Lok Sabha Election 2024: ಮಹಿಳೆಯರು ದಾರಿ ತಪ್ಪಿದ ಹೇಳಿಕೆ; ಎಚ್‌ಡಿಕೆ ವಿರುದ್ಧ ರಾಜ್ಯಾದ್ಯಂತ ಹೋರಾಟಕ್ಕೆ ಮುಂದಾದ ಕಾಂಗ್ರೆಸ್‌ - Vistara News

Lok Sabha Election 2024

Lok Sabha Election 2024: ಮಹಿಳೆಯರು ದಾರಿ ತಪ್ಪಿದ ಹೇಳಿಕೆ; ಎಚ್‌ಡಿಕೆ ವಿರುದ್ಧ ರಾಜ್ಯಾದ್ಯಂತ ಹೋರಾಟಕ್ಕೆ ಮುಂದಾದ ಕಾಂಗ್ರೆಸ್‌

Lok Sabha Election 2024: ಮಹಿಳೆಯರ ದಾರಿ ತಪ್ಪಿದ್ದಾರೆ ಎಂಬ ಎಚ್‌.ಡಿ. ಕುಮಾರಸ್ವಾಮಿ ಹೇಳಿಕೆಯನ್ನು ರಾಜಕೀಯ ಅಸ್ತ್ರವನ್ನಾಗಿ ಮಾಡಿಕೊಳ್ಳಬೇಕು. ಈ ಬಗ್ಗೆ ಹೋರಾಟವನ್ನು ರೂಪಿಸಬೇಕು ಎಂಬ ನಿಟ್ಟಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ತುರ್ತು ಝೂಮ್ ಮೀಟಿಂಗ್ ಕರೆದಿದ್ದಾರೆ. ಶಾಸಕರು, ಸಂಸದರು, ಎಂಎಲ್ಸಿಗಳಿಗೆ ಈ ಸಭೆಯಲ್ಲಿ ಭಾಗಿಯಾಗಲು ಹೇಳಿದ್ದಾರೆ. ಶಾಸಕರ ಅಭಿಪ್ರಾಯ ಪಡೆದು ಹೋರಾಟದ ರೂಪುರೇಷೆಯನ್ನು ಸಿದ್ಧಪಡಿಸಲು ತೀರ್ಮಾನಿಸಲಾಗಿದೆ. ಪ್ರತಿ ಕ್ಷೇತ್ರದಲ್ಲೂ ಎಚ್‌ಡಿಕೆ ಹೇಳಿಕೆ ವಿರೋಧಿಸಿ ಹೋರಾಟ ಮಾಡುವ ತೀರ್ಮಾನಕ್ಕೆ ಕಾಂಗ್ರೆಸ್‌ ಬಂದಿದೆ ಎನ್ನಲಾಗಿದೆ.

VISTARANEWS.COM


on

Lok Sabha Election 2024 Congress to launch state wide agitation against HD Kumaraswamy
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ತುಮಕೂರಿನ ತುರವೇಕೆರೆಯಲ್ಲಿ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ (HD Kumaraswamy) ಪ್ರಚಾರ ಭಾಷಣ ಮಾಡುವ ವೇಳೆ ಗ್ಯಾರಂಟಿ ಯೋಜನೆಗಳನ್ನು (Congress Guarantee Scheme) ಟೀಕಿಸುವ ಭರದಲ್ಲಿ ಮಹಿಳೆಯರ ಬಗ್ಗೆ ಆಡಿದ ಮಾತುಗಳು ಈಗ ತೀವ್ರ ವಿವಾದಕ್ಕೆ ಕಾರಣವಾಗಿದೆ. ಈಗ ಇದರ ರಾಜಕೀಯ ಲಾಭ ಪಡೆಯಲು ಕಾಂಗ್ರೆಸ್‌ ಪ್ಲ್ಯಾನ್‌ ಮಾಡಿದ್ದು, ಪ್ರತಿ ಕ್ಷೇತ್ರದಲ್ಲೂ ಎಚ್‌ಡಿಕೆ ವಿರುದ್ಧ ಪ್ರತಿಭಟನೆ ನಡೆಸಲು ಸಜ್ಜಾಗಿದೆ. ಈ ನಿಟ್ಟಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ (DK Shivakumar) ತುರ್ತು ಸಭೆಯನ್ನು ಕರೆದಿದ್ದಾರೆ.

ತುರುವೇಕೆರೆಯಲ್ಲಿ ಎಚ್‌.ಡಿ. ಕುಮಾರಸ್ವಾಮಿ ಭಾಷಣ ಮಾಡುವ ವೇಳೆ, “ಗ್ಯಾರಂಟಿ ಯೋಜನೆಗಳಿಂದ ಹಳ್ಳಿಯ ತಾಯಂದಿರು ದಾರಿ ತಪ್ಪಿದ್ದಾರೆ” ಎಂಬ ಮಾತಿಗೆ ಈಗ ತೀವ್ರ ಆಕ್ರೋಶಗಳು ವ್ಯಕ್ತವಾಗಿವೆ. ಲೋಕಸಭಾ ಚುನಾವಣೆಯ ಹೊತ್ತಿನಲ್ಲಿ ಈ ಹೇಳಿಕೆ ಬಂದಿರುವುದರಿಂದ ಇದರ ವಿರುದ್ಧ ಈಗ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವ ತೀರ್ಮಾನಕ್ಕೆ ಕಾಂಗ್ರೆಸ್‌ ಬಂದಿದೆ ಎನ್ನಲಾಗಿದೆ. ಹೀಗಾಗಿ ಕಾಂಗ್ರೆಸ್‌ನಿಂದ ತುರ್ತು ಝೂಮ್ ಮೀಟಿಂಗ್ ನಡೆಸಿದೆ.

ಹೋರಾಟ ಮಾಡಲಿರುವ ಕಾಂಗ್ರೆಸ್

ಮಹಿಳೆಯರು ದಾರಿ ತಪ್ಪಿದ್ದಾರೆ ಎಂಬ ಎಚ್‌.ಡಿ. ಕುಮಾರಸ್ವಾಮಿ ಹೇಳಿಕೆಯನ್ನು ರಾಜಕೀಯ ಅಸ್ತ್ರವನ್ನಾಗಿ ಮಾಡಿಕೊಳ್ಳಬೇಕು. ಈ ಬಗ್ಗೆ ಹೋರಾಟವನ್ನು ರೂಪಿಸಬೇಕು ಎಂಬ ನಿಟ್ಟಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ತುರ್ತು ಝೂಮ್ ಮೀಟಿಂಗ್ ಕರೆದಿದ್ದಾರೆ. ಶಾಸಕರು, ಸಂಸದರು, ಎಂಎಲ್ಸಿಗಳಿಗೆ ಈ ಸಭೆಯಲ್ಲಿ ಭಾಗಿಯಾಗಲು ಹೇಳಿದ್ದಾರೆ. ಶಾಸಕರ ಅಭಿಪ್ರಾಯ ಪಡೆದು ಹೋರಾಟದ ರೂಪುರೇಷೆಯನ್ನು ಸಿದ್ಧಪಡಿಸಲು ತೀರ್ಮಾನಿಸಲಾಗಿದೆ. ಪ್ರತಿ ಕ್ಷೇತ್ರದಲ್ಲೂ ಎಚ್‌ಡಿಕೆ ಹೇಳಿಕೆ ವಿರೋಧಿಸಿ ಹೋರಾಟ ಮಾಡುವ ತೀರ್ಮಾನಕ್ಕೆ ಕಾಂಗ್ರೆಸ್‌ ಬಂದಿದೆ ಎನ್ನಲಾಗಿದೆ. ಚುನಾವಣಾ ಹೊತ್ತಿನಲ್ಲಿ ಕಾಂಗ್ರೆಸ್‌ಗೆ ಈ ಮಾತು ಬಹುದೊಡ್ಡ ಅಸ್ತ್ರವಾಗಿ ಪರಿಣಮಿಸಿದೆ.

ಮಹಿಳೆ ಬಗ್ಗೆ ಹೇಳಿದ್ರೆ ಜನ ಸಹಿಸ್ತಾರಾ ಎಂದ ಸಿಎಂ

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಿಂದಾಗಿ ಹೆಣ್ಣುಮಕ್ಕಳು ದಾರಿತಪ್ಪಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನೀಡಿರುವ ಹೇಳಿಕೆ ಸರಿಯಲ್ಲ. ಅವರ ಮನಸ್ಥಿತಿಯನ್ನು ಅರ್ಥಮಾಡಿಕೊಳ್ಳಬೇಕು. ತಾಯಂದಿರು ದಾರಿ ತಪ್ಪಿದ್ದಾರೆ ಎಂದರೇನು? ಅವರ ಹೇಳಿಕೆಯಿಂದ ಹೆಣ್ಣುಮಕ್ಕಳ ಬಗ್ಗೆ ಅವರಿಗಿರುವ ಭಾವನೆ ಏನು ಎಂದು ಅರ್ಥವಾಗುತ್ತದೆ. 2 ಬಾರಿ ಮುಖ್ಯಮಂತ್ರಿಯಾಗಿದ್ದರು ಈ ರೀತಿ ಮಾತನಾಡಿದರೆ ಜನ ಸಹಿಸುತ್ತಾರೆಯೇ ಎಂದು ಪ್ರಶ್ನೆ ಮಾಡಿದರು.

