Gold Rate Today: ಚಿನ್ನದ ಬೆಲೆ ಮತ್ತೆ ದಾಖಲೆ ಏರಿಕೆ; 10 ಗ್ರಾಂಗೆ 73,000 ಮೀರಿಸಿದ ಬೆಲೆ - Vistara News

ಚಿನ್ನದ ದರ

Gold Rate Today: ಚಿನ್ನದ ಬೆಲೆ ಮತ್ತೆ ದಾಖಲೆ ಏರಿಕೆ; 10 ಗ್ರಾಂಗೆ 73,000 ಮೀರಿಸಿದ ಬೆಲೆ

Gold Rate Today: ಕಳೆದ ಶನಿವಾರವೇ 10 ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ 71,200ನ್ನು ದಾಟಿ ಹೋಗಿದ್ದು, ಇಂದು ಮತ್ತೆ ಏರಿದೆ. 22 ಕ್ಯಾರಟ್‌ ಹಾಗೂ 24 ಕ್ಯಾರೆಟ್‌ ಚಿನ್ನದ ಬೆಲೆಗಳಲ್ಲಿ (gold price today) ಇಂದು ಕ್ರಮವಾಗಿ ₹100 ಮತ್ತು ₹109 ಹೆಚ್ಚಳವಾಗಿವೆ.

VISTARANEWS.COM


on

gold trisha
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ರಾಜ್ಯದಲ್ಲಿ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) ಶುಕ್ರವಾರ ಮತ್ತೆ ದಾಖಲೆ ಏರಿಕೆ ಕಂಡಿದೆ. ಕಳೆದ ಶನಿವಾರವೇ 10 ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ 71,200ನ್ನು ದಾಟಿ ಹೋಗಿದ್ದು, ಇಂದು ಮತ್ತೆ ಏರಿದೆ. 22 ಕ್ಯಾರಟ್‌ ಹಾಗೂ 24 ಕ್ಯಾರೆಟ್‌ ಚಿನ್ನದ ಬೆಲೆಗಳಲ್ಲಿ (gold price today) ಇಂದು ಕ್ರಮವಾಗಿ ₹100 ಮತ್ತು ₹109 ಹೆಚ್ಚಳವಾಗಿವೆ.

ಇಂದು ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,720ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹53,760 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹67,200 ಮತ್ತು ₹6,72,000 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,331 ಆಗಿದ್ದರೆ, ಎಂಟು ಗ್ರಾಂ ಬೆಲೆ ₹58,648 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹73,310 ಮತ್ತು ₹7,33,100 ವೆಚ್ಚವಾಗಲಿದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ (Silver rate today) ₹84.25, ಎಂಟು ಗ್ರಾಂ ₹674 ಮತ್ತು 10 ಗ್ರಾಂ ₹842.50ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹8,425 ಮತ್ತು 1 ಕಿಲೋಗ್ರಾಂಗೆ ₹84,250 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ನಗರ22 ಕ್ಯಾರಟ್24 ಕ್ಯಾರಟ್
ದಿಲ್ಲಿ67,35073,460
ಮುಂಬಯಿ67,200 73,310
ಬೆಂಗಳೂರು67,200 73,310
ಚೆನ್ನೈ68,05074,240

ಮೊದಲ ಬಾರಿಗೆ ಚಿನ್ನದ ಆಭರಣವನ್ನು ಖರೀದಿಸುವಾಗ ಏನು ತಿಳಿದಿರಬೇಕು?

ನೀವು ಚಿನ್ನಕ್ಕಾಗಿ ಹಣವನ್ನು ಖರ್ಚು ಮಾಡಲು ಮುಂದಾಗುವ ಮೊದಲು ಅದರ ಬಗ್ಗೆ ಜ್ಞಾನವನ್ನು ಹೊಂದಿರುವುದು ಉತ್ತಮ. ಚಿನ್ನದಂತಹ ಅಮೂಲ್ಯ ವಸ್ತು ಹಾಗೂ ಹೂಡಿಕೆಗೆ ಸಂಬಂಧಿಸಿದ ವಸ್ತುವನ್ನು ಖರೀದಿಸುವ ಮೊದಲು ನೀವು ಪರಿಶೀಲಿಸಬೇಕಾದ ವಿಷಯಗಳು ಇಲ್ಲಿವೆ.

1) ಮೊದಲನೆಯದು ಶುದ್ಧತೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮಾರಾಟವಾಗುವ ಆಭರಣಗಳು 22 ಕ್ಯಾರೆಟ್ ಚಿನ್ನದ ಆಭರಣ. ಬೆಂಗಳೂರಿನಲ್ಲಿ ಆ ದಿನದ ಚಿನ್ನದ ದರ ಎಷ್ಟಿದೆ ಎಂಬುದನ್ನು ಮೊದಲು ಗಮನದಲ್ಲಿಟ್ಟುಕೊಳ್ಳಬೇಕು. ಬೆಂಗಳೂರಿನಲ್ಲಿ ಚಿನ್ನದ ದರಗಳು ಪ್ರತಿದಿನ ಬದಲಾಗುತ್ತಿರುತ್ತವೆ. ನಿಖರವಾದ ಮಾಹಿತಿ ನೀಡುವ ವೆಬ್‌ಸೈಟ್ ಅನ್ನು ಅವಲಂಬಿಸುವುದು ಉತ್ತಮ.

2) ನೀವು ಖರೀದಿಸುವ ಆಭರಣಗಳ ಮೇಲಿರುವ ಬಿಐಎಸ್ ಹಾಲ್ಮಾರ್ಕ್ ಅನ್ನು ಪರಿಶೀಲಿಸುವುದು ಬಹಳ ಮುಖ್ಯ. ಚಿನ್ನಾಭರಣ ಖರೀದಿಸುವಾಗ BIS ಹಾಲ್‌ಮಾರ್ಕ್ ಅನ್ನು ಪಡೆಯಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು. ಭಾರತ ಸರ್ಕಾರವು ಚಿನ್ನವು ಅದರ ಮೇಲೆ ನಮೂದಿಸಲಾದ ಕ್ಯಾರಟ್‌ಗಳಷ್ಟೇ ಶುದ್ಧವಾಗಿದೆ ಎಂದು ಆ ಮೂಲಕ ಪ್ರಮಾಣೀಕರಿಸುತ್ತದೆ.

