Neha Murder Case: ನೇಹಾ ಕೊಲೆ ಪ್ರಕರಣ ರಾಜಕೀಯಕ್ಕೆ ಬಳಕೆ; ಕೊಲೆಗಾರನಿಗೆ ಉಗ್ರ ಶಿಕ್ಷೆ ಎಂದ ಸಿದ್ದರಾಮಯ್ಯ - Vistara News

ರಾಜಕೀಯ

Neha Murder Case: ನೇಹಾ ಕೊಲೆ ಪ್ರಕರಣ ರಾಜಕೀಯಕ್ಕೆ ಬಳಕೆ; ಕೊಲೆಗಾರನಿಗೆ ಉಗ್ರ ಶಿಕ್ಷೆ ಎಂದ ಸಿದ್ದರಾಮಯ್ಯ

Neha Murder Case: ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಬಗ್ಗೆ ಪ್ರತಿಪಕ್ಷಗಳ ಆರೋಪದ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಎಲ್ಲ ಕಾಲದಲ್ಲಿಯೂ ಕೊಲೆಗಳಾಗಿವೆ. ಹಾಗೆಂದು ಕಾನೂನು ಸುವ್ಯವಸ್ಥೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದಲ್ಲ. ಕರ್ನಾಟಕದಲ್ಲಿ ಇರುವಷ್ಟು ಶಾಂತಿ ಸುವ್ಯವಸ್ಥೆ ಬೇರೆ ರಾಜ್ಯಗಳಲ್ಲಿಲ್ಲ. ನಾವು ಯಾವುದೇ ಕೃತ್ಯ ನಡೆದರೂ, ಅದನ್ನು ತೀವ್ರವಾಗಿ ಖಂಡಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ರಾಜಕೀಯಕ್ಕಾಗಿ ಒಬ್ಬರ ಸಾವನ್ನು ಬಳಸಿಕೊಳ್ಳುವುದು ದುರ್ದೈವ ಹಾಗೂ ಖಂಡನೀಯ ಎಂದು ಹೇಳಿರುವ ಸಿಎಂ ಸಿದ್ದರಾಮಯ್ಯ, ಕೊಲೆಗಾರನಿಗೆ ಉಗ್ರ ಶಿಕ್ಷೆ ನೀಡಲು ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ.

VISTARANEWS.COM


on

Muslims OBC Quota
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೈಸೂರು: ಪ್ರತಿಪಕ್ಷಗಳು ನೇಹಾ ಕುಲಕರ್ಣಿ ಅವರ ಕೊಲೆ ಪ್ರಕರಣವನ್ನು (Neha Murder Case) ರಾಜಕೀಯಕ್ಕೆ ಬಳಸುತ್ತಿದ್ದಾರೆ. ಆಕೆಯನ್ನು ಕೊಂದವನಿಗೆ ಉಗ್ರ ಶಿಕ್ಷೆಯನ್ನು ಕೊಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಶನಿವಾರ ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ನೇಹಾ ಕುಲಕರ್ಣಿ ಕೊಲೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಕೊಲೆಗಾರನನ್ನು ಕೂಡಲೇ ಬಂಧಿಸಲಾಗಿದೆ. ಇದು ಲವ್ ಜಿಹಾದ್ ಪ್ರಕರಣವಲ್ಲ. ಸರ್ಕಾರ ತನಿಖೆಯನ್ನು ಗಂಭೀರವಾಗಿ ಕೈಗೊಂಡಿದ್ದು, ಕೊಲೆಗಾರನಿಗೆ ಉಗ್ರ ಶಿಕ್ಷೆ ನೀಡಲು ಪ್ರಯತ್ನ ಮಾಡಲಾಗುವುದು ಎಂದರು.

ರಾಜಕೀಯಕ್ಕಾಗಿ ಒಬ್ಬರ ಸಾವನ್ನು ಬಳಸಿಕೊಳ್ಳುವುದು ದುರ್ದೈವ

ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಬಗ್ಗೆ ಪ್ರತಿಪಕ್ಷಗಳ ಆರೋಪದ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಎಲ್ಲ ಕಾಲದಲ್ಲಿಯೂ ಕೊಲೆಗಳಾಗಿವೆ. ಹಾಗೆಂದು ಕಾನೂನು ಸುವ್ಯವಸ್ಥೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದಲ್ಲ. ಕರ್ನಾಟಕದಲ್ಲಿ ಇರುವಷ್ಟು ಶಾಂತಿ ಸುವ್ಯವಸ್ಥೆ ಬೇರೆ ರಾಜ್ಯಗಳಲ್ಲಿಲ್ಲ. ನಾವು ಯಾವುದೇ ಕೃತ್ಯ ನಡೆದರೂ, ಅದನ್ನು ತೀವ್ರವಾಗಿ ಖಂಡಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ರಾಜಕೀಯಕ್ಕಾಗಿ ಒಬ್ಬರ ಸಾವನ್ನು ಬಳಸಿಕೊಳ್ಳುವುದು ದುರ್ದೈವ ಹಾಗೂ ಖಂಡನೀಯ ಎಂದು ಹೇಳಿದರು. ಇನ್ನು ರಾಜ್ಯಾದ್ಯಂತ ಪ್ರತಿಭಟನೆಗಳಾಗುತ್ತಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಇದರ ಪರಿಣಾಮ ಸರ್ಕಾರದ ಮೇಲೆ ಆಗುವುದಿಲ್ಲ ಎಂದು ಹೇಳಿದರು.