ಸ್ಪಷ್ಟನೆ ಕೊಡಲಿ ಇಲ್ಲವೇ ಕ್ಷಮೆ ಕೇಳಲಿ: ಡಾ. ಜಿ. ಪರಮೇಶ್ವರ್

ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಸಿಎಂ ಆಗಿದ್ದವರು. ನಮ್ಮ ಕಾರ್ಯಕ್ರಮ ಯೋಜನೆಗಳ ಬಗ್ಗೆ ಮಾತನಾಡಲಿ. ನಮ್ಮ ಯೋಜನೆಗಳು ಸರಿಯಿಲ್ಲ ಎಂದು ಬೇಕಿದ್ದರೆ ಹೇಳಲಿ. ಆದರೆ, ರಾಜ್ಯದ ತಾಯಂದಿರಿಗೆ ದಾರಿ ತಪ್ಪಿದ್ದಾರೆಂದು ಹೇಳಿದ್ದಾರೆ. ಯಾವ ಅರ್ಥದಲ್ಲಿ ಹಾಗೆ ಹೇಳಿದ್ದಾರೆ? ಹಳ್ಳಿ ಭಾಷೆಯಲ್ಲಿ ಅದಕ್ಕೆ ಕೆಟ್ಟ ಅರ್ಥ ಬರುತ್ತದೆ. ಹಾಗಾಗಿ ಅವರು ಒಂದು ಸ್ಪಷ್ಟನೆ ಕೊಡಬೇಕು. ಇಲ್ಲವಾದಲ್ಲಿ ರಾಜ್ಯದ ಮಹಿಳೆಯರ ಕ್ಷಮೆ ಕೇಳಬೇಕು. ಯಾಕೆಂದರೆ ಅದು ಬಹಳ ತಪ್ಪು ಅರ್ಥವನ್ನು ಕೊಡುತ್ತದೆ ಎಂದು ಹೇಳಿದರು.

ಯಾರು ಬಡತನ ರೇಖೆಗಿಂತ ಕಡಿಮೆ ಇದ್ದಾರೋ ಅಂಥವರಿಗೆ ಸಹಾಯವಾಗಲಿ ಎಂದು ಈ ಯೋಜನೆಗಳನ್ನು ಮಾಡಿದ್ದೇವೆ. ಅದನ್ನು ಸಹಿಸೋಕೆ ಆಗಿಲ್ಲವೆಂದಾದರೆ ಬೇರೆ ವಿಚಾರ. ಆದರೆ, ಹೀಗೆ ಹೇಳಬಾರದು ಎಂದು ಪರಮೇಶ್ವರ್‌ ಹೇಳಿದರು.

ಗ್ಯಾರಂಟಿ ಹೆಸರಲ್ಲಿ ದಾರಿ ತಪ್ಪಿಸುತ್ತಿದ್ದಾರೆ ಎಂದಿದ್ದೇನೆ: ಎಚ್‌ಡಿಕೆ

ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ತಮ್ಮ ಹೇಳಿಕೆ ಬಗ್ಗೆ ಸ್ಪಷ್ಟೀಕರಣವನ್ನು ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಎಚ್‌ಡಿಕೆ, ಗ್ಯಾರಂಟಿ ಹೆಸರಲ್ಲಿ ನಿಮ್ಮನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಹೇಳಿದ್ದೇನೆ. ನಾನು ಮಹಿಳೆಯರನ್ನು ಅವಮಾನ ಮಾಡಿದ್ದೇನಾ? ಮಹಿಳೆಯರ ಮುಗ್ದ ಮನಸ್ಸನ್ನು ಬಳಸಿಕೊಂಡು ದಾರಿ ತಪ್ಪಿಸುತ್ತಿದ್ದಾರೆ ಎಂದಿದ್ದೇನೆ. ನೀವು ಎಚ್ಚರಿಕೆಯಿಂದ ಇರಿ ಅಂತ ಹೇಳಿದ್ದೇನೆ. ಕಷ್ಟ ಅಂತ ಬಂದಾಗ ನಾನು ಆಶ್ರಯ‌ ನೀಡಿದ್ದೇನೆ. ನಾನು ಮುಖ್ಯಮಂತ್ರಿಯಾಗಿದ್ದಾಗ ಮಹಿಳೆಯರಿಗಾಗಿ ಸಾಕಷ್ಟು ಯೋಜನೆ ತಂದಿದ್ದೇನೆ. ಮಹಿಳೆಯರ‌ ಕೂಗಿಗೆ ಸ್ಪಂದಿಸಿ ಸಾರಾಯಿ‌ ನಿಷೇಧಿಸಿದ್ದೇನೆ. ನಾನು ಮಹಿಳೆಯರಿಗೆ ವಿಶೇಷ ಗೌರವ ನೀಡಿದ್ದೇನೆ. ಮಹಿಳೆಯರ ಬಗ್ಗೆ ನಾನು ಕೇವಲವಾಗಿ ಮಾತನಾಡುವುದಿಲ್ಲ. ಅಸಡ್ಡೆಯತೆಯಿಂದ‌ ಕಂಡಿಲ್ಲ. ಮಹಿಳೆಯರಿಗೆ ಅವಮಾನ ಆಗುವ ರೀತಿ ಎಲ್ಲೂ ಹೇಳಿಲ್ಲ. ನಾನು ಈ ರೀತಿ ಹೇಳಿದ್ದೇನೆ ಅನ್ನೋದನ್ನು ಅರ್ಥ ಮಾಡಿಕೊಳ್ಳದೆ ವಿವಾದ ಮಾಡುತ್ತಿದ್ದಾರೆ. ಕಾಂಗ್ರೆಸ್ ನಾಯಕರು ನನ್ನ ಮೇಲೆ ತಪ್ಪು ಹೊರಿಸುವ ರೀತಿ ಮಾಡುತ್ತಿದ್ದಾರೆ ಎಂದು ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.

ಮಹಿಳೆಯರು ದಾರಿ ತಪ್ಪುತ್ತಿದ್ದಾರೆಂದು ಎಚ್‌ಡಿಕೆ ಹೇಳಿಲ್ಲ; ಕಾಂಗ್ರೆಸ್‌ ವಿರುದ್ಧ ಜೆಡಿಎಸ್‌ ಆಕ್ರೋಶ

ಈ ಬಗ್ಗೆ ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ಜೆಡಿಎಸ್‌, ಎಚ್‌.ಡಿ. ಕುಮಾರಸ್ವಾಮಿ ಅವರು ಹೇಳಿದ್ದಾರೆನ್ನಲಾದ ಹೇಳಿಕೆ ಬಗ್ಗೆ ಸ್ಪಷ್ಟೀಕರಣವನ್ನು ನೀಡಿದೆ. ಕುಮಾರಸ್ವಾಮಿ ಅವರು ಮಹಿಳೆಯರಿಗೆ ಸಾಕಷ್ಟು ಯೋಜನೆಗಳನ್ನು ಕೊಟ್ಟಿದ್ದಾರೆ ಎಂದು ಹೇಳಿದೆ.

ಜೆಡಿಎಸ್‌ ಪೋಸ್ಟ್‌ನಲ್ಲೇನಿದೆ?

• “ಸತ್ಯವನ್ನು ವಕ್ರೀಕರಿಸುವುದು, ತಿರುಚುವುದು ಕಾಂಗ್ರೆಸ್‌ ಪಕ್ಷದ ಪುರಾತನ-ಪರಂಪರಾಗತ ಚಾಳಿ. 75 ವರ್ಷಗಳಿಂದ ಇದನ್ನೇ ಮಾಡಿಕೊಂಡು ಜಾತಿ ಧರ್ಮದ ಹೆಸರಿನಲ್ಲಿ ಸಮಾಜವನ್ನು ವಿಭಜಿಸಿ ಆಳುತ್ತಿದೆ. ಈಸ್ಟ್ ಇಂಡಿಯಾ ಕಂಪನಿಯ ಆಧುನಿಕ ಅವತಾರವೇ ಕಾಂಗ್ರೆಸ್. ಜನರನ್ನು ರಣಹದ್ದಿನಂತೆ ಕಿತ್ತು ತಿನ್ನುತ್ತಿದೆ ಹಾಗೂ ಕರ್ನಾಟಕದಲ್ಲಿ ತನ್ನ ರಕ್ಕಸಭೋಜನ ಮುಂದುವರಿದಿದೆ.

• ತುರುವೇಕೆರೆಯಲ್ಲಿ ಎಚ್.ಡಿ. ಕುಮಾರಸ್ವಾಮಿ ಅವರು ಹೇಳಿದ್ದನ್ನು ಕಾಂಗ್ರೆಸ್ ಫೇಕ್ ಫ್ಯಾಕ್ಟರಿ ತಿರುಚಿ ಮೈ ಪರಚಿಕೊಳ್ಳುತ್ತಿದೆ. “ಗ್ಯಾರಂಟಿ ಯೋಜನೆಗಳಿಂದ ಹಳ್ಳಿಯ ತಾಯಂದಿರು ದಾರಿ ತಪ್ಪಿದ್ದಾರೆ” ಎಂದು ಹಸಿಸುಳ್ಳು ಹಬ್ಬಿಸುತ್ತಿದೆ. ನೆನಪಿರಲಿ, ಇದೇ ಹಳ್ಳಿ ತಾಯಂದಿರ ಬದುಕಿಗೆ ನರಕವಾಗಿದ್ದ ಸಾರಾಯಿ, ಲಾಟರಿ ನಿಷೇಧ ಮಾಡಿ ಅವರ ಮಾಂಗಲ್ಯ ಉಳಿಸಿದ್ದು ಇದೇ ಕುಮಾರಣ್ಣ. ನಿತ್ಯನರಕವಾಗಿದ್ದ ಅವರ ಬದುಕಿಗೆ ಸಾಂತ್ವನ ಹೇಳಿದ್ದೂ ಇವರೇ. ವಿಧವಾ ಪಿಂಚಣಿಯನ್ನು ₹200 ರಿಂದ ₹400ಕ್ಕೆ ಹೆಚ್ಚಿಸಿ ಅವರಿಗೆ ಶಕ್ತಿ ತುಂಬಿದ್ದು ಕುಮಾರಣ್ಣ ಅಲ್ಲವೇ?