3) ಚಿನ್ನಾಭರಣಕ್ಕೆ ಮೇಕಿಂಗ್ ಚಾರ್ಜ್ ಮತ್ತು ವೇಸ್ಟೇಜ್ ಚಾರ್ಜ್ ಎಂದು ಇರುತ್ತದೆ. ಇದನ್ನು ಪ್ರತಿ ಆಭರಣ ವ್ಯಾಪಾರಿಯೂ ವಿಧಿಸುತ್ತಾರೆ. ನೀವು ಆಭರಣ ವ್ಯಾಪಾರಿಯನ್ನು ಈ ಬಗ್ಗೆ ಕೇಳಿ ಪರಿಶೀಲಿಸುವುದು ಉತ್ತಮ. ಎಲ್ಲಾ ಆಭರಣಗಳಿಗೆ ಮೇಕಿಂಗ್ ಅಥವಾ ವೇಸ್ಟೇಜ್ ಶುಲ್ಕಗಳು ಒಂದೇ ಆಗಿರುತ್ತವೆ ಎಂಬುದನ್ನು ಗಮನಿಸಿ. ಎಷ್ಟು ಶುಲ್ಕ ವಿಧಿಸಲಾಗಿದೆ ಎಂಬುದನ್ನು ದಯವಿಟ್ಟು ಖಚಿತಪಡಿಸಿಕೊಳ್ಳಿ.

4) ನೀವು ದುಬಾರಿ ವಹಿವಾಟು ಮಾಡುತ್ತಿರುವುದರಿಂದ ಚಿನ್ನಾಭರಣದ ಅಸಲಿತನ ಖಚಿತಪಡಿಸಿಕೊಳ್ಳುವುದು ಉತ್ತಮ. ಯಾಕೆಂದರೆ ನೀವು ಖರೀದಿಸುತ್ತಿರುವುದು ಬಹುಕಾಲ ಉಳಿಯುವ, ಹೂಡಿಕೆ ಎಂದು ಪರಿಗಣಿಸಬಹುದಾದ ವಸ್ತು. ಎಲ್ಲೇ ಆಗಲಿ ಚಿನ್ನ ಖರೀದಿಸುವ ಮುನ್ನ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು. ಕೆಲವು ದಶಕಗಳ ಹಿಂದೆ, ಚಿನ್ನವನ್ನು ಖರೀದಿಸುವಾಗ ಸುಲಭವಾಗಿ ಮೋಸ ಹೋಗಬಹುದಾಗಿತ್ತು. ಆದರೆ ಇಂದು ಹೆಚ್ಚಿನ ಚಿನ್ನವು ಹಾಲ್ಮಾರ್ಕ್ ಆಗಿದೆ. ಪ್ರತಿಷ್ಠಿತ ಅಂಗಡಿಗಳಲ್ಲಿ ಈ ಬಗ್ಗೆ ಹೆಚ್ಚಿನ ಎಚ್ಚರ ಇರುತ್ತದೆ.

ಇದನ್ನೂ ಓದಿ: Gold Rate Today : ಬಂಗಾರದ ಬೆಲೆ ಏರುತ್ತಲೇ ಇದೆ; ಖರೀದಿಗೆ ಮೊದಲು ಇಲ್ಲಿರುವ ದರಪಟ್ಟಿ ನೋಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Latest

ಅಕ್ಷಯ ತೃತೀಯದ ದಿನ ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌

VISTARANEWS.COM


on

ಬೆಂಗಳೂರು: ಅಕ್ಷಯ ತೃತೀಯದ ಈ ವಿಶೇಷ ಸಂದರ್ಭದಲ್ಲಿ ಚಿನ್ನ ಖರೀದಿಸುವವರಿಗೆ ಮಾರುಕಟ್ಟೆ ಸಿಹಿ ಸುದ್ದಿ ನೀಡಿದೆ. ಇರಾನ್ ಮತ್ತು ಅಮೆರಿಕ ನಡುವಿನ ಸಂಘರ್ಷ ಹಾಗೂ ಮಧ್ಯಪ್ರಾಚ್ಯದ ಯುದ್ಧದ ಭೀತಿಯ ನಡುವೆಯೂ ಚಿನ್ನದ ಬೆಲೆ ಇಳಿಕೆ ಹಾದಿ ಹಿಡಿದಿರುವುದು ಗ್ರಾಹಕರಲ್ಲಿ ಸಂತಸ ಮೂಡಿಸಿದೆ. ಹಬ್ಬದ ದಿನದಂದು ಬಂಗಾರ ಖರೀದಿಸಿದರೆ ಸಂಪತ್ತು ವೃದ್ಧಿಯಾಗುತ್ತದೆ ಎಂಬ ನಂಬಿಕೆ ಇರುವ ಕಾರಣ, ಬೆಲೆ ಇಳಿಕೆಯು ಜನ ಸಾಮಾನ್ಯರಿಗೆ ತುಸು ನಿರಾಳ ತಂದಿದೆ.

ಬೆಂಗಳೂರಿನ ಇಂದಿನ ಮಾರುಕಟ್ಟೆ ದರದಂತೆ, 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯಲ್ಲಿ 490 ರೂ. ಇಳಿಕೆಯಾಗಿದ್ದು, 1,55,290 ರೂಪಾಯಿಗೆ ತಲುಪಿದೆ. ಇನ್ನು ಆಭರಣ ಚಿನ್ನ ಅಂದರೆ 22 ಕ್ಯಾರೆಟ್‌ನ 10 ಗ್ರಾಂ ಬೆಲೆಯು 450 ರೂ. ಕಡಿಮೆಯಾಗಿ 1,42,350 ರೂಪಾಯಿ ದಾಖಲಾಗಿದೆ. ಈ ಇಳಿಕೆಯು ಅಕ್ಷಯ ತೃತೀಯದ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಿದ್ದು, ಜ್ಯುವೆಲ್ಲರಿ ಶಾಪ್‌ಗಳಲ್ಲಿ ಇಂದು ಗ್ರಾಹಕರ ಸಂಖ್ಯೆ ಏರುವ ಸಾಧ್ಯತೆಯಿದೆ.

