Lok Sabha Election 2024: ರಾಜ್ಯಕ್ಕೆ ಬಿಜೆಪಿ ನಾಯಕರ ದಂಡಯಾತ್ರೆ; ಇನ್ನೊಂದು ವಾರ ಮೋದಿ, ಶಾ, ಯೋಗಿ ರ‍್ಯಾಲಿ, ಪ್ರಚಾರ! - Vistara News

Lok Sabha Election 2024

Lok Sabha Election 2024: ರಾಜ್ಯಕ್ಕೆ ಬಿಜೆಪಿ ನಾಯಕರ ದಂಡಯಾತ್ರೆ; ಇನ್ನೊಂದು ವಾರ ಮೋದಿ, ಶಾ, ಯೋಗಿ ರ‍್ಯಾಲಿ, ಪ್ರಚಾರ!

Lok Sabha Election 2024: ಪ್ರಿಲ್ 23 ಮತ್ತು 24ರಂದು ಎರಡು ದಿನಗಳ ಕಾಲ ರಾಜ್ಯಕ್ಕೆ ಅಮಿತ್ ಶಾ ಅವರು ಭೇಟಿ ನೀಡಲಿದ್ದಾರೆ. ಈ ಬಾರಿ ಮೊದಲಿಗೆ ಅವರು ಸಭೆ ನಡೆಸಲಿದ್ದಾರೆ. ಅಲ್ಲದೆ, ಸರಣಿ ರೋಡ್‌ ಶೋಗಳನ್ನು ನಡೆಸಲಿದ್ದಾರೆ. 23ರಂದು ಬೆಳಗ್ಗೆ ಯಶವಂತಪುರದಲ್ಲಿ ರೋಡ್ ಶೋ ನಡೆಯಲಿದೆ. 12.30ಕ್ಕೆ ಯಲಹಂಕದಲ್ಲಿ ಸಾರ್ವಜನಿಕ ಸಭೆಯನ್ನು ಆಯೋಜನೆ ಮಾಡಲಾಗಿದೆ. ಸಂಜೆ 4 ಗಂಟೆಗೆ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ರೋಡ್ ಶೋವನ್ನು ಏರ್ಪಡಿಸಲಾಗಿದೆ. ರಾತ್ರಿ 8 ಗಂಟೆಗೆ ಮಹದೇವಪುರದಲ್ಲಿ ರೋಡ್ ಶೋ ನಡೆಸಲಿದ್ದಾರೆ.

VISTARANEWS.COM


on

Lok Sabha Election 2024 Modi Shah Yogi and Nadda to hold rallies in Karnataka next week
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕೇಂದ್ರದ ನಾಯಕರು ಕರ್ನಾಟಕಕ್ಕೆ ಆಗಮಿಸಿ ಮತಬೇಟೆಯನ್ನು ಶುರು ಮಾಡಿದ್ದಾರೆ. ಈಗಾಗಲೇ ಬಿಜೆಪಿಯಿಂದ ಪ್ರಧಾನಿ ನರೇಂದ್ರ ಮೋದಿ (PM Narendra Modi), ಗೃಹ ಸಚಿವ ಅಮಿತ್‌ ಶಾ (Amit Shah) ಬಂದು ಹೋಗಿದ್ದಾರೆ. ಇದೇ ಏಪ್ರಿಲ್‌ 20ಕ್ಕೆ ಮೋದಿ ಮತ್ತೊಮ್ಮೆ ಬರುವವರಿದ್ದಾರೆ. ಇನ್ನು ಗೃಹ ಸಚಿವ ಅಮಿತ್‌ ಶಾ ಅವರು ಏಪ್ರಿಲ್‌ 23 ಮತ್ತು 24ರಂದು ಎರಡು ದಿನ ರಾಜ್ಯದಲ್ಲಿ ಠಿಕಾಣಿ ಹೂಡಲಿದ್ದಾರೆ. ಇವರಲ್ಲದೆ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ (JP Nadda), ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajanath Singh) ಹಾಗೂ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ (Yogi Adityanath) ಅವರು ಚುನಾವಣಾ ಪ್ರಚಾರಕ್ಕೆ ಆಗಮಿಸುತ್ತಿದ್ದಾರೆ.

ಈ ಬಗ್ಗೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ‌, ಬಿಜೆಪಿ ಚುನಾವಣಾ ಸಂಚಾಲಕ ಸುನಿಲ್‌ ಕುಮಾರ್‌ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಏಪ್ರಿಲ್ 23 ಮತ್ತು 24ರಂದು ಎರಡು ದಿನಗಳ ಕಾಲ ರಾಜ್ಯಕ್ಕೆ ಅಮಿತ್ ಶಾ ಅವರು ಭೇಟಿ ನೀಡಲಿದ್ದಾರೆ. ಈ ಬಾರಿ ಮೊದಲಿಗೆ ಅವರು ಸಭೆ ನಡೆಸಲಿದ್ದಾರೆ. ಅಲ್ಲದೆ, ಸರಣಿ ರೋಡ್‌ ಶೋಗಳನ್ನು ನಡೆಸಲಿದ್ದಾರೆ ಎಂದು ಹೇಳಿದರು.

23ರಂದು ಬೆಳಗ್ಗೆ ಯಶವಂತಪುರದಲ್ಲಿ ರೋಡ್ ಶೋ ನಡೆಯಲಿದೆ. 12.30ಕ್ಕೆ ಯಲಹಂಕದಲ್ಲಿ ಸಾರ್ವಜನಿಕ ಸಭೆಯನ್ನು ಆಯೋಜನೆ ಮಾಡಲಾಗಿದೆ. ಸಂಜೆ 4 ಗಂಟೆಗೆ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ರೋಡ್ ಶೋವನ್ನು ಏರ್ಪಡಿಸಲಾಗಿದೆ. ರಾತ್ರಿ 8 ಗಂಟೆಗೆ ಮಹದೇವಪುರದಲ್ಲಿ ರೋಡ್ ಶೋ ನಡೆಸಲಿದ್ದಾರೆ ಎಂದು ಸುನಿಲ್‌ ಕುಮಾರ್‌ ಹೇಳಿದರು.

Lok Sabha Election 2024 Modi Shah Yogi and Nadda to hold rallies in Karnataka next week

ಏ. 24ಕ್ಕೆ ಚಿಕ್ಕಮಗಳೂರು, ತುಮಕೂರು, ಹುಬ್ಬಳ್ಳಿಯಲ್ಲಿ ರೋಡ್‌ ಶೋ!

