Lok sabha election: ತಮಿಳುನಾಡಿನಲ್ಲಿ ಬಿಜೆಪಿ ಆಗಲಿದೆ 2ನೇ ಅತಿದೊಡ್ಡ ಪಕ್ಷ; ಸಮೀಕ್ಷೆ ಹೇಳೋದಿಷ್ಟು - Vistara News

Lok Sabha Election 2024

Lok sabha election: ತಮಿಳುನಾಡಿನಲ್ಲಿ ಬಿಜೆಪಿ ಆಗಲಿದೆ 2ನೇ ಅತಿದೊಡ್ಡ ಪಕ್ಷ; ಸಮೀಕ್ಷೆ ಹೇಳೋದಿಷ್ಟು

Loksabha election-2024: ಇತಿಹಾಸದಲ್ಲೇ ತಮಿಳುನಾಡಿನಲ್ಲಿ ಖಾತೆ ತೆರೆಯದ ಬಿಜೆಪಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಎರಡನೇ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎಂಬುದಾಗಿ ಸಮೀಕ್ಷೆಯೊಂದು ಹೇಳಿದ್ದು ಈಗ ಸಾಕಷ್ಟು ಕುತೂಹಲ ಮೂಡಿಸಿದೆ.

VISTARANEWS.COM


on

Lok Sabha election-2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ತಮಿಳುನಾಡು: ಲೋಕಸಭಾ ಚುನಾವಣೆಯಲ್ಲಿ (Lok sabha election-2024) ಈ ಬಾರಿ ತಮಿಳುನಾಡಿನ (tamilnadu) ಕೊಯಮುತ್ತೂರಿನಲ್ಲಿ (coimbatore) ಕಣಕ್ಕೆ ಇಳಿದಿರುವ ಕೆ. ಅಣ್ಣಾಮಲೈ (K. Annamalai) ಅವರ ನೇತೃತ್ವದಲ್ಲಿ ರಾಜ್ಯದಲ್ಲಿ ಬಿಜೆಪಿ (bjp) ಎರಡನೇ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮುವ ನಿರೀಕ್ಷೆಯಿದೆ ಎಂದು ಟೈಮ್ಸ್ ನೌ-ಇಟಿಜಿ (times know-ETG) ಸಂಶೋಧನಾ ಸಮೀಕ್ಷೆ ಹೇಳಿದೆ.

ತಮಿಳುನಾಡಿನಲ್ಲಿ ಅಣ್ಣಾಮಲೈ ನೇತೃತ್ವದ ಬಿಜೆಪಿ ಡಿಎಂಕೆ ಅನಂತರ ಮತ ಹಂಚಿಕೆಯಲ್ಲಿ ಎರಡನೇ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ. ಟೈಮ್ಸ್ ನೌ-ಇಟಿಜಿ_ಸಂಶೋಧನಾ ಸಮೀಕ್ಷೆಯ ಅಂಕಿ ಅಂಶಗಳ ಪ್ರಕಾರ ತಮಿಳುನಾಡಿನ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಶೇ. 19ರಷ್ಟು ಮತವನ್ನು ಬಾಚಿಕೊಳ್ಳಲಿದ್ದು ಡಿಎಂಕೆಗೆ ಭಾರೀ ಹೊಡೆತ ನೀಡುವ ನಿರೀಕ್ಷೆ ಇದೆ.

ರಾಜ್ಯದಲ್ಲಿ ಡಿಎಂಕೆಯು ಶೇ. 26ರಷ್ಟು ಮತಗಳನ್ನು ಪಡೆದರೆ ಮಿತ್ರಪಕ್ಷ ಕಾಂಗ್ರೆಸ್ ಶೇ.18ರಷ್ಟು ಮತಗಳನ್ನು ಪಡೆಯುವ ನಿರೀಕ್ಷೆಯಿದೆ. ಬಿಜೆಪಿ ಶೇ.19 ಮತ ಗಳಿಸಿದರೆ ಎಐಎಡಿಎಂಕೆ ಶೇ. 17 ಮತ್ತು ಇತರರು ಶೇ. 20ರಷ್ಟು ಮತಗಳಿಸುವ ಸಾಧ್ಯತೆ ಇದೆ.

ಇದನ್ನೂ ಓದಿ: K. Annamalai: ಬದುಕು ಬದಲಿಸಿದ ಮಾನಸ ಸರೋವರ ಯಾತ್ರೆ! ಕೆ.ಅಣ್ಣಾಮಲೈ ಕುರಿತ ಕುತೂಹಲಕರ ಸಂಗತಿಗಳಿವು

ಅಂಕಿ ಅಂಶ ಏನು ಹೇಳುತ್ತದೆ ?

ಸಮೀಕ್ಷೆಯ ಪ್ರಕಾರ ಡಿಎಂಕೆ 20- 21 ಸ್ಥಾನಗಳನ್ನು ಗೆಲ್ಲಲಿದೆ. ಕಾಂಗ್ರೆಸ್ ಮಿತ್ರಪಕ್ಷಗಳು 5- 7 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆ ಇದೆ. 2019ರ ಲೋಕಸಭೆ ಚುನಾವಣೆಯಲ್ಲಿ ಖಾತೆ ತೆರೆಯಲು ವಿಫಲವಾಗಿರುವ ಬಿಜೆಪಿ ಈ ಬಾರಿ ಮಾತ್ರ 2 -6 ಸ್ಥಾನಗಳನ್ನು ಗೆಲ್ಲಲಿದೆ ಎನ್ನಲಾಗುತ್ತದೆ.

ಮೋಡಿ ಮಾಡುವ ಮೋದಿ ಅಲೆ

ತಮಿಳುನಾಡಿನ 39 ಲೋಕಸಭಾ ಸ್ಥಾನಗಳಿಗೆ ಏಪ್ರಿಲ್ 19 ರಂದು ಮತದಾನ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಅಲೆ ಇಲ್ಲಿ ಪ್ರಭಾವ ಬೀರಿದೆ ಎನ್ನಲಾಗಿದೆ. ಸಮೀಕ್ಷೆಯ ಪ್ರಕಾರ ಪ್ರಧಾನಿಯ ಚಿತ್ರಣವು ದಕ್ಷಿಣ ಭಾರತದಲ್ಲಿ ಮತದಾನದ ಮಾದರಿಯ ಮೇಲೆ ಗಣನೀಯವಾಗಿ ಪ್ರಭಾವ ಬೀರುತ್ತದೆ. ಶೇ.23ರಷ್ಟು ಮತದಾರರು ಪ್ರಧಾನಿಯವರ ವ್ಯಕ್ತಿತ್ವವನ್ನು ಆಧರಿಸಿ ತಮ್ಮ ನಿರ್ಧಾರವನ್ನು ತೆಗೆದುಕೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ.