ಚಿನ್ನದ ಬೆಲೆ ಇಳಿಕೆಯಾಗಿದ್ದರೂ, ಬೆಳ್ಳಿಯ ದರದಲ್ಲಿ ಇಂದು ಯಾವುದೇ ಬದಲಾವಣೆ ಕಂಡುಬಂದಿಲ್ಲ. ಬೆಳ್ಳಿ ಬೆಲೆ ತಟಸ್ಥವಾಗಿದ್ದು, ಒಂದು ಕೆಜಿಗೆ 2,75,000 ರೂಪಾಯಿ ಹಾಗೂ ಒಂದು ಗ್ರಾಂಗೆ 275 ರೂಪಾಯಿ ನಿಗದಿಯಾಗಿದೆ. ಜಾಗತಿಕ ರಾಜಕೀಯ ವಿದ್ಯಮಾನಗಳು ಮತ್ತು ಡಾಲರ್ ಮೌಲ್ಯದ ಏರಿಳಿತದ ನಡುವೆಯೂ ಬಂಗಾರದ ದರ ಇಳಿಕೆಯಾಗಿರುವುದು ಈ ಬಾರಿ ಅಕ್ಷಯ ತೃತೀಯದ ವಿಶೇಷ ಆಕರ್ಷಣೆಯಾಗಿದೆ.

Continue Reading

ಚಿನ್ನದ ದರ

Gold Rate Today: ಮತ್ತೆ ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ; ಇಂದಿನ ಬೆಲೆ ಇಷ್ಟಿದೆ

Gold Rate Today: ಸತತವಾಗಿ ಇಳಿಕೆಯಾಗಿದ್ದ ಚಿನ್ನದ ದರ ಶನಿವಾರ ಏರಿಕೆಯಾಗಿದ್ದು, ಭಾನುವಾರ ಮತ್ತು ಇಂದು (ಆಗಸ್ಟ್‌ 26) ಯಥಾಸ್ಥಿತಿ ಕಾಯ್ದುಕೊಂಡಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,695 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,304 ಇದೆ.

VISTARANEWS.COM


on

Gold Rate Today

ಬೆಂಗಳೂರು: ಸತತವಾಗಿ ಇಳಿಕೆಯಾಗಿದ್ದ ಚಿನ್ನದ ದರ ಶನಿವಾರ ಏರಿಕೆಯಾಗಿದ್ದು, ಭಾನುವಾರ ಮತ್ತು ಇಂದು (ಆಗಸ್ಟ್‌ 26) ಯಥಾಸ್ಥಿತಿ ಕಾಯ್ದುಕೊಂಡಿದೆ (Gold Rate Today). ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,695 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,304 ಇದೆ.

22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ ₹ 53,560 ಇದೆ. ಇನ್ನು 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 66,950 ಮತ್ತು ₹ 6,69,500 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ ₹ 58,432 ಇದೆ. 10 ಗ್ರಾಂ ಮತ್ತು 100 ಗ್ರಾಂನ 24 ಕ್ಯಾರಟ್‌ ಚಿನ್ನದ ಬೆಲೆ ₹ 73,040 ಮತ್ತು ₹ 7,30,400 ತಲುಪಿದೆ.

ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
ದಿಲ್ಲಿ₹ 6,710₹ 7,319
ಮುಂಬೈ₹ ₹ 6,695 ₹ 7,304
ಬೆಂಗಳೂರು₹ 6,695₹ 7,304
ಚೆನ್ನೈ₹ 6,695 ₹ 7,304

ಬೆಳ್ಳಿ ಧಾರಣೆ

ಇತ್ತ ಬೆಳ್ಳಿಯ ಬೆಲೆಯಲ್ಲಿ ಕೊಂಚ ಇಳಿಕೆಯಾಗಿದೆ. ಬೆಳ್ಳಿ 1 ಗ್ರಾಂಗೆ ₹ 84.40 ಹಾಗೂ 8 ಗ್ರಾಂಗೆ ₹ 675.20 ಇದೆ. 10 ಗ್ರಾಂ ₹ 844 ಹಾಗೂ 1 ಕಿಲೋಗ್ರಾಂ ₹ 84,400 ಬೆಲೆ ಬಾಳುತ್ತದೆ.

ಚಿನ್ನ ಖರೀದಿಸುವ ಮುನ್ನ ಈ ಅಂಶಗಳನ್ನು ಗಮನಿಸಿ

ಮೇಕಿಂಗ್‌ ಚಾರ್ಜಸ್‌: ಚಿನ್ನಾಭರಣ ಬೆಲೆಯಲ್ಲಿ ಮೇಕಿಂಗ್‌ ಚಾರ್ಜಸ್‌ (Making Charges) ಪ್ರಧಾನ ಪಾತ್ರ ವಹಿಸುತ್ತದೆ. ಚಿನ್ನದ ತೂಕ ಮತ್ತು ಪರಿಶುದ್ಧತೆಯ ಜತೆಗೆ ಆಭರಣಗಳನ್ನು ತಯಾರಿಸುವ ಶುಲ್ಕವನ್ನೂ ಖರೀದಿ ಸಂದರ್ಭದಲ್ಲಿ ವಿಧಿಸಲಾಗುತ್ತದೆ. ಇದನ್ನು ಮೇಕಿಂಗ್‌ ಚಾರ್ಜಸ್‌ ಎಂದು ಕರೆಯುತ್ತಾರೆ. ಸಾಮಾನ್ಯವಾಗಿ ಚಿನ್ನದ ಬೆಲೆಯನ್ನು ಆಧರಿಸಿ ತಯಾರಿಕಾ ಶುಲ್ಕವನ್ನು ನಿರ್ಧರಿಸಲಾಗುತ್ತದೆ. ತಯಾರಿಕಾ ಶುಲ್ಕಗಳಲ್ಲಿ ಹಣವನ್ನು ಉಳಿಸಲು ಅವುಗಳನ್ನು ಹೇಗೆ ಲೆಕ್ಕ ಹಾಕಲಾಗುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ಅತ್ಯಗತ್ಯ. ಉದಾಹರಣೆಗೆ 8 ಗ್ರಾಂ ಚಿನ್ನದ ಸರದ ಬೆಲೆ 40,000 ರೂ. ಎಂದಿಟ್ಟುಕೊಳ್ಳೋಣ. ಪ್ರತಿ ಗ್ರಾಂಗೆ 300 ರೂ. ಫ್ಲಾಟ್ ದರದಲ್ಲಿ ತಯಾರಿಕಾ ಶುಲ್ಕವು 2,400 ರೂ. ಆಗಿರುತ್ತದೆ. 12%ದಂತೆ ಲೆಕ್ಕ ಹಾಕಿದರೆ ಇದು ಗರಿಷ್ಠ 4,800 ರೂ.ವರೆಗೆ ಹೆಚ್ಚಾಗುತ್ತದೆ.