ದೇಶದಲ್ಲಿ ಅಥವಾ ಕರ್ನಾಟಕದಲ್ಲಿ ಮೋದಿ ಅಲೆ ಇಲ್ಲ

ರಾಜ್ಯದಲ್ಲಿ ಚುನಾವಣಾ ವಾತಾವರಣ ಉತ್ತಮವಾಗಿದ್ದು ದೇಶದಲ್ಲಿ ಅಥವಾ ಕರ್ನಾಟಕದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಲೆ ಇಲ್ಲ. ಬಿಜೆಪಿ ಅಭ್ಯರ್ಥಿಗಳು ಮೋದಿ ಹೆಸರಿನಲ್ಲಿ ಮತ ಯಾಚಿಸುತ್ತಿದ್ದಾರೆ. ಮೋದಿಯವರ ಮೇಲೆ ಅವಲಂಬನೆಯಾಗಿದ್ದು, ಜನ ಮೋದಿ ಸರ್ಕಾರದ ವಿರುದ್ಧವಾಗಿದ್ದಾರೆ. ದೇಶದಲ್ಲಿ ಇಂಡಿಯಾ ಪರವಾದ ವಾತಾವರಣವಿದೆ ಎಂದರು.

ಬಿಜೆಪಿ ಸರ್ಕಾರ ಜನರಿಗೆ ಖಾಲಿ ಚೆಂಬು ಕೊಟ್ಟಿದೆ

ಕಾಂಗ್ರೆಸ್‌ನ ಚೆಂಬು ಜಾಹೀರಾತನ್ನು ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿರುವುದರ ಚಿಹ್ನೆ ಎಂಬ ಬಿಜೆಪಿ ಟೀಕೆಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ನಿನ್ನೆ ಕೊಟ್ಟಿರುವ ಜಾಹೀರಾತು ಈ ದೇಶದ ಜನರಿಗೆ ಬಿಜೆಪಿ ಸರ್ಕಾರ ಖಾಲಿ ಚೆಂಬು ಕೊಟ್ಟಿದೆ ಎಂದು ತಿಳಿಸಲು. ದೇಶದ ಜನರಿಗೆ 15 ಲಕ್ಷ ರೂಪಾಯಿ ಕೊಟ್ಟರೇ? 2 ಕೋಟಿ ಉದ್ಯೋಗ ಸೃಷ್ಟಿ ಆಯಿತೇ? ರೈತರ ಆದಾಯ ದುಪ್ಪಟ್ಟು ಆಯಿತೇ? ಅಚ್ಚೇ ದಿನ್ ಬಂದಿದೆಯೇ? ಅದಕ್ಕೆ ಚೆಂಬು ಕೊಟ್ಟಿದ್ದಾರೆ ಎಂದು ಜಾಹೀರಾತು ನೀಡಲಾಗಿದೆ ಎಂದು ಪ್ರತಿಕ್ರಿಯೆ ನೀಡಿದರು.

ನರೇಂದ್ರ ಮೋದಿ ರಾಜ್ಯಕ್ಕೆ ಬರುತ್ತಿದ್ದು, 11 ತಿಂಗಳಲ್ಲಿ ಬೊಕ್ಕಸ ಖಾಲಿಯಾಗಿದೆ ನಮಗೆ ಭಿಕ್ಷೆ ಕೊಡಿ ಎಂಬ ಅರ್ಥದಲ್ಲಿ ಜಾಹೀರಾತು ನೀಡಿದೆ ಎಂದು ಬಿಜೆಪಿ ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಪ್ರಧಾನಿ ನರೇಂದ್ರ ಮೋದಿ ಕೊಟ್ಟಿರುವ ಆಶ್ವಾಸನೆಗಳಲ್ಲಿ ಒಂದನ್ನೂ ಈಡೇರಿಸಿಲ್ಲ. ದೇಶದ ಜನರಿಗೆ ಖಾಲಿ ಚೆಂಬು ನೀಡಿದ್ದಾರೆ ಎಂದು ಜಾಹೀರಾತು ನೀಡಿದ್ದೇವೆ. ಅವರು ಏನಾದರೂ ಹೇಳಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಬೊಕ್ಕಸ ಖಾಲಿಯಾಗಿಲ್ಲ. ಎಲ್ಲ ಗ್ಯಾರಂಟಿಗಳನ್ನು ಜಾರಿ ಮಾಡಿ ಅಭಿವೃದ್ಧಿ ಕೆಲಸವನ್ನೂ ಮಾಡಿದ್ದೇವೆ ಎಂದರು.

ಭಯವಿರುವುದರಿಂದ ಬಿಜೆಪಿ ಜತೆಗೆ ಜೆಡಿಎಸ್ ಮೈತ್ರಿ

ಏಣಿ ಹತ್ತಿಸಿ ನಂತರ ಸರ್ವನಾಶ ಮಾಡುತ್ತಾರೆ ಎಂಬ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಎಚ್‌.ಡಿ. ಕುಮಾರಸ್ವಾಮಿ ಅವರು ಕೋಮುವಾದಿಗಳಾಗಿದ್ದು, ಜನತಾ ದಳ (ಎಸ್) ಪಕ್ಷವನ್ನು ರದ್ದು ಮಾಡಬೇಕು. ನನಗೆ ಅವರ ಬಗ್ಗೆ ಭಯವಿದ್ದರೆ ಇವರಿಬ್ಬರ ವಿರುದ್ಧ ಹೋರಾಟ ಮಾಡುತ್ತಿರಲಿಲ್ಲ. ಅವರಿಗೆ ಭಯವಿರುವುದರಿಂದ ಮೈತ್ರಿ ಮಾಡಿಕೊಂಡಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: CET 2024 exam: ಸಿಇಟಿಯಲ್ಲಿ 50 ಔಟ್ ಆಫ್ ಸಿಲೆಬಸ್ ಪ್ರಶ್ನೆ; ಮರು ಪರೀಕ್ಷೆ ಅಥವಾ ಗ್ರೇಸ್‌ ಮಾರ್ಕ್ಸ್‌? ಇಂದು ನಿರ್ಧಾರ

ಏನಿದು ಪ್ರಕರಣ?

