Hardik Pandya : ಹಾರ್ದಿಕ್ ಪಾಂಡ್ಯ ಸಹೋದರನ ಪೊಲೀಸ್​ ಕಸ್ಟಡಿ ವಿಸ್ತರಣೆ; ಏನಿದು ಕೇಸ್​? - Vistara News

ಕ್ರೀಡೆ

Hardik Pandya : ಹಾರ್ದಿಕ್ ಪಾಂಡ್ಯ ಸಹೋದರನ ಪೊಲೀಸ್​ ಕಸ್ಟಡಿ ವಿಸ್ತರಣೆ; ಏನಿದು ಕೇಸ್​?

Hardik Pandya: ವೈಭವ್ ಪಾಂಡ್ಯ ಅವರ ಹಿಂದಿನ ರಿಮಾಂಡ್ ಅವಧಿ ಮುಗಿದ ನಂತರ ಅವರನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಹೆಚ್ಚಿನ ತನಿಖೆಗಾಗಿ ವೈಭವ್ ಅವರ ಕಸ್ಟಡಿ ವಿಸ್ತರಿಸುವಂತೆ ಮುಂಬೈ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗ (ಇಒಡಬ್ಲ್ಯೂ) ನ್ಯಾಯಾಲಯಕ್ಕೆ ಮನವಿ ಮಾಡಿದೆ. ವೈಭವ್ ಪರ ವಕೀಲ ನಿರಂಜನ್ ಮುಂಡರಗಿ ಅವರು ಇಒಡಬ್ಲ್ಯೂ ಮನವಿಯನ್ನು ವಿರೋಧಿಸದ ಕಾರಣ, ನ್ಯಾಯಾಲಯವು ಅವರ ಕಸ್ಟಡಿಯನ್ನು ಶುಕ್ರವಾರದವರೆಗೆ ವಿಸ್ತರಿಸಿತು.

VISTARANEWS.COM


on

Hardik Pandya
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಕ್ರಿಕೆಟಿಗ ಸಹೋದರರಾದ ಹಾರ್ದಿಕ್ ಹಾಗೂ ಕೃಣಾಲ್ ಪಾಂಡ್ಯ (Hardik Pandya) ಅವರಿಗೆ ಜಂಟಿ ವ್ಯವಹಾರ ಮಾಡುವ ನೆಪದಲ್ಲಿ 4 ಕೋಟಿ ರೂ.ಗಳನ್ನು ವಂಚಿಸಿದ ಅವರ ಮಲ ಸಹೋದರ ವೈಭವ್ ಪೊಲೀಸ್ ಕಸ್ಟಡಿಯನ್ನು ನ್ಯಾಯಾಲಯ ಮಂಗಳವಾರ ಏಪ್ರಿಲ್ 19 ರವರೆಗೆ ವಿಸ್ತರಿಸಿದೆ. ಆರೋಪಿ ವೈಭವ್ ಪಾಂಡ್ಯ ಅವರ ಹಿಂದಿನ ರಿಮಾಂಡ್ ಅವಧಿ ಮುಗಿದ ನಂತರ ಅವರನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಹೆಚ್ಚಿನ ತನಿಖೆಗಾಗಿ ವೈಭವ್ ಅವರ ಕಸ್ಟಡಿ ವಿಸ್ತರಿಸುವಂತೆ ಮುಂಬೈ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗ (ಇಒಡಬ್ಲ್ಯೂ) ನ್ಯಾಯಾಲಯಕ್ಕೆ ಮನವಿ ಮಾಡಿದೆ. ವೈಭವ್ ಪರ ವಕೀಲ ನಿರಂಜನ್ ಮುಂಡರಗಿ ಅವರು ಇಒಡಬ್ಲ್ಯೂ ಮನವಿಯನ್ನು ವಿರೋಧಿಸದ ಕಾರಣ, ನ್ಯಾಯಾಲಯವು ಅವರ ಕಸ್ಟಡಿಯನ್ನು ಶುಕ್ರವಾರದವರೆಗೆ ವಿಸ್ತರಿಸಿತು. ಕ್ರಿಕೆಟಿಗ ಸಹೋದರರಿಗೆ 4 ಕೋಟಿ ರೂ.ಗಿಂತ ಹೆಚ್ಚು ವಂಚಿಸಿದ ಆರೋಪದ ಮೇಲೆ 37 ವರ್ಷದ ವೈಭವ್ ಏಪ್ರಿಲ್ 8 ರಂದು ಬಂಧನಕ್ಕೆ ಒಳಗಾಗಿದ್ದ.

ಆರಂಭದಲ್ಲಿ ವೈಭವ್ ಅವರು ‘ಇದು ಕೌಟುಂಬಿಕ ವಿಷಯ. ತಪ್ಪು ತಿಳುವಳಿಕೆಯಿಂದಾಗಿ ಪ್ರಕರಣ ದಾಖಲಿಸಲಾಗಿದೆ’ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದರು. ಕ್ರಿಕೆಟಿಗ ಸಹೋದರರು ವೈಭವ್ ಅವರೊಂದಿಗೆ ಮುಂಬೈನಲ್ಲಿ ಪಾಲುದಾರಿಕೆ ಆಧಾರಿತ ಸಂಸ್ಥೆಯನ್ನು ಸ್ಥಾಪಿಸಿದ್ದರು. 2021 ರಲ್ಲಿ ಅವರು ಪಾಲಿಮರ್ ವ್ಯವಹಾರವನ್ನು ಪ್ರಾರಂಭಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಉದ್ಯಮದ ಪಾಲುದಾರಿಕೆಯ ನಿಯಮಗಳ ಪ್ರಕಾರ ಹಾರ್ದಿಕ್ ಹಾಗೂ ಕೃಣಾಳ್​ ತಲಾ 40 ಪ್ರತಿಶತದಷ್ಟು ಮತ್ತು ವೈಭವ್ ಉಳಿದ ಶೇಕಡಾ 20 ಮೊತ್ತವನ್ನು ಬಂಡವಾಳವನ್ನು ಹೂಡಿಕೆ ಮಾಡಿದ್ದ . ನಿಯಮಗಳ ಪ್ರಕಾರ, ವೈಭವ್ ವ್ಯವಹಾರದ ದೈನಂದಿನ ಕಾರ್ಯಾಚರಣೆಗಳನ್ನು ನಿರ್ವಹಿಸಬೇಕಾಗಿತ್ತು. ಲಾಭವನ್ನು ಹೂಡಿಕೆ ಅನುಪಾತದಲ್ಲಿ ವಿತರಿಸಬೇಕಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: T20 World Cup : ವಿಶ್ವ ಕಪ್​ ತಂಡದಲ್ಲಿ ಹಾರ್ದಿಕ್ ಪಾಂಡ್ಯಗೆ ನೋ ಚಾನ್ಸ್​; ಆಯ್ಕೆದಾರರ ಇಂಗಿತ ಬಹಿರಂಗ

