Lok Sabha Election 2024: 1 ವೋಟಿಗಾಗಿ ದಟ್ಟ ಕಾಡಿನಲ್ಲಿ 18 ಕಿ.ಮೀ. ನಡೆದ ಚುನಾವಣಾ ಸಿಬ್ಬಂದಿ - Vistara News

Lok Sabha Election 2024

Lok Sabha Election 2024: 1 ವೋಟಿಗಾಗಿ ದಟ್ಟ ಕಾಡಿನಲ್ಲಿ 18 ಕಿ.ಮೀ. ನಡೆದ ಚುನಾವಣಾ ಸಿಬ್ಬಂದಿ

Lok Sabha Election 2024: ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಆರಂಭವಾಗಿದೆ. ವಿಶೇಷ ಎಂದರೆ ಈ ಬಾರಿ ಚುನಾವಣಾ ಆಯೋಗ ಕೆಲ ವೃದ್ಧ, ಅಸಕ್ತ, ನಡೆಯಲು ಬಾರದ ಮತದಾರರಿಗೆ ಮನೆಯಿಂದಲೇ ವೋಟು ಹಾಕುವ ಅವಕಾಶವನ್ನು ಕಲ್ಪಿಸಿದೆ. ಅದರಂತೆ ಈ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಿದ 92 ವರ್ಷದ ವೃದ್ಧರೊಬ್ಬರಿಗಾಗಿ ಚುನಾವಣಾ ಸಿಬ್ಬಂದಿ ಬರೋಬ್ಬರಿ 18 ಕಿ.ಮೀ. ಕಾಡು ದಾರಿಯಲ್ಲಿ ನಡೆದಿದ್ದಾರೆ. ಕೇರಳದಲ್ಲಿ ಈ ಘಟನೆ ನಡೆದಿದ್ದು, ಕರ್ತವ್ಯ ಪ್ರಜ್ಞೆಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

VISTARANEWS.COM


on

Lok Sabha Election 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ದೇಶದಲ್ಲಿ ಲೋಕಸಭಾ ಚುನಾವಣೆ (Lok Sabha Election 2024)ಯ ಮೊದಲ ಹಂತದ ಮತದಾನ ಇಂದು (ಏಪ್ರಿಲ್‌ 19) ನಡೆದಿದೆ. ಒಟ್ಟು 7 ಹಂತಗಳಲ್ಲಿ ಮತದಾನಕ್ಕೆ ವ್ಯವಸ್ಥೆ ಮಾಡಲಾಗಿದೆ. ವಿಶೇಷ ಎಂದರೆ ಈ ಬಾರಿ ಚುನಾವಣಾ ಆಯೋಗ ಕೆಲ ವೃದ್ಧ, ಅಸಕ್ತ, ನಡೆಯಲು ಬಾರದ ಮತದಾರರಿಗೆ ಮನೆಯಿಂದಲೇ ವೋಟು ಹಾಕುವ ಅವಕಾಶವನ್ನು ಕಲ್ಪಿಸಿದೆ. ಈ ವೋಟ್‌ ಪ್ರಮ್ ಹೋಮ್‌ (Vote from home)ಗಾಗಿ ಚುನಾವಣಾ ಕರ್ತವ್ಯದಲ್ಲಿರುವ ಸಿಬ್ಬಂದಿ ವೃದ್ಧರ ಮನೆ ಬಾಗಿಲಿಗೇ ಬರುತ್ತಾರೆ. ಅದರಂತೆ ಕೇರಳದಲ್ಲಿ 92 ವರ್ಷದ ವೃದ್ಧರೊಬ್ಬರ ಒಂದೇ ಒಂದು ವೋಟಿಗಾಗಿ ಚುನಾವಣಾ ಸಿಬ್ಬಂದಿ ದಟ್ಟ ಕಾಡಿನಲ್ಲಿ ಸುಮಾರು 18 ಕಿ.ಮೀ. ಪ್ರಯಾಣ ಬೆಳೆಸಿದ್ದಾರೆ. ಸದ್ಯ ಚುನಾವಣಾ ಸಿಬ್ಬಂದಿಯ ಈ ಕರ್ತವ್ಯ ಪ್ರಜ್ಞೆಗೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಕೇರಳದ ಇಡುಕ್ಕಿ ಜಿಲ್ಲೆಯ ಎಡಮಲಕ್ಕುಡಿ ಎಂಬ ಬುಡಕಟ್ಟು ಗ್ರಾಮದಲ್ಲಿ ವಾಸಿಸುತ್ತಿರುವ ಶಿವಲಿಂಗಂ ಅವರ ವೋಟಿಗಾಗಿ ಚುನಾವಣಾ ಸಿಬ್ಬಂದಿ ಕಲ್ಲು-ಮುಳ್ಳುಗಳ ಹಾದಿ ತುಳಿದು 18 ಕಿ.ಮೀ. ನಡೆದಿದ್ದಾರೆ. ಇಡುಕ್ಕಿ ಲೋಕಸಭಾ ಕ್ಷೇತ್ರದ ಹಿರಿಯ ನಾಗರಿಕ ಮತದಾರರಾದ ಶಿವಲಿಂಗಂ ಅನಾರೋಗ್ಯದಿಂದ ಹಾಸಿಗೆ ಹಾಸಿಗೆ ಹಿಡಿದಿದ್ದಾರೆ. ಆದರೂ ತಮ್ಮ ಹಕ್ಕನ್ನು ಚಲಾಯಿಸಬೇಕೆಂಬ ಮಹದಾಸೆ ಹೊಂದಿದ್ದರು.

