Murder case : ಸದ್ಯಕ್ಕೆ ಮಗು ಮಾಡಿಕೊಳ್ಳುವುದು ಬೇಡ ಎಂದಿದ್ದಕ್ಕೆ ಪತ್ನಿಯ ಕತ್ತು ಹಿಸುಕಿ ಕೊಂದ - Vistara News

ಬೆಂಗಳೂರು

Murder case : ಸದ್ಯಕ್ಕೆ ಮಗು ಮಾಡಿಕೊಳ್ಳುವುದು ಬೇಡ ಎಂದಿದ್ದಕ್ಕೆ ಪತ್ನಿಯ ಕತ್ತು ಹಿಸುಕಿ ಕೊಂದ

Murder Case : ಸದ್ಯಕ್ಕೆ ಮಗು ಮಾಡಿಕೊಳ್ಳುವುದು ಬೇಡ ಎಂದಿದ್ದಕ್ಕೆ ಸಿಟ್ಟಾದ ಪತಿಯೊಬ್ಬ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿರುವ ಅಮಾನವೀಯ ಘಟನೆ ಬೆಂಗಳೂರಲ್ಲಿ ನಡೆದಿದೆ. ಮೃತಳ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

VISTARANEWS.COM


on

Murder Case in Bengaluru
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪ್ರೀತಿಸಿ ಮದುವೆ ಆಗಿದ್ದ ಆ ಜೋಡಿ ಮಗು ಮಾಡಿಕೊಳ್ಳುವ ವಿಚಾರಕ್ಕೆ ಗಲಾಟೆ ಶುರುವಾಗಿದ್ದು, ಕೊಲೆಯಲ್ಲಿ (Murder case) ಅಂತ್ಯವಾಗಿದೆ. ಭಟ್ಕಳಾ ಮೂಲದ ಗಿರಿಜಾ (30) ಕೊಲೆಯಾದವರು. ಗಿರಿಜಾಳನ್ನು ಉಸಿರುಗಟ್ಟಿಸಿ ಪತಿ ನವೀನ್ ಕೊಲೆ ಮಾಡಿದ್ದಾನೆ. ಬೆಂಗಳೂರಿನ (Bengaluru News) ಎಚ್‌ಎಎಲ್ ಠಾಣಾ ವ್ಯಾಪ್ತಿಯ ಅನ್ನಸಂದ್ರದಲ್ಲಿ ಘಟನೆ ನಡೆದಿದೆ.

ಗಿರಿಜಾ ಮತ್ತು ನವೀನ್ ಕಳೆದ ಎಂಟು ತಿಂಗಳ ಹಿಂದಷ್ಟೇ ಮದುವೆ ಆಗಿದ್ದರು. ಇತ್ತೀಚೆಗೆ ಗರ್ಭಿಣಿಯಾಗಿದ್ದ ಗಿರಿಜಾಗೆ ಗರ್ಭಪಾತ ಆಗಿತ್ತು. ಗರ್ಭಪಾತ ಆಗಿದ್ದರಿಂದ ಮಾನಸಿಕವಾಗಿ ಕುಗ್ಗಿ ಹೋಗಿದ್ದ ಗಿರಿಜಾ, ಸದ್ಯಕ್ಕೆ ಮಗು ಬೇಡ ಅಂದಿದ್ದಳು. ಆದರೆ ಮಗು ಮಾಡಿಕೊಳ್ಳುವ ವಿಚಾರಕ್ಕೆ ಗಂಡ- ಹೆಂಡತಿ ನಡುವೆ ಸದಾ ಗಲಾಟೆ ನಡೆಯುತ್ತಿತ್ತು ಎಂದು ತಿಳಿದು ಬಂದಿದೆ.

ಕಳೆದ ಏಪ್ರಿಲ್‌ 12ರಂದು ಮಗು ಮಾಡಿಕೊಳ್ಳುವ ವಿಚಾರಕ್ಕೆ ಮತ್ತೆ ಗಲಾಟೆ ನಡೆದಿದೆ. ಸಿಟ್ಟಿನಲ್ಲಿ ಪತ್ನಿ ಗಿರಿಜಾ ಮಲಗಿರುವಾಗ ನವೀನ್‌ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ.

ಇದನ್ನೂ ಓದಿ: Murder Case: ಹೆಂಡತಿಯ ಕೊಂದ ಗಂಡನ ಸುಳಿವಿಗೆ 3 ಕೋಟಿ ರೂ. ಬಹುಮಾನ!

ಪೋಷಕರ ವಿರೋಧದಲ್ಲೂ ಪ್ರೀತಿಸಿ ಮದುವೆ ಆದ ಜೋಡಿ

ಇನ್ನೂ ಬೆಂಗಳೂರಿನ ಗಾರ್ಮೆಂಟ್ಸ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ ಗಿರಿಜಾಗೆ ನವೀನ್‌ನ ಪರಿಚಯವಾಗಿತ್ತು. ಪರಿಚಯ ಪ್ರೀತಿಗೆ ತಿರುಗಲು ಬಹಳ ಸಮಯವೇನು ಹಿಡಿದಿರಲಿಲ್ಲ. ಇವರಿಬ್ಬರ ಪ್ರೀತಿಗೆ ಗಿರಿಜಾ ಪೋಷಕರು ಪ್ರಾರಂಭದಲ್ಲಿ ವಿರೋಧ ತೋರಿದ್ದರು. ಆದರೆ ಕೊನೆಗೆ ಇವರ ಮದುವೆಗೆ ಒಪ್ಪಿಕೊಂಡಿದ್ದರು.

ಈ ಮಧ್ಯೆ ಮಗು ವಿಚಾರಕ್ಕೆ ಇಬ್ಬರು ಆಗಾಗ ಗಲಾಟೆ ಮಾಡಿಕೊಳ್ಳುತ್ತಿದ್ದರು. ಕಳೆದ ಏ.12ರ ರಾತ್ರಿಯೂ ನವೀನ್ ಮತ್ತು ಗಿರಿಜಾ ಮಧ್ಯೆ ಜಗಳ ಶುರುವಾಗಿತ್ತು. ಕೋಪದ ಕೈಗೆ ಬುದ್ಧಿಕೊಟ್ಟ ನವೀನ್‌ ಗಿರಿಜಾಳ ಕತ್ತು ಹಿಸುಕಿ ಕೊಲೆ ಮಾಡಿ ಪರಾರಿ ಆಗಿದ್ದ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ ಪೊಲೀಸರು, ಆರೋಪಿ ನವೀನ್‌ನನ್ನು ಬಂಧಿಸಿದ್ದರು.