ಪ್ರೀತಿಸಲು‌ ನಿರಾಕರಿಸಿದಳು (Refusal to love) ಎಂಬ ಕಾರಣಕ್ಕಾಗಿ ಪಾಗಲ್‌ ಪ್ರೇಮಿ ಫಯಾಜ್‌, ಕಾರ್ಪೋರೇಟರ್‌ ಮಗಳನ್ನು ಭೀಕರವಾಗಿ ಕೊಲೆ (Stab wound) ಮಾಡಿದ್ದ. ಚಾಕುವಿನಿಂದ 9 ಬಾರಿ ಇರಿದು (Murder Case) ಕೊಂದಿದ್ದಾನೆ. ಹುಬ್ಬಳ್ಳಿಯ ಬಿವಿಬಿ ಕಾಲೇಜು (Hubballi BVB College) ಆವರಣದಲ್ಲಿ ಕೊಲೆ ನಡೆದಿದೆ. ನೇಹಾ ಹಿರೇಮಠ ಕೊಲೆಯಾದ ಯುವತಿ. ನೇಹಾ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಮಗಳಾಗಿದ್ದಾಳೆ.

ಪ್ರೀತಿಸಲು ನಿರಾಕರಿಸಿದ್ದಕ್ಕೆ ಕೊಲೆ

ನೇಹಾ ಹಿರೇಮಠ ಹುಬ್ಬಳ್ಳಿಯ ಬಿವಿಬಿ‌ ಕಾಲೇಜಿನಲ್ಲಿ ಓದುತ್ತಿದ್ದಾಳೆ. ಈ ವೇಳೆ ಆರೋಪಿ ಪ್ರೀತಿಸುವಂತೆ ಹಿಂದೆ ಬಿದ್ದಿದ್ದ. ಆದರೆ, ನೇಹಾ ನಿರಾಕರಣೆ ಮಾಡುತ್ತಲೇ ಬಂದಿದ್ದಾಳೆ. ಇದರಿಂದ ರೊಚ್ಚಿಗೆದ್ದ ಆತ ಗುರುವಾರ ಕಾಲೇಜು ಕ್ಯಾಂಪಸ್‌ಗೆ ಬಂದಿದ್ದಾನೆ. ಪುನಃ ಆಕೆ ಬಳಿ ಪ್ರೇಮ ನಿವೇದನೆ ಮಾಡಿಕೊಂಡಿದ್ದಾನೆ. ಆದರೆ, ನೇಹಾ ಪ್ರೀತಿಸಲು‌ ನಿರಾಕರಿಸಿದ್ದಾಳೆ. ಹೀಗಾಗಿ ಮೊದಲೇ ನಿರ್ಧರಿಸಿ ಬಂದಿದ್ದ ಆರೋಪಿಯು ನೇಹಾಳಿಗೆ ಕಾಲೇಜು ಕ್ಯಾಂಟೀನ್‌ನಲ್ಲಿಯೇ ಚಾಕುವಿನಿಂದ ಇರಿದಿದ್ದಾನೆ. ಯುವತಿಗೆ ಮನಬಂದಂತೆ ಚಾಕುವಿನಿಂದ ಇರಿದಿದ್ದಾನೆ. ಒಟ್ಟು ಒಂಭತ್ತು ಬಾರಿ ಚಾಕುವಿನಿಂದ ಚುಚ್ಚಿದ್ದು, ನೇಹಾಳಿಗೆ ತೀವ್ರ ರಕ್ತಸ್ರಾವವಾಗಿದೆ. ಸ್ಥಳೀಯರು ತಕ್ಷಣವೇ ಕಿಮ್ಸ್ ಆಸ್ಪತ್ರೆಗೆ ಆಕೆಯನ್ನು ರವಾನೆ ಮಾಡಿದ್ದಾರೆ. ಆದರೆ, ಅಷ್ಟರಲ್ಲಾಗಲೇ ನೇಹಾ ಮೃತಪಟ್ಟಿದ್ದಾಳೆ ಎಂದು ವೈದ್ಯರು ಘೋಷಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Lok Sabha Election 2024: ವಿವಿಪ್ಯಾಟ್‌ ಯಂತ್ರವನ್ನೇ ನೆಲಕ್ಕೆಸೆದು ಪುಡಿ ಪುಡಿ ಮಾಡಿದ ಶಾಸಕ; ವಿಡಿಯೋ ವೈರಲ್‌

Lok Sabha Election 2024: ಮಚೇರ್ಲಾ ವಿಧಾನಸಭಾ ಕ್ಷೇತ್ರದ ಶಾಸಕ, ವೈಎಸ್‌ಆರ್‌ಸಿಪಿ(YSRCP) ನಾಯಕರೂ ಆಗಿರುವ ಪಿನ್ನೆಲ್ಲಿ ರಾಮಕೃಷ್ಣ ರೆಡ್ಡಿ ಈ ಕೃತ್ಯ ಎಸಗಿರುವುದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಏಕಾಏಕಿ ನಾಲ್ಕೈದು ಜನರೊಂದಿಗೆ ಮತಗಟ್ಟೆಯೊಳಗೆ ಬಂದ ರಾಮಕೃಷ್ಣ ರೆಡ್ಡಿಯವರನ್ನು ಕಂಡು ಚುನಾವಣಾಧಿಕಾರಿಗಳು ಎದ್ದು ನಿಲ್ಲುತ್ತಾರೆ. ಅಲ್ಲಿಂದ ನೇರವಾಗಿ ವಿವಿಪ್ಯಾಟ್‌ ಬಳಿ ಹೋದ ಶಾಸಕ ವಿವಿಪ್ಯಾಟ್‌ ಯಂತ್ರವನ್ನು ಎತ್ತಿ ನೆಲಕ್ಕೆ ಬಡಿದು ಧ್ವಂಸಗೊಳಿಸಿದ್ದಾರೆ.

