Lok Sabha Election 2024: ಡಿಕೆಶಿ ರಾಜಕೀಯ, ಸಂವಹನ ಕಾರ್ಯದರ್ಶಿಯಾಗಿ ದೀಪಕ್‌ ತಿಮ್ಮಯ್ಯ ನೇಮಕ; ಕಾಂಗ್ರೆಸ್‌ ಸೇರಿದ ಪತ್ರಕರ್ತ - Vistara News

Lok Sabha Election 2024

Lok Sabha Election 2024: ಡಿಕೆಶಿ ರಾಜಕೀಯ, ಸಂವಹನ ಕಾರ್ಯದರ್ಶಿಯಾಗಿ ದೀಪಕ್‌ ತಿಮ್ಮಯ್ಯ ನೇಮಕ; ಕಾಂಗ್ರೆಸ್‌ ಸೇರಿದ ಪತ್ರಕರ್ತ

Lok Sabha Election 2024: ಮಾಧ್ಯಮ ಕ್ಷೇತ್ರದಲ್ಲಿ ಸುಮಾರು 30-40 ವರ್ಷಗಳ ಅನುಭವವಿರುವ ದೀಪಕ್ ತಿಮ್ಮಯ್ಯ ಅವರು ತಮ್ಮದೇ ಆದ ಸಂಸ್ಥೆ ಮೂಲಕ ಮಕ್ಕಳನ್ನು ನಾಯಕರನ್ನಾಗಿ ರೂಪಿಸುವ ಕೆಲಸ ಮಾಡಿಕೊಂಡು ಬಂದಿದ್ದಾರೆ. ನಾಯಕರನ್ನು ಸೃಷ್ಟಿಸುವವನು ನಾಯಕನೇ ಹೊರತು ಹಿಂಬಾಲಕರನ್ನು ಸೃಷ್ಟಿಸುವವನು ಅಲ್ಲ ಎಂಬಂತೆ ಕೆಲಸ ಮಾಡುತ್ತಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತ, ವಿಚಾರವಾಗಿ ಅವರು ನನಗೆ ಅನೇಕ ಉತ್ತಮ ಸಲಹೆಗಳನ್ನು ನೀಡಿದ್ದಾರೆ. ಹೀಗಾಗಿ ಅವರಿಗೆ ಕಾಂಗ್ರೆಸ್ ಪಕ್ಷದ ಭಾಗವಾಗುವಂತೆ ಮನವಿ ಮಾಡಿದ್ದೆ. ಅದನ್ನು ಒಪ್ಪಿ ಅವರು ಇಂದು ಪಕ್ಷಕ್ಕೆ ಸೇರ್ಪಡೆ ಆಗಿದ್ದು, ಈ ಜವಾಬ್ದಾರಿ ತೆಗೆದುಕೊಳ್ಳುತ್ತಿದ್ದಾರೆ ಎಂದು ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

VISTARANEWS.COM


on

Lok Sabha Election 2024 Deepak Thimmaiah appointed as DK Shivakumar political and communications secretary
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹೊತ್ತಿನಲ್ಲಿ ಹಿರಿಯ ಪತ್ರಕರ್ತ ದೀಪಕ್ ತಿಮ್ಮಯ್ಯ ಅವರನ್ನು ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು. ಅವರು ಪಕ್ಷವನ್ನು ಯಾಕೆ ಸೇರಿದರು ಎಂಬ ಬಗ್ಗೆ ಡಿಕೆಶಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಸದಾಶಿವನಗರ ನಿವಾಸದಲ್ಲಿ ಗುರುವಾರ ದೀಪಕ್ ತಿ ಮ್ಮಯ್ಯಅವರಿಗೆ ಕಾಂಗ್ರೆಸ್ ಪಕ್ಷದ ಶಾಲು ಹೊದೆಸಿ, ಹೂಗುಚ್ಛ ನೀಡಿ ಪಕ್ಷಕ್ಕೆ ಬರಮಾಡಿಕೊಂಡ ಶಿವಕುಮಾರ್ ನಂತರ ಮಾಧ್ಯಮಗಳ ಜತೆ ಮಾತನಾಡಿ, ಹಿರಿಯ ಪತ್ರಕರ್ತರಾದ ದೀಪಕ್ ತಿಮ್ಮಯ್ಯ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷರ ರಾಜಕೀಯ ಹಾಗೂ ಸಂವಹನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದ್ದು, ಅವರಿಗೆ ಕಾಂಗ್ರೆಸ್ ಕಚೇರಿಯಲ್ಲಿ ಕಚೇರಿ ನೀಡಲಾಗುವುದು. ಪಕ್ಷದ ವಿಚಾರವಾಗಿ ಯಾರೇ ನನ್ನನ್ನು ಸಂಪರ್ಕ ಮಾಡಲು ಅವರು ಸಹಕಾರ ನೀಡಲಿದ್ದಾರೆ ಎಂದು ಹೇಳಿದರು.

ಮಾಧ್ಯಮ ಕ್ಷೇತ್ರದಲ್ಲಿ ಸುಮಾರು 30-40 ವರ್ಷಗಳ ಅನುಭವವಿರುವ ದೀಪಕ್ ತಿಮ್ಮಯ್ಯ ಅವರು ತಮ್ಮದೇ ಆದ ಸಂಸ್ಥೆ ಮೂಲಕ ಮಕ್ಕಳನ್ನು ನಾಯಕರನ್ನಾಗಿ ರೂಪಿಸುವ ಕೆಲಸ ಮಾಡಿಕೊಂಡು ಬಂದಿದ್ದಾರೆ. ನಾಯಕರನ್ನು ಸೃಷ್ಟಿಸುವವನು ನಾಯಕನೇ ಹೊರತು ಹಿಂಬಾಲಕರನ್ನು ಸೃಷ್ಟಿಸುವವನು ಅಲ್ಲ ಎಂಬಂತೆ ಕೆಲಸ ಮಾಡುತ್ತಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತ, ವಿಚಾರವಾಗಿ ಅವರು ನನಗೆ ಅನೇಕ ಉತ್ತಮ ಸಲಹೆಗಳನ್ನು ನೀಡಿದ್ದಾರೆ. ಹೀಗಾಗಿ ಅವರಿಗೆ ಕಾಂಗ್ರೆಸ್ ಪಕ್ಷದ ಭಾಗವಾಗುವಂತೆ ಮನವಿ ಮಾಡಿದ್ದೆ. ಅದನ್ನು ಒಪ್ಪಿ ಅವರು ಇಂದು ಪಕ್ಷಕ್ಕೆ ಸೇರ್ಪಡೆ ಆಗಿದ್ದು, ಈ ಜವಾಬ್ದಾರಿ ತೆಗೆದುಕೊಳ್ಳುತ್ತಿದ್ದಾರೆ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

ನಿರ್ಮಲಾನಂದನಾಥ ಶ್ರೀ ಹೆಸರನ್ನು ರಾಜಕೀಯಕ್ಕೆ ಎಳೆದಿಲ್ಲ: ಡಿಕೆಶಿ ಸ್ಪಷ್ಟನೆ

ಜನರು ದಡ್ಡರಲ್ಲ, ತಮ್ಮ ಬದುಕು ಯಾರು ಕಟ್ಟಿಕೊಡುತ್ತಾರೋ ಅವರಿಗೆ ಬೆಂಬಲ ನೀಡುತ್ತಾರೆ. ಕಾಂಗ್ರೆಸ್ (Congress Karnataka) ಪಕ್ಷ ಜನರ ಬದುಕು ಕಟ್ಟಿಕೊಡುವ ಕೆಲಸ ಮಾಡುತ್ತಿದ್ದು, ಒಕ್ಕಲಿಗರೂ ಸೇರಿದಂತೆ ಎಲ್ಲ ವರ್ಗದ ಜನ ಕಾಂಗ್ರೆಸ್‌ಗೆ ಬೆಂಬಲ ನೀಡಲಿದ್ದಾರೆ. ಇನ್ನು ಆದಿ ಚುಂಚನಗಿರಿ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮೀಜಿ (Nirmalanandanatha Swamiji) ಹೆಸರನ್ನು ನಾನು ರಾಜಕೀಯಕ್ಕೆ ಎಳೆದು ತರುತ್ತಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಸ್ಪಷ್ಟನೆ ನೀಡಿದರು.

ಸದಾಶಿವನಗರ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ವಿಧಾನಸಭೆ ಚುನಾವಣೆ ವೇಳೆ ಶೇ.5ರಷ್ಟು ಒಕ್ಕಲಿಗ ಮತಗಳು ಕಾಂಗ್ರೆಸ್ ಕಡೆ ವಾಲಿದ್ದವು. ಈ ಬಾರಿ ಒಕ್ಕಲಿಗರು ಯಾರನ್ನು ಬೆಂಬಲಿಸಲಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದರು.