ಸದ್ಯ ಎಚ್‌ಎಎಲ್ ಪೊಲೀಸ್‌ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ. ಗಿರಿಜಾ ಮೂಲತಃ ಭಟ್ಕಳ ಮೂಲದವರು, ಹೀಗಾಗಿ ಅವರ ಪೋಷಕರು ಭಟ್ಕಳದಿಂದ ಬಂದಿದ್ದಾರೆ. ಬೌರಿಂಗ್ ಆಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದ್ದು, ನಂತರ ಮೃತದೇಹವನ್ನು ಭಟ್ಕಳಕ್ಕೆ ತೆಗೆದುಕೊಂಡು ಹೋಗಲಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇಬ್ಬರು ಮಕ್ಕಳನ್ನು ಕೊಂದಿದ್ದ ತಾಯಿ ಜೈಲಲ್ಲೇ ಆತ್ಮಹತ್ಯೆ!

ಬೆಂಗಳೂರು: ಜಾಲಹಳ್ಳಿಯಲ್ಲಿ ಇಬ್ಬರು ಮಕ್ಕಳನ್ನು ಕೊಲೆ ಮಾಡಿದ್ದ ತಾಯಿ, ಪರಪ್ಪನ ಅಗ್ರಹಾರ ಜೈಲಿನಲ್ಲಿ ಆತ್ಮಹತ್ಯೆ (Self Harming) ಮಾಡಿಕೊಂಡಿರುವುದು ನಡೆದಿದೆ. ಜೈಲಿಗೆ ಹೋದ ದಿನವೇ ಶೌಚಾಲಯದಲ್ಲಿ ಸೀರೆಯಿಂದ ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಗಂಗಾದೇವಿ ಆತ್ಮಹತ್ಯೆ ಮಾಡಿಕೊಂಡ ಆರೋಪಿ. ಮಂಗಳವಾರ ರಾತ್ರಿ ಇಬ್ಬರು ಮಕ್ಕಳನ್ನು ಸಾಯಿಸಿದ್ದ ಗಂಗಾದೇವಿ, ಬುಧವಾರ ಬೆಳಗ್ಗೆ 112 ಗೆ ಕರೆ ಮಾಡಿ, ತಾನು ಆತ್ಮಹತ್ಯೆ ‌ಮಾಡಿಕೊಳ್ಳುವುದಾಗಿ ಹೇಳಿದ್ದಳು. ತಕ್ಷಣ ಸ್ಥಳಕ್ಕೆ ಹೋಗಿ ಗಂಗಾದೇವಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ವಿಚಾರಣೆ ಬಳಿಕ ಗಂಗಾದೇವಿಯನ್ನು ಪರಪ್ಪನ ಅಗ್ರಹಾರಕ್ಕೆ ಸ್ಥಳಾಂತರಿಸಲಾಗಿತ್ತು. ಆದರೆ, ಗುರುವಾರ ರಾತ್ರಿ ಜೈಲಿನಲ್ಲೇ ಆರೋಪಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನೆನ್ನೆ ಮರಣೋತ್ತರ ಪರೀಕ್ಷೆ ಮಾಡಿ ಸಂಬಂಧಿಕರಿಗೆ ಮೃತದೇಹ ಹಸ್ತಾಂತರ ಮಾಡಲಾಗಿದ್ದು, ಪರಪ್ಪನ ಅಗ್ರಹಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಏನಿದು ಪ್ರಕರಣ?

children murder case by mother

ಜಾಲಹಳ್ಳಿ ಪೊಲೀಸ್ ಠಾಣಾ ‌ವ್ಯಾಪ್ತಿಯಲ್ಲಿ ಏಪ್ರಿಲ್‌ 9ರಂದು ರಾತ್ರಿ ಇಬ್ಬರು ಮಕ್ಕಳನ್ನು ಗಂಗಾದೇವಿ ಕೊಂದಿದ್ದಳು. ಲಕ್ಷ್ಮೀ (9) ಹಾಗೂ ಗೌತಮ್ (7) ಕೊಲೆಯಾದ ಮಕ್ಕಳು. ಕೊಲೆ ಮಾಡಿದ ಬಳಿಕ ತಾಯಿ ಗಂಗಾದೇವಿಯನ್ನು ಜಾಲಹಳ್ಳಿ ಪೊಲೀಸರು ಆರೆಸ್ಟ್ ಮಾಡಿದ್ದರು.

ಆಂಧ್ರ ಪ್ರದೇಶ ಮೂಲದ ಗಂಗಾದೇವಿ ಕುಟುಂಬ, ಬೆಂಗಳೂರಿನ ಜಾಲಹಳ್ಳಿಯಲ್ಲಿ ವಾಸವಾಗಿತ್ತು. ಅಚ್ಚರಿ ಎಂದರೆ ಕೊಲೆ ಆರೋಪಿತೆ ಗಂಗಾದೇವಿ ಪತಿ ಪೋಕ್ಸೋ ಕೇಸ್‌ನಲ್ಲಿ ಬಂಧಿತನಾಗಿ ಈಗಾಗಲೇ ಜೈಲಿನಲ್ಲಿದ್ದಾನೆ. ಪತಿ ಮಗಳ ಜತೆಗೆ ಅಸಭ್ಯವಾಗಿ ವರ್ತಿಸಿದ ಹಿನ್ನೆಲೆಯಲ್ಲಿ ಸ್ವತಃ ಗಂಗಾದೇವಿಯೇ ಪತಿಯ ವಿರುದ್ಧ ಪೊಲೀಸ್​ ಠಾಣೆಗೆ ದೂರು ನೀಡಿದ್ದಳು. ಗಂಗಾದೇವಿ ಖಾಸಗಿ ಕಂಪನಿಯಲ್ಲಿ ಮಾರ್ಕೆಟಿಂಗ್ ಕೆಲಸ ಮಾಡುತ್ತಿದ್ದಳು ಎನ್ನಲಾಗಿದೆ.

ಕೊಲೆಗೆ ಕಾರಣವೇನು?