ಬೆಲೆ ಲೆಕ್ಕ ಹಾಕಿ: ಚಿನ್ನದ ದರ ಅದರ ಶುದ್ಧತೆಯ ಮೇಲೆ ನಿರ್ಧಾರವಾಗುತ್ತದೆ. ಮಾರುಕಟ್ಟೆಯ ದರಕ್ಕೆ ಅನುಗುಣವಾಗಿ ಚಿನ್ನದ ಬೆಲೆ ಪ್ರತಿದಿನ ಬದಲಾಗುತ್ತಿರುತ್ತದೆ. ಜ್ಯುವೆಲ್ಲರಿಗಳು ದಿನಂಪ್ರತಿ ಆಯಾ ದಿನದ ಬೆಲೆ ಪ್ರದರ್ಶಿಸುತ್ತವೆ. ಇದನ್ನು ಗಮನಿಸಿ. ಆಭರಣದ ವಿನ್ಯಾಸವೂ ಬೆಲೆಯ ಮೇಲೆ ಪರಿಣಾಮ ಬೀರುವ ಪ್ರಮುಖ ಅಂಶ. ಹೀಗಾಗಿ ಖರೀದಿಗೆ ತೆರಳುವ ಮುನ್ನ ಈ ಎಲ್ಲ ಅಂಶಗಳತ್ತ ಗಮನ ಹರಿಸುವುದು ಮುಖ್ಯ.

ಬೆಲೆಗಳನ್ನು ಹೋಲಿಸಿ: ಮೊದಲೇ ಹೇಳಿದಂತೆ ಆಭರಣದ ಬೆಲೆಯಲ್ಲಿ ತಯಾರಿಕಾ ವೆಚ್ಚವೂ ಸೇರಿರುತ್ತದೆ. ಸಾಮಾನ್ಯವಾಗಿ ಯಂತ್ರದಿಂದ ತಯಾರಿಸಿದ ಆಭರಣಗಳು ಅಥವಾ ಕಡಿಮೆ ವಿನ್ಯಾಸವನ್ನು ಹೊಂದಿರುವ ಆಭರಣಗಳಿಗೆ ಕಡಿಮೆ ಮೇಕಿಂಗ್ ಚಾರ್ಜ್ ಇರುತ್ತದೆ. ಪ್ರಸ್ತುತ ಭಾರತದಲ್ಲಿ ಮೇಕಿಂಗ್ ಚಾರ್ಜಸ್ ಶೇ. 6ರಿಂದ ಶೇ. 20ರ ವರೆಗೆ ಇದೆ. ಆದ್ದರಿಂದ ವಿವಿಧ ಹಂತಗಳಲ್ಲಿನ ಶುಲ್ಕಗಳನ್ನು ಹೋಲಿಸಿ ಎನ್ನುವುದು ತಜ್ಞರು ನೀಡುವ ಟಿಪ್ಸ್‌.

ಇದನ್ನೂ ಓದಿ: UPS: ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್‌; ಏಕೀಕೃತ ಪಿಂಚಣಿ ಯೋಜನೆಗೆ ಕೇಂದ್ರ ಸರ್ಕಾರ ಅಸ್ತು

Continue Reading

ಚಿನ್ನದ ದರ

Gold Rate Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ; ಬಂಗಾರ ಖರೀದಿಯ ಮುನ್ನ ಬೆಲೆ ಚೆಕ್‌ ಮಾಡಿ

Gold Rate Today: ಸತತವಾಗಿ ಇಳಿಕೆಯಾಗಿದ್ದ ಚಿನ್ನದ ದರ ಶನಿವಾರ ಏರಿಕೆಯಾಗಿದ್ದು, ಇಂದು ಯಥಾಸ್ಥಿತಿ ಕಾಯ್ದುಕೊಂಡಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,695 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,304 ಇದೆ.

VISTARANEWS.COM


on

Gold Rate Today

ಬೆಂಗಳೂರು: ಸತತವಾಗಿ ಇಳಿಕೆಯಾಗಿದ್ದ ಚಿನ್ನದ ದರ ಶನಿವಾರ ಏರಿಕೆಯಾಗಿದ್ದು, ಇಂದು (ಆಗಸ್ಟ್‌ 25) ಯಥಾಸ್ಥಿತಿ ಕಾಯ್ದುಕೊಂಡಿದೆ (Gold Rate Today). ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,695 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,304 ಇದೆ.

22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ ₹ 53,560 ಇದೆ. ಇನ್ನು 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 66,950 ಮತ್ತು ₹ 6,69,500 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ ₹ 58,432 ಇದೆ. 10 ಗ್ರಾಂ ಮತ್ತು 100 ಗ್ರಾಂನ 24 ಕ್ಯಾರಟ್‌ ಚಿನ್ನದ ಬೆಲೆ ₹ 73,040 ಮತ್ತು ₹ 7,30,400 ತಲುಪಿದೆ.

ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
ದಿಲ್ಲಿ₹ 6,710₹ 7,319
ಮುಂಬೈ₹ 6,695₹ 7,304
ಬೆಂಗಳೂರು₹ 6,695₹ 7,304
ಚೆನ್ನೈ₹ 6,695₹ 7,304

ಬೆಳ್ಳಿ ಧಾರಣೆ

ಇತ್ತ ಬೆಳ್ಳಿಯ ಬೆಲೆಯಲ್ಲಿಯೂ ಯಾವುದೇ ವ್ಯತ್ಯಾಸ ಕಂಡು ಬಂದಿಲ್ಲ. ಬೆಳ್ಳಿ 1 ಗ್ರಾಂಗೆ ₹ 84.50 ಹಾಗೂ 8 ಗ್ರಾಂಗೆ ₹ 676 ಇದೆ. 10 ಗ್ರಾಂ ₹ 845 ಹಾಗೂ 1 ಕಿಲೋಗ್ರಾಂ ₹ 84,500 ಬೆಲೆ ಬಾಳುತ್ತದೆ.

