Salman Khan: ಸಲ್ಮಾನ್‌ ಖಾನ್‌ ಮನೆ ಹೊರಗೆ ಗುಂಡಿನ ದಾಳಿ; ಶಂಕಿತರ ಫೋಟೊ ಬಿಡುಗಡೆ ಮಾಡಿದ ಪೊಲೀಸರು - Vistara News

ದೇಶ

Salman Khan: ಸಲ್ಮಾನ್‌ ಖಾನ್‌ ಮನೆ ಹೊರಗೆ ಗುಂಡಿನ ದಾಳಿ; ಶಂಕಿತರ ಫೋಟೊ ಬಿಡುಗಡೆ ಮಾಡಿದ ಪೊಲೀಸರು

Salman Khan: ಇಂದು (ಏಪ್ರಿಲ್‌ 14) ಇಡೀ ದೇಶವನ್ನೇ ಬೆಚ್ಚಿ ಬೀಳಿಸಿ ಇಬ್ಬರು ಮುಂಬೈಯಲ್ಲಿರುವ ನಟ ಸಲ್ಮಾನ್‌ ಖಾನ್‌ ಅವರ ನಿವಾಸದೆದುರು ಗುಂಡಿನ ದಾಳಿ ನಡೆಸಿದ್ದರು. ಈ ಘಟನೆಯಲ್ಲಿ ಯಾರಿಗೂ ಗಾಯಗಳಾಗದಿದ್ದರೂ ನಟನ ಸುರಕ್ಷತೆ ಬಗ್ಗೆ ಆತಂಕ ಮೂಡಿದೆ. ಬೈಕ್‌ನಲ್ಲಿ ಬಂದ ಇಬ್ಬರು ಈ ಕೃತ್ಯ ಎಸಗಿದ್ದರು. ಶಂಕಿತರ ಚಲನವಲನ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಅವರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

VISTARANEWS.COM


on

Salman Khan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ: ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ (Salman Khan) ಅವರ ಮುಂಬೈಯ ಬಾಂದ್ರಾದ ನಿವಾಸದೆದುರು ಇಂದು (ಏಪ್ರಿಲ್‌ 14) ನಡೆದ ಗುಂಡಿನ ದಾಳಿಗೆ ಸಂಬಂಧಪಟ್ಟಂತೆ ಮಹತ್ವದ ಸುಳಿವು ಸಿಕ್ಕಿದೆ. ಬೈಕ್‌ನಲ್ಲಿ ಬಂದು ಗುಂಡು ಹಾರಿಸಿದ ಇಬ್ಬರು ಶೂಟರ್‌ಗಳ ಫೋಟೊವನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ. ದಾಳಿ ನಡೆದ ಕೆಲವೇ ಗಂಟೆಗಳಲ್ಲಿ ಗ್ಯಾಂಗ್​ಸ್ಟರ್​ ಲಾರೆನ್ಸ್​ ಬಿಷ್ಣೋಯ್ ಸಹೋದರ ಅನ್ಮೋಲ್ ಬಿಷ್ಣೋಯ್ (Anmol Bishnoi)​ ದಾಳಿಯ ಹೊಣೆ ಹೊತ್ತುಕೊಂಡಿದ್ದ. ಅನ್ಮೋಲ್ ಈಗ ಅಮೆರಿಕದಲ್ಲಿದ್ದು, ಸಲ್ಮಾನ್ ಮನೆಯ ಹೊರಗೆ ನಡೆದ ಗುಂಡಿನ ದಾಳಿಯ ಹೊಣೆ ಹೊತ್ತಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದ.

ತನಿಖೆ ನಡೆಸಿದ ಪೊಲೀಸರಿಗೆ ಮಹತ್ವದ ಮಾಹಿತಿ ಲಭಿಸಿದೆ. ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾದ ದೃಶ್ಯದಲ್ಲಿ ಇಬ್ಬರೂ ಕ್ಯಾಪ್‌ ಧರಿಸಿರುವುದು ಕಂಡು ಬಂದಿದೆ. ಆ ಪೈಕಿ ಓರ್ವ ಬಿಳಿ ಟೀ ಶರ್ಟ್‌, ಕಪ್ಪು ಜಾಕೆಟ್‌ ಮತ್ತು ಜೀನ್ಸ್‌ ಧರಿಸಿದ್ದರೆ, ಇನ್ನೋರ್ವ ಕೆಂಪು ಟೀ ಶರ್ಟ್‌ ಮತ್ತು ಜೀನ್ಸ್‌ ಧರಸಿದ್ದಾನೆ. ಬೈಕ್‌ನಲ್ಲಿ ಬಂದ ಇವರು ಸಲ್ಮಾನ್‌ ಮನೆ ಎದುರು ಶೂಟ್‌ ಮಾಡುತ್ತಿರುವುದು ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ನಟನ ಮನೆಯಿಂದ ಒಂದು ಕಿಲೋಮೀಟರ್ ದೂರದಲ್ಲಿ ಈ ದ್ವಿಚಕ್ರ ವಾಹನವನ್ನು ಸಹ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇವರಿಗಾಗಿ ಶೋಧವನ್ನು ತೀವ್ರಗೊಳಿಸಲಾಗಿದೆ. ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 307 (ಕೊಲೆ ಯತ್ನ) ಮತ್ತು ಶಸ್ತ್ರಾಸ್ತ್ರ ಕಾಯ್ದೆಯಡಿ ಅಪರಿಚಿತ ವ್ಯಕ್ತಿಯ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಬಾಂದ್ರಾ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ ಜತೆ ನಂಟು ಹೊಂದಿದ್ದಾರೆಂದು ಶಂಕಿಸಲಾದ ಇಬ್ಬರು ವ್ಯಕ್ತಿಗಳು ಬಾಂದ್ರಾದ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ ಹೊರಗೆ ಬೆಳಿಗ್ಗೆ 5 ಗಂಟೆ ಸುಮಾರಿಗೆ ನಾಲ್ಕು ಸುತ್ತು ಗುಂಡು ಹಾರಿಸಿ ಸ್ಥಳದಿಂದ ಪರಾರಿಯಾಗಿದ್ದರು.

ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿದ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಸಲ್ಮಾನ್‌ ಖಾನ್‌ ಅವರೊಂದಿಗೆ ಮಾತನಾಡಿ ರಕ್ಷಣೆಯ ಭರವಸೆ ನೀಡಿದರು. ಕಾನೂನನ್ನು ಕೈಗೆ ತೆಗೆದುಕೊಳ್ಳಲು ರಾಜ್ಯ ಸರ್ಕಾರ ಯಾರಿಗೂ ಅವಕಾಶ ನೀಡುವುದಿಲ್ಲ ಎಂದು ಹೇಳಿದರು.

ಯಾರು ಈ ಅನ್ಮೋಲ್‌?