VISTARANEWS.COM


on

Lok Sabha Election 2024
Koo

ಹೈದರಾಬಾದ್‌: ಒಂದೆಡೆ ಲೋಕಸಭೆ ಚುನಾವಣೆ(Lok Sabha Election 2024)ಯ ಕಾವು ಹೆಚ್ಚಾಗ್ತಿದೆ. ಮತ್ತೊಂದೆಡೆ ನಾಯಕರು ಮಾಡುತ್ತಿರುವ ಎಡವಟ್ಟುಗಳೂ ದಿನಕ್ಕೊಂದು ಘಟನೆಯಂತೆ ಕಣ್ಣಮುಂದೆ ಬರುತ್ತಿರುತ್ತವೆ. ಇತ್ತೀಚೆಗಷ್ಟೇ ಆಂಧ್ರಪ್ರದೇಶ(Andra Pradesh)ದಲ್ಲಿ ಮತದಾನಕ್ಕಾಗಿ ಸಾಲಿನಲ್ಲಿ ನಿಂತಿದ್ದ ಮತದಾರನಿಗೆ ಶಾಸಕನೋರ್ವ ಕಪಾಳಮೋಕ್ಷ(Slapped) ಮಾಡಿದ ವಿಚಾರ ಬಹಳ ಸುದ್ದಿಯಾಗಿತ್ತು. ಇದೀಗ ಮತ್ತೋರ್ವ ಶಾಸಕ ವಿವಿಪ್ಯಾಟ್‌(VVPAT) ಅನ್ನೇ ಎತ್ತಿ ನೆಲಕ್ಕೆ ಬಡಿಯುವ ಮೂಲಕ ಎಲ್ಲರನ್ನು ಆಘಾತಕ್ಕೊಳಪಡಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌(Viral video) ಆಗುತ್ತಿದೆ

ಘಟನೆ ವಿವರ:

ಆಂಧ್ರಪ್ರದೇಶದ ಪಲ್ವೈ ಗೇಟ್‌ ಮತಗಟ್ಟೆಯಲ್ಲಿ ಈ ಘಟನೆ ನಡೆದಿದ್ದು, ಮಚೇರ್ಲಾ ವಿಧಾನಸಭಾ ಕ್ಷೇತ್ರದ ಶಾಸಕ, ವೈಎಸ್‌ಆರ್‌ಸಿಪಿ(YSRCP) ನಾಯಕರೂ ಆಗಿರುವ ಪಿನ್ನೆಲ್ಲಿ ರಾಮಕೃಷ್ಣ ರೆಡ್ಡಿ ಈ ಕೃತ್ಯ ಎಸಗಿರುವುದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಏಕಾಏಕಿ ನಾಲ್ಕೈದು ಜನರೊಂದಿಗೆ ಮತಗಟ್ಟೆಯೊಳಗೆ ಬಂದ ರಾಮಕೃಷ್ಣ ರೆಡ್ಡಿಯವರನ್ನು ಕಂಡು ಚುನಾವಣಾಧಿಕಾರಿಗಳು ಎದ್ದು ನಿಲ್ಲುತ್ತಾರೆ. ಅಲ್ಲಿಂದ ನೇರವಾಗಿ ವಿವಿಪ್ಯಾಟ್‌ ಬಳಿ ಹೋದ ಶಾಸಕ ವಿವಿಪ್ಯಾಟ್‌ ಯಂತ್ರವನ್ನು ಎತ್ತಿ ನೆಲಕ್ಕೆ ಬಡಿದು ಧ್ವಂಸಗೊಳಿಸಿದ್ದಾರೆ.

ಮೇ 13ರಂದು ಆಂಧ್ರಪ್ರದೇಶದ ಎಲ್ಲಾ 25 ಕ್ಷೇತ್ರಗಳಿಗೆ ನಡೆದ ಮತದಾನದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಅಂದು ಎಲ್ಲಾ 175 ವಿಧಾನಸಭಾ ಕ್ಷೇತ್ರಗಳಲ್ಲೂ ಮತದಾನ ನಡೆದಿದ್ದು, ಅನೇಕ ಕಡೆಗಳಲ್ಲಿ ಹಿಂಸಾಚಾರ, ಅನುಚಿತ ಘಟನೆಗಳು ವರದಿಯಾಗಿದ್ದವು.

ಟಡಿಎಂ ಖಂಡನೆ:

ಇನ್ನು ವಿಡಿಯೋ ವೈರಲ್‌ ಆಗುತ್ತಿದ್ದಂತೆ ತೆಲುಗು ದೇಶಂ ಪಕ್ಷದ ನಾಯಕರು ಖಂಡನೆ ವ್ಯಕ್ತಪಡಿಸಿದ್ದಾರೆ. ಸೋಲು ಖಚಿತ ಎಂಬುದು ಮನವರಿಕೆ ಅಗುತ್ತಿದ್ದಂತೆ YSRCP ಮುಖಂಡರು ಈ ರೀತಿ ದಾಂದಲೆ ಎಬ್ಬಿಸುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಉತ್ರ ನಾರಾ ಲೋಕೇಶ್‌ ಈ ಬಗ್ಗೆ ಎಕ್ಸ್‌ನಲ್ಲಿ ಟ್ವೀಟ್‌ ಮಾಡಿದ್ದು, YSRCP ಶಾಸಕ ಪಿನ್ನೆಲ್ಲಿ ರಾಮಕೃಷ್ಣ ರೆಡ್ಡಿ ಮತಯಂತ್ರವನ್ನು ಧ್ವಂಸಗೊಳಿಸಿದ್ದಾರೆ. ಈ ಬಗ್ಗೆ ಚುನಾವಣಾ ಆಯೋಗ ಕಠಿಣ ಕ್ರಮ ಕೈಗೊಳ್ಳಬೇಕು. ಸೋಲಿನ ಭಯದಿಂದ ಹೀಗೆಲ್ಲ ವರ್ತಿಸುತ್ತಿದ್ದಾರೆ. ಜೂ.4ರಂದು ಜನರೇ ಅವರಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ಕಿಡಿ ಕಾರಿದ್ದಾರೆ.