ಒಕ್ಕಲಿಗರಾಗಲಿ, ಬೇರೆ ಸಮುದಾಯದವರಾಗಲಿ ಯಾರೂ ದಡ್ಡರಲ್ಲ. ತಮಗೆ ಯಾರು ಅನುಕೂಲ ಮಾಡಿಕೊಡಲಿದ್ದಾರೆ ಹಾಗೂ ದೇಶಕ್ಕೆ ಯಾರು ಸೂಕ್ತ ಎಂದು ನೋಡುತ್ತಾರೆ. ತಮಗೆ, ರಾಜ್ಯಕ್ಕೆ, ದೇಶಕ್ಕೆ ಯಾರು ಉತ್ತಮರು ಎಂದು ಜನ ಆಲೋಚನೆ ಮಾಡುತ್ತಾರೆ. ಜನ ಅವರ ಬದುಕು ನೋಡುತ್ತಾರೆ ಹೊರತು, ಭಾವನೆ ನೋಡುವುದಿಲ್ಲ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

ಇದನ್ನೂ ಓದಿ: Lok Sabha Election 2024: ಸುಳ್ಳು ಹೇಳಿದ ರಾಹುಲ್‌ ಗಾಂಧಿ ಕ್ಷಮೆ ಕೋರಲಿ: ಬಿ.ಎಸ್.‌ ಯಡಿಯೂರಪ್ಪ ಆಗ್ರಹ

ನಾನು ಕೇಳಿದ್ದು ಹಾಗಲ್ಲ, ಹೀಗೆ

ಸರ್ಕಾರ ಬೀಳಿಸಿದವರನ್ನೇ ನಿರ್ಮಲಾನಂದನಾಥ ಸ್ವಾಮೀಜಿಗಳ ಬಳಿ ಕರೆದುಕೊಂಡು ಹೋದರೆ ಸಮಾಜಕ್ಕೆ ಏನು ಉತ್ತರ ನೀಡುತ್ತಾರೆ? ಈ ವಿಚಾರವಾಗಿ ಸ್ವಾಮೀಜಿಗಳು ಉತ್ತರ ನೀಡಬೇಕು ಎಂದು ನಾನು ಕೇಳಿಲ್ಲ. ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹಾಗೂ ಕೆಲವು ಮಂತ್ರಿಗಳು ಸ್ವಾಮೀಜಿಗಳ ಕಾರ್ಯಕ್ರಮಕ್ಕೆ ಹೋಗಿದ್ದರು. ಅವರು ವಾಪಸ್ ಬರುವ ವೇಳೆಗೆ ಆಪರೇಷನ್ ಕಮಲ ನಡೆದಿತ್ತು. ಸ್ವಾಮೀಜಿಗಳಿಗೂ ಒಕ್ಕಲಿಗ ವ್ಯಕ್ತಿ ಸಿಎಂ ಆಗಿರುವ ಬಗ್ಗೆ ಅಭಿಮಾನ ಇರುತ್ತದೆ. ಆದರೆ, ಈಗ ಒಕ್ಕಲಿಗ ಸಿಎಂ ಅನ್ನು ತೆಗೆದವರನ್ನೇ ಜತೆಗೆ ಕರೆದುಕೊಂಡು ಹೋದರೆ ಹೇಗೆ? ಸ್ವಾಮೀಜಿಗಳ ಆಶೀರ್ವಾದ ಎಲ್ಲರಿಗೂ ಬೇಕು. ಹೀಗಾಗಿ ಸಚಿವ ಎನ್. ಚೆಲುವರಾಯಸ್ವಾಮಿ (N Chaluvarayaswamy) ಅವರು ನಮ್ಮ ಅಭ್ಯರ್ಥಿಗಳನ್ನು ಕರೆದುಕೊಂಡು ಹೋಗಿದ್ದರು. ಅದೇ ರೀತಿ ಇವರು ಕೂಡ ಆಶೀರ್ವಾದ ಪಡೆಯಲು ಹೋಗಿದ್ದಾರೆ. ಕುಮಾರಸ್ವಾಮಿ, ಡಾ. ಸಿ.ಎನ್.‌ ಮಂಜುನಾಥ್ ಅವರು ಸ್ವಾಮೀಜಿಗಳ ಆಶೀರ್ವಾದ ಕೇಳಿದ್ದರಲ್ಲಿ ತಪ್ಪೇನಿಲ್ಲ. ಆದರೆ, ಸರ್ಕಾರ ತೆಗೆದವರನ್ನೇ ಜತೆಯಲ್ಲಿ ಕರೆದುಕೊಂಡು ಹೋಗಿದ್ದಾರೆ. ಇದರಿಂದ ಅವರು ಸಮಾಜಕ್ಕೆ ಏನು ಉತ್ತರ ನೀಡುತ್ತಾರೆ ಎಂದಷ್ಟೇ ನಾನು ಕೇಳಿದ್ದೇನೆ ಎಂದು ಡಿ.ಕೆ. ಶಿವಕುಮಾರ್‌ ತಿಳಿಸಿದರು.

ಅವರೇ ಜೆಡಿಎಸ್‌ಗೆ ಮುಕ್ತಿ ಕೊಟ್ಟಿದ್ದಾರೆ

ಸ್ವಾಮೀಜಿಗಳು ಕೃಷ್ಣನಂತೆ ಅವರು ಪಾಂಡವರಂತೆ ಇರುವ ಜೆಡಿಎಸ್ ಪರವಾಗಿ ನಿಲ್ಲಲಿದ್ದಾರೆ ಎಂಬ ಹೇಳಿಕೆ ಬಗ್ಗೆ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್‌, ಜೆಡಿಎಸ್ ಎಲ್ಲಿದೆ? ಜೆಡಿಎಸ್‌ಗೆ ಅವರೇ ಮುಕ್ತಿ ಕೊಟ್ಟಿದ್ದಾರೆ. ಜೆಡಿಎಸ್ ಇರಬೇಕು ಎಂಬ ಆಸೆ ನನಗಿದೆ. ಆದರೆ, ಅಳಿಯನನ್ನೇ ಬಿಜೆಪಿಗೆ ಕಳುಹಿಸಿ ಜೆಡಿಎಸ್ ವಿಸರ್ಜನೆ ಮಾಡುವ ಸ್ಥಿತಿಗೆ ಹೋಗಿದ್ದಾರೆ. ನಾವು ಹಿಂದೆ ಒಂದು ತಪ್ಪು ಮಾಡಿದ್ದೆವು. ಆದರೆ, ಈಗ ಅದಕ್ಕಿಂತ ದೊಡ್ಡ ತಪ್ಪು ಜೆಡಿಎಸ್‌ನವರು ಮಾಡಿದ್ದಾರೆ ಎಂದು ಲೇವಡಿ ಮಾಡಿದರು.

ನೀವಾಗಲಿ, ಎಚ್.ಡಿ. ಕುಮಾರಸ್ವಾಮಿ ಅವರಾಗಲಿ ರಾಜಕಾರಣಕ್ಕೆ ಸ್ವಾಮೀಜಿಗಳನ್ನು ಯಾಕೆ ಎಳೆಯುತ್ತಿದ್ದೀರಿ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್‌, ನಾನು ಸ್ವಾಮೀಜಿಗಳನ್ನು ರಾಜಕೀಯಕ್ಕೆ ಎಳೆಯುತ್ತಿಲ್ಲ. ಸ್ವಾಮೀಜಿಗಳಿಗೆ ಕೊಡಬೇಕಾದ ಗೌರವವನು ನಾವು ಕೊಡಬೇಕು ಎಂದು ಹೇಳುತ್ತಿದ್ದೇನೆ ಎಂದು ಡಿ.ಕೆ. ಶಿವಕುಮಾರ್‌ ತಿಳಿಸಿದರು.

ಸರ್ಕಾರವನ್ನು ಒಂದು ಜಾತಿಗೆ ಸೀಮಿತವಾಗಿಸುತ್ತಿರುವುದೇಕೆ ಎಂದು ಕೇಳಿದಾಗ, “ನೀವು ನಾವು ಬೇಡ ಎಂದರೂ ಜಾತಿ ನಮ್ಮನ್ನು ಬಿಡುವುದಿಲ್ಲ. ನಾವು ಅರ್ಜಿ ಹಾಕಿ ಹುಟ್ಟದಿದ್ದರೂ ನಾವು ಸಾಯುವಾಗ ಧರ್ಮ, ಜಾತಿ ಬಂದೇ ಬರುತ್ತದೆ. ಧರ್ಮ ಬೇಡ ಎಂದರೂ ನಾಮಕರಣ ಹಾಗೂ ವಿವಿಧ ಕಾರ್ಯಗಳಲ್ಲಿ ಧರ್ಮ ಅಡಗಿದೆ” ಎಂದರು.

ಮೈತ್ರಿ ಸರ್ಕಾರ ಕೆಡವಲು ಶಾಸಕರನ್ನು ಬಿಜೆಪಿಗೆ ಕಳುಹಿಸಿದವರು ಯಾರು ಎಂಬ ಅಶ್ವತ್ಥ್ ನಾರಾಯಣ ಅವರ ಪ್ರಶ್ನೆಗೆ, “ಯಾರು ಕಳುಹಿಸಿದ್ದಾರೆ ಎಂದು ನನಗೆ ಗೊತ್ತಿಲ್ಲ. ಅವರೇ ಹೇಳಲಿ” ಎಂದು ತಿಳಿಸಿದರು.