• 2018-19ರಲ್ಲಿ ಕಾಂಗ್ರೆಸ್‌ ಕರ್ನಾಟಕದ ವಿರೋಧ ಲೆಕ್ಕಿಸದೆ ರೈತರ 25,000 ಕೋಟಿ ರೂಪಾಯಿ ಸಾಲ ಮಾಡಿದ್ದು ಹಳ್ಳಿ ತಾಯಂದಿರ ಅಣ್ಣ ಇದೇ ಕುಮಾರಣ್ಣ. ಸಾಲ ಮನ್ನಾ ನಮ್ಮ ಕಾರ್ಯಕ್ರಮವೇ ಅಲ್ಲ. ನಮ್ಮ ಭಾಗ್ಯಗಳಿಗೆ ನಯಾಪೈಸೆ ಕಮ್ಮಿ ಆಗಂಗಿಲ್ಲ ಎಂದು ಟವೆಲ್ ಕೊಡವಿದ್ದು ಯಾರು ಕಾಂಗ್ರೆಸಿಗರೇ? ನಿಮಗೆ ನೆನಪಿಲ್ಲವೇ? ಇಂಥ ಕುಮಾರಣ್ಣ ತಾಯಂದಿರನ್ನು ಅಪಮಾನಿಸುತ್ತಾರೆಯೇ? ಸುಳ್ಳು ಹೇಳಿದರೆ ಜನ ನಂಬುತ್ತಾರೆಯೇ?

• ಕಾಂಗ್ರೆಸ್ ಮಾಡಿದ್ದೇನು? ಲಾಟರಿ ಕಿಂಗ್‌ಗಳಿಗೆ ರತ್ನಗಂಬಳಿ ಹಾಸಿ ಲೂಟಿ ಮಾಡಿದ್ದು, ಮನೆಮನೆಗೂ ಹಳ್ಳಿಹಳ್ಳಿಗೂ ಸಾರಾಯಿ ಸಮಾರಾಧನೆ ಮಾಡಿದ್ದು ಕಾಂಗ್ರೆಸ್‌ ಸರ್ಕಾರ. ಅಷ್ಟೇ ಏಕೆ? ಒಂದು ಕೈಯಲ್ಲಿ 2000 ರೂಪಾಯಿ ಕೊಟ್ಟು ಇನ್ನೊಂದು ಕೈಯಲ್ಲಿ ತಾಯಂದಿರ ಮನೆಗಳ ಪಕ್ಕದ ಕಿರಾಣಿ ಅಂಗಡಿಗಳಲ್ಲಿಯೇ ಮದ್ಯದ ಬಾಟಲಿ ಮಾರಾಟ ಮಾಡುತ್ತಿರುವುದು ಇದೇ ಢೋಂಗಿ ಗ್ಯಾರಂಟಿ ಕಾಂಗ್ರೆಸ್ ಸರ್ಕಾರ! ಇಲ್ಲ ಎನ್ನಲು ಅವರಿಗೆ ಧೈರ್ಯ, ನೈತಿಕತೆ ಇದೆಯೇ?

• ಸ್ವಚ್ಛ ಮನಸ್ಸಿನ ಹಳ್ಳಿಗಳಲ್ಲಿ ಸುಪ್ರಭಾತದ ವೇಳೆಗೆ ದೇವಾಲಯದ ಘಂಟೆನಾದ ಮೊಳಗುತ್ತಿತ್ತು. ಉಷೋದಯಕ್ಕೆ ಮೊದಲೇ ಹಳ್ಳಿಗೆ ಹಳ್ಳಿಯೇ ಮಂಗಳಕರವಾಗಿ ಕಂಗೊಳಿಸುತ್ತಿತ್ತು. ತಾಯಂದಿರು ಮನೆಗಳ ಮುಂದೆ ರಂಗೋಲಿ ಬಿಡಿಸುತ್ತಿದ್ದರೆ, ಪುರುಷರು ಹೊಲ-ತೋಟದ ಕೆಲಸಗಳಿಗೆ ಹೋಗುತ್ತಿದ್ದರು. ಗ್ಯಾರಂಟಿಗಳು ಬಂದ ಮೇಲೆ ಏನಾಗಿದೆ? ತಾಯಂದಿರು ರಂಗೋಲಿ ಬಿಡಿಸುವ ಮುನ್ನವೇ ಕಿರಾಣಿ ಅಂಗಡಿಗಳಲ್ಲಿ, ಹಾದಿಬೀದಿಗಳ ಬಾರ್‌ಗಳಲ್ಲಿ ಮದ್ಯದ ಘಾಟು ಹೊಡೆಯುತ್ತಿದೆ. ತಾಯಂದಿರ ಸಬಲೀಕರಣ, ಆರ್ಥಿಕ ಸ್ವಾತಂತ್ರ್ಯ, ಸ್ವಾಭಿಮಾನ ಎಂದರೆ ಸೂರ್ಯೋದಕ್ಕೆ ಮೊದಲೇ ಮದ್ಯ ಮಾರಾಟ ಮಾಡುವುದೇ?

• ಕಾಂಗ್ರೆಸ್ ದಾರಿದ್ರ್ಯ ಎಲ್ಲಿಗೆ ಬಂದು ನಿಂತಿದೆ ನೋಡಿ.. ಗ್ಯಾರಂಟಿಗಳಿಗೆ ಹಣ ಹೊಂದಿಸಲು ಮದ್ಯಪಾನಕ್ಕೆ ಭಾರಿ ಪ್ರೋತ್ಸಾಹ ಕೊಡುವುದು ‘ಕಾಂಗ್ರೆಸ್ ಪಕ್ಷದ ಸಾಮಾನ್ಯ ಕನಿಷ್ಠ ಕಾರ್ಯಕ್ರಮ’ ಆಗಿದೆ. ಶ್ರೀಗಂಧ, ಸುಗಂಧದ ನಾಡಾಗಿರುವ ಕರ್ನಾಟಕವನ್ನು ಮದ್ಯದ ಬೀಡನ್ನಾಗಿಸುತ್ತಿದೆ. ಇದನ್ನು ಪ್ರಶ್ನಿಸಿದರೆ ತಾಯಂದಿರು ದಾರಿ ತಪ್ಪುತ್ತಿದ್ದಾರೆ ಎಂದು ಹೇಳಿದ ಹಾಗೆಯೇ?

ಇದನ್ನೂ ಓದಿ: Lok Sabha Election 2024: ಲೋಕಸಭಾ ಚುನಾವಣೆಗಾಗಿ ರಾಜ್ಯಕ್ಕೆ ಬಿ.ಎಲ್. ಸಂತೋಷ್ ಎಂಟ್ರಿ; ಇಂದು ಮಂಗಳೂರಲ್ಲಿ ಸಭೆ?

ಕುಮಾರಸ್ವಾಮಿ ಅವರು ಹೇಳಿದ್ದು.. ಗ್ಯಾರಂಟಿಗಳಿಂದ ತಾಯಂದಿರನ್ನು ದಿಕ್ಕು ತಪ್ಪಿಸುತ್ತಿದೆ ಎಂದು. ಉಚಿತ ಆರೋಗ್ಯ, ಉಚಿತ ಶಿಕ್ಷಣ ನೀಡುವ ಬದಲು ಅಗ್ಗದ ರಾಜಕೀಯ ಲಾಭ ಮಾಡಿಕೊಳ್ಳುತ್ತಿದೆ ಎಂದು. ಕಾಂಗ್ರೆಸ್ ತನ್ನ ಪಾಪಗಳನ್ನು ಮುಚ್ಚಿಟ್ಟುಕೊಳ್ಳಲು ಸತ್ಯಕ್ಕೆ ಸುಳ್ಳಿನ ಮುಖವಾಡ ಹಾಕುತ್ತಿದೆ. ನಿಜಕ್ಕಾದರೆ, ದಾರಿ ತಪ್ಪುತ್ತಿರುವುದು ರಾಜ್ಯದ ಆರ್ಥಿಕತೆ, ಕರ್ನಾಟಕದ ಹೆಗ್ಗಳಿಕೆ, ಕರ್ನಾಟಕ ಪ್ರತಿಷ್ಠೆ.