ಇದನ್ನೂ ಓದಿ:ನನ್ನ ದೇಶ ನನ್ನ ದನಿ ಅಂಕಣ: ಅಂಬೇಡ್ಕರ್, ಮುಸ್ಲಿಂ ಲೀಗ್ ಒತ್ತಾಯಿಸಿದರೂ ಜನಸಂಖ್ಯಾ ವಿನಿಮಯ ಆಗಲಿಲ್ಲ!

ಒಂದಲ್ಲ.. ಎರಡಲ್ಲಾ.. ಬರೋಬ್ಬರಿ 7ಮತಯಂತ್ರ ಧ್ವಂಸ

ಇನ್ನು ಈ ಬಗ್ಗೆ ಚುನಾವಣಾ ಆಯೋಗ ಪ್ರತಿಕ್ರಿಯಿಸಿದ್ದು, ಶಾಸಕ ರೆಡ್ಡಿ ಬರೋಬ್ಬರಿ 7 ಮತಗಟ್ಟೆಗಳಲ್ಲಿ ಮತಯಂತ್ರಗಳನ್ನು ಧ್ವಂಸಗೊಳಿಸುರುವ ವಿಡಿಯೋ ನಮಗೆ ಸಿಕ್ಕಿದೆ. ಎಲ್ಲಾ ಮತಗಟ್ಟೆಗಳ ವಿಡಿಯೋಗಳನ್ನು ಜಿಲ್ಲಾ ಚುನಾವಣಾ ಆಯೋಗಕ್ಕೆ ಕಳುಹಿಸಲಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಆಂಧ್ರಪ್ರದೇಶದ ಮುಖ್ಯ ಚುನಾವಣಾಧಿಕಾರಿ ಮುಖೇಶ್‌ ಕುಮಾರ್‌ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ ಎಂದು ಹೇಳಿದೆ.

Continue Reading

ಬೆಂಗಳೂರು

Hajj Pilgrimage: ಹಜ್ ಯಾತ್ರಿಗಳನ್ನು ಬೀಳ್ಕೊಟ್ಟ ಸಿಎಂ ಸಿದ್ದರಾಮಯ್ಯ; ಹಜ್ ಭವನ ನಿರ್ಮಾಣಕ್ಕೆ ಅನುದಾನ

Hajj Pilgrimage: ಬೆಂಗಳೂರಿನ ಹೆಗಡೆ ನಗರದ ಹಜ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಜ್ ಯಾತ್ರೆಗೆ ತೆರಳುತ್ತಿರುವವರಿಗೆ ಬೀಳ್ಕೊಡುಗೆ ನೀಡಿ ಸಿಎಂ ಸಿದ್ದರಾಮಯ್ಯ ಶುಭ ಹಾರೈಸಿದ್ದಾರೆ.

VISTARANEWS.COM


on

Hajj pilgrimage
Koo

ಬೆಂಗಳೂರು: ರಾಜ್ಯದಿಂದ ಹಜ್‌ ಯಾತ್ರೆಗೆ (Hajj Pilgrimage) ತೆರಳುತ್ತಿದ್ದ ಯಾತ್ರಿಗಳನ್ನು ಸಿಎಂ ಸಿದ್ದರಾಮಯ್ಯ ಅವರು ನಗರದಲ್ಲಿ ಮಂಗಳವಾರ ಬೀಳ್ಕೊಟ್ಟರು. ಹೆಗಡೆ ನಗರದ ಹಜ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಜ್ ಯಾತ್ರೆಗೆ ತೆರಳುತ್ತಿರುವವರಿಗೆ ಬೀಳ್ಕೊಡುಗೆ ನೀಡಿ ಸಿಎಂ ಶುಭ ಹಾರೈಸಿದರು.

ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, 10,168 ಹಜ್ ಯಾತ್ರಿಗಳ ಪ್ರಯಾಣ ಸುಖಕರವಾಗಿರಲಿ ಎಂದು ಶುಭ ಕೋರಿದ್ದೇನೆ. ಸಮಾಜದಲ್ಲಿ ಸಾಮರಸ್ಯ, ಸೌಹಾರ್ದತೆ ನೆಲಸಲಿ ಎಂದು ಪ್ರಾರ್ಥಿಸುವಂತೆ ತಿಳಿಸಿದ್ದೇನೆ. ಕುವೆಂಪು ಅವರು ಸರ್ವ ಜನಾಂಗದ ಶಾಂತಿಯ ತೋಟ ಎಂದು ಹೇಳಿದಂತೆ ಹಿಂದು, ಮುಸ್ಲಿಂ, ಕ್ರಿಶ್ಚಿಯನ್, ಭೌದ್ಧ, ಸಿಖ್ ಧರ್ಮದವರೆಲ್ಲಾ ಒಂದು ತಾಯಿಯ ಮಕ್ಕಳಂತೆ ಇರಬೇಕು. ಅಂಥ ವಾತಾವರಣ ನಿರ್ಮಾಣವಾಗಬೇಕಾದರೆ ಎಲ್ಲರಿಗೂ ಆರ್ಥಿಕ, ಸಾಮಾಜಿಕ, ರಾಜಕೀಯ ಶಕ್ತಿ ಬಂದು ಎಲ್ಲರೂ ಸಬಲರಾಗಬೇಕು. ಅದಕ್ಕೆ ಹಜ್ ಯಾತ್ರಿಗಳು ಪ್ರಾರ್ಥಿಸಲಿ ಎಂದರು ಹೇಳಿದರು.

