಾಜಕಾರಣಿ ಘೋಷಿಸಿದ್ದಾರೆ.

ಇದನ್ನೂ ಓದಿ: Kangana Ranaut: ಬಾಲಿವುಡ್‌ ʼಕ್ವೀನ್‌ʼ ಕಂಗನಾ ಹೆಸರಿನಲ್ಲಿದೆ 50 ಎಲ್ಐಸಿ ಪಾಲಿಸಿ; ಏಜೆಂಟ್‌ ಅತ್ಯಂತ ಲಕ್ಕಿ ಎಂದ ನೆಟ್ಟಿಗರು

Continue Reading

ದೇಶ

ಪ್ರಚಾರದ ವೇಳೆ ರಾಹುಲ್‌ ಗಾಂಧಿಯಿಂದ ಚೀನಾ ಸಂವಿಧಾನ ಪ್ರತಿ ಪ್ರದರ್ಶನ; ಹಿಮಂತ ಬಿಸ್ವಾ ಗಂಭೀರ ಆರೋಪ

ರಾಹುಲ್‌ ಗಾಂಧಿ ಅವರು ತಾವು ಭಾಗವಹಿಸುವ ಸಮಾವೇಶ, ಸಭೆಗಳಲ್ಲಿ ಜನರಿಗೆ ಚೀನಾ ಸಂವಿಧಾನದ ಪ್ರತಿ ಪ್ರದರ್ಶಿಸುತ್ತಿದ್ದಾರೆ. ಭಾರತ ಸಂವಿಧಾನದ ಮೂಲ ಪ್ರತಿಯು ನೀಲಿ ಕವರ್‌ ಹೊಂದಿದೆ. ಚೀನಾ ಸಂವಿಧಾನದ ಮೂಲ ಪ್ರತಿಯು ಕೆಂಪು ಕವರ್‌ ಹೊಂದಿದೆ ಎಂಬುದಾಗಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಆರೋಪಿಸಿದ್ದಾರೆ. ಇದಕ್ಕೆ ಕಾಂಗ್ರೆಸ್‌ ತಿರುಗೇಟು ನೀಡಿದೆ.

VISTARANEWS.COM


on

Constitution
Koo

ನವದೆಹಲಿ: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಬಿಜೆಪಿ, ಕಾಂಗ್ರೆಸ್‌ ಸೇರಿ ಎಲ್ಲ ಪಕ್ಷಗಳ ನಾಯಕರ ಹೇಳಿಕೆಗಳು ಮೊನಚಾಗಿವೆ. ಆರೋಪ, ಪ್ರತ್ಯಾರೋಪ, ವಾಗ್ದಾಳಿ, ವಾಗ್ಬಾಣಗಳ ಜತೆಗೆ ವೈಯಕ್ತಿಕ ನಿಂದನೆ, ಆರೋಪಗಳು ಕೂಡ ಕೇಳಿಬರುತ್ತಿವೆ. ಇದರ ಬೆನ್ನಲ್ಲೇ, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ (Himanta Biswa Sarma) ಅವರು ರಾಹುಲ್‌ ಗಾಂಧಿ (Rahul Gandhi) ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. “ರಾಹುಲ್‌ ಗಾಂಧಿ ಅವರು ಸಭೆ-ಸಮಾವೇಶಗಳಲ್ಲಿ ಜನರಿಗೆ ಚೀನಾ ಸಂವಿಧಾನ ಪ್ರದರ್ಶಿಸುತ್ತಿದ್ದಾರೆ” ಎಂದು ಸಿಎಂ ಆರೋಪಿಸಿದ್ದಾರೆ. ಇದು ಈಗ ಬಿಜೆಪಿ ಹಾಗೂ ಕಾಂಗ್ರೆಸ್‌ ನಾಯಕರ ಮಧ್ಯೆ ವಾಕ್ಸಮರಕ್ಕೆ ಕಾರಣವಾಗಿದೆ.