ಶೇಕಡಾ 19 ರಷ್ಟು ಜನರು ಮತ ಚಲಾಯಿಸುವಾಗ ಪ್ರಾದೇಶಿಕ ನಾಯಕರನ್ನು ಪರಿಗಣಿಸುವುದಾಗಿ ಹೇಳಿದ್ದರೆ, ಆದರೆ ಶೇಕಡಾ 17 ರಷ್ಟು ಜನರು ಸಂಸದರ ಚಿತ್ರದ ಪ್ರಾಮುಖ್ಯತೆಯನ್ನು ಉಲ್ಲೇಖಿಸಿದ್ದಾರೆ. ಸಮೀಕ್ಷೆಯ ಪ್ರಕಾರ ಧರ್ಮದ ವಿಚಾರ ಇಲ್ಲಿ ಅಷ್ಟಾಗಿ ಪ್ರಭಾವ ಬೀರಿಲ್ಲ. ಕೇವಲ ಏಳು ಶೇಕಡಾ ಮತದಾರರು ಮಾತ್ರ ಇದಕ್ಕೆ ಆದ್ಯತೆ ನೀಡುವುದಾಗಿ ಹೇಳಿದ್ದಾರೆ.

ಹೇಗಿದೆ ಅಣ್ಣಾಮಲೈ ಕ್ಷೇತ್ರ ?

ಕೊಯಮತ್ತೂರು ಕ್ಷೇತ್ರದಲ್ಲಿ ಡಿಎಂಕೆ ನಾಯಕ ಗಣಪತಿ ಪಿ. ರಾಜ್ ಕುಮಾರ್ ವಿರುದ್ಧ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ , ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ ಎಐಎಡಿಎಂಕೆಯ ಸಿಂಗೈ ರಾಮಚಂದ್ರನ್ ಕಣಕ್ಕೆ ಇಳಿದಿದ್ದು, ಈ ಕ್ಷೇತ್ರ ಭಾರೀ ಪೈಪೋಟಿಗೆ ಸಾಕ್ಷಿಯಾಗಲಿದೆ.

ಕಳೆದ ಎರಡು ಲೋಕಸಭಾ ಚುನಾವಣೆಯಲ್ಲಿ ಇಲ್ಲಿ ಬಿಜೆಪಿ ಅಭ್ಯರ್ಥಿ ಕಣಕ್ಕೆ ಇಳಿದಿದ್ದರೂ ಗೆಲವು ಸಾಧಿಸಿಲ್ಲ. ಭಾರಿ ಮತಗಳ ಅಂತರದಿಂದ ಸೋಲು ಅನುಭವಿಸಿತ್ತು. ಆದರೆ ಈ ಬಾರಿ ಗೆಲುವಿನ ನಿರೀಕ್ಷೆ ಮೂಡಿಸಿರುವುದು ಬಿಜೆಪಿ ಅಭ್ಯರ್ಥಿಯಾಗಿರುವ ಕೆ. ಅಣ್ಣಾಮಲೈ. ಆದರೂ ಇಲ್ಲಿ ಗೆಲುವು ಅಷ್ಟು ಸುಲಭವೇನಲ್ಲ. ಯಾಕೆಂದರೆ ಡಿಎಂಕೆ, ಎಐಎಡಿಎಂಕೆ ಪ್ರಬಲ ಅಭ್ಯರ್ಥಿಗಳನ್ನೇ ಕಣಕ್ಕೆ ಇಳಿಸಿದೆ.

ಹಿಂದೆ ಇಲ್ಲಿ ಏನಾಗಿದೆ ?

2014 ಮತ್ತು 2019ರ ಎರಡು ಲೋಕಸಭಾ ಚುನಾವಣೆಗಳಲ್ಲಿ ಕೊಯಮತ್ತೂರಿನ ಬಿಜೆಪಿ ಅಭ್ಯರ್ಥಿಯಾಗಿದ್ದ ಜಾರ್ಖಂಡ್ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಅವರು ಸತತ ಸೋಲು ಅನುಭವಿಸಿದ್ದರು. 2014ರಲ್ಲಿ ಎಐಎಡಿಎಂಕೆಯ ಪಿ. ನಾಗರಾಜನ್ ಅವರು ಸಿ.ಪಿ. ರಾಧಾಕೃಷ್ಣನ್ ಅವರನ್ನು ಸೋಲಿಸಿ 42,016 ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದರು.

2019ರಲ್ಲಿ ಸಿ.ಪಿ. ರಾಧಾಕೃಷ್ಣನ್ ಅವರ ವಿರುದ್ಧ ಕಣಕ್ಕೆ ಇಳಿದಿದ್ದ ಸಿಪಿಐ (ಎಂ) ಸಂಸದ ಪಿ.ಆರ್. ನಟರಾಜನ್ ಅವರು 1,79,143 ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದರು. ಒಟ್ಟು ಚಲಾವಣೆಯಾದ ಮತಗಳಲ್ಲಿ ಸಿ.ಪಿ.ರಾಧಾಕೃಷ್ಣನ್ ಅವರು ಶೇ. 31.3. ಹಾಗೂ ಪಿ.ಆರ್.ನಟರಾಜನ್ ಶೇ.45.7ರಷ್ಟು ಮತಗಳನ್ನು ಪಡೆದಿದ್ದರು. ಒಂದು ವೇಳೆ ಇಲ್ಲಿ ಈ ಬಾರಿ ಬಿಜೆಪಿ ಗೆಲವು ಸಾಧಿಸಿದರೆ ಬಹುದೊಡ್ಡ ಇತಿಹಾಸವೇ ಸೃಷ್ಟಿಯಾಗಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

Prashant Kishor: ಈ ಬಾರಿ ಮೋದಿಗೆ ಹಿನ್ನಡೆ ಆಗುತ್ತಾ? ಪ್ರಶಾಂತ್ ಕಿಶೋರ್ ಲೇಟೆಸ್ಟ್ ಲೆಕ್ಕಾಚಾರ ಹೀಗಿದೆ