ಆನಂದ ಭಾಷ್ಪ

ಈ ಬಾರಿಯ ವೋಟ್ ಫ್ರಮ್ ಹೋಮ್ ಸೌಲಭ್ಯ ಶಿವಲಿಂಗಂ ಅವರ ಕುಟುಂಬದವರ ಗಮನಕ್ಕೆ ಬಂದಿತ್ತು. ಕೂಡಲೇ ಕುಟುಂಬಸ್ಥರು ಸ್ಥಳೀಯ ಬೂತ್ ಅಧಿಕಾರಿಯ ಸಹಾಯದಿಂದ ವೋಟ್ ಫ್ರಮ್ ಹೋಮ್‌ಗೆ ಅರ್ಜಿ ಸಲ್ಲಿಸಿದ್ದರು. ಇವರ ಮನವಿಯನ್ನು ಪುರಸ್ಕರಿಸಿದ ಚುನಾವಣಾ ಆಯೋಗ ಸಿಬ್ಬಂದಿಯನ್ನು ನೇಮಿಸಿತ್ತು. ಮತ ಚಲಾಯಿಸುವಾಗ ಶಿವಲಿಂಗಂ ಅವರಿಗೆ ಕಣ್ಣೀರನ್ನು ನಿಯಂತ್ರಿಸಲು ಸಾಧ್ಯವಾಗಲಿಲ್ಲ ಎಂದು ಸಿಬ್ಬಂದಿ ತಿಳಿಸಿದ್ದಾರೆ.

ರೋಚಕ ಪ್ರಯಾಣ

ಚುನಾವಣಾ ಸಿಬ್ಬಂದಿ ಶಿವಲಿಂಗಂ ಅವರ ಮನೆಗೆ ತಲುಪಿದ್ದೇ ಒಂದು ಸಾಹಸಗಾಥೆ. ಮೂವರು ಮಹಿಳೆಯರು ಸೇರಿದಂತೆ 9 ಜನರಿದ್ದ ಚುನಾವಣಾ ಸಿಬ್ಬಂದಿಯ ತಂಡ ಬುಧವಾರ ಶಿವಲಿಂಗಂ ಮನೆಗೆ ಹೊರಟಿತ್ತು. ಇದಕ್ಕಾಗಿ ಸಿಬ್ಬಂದಿ ಬೆಳಿಗ್ಗೆ ಸುಮಾರು 6 ಗಂಟೆಗೆ ಮುನ್ನಾರ್‌ನಿಂದ ಹೊರಟು ಅಲ್ಲಿಂದ ವಾಹನದಲ್ಲಿ ಪಯಣಿಸಿ ಇರ್ವಿಕುಲಂ ರಾಷ್ಟ್ರೀಯ ಉದ್ಯಾನವನದ ನಡುವೆ ಸಾಗಿ ಇಡಮಲಕ್ಕುಡಿಯ ಪ್ರವೇಶ ದ್ವಾರವಾದ ಪೆಟ್ಟಿಮುಡಿಯಲ್ಲಿರುವ ಕೆಪ್ಪಕಾಡು ಪ್ರದೇಶವನ್ನು ತಲುಪಿದರು.

ಅಲ್ಲಿಂದ ಮತ್ತೆ ನಿಜವಾದ ಸವಾಲು ಆರಂಭವಾಗಿತ್ತು. ಕಡಿದಾದ ನಿರ್ಜನ ರಸ್ತೆಯ ಮೂಲಕ ಅವರು ಮತ್ತೆ 18 ಕಿ. ಮೀ. ಪ್ರಯಾಣ ಬೆಳೆಸಿದರು. ದಟ್ಟ ಅರಣ್ಯದಲ್ಲಿ ಕಾಲ್ನಡಿಗೆ ಮೂಲಕ ಸಾಗಿದ ಅವರು ಶಿವಲಿಂಗಂ ಅವರ ಮನೆಗೆ ತಲುಪುವಾಗ ಗಂಟೆ ಮಧ್ಯಾಹ್ನ 1.15 ಆಗಿತ್ತು.

ಇದನ್ನೂ ಓದಿ: Lok Sabha Election 2024: ನಾಗಾಲ್ಯಾಂಡ್‌ನ 6 ಜಿಲ್ಲೆಗಳಲ್ಲಿ ಶೂನ್ಯ ಮತದಾನ; ಕಾರಣ ಇದು

ʼʼಅಲ್ಲಿಗೆ ತಲುಪಿದಾಗ ಮೊದಲಿಗೆ ಶಿವಲಿಂಗಂ ಅವರನ್ನು ಗುರುತಿಸುವುದು ಕಷ್ಟವಾಗಿತ್ತು. ಯಾಕೆಂದರೆ ಅಲ್ಲಿ ಸುಮಾರು 10 ಮನೆಗಳಿದ್ದವು. ಕೊನೆಗೂ ಶಿವಲಿಂಗಂ ಅವರನ್ನು ಗುರುತಿಸಿದೆವು. ಗುಡಿಸಲಿನಲ್ಲಿ ವಾಸವಾಗಿರುವ ಅವರು ಮಾತನಾಡಲು ಮತ್ತು ಎದ್ದು ನಿಲ್ಲಲೂ ಕಷ್ಟ ಪಡುತ್ತಿದ್ದಾರೆ. ಆದರೂ ಈ ಇಳಿ ವಯಸ್ಸಿನಲ್ಲಿಯೂ ತಮ್ಮ ಕರ್ತವ್ಯವನ್ನು ಮರೆಯದ ಅವರನ್ನು ನೋಡಿ ಹೆಮ್ಮೆ ಎನಿಸಿತು. ಕೊನೆಗೆ ಅವರ ಮನೆಯಲ್ಲೇ ವೋಟಿಂಗ್ ಬೂತ್ ಸಿದ್ಧಪಡಿಸಿ ಅವರ ಗೌಪ್ಯ ಮತದಾನಕ್ಕೆ ಅವಕಾಶ ಮಾಡಿಕೊಟ್ಟೆವುʼʼ ಎಂದು ಸಿಬ್ಬಂದಿಯೊಬ್ಬರು ವಿವರಿಸಿದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Narendra Modi: ಗುರಿ ದೊಡ್ಡದಿದೆ, 3ನೇ ಅವಧಿಯ ಆಡಳಿತಕ್ಕೆ ಪ್ಲಾನ್‌ ರೆಡಿ ಇದೆ; ಮೋದಿ ವಿಶ್ವಾಸ

Narendra Modi: ದೇಶದ ಚುನಾವಣೆ ಫಲಿತಾಂಶ ಏನಾಗಲಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಅದರನ್ನು ನಾನು ಬಿಡಿಸಿ ಹೇಳಬೇಕಿಲ್ಲ. ನಮ್ಮ ಕೈ ಖಂಡಿತವಾಗಿಯೂ ಮೇಲಾಗಲಿದೆ ಎಂಬುದು ಪ್ರತಿಯೊಬ್ಬರಿಗೂ ತಿಳಿದ ಸಂಗತಿಯಾಗಿದೆ. ಹಾಗಾಗಿ, ನಾವು ಮೂರನೇ ಅವಧಿಯ ಆಡಳಿತಕ್ಕೆ ಸಿದ್ಧವಾಗುತ್ತಿದ್ದೇವೆ ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Narendra Modi
Koo