ಮಕ್ಕಳಿಬ್ಬರನ್ನು ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ ಬಳಿಕ ಗಂಗಾದೇವಿ ಕಂಟ್ರೊಲ್ ರೂಂಗೆ ಕರೆ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಳು. ಗಂಗಾದೇವಿಗೆ ಹತ್ತು ವರ್ಷಗಳ ಹಿಂದೆ ಮದುವೆಯಾಗಿತ್ತು. ಆಕೆಯ ಪತಿ ಪತಿ ಪೌರಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ. ಕಳೆದ ತಿಂಗಳು ಆತನ ವಿರುದ್ಧ ಪೋಕ್ಸೋ ಕೇಸ್‌ ದಾಖಲಾಗಿತ್ತು. ʼʼಕೇಸ್ ಸಂಬಂಧ ಕೌನ್ಸಿಲಿಂಗ್ ನಡೆಸಿ ಆತನನ್ನು ಬಂಧಿಸಲಾಗಿತ್ತು. ಹೀಗಾಗಿ ಕೌಟುಂಬಿಕ ಸಮಸ್ಯೆಯಿಂದ ಬೇಸತ್ತು ಗಂಗಾದೇವಿ ಈ ಕೃತ್ಯ ಎಸಗಿದ್ದಾಳೆʼʼ ಎಂದು ಪೊಲೀಸರು ಮಾಹಿತಿ ನೀಡಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Actor Darshan: ದರ್ಶನ್ ಸೇರಿ ನಾಲ್ವರು ಸ್ಟೇಷನ್‌ನಿಂದ ಪರಪ್ಪನ ಅಗ್ರಹಾರ ಜೈಲಿಗೆ

Actor Darshan: 12 ದಿನಗಳ ಪೊಲೀಸ್‌ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ನಟ ದರ್ಶನ್‌ ಸೇರಿ ನಾಲ್ವರು ಆರೋಪಿಗಳನ್ನು ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ಅವರಿಗೆ ಜುಲೈ 4ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

VISTARANEWS.COM


on

Actor Darshan
Koo

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌ (Actor Darshan) ಸೇರಿ ನಾಲ್ವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಹನ್ನೆರಡು ದಿನಗಳ ಪೊಲೀಸ್‌ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ನಟ ದರ್ಶನ್, ವಿನಯ್, ಪ್ರದೋಶ್ ಮತ್ತು ಧನರಾಜ್‌ನನ್ನು 24ನೇ ಎಸಿಎಂಎಂ ಕೋರ್ಟ್‌ಗೆ ಪೊಲೀಸರು ಹಾಜರುಪಡಿಸಿದ್ದರು. ಪ್ರಕರಣ ವಿಚಾರಣೆ ನಡೆಸಿದ ನ್ಯಾಯಾಧೀಶರು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದ್ದಾರೆ. ಇದರಿಂದ 13 ವರ್ಷಗಳ ನಂತರ ನಟ ದರ್ಶನ್ ಮತ್ತೆ‌ ಜೈಲು ಸೇರುವಂತಾಗಿದೆ.

ಕೊಲೆ ಕೇಸ್ ಸಂಬಂಧ ಜೂನ್ 11ರಂದು ದರ್ಶನ್‌ ಬಂಧನವಾಗಿತ್ತು. ಮೂರು ಬಾರಿ ದರ್ಶನ್‌ರನ್ನು ಪೊಲೀಸ್ ಕಸ್ಟಡಿಗೆ (12 ದಿನ) ಪಡೆಯಲಾಗಿತ್ತು. ಇದೀಗ ಜುಲೈ 4ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿದ ಹಿನ್ನೆಲೆಯಲ್ಲಿ ದರ್ಶನ್ ಪರಪ್ಪನ ಅಗ್ರಹಾರ ಜೈಲು ಸೇರಲಿದ್ದಾರೆ.

2011ರಲ್ಲಿ ಪತ್ನಿ ವಿಜಯಲಕ್ಷ್ಮಿ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿ‌ ನಟ‌ ದರ್ಶನ್ ಜೈಲು ಸೇರಿದ್ದರು. ಇದೀಗ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನವಾಗಿದ್ದರಿಂದ ಎರಡನೇ ಬಾರಿಗೆ ನಟ ಜೈಲು ಸೇರುತ್ತಿದ್ದಾರೆ.

ಇದನ್ನೂ ಓದಿ | Actor Darshan: ದರ್ಶನ್‌ ತುಂಬ ಮುಗ್ದ, ತಾಯಿ ಕಣ್ಣೀರು ಹಾಕೊಂಡು ಮಗನನ್ನು ಬೆಳೆಸಬೇಕು ಎಂದಿದ್ರು ಎಂದ ಲಹರಿ ವೇಲು!

ಕಸ್ಟಡಿಯಲ್ಲಿ ಎಲ್ಲ 17 ಆರೋಪಿಗಳ ವಿಚಾರಣೆ ಮಾಡಿದ್ದ ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು, ಆರೋಪಿಗಳ ಹೇಳಿಕೆ ದಾಖಲಿಸಿಕೊಂಡಿದ್ದರು. ನಂತರ ಕೃತ್ಯಕ್ಕೆ ಸಂಬಂಧಿಸಿದ ಹಲವೆಡೆ ಮಹಜರು ಪ್ರಕ್ರಿಯೆ ನಡೆಸಿ, ಕೊಲೆಗೆ ಸಂಬಂಧಿಸಿದ ಸಿಸಿಟಿವಿ ದೃಶ್ಯಾವಳಿ, ಸಾಕ್ಷ್ಯ ಸಂಗ್ರಹ ಮಾಡಿದ್ದಾರೆ.

ಆರ್. ಆರ್. ನಗರ ಶೆಡ್ ಬಳಿ ಸಿಸಿಟಿವಿ ದೃಶ್ಯಾವಳಿ, ಮೃತದೇಹ ಪತ್ತೆಯಾದ ಜಾಗ, ಆರೋಪಿಗಳು ಚಲನವಲನ ನಡೆಸಿದ್ದ ಜಾಗಗಳಲ್ಲಿನ ಸಿಸಿಟಿವಿ ಫುಟೇಜ್ ಸಂಗ್ರಹಿಸಿ, ಕೃತ್ಯಕ್ಕೆ ಬಳಸಿದ್ದ ವಸ್ತುಗಳು ಸೀಜ್ ಮಾಡಲಾಗಿದೆ. ಇನ್ನು ಈ ಕುರಿತು ಕೃತ್ಯ ನಡೆದ ದಿನ ಆರೋಪಿಗಳ ಸಂಪರ್ಕದಲ್ಲಿದ್ದ ನಟ ಚಿಕ್ಕಣ್ಣ, ದರ್ಶನ್ ಪತ್ನಿ ವಿಜಯಲಕ್ಷ್ಮಿ ಇನ್ನಿತರರ ಹೇಳಿಕೆಯನ್ನೂ ದಾಖಲಿಸಲಾಗಿದೆ.