ಹೆಚ್ಚುತ್ತಿರುವುದು ತಾಯಂದಿರ ಮೇಲಿನ ಸಾಲ. ಈ ವರ್ಷ 1 ಲಕ್ಷ ಕೋಟಿ ರೂಪಾಯಿಗೂ ಹೆಚ್ಚು ಸಾಲ ಮಾಡುವ ಗುರಿ ಇಟ್ಟುಕೊಂಡಿದೆ ಈ ಸರ್ಕಾರ. ಆ ಸಾಲ ತೀರಿಸೋರು ಯಾರು? ಕಾಂಗ್ರೆಸ್ ತನ್ನ ಖಜಾನೆಯಿಂದ ತೀರಿಸುತ್ತದೆಯೇ?” ಎಂದು ಜೆಡಿಎಸ್‌ ಪ್ರಶ್ನೆ ಮಾಡಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

101ನೇ ವಯಸ್ಸಿನಲ್ಲೂ ‘ಕರ್ತವ್ಯ’ ಮರೆಯದೆ ವೋಟ್‌ ಮಾಡಿದ ನಿವೃತ್ತ ಯೋಧ; ಸೆಲ್ಯೂಟ್‌ ಎಂದರು ಜನ

ಮುಂಬೈನ ರಹೇಜಾ ಕಾಲೇಜಿಗೆ ತೆರಳಿದ 101 ವರ್ಷದ ನಿವೃತ್ತ ಯೋಧ ಕಾರ್ಖನೀಸ್‌ ಅವರು ಮತದಾನ ಮಾಡುವ ಮೂಲಕ ಯುವಕರು ಸೇರಿ ಎಲ್ಲರಿಗೂ ಮಾದರಿ ಎನಿಸಿದ್ದಾರೆ. ಇವರು ಮತದಾನ ಮಾಡಲು ತೆರಳಿದ ಫೋಟೊವನ್ನು ಮುಂಬೈ ಪೊಲೀಸರು ಪೋಸ್ಟ್‌ ಮಾಡಿದ್ದಾರೆ. ಸಾವಿರಾರು ಜನ ಪೋಸ್ಟ್‌ಗೆ ಲೈಕ್‌ ಒತ್ತುವ ಜತೆಗೆ, ಯೋಧರ ಉತ್ಸಾಹ, ಕರ್ತವ್ಯ ಪ್ರಜ್ಞೆಯನ್ನು ಕೊಂಡಾಡಿದ್ದಾರೆ.

VISTARANEWS.COM


on

Army Officer
Koo

ಮುಂಬೈ: ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ 49 ಕ್ಷೇತ್ರಗಳಲ್ಲಿ ಸೋಮವಾರ (ಮೇ 20) ಐದನೇ ಹಂತದ ಮತದಾನ (Lok Sabha Election) ನಡೆದಿದೆ. ಬಹುತೇಕ ಕಡೆ ಶಾಂತಿಯುತವಾಗಿಯೇ ಮತದಾನ ನಡೆದಿದೆ. ಮೂರನೇ ಹಂತದಲ್ಲಿ ಕೇವಲ ಶೇ.57.5ರಷ್ಟು ಮತದಾನ (Voter Turnout) ದಾಖಲಾಗಿದೆ. ಇದರ ಮಧ್ಯೆಯೇ, ಮುಂಬೈನಲ್ಲಿ 101ನೇ ವಯಸ್ಸಿನಲ್ಲೂ ನಿವೃತ್ತ ಯೋಧರೊಬ್ಬರು (Retired Army Officer) ಮತಗಟ್ಟೆಗೆ ತೆರಳಿ ಮತದಾನ ಮಾಡುವ ಮೂಲಕ ಯುವಕರು ಸೇರಿ ಎಲ್ಲರಿಗೂ ಮಾದರಿ ಎನಿಸಿದ್ದಾರೆ. ಅವರು ಮತದಾನ ಮಾಡಿದ ಫೋಟೊಗಳು ಈಗ ವೈರಲ್‌ ಆಗಿವೆ.

ಮುಂಬೈ ಪೊಲೀಸರು ನಿವೃತ್ತ ಯೋಧ ಮತದಾನ ಮಾಡಿದ ಫೋಟೊವನ್ನು ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ ಮಾಡಿದ್ದಾರೆ. “ನೀವು ಮತದಾನವನ್ನು ತಪ್ಪಿಸಿಕೊಳ್ಳಲು 101 ಕಾರಣಗಳನ್ನು ಕೊಡಬಹುದು. ಆದರೆ, ನಿವೃತ್ತ ಯೋಧರಾದ ಕಾರ್ಖನೀಸ್‌ ಅವರು 101ನೇ ವಯಸ್ಸಿನಲ್ಲೂ ಮತಗಟ್ಟೆಗೆ ತೆರಳಿ ಮತದಾನ ಮಾಡುವ ಮೂಲಕ ಮಾದರಿ ಎನಿಸಿದ್ದಾರೆ. ಇವರು ಮುಂಬೈನ ರಹೇಜಾ ಕಾಲೇಜಿಗೆ ತೆರಳಿ ಮತದಾನ ಮಾಡಿದ್ದು, ನಮ್ಮ ಸಿಬ್ಬಂದಿಯು ಅವರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಂಡರು” ಎಂಬುದಾಗಿ ಪೋಸ್ಟ್‌ ಮಾಡಿದ್ದಾರೆ.

ನಿವೃತ್ತ ಯೋಧರ ಕರ್ತವ್ಯಪ್ರಜ್ಞೆಗೆ ಜಾಲತಾಣಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. “ಇಳಿ ವಯಸ್ಸಿನಲ್ಲೂ ಮತದಾನ ಮಾಡಿದ ನಿವೃತ್ತ ಯೋಧನಿಗೆ ನನ್ನ ಸೆಲ್ಯೂಟ್‌” ಎಂದು ಒಬ್ಬರು ಪ್ರತಿಕ್ರಿಯಿಸಿದ್ದಾರೆ. “ನಿಜವಾಗಿಯೂ ಇದು ಸ್ಫೂರ್ತಿದಾಯಕ. 98 ವರ್ಷದ ನನ್ನ‌ ಅಜ್ಜಿಯು ಕೂಡ ಇಂದು ಮತ ಚಲಾಯಿಸಿದ್ದಾರೆ. ಇನ್ನು ಯೋಧನಿಗೆ ಸಹಾಯ ಮಾಡಿದ ಪೊಲೀಸ್‌ ಸಿಬ್ಬಂದಿಗೂ ಧನ್ಯವಾದಗಳು” ಎಂದು ಮತ್ತೊಬ್ಬರು ಕಮೆಂಟ್‌ ಮಾಡಿದ್ದಾರೆ. ಇನ್‌ಸ್ಟಾಗ್ರಾಂ ಪೋಸ್ಟ್‌ಅನ್ನು ಸಾವಿರಾರು ಜನ ಲೈಕ್‌ ಮಾಡಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಐದನೇ ಹಂತದಲ್ಲಿ ಹೆಚ್ಚಿನ ಮತದಾನ ದಾಖಲಾಗಿದೆ. ರಾಜ್ಯದಲ್ಲಿ ಕೆಲವೆಡೆ ಹಿಂಸಾಚಾರ ಪ್ರಕರಣಗಳು ಸುದ್ದಿಯಾಗಿದ್ದರೂ ಶೇ.73ರಷ್ಟು ಮತದಾನ ದಾಖಲಾಗಿದೆ. ಇನ್ನು ಲಡಾಕ್‌ನಲ್ಲಿ ಶೇ.67.15, ಜಾರ್ಖಂಡ್‌ನಲ್ಲಿ ಶೇ.61.90ರಷ್ಟು ಮತದಾನ ನಡೆದಿದೆ. ಇನ್ನು ಮಹಾರಾಷ್ಟ್ರದಲ್ಲಿ ಕೇವಲ ಶೇ.48.66ರಷ್ಟು ಮತದಾನ ದಾಖಲಾಗಿದ್ದು, ಐದನೇ ಹಂತದಲ್ಲಿ ಕನಿಷ್ಠ ಮತದಾನ ನಡೆದ ರಾಜ್ಯ ಎನಿಸಿದೆ. ನಾಲ್ಕನೇ ಹಂತದಲ್ಲೂ ಮಹಾರಾಷ್ಟ್ರದಲ್ಲಿ ಕನಿಷ್ಠ ಮತದಾನ ದಾಖಲಾಗಿತ್ತು.

ಉತ್ತರ ಪ್ರದೇಶದ 14, ಮಹಾರಾಷ್ಟ್ರದ 13, ಪಶ್ಚಿಮ ಬಂಗಾಳ 7, ಬಿಹಾರ ಹಾಗೂ ಒಡಿಶಾದಲ್ಲಿ ತಲಾ 5, ಜಾರ್ಖಂಡ್‌ನಲ್ಲಿ 3, ಜಮ್ಮು ಕಾಶ್ಮೀರ ಮತ್ತು ಲಡಾಕ್‌ನ ತಲಾ 1 ಕ್ಷೇತ್ರಗಳಲ್ಲಿ ಮತದಾನ ನಡೆದಿದೆ. ಕೇಂದ್ರ ಸಚಿವರಾದ ರಾಜನಾಥ್‌ ಸಿಂಗ್‌ (ಲಖನೌ), ಸ್ಮೃತಿ ಇರಾನಿ (ಅಮೇಥಿ), ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (ರಾಯ್‌ಬರೇಲಿ), ಜಮ್ಮು-ಕಾಶ್ಮೀರ ಮಾಜಿ ಸಿಎಂ ಒಮರ್‌ ಅಬ್ದುಲ್ಲಾ (ಬಾರಾಮುಲ್ಲಾ) ಸೇರಿ ಹಲವು ಗಣ್ಯರ ಭವಿಷ್ಯವು ಮತಯಂತ್ರಗಳಲ್ಲಿ ಭದ್ರವಾಗಿದೆ.