Prashant Kishor: ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರು ಲೋಕಸಭಾ ಚುನಾವಣೆಯ ಫಲಿತಾಂಶವನ್ನು ಊಹಿಸಿದ್ದು, 2019ರ ಚುನಾವಣೆಗೆ ಹೋಲಿಸಿದರೆ ಈ ಬಾರಿ ಬಿಜೆಪಿ ಹೆಚ್ಚುವರಿ ಸ್ಥಾನಗಳನ್ನು ಗೆಲ್ಲಲಿದೆ ಎಂದು ಹೇಳಿದ್ದಾರೆ. ಬಿಜೆಪಿ ಬಹುಮತ ಪಡೆಯುವ ಸಾಧ್ಯತೆಯಿಲ್ಲ ಮತ್ತು ಮೊದಲ ಕೆಲವು ಹಂತಗಳ ಮತದಾನ ಆಡಳಿತ ಪಕ್ಷದ ಪರವಾಗಿಲ್ಲ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯ ಪಟ್ಟಿದ್ದು, ಕೆಲವು ವರದಿಗಳು ಇದನ್ನೇ ಊಹಿಸಿರುವ ಮಧ್ಯೆ ಪ್ರಶಾಂತ್‌ ಕಿಶೋರ್‌ ಈ ರೀತಿ ಹೇಳಿಕೆ ನೀಡಿರುವುದು ಕಮಲ ಪಾಳಯಕ್ಕೆ ಕೊಂಚ ಮಟ್ಟಿನ ಸಮಾಧಾನ ತಂದಿತ್ತಿದೆ.

VISTARANEWS.COM


on

Prashant Kishor
Koo

ನವದೆಹಲಿ: ಲೋಕಸಭಾ ಚುನಾವಣೆ (Lok Sabha Election)ಯ ಮೊದಲ 5 ಹಂತಗಳ ಮತದಾನ ಮುಗಿದಿದೆ. ಇನ್ನು ಎರಡು ಹಂತಗಳ ಮತದಾನ ಬಾಕಿ ಇದ್ದು, ಸೋಲು-ಗೆಲುವಿನ ಲೆಕ್ಕಾಚಾರ ಆರಂಭವಾಗಿದೆ. ಈ ಮಧ್ಯೆ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ (Prashant Kishor) ಫಲಿತಾಂಶವನ್ನು ಊಹಿಸಿದ್ದು, 2019ರ ಚುನಾವಣೆಗೆ ಹೋಲಿಸಿದರೆ ಈ ಬಾರಿ ಬಿಜೆಪಿ ಹೆಚ್ಚುವರಿ ಸ್ಥಾನಗಳನ್ನು ಗೆಲ್ಲಲಿದೆ ಎಂದು ಹೇಳಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಬಿಜೆಪಿ ಸ್ಪಷ್ಟ ಬಹುಮತ ಹೊಂದಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ʼʼಈ ಚುನಾವಣೆಯಲ್ಲಿ ಬಿಜೆಪಿ ಅತ್ಯುತ್ತಮ ಪ್ರದರ್ಶನ ತೋರಲಿದೆ. ಜತೆಗೆ ಸೀಟುಗಳ ಸಂಖ್ಯೆಯನ್ನೂ ವೃದ್ಧಿಸಿಕೊಳ್ಳಲಿದೆ. ಅದರಲ್ಲಿಯೂ ದೇಶದ ಉತ್ತರ ಮತ್ತು ಪಶ್ಚಿಮ ಭಾಗಗಳಲ್ಲಿ ಬಿಜೆಪಿ ಇನ್ನಷ್ಟು ಶಕ್ತವಾಗಲಿದೆ. ಅಲ್ಲದೆ ಪೂರ್ವ ಮತ್ತು ದಕ್ಷಿಣ ಭಾಗಗಳಲ್ಲಿಯೂ ಸೀಟು ಹೆಚ್ಚಳವಾಗುವ ನಿರೀಕ್ಷೆ ಇದೆʼʼ ಎಂದು ಅಭಿಪ್ರಾಯಪಟ್ಟಿದ್ದಾರೆ.

ಬಿಜೆಪಿ ಬಹುಮತ ಪಡೆಯುವ ಸಾಧ್ಯತೆಯಿಲ್ಲ ಮತ್ತು ಮೊದಲ ಕೆಲವು ಹಂತಗಳ ಮತದಾನ ಆಡಳಿತ ಪಕ್ಷದ ಪರವಾಗಿಲ್ಲ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯ ಪಟ್ಟಿದ್ದು, ಕೆಲವು ವರದಿಗಳು ಇದನ್ನೇ ಊಹಿಸಿರುವ ಮಧ್ಯೆ ಪ್ರಶಾಂತ್‌ ಕಿಶೋರ್‌ ಈ ರೀತಿ ಹೇಳಿಕೆ ನೀಡಿರುವುದು ಕಮಲ ಪಾಳಯಕ್ಕೆ ಕೊಂಚ ಮಟ್ಟಿನ ಸಮಾಧಾನ ತಂದಿತ್ತಿದೆ. ಆದಾಗ್ಯೂ ಅವರು ರಾಜ್ಯವಾರು ಫಲಿತಾಂಶಗಳನ್ನು ಊಹಿಸಲು ನಿರಾಕರಿಸಿದ್ದಾರೆ.

ಮೋದಿ ಬ್ರ್ಯಾಂಡ್‌ ಕುಸಿತ

ಬಿಜೆಪಿಯ ಬಗ್ಗೆ ಈಗಲೂ ಜನರಲ್ಲಿ ಸಕಾರಾತ್ಮಕ ಭಾವನೆ ಇದೆ ಎಂದಿರುವ ಪ್ರಶಾಂತ್‌ ಕಿಶೋರ್‌, ಮೋದಿ ಬ್ರ್ಯಾಂಡ್‌ ಮಾತ್ರ ಕುಸಿಯುತ್ತಿದೆ. ಪ್ರಧಾನಿಯ ಪ್ರಭಾವ ಕ್ಷೀಣಿಸುತ್ತಿದೆ ಎಂದು ಹೇಳಿದ್ದಾರೆ. ಇತ್ತ ವಿರೋಧ ಪಕ್ಷಗಳ ಕಾರ್ಯ ವೈಖರಿಯನ್ನೂ ಅವರು ಟೀಕಿಸಿದ್ದಾರೆ. ಬಿಜೆಪಿ ವಿರುದ್ಧ ಪ್ರಯೋಗಿಸಬಹುದಾದ ಅನೇಕ ಅಸ್ತ್ರಗಳನ್ನು, ಅವಕಾಶಗಳನ್ನು ʼಇಂಡಿಯಾʼ ಮೈತ್ರಿಕೂಟ ಸಮರ್ಪಕವಾಗಿ ಬಳಸಿಕೊಳ್ಳುತ್ತಿಲ್ಲ ಎಂದು ಹೇಳಿದ್ದಾರೆ. ಕಾಂಗ್ರೆಸ್‌ ರಾಜ್ಯ ವಿಧಾನಸಭಾ ಚುನಾವಣೆಗಳ ಮೇಲೆ ಗಮನ ಕೇಂದ್ರೀಕರಿಸಿದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ ಮತ್ತು ಡಿಸೆಂಬರ್ ನಡುವಿನ ನಿರ್ಣಾಯಕ ತಿಂಗಳುಗಳು ವ್ಯರ್ಥವಾಗಿದೆ. ಇದು ʼಇಂಡಿಯಾʼ ಬಣದ ಮೇಲೆ ನಕಾರಾತ್ಮಕ ಪರಿಣಾಮ ಬೀರಿದೆ ಎಂದು ಅವರು ಒತ್ತಿ ಹೇಳಿದ್ದಾರೆ. ಡಿಸೆಂಬರ್‌ನಲ್ಲಿ ಮೂರು ರಾಜ್ಯಗಳಲ್ಲಿನ ಬಿಜೆಪಿಯ ಗೆಲುವು ಮತ್ತು ಜನವರಿಯಲ್ಲಿ ನಡೆದ ಅಯೋಧ್ಯೆ ರಾಮ ಮಂದಿರದ ಉದ್ಘಾಟನೆ ಕಮಲ ಪಡೆಯ ಗೆಲುವಿಗೆ ಇನ್ನಷ್ಟು ಶಕ್ತಿ ನೀಡಲಿದೆ ಎಂದಿದ್ದಾರೆ.