ನವದೆಹಲಿ: ಲೋಕಸಭೆ ಚುನಾವಣೆಯ (Lok Sabha Election 2024) ನಾಲ್ಕನೇ ಹಂತದ ಮತದಾನ ಮುಗಿದಿದೆ. ಇನ್ನೂ ಮೂರು ಹಂತದ ಮತದಾನ ಬಾಕಿ ಇರುವ ಕಾರಣ ಪ್ರಧಾನಿ ನರೇಂದ್ರ ಮೋದಿ (Narendra Modi), ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಸೇರಿ ಎಲ್ಲ ನಾಯಕರು ಅಬ್ಬರದ ಪ್ರಚಾರ ಮಾಡುತ್ತಿದ್ದಾರೆ. ಇದರ ಬೆನ್ನಲ್ಲೇ ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಎನ್‌ಡಿಟಿವಿಗೆ ನೀಡಿದ ಸಂದರ್ಶನದಲ್ಲಿ ಅವರು ವಿಶ್ವಾಸದ ಮಾತುಗಳನ್ನಾಡಿದ್ದಾರೆ.

“ನಮ್ಮ ಗುರಿ ತುಂಬ ದೊಡ್ಡದಿದೆ. ಇಷ್ಟೊಂದು ದೊಡ್ಡ ದೇಶದಲ್ಲಿ ಜನರ ಯಾರಿಗೆ ಮತ ಹಾಕಬೇಕು ಎಂಬುದನ್ನು ಸುಲಭವಾಗಿ ತೀರ್ಮಾನಿಸುತ್ತಾರೆ. ಜನರಿಗೆ ಇರುವ ಅನುಭವವು ಅವರು ಸುಲಭವಾಗಿ ತೀರ್ಮಾನ ತೆಗೆದುಕೊಳ್ಳುತ್ತಾರೆ. ದೇಶದ ಜನರಿಗೆ ಎಲ್ಲವೂ ಗೊತ್ತಿದೆ. ಯಾವುದೇ ಪಕ್ಷ, ವ್ಯಕ್ತಿ ಇರಲಿ, ಜನರು ಯಾರನ್ನು ಗೆಲ್ಲಿಸಬೇಕು ಎಂಬುದನ್ನು ನಿರ್ಧರಿಸುತ್ತಾರೆ. ಹಾಗಾಗಿಯೇ, ನಾವು ಮುಂದಿನ ದಿನಗಳಲ್ಲಿ ದೊಡ್ಡ ಗುರಿಯನ್ನು ಇಟ್ಟುಕೊಂಡಿದ್ದೇವೆ. ದೇಶದ ಆಡಳಿತ, ಅಭಿವೃದ್ಧಿಯ ನೀಲನಕ್ಷೆ ನಮ್ಮ ಬಳಿ ಇದೆ” ಎಂದು ಮೋದಿ ಹ್ಯಾಟ್ರಿಕ್‌ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದರು.

“ದೇಶದ ಚುನಾವಣೆ ಫಲಿತಾಂಶ ಏನಾಗಲಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಅದರನ್ನು ನಾನು ಬಿಡಿಸಿ ಹೇಳಬೇಕಿಲ್ಲ. ನಮ್ಮ ಕೈ ಖಂಡಿತವಾಗಿಯೂ ಮೇಲಾಗಲಿದೆ ಎಂಬುದು ಪ್ರತಿಯೊಬ್ಬರಿಗೂ ತಿಳಿದ ಸಂಗತಿಯಾಗಿದೆ. ಹಾಗಾಗಿ, ನಾವು ಮೂರನೇ ಅವಧಿಯ ಆಡಳಿತಕ್ಕೆ ಸಿದ್ಧವಾಗುತ್ತಿದ್ದೇವೆ. ಅಧಿಕಾರಕ್ಕೆ ಬಂದ 100 ದಿನಗಳಲ್ಲಿ ಏನೆಲ್ಲ ತೀರ್ಮಾನ ತೆಗೆದುಕೊಳ್ಳಬೇಕು ಎಂಬುದರ ಬಗ್ಗೆ ಕಾರ್ಯಸೂಚಿಯನ್ನು ಹಾಕಿಕೊಂಡು ಬನ್ನಿ ಎಂಬುದಾಗಿ ನಮ್ಮ ಸಚಿವರಿಗೆ ಸೂಚಿಸಿದ್ದೇನೆ” ಎಂದು ಮೋದಿ ತಿಳಿಸಿದರು.

“ನಮ್ಮ ಮುಂದಿನ ಆಡಳಿತವು ಒಂದು ಪ್ರದೇಶ, ಕೆಲವು ಭಾಗಗಳಿಗೆ ಸೀಮಿತವಾಗಿರುವುದಿಲ್ಲ. ದೊಡ್ಡ ಗುರಿಯನ್ನು ಕ್ಷಿಪ್ರವಾಗಿ ಸಾಧಿಸುವ ಛಲವನ್ನು ನಾವು ಹೊಂದಿದ್ದೇವೆ. ಗುರಿ ದೊಡ್ಡದಾಗಿ ಇಟ್ಟುಕೊಂಡು, ಅದರ ವೇಗಕ್ಕೆ ತಕ್ಕಂತೆ ಮುನ್ನಡೆಯುವುದು ನಮ್ಮ ಉದ್ದೇಶವಾಗಿದೆ. ಗುರಿ, ಉದ್ದೇಶ ಹಾಗೂ ವೇಗದ ಜತೆ ಸಾಗುವುದು ಕೂಡ ಒಂದು ಕೌಶಲವಾಗಿದೆ. ಆ ದಿಸೆಯಲ್ಲಿ ನಾವು ಮಹತ್ವದ ಸಂಗತಿಗಳನ್ನು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ” ಎಂದು ನರೇಂದ್ರ ಮೋದಿ ಹೇಳಿದರು.

