Lok Sabha Election 2024: ಏ.14ರಂದು ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಭೇಟಿ: ವಿಜಯೇಂದ್ರ - Vistara News

ಮೈಸೂರು

Lok Sabha Election 2024: ಏ.14ರಂದು ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಭೇಟಿ: ವಿಜಯೇಂದ್ರ

Lok Sabha Election 2024: ಏ. 14ರಂದು ಸಂಜೆ 4 ಗಂಟೆಗೆ ಮೈಸೂರಿನ ಮಹಾರಾಜರ ಮೈದಾನದಲ್ಲಿ ನಡೆಯಲಿರುವ ಚುನಾವಣಾ ಪ್ರಚಾರ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

VISTARANEWS.COM


on

BJP state president B Y Vijayendra latest statement in mysore
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೈಸೂರು: ಏ. 14ರಂದು ಮೈಸೂರಿನ ಚುನಾವಣಾ ಪ್ರಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ (Lok Sabha Election 2024) ತಿಳಿಸಿದರು.

ಮೈಸೂರಿನಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ, ಮಂಡ್ಯ, ಚಾಮರಾಜನಗರ ಕ್ಷೇತ್ರವನ್ನು ಒಳಗೊಂಡ ಬೃಹತ್‌ ಚುನಾವಣಾ ಪ್ರಚಾರ ಸಭೆಯನ್ನು ಏ. 14ರಂದು ಸಂಜೆ 4 ಗಂಟೆಗೆ ಮೈಸೂರಿನ ಮಹಾರಾಜರ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ವಿವರಿಸಿದರು.

ಇದನ್ನೂ ಓದಿ: Kodagu News: ಕಾವೇರಿ ತವರು ಕೊಡಗಿನಲ್ಲಿ ವರುಣನ ಕೃಪೆಗಾಗಿ ದೇವರ ಮೊರೆ ಹೋದ ಜನತೆ

ವಿಶ್ವ ಮೆಚ್ಚಿದ ನಾಯಕ ಮೋದಿ ಅವರು ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸುತ್ತಿದ್ದು, ಈ ಭಾಗದ ಲೋಕಸಭಾ ಕ್ಷೇತ್ರಗಳಲ್ಲಿ ದೊಡ್ಡ ಶಕ್ತಿ ತಂದುಕೊಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ಮಾಜಿ ಮುಖ್ಯಮಂತ್ರಿ ಮತ್ತು ಮಂಡ್ಯದ ಎನ್‍ಡಿಎ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಬಿಜೆಪಿ- ಜೆಡಿಎಸ್ ಹಿರಿಯ ಮುಖಂಡರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಈಗಾಗಲೇ 3 ಕ್ಷೇತ್ರಗಳಲ್ಲಿ ಎನ್‍ಡಿಎ ಪರ ಅಲೆ ಇದೆ. ಪ್ರಧಾನಿಯವರ ಭೇಟಿಯಿಂದ ದೊಡ್ಡ ಅಂತರದ ಗೆಲುವು ನಮ್ಮದಾಗಲಿದೆ ಎಂದು ತಿಳಿಸಿದರು. ಬಿಜೆಪಿ- ಜೆಡಿಎಸ್ ಪಕ್ಷಗಳ ಲಕ್ಷಾಂತರ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಗುರುಪಾದಸ್ವಾಮಿ ಅವರು ಮೋದಿಯವರ ನಾಯಕತ್ವಕ್ಕೆ ಮೆಚ್ಚುಗೆ ಸೂಚಿಸಿ ಅವರನ್ನು ಬೆಂಬಲಿಸಿ, ಯಾವುದೇ ಷರತ್ತು ಇಲ್ಲದೆ ಬಿಜೆಪಿ ಸೇರಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: Candidates Chess: ಪ್ರಜ್ಞಾನಂದ, ವಿದಿತ್​ಗೆ ಗೆಲುವು; ವೈಶಾಲಿ, ಹಂಪಿಗೆ ಸೋಲು

ಈ ವೇಳೆ ನಗರ ಜಿಲ್ಲಾಧ್ಯಕ್ಷ ನಾಗೇಂದ್ರ, ಗ್ರಾಮಾಂತರ ಜಿಲ್ಲಾಧ್ಯಕ್ಷ ಎಲ್. ಆರ್. ಮಹದೇವಸ್ವಾಮಿ, ಶಾಸಕ ಶ್ರೀವತ್ಸ, ಇತರರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮೈಸೂರು

Mysore News: ಮೈಸೂರಿನಲ್ಲಿ ಪಾಲಿಕೆಯಿಂದ ನಿಷೇಧಿತ ಪ್ಲಾಸ್ಟಿಕ್‌ ವಶ; 1.61 ಲಕ್ಷ ರೂ. ದಂಡ

Mysore News: ಮೈಸೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ನಗರದ ನಾನಾ ಕಡೆ ದಾಳಿ ನಡೆಸಿ ಅಪಾರ ಪ್ರಮಾಣದ ನಿಷೇಧಿತ ಪ್ಲಾಸ್ಟಿಕ್‌ ವಶಪಡಿಸಿಕೊಂಡು ದಂಡ ವಿಧಿಸಿದ್ದಾರೆ. ಪಾಲಿಕೆಯ ಆಯುಕ್ತರ ನೇತೃತ್ವದಲ್ಲಿ ನಗರದ 9 ವಲಯ ಕಚೇರಿ ವ್ಯಾಪ್ತಿಯಲ್ಲಿ ಕಾರ್ಯಚರಣೆ ನಡೆಸಿ, ಸುಮಾರು 1515 ಕೆಜಿ ಪ್ಲಾಸ್ಟಿಕ್‌ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, 1.61 ಲಕ್ಷ ರೂ. ದಂಡ ವಸೂಲಿ ಮಾಡಿದೆ.

VISTARANEWS.COM


on

banned plastic seized by corporation in Mysore
Koo

ಮೈಸೂರು: ನಗರದ ನಾನಾ ಕಡೆ ಮೈಸೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ದಾಳಿ ನಡೆಸಿ, ಅಪಾರ ಪ್ರಮಾಣದ ನಿಷೇಧಿತ ಪ್ಲಾಸ್ಟಿಕ್‌ ವಶಪಡಿಸಿಕೊಂಡು ದಂಡ (Mysore News) ವಿಧಿಸಿದ್ದಾರೆ.

ಪಾಲಿಕೆಯ ಆಯುಕ್ತರ ನೇತೃತ್ವದಲ್ಲಿ ನಗರದ 9 ವಲಯ ಕಚೇರಿ ವ್ಯಾಪ್ತಿಯಲ್ಲಿ ಕಾರ್ಯಚರಣೆ ನಡೆಸಿ, ಸುಮಾರು 1515 ಕೆಜಿ ಪ್ಲಾಸ್ಟಿಕ್‌ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, 1.61 ಲಕ್ಷ ರೂ. ದಂಡ ವಸೂಲಿ ಮಾಡಲಾಗಿದೆ.

ಇದನ್ನೂ ಓದಿ: RCB vs CSK: ವಾಹನ ಸವಾರರೇ ಗಮನಿಸಿ, ನಾಳೆ ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಸಂಚಾರ ಬದಲಾವಣೆ

ಸೂಕ್ತ ಮಾಹಿತಿಯ ಮೇರೆಗೆ ಆಯಕ್ತರ ಆದೇಶದಂತೆ ನಗರದ ಧನ್ವಂತ್ರಿ ರಸ್ತೆಯಲ್ಲಿರುವ, ಮಲ್ಲೇಶ್‌ ಎಂಬುವವರಿಗೆ ಸೇರಿದ ಧನ್ವಂತ್ರಿ ಎಂಟರ್‌ಪ್ರೈಸಸ್‌ ಗೋದಾಮಿಗೆ ವಲಯ ಆಯುಕ್ತರ ನೇತೃತ್ವದಲ್ಲಿ ದಾಳಿ ನಡೆಸಿ, ಗೋದಾಮಿನಲ್ಲಿ ಸಂಗ್ರಹಿಸಿದ್ದ ನಿಷೇಧಿತ ಪ್ಲಾಸ್ಟಿಕ್‌ನ್ನು ವಶಪಡಿಸಿಕೊಂಡು 25 ಸಾವಿರ ರೂ ದಂಡ ವಿಧಿಸಿದ್ದಾರೆ.

ನಿಗದಿತ ಸ್ಥಳದಲ್ಲಿ ಕಟ್ಟಡ ತ್ಯಾಜ್ಯ ವಿಲೇವಾರಿ ಮಾಡಿ

ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕಟ್ಟಡ ನಿರ್ಮಾಣ, ದುರಸ್ತಿ ಮತ್ತು ತೆರವುಗೊಳಿಸುವಿಕೆಯಿಂದ ಉತ್ಪತ್ತಿಯಾಗುವ ಕಟ್ಟಡ ತ್ಯಾಜ್ಯವನ್ನು ಅನೇಕ ಕಡೆ ಸಾರ್ವಜನಿಕರು ರಸ್ತೆ ಬದಿಯಲ್ಲಿ, ಖಾಲಿ ನಿವೇಶನಗಳಲ್ಲಿ ಹಾಕುತ್ತಿರುವುದನ್ನು ನಿಯಂತ್ರಿಸಲು ಪಾಲಿಕೆಯು ಮೈಸೂರು ನಗರದ ಹೊರವಲಯದಲ್ಲಿನ ಸಿ.ಎ.05, ಹಂಚ್ಯಾ-ಸಾತಗಳ್ಳಿ `ಎ’ ವಲಯದಲ್ಲಿ ಖಾಲಿ ಪ್ರದೇಶವನ್ನು ಕಟ್ಟಡ ತ್ಯಾಜ್ಯದ ವಿಲೇವಾರಿಗೆಂದು ಗುರುತಿಸಿದೆ.