ಇದನ್ನೂ ಓದಿ | Actor Darshan: ರೇಣುಕಾಸ್ವಾಮಿ ಹತ್ಯೆ ಶ್ವಾನದ ಮೇಲೆ ʻಆನೆʼ ದಾಳಿ ಮಾಡಿದಂತೆ ಎಂದ ರಾಮ್​ ಗೋಪಾಲ್ ವರ್ಮಾ!

ಡಿ ಗ್ಯಾಂಗ್ ಕೊಲೆಯ ಆರೋಪ ಸಾಬೀತು ಪಡಿಸಲು ಪ್ರತಿ ಆಯಾಮದಲ್ಲೂ ಪೊಲೀಸರು ತನಿಖೆ ನಡೆಸಿದ್ದು, ಆರೋಪಿಗಳ ಬಟ್ಟೆಗಳು, ರಕ್ತ ಮತ್ತು ಕೂದಲಿನ ಮಾದರಿ ಪಡೆದು ಎಫ್ಎಸ್ಎಲ್‌ಗೆ ರವಾನೆ ಮಾಡಲಾಗಿದೆ. ಆರೋಪಿಗಳ ಮೊಬೈಲ್ ಫೋನ್ ವಶಕ್ಕೆ ಪಡೆದು ಪರಿಶೀಲನೆ ಹಾಗೂ ಮೊಬೈಲ್ ಡೇಟಾ ರಿಟ್ರೀವ್ ಮಾಡಿ ತನಿಖೆ ನಡೆಸಲಾಗುತ್ತಿದೆ. ತನಿಖೆ ವಿಚಾರವಾಗಿ ಖುದ್ದು ಕಮಿಷನರ್ ದಯಾನಂದ್ ನಿಗಾ ವಹಿಸಿದ್ದು, ಪ್ರತಿದಿನ ತನಿಖೆ ‌ವರದಿ ಪಡೆದು‌ ಚಾರ್ಜ್ ಶೀಟ್ ತಯಾರಿಕೆಗೆ ಸಿದ್ಧತೆ ನಡೆಸಿದ್ದಾರೆ.

Continue Reading

ಕರ್ನಾಟಕ

DK Shivakumar: ವಾರದೊಳಗೆ ಹೊಸ ಜಾಹೀರಾತು ನೀತಿಯ ಕರಡು ಪ್ರತಿ ಬಿಡುಗಡೆ

DK Shivakumar: ಮುಂದಿನ ಒಂದು ವಾರದೊಳಗೆ ಜಾಹೀರಾತು ನೀತಿಯ ಕರಡು ಪ್ರತಿಯನ್ನು ಸಾರ್ವಜನಿಕ ಚರ್ಚೆಗೆ ಬಿಡುಗಡೆ ಮಾಡಲಾಗುವುದು. ಕರಡು ಪ್ರತಿಯ ಕುರಿತು ಆಕ್ಷೇಪಣೆಗಳನ್ನು ಸಲ್ಲಿಸಲು 15 ದಿನಗಳ ಕಾಲಾವಕಾಶ ನೀಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

VISTARANEWS.COM


on

DCM D K Shivakumar statement about new advertising policy
Koo

ಬೆಂಗಳೂರು: ಮುಂದಿನ ಒಂದು ವಾರದೊಳಗೆ ಜಾಹೀರಾತು ನೀತಿಯ ಕರಡು ಪ್ರತಿಯನ್ನು ಸಾರ್ವಜನಿಕ ಚರ್ಚೆಗೆ ಬಿಡುಗಡೆ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದ್ದಾರೆ.

ನಗರದ ಬಿಬಿಎಂಪಿ ಕಚೇರಿಯಲ್ಲಿ ನಡೆದ ಅಧಿಕಾರಿಗಳ ಸಭೆ ಬಳಿಕ ಮಾಧ್ಯಮ ಗೋಷ್ಠಿ ನಡೆಸಿ ಮಾತನಾಡಿದ ಅವರು, ಕರಡು ಪ್ರತಿಯ ಕುರಿತು ಆಕ್ಷೇಪಣೆಗಳನ್ನು ಸಲ್ಲಿಸಲು 15 ದಿನಗಳ ಕಾಲಾವಕಾಶ ನೀಡಲಾಗುವುದು. ಅನೇಕ ವರ್ಷಗಳಿಂದ ನ್ಯಾಯಾಲಯದಲ್ಲಿ ಪ್ರಕರಣಗಳು ಇದ್ದ ಕಾರಣಕ್ಕೆ ಕಳೆದ ಒಂದು ವರ್ಷದಿಂದ ಜಾಹೀರಾತು ನೀತಿ ಬಾಕಿ ಉಳಿದಿತ್ತು. ಪ್ರಸ್ತುತ ಸಂಘ, ಸಂಸ್ಥೆಗಳ ಜತೆ ಚರ್ಚೆ ನಡೆಸಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ: Heat wave: ಉಷ್ಣ ಮಾರುತಕ್ಕೆ ತತ್ತರಿಸಿದ ಉತ್ತರ ಭಾರತ; ದೇಶಾದ್ಯಂತ 143 ಜನ ಬಲಿ