ಇದನ್ನೂ ಓದಿ: ಹಿಂದು ಧರ್ಮದ ಆಶಯದಂತೆ ಕಾಂಗ್ರೆಸ್‌ ಸ್ವಾತಂತ್ರ್ಯಕ್ಕಾಗಿ ಹೋರಾಡಿತ್ತು ಎಂದ ಪ್ರಿಯಾಂಕಾ ವಾದ್ರಾ!

Continue Reading

ಪ್ರಮುಖ ಸುದ್ದಿ

ಹಿಂದು ಧರ್ಮದ ಆಶಯದಂತೆ ಕಾಂಗ್ರೆಸ್‌ ಸ್ವಾತಂತ್ರ್ಯಕ್ಕಾಗಿ ಹೋರಾಡಿತ್ತು ಎಂದ ಪ್ರಿಯಾಂಕಾ ವಾದ್ರಾ!

ಸ್ವಾತಂತ್ರ್ಯ ಹೋರಾಟದ ವೇಳೆ ದೇಶಕ್ಕಾಗಿ ಎಲ್ಲರೂ ತ್ಯಾಗ ಮಾಡಿದರು. ಜವಾಹರ ಲಾಲ್‌ ನೆಹರು ಸೇರಿ ಹಲವು ನಾಯಕರು 13-14 ವರ್ಷ ಜೈಲು ಶಿಕ್ಷೆ ಅನುಭವಿಸಿದರು. ಮಹಾತ್ಮ ಗಾಂಧೀಜಿ ಅವರಿಗೆ ಗುಂಡು ತಗುಲಿ, ಅವರು ಇನ್ನೇನು ಪ್ರಾಣ ಬಿಡಬೇಕು ಎನ್ನುವ ಮೊದಲು, ಅವರು ಹೇ ರಾಮ್‌ ಎಂದು ಹೇಳಿದ್ದರು ಎಂಬುದಾಗಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ. ಆ ಮೂಲಕ ಕಾಂಗ್ರೆಸ್‌ ಪಕ್ಷವು ಹಿಂದು ವಿರೋಧಿ ಎನ್ನುವ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.

VISTARANEWS.COM


on

Priyanka Vadra
Koo

ನವದೆಹಲಿ: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಧರ್ಮ, ಜಾತಿ, ರಾಮಮಂದಿರ, ಮೀಸಲಾತಿ ಸೇರಿ ಹತ್ತಾರು ವಿಷಯಗಳು ಮುನ್ನೆಲೆಗೆ ಬಂದಿವೆ. ಅದರಲ್ಲೂ, ಕಾಂಗ್ರೆಸ್‌ ಹಿಂದು ವಿರೋಧಿ ಎಂಬುದಾಗಿ ಬಿಜೆಪಿ ನಾಯಕರು ಆರೋಪಿಸುತ್ತಿದ್ದಾರೆ. ಇದಕ್ಕೆ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ವಾದ್ರಾ (Priyanka Vadra) ತಿರುಗೇಟು ನೀಡಿದ್ದಾರೆ. “ಮಹಾತ್ಮ ಗಾಂಧೀಜಿ (Mahatma Gandhi) ಅವರು ಕೊನೆಯುಸಿರೆಳೆಯುವ ಮೊದಲೂ ಹೇ ರಾಮ್‌ ಎಂದಿದ್ದರು. ಕಾಂಗ್ರೆಸ್‌ ಹೇಗೆ ಹಿಂದು ವಿರೋಧಿಯಾಗುತ್ತದೆ? ಹಾಗೆಯೇ, ಹಿಂದು ಧರ್ಮದ ಆಶಯಗಳಂತೆ ಸ್ವಾತಂತ್ರ್ಯ ಹೋರಾಟ ಮಾಡಲಾಗಿದೆ” ಎಂದಿದ್ದಾರೆ.

ಇಂಡಿಯಾ ಟುಡೇಗೆ ಸಂದರ್ಶನ ನೀಡಿದ ವೇಳೆ ಅವರು ಈ ರೀತಿಯ ಪ್ರಸ್ತಾಪ ಮಾಡಿದ್ದಾರೆ. “ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದಲೂ ಕಾಂಗ್ರೆಸ್‌ ಹಿಂದು ವಿರೋಧಿ ಎಂಬಂತೆ ಬ್ರ್ಯಾಂಡ್‌ ಮಾಡಲಾಗುತ್ತಿದೆ. ಅಷ್ಟಕ್ಕೂ ನಮ್ಮ ಪಕ್ಷದ ದೊಡ್ಡ ನಾಯಕ ಯಾರು? ಮಹಾತ್ಮ ಗಾಂಧೀಜಿ ಅವರು ನಮ್ಮ ಪಕ್ಷದ ಧುರೀಣರು. ಸತ್ಯ ಹಾಗೂ ಅಹಿಂಸೆಯ ಆಧಾರದ ಮೇಲೆ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಯಿತು. ಸತ್ಯಮೇವ ಜಯತೆ ಎಂಬ ತತ್ವದಂತೆ ಹೋರಾಟ ಮಾಡಲಾಯಿತು. ಹಿಂದು ಧರ್ಮದ ಬೋಧನೆ, ಆಶಯಗಳಂತೆ ಹೋರಾಟ ಮಾಡಲಾಯಿತು” ಎಂದು ಹೇಳಿದರು.

“ಸ್ವಾತಂತ್ರ್ಯ ಹೋರಾಟದ ವೇಳೆ ದೇಶಕ್ಕಾಗಿ ಎಲ್ಲರೂ ತ್ಯಾಗ ಮಾಡಿದರು. ಜವಾಹರ ಲಾಲ್‌ ನೆಹರು ಸೇರಿ ಹಲವು ನಾಯಕರು 13-14 ವರ್ಷ ಜೈಲು ಶಿಕ್ಷೆ ಅನುಭವಿಸಿದರು. ಮಹಾತ್ಮ ಗಾಂಧೀಜಿ ಅವರಿಗೆ ಗುಂಡು ತಗುಲಿ, ಅವರು ಇನ್ನೇನು ಪ್ರಾಣ ಬಿಡಬೇಕು ಎನ್ನುವ ಮೊದಲು, ಅವರು ಹೇ ರಾಮ್‌ ಎಂದು ಹೇಳಿದ್ದರು. ಇಷ್ಟೆಲ್ಲ ಇರುವಾಗ ಕಾಂಗ್ರೆಸ್‌ ಹೇಗೆ ಹಿಂದು ವಿರೋಧಿಯಾಗುತ್ತದೆ? ಖಂಡಿತವಾಗಿಯೂ ನಾವು ಹಿಂದು ವಿರೋಧಿಗಳು ಅಲ್ಲ. ರಾಹುಲ್‌ ಗಾಂಧಿ ಅವರು ಬೇರೆಯವರಿಗಿಂತ ಹಿಂದುತ್ವವನ್ನು ಚೆನ್ನಾಗಿ ಅರ್ಥ ಮಾಡಿಕೊಂಡಿದ್ದಾರೆ” ಎಂದು ಸಂದರ್ಶನದ ವೇಳೆ ಪ್ರಿಯಾಂಕಾ ವಾದ್ರಾ ಸ್ಪಷ್ಟಪಡಿಸಿದ್ದಾರೆ.