ಪ್ರಸ್ತುತ ಆರ್ಥಿಕ ವರ್ಷದಲ್ಲಿ ದೇಶ ಹಾಗೂ ರಾಜ್ಯದಲ್ಲಿ ಉತ್ತಮ ಮಳೆಯಾಗಿ ಬೆಳೆ ಬರಲಿ, ನಾಡು ಸಮೃದ್ಧವಾಗಲಿ ಎಂದು ಪ್ರಾರ್ಥಿಸುವಂತೆ ಎಲ್ಲಾ ಯಾತ್ರಾರ್ಥಿಗಳಲ್ಲಿ ಮನವಿ ಮಾಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಹಜ್ ಭವನ ನಿರ್ಮಾಣಕ್ಕಾಗಿ ಅನುದಾನ

ಮಂಗಳೂರು ಮತ್ತು ಕಲಬುರ್ಗಿಯಲ್ಲಿ ಹಜ್ ಭವನ ನಿರ್ಮಾಣಕ್ಕಾಗಿ ಅನುದಾನ ಒದಗಿಸಲಾಗಿದೆ. ಕಲಬುರಗಿಯಲ್ಲಿ ಸ್ಥಳ ಸಿಗದೇ ವಿಳಂಬವಾಗಿದೆ. ಮಂಗಳೂರಿನಲ್ಲಿ ಸ್ಥಳ ಗುರುತಿಸಲಾಗಿದೆ. ನೀತಿ ಸಂಹಿತೆ ಮುಗಿದ ಮೇಲೆ ಗುದ್ದಲಿ ಪೂಜೆ ನೆರವೇರಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇದೇ ಪ್ರತಿ ದಿನ ಹಜ್‌ಗೆ ತೆರಳುವವರಿಗೆ ಊಟದ ವ್ಯವಸ್ಥೆ ಮಾಡುತ್ತಿರುವ ಸಚಿವ ಜಮೀರ್ ಅಹಮ್ಮದ್ ಅವರನ್ನು ಮುಖ್ಯಮಂತ್ರಿಗಳು ಶ್ಲಾಘಿಸಿದರು.

ಇದನ್ನೂ ಓದಿ | CM Siddaramaiah: ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಬಿಜೆಪಿ ವಿರುದ್ಧ ಹರಿಹಾಯ್ದ ಸಿಎಂ ಸಿದ್ದರಾಮಯ್ಯ

ಈ ವೇಳೆ ಸಚಿವರಾದ ಜಮೀರ್ ಅಹ್ಮದ್ ಖಾನ್, ರಹೀಂ ಖಾನ್ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಸೇರಿ ಹಲವು ಶಾಸಕರು, ಮುಖಂಡರು ಉಪಸ್ಥಿತರಿದ್ದರು.

Continue Reading

ರಾಜಕೀಯ

Janardhan Reddy: ಮಡದಿಗಾಗಿ ಮರವೇರಿ ಮಾವು ಕಿತ್ತುಕೊಟ್ಟ ರೆಡ್ಡಿ: ವಿಡಿಯೊ ವೈರಲ್

Janardhan Reddy: ಮಡದಿಯ ಮಾವಿನ ಕಾಯಿ ತಿನ್ನಬೇಕೆಂಬ ಮನದಾಸೆಯನ್ನು ತೀರಿಸಲು ಶಾಸಕ ಜಿ. ಜನಾರ್ದನರೆಡ್ಡಿ ಅವರು, ಹರಸಾಹಸಪಟ್ಟು ಮಾವಿನ ಮರವೇರಿ ಕಾಯಿಯನ್ನು ಕಿತ್ತುಕೊಟ್ಟಿದ್ದಾರೆ. ಈ ವಿಡಿಯೊ ಸದ್ಯ ಎಲ್ಲೆಡೆ ವೈರಲ್‌ ಆಗಿದೆ.

VISTARANEWS.COM


on

Janardhan Reddy
Koo

ಗಂಗಾವತಿ: ಮಾವು ಎಂದರೆ ಯಾರಿಗೆ ತಾನೆ ಇಷ್ಟವಿರದು ಹೇಳಿ?… ಮಾವಿನ ತೋಟದಲ್ಲಿ ಸಂಚರಿಸುವಾಗ ಹೇಳಿ-ಕೇಳಿ ಮುದ್ದಿನ ಮಡದಿ ಮಾವು ಬೇಕೆಂದು ಪಟ್ಟು ಹಿಡಿದಾಗ ಆಕೆಯ ಆಸೆ ಪೂರೈಸಲು ಎಂಥವರಾದರೂ ಹರಸಾಹಸ ಮಾಡಲೇಬೇಕು. ಇದಕ್ಕೆ ಗಂಗಾವತಿ ಶಾಸಕ ಜಿ. ಜನಾರ್ದನರೆಡ್ಡಿ (Janardhan Reddy) ಹೊರತಾಗಿಲ್ಲ. ಮಡದಿಯ ಮಾವಿನ ಕಾಯಿ (Mango) ತಿನ್ನಬೇಕೆಂಬ ಮನದಾಸೆಯನ್ನು ತೀರಿಸಲು ಶಾಸಕ ರೆಡ್ಡಿ, ಹರಸಾಹಸಪಟ್ಟು ಮಾವಿನ ಮರವೇರಿ ಕಾಯಿಯನ್ನು ಕಿತ್ತು ಕೊಡುವ ವಿಡಿಯೊ ಈಗ ಸಾಮಾಜಿಕ ಜಾಲತಾಣದಲ್ಲಿ ಸಖತ್‌ ವೈರಲ್ ಆಗಿದೆ.