ಇದನ್ನೂ ಓದಿ: Bal Jeevan Bima: ಮಕ್ಕಳ ಹೆಸರಲ್ಲಿ ನಿತ್ಯ 6 ರೂ.ನಂತೆ ಕಟ್ಟಿದರೆ 1 ಲಕ್ಷ ರೂ. ವಿಮೆಯ ರಕ್ಷಣೆ

ಮುಂದಿನ ದಿನಗಳಲ್ಲಿ ಸಾರ್ವಜನಿಕರು ಹಾಗೂ ಖಾಸಗಿ ವ್ಯಕ್ತಿಗಳು ನಗರ ಪಾಲಿಕೆಯಿಂದ ನಿಗದಿಗೊಳಿಸಿರುವ ಸ್ಥಳದಲ್ಲೇ ಕಡ್ಡಾಯವಾಗಿ ಕಟ್ಟಡ ತ್ಯಾಜ್ಯವನ್ನು ವಿಲೇವಾರಿ ಮಾಡಬೇಕೆಂದು ಸೂಚಿಸಲಾಗಿದೆ. ಒಂದು ವೇಳೆ ನಗರ ಪ್ರದೇಶದ ಇತರೆ ಸ್ಥಳಗಳಲ್ಲಿ ಎಲ್ಲೆಂದರಲ್ಲಿ ಕಟ್ಟಡ ತ್ಯಾಜ್ಯವನ್ನು ವಿಲೇವಾರಿ ಮಾಡುವುದು ಕಂಡುಬoದಲ್ಲಿ ಸಂಬoಧಪಟ್ಟ ಕಟ್ಟಡದ ಮಾಲೀಕರಿಗೆ ಮತ್ತು ವಾಹನದ ಮಾಲೀಕರಿಗೆ ಭಾರೀ ಮೊತ್ತದ ದಂಡ ವಿಧಿಸುವುದಲ್ಲದೇ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.

Continue Reading

ಬೆಂಗಳೂರು

Road Accident : ಮೈಸೂರು- ಬೆಂಗಳೂರಲ್ಲಿ ಮೂವರ ಪ್ರಾಣ ಕಸಿದ ಮೂರು ಪ್ರತ್ಯೇಕ ಅಪಘಾತ

Road Accident : ಬೆಂಗಳೂರು-ಮೈಸೂರಲ್ಲಿ ಪ್ರತ್ಯೇಕ ಕಡೆಗಳಲ್ಲಿ ನಡೆದ ಅಪಘಾತದಲ್ಲಿ ಮೂವರು ದಾರುಣವಾಗಿ ಮೃತಪಟ್ಟಿದ್ದಾರೆ. ಬೆಂಗಳೂರಲ್ಲಿ ಯುವಕನೊರ್ವ ಬೈಕ್‌ ಅಪಘಾತದಲ್ಲಿ ಮೃತಪಟ್ಟರೆ, ಮೈಸೂರಲ್ಲಿ ಎರಡು ಅಪಘಾತದಲ್ಲಿ ಇಬ್ಬರು ಜೀವ ಕಳೆದುಕೊಂಡಿದ್ದಾರೆ.

VISTARANEWS.COM


on

By

road Accident in Bengaluru mysore
Koo

ಮೈಸೂರು/ಬೆಂಗಳೂರು: ಮೈಸೂರಿನಲ್ಲಿ ಪ್ರತ್ಯೇಕ ಕಡೆಗಳಲ್ಲಿ ಅಪಘಾತ (Road Accident) ನಡೆದಿದ್ದು, ಇಬ್ಬರು ಮೃತಪಟ್ಟರೆ, ಬೆಂಗಳೂರಲ್ಲಿ ಬರ್ತ್‌ ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಯುವಕ ಸ್ವಯಂ ಅಪಘಾತದಲ್ಲಿ ಸಾವನ್ನಪ್ಪಿದ್ದಾನೆ.