ಅಯೋಧ್ಯೆಯ ರಾಮಮಂದಿರ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಕಾಂಗ್ರೆಸ್‌ ತೆರಳದಿರುವ ಕುರಿತು ಬಿಜೆಪಿ ಆರೋಪಗಳ ಬಗೆಗಿನ ಪ್ರಶ್ನೆಗೂ ಪ್ರಿಯಾಂಕಾ ವಾದ್ರಾ ಉತ್ತರಿಸಿದರು. “ಬಿಜೆಪಿಯು ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಆಹ್ವಾನ ಪಡೆಯಿತು. ಇದಾದ ಬಳಿಕ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮವನ್ನು ರಾಜಕೀಯ ಕಾರಣಗಳಿಗಾಗಿ ಬಳಸಿಕೊಳ್ಳಲಾಯಿತು. ಹಾಗಾಗಿ, ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಕಾಂಗ್ರೆಸ್‌ ಹೋಗದಿರುವುದು ತಪ್ಪು ನಿರ್ಧಾರ ಎಂಬುದಾಗಿ ಹೇಳಲು ಆಗುವುದಿಲ್ಲ” ಎಂದು ಸ್ಪಷ್ಟಪಡಿಸಿದರು. “ದೇಶದಲ್ಲಿ ಧರ್ಮ ಸೇರಿ ಹಲವು ಸೂಕ್ಷ್ಮ ವಿಚಾರಗಳನ್ನು ಬಿಜೆಪಿ, ನರೇಂದ್ರ ಮೋದಿ ರಾಜಕೀಯಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ. ಆದರೆ, ಧರ್ಮರಹಿತವಾಗಿ ಎಲ್ಲರಿಗೂ ಯೋಜನೆಗಳನ್ನು ಕಲ್ಪಿಸುವುದು ಕಾಂಗ್ರೆಸ್‌ ಗ್ಯಾರಂಟಿಯಾಗಿದೆ” ಎಂದರು.

ಇದನ್ನೂ ಓದಿ: Kangana Ranaut: ಚುನಾವಣೆಯಲ್ಲಿ ಗೆದ್ದರೆ ನಟನೆಗೆ ವಿದಾಯ; ನಟಿ ಕಂಗನಾ ರಣಾವತ್‌ ಘೋಷಣೆ

Continue Reading

ದೇಶ

Kangana Ranaut: ಚುನಾವಣೆಯಲ್ಲಿ ಗೆದ್ದರೆ ನಟನೆಗೆ ವಿದಾಯ; ನಟಿ ಕಂಗನಾ ರಣಾವತ್‌ ಘೋಷಣೆ

Kangana Ranaut: ಕಂಗನಾ ರಣಾವತ್‌ ಅವರ ಬಹುನಿರೀಕ್ಷಿತ ಸಿನಿಮಾ ಎಮರ್ಜನ್ಸಿ ಬಿಡುಗಡೆಗೆ ಸಿದ್ಧವಾಗುತ್ತಿದೆ. ತಾವೇ ನಿರ್ದೇಶಿಸಿದ ಸಿನಿಮಾದಲ್ಲಿ ಕಂಗನಾ ರಣಾವತ್‌ ಅವರು ಇಂದಿರಾ ಗಾಂಧಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸಿನಿಮಾ ಬಿಡುಗಡೆಯ ದಿನಾಂಕವನ್ನು ಮುಂದೂಡಲಾಗಿದೆ ಎಂದು ಘೋಷಿಸಿದರೂ ಸಿನಿಮಾ ಬಗ್ಗೆ ಹೆಚ್ಚಿನ ನಿರೀಕ್ಷೆ ಇದೆ. ಇದರ ಬೆನ್ನಲ್ಲೇ ಅವರು, ಚುನಾವಣೆಯಲ್ಲಿ ಗೆದ್ದರೆ ನಟನೆ ಬಿಡುವುದಾಗಿ ಘೋಷಿಸಿದ್ದಾರೆ.

VISTARANEWS.COM


on

Kangana Ranaut
Koo

ನವದೆಹಲಿ: ಬಾಲಿವುಡ್‌ ನಟಿ ಕಂಗನಾ ರಣಾವತ್‌ (Kangana Ranaut) ಅವರು ರಾಜಕೀಯಕ್ಕೆ ಧುಮುಕಿದ್ದು, ಹಿಮಾಚಲ ಪ್ರದೇಶದ (Himachal Pradesh) ಮಂಡಿ (Mandi) ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಜೂನ್‌ 1ರಂದು ಮಂಡಿ ಕ್ಷೇತ್ರದಲ್ಲಿ ಮತದಾನ (Lok Sabha Election 2024) ನಡೆಯುವ ಕಾರಣ ಅಬ್ಬರದ ಪ್ರಚಾರದಲ್ಲಿ ತೊಡಗಿದ್ದಾರೆ. ಇದರ ಬೆನ್ನಲ್ಲೇ, ಕಂಗನಾ ರಣಾವತ್‌ ಅವರು ಮಹತ್ವದ ಘೋಷಣೆ ಮಾಡಿದ್ದಾರೆ. “ಲೋಕಸಭೆ ಚುನಾವಣೆಯಲ್ಲಿ ನಾನು ಗೆದ್ದರೆ ನಟನೆಯನ್ನು ಬಿಟ್ಟುಬಿಡುತ್ತೇನೆ” ಎಂಬುದಾಗಿ ಹೇಳಿದ್ದಾರೆ.