ಶಾಸಕ ಜಿ. ಜನಾರ್ದನರೆಡ್ಡಿ ಮತ್ತು ಅವರ ಪತ್ನಿ ಲಕ್ಷ್ಮಿ ಅರುಣಾ ಅವರು, ತಮ್ಮ ಮಾವಿನ ತೋಟದಲ್ಲಿ ವಿಹರಿಸುತ್ತಿರುವಾಗ ರೆಡ್ಡಿ, ಮಾವಿನ ಮರವನ್ನು ಪ್ರಯಾಸಪಟ್ಟು ಏರಿ ಕಾಯಿಯೊಂದನ್ನು ಕಿತ್ತು ಪತ್ನಿಯ ಕೈಗಿಡುತ್ತಾರೆ.
ಮರದ ಟೊಂಗೆಗಳ ಮೇಲೆ ಶಾಸಕ ರೆಡ್ಡಿ ಜಾಗ್ರತೆಯಿಂದ ಹೆಜ್ಜೆ ಇಡುತ್ತಾ, ಬ್ಯಾಲೆನ್ಸ್ ಮಾಡಿ ಕಾಯಿ ಕಿತ್ತು, ಮರಳಿ ಮರ ಇಳಿಯುವಾಗ ತಮ್ಮ ಬಾಲ್ಯವನ್ನು ನೆನೆಸಿಕೊಂಡು ಇಳಿಯಲು ಪ್ರಯಾಸ ಪಡುವುದು ವಿಡಿಯೊದಲ್ಲಿ ಸೆರೆಯಾಗಿದೆ.

ಇದನ್ನೂ ಓದಿ | Nutrition Alert: ಎಳನೀರು ಕುಡಿಯುವುದರಿಂದಲೂ ನಮ್ಮ ದೇಹಕ್ಕೆ ಸೈಡ್‌ ಎಫೆಕ್ಟ್‌ ಇದೆಯೆ?

ಸದ್ಯ ಮಾವಿನ ಹಣ್ಣಿನ ಸೀಸನ್‌ ಆಗಿರುವುದರಿಂದ ತರಹೇವಾರಿ ಹಣ್ಣುಗಳು ಮಾರುಕಟ್ಟೆಗೆ ಲಗ್ಗೆ ಇಡುತ್ತಿವೆ. ಈ ನಡುವೆ ಜನಾರ್ದನ ರೆಡ್ಡಿ ಅವರು ಮಡದಿಗಾಗಿ ಮಾವಿನ ಕಾಯಿ ಕಿತ್ತುಕೊಟ್ಟಿರುವ ಹಳೆಯ ವಿಡಿಯೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ. ಇದು 2019ರಲ್ಲಿ ರೆಡ್ಡಿ ಅವರ ಮಾವಿನ ತೋಟದಲ್ಲಿ ತೆಗೆದಿರುವ ವಿಡಿಯೊ ಎನ್ನಲಾಗಿದೆ.

Continue Reading

ರಾಜಕೀಯ

Phone tapping: ಸಿಬಿಐಗೆ ಫೋನ್‌ ಕದ್ದಾಲಿಕೆ ಪ್ರಕರಣ ವಹಿಸಲಿ: ಸರ್ಕಾರಕ್ಕೆ ಅಶೋಕ್‌ ಸವಾಲು ಏನು?

Phone tapping: ಫೋನ್‌ ಟ್ಯಾಪಿಂಗ್‌ ಬಗ್ಗೆ ಮಾಜಿ ಸಿಎಂ ಎಚ್‌.ಡಿ.‌ ಕುಮಾರಸ್ವಾಮಿ ಹೇಳಿದ್ದಾರೆ. ಅವರಿಗೆ ಪೊಲೀಸ್‌ ಅಧಿಕಾರಿಗಳು ಸಂಪರ್ಕದಲ್ಲಿದ್ದು, ಅವರಿಂದ ತಿಳಿದುಕೊಂಡು ಹೇಳಿರಬಹುದು. ಫೋನ್‌ ಟ್ಯಾಪ್‌ ಮಾಡುವುದು ಅಕ್ರಮವಾಗಿದ್ದು, ಹಣ ಕೊಟ್ಟರೆ ಚೀನಾದಿಂದ ಉಪಕರಣ ಸಿಗುತ್ತದೆ. ರಾಜ್ಯಕ್ಕೆ ಇಂತಹ ಉಪಕರಣ ಎಷ್ಟು ಬಂದಿದೆ? ಎಲ್ಲೆಲ್ಲಿದೆ ಎಂದು ಪತ್ತೆ ಮಾಡಬೇಕು. ವಿರೋಧ ಪಕ್ಷಗಳ ನಾಯಕರ ಫೋನ್‌ ಟ್ಯಾಪ್‌ ಮಾಡಲಾಗುತ್ತಿದೆ ಎಂದು ನನಗೂ ಪೊಲೀಸ್‌ ಅಧಿಕಾರಿಯೊಬ್ಬರು ಹೇಳಿದ್ದಾರೆ. ಈ ಬಗ್ಗೆ ಸರ್ಕಾರ ತನಿಖೆ ಮಾಡಿಸಲಿ ಎಂದು ಆಗ್ರಹಿಸಿದ್ದಾರೆ.