ಏಪ್ರಿಲ್‌ 24ರಂದು ಅಮಿತ್ ಶಾ ಚಿಕ್ಕಮಗಳೂರಿನಲ್ಲಿ ಸಾರ್ವಜನಿಕ ಸಭೆ, ತುಮಕೂರಿನಲ್ಲಿ ಹಿಂದುಳಿದ ವರ್ಗಗಳ ಸಮಾವೇಶ, ಹುಬ್ಬಳ್ಳಿಯಲ್ಲಿ ರೋಡ್ ಶೋ ನಡೆಸಲಿದ್ದಾರೆ ಎಂದು ಸುನಿಲ್‌ ಕುಮಾರ್‌ ತಿಳಿಸಿದರು.

ರಾಜ್ಯದಲ್ಲಿ ಯೋಗಿ ರೋಡ್‌ ಶೋ

ಏಪ್ರಿಲ್ 24 ರಂದು ರಾಜ್ಯದಲ್ಲಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು ಆಗಮಿಸಲಿದ್ದು, ವಿವಿಧ ಕಡೆ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಲಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ರೋಡ್ ಶೋ, ಮಡಿಕೇರಿಯಲ್ಲಿ ಸಾರ್ವಜನಿಕ ಸಭೆ, ಉಡುಪಿಯಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ಏ. 21ಕ್ಕೆ ನಡ್ಡಾ, 24ಕ್ಕೆ ರಾಜನಾಥ್‌ ಸಿಂಗ್

ಏಪ್ರಿಲ್ 21 ರಂದು ರಾಜ್ಯದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು 24 ರಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಏಪ್ರಿಲ್ 21 ಮತ್ತು ಏಪ್ರಿಲ್ 28 ರಂದು ಬಿಜೆಪಿ ವಿಶೇಷ ಚುನಾವಣಾ ಅಭಿಯಾನ ನಡೆಸುತ್ತಿದೆ. ” ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು” ಅಭಿಯಾನ ನಡೆಯುತ್ತದೆ. ಈಗಾಗಲೇ ಮನೆ ಮನೆಗೆ ಪ್ರಚಾರ ಕಾರ್ಯ ಆರಂಭವಾಗಿದೆ. ಮನೆಯಂಗಳದಲ್ಲಿ ಸಭೆಗಳು ಬಿರುಸಿನಿಂದ ನಡೆಯುತ್ತಿವೆ. ವಿಶೇಷ ಅಭಿಯಾನವನ್ನು ತೆಗೆದುಕೊಳ್ಳಲಾಗಿದೆ. ಮೋದಿ ಪರ ಪ್ರಚಾರವನ್ನು ತಮ್ಮ‌ ಮನೆಯ ಸುತ್ತಮುತ್ತ, ಕೆಲಸ‌ ಮಾಡುವ ಸ್ಥಳ, ವಾಕಿಂಗ್ ಜಾಗದಲ್ಲಿ ಒಂದು ಬದಿಯನ್ನು ಮೀಸಲಿಡಿ ಎಂದು ಕರೆ ಕೊಡಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ: Lok Sabha Election 2024: ಕಾಂಗ್ರೆಸ್‌ ಸೇರಿದ ಕರಡಿ ಸಂಗಣ್ಣ; ಪಕ್ಷ ಸೇರ್ಪಡೆಗೆ ಲಕ್ಷ್ಮಣ ಸವದಿ ಕಾರಣ!

ಈ ಅಭಿಯಾನಕ್ಕಾಗಿ 15 ಲಕ್ಷ ಜನ ಕೆಲವು ಗಂಟೆಗಳ ಕಾಲ ತೊಡಗಿಸಿಕೊಳ್ಳಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಮೊದಲ ಹಂತದ 14 ಕ್ಷೇತ್ರದಲ್ಲಿ 28 ಸಾವಿರ ಬೂತ್ ಬರಲಿದೆ. ಒಂದೊಂದು ಬೂತ್‌ಗಳಲ್ಲಿಯೂ ಕೆಲಸ ಮಾಡಲು ಸೂಚನೆ ನೀಡಲಾಗಿದೆ. ಮೊದಲ ಹಂತದ ಚುನಾವಣೆ ಸ್ಥಳದಲ್ಲಿ ಏಪ್ರಿಲ್ 21ರಂದು ಹಾಗೂ ಎರಡನೇ ಹಂತದ ಚುನಾವಣಾ ಸ್ಥಳದಲ್ಲಿ‌ ಏ. 28ರಂದು ಅಭಿಯಾನವನ್ನು ಮಾಡುತ್ತಿದ್ದೇವೆ ಎಂದು ಸುನಿಲ್‌ ಕುಮಾರ್‌ ಹೇಳಿದರು. ಇದೇ ವೇಳೆ ಪೋಸ್ಟರ್‌ಗಳನ್ನು ಬಿಡುಗಡೆ ಮಾಡಲಾಯಿತು.

ಅಂಜಲಿ ನಿಂಬಾಳ್ಕರ್‌ ಹೇಳಿಕೆ ಬಗ್ಗೆ ಸಿಎಂ ನಿಲುವೇನು?

ಉತ್ತರ ಕನ್ನಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್‌ ಅವರು ಕರ್ನಾಟಕದ ಕೆಲ ಭಾಗ ಮಹಾರಾಷ್ಟ್ರಕ್ಕೆ ಸೇರಬೇಕು ಎಂದಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರೇ ಇದರಲ್ಲಿ ನಿಮ್ಮ ನಿಲುವು ಏನು? ನೀವು ಹೇಳಬೇಕಿರೋದನ್ನು ಉತ್ತರ ಕನ್ನಡ ಅಭ್ಯರ್ಥಿ ಬಾಯಲ್ಲಿ ಹೇಳಿಸಿದ್ದೀರಾ? ಇನ್ನು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದಿಂದ ಬಿಜೆಪಿ ಕಾರ್ಯಕರ್ತರನ್ನು ಹೆದರಿಸುವ ಕೆಲಸ ಮಾಡಲಾಗುತ್ತಿದೆ. ಇದನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಬೇಕು. ರಾಜ್ಯದ ಹಲವೆಡೆ ಹೆಚ್ಚು ಭದ್ರತೆ ನೀಡಬೇಕು ಎಂದು ಸುನಿಲ್‌ ಕುಮಾರ್ ಮನವಿ ಮಾಡಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ದೇಶ