ಆಜ್‌ ತಕ್‌ ಸುದ್ದಿವಾಹಿನಿಗೆ ಸಂದರ್ಶನ ನೀಡುವ ವೇಳೆ ಕಂಗನಾ ರಣಾವತ್‌ ಅವರು ಈ ಘೋಷಣೆ ಮಾಡಿದ್ದಾರೆ. “ನೀವು ಮಂಡಿ ಲೋಕಸಭೆಯಲ್ಲಿ ಗೆಲುವು ಸಾಧಿಸಿದರೆ ಏನೆಲ್ಲ ಮಾಡುತ್ತೀರಿ” ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಹೌದು, ಮಂಡಿಯಲ್ಲಿ ಗೆಲುವು ಸಾಧಿಸಿದ ಬಳಿಕ ನಾನು ಸಿನಿಮಾಗಳಲ್ಲಿ ನಟಿಸುವುದಿಲ್ಲ. ಆದರೆ, ನಮ್ಮ ಬಳಿ ತುಂಬ ಒಳ್ಳೆಯ ನಟಿ ಇದ್ದಾರೆ. ದಯಮಾಡಿ ನೀವು ಬಿಟ್ಟು ಹೋಗಬೇಡಿ ಎಂಬುದಾಗಿ ಹೆಚ್ಚಿನ ನಿರ್ದೇಶಕರು ಹೇಳುತ್ತಾರೆ. ಹೌದು, ನಾನೊಬ್ಬ ಒಳ್ಳೆ ನಟಿ ನಿಜ. ಇದೇ ಮೆಚ್ಚುಗೆಯನ್ನು ಸ್ವೀಕರಿಸಿ ನಾನು ಮುಂದೆ ಹೋಗುತ್ತೇನೆ” ಎಂದು ತಿಳಿಸಿದ್ದಾರೆ. ಆ ಮೂಲಕ ಬಾಲಿವುಡ್‌, ನಟನೆ ತ್ಯಜಿಸುವುದನ್ನು ಅವರು ದೃಢಪಡಿಸಿದ್ದಾರೆ.

ಕಂಗನಾ ರಣಾವತ್‌ ಅವರ ಬಹುನಿರೀಕ್ಷಿತ ಸಿನಿಮಾ ಎಮರ್ಜನ್ಸಿ ಬಿಡುಗಡೆಗೆ ಸಿದ್ಧವಾಗುತ್ತಿದೆ. ತಾವೇ ನಿರ್ದೇಶಿಸಿದ ಸಿನಿಮಾದಲ್ಲಿ ಕಂಗನಾ ರಣಾವತ್‌ ಅವರು ಇಂದಿರಾ ಗಾಂಧಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸಿನಿಮಾ ಬಿಡುಗಡೆಯ ದಿನಾಂಕವನ್ನು ಮುಂದೂಡಲಾಗಿದೆ ಎಂದು ಘೋಷಿಸಿದರೂ ಸಿನಿಮಾ ಬಗ್ಗೆ ಹೆಚ್ಚಿನ ನಿರೀಕ್ಷೆ ಇದೆ. ಪಂಗಾ, ಮಣಿಕರ್ಣಿಕಾ: ದಿ ಕ್ವೀನ್‌ ಆಫ್‌ ಜಾನ್ಸಿ, ಜಡ್ಜ್‌ಮೆಂಟಲ್‌ ಹೈ ಕ್ಯಾ, ತನು ವೆಡ್ಸ್‌ ಮನು ರಿಟರ್ನ್ಸ್‌ ಸೇರಿ ಹಲವು ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಇವರು ಅಭಿನಯದ ತಲೈವಿ ಸಿನಿಮಾಗೆ ಭಾರಿ ಮೆಚ್ಚುಗೆಯೂ ವ್ಯಕ್ತವಾಗಿತ್ತು.

91 ಕೋಟಿ ರೂ. ಆಸ್ತಿಗೆ ಒಡತಿ

ಮಂಡಿ ಲೋಕಸಭೆ ಕ್ಷೇತ್ರದಲ್ಲಿ ಕಂಗನಾ ರಣಾವತ್‌ ಅವರು ನಾಮಪತ್ರ ಸಲ್ಲಿಸಿದ್ದಾರೆ. ಇವರು ಚುನಾವಣಾ ಅಫಿಡವಿಟ್ ನಲ್ಲಿ 91 ಕೋಟಿ ರೂ.ಗಳ ಆಸ್ತಿಯನ್ನು ಘೋಷಿಸಿದ್ದಾರೆ. ಅವರ ಆಸ್ತಿಯಲ್ಲಿ 28.7 ಕೋಟಿ ರೂ.ಗಳ ಚರಾಸ್ತಿ ಮತ್ತು 62.9 ಕೋಟಿ ರೂ.ಗಳ ಸ್ಥಿರಾಸ್ತಿ ಸೇರಿವೆ. ಅವರ ಬಳಿ 5 ಕೋಟಿ ಮೌಲ್ಯದ 6.7 ಕೆಜಿ ಚಿನ್ನ, 50 ಲಕ್ಷ ಮೌಲ್ಯದ 60 ಕೆಜಿ ಬೆಳ್ಳಿ, 3 ಕೋಟಿ ಮೌಲ್ಯದ 14 ಕ್ಯಾರೆಟ್ ವಜ್ರದ ಆಭರಣಗಳಿವೆ. 2 ಲಕ್ಷ ನಗದು ಮತ್ತು ಸುಮಾರು 1.35 ಕೋಟಿ ರೂ.ಗಳ ಬ್ಯಾಂಕ್ ಬ್ಯಾಲೆನ್ಸ್ ಹೊಂದಿರುವುದಾಗಿ ನಟಿ ಹಾಗೂ ರಾಜಕಾರಣಿ ಘೋಷಿಸಿದ್ದಾರೆ.