ಜೈಲಿನಲ್ಲಿರುವ ಗ್ಯಾಂಗ್‌ಸ್ಟರ್‌ ಲಾರೆನ್ಸ್‌ ಬಿಷ್ಣೋಯ್‌ನ ಸಹೋದರ ಈ ಅನ್ಮೋಲ್‌ ಬಿಷ್ಣೋಯ್‌. ಸದ್ಯ ಈತ ಕ್ಯಾಲಿಫೋರ್ನಿಯಾದಲ್ಲಿದ್ದಾನೆ. ಪಂಜಾಬಿ ಗಾಯಕ ಸಿಧು ಮೂಸೆವಾಲಾ ಹತ್ಯೆಯಲ್ಲೂ ಆತನ ಕೈವಾಡವಿತ್ತು ಎನ್ನಲಾಗಿದೆ. ಸಿಧು ಮೂಸೆವಾಲಾ ಹತ್ಯೆಯ ಬಳಿಕ ಅನ್ಮೋಲ್‌ ನಕಲಿ ಪಾಸ್‌ಪೋರ್ಟ್‌ ಬಳಸಿ ಭಾರತದಿಂದ ವಿದೇಶಕ್ಕೆ ಪರಾರಿಯಾಗಿದ್ದ. ಕಳೆದ ವರ್ಷ ಆತನನ್ನು ಅಜರ್‌ಬೈಜಾನ್‌ನಲ್ಲಿ ಪತ್ತೆಯಾಗಿದ್ದರೂ ಅಲ್ಲಿಂದ ತಪ್ಪಿಸಿಕೊಂಡಿದ್ದ. ಬಳಿಕ ಅಮೆರಿಕದಲ್ಲಿ ಕಂಡುಬಂದಿದ್ದ. ಮದುವೆ ಸಮಾರಂಭಕ್ಕೆ ಆತ ತೆರಳಿದ್ದ ವಿಡಿಯೊ ವೈರಲ್‌ ಆಗಿತ್ತು. ಸಲ್ಮಾನ್‌ ಖಾನ್‌ ಅವರಿಗೆ ಗ್ಯಾಂಗ್‌ಸ್ಟರ್‌ ಲಾರೆನ್ಸ್‌ ಬಿಷ್ಣೋಯ್‌ ಹಿಂದೆಯೂ ಬೆದರಿಕೆ ಹಾಕಿದ್ದ. 

ಇದನ್ನೂ ಓದಿ: Salman Khan: ನಟ ಸಲ್ಮಾನ್​ ಖಾನ್ ಮನೆಯ ಹೊರಗೆ ಗುಂಡಿನ ದಾಳಿ; ಹೊಣೆ ಹೊತ್ತ ಗ್ಯಾಂಗ್​ಸ್ಟರ್​ ಸಹೋದರ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Wayanad Landslide: ವೈನಾಡ್‌ ಭೂಕುಸಿತದಲ್ಲಿ 13 ಕನ್ನಡಿಗರು ನಾಪತ್ತೆ; ನಾಲ್ವರ ಶವ ಪತ್ತೆ, ಇನ್ನುಳಿದವರಿಗಾಗಿ ಶೋಧ

Wayanad Landslide: ವೈನಾಡಿನಲ್ಲಿ ಕರ್ನಾಟಕ‌ ಮೂಲದ ನಾಪತ್ತೆಯಾದವರಿಗಾಗಿ ಅಧಿಕಾರಿಗಳು ಸ್ಥಳದಲ್ಲೇ ಇದ್ದು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಗುಂಡ್ಲುಪೇಟೆ ತಹಸೀಲ್ದಾರ್ ರಮೇಶ್ ಬಾಬು ನೇತೃತ್ವದಲ್ಲಿ ನಾಪತ್ತೆಯಾದವರ ಪತ್ತೆಗಾಗಿ ಶೋಧ ನಡೆದಿದೆ.

VISTARANEWS.COM


on

wayanad lanslide
Koo

ಚಾಮರಾಜನಗರ: ಕೇರಳದ ವಯನಾಡಿನಲ್ಲಿ ನಡೆದ ಭೀಕರ ಭೂಕುಸಿತ (wayanad landslide, kerala landslide) ಪ್ರಕರಣದಲ್ಲಿ ಕರ್ನಾಟಕದ (Karnataka) ಹತ್ತಾರು ಮಂದಿ ಕಣ್ಮರೆ (missing) ಆಗಿದ್ದಾರೆ. ಒಟ್ಟು 13 ಮಂದಿ ನಾಪತ್ತೆಯಾಗಿದ್ದಾರೆ ಎಂಬ ಅಂದಾಜು ಲೆಕ್ಕ ಇದುವರೆಗೆ ಸಿಕ್ಕಿದೆ. ಇವರಲ್ಲಿ ನಾಲ್ಕು ಮಂದಿಯ ಶವ ಸಿಕ್ಕಿದ್ದು, ಇನ್ನುಳಿದವರಿಗಾಗಿ ತೀವ್ರ ಶೋಧ (Rescue operation) ನಡೆಯುತ್ತಿದೆ.

ವೈನಾಡಿನಲ್ಲಿ ಕರ್ನಾಟಕ‌ ಮೂಲದ ನಾಪತ್ತೆಯಾದವರಿಗಾಗಿ ಅಧಿಕಾರಿಗಳು ಸ್ಥಳದಲ್ಲೇ ಇದ್ದು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಗುಂಡ್ಲುಪೇಟೆ ತಹಸೀಲ್ದಾರ್ ರಮೇಶ್ ಬಾಬು ನೇತೃತ್ವದಲ್ಲಿ ನಾಪತ್ತೆಯಾದವರ ಪತ್ತೆಗಾಗಿ ಶೋಧ ನಡೆದಿದೆ. ಈವರೆಗೆ ಗೊತ್ತಾಗಿರುವ, ನಾಪತ್ತೆಯಾಗಿರುವ ರಾಜ್ಯದ 10 ಮಂದಿಯ ಹೆಸರುಗಳು ಹೀಗಿವೆ:

ಗುರುಮಲ್ಲನ್(10)
ಸಾವಿತ್ರಿ (54)
ಸಬಿತಾ (43)
ಶಿವಣ್ಣನ್ (50)
ಅಪ್ಪಣ್ಣನ್(39)
ಅಶ್ವಿನ್ (13)
ಜೀತು (11)
ದಿವ್ಯಾ (35)
ರತ್ನಾ(48)

ಈವರೆಗೆ ರಾಜೇಂದ್ರ (50), ರತ್ನಮ್ಮ(45), ಪುಟ್ಟಸಿದ್ದಶೆಟ್ಟಿ (62), ರಾಣಿ (50) ಎಂಬವರ ಶವರಗಳನ್ನು ರಕ್ಷಣಾ ಪಡೆಗಳು ಹೊರತೆಗೆದಿವೆ.