ಬೈಕ್‌ಗಳ ನಡುವೆ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟರೆ, ಮತ್ತಿಬ್ಬರ ಸ್ಥಿತಿ ಗಂಭೀರವಾಗಿದೆ. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಹಿರಿಕ್ಯಾತನಹಳ್ಳಿಯಲ್ಲಿ ಅಪಘಾತ ನಡೆದಿದೆ.

ಹುಣಸೂರು ತಾಲೂಕಿನ ಮರೂರುಕಾವಲ್ ಗ್ರಾಮದ ನಿವಾಸಿ ಸಾಗರ್ (35) ಮೃತ ದುರ್ದೈವಿ. ಹಿಂಬದಿ ಕುಳಿತಿದ್ದ ಅರಸು ಕಲ್ಲಹಳ್ಳಿ ಗ್ರಾಮದ ಹರೀಶ್ ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಾಳು ಹರೀಶ್‌ನನ್ನು ಹುಣಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮತ್ತೊಂದು ವಾಹನದ ಸವಾರ ಕೆಸ್ತೂರು ಕೊಪ್ಪಲು ಗ್ರಾಮದ ನಿವಾಸಿ ಕೆಂಡಗಣ್ಣ ಅವರು ತೀವ್ರ ಗಾಯವಾಗಿದ್ದು, ಮೈಸೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹುಣಸೂರು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.

ಕಾರು-ಸ್ಕೂಟರ್‌ ಅಪಘಾತ; ಮಹಿಳೆ ಸಾವು

ಕಾರು- ಸ್ಕೂಟರ್ ನಡುವೆ ಭೀಕ ಅಪಘಾತ ಸಂಭವಿಸಿದ್ದು, ಮಹಿಳೆಯೊಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ಮೈಸೂರಿನ ಕೆಆರ್‌ಎಸ್ ರಸ್ತೆಯಲ್ಲಿ ಘಟನೆ ನಡೆದಿದೆ. ಹೆಬ್ಬಾಳು ಬಡಾವಣೆ ನಿವಾಸಿ ರಾಧಾ (34) ಮೃತ ದುರ್ದೈವಿ.

ಸ್ಥಳಕ್ಕೆ ವಿವಿ ಪುರಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ. ಕಾರು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: Student Death : ಹಾಸ್ಟೆಲ್‌ನಲ್ಲಿ ನೇಣಿಗೆ ಶರಣಾದ ಎಂಜಿನಿಯರಿಂಗ್‌ ವಿದ್ಯಾರ್ಥಿನಿ; ಕಾಲೇಜು ಕಿರುಕುಳಕ್ಕೆ ಬೇಸತ್ತಳೇ?

ಹೆಲ್ಮೆಟ್‌ರಹಿತ ಸವಾರಿಗೆ ಯುವಕ ಬಲಿ

ಬೆಂಗಳೂರಿನ ನಾಗವಾರ ಕಡೆಯಿಂದ ಮೂಡಲಪಾಳ್ಯ ಕಡೆಗೆ ಬೈಕ್‌ನಲ್ಲಿ ಬರುವಾಗ ಯುವಕನೊರ್ವ ಅಪಘಾತದಲ್ಲಿ ಮೃತಪಟ್ಟಿದ್ದಾನೆ. ವರುಣ್‌ ಮೃತ ದುರ್ದೈವಿ.

ಮೂಲತಃ ಕೋಲಾರದ ವರುಣ್ ಬೆಂಗಳೂರು ಪೀಣ್ಯ ಇಂಡಸ್ಟ್ರಿಯಲ್‌ ಏರಿಯಾದಲ್ಲಿ ಏಷಿಯನ್ ಪೈಂಟ್ಸ್‌ನಲ್ಲಿ ಮ್ಯಾನೆಜರ್ ಆಗಿ ಕೆಲಸ ಮಾಡುತ್ತಿದ್ದ. ಗುರುವಾರ ರಾತ್ರಿ ಸ್ನೇಹಿತನ ಬರ್ತ್ ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ವರುಣ್ ಬಳಿಕ ಹಾಸ್ಟೆಲ್‌ಗೆ ತೆರಳಿ ಸ್ನೇಹಿತರ ಭೇಟಿಯಾಗಿ ಬರುತ್ತಿದ್ದ. ಈ ವೇಳೆ ಮಾಳಗಾಳ ಬಳಿ ಸೆಲ್ಫ್‌ ಆ್ಯಕ್ಸಿಡೆಂಟ್‌ ಆಗಿದೆ. ಹೆಲ್ಮೆಟ್ ಧರಿಸದೇ ಇದ್ದಿದ್ದರಿಂದ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ವರುಣ್‌ ತಾಯಿ ಅನಾರೋಗ್ಯದಿಂದ ಬಳಲುತ್ತಿದ್ದು, ತಂದೆ ಸಣ್ಣ ಪುಟ್ಟ ಕೆಲಸ ಮಾಡಿಕೊಂಡಿದ್ದಾರೆ. ವರುಣ್‌ ತಮ್ಮ ಇನ್ನೂ ವಿದ್ಯಾಭ್ಯಾಸ ಮಾಡುತ್ತಿದ್ದು, ಇಡೀ ಕುಟುಂಬಕ್ಕೆ ವರುಣ್‌ ಆಧಾರವಾಗಿದ್ದ. ತಾಯಿಯ ಆಸ್ಪತ್ರೆ ಖರ್ಚಿಗೂ ಈತನೇ ಆಧಾರವಾಗಿದ್ದ. ವರುಣ್‌ ಸಾವು ಇಡೀ ಕುಟುಂಬಕ್ಕೆ ತುಂಬಲಾರದ ನಷ್ಟವಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Rain News : ರಾಜ್ಯಾದ್ಯಂತ ಮಳೆಯು ಅವಾಂತರವನ್ನೇ ಸೃಷ್ಟಿಸಿದೆ. ಬಿಸಿಲಿನಿಂದ ಕಂಗೆಟ್ಟ ಜನತೆಗೆ ಮಳೆಯು ತತ್ತರಿಸುವಂತೆ ಮಾಡಿದೆ. ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆಯಾಗುವ (Heavy Rain) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