Sambit Patra: ಭಗವಾನ್‌ ಜಗನ್ನಾಥನೇ ಮೋದಿಯ ಭಕ್ತ ಎಂದ ಬಿಜೆಪಿ ನಾಯಕ; ಭುಗಿಲೆದ್ದ ವಿವಾದ

Sambit Patra: “ಪುರಿ ಜಗನ್ನಾಥನು ಕೂಡ ನರೇಂದ್ರ ಮೋದಿ ಅವರ ಭಕ್ತನಾಗಿದ್ದಾನೆ” ಎಂದು ಸಂಬಿತ್‌ ಪಾತ್ರಾ ನೀಡಿದ ಹೇಳಿಕೆ ಈಗ ಭಾರಿ ವಿವಾದ ಸೃಷ್ಟಿಸಿದೆ. ಸಾಮಾಜಿಕ ಜಾಲತಾಣಗಳಲ್ಲೂ ಸಂಬಿತ್‌ ಪಾತ್ರಾ ಹೇಳಿಕೆಗೆ ಭಾರಿ ವಿರೋಧ ವ್ಯಕ್ತವಾಗಿದೆ. ಪ್ರತಿಪಕ್ಷಗಳ ನಾಯಕರಂತೂ ಸಂಬಿತ್‌ ಪಾತ್ರಾ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸುತ್ತಿದ್ದಾರೆ.

VISTARANEWS.COM


on

Sambita Patra
Koo

ಭುವನೇಶ್ವರ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಕೋಟ್ಯಂತರ ಭಾರತೀಯರು ಇಷ್ಟಪಡುತ್ತಾರೆ. ಸೆಲೆಬ್ರಿಟಿಗಳಿಂದ ಹಿಡಿದು ಹಿರಿಯರವರೆಗೆ ಮೋದಿ ಅವರನ್ನು ಇಷ್ಟಪಡುತ್ತಾರೆ. ವಿದೇಶಗಳಲ್ಲೂ ಮೋದಿ ಅವರಿಗೆ ಅಭಿಮಾನಿಗಳಿದ್ದಾರೆ. ಇದೇ ಕಾರಣಕ್ಕಾಗಿ ಬಿಜೆಪಿ ನಾಯಕರು ಮೋದಿ ಅವರ ಹೆಸರು ಹೇಳಿಕೊಂಡು ಮತ ಕೇಳುತ್ತಾರೆ. ಆದರೆ, ಬಿಜೆಪಿ ನಾಯಕ, ಒಡಿಶಾದ ಪುರಿ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಸಂಬಿತ್‌ ಪಾತ್ರಾ (Sambit Patra) ಅವರು ಮೋದಿ ಅವರನ್ನು ಹೊಗಳುವ ಭರದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. “ಪುರಿ ಜಗನ್ನಾಥನು (Lord Jagannath) ನರೇಂದ್ರ ಮೋದಿ ಅವರ ಭಕ್ತನಾಗಿದ್ದಾನೆ” ಎಂದು ಸಂಬಿತ್‌ ಪಾತ್ರಾ ನೀಡಿದ ಹೇಳಿಕೆ ಈಗ ಭಾರಿ ವಿವಾದ ಸೃಷ್ಟಿಸಿದೆ.

ಸಂಬಿತ್‌ ಪಾತ್ರಾ ಹೇಳಿದ್ದೇನು?

“ಪ್ರಧಾನಿ ನರೇಂದ್ರ ಮೋದಿ ಅವರನ್ನು ನೋಡಲು ಲಕ್ಷಾಂತರ ಜನ ಸೇರಿದ್ದಾರೆ. ಜಗನ್ನಾಥನೇ ನರೇಂದ್ರ ಮೋದಿ ಅವರ ಭಕ್ತನಾಗಿದ್ದಾನೆ. ನಾವೆಲ್ಲರೂ ಮೋದಿ ಅವರ ಕುಟುಂಬಸ್ಥರು. ನಾನು ನನ್ನ ಭಾವನೆಗಳನ್ನು ಹಿಡಿದಿಟ್ಟುಕೊಳ್ಳಲು ಆಗುತ್ತಿಲ್ಲ. ಇದು ಒಡಿಶಾದ ಎಲ್ಲ ಜನರಿಗೂ ಐತಿಹಾಸಿಕ ದಿನವಾಗಿದೆ” ಎಂದು ಸುದ್ದಿಗಾರರೊಂದಿಗೆ ಮಾತನಾಡುವಾಗ ಸಂಬಿತ್‌ ಪಾತ್ರ ಹೇಳಿದ್ದರು. ನರೇಂದ್ರ ಮೋದಿ ಅವರು ಪುರಿ ಜಗನ್ನಾಥ ದೇವಾಲಯಕ್ಕೆ ತೆರಳಿ, ವಿಶೇಷ ಪ್ರಾರ್ಥನೆ ಸಲ್ಲಿಸಿದ ಬಳಿಕ ಸಂಬಿತ್‌ ಪಾತ್ರಾ ಇಂತಹ ಹೇಳಿಕೆ ನೀಡಿದ್ದಾರೆ. ವಿವಾದದ ಬಳಿಕ ಬಿಜೆಪಿ ನಾಯಕರು ಪ್ರತಿಕ್ರಿಯಿಸಿದ್ದು, ಇದು ಬಾಯ್ತಪ್ಪಿನಿಂದ ನೀಡಿದ ಹೇಳಿಕೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಕುಟುಕಿದ ನವೀನ್‌ ಪಟ್ನಾಯಕ್‌

ಸಂಬಿತ್‌ ಪಾತ್ರ ಹೇಳಿಕೆಗೆ ಒಡಿಶಾ ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌ ಅವರು ತಿರುಗೇಟು ನೀಡಿದ್ದಾರೆ. “ಭಗವಾನ್‌ ಶ್ರೀ ಜಗನ್ನಾಥನು ಇಡೀ ಸೃಷ್ಟಿಗೆ ದೇವರಾಗಿದ್ದಾನೆ. ದೇವರನ್ನೇ ಮನುಷ್ಯನ ಭಕ್ತ ಎಂದು ಕರೆದಿರುವುದು ಅಪಸವ್ಯ ಹಾಗೂ ದೇವರಿಗೆ ಮಾಡಿದ ಅವಮಾನವಾಗಿದೆ. ಇದು ಒಡಿಶಾ ಹಾಗೂ ಜಗತ್ತಿನಾದ್ಯಂತ ಇರುವ ಜಗನ್ನಾಥನ ಭಕ್ತರ ಭಾವನೆಗಳಿಗೆ ಧಕ್ಕೆ ತರುವ ಹೇಳಿಕೆಯಾಗಿದೆ” ಎಂದು ಟೀಕಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲೂ ಸಂಬಿತ್‌ ಪಾತ್ರಾ ಹೇಳಿಕೆಗೆ ಭಾರಿ ವಿರೋಧ ವ್ಯಕ್ತವಾಗಿದೆ. ಪ್ರತಿಪಕ್ಷಗಳ ನಾಯಕರಂತೂ ಸಂಬಿತ್‌ ಪಾತ್ರಾ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸುತ್ತಿದ್ದಾರೆ.