ಇದನ್ನೂ ಓದಿ: Lok Sabha Election 2024: ಪ್ರತಿಪಕ್ಷಗಳಿಗೆ ರೆಡ್‌ ಅಲರ್ಟ್‌ ನೀಡಿದ ಪ್ರಶಾಂತ್‌ ಕಿಶೋರ್‌; ಏನವರ ಚುನಾವಣಾ ಲೆಕ್ಕಾಚಾರ?

ರಾಹುಲ್‌ ಗಾಂಧಿಗೆ ಸಲಹೆ

ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರಿಗೆ ಸಲಹೆ ನೀಡಿದ ಪ್ರಶಾಂತ್‌ ಕಿಶೋರ್, ಚುನಾವಣಾ ಫಲಿತಾಂಶಗಳು ಕಾಂಗ್ರೆಸ್ ಪರವಾಗಿಲ್ಲದಿದ್ದರೆ ಐದು ವರ್ಷಗಳ ವಿರಾಮ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ. ಮೂರನೇ ಅವಧಿಯಲ್ಲಿ ಬಿಜೆಪಿಗೆ ಅನೇಕ ಕಠಿಣ ಸವಾಲು ಎದುರಾಗಲಿದೆ ಎಂದು ಅವರು ಎಚ್ಚರಿಸಿದ್ದಾರೆ. ಭೂ ಮಸೂದೆ ವಿರೋಧಿ ಪ್ರತಿಭಟನೆ, ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯ ವಿರೋಧಿಸಿ ನಡೆದ ಪ್ರತಿಭಟನೆ ಮತ್ತು ರೈತರ ಹೋರಾಟವನ್ನು ಉಲ್ಲೇಖಿಸಿ ಅವರು ಸವಾಲುಗಳ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ಈ ಎಲ್ಲ ಸವಾಲುಗಳಿಂದ ಮೋದಿ ದುರ್ಬಲ ಪ್ರಧಾನಿ ಎನಿಸಿಕೊಳ್ಳಲಿದ್ದಾರೆ ಎಂದೂ ಅಭಿಪ್ರಾಯಪಟ್ಟಿದ್ದಾರೆ.

Continue Reading

ದೇಶ

Kangana Ranaut: ಕಂಗನಾ ರಣಾವತ್‌ ಮೇಲೆ ಕಲ್ಲು ತೂರಾಟ; ಚು.ಆಯೋಗಕ್ಕೆ ದೂರು

Kangana Ranaut: ಮಂಡಿ ಲೋಕಸಭಾ ಕ್ಷೇತ್ರದ ಲಾಹೌಲ್‌ ಮತ್ತು ಸ್ಪಿತಿ ಪ್ರದೇಶಗಳಲ್ಲಿ ಪ್ರಚಾರ ಕಾರ್ಯಕ್ರಮ ಕೈಗೊಂಡಿದ್ದ ಕಂಗನಾ ಅಲ್ಲಿ ತಲುಪುತ್ತಿದ್ದಂತೆ ಸ್ಥಳೀಯರಿಂದ ಭಾರೀ ವಿರೋಧ ವ್ಯಕ್ತವಾಗಿತ್ತು. ಕೈಯಲ್ಲಿ ಕಪ್ಪು ಬಾವುಟ ಹಿಡಿದು ಕಂಗನಾ ವಿರುದ್ಧ ಗೋ ಬ್ಯಾಕ್‌ ಘೋಷಣೆಗಳನ್ನು ಕೂಗಿದ್ದರು. ಇದಾ ಬಳಿಕ ಕಾಂಗ್ರೆಸ್‌ ಕಾರ್ಯಕರ್ತರು ಅವರ ಕಾರಿನ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ.

VISTARANEWS.COM


on

Kangana Ranaut
Koo

ಹಿಮಾಚಲಪ್ರದೇಶ:ಮಂಡಿ(Mandi) ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕಂಗನಾ ರಣಾವತ್‌(Kangana Ranaut) ಹಾಗೂ ಬಿಜೆಪಿ ಕಾರ್ಯಕರ್ತರ(BJP Workers) ಮೇಲೆ ಕಾಂಗ್ರೆಸ್‌ ಕಾರ್ಯಕರ್ತರು ಕಲ್ಲು ತೂರಾಟ(Stone Pelting) ನಡೆಸಿರುವ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಬಿಜೆಪಿ ಚುನಾವಣಾ ಆಯೋಗಕ್ಕೆ ಅಧಿಕೃತ ದೂರು ನೀಡಿದೆ. ನಿನ್ನೆ ಸಂಜೆ ಲಾಹೌಲ್‌ ಮತ್ತು ಸ್ಪಿತಿ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಘಟನೆಯಲ್ಲಿ ಪಕ್ಷದ ಇಬ್ಬರು ಕಾರ್ಯಕರ್ತರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಬಿಜೆಪಿ ದೂರಿದೆ.