ಆದರೆ ಪಾಂಡ್ಯ ಸಹೋದರರಿಗೆ ಮಾಹಿತಿ ನೀಡದೆ ವೈಭವ್ ಅದೇ ವ್ಯವಹಾರದಲ್ಲಿ ಮತ್ತೊಂದು ಸಂಸ್ಥೆಯನ್ನು ಸ್ಥಾಪಿಸಿದ್ದ. ಇದರಿಂದಾಗಿ ಪಾಲುದಾರಿಕೆ ಒಪ್ಪಂದವನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಲಾಗಿತ್ತು. ಹೊಸ ಕಂಪನಿ ಸ್ಥಾಪಿಸುವುದರೊಂದಿಗೆ, ಮೂಲ ಪಾಲುದಾರಿಕೆ ಸಂಸ್ಥೆಯ ಲಾಭವು ಕ್ಷೀಣಿಸಿ ಸುಮಾರು 3 ಕೋಟಿ ರೂ.ಗಳ ನಷ್ಟ ಎದುರಿಸಿತ್ತು.

ಈ ಅವಧಿಯಲ್ಲಿ, ವೈಭವ್ ತನ್ನ ಸ್ವಂತ ಲಾಭವನ್ನು ಶೇಕಡಾ 20 ರಿಂದ 33 ರಷ್ಟು ಹೆಚ್ಚಿಸಿ ಹಾರ್ದಿಕ್ ಪಾಂಡ್ಯ ಮತ್ತು ಅವರ ಸಹೋದರನಿಗೆ ನಷ್ಟವನ್ನುಂಟು ಮಾಡಿದ್ದ ವೈಭವ್ ಪಾಲುದಾರಿಕೆ ಖಾತೆಯಿಂದ ಹಣವನ್ನು ತನ್ನ ಸ್ವಂತಕ್ಕೆ ಬಳಸಿದ್ದ. ಇದು ಸುಮಾರು 1 ಕೋಟಿ ರೂಪಾಯಿ. ಹೀಗಾಗಿ ನಷ್ಟವಾದ 3 ಕೋಟಿ ಹಾಗೂ ದುರ್ಬಳಕೆ ಮಾಡಿಕೊಂಡ 1 ಕೋಟಿ ಸೇರಿ ನಾಲ್ಕು ಕೋಟಿ ರೂಪಾಯಿ ವಂಚನೆ ಪ್ರಕರಣ ಹೂಡಲಾಗಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Sanju Samson: ಸತತ 4 ಸೋಲು; ಬೇಸರ ಹೊರಹಾಕಿದ ನಾಯಕ ಸಂಜು ಸ್ಯಾಮ್ಸನ್

Sanju Samson: ಕಳೆದ ನಾಲ್ಕು ಪಂದ್ಯಗಳಿಂದ ನಾವು ವೈಫಲ್ಯಗಳನ್ನು ಅನುಭವಿಸುತ್ತಿದ್ದೇವೆ. ಇದಕ್ಕೆ ಮುಖ್ಯ ಕಾರಣ ಸಂಘಟಿತ ಪ್ರದರ್ಶನ ತೋರದೇ ಇರುವುದು. ನಮ್ಮಲ್ಲಿ ಹಲವು ಮ್ಯಾಚ್​ ವಿನ್ನರ್​ಗಳಿದ್ದಾರೆ. ಆದರೆ ಯಾರೂ ಕೂಡ ಪಂದ್ಯ ಗೆಲ್ಲಿಸಿಕೊಡುವಂತಹ ಪ್ರದರ್ಶನ ನೀಡುತ್ತಿಲ್ಲ ಎಂದು ಸಂಜು ಸ್ಯಾಮ್ಸನ್ ಹೇಳಿದರು.

VISTARANEWS.COM


on

Sanju Samson
Koo

ಗುವಾಹಟಿ: ಪಂಜಾಬ್​ ಕಿಂಗ್ಸ್(​Punjab Kings) ವಿರುದ್ಧದ ಪಂದ್ಯದಲ್ಲಿ 5 ವಿಕೆಟ್​ಗಳ ಸೋಲು ಕಾಣುವ ಮೂಲಕ ರಾಜಸ್ಥಾನ್​ ರಾಯಲ್ಸ್​(Rajasthan Royals) ಸತತ 4ನೇ ಸೋಲಿಗೆ ತುತ್ತಾಯಿತು. ತಂಡದ ಈ ಕಳಪೆ ಪ್ರದರ್ಶನದ ಬಗ್ಗೆ ನಾಯಕ ಸಂಜು ಸ್ಯಾಮ್ಸನ್(sanju samson)​ ಬಹಿರಂಗವಾಗಿಯೇ ಬೇಸರ ಹೊರಹಾಕಿದ್ದಾರೆ.

ಸೋಲಿನ ಬಳಿಕ ಮಾತನಾಡಿದ ಸಂಜು ಸ್ಯಾಮ್ಸನ್, ಕಳೆದ ನಾಲ್ಕು ಪಂದ್ಯಗಳಿಂದ ನಾವು ವೈಫಲ್ಯಗಳನ್ನು ಅನುಭವಿಸುತ್ತಿದ್ದೇವೆ. ಇದಕ್ಕೆ ಮುಖ್ಯ ಕಾರಣ ಸಂಘಟಿತ ಪ್ರದರ್ಶನ ತೋರದೇ ಇರುವುದು. ನಮ್ಮಲ್ಲಿ ಹಲವು ಮ್ಯಾಚ್​ ವಿನ್ನರ್​ಗಳಿದ್ದಾರೆ. ಆದರೆ ಯಾರೂ ಕೂಡ ಪಂದ್ಯ ಗೆಲ್ಲಿಸಿಕೊಡುವಂತಹ ಪ್ರದರ್ಶನ ನೀಡುತ್ತಿಲ್ಲ ಎಂದು ಹೇಳಿದರು.