“ರಾಹುಲ್‌ ಗಾಂಧಿ ಅವರು ತಾವು ಭಾಗವಹಿಸುವ ಸಮಾವೇಶ, ಸಭೆಗಳಲ್ಲಿ ಜನರಿಗೆ ಚೀನಾ ಸಂವಿಧಾನದ ಪ್ರತಿ ಪ್ರದರ್ಶಿಸುತ್ತಿದ್ದಾರೆ. ಭಾರತ ಸಂವಿಧಾನದ ಮೂಲ ಪ್ರತಿಯು ನೀಲಿ ಕವರ್‌ ಹೊಂದಿದೆ. ಚೀನಾ ಸಂವಿಧಾನದ ಮೂಲ ಪ್ರತಿಯು ಕೆಂಪು ಕವರ್‌ ಹೊಂದಿದೆ. ರಾಹುಲ್‌ ಗಾಂಧಿ ಅವರು ಚೀನಾ ಸಂವಿಧಾನವನ್ನು ಜನರಿಗೆ ಪ್ರದರ್ಶಿಸುತ್ತಿದ್ದಾರೆಯೇ? ಈ ಕುರಿತು ಪರಿಶೀಲನೆ ಆಗಬೇಕು” ಎಂಬುದಾಗಿ ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಅಸ್ಸಾಂ ಮುಖ್ಯಮಂತ್ರಿ ಪೋಸ್ಟ್‌ ಮಾಡಿದ್ದಾರೆ.

“ನಮ್ಮ ಸಂವಿಧಾನವು ನೀಲಿ ಕವರ್‌ ಹೊಂದಿದ್ದು, ಮೂಲಭೂತ ಕರ್ತವ್ಯಗಳ ಬಗ್ಗೆ ಉಲ್ಲೇಖವಿದೆ. ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರಬೇಕು ಎಂಬುದಾಗಿ ಮೂಲಭೂತ ಕರ್ತವ್ಯವು ತಿಳಿಸುತ್ತದೆ. ಆದರೆ, ರಾಹುಲ್‌ ಗಾಂಧಿ ಅವರು ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರಲು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇದೇ ಕಾರಣಕ್ಕಾಗಿ ಅವರು ಚೀನಾ ಸಂವಿಧಾನದ ಪ್ರತಿಯನ್ನು ಹಿಡಿದುಕೊಂಡು ತಿರುಗಾಡುತ್ತಿರಬಹುದು” ಎಂದು ಕೂಡ ಹಿಮಂತ ಬಿಸ್ವಾ ಶರ್ಮಾ ಆರೋಪಿಸಿದ್ದಾರೆ.

ಕಾಂಗ್ರೆಸ್‌ ತಿರುಗೇಟು

ಹಿಮಂತ ಬಿಸ್ವಾ ಶರ್ಮಾ ಅವರ ಹೇಳಿಕೆಗೆ ಕಾಂಗ್ರೆಸ್‌ ಶಾಸಕ ಅಬ್ದುಲ್‌ ರಶೀದ್‌ ಮೊಂಡಲ್‌ ತಿರುಗೇಟು ನೀಡಿದ್ದಾರೆ. “ಭಾರತ ಸಂವಿಧಾನದ ಕವರ್‌ಗಳ ಬಣ್ಣವು ಬೇರೆ ಬೇರೆ ಇದೆ. ಕವರ್‌ ಬಣ್ಣ ಬೇರೆಯಾದರೂ ಸಂವಿಧಾನದ ಆಶಯಗಳು ಒಂದೇ ಆಗಿವೆ. ಅಷ್ಟಕ್ಕೂ ನಾವು ಬಣ್ಣವನ್ನು ಓದುವುದಿಲ್ಲ. ಸಂವಿಧಾನದ ಆಶಯ, ಉದ್ದೇಶಗಳನ್ನು ಪಾಲಿಸುತ್ತೇವೆ” ಎಂದಿದ್ದಾರೆ. “ಭಾರತ ಸಂವಿಧಾನದ ಪಾಕೆಟ್‌ ಎಡಿಷನ್‌ನ ಪ್ರತಿಯು ನೀಲಿ ಬಣ್ಣದ ಕವರ್‌ ಹೊಂದಿದೆ” ಎಂದು ಕೂಡ ಕೆಲ ಜಾಲತಾಣಿಗರು ಹಿಮಂತ ಬಿಸ್ವಾ ಶರ್ಮಾ ಅವರ ಪೋಸ್ಟ್‌ಗೆ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: Himanta Biswa Sarma: ಬಿಜೆಪಿಗೆ ಏಕೆ 400 ಸೀಟುಗಳು ಬೇಕೇಬೇಕು? ಹಿಮಂತ ಬಿಸ್ವ ಶರ್ಮಾ ಉತ್ತರ ಹೀಗಿದೆ!