ಇದನ್ನೂ ಓದಿ: Postal Ballot: ಅನಾರೋಗ್ಯದ ಕಾರಣ ಅಂಚೆ ಮತದಾನ ಕೋರಿ 78ರ ಅಜ್ಜಿ ಅರ್ಜಿ; ಬೇಡವೆಂದ ಸುಪ್ರೀಂ!

Continue Reading

ದೇಶ

Postal Ballot: ಅನಾರೋಗ್ಯದ ಕಾರಣ ಅಂಚೆ ಮತದಾನ ಕೋರಿ 78ರ ಅಜ್ಜಿ ಅರ್ಜಿ; ಬೇಡವೆಂದ ಸುಪ್ರೀಂ!

Postal Ballot: ಛತ್ತೀಸ್‌ಗಢದ ಬಿಲಾಸ್‌ಪುರ ನಿವಾಸಿಯಾದ ಸರಳ ಶ್ರೀವಾಸ್ತವ ಪರ ಹಿರಿಯ ವಕೀಲ ಗೌರವ್‌ ಅಗರ್ವಾಲ್‌ ವಾದ ಮಂಡಿಸಿದರು. “ಮಹಿಳೆಯು ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದಾರೆ. ಚುನಾವಣೆ ಆಯೋಗದ ನಿಯಮಗಳ ಪ್ರಕಾರ ಮಹಿಳೆಯು ಅಂಚೆ ಮತದಾನ ಮಾಡಲು ಅರ್ಹರು” ಎಂದು ಹೇಳಿದರು.

VISTARANEWS.COM


on

Postal Ballot
Koo

ನವದೆಹಲಿ: ಅನಾರೋಗ್ಯದಿಂದ ಹಾಸಿಗೆ ಹಿಡಿದಿರುವ ಕಾರಣ ಲೋಕಸಭೆ ಚುನಾವಣೆಯಲ್ಲಿ ಹಕ್ಕು ಚಲಾಯಿಸಲು ಅಂಚೆ ಮತದಾನಕ್ಕೆ (Postal Ballot) ಅವಕಾಶ ಮಾಡಿಕೊಡಬೇಕು ಎಂದು ಛತ್ತೀಸ್‌ಗಢದ 78 ವರ್ಷದ ಮಹಿಳೆಯೊಬ್ಬರು ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ (Supreme Court) ನಿರಾಕರಿಸಿದೆ. ಇದರಿಂದಾಗಿ, ಅನಾರೋಗ್ಯವಿದ್ದರೂ ಚುನಾವಣೆಯಲ್ಲಿ ಮತದಾನ ಮಾಡಬೇಕು ಎಂಬ ಹಂಬಲ ಹೊಂದಿದ್ದ ಸರಳ ಶ್ರೀವಾಸ್ತವ ಎಂಬ ಅಜ್ಜಿಗೆ ನಿರಾಸೆಯಾದಂತಾಗಿದೆ.

ಛತ್ತೀಸ್‌ಗಢದ ಬಿಲಾಸ್‌ಪುರ ನಿವಾಸಿಯಾದ ಸರಳ ಶ್ರೀವಾಸ್ತವ ಪರ ಹಿರಿಯ ವಕೀಲ ಗೌರವ್‌ ಅಗರ್ವಾಲ್‌ ವಾದ ಮಂಡಿಸಿದರು. “ಮಹಿಳೆಯು ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದಾರೆ. ಚುನಾವಣೆ ಆಯೋಗದ ನಿಯಮಗಳ ಪ್ರಕಾರ ಮಹಿಳೆಯು ಅಂಚೆ ಮತದಾನ ಮಾಡಲು ಅರ್ಹರು” ಎಂದು ಹೇಳಿದರು. ಆದರೆ, ನ್ಯಾಯಮೂರ್ತಿಗಳಾದ ಬೆಲಾ ಎಂ. ತ್ರಿವೇದಿ ಹಾಗೂ ಜಸ್ಟಿಸ್‌ ಪಂಕಜ್‌ ಮಿತ್ತಲ್‌ ಅವರಿದ್ದ ಪೀಠವು ಅರ್ಜಿಯನ್ನು ತಿರಸ್ಕರಿಸಿತು.

“ಬಿಲಾಸ್‌ಪುರದಲ್ಲಿ ಮೇ 7ರಂದೇ ಮತದಾನ ಮುಕ್ತಾಯಗೊಂಡಿದೆ. ಮತದಾನ ಮುಗಿದು ಹಲವು ದಿನಗಳ ನಂತರ ಅಂಚೆ ಮತದಾನಕ್ಕೆ ಅವಕಾಶ ನೀಡಬೇಕು ಎಂದರೆ ಆಗುವುದಿಲ್ಲ. ಇಂತಹ ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್‌ಗೆ ಮೊದಲೇ ಅರ್ಜಿ ಸಲ್ಲಿಸಬೇಕು. ಅಂಚೆ ಮತದಾನಕ್ಕೆ ಹಲವು ಪ್ರಕ್ರಿಯೆಗಳಿವೆ. ಅವುಗಳೆಲ್ಲವೂ ಸಮಯಕ್ಕೆ ಅನುಸಾರವಾಗಿ ಆಗಬೇಕು. ಅಷ್ಟಕ್ಕೂ, ಭಾರತದಲ್ಲಿ ಪ್ರತಿಯೊಬ್ಬರಿಗೂ ಮನೆಯಲ್ಲಿ ಕುಳಿತೇ ಮತದಾನ ಮಾಡುವ ಉಮೇದಿ ಇದೆ” ಎಂದು ನ್ಯಾಯಪೀಠವು ಅಸಮಾಧಾನ ವ್ಯಕ್ತಪಡಿಸಿತು.

ಸರಳ ಶ್ರೀವಾಸ್ತವ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದಾರೆ. ಅವರು ಹಾಸಿಗೆಯಲ್ಲೇ ಚಿಕಿತ್ಸೆ ಪಡೆಯುತ್ತಿರುವ ಕಾರಣ ಅಂಚೆ ಮತದಾನದ ಮೂಲಕವಾದರೂ ಹಕ್ಕು ಚಲಾಯಿಸಬೇಕು ಎಂದು ಬಯಸಿದ್ದರು. ಇದೇ ಕಾರಣಕ್ಕಾಗಿ ಅವರು ಏಪ್ರಿಲ್‌ 29ರಂದೇ ಛತ್ತೀಸ್‌ಗಢ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಮೇ 6ರಂದು ವಿಚಾರಣೆ ನಡೆಸಿದ್ದ ಹೈಕೋರ್ಟ್‌, ಮಹಿಳೆಯ ಅರ್ಜಿಯನ್ನು ತಿರಸ್ಕರಿಸಿತ್ತು. ಈಗ ಸುಪ್ರೀಂ ಕೋರ್ಟ್‌ ಕೂಡ ಅರ್ಜಿಯನ್ನು ತಿರಸ್ಕರಿಸಿದೆ. ಒಟ್ಟಿನಲ್ಲಿ, ಯುವಕರೇ ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡದ, ಜಾಗೃತಿ ಮೂಡಿಸಿದರೂ ಕೇಳದಂತಹ ಸಂದರ್ಭದಲ್ಲಿ, ಮನೆಯಿಂದಲಾದರೂ ಹಕ್ಕು ಚಲಾಯಿಸಬೇಕು ಎಂದು ಸುಪ್ರೀಂ ಕೋರ್ಟ್‌ ಮೊರೆ ಹೋದ ಅಜ್ಜಿಯ ಆಶಯವಂತೂ ಒಳ್ಳೆಯದೇ ಆಗಿತ್ತು ಎಂಬುದರಲ್ಲಿ ಎರಡು ಮಾತಿಲ್ಲ.

ಇದನ್ನೂ ಓದಿ: Legislative Council Election: ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ದಿನಾಂಕ ಫಿಕ್ಸ್;‌ ಜೂನ್‌ 13ಕ್ಕೆ ಮತದಾನ

Continue Reading

ದೇಶ

Lok Sabha Election: 5ನೇ ಹಂತದಲ್ಲಿ ಕೇವಲ ಶೇ.57.5ರಷ್ಟು ಮತದಾನ; ಯಾವ ರಾಜ್ಯದಲ್ಲಿ ಹೆಚ್ಚು?

Lok Sabha Election: ಉತ್ತರ ಪ್ರದೇಶದ 14, ಮಹಾರಾಷ್ಟ್ರದ 13, ಪಶ್ಚಿಮ ಬಂಗಾಳ 7, ಬಿಹಾರ ಹಾಗೂ ಒಡಿಶಾದಲ್ಲಿ ತಲಾ 5, ಜಾರ್ಖಂಡ್‌ನಲ್ಲಿ 3, ಜಮ್ಮು ಕಾಶ್ಮೀರ ಮತ್ತು ಲಡಾಕ್‌ನ ತಲಾ 1 ಕ್ಷೇತ್ರಗಳಲ್ಲಿ ಮತದಾನ ನಡೆದಿದೆ. ಬಹುತೇಕ ಕಡೆ ಶಾಂತಿಯುತವಾಗಿ ಮತದಾನ ನಡೆದಿದೆ. ಪಶ್ಚಿಮ ಬಂಗಾಳದ ಕೆಲವೆಡೆ ಮಾತ್ರ ಗಲಾಟೆ ನಡೆದಿವೆ ಎಂದು ತಿಳಿದುಬಂದಿದೆ.