ಈ ಹಿಂದೆ ನಾವು 200 ಪ್ಲಸ್​ ರನ್​ಗಳನ್ನು ಸುಲಭವಾಗಿ ಕಲೆಹಾಕಿದ್ದೇವೆ ಮತ್ತು ಚೇಸಿಂಗ್​ ಕೂಡ ಮಾಡಿದ್ದೇವೆ. ಆದರೆ ಈಗ ಕನಿಷ್ಠ 150ರ ಗಡಿ ದಾಡಲೂ ಕೂಡ ಪರದಾಡುವ ಸ್ಥಿತಿಯಲ್ಲಿದ್ದೇವೆ. ಮುಂದಿನ ಪಂದ್ಯಗಳಲ್ಲಿ ಸಂಘಟಿತ ಪ್ರದರ್ಶನ ತೋರುವ ತುರ್ತು ಅಗತ್ಯವಿದೆ. ಪ್ಲೇ ಆಫ್​ಗೆ ಪ್ರವೇಶ ಪಡೆದಿದ್ದರೂ ಕೂಡ ಮುಂದಿನ ಪಂದ್ಯದಲ್ಲಿ ಗೆಲ್ಲಲೇ ಬೇಕು. ಈ ಮೂಲಕ ಹಿಂದಿನ ಫಾರ್ಮ್​ ಕಂಡುಕೊಳ್ಳಬೇಕಿದೆ ಎಂದು ಸಂಜು ಸಹ ಆಟಗಾರರಿಗೆ ಎಚ್ಚರಿಕೆ ಸಂದೇಶ ನೀಡಿದ್ದಾರೆ. ಬೌಲಿಂಗ್​ ವಿಭಾಗದಲ್ಲಿಯೂ ಸುಧಾರಣೆ ಕಂಡುಕೊಳ್ಳುವ ಅನಿವಾರ್ಯತೆಯೂ ಇದೆ ಎಂದು ಇದೇ ಸಂದರ್ಭದಲ್ಲಿ ಸಂಜು ಹೇಳಿದರು.

ಇದನ್ನೂ ಓದಿ IPL 2024 Points Table: ಪಂಜಾಬ್​ಗೆ ಗೆಲುವು; ಅಂಕಪಟ್ಟಿಯಲ್ಲಿ ಪಾತಾಳಕ್ಕೆ ಕುಸಿದ ಮುಂಬೈ

ರಾಜಸ್ಥಾನ್​ ತಂಡಕ್ಕೆ​ 2ನೇ ತವರಾದ ಗುವಾಹಟಿಯ ಬರ್ಸಾಪರಾ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 65ನೇ ಪಂದ್ಯದಲ್ಲಿ ಟಾಸ್​ ಗೆದ್ದು ಬ್ಯಾಟಿಂಗ್​ ಆಯ್ದುಕೊಂಡ ರಾಜಸ್ಥಾನ್​ ರಾಯಲ್ಸ್ ಬ್ಯಾಟಿಂಗ್​ ವೈಫಲ್ಯ ಕಂಡು ನಿಗದಿತ 20 ಓವರ್​ಗಳಲ್ಲಿ 9 ವಿಕೆಟ್​ ಕಳೆದುಕೊಂಡು ಕೇವಲ 144 ರನ್​ ಗಳಿಸಿತು. ಸಣ್ಣ ಮೊತ್ತವನ್ನು ಬೆನ್ನಟ್ಟಿದ ಪಂಜಾಬ್(Punjab Kings)​ ಕೂಡ ಒಂದು ಹಂತದಲ್ಲಿ ಆಘಾತ ಎದುರಿಸಿ ಬಳಿಕ ಚೇತರಿಕೆ ಹಾದಿ ಹಿಡಿದು 18.5 ಓವರ್​ನಲ್ಲಿ 5 ವಿಕೆಟ್​ ನಷ್ಟಕ್ಕೆ 145 ರನ್​ ಬಾರಿಸಿ ಗೆಲುವಿನ ನಗೆ ಬೀರಿತು.

ರಾಜಸ್ಥಾನ್​ ಪರ ಯಶಸ್ವಿ ಜೈಸ್ವಾಲ್​(4) ಜಾಸ್​ ಬಟ್ಲರ್​ ಅನುಪಸ್ಥಿತಿಯಲ್ಲಿ ಆಡಲಿಳಿದ ಕೊಹ್ಲರ್-ಕಾಡ್ಮೋರ್(18), ನಾಯಕ ಸಂಜು ಸ್ಯಾಮ್ಸನ್​(18), ಧೃವ್​ ಜುರೇಲ್​(0), ರೋಮನ್​ ಪೋವೆಲ್(4) ಬ್ಯಾಟಿಂಗ್​ ವೈಫಲ್ಯ ಕಂಡು ಪೆವಿಲಿಯನ್​ ಪರೇಡ್​ ನಡೆಸಿದರು. ರಿಯಾನ್​ ಪರಾಗ್​(48) ಮತ್ತು ಆರ್​.ಅಶ್ವಿನ್​(28) ಅವರ ಅಸಾಮಾನ್ಯ ಬ್ಯಾಟಿಂಗ್​ನಿಂದಾಗಿ ತಂಡ 100 ಗಡಿ ದಾಟಿ ಸ್ಪರ್ಧಾತ್ಮಕ ಮೊತ್ತ ಗಳಿಸುವಲ್ಲಿ ಯಶಸ್ಸು ಕಂಡಿತು.

Continue Reading

ಕ್ರೀಡೆ

Sunil Chhetri: 20 ವರ್ಷಗಳ ಫುಟ್ಬಾಲ್ ವೃತ್ತಿಜೀವನಕ್ಕೆ ತೆರೆ ಎಳೆಯಲು ನಿರ್ಧರಿಸಿದ ಸುನೀಲ್‌ ಚೆಟ್ರಿ; ಕುವೈತ್ ವಿರುದ್ಧ ಅಂತಿಮ ಪಂದ್ಯ

Sunil Chhetri: 2005ರಲ್ಲಿ ಅಂತಾರಾಷ್ಟ್ರೀಯ ಫುಟ್ಬಾಲ್​ಗೆ ಪದಾರ್ಪಣೆ ಮಾಡಿದ ಸುನೀಲ್‌ ಚೆಟ್ರಿ 93 ಗೋಲು ದಾಖಲಿಸಿ ಅತ್ಯಧಿಕ ಗೋಲು ಬಾರಿಸಿದ ಆಟಗಾರರ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದ್ದಾರೆ. ಕ್ರಿಸ್ಟಿಯಾನೊ ರೊನಾಲ್ಡೊ, ಲಿಯೋನೆಲ್‌ ಮೆಸ್ಸಿ ಕ್ರಮವಾಗಿ ಮೊದಲೆರಡು ಸ್ಥಾನದಲ್ಲಿದ್ದಾರೆ.

VISTARANEWS.COM


on

Sunil Chhetri
Koo

ಮುಂಬಯಿ: ಭಾರತದ ಖ್ಯಾತ ಫುಟ್ಬಾಲ್(Indian football icon)​ ಆಟಗಾರ ಸುನೀಲ್‌ ಚೆಟ್ರಿ(Sunil Chhetri) ಅವರು ಫುಟ್‌ಬಾಲ್‌ನಿಂದ ನಿವೃತ್ತಿ ಹೊಂದುವುದಾಗಿ ಘೋಷಿಸಿದ್ದಾರೆ. ಜೂನ್ 6 ರಂದು ಕುವೈತ್(Kuwait) ವಿರುದ್ಧ ಫಿಫಾ ವಿಶ್ವಕಪ್ ಅರ್ಹತಾ(FIFA World Cup 2026 qualifier) ಪಂದ್ಯದ ನಂತರ ಚೆಟ್ರಿ ಅಂತಾರಾಷ್ಟ್ರೀಯ ಫುಟ್‌ಬಾಲ್‌ನಿಂದ ನಿವೃತ್ತಿ ಹೊಂದಲಿದ್ದಾರೆ. ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಪೋಸ್ಟ್ ಮಾಡುವ ಮೂಲಕ ಚೆಟ್ರಿ ತಮ್ಮ ನಿವೃತ್ತಿಯ ವಿಚಾರವನ್ನು ತಿಳಿಸಿದ್ದಾರೆ. ಭಾರತಕ್ಕಾಗಿ 145 ಪಂದ್ಯಗಳನ್ನು ಆಡಿರುವ ಅವರು 20 ವರ್ಷಗಳ ವೃತ್ತಿಜೀವನದಲ್ಲಿ 93 ಗೋಲುಗಳನ್ನು ಗಳಿಸಿದ್ದಾರೆ.