VISTARANEWS.COM


on

By

Karnataka weather Forecast
Koo

ಬೆಂಗಳೂರು : ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗಲಿದ್ದು, ರಾಜ್ಯಾದ್ಯಂತ ಪ್ರತ್ಯೇಕ ಕಡೆಯಲ್ಲಿ ಭಾರಿ ಮಳೆಯಾಗುವ (Heavy Rain) ಸಾಧ್ಯತೆಯಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಮತ್ತು 30-40 ಕಿ.ಮೀ ವ್ಯಾಪ್ತಿಯಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು (Rain News) ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ತುಮಕೂರು, ರಾಮನಗರದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಚಾಮರಾಜನಗರ, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ. ಉಳಿದ ಉಳಿದ ಭಾಗಗಳಲ್ಲಿ ಹಗುರ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಅನುಕ್ರಮವಾಗಿ 33 ಮತ್ತು 23 ಡಿ.ಸೆ ಇರಲಿದೆ.

ಉತ್ತರ ಒಳನಾಡಿನ ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇತರ ಪ್ರದೇಶಗಳಲ್ಲಿ ಸಣ್ಣ ಪ್ರಮಾಣದಲ್ಲಿ ಇರಲಿದೆ. ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.

ಇಲ್ಲೆಲ್ಲ ಭಯಂಕರ ಮಳೆ

ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಏಳು ಜಿಲ್ಲೆಗಳಲ್ಲಿ ಭಾರೀ ಮಳೆಯೊಂದಿಗೆ ಗುಡುಗು ಮತ್ತು ಗಂಟೆಗೆ 40-50 ಕಿ.ಮೀ ವ್ಯಾಪ್ತಿಯಲ್ಲಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಇದನ್ನೂ ಓದಿ: Murder Case : ತಂಗಿಯನ್ನು ಬೈಕ್‌ನಲ್ಲಿ ಸುತ್ತಾಡಿಸುತ್ತಿದ್ದವನನ್ನು ಸ್ಕ್ರೂಡ್ರೈವರ್‌ನಿಂದ ಚುಚ್ಚಿ ಕೊಂದ

ಕೊಟ್ಟೂರು ಬಸ್ ಸ್ಟ್ಯಾಂಡ್‌ನಲ್ಲಿ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

ವಿಜಯನಗರದ ಕೊಟ್ಟೂರು ಪಟ್ಟಣದಲ್ಲಿ ಸುರಿದ ಭಾರಿ ಮಳೆಗೆ (Heavy Rain) ಕೊಟ್ಟೂರು ಬಸ್ ನಿಲ್ದಾಣ ಸಂಪೂರ್ಣ ಜಲಾವೃತ ಆಗಿತ್ತು. ಈ ವೇಳೆ ಬಸ್ ನಿಲ್ದಾಣ ಬಳಿಯ ದೊಡ್ಡ ಚರಂಡಿಗೆ ರಭಸವಾಗಿ ಮಳೆ ನೀರು ಹರಿದು ಹೋಗುತ್ತಿತ್ತು. ಅದೇ ಚರಂಡಿ ಪಕ್ಕದಲ್ಲಿ ನಿಧಾನವಾಗಿ ನಡೆದುಕೊಂಡು ಬರುವಾಗ ತಾಯಿ -ಮಗ ಇಬ್ಬರು ಆಯ ತಪ್ಪಿ ಬಿದ್ದಿದ್ದಾರೆ. ಒಂದು ಕೈಯಲ್ಲಿ ಮಗ, ಇನ್ನೊಂದು ಕೈಯಲ್ಲಿ ಲಗೇಜ್‌ ಹಿಡಿದು ಬರುವಾಗ ಬಿದ್ದಿದ್ದರು.