ನಿನ್ನೆ ಮಂಡಿ ಲೋಕಸಭಾ ಕ್ಷೇತ್ರದ ಲಾಹೌಲ್‌ ಮತ್ತು ಸ್ಪಿತಿ ಪ್ರದೇಶಗಳಲ್ಲಿ ಪ್ರಚಾರ ಕಾರ್ಯಕ್ರಮ ಕೈಗೊಂಡಿದ್ದ ಕಂಗನಾ ಅಲ್ಲಿ ತಲುಪುತ್ತಿದ್ದಂತೆ ಸ್ಥಳೀಯರಿಂದ ಭಾರೀ ವಿರೋಧ ವ್ಯಕ್ತವಾಗಿತ್ತು. ಕೈಯಲ್ಲಿ ಕಪ್ಪು ಬಾವುಟ ಹಿಡಿದು ಕಂಗನಾ ವಿರುದ್ಧ ಗೋ ಬ್ಯಾಕ್‌ ಘೋಷಣೆಗಳನ್ನು ಕೂಗಿದ್ದರು. ಇದಾ ಬಳಿಕ ಕಾಂಗ್ರೆಸ್‌ ಕಾರ್ಯಕರ್ತರು ಅವರ ಕಾರಿನ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ.

ಘಟನೆ ಬಗ್ಗೆ ಸ್ವತಃ ಕಂಗನಾ ಪ್ರತಿಕ್ರಿಯಿಸಿದ್ದು, ನಮ್ಮ ವಾಹನಗಳ ಮೇಲೆ ಕಲ್ಲು ತೂರಾಟ ನಡೆದಿದೆ. ಕಾಂಗ್ರೆಸ್‌ ಹಿಂಸಾಚಾರ ನಡೆಸುವುದಕ್ಕಾಗಿಯೇ ಪ್ರತಿಭಟನೆ ಹಮ್ಮಿಕೊಂಡಿತ್ತು. ಇಲ್ಲಿನ ಸ್ಥಾನ ಕೈ ತಪ್ಪುವುದು ಅವರಿಗೆ ಖಚಿತವಾಗಿದೆ. ಹೀಗಾಗಿ ಅವರು ಬೀದಿಗಿಳಿದು ಪ್ರೊಟೆಸ್ಟ್‌ ಮಾಡುತ್ತಿದ್ದಾರೆ. ಹಿಂಸಾಚಾರಕ್ಕೆ ಮುಂದಾಗಿದ್ದಾರೆ. ಇನ್ನು ನಮ್ಮ ಪಕ್ಷದ ಇಬ್ಬರು ಕಾರ್ಯಕರ್ತರು ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾಂಗ್ರೆಸ್‌ನ ಈ ವರ್ತನೆ ಅತೀವ ಬೇಸರ ತಂದಿದೆ ಎಂದು ಹೇಳಿದ್ದಾರೆ. ಇನ್ನು ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಇನ್ನು ಘಟನೆ ಬಗ್ಗೆ ಚುನಾವಣಾ ಆಯೋಗಕ್ಕೆ ಪತ್ರ ಬರೆದಿರುವ ಬಿಜೆಪಿ ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ. ಇನ್ನು ಬಿಜೆಪಿ ಆರೋಪದ ಬಗ್ಗೆ ಕಾಂಗ್ರೆಸ್‌ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿಲ್ಲ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್ ರೇವಣ್ಣ ಪಾಸ್‌ ಪೋರ್ಟ್ ರದ್ದು ಮಾಡಲು ವಿದೇಶಾಂಗ ಇಲಾಖೆಗೆ ಎಸ್‌ಐಟಿ ಪತ್ರ

Continue Reading

ದೇಶ

Sambit Patra: ಭಗವಾನ್‌ ಜಗನ್ನಾಥನೇ ಮೋದಿಯ ಭಕ್ತ ಎಂದ ಬಿಜೆಪಿ ನಾಯಕ; ಭುಗಿಲೆದ್ದ ವಿವಾದ

Sambit Patra: “ಪುರಿ ಜಗನ್ನಾಥನು ಕೂಡ ನರೇಂದ್ರ ಮೋದಿ ಅವರ ಭಕ್ತನಾಗಿದ್ದಾನೆ” ಎಂದು ಸಂಬಿತ್‌ ಪಾತ್ರಾ ನೀಡಿದ ಹೇಳಿಕೆ ಈಗ ಭಾರಿ ವಿವಾದ ಸೃಷ್ಟಿಸಿದೆ. ಸಾಮಾಜಿಕ ಜಾಲತಾಣಗಳಲ್ಲೂ ಸಂಬಿತ್‌ ಪಾತ್ರಾ ಹೇಳಿಕೆಗೆ ಭಾರಿ ವಿರೋಧ ವ್ಯಕ್ತವಾಗಿದೆ. ಪ್ರತಿಪಕ್ಷಗಳ ನಾಯಕರಂತೂ ಸಂಬಿತ್‌ ಪಾತ್ರಾ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸುತ್ತಿದ್ದಾರೆ.

VISTARANEWS.COM


on

Sambita Patra
Koo

ಭುವನೇಶ್ವರ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಕೋಟ್ಯಂತರ ಭಾರತೀಯರು ಇಷ್ಟಪಡುತ್ತಾರೆ. ಸೆಲೆಬ್ರಿಟಿಗಳಿಂದ ಹಿಡಿದು ಹಿರಿಯರವರೆಗೆ ಮೋದಿ ಅವರನ್ನು ಇಷ್ಟಪಡುತ್ತಾರೆ. ವಿದೇಶಗಳಲ್ಲೂ ಮೋದಿ ಅವರಿಗೆ ಅಭಿಮಾನಿಗಳಿದ್ದಾರೆ. ಇದೇ ಕಾರಣಕ್ಕಾಗಿ ಬಿಜೆಪಿ ನಾಯಕರು ಮೋದಿ ಅವರ ಹೆಸರು ಹೇಳಿಕೊಂಡು ಮತ ಕೇಳುತ್ತಾರೆ. ಆದರೆ, ಬಿಜೆಪಿ ನಾಯಕ, ಒಡಿಶಾದ ಪುರಿ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಸಂಬಿತ್‌ ಪಾತ್ರಾ (Sambit Patra) ಅವರು ಮೋದಿ ಅವರನ್ನು ಹೊಗಳುವ ಭರದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. “ಪುರಿ ಜಗನ್ನಾಥನು (Lord Jagannath) ನರೇಂದ್ರ ಮೋದಿ ಅವರ ಭಕ್ತನಾಗಿದ್ದಾನೆ” ಎಂದು ಸಂಬಿತ್‌ ಪಾತ್ರಾ ನೀಡಿದ ಹೇಳಿಕೆ ಈಗ ಭಾರಿ ವಿವಾದ ಸೃಷ್ಟಿಸಿದೆ.

ಸಂಬಿತ್‌ ಪಾತ್ರಾ ಹೇಳಿದ್ದೇನು?