ಮೊದಲ ಬಾರಿಗೆ ಚಿನ್ನದ ಆಭರಣವನ್ನು ಖರೀದಿಸುವಾಗ ಏನು ತಿಳಿದಿರಬೇಕು?

ನೀವು ಚಿನ್ನಕ್ಕಾಗಿ ಹಣವನ್ನು ಖರ್ಚು ಮಾಡಲು ಮುಂದಾಗುವ ಮೊದಲು ಅದರ ಬಗ್ಗೆ ಜ್ಞಾನವನ್ನು ಹೊಂದಿರುವುದು ಉತ್ತಮ. ಚಿನ್ನದಂತಹ ಅಮೂಲ್ಯ ವಸ್ತು ಹಾಗೂ ಹೂಡಿಕೆಗೆ ಸಂಬಂಧಿಸಿದ ವಸ್ತುವನ್ನು ಖರೀದಿಸುವ ಮೊದಲು ನೀವು ಪರಿಶೀಲಿಸಬೇಕಾದ ವಿಷಯಗಳು ಇಲ್ಲಿವೆ.

ಮೊದಲನೆಯದು ಶುದ್ಧತೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮಾರಾಟವಾಗುವ ಆಭರಣಗಳು 22 ಕ್ಯಾರಟ್ ಚಿನ್ನದ ಆಭರಣ. ಬೆಂಗಳೂರಿನಲ್ಲಿ ಆ ದಿನದ ಚಿನ್ನದ ದರ ಎಷ್ಟಿದೆ ಎಂಬುದನ್ನು ಮೊದಲು ಗಮನದಲ್ಲಿಟ್ಟುಕೊಳ್ಳಬೇಕು. ಬೆಂಗಳೂರಿನಲ್ಲಿ ಚಿನ್ನದ ದರಗಳು ಪ್ರತಿದಿನ ಬದಲಾಗುತ್ತಿರುತ್ತವೆ. ನಿಖರವಾದ ಮಾಹಿತಿ ನೀಡುವ ವೆಬ್‌ಸೈಟ್ ಅನ್ನು ಅವಲಂಬಿಸುವುದು ಉತ್ತಮ.

ನೀವು ಖರೀದಿಸುವ ಆಭರಣಗಳ ಮೇಲಿರುವ ಬಿಐಎಸ್ (BIS) ಹಾಲ್‌ಮಾರ್ಕ್ ಅನ್ನು ಪರಿಶೀಲಿಸುವುದು ಬಹಳ ಮುಖ್ಯ. ಚಿನ್ನಾಭರಣ ಖರೀದಿಸುವಾಗ ಬಿಐಎಸ್ ಹಾಲ್‌ಮಾರ್ಕ್ ಅನ್ನು ಪಡೆಯಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು. ಭಾರತ ಸರ್ಕಾರವು ಚಿನ್ನವು ಅದರ ಮೇಲೆ ನಮೂದಿಸಲಾದ ಕ್ಯಾರಟ್‌ಗಳಷ್ಟೇ ಶುದ್ಧವಾಗಿದೆ ಎಂದು ಆ ಮೂಲಕ ಪ್ರಮಾಣೀಕರಿಸುತ್ತದೆ.

ಚಿನ್ನಾಭರಣಕ್ಕೆ ಮೇಕಿಂಗ್ ಚಾರ್ಜ್ ಮತ್ತು ವೇಸ್ಟೇಜ್ ಚಾರ್ಜ್ ಎಂದು ಇರುತ್ತದೆ. ಇದನ್ನು ಪ್ರತಿ ಆಭರಣ ವ್ಯಾಪಾರಿಯೂ ವಿಧಿಸುತ್ತಾರೆ. ನೀವು ಆಭರಣ ವ್ಯಾಪಾರಿಯನ್ನು ಈ ಬಗ್ಗೆ ಕೇಳಿ ಪರಿಶೀಲಿಸುವುದು ಉತ್ತಮ. ಎಲ್ಲಾ ಆಭರಣಗಳಿಗೆ ಮೇಕಿಂಗ್ ಅಥವಾ ವೇಸ್ಟೇಜ್ ಶುಲ್ಕಗಳು ಒಂದೇ ಆಗಿರುತ್ತವೆ ಎಂಬುದನ್ನು ಗಮನಿಸಿ. ಎಷ್ಟು ಶುಲ್ಕ ವಿಧಿಸಲಾಗಿದೆ ಎಂಬುದನ್ನು ದಯವಿಟ್ಟು ಖಚಿತಪಡಿಸಿಕೊಳ್ಳಿ.

ನೀವು ದುಬಾರಿ ವಹಿವಾಟು ಮಾಡುತ್ತಿರುವುದರಿಂದ ಚಿನ್ನಾಭರಣದ ಅಸಲಿತನ ಖಚಿತಪಡಿಸಿಕೊಳ್ಳುವುದು ಉತ್ತಮ. ಯಾಕೆಂದರೆ ನೀವು ಖರೀದಿಸುತ್ತಿರುವುದು ಬಹುಕಾಲ ಉಳಿಯುವ, ಹೂಡಿಕೆ ಎಂದು ಪರಿಗಣಿಸಬಹುದಾದ ವಸ್ತು. ಎಲ್ಲೇ ಆಗಲಿ ಚಿನ್ನ ಖರೀದಿಸುವ ಮುನ್ನ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು. ಕೆಲವು ದಶಕಗಳ ಹಿಂದೆ, ಚಿನ್ನವನ್ನು ಖರೀದಿಸುವಾಗ ಸುಲಭವಾಗಿ ಮೋಸ ಹೋಗಬಹುದಾಗಿತ್ತು. ಆದರೆ ಇಂದು ಹೆಚ್ಚಿನ ಚಿನ್ನವು ಹಾಲ್‌ಮಾರ್ಕ್ ಆಗಿದೆ. ಪ್ರತಿಷ್ಠಿತ ಅಂಗಡಿಗಳಲ್ಲಿ ಈ ಬಗ್ಗೆ ಹೆಚ್ಚಿನ ಎಚ್ಚರ ಇರುತ್ತದೆ.