60 ಅಡಿಗಿಂತ ಹೆಚ್ಚು ಅಗಲ ಇರುವ ರಸ್ತೆಗಳಲ್ಲಿ ‘ಗ್ರೂಪ್ ಪ್ಯಾಕೇಜ್’ ತಯಾರಿಸಿ ಅವಕಾಶ ನೀಡಲಾಗುವುದು. ಸರ್ಕಾರಿ ಮತ್ತು ಖಾಸಗಿ ಕಟ್ಟಡಗಳ ಮೇಲೆ ಜಾಹಿರಾತು ನೀಡಲು ಅವಕಾಶ ನೀಡಲಾಗುವುದು. ಬಿಬಿಎಂಪಿ ಗೆ ತೆರಿಗೆ ನೀಡಿ ಖಾಸಗಿ ಕಟ್ಟಡಗಳು ಬಾಡಿಗೆ ನೀಡಬಹುದು. ಕಟ್ಟಡಗಳ ವಿಸ್ತೀರ್ಣ, ಎತ್ತರಕ್ಕೆ ತಕ್ಕಂತೆ ಯೂನಿಫಾರ್ಮಿಟಿ ತರಲಾಗುವುದು. ಮನಬಂದಂತೆ ಹಾಕಲು ಅವಕಾಶವಿಲ್ಲ. ಫಲಕಗಳನ್ನು ಮಾಡಲು ಯಾವ ಗುಣಮಟ್ಟದ ವಸ್ತು ಬಳಸಬೇಕು ಎಂದು ನಂತರ ತಿಳಿಸಲಾಗುವುದು. ಸರ್ಕಾರದಲ್ಲಿ ಇರುವ ಮೀಸಲಾತಿಗೆ ಅನುಗುಣವಾಗಿ ನೀಡಲಾಗುವುದು. ಪಿಪಿಪಿ ಮಾದರಿಯಲ್ಲಿ ಹಿಂದಿನ ಸರ್ಕಾರ ಒಂದಷ್ಟು ಅವಕಾಶ ನೀಡಿದ್ದು ಕಾನೂನು ಪ್ರಕಾರವಾಗಿ ಇದ್ದರೆ ರಕ್ಷಣೆ ಮಾಡಲಾಗುವುದು. ಏನೂ ಮಾಡದೆ ಇದ್ದವರನ್ನು ಕಾನೂನಿನ ಪ್ರಕಾರ ವಜಾ ಮಾಡಲಾಗುವುದು ಎಂದು ತಿಳಿಸಿದರು.

60 ಅಡಿಗಿಂತ ರಸ್ತೆ ಕಡಿಮೆ ಇದ್ದು, ಕಮರ್ಷಿಯಲ್ ವಲಯ ಎಂದು ಗುರುತಿಸಿದ್ದರೆ ಅಲ್ಲಿ ಜಾಹೀರಾತು ಅಳವಡಿಕೆಗೆ ಅವಕಾಶ ನೀಡಲಾಗುವುದು. ಜನಸಾಂದ್ರತೆ ಹಾಗು ವಹಿವಾಟು ಹೆಚ್ಚಿರುವ ಕಡೆ ಅವಕಾಶ ನೀಡಲಾಗುವುದು. ಸರ್ಕಾರಕ್ಕೆ ಹಣ ಬಾಕಿ ಉಳಿಸಿಕೊಂಡಿರುವ, ದಾವೆ ಹೂಡಿರುವವರಿಗೆ ಯಾವುದೇ ಕಾರಣಕ್ಕೂ ಅವಕಾಶ ಮಾಡಿಕೊಡುವುದಿಲ್ಲ. ನಾವು ಹೇಗೆ ಚುನಾವಣೆಗೆ ನಿಲ್ಲುವಾಗ ಯಾವುದೇ ಬಾಕಿಗಳನ್ನು ಉಳಿಸಿಕೊಳ್ಳದೆ ಇರುತ್ತೇವೆ, ಅದೇ ರೀತಿ ಇಲ್ಲಿ ಭಾಗವಹಿಸುವವರು ಎಲ್ಲಾ ಬಾಕಿಗಳನ್ನು ಕಟ್ಟಬೇಕು ಎಂದು ಹೇಳಿದರು.

ಇದನ್ನೂ ಓದಿ: Gold Rate Today: ಆಭರಣ ಕೊಳ್ಳುವವರಿಗೆ ಬಿಗ್‌ ರಿಲೀಫ್‌; ಇಳಿದ ಚಿನ್ನದ ದರ

ಒಂದಷ್ಟು ಪ್ರಕರಣಗಳು ನ್ಯಾಯಲಯದಲ್ಲಿವೆ ಎಂಬ ಪ್ರಶ್ನೆಗೆ ಉತ್ತರಿಸಿ, “ಆ ಪ್ರಕರಣಗಳಿಗೆ ನಾವು ಏನು ಮಾಡಲು ಆಗುವುದಿಲ್ಲ. ಅಲ್ಲಿ ತೀರ್ಮಾನವಾದ ನಂತರ ಬಗೆಹರಿಸಬಹುದು. ಜತೆಗೆ ನ್ಯಾಯಾಲಯವು ಒಂದಷ್ಟು ಸೂಚನೆಗಳನ್ನು ನೀಡಿತ್ತು ಅದನ್ನು ಗಣನೆಗೆ ತೆಗೆದುಕೊಂಡು ನಿಯಮಗಳನ್ನು ರೂಪಿಸಲಾಗಿದೆ. ಮೆಟ್ರೋ ಒಳಗೆ ಆ ನಿಗಮ ನೋಡಿಕೊಳ್ಳುತ್ತದೆ. ಹೊರಗಡೆ ಪಾಲಿಕೆ ಮತ್ತು ಮೆಟ್ರೋ ಸಹಭಾಗಿತ್ವದಲ್ಲಿ ಪ್ರತ್ಯೇಕ ಪ್ಯಾಕೇಜ್ ಘೋಷಣೆ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಇದನ್ನೂ ಓದಿ: Thane Roof Collapse: ಟಿನ್ ರೂಫ್‌ ಬಿದ್ದು ಫುಟ್ಬಾಲ್​ ಆಡುತ್ತಿದ್ದ 9 ಮಕ್ಕಳಿಗೆ ಗಾಯ; 5 ಮಂದಿ ಗಂಭೀರ

ಸುಮಾರು 600 ಕೋಟಿ ಜಾಹೀರಾತು ಹಣ ಬಾಕಿ ಇದೆ ಇದಕ್ಕೆ ಪರಿಹಾರ ಏನು ಎನ್ನುವ ಪ್ರಶ್ನೆಗೆ ಉತ್ತರಿಸಿ, ಎಲ್ಲವನ್ನು ವಸೂಲಿ ಮಾಡಲಾಗುವುದು ಹಾಗೂ ಬಾಕಿ ಉಳಿಸಿಕೊಂಡವರು ಭಾಗವಹಿಸಲು ಅವಕಾಶ ನೀಡುವುದಿಲ್ಲ ಎಂದರು. ವಾರ್ಷಿಕ ಆದಾಯ ಎಷ್ಟು ನಿರೀಕ್ಷೆ ಮಾಡಲಾಗುತ್ತಿದೆ ಎಂಬ ಪ್ರಶ್ನೆಗೆ, ಇನ್ನು ಮಗುನೇ ಹುಟ್ಟಿಲ್ಲ, ಮೊದಲೇ ಬಟ್ಟೆಯನ್ನು ಏಕೆ ಹೊಲೆಸಲಿ ಎಂದು ಮರು ಪ್ರಶ್ನಿಸಿದರು.