“ಜಗನ್ನಾಥನು ಸರ್ವಶ್ರೇಷ್ಠನಾಗಿದ್ದು, ಒಡಿಶಾದ ಅಸ್ಮಿತೆಯಾಗಿದ್ದಾನೆ. ಇಂತಹ ಜಗನ್ನಾಥನ ಬಗ್ಗೆ ಹೇಳಿಕೆ ಕೊಡುವುದು, ಮನುಷ್ಯರೊಬ್ಬರ ಭಕ್ತ ಎಂದು ಹೇಳುವುದು ಖಂಡನೀಯವಾಗಿದೆ. ಬಿಜೆಪಿ ನಾಯಕರೂ ಆದ ಪುರಿ ಲೋಕಸಭೆ ಕ್ಷೇತ್ರದ ಅಭ್ಯರ್ಥಿಯು ಹೀಗೆ ಹೇಳಿರುವುದನ್ನು ನಾನು ಖಂಡಿಸುತ್ತೇನೆ. ರಾಜಕೀಯ ಲಾಭಕ್ಕಾಗಿ ದೇವರನ್ನು ಬಳಸಿಕೊಳ್ಳುವುದು, ಹೀನವಾದ ಹೇಳಿಕೆ ನೀಡುವುದನ್ನು ಬಿಜೆಪಿ ನಾಯಕರು ಬಿಡಬೇಕು. ಒಡಿಶಾದ ಜನರು ದೀರ್ಘ ಅವಧಿಗೆ ಇದನ್ನು ನೆನಪಿನಲ್ಲಿ ಇಟ್ಟುಕೊಳ್ಳುತ್ತಾರೆ ಹಾಗೂ ಎಂದಿಗೂ ಕ್ಷಮಿಸಲ್ಲ” ಎಂದು ನವೀನ್‌ ಪಟ್ನಾಯಕ್‌ ಪೋಸ್ಟ್‌ ಮಾಡಿದ್ದಾರೆ.

ಇದನ್ನೂ ಓದಿ: Arvind Kejriwal: “ತಾಕತ್‌ ಇದ್ರೆ ಅರೆಸ್ಟ್‌ ಮಾಡಿ…”; ಪ್ರಧಾನಿ ಮೋದಿಗೆ ಕೇಜ್ರಿವಾಲ್‌ ಓಪನ್‌ ಚಾಲೆಂಜ್‌

Continue Reading

Lok Sabha Election 2024

101ನೇ ವಯಸ್ಸಿನಲ್ಲೂ ‘ಕರ್ತವ್ಯ’ ಮರೆಯದೆ ವೋಟ್‌ ಮಾಡಿದ ನಿವೃತ್ತ ಯೋಧ; ಸೆಲ್ಯೂಟ್‌ ಎಂದರು ಜನ

ಮುಂಬೈನ ರಹೇಜಾ ಕಾಲೇಜಿಗೆ ತೆರಳಿದ 101 ವರ್ಷದ ನಿವೃತ್ತ ಯೋಧ ಕಾರ್ಖನೀಸ್‌ ಅವರು ಮತದಾನ ಮಾಡುವ ಮೂಲಕ ಯುವಕರು ಸೇರಿ ಎಲ್ಲರಿಗೂ ಮಾದರಿ ಎನಿಸಿದ್ದಾರೆ. ಇವರು ಮತದಾನ ಮಾಡಲು ತೆರಳಿದ ಫೋಟೊವನ್ನು ಮುಂಬೈ ಪೊಲೀಸರು ಪೋಸ್ಟ್‌ ಮಾಡಿದ್ದಾರೆ. ಸಾವಿರಾರು ಜನ ಪೋಸ್ಟ್‌ಗೆ ಲೈಕ್‌ ಒತ್ತುವ ಜತೆಗೆ, ಯೋಧರ ಉತ್ಸಾಹ, ಕರ್ತವ್ಯ ಪ್ರಜ್ಞೆಯನ್ನು ಕೊಂಡಾಡಿದ್ದಾರೆ.

VISTARANEWS.COM


on

Army Officer
Koo

ಮುಂಬೈ: ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ 49 ಕ್ಷೇತ್ರಗಳಲ್ಲಿ ಸೋಮವಾರ (ಮೇ 20) ಐದನೇ ಹಂತದ ಮತದಾನ (Lok Sabha Election) ನಡೆದಿದೆ. ಬಹುತೇಕ ಕಡೆ ಶಾಂತಿಯುತವಾಗಿಯೇ ಮತದಾನ ನಡೆದಿದೆ. ಮೂರನೇ ಹಂತದಲ್ಲಿ ಕೇವಲ ಶೇ.57.5ರಷ್ಟು ಮತದಾನ (Voter Turnout) ದಾಖಲಾಗಿದೆ. ಇದರ ಮಧ್ಯೆಯೇ, ಮುಂಬೈನಲ್ಲಿ 101ನೇ ವಯಸ್ಸಿನಲ್ಲೂ ನಿವೃತ್ತ ಯೋಧರೊಬ್ಬರು (Retired Army Officer) ಮತಗಟ್ಟೆಗೆ ತೆರಳಿ ಮತದಾನ ಮಾಡುವ ಮೂಲಕ ಯುವಕರು ಸೇರಿ ಎಲ್ಲರಿಗೂ ಮಾದರಿ ಎನಿಸಿದ್ದಾರೆ. ಅವರು ಮತದಾನ ಮಾಡಿದ ಫೋಟೊಗಳು ಈಗ ವೈರಲ್‌ ಆಗಿವೆ.

ಮುಂಬೈ ಪೊಲೀಸರು ನಿವೃತ್ತ ಯೋಧ ಮತದಾನ ಮಾಡಿದ ಫೋಟೊವನ್ನು ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ ಮಾಡಿದ್ದಾರೆ. “ನೀವು ಮತದಾನವನ್ನು ತಪ್ಪಿಸಿಕೊಳ್ಳಲು 101 ಕಾರಣಗಳನ್ನು ಕೊಡಬಹುದು. ಆದರೆ, ನಿವೃತ್ತ ಯೋಧರಾದ ಕಾರ್ಖನೀಸ್‌ ಅವರು 101ನೇ ವಯಸ್ಸಿನಲ್ಲೂ ಮತಗಟ್ಟೆಗೆ ತೆರಳಿ ಮತದಾನ ಮಾಡುವ ಮೂಲಕ ಮಾದರಿ ಎನಿಸಿದ್ದಾರೆ. ಇವರು ಮುಂಬೈನ ರಹೇಜಾ ಕಾಲೇಜಿಗೆ ತೆರಳಿ ಮತದಾನ ಮಾಡಿದ್ದು, ನಮ್ಮ ಸಿಬ್ಬಂದಿಯು ಅವರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಂಡರು” ಎಂಬುದಾಗಿ ಪೋಸ್ಟ್‌ ಮಾಡಿದ್ದಾರೆ.