ಇದನ್ನೂ ಓದಿ: Cash Limit At Home: ಮನೆಯಲ್ಲಿ ಎಷ್ಟು ಹಣ ಇರಿಸಿಕೊಳ್ಳಬಹುದು? ಮಿತಿಗಿಂತ ಹೆಚ್ಚಿದ್ದರೆ ಏನಾಗುತ್ತದೆ?

Continue Reading

ಚಿನ್ನದ ದರ

Gold Rate Today: ಸತತವಾಗಿ ಇಳಿದಿದ್ದ ಚಿನ್ನದ ದರದಲ್ಲಿ ಮತ್ತೆ ಏರಿಕೆ; ಬಂಗಾರ ಇಂದು ಇಷ್ಟು ದುಬಾರಿ

Gold Rate Today: ಸತತವಾಗಿ ಇಳಿಕೆಯಾಗಿದ್ದ ಚಿನ್ನದ ದರ ಇಂದು (ಆಗಸ್ಟ್‌ 24) ಮತ್ತೆ ಏರಿಕೆಯಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 35 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 39 ಹೆಚ್ಚಾಗಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,695 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,304 ಇದೆ.

VISTARANEWS.COM


on

Gold Rate Today

ಬೆಂಗಳೂರು: ಸತತವಾಗಿ ಇಳಿಕೆಯಾಗಿದ್ದ ಚಿನ್ನದ ದರ ಇಂದು (ಆಗಸ್ಟ್‌ 24) ಮತ್ತೆ ಏರಿಕೆಯಾಗಿದೆ (Gold Rate Today). ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 35 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 39 ಹೆಚ್ಚಾಗಿದೆ.

ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,695 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,304 ಇದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ ₹ 53,560 ಇದೆ. ಇನ್ನು 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 66,950 ಮತ್ತು ₹ 6,69,500 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ ₹ 58,432 ಇದೆ. 10 ಗ್ರಾಂ ಮತ್ತು 100 ಗ್ರಾಂನ 24 ಕ್ಯಾರಟ್‌ ಚಿನ್ನದ ಬೆಲೆ ₹ 73,040 ಮತ್ತು ₹ 7,30,400 ತಲುಪಿದೆ.

ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
ದಿಲ್ಲಿ₹ 6,695 ₹ 7,304
ಮುಂಬೈ₹ 6,695 ₹ 7,304
ಬೆಂಗಳೂರು₹ 6,695 ₹ 7,304
ಚೆನ್ನೈ₹ 6,695 ₹ 7,304

ಬೆಳ್ಳಿ ಧಾರಣೆ

ಇತ್ತ ಬೆಳ್ಳಿಯ ಬೆಲೆಯಲ್ಲಿಯೂ ಹೆಚ್ಚಳ ಕಂಡು ಬಂದಿದೆ. ಬೆಳ್ಳಿ 1 ಗ್ರಾಂಗೆ ₹ 84.50 ಹಾಗೂ 8 ಗ್ರಾಂಗೆ ₹ 676 ಇದೆ. 10 ಗ್ರಾಂ ₹ 845 ಹಾಗೂ 1 ಕಿಲೋಗ್ರಾಂ ₹ 84,500 ಬೆಲೆ ಬಾಳುತ್ತದೆ.

ಚಿನ್ನ ಯಾಕೆ ದುಬಾರಿಯಾಗುತ್ತಿದೆ?

ಚಿನ್ನದಲ್ಲಿ ಹೂಡಿಕೆ ಸುರಕ್ಷಿತವಾಗಿರುವುದರಿಂದಲೇ ಚಿನ್ನ ಹೆಚ್ಚು ದುಬಾರಿಯಾಗುತ್ತಿದೆ. ಆರ್ಥಿಕ ಅನಿಶ್ಚಿತತೆ, ಭೌಗೋಳಿಕ, ರಾಜಕೀಯ ಪ್ರಕ್ಷುಬ್ಧತೆಯ ಅವಧಿಯಲ್ಲಿ ಸ್ಥಿರತೆಯನ್ನು ಬಯಸುವ ಹೂಡಿಕೆದಾರರಿಗೆ ಚಿನ್ನದ ಮೇಲಿನ ಹೂಡಿಕೆಯು ಹೆಚ್ಚು ಸುರಕ್ಷಿತವಾಗಿ ಕಾಣುತ್ತಿದೆ. ಹೀಗಾಗಿಯೇ ಚಿನ್ನದ ದರ ಗಗನಕ್ಕೇರುತ್ತಿದೆ.

ಹಣದುಬ್ಬರ: ಚಿನ್ನವನ್ನು ಸಾಮಾನ್ಯವಾಗಿ ಹಣದುಬ್ಬರದ ವಿರುದ್ಧ ಹೂಡಿಕೆ ಎಂದು ಪರಿಗಣಿಸಲಾಗಿದೆ. ದೇಶದಲ್ಲಿ ಹೊಸ ನೋಟು, ನಾಣ್ಯಗಳನ್ನು ಹೊರತರಬೇಕಾದರೆ ಅಷ್ಟೇ ಪ್ರಮಾಣದ ಚಿನ್ನವನ್ನು ಆರ್‌ಬಿಐ ತೆಗೆದಿರುಸುತ್ತದೆ. ದೇಶದಲ್ಲಿ ಹಣದುಬ್ಬರದ ಒತ್ತಡದಿಂದಾಗಿ ಕರೆನ್ಸಿಗಳ ಮೌಲ್ಯ ಕಡಿಮೆಯಾಗುತ್ತದೆ. ಆಗ ಚಿನ್ನದ ಬೆಲೆ ತನ್ನಿಂತಾನೇ ಏರಿಕೆಯಾಗುತ್ತದೆ. ಈ ಮೂಲಕ ದೇಶದಲ್ಲಿ ಕರೆನ್ಸಿಗಳ ಮೌಲ್ಯ ಕಾಪಾಡಿಕೊಳ್ಳಬಹುದು.

