Yadgiri News: ರಾಜಾವೇಣುಗೋಪಾಲ ನಾಯಕಗೆ ಬೆಂಬಲಿಸಿ, ಗೆಲ್ಲಿಸಿ: ಸಚಿವ ದರ್ಶನಾಪುರ - Vistara News

ಯಾದಗಿರಿ

Yadgiri News: ರಾಜಾವೇಣುಗೋಪಾಲ ನಾಯಕಗೆ ಬೆಂಬಲಿಸಿ, ಗೆಲ್ಲಿಸಿ: ಸಚಿವ ದರ್ಶನಾಪುರ

Yadgiri News: ಸುರಪುರ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ಹಿನ್ನಲೆ ಕಾಂಗ್ರೆಸ್ ಅಭ್ಯರ್ಥಿ ರಾಜಾವೇಣುಗೋಪಾಲ ನಾಯಕ ಶುಕ್ರವಾರ ನಾಮಪತ್ರ ಸಲ್ಲಿಸಿದರು.

VISTARANEWS.COM


on

Surapura assembly constituency by election Congress candidate Rajavenugopal Nayaka filed nomination
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಯಾದಗಿರಿ: ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆ (Guarantee Scheme) ಜತೆ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿದೆ. ಸುರಪುರ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಕಾಂಗ್ರೆಸ್ ಅಭ್ಯರ್ಥಿ ರಾಜಾವೇಣುಗೋಪಾಲ ನಾಯಕ ಅವರನ್ನು ಹೆಚ್ಚಿನ ಮತಗಳಿಂದ ಗೆಲ್ಲಿಸಿ ತರಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ (Yadgiri News) ಮನವಿ ಮಾಡಿದರು.

ಸುರಪುರ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ಹಿನ್ನಲೆ ಕಾಂಗ್ರೆಸ್ ಅಭ್ಯರ್ಥಿ ರಾಜಾವೇಣುಗೋಪಾಲ ನಾಯಕ ರೋಡ್‌ ಶೋ ನಡೆಸಿ ಮತಯಾಚಿಸಿದರು.

ಸುರಪುರ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ಹಿನ್ನಲೆ ಕಾಂಗ್ರೆಸ್ ಅಭ್ಯರ್ಥಿ ರಾಜಾವೇಣುಗೋಪಾಲ ನಾಯಕ ಅವರ ನಾಮಪತ್ರ ಸಲ್ಲಿಸುವ ಕಾರ್ಯಕ್ರಮ ಮುನ್ನ ಕಾಂಗ್ರೆಸ್ ಹಮ್ಮಿಕೊಂಡ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ, ಮಾತನಾಡಿದ ಸಚಿವರು, ದಿ. ರಾಜಾವೆಂಕಟಪ್ಪ ನಾಯಕ ಅವರು ಸುರಪುರ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯ ಮಾಡಿದ್ದಾರೆ. ರಾಜಾವೆಂಕಟಪ್ಪ ನಾಯಕ ಅವರ ಪುತ್ರ ರಾಜಾವೇಣುಗೋಪಾಲ ನಾಯಕ ಅವರು ಈಗ ಚುನಾವಣೆಗೆ ಸ್ಪರ್ಧೆ ಮಾಡಿದ್ದು, ಮತದಾರರು ಹೆಚ್ಚಿನ ಮತಗಳಿಂದ ಅವರನ್ನು ಗೆಲ್ಲಿಸಿ ತರಬೇಕೆಂದು ಮನವಿ ಮಾಡಿದರು.

ಇದನ್ನೂ ಓದಿ: Uttara Kannada News: ಬನವಾಸಿಯ ಐತಿಹಾಸಿಕ ಶ್ರೀ ಉಮಾಮಧುಕೇಶ್ವರ ದೇವರ ಮಹಾರಥೋತ್ಸವ

ರಾಜ್ಯದಲ್ಲಿ ಬರಗಾಲ ಆವರಿಸಿದ್ದರೂ ಕೇಂದ್ರ ಸರ್ಕಾರ ರಾಜ್ಯರ ರೈತರಿಗೆ ಬರ ಪರಿಹಾರ ಹಣ ಬಿಡುಗಡೆ ಮಾಡಿಲ್ಲ. ಕೇಂದ್ರ ಸರ್ಕಾರ ರೈತರ ಕಾಳಜಿ ತೊರುತ್ತಿಲ್ಲ ಎಂದು ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ಅಭ್ಯರ್ಥಿ ರಾಜಾವೇಣುಗೋಪಾಲ ನಾಯಕ ಮಾತನಾಡಿ, ಕ್ಷೇತ್ರದ ಮತದಾರರು ನನ್ನ ಪಾಲಿನ ತಂದೆ, ತಾಯಿ ಇದ್ದಂತೆ. ಕ್ಷೇತ್ರದ ಜನರ ಮಗನಾಗಿ ಜನ ಸೇವೆ ಮಾಡುತ್ತೇನೆ. ತಂದೆ ಅವರು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದು ಅವರ ಹಾದಿಯಲ್ಲಿ ಕ್ಷೇತ್ರದ ಅಭಿವೃದ್ಧಿ ಮಾಡುತ್ತೇನೆ ಎಂದು ತಿಳಿಸಿದರು.