2005ರಲ್ಲಿ ಅಂತಾರಾಷ್ಟ್ರೀಯ ಫುಟ್ಬಾಲ್​ಗೆ ಪದಾರ್ಪಣೆ ಮಾಡಿದ ಸುನೀಲ್‌ ಚೆಟ್ರಿ 93 ಗೋಲು ದಾಖಲಿಸಿ ಅತ್ಯಧಿಕ ಗೋಲು ಬಾರಿಸಿದ ಆಟಗಾರರ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದ್ದಾರೆ. ಕ್ರಿಸ್ಟಿಯಾನೊ ರೊನಾಲ್ಡೊ, ಲಿಯೋನೆಲ್‌ ಮೆಸ್ಸಿ ಕ್ರಮವಾಗಿ ಮೊದಲೆರಡು ಸ್ಥಾನದಲ್ಲಿದ್ದಾರೆ.

ಕೆಲವು ದಿನಗಳ ಹಿಂದೆಯೇ ಸುನೀಲ್‌ ಚೆಟ್ರಿ ಅವರ ನಿವೃತ್ತಿಯ ವಿಚಾರ ಮುನ್ನಕೆಗೆ ಬಂದಿತ್ತು. ಈ ವಿಚಾರವನ್ನು ಕೋಚ್‌ ಐಗರ್‌ ಸ್ಟಿಮ್ಯಾಕ್‌ ಹೇಳಿದ್ದರು. “ಸುನೀಲ್‌ ಚೆಟ್ರಿ ಅವರಿಗೆ ಈಗ 38 ವಯಸ್ಸಾಗಿದೆ. ಇದು ಅವರಿಗೂ ಅರಿವಿಗೂ ಬಂದಿದೆ. ಇಷ್ಟು ವಯಸ್ಸಿನಲ್ಲಿ ಅವರಿಗೆ 90 ನಿಮಿಷಗಳ ಆಟ ಆಡಲು ದೇಹ ಸ್ಪಂದಿಸುವುದು ಕೂಡ ಕಷ್ಟಕರ. ಅವರು ಭಾರತ ಕಂಡ ಶ್ರೇಷ್ಠ ಫುಟ್ಬಾಲ್ ಆಟಗಾರರಲ್ಲಿ ಒಬ್ಬರಾಗಿದ್ದಾರೆ. ನನ್ನ ಪ್ರಕಾರ ಈ ಬಾರಿ ಏಷ್ಯಾ ಕಪ್​ ಅವರ ವಿದಾಯದ ಋತು ಆಗಿರುವ ಸಾಧ್ಯತೆಯೇ ಹೆಚ್ಚು ಎಂಬುದಾಗಿ ಸ್ಟಿಮ್ಯಾಕ್‌ ಹೇಳಿದ್ದರು. ಇದೀಗ ಅಂತಿಮವಾಗಿ ಚೆಟ್ರಿ ತಮ್ಮ ನಿವೃತ್ತಿ ನಿರ್ಧಾರವನ್ನು ಕೈಗೊಂಡಿದ್ದಾರೆ.

“ನಾನು ಎಂದಿಗೂ ಮರೆಯದ ಮತ್ತು ಆಗಾಗ ನೆನಪಿಸಿಕೊಳ್ಳುವ ಒಂದು ದಿನವಿದೆ, ಅದು ನಾನು ನನ್ನ ದೇಶಕ್ಕಾಗಿ ಆಡಿದ ಮೊದಲ ಪಂದ್ಯ. ಅದು ನಂಬಲಸಾಧ್ಯವಾಗಿತ್ತು. ಆ ದಿನವನ್ನು ನಾನು ಎಂದಿಗೂ ಮರೆಯುವುದಿಲ್ಲ ಮತ್ತು ನನ್ನ ಅತ್ಯುತ್ತಮ ದಿನಗಳಲ್ಲಿ ಒಂದಾಗಿದೆ” ಎಂದು ಚೆಟ್ರಿ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

“ನಾನು ದೆಹಲಿಯಲ್ಲಿ ಸುಬ್ರೊಟೊ ಕಪ್ ಆಡುವಾಗ, ದೇಶಕ್ಕಾಗಿ ಆಡುತ್ತೇನೆ ಎಂದು ನಾನು ಭಾವಿಸಿರಲಿಲ್ಲ ಅಥವಾ ಕನಸು ಕಾಣಲಿಲ್ಲ. ಕ್ಲಬ್‌ಗಾಗಿ ಆಡುವ ವೃತ್ತಿಪರ ಸೆಟಪ್ ತುಂಬಾ ದೂರವಾಗಿತ್ತು. ಏಕೆಣದರೆ ಆ ದಿನಗಳಲ್ಲಿ ಅದು ಬಹಳ ಕಷ್ಟಕರವಾಗಿತ್ತು. ಹಾಗಾಗಿ ನಾನು ಆಡುವ ಕನಸು ಕಾಣಲಿಲ್ಲ. ಆದರೆ ದೇವರ ದಯೆಯಿಂದ ನನಗೆ ಈ ಅವಕಾಶ ಒದಗಿ ಬಂತು. ದೇಶವನ್ನು ಪ್ರತಿನಿಧಿಸುವ ಪ್ರತಿ ಕ್ಷಣವೂ ಕೂಡ ವಿಶೇಷ” ಎಂದರು.

ಜೂನ್ 12, 2005 ರಂದು ಕ್ವೆಟ್ಟಾದಲ್ಲಿ ಪಾಕಿಸ್ತಾನದ ವಿರುದ್ಧದ ಸೌಹಾರ್ದ ಪಂದ್ಯದಲ್ಲಿ ಚೆಟ್ರಿ ಮೊದಲ ಬಾರಿಗೆ ಹಿರಿಯ ರಾಷ್ಟ್ರೀಯ ತಂಡದ ಜರ್ಸಿಯನ್ನು ತೊಟ್ಟಿದ್ದರು. ಆ ಪಂದ್ಯ 1-1 ಡ್ರಾದಲ್ಲಿ ಅತ್ಯಂಕಡಿತ್ತು. ಭಾರತದ ಈ ಒಂದು ಗೋಲ್​ ಬಾರಿಸಿದ್ದು ಚೆಟ್ರಿ. ಅಂದಿನಿಂದ, ಅವರು ಇದುವರೆಗೂ ರಾಷ್ಟ್ರೀಯ ತಂಡದ ಪರ ಹಲವು ಸಾಧನೆ ಮಾಡಿದ್ದಾರೆ.