ಜಾಗತಿಕ ಉದ್ವಿಗ್ನತೆಗಳು: ಇತ್ತೀಚಿನ ದಿನಗಳಲ್ಲಿ ಭೌಗೋಳಿಕ, ರಾಜಕೀಯ ಘರ್ಷಣೆಗಳು ಮಾರುಕಟ್ಟೆಯ ಅಸ್ಥಿರತೆಯನ್ನು ಉಂಟು ಮಾಡುತ್ತಿದೆ. ಇದು ಹೂಡಿಕೆದಾರರಿಗೆ ಚಿನ್ನದಂತಹ ಸುರಕ್ಷಿತ ಸ್ವತ್ತುಗಳನ್ನು ಖರೀದಿಸಲು ಪ್ರೇರೇಪಿಸುತ್ತದೆ. ಭೌಗೋಳಿಕ ರಾಜಕೀಯ ಅನಿಶ್ಚಿತತೆಯ ಸಮಯದಲ್ಲಿ ಅದು ಮೌಲ್ಯವನ್ನು ಉಳಿಸಿಕೊಳ್ಳುತ್ತದೆ. ಉಕ್ರೇನ್‌ ಯುದ್ಧ ಮುಂದುವರಿಯುತ್ತಿರುವಾಗಲೇ ಈಗ ಇರಾನ್‌-ಇಸ್ರೇಲ್‌ ಯುದ್ಧದ ಛಾಯೆ ಆವರಿಸಿದೆ. ಇಂಥ ಸನ್ನಿವೇಶದಲ್ಲಿ ಸಹಜವಾಗಿಯೇ ಚಿನ್ನದ ಮೇಲಿನ ಹೂಡಿಕೆ ಹೆಚ್ಚುತ್ತದೆ. ಆಗ ದರ ಏರಿಕೆಯಾಗುತ್ತದೆ.

ಚೀನಾದ ಪ್ರಭಾವ: ಇತ್ತೀಚೆಗೆ ಚೀನಾದಲ್ಲಿ ಚಿನ್ನದ ಬೇಡಿಕೆ ಹೆಚ್ಚುತ್ತಿದೆ. ಚೀನಾದ ಸೆಂಟ್ರಲ್ ಬ್ಯಾಂಕ್ ತನ್ನ ಸಂಗ್ರಹಕ್ಕೆ ಗಣನೀಯ ಪ್ರಮಾಣದ ಚಿನ್ನವನ್ನು ಸೇರಿಸುತ್ತಿದೆ. ಇದು ಅಮೆರಿಕ ಮತ್ತು ಭಾರತದಲ್ಲಿ ಚಿನ್ನದ ಬೆಲೆಯಲ್ಲಿ ಹೆಚ್ಚಳಕ್ಕೆ ಕಾರಣವಾಗಿದೆ.

ಕಡಿಮೆ ಬಡ್ಡಿ ದರಗಳು: ಬ್ಯಾಂಕ್‌ಗಳಲ್ಲಿ ಬಡ್ಡಿ ದರಗಳು ಕಡಿಮೆಯಾದಾಗ ಜನರಲ್ಲಿ ಹಣದ ಹರಿವಿನ ಪ್ರಮಾಣ ಹೆಚ್ಚಳವಾಗುತ್ತದೆ. ಇದರಿಂದ ಚಿನ್ನ ಖರೀದಿ ಪ್ರಮಾಣ ಹೆಚ್ಚಾಗುತ್ತದೆ. ಇದು ಚಿನ್ನದ ಹೆಚ್ಚಿನ ಬೇಡಿಕೆ ಮತ್ತು ಬೆಲೆ ಹೆಚ್ಚಳಕ್ಕೆ ಪ್ರಮುಖ ಕಾರಣವಾಗುತ್ತದೆ.

ಹೂಡಿಕೆ ಮಾಡಬಹುದೆ?: ಚಿನ್ನದ ಬೆಲೆಗಳು ಹೆಚ್ಚಾದಾಗ ಸಾಮಾನ್ಯವಾಗಿ ಇದು ಗ್ರಾಹಕರ ಖರೀದಿ ಸಾಮರ್ಥ್ಯವನ್ನು ಕಡಿಮೆ ಮಾಡುತ್ತದೆ. ಹೀಗಾಗಿ ಮೊದಲೇ ಚಿನ್ನದ ಮೇಲೆ ಹೂಡಿಕೆ ಮಾಡಬೇಕು. ಇದರಿಂದ ಮಾರುಕಟ್ಟೆಯಲ್ಲಿ ಏರಿಳಿತದ ಅಪಾಯ ಕೊಂಚ ಕಡಿಮೆಯಾಗುತ್ತದೆ. ಹೂಡಿಕೆಯ ಉದ್ದೇಶವನ್ನು ಮೊದಲೇ ನಿರ್ಣಯಿಸುವುದು ಮತ್ತು ಪರ್ಯಾಯ ಮಾರ್ಗಗಳನ್ನು ಅನ್ವೇಷಿಸುವುದು ಕೂಡ ಬಹಳ ಮುಖ್ಯ. ಉದಾಹರಣೆಗೆ ಮದುವೆ ಅಥವಾ ಹಬ್ಬಗಳಂತಹ ವಿಶೇಷ ಸಂದರ್ಭಗಳಲ್ಲಿ ಚಿನ್ನವನ್ನು ಖರೀದಿಸುವ ಉದ್ದೇಶ ಮೊದಲೇ ಇರುತ್ತದೆ. ಇದಕ್ಕೆ ಮುಂಚಿತವಾಗಿ ಹೂಡಿಕೆ ಮಾಡಬಹುದು. ಇದರಿಂದ ಬೆಲೆಗಳು ಸ್ಥಿರವಾಗಿದ್ದಾಗ ತಕ್ಷಣ ಖರೀದಿ ಮಾಡಬಹುದು.

    ಇದನ್ನೂ ಓದಿ: Cheapest Currency: ವಿಶ್ವದಲ್ಲೇ ಅಗ್ಗದ ಕರೆನ್ಸಿ ಹೊಂದಿರುವ ದೇಶಗಳಲ್ಲಿ ಭಾರತದ 1 ರೂ.ನ ಮೌಲ್ಯ ಎಷ್ಟಾಗುತ್ತೆ ನೋಡಿ!