Continue Reading

ಶಿಕ್ಷಣ

2nd PUC Exam 3: ಸೋಮವಾರದಿಂದ ದ್ವಿತೀಯ ಪಿಯುಸಿ ಪರೀಕ್ಷೆ-3 ಶುರು; ವಿದ್ಯಾರ್ಥಿಗಳಿಗೆ ಬಸ್‌ ಪ್ರಯಾಣ ಉಚಿತ

2nd PUC Exam 3: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಹಾಲ್‌ ಟಿಕೆಟ್‌ ತೋರಿಸಿ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಉಚಿತವಾಗಿ (Free Bus) ಪರೀಕ್ಷಾ ಕೇಂದ್ರಕ್ಕೆ ತೆರಳಬಹುದಾಗಿದೆ. ಈ ಸಂಬಂಧ ನಿಗಮವು ಆದೇಶ ಹೊರಡಿಸಿದೆ.

VISTARANEWS.COM


on

By

2nd Puc Exam 3
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಜೂನ್‌ 24ರಿಂದ ಜುಲೈ 5ರವರೆಗೆ ದ್ವಿತೀಯ ಪಿಯುಸಿ (2nd PUC Exam 3) 3ನೇ ಪೂರಕ ಪರೀಕ್ಷೆಯು (Education News) ನಡೆಯಲಿದೆ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಪರೀಕ್ಷಾ ದಿನಗಳಂದು ಸರಕಾರಿ ಬಸ್‌ನಲ್ಲಿ ಉಚಿತವಾಗಿ (Free Bus) ಪ್ರಯಾಣಿಸಲು ಕೆಎಸ್‌ಆರ್‌ಟಿಸಿ (KSRTC) ನಿಗಮ ಅನುಮತಿಸಿದೆ.

ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯ ಹೊರತಾಗಿಯೂ ಬೇರೆ ಕಾಲೇಜಿನಲ್ಲಿ ಪರೀಕ್ಷಾ ಕೇಂದ್ರಗಳ ನಿಯೋಜನೆಯಾಗಿದೆ. ಹೀಗಾಗಿ ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿನಿಗಳಿಗೆ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ ಓಡಾಡಲು ಕೆಎಸ್‌ಆರ್‌ಟಿಸಿಯಲ್ಲಿ ಉಚಿತ ಪ್ರಯಾಣಕ್ಕೆ (2nd PUC Exam 2023) ಅನುವು ಮಾಡಿಕೊಡಲಾಗಿದೆ.

ಪರೀಕ್ಷೆ ನಡೆಯುವ ದಿನದಂದು ವಿದ್ಯಾರ್ಥಿಗಳು ತಮ್ಮ ಹಾಲ್‌ ಟಿಕೆಟ್‌ ತೋರಿಸಿ ಪ್ರಯಾಣಿಸಬಹುದಾಗಿದೆ. ನಿಗಮದ ನಗರ ಹಾಗೂ ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಜತೆಗೆ ಬಸ್‌ಗಳು ತಾವು ಹೋಗುವ ಮಾರ್ಗದಲ್ಲಿ ಪರೀಕ್ಷಾ ಕೇಂದ್ರ ಇದ್ದರೆ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ, ಕೋರಿಕೆ ನಿಲುಗಡೆ ನೀಡಲು ಸೂಚಿಸಿದೆ.

ಈ ಸಂಬಂಧ ನಿಗಮದ ಎಲ್ಲ ಚಾಲಕ/ನಿರ್ವಾಹಕರಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ವಿದ್ಯಾರ್ಥಿಗಳಿಗೆ ಪರೀಕ್ಷಾ ಅವಧಿಯಲ್ಲಿ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಹಾಗೂ ವಾಸಸ್ಥಳಕ್ಕೆ ಮರಳಲು ಪರೀಕ್ಷ ಪ್ರವೇಶ ಪತ್ರದೊಂದಿಗೆ ಪ್ರಯಾಣಿಸಲು ಅನುಮತಿಸಲು ಸೂಕ್ತ ತಿಳಿವಳಿಕೆ ನೀಡಲು ಸೂಚಿಸಲಾಗಿದೆ.

ಇದನ್ನೂ ಓದಿ: Accident News : ಕಂಟಕವಾದ ಕಾರ ಹುಣ್ಣಿಮೆ ಕರಿ ದಿನ; ಎತ್ತು ಬೆದರಿಸಲು ಹೋಗಿ ಮುಗ್ಗರಿಸಿ ಬಿದ್ದ ಜನ್ರು

ದ್ವಿತೀಯ ಪಿಯುಸಿ ಪರೀಕ್ಷೆ -3ರ ವೇಳಾಪಟ್ಟಿ ಹೀಗಿದೆ

ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಬೆಳಗ್ಗೆ 10:15ರಿಂದ ಮಧ್ಯಾಹ್ನ 1:30 ಹಾಗೂ ಮಧ್ಯಾಹ್ನ 2:15ರಿಂದ 4:30 ಪರೀಕ್ಷೆಯ ಸಮಯವಾಗಿದೆ. ಯಾವ್ಯಾವ ದಿನ ಯಾವ ವಿಷಯಕ್ಕೆ ಪರೀಕ್ಷೆ ನಡೆಯಲಿದೆ ಎಂಬುದರ ಮಾಹಿತಿ ಇಲ್ಲಿದೆ.