“ಕಳೆದ 19 ವರ್ಷಗಳಲ್ಲಿ ನಾನು ನೆನಪಿಸಿಕೊಳ್ಳುವ ಭಾವನೆಯು ಕರ್ತವ್ಯದ ಒತ್ತಡ ಮತ್ತು ಅಪಾರ ಸಂತೋಷದ ನಡುವಿನ ಉತ್ತಮ ಸಂಯೋಜನೆಯಾಗಿದೆ ಎಂದು ನಿಮಗೆ ತಿಳಿದಿದೆ. ನಾನು ವೈಯಕ್ತಿಕವಾಗಿ ಎಂದಿಗೂ ಯೋಚಿಸಲಿಲ್ಲ, ಇವು ದೇಶಕ್ಕಾಗಿ ನಾನು ಆಡಿದ ಹಲವಾರು ಆಟಗಳಾಗಿವೆ” ಎಂದರು.

“ನಾನು ನನ್ನ ತಾಯಿ, ತಂದೆ ಮತ್ತು ನನ್ನ ಹೆಂಡತಿ, ಕುಟುಂಬ ಮತ್ತು ಸಹ ಆಟಗಾರರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ಏಕೆಂದರೆ ನಾನು ಒತ್ತಡದಲ್ಲಿದ್ದ ವೇಳೆ ಇವರೆಲ್ಲ ನನ್ನ ಜತೆಗಿದ್ದು ನನ್ನನು ಬೆಂಬಲಿಸಿದ್ದಾರೆ. ದೇಶಕ್ಕಾಗಿ ಒಷ್ಟು ವರ್ಷ ಆಡಿದ್ದು ನಿಜಕ್ಕೂ ಹೆಮ್ಮೆಯ ಸಂಗತಿ” ಎಂದರು.

Continue Reading

ಕ್ರೀಡೆ

GT vs SRH: ಇಂದು ಲ್ಯಾವೆಂಡರ್ ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ ಗುಜರಾತ್​ ತಂಡ; ಇದರ ಉದ್ದೇಶವೇನು?

GT vs SRH:”ಲ್ಯಾವೆಂಡರ್ ಜರ್ಸಿಗಳನ್ನು ಧರಿಸುವುದರಿಂದ ಕ್ಯಾನ್ಸರ್ ಹೋರಾಟಗಾರರೊಂದಿಗೆ ನಮ್ಮನ್ನು ಒಂದುಗೂಡಿಸುತ್ತದೆ ಮತ್ತು ಅವರ ಧೈರ್ಯವನ್ನು ಗೌರವಿಸುತ್ತದೆ. ತಮ್ಮ ಈ ಅಭಿಯಾನದಿಂದ ಪ್ರತಿಯೊಬ್ಬರಲ್ಲಿ ಕ್ಯಾನ್ಸರ್ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುತ್ತದೆ ಎಂದು ಭಾವಿಸುತ್ತೇವೆ” ಎಂದು ಗುಜರಾತ್​ ಫ್ರಾಂಚೈಸಿ ತಿಳಿಸಿದೆ.

VISTARANEWS.COM


on

GT vs SRH
Koo

ಹೈದರಾಬಾದ್​: ಇಂದು ನಡೆಯುವ ಸನ್​ರೈಸರ್ಸ್​ ಹೈದರಾಬಾದ್(GT vs SRH)​ ವಿರುದ್ಧದ ಪಂದ್ಯದಲ್ಲಿ ಶುಭಮನ್​ ಗಿಲ್​ ಸಾರಥ್ಯದ ಗುಜರಾತ್​ ಟೈಟಾನ್ಸ್(Gujarat Titans)​ ತಂಡ ಕ್ಯಾನ್ಸರ್ ಜಾಗೃತಿಗಾಗಿ ಲ್ಯಾವೆಂಡರ್ ಜೆರ್ಸಿ(gujarat titans lavender jersey) ಧರಿಸಿ ಕಣಕ್ಕಿಳಿಯಲಿದೆ. ಕೆಕೆಆರ್​ ವಿರುದ್ಧದ ಪಂದ್ಯದಲ್ಲಿಯೇ ಗುಜರಾತ್​ ಈ ಜೆರ್ಸಿಯಲ್ಲಿ ಆಡಬೇಕಿತ್ತು. ಆದರೆ ಈ ಪಂದ್ಯ ಮಳೆಯಿಂದ ರದ್ದುಗೊಂಡ ಕಾರಣ ಇದು ಸಾಧ್ಯವಾಗಿರಲಿಲ್ಲ. ಕಳೆದ ವರ್ಷವೂ ಕೂಡ ಗುಜರಾತ್​ ಈ ಜೆರ್ಸಿಯಲ್ಲಿ ಆಡಿತ್ತು. ಕ್ಯಾನ್ಸರ್ ರೋಗಿಗಳೊಂದಿಗೆ ಒಗ್ಗಟ್ಟನ್ನು ಪ್ರದರ್ಶಿಸುವುದು ಮತ್ತು ಜಾಗೃತಿ ಮೂಡಿಸುವುದು ಇದರ ಪ್ರಮುಖ ಉದ್ದೇಶವಾಗಿದೆ.

“ಲ್ಯಾವೆಂಡರ್ ಜರ್ಸಿಗಳನ್ನು ಧರಿಸುವುದರಿಂದ ಕ್ಯಾನ್ಸರ್ ಹೋರಾಟಗಾರರೊಂದಿಗೆ ನಮ್ಮನ್ನು ಒಂದುಗೂಡಿಸುತ್ತದೆ ಮತ್ತು ಅವರ ಧೈರ್ಯವನ್ನು ಗೌರವಿಸುತ್ತದೆ. ತಮ್ಮ ಈ ಅಭಿಯಾನದಿಂದ ಪ್ರತಿಯೊಬ್ಬರಲ್ಲಿ ಕ್ಯಾನ್ಸರ್ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುತ್ತದೆ ಎಂದು ಭಾವಿಸುತ್ತೇವೆ” ಎಂದು ಗುಜರಾತ್​ ಫ್ರಾಂಚೈಸಿ ತಿಳಿಸಿದೆ.