    Continue Reading
    Advertisement
    Latest2 ಗಂಟೆಗಳು ago

    ಹೆಣ್ಣು ಮಗುವಿನ ತಂದೆಯಾದ ಖ್ಯಾತ ನಿರ್ದೇಶಕ ಅಟ್ಲಿ; ಅಭಿನಂದನೆಗಳ ಮಹಾಪೂರ

    Latest3 ಗಂಟೆಗಳು ago

    ಮಹಿಳಾ ಮೀಸಲು ಮಸೂದೆ ಕಾಂಗ್ರೆಸ್‌ ಪಕ್ಷದ ಕನಸು ಮತ್ತು ಕೂಸು: ಡಿ.ಕೆ.ಶಿವಕುಮಾರ್

    ಅವಿಭಾಗೀಕೃತ3 ಗಂಟೆಗಳು ago

    ಕಾಶ್ಮೀರ: ಕಂದಕಕ್ಕೆ ಉರುಳಿದ ಬಸ್; 15 ಸಾವು, ಹಲವರ ಸ್ಥಿತಿ ಗಂಭೀರ

    ದೇಶ3 ಗಂಟೆಗಳು ago

    ದೇಶದ ಪ್ರಧಾನಿಗೆ ಕೈಯಾರ ಚುರುಮುರಿ ಕೊಟ್ಟರೂ ಇಲ್ಲ ಖುಷಿ! ಆ ತಪ್ಪು ಮಾಡಬಾರದಿತ್ತು ಅಂದ ವ್ಯಾಪಾರಿ

    Latest3 ಗಂಟೆಗಳು ago

    ಗ್ಯಾಂಗ್‌ಸ್ಟರ್ ಸಿನಿಮಾ ಎಂಬ ಭ್ರಮೆಯಲ್ಲಿದ್ದವರಿಗೆ ಶಾಕ್ ಕೊಟ್ಟ ಯಶ್; ‘ಟಾಕ್ಸಿಕ್’ ಹಿಂದಿದೆ ಬೇರೆಯದೇ ಪ್ಲ್ಯಾನ್‌!

    ಅವಿಭಾಗೀಕೃತ3 ಗಂಟೆಗಳು ago

    ಅಹಿಂದ ರಕ್ಷಣೆ ಹೊಣೆ ಹೊತ್ತ ಸಚಿವ ಜಾರಕಿಹೊಳಿ: ಇದರ ಮರ್ಮವೇನು?

    Latest4 ಗಂಟೆಗಳು ago

    ಸಾಧ್ವಿ ಸೈಲ್ ಮಿಸ್ ವರ್ಲ್ಡ್ ಪ್ರಶಸ್ತಿ ಗೆಲ್ಲಲಿ: ಸಿಎಂ ಸಿದ್ದರಾಮಯ್ಯ ಆಶಯ

    Latest4 ಗಂಟೆಗಳು ago

    ಮೋದಿ-ಸಿದ್ದರಾಮಯ್ಯ ಗುಸುಗುಸು: ಇಬ್ಬರೂ ಮಾತನಾಡಿದ ವಿಷಯ ಬಹಿರಂಗ

    Latest5 ಗಂಟೆಗಳು ago

    ಪ್ರಧಾನಿ ಮೋದಿ ಸಾಮಾಜಿಕ ನ್ಯಾಯದ ಪರವಾಗಿಲ್ಲ: ಸಿಎಂ ಸಿದ್ದರಾಮಯ್ಯ ಟೀಕೆ

    Latest5 ಗಂಟೆಗಳು ago

    ಬಸವಣ್ಣನವರನ್ನು ಒಂದು ಸಮುದಾಯಕ್ಕೆ ಸೀಮಿತಗೊಳಿಸಬಾರದು: ಸಚಿವ ಸತೀಶ್‌ ಜಾರಕಿಹೊಳಿ

    galipata neetu
    ಕಿರುತೆರೆ2 ವರ್ಷಗಳು ago

    Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

    Kannada Serials
    ಕಿರುತೆರೆ3 ವರ್ಷಗಳು ago

    Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

    Sharmitha Gowda in bikini
    ಕಿರುತೆರೆ3 ವರ್ಷಗಳು ago

    Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

    Kannada Serials
    ಕಿರುತೆರೆ3 ವರ್ಷಗಳು ago

    Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

    Bigg Boss- Saregamapa 20 average TRP
    ಕಿರುತೆರೆ3 ವರ್ಷಗಳು ago

    Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

    Kannada Serials
    ಕಿರುತೆರೆ3 ವರ್ಷಗಳು ago

    Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

    Bigg Boss' dominates TRP; Sita Rama fell to the sixth position
    ಕಿರುತೆರೆ2 ವರ್ಷಗಳು ago

    Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

    geetha serial Dhanush gowda engagement
    ಕಿರುತೆರೆ2 ವರ್ಷಗಳು ago

    Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

    Kannada Serials
    ಕಿರುತೆರೆ3 ವರ್ಷಗಳು ago

    Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

    varun
    ಕಿರುತೆರೆ2 ವರ್ಷಗಳು ago

    Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

    Action Prince Dhruva Sarja much awaited film Martin to hit the screens on October 11
    ಸಿನಿಮಾ2 ವರ್ಷಗಳು ago

    Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

    Sudeep's birthday location shift
    ಸ್ಯಾಂಡಲ್ ವುಡ್2 ವರ್ಷಗಳು ago

    Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

    Actor Darshan
    ಸ್ಯಾಂಡಲ್ ವುಡ್2 ವರ್ಷಗಳು ago

    Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

    ಮಳೆ2 ವರ್ಷಗಳು ago

    Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

    karnataka Weather Forecast
    ಮಳೆ2 ವರ್ಷಗಳು ago

    Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

    Bellary news
    ಬಳ್ಳಾರಿ2 ವರ್ಷಗಳು ago

    Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

    Maravoor bridge in danger Vehicular traffic suspended
    ದಕ್ಷಿಣ ಕನ್ನಡ2 ವರ್ಷಗಳು ago

    Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

    Wild Animals Attack
    ಚಿಕ್ಕಮಗಳೂರು2 ವರ್ಷಗಳು ago

    Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

    Karnataka Weather Forecast
    ಮಳೆ2 ವರ್ಷಗಳು ago

    Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

    assault case
    ಬೆಳಗಾವಿ2 ವರ್ಷಗಳು ago

    Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

    ಟ್ರೆಂಡಿಂಗ್‌