ಇದನ್ನೂ ಓದಿ: Diabetic Controle: ಕಾಡುವ ಮಧುಮೇಹ ನಿಯಂತ್ರಣಕ್ಕೆ ಇಲ್ಲಿದೆ ಸುಲಭ ತಂತ್ರ

ರಾಯಚೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ. ಕುಮಾರನಾಯಕ ಮಾತನಾಡಿದರು.

ಭರ್ಜರಿ ರೋಡ್ ಶೋ

ನಂತರ ಕಾಂಗ್ರೆಸ್ ಅಭ್ಯರ್ಥಿ ರಾಜಾವೇಣುಗೋಪಾಲ ನಾಯಕ ಅವರು ರೋಡ್ ಶೋ ನಡೆಸಿ ಮತಯಾಚನೆ ನಡೆಸಿದರು. ವಸಂತ ಮಹಲ್‌ನಿಂದ ಸುರಪುರ ತಹಸೀಲ್ದಾರ್‌ ಕಚೇರಿವರೆಗೆ ರೋಡ್ ಶೋ ನಡೆಸಿದರು. ಸಾವಿರಾರು ಕಾರ್ಯಕರ್ತರು ಹಾಗೂ ಅಭಿಮಾನಿಗಳು ರೋಡ್ ಶೋದಲ್ಲಿ ಪಾಲ್ಗೊಂಡಿದ್ದರು.

ಮೆರವಣಿಗೆ ನಂತರ ತಹಸೀಲ್ದಾರ್‌ ಕಚೇರಿಗೆ ತೆರಳಿ, ಕಾಂಗ್ರೆಸ್ ಅಭ್ಯರ್ಥಿ ರಾಜಾವೇಣುಗೋಪಾಲ ನಾಯಕ ನಾಮಪತ್ರ ಸಲ್ಲಿಸಿದರು.

ಇದನ್ನೂ ಓದಿ: IPL 2024 : ಆರ್​ಸಿಬಿ, ಕೊಹ್ಲಿಯ ನೆರವು ಸ್ಮರಿಸಿದ ಕೆ. ಎಲ್ ರಾಹುಲ್​

ಈ ವೇಳೆ ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಬಸರೆಡ್ಡಿ ಪಾಟೀಲ ಅನಪುರ, ರಾಜಾ ಕೃಷ್ಣಪ್ಪ ನಾಯಕ, ಕೆಪಿಸಿಸಿ ಕಾರ್ಯದರ್ಶಿ ವಿಠಲ್ ಯಾದವ್‌, ರಾಜಶೇಖರ ಪಾಟೀಲ್ ವಜ್ಜಲ್, ಚಂದ್ರಶೇಖರ ದಂಡಿನ್, ರವಿಚಂದ್ರ ಆಲ್ದಾಳ, ಗುಂಡಪ್ಪ ಸೊಲ್ಲಾಪೂರ ಕಕ್ಕೇರಾ, ಮಲ್ಲಣ್ಣ ಸಾಹುಕಾರ, ಶಂಕ್ರಣ್ಣ ವಣಕ್ಯಾಳ, ರಾಜಾ ಕುಮಾರನಾಯಕ, ಶಾಂತಗೌಡ ಚನ್ನಪಟ್ಟಣ, ಹಣಮಂತ್ರಾಯ ಮಕಾಶಿ, ಅಬ್ದುಲ್ ಗಫರ್ ನಗನೂರಿ, ದೊಡ್ಡದೇಸಾಯಿ ದೇವರಗೋನಾಲ್‌ ಸೇರಿದಂತೆ ಸಹಸ್ರಾರು ಕಾಯಕರ್ತರು ಇದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain : ಭಾನುವಾರದ ವೀಕೆಂಡ್‌ ಮೂಡ್‌ನಲ್ಲಿದ್ದವರಿಗೆ ಮಳೆಯು ಮನೆಯಲ್ಲೇ ಕೂರುವಂತೆ ಮಾಡಿದೆ. ಬೆಂಗಳೂರು, ಆನೇಕಲ್‌ ಸೇರಿದಂತೆ ವಿವಿಧೆಡೆ ಮಳೆಯಾಗುತ್ತಿದ್ದು, ವಿಜಯನಗರದಲ್ಲಿ ಸಿಡಿಲು ಬಡಿದು ಎರಡು ಜಾನುವಾರು ಮೃತಪಟ್ಟಿವೆ. ದಾವಣಗೆರೆಯಲ್ಲಿ ಮಳೆಗೆ ಬೆಳೆಯು ಕೊಚ್ಚಿ ಹೋಗಿದೆ.