VISTARANEWS.COM


on

Phone tapping case and R Ashok demands for CBI investigation
Koo

ಬೆಂಗಳೂರು: ಫೋನ್‌ ಕದ್ದಾಲಿಕೆಯನ್ನು (Phone tapping) ರಾಜ್ಯ ಸರ್ಕಾರವೇ ಮಾಡುತ್ತಿದೆ. ಇದು ಸುಳ್ಳು ಎಂದಾದರೆ ಕೂಡಲೇ ಈ ಪ್ರಕರಣವನ್ನು ಸರ್ಕಾರ ಸಿಬಿಐಗೆ ವಹಿಸಿ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಕಾಣಿಸಲಿ. ಅವರು ತಪ್ಪು ಮಾಡಿಲ್ಲ ಎಂದಾದರೆ ಕೂಡಲೇ ಸಿಬಿಐಗೆ ತನಿಖೆ ಹೊಣೆಯನ್ನು ಒಪ್ಪಿಸಲಿ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ (R Ashok) ಸವಾಲು ಹಾಕಿದರು.

ಬೆಂಗಳೂರು ಪದವೀಧರ ಕ್ಷೇತ್ರ ಹಾಗೂ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ ಕುರಿತು ಬಿಜೆಪಿ ಪ್ರಮುಖರೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಆರ್‌. ಅಶೋಕ್, ಫೋನ್‌ ಟ್ಯಾಪಿಂಗ್‌ ಬಗ್ಗೆ ಮಾಜಿ ಸಿಎಂ ಎಚ್‌.ಡಿ.‌ ಕುಮಾರಸ್ವಾಮಿ ಹೇಳಿದ್ದಾರೆ. ಅವರಿಗೆ ಪೊಲೀಸ್‌ ಅಧಿಕಾರಿಗಳು ಸಂಪರ್ಕದಲ್ಲಿದ್ದು, ಅವರಿಂದ ತಿಳಿದುಕೊಂಡು ಹೇಳಿರಬಹುದು. ಫೋನ್‌ ಟ್ಯಾಪ್‌ ಮಾಡುವುದು ಅಕ್ರಮವಾಗಿದ್ದು, ಹಣ ಕೊಟ್ಟರೆ ಚೀನಾದಿಂದ ಉಪಕರಣ ಸಿಗುತ್ತದೆ. ರಾಜ್ಯಕ್ಕೆ ಇಂತಹ ಉಪಕರಣ ಎಷ್ಟು ಬಂದಿದೆ? ಎಲ್ಲೆಲ್ಲಿದೆ ಎಂದು ಪತ್ತೆ ಮಾಡಬೇಕು. ವಿರೋಧ ಪಕ್ಷಗಳ ನಾಯಕರ ಫೋನ್‌ ಟ್ಯಾಪ್‌ ಮಾಡಲಾಗುತ್ತಿದೆ ಎಂದು ನನಗೂ ಪೊಲೀಸ್‌ ಅಧಿಕಾರಿಯೊಬ್ಬರು ಹೇಳಿದ್ದಾರೆ. ಈ ಬಗ್ಗೆ ಸರ್ಕಾರ ತನಿಖೆ ಮಾಡಿಸಲಿ ಎಂದು ಆಗ್ರಹಿಸಿದರು.

ಸರ್ಕಾರ ಮಾಡಿಲ್ಲವಾದರೆ ತನಿಖೆಗೆ ಕೊಡಲಿ

ಫೋನ್‌ ಟ್ಯಾಪ್‌ ಮಾಡುವವರನ್ನು ಜೈಲಿಗೆ ಕಳುಹಿಸಬೇಕು. ಹಿಂದೆಯೂ ಈ ರೀತಿ ಪೊಲೀಸ್‌ ಅಧಿಕಾರಿಗಳು ಮಾಡಿ ತನಿಖೆಗೆ ಒಳಗಾಗಿದ್ದರು. ಸರ್ಕಾರ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು. ಸರ್ಕಾರ ಇದನ್ನು ಮಾಡಿಲ್ಲವೆಂದು ಎದೆ ಮುಟ್ಟಿ ಹೇಳುವುದಾದರೆ ತನಿಖೆಗೆ ನೀಡಲಿ. ಇದನ್ನು ತಾರ್ಕಿಕ ಅಂತ್ಯಕ್ಕೆ ಮುಟ್ಟಿಸಲಿ ಎಂದು ಆರ್‌. ಅಶೋಕ್ ಒತ್ತಾಯಿಸಿದರು.

ಬೆಂಗಳೂರು ಪದವೀಧರ ಕ್ಷೇತ್ರ ಹಾಗೂ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ ಕುರಿತು ಚರ್ಚಿಸಲಾಗಿದೆ. ಈ ಕ್ಷೇತ್ರಗಳ ಮತದಾರರನ್ನು ಗುರುತಿಸಿ ಅವರ ಮನವೊಲಿಸುವ ಕೆಲಸ ಮಾಡಬೇಕೆಂದು ಹಾಗೂ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಸಭೆ ನಡೆಸಿ, ಪ್ರತಿ ಬೂತ್‌ಗಳಲ್ಲಿ ಕೆಲಸ ಮಾಡಲು ಸೂಚಿಸಲಾಗಿದೆ. ಟಿಕೆಟ್‌ ಕುರಿತು ಕೇಂದ್ರದ ವರಿಷ್ಠರು ತೀರ್ಮಾನಿಸಲಿದ್ದಾರೆ ಎಂದು ಆರ್.‌ ಅಶೋಕ್‌ ಹೇಳಿದರು.

ದೇವರಾಜೇಗೌಡರಿಗೆ ಜೈಲಲ್ಲಿ ಜೀವ ಭಯ ಇದೆ; ಕಾರಣ ಬಿಚ್ಚಿಟ್ಟ ಎಚ್‌ಡಿ ಕುಮಾರಸ್ವಾಮಿ

ಮಾಜಿ ಪ್ರಧಾನಿ ಎಚ್.ಡಿ. ದೇವೆಗೌಡರ (