“ಪ್ರಧಾನಿ ನರೇಂದ್ರ ಮೋದಿ ಅವರನ್ನು ನೋಡಲು ಲಕ್ಷಾಂತರ ಜನ ಸೇರಿದ್ದಾರೆ. ಜಗನ್ನಾಥನೇ ನರೇಂದ್ರ ಮೋದಿ ಅವರ ಭಕ್ತನಾಗಿದ್ದಾನೆ. ನಾವೆಲ್ಲರೂ ಮೋದಿ ಅವರ ಕುಟುಂಬಸ್ಥರು. ನಾನು ನನ್ನ ಭಾವನೆಗಳನ್ನು ಹಿಡಿದಿಟ್ಟುಕೊಳ್ಳಲು ಆಗುತ್ತಿಲ್ಲ. ಇದು ಒಡಿಶಾದ ಎಲ್ಲ ಜನರಿಗೂ ಐತಿಹಾಸಿಕ ದಿನವಾಗಿದೆ” ಎಂದು ಸುದ್ದಿಗಾರರೊಂದಿಗೆ ಮಾತನಾಡುವಾಗ ಸಂಬಿತ್‌ ಪಾತ್ರ ಹೇಳಿದ್ದರು. ನರೇಂದ್ರ ಮೋದಿ ಅವರು ಪುರಿ ಜಗನ್ನಾಥ ದೇವಾಲಯಕ್ಕೆ ತೆರಳಿ, ವಿಶೇಷ ಪ್ರಾರ್ಥನೆ ಸಲ್ಲಿಸಿದ ಬಳಿಕ ಸಂಬಿತ್‌ ಪಾತ್ರಾ ಇಂತಹ ಹೇಳಿಕೆ ನೀಡಿದ್ದಾರೆ. ವಿವಾದದ ಬಳಿಕ ಬಿಜೆಪಿ ನಾಯಕರು ಪ್ರತಿಕ್ರಿಯಿಸಿದ್ದು, ಇದು ಬಾಯ್ತಪ್ಪಿನಿಂದ ನೀಡಿದ ಹೇಳಿಕೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಕುಟುಕಿದ ನವೀನ್‌ ಪಟ್ನಾಯಕ್‌

ಸಂಬಿತ್‌ ಪಾತ್ರ ಹೇಳಿಕೆಗೆ ಒಡಿಶಾ ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌ ಅವರು ತಿರುಗೇಟು ನೀಡಿದ್ದಾರೆ. “ಭಗವಾನ್‌ ಶ್ರೀ ಜಗನ್ನಾಥನು ಇಡೀ ಸೃಷ್ಟಿಗೆ ದೇವರಾಗಿದ್ದಾನೆ. ದೇವರನ್ನೇ ಮನುಷ್ಯನ ಭಕ್ತ ಎಂದು ಕರೆದಿರುವುದು ಅಪಸವ್ಯ ಹಾಗೂ ದೇವರಿಗೆ ಮಾಡಿದ ಅವಮಾನವಾಗಿದೆ. ಇದು ಒಡಿಶಾ ಹಾಗೂ ಜಗತ್ತಿನಾದ್ಯಂತ ಇರುವ ಜಗನ್ನಾಥನ ಭಕ್ತರ ಭಾವನೆಗಳಿಗೆ ಧಕ್ಕೆ ತರುವ ಹೇಳಿಕೆಯಾಗಿದೆ” ಎಂದು ಟೀಕಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲೂ ಸಂಬಿತ್‌ ಪಾತ್ರಾ ಹೇಳಿಕೆಗೆ ಭಾರಿ ವಿರೋಧ ವ್ಯಕ್ತವಾಗಿದೆ. ಪ್ರತಿಪಕ್ಷಗಳ ನಾಯಕರಂತೂ ಸಂಬಿತ್‌ ಪಾತ್ರಾ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸುತ್ತಿದ್ದಾರೆ.

“ಜಗನ್ನಾಥನು ಸರ್ವಶ್ರೇಷ್ಠನಾಗಿದ್ದು, ಒಡಿಶಾದ ಅಸ್ಮಿತೆಯಾಗಿದ್ದಾನೆ. ಇಂತಹ ಜಗನ್ನಾಥನ ಬಗ್ಗೆ ಹೇಳಿಕೆ ಕೊಡುವುದು, ಮನುಷ್ಯರೊಬ್ಬರ ಭಕ್ತ ಎಂದು ಹೇಳುವುದು ಖಂಡನೀಯವಾಗಿದೆ. ಬಿಜೆಪಿ ನಾಯಕರೂ ಆದ ಪುರಿ ಲೋಕಸಭೆ ಕ್ಷೇತ್ರದ ಅಭ್ಯರ್ಥಿಯು ಹೀಗೆ ಹೇಳಿರುವುದನ್ನು ನಾನು ಖಂಡಿಸುತ್ತೇನೆ. ರಾಜಕೀಯ ಲಾಭಕ್ಕಾಗಿ ದೇವರನ್ನು ಬಳಸಿಕೊಳ್ಳುವುದು, ಹೀನವಾದ ಹೇಳಿಕೆ ನೀಡುವುದನ್ನು ಬಿಜೆಪಿ ನಾಯಕರು ಬಿಡಬೇಕು. ಒಡಿಶಾದ ಜನರು ದೀರ್ಘ ಅವಧಿಗೆ ಇದನ್ನು ನೆನಪಿನಲ್ಲಿ ಇಟ್ಟುಕೊಳ್ಳುತ್ತಾರೆ ಹಾಗೂ ಎಂದಿಗೂ ಕ್ಷಮಿಸಲ್ಲ” ಎಂದು ನವೀನ್‌ ಪಟ್ನಾಯಕ್‌ ಪೋಸ್ಟ್‌ ಮಾಡಿದ್ದಾರೆ.