VISTARANEWS.COM


on

By

Karnataka rain
Koo

ವಿಜಯನಗರ/ಬೆಂಗಳೂರು: ರಾಜ್ಯಾದ್ಯಂತ ಭಾನುವಾರ ಹಲವೆಡೆ ಗುಡುಗು ಸಹಿತ ಮಳೆ (Karnataka Rain) ಅಬ್ಬರಿಸಿದೆ. ವಿಜಯನಗರ ಜಿಲ್ಲೆಯಲ್ಲಿ ಅರ್ಧ ಗಂಟೆಗೂ ಅಧಿಕ ಸಮಯ ಗುಡುಗು, ಸಿಡಿಲು ಸಹಿತ ಮಳೆ ಸುರಿದಿದೆ. ಹೊಸಪೇಟೆ ತಾಲೂಕಿನ ಗಾದಿಗನೂರು ಗ್ರಾಮದಲ್ಲಿ ಸಿಡಿಲು ಬಡಿದು ಎರಡು ಜಾನುವಾರುಗಳು ಮೃತಪಟ್ಟಿವೆ. ಕೋರಿ ಮಲಿಯಪ್ಪ ಎಂಬ ರೈತರಿಗೆ ಸೇರಿದ ಎತ್ತುಗಳನ್ನು ಹೊಲದಲ್ಲಿ ಮರದಡಿ ಕಟ್ಟಿ ಹಾಕಿದ್ದರು. ಈ ವೇಳೆ ಸಿಡಿಲು ಬಡಿದು ಎರಡು ಎತ್ತುಗಳು ಮೃತಪಟ್ಟಿವೆ. ಅಂದಾಜು ಒಂದು ಲಕ್ಷಕ್ಕೂ ಅಧಿಕ ಮೌಲ್ಯದ ಎತ್ತುಗಳು ಸಾವನ್ನಪ್ಪಿದ್ದರಿಂದ ರೈತ ಕೋರಿ ಮಲಿಯಪ್ಪ ಕಂಗಲಾಗಿದ್ದಾರೆ.

ಬೆಂಗಳೂರು, ಆನೇಕಲ್‌ನಲ್ಲಿ ಗುಡುಗು ಸಹಿತ ಮಳೆ

ರಾಜಧಾನಿ ಬೆಂಗಳೂರಿನಲ್ಲಿ ಮಳೆ ಮುಂದುವರಿದಿದೆ. ಸಂಜೆಗೆ ಆವರಿಸುತ್ತಿದ್ದ ಮಳೆ ಭಾನುವಾರ ಬೆಳಗಿನಿಂದಲೇ ಅಬ್ಬರಿಸುತ್ತಿದೆ. ಎಂಎಸ್ ಬಿಲ್ಡಿಂಗ್ , ವಿಧಾನಸೌಧ , ಶಿವಾನಂದ ಸರ್ಕಲ್, ಶಿವಾಜಿನಗರ ಸೇರಿದಂತೆ ಮೆಜೆಸ್ಟಿಕ್‌ ಸುತ್ತಮುತ್ತ ಮಧ್ಯಾಹ್ನ ಶುರುವಾದ ಮಳೆಯು ಸುಮಾರು 1 ಗಂಟೆಗೂ ಹೆಚ್ಚು ಸಮಯ ಆವರಿಸಿತ್ತು. ಆಗಾಗ ಬರುತ್ತಿದ್ದ ಗುಡುಗು ಜನರನ್ನು ಬೆಚ್ಚಿ ಬೀಳಿಸುತ್ತಿತ್ತು. ಕೆ.ಆರ್ ಸರ್ಕಲ್, ಕಬ್ಬನ್ ಪಾರ್ಕ್ ರಸ್ತೆ, ಲಾಲ್ ಬಾಗ್ ರಸ್ತೆ, ರಾಜಾಜಿನಗರ, ರಾಜಕುಮಾರ್ ರಸ್ತೆಯಲ್ಲಿಯೂ ಮಳೆಯಾಗಿದೆ. ಯಲಹಂಕ, ನ್ಯೂ ಟೌನ್, ದೊಡ್ಡಬಳ್ಳಾಪುರ ಮುಖ್ಯರಸ್ತೆ, ಪುಟ್ಟೇನಹಳ್ಳಿ, ಏರ್‌ಪೋರ್ಟ್‌ ರೋಡ್‌ನಲ್ಲಿ ಮಳೆಯಾಗಿದೆ.

ಇತ್ತ ಆನೇಕಲ್ ಭಾಗದಲ್ಲೂ ಧಾರಾಕಾರ ಮಳೆಯಾಗಿತ್ತು. ಭಾನುವಾರ ಬೆಳಗ್ಗೆಯಿಂದ ಮೋಡ ಕವಿದ ವಾತಾವರಣವಿತ್ತು. ಮಧ್ಯಾಹ್ನದ ವೇಳೆಗೆ ಆಗಮಿಸಿದ ಮಳೆಯು ಆನೇಕಲ್, ಅತ್ತಿಬೆಲೆ, ಸರ್ಜಾಪುರ ಭಾಗದಲ್ಲಿ ಅಬ್ಬರಿಸಿತ್ತು. ಕಳೆದೊಂದು ವಾರದಿಂದ ನಿರಂತರ ಮಳೆಯಿಂದಾಗಿ ಕೃಷಿ ಚಟುವಟಿಕೆ ಚುರುಕುಗೊಂಡಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