ಚಾಮರಾಜನಗರ ಮೂಲದ ಇಬ್ಬರ ಸಾವು ಧೃಡ

ಮೆಪ್ಪಾಡಿಯಲ್ಲಿ ವಾಸವಿದ್ದ ಚಾಮರಾಜನಗರದ ಪುಟ್ಟ ಸಿದ್ದಿ(62) ಹಾಗು ರಾಣಿ ಎಂಬವರ ತಾಯಿ ಸಾವಿಗೀಡಾಗಿದ್ದಾರೆ. ಚಾಮರಾಜನಗರ ತಾಲೋಕು ಇರಸವಾಡಿ ಮೂಲದ ರಾಜನ್ ಹಾಗು ರಜನಿ ನಾಪತ್ತೆಯಾಗಿದ್ದಾರೆ. ಕಳೆದ ಮೂವತ್ತು ವರ್ಷಗಳಿಂದ ಕೇರಳದ ಚೂರಲ್ಲಾದಲ್ಲಿ ವಾಸವಿದ್ದ ರಾಜನ್ ಹಾಗು ರಜನಿ(55) ವಾಸವಿದ್ದರು. ರಾಜನ್, ರಜನಿಗಾಗಿ ಶೋಧಕಾರ್ಯ ನಡೆದಿದೆ.

ಚಾಮರಾಜನಗರ ಜಿಲ್ಲೆಯ ರಾಜೇಂದ್ರ(50), ರತ್ನಮ್ಮ(45), ಪುಟ್ಟಸಿದ್ದಶೆಟ್ಟಿ(62), ರಾಣಿ(50) ಇವರ ಶವಗಳು ದೊರೆತಿವೆ. ತ್ರಯಂಬಕಪುರದ ಸ್ವಾಮಿಶೆಟ್ಟಿ ಎಂಬವರಿಗೆ ಗಾಯಗಳಾಗಿವೆ. ರಾಜೇಂದ್ರ, ರತ್ನಮ್ಮ ಚಾಮರಾಜನಗರ ತಾಲೂಕಿನ ಇರಸವಾಡಿ ಗ್ರಾಮದವರು. ಇಬ್ಬರ ಶವ ಇನ್ನೂ ಪತ್ತೆಯಾಗಿಲ್ಲ. ವೈನಾಡು ಜಿಲ್ಲೆಯ ಮೆಪ್ಪಾಡಿಯ ವೈತ್ರಿ ತಾಲೂಕು ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆದಿದೆ. ಗುಂಡ್ಲುಪೇಟೆ ತಹಸೀಲ್ದಾರ್ ರಮೇಶ್‌ ಬಾಬು ನೇತೃತ್ವದಲ್ಲಿ ರಕ್ಷಣಾ ಕಾರ್ಯ ನಡೆದಿದ್ದು, ತಹಸೀಲ್ದಾರ್ ನೇತೃತ್ವದ ತಂಡ ಮೃತರ ಕುಟುಂಬಸ್ಥರೊಂದಿಗೆ ಸಂಪರ್ಕದಲ್ಲಿದೆ.

ಮಂಡ್ಯದ ಕುಟುಂಬಕ್ಕೆ ಸಂಕಷ್ಟ

ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಕತ್ತರಘಟ್ಟ ಗ್ರಾಮದ ಝಾನ್ಸಿ, ಝಾನ್ಸಿ ಪುತ್ರ ನಿಹಾಲ್, ಅತ್ತೆ ಲೀಲಾವತಿ ನಾಪತ್ತೆಯಾಗಿದ್ದಾರೆ. ಮೈಸೂರಿನ ಸರಗೂರಿನ ಅನಿಲ್ ಕುಮಾರ್ ಎಂಬುವವರಿಗೆ ಝಾನ್ಸಿರಾಣಿಯನ್ನು ಕುಟುಂಬ ಮದುವೆ ಮಾಡಿಕೊಟ್ಟಿತ್ತು. ಕೇರಳದ ಮುಂಡಕೈಯಲ್ಲಿ ಅನಿಲ್, ಪತ್ನಿ ಝಾನ್ಸಿ, ಪುತ್ರ ನಿಹಾಲ್ ಹಾಗೂ ತಂದೆ-ತಾಯಿ ನೆಲೆಸಿದ್ದರು. ಮುಂಡಕೈ ಗುಡ್ಡ ಕುಸಿತದಲ್ಲಿ ಅನಿಲ್ ತಾಯಿ ಲೀಲಾವತಿ(55), ಪುತ್ರ ನಿಹಾಲ್(2.5). ನಾಪತ್ತೆಯಾಗಿದ್ದು, ಮಣ್ಣಿನಡಿ ಸಿಲುಕಿರುವ ಶಂಕೆ ಇದೆ. ಅನಿಲ್ ಹಾಗೂ ಅವರ ಪತ್ನಿ ಝಾನ್ಸಿ, ತಂದೆ ದೇವರಾಜು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೂವರೂ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಮೂವರಿಗೆ ಕೇರಳದ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಕುಟುಂಬಸ್ಥರನ್ನು ಕಾಣಲು ಝಾನ್ಸಿರಾಣಿ ಕುಟುಂಬಸ್ಥರು ಕೇರಳಕ್ಕೆ ತೆರಳಿದ್ದಾರೆ.

ಹನಿಮೂನ್‌ಗೆ ಬಂದವರು ಹೆಣವಾದರು

ಬೆಂಗಳೂರಿನಿಂದ ಹನಿಮೂನ್‌ಗೆ ಬಂದಿದ್ದ 4 ಪೈಕಿ ಇಬ್ಬರು ನಾಪತ್ತೆಯಾಗಿದ್ದಾರೆ. ಒರಿಸ್ಸಾ ಮೂಲದ ಎರಡು ನವ ಜೋಡಿಗಳು ಬಂದು ತಂಗಿದ್ದ ರೆಸಾರ್ಟ್‌ ಇವರು ಮಲಗಿದ್ದಲ್ಲೇ ಕೊಚ್ಚಿ ಹೋಗಿದೆ. ರೆಸಾರ್ಟ್‌ನಿಂದ 300 ಮೀಟರ್ ದೂರದಲ್ಲಿ ಕಾರಿನಲ್ಲಿ ಮಲಗಿದ್ದ ಹಾವೇರಿ ಮೂಲದ ಡ್ರೈವರ್ ಮಂಜುನಾಥ್ ಪಾರಾಗಿದ್ದಾರೆ. ಇವರು ದುರಂತದಲ್ಲಿ ಬದುಕುಳಿದಿದ್ದೇ ಅಚ್ಚರಿ. ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಮಂಜುನಾಥ್ ಮಾಹಿತಿ ನೀಡಿದ್ದಾರೆ.