ದಿನಾಂಕ- ವಿಷಯ
ಜೂನ್‌ 24- ಕನ್ನಡ, ಅರೇಬಿಕ್
ಜೂನ್‌ 25- ಇಂಗ್ಲೀಷ್‌
ಜೂನ್‌ 26- ಸಮಾಜಶಾಸ್ತ್ರ , ಜೀವಶಾಸ್ತ್ರ, ಭೂಗರ್ಭ ಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ
ಜೂನ್‌ 27- ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ
ಜೂನ್‌ 28- ಅರ್ಥಶಾಸ್ತ್ರ, ರಸಾಯನಶಾಸ್ತ್ರ
ಜೂನ್‌ 29 – ಇತಿಹಾಸ, ಭೌತಶಾಸ್ತ್ರ
ಜುಲೈ 1 – ಗೃಹ ವಿಜ್ಞಾನ, ರಾಜ್ಯಶಾಸ್ತ್ರ, ಸಂಖ್ಯಾ ಶಾಸ್ತ್ರ
ಜುಲೈ 2 – ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ, ಗಣಿತ, ಶಿಕ್ಷಣ ಶಾಸ್ತ್ರ
ಜುಲೈ 3 – ಭೂಗೋಳಶಾಸ್ತ್ರ, ಮನಃಶಾಸ್ತ್ರ, ಮೂಲಗಣಿತ
ಜುಲೈ 4- ಹಿಂದಿ
ಜುಲೈ 5- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್ ಹಾಗೂ ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ,ರೀಟೈಲ್‌, ಆಟೋ ಮೊಬೈಲ್‌, ಬ್ಯೂಟಿ ಮತ್ತು ವೆಲ್‌ನೆಸ್‌

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Govt Employees: ಸರ್ಕಾರಿ ನೌಕರರಿಗೆ ಅಲರ್ಟ್‌; ಬೆಳಗ್ಗೆ 9.15ಕ್ಕೆ ಆಫೀಸ್‌ ತಲುಪದಿದ್ರೆ ಅರ್ಧ ದಿನ ರಜೆ!

Govt Employees: ಕೇಂದ್ರ ಸರ್ಕಾರಿ ನೌಕರರು ಬೆಳಗ್ಗೆ 9.15ರೊಳಗೆ ಕಚೇರಿ ತಲುಪಿ, ಬಯೋಮೆಟ್ರಿಕ್‌ ನೀಡದಿದ್ದರೆ ಅಂತಹವರಿಗೆ ಅರ್ಧ ದಿನ ರಜೆ ಎಂದು ಪರಿಗಣಿಸಲಾಗುತ್ತದೆ. ಈ ಬಗ್ಗೆ ಕೇಂದ್ರ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಆದೇಶ ನೀಡಿದೆ.

VISTARANEWS.COM


on

govt employees
Koo

ನವ ದೆಹಲಿ: ಸರ್ಕಾರಿ ಕಚೇರಿಗಳಿಗೆ ಕೆಲ ನೌಕರರು ತಡವಾಗಿ ಬರುತ್ತಾರೆ ಎಂಬ ವಿಷಯ ಎಲ್ಲರಿಗೂ ತಿಳಿದಿರುವ ಸಂಗತಿ. ಅಂತಹವರಿಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಇದೀಗ ಕಠಿಣ ಕ್ರಮ ಕೈಗೊಂಡಿದೆ. ಕೇಂದ್ರ ಸರ್ಕಾರಿ ನೌಕರರು ಕಚೇರಿಗೆ ಬೆಳಗ್ಗೆ 9.15ರೊಳಗೆ ಕಚೇರಿ ತಲುಪಿ, ಬಯೋಮೆಟ್ರಿಕ್‌ ನೀಡದಿದ್ದರೆ ಅಂತಹವರಿಗೆ ಅರ್ಧ ದಿನ ಸಾಮಾನ್ಯ ರಜೆ (casual leave) ಎಂದು ಪರಿಗಣಿಸಲು ಕೇಂದ್ರ ಸಿಬ್ಬಂದಿ ಮತ್ತು ತರಬೇತಿ ಇಲಾಖೆ (DOPT) ಆದೇಶ ನೀಡಿದೆ.

ಇನ್ನು ಕೇಂದ್ರ ಸರ್ಕಾರಿ ಕಚೇರಿಗಳಲ್ಲಿ ಹಾಜರಾತಿ ಪುಸ್ತಕದ ಬದಲಾಗಿ ಕಡ್ಡಾಯವಾಗಿ ಬಯೋಮೆಟ್ರಿಕ್‌ ಹಾಜರಾತಿ ವ್ಯವಸ್ಥೆ ಬಳಸಬೇಕು ಎಂದು ಕೇಂದ್ರ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ತಿಳಿಸಿದೆ. ಒಂದು ವೇಳೆ ವಿವಿಧ ಕಾರಣಗಳಿಂದ ನೌಕರರು ಕೆಲಸಕ್ಕೆ ಹಾಜರಾಗಲು ಸಾಧ್ಯವಾಗದಿದ್ದರೆ, ಒಂದು ದಿನ ಮೊದಲೇ ಕಚೇರಿಯಲ್ಲಿ ತಿಳಿಸಿ ಸಾಮಾನ್ಯ ರಜೆCL) ಚೀಟಿ ಸಲ್ಲಿಸಬೇಕು ಎಂದು ನೌಕರರಿಗೆ ಸೂಚಿಸಲಾಗಿದೆ.

ಹಾಗೆಯೇ ಉದ್ಯೋಗಿಗಳ ಹಾಜರಾತಿ, ಸಮಯ ಪಾಲನೆ ಬಗ್ಗೆ ಹಿರಿಯ ಅಧಿಕಾರಿಗಳು ಪರಿಶೀಲಿಸಬೇಕು. ಕೇಂದ್ರ ಸರ್ಕಾರಿ ಕಚೇರಿಗಳ ಕೆಲಸದ ಅವಧಿ ಬೆಳಗ್ಗೆ 9ಗಂಟೆಯಿಂದ ಸಂಜೆ 5.30ವರೆಗೆ ಇರುತ್ತದೆ. ಆದರೆ, ಕೆಲ ನೌಕರರು, ಅಧಿಕಾರಿಗಳು ಮಾತ್ರ ತಡವಾಗಿ ಆಫೀಸ್‌ಗೆ ಬಂದು, ಬೇಗನೆ ವಾಪಸ್‌ ಹೋಗುತ್ತಾರೆ. ಇದರಿಂದ ಕೆಲಸದ ನಿಮಿತ್ತ ಕಚೇರಿಗಳಿಗೆ ಬರುವ ಸಾರ್ವಜನಿಕರಿಗೆ ಸಮಸ್ಯೆ ಆಗುತ್ತಿದೆ. ಹೀಗಾಗಿ ಹಾಜರಾತಿ ವಿಚಾರದಲ್ಲಿ ಕೇಂದ್ರ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ.