ಧಾರವಾಡದಲ್ಲೂ ಮಳೆ

ಪೇಡಾನಗರಿ ಧಾರವಾಡದಲ್ಲೂ ವರುಣನ ಅಬ್ಬರ ಮುಂದುವರಿದಿದೆ. ಮಧ್ಯಾಹ್ನದ ವೇಳೆ ಶುರುವಾದ ಮಳೆಯಿಂದಾಗಿ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು. ಮಳೆಯಿಂದಾಗಿ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

ವಿಜಯನಗರದಲ್ಲಿ ಮರಕ್ಕೆ ಬಡಿದ ಸಿಡಿಲು

ವಿಜಯನಗರದಲ್ಲಿ ಗುಡುಗು ಸಿಡಿಲು ಸಮೇತ ಮಳೆಯಾಗುತ್ತಿದ್ದು, ತೆಂಗಿನ ಮರಕ್ಕೆ ಸಿಡಿಲು ಬಡಿದಿದೆ. ಹೊಸಪೇಟೆ ತಾಲೂಕಿನ ಕೆರೆ ತಾಂಡಾ ಗ್ರಾಮದಲ್ಲಿ ಮರಕ್ಕೆ ಸಿಡಿಲು ಬಡಿದಿದೆ. ವಿಜಯನಗರ ಜಿಲ್ಲೆಯ ಹೊಸಪೇಟೆ, ಕಮಲಾಪುರ, ಹಂಪಿ ಭಾಗದಲ್ಲಿ ಉತ್ತಮ ಮಳೆಯಾಗಿದೆ. ಇತ್ತ ಹೊಸಪೇಟೆ ಹೃದಯ ಭಾಗದಲ್ಲಿ ರಸ್ತೆ ಮೇಲೆ ನೀರು ನಿಂತು ಅವಾಂತರವೇ ಸೃಷ್ಟಿಯಾಗಿತ್ತು. ನೂರು ಹಾಸಿಗೆ ಆಸ್ಪತ್ರೆ, VNC ಕಾಲೇಜಿಗೆ ಹೋಗುವ ರಸ್ತೆ ಮೇಲೆ ನೀರು ನಿಂತಿತ್ತು. ಕೆಲ ಸಮಯ ವಾಹನಗಳ ಸಂಚಾರ ಅಡಚಣೆ ಉಂಟಾಯಿತು

ಇದನ್ನೂ ಓದಿ: Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

ದಾವಣಗೆರೆಯಲ್ಲಿ ನೆಲ ಕಚ್ಚಿದ ಬೆಳೆ

ಶನಿವಾರ ಸುರಿದ ಮಳೆಯಿಂದ ಭತ್ತದ ಬೆಳೆ‌ಯು ನೆಲ ಕಚ್ಚಿದೆ. ದಾವಣಗೆರೆಯ ದೊಡ್ಡಬಾತಿ ಗ್ರಾಮದ ಸುತ್ತಮುತ್ತಲಿನ 20ಕ್ಕೂ ಹೆಚ್ಚು ಎಕರೆ ಭತ್ತದ ಬೆಳೆ ನಾಶವಾಗಿದೆ. ಉಮೇಶ್ ಎಂಬ ಯುವ ರೈತ ಬೆಳೆದಿದ್ದ ಎರಡು ಎಕರೆ ಭತ್ತ ಸಂಪೂರ್ಣ ನಾಶವಾಗಿತ್ತು. ಬರಗಾಲದ ಸಂದರ್ಭದಲ್ಲಿ ಬೋರ್ ವೆಲ್ ನೀರಿನಲ್ಲಿ ಭತ್ತ ಬೆಳೆ ಬೆಳೆದಿದ್ದರು. ಎಕರೆಗೆ 25 ರಿಂದ 30 ಸಾವಿರ ಖರ್ಚು ಮಾಡಿ ಬೆಳೆದಿದ್ದ ಬೆಳೆಯು ರಾತ್ರಿ ಸುರಿದ ಮಳೆಗೆ ಸಂಪೂರ್ಣ ನಾಶವಾಗಿದೆ. ಮಳೆ ಬಾರದೇ ಕಷ್ಟ ಅನುಭವಿಸಿದ ರೈತರಿಗೆ ಈಗ ಮಳೆ ಬಂದು ಗಾಯದ ಮೇಲೆ ಬರೆ ಎಳೆದಂತಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆ; ಆರೆಂಜ್‌, ಯೆಲ್ಲೋ ಎಚ್ಚರಿಕೆ

Karnataka Weather Forecast : ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಿಗೆ ಆರೆಂಜ್‌ ಹಾಗೂ ಯೆಲ್ಲೋ ಅಲರ್ಟ್‌ ನೀಡಲಾಗಿದೆ. 50 ಕಿ.ಮೀ ವ್ಯಾಪ್ತಿಯಲ್ಲಿ ಬಿರುಗಾಳಿ ಬೀಸಲಿದ್ದು, ಮರದಡಿ ನಿಲ್ಲದಂತೆ ಎಚ್ಚರಿಕೆ ನೀಡಲಾಗಿದೆ.