ಮೋದಿಗೆ ತಮ್ಮ ಮೇಲೆ ವಿಶ್ವಾಸವಿಲ್ಲ

ಕಾಂಗ್ರೆಸ್ ಪಕ್ಷದಲ್ಲಿ ನಂಬಿಕಸ್ಥ ನಾಯಕರಿಲ್ಲ. ಹೀಗಾಗಿ ರಾಹುಲ್ ಗಾಂಧಿ ಹೆಸರಲ್ಲಿ ಮತ ಕೇಳುತ್ತಿಲ್ಲ ಎಂಬ ಬಿ.ಎಸ್.‌ ಯಡಿಯೂರಪ್ಪ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್‌, ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಹೆಸರು ಹೇಳಿ ಮತ ಕೇಳಲಿಲ್ಲ. ಶಿವಮೊಗ್ಗಕ್ಕೆ ಬಂದಿದ್ದ ಅವರು ಅಭ್ಯರ್ಥಿ ರಾಘವೇಂದ್ರ ಅವರಿಗೆ ಮತ ಕೊಡಿ ಎಂದು ಕೇಳಿದರೇ ಹೊರತು ತಮಗೆ ಕೊಡಿ ಎಂದು ಕೇಳಲೇ ಇಲ್ಲ. ಮೋದಿ ಅವರಿಗೆ ತಮ್ಮ ಮೇಲೆ ವಿಶ್ವಾಸವಿಲ್ಲ. ನಿಮಗೇನಾದರೂ ಅವರ ಪರವಾದ ಅಲೆ ಕಾಣುತ್ತಿದೆಯೇ?” ಎಂದು ಡಿ.ಕೆ. ಶಿವಕುಮಾರ್‌ ಪ್ರಶ್ನೆ ಮಾಡಿದರು.

ಬರ ಪರಿಹಾರ, ತೆರಿಗೆ ಅನ್ಯಾಯದ ಬಗ್ಗೆ ಯಡಿಯೂರಪ್ಪ ಮಾತನಾಡಲಿ

ಎಚ್ಎಎಲ್ ಮುಚ್ಚಲಾಗುತ್ತದೆ ಎಂದಿದ್ದ ರಾಹುಲ್ ಗಾಂಧಿ ಅವರಿಂದ ಡಿ.ಕೆ. ಶಿವಕುಮಾರ್ ಅವರು ಕ್ಷಮೆ ಕೇಳಿಸುತ್ತಾರಾ ಎಂಬ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿಕೆ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಡಿ.ಕೆ. ಶಿವಕುಮಾರ್‌, ಯಡಿಯೂರಪ್ಪ ಅವರು ವಿಷಯಾಂತರ ಮಾಡುವುದು ಬೇಡ. ಯಡಿಯೂರಪ್ಪ ಅವರು ಬರ ಪರಿಹಾರ ವಿಚಾರವಾಗಿ ನಿರ್ಮಲಾ ಸೀತಾರಾಮನ್ ಅವರ ಹೇಳಿಕೆ, ನಮ್ಮ ಬೇಡಿಕೆ, ನರೇಗಾ ಯೋಜನೆಯಲ್ಲಿ ಕೂಲಿ ದಿನಗಳ ಸಂಖ್ಯೆ ಹೆಚ್ಚಳ ಹಾಗೂ ನಮ್ಮ ತೆರಿಗೆ ಪಾಲಿನ ಬಗ್ಗೆ ಮಾತನಾಡಲಿ. ಹಾಗೂ ಅಧಿಕಾರ ಬಿಟ್ಟುಕೊಡುವಾಗ ಯಡಿಯೂರಪ್ಪ ಅವರು ಯಾಕೆ ಕಣ್ಣೀರು ಹಾಕಿದರು ಎಂದು ಪ್ರಶ್ನಿಸಿದರು.

ಇದನ್ನೂ ಓದಿ: Lok Sabha Election 2024: ಈಶ್ವರಪ್ಪನವರ ಉದ್ಧಟತನದ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಲ್ಲ; ಬಿ.ವೈ. ವಿಜಯೇಂದ್ರ ಕಿಡಿ

ಕಾಂಗ್ರೆಸ್‌ಗೆ ಹಾಕುವ ಮತ ಭಯೋತ್ಪಾದನೆಗೆ ಹಾಕುವ ಮತ ಎಂಬ ಯಡಿಯೂರಪ್ಪ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್‌, “ಚುನಾವಣಾ ಆಯೋಗ ಅದಕ್ಕೆ ಉತ್ತರ ನೀಡಲಿದೆ ಎಂದು ತಿಳಿಸಿದರು.

ಎಸ್‌ಟಿಎಸ್, ಹೆಬ್ಬಾರ್ ಬಿಜೆಪಿ ಶಾಸಕರು

ಎಸ್.ಟಿ ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳಲಾಗಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್‌, ನಾನು ಅವರನ್ನು ಎಲ್ಲಿ ಸೇರಿಸಿಕೊಂಡಿದ್ದೇನೆ. ಅವರು ತಮ್ಮ ಕ್ಷೇತ್ರದ ವಿಚಾರವಾಗಿ ನಮ್ಮ ಜತೆ ಚರ್ಚೆ ಮಾಡಿದ್ದಾರೆ. ಆ ಕ್ಷೇತ್ರಕ್ಕೆ ಹೋಗಿ ಅಲ್ಲಿ ಕೇಳಿ. ಸೋಮಶೇಖರ್ ಹಾಗೂ ಹೆಬ್ಬಾರ್ ಅವರು ಬಿಜೆಪಿಯ ಅಧಿಕೃತ ಶಾಸಕರು. ಅವರು ತಮ್ಮದೇ ಆದ ಲೆಕ್ಕಾಚಾರ, ನಂಬಿಕೆ ಮೇಲೆ ಯಾವ ಪಕ್ಷಕ್ಕೆ ಸಹಾಯ ಮಾಡುತ್ತಿದ್ದಾರೋ ನನಗೆ ಗೊತ್ತಿಲ್ಲ ಎಂದು ತಿಳಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Members of Parliament: ಸಂಸದರು ಪ್ರಮಾಣ ವಚನ ಸ್ವೀಕರಿಸದಿದ್ದರೆ ಏನಾಗುತ್ತದೆ? ಜೈಲಿನಲ್ಲಿದ್ದವರ ಕತೆಯೇನು?

ಲೋಕ ಸಭಾ ಚುನಾವಣೆ ಬಳಿಕ ಸಂಸದರಾಗಿ (Members of Parliament) ಆಯ್ಕೆಯಾಗುವವರು ಯಾವ ರೀತಿ ಪ್ರಮಾಣ ವಚನ ಸ್ವೀಕರಿಸಬೇಕು ಎಂಬುದನ್ನು ಸಂವಿಧಾನದಲ್ಲಿ ಸ್ಪಷ್ಟವಾಗಿ ನಿರ್ದಿಷ್ಟಪಡಿಸದಿದ್ದರೂ ಸಂಸದೀಯ ಪಾತ್ರವನ್ನು ಪೂರೈಸುವಲ್ಲಿ ಪ್ರಮಾಣ ವಚನ ಸ್ವೀಕಾರವು ಮೊದಲ ಮತ್ತು ಪ್ರಮುಖ ಹೆಜ್ಜೆಯಾಗಿದೆ. ಆದರೂ ಕೆಲವು ಸಂಸದರು ಪ್ರಮಾಣ ವಚನ ಸ್ವೀಕರಿಸಲು ಸಾಧ್ಯವಾಗದೇ ಇದ್ದರೆ ಮುಂದಿನ ನಡೆ ಹೇಗಿರುತ್ತದೆ ಎಂಬಿತ್ಯಾದಿ ಸಂಪೂರ್ಣ ವಿವರ ಇಲ್ಲಿದೆ.

VISTARANEWS.COM


on

By

Members of Parliament
Koo

18ನೇ ಲೋಕಸಭೆಯ (loksabha election) ಮೊದಲ ಅಧಿವೇಶನ ಪ್ರಾರಂಭವಾಗುತ್ತಿದ್ದಂತೆ ಹೊಸದಾಗಿ ಚುನಾಯಿತರಾದ ಸಂಸತ್ ಸದಸ್ಯರು (Members of Parliament) ಸೋಮವಾರದಿಂದ ಪ್ರಮಾಣ ವಚನ (taking oath) ಸ್ವೀಕರಿಸಲು ಆರಂಭಿಸಿದ್ದಾರೆ. ಎರಡು ದಿನಗಳಲ್ಲಿ ಕೆಳಮನೆಯ (lower house) 543 ಸಂಸದರು ಪ್ರಮಾಣ ವಚನ ಸ್ವೀಕರಿಸಿದರು. ಜೂನ್ 26ರಂದು ನೂತನ ಲೋಕಸಭಾ ಸ್ಪೀಕರ್ (Speaker) ಆಯ್ಕೆ ನಡೆಯಲಿದೆ.

ಪ್ರಮಾಣ ವಚನ ಬೋಧಿಸುವವರು ಯಾರು?

ಸಂಸದೀಯ ಪದ್ಧತಿಗಳ ಪ್ರಕಾರ ಪ್ರತಿ ಸಾರ್ವತ್ರಿಕ ಚುನಾವಣೆಯ ಅನಂತರ ಲೋಕಸಭೆಗೆ ಹೊಸದಾಗಿ ಚುನಾಯಿತರಾದ ಸದಸ್ಯರಿಗೆ ಹಂಗಾಮಿ ಸ್ಪೀಕರ್ ಪ್ರಮಾಣ ವಚನ ಸ್ವೀಕರಿಸುವ ಹೊಣೆ ನಿರ್ವಹಿಸುತ್ತಾರೆ. ಲೋಕಸಭೆಯ ನೂತನ ಸ್ಪೀಕರ್ ಆಯ್ಕೆಯನ್ನು ನಡೆಸುವ ಜವಾಬ್ದಾರಿ ಕೂಡ ಈ ಹಂಗಾಮಿ ಸ್ಪೀಕರ್‌ದೇ ಆಗಿರುತ್ತದೆ.