ನಿವೃತ್ತ ಯೋಧರ ಕರ್ತವ್ಯಪ್ರಜ್ಞೆಗೆ ಜಾಲತಾಣಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. “ಇಳಿ ವಯಸ್ಸಿನಲ್ಲೂ ಮತದಾನ ಮಾಡಿದ ನಿವೃತ್ತ ಯೋಧನಿಗೆ ನನ್ನ ಸೆಲ್ಯೂಟ್‌” ಎಂದು ಒಬ್ಬರು ಪ್ರತಿಕ್ರಿಯಿಸಿದ್ದಾರೆ. “ನಿಜವಾಗಿಯೂ ಇದು ಸ್ಫೂರ್ತಿದಾಯಕ. 98 ವರ್ಷದ ನನ್ನ‌ ಅಜ್ಜಿಯು ಕೂಡ ಇಂದು ಮತ ಚಲಾಯಿಸಿದ್ದಾರೆ. ಇನ್ನು ಯೋಧನಿಗೆ ಸಹಾಯ ಮಾಡಿದ ಪೊಲೀಸ್‌ ಸಿಬ್ಬಂದಿಗೂ ಧನ್ಯವಾದಗಳು” ಎಂದು ಮತ್ತೊಬ್ಬರು ಕಮೆಂಟ್‌ ಮಾಡಿದ್ದಾರೆ. ಇನ್‌ಸ್ಟಾಗ್ರಾಂ ಪೋಸ್ಟ್‌ಅನ್ನು ಸಾವಿರಾರು ಜನ ಲೈಕ್‌ ಮಾಡಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಐದನೇ ಹಂತದಲ್ಲಿ ಹೆಚ್ಚಿನ ಮತದಾನ ದಾಖಲಾಗಿದೆ. ರಾಜ್ಯದಲ್ಲಿ ಕೆಲವೆಡೆ ಹಿಂಸಾಚಾರ ಪ್ರಕರಣಗಳು ಸುದ್ದಿಯಾಗಿದ್ದರೂ ಶೇ.73ರಷ್ಟು ಮತದಾನ ದಾಖಲಾಗಿದೆ. ಇನ್ನು ಲಡಾಕ್‌ನಲ್ಲಿ ಶೇ.67.15, ಜಾರ್ಖಂಡ್‌ನಲ್ಲಿ ಶೇ.61.90ರಷ್ಟು ಮತದಾನ ನಡೆದಿದೆ. ಇನ್ನು ಮಹಾರಾಷ್ಟ್ರದಲ್ಲಿ ಕೇವಲ ಶೇ.48.66ರಷ್ಟು ಮತದಾನ ದಾಖಲಾಗಿದ್ದು, ಐದನೇ ಹಂತದಲ್ಲಿ ಕನಿಷ್ಠ ಮತದಾನ ನಡೆದ ರಾಜ್ಯ ಎನಿಸಿದೆ. ನಾಲ್ಕನೇ ಹಂತದಲ್ಲೂ ಮಹಾರಾಷ್ಟ್ರದಲ್ಲಿ ಕನಿಷ್ಠ ಮತದಾನ ದಾಖಲಾಗಿತ್ತು.

ಉತ್ತರ ಪ್ರದೇಶದ 14, ಮಹಾರಾಷ್ಟ್ರದ 13, ಪಶ್ಚಿಮ ಬಂಗಾಳ 7, ಬಿಹಾರ ಹಾಗೂ ಒಡಿಶಾದಲ್ಲಿ ತಲಾ 5, ಜಾರ್ಖಂಡ್‌ನಲ್ಲಿ 3, ಜಮ್ಮು ಕಾಶ್ಮೀರ ಮತ್ತು ಲಡಾಕ್‌ನ ತಲಾ 1 ಕ್ಷೇತ್ರಗಳಲ್ಲಿ ಮತದಾನ ನಡೆದಿದೆ. ಕೇಂದ್ರ ಸಚಿವರಾದ ರಾಜನಾಥ್‌ ಸಿಂಗ್‌ (ಲಖನೌ), ಸ್ಮೃತಿ ಇರಾನಿ (ಅಮೇಥಿ), ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (ರಾಯ್‌ಬರೇಲಿ), ಜಮ್ಮು-ಕಾಶ್ಮೀರ ಮಾಜಿ ಸಿಎಂ ಒಮರ್‌ ಅಬ್ದುಲ್ಲಾ (ಬಾರಾಮುಲ್ಲಾ) ಸೇರಿ ಹಲವು ಗಣ್ಯರ ಭವಿಷ್ಯವು ಮತಯಂತ್ರಗಳಲ್ಲಿ ಭದ್ರವಾಗಿದೆ.

ಇದನ್ನೂ ಓದಿ: Postal Ballot: ಅನಾರೋಗ್ಯದ ಕಾರಣ ಅಂಚೆ ಮತದಾನ ಕೋರಿ 78ರ ಅಜ್ಜಿ ಅರ್ಜಿ; ಬೇಡವೆಂದ ಸುಪ್ರೀಂ!

Continue Reading

ದೇಶ

Postal Ballot: ಅನಾರೋಗ್ಯದ ಕಾರಣ ಅಂಚೆ ಮತದಾನ ಕೋರಿ 78ರ ಅಜ್ಜಿ ಅರ್ಜಿ; ಬೇಡವೆಂದ ಸುಪ್ರೀಂ!

Postal Ballot: ಛತ್ತೀಸ್‌ಗಢದ ಬಿಲಾಸ್‌ಪುರ ನಿವಾಸಿಯಾದ ಸರಳ ಶ್ರೀವಾಸ್ತವ ಪರ ಹಿರಿಯ ವಕೀಲ ಗೌರವ್‌ ಅಗರ್ವಾಲ್‌ ವಾದ ಮಂಡಿಸಿದರು. “ಮಹಿಳೆಯು ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದಾರೆ. ಚುನಾವಣೆ ಆಯೋಗದ ನಿಯಮಗಳ ಪ್ರಕಾರ ಮಹಿಳೆಯು ಅಂಚೆ ಮತದಾನ ಮಾಡಲು ಅರ್ಹರು” ಎಂದು ಹೇಳಿದರು.