VISTARANEWS.COM


on

Lok Sabha Election
Koo

ನವದೆಹಲಿ: ಲೋಕಸಭೆ ಚುನಾವಣೆಯ (Lok Sabha Election 2024) ಐದನೇ ಹಂತದ ಮತದಾನವು ಸೋಮವಾರ (ಮೇ 20) ಶಾಂತಿಯುತವಾಗಿ ನಡೆದಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ 49 ಕ್ಷೇತ್ರಗಳಲ್ಲಿ ಶೇ.57.5ರಷ್ಟು ಮತದಾನ ದಾಖಲಾಗಿದೆ. ಕಳೆದ ನಾಲ್ಕು ಹಂತದ ಮತದಾನದ ವೇಳೆ ಹೆಚ್ಚಿನ ಮತದಾನ ದಾಖಲಾಗಿತ್ತು. ಆದರೆ, ಐದನೇ ಹಂತದಲ್ಲಿ ಮತದಾನ ಪ್ರಮಾಣ ಭಾರಿ ಇಳಿಕೆಯಾಗಿದೆ. ಈ ಕುರಿತು ಚುನಾವಣೆ ಆಯೋಗ ಅಂಕಿ-ಅಂಶ ಬಿಡುಗಡೆ ಮಾಡಿದಾಗಲೇ ನಿಖರ ಮಾಹಿತಿ ಲಭ್ಯವಾಗಲಿದೆ.

ಪಶ್ಚಿಮ ಬಂಗಾಳದಲ್ಲಿ ಹೆಚ್ಚು

ಪಶ್ಚಿಮ ಬಂಗಾಳದಲ್ಲಿ ಐದನೇ ಹಂತದಲ್ಲಿ ಹೆಚ್ಚಿನ ಮತದಾನ ದಾಖಲಾಗಿದೆ. ರಾಜ್ಯದಲ್ಲಿ ಕೆಲವೆಡೆ ಹಿಂಸಾಚಾರ ಪ್ರಕರಣಗಳು ಸುದ್ದಿಯಾಗಿದ್ದರೂ ಶೇ.73ರಷ್ಟು ಮತದಾನ ದಾಖಲಾಗಿದೆ. ಇನ್ನು ಲಡಾಕ್‌ನಲ್ಲಿ ಶೇ.67.15, ಜಾರ್ಖಂಡ್‌ನಲ್ಲಿ ಶೇ.61.90ರಷ್ಟು ಮತದಾನ ನಡೆದಿದೆ. ಇನ್ನು ಮಹಾರಾಷ್ಟ್ರದಲ್ಲಿ ಕೇವಲ ಶೇ.48.66ರಷ್ಟು ಮತದಾನ ದಾಖಲಾಗಿದ್ದು, ಐದನೇ ಹಂತದಲ್ಲಿ ಕನಿಷ್ಠ ಮತದಾನ ನಡೆದ ರಾಜ್ಯ ಎನಿಸಿದೆ. ನಾಲ್ಕನೇ ಹಂತದಲ್ಲೂ ಮಹಾರಾಷ್ಟ್ರದಲ್ಲಿ ಕನಿಷ್ಠ ಮತದಾನ ದಾಖಲಾಗಿತ್ತು.

ಉತ್ತರ ಪ್ರದೇಶದ 14, ಮಹಾರಾಷ್ಟ್ರದ 13, ಪಶ್ಚಿಮ ಬಂಗಾಳ 7, ಬಿಹಾರ ಹಾಗೂ ಒಡಿಶಾದಲ್ಲಿ ತಲಾ 5, ಜಾರ್ಖಂಡ್‌ನಲ್ಲಿ 3, ಜಮ್ಮು ಕಾಶ್ಮೀರ ಮತ್ತು ಲಡಾಕ್‌ನ ತಲಾ 1 ಕ್ಷೇತ್ರಗಳಲ್ಲಿ ಮತದಾನ ನಡೆದಿದೆ. ಕೇಂದ್ರ ಸಚಿವರಾದ ರಾಜನಾಥ್‌ ಸಿಂಗ್‌ (ಲಖನೌ), ಸ್ಮೃತಿ ಇರಾನಿ (ಅಮೇಥಿ), ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (ರಾಯ್‌ಬರೇಲಿ), ಜಮ್ಮು-ಕಾಶ್ಮೀರ ಮಾಜಿ ಸಿಎಂ ಒಮರ್‌ ಅಬ್ದುಲ್ಲಾ (ಬಾರಾಮುಲ್ಲಾ) ಸೇರಿ ಹಲವು ಗಣ್ಯರ ಭವಿಷ್ಯವು ಮತಯಂತ್ರಗಳಲ್ಲಿ ಭದ್ರವಾಗಿದೆ.

ನಾಲ್ಕನೇ ಹಂತದಲ್ಲಿ ಶೇ.69.16ರಷ್ಟು ಮತದಾನ ದಾಖಲಾಗಿತ್ತು. ಮೊದಲ ಹಂತದಲ್ಲಿ ನಡೆದ ಮತದಾನ ಪ್ರಮಾಣವು ಶೇ.66.14ರಷ್ಟಿದ್ದರೆ, ಎರಡನೇ ಹಂತದಲ್ಲಿ ಶೇ.66.71ರಷ್ಟು ಮತದಾನ ದಾಖಲಾಗಿತ್ತು. ಮೂರನೇ ಹಂತದಲ್ಲಿ ಒಟ್ಟು ಶೇ.65.68ರಷ್ಟು ಮತದಾನ ದಾಖಲಾಗಿತ್ತು. ಮೂರೂ ಹಂತಗಳಲ್ಲಿ 2019ಕ್ಕಿಂತ ಕಡಿಮೆ ಮತದಾನ ದಾಖಲಾಗಿದ್ದು ಚರ್ಚೆಗೆ ಗ್ರಾಸವಾಗಿತ್ತು. ಆದರೀಗ, 4ನೇ ಹಂತದಲ್ಲಿ ಶೇ.69.16ರಷ್ಟು ಮತದಾನ ದಾಖಲಾಗಿದ್ದು, ಕಳೆದ ಬಾರಿಗಿಂತ ಕೇವಲ 0.40ರಷ್ಟು ಕಡಿಮೆಯಾಗಿದೆ. ಹಾಗಾಗಿ, ನಾಲ್ಕನೇ ಹಂತದ ಮತದಾನವು ಸಕಾರಾತ್ಮಕ ಬೆಳವಣಿಗೆ ಎಂದು ಹೇಳಲಾಗುತ್ತಿದೆ.

ಐದನೇ ಹಂತದ ಮತದಾನದೊಂದಿಗೆ ದೇಶಾದ್ಯಂತ ಇದುವರೆಗೆ ಒಟ್ಟು 428 ಕ್ಷೇತ್ರಗಳಲ್ಲಿ ಚುನಾವಣೆ ನಡೆದಂತಾಗಿದೆ. ಉಳಿದ ಕ್ಷೇತ್ರಗಳಲ್ಲಿ ಐದು ಹಾಗೂ ಆರನೇ ಹಂತದಲ್ಲಿ ಮತದಾನ ನಡೆಯಲಿದೆ. ಜೂನ್‌ 1ರಂದು ಚುನಾವಣೆ ಮುಗಿಯಲಿದ್ದು, ಜೂನ್‌ 4ರಂದು ಫಲಿತಾಂಶ ಪ್ರಕಟವಾಗಲಿದೆ. ಆಂಧ್ರಪ್ರದೇಶ ವಿಧಾನಸಭೆ ಚುನಾವಣೆಯೂ ನಡೆದಿದ್ದು, ಜೂನ್‌ 4ರಂದೇ ಫಲಿತಾಂಶ ತಿಳಿಯಲಿದೆ.

ಇದನ್ನೂ ಓದಿ: Narendra Modi: ಮುಸ್ಲಿಮರ ವೋಟಿಗಾಗಿ ಮಮತಾ ಬ್ಯಾನರ್ಜಿ ಹಿಂದು ಸಂಘಟನೆಗಳ ವಿರುದ್ಧ ಆರೋಪ; ಮೋದಿ ಟೀಕೆ

Continue Reading

Lok Sabha Election 2024

CM Siddaramaiah: ಲೋಕಸಭಾ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರಕಾರ ಕಾಂಗ್ರೆಸ್‌ಗೆ ಎಷ್ಟು ಸೀಟ್‌? ಸಂಪುಟ ಪುನಾರಚನೆ ಇಲ್ಲ!