ಕಾರಿನಲ್ಲಿ ಮಲಗಿದ್ದಕ್ಕೆ ಪ್ರಾಣ ಉಳಿಯಿತು. ರೆಸಾರ್ಟ್‌ನಲ್ಲಿ ಮಲಗಿದ್ರೆ ನಾನು ಬದುಕುತ್ತಿರಲಿಲ್ಲ. ಎತ್ತರದ ಪ್ರದೇಶದಲ್ಲಿ ಕಾರ್ ನಿಲ್ಲಿಸಿದ್ದರಿಂದ ಬಚಾವ್ ಆಗಿದ್ದೇನೆ. ನನ್ನ ಕಾರು ಕೂಡ ಅಲ್ಲೇ ಇದೆ ಎಂದು ಕೇರಳದ ವಯನಾಡಿನಲ್ಲಿ ಕ್ಯಾಬ್ ಡ್ರೈವರ್ ಮಂಜುನಾಥ್ ಹೇಳಿಕೆ ನೀಡಿದ್ದಾರೆ.

ಜಿಲ್ಲಾಡಳಿತ ಸಹಾಯವಾಣಿ

ಸಂತ್ರಸ್ತರಿಗಾಗಿ ಮೈಸೂರು ಜಿಲ್ಲಾಡಳಿತ ಸಹಾಯವಾಣಿ ತೆರೆದಿದೆ. ಜಿಲ್ಲಾ ವಿಪತ್ತು ನಿರ್ವಹಣಾ ಕೊಠಡಿಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ. 0821-2423800 ಅಥವಾ 1077 ದೂರವಾಣಿಗೆ ಕರೆ ಮಾಡುವಂತೆ ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Wayanad Landslide Explainer: ಪ್ರಕೃತಿ ಮೇಲೆ ಮಾನವನ ವಿಕೃತಿ; ವಯನಾಡು ಭೂಕುಸಿತಕ್ಕೆ ಇಲ್ಲಿದೆ ಕಾರಣಗಳ ಪಟ್ಟಿ

Continue Reading

ಕರ್ನಾಟಕ

CM Siddaramaiah: ಸರ್ಕಾರವನ್ನು ಅಸ್ಥಿರಗೊಳಿಸುವ ಬಿಜೆಪಿ ಪ್ರಯತ್ನ ಫೇಲ್; ಖರ್ಗೆ ಭೇಟಿ ಬಳಿಕ ಸಿದ್ದರಾಮಯ್ಯ ಹೇಳಿಕೆ

CM Siddaramaiah: ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರವನ್ನು ಹಗರಣಗಳನ್ನು ಉಲ್ಲೇಖಿಸಿ ಬಿಜೆಪಿ ಹಾಗೂ ಜೆಡಿಎಸ್‌ ಇಕ್ಕಟ್ಟಿಗೆ ಸಿಲುಕಿಸಿವೆ. ಇದರ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈಕಮಾಂಡ್‌ ನಾಯಕರನ್ನು ಭೇಟಿಯಾಗಿ ಪ್ರಕರಣಗಳ ಕುರಿತು ವಿವರ ನೀಡಿದ್ದಾರೆ.

VISTARANEWS.COM


on

CM Siddaramaiah
Koo

ನವದೆಹಲಿ/ಬೆಂಗಳೂರು: ಕರ್ನಾಟಕದಲ್ಲಿ ವಾಲ್ಮೀಕಿ ಮಹರ್ಷಿ ಅಭಿವೃದ್ಧಿ ನಿಗಮ, ಮುಡಾ ಹಗರಣಗಳನ್ನು (MUDA Scam) ಇಟ್ಟುಕೊಂಡು ರಾಜ್ಯ ಸರ್ಕಾರವನ್ನು (Karnataka Government) ಬಿಜೆಪಿ ಹಾಗೂ ಜೆಡಿಎಸ್‌ ಇಕ್ಕಟ್ಟಿಗೆ ಸಿಲುಕಿಸಿವೆ. ಇದರ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ದೆಹಲಿಗೆ ತೆರಳಿ, ಪಕ್ಷದ ಹೈಕಮಾಂಡ್‌ ನಾಯಕರನ್ನು ಭೇಟಿಯಾಗಿದ್ದಾರೆ. ಇದಾದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, “ಕರ್ನಾಟಕದಲ್ಲಿ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ಬಿಜೆಪಿಯ ಪ್ರಯತ್ನವು ಫಲ ನೀಡುವುದಿಲ್ಲ” ಎಂದು ಹೇಳಿದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಮಲ್ಲಿಕಾರ್ಜುನ ಖರ್ಗೆ, ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಸೇರಿ ಹಲವು ನಾಯಕರನ್ನು ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಭೇಟಿಯಾದರು. ಇದಾದ ಬಳಿಕ ಸಿದ್ದರಾಮಯ್ಯ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು. “ವಾಲ್ಮೀಕಿ ಹಗರಣದಲ್ಲಿ ಸರ್ಕಾರದ ಪಾತ್ರ ಇಲ್ಲ. ಹಣಕಾಸು ಇಲಾಖೆಯ ಪಾತ್ರ ಕೂಡ ಇಲ್ಲ . ಮುಡಾ ವಿಚಾರದಲ್ಲೂ ಕಾನೂನುಬಾಹಿರವಾಗಿ ಏನೂ ನಡೆದಿಲ್ಲ. ಎಲ್ಲವೂ ಕಾನೂನುಬದ್ದವಾಗಿ, ನಿಯಮಗಳ ಪ್ರಕಾರವೇ ನಡೆದಿದೆ ಎನ್ನುವುದನ್ನು ಪಕ್ಷದ ವರಿಷ್ಠರಿಗೆ ಮನವರಿಕೆ ಮಾಡಿಸಿದ್ದೇವೆ” ಎಂದು ತಿಳಿಸಿದರು.

“ಪರಿಶಿಷ್ಟ ಪಂಗಡಕ್ಕೆ ಸೇರಿದ ಹಣ ದುರುಪಯೋಗ ಆಗಿಲ್ಲ. ವಾಲ್ಮೀಕಿ ಹಗರಣದಲ್ಲಿ ಇದುವರೆಗೆ ಹಣ ವಶಪಡಿಸಿಕೊಳ್ಳಲಾಗುತ್ತಿದೆ. ಪ್ರಕರಣದ ತನಿಖೆ ನಡೆಯುತ್ತಿದೆ ಎನ್ನುವುದನ್ನೂ ಅರ್ಥ ಮಾಡಿಸಿದ್ದೇವೆ. ಬಿಜೆಪಿಯ ಸೇಡಿನ ಮತ್ತು ಅಸೂಯೆಯ ರಾಜಕಾರಣ ಹೈಕಮಾಂಡ್ ಅವರಿಗೂ ಮನವರಿಕೆಯಾಗಿದೆ. ಬಿಜೆಪಿಯ ಪಾದಯಾತ್ರೆಗೆ ಪ್ರತಿಯಾಗಿ ಏನು ಮಾಡಬೇಕು ಎನ್ನುವುದನ್ನು ಬೆಂಗಳೂರಿಗೆ ತೆರಳಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಜತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ” ಎಂದು ಹೇಳಿದರು.

“ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ. ಬಜೆಟ್ ಪೂರ್ವ ಸಭೆಯಲ್ಲಿ ರಾಜ್ಯದಿಂದ ಇಟ್ಟಿದ್ದ ಯಾವ ಬೇಡಿಕೆಗಳನ್ನೂ ಈಡೇರಿಸಲಾಗಿಲ್ಲ. ಹೀಗಾಗಿ ನಿರ್ಮಲಾ ಸೀತಾರಾಮನ್ ಅವರು ರಾಜ್ಯಕ್ಕೆ ಅನ್ಯಾಯ ಮಾಡಿದ್ದಾರೆ ಎನ್ನುವ ಕುರಿತೂ ಸಭೆಯಲ್ಲಿ ಚರ್ಚಿಸಲಾಯಿತು. ಇನ್ನು, ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವುದು ಬಿಜೆಪಿಯ ಹುನ್ನಾರ. ಆದರೆ ಇದರಲ್ಲಿ ಅವರಿಗೆ ಯಶಸ್ಸು ಸಿಗುವುದಿಲ್ಲ” ಎಂದು ಸಿದ್ದರಾಮಯ್ಯ ಸ್ಪಷ್ಟವಾಗಿ ಹೇಳಿದರು.

ಇದನ್ನೂ ಓದಿ: Wayanad Landslide: ಕೇರಳದಲ್ಲಿ ರಕ್ಷಣೆ, ಪರಿಹಾರ ಕಾರ್ಯಾಚರಣೆಗೆ ಇಬ್ಬರು IAS ಅಧಿಕಾರಿಗಳನ್ನು ನಿಯೋಜಿಸಿದ ಸಿಎಂ ಸಿದ್ದರಾಮಯ್ಯ

Continue Reading

ದೇಶ

Anurag Thakur: ತಮ್ಮ ಜಾತಿಯೇ ಗೊತ್ತಿರದ ರಾಹುಲ್‌ ಗಾಂಧಿಯಿಂದ ಜಾತಿಗಣತಿ ಪ್ರಸ್ತಾಪ ಎಂದ ಅನುರಾಗ್‌ ಠಾಕೂರ್‌!

Anurag Thakur: ತಮ್ಮ ಜಾತಿಯೇ ಯಾವುದೆಂದು ಗೊತ್ತಿರದವರು ಜಾತಿಗಣತಿ ಬಗ್ಗೆ ಮಾತನಾಡುತ್ತಿದ್ದಾರೆ ಎಂಬುದಾಗಿ ಕೇಂದ್ರ ಸಚಿವ ಅನುರಾಗ್‌ ಠಾಕೂರ್‌ ಅವರು ಸಂಸತ್‌ನಲ್ಲಿ ರಾಹುಲ್‌ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದಕ್ಕೆ ರಾಹುಲ್‌ ಗಾಂಧಿ ಹಾಗೂ ಅಖಿಲೇಶ್‌ ಯಾದವ್‌ ಅವರು ತಿರುಗೇಟು ನೀಡಿದ್ದಾರೆ.

VISTARANEWS.COM


on

Anurag Thakur
Koo

ನವದೆಹಲಿ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಅವರು ದೇಶಾದ್ಯಂತ ಜಾತಿಗಣತಿ ಮಾಡಬೇಕು ಎಂದು ಆಗ್ರಹಿಸುತ್ತಲೇ ಇದ್ದಾರೆ. ಹಾಗೆಯೇ, ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಜಾತಿಗಣತಿ ಮಾಡುತ್ತದೆ ಎಂದು ಕೂಡ ಹೇಳುತ್ತಾರೆ. ಇನ್ನು, ಸೋಮವಾರ (ಜುಲೈ 29) ಸಂಸತ್‌ನಲ್ಲಿ ಜಾತಿಗಣತಿ (Caste Census) ಕುರಿತು ರಾಹುಲ್‌ ಗಾಂಧಿ ಪ್ರಸ್ತಾಪಿಸಿದ್ದು, ಲೋಕಸಭೆಯಲ್ಲಿ ನಾವು ಜಾತಿಗಣತಿ ಮಂಡಿಸುತ್ತೇವೆ ಎಂದಿದ್ದರು. ಇದಕ್ಕೆ ಕೇಂದ್ರ ಸಚಿವ ಅನುರಾಗ್‌ ಠಾಕೂರ್‌ (Anurag Thakur) ತಿರುಗೇಟು ನೀಡಿದ್ದು, “ತಮ್ಮ ಜಾತಿಯೇ ಯಾವುದೆಂದು ಗೊತ್ತಿರದವರು ಜಾತಿಗಣತಿ ಬಗ್ಗೆ ಮಾತನಾಡುತ್ತಿದ್ದಾರೆ” ಎಂಬುದಾಗಿ ಹೇಳಿದ್ದಾರೆ. ಇದಕ್ಕೆ ಪ್ರತಿಪಕ್ಷ ನಾಯಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಸಂಸತ್‌ನಲಿ ಮಾತನಾಡಿದ ಅನುರಾಗ್‌ ಠಾಕೂರ್‌, “ದೇಶದಲ್ಲಿ ಜಾತಿಗಣತಿ ಬಗ್ಗೆ ತುಂಬ ಮಾತನಾಡುತ್ತಾರೆ. ಜಾತಿಗಣತಿಯನ್ನು ಲೋಕಸಭೆಯಲ್ಲಿ ಮಂಡಿಸುತ್ತೇವೆ ಎನ್ನುತ್ತಾರೆ. ಆದರೆ, ಜಾತಿಗಣತಿ ಬಗ್ಗೆ ಮಾತನಾಡುವವರಿಗೇ ತಮ್ಮ ಜಾತಿ ಯಾವುದು ಎಂದು ಗೊತ್ತಿಲ್ಲ” ಎಂಬುದಾಗಿ ಅನುರಾಗ್‌ ಠಾಕೂರ್‌ ಟೀಕಿಸಿದರು. ಇದಕ್ಕೆ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್‌ ಯಾದವ್‌ ಅವರು ತಿರುಗೇಟು ನೀಡಿದರು. “ಬೇರೆಯವರ ಜಾತಿಯನ್ನು ಕೇಳುವುದು ಎಷ್ಟು ಸರಿ” ಎಂದು ತಿರುಗೇಟು ನೀಡಿದರು.