ಸಂವಿಧಾನದಲ್ಲಿ ಸ್ಪಷ್ಟವಾಗಿ ನಿರ್ದಿಷ್ಟಪಡಿಸದಿದ್ದರೂ ಸಂಸದೀಯ ಪಾತ್ರವನ್ನು ಪೂರೈಸುವಲ್ಲಿ ಪ್ರಮಾಣ ವಚನ ಸ್ವೀಕಾರವು ಮೊದಲ ಹೆಜ್ಜೆಯಾಗಿದೆ. ಆದರೂ ಕೆಲವು ಸಂಸದರು ಅನಾರೋಗ್ಯದ ಕಾರಣ ಅಥವಾ ಅವರ ಸ್ಥಳದಿಂದ ತೆರಳಲು ಸಾಧ್ಯವಾಗದ ಕಾರಣ ಪ್ರಮಾಣ ವಚನ ಸ್ವೀಕರಿಸದಿರುವ ಸಾಧ್ಯತೆಯಿದೆ.

ಸಂಸದರು ಪ್ರಮಾಣ ವಚನ ಸ್ವೀಕರಿಸದಿದ್ದರೆ ಏನಾಗುತ್ತದೆ?

1. ಮೊದಲ ದಿನ ಪ್ರಮಾಣ ವಚನ ಅಥವಾ ದೃಢೀಕರಣವನ್ನು ಮಾಡದ ಚುನಾಯಿತ ಸಂಸದರು ಸದನದ ಅಧಿವೇಶನದ ಪ್ರಾರಂಭದಲ್ಲಿ ಅದೇ ಅಧಿವೇಶನದಲ್ಲಿ ಅಥವಾ ಅನಂತರದ ಅಧಿವೇಶನದಲ್ಲಿ ಯಾವುದೇ ನಂತರದ ದಿನದಲ್ಲಿ ಪ್ರಮಾಣ ವಚನ ಸ್ವೀಕರಿಸಬಹುದು.

2. ಸಂಸದರ ಕೋರಿಕೆಯ ಮೇರೆಗೆ ಸಭಾಧ್ಯಕ್ಷರ ಚೇಂಬರ್‌ನಲ್ಲಿ ಮಧ್ಯಂತರ ಅವಧಿಯಲ್ಲಿ ಪ್ರಮಾಣ ವಚನ ಸ್ವೀಕರಿಸಲು ಅವಕಾಶ ನೀಡಲಾಗುತ್ತದೆ.

3. ಅನಾರೋಗ್ಯದಿಂದ ಬಳಲುತ್ತಿರುವವರು, ಸದನಕ್ಕೆ ಬರಲು ಸಾಧ್ಯವಾಗದ ಸಂದರ್ಭದಲ್ಲಿ ಅವರು ಬಯಸಿದಲ್ಲಿ ಪ್ರಮಾಣ ಅಥವಾ ದೃಢೀಕರಣವನ್ನು ಮಾಡಬಹುದು. ಈ ಸಂದರ್ಭದಲ್ಲಿ ಸಂಬಂಧಿತ ಅಧಿಕಾರಿಯು ಸದಸ್ಯರಿಗೆ ಸಂಬಂಧಿತ ಪ್ರಮಾಣ ಅಥವಾ ದೃಢೀಕರಣ ಕಾರ್ಡ್ ಅನ್ನು ನೀಡುತ್ತಾರೆ.

4. ಸಂವಿಧಾನದ ಪ್ರಕಾರ ಚುನಾಯಿತ ಸಂಸದರು 60 ದಿನಗಳವರೆಗೆ ಸಂಸತ್ತಿಗೆ ಹಾಜರಾಗದಿದ್ದರೆ ಅವರ ಸ್ಥಾನವನ್ನು ಖಾಲಿ ಎಂದು ಘೋಷಿಸಬಹುದು. ಇದೇ ಆಧಾರದಲ್ಲಿ ನ್ಯಾಯಾಲಯಗಳು ಜೈಲಿನಲ್ಲಿರುವ ಸಂಸದರಿಗೆ ಪ್ರಮಾಣ ವಚನ ಸ್ವೀಕರಿಸುವುದಕ್ಕಾಗಿ ಸಂಸತ್‌ಗೆ ಬರಲು ಅವಕಾಶ ನೀಡಬಹುದು. ಆದರೆ ಪ್ರಮಾಣ ವಚನ ಸ್ವೀಕರಿಸಿದ ಅನಂತರ ಅವರು ಮತ್ತೆ ಜೈಲಿಗೆ ಮರಳಬೇಕಾಗುತ್ತದೆ.

5. ದೃಷ್ಟಿ ಸಮಸ್ಯೆಯಿಂದ ಸದಸ್ಯರಿಗೆ ಸಹಿ ಮಾಡಲು, ಪ್ರಮಾಣ ಪತ್ರ ಓದಲು ಸಾಧ್ಯವಾಗದೇ ಇದ್ದರೆ ಇನ್ನೊಬ್ಬ ಸದಸ್ಯರು ಇವರಿಗೆ ಓದಿ ಹೇಳಬಹುದಾಗಿದೆ.

6. ನ್ಯಾಯಾಲಯದ ಆದೇಶದ ಪರಿಣಾಮವಾಗಿ ಒಬ್ಬ ವ್ಯಕ್ತಿಯು ಸದಸ್ಯರಾಗುವುದನ್ನು ತಡೆದರೆ ಮತ್ತು ಅವರ ಸ್ಥಾನದಲ್ಲಿ ಇನ್ನೊಬ್ಬರು ಚುನಾಯಿತರೆಂದು ಘೋಷಿಸಲ್ಪಟ್ಟರೆ ಮತ್ತೆ ಹೊಸದಾಗಿ ಪ್ರಮಾಣವಚನ ಅಥವಾ ದೃಢೀಕರಣವನ್ನು ಮಾಡಬೇಕು.

7. ಮೊದಲ ಸುತ್ತಿನಲ್ಲಿ ಪ್ರಮಾಣವಚನಕ್ಕೆ ಹಾಜರಾಗದ ಸದಸ್ಯರ ಹೆಸರನ್ನು ಕೊನೆಯಲ್ಲಿ ಮತ್ತೆ ಕರೆಯಲಾಗುತ್ತದೆ.

ಯಾವ ಪ್ರಮಾಣ ವಚನ ಸ್ವೀಕರಿಸುತ್ತಾರೆ?

ಸಂವಿಧಾನದ ಮೂರನೇ ಶೆಡ್ಯೂಲ್ ಸಂಸತ್ತಿನ ಪ್ರಮಾಣ ವಚನದ ಪಠ್ಯವನ್ನು ಒಳಗೊಂಡಿದೆ. ಅದು ಹೀಗೆ ಹೇಳುತ್ತದೆ: ನಾನು…. ಚುನಾಯಿತನಾದ ಅಥವಾ ನಾಮನಿರ್ದೇಶನಗೊಂಡ ಸದಸ್ಯರ ಸಂಸತ್‌ ಸದಸ್ಯನಾಗಿ ದೇವರ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆ. ನಾನು ಕಾನೂನಿನ ಮೂಲಕ ಸ್ಥಾಪಿಸಿದಂತೆ ಭಾರತದ ಸಂವಿಧಾನಕ್ಕೆ ನಿಜವಾದ ನಂಬಿಕೆ ಮತ್ತು ನಿಷ್ಠೆಯನ್ನು ಹೊಂದುತ್ತೇನೆ ಎಂದು ಸ್ಪಷ್ಟವಾಗಿ ದೃಢಪಡಿಸುತ್ತೇನೆ. ನಾನು ಭಾರತದ ಸಾರ್ವಭೌಮತ್ವ ಮತ್ತು ಸಮಗ್ರತೆಯನ್ನು ಎತ್ತಿಹಿಡಿಯುತ್ತೇನೆ. ನನ್ನ ಕರ್ತವ್ಯವನ್ನು ನಿಷ್ಠೆಯಿಂದ ನಿರ್ವಹಿಸುತ್ತೇನೆ.

ಪ್ರಮಾಣ ವಚನ ಏಕೆ ಮಹತ್ವದ್ದಾಗಿದೆ?

ಲೋಕಸಭೆಯಲ್ಲಿ ಚರ್ಚೆ ಮತ್ತು ಮತ ಚಲಾಯಿಸುವ ಅಧಿಕಾರವನ್ನು ಪಡೆಯಲು ಸಂವಿಧಾನದಲ್ಲಿ (ಆರ್ಟಿಕಲ್ 99) ಸೂಚಿಸಿದಂತೆ ಸಂಸದರು ಪ್ರಮಾಣ ವಚನ ಸ್ವೀಕರಿಸಬೇಕು.

ಕೇವಲ ಚುನಾವಣೆಯಲ್ಲಿ ಗೆದ್ದು ಅವಧಿಯನ್ನು ಪ್ರಾರಂಭಿಸುವುದರಿಂದ ಅವರು ಸದನದ ಕಲಾಪಗಳಲ್ಲಿ ಭಾಗವಹಿಸಲು ಸ್ವಯಂಚಾಲಿತವಾಗಿ ಸಾಧ್ಯವಾಗುವುದಿಲ್ಲ.