VISTARANEWS.COM


on

Postal Ballot
Koo

ನವದೆಹಲಿ: ಅನಾರೋಗ್ಯದಿಂದ ಹಾಸಿಗೆ ಹಿಡಿದಿರುವ ಕಾರಣ ಲೋಕಸಭೆ ಚುನಾವಣೆಯಲ್ಲಿ ಹಕ್ಕು ಚಲಾಯಿಸಲು ಅಂಚೆ ಮತದಾನಕ್ಕೆ (Postal Ballot) ಅವಕಾಶ ಮಾಡಿಕೊಡಬೇಕು ಎಂದು ಛತ್ತೀಸ್‌ಗಢದ 78 ವರ್ಷದ ಮಹಿಳೆಯೊಬ್ಬರು ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ (Supreme Court) ನಿರಾಕರಿಸಿದೆ. ಇದರಿಂದಾಗಿ, ಅನಾರೋಗ್ಯವಿದ್ದರೂ ಚುನಾವಣೆಯಲ್ಲಿ ಮತದಾನ ಮಾಡಬೇಕು ಎಂಬ ಹಂಬಲ ಹೊಂದಿದ್ದ ಸರಳ ಶ್ರೀವಾಸ್ತವ ಎಂಬ ಅಜ್ಜಿಗೆ ನಿರಾಸೆಯಾದಂತಾಗಿದೆ.

ಛತ್ತೀಸ್‌ಗಢದ ಬಿಲಾಸ್‌ಪುರ ನಿವಾಸಿಯಾದ ಸರಳ ಶ್ರೀವಾಸ್ತವ ಪರ ಹಿರಿಯ ವಕೀಲ ಗೌರವ್‌ ಅಗರ್ವಾಲ್‌ ವಾದ ಮಂಡಿಸಿದರು. “ಮಹಿಳೆಯು ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದಾರೆ. ಚುನಾವಣೆ ಆಯೋಗದ ನಿಯಮಗಳ ಪ್ರಕಾರ ಮಹಿಳೆಯು ಅಂಚೆ ಮತದಾನ ಮಾಡಲು ಅರ್ಹರು” ಎಂದು ಹೇಳಿದರು. ಆದರೆ, ನ್ಯಾಯಮೂರ್ತಿಗಳಾದ ಬೆಲಾ ಎಂ. ತ್ರಿವೇದಿ ಹಾಗೂ ಜಸ್ಟಿಸ್‌ ಪಂಕಜ್‌ ಮಿತ್ತಲ್‌ ಅವರಿದ್ದ ಪೀಠವು ಅರ್ಜಿಯನ್ನು ತಿರಸ್ಕರಿಸಿತು.

“ಬಿಲಾಸ್‌ಪುರದಲ್ಲಿ ಮೇ 7ರಂದೇ ಮತದಾನ ಮುಕ್ತಾಯಗೊಂಡಿದೆ. ಮತದಾನ ಮುಗಿದು ಹಲವು ದಿನಗಳ ನಂತರ ಅಂಚೆ ಮತದಾನಕ್ಕೆ ಅವಕಾಶ ನೀಡಬೇಕು ಎಂದರೆ ಆಗುವುದಿಲ್ಲ. ಇಂತಹ ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್‌ಗೆ ಮೊದಲೇ ಅರ್ಜಿ ಸಲ್ಲಿಸಬೇಕು. ಅಂಚೆ ಮತದಾನಕ್ಕೆ ಹಲವು ಪ್ರಕ್ರಿಯೆಗಳಿವೆ. ಅವುಗಳೆಲ್ಲವೂ ಸಮಯಕ್ಕೆ ಅನುಸಾರವಾಗಿ ಆಗಬೇಕು. ಅಷ್ಟಕ್ಕೂ, ಭಾರತದಲ್ಲಿ ಪ್ರತಿಯೊಬ್ಬರಿಗೂ ಮನೆಯಲ್ಲಿ ಕುಳಿತೇ ಮತದಾನ ಮಾಡುವ ಉಮೇದಿ ಇದೆ” ಎಂದು ನ್ಯಾಯಪೀಠವು ಅಸಮಾಧಾನ ವ್ಯಕ್ತಪಡಿಸಿತು.

ಸರಳ ಶ್ರೀವಾಸ್ತವ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದಾರೆ. ಅವರು ಹಾಸಿಗೆಯಲ್ಲೇ ಚಿಕಿತ್ಸೆ ಪಡೆಯುತ್ತಿರುವ ಕಾರಣ ಅಂಚೆ ಮತದಾನದ ಮೂಲಕವಾದರೂ ಹಕ್ಕು ಚಲಾಯಿಸಬೇಕು ಎಂದು ಬಯಸಿದ್ದರು. ಇದೇ ಕಾರಣಕ್ಕಾಗಿ ಅವರು ಏಪ್ರಿಲ್‌ 29ರಂದೇ ಛತ್ತೀಸ್‌ಗಢ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಮೇ 6ರಂದು ವಿಚಾರಣೆ ನಡೆಸಿದ್ದ ಹೈಕೋರ್ಟ್‌, ಮಹಿಳೆಯ ಅರ್ಜಿಯನ್ನು ತಿರಸ್ಕರಿಸಿತ್ತು. ಈಗ ಸುಪ್ರೀಂ ಕೋರ್ಟ್‌ ಕೂಡ ಅರ್ಜಿಯನ್ನು ತಿರಸ್ಕರಿಸಿದೆ. ಒಟ್ಟಿನಲ್ಲಿ, ಯುವಕರೇ ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡದ, ಜಾಗೃತಿ ಮೂಡಿಸಿದರೂ ಕೇಳದಂತಹ ಸಂದರ್ಭದಲ್ಲಿ, ಮನೆಯಿಂದಲಾದರೂ ಹಕ್ಕು ಚಲಾಯಿಸಬೇಕು ಎಂದು ಸುಪ್ರೀಂ ಕೋರ್ಟ್‌ ಮೊರೆ ಹೋದ ಅಜ್ಜಿಯ ಆಶಯವಂತೂ ಒಳ್ಳೆಯದೇ ಆಗಿತ್ತು ಎಂಬುದರಲ್ಲಿ ಎರಡು ಮಾತಿಲ್ಲ.