CM Siddaramaiah: ಬಿಜೆಪಿಯವರಂತೆ 28 ಕ್ಷೇತ್ರಗಳನ್ನೂ ಗೆಲ್ಲುತ್ತೇವೆ ಎಂದು ನಾನು ಹೇಳುವುದಿಲ್ಲ. ಆದರೆ, ನಮ್ಮ ಕಾಂಗ್ರೆಸ್‌ ಪಕ್ಷವು ಕನಿಷ್ಠ 15 ಸ್ಥಾನ ಹಾಗೂ ಗರಿಷ್ಠ 20 ಸ್ಥಾನಗಳನ್ನು ಗೆದ್ದುಕೊಳ್ಳಲಿದೆ. ಸದ್ಯಕ್ಕೆ ಸಂಪುಟ ವಿಸ್ತರಣೆ, ಪುನರ್ ರಚನೆ ವಿಚಾರ ನಮ್ಮ ಮುಂದೆ ಇಲ್ಲ. ಆದರೆ, ಹೈಕಮಾಂಡ್ ನಿರ್ದೇಶನದಂತೆ ನಮ್ಮ ಪಕ್ಷದಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

VISTARANEWS.COM


on

how many seats will the Congress have in the Lok Sabha elections CM Siddaramaiah statement
Koo

ಬೆಂಗಳೂರು: ಸರ್ಕಾರಕ್ಕೆ ವರ್ಷ ಪೂರೈಸಿದ ಸಂದರ್ಭದಲ್ಲಿ ಬೆಂಗಳೂರು ಪ್ರೆಸ್‌ ಕ್ಲಬ್‌ನಲ್ಲಿ ಆಯೋಜಿಸಿದ್ದ ಮೀಟ್ ದ ಪ್ರೆಸ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ರಾಜ್ಯ ಸರ್ಕಾರದ ಸಾಧನೆಗಳನ್ನು ಹೇಳುತ್ತಾ ಬಂದರು. ಅಲ್ಲದೆ, ಈ ವೇಳೆ ಕೇಂದ್ರ ಸರ್ಕಾರದ ಬಗ್ಗೆಯೂ ಕಿಡಿಕಾರಿದರು. ಇದೇ ವೇಳೆ, ಲೋಕಸಭಾ ಚುನಾವಣೆ (Lok Sabha Election 2024) ಫಲಿತಾಂಶದ ಬಗ್ಗೆಯೂ ಮಾತನಾಡಿದ್ದು, ರಾಜ್ಯದಲ್ಲಿ ಕಾಂಗ್ರೆಸ್‌ ಕನಿಷ್ಠ 15 ಸ್ಥಾನ ಹಾಗೂ ಗರಿಷ್ಠ 20 ಸ್ಥಾನಗಳನ್ನು ಗೆಲ್ಲಲಿದೆ ಎಂದು ಭವಿಷ್ಯ ನುಡಿದರು.

ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿಯವರಂತೆ 28 ಕ್ಷೇತ್ರಗಳನ್ನೂ ಗೆಲ್ಲುತ್ತೇವೆ ಎಂದು ನಾನು ಹೇಳುವುದಿಲ್ಲ. ಆದರೆ, ನಮ್ಮ ಕಾಂಗ್ರೆಸ್‌ ಪಕ್ಷವು ಕನಿಷ್ಠ 15 ಸ್ಥಾನ ಹಾಗೂ ಗರಿಷ್ಠ 20 ಸ್ಥಾನಗಳನ್ನು ಗೆದ್ದುಕೊಳ್ಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಲೋಕಸಭಾ ಚುನಾವಣಾ ಫಲಿತಾಂಶದ ಬಳಿಕ ಸಂಪುಟ ಆಗುತ್ತಾ ಎನ್ನುವ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ಸದ್ಯಕ್ಕೆ ಸಂಪುಟ ವಿಸ್ತರಣೆ, ಪುನರ್ ರಚನೆ ವಿಚಾರ ನಮ್ಮ ಮುಂದೆ ಇಲ್ಲ. ಆದರೆ, ಹೈಕಮಾಂಡ್ ನಿರ್ದೇಶನದಂತೆ ನಮ್ಮ ಪಕ್ಷದಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.

ಗ್ಯಾರಂಟಿಗಳು ಜನರ ಮನೆ ಮನೆ ತಲುಪಿವೆ

ಬಿಜೆಪಿಯ ನಿರಂತರ ಅಪ ಪ್ರಚಾರದ ನಡುವೆಯೂ ಗ್ಯಾರಂಟಿಗಳು ಜನರ ಮನೆ ಮನೆ ತಲುಪಿವೆ. ಗ್ಯಾರಂಟಿಗಳ ಹೊರತಾಗಿ ಅಭಿವೃದ್ಧಿಗೂ ಹಣ ಮೀಸಲಿಟ್ಟು ಖರ್ಚು ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಂಕಿ ಅಂಶಗಳ ಸಮೇತ ವಿವರಿಸಿದರು.

how many seats will the Congress have in the Lok Sabha elections CM Siddaramaiah statement

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್‌ಗೆ ಆರ್ಥಿಕತೆ ಅರ್ಥ ಆಗಲ್ಲ. ಹೀಗಾಗಿ ಖಜಾನೆ ಖಾಲಿ ಆಗಿದೆ ಎಂದು ಪರಮ ಸುಳ್ಳು ಹೇಳುತ್ತಿದ್ದಾರೆ. ನಾವು ಗ್ಯಾರಂಟಿಯೇತರ ಅಭಿವೃದ್ಧಿ ಕಾರ್ಯಗಳಿಗೆ 54374 ಕೋಟಿ ರೂಪಾಯಿ ಖರ್ಚು ಮಾಡುವುದಾಗಿ ಬಜೆಟ್‌ನಲ್ಲಿ ಹೇಳಿದ್ದೆವು. ಆದರೆ, 56274 ಕೋಟಿ ರೂಪಾಯಿ ಖರ್ಚು ಮಾಡಿದೆವು. ಅಂದರೆ ಬಜೆಟ್‌ನಲ್ಲಿ ಹೇಳಿದ್ದಕ್ಕಿಂತ ಹೆಚ್ಚು ಖರ್ಚು ಮಾಡಿದ್ದೇವೆ ಎಂದು ಅಂಕಿ ಅಂಶಗಳ ಸಮೇತ ಸಿಎಂ ಸಿದ್ದರಾಮಯ್ಯ ವಿವರಿಸಿದರು.

ನೀರಾವರಿಗೆ 16360 ಕೋಟಿ ರೂಪಾಯಿ ಖರ್ಚು ಮಾಡುವುದಾಗಿ ಬಜೆಟ್‌ನಲ್ಲಿ ಹೇಳಿದ್ದೆವು. ಆದರೆ, 18198 ಕೋಟಿ ರೂಪಾಯಿ ಖರ್ಚು ಮಾಡಿದೆವು. ಹೇಳಿದ್ದಕ್ಕಿಂತ ಹೆಚ್ಚು ಖರ್ಚು ಮಾಡಿದ್ದೇವೆ. ಲೋಕೋಪಯೋಗಿ ಇಲಾಖೆಗೂ 9661 ಕೋಟಿ ರೂಪಾಯಿ ಖರ್ಚು ಮಾಡಿದ್ದೇವೆ. ಬಿಜೆಪಿಯವರ ಹೇಳಿಕೆಯಂತೆ ಖಜಾನೆ ಖಾಲಿ ಆಗಿದ್ದರೆ ಇಷ್ಟೆಲ್ಲ ಖರ್ಚು ಮಾಡಲು ಸಾಧ್ಯವಿತ್ತೇ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.

ಸಮಾಜ ಕಲ್ಯಾಣಕ್ಕಾಗಿ ಪರಿಶಿಷ್ಟ ಜಾತಿ/ವರ್ಗದ ಗುತ್ತಿಗೆದಾರರಿಗೆ ಒಂದು ಕೋಟಿವರೆಗಿನ ಕಾಮಗಾರಿಗೆ ಮೀಸಲಾತಿ, ಹಿಂದುಳಿದವರಿಗೆ ಮೀಸಲಾತಿ ನೀಡಿದೆವು. SCSP/TSP ಕಾಯ್ದೆ ಮಾಡಿದ್ದು ನಮ್ಮ ಸರ್ಕಾರ. ಪ್ರಧಾನಿ ನರೇಂದ್ರ ಮೋದಿ ಭಾಷಣದಲ್ಲಿ ಸುಳ್ಳು ಹೇಳುವುದನ್ನು ಬಿಟ್ಟು ಈ ಕಾಯ್ದೆಯನ್ನು ಬಿಜೆಪಿ ಆಡಳಿತದ ಸರ್ಕಾರಗಳು ಏಕೆ ಜಾರಿ ಮಾಡಿಲ್ಲ ಎನ್ನುವುದಕ್ಕೆ ಉತ್ತರಿಸಲಿ ಎಂದು ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದರು.

how many seats will the Congress have in the Lok Sabha elections CM Siddaramaiah statement

ಹಿಂದುಳಿದವರ ಮೀಸಲಾತಿ ಕಿತ್ತು ಮುಸ್ಲಿಮರಿಗೆ ಕೊಡ್ತಾರೆ ಎಂದು ಮತ್ತೊಂದು ಮೋದಿ ಸುಳ್ಳು ಹೇಳುತ್ತಿದ್ದಾರೆ. ಇದು ಅಪ್ಪಟ ಸುಳ್ಳು. ಚಿನ್ನಪ್ಪರೆಡ್ಡಿ ಆಯೋಗದ ವರದಿಯಂತೆ 30 ವರ್ಷದಿಂದ ರಾಜ್ಯದಲ್ಲಿ ಮುಸ್ಲಿಂ ಮೀಸಲಾತಿ ಜಾರಿಯಲ್ಲಿದೆ. ಬಸವರಾಜ ಬೊಮ್ಮಾಯಿ ಸರ್ಕಾರ ಕೂಡ ಸುಪ್ರೀಂ ಕೋರ್ಟ್‌ನಲ್ಲಿ ಅಫಿಡವಿಟ್ ಸಲ್ಲಿಸಿ ಮುಸ್ಲಿಮರ ಮೀಸಲಾತಿ ರದ್ದು ಮಾಡುವುದಿಲ್ಲ ಎಂದು ಒಪ್ಪಿಕೊಂಡಿತ್ತು. ಆದರೂ ಮೋದಿ ಭಾಷಣಗಳಲ್ಲಿ ಸುಳ್ಳು ಹೇಳುತ್ತಾ ತಿರುಗುತ್ತಿದ್ದಾರೆ. ನಾವು ಯಾರ ಮೀಸಲಾತಿಯನ್ನೂ ಕಿತ್ತುಕೊಂಡಿಲ್ಲ. ಹೀಗಾಗಿ ಮೋದಿ ಹೇಳುತ್ತಿರುವುದು ಅಪ್ಪಟ ಸುಳ್ಳು ಎಂದು ಸಿಎಂ ಸಿದ್ದರಾಮಯ್ಯ ಆರೋಪ ಮಾಡಿದರು.