ಹೇಗೆ ಪ್ರಮಾಣ ವಚನ ಸ್ವೀಕರಿಸುತ್ತಾರೆ?

ಸಂಸದರು ಮೊದಲು ತಮ್ಮ ಚುನಾವಣಾ ಪ್ರಮಾಣಪತ್ರವನ್ನು ಲೋಕಸಭೆಯ ಸಿಬ್ಬಂದಿಗೆ ಸಲ್ಲಿಸಬೇಕಾಗುತ್ತದೆ. 1957ರಲ್ಲಿ ನಡೆದ ಘಟನೆಯ ಅನಂತರ ಸಂಸತ್ತು ಈ ಸುರಕ್ಷತೆಯನ್ನು ಸೇರಿಸಿತು. ಮಾನಸಿಕವಾಗಿ ಅಸ್ವಸ್ಥ ವ್ಯಕ್ತಿಯೊಬ್ಬರು ಸಂಸದರೆಂದು ಪೋಸ್ ನೀಡಿ ಸದನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದರು!

ಪ್ರಮಾಣಪತ್ರದ ಜೊತೆಗೆ ಸಂಸದರು ಪ್ರಮಾಣ ವಚನ ಅಥವಾ ದೃಢೀಕರಣವನ್ನು ಮಾಡಲು ಬಯಸಿದ ಭಾಷೆಯನ್ನು ಸಹ ನಮೂದಿಸಬೇಕು.

ಸದಸ್ಯರು ಪ್ರಮಾಣ ವಚನ ಮಾಡುವಾಗ ಹಂಗಾಮಿ ಸ್ಪೀಕರ್ ಜೊತೆ ಹಸ್ತಲಾಘವ ಮಾಡುತ್ತಾರೆ. ಅನಂತರ ಅವರು ಸದನದಲ್ಲಿ ತಮ್ಮ ಆಸನದಲ್ಲಿ ಕುಳಿತುಕೊಳ್ಳಲು ಸದಸ್ಯರಿಗೆ ಸ್ಪೀಕರ್‌ ಅನುಮತಿ ನೀಡುತ್ತಾರೆ. ಸದಸ್ಯರು ದಾಖಲಾತಿ ಪುಸ್ತಕದಲ್ಲಿ ಸಹಿ ಮಾಡುತ್ತಾರೆ.

ಯಾವ ಭಾಷೆಗಳಲ್ಲಿ ಪ್ರಮಾಣ ವಚನ ಸ್ವೀಕರಿಸಬಹುದು?

ಸಂಸದರು ಇಂಗ್ಲಿಷ್ ಅಥವಾ ಅಸ್ಸಾಮಿ, ಬೆಂಗಾಲಿ, ಬೋಡೋ, ಡೋಗ್ರಿ, ಗುಜರಾತಿ, ಹಿಂದಿ, ಕನ್ನಡ, ಕಾಶ್ಮೀರಿ, ಕೊಂಕಣಿ, ಮೈಥಿಲಿ, ಮಲಯಾಳಂ, ಮಣಿಪುರಿ, ಮರಾಠಿ, ನೇಪಾಳಿ, ಒಡಿಯಾ, ಪಂಜಾಬಿ, ಸಂಸ್ಕೃತ, ಸಂತಾಲಿ, ಸಿಂಧಿ, ತಮಿಳು, ತೆಲುಗು ಮತ್ತು ಉರ್ದು.. ಹೀಗೆ 22 ಭಾಷೆಗಳಲ್ಲಿ ಪ್ರಮಾಣವಚನವನ್ನು ಸ್ವೀಕರಿಸಬಹುದು.

ಅರ್ಧದಷ್ಟು ಸಂಸದರು ಹಿಂದಿ ಅಥವಾ ಇಂಗ್ಲಿಷ್‌ನಲ್ಲಿ ಪ್ರಮಾಣ ವಚನ ಸ್ವೀಕರಿಸುತ್ತಾರೆ. ಹಿಂದಿನ ಎರಡು ಲೋಕಸಭೆಯಲ್ಲಿ ಸಂಸ್ಕೃತವು ಜನಪ್ರಿಯ ಭಾಷೆಯಾಗಿ ಮಾರ್ಪಟ್ಟಿದ್ದು, ಹಲವು ಸಂಸದರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಇದನ್ನೂ ಓದಿ: Bansuri Swaraj: ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿ ಸುಷ್ಮಾ ಸ್ವರಾಜ್‌ರನ್ನು ನೆನಪಿಸಿದ ಮಗಳು! ವಿಡಿಯೊ ನೋಡಿ

ಯಾವಾಗ ಸದನದ ಸದಸ್ಯರಾಗುತ್ತಾರೆ?

ಒಬ್ಬ ವ್ಯಕ್ತಿಯು ಚುನಾವಣಾ ಅಧಿಕಾರಿಯಿಂದ ಚುನಾಯಿತರೆಂದು ಘೋಷಿಸಲ್ಪಟ್ಟ ದಿನಾಂಕದಿಂದ ಸದನದ ಸದಸ್ಯರಾಗುತ್ತಾರೆ. ಸದನವನ್ನು ರಚಿಸುವ ಚುನಾವಣಾ ಆಯೋಗದ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ ಅವರು ಸಂಸದರಾಗಿ ಸಂಬಳವನ್ನು ಸ್ವೀಕರಿಸಲು ಪ್ರಾರಂಭಿಸುತ್ತಾರೆ. ಸಂಸದರು ಸದನದ ಅಧಿವೇಶನಗಳಿಗೆ ಗೈರುಹಾಜರಿಯನ್ನು ಕೇಳಬಹುದಾಗಿದೆ.

Continue Reading

ಪ್ರಮುಖ ಸುದ್ದಿ

Parliament Session 2024: ಇಂದಿನಿಂದ 18ನೇ ಲೋಕಸಭೆಯ ಮೊದಲ ಅಧಿವೇಶನ ಆರಂಭ

Parliament Session 2024: ಸಂಸತ್ತಿನ ಉಭಯ ಸದನಗಳನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು (Draupadi Murmu) ಅವರು ಭಾಷಣ ಮಾಡಲಿದ್ದಾರೆ. ನರೇಂದ್ರ ಮೋದಿ ಅವರು ಸೇರಿ ಎಲ್ಲರೂ ನೂತನ ಸಂಸದರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

VISTARANEWS.COM


on

Parliament session 2024
Koo

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ಅಧಿಕಾರಕ್ಕೆ ಬಂದಿದ್ದು, ಪ್ರಧಾನಿಯಾಗಿ ನರೇಂದ್ರ ಮೋದಿ (Narendra Modi) ಅವರು ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಇನ್ನು ನೂತನ ಸರ್ಕಾರ ರಚನೆಯಾದ ಬಳಿಕ, 18ನೇ ಲೋಕಸಭೆಯ ಮೊದಲ ಸಂಸತ್‌ ವಿಶೇಷ ಅಧಿವೇಶನವು (Parliament Session 2024) ಸೋಮವಾರದಿಂದ (ಜೂನ್‌ 24) ಆರಂಭವಾಗಲಿದೆ. ನರೇಂದ್ರ ಮೋದಿ ಅವರು ಸೇರಿ ಚುನಾವಣೆಯಲ್ಲಿ ಆಯ್ಕೆಯಾದ ಎಲ್ಲರೂ ಸಂಸದರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಸಂಸತ್ತಿನ ಉಭಯ ಸದನಗಳನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು (Draupadi Murmu) ಅವರು ಭಾಷಣ ಮಾಡಲಿದ್ದಾರೆ. ನರೇಂದ್ರ ಮೋದಿ ಅವರು ಸೇರಿ ಎಲ್ಲರೂ ನೂತನ ಸಂಸದರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಹಾಗೆಯೇ, ನೂತನ ಸ್ಪೀಕರ್‌ ಆಯ್ಕೆಯ ಪ್ರಕ್ರಿಯೆಯೂ ನಡೆಯಲಿದೆ. ಸೋಮವಾರ ಬೆಳಗ್ಗೆ 11 ಗಂಟೆಗೆ ನರೇಂದ್ರ ಮೋದಿ ಹಾಗೂ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನಂತರ ದೇಶದ ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಸಂಸದರು ಅಲ್ಫಾಬೆಟಿಕಲ್‌ (ABCD ಆಧಾರದಂತೆ) ಆರ್ಡರ್‌ನಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಉದಾಹರಣೆಗೆ, ಅಸ್ಸಾಂ ಸದಸ್ಯರು ಮೊದಲಿಗೆ, ಪಶ್ಚಿಮ ಬಂಗಾಳ ಸದಸ್ಯರು ಕೊನೆಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

Narendra Modi

ಸಂಸತ್‌ ವಿಶೇಷ ಅಧಿವೇಶನದ ಮೊದಲ ದಿನ ಅಂದರೆ, ಜೂನ್‌ 24ರಂದು ಮೋದಿ, ಸಚಿವರು ಸೇರಿ ಒಟ್ಟು 280 ಸದಸ್ಯರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಮಂಗಳವಾರ ಅಂದರೆ ಜೂನ್‌ 25ರಂದು 264 ಸದಸ್ಯರು ಪದಗ್ರಹಣ ಮಾಡಲಿದ್ದಾರೆ. ಜೂನ್‌ 24ರಿಂದ ಜುಲೈ 3ರವರೆಗೆ ಸಂಸತ್‌ ವಿಶೇಷ ಅಧಿವೇಶನ ನಡೆಯಲಿದೆ. ಯಾವುದೇ ವಿಧೇಯಕಗಳ ಮಂಡನೆ ಕುರಿತು ಮಾಹಿತಿ ಲಭ್ಯವಾಗಿಲ್ಲ.