ಇದನ್ನೂ ಓದಿ: Kangana Ranaut: ಬಾಲಿವುಡ್‌ ʼಕ್ವೀನ್‌ʼ ಕಂಗನಾ ಹೆಸರಿನಲ್ಲಿದೆ 50 ಎಲ್ಐಸಿ ಪಾಲಿಸಿ; ಏಜೆಂಟ್‌ ಅತ್ಯಂತ ಲಕ್ಕಿ ಎಂದ ನೆಟ್ಟಿಗರು

Continue Reading

ದೇಶ

ಪ್ರಚಾರದ ವೇಳೆ ರಾಹುಲ್‌ ಗಾಂಧಿಯಿಂದ ಚೀನಾ ಸಂವಿಧಾನ ಪ್ರತಿ ಪ್ರದರ್ಶನ; ಹಿಮಂತ ಬಿಸ್ವಾ ಗಂಭೀರ ಆರೋಪ

ರಾಹುಲ್‌ ಗಾಂಧಿ ಅವರು ತಾವು ಭಾಗವಹಿಸುವ ಸಮಾವೇಶ, ಸಭೆಗಳಲ್ಲಿ ಜನರಿಗೆ ಚೀನಾ ಸಂವಿಧಾನದ ಪ್ರತಿ ಪ್ರದರ್ಶಿಸುತ್ತಿದ್ದಾರೆ. ಭಾರತ ಸಂವಿಧಾನದ ಮೂಲ ಪ್ರತಿಯು ನೀಲಿ ಕವರ್‌ ಹೊಂದಿದೆ. ಚೀನಾ ಸಂವಿಧಾನದ ಮೂಲ ಪ್ರತಿಯು ಕೆಂಪು ಕವರ್‌ ಹೊಂದಿದೆ ಎಂಬುದಾಗಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಆರೋಪಿಸಿದ್ದಾರೆ. ಇದಕ್ಕೆ ಕಾಂಗ್ರೆಸ್‌ ತಿರುಗೇಟು ನೀಡಿದೆ.

VISTARANEWS.COM


on

Constitution
Koo

ನವದೆಹಲಿ: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಬಿಜೆಪಿ, ಕಾಂಗ್ರೆಸ್‌ ಸೇರಿ ಎಲ್ಲ ಪಕ್ಷಗಳ ನಾಯಕರ ಹೇಳಿಕೆಗಳು ಮೊನಚಾಗಿವೆ. ಆರೋಪ, ಪ್ರತ್ಯಾರೋಪ, ವಾಗ್ದಾಳಿ, ವಾಗ್ಬಾಣಗಳ ಜತೆಗೆ ವೈಯಕ್ತಿಕ ನಿಂದನೆ, ಆರೋಪಗಳು ಕೂಡ ಕೇಳಿಬರುತ್ತಿವೆ. ಇದರ ಬೆನ್ನಲ್ಲೇ, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ (Himanta Biswa Sarma) ಅವರು ರಾಹುಲ್‌ ಗಾಂಧಿ (Rahul Gandhi) ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. “ರಾಹುಲ್‌ ಗಾಂಧಿ ಅವರು ಸಭೆ-ಸಮಾವೇಶಗಳಲ್ಲಿ ಜನರಿಗೆ ಚೀನಾ ಸಂವಿಧಾನ ಪ್ರದರ್ಶಿಸುತ್ತಿದ್ದಾರೆ” ಎಂದು ಸಿಎಂ ಆರೋಪಿಸಿದ್ದಾರೆ. ಇದು ಈಗ ಬಿಜೆಪಿ ಹಾಗೂ ಕಾಂಗ್ರೆಸ್‌ ನಾಯಕರ ಮಧ್ಯೆ ವಾಕ್ಸಮರಕ್ಕೆ ಕಾರಣವಾಗಿದೆ.

“ರಾಹುಲ್‌ ಗಾಂಧಿ ಅವರು ತಾವು ಭಾಗವಹಿಸುವ ಸಮಾವೇಶ, ಸಭೆಗಳಲ್ಲಿ ಜನರಿಗೆ ಚೀನಾ ಸಂವಿಧಾನದ ಪ್ರತಿ ಪ್ರದರ್ಶಿಸುತ್ತಿದ್ದಾರೆ. ಭಾರತ ಸಂವಿಧಾನದ ಮೂಲ ಪ್ರತಿಯು ನೀಲಿ ಕವರ್‌ ಹೊಂದಿದೆ. ಚೀನಾ ಸಂವಿಧಾನದ ಮೂಲ ಪ್ರತಿಯು ಕೆಂಪು ಕವರ್‌ ಹೊಂದಿದೆ. ರಾಹುಲ್‌ ಗಾಂಧಿ ಅವರು ಚೀನಾ ಸಂವಿಧಾನವನ್ನು ಜನರಿಗೆ ಪ್ರದರ್ಶಿಸುತ್ತಿದ್ದಾರೆಯೇ? ಈ ಕುರಿತು ಪರಿಶೀಲನೆ ಆಗಬೇಕು” ಎಂಬುದಾಗಿ ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಅಸ್ಸಾಂ ಮುಖ್ಯಮಂತ್ರಿ ಪೋಸ್ಟ್‌ ಮಾಡಿದ್ದಾರೆ.

“ನಮ್ಮ ಸಂವಿಧಾನವು ನೀಲಿ ಕವರ್‌ ಹೊಂದಿದ್ದು, ಮೂಲಭೂತ ಕರ್ತವ್ಯಗಳ ಬಗ್ಗೆ ಉಲ್ಲೇಖವಿದೆ. ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರಬೇಕು ಎಂಬುದಾಗಿ ಮೂಲಭೂತ ಕರ್ತವ್ಯವು ತಿಳಿಸುತ್ತದೆ. ಆದರೆ, ರಾಹುಲ್‌ ಗಾಂಧಿ ಅವರು ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರಲು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇದೇ ಕಾರಣಕ್ಕಾಗಿ ಅವರು ಚೀನಾ ಸಂವಿಧಾನದ ಪ್ರತಿಯನ್ನು ಹಿಡಿದುಕೊಂಡು ತಿರುಗಾಡುತ್ತಿರಬಹುದು” ಎಂದು ಕೂಡ ಹಿಮಂತ ಬಿಸ್ವಾ ಶರ್ಮಾ ಆರೋಪಿಸಿದ್ದಾರೆ.