ಇದನ್ನೂ ಓದಿ: Legislative Council Election: ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ದಿನಾಂಕ ಫಿಕ್ಸ್;‌ ಜೂನ್‌ 13ಕ್ಕೆ ಮತದಾನ

Continue Reading

ದೇಶ

Lok Sabha Election: 5ನೇ ಹಂತದಲ್ಲಿ ಕೇವಲ ಶೇ.57.5ರಷ್ಟು ಮತದಾನ; ಯಾವ ರಾಜ್ಯದಲ್ಲಿ ಹೆಚ್ಚು?

Lok Sabha Election: ಉತ್ತರ ಪ್ರದೇಶದ 14, ಮಹಾರಾಷ್ಟ್ರದ 13, ಪಶ್ಚಿಮ ಬಂಗಾಳ 7, ಬಿಹಾರ ಹಾಗೂ ಒಡಿಶಾದಲ್ಲಿ ತಲಾ 5, ಜಾರ್ಖಂಡ್‌ನಲ್ಲಿ 3, ಜಮ್ಮು ಕಾಶ್ಮೀರ ಮತ್ತು ಲಡಾಕ್‌ನ ತಲಾ 1 ಕ್ಷೇತ್ರಗಳಲ್ಲಿ ಮತದಾನ ನಡೆದಿದೆ. ಬಹುತೇಕ ಕಡೆ ಶಾಂತಿಯುತವಾಗಿ ಮತದಾನ ನಡೆದಿದೆ. ಪಶ್ಚಿಮ ಬಂಗಾಳದ ಕೆಲವೆಡೆ ಮಾತ್ರ ಗಲಾಟೆ ನಡೆದಿವೆ ಎಂದು ತಿಳಿದುಬಂದಿದೆ.

VISTARANEWS.COM


on

Lok Sabha Election
Koo

ನವದೆಹಲಿ: ಲೋಕಸಭೆ ಚುನಾವಣೆಯ (Lok Sabha Election 2024) ಐದನೇ ಹಂತದ ಮತದಾನವು ಸೋಮವಾರ (ಮೇ 20) ಶಾಂತಿಯುತವಾಗಿ ನಡೆದಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ 49 ಕ್ಷೇತ್ರಗಳಲ್ಲಿ ಶೇ.57.5ರಷ್ಟು ಮತದಾನ ದಾಖಲಾಗಿದೆ. ಕಳೆದ ನಾಲ್ಕು ಹಂತದ ಮತದಾನದ ವೇಳೆ ಹೆಚ್ಚಿನ ಮತದಾನ ದಾಖಲಾಗಿತ್ತು. ಆದರೆ, ಐದನೇ ಹಂತದಲ್ಲಿ ಮತದಾನ ಪ್ರಮಾಣ ಭಾರಿ ಇಳಿಕೆಯಾಗಿದೆ. ಈ ಕುರಿತು ಚುನಾವಣೆ ಆಯೋಗ ಅಂಕಿ-ಅಂಶ ಬಿಡುಗಡೆ ಮಾಡಿದಾಗಲೇ ನಿಖರ ಮಾಹಿತಿ ಲಭ್ಯವಾಗಲಿದೆ.

ಪಶ್ಚಿಮ ಬಂಗಾಳದಲ್ಲಿ ಹೆಚ್ಚು

ಪಶ್ಚಿಮ ಬಂಗಾಳದಲ್ಲಿ ಐದನೇ ಹಂತದಲ್ಲಿ ಹೆಚ್ಚಿನ ಮತದಾನ ದಾಖಲಾಗಿದೆ. ರಾಜ್ಯದಲ್ಲಿ ಕೆಲವೆಡೆ ಹಿಂಸಾಚಾರ ಪ್ರಕರಣಗಳು ಸುದ್ದಿಯಾಗಿದ್ದರೂ ಶೇ.73ರಷ್ಟು ಮತದಾನ ದಾಖಲಾಗಿದೆ. ಇನ್ನು ಲಡಾಕ್‌ನಲ್ಲಿ ಶೇ.67.15, ಜಾರ್ಖಂಡ್‌ನಲ್ಲಿ ಶೇ.61.90ರಷ್ಟು ಮತದಾನ ನಡೆದಿದೆ. ಇನ್ನು ಮಹಾರಾಷ್ಟ್ರದಲ್ಲಿ ಕೇವಲ ಶೇ.48.66ರಷ್ಟು ಮತದಾನ ದಾಖಲಾಗಿದ್ದು, ಐದನೇ ಹಂತದಲ್ಲಿ ಕನಿಷ್ಠ ಮತದಾನ ನಡೆದ ರಾಜ್ಯ ಎನಿಸಿದೆ. ನಾಲ್ಕನೇ ಹಂತದಲ್ಲೂ ಮಹಾರಾಷ್ಟ್ರದಲ್ಲಿ ಕನಿಷ್ಠ ಮತದಾನ ದಾಖಲಾಗಿತ್ತು.

ಉತ್ತರ ಪ್ರದೇಶದ 14, ಮಹಾರಾಷ್ಟ್ರದ 13, ಪಶ್ಚಿಮ ಬಂಗಾಳ 7, ಬಿಹಾರ ಹಾಗೂ ಒಡಿಶಾದಲ್ಲಿ ತಲಾ 5, ಜಾರ್ಖಂಡ್‌ನಲ್ಲಿ 3, ಜಮ್ಮು ಕಾಶ್ಮೀರ ಮತ್ತು ಲಡಾಕ್‌ನ ತಲಾ 1 ಕ್ಷೇತ್ರಗಳಲ್ಲಿ ಮತದಾನ ನಡೆದಿದೆ. ಕೇಂದ್ರ ಸಚಿವರಾದ ರಾಜನಾಥ್‌ ಸಿಂಗ್‌ (ಲಖನೌ), ಸ್ಮೃತಿ ಇರಾನಿ (ಅಮೇಥಿ), ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (ರಾಯ್‌ಬರೇಲಿ), ಜಮ್ಮು-ಕಾಶ್ಮೀರ ಮಾಜಿ ಸಿಎಂ ಒಮರ್‌ ಅಬ್ದುಲ್ಲಾ (ಬಾರಾಮುಲ್ಲಾ) ಸೇರಿ ಹಲವು ಗಣ್ಯರ ಭವಿಷ್ಯವು ಮತಯಂತ್ರಗಳಲ್ಲಿ ಭದ್ರವಾಗಿದೆ.