2040ರ ವೇಳೆಗೆ ಭಾರತದಲ್ಲಿನ ಕ್ಯಾನ್ಸರ್‌ ಪ್ರಮಾಣ ದ್ವಿಗುಣಗೊಳ್ಳುವ ಸಾಧ್ಯತೆ ಇದೆ. ನೋಯ್ಡಾದ ರಾಷ್ಟ್ರೀಯ ಕ್ಯಾನ್ಸರ್‌ ತಡೆ ಮತ್ತು ಸಂಶೋಧನ ಸಂಸ್ಥೆಯ ಅಧ್ಯಯನದ ಪ್ರಕಾರ ಭಾರತದಲ್ಲಿ 2.25 ದಶಲಕ್ಷ ಮಂದಿ ಕ್ಯಾನ್ಸರ್‌ನಿಂದ ಬಳಲುತ್ತಿದ್ದು 2040ರ ವೇಳೆಗೆ ಇದು ದ್ವಿಗುಣಗೊಳ್ಳಲಿದೆ ಎಂದಿದೆ. ಪ್ರತೀ ವರ್ಷಕ್ಕೆ 1 ಲಕ್ಷಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗುತ್ತಿವೆೆ ಎಂದು ಕ್ಯಾನ್ಸರ್‌ ಇಂಡಿಯಾ.ಆರ್ಗ್‌ ವರದಿ ತಿಳಿಸಿದೆ. ವಿಶ್ವ ಆರೋಗ್ಯ ಸಂಸ್ಥೆ ಪ್ರಕಾರ ಶೇ. 30-50ರಷ್ಟು ಕ್ಯಾನ್ಸರ್‌ ರೋಗಗಳನ್ನು ತಡೆಯಬಹುದಾಗಿದೆ. ಇದ ಕ್ಕಾಗಿ ತಂಬಾಕು ಮತ್ತು ಯುವಿ ಕಿರಣಗಳಿಂದ ಅಂತರ ಕಾಯ್ದುಕೊಳ್ಳುವುದು ಅಗತ್ಯ. ಒಂದು ಸಿಗರೇಟ್‌ನಲ್ಲಿ ಸುಮಾರು 7,000 ರಾಸಾಯನಿಕಗಳಿವೆ ಎನ್ನಲಾಗುತ್ತಿದ್ದು, ಅವುಗಳಲ್ಲಿ 50 ರಾಸಾಯನಿಕಗಳು ಕ್ಯಾನ್ಸರ್‌ಗೆ ಕಾರಣವಾಗುತ್ತವೆ ಎಂದೂ ಅದು ಹೇಳಿದೆ.

ಕೆಕೆಆರ್ ವಿರುದ್ಧದ ಪಂದ್ಯ ಮಳೆಯಿಂದ ರದ್ದುಗೊಂಡ ಕಾರಣ ಗುಜರಾತ್​ ತಂಡದ ಪ್ಲೇ ಆಫ್ ಗೇರುವ ಆಸೆ ಕಮರಿ ಹೋಗಿತ್ತು. ಟೂರ್ನಿಯಿಂದ ಹೊರಬಿದ್ದಿರುವ ಗಿಲ್​ ಪಡೆಗೆ ಇಂದಿನ ಪಂದ್ಯ ಔಪಚಾರಿಕ ಪಂದ್ಯ ಎಂದರೂ ತಪ್ಪಾಗಲಾರದು. ಮೊದಲೆರಡು ಆವೃತ್ತಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಗುಜರಾತ್‌ ಟೈಟಾನ್ಸ್‌ ಈ ಬಾರಿ ತೀರಾ ನಿರಾಶಾದಾಯಕ ಪ್ರದರ್ಶನ ತೋರಿದೆ. ಮೊಹಮ್ಮದ್‌ ಶಮಿ ಗೈರು ಮತ್ತು ಪಾಂಡ್ಯ ಮುಂಬೈ ತಂಡಕ್ಕೆ ಹೋದದ್ದು ತಂಡಕ್ಕೆ ಭಾರೀ ಹೊಡೆತ ನೀಡಿತ್ತು.​

ಪ್ಲೇ ಆಫ್​ ಪ್ರವೇಶಿಸಬೇಕಿದ್ದರೆ ಸನ್​ರೈಸರ್ಸ್​ ಹೈದರಾಬಾದ್​ಗೆ ಇದು ಮಹತ್ವದ ಪಂದ್ಯ. ಸದ್ಯ 14 ಅಂಕ ಗಳಿಸಿ ಮೂರನೇ ಸ್ಥಾನಿಯಾಗಿದ್ದರೂ ಪ್ಲೇ ಆಫ್​ ಟಿಕೆಟ್​ ಇನ್ನೂ ಅಧಿಕೃತಗೊಂಡಿಲ್ಲ. ಇಂದು ಗೆದ್ದರೆ ಅಧಿಕೃತವಾಗಲಿದೆ. 25 ವರ್ಷದ ಎಡಗೈ ದಾಂಡಿಗ ಅಭಿಷೇಕ್​ ಶರ್ಮ, ಟ್ರಾವಿಸ್​ ಹೆಡ್​​ ಜಿದ್ದಿಗೆ ಬಿದ್ದವತರಂತೆ ಬ್ಯಾಟ್​ ಬೀಸಿ ಉತ್ತಮ ಆರಂಭ ಒದಗಿಸುತ್ತಿದ್ದಾರೆ. ಈ ಜೋಡಿ ಪವರ್​ ಪ್ಲೇ ತನಕ ಆಡಿದರೆ ದೊಡ್ಡ ಮೊತ್ತ ಹರಿದು ಬರಲಿದೆ. ಮಧ್ಯಮ ಕ್ರಮಾಂಕದಲ್ಲಿ ಹೆನ್ರಿಚ್​ ಕ್ಲಾಸೆನ್​, ಐಡೆನ್​ ಮಾರ್ಕ್ರಮ್​ ಸಿಡಿದು ನಿಂತು ಪಂದ್ಯದ ಗತಿಯನ್ನೇ ಬದಲಿಸಬಲ್ಲ ಸಾಮರ್ಥ್ಯ ಹೊಂದಿದ್ದಾರೆ. ಬೌಲಿಂಗ್​ನಲ್ಲಿ ನಾಯಕ ಪ್ಯಾಟ್​ ಕಮಿನ್ಸ್​, ಭುವನೇಶ್ವರ್​ ಕುಮಾರ್​, ಟಿ. ನಟರಾಜನ್​ ಎದುರಾಳಿಗಳನ್ನು ಕಟ್ಟಿ ಹಾಕುವಲ್ಲಿ ಸಮರ್ಥರಿದ್ದಾರೆ.