ರಾಹುಲ್‌ ಗಾಂಧಿ ಪ್ರತ್ಯುತ್ತರ

ಅನುರಾಗ್‌ ಠಾಕೂರ್‌ ಹೇಳಿಕೆಗೆ ರಾಹುಲ್‌ ಗಾಂಧಿ ಪ್ರತ್ಯುತ್ತರ ನೀಡಿದರು. “ನೀವು ನನ್ನನ್ನು ಎಷ್ಟು ಅವಮಾನಿಸುತ್ತೀರೋ ಅವಮಾನಿಸಿ. ಆದರೆ, ನಾವು ಸಂಸತ್‌ನಲ್ಲಿ ಜಾತಿಗಣತಿ ವಿಧೇಯಕ ಮಂಡಿಸುತ್ತೇವೆ ಎಂಬುದನ್ನು ನೀವು ಮರೆಯದಿರಿ” ಎಂದರು. “ಅನುರಾಗ್‌ ಠಾಕೂರ್‌ ಅವರು ನನ್ನ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ನನ್ನನ್ನು ಅವಮಾನಿಸಿದ್ದಾರೆ. ಆದರೆ, ನಾನು ಅವರು ಕ್ಷಮೆ ಕೇಳಿ ಎಂಬುದಾಗಿ ಆಗ್ರಹಿಸುವುದಿಲ್ಲ. ಎಷ್ಟು ಬೇಕಾದರೂ ಅವಮಾನ ಮಾಡಲಿ” ಎಂದರು.

ಸಂಸತ್‌ನಲ್ಲಿ ಸೋಮವಾರ (ಜುಲೈ 29) ರಾಹುಲ್‌ ಗಾಂಧಿ ಅವರು ಕೇಂದ್ರದ ವಿರುದ್ಧ ಹರಿಹಾಯ್ದಿದ್ದರು. ದೇಶದ ಜನರ ಸುತ್ತ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಹೆಣೆದ ಚಕ್ರವ್ಯೂಹವನ್ನು ನಾವು ಭೇದಿಸುತ್ತೇವೆ. ಚಕ್ರವ್ಯೂಹವನ್ನು ನಮಗೆ ಭೇದಿಸುವುದು ಗೊತ್ತಿದೆ. ಯಾವ ಜಾತಿಗಣತಿ ಎಂದರೆ ನೀವು (ಬಿಜೆಪಿ) ಹೆದರುತ್ತೀರೋ, ಅದೇ ಜಾತಿಗಣತಿಯನ್ನು ಇದೇ ಸದನದಲ್ಲಿ ನಾವು ಮಂಡಿಸುತ್ತೇವೆ. ನಿಮಗೆ ಇಷ್ಟ ಇದೆಯೋ ಇಲ್ಲವೋ, ನಾವು ಇದೇ ಸದನದಲ್ಲಿ ಜಾತಿಗಣತಿಯನ್ನು ಮಂಡಿಸುತ್ತೇವೆ. ದೇಶದ ಜನ ಅರ್ಜುನನ ರೀತಿ ಚಕ್ರವ್ಯೂಹವನ್ನು ಭೇದಿಸಲಿದ್ದಾರೆ ಎಂದು ರಾಹುಲ್‌ ಗಾಂಧಿ ಹೇಳಿದರು.

ಇದನ್ನೂ ಓದಿ: Rahul Gandhi: ಮೋದಿ ಸೇರಿ 6 ಜನರಿಂದ ಭಾರತೀಯರಿಗೆ ಚಕ್ರವ್ಯೂಹ ರಚನೆ ಎಂದ ರಾಹುಲ್‌ ಗಾಂಧಿ; 6 ಜನ ಯಾರ‍್ಯಾರು?

Continue Reading

EXPLAINER

Wayanad Landslide Explainer: ಪ್ರಕೃತಿ ಮೇಲೆ ಮಾನವನ ವಿಕೃತಿ; ವಯನಾಡು ಭೂಕುಸಿತಕ್ಕೆ ಇಲ್ಲಿದೆ ಕಾರಣಗಳ ಪಟ್ಟಿ

Wayanad Landslide Explainer: ಕೇರಳದಲ್ಲಿ ತಜ್ಞರ ಎಚ್ಚರಿಕೆ, ವರದಿಗಳ ಹೊರತಾಗಿಯೂ ಪ್ರಕೃತಿ, ನಿಸರ್ಗದ ಮೇಲೆ ಮನುಷ್ಯ ವಿಕೃತಿ, ಕೈಗಾರೀಕರಣ, ಅರಣ್ಯ ನಾಶ, ಬೆಟ್ಟದಲ್ಲಿ ಕಲ್ಲುಗಳನ್ನು ತೆಗೆದು ಕೃಷಿ ಚಟುವಟಿಕೆಗಳನ್ನು ಕೈಗೊಂಡು ಪರಿಸರವನ್ನು, ಭೂಮಿಯನ್ನು ಹಾಳು ಮಾಡಲಾಗಿದೆ. ಇಂತಹ ಹಲವು ಕಾರಣಗಳಿಂದಾಗಿಯೇ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತಗಳಿಂದಾಗಿ 100ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ.

VISTARANEWS.COM


on

Wayanad Landslide
Koo

ತಿರುವನಂತಪುರಂ: ಕೇರಳದ ವಯನಾಡು ಜಿಲ್ಲೆಯಲ್ಲಿ ಮಂಗಳವಾರ (ಜುಲೈ 30) ಸಂಭವಿಸಿದ ಭೀಕರ ಭೂಕುಸಿತಗಳಿಗೆ (Wayanad Landslide Explainer) ಜನ ನಲುಗಿ ಹೋಗಿದ್ದಾರೆ. ಸಾವಿನ ಸಂಖ್ಯೆ 100 ದಾಟಿದೆ. ಸಾವಿರಾರು ಜನ ನಿರಾಶ್ರಿತರಾಗಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿದವರ ರಕ್ಷಣೆಗೆ ಕಾರ್ಯಾಚರಣೆ ನಡೆಯುತ್ತಿದೆ. ಮೆಪ್ಪಾಡಿ (Meppadi) ವ್ಯಾಪ್ತಿಯ ಪ್ರದೇಶಗಳು ಮಸಣಗಳ ರೀತಿ ಭಾಸವಾಗುತ್ತಿವೆ. ಎಲ್ಲಿ ನೋಡಿದರೂ ನೀರು, ಕೆಸರು, ಭೂಮಿ ಕುಸಿದ ದೃಶ್ಯಗಳೇ ಕಣ್ಣಿಗೆ ರಾಚುತ್ತಿವೆ. ಮಕ್ಕಳು, ಮಹಿಳೆಯರ ಶವಗಳನ್ನು ನೋಡಿದಾಗ ಮನಸ್ಸು ಕಲ್ಲವಿಲಗೊಳ್ಳುತ್ತದೆ. ಆದರೆ, ಕೇರಳದಲ್ಲಿ (Kerala Rains) ಪ್ರತಿ ಭಾರಿ ಮಳೆಯಾದಾಗಲೂ ಭೂಮಿ ಕುಸಿಯುತ್ತದೆ. ಹೀಗೆ ಕುಸಿದಾಗಲೆಲ್ಲ, ದುರಂತ ಸಂಭವಿಸಿದಾಗಲೆಲ್ಲ ಮನುಷ್ಯನೇ, ಆತನ ದುರಾಸೆಯೇ ಇದಕ್ಕೆಲ್ಲ ಕಾರಣ ಎಂಬ ಕಟು ಸತ್ಯವು ಕಾಣಿಸುತ್ತದೆ.