VISTARANEWS.COM


on

By

Karnataka weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ. ಪ್ರತ್ಯೇಕ ಕಡೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಹಿತ ಮಿಂಚು ಮತ್ತು ಗಾಳಿಯು ಗಂಟೆಗೆ 40-50 ಕಿ.ಮೀ ವ್ಯಾಪ್ತಿಯಲ್ಲಿ (Karnataka Weather Forecast) ಬೀಸಲಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ವ್ಯಾಪ್ತಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 31 ಮತ್ತು 22 ಡಿ.ಸೆ ಇರಲಿದೆ.

ಉತ್ತರ ಒಳನಾಡಿನ ಬಳ್ಳಾರಿ, ವಿಜಯನಗರ, ಹಾವೇರಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಯಾದಗಿರಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಭಾಗಗಳಲ್ಲಿ ಹಗುರದಿಂದ ಹಗುರವಾದ ಮಳೆಯಾಗಲಿದೆ.

ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ ಇದ್ದು, ಶಿವಮೊಗ್ಗ ಜಿಲ್ಲೆಯಾದ್ಯಂತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಉಡುಪಿ, ಉತ್ತರ ಕನ್ನಡದಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುತ್ತದೆ.

ಇದನ್ನೂ ಓದಿ: Anjali Murder Case: ನನ್ನ ಮಗ ಮಾಡಿದ್ದು ತಪ್ಪು, ಕೋರ್ಟ್ ಅವನಿಗೆ ಯಾವ ಶಿಕ್ಷೆಯಾದ್ರೂ ಕೊಡಲಿ: ಆರೋಪಿ ಗಿರೀಶ್ ತಾಯಿ

ಆರೆಂಜ್‌, ಯೆಲ್ಲೋ ಅಲರ್ಟ್‌

ಚಿತ್ರದುರ್ಗ, ಹಾಸನ, ಕೊಡಗು ಮತ್ತು ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಭಾರೀ ಮಳೆಯೊಂದಿಗೆ ಗುಡುಗು, ಬಿರುಗಾಳಿಯು ಗಂಟೆಗೆ 30-40 ಕಿ.ಮೀ ಬೀಸಲಿದೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ಶಿವಮೊಗ್ಗದಲ್ಲೂ ವ್ಯಾಪಕ ಮಳೆಯಾಗಲಿದೆ. ಹೀಗಾಗಿ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

MLC Election: ನಾಮಪತ್ರ ವಾಪಸ್ ಪಡೆಯಲು ನಿರ್ಧರಿಸಿದ ಬಿಜೆಪಿ ಬಂಡಾಯ ಅಭ್ಯರ್ಥಿ

MLC Election: ವಿಧಾನಪರಿಷತ್ತಿನ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತನಾಗಿ, ಆಕಾಂಕ್ಷಿಯಾಗಿದ್ದು ಮೊನ್ನೆ ನಾಮಪತ್ರ ಸಲ್ಲಿಸಿದ್ದೆ. ಪಕ್ಷ ನಿಮ್ಮನ್ನು, ನಿಮ್ಮ ಸೇವೆಯನ್ನು ಮುಂದೆ ಗುರುತಿಸಲಿದೆ ಎಂದು ಹಿರಿಯರಾದ ಯಡಿಯೂರಪ್ಪ ಅವರು ಹೇಳಿದ್ದಾರೆ. ಅಮರನಾಥ ಪಾಟೀಲರನ್ನು ಬೆಂಬಲಿಸಿ ಎಂದು ಪಕ್ಷದ ಇತರ ನಾಯಕರು ಸೂಚಿಸಿದ್ದಾರೆ. ಅವರ ಸೂಚನೆಯಂತೆ ಸೋಮವಾರ ಕಲಬುರಗಿಗೆ ತೆರಳಿ ನಾಮಪತ್ರ ಹಿಂದಕ್ಕೆ ಪಡೆಯಲಿದ್ದೇನೆ ಎಂದು ಸುರೇಶ್ ಸಜ್ಜನ್ ತಿಳಿಸಿದ್ದಾರೆ

VISTARANEWS.COM


on

MLC Election Withdrawal of nomination paper says Suresh Sajjan
Koo

ಬೆಂಗಳೂರು: ವಿಧಾನಪರಿಷತ್ತಿನ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ (MLC Election) ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತನಾಗಿ, ಆಕಾಂಕ್ಷಿಯಾಗಿದ್ದು ನಾಮಪತ್ರ ಸಲ್ಲಿಸಿದ್ದೆ. ಪಕ್ಷ ನಿಮ್ಮನ್ನು, ನಿಮ್ಮ ಸೇವೆಯನ್ನು ಮುಂದೆ ಗುರುತಿಸಲಿದೆ ಎಂದು ಹಿರಿಯರಾದ ಯಡಿಯೂರಪ್ಪ ಅವರು ಹೇಳಿದ್ದಾರೆ. ಅಮರನಾಥ ಪಾಟೀಲರನ್ನು ಬೆಂಬಲಿಸಿ ಎಂದು ಪಕ್ಷದ ಇತರ ನಾಯಕರು ಸೂಚಿಸಿದ್ದಾರೆ. ಅವರ ಸೂಚನೆಯಂತೆ ಸೋಮವಾರ ಕಲಬುರಗಿಗೆ ತೆರಳಿ ನಾಮಪತ್ರ ಹಿಂದಕ್ಕೆ ಪಡೆಯಲಿದ್ದೇನೆ ಎಂದು ಸುರೇಶ್ ಸಜ್ಜನ್ ತಿಳಿಸಿದರು.