ಈ ಸಂದರ್ಭದಲ್ಲಿ ಆಚೆ – ಇಚೆ ಹೆಜ್ಜೆ ಇಟ್ಟಿದ್ದರೂ ಚರಂಡಿ ನೀರಲ್ಲಿ ಕೊಚ್ಚಿ ಹೋಗುತ್ತಿದ್ದರು. ಕೊಟ್ಟೂರು ಬಸ್ ನಿಲ್ದಾಣದಲ್ಲಿ ತಾಯಿ – ಮಗುವಿನ ಪರದಾಟದ ವಿಡಿಯೋ ಅಲ್ಲಿದ್ದ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿತ್ತು.

Karnataka Weather Forecast

ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಬಳಿಯೇ ಸರ್ಕಾರಿ ಆಸ್ಪತ್ರೆ ಇದೆ. ನೂರಾರು ಜನರು ಇದೇ ಮಾರ್ಗದಲ್ಲಿ ಓಡಾಡುತ್ತಾರೆ. ಬಾಯ್ತೆರೆದಿರುವ ದೊಡ್ಡ ಚರಂಡಿ ಬಲಿಗಾಗಿ ಕಾಯುತ್ತಿದೆ. ಇದನ್ನೂ ಮುಚ್ಚಿಸಿಬೇಕಿದ್ದ ಅಧಿಕಾರಿಗಳು ಮೌನಕ್ಕೆ ಶರಣಾಗಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದರು.

ಇತ್ತ ಕೊಟ್ಟೂರು ಬಸ್ ನಿಲ್ದಾಣದಲ್ಲಿ ಮಳೆಯಿಂದ ಅವಾಂತರದ ಸುದ್ದಿ ಪ್ರಸಾರ ಆಗುತ್ತಿದ್ದಂತೆ ಸ್ಥಳಕ್ಕೆ ಹಗರಿಬೊಮ್ಮನಹಳ್ಳಿ ಶಾಸಕ ನೇಮಿರಾಜ್ ನಾಯಕ್, ವಿಜಯನಗರ ಡಿಸಿ ಜಗದೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಸ್ ನಿಲ್ದಾಣ ಅವ್ಯವಸ್ಥೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ಬಸ್ ನಿಲ್ದಾಣದ ಸುತ್ತಮುತ್ತಲಿನ ಪ್ರದೇಶಗಳ ವೀಕ್ಷಿಸಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

R Ashok: ಪೊಲೀಸ್‌ ಇಲಾಖೆ ಸತ್ತಿದೆಯೋ ಬದುಕಿದೆಯೋ ತಿಳಿಯುತ್ತಿಲ್ಲ: ಆರ್.ಅಶೋಕ್ ಆಕ್ರೋಶ

R Ashok: ಹೆಣ್ಣುಮಕ್ಕಳು ಸರಣಿಯಾಗಿ ಕೊಲೆಯಾಗುತ್ತಿದ್ದಾರೆ. ಇದರ ಜತೆಗೆ ಲವ್‌ ಜಿಹಾದ್‌ ಕೂಡ ನಡೆಯುತ್ತಿದೆ. ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹಾಳಾಗಿದೆ. ರಾಜ್ಯದಲ್ಲಿ ಪೊಲೀಸ್‌ ಇಲಾಖೆ ಸತ್ತಿದೆಯೋ, ಬದುಕಿದೆಯೋ ಒಂದೂ ತಿಳಿಯುತ್ತಿಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Opposition party leader r ashok latest statement in Mysuru
Koo

ಮೈಸೂರು: ಹುಬ್ಬಳ್ಳಿಯಲ್ಲಿ ನೇಹಾ ಹತ್ಯೆಯಾಗಿ ಒಂದು ತಿಂಗಳು ಕಳೆಯುವಾಗಲೇ ಅಂಜಲಿ ಎಂಬ ಯುವತಿ ಕೊಲೆಯಾಗಿದ್ದಾಳೆ. ರಾಜ್ಯದಲ್ಲಿ ಪೊಲೀಸ್‌ ಇಲಾಖೆ ಸತ್ತಿದೆಯೋ, ಬದುಕಿದೆಯೋ ಒಂದೂ ತಿಳಿಯುತ್ತಿಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.‌ ಅಶೋಕ (R Ashok) ಆಕ್ರೋಶ ವ್ಯಕ್ತಪಡಿಸಿದರು.

ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೆಣ್ಣುಮಕ್ಕಳು ಸರಣಿಯಾಗಿ ಕೊಲೆಯಾಗುತ್ತಿದ್ದಾರೆ. ಇದರ ಜತೆಗೆ ಲವ್‌ ಜಿಹಾದ್‌ ಕೂಡ ನಡೆಯುತ್ತಿದೆ. ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹಾಳಾಗಿದೆ ಎಂದರು.

ಇದನ್ನೂ ಓದಿ: Medicine Price: ಗುಡ್‌ ನ್ಯೂಸ್;‌ ಶುಗರ್‌, ಹೃದ್ರೋಗ ಸೇರಿ 41 ಔಷಧಗಳ ಬೆಲೆ ಇಳಿಸಿದ ಮೋದಿ ಸರ್ಕಾರ

ಈ ಎಲ್ಲ ಸಮಸ್ಯೆಗಳ ನಡುವೆ ಬರಗಾಲದಿಂದಾಗಿ ಜನರು ತೊಂದರೆಗೊಳಗಾಗಿದ್ದಾರೆ. ಹಿಂದೆ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಐದು ವರ್ಷವೂ ಬರಗಾಲ ಬಂದಿತ್ತು. ಬರಗಾಲದ ಪರಿಹಾರವನ್ನು ಕೇಂದ್ರ ಸರ್ಕಾರ ನೀಡಿದೆ. ತಮ್ಮ ಪಾಲಿನ ಹಣವಾಗಿ ಒಂದು ನಯಾ ಪೈಸೆಯನ್ನೂ ಕಾಂಗ್ರೆಸ್ ಸರ್ಕಾರ ಬಿಡುಗಡೆ ಮಾಡಿಲ್ಲ ಎಂದು ದೂರಿದರು.

ಪ್ರಧಾನಿ ನರೇಂದ್ರ ಮೋದಿಯವರಿಗೆ 3 ಕೋಟಿ ರೂಪಾಯಿ ಆಸ್ತಿ ಇದೆ. ಆದರೆ ಡಿ.ಕೆ. ಶಿವಕುಮಾರ್ ಅವರ ಆಸ್ತಿ ಹೆಚ್ಚಾಗಿದೆ. ಹಾಲಿನ ಪ್ರೋತ್ಸಾಹಧನ 700 ಕೋಟಿ ರೂ‌. ಉಳಿಸಿಕೊಂಡಿದ್ದಾರೆ. ಆಂಬ್ಯುಲೆನ್ಸ್ ಚಾಲಕರು, ಗುತ್ತಿಗೆ ಸಿಬ್ಬಂದಿಗೆ ಸಂಬಳ ಪಾವತಿಯಾಗಿಲ್ಲ. ಕೇರಳಕ್ಕೆ ಬಂದ ಪರಿಸ್ಥಿತಿಯೇ ಇನ್ನು ಕರ್ನಾಟಕಕ್ಕೆ ಬರಲಿದೆ. ಪಾಕಿಸ್ತಾನದಲ್ಲಿ ಅಕ್ಕಿ, ಬೇಳೆ, ಗೋಧಿ ಬೆಲೆ 2 ಸಾವಿರ ರೂ.ಗೆ ತಲುಪಿದೆ. ಚಹ ಕುಡಿದರೆ 500 ರೂ. ಕೊಡಬೇಕು. ಸಿದ್ದರಾಮಯ್ಯನವರ ಸರ್ಕಾರ ಇನ್ನೂ ಇದ್ದರೆ ಪಾಕಿಸ್ತಾನದ ಆರ್ಥಿಕತೆ ಕರ್ನಾಟಕಕ್ಕೆ ಬರಲಿದೆ ಎಂದು ಹೇಳಿದರು.

ಇದನ್ನೂ ಓದಿ: Reliance Retail: ರಿಲಯನ್ಸ್‌ ರಿಟೇಲ್‌ನಲ್ಲಿ ಎಎಸ್‌ಒಎಸ್‌ ಬ್ರ್ಯಾಂಡ್‌ನ ಉತ್ಪನ್ನಗಳು ಈಗ ಲಭ್ಯ