Continue Reading

ಕ್ರೀಡೆ

KMF Nandini Logo: ನಂದಿನಿ ಲೋಗೋ ಇರುವ ಜೆರ್ಸಿ ಅನಾವರಣಗೊಳಿಸಿದ ಸ್ಕಾಟ್ಲೆಂಡ್

KMF Nandini Logo: ಸ್ಕಾಟ್ಲೆಂಡ್ ತಂಡದ ಉಪನಾಯಕ ಮ್ಯಾಥ್ಯೂ ಕ್ರಾಸ್ ಮತ್ತು ಬಲಗೈ ಮಧ್ಯಮ ವೇಗಿ ಕ್ರಿಸ್ ಸೋಲ್ ನಂದಿನಿ ಲೋಗೋ ಇರುವ ಜೆರ್ಸಿಯನ್ನು ಅನಾವರಣಗೊಳಿಸಿದರು. ಈ ಬಗ್ಗೆ ಮಾಹಿತಿ ನೀಡಿರುವ ಕೆಎಂಎಫ್‌ ವ್ಯವಸ್ಥಾಪಕ ನಿರ್ದೇಶಕ ಎಂ.ಕೆ. ಜಗದೀಶ್ ನಮ್ಮ ಬ್ರಾಂಡ್​ ಟಿ20 ವಿಶ್ವಕಪ್​ನಲ್ಲಿ ಕಾಣಿಸಿಕೊಳ್ಳುವುದು ಕರ್ನಾಟಕದ ಪ್ರತಿಯೊಬ್ಬರಿಗೂ ಹೆಮ್ಮೆಯ ಕ್ಷಣವಾಗಿದೆ ಎಂದು ಹೇಳಿದರು.

VISTARANEWS.COM


on

T20 World Cup 2024
Koo

ಬೆಂಗಳೂರು: ವೆಸ್ಟ್​ ಇಂಡೀಸ್​ ಮತ್ತು ಅಮೆರಿಕ ಆತಿಥ್ಯದಲ್ಲಿ ಜೂನ್ 1 ರಿಂದ ಆರಂಭವಾಗಲಿರುವ ಪುರುಷರ ಟಿ20 ವಿಶ್ವಕಪ್​ ಟೂರ್ನಿಯಲ್ಲಿ(T20 World Cup 2024) ಕರ್ನಾಟಕ ಹಾಲು ಮಹಾ ಮಂಡಳಿ(KMF) ಈಗಾಗಲೇ 2 ತಂಡಗಳಾದ ಸ್ಕಾಟ್ಲೆಂಡ್(Scotland) ಮತ್ತು ಐರ್ಲೆಂಡ್(Ireland) ತಂಡಗಳ ಪ್ರಾಯೋಜಕತ್ವ ಪಡೆದಿದೆ. ಈ ಮೂಲಕ ಕೆಎಂಎಫ್‌ ಕ್ರಿಕೆಟ್‌ ಲೋಕಕ್ಕೆ ಕಾಲಿಟ್ಟು ನಂದಿನಿ(nandini milk) ಲೋಗೋವನ್ನು ಜಾಗತಿಕ ಮಟ್ಟದಲ್ಲಿ ಪ್ರಚಾರ ಮಾಡಲು ಮುಂದಾಗಿದೆ. ಜತೆಗೆ ಅಮೂಲ್‌ಗೆ ತೀವ್ರ ಪೈಪೋಟಿ ನೀಡಲಿದೆ. ಇದೀಗ ನಂದಿನಿ ಲೋಗೋ(KMF Nandini Logo) ಇರುವ ಜೆರ್ಸಿಯನ್ನು ‘ಕ್ರಿಕೆಟ್ ಸ್ಕಾಟ್ಲೆಂಡ್’ ಅನಾವರಣಗೊಳಿಸಿದೆ.

ಸ್ಕಾಟ್ಲೆಂಡ್ ತಂಡದ ಉಪನಾಯಕ ಮ್ಯಾಥ್ಯೂ ಕ್ರಾಸ್ ಮತ್ತು ಬಲಗೈ ಮಧ್ಯಮ ವೇಗಿ ಕ್ರಿಸ್ ಸೋಲ್ ನಂದಿನಿ ಲೋಗೋ ಇರುವ ಜೆರ್ಸಿಯನ್ನು ಅನಾವರಣಗೊಳಿಸಿದರು. ಈ ಬಗ್ಗೆ ಮಾಹಿತಿ ನೀಡಿರುವ ಕೆಎಂಎಫ್‌ ವ್ಯವಸ್ಥಾಪಕ ನಿರ್ದೇಶಕ ಎಂ.ಕೆ. ಜಗದೀಶ್ ನಮ್ಮ ಬ್ರಾಂಡ್​ ಟಿ20 ವಿಶ್ವಕಪ್​ನಲ್ಲಿ ಕಾಣಿಸಿಕೊಳ್ಳುವುದು ಕರ್ನಾಟಕದ ಪ್ರತಿಯೊಬ್ಬರಿಗೂ ಹೆಮ್ಮೆಯ ಕ್ಷಣವಾಗಿದೆ ಎಂದು ಹೇಳಿದರು.

ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳ ಎಡಗೈ ಬ್ಯಾಟ್ಸ್‌ಮನ್‌ಗಳಿಗೆ ಬಲಗೈ ಮತ್ತು ಬಲಗೈ ಬ್ಯಾಟ್ಸ್‌ಮನ್‌ಗಳ ಎಡಗೈ ಮೇಲೆ ನಂದಿನಿ ಲೋಗೋ ಕಾಣಿಸಿಕೊಳ್ಳಲಿದೆ. ಐರ್ಲೆಂಡ್ ತಂಡ ಜೆರ್ಸಿ ಇನ್ನಷ್ಟೇ ಅನಾವರಣಗೊಳ್ಳಬೇಕಿದೆ. ಮಿನಿ ವಿಶ್ವಕಪ್​ ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆಯಲಿವೆ. ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ.

ಭಾರತ ತನ್ನ ಮೊದಲ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡಲಿದೆ. ಭಾರತವು ತನ್ನ ಗುಂಪು ಹಂತದ ಎಲ್ಲಾ ಪಂದ್ಯಗಳನ್ನು ಅಮೆರಿಕದಲ್ಲೇ ಆಡಲಿದೆ. ಸಾಂಪ್ರದಾಯಿಕ ಬದ್ಧ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಣ ಪಂದ್ಯ ಜೂನ್ 9 ರಂದು ನ್ಯೂಯಾರ್ಕ್‌ನಲ್ಲಿ ನಡೆಯಲ್ಲಿದೆ. ಲೀಗ್​ ಮುಕ್ತಾಯದ ಬಳಿಕ ಮುಂದಿನ ಹಂತಕ್ಕೆ ಅರ್ಹತೆ ಪಡೆದರೆ, ಸೂಪರ್ 8 ಪಂದ್ಯಗಳನ್ನು ಸಹ ಇಲ್ಲೇ ಆಡಲಿದೆ.

ಇದನ್ನೂ ಓದಿ T20 World Cup 2024: ಭಾರತ ಕೇವಲ ಒಂದು ಅಭ್ಯಾಸ ಪಂದ್ಯ ಮಾತ್ರ ಆಡಲಿದೆ; ಕಾರಣ ಏನು?