ಇದನ್ನೂ ಓದಿ | KAS Exam: ಕೆಎಎಸ್‌ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್‌; ಪರೀಕ್ಷೆ ಬರೆಯಲು ಒಂದು ಬಾರಿ ಹೆಚ್ಚುವರಿ ಅವಕಾಶ

2014ಲ್ಲಿ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸರ್ಕಾರಿ ಕಚೇರಿಗಳಲ್ಲಿ ಆಧಾರ್‌ ಆಧಾರಿತ ಬಯೋಮೆಟ್ರಿಕ್ಸ್ ಹಾಜರಾತಿ ವ್ಯವಸ್ಥೆ (AEBAS) ಜಾರಿ ಮಾಡಿತ್ತು. 2019ರಲ್ಲಿ ಕೋವಿಡ್‌ ವ್ಯಾಪಿಸಿದಾಗ ಮುನ್ನೆಚ್ಚರಿಕಾ ಕ್ರಮವಾಗಿ ಬಯೋಮೆಟ್ರಿಕ್‌ ವ್ಯವಸ್ಥೆಯನ್ನು ಸ್ಥಗಿತಗೊಳಿಸಲಾಗಿತ್ತು, ನಂತರ 2022ರಲ್ಲಿ ವ್ಯವಸ್ಥೆ ಮರು ಆರಂಭವಾಗಿದೆ. ಇದೀಗ ಕಚೇರಿಗಳಲ್ಲಿ ನೌಕರರು ಸಮಯಪಾಲನೆ ಮಾಡುವ ನಿಟ್ಟಿನಲ್ಲಿ ಕಠಿಣ ಕ್ರಮ ಕೈಗೊಂಡಿರುವುದರಿಂದ ಸುಧಾರಣೆ ಕಂಡುಬರಲಿದೆ ಎಂದು ಹಿರಿಯ ಅಧಿಕಾರಿಗಳು ಹೇಳುತ್ತಿದ್ದಾರೆ.

Continue Reading
Advertisement
Viral Video
ವೈರಲ್ ನ್ಯೂಸ್4 mins ago

Viral Video: ಕಾರು ತಡೆದ ಟ್ರಾಫಿಕ್‌ ಪೊಲೀಸ್‌ ಕ್ಯಾಬ್‌ ಡ್ರೈವರ್‌ ಮಾಡಿದ್ದೇನು ಗೊತ್ತಾ?

Floods In Assam
ದೇಶ7 mins ago

Floods In Assam: ಭೀಕರ ಪ್ರವಾಹಕ್ಕೆ ನಲುಗಿದ ಅಸ್ಸಾಂ; 37ಕ್ಕೆ ಏರಿದ ಸಾವಿನ ಸಂಖ್ಯೆ

Actor Darshan
ಕರ್ನಾಟಕ8 mins ago

Actor Darshan: ದರ್ಶನ್ ಸೇರಿ ನಾಲ್ವರು ಸ್ಟೇಷನ್‌ನಿಂದ ಪರಪ್ಪನ ಅಗ್ರಹಾರ ಜೈಲಿಗೆ

Swamji Murder
ಪ್ರಮುಖ ಸುದ್ದಿ24 mins ago

Swamji Murder : ಆಸ್ತಿ, ಅಧಿಕಾರಕ್ಕಾಗಿ ಗಲಾಟೆ; ಸ್ವಾಮೀಜಿಯೊಬ್ಬರನ್ನು ಕೊಲೆ ಮಾಡಿದ ಸ್ವಾಮೀಜಿಗಳ ಗುಂಪು

Child Death
ಬೆಳಗಾವಿ30 mins ago

Child Death : ಮಕ್ಕಳ ಮಾರಾಟ ಜಾಲದಲ್ಲಿ ರಕ್ಷಣೆಯಾಗಿದ್ದ ಮಗು ಮೃತ್ಯು; ಅಂತ್ಯ ಸಂಸ್ಕಾರ ನೆರವೇರಿಸಿದ ಪೊಲೀಸರು

Shobha Shetty car gift to yashwanth birthday
ಟಾಲಿವುಡ್48 mins ago

Shobha Shetty: ಭಾವಿ ಪತಿಗೆ ಕಾರ್ ಗಿಫ್ಟ್ ನೀಡಿದ ‘ಅಗ್ನಿಸಾಕ್ಷಿ’ ಖ್ಯಾತಿಯ ನಟಿ!

IND vs BAN
ಕ್ರೀಡೆ55 mins ago

IND vs BAN: ಕೊಹ್ಲಿ ಬ್ಯಾಟಿಂಗ್​ ಬಗ್ಗೆ ಸ್ವತಃ ಬೇಸರ ವ್ಯಕ್ತಪಡಿಸಿದ ಬ್ಯಾಟಿಂಗ್​ ಕೋಚ್​

Job Alert
ಉದ್ಯೋಗ1 hour ago

Job Alert: ಗುಡ್‌ನ್ಯೂಸ್‌; ರೈಲ್ವೆ ಇಲಾಖೆಯಲ್ಲಿ ಖಾಲಿ ಇದೆ ಬರೋಬ್ಬರಿ 18,799 ಹುದ್ದೆ: ಅಪ್ಲೈ ಮಾಡುವ ವಿಧಾನ ಇಲ್ಲಿದೆ

ITMS Corridor
Latest1 hour ago

Mysore News in Kannada: ಬೆಂಗಳೂರು-ಮೈಸೂರು ಸಂಚಾರ ನಿಯಂತ್ರಣ ಜು.1ರಿಂದ ಸಂಪೂರ್ಣ ಹೈಟೆಕ್‌

DCM D K Shivakumar statement about new advertising policy
ಕರ್ನಾಟಕ1 hour ago

DK Shivakumar: ವಾರದೊಳಗೆ ಹೊಸ ಜಾಹೀರಾತು ನೀತಿಯ ಕರಡು ಪ್ರತಿ ಬಿಡುಗಡೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ21 hours ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 day ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ2 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು5 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು5 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ6 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ6 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ6 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 week ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ1 week ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

ಟ್ರೆಂಡಿಂಗ್‌