ಹೌದು, ಕೇರಳದ ಭೂಮಿಯ ಕುರಿತು, ಅಲ್ಲಿನ ಪರಿಸರದ ಕುರಿತು, ಭೂಕುಸಿತದ ಸಾಧ್ಯತೆಗಳ ಕುರಿತು ತಜ್ಞರು ದಶಕಕ್ಕಿಂತ ಹೆಚ್ಚು ಅವಧಿಯಿಂದಲೂ ಎಚ್ಚರಿಸುತ್ತಲೇ ಇದ್ದಾರೆ. ಆದರೆ, ಪ್ರಕೃತಿ, ನಿಸರ್ಗದ ಮೇಲೆ ಮನುಷ್ಯ ವಿಕೃತಿ, ಕೈಗಾರೀಕರಣ, ಅರಣ್ಯ ನಾಶ, ಬೆಟ್ಟದಲ್ಲಿ ಕಲ್ಲುಗಳನ್ನು ತೆಗೆದು ಕೃಷಿ ಚಟುವಟಿಕೆಗಳನ್ನು ಕೈಗೊಂಡು ಪರಿಸರವನ್ನು, ಭೂಮಿಯನ್ನು ಹಾಳು ಮಾಡಲಾಗಿದೆ. ಇದೆಲ್ಲದರ ಪರಿಣಾಮವೇ, ಕೇರಳದಲ್ಲಿ ಒಂದು ದಿನ ಜೋರು ಮಳೆ ಬಂದರೂ ಭೂಮಿ ಕುಸಿಯುವಂತಾಗಿದೆ, ನೆಮ್ಮದಿ ಕಸಿಯುವಂತಾಗಿದೆ.

ವಯನಾಡು ಭೂಸಿತಕ್ಕೆ ಪ್ರಮುಖ ಕಾರಣಗಳು

  • ಗುಡ್ಡಗಾಡು ಪ್ರದೇಶಗಳಲ್ಲಿ ಸಣ್ಣ ಸಣ್ಣ ಚರಂಡಿಗಳನ್ನು ನಿರ್ಮಿಸಲಾಗಿದ್ದು, ಮಳೆಗಾಲದಲ್ಲಿ ಇವು ಬ್ಲಾಕ್‌ ಆಗಿ, ನೀರು ನಿಂತು, ಭೂಮಿಯನ್ನು ಮೆತ್ತಗಾಗಿಸುತ್ತಿದೆ.
  • ಭೂಮಿಯ ಫಲವತ್ತತೆ ಕಡಿಮೆಗೊಳಿಸಿ, ಗಟ್ಟಿತನವನ್ನು ಕುಂಠಿತಗೊಳಿಸುವ ಶುಂಠಿ ಬೆಳೆಯನ್ನು ಅಧಿಕವಾಗಿ ಬೆಳೆಯುವುದು
  • ಅರಣ್ಯ ನಾಶ, ಗುಡ್ಡಗಾಡು, ಅರಣ್ಯ ಪ್ರದೇಶಗಳಲ್ಲಿ ಕೈಗಾರಿಕಾ ಚಟುವಟಿಕೆಗಳನ್ನು ಕೈಗೊಳ್ಳುತ್ತಿರುವುದು
  • ಬೆಟ್ಟಗಳ ಕಲ್ಲುಗಳನ್ನು ತೆರವುಗೊಳಿಸಿ, ಭೂಮಿಯನ್ನು ಹದಗೊಳಿಸಿ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುತ್ತಿರುವುದು
  • ಗಿರಿ ಪ್ರದೇಶಗಳಲ್ಲಿ ಬೆಟ್ಟವನ್ನು ಅಗೆದು ಮನೆಗಳು ಹಾಗೂ ರೆಸಾರ್ಟ್‌ಗಳನ್ನು ನಿರ್ಮಿಸಿರುವುದು
  • ಪ್ರವಾಸೋದ್ಯಮ, ಸಂಪರ್ಕದ ದೃಷ್ಟಿಯಿಂದ ಗುಡ್ಡಗಾಡು ಪ್ರದೇಶಗಳಲ್ಲಿ ಕಿಲೋಮೀಟರ್‌ಗಟ್ಟಲೆ ರಸ್ತೆಗಳ ನಿರ್ಮಾಣ ಮಾಡಿರುವುದು
  • ನದಿಗಳ ಹರಿವು, ವ್ಯಾಪ್ತಿಯನ್ನು ಹೆಚ್ಚಿಸದಿರುವುದು, ಭಾರಿ ಮಳೆಯಾದರೆ ನೀರು ಸರಾಗವಾಗಿ ಹರಿಯಲು ಕ್ರಮ ತೆಗೆದುಕೊಳ್ಳದಿರುವುದು

13 ವರ್ಷಗಳ ಹಿಂದೆಯೇ ಗಾಡ್ಗೀಳ್‌ ವರದಿ ಎಚ್ಚರಿಕೆ

ಮಾಧವ ಗಾಡ್ಗೀಳ್‌ ವರದಿ 2011ರಲ್ಲಿಯೇ ಪಶ್ಚಿಮ ಘಟ್ಟಗಳ ಪರಿಸರ ತಜ್ಞರ ಸಮಿತಿಯು (WGEEP) ರಚಿಸಿದ ವರದಿಯಲ್ಲಿ ಕೇರಳದ ಇಡುಕ್ಕಿ ಹಾಗೂ ವಯನಾಡು ಕುರಿತು ಮಹತ್ವವದ ಎಚ್ಚರಿಕೆ ನೀಡಿತ್ತು. ಎರಡೂ ಜಿಲ್ಲೆಗಳು ಪರಿಸರ ಸೂಕ್ಷ್ಮ ವಲಯಗಳು ಎಂದು ಉಲ್ಲೇಖಿಸಿತ್ತು. ಎರಡೂ ಜಿಲ್ಲೆಗಳಲ್ಲಿ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಬಾರದು. ಅರಣ್ಯೇತರ ಚಟುವಟಿಕೆಗಳು, ಅರಣ್ಯ ನಾಶ, ಕಂಪನಿ, ಕಚೇರಿಗಳನ್ನು ನಿರ್ಮಾಣ ಮಾಡಬಾರದು ಎಂದು ಎಚ್ಚರಿಸಿತ್ತು.