ಇದನ್ನೂ ಓದಿ: Karnataka Weather : ಮಲೆನಾಡಿನಲ್ಲಿ ಮಳೆ ಮೋಡಿ; ಭಾನುವಾರವೂ ಅಬ್ಬರ ಇರಲಿದೆ ನೋಡಿ

ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಕ್ಷದ ಹಿರಿಯರು, ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು, ರಾಜ್ಯಾಧ್ಯಕ್ಷ ವಿಜಯೇಂದ್ರ, ಮಾಜಿ ಸಚಿವ ರಾಜುಗೌಡ, ಎನ್. ರವಿಕುಮಾರ್, ಗೋವಿಂದ ಕಾರಜೋಳ ಅವರ ಆಶೀರ್ವಾದ ಪಡೆಯಲು ನಿಯೋಗದೊಂದಿಗೆ ಇಲ್ಲಿಗೆ ಬಂದಿದ್ದೆ. ನಾಮಪತ್ರ ವಾಪಸ್ ಪಡೆಯುವಂತೆ ಸೂಚಿಸಿದ್ದಾರೆ. ಅವರ ಮಾತಿಗೆ ಒಪ್ಪಿದ್ದೇನೆ ಎಂದು ತಿಳಿಸಿದರು. ಇಲ್ಲಿಗೆ ಬಂದಿದ್ದ ಮುಖಂಡರ ಜತೆ ಸಮಾಲೋಚನೆ ಮಾಡಿ ಈ ನಿರ್ಧಾರ ಮಾಡಿದ್ದಾಗಿ ವಿವರಿಸಿದರು.

ರಾಜ್ಯಾಧ್ಯಕ್ಷರು ಪಕ್ಷಕ್ಕಾಗಿ ಮಾಡುತ್ತಿರುವ ಹೋರಾಟ, ಸಂಘಟನಾ ಕಾರ್ಯಕ್ಕೆ ಅವರು ಮೆಚ್ಚುಗೆ ಸೂಚಿಸಿದರು. ನನಗೆ ಟಿಕೆಟ್ ಮುಖ್ಯವಲ್ಲ; ಪಕ್ಷದ ಅಭ್ಯರ್ಥಿಯ ಗೆಲುವೇ ಮುಖ್ಯ ಎಂದು ತಿಳಿಸಿದ ಅವರು, ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಮುಂದೆ ಮುಖ್ಯಮಂತ್ರಿಯಾಗಲು ಅವರ ಕೈ ಬಲಪಡಿಸುವ ಅಗತ್ಯವಿದೆ ಎಂದು ಇದೇ ವೇಳೆ ತಿಳಿಸಿದರು.

ಇದನ್ನೂ ಓದಿ: Ration Card: ಹೊಸ ರೇಷನ್‌ ಕಾರ್ಡ್‌ಗೆ ಅರ್ಜಿ ಸಲ್ಲಿಸಬೇಕೆ? ಇಲ್ಲಿದೆ ಸಂಪೂರ್ಣ ವಿವರ

ಅಮರನಾಥ ಪಾಟೀಲ್‌ ಅವರ ಗೆಲುವಿಗೆ ನಾವೆಲ್ಲರೂ ಒಗ್ಗೂಡಿ ಶ್ರಮಿಸಲಿದ್ದೇವೆ ಎಂದು ಇದೇ ಸಂದರ್ಭದಲ್ಲಿ ಸುರೇಶ್ ಸಜ್ಜನ್ ತಿಳಿಸಿದರು.

Continue Reading

ಮಳೆ

Karnataka Weather : ಮಲೆನಾಡಿನಲ್ಲಿ ಮಳೆ ಮೋಡಿ; ಭಾನುವಾರವೂ ಅಬ್ಬರ ಇರಲಿದೆ ನೋಡಿ

Heavy rain : ಶನಿವಾರದಂದು ಚಿಕ್ಕಮಗಳೂರು, ಹಾಸನ, ತುಮಕೂರಲ್ಲಿ ಭಾರಿ ಮಳೆಯಾಗುತ್ತಿದ್ದು, ರಸ್ತೆ ಮೇಲೆ ನದಿಯಂತೆ ನೀರು ಹರಿಯುತ್ತಿದೆ. ರಾಜ್ಯಾದ್ಯಂತ ಇನ್ನೊಂದು ವಾರ ಮಳೆ (Rain News) ಜೋರಾಗಿ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