ನಾಲ್ಕನೇ ಹಂತದಲ್ಲಿ ಶೇ.69.16ರಷ್ಟು ಮತದಾನ ದಾಖಲಾಗಿತ್ತು. ಮೊದಲ ಹಂತದಲ್ಲಿ ನಡೆದ ಮತದಾನ ಪ್ರಮಾಣವು ಶೇ.66.14ರಷ್ಟಿದ್ದರೆ, ಎರಡನೇ ಹಂತದಲ್ಲಿ ಶೇ.66.71ರಷ್ಟು ಮತದಾನ ದಾಖಲಾಗಿತ್ತು. ಮೂರನೇ ಹಂತದಲ್ಲಿ ಒಟ್ಟು ಶೇ.65.68ರಷ್ಟು ಮತದಾನ ದಾಖಲಾಗಿತ್ತು. ಮೂರೂ ಹಂತಗಳಲ್ಲಿ 2019ಕ್ಕಿಂತ ಕಡಿಮೆ ಮತದಾನ ದಾಖಲಾಗಿದ್ದು ಚರ್ಚೆಗೆ ಗ್ರಾಸವಾಗಿತ್ತು. ಆದರೀಗ, 4ನೇ ಹಂತದಲ್ಲಿ ಶೇ.69.16ರಷ್ಟು ಮತದಾನ ದಾಖಲಾಗಿದ್ದು, ಕಳೆದ ಬಾರಿಗಿಂತ ಕೇವಲ 0.40ರಷ್ಟು ಕಡಿಮೆಯಾಗಿದೆ. ಹಾಗಾಗಿ, ನಾಲ್ಕನೇ ಹಂತದ ಮತದಾನವು ಸಕಾರಾತ್ಮಕ ಬೆಳವಣಿಗೆ ಎಂದು ಹೇಳಲಾಗುತ್ತಿದೆ.

ಐದನೇ ಹಂತದ ಮತದಾನದೊಂದಿಗೆ ದೇಶಾದ್ಯಂತ ಇದುವರೆಗೆ ಒಟ್ಟು 428 ಕ್ಷೇತ್ರಗಳಲ್ಲಿ ಚುನಾವಣೆ ನಡೆದಂತಾಗಿದೆ. ಉಳಿದ ಕ್ಷೇತ್ರಗಳಲ್ಲಿ ಐದು ಹಾಗೂ ಆರನೇ ಹಂತದಲ್ಲಿ ಮತದಾನ ನಡೆಯಲಿದೆ. ಜೂನ್‌ 1ರಂದು ಚುನಾವಣೆ ಮುಗಿಯಲಿದ್ದು, ಜೂನ್‌ 4ರಂದು ಫಲಿತಾಂಶ ಪ್ರಕಟವಾಗಲಿದೆ. ಆಂಧ್ರಪ್ರದೇಶ ವಿಧಾನಸಭೆ ಚುನಾವಣೆಯೂ ನಡೆದಿದ್ದು, ಜೂನ್‌ 4ರಂದೇ ಫಲಿತಾಂಶ ತಿಳಿಯಲಿದೆ.

ಇದನ್ನೂ ಓದಿ: Narendra Modi: ಮುಸ್ಲಿಮರ ವೋಟಿಗಾಗಿ ಮಮತಾ ಬ್ಯಾನರ್ಜಿ ಹಿಂದು ಸಂಘಟನೆಗಳ ವಿರುದ್ಧ ಆರೋಪ; ಮೋದಿ ಟೀಕೆ

Continue Reading
Advertisement
2nd PUC Exam 2 Result tomorrow
ಶಿಕ್ಷಣ31 mins ago

2nd PUC Exam 2 Result: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2ರ ಫಲಿತಾಂಶ ಇಂದು; ಸಿಇಟಿ ಫಲಿತಾಂಶ ಯಾವಾಗ?

Karnataka Weather Forecast
ಮಳೆ59 mins ago

Karnataka Weather : ಗರಿಷ್ಠ ತಾಪಮಾನ ಇಳಿಕೆ; ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

Tea Tips
ಆರೋಗ್ಯ59 mins ago

Tea Tips: ಹಾಲಿನ ಚಹಾ ಬದಲು ಬ್ಲ್ಯಾಕ್‌ ಟೀ ಕುಡಿಯಿರಿ!

Sambita Patra
ದೇಶ1 hour ago

Sambit Patra: ಭಗವಾನ್‌ ಜಗನ್ನಾಥನೇ ಮೋದಿಯ ಭಕ್ತ ಎಂದ ಬಿಜೆಪಿ ನಾಯಕ; ಭುಗಿಲೆದ್ದ ವಿವಾದ

Anti Terrorism Day
ದೇಶ2 hours ago

Anti Terrorism Day: ಇಂದು ಭಯೋತ್ಪಾದನಾ ವಿರೋಧಿ ದಿನ; ಏನು ಈ ದಿನದ ಹಿನ್ನೆಲೆ?

Dina Bhavishya
ಭವಿಷ್ಯ2 hours ago

Dina Bhavishya : ಹೂಡಿಕೆ ವ್ಯವಹಾರದಲ್ಲಿ ಹೆಚ್ಚು ಲಾಭ; ಈ ರಾಶಿಯವರಿಗೆ ಖುಲಾಯಿಸಲಿದೆ ಅದೃಷ್ಟ

Prajwal Revanna Case
ಕರ್ನಾಟಕ7 hours ago

Prajwal Revanna Case: ಪ್ರಜ್ವಲ್ ರೇವಣ್ಣ ಪಾಸ್‌ ಪೋರ್ಟ್ ರದ್ದು ಮಾಡಲು ವಿದೇಶಾಂಗ ಇಲಾಖೆಗೆ ಎಸ್‌ಐಟಿ ಪತ್ರ

Mobile
ದೇಶ8 hours ago

ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೊ ನೋಡಿ 15 ವರ್ಷದ ಅಕ್ಕನನ್ನೇ ಗರ್ಭಿಣಿ ಮಾಡಿದ 13 ವರ್ಷದ ಬಾಲಕ!

Army Officer
Lok Sabha Election 20248 hours ago

101ನೇ ವಯಸ್ಸಿನಲ್ಲೂ ‘ಕರ್ತವ್ಯ’ ಮರೆಯದೆ ವೋಟ್‌ ಮಾಡಿದ ನಿವೃತ್ತ ಯೋಧ; ಸೆಲ್ಯೂಟ್‌ ಎಂದರು ಜನ

Congress Guarantee
ಪ್ರಮುಖ ಸುದ್ದಿ8 hours ago

Congress Guarantee: ಗ್ಯಾರಂಟಿ ಯೋಜನೆಗಳಿಗೆ ಒಂದು ವರ್ಷಕ್ಕೆ ಸರ್ಕಾರ ಮಾಡಿದ ಖರ್ಚು ಎಷ್ಟು ಸಾವಿರ ಕೋಟಿ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ18 hours ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ2 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ3 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ5 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು5 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