ಇದನ್ನೂ ಓದಿ: Arvind Kejriwal: “ತಾಕತ್‌ ಇದ್ರೆ ಅರೆಸ್ಟ್‌ ಮಾಡಿ…”; ಪ್ರಧಾನಿ ಮೋದಿಗೆ ಕೇಜ್ರಿವಾಲ್‌ ಓಪನ್‌ ಚಾಲೆಂಜ್‌

Continue Reading

Lok Sabha Election 2024

101ನೇ ವಯಸ್ಸಿನಲ್ಲೂ ‘ಕರ್ತವ್ಯ’ ಮರೆಯದೆ ವೋಟ್‌ ಮಾಡಿದ ನಿವೃತ್ತ ಯೋಧ; ಸೆಲ್ಯೂಟ್‌ ಎಂದರು ಜನ

ಮುಂಬೈನ ರಹೇಜಾ ಕಾಲೇಜಿಗೆ ತೆರಳಿದ 101 ವರ್ಷದ ನಿವೃತ್ತ ಯೋಧ ಕಾರ್ಖನೀಸ್‌ ಅವರು ಮತದಾನ ಮಾಡುವ ಮೂಲಕ ಯುವಕರು ಸೇರಿ ಎಲ್ಲರಿಗೂ ಮಾದರಿ ಎನಿಸಿದ್ದಾರೆ. ಇವರು ಮತದಾನ ಮಾಡಲು ತೆರಳಿದ ಫೋಟೊವನ್ನು ಮುಂಬೈ ಪೊಲೀಸರು ಪೋಸ್ಟ್‌ ಮಾಡಿದ್ದಾರೆ. ಸಾವಿರಾರು ಜನ ಪೋಸ್ಟ್‌ಗೆ ಲೈಕ್‌ ಒತ್ತುವ ಜತೆಗೆ, ಯೋಧರ ಉತ್ಸಾಹ, ಕರ್ತವ್ಯ ಪ್ರಜ್ಞೆಯನ್ನು ಕೊಂಡಾಡಿದ್ದಾರೆ.

VISTARANEWS.COM


on

Army Officer
Koo

ಮುಂಬೈ: ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ 49 ಕ್ಷೇತ್ರಗಳಲ್ಲಿ ಸೋಮವಾರ (ಮೇ 20) ಐದನೇ ಹಂತದ ಮತದಾನ (Lok Sabha Election) ನಡೆದಿದೆ. ಬಹುತೇಕ ಕಡೆ ಶಾಂತಿಯುತವಾಗಿಯೇ ಮತದಾನ ನಡೆದಿದೆ. ಮೂರನೇ ಹಂತದಲ್ಲಿ ಕೇವಲ ಶೇ.57.5ರಷ್ಟು ಮತದಾನ (Voter Turnout) ದಾಖಲಾಗಿದೆ. ಇದರ ಮಧ್ಯೆಯೇ, ಮುಂಬೈನಲ್ಲಿ 101ನೇ ವಯಸ್ಸಿನಲ್ಲೂ ನಿವೃತ್ತ ಯೋಧರೊಬ್ಬರು (Retired Army Officer) ಮತಗಟ್ಟೆಗೆ ತೆರಳಿ ಮತದಾನ ಮಾಡುವ ಮೂಲಕ ಯುವಕರು ಸೇರಿ ಎಲ್ಲರಿಗೂ ಮಾದರಿ ಎನಿಸಿದ್ದಾರೆ. ಅವರು ಮತದಾನ ಮಾಡಿದ ಫೋಟೊಗಳು ಈಗ ವೈರಲ್‌ ಆಗಿವೆ.

ಮುಂಬೈ ಪೊಲೀಸರು ನಿವೃತ್ತ ಯೋಧ ಮತದಾನ ಮಾಡಿದ ಫೋಟೊವನ್ನು ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ ಮಾಡಿದ್ದಾರೆ. “ನೀವು ಮತದಾನವನ್ನು ತಪ್ಪಿಸಿಕೊಳ್ಳಲು 101 ಕಾರಣಗಳನ್ನು ಕೊಡಬಹುದು. ಆದರೆ, ನಿವೃತ್ತ ಯೋಧರಾದ ಕಾರ್ಖನೀಸ್‌ ಅವರು 101ನೇ ವಯಸ್ಸಿನಲ್ಲೂ ಮತಗಟ್ಟೆಗೆ ತೆರಳಿ ಮತದಾನ ಮಾಡುವ ಮೂಲಕ ಮಾದರಿ ಎನಿಸಿದ್ದಾರೆ. ಇವರು ಮುಂಬೈನ ರಹೇಜಾ ಕಾಲೇಜಿಗೆ ತೆರಳಿ ಮತದಾನ ಮಾಡಿದ್ದು, ನಮ್ಮ ಸಿಬ್ಬಂದಿಯು ಅವರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಂಡರು” ಎಂಬುದಾಗಿ ಪೋಸ್ಟ್‌ ಮಾಡಿದ್ದಾರೆ.

ನಿವೃತ್ತ ಯೋಧರ ಕರ್ತವ್ಯಪ್ರಜ್ಞೆಗೆ ಜಾಲತಾಣಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. “ಇಳಿ ವಯಸ್ಸಿನಲ್ಲೂ ಮತದಾನ ಮಾಡಿದ ನಿವೃತ್ತ ಯೋಧನಿಗೆ ನನ್ನ ಸೆಲ್ಯೂಟ್‌” ಎಂದು ಒಬ್ಬರು ಪ್ರತಿಕ್ರಿಯಿಸಿದ್ದಾರೆ. “ನಿಜವಾಗಿಯೂ ಇದು ಸ್ಫೂರ್ತಿದಾಯಕ. 98 ವರ್ಷದ ನನ್ನ‌ ಅಜ್ಜಿಯು ಕೂಡ ಇಂದು ಮತ ಚಲಾಯಿಸಿದ್ದಾರೆ. ಇನ್ನು ಯೋಧನಿಗೆ ಸಹಾಯ ಮಾಡಿದ ಪೊಲೀಸ್‌ ಸಿಬ್ಬಂದಿಗೂ ಧನ್ಯವಾದಗಳು” ಎಂದು ಮತ್ತೊಬ್ಬರು ಕಮೆಂಟ್‌ ಮಾಡಿದ್ದಾರೆ. ಇನ್‌ಸ್ಟಾಗ್ರಾಂ ಪೋಸ್ಟ್‌ಅನ್ನು ಸಾವಿರಾರು ಜನ ಲೈಕ್‌ ಮಾಡಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಐದನೇ ಹಂತದಲ್ಲಿ ಹೆಚ್ಚಿನ ಮತದಾನ ದಾಖಲಾಗಿದೆ. ರಾಜ್ಯದಲ್ಲಿ ಕೆಲವೆಡೆ ಹಿಂಸಾಚಾರ ಪ್ರಕರಣಗಳು ಸುದ್ದಿಯಾಗಿದ್ದರೂ ಶೇ.73ರಷ್ಟು ಮತದಾನ ದಾಖಲಾಗಿದೆ. ಇನ್ನು ಲಡಾಕ್‌ನಲ್ಲಿ ಶೇ.67.15, ಜಾರ್ಖಂಡ್‌ನಲ್ಲಿ ಶೇ.61.90ರಷ್ಟು ಮತದಾನ ನಡೆದಿದೆ. ಇನ್ನು ಮಹಾರಾಷ್ಟ್ರದಲ್ಲಿ ಕೇವಲ ಶೇ.48.66ರಷ್ಟು ಮತದಾನ ದಾಖಲಾಗಿದ್ದು, ಐದನೇ ಹಂತದಲ್ಲಿ ಕನಿಷ್ಠ ಮತದಾನ ನಡೆದ ರಾಜ್ಯ ಎನಿಸಿದೆ. ನಾಲ್ಕನೇ ಹಂತದಲ್ಲೂ ಮಹಾರಾಷ್ಟ್ರದಲ್ಲಿ ಕನಿಷ್ಠ ಮತದಾನ ದಾಖಲಾಗಿತ್ತು.