ಕೇರಳದ ಶೇ.13ರಷ್ಟು ಭೂಮಿ ದುರ್ಬಲ

ಕೇರಳದ ಇಡುಕ್ಕಿ, ಪಾಲಕ್ಕಾಡ್‌, ಮಲಪ್ಪುರಂ, ಪಥಣಂತಿಟ್ಟ ಹಾಗೂ ವಯನಾಡು ಜಿಲ್ಲೆಗಳನ್ನು ಅತಿ ದುರ್ಬಲ ಪ್ರದೇಶಗಳು ಎಂಬುದಾಗಿ ಇತ್ತೀಚಿನ ವರದಿಗಳು ತಿಳಿಸಿವೆ. ಕೇರಳದ ಪಶು ಸಂಗೋಪನೆ ಹಾಗೂ ಸಮುದ್ರ ವಿಜ್ಞಾನಗಳ ವಿಶ್ವವಿದ್ಯಾಲಯದ ಅಧ್ಯಯನದ ಪ್ರಕಾರ, ಕೇರಳದಲ್ಲಿ 2018ರ ಬಳಿಕ ಭೂಕುಸಿತಗಳ ಪ್ರಮಾಣವು ಶೇ.3.46ರಷ್ಟು ಹೆಚ್ಚಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಹವಾಮಾನ ವೈಪರೀತ್ಯ, ಕೇರಳ ಮತ್ತು ಸಾವು

ಭಾರಿ ಮಳೆ, ಭೂಕುಸಿತ, ಪ್ರವಾಹ, ಸಿಡಿಲು ಸೇರಿ ಹವಾಮಾನ ವೈಪರೀತ್ಯದಿಂದ ಕೇರಳದಲ್ಲಿ ಸಾವಿರಾರು ಜನ ಮೃತಪಟ್ಟಿದ್ದಾರೆ. ಕೇರಳದಲ್ಲಿ 2018ರಲ್ಲಿ ಉಂಟಾದ ಪ್ರವಾಹದಲ್ಲಿ ಕೇವಲ 3 ದಿನಗಳಲ್ಲಿಯೇ 483 ಜನ ಮೃತಪಟ್ಟಿದ್ದರು. ದೇವರ ನಾಡಿನಲ್ಲಿ 1961ರಿಂದ 2016ರ ಅವಧಿಯಲ್ಲಿ ಭೂಕುಸಿತದಿಂದಾಗಿಯೇ 295 ಮಂದಿ ಮೃತಪಟ್ಟಿದ್ದರು. 2019 ಹಾಗೂ 2020ರಲ್ಲಿಯೇ ಹವಾಮಾನ ವೈಪರೀತ್ಯಕ್ಕೆ 100ಕ್ಕೂ ಅಧಿಕ ಜನ ಬಲಿಯಾಗಿದ್ದರು.

ಇದನ್ನೂ ಓದಿ: Shiradi Landslide: ಕೇರಳದ ಬೆನ್ನಿಗೇ ಶಿರಾಡಿ ಘಾಟಿಯಲ್ಲಿ ಭಾರೀ ಭೂಕುಸಿತ, ಮಣ್ಣಿನಡಿ ಸಿಲುಕಿದ ಕಾರುಗಳು, ಟ್ಯಾಂಕರ್‌

Continue Reading
Advertisement
anekal JK police firing
ಕ್ರೈಂ8 mins ago

Police Firing: ಪುರಸಭೆ ಸದಸ್ಯನ ಕೊಲೆ ಮಾಡಿದ್ದ ರೌಡಿ ಕಾಲಿಗೆ ಗುಂಡು ನುಗ್ಗಿಸಿ ಬಂಧಿಸಿದ ಪೊಲೀಸರು

wayanad lanslide
ಪ್ರಮುಖ ಸುದ್ದಿ35 mins ago

Wayanad Landslide: ವೈನಾಡ್‌ ಭೂಕುಸಿತದಲ್ಲಿ 13 ಕನ್ನಡಿಗರು ನಾಪತ್ತೆ; ನಾಲ್ವರ ಶವ ಪತ್ತೆ, ಇನ್ನುಳಿದವರಿಗಾಗಿ ಶೋಧ

Tips for Monsoon
ಲೈಫ್‌ಸ್ಟೈಲ್44 mins ago

Tips for Monsoon: ಮಳೆಗಾಲದಲ್ಲಿ ಬಟ್ಟೆಗಳನ್ನು ಗರಿಗರಿಯಾಗಿ ಇರಿಸುವುದು ಹೇಗೆ?

Ear Infections during Monsoon
ಆರೋಗ್ಯ2 hours ago

Ear Infections During Monsoon: ಮಳೆಗಾಲದಲ್ಲಿ ಕಾಡುವ ಕಿವಿನೋವಿನಿಂದ ಮುಕ್ತರಾಗಲು ಸರಳ ಉಪಾಯ ಇಲ್ಲಿದೆ

karnataka weather Forecast
ಮಳೆ2 hours ago

Karnataka Weather : ಭಯಂಕರ ಮಳೆ ಮುನ್ಸೂಚನೆ; ಕರಾವಳಿ, ಮಲೆನಾಡು ಭಾಗಕ್ಕೆ ರೆಡ್‌ ಅಲರ್ಟ್‌

Paris Olympics 2024
ಪ್ರಮುಖ ಸುದ್ದಿ2 hours ago

Paris Olympics 2024: ಪ್ಯಾರಿಸ್​ ಒಲಿಂಪಿಕ್ಸ್​; ಇಂದು ಭಾರತೀಯ ಸ್ಪರ್ಧಿಗಳ ವೇಳಾಪಟ್ಟಿ ಹೀಗಿದೆ

Dina Bhavishya
ಭವಿಷ್ಯ3 hours ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಸಿಗಲಿದೆ ಶುಭ ಸೂಚನೆ

IND vs SL
ಪ್ರಮುಖ ಸುದ್ದಿ8 hours ago

IND vs SL : ಲಂಕಾ ವಿರುದ್ಧದ 3ನೇ ಟಿ20 ಪಂದ್ಯದಲ್ಲೂ ಭಾರತಕ್ಕೆ ಜಯ, ಸರಣಿ ಕ್ಲೀನ್ ಸ್ವೀಪ್ ಮಾಡಿದ ಸೂರ್ಯಕುಮಾರ್ ಪಡೆ

CM Siddaramaiah
ಕರ್ನಾಟಕ8 hours ago

CM Siddaramaiah: ಸರ್ಕಾರವನ್ನು ಅಸ್ಥಿರಗೊಳಿಸುವ ಬಿಜೆಪಿ ಪ್ರಯತ್ನ ಫೇಲ್; ಖರ್ಗೆ ಭೇಟಿ ಬಳಿಕ ಸಿದ್ದರಾಮಯ್ಯ ಹೇಳಿಕೆ

Rashid Khan
ಪ್ರಮುಖ ಸುದ್ದಿ8 hours ago

Rashid Khan : ಟಿ20 ಕ್ರಿಕೆಟ್​ನಲ್ಲಿ ವಿಕೆಟ್​ಗಳ ಹೊಸ ಮೈಲುಗಲ್ಲು ಸೃಷ್ಟಿಸಿದ ಅಫಘಾನಿಸ್ತಾನ ಬೌಲರ್ ರಶೀದ್ ಖಾನ್​

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ14 hours ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ18 hours ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ19 hours ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ2 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ2 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ2 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ3 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ3 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ3 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ3 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

ಟ್ರೆಂಡಿಂಗ್‌