ಚುನಾವಣೆಗಾಗಿ ಜನರನ್ನು ರೊಚ್ಚಿಗೆಬ್ಬಿಸಿ, ದಿಕ್ಕು ತಪ್ಪಿಸುವುದನ್ನು ಬಿಜೆಪಿ ಮತ್ತು ಮೋದಿ ನಿಲ್ಲಿಸಬೇಕು. ಜನ ಬಿಜೆಪಿಯ ಸುಳ್ಳಿಗಳ ಬಗ್ಗೆ ಎಚ್ಚೆತ್ತುಕೊಂಡಿದ್ದಾರೆ. ಆರೋಗ್ಯ, ಶಿಕ್ಷಣ, ನೀರಾವರಿ, ಸಮಾಜ ಕಲ್ಯಾಣ, ಕೃಷಿ ಸೇರಿ ಎಲ್ಲಾ ಇಲಾಖೆಗಳಲ್ಲೂ ಅಭಿವೃದ್ಧಿ ಕೆಲಸಗಳು ಯಥೇಚ್ಚವಾಗಿ ನಡೆಯುತ್ತಿವೆ ಎಂದು ಸಿಎಂ ಸಿದ್ದರಾಮಯ್ಯ ವಿವರಿಸಿದರು.

ಬಿಜೆಪಿಯ ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿ ನರಳುತ್ತಿದ್ದ ಮಧ್ಯಮ ವರ್ಗ ಮತ್ತು ಬಡವರ ಕೊಳ್ಳುವ ಶಕ್ತಿ ಹೆಚ್ಚಿಸಲು ಗ್ಯಾರಂಟಿಗಳನ್ನು ಜಾರಿ ಮಾಡಿದೆವು ಎಂದು ಸಿಎಂ ಸಿದ್ದರಾಮಯ್ಯ ವಿವರಿಸಿದರು.

ಐದೂ ಗ್ಯಾರಂಟಿ ಜಾರಿ ಮಾಡಿದ್ದೇವೆ

ಪ್ರಮಾಣವಚನ ಸ್ವೀಕರಿಸಿದ ದಿನದಿಂದಲೇ ಚುನಾವಣೆಯಲ್ಲಿ ಕೊಟ್ಟ ಆಶ್ವಾಸನೆ, ಗ್ಯಾರಂಟಿಗಳ ಜಾರಿಗೆ ಕ್ರಮ ತೆಗೆದುಕೊಂಡು ಐದಕ್ಕೆ ಐದೂ ಜಾರಿ ಮಾಡಿದ್ದೇವೆ. ಅನ್ನಭಾಗ್ಯ ಯೋಜನೆಗೆ ನಾವು ಹಣ ಕೊಟ್ಟರೂ ಅಕ್ಕಿ ಕೊಡದೆ ಕೇಂದ್ರ ಸರ್ಕಾರ ಸತಾಯಿಸಿತು. ಅಕ್ಕಿ ಸಂಗ್ರಹ ಇದ್ದರೂ ಕೊಡಲಿಲ್ಲ. ಅಕ್ಕಿ ಕೊಡದೆ ಇರಲು ಮೇಲಿನಿಂದ ಆದೇಶ ಇದೆ ಎಂದು ಅಧಿಕಾರಿಗಳು ತಿಳಿಸಿದರು. ಮಧ್ಯವರ್ತಿಗಳ ಹಾವಳಿ ಇಲ್ಲದಂತೆ ನೇರ ನಾಡಿನ ಜನತೆಯ ಖಾತೆಗೆ ಹಣ ಜಮೆ ಮಾಡಿದೆವು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ: CET Result: ದ್ವಿತೀಯ ಪಿಯು 2ನೇ ಪರೀಕ್ಷೆ ಬಳಿಕವೇ ಸಿಇಟಿ ಫಲಿತಾಂಶ; ಮೇ 30 ಅಥವಾ 31ಕ್ಕೆ ಪ್ರಕಟ?

ನಮ್ಮ ಕಾಲದಲ್ಲಿ ಭ್ರಷ್ಟಾಚಾರ ಸಂಪೂರ್ಣವಾಗಿ ನಿಂತಿದೆ ಎಂದು ಹೇಳೋದಿಲ್ಲ. ಆದರೆ ಪ್ರಮಾಣ ಕಡಿಮೆ ಮಾಡಲು ನಿಷ್ಠುರವಾಗಿ ಕ್ರಮ ತೆಗೆದುಕೊಳ್ಳುತ್ತಿದ್ದೇವೆ. 40% ತನಿಖೆಗೆ ಶುರು ಮಾಡಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

Continue Reading
Advertisement
Army Officer
Lok Sabha Election 20241 min ago

101ನೇ ವಯಸ್ಸಿನಲ್ಲೂ ‘ಕರ್ತವ್ಯ’ ಮರೆಯದೆ ವೋಟ್‌ ಮಾಡಿದ ನಿವೃತ್ತ ಯೋಧ; ಸೆಲ್ಯೂಟ್‌ ಎಂದರು ಜನ

Congress Guarantee
ಪ್ರಮುಖ ಸುದ್ದಿ13 mins ago

Congress Guarantee: ಗ್ಯಾರಂಟಿ ಯೋಜನೆಗಳಿಗೆ ಒಂದು ವರ್ಷಕ್ಕೆ ಸರ್ಕಾರ ಮಾಡಿದ ಖರ್ಚು ಎಷ್ಟು ಸಾವಿರ ಕೋಟಿ?

Malaysia Masters
ಕ್ರೀಡೆ36 mins ago

Malaysia Masters: ವಿಶ್ರಾಂತಿ ಬಳಿಕ ಮಲೇಷ್ಯಾ ಮಾಸ್ಟರ್ಸ್​ನಲ್ಲಿ ಕಣಕ್ಕಿಳಿಯಲು ಸಜ್ಜಾದ ಸಿಂಧು

Rahul Gandhi
ದೇಶ44 mins ago

Rahul Gandhi: ರಾಯ್‌ಬರೇಲಿಯಲ್ಲಿ ಜನ ಜೈ ಶ್ರೀರಾಮ್‌ ಎನ್ನುತ್ತಲೇ ಕಾಲ್ಕಿತ್ತ ರಾಹುಲ್‌ ಗಾಂಧಿ! Video ಇದೆ

MS Dhoni Bike Riding
ಕ್ರೀಡೆ1 hour ago

MS Dhoni Bike Riding: ಐಪಿಎಲ್​ ಮುಗಿಸಿ ತವರಿಗೆ ಮರಳಿದ್ದೇ ತಡ, ಬೈಕ್ ರೈಡಿಂಗ್​ ಮಾಡಿದ ಧೋನಿ​

Self Harming
ಕರ್ನಾಟಕ2 hours ago

Self Harming: ಟಿಸಿ ಕೊಟ್ಟಿಲ್ಲವೆಂದು ಬೇಸರಗೊಂಡು ವಿದ್ಯಾರ್ಥಿ ಆತ್ಮಹತ್ಯೆ

AAP Funds
ದೇಶ2 hours ago

AAP Funds: ನಿಯಮ ಉಲ್ಲಂಘಿಸಿ ಬೇರೆ ದೇಶಗಳಿಂದ ಆಪ್‌ 7 ಕೋಟಿ ರೂ. ದೇಣಿಗೆ ಸ್ವೀಕಾರ; ಇ.ಡಿ ಸ್ಫೋಟಕ ಮಾಹಿತಿ!

Karnataka weather Forecast
ಕರ್ನಾಟಕ2 hours ago

Coastal Weather: ದಕ್ಷಿಣ ಕನ್ನಡ, ಉಡುಪಿಯಲ್ಲಿ ಎರಡು ದಿನ ಭಾರೀ ಮಳೆ ಸಾಧ್ಯತೆ

KMF Nandini Logo
ಕ್ರೀಡೆ2 hours ago

KMF Nandini Logo: ನಂದಿನಿಗೆ ಸ್ವಾಗತಿಸಿ ಟಿ20 ವಿಶ್ವಕಪ್​ ಜೆರ್ಸಿ ಬಿಡುಗಡೆಗೊಳಿಸಿದ ಐರ್ಲೆಂಡ್ ತಂಡ

Siddaramaiah government performance is zero says BY Vijayendra
ರಾಜಕೀಯ2 hours ago

BY Vijayendra: ಮಹಿಳಾ ಸುರಕ್ಷತೆಯನ್ನೂ ನೀಡದ ಕೊಲೆಗಡುಕ ಸರ್ಕಾರದಿಂದ ಸಾಧನೆ ಶೂನ್ಯ: ಬಿ.ವೈ. ವಿಜಯೇಂದ್ರ ಆಕ್ರೋಶ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ10 hours ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ1 day ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ1 day ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ1 day ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ3 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ4 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು5 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