VISTARANEWS.COM


on

By

Karnataka Weather Forecast Rain alert
Koo

ಚಿಕ್ಕಮಗಳೂರು/ಹಾಸನ: ರಾಜ್ಯಾದ್ಯಂತ ಗುಡುಗು ಸಹಿತ ಮಳೆಯು (Karnataka Weather Forecast) ಅಬ್ಬರಿಸುತ್ತಿದೆ. ಚಿಕ್ಕಮಗಳೂರಿನಲ್ಲಿ ಮಳೆ (Rain News) ಆರ್ಭಟ ಮುಂದುವರಿದಿದೆ. ರಾತ್ರಿಯಿಡೀ ಜಿಲ್ಲೆಯ ಹಲವೆಡೆ ಭಾರಿ ಮಳೆಯಾಗಿದ್ದು ಹಳ್ಳ ಕೊಳ್ಳಗಳು ಉಕ್ಕಿ ಹರಿಯುತ್ತಿವೆ. ಕಳಸಾ ಪುರ, ಗಾಳಿ ಹಳ್ಳಿ, ಮಾಗಡಿ, ಬೆಳವಾಡಿ, ಲಕ್ಯಾ, ಸಿಂದಿಗೆರೆ ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ. ರಸ್ತೆ, ಸೇತುವೆ ಮೇಲೆ ನದಿಯಂತೆ ನೀರು ಹರಿಯುತ್ತಿರುದೆ.

ಇನ್ನೂ ಭಾರಿ ಮಳೆಗೆ ಸುತ್ತಮುತ್ತಲಿನ ತೋಟ, ಗದ್ದೆಯು ಸಂಪೂರ್ಣ ಜಲಾವೃತಗೊಂಡಿದೆ. ಕೆರೆಗಳು ಸಂಪೂರ್ಣ ತುಂಬುವ ಹಂತ ತಲುಪಿದೆ. ಚಿಕ್ಕಮಗಳೂರು ತಾಲೂಕಿನ ಐತಿಹಾಸಿಕ ಮಾಗಡಿ ದೊಡ್ಡ ಕೆರೆಗೂ ಭಾರಿ ಪ್ರಮಾಣ ನೀರು ಹರಿದಿದೆ.

ಹಾಸನದಲ್ಲಿ ಸುರಿದ ಧಾರಾಕಾರ ಮಳೆ

ಹಾಸನ ನಗರದ ಹಲವೆಡೆ ಬಿಟ್ಟು ಬಿಡದೆ ಧಾರಾಕಾರವಾಗಿ ಮಳೆ ಸುರಿದಿದೆ. ಶನಿವಾರ ಕಳೆದೊಂದು ಗಂಟೆಯಿಂದ ಹಲವೆಡೆ ಮಳೆ ಆರ್ಭಟಿಸಿದ್ದು, ಜನ ಜೀವನ ಅಸ್ತವ್ಯಸ್ತವಾಗಿತ್ತು. ಭಾರಿ ಮಳೆಗೆ ಹಾಸನ ನಗರದಲ್ಲಿ ಪಾದಾಚಾರಿಗಳು ವಾಹನ ಸವಾರರು ಪರದಾಡಿದರು. ಚನ್ನರಾಯಪಟ್ಟಣ, ಹೊಳೆನರಸೀಪುರ, ಸಕಲೇಶಪುರ, ಆಲೂರು ಭಾಗಗಳಲ್ಲೂ ಮಳೆಯಾಗಿದೆ.

ತುಮಕೂರಿನಲ್ಲಿ ಗುಡುಗು ಸಹಿತ ಮಳೆ

ಶನಿವಾರ ಸಂಜೆಯಾಗುತ್ತಿದ್ದಂತೆ ತುಮಕೂರಿನಲ್ಲಿ ವರುಣನ ಆರ್ಭಟ ಜೋರಾಗಿತ್ತು. ಗುಡುಗು, ಸಿಡಿಲು, ಬಿರುಗಾಳಿ ಸಹಿತ ಮಳೆಯಾಗಿದೆ. ತುಮಕೂರು ನಗರ, ಗ್ರಾಮಾಂತರ, ಗುಬ್ಬಿ ಸೇರಿದಂತೆ ಜಿಲ್ಲೆಯ ಹಲವೆಡೆ ಭಾರಿ ಮಳೆಯಾಗಿದೆ. ತುಮಕೂರು ನಗರದ ರಸ್ತೆ ಮೇಲೆ ಹಳ್ಳದಂತೆ ಹರಿಯುತ್ತಿರುವ ನೀರಿನಿಂದಾಗಿ ವಾಹನ ಸವಾರರ ಪರದಾಡಬೇಕಾಯಿತು. ಹಲವೆಡೆ ವಿದ್ಯುತ್ ವ್ಯತ್ಯಯ ಉಂಟಾಗಿದೆ.