ಮೋಹನ್‌ದಾಸ್‌ ಪೈ ವಿರೋಧ


ಉದ್ಯಮಿ ಮೋಹನ್‌ದಾಸ್‌ ಪೈ (Mohandas Pai) ಅವರು ಸ್ಕಾಟ್ಲೆಂಡ್, ಐರ್ಲೆಂಡ್‌ ತಂಡಗಳಿಗೆ KMF ಪ್ರಾಯೋಜಕತ್ವ ಪಡೆದ ಕಾರಣ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಕೆಎಂಎಫ್‌ಗೆ ಕರ್ನಾಟಕ ರಣಜಿ ತಂಡ, ರಾಜ್ಯದ ಕ್ರೀಡಾಪಟುಗಳು, ಕಲಾವಿದರು, ರೈತರ ಮಕ್ಕಳು ಕಾಣುವುದಿಲ್ಲವೇ? ಇವುಗಳಿಗೇಕೆ ಪ್ರಾಯೋಜಕತ್ವ ನೀಡಿಲ್ಲ ಎಂದು ಪ್ರಶ್ನೆ ಮಾಡಿದ್ದರು.

ಕೆಎಂಎಫ್‌ನಿಂದ ವಿದೇಶಿ ಕ್ರಿಕೆಟ್ ತಂಡಗಳಿಗೆ ಪ್ರಾಯೊಜಕತ್ವ ಪಡೆದ ವಿಚಾರದ ಬಗ್ಗೆ ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಮೋಹನ್‌ ದಾಸ್‌ ಪೈ, ಕರ್ನಾಟಕದ ರಣಜಿ ತಂಡ, ರಾಜ್ಯದ ಕ್ರೀಡಾಪಟುಗಳು, ಕಲಾವಿದರು, ರೈತರ ಮಕ್ಕಳು, ಬಡವರಿಗೆ ವಿದ್ಯಾರ್ಥಿ ವೇತನಗಳಿಗೆ ಏಕೆ ಕೆಎಂಎಫ್‌ ಪ್ರಾಯೋಜಕತ್ವವನ್ನು ನೀಡಬಾರದು? ಕೆಎಂಎಫ್ ಕನ್ನಡಿಗ ತೆರಿಗೆದಾರರ ಹಣ, ಸಬ್ಸಿಡಿ ಮತ್ತು ಬಜೆಟ್‌ನಿಂದ ಧನಸಹಾಯವನ್ನು ಪಡೆದುಕೊಳ್ಳುತ್ತದೆ. ಆದರೆ, ಯಾರಿಗೂ ಗೊತ್ತಿಲ್ಲದ ವಿದೇಶಿ ತಂಡಗಳಿಗೆ ಖರ್ಚು ಮಾಡಲು ಹೊರಟಿದೆ” ಎಂದು ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ ಈ ಬಗ್ಗೆ ಟ್ಯಾಗ್‌ ಮಾಡಿ ತಮ್ಮ ಆಕ್ರೋಶ ಹೊರಹಾಕಿದ್ದರು.

Continue Reading
Advertisement
Success Story
ದೇಶ3 mins ago

Success Story: ರಾಧಾಮಣಿ ಅಮ್ಮಂಗೆ ವಯಸ್ಸು ಕೇವಲ ನಂಬರ್‌ ಅಷ್ಟೇ; 73 ವರ್ಷದ ಇವರ ಬಳಿ ಇದೆ ಬರೋಬ್ಬರಿ 11 ವಾಹನಗಳ ಲೈಸನ್ಸ್‌

Kiccha Sudeep Max Cinema shooting completed
ಸ್ಯಾಂಡಲ್ ವುಡ್7 mins ago

Kiccha Sudeep: ʻಮ್ಯಾಕ್ಸ್‌ʼ ಸಿನಿಮಾ ಶೂಟಿಂಗ್‌ ಮುಗಿಸಿದ ಕಿಚ್ಚ ಸುದೀಪ್‌: ರಿಲೀಸ್‌ ಯಾವಾಗ?

gold rate today priyamani
ಚಿನ್ನದ ದರ22 mins ago

Gold Rate Today: ಬಂಗಾರದ ಬೆಲೆಯಲ್ಲಿ ಭಾರೀ ಏರಿಕೆ, ಮತ್ತೆ ಚಿನ್ನದ ಮಾರುಕಟ್ಟೆಯಲ್ಲಿ ತುರುಸು; ದರಗಳು ಹೀಗಿವೆ

Swati maliwal
ದೇಶ26 mins ago

Swati Maliwal: ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆಆರೋಪಿ ಕೇಜ್ರಿವಾಲ್‌ ಜೊತೆ ಏರ್‌ಪೋರ್ಟ್‌ನಲ್ಲಿ ಪ್ರತ್ಯಕ್ಷ

Murder case in Bengaluru
ಬೆಂಗಳೂರು28 mins ago

Murder case : ಮನೆ ಓನರ್ ಕೊಲೆ ಕೇಸ್; ಇದು ಕಳ್ಳಿ ಕೊಲೆಗಾರ್ತಿಯಾದ ಕಥೆ

Cannes 2024 Urvashi Rautela pink gown remind Deepika Padukone
ಬಾಲಿವುಡ್40 mins ago

Cannes 2024: ಕಾನ್ ರೆಡ್‌ ಕಾರ್ಪೆಟ್‌ ಮೇಲೆ ಮಿಂಚಿದ ಊರ್ವಶಿ ರೌಟೇಲಾ: ದೀಪಿಕಾ ಸ್ಟೈಲ್ ಕಾಪಿ ಮಾಡಿದ್ರಾ?

Sanju Samson
ಕ್ರೀಡೆ50 mins ago

Sanju Samson: ಸತತ 4 ಸೋಲು; ಬೇಸರ ಹೊರಹಾಕಿದ ನಾಯಕ ಸಂಜು ಸ್ಯಾಮ್ಸನ್

Suspicious Case
ಬೆಂಗಳೂರು1 hour ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Star Suvarna HuAnthiya UhuuAnthiya new celebrity game show
ಕಿರುತೆರೆ1 hour ago

Star Suvarna: ಕಿರುತೆರೆಗೆ ಬರ್ತಿದೆ ಹೊಸ ಸೆಲೆಬ್ರಿಟಿ ಗೇಮ್ ಶೋ ‘Huu ಅಂತೀಯಾ…Uhuu ಅಂತೀಯಾ’: ಪ್ರಸಾರ ಯಾವಾಗ?

Hepatitis-A
ದೇಶ2 hours ago

Hepatitis-A: ಅಲರ್ಟ್‌..ಅಲರ್ಟ್‌! ಜನರ ನಿದ್ದೆಗೆಡಿಸ್ತಿದೆ ಮತ್ತೊಂದು ಡೆಡ್ಲಿ ವೈರಸ್‌

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ1 day ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ1 day ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ2 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20242 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20242 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ2 days ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು2 days ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ2 days ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ3 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ3 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