ವಿದ್ಯಾವಂತ ಮತದಾರರು

ಈಗ ವಿಧಾನಪರಿಷತ್‌ನ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿದ್ದು, ಇಲ್ಲಿ ವಿದ್ಯಾವಂತರೇ ಇದ್ದಾರೆ. ಇದು ಕೈ ಮುಗಿದುಕೊಂಡು ಕೇಳುವ ಮತದಾನ ಅಲ್ಲ. ಎಲ್ಲರನ್ನೂ ಸಂಪರ್ಕಿಸಿ ಮನ ಒಲಿಸಬೇಕಾಗುತ್ತದೆ. ನಾವು ಜೆಡಿಎಸ್ ಅಭ್ಯರ್ಥಿಗೆ ಬೆಂಬಲ ನೀಡಿದ್ದು, ಬಿಜೆಪಿ ಅಭ್ಯರ್ಥಿ ನಾಳೆ ನಾಮಪತ್ರ ವಾಪಸ್ ಪಡೆಯಲಿದ್ದಾರೆ. ಮತದಾರರು ಬಿಜೆಪಿ-ಜೆಡಿಎಸ್ ಮೈತ್ರಿಗೆ ಮತ ನೀಡಿ ಎಂದು ಮನವಿ ಮಾಡಿದರು.

Continue Reading
Advertisement
Kannada New Movie powder Teaser Out
ಸ್ಯಾಂಡಲ್ ವುಡ್10 mins ago

Kannada New Movie: ಬಹು ನಿರೀಕ್ಷಿತ ʻಪೌಡರ್‌ʼ ಸಿನಿಮಾ ಟೀಸರ್‌ ಔಟ್‌!

Drowned in water
ರಾಮನಗರ11 mins ago

Drowned In water : ನಮಾಜ್‌ ಮುಗಿಸಿ ಈಜಲು ಹೋದ ಮೂವರು ನೀರುಪಾಲು; ಐವರು ಪ್ರಾಣಾಪಾಯದಿಂದ ಪಾರು

Illegal sand mining
ಕರ್ನಾಟಕ12 mins ago

Illegal Sand Mining: ಅಕ್ರಮ ಮರಳುಗಾರಿಕೆ: ಪೊಲೀಸರು, ಅಧಿಕಾರಿಗಳಿಗೆ ರಕ್ಷಣೆ ಕೊಡುವಂತೆ ಗ್ರಾಮಸ್ಥರ ಮನವಿ!

RCB vs CSK
ಕ್ರಿಕೆಟ್14 mins ago

RCB vs CSK: ಚಿನ್ನಸ್ವಾಮಿಯಲ್ಲಿ ಆರ್​ಸಿಬಿ-ಚೆನ್ನೈ ತಂಡಗಳ ಐಪಿಎಲ್​ ದಾಖಲೆ ಹೇಗಿದೆ?

Narayana Murthy
ದೇಶ20 mins ago

Narayana Murthy: ಕೃತಕ ಬುದ್ಧಿಮತ್ತೆಯಿಂದ ಉದ್ಯೋಗಗಳಿಗೆ ಕತ್ತರಿ? ನಾರಾಯಣ ಮೂರ್ತಿ ಶಾಕಿಂಗ್‌ ಹೇಳಿಕೆ

IPL 2024
ಪ್ರಮುಖ ಸುದ್ದಿ28 mins ago

IPL 2024 : ಆರ್​ಸಿಬಿ ಮತ್ತು ಸಿಎಸ್​ಕೆ ನಡುವಿನ ಪಂದ್ಯದ ವಿಜೇತರು ಯಾರು ಎಂದು ತಿಳಿಸಿದ ಬ್ರಿಯಾನ್ ಲಾರಾ

Job Alert
ಉದ್ಯೋಗ28 mins ago

Job Alert: ಬಂಧನ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ದ್ವಿತೀಯು ಪಿಯು ಪಾಸಾದವರೂ ಅಪ್ಲೈ ಮಾಡಿ

Bomb Blast
ದೇಶ36 mins ago

Bomb Blast: ಚೆಂಡೆಂದು ಭಾವಿಸಿ ಬಾಂಬ್‌ ಎತ್ತಿಕೊಂಡ ಮದರಸಾ ವಿದ್ಯಾರ್ಥಿ; ಸ್ಫೋಟಕ್ಕೆ ಮೌಲಾನಾ ಸಾವು

KSRTC BUS Woman locks in window of KSRTC bus after going to spit
ಬೆಂಗಳೂರು38 mins ago

KSRTC Bus : ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ

banned plastic seized by corporation in Mysore
ಮೈಸೂರು40 mins ago

Mysore News: ಮೈಸೂರಿನಲ್ಲಿ ಪಾಲಿಕೆಯಿಂದ ನಿಷೇಧಿತ ಪ್ಲಾಸ್ಟಿಕ್‌ ವಶ; 1.61 ಲಕ್ಷ ರೂ. ದಂಡ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ10 hours ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ11 hours ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ24 hours ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ1 day ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು1 day ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ2 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ3 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20243 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20243 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