Continue Reading
Advertisement
Swati Maliwal Case
ದೇಶ4 mins ago

Swati Maliwal case: ಸ್ವಾತಿ ಮಲಿವಾಲ್‌ ಹಲ್ಲೆ ಕೇಸ್‌; ಕೇಜ್ರಿವಾಲ್‌ ಆಪ್ತ 5ದಿನ ಪೊಲೀಸ್‌ ಕಸ್ಟಡಿಗೆ

IPL 2024
ಐಪಿಎಲ್ 20246 mins ago

IPL 2024: ರಾಯಲ್‌ ಆಗಿ ಪ್ಲೇ ಆಫ್‌ ಪ್ರವೇಶಿಸಿದ ಬೆಂಗಳೂರು; ಮುಗಿಲು ಮುಟ್ಟಿದ ಸಂಭ್ರಮ

New Criminal Laws
ದೇಶ13 mins ago

New Criminal Laws: ಜುಲೈ 1ರಿಂದ ಜಾರಿಗೆ ಬರಲಿವೆ ಮೂರು ಹೊಸ ಕ್ರಿಮಿನಲ್ ಕಾನೂನುಗಳು; ಏನಿದರ ಹೈಲೈಟ್ಸ್?

IPL 2024
ಕ್ರೀಡೆ20 mins ago

IPL 2024 : ಗೆಲುವೊಂದೇ ಗುರಿ; ಅಂಪೈರ್​ಗಳ ಜತೆ ಮತ್ತೆ ವಾಗ್ವಾದ ನಡೆಸಿದ ಕೊಹ್ಲಿ

IPL 2024
ಪ್ರಮುಖ ಸುದ್ದಿ35 mins ago

IPL 2024 : ಕ್ಯಾಚ್​ ಆಫ್​​ ದಿ ಸೀಸನ್​, ಫಾಫ್​ ಡು ಪ್ಲೆಸಿಸ್​ ಹಿಡಿದ ಅದ್ಭುತ್​ ಕ್ಯಾಚ್​​ನ ವಿಡಿಯೊ ಇಲ್ಲಿದೆ

Virat kohli
ಕ್ರೀಡೆ51 mins ago

Virat kohli : ಡ್ಯಾರಿಲ್​ ಮಿಚೆಲ್ ಕ್ಯಾಚ್ ಹಿಡಿದ ಬಳಿಕ ಕೊಹ್ಲಿಯ ಆಕ್ರಮಣಕಾರಿ ಸಂಭ್ರಮ ಹೀಗಿತ್ತು; ಇಲ್ಲಿದೆ ವಿಡಿಯೊ

Tips for Mothers
ಆರೋಗ್ಯ53 mins ago

Tips for Mothers: ಆಹಾರ- ಆರೋಗ್ಯ; ದುಡಿಯುವ ಬ್ಯುಸಿ ತಾಯಂದಿರಿಗೆ ಇಲ್ಲಿದೆ ಕಿವಿಮಾತು!

virat kohli
ಕ್ರಿಕೆಟ್1 hour ago

Virat kohli : ಕೇಕೆ ಹಾಕುತ್ತಿದ್ದ ಸಿಎಸ್​ಕೆ ಅಭಿಮಾನಿಗಳ ಬಾಯ್ಮುಚ್ಚಿಸಿದ ಕೊಹ್ಲಿ; ಇಲ್ಲಿದೆ ವಿಡಿಯೊ

IPL 2024
ಕ್ರಿಕೆಟ್1 hour ago

IPL 2024 : ಚೆನ್ನೈ ಮಣಿಸಿ ಪ್ಲೇಆಫ್​ಗೇರುವ ಮುನ್ನವೇ ಸಿಕ್ಸರ್​​ಗಳ ವಿಶೇಷ ದಾಖಲೆ ಬರೆದ ಆರ್​ಸಿಬಿ

Karnataka weather Forecast
ಮಳೆ1 hour ago

Karnataka Weather : ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆ; ಆರೆಂಜ್‌, ಯೆಲ್ಲೋ ಎಚ್ಚರಿಕೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ1 day ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ2 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ3 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು3 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ4 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ4 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ5 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20245 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