ಕಾಂಗ್ರೆಸ್‌ ತಿರುಗೇಟು

ಹಿಮಂತ ಬಿಸ್ವಾ ಶರ್ಮಾ ಅವರ ಹೇಳಿಕೆಗೆ ಕಾಂಗ್ರೆಸ್‌ ಶಾಸಕ ಅಬ್ದುಲ್‌ ರಶೀದ್‌ ಮೊಂಡಲ್‌ ತಿರುಗೇಟು ನೀಡಿದ್ದಾರೆ. “ಭಾರತ ಸಂವಿಧಾನದ ಕವರ್‌ಗಳ ಬಣ್ಣವು ಬೇರೆ ಬೇರೆ ಇದೆ. ಕವರ್‌ ಬಣ್ಣ ಬೇರೆಯಾದರೂ ಸಂವಿಧಾನದ ಆಶಯಗಳು ಒಂದೇ ಆಗಿವೆ. ಅಷ್ಟಕ್ಕೂ ನಾವು ಬಣ್ಣವನ್ನು ಓದುವುದಿಲ್ಲ. ಸಂವಿಧಾನದ ಆಶಯ, ಉದ್ದೇಶಗಳನ್ನು ಪಾಲಿಸುತ್ತೇವೆ” ಎಂದಿದ್ದಾರೆ. “ಭಾರತ ಸಂವಿಧಾನದ ಪಾಕೆಟ್‌ ಎಡಿಷನ್‌ನ ಪ್ರತಿಯು ನೀಲಿ ಬಣ್ಣದ ಕವರ್‌ ಹೊಂದಿದೆ” ಎಂದು ಕೂಡ ಕೆಲ ಜಾಲತಾಣಿಗರು ಹಿಮಂತ ಬಿಸ್ವಾ ಶರ್ಮಾ ಅವರ ಪೋಸ್ಟ್‌ಗೆ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: Himanta Biswa Sarma: ಬಿಜೆಪಿಗೆ ಏಕೆ 400 ಸೀಟುಗಳು ಬೇಕೇಬೇಕು? ಹಿಮಂತ ಬಿಸ್ವ ಶರ್ಮಾ ಉತ್ತರ ಹೀಗಿದೆ!

Continue Reading
Advertisement
Karnataka Police
ಸಂಪಾದಕೀಯ1 hour ago

ವಿಸ್ತಾರ ಸಂಪಾದಕೀಯ: ರಾಜ್ಯದಲ್ಲಿ ಕೊಲೆಗಳ‌ ಸರಮಾಲೆ; ಪೊಲೀಸ್ ಇಲಾಖೆ ಯಾಕಿಷ್ಟು‌ ದುರ್ಬಲವಾಗಿದೆ?

Jammu Kashmir
ದೇಶ1 hour ago

Jammu Kashmir: ಕಾಶ್ಮೀರದ 2 ಕಡೆ ಉಗ್ರರ ದಾಳಿ; ಮಾಜಿ ಸರ್ಪಂಚ್‌ ಬಲಿ, ರಾಜಸ್ಥಾನದ ದಂಪತಿಗೆ ಗಾಯ

RCB vs CSK
ಕ್ರೀಡೆ2 hours ago

RCB vs CSK: ಇದು ಆರ್​ಸಿಬಿಯ ಹೊಸ ಅಧ್ಯಾಯ; ಹಾಲಿ ಚಾಂಪಿಯನ್​ ಚೆನ್ನೈ ಮಣಿಸಿ ಪ್ಲೇ ಆಫ್​ಗೆ ಲಗ್ಗೆ

Anjali Murder Case
ಕರ್ನಾಟಕ2 hours ago

Anjali Murder Case: ಅಂಜಲಿ ಹತ್ಯೆ ಪ್ರಕರಣ; ಹು-ಧಾ ಐಪಿಎಸ್ ಅಧಿಕಾರಿಯ ತಲೆದಂಡ

Narendra Modi
ದೇಶ2 hours ago

Narendra Modi: ಗುರಿ ದೊಡ್ಡದಿದೆ, 3ನೇ ಅವಧಿಯ ಆಡಳಿತಕ್ಕೆ ಪ್ಲಾನ್‌ ರೆಡಿ ಇದೆ; ಮೋದಿ ವಿಶ್ವಾಸ

RCB vs CSK
ಕರ್ನಾಟಕ3 hours ago

RCB vs CSK: ಆರ್‌ಸಿಬಿ-ಸಿಎಸ್‌ಕೆ ಪಂದ್ಯದ ವೇಳೆ ಚಿನ್ನಸ್ವಾಮಿ ಮೈದಾನಕ್ಕೆ ನುಗ್ಗುತ್ತೇನೆ ಎಂದಿದ್ದ ಯುವಕ ವಶಕ್ಕೆ

Bank of Bhagyalakshmi movie poster released
ಸಿನಿಮಾ3 hours ago

Kannada New Movie: ಬ್ಯಾಂಕ್‌ ಆಫ್‌ ಭಾಗ್ಯಲಕ್ಷ್ಮೀ ಸಿನಿಮಾದ ಪೋಸ್ಟರ್ ಔಟ್‌; ಶೀಘ್ರದಲ್ಲೇ ತೆರೆಗೆ

Priyanka Vadra
ಪ್ರಮುಖ ಸುದ್ದಿ3 hours ago

ಹಿಂದು ಧರ್ಮದ ಆಶಯದಂತೆ ಕಾಂಗ್ರೆಸ್‌ ಸ್ವಾತಂತ್ರ್ಯಕ್ಕಾಗಿ ಹೋರಾಡಿತ್ತು ಎಂದ ಪ್ರಿಯಾಂಕಾ ವಾದ್ರಾ!

Kangana Ranaut
ದೇಶ4 hours ago

Kangana Ranaut: ಚುನಾವಣೆಯಲ್ಲಿ ಗೆದ್ದರೆ ನಟನೆಗೆ ವಿದಾಯ; ನಟಿ ಕಂಗನಾ ರಣಾವತ್‌ ಘೋಷಣೆ

RCB vs CSK
ಕ್ರೀಡೆ4 hours ago

RCB vs CSK: ಸಿಕ್ಸರ್​ ಮೂಲಕವೂ ದಾಖಲೆ ಬರೆದ ವಿರಾಟ್​ ಕೊಹ್ಲಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ1 day ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ2 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ2 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು3 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ4 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ4 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ4 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20244 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