ಯಾರಾಗ್ತಾರೆ ಸ್ಪೀಕರ್?‌

ಲೋಕಸಭೆಯ ಸ್ಪೀಕರ್‌ ಆಗಿ ಯಾರನ್ನು ಆಯ್ಕೆ ಮಾಡಲಾಗುತ್ತದೆ ಎಂಬುದು ತೀವ್ರ ಕುತೂಹಲ ಕೆರಳಿಸಿದೆ. ಈಗಾಗಲೇ ಹಂಗಾಮಿ ಸ್ಪೀಕರ್‌ ಆಗಿ ಭಾರ್ತೃಹರಿ ಮಹತಾಬ್‌ ಅವರು ನೇಮಕಗೊಂಡಿದ್ದಾರೆ. ಜೂನ್‌ 26ರಂದು ಸ್ಪೀಕರ್‌ ಆಯ್ಕೆ ನಡೆಯುವ ಸಾಧ್ಯತೆ ಇದೆ. ಸ್ಪೀಕರ್‌ ಹುದ್ದೆಯ ಮೇಲೆ ಎನ್‌ಡಿಎ ಮೈತ್ರಿಕೂಟದ ಮಿತ್ರಪಕ್ಷಗಳಾದ ಜೆಡಿಯು ಹಾಗೂ ಟಿಡಿಪಿ ಕಣ್ಣಿಟ್ಟಿವೆ. ಬಿಜೆಪಿ ಅಭ್ಯರ್ಥಿಯನ್ನೇ ಸ್ಪೀಕರ್‌ ಸ್ಥಾನಕ್ಕೆ ಕೂರಿಸುವುದು ಆ ಪಕ್ಷದ ಉದ್ದೇಶವಾಗಿದೆ. ಸ್ಪೀಕರ್‌ ಸ್ಥಾನಕ್ಕೆ ಬಿಜೆಪಿಯ ಕಿರಣ್‌ ರಿಜಿಜು ಅವರ ಹೆಸರುಗಳು ಕೂಡ ಕೇಳಿಬರುತ್ತಿವೆ. ಹಾಗಾಗಿ, ಕುತೂಹಲ ಹೆಚ್ಚಾಗಿದೆ.

ಇದನ್ನೂ ಓದಿ: Pro Tem Speaker: ಲೋಕಸಭೆ ಹಂಗಾಮಿ ಸ್ಪೀಕರ್‌ ಆಗಿ ಬಿಜೆಪಿಯ ಭಾರ್ತೃಹರಿ ಮಹತಾಬ್ ನೇಮಕ

Continue Reading

ದೇಶ

Ayodhya Ram Mandir: ಅಯೋಧ್ಯೆ ಜನರ ಮನವೊಲಿಕೆಗೆ ಮುಂದಾದ ಬಿಜೆಪಿ; ಜಾಗ ಕಳೆದುಕೊಂಡ ವರ್ತಕರಿಗೆ ಭರ್ಜರಿ ಆಫರ್‌!

ಅಯೋಧ್ಯೆ ಪಟ್ಟಣದಲ್ಲಿ (Ayodhya Ram Mandir) ಸರ್ಕಾರ ನಿರ್ಮಿಸಿದ ಅಂಗಡಿಗಳ ಬೆಲೆಯನ್ನು ಶೇ. 30ರಷ್ಟು ಕಡಿತಗೊಳಿಸುವ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ. ಇದಲ್ಲದೆ, ಬಡ್ಡಿ ರಹಿತವಾಗಿ 20 ವರ್ಷಗಳ ಸುಲಭ ಕಂತಿನಲ್ಲಿ ಮಳಿಗೆಗಳನ್ನು ಹಂಚಿಕೆದಾರರಿಗೆ ಹಸ್ತಾಂತರಿಸಲಾಗುವುದು ಎಂದು ಅಯೋಧ್ಯೆ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಗೌರವ್ ದಯಾಳ್ ತಿಳಿಸಿದ್ದಾರೆ.

VISTARANEWS.COM


on

By

Ayodhya Ram Mandir
Koo

ಲಕ್ನೋ: ಉತ್ತರ ಪ್ರದೇಶದ (uttarapradesha) ಅಯೋಧ್ಯೆಯಲ್ಲಿ ರಾಮ ಮಂದಿರದ (Ayodhya Ram Mandir) ನಿರ್ಮಾಣದ ವೇಳೆ ಅಯೋಧ್ಯೆ (ayodhya) ಅಭಿವೃದ್ಧಿ ಪ್ರಾಧಿಕಾರವು (ADA) ಕೈಗೊಂಡ ರಸ್ತೆ ವಿಸ್ತರಣೆ ಕಾಮಗಾರಿಗಾಗಿ (road widening project) ಸ್ಥಳಾಂತರಗೊಂಡ ಅಂಗಡಿ ಮಾಲೀಕರಿಗೆ ಹಂಚಿಕೆಯಾಗಿರುವ ಅಂಗಡಿಗಳ ಬೆಲೆಯನ್ನು ಶೇ. 30ರಷ್ಟು ಕಡಿತಗೊಳಿಸಿದೆ ಎಂದು ಸರ್ಕಾರಿ ಅಧಿಕಾರಿಗಳು ತಿಳಿಸಿದ್ದಾರೆ. ಇಷ್ಟೇ ಅಲ್ಲ, ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಲಾದ 500 ಅಂಗಡಿಗಳನ್ನು ಪಡೆಯುವವರಿಗೆ ಬಡ್ಡಿ ರಹಿತವಾಗಿ 20 ವರ್ಷಗಳ ಸುಲಭ ಕಂತುಗಳಲ್ಲಿ ಹಣ ಪಾವತಿಸುವ ಆಫರ್‌ ಕೂಡ ನೀಡಲಾಗಿದೆ.

ಕಳೆದ ಲೋಕಸಭೆ ಚುನಾವಣೆಯಲ್ಲಿ ಅಯೋಧ್ಯೆ ಇರುವ ಫೈಜಾಬಾದ್‌ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಹೀನಾಯವಾಗಿ ಸೋತು ಹೋಗಿತ್ತು. ಅಭಿವೃದ್ಧಿ ಕಾಮಗಾರಿಗಾಗಿ ಸ್ಥಳ ಕಳೆದುಕೊಂಡ ಜನ ಸರ್ಕಾರದಿಂದ ಸೂಕ್ತ ಪರಿಹಾರ ಮತ್ತು ಸ್ಪಂದನೆ ಸಿಗದೆ ಆಕ್ರೋಶಗೊಂಡಿದ್ದರು. ಇದರಿಂದ ಕಳವಳಗೊಂಡಿರುವ ಬಿಜೆಪಿ, ಅಯೋಧ್ಯೆಯ ಜನರ ಮನವೊಲಿಸಲು ಮುಂದಾಗಿದೆ.

ಈ ಕುರಿತು ಅಯೋಧ್ಯೆ ಅಭಿವೃದ್ಧಿ ಪ್ರಾಧಿಕಾರವು ಉತ್ತರ ಪ್ರದೇಶ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಿದೆ ಎಂದು ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅಯೋಧ್ಯೆ ವಿಭಾಗೀಯ ಆಯುಕ್ತ ಹಾಗೂ ಅಯೋಧ್ಯೆ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಗೌರವ್ ದಯಾಳ್ ತಿಳಿಸಿದ್ದಾರೆ. ಅಂಗಡಿಗಳ ಬೆಲೆಯನ್ನು ಶೇ. 30ರಷ್ಟು ಕಡಿತಗೊಳಿಸುವ ಪ್ರಸ್ತಾವನೆಗೆ ಅನುಮೋದನೆ ನೀಡಿದ್ದೇವೆ. ಇದಲ್ಲದೆ, ಬಡ್ಡಿ ರಹಿತವಾಗಿ 20 ವರ್ಷಗಳ ಸುಲಭ ಕಂತಿನಲ್ಲಿ ಮಳಿಗೆಗಳನ್ನು ಹಂಚಿಕೆದಾರರಿಗೆ ಹಸ್ತಾಂತರಿಸಲಾಗುವುದು ಎಂದು ದಯಾಳ್ ಹೇಳಿದರು.

ರಾಮ್ ಪಥ್ ಎಂದು ಹೆಸರಿಸಲಾದ ಸಹದತ್‌ಗಂಜ್‌ನಿಂದ ನಯಾ ಘಾಟ್‌ವರೆಗಿನ 13 ಕಿ.ಮೀ. ರಸ್ತೆ ವಿಸ್ತರಣೆ ಯೋಜನೆಯಲ್ಲಿ ಸುತ್ತಲಿನ ಅಂಗಡಿದಾರರು ಸ್ಥಳಾಂತರಗೊಂಡಿದ್ದಾರೆ. ಯೋಜನೆಯು ಡಿಸೆಂಬರ್ 2023ರಲ್ಲಿ ಪೂರ್ಣಗೊಂಡಿತು. ಈ ಮೊದಲು, ಅಂಗಡಿಗಳನ್ನು ಸ್ವಾಧೀನಪಡಿಸಿಕೊಳ್ಳಲು ಅಂಗಡಿ ಮಾಲೀಕರು ಸಂಪೂರ್ಣ ಹಣವನ್ನು ಎಡಿಎಗೆ ಪಾವತಿಸಬೇಕಾಗಿತ್ತು.