ಇದನ್ನೂ ಓದಿ: Koppal Tragedy : ಶೌಚಾಲಯದ ಗೋಡೆ ಕುಸಿದು ಮಹಿಳೆಯರಿಬ್ಬರು ಸಾವು; ಈಜಲು ಹೋದ ಯುವಕ ನೀರುಪಾಲು

ಭಾನುವಾರವೂ ಇರಲಿದೆ ಮಳೆ ಮೋಡಿ

ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಒಂದು ಅಥವಾ ಸ್ಥಳಗಳಲ್ಲಿ ಭಾರೀ ಗಾಳಿಯೊಂದಿಗೆ (40-50 kmph) ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ ಜಿಲ್ಲೆಗಳ ಒಂದು ಅಥವಾ ಸ್ಥಳಗಳಲ್ಲಿ ಮಳೆಯು ಅಬ್ಬರಿಸಲಿದೆ. ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಜೋರಾದ ಗಾಳಿಯೊಂದಿಗೆ (40-50 kmph) ಸಾಧಾರಣ ಮಳೆಯಾಗಲಿದೆ.

ಉತ್ತರ ಒಳನಾಡಿನ ಧಾರವಾಡ, ಹಾವೇರಿ ಜಿಲ್ಲೆಗಳ ಕೆಲವೆಡೆ ಬಿರುಗಾಳಿ (30-40 kmph) ಸಹಿತ ಸಾಧಾರಣ ಮಳೆಯಾಗುವ ಸಂಭವವಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (30-40 kmph) ಹಗುರ ಮಳೆಯಾಗುವ ಸಾಧ್ಯತೆಯಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Kannada New Movie Sambavami Yuge Yuge 4K Motion Poster
ಸಿನಿಮಾ7 mins ago

Kannada New Movie: `ಸಂಭವಾಮಿ ಯುಗೇಯುಗೇ’ ಚಿತ್ರದ ಕ್ಯಾರೆಕ್ಟರ್ ಮೋಷನ್ ಪೋಸ್ಟರ್ ಬಿಡುಗಡೆ

Prajwal Revanna Case
ಕರ್ನಾಟಕ17 mins ago

Prajwal Revanna Case: ಪೆನ್​​ಡ್ರೈವ್ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ; ದೇವರಾಜೇಗೌಡ ತಪ್ಪು ಮಾಹಿತಿ ನೀಡಿದ್ದಾರೆ: ಶಿವರಾಮೇಗೌಡ

Cholera
ಕರ್ನಾಟಕ25 mins ago

Cholera: ಸಿದ್ದರಾಮಯ್ಯ ತವರು ಕ್ಷೇತ್ರದಲ್ಲಿ ಕಾಲರಾ ಅಟ್ಟಹಾಸ; ಕಲುಷಿತ ನೀರು ಕುಡಿದು 114 ಜನಕ್ಕೆ ಕಾಯಿಲೆ!

RCB vs CSK
ಕ್ರೀಡೆ28 mins ago

RCB vs CSK: ಚೆನ್ನೈ ಸೋಲಿಗೆ ಧೋನಿ ಬಾರಿಸಿದ ಔಟ್​ ಆಫ್​ದಿ ಸ್ಟೇಡಿಯಂ ಸಿಕ್ಸರ್​ ಕಾರಣ

Ninagagi Kannada Serial Ritvvikk Mathad Playing Lead In Divya Uruduga
ಕಿರುತೆರೆ29 mins ago

Ninagagi Kannada Serial: ʻನಿನಗಾಗಿʼ ಸೀರಿಯಲ್‌ನಲ್ಲಿ ದಿವ್ಯಾ ಉರುಡುಗ ಜತೆ ‘ಗಿಣಿರಾಮ’ ಧಾರಾವಾಹಿಯ ನಟ ನಟನೆ

British Journalist
ದೇಶ36 mins ago

British Journalist: “ನವ ಭಾರತದ ಬಗ್ಗೆ ಪ್ರಪಂಚಕ್ಕೆ ತಿಳಿಸಬೇಕು”- ಇಂಡಿಯಾಗೆ ಮನಸೋತ ಬ್ರಿಟಿಷ್‌ ಪತ್ರಕರ್ತ

Karnataka rain
ಮಳೆ36 mins ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

RCB
ಕ್ರಿಕೆಟ್59 mins ago

RCB: ಆರ್​ಸಿಬಿಯ ನಂಟು ಬಿಡದ ವಿಜಯ್​ ಮಲ್ಯ; ಟ್ವೀಟ್​ ಮೂಲಕ ಅಭಿನಂದನೆ

Pavithra Jayaram Trinayani Serial Son Prajwal Reaction
ಸಿನಿಮಾ1 hour ago

Pavithra Jayaram: ಅಮ್ಮ ಮತ್ತು ಚಂದ್ರಕಾಂತ್‌ ಒಡನಾಟ ಹೇಗಿತ್ತು ಅಂತ ನಮಗೆ ಗೊತ್ತು ಎಂದ ಪವಿತ್ರ ಜಯರಾಮ್ ಮಗ!

Karnataka Rain
ಮಳೆ2 hours ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka rain
ಮಳೆ36 mins ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 hours ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ2 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ2 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ3 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು3 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ4 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ4 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

ಟ್ರೆಂಡಿಂಗ್‌