ಉತ್ತರ ಪ್ರದೇಶದ 14, ಮಹಾರಾಷ್ಟ್ರದ 13, ಪಶ್ಚಿಮ ಬಂಗಾಳ 7, ಬಿಹಾರ ಹಾಗೂ ಒಡಿಶಾದಲ್ಲಿ ತಲಾ 5, ಜಾರ್ಖಂಡ್‌ನಲ್ಲಿ 3, ಜಮ್ಮು ಕಾಶ್ಮೀರ ಮತ್ತು ಲಡಾಕ್‌ನ ತಲಾ 1 ಕ್ಷೇತ್ರಗಳಲ್ಲಿ ಮತದಾನ ನಡೆದಿದೆ. ಕೇಂದ್ರ ಸಚಿವರಾದ ರಾಜನಾಥ್‌ ಸಿಂಗ್‌ (ಲಖನೌ), ಸ್ಮೃತಿ ಇರಾನಿ (ಅಮೇಥಿ), ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (ರಾಯ್‌ಬರೇಲಿ), ಜಮ್ಮು-ಕಾಶ್ಮೀರ ಮಾಜಿ ಸಿಎಂ ಒಮರ್‌ ಅಬ್ದುಲ್ಲಾ (ಬಾರಾಮುಲ್ಲಾ) ಸೇರಿ ಹಲವು ಗಣ್ಯರ ಭವಿಷ್ಯವು ಮತಯಂತ್ರಗಳಲ್ಲಿ ಭದ್ರವಾಗಿದೆ.

ಇದನ್ನೂ ಓದಿ: Postal Ballot: ಅನಾರೋಗ್ಯದ ಕಾರಣ ಅಂಚೆ ಮತದಾನ ಕೋರಿ 78ರ ಅಜ್ಜಿ ಅರ್ಜಿ; ಬೇಡವೆಂದ ಸುಪ್ರೀಂ!

Continue Reading
Advertisement
Viral video
ವೈರಲ್ ನ್ಯೂಸ್3 mins ago

Chudidar Gang: ಚಡ್ಡಿ ಗ್ಯಾಂಗ್ ಆಯ್ತು, ಈಗ ದರೋಡೆಕೋರರ ಚೂಡಿದಾರ್ ಗ್ಯಾಂಗ್ ಆ್ಯಕ್ಟಿವ್ ಆಗಿದೆ; ಹುಷಾರ್! ವಿಡಿಯೊ ನೋಡಿ

Actor Upendra Ajaneesh Visited Hangary To Record Music
ಸ್ಯಾಂಡಲ್ ವುಡ್25 mins ago

Actor Upendra: ಹಂಗೆರಿಯಲ್ಲಿ ಉಪೇಂದ್ರ, ಅಜನೀಶ್: ʻUIʼ ಸಿನಿಮಾದ ಬಿಗ್‌ ಅಪ್‌ಡೇಟ್‌!

RCB
ಕ್ರೀಡೆ29 mins ago

RCB: ಅಮೆರಿಕದ ಘಟಿಕೋತ್ಸವದಲ್ಲೂ ಆರ್​ಸಿಬಿಯದ್ದೇ ಹವಾ: ವಿಡಿಯೊ ವೈರಲ್​

Dog Attack in raichur
ರಾಯಚೂರು33 mins ago

Dog Attack: ಆಟವಾಡುತ್ತಿದ್ದವಳ ಕಿತ್ತು ತಿಂದ ಬೀದಿ ನಾಯಿ; ರಕ್ತಸ್ರಾವವಾಗಿ 4 ವರ್ಷದ ಬಾಲಕಿ ಸಾವು

jain monk samadhi sena chikkodi sallekhana
ಚಿಕ್ಕೋಡಿ40 mins ago

Sallekhana: ಸಲ್ಲೇಖನ ವ್ರತ ಸ್ವೀಕರಿಸಿ ಸಮಾಧಿಸೇನ ಮುನಿ ಜಿನೈಕ್ಯ

Viral Video
ವೈರಲ್ ನ್ಯೂಸ್46 mins ago

Viral Video: ಅಬ್ಬಾ…ಇವರೆಂಥಾ ರಾಕ್ಷಸರು! ಸೊಸೆ ಮೇಲೆ ಅತ್ತೆ, ನಾದಿನಿಯಿಂದ ಅಟ್ಯಾಕ್‌; ವಿಡಿಯೋ ವೈರಲ್‌

Prashant Kishor
Lok Sabha Election 202453 mins ago

Prashant Kishor: ಈ ಬಾರಿ ಮೋದಿಗೆ ಹಿನ್ನಡೆ ಆಗುತ್ತಾ? ಪ್ರಶಾಂತ್ ಕಿಶೋರ್ ಲೇಟೆಸ್ಟ್ ಲೆಕ್ಕಾಚಾರ ಹೀಗಿದೆ

Cannes 2024 Sonam Kapoor dubs this outfit the best at Cannes this year
ಬಾಲಿವುಡ್1 hour ago

Cannes 2024: ಇವರ ಫ್ಯಾಷನ್‌ ಮುಂದೆ ಐಶ್ವರ್ಯಾ ರೈ, ಕಿಯಾರಾನೂ ಇಲ್ಲ! ಸೋನಮ್ ಹೊಗಳಿದ್ದು ಯಾರನ್ನ?

cisf soldier death raichur
ಕ್ರೈಂ1 hour ago

Soldier death: ಬಂದೂಕು ಆಕಸ್ಮಿಕವಾಗಿ ಸಿಡಿದು CISF ಯೋಧ ಸಾವು

Viral Video
ವೈರಲ್ ನ್ಯೂಸ್2 hours ago

Viral Video: ಈಜುಕೊಳದಲ್ಲಿ ಭೀಕರ ದುರಂತ; ಸ್ಟಂಟ್‌ ಮಾಡಲು ಹೋಗಿ ಯುವಕನ ಪ್ರಾಣಕ್ಕೆ ಕುತ್ತು-ವಿಡಿಯೋ ನೋಡಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ22 hours ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ2 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ4 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ5 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು5 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