ಈ ಅಂಗಡಿಗಳ ಬೆಲೆ ಸುಮಾರು 15ರಿಂದ 20 ಲಕ್ಷ ರೂಪಾಯಿಗಳಾಗಿದ್ದು, ಅಂಗಡಿದಾರರು ಈ ದೊಡ್ಡ ಮೊತ್ತವನ್ನು ಪಾವತಿಸಲು ಸಾಧ್ಯವಾಗಲಿಲ್ಲ. ಅವರ ಮುಂದಿದ್ದ ಏಕೈಕ ಆಯ್ಕೆ ಬ್ಯಾಂಕ್‌ ಸಾಲ. ಕಳೆದ ವರ್ಷ ಡಿಸೆಂಬರ್‌ನಲ್ಲಿ ಈ ಅಂಗಡಿಗಳು ಸಿದ್ಧವಾಗಿದ್ದವು. ಆದರೆ ಹಣಕಾಸಿನ ಅಡಚಣೆಯಿಂದಾಗಿ ಕಳೆದ ತಿಂಗಳವರೆಗೆ ಸುಮಾರು 75 ಅಂಗಡಿದಾರರು ಮಾತ್ರ ಅಂಗಡಿಗಳನ್ನು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ.

ಅಂಗಡಿಗಳ ಬೆಲೆಯನ್ನು ಶೇಕಡಾ 30ರಷ್ಟು ಇಳಿಸಿದ್ದಕ್ಕಾಗಿ ನಾವು ರಾಜ್ಯ ಸರ್ಕಾರಕ್ಕೆ ಕೃತಜ್ಞರಾಗಿರುತ್ತೇವೆ. ಮತ್ತು ಉಳಿದ ಮೊತ್ತವನ್ನು 20 ವರ್ಷಗಳ ಸುಲಭ ಬಡ್ಡಿ ರಹಿತ ಕಂತುಗಳಲ್ಲಿ ಪಾವತಿಸಲಾಗುವುದು ಎಂದು ಅಯೋಧ್ಯೆಯ ಬಿಜೆಪಿ ಶಾಸಕ ವೇದ್ ಪ್ರಕಾಶ್ ಗುಪ್ತಾ ತಿಳಿಸಿದ್ದಾರೆ.

ಇತ್ತೀಚೆಗೆ ಮುಕ್ತಾಯಗೊಂಡ ಸಂಸತ್ತಿನ ಚುನಾವಣೆಯಲ್ಲಿ ಫೈಜಾಬಾದ್ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ತನ್ನ ಅತ್ಯಂತ ಹೀನಾಯ ಸೋಲನ್ನು ಅನುಭವಿಸಿತು. ಎರಡು ಬಾರಿ ಸಂಸದರಾಗಿದ್ದ ಲಲ್ಲು ಸಿಂಗ್ ಅವರು ಸಮಾಜವಾದಿ ಪಕ್ಷದ ಅವದೇಶ್ ಪ್ರಸಾದ್ ವಿರುದ್ಧ ಸೋತರು. ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿ 54,567 ಮತಗಳ ಅಂತರದಿಂದ ಪ್ರತಿಷ್ಠಿತ ಸ್ಥಾನವನ್ನು ಗೆದ್ದಿದ್ದಾರೆ.

ಇದನ್ನೂ ಓದಿ: Ram Mandir: ರಾಮಮಂದಿರ ಆವರಣದಲ್ಲೇ ಗುಂಡು ತಗುಲಿ ಯೋಧ ಸಾವು; ರಾತ್ರಿ ಏನಾಯ್ತು?

ಈ ವರ್ಷದ ಜನವರಿ 22ರಂದು ಪ್ರಧಾನಿ ನರೇಂದ್ರ ಮೋದಿಯವರು ಅಯೋಧ್ಯೆಯಲ್ಲಿ ರಾಮಮಂದಿರವನ್ನು ಭವ್ಯವಾಗಿ ಉದ್ಘಾಟಿಸಿದ ಅನಂತರರೂ ಫೈಜಾಬಾದ್‌ನ ಜನರು ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಹೀನಾಯವಾಗಿ ಸೋಲಿಸಿದ್ದರು. ಅಯೋಧ್ಯೆ ಇರುವ ಈ ಕ್ಷೇತ್ರದಲ್ಲಿ ಪಕ್ಷದ ಸೋಲಿನ ಹಿಂದಿನ ಕಾರಣಗಳನ್ನು ತಿಳಿದುಕೊಳ್ಳಲು ರಾಜ್ಯ ಬಿಜೆಪಿ ಮುಖ್ಯಸ್ಥ ಭೂಪೇಂದ್ರ ಚೌಧರಿ ಬುಧವಾರ ಎರಡು ದಿನಗಳ ಭೇಟಿಗಾಗಿ ಅಯೋಧ್ಯೆಗೆ ಆಗಮಿಸಿದ್ದಾರೆ.

Continue Reading

ದೇಶ

Narendra Modi: 3ನೇ ಸಲ ಗೆಲ್ಲಿಸಿದ ವಾರಾಣಸಿ ಜನತೆಗೆ ಧನ್ಯವಾದ ಎಂದ ಮೋದಿ; ಗೆದ್ದ ಬಳಿಕ ಮೊದಲ ಭೇಟಿ!

Narendra Modi: ಲೋಕಸಭೆ ಚುನಾವಣೆಯಲ್ಲಿ ಸತತ ಮೂರನೇ ಬಾರಿಗೆ ವಾರಾಣಸಿ ಕ್ಷೇತ್ರದಿಂದ ಸ್ಪರ್ಧಿಸಿದ ನರೇಂದ್ರ ಮೋದಿ ಅವರು 1.5 ಲಕ್ಷ ಮತಗಳಿಂದ ಗೆಲುವು ಸಾಧಿಸಿದ್ದಾರೆ. ವಾರಾಣಸಿಯಿಂದ ಮೂರನೇ ಬಾರಿಗೆ ಗೆದ್ದು, ಮೂರನೇ ಬಾರಿಗೆ ಪ್ರಧಾನಿಯಾಗಿ ಸ್ವೀಕರಿಸಿದ ಬಳಿಕ ನರೇಂದ್ರ ಮೋದಿ ಅವರು ಇದೇ ಮೊದಲ ಬಾರಿಗೆ ವಾರಾಣಸಿಗೆ ಭೇಟಿ ನೀಡಿದ್ದಾರೆ.

VISTARANEWS.COM


on

Narendra Modi
Koo

ವಾರಾಣಸಿ: ಲೋಕಸಭೆ ಚುನಾವಣೆ (Lok Sabha Election 2024) ಬಳಿಕ ಇದೇ ಮೊದಲ ಬಾರಿಗೆ ತಮ್ಮ ಲೋಕಸಭೆ ಕ್ಷೇತ್ರವಾದ ವಾರಾಣಸಿಗೆ (Varanasi) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮಂಗಳವಾರ (ಜೂನ್‌ 18) ಭೇಟಿ ನೀಡಿದ್ದಾರೆ. ವಾರಾಣಸಿಯಲ್ಲಿ ನಡೆದ ಕಿಸಾನ್ ಸಮ್ಮೇಳನದಲ್ಲಿ ಪಿಎಂ ಕಿಸಾನ್‌ ಸಮ್ಮಾನ್‌ ನಿಧಿ (PM Kisan Nidhi Samman) ಯೋಜನೆಯ 20 ಸಾವಿರ ಕೋಟಿ ರೂಪಾಯಿಯನ್ನು ದೇಶದ 9.26 ಕೋಟಿ ರೈತರ ಖಾತೆಗಳಿಗೆ ಜಮೆ ಮಾಡಿದ ಬಳಿಕ ಅವರು ಮಾತನಾಡಿದರು. “ಲೋಕಸಭೆ ಚುನಾವಣೆಯಲ್ಲಿ ನೀವು ನನ್ನನ್ನು ಮೂರನೇ ಬಾರಿಗೆ ಸಂಸದನಾಗಿ ಮಾತ್ರವಲ್ಲ, ಮೂರನೇ ಬಾರಿಗೆ ದೇಶದ ಪ್ರಧಾನಿಯನ್ನಾಗಿ ಆಯ್ಕೆ ಮಾಡಿದ್ದೀರಿ. ನಿಮಗೆ ನನ್ನ ಧನ್ಯವಾದಗಳು” ಎಂದು ಹೇಳಿದರು.

“ಕಳೆದ 60 ವರ್ಷದಲ್ಲಿಯೇ ದೇಶದಲ್ಲಿ ಯಾವುದೇ ಪಕ್ಷದ ಸರ್ಕಾರವನ್ನು ಸತತ ಮೂರನೇ ಬಾರಿಗೆ ಆಯ್ಕೆ ಮಾಡಿರಲಿಲ್ಲ. ಆದರೆ, ದೇಶದ ಜನರು ನನ್ನನ್ನು ಸತತ ಮೂರನೇ ಬಾರಿಗೆ ಪ್ರಧಾನಿಯನ್ನಾಗಿ ನೇಮಕ ಮಾಡಿದ್ದಾರೆ. ವಾರಾಣಸಿಯ ಜನರೂ ನನ್ನ ಜತೆ ನಿಂತಿದ್ದಾರೆ. ಇದು ಐತಿಹಾಸಿಕವಾಗಿದ್ದು, ಮುಂದಿನ 5 ವರ್ಷಗಳವರೆಗೆ ನಿಮ್ಮ ಸೇವೆ ಮಾಡುತ್ತೇನೆ. ವಿಕಸಿತ ಭಾರತದ ನಿರ್ಮಾಣಕ್ಕಾಗಿ ಶ್ರಮ ವಹಿಸುತ್ತೇನೆ. ರೈತರು, ಯುವಕರು ಹಾಗೂ ಮಹಿಳೆಯರು ದೇಶದ ಮೂರು ಸ್ತಂಭಗಳಾಗಿದ್ದು, ಇವರೆಲ್ಲರ ಏಳಿಗೆಗೆ ಆಡಳಿತ ನಡೆಸುತ್ತೇವೆ” ಎಂದು ತಿಳಿಸಿದರು.

“ಕೇಂದ್ರದಲ್ಲಿ ನಮ್ಮ ಮೈತ್ರಿಕೂಟದ ಸರ್ಕಾರ ಅಧಿಕಾರಕ್ಕೆ ಬರುತ್ತಲೇ ದೇಶದ 9.26 ಕೋಟಿ ರೈತರಿಗೆ ಹಣಕಾಸು ನೆರವು ನೀಡುವ ಕಡತಕ್ಕೆ ನಾನು ಮೊದಲು ಸಹಿ ಹಾಕಿದೆ. ಆ ಮೂಲಕ ರೈತರಿಗೆ ಅನುಕೂಲ ಮಾಡುವುದು ನಮ್ಮ ಉದ್ದೇಶವಾಗಿತ್ತು. ಇನ್ನು ಪ್ರಧಾನಮಂತ್ರಿ ಆವಾಸ್‌ ಯೋಜನೆ ಅಡಿಯಲ್ಲಿ ಬಡವರಿಗೆ 3 ಕೋಟಿ ಬಡವರಿಗೆ ಮನೆ ನಿರ್ಮಿಸುವ ಕುರಿತು ಕೂಡ ತೀರ್ಮಾನಿಸಲಾಗಿದೆ. ಲಕ್‌ಪತಿ ದೀದಿ ಸೇರಿ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಇದರಿಂದ ರೈತರು ಸಕಲ ರೀತಿಯಲ್ಲಿ ಏಳಿಗೆ ಹೊಂದಲಿದ್ದಾರೆ” ಎಂದರು.

“ಮೂರನೇ ಅವಧಿಯಲ್ಲಿ ದೇಶದ ಏಳಿಗೆಗೆ ಜತೆಗೆ ವಾರಾಣಸಿಯನ್ನೂ ಇನ್ನಷ್ಟು ಅಭಿವೃದ್ಧಿ ಮಾಡಲಾಗುವುದು. ಈಗಾಗಲೇ ಕಾಶಿಯ ಯುವಕ, ಯುವತಿಯರು, ರೈತರ ಏಳಿಗೆಗೆ ಹತ್ತಾರು ಕ್ರಮಗಳು, ರೈಲು ನಿಲ್ದಾಣ ಅಭಿವೃದ್ಧಿ, ಸಾಂಸ್ಕೃತಿಕ ಹಿರಿಮೆ, ಪರಂಪರೆಯನ್ನು ಮರುಕಳಿಸಲಾಗಿದೆ. ಧಾರ್ಮಿಕ ನಗರಿಯು ಅಭಿವೃದ್ಧಿಯ ನಗರವಾಗಿಯೂ ರೂಪುಗೊಂಡಿದ್ದನ್ನು ಎಲ್ಲರೂ ಕಾಣಬಹುದು. ಕಾಶಿ ವಿಶ್ವನಾಥನ ಕೃಪಾಶೀರ್ವಾದದಿಂದ ಮುಂದಿನ ವರ್ಷಗಳಲ್ಲಿಯೂ ಏಳಿಗೆಗೆ ಶ್ರಮ ವಹಿಸುತ್ತೇವೆ. ನನಗೆ ಆಶೀರ್ವಾದ ಮಾಡಿದ ಎಲ್ಲರಿಗೂ ಮತ್ತೊಮ್ಮೆ ಹೃದಯಾಂತರಾಳದ ಧನ್ಯವಾದ” ಎಂದು ಹೇಳಿದರು.

ಇದನ್ನೂ ಓದಿ: ಪೋಪ್‌-ಮೋದಿ ಭೇಟಿಯನ್ನು ಲೇವಡಿ ಮಾಡಲು ಹೋದ ಕಾಂಗ್ರೆಸ್‌ಗೆ ಮುಖಭಂಗ; ಕ್ರೈಸ್ತರ ಕ್ಷಮೆ ಕೇಳಿದ್ದೇಕೆ?

Continue Reading
Advertisement
Union Minister HD Kumaraswamy latest statement in New Delhi
ಬೆಂಗಳೂರು58 seconds ago

HD Kumaraswamy: ನನ್ನ ಹೃದಯದಲ್ಲಿ ಕೆಂಪೇಗೌಡರಿದ್ದಾರೆ, ಆಹ್ವಾನ ಬೇಕಿಲ್ಲ; ಕುಮಾರಸ್ವಾಮಿ

NEET UGC NET Exam irregularities protest demanding investigation
ರಾಯಚೂರು5 mins ago

Raichur News: ನೀಟ್, ಯುಜಿಸಿ ನೆಟ್ ಪರೀಕ್ಷೆಯಲ್ಲಿ ಅಕ್ರಮ; ವಿದ್ಯಾರ್ಥಿ ಸಂಘಟನೆಗಳ ಪ್ರತಿಭಟನೆ

kempegowda Jayanti
ಪ್ರಮುಖ ಸುದ್ದಿ11 mins ago

Kempegowda Jayanti: ಕೆಂಪೇಗೌಡ ಜಯಂತಿಗೆ ದೇವೇಗೌಡ, ಎಚ್‌ಡಿಕೆಗೆ ಸಿಗದ ಆಹ್ವಾನ; ಸರ್ಕಾರದ ವಿರುದ್ಧ ತಿರುಗಿಬಿದ್ದ ಒಕ್ಕಲಿಗರ ಸಂಘ

Sam Pitroda
ಪ್ರಮುಖ ಸುದ್ದಿ15 mins ago

Sam Pitroda: ಸಾಗರೋತ್ತರ ಕಾಂಗ್ರೆಸ್‌ ಅಧ್ಯಕ್ಷರಾಗಿ ಸ್ಯಾಮ್‌ ಪಿತ್ರೋಡಾ ಮತ್ತೆ ನೇಮಕ; ದಕ್ಷಿಣ ಭಾರತೀಯರನ್ನು ಆಫ್ರಿಕನ್ನರಿಗೆ ಹೋಲಿಸಿದ್ದ ನಾಯಕ

ECE V/S CSE
ಶಿಕ್ಷಣ26 mins ago

ECE v/s CSE: ಕಂಪ್ಯೂಟರ್ ಸೈನ್ಸ್, ಎಲೆಕ್ಟ್ರಾನಿಕ್ಸ್ ಅಂಡ್‌ ಕಮ್ಯುನಿಕೇಷನ್; ಯಾವುದು ಉತ್ತಮ ಆಯ್ಕೆ?

Vijayalakshmi Darshan
ಕರ್ನಾಟಕ51 mins ago

Vijayalakshmi Darshan: ಜೈಲಲ್ಲಿ ದರ್ಶನ್‌ ಭೇಟಿ ಬೆನ್ನಲ್ಲೇ ಫ್ಯಾನ್ಸ್‌ಗೆ ದೊಡ್ಡ ಸಂದೇಶ ಕೊಟ್ಟ ವಿಜಯಲಕ್ಷ್ಮೀ; ಇಲ್ಲಿದೆ ಪೋಸ್ಟ್!

Monsoon Rain Boots Fashion
ಫ್ಯಾಷನ್1 hour ago

Monsoon Rain Boots Fashion: ಮಕ್ಕಳ ಮಾನ್ಸೂನ್‌ ಫ್ಯಾಷನ್‌ನಲ್ಲಿ ಟ್ರೆಂಡಿಯಾದ 3 ಬಗೆಯ ರೈನ್‌ ಬೂಟ್ಸ್

Narendra Modi
ದೇಶ2 hours ago

Narendra Modi: ಸಂಸತ್ತಿನಲ್ಲಿ ಇಬ್ಬರು ‘ಪುಟಾಣಿ’ ಅತಿಥಿಗಳನ್ನು ಸ್ವಾಗತಿಸಿದ ಮೋದಿ; ಯಾರವರು? Video ನೋಡಿ

Weight Loss Tips
ಆರೋಗ್ಯ2 hours ago

Weight Loss Tips: ನಲವತ್ತರ ನಂತರ ತೂಕ ಇಳಿಸುವುದು ಹೇಗೆ?

Nadaprabhu Kempegowda
ಬೆಂಗಳೂರು2 hours ago

Essay on Kempegowda in Kannada: ನಾಡಪ್ರಭು ಕೆಂಪೇಗೌಡರು ಆಧುನಿಕ ಬೆಂಗಳೂರಿನ ಮೂಲ ಶಿಲ್ಪಿ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ5 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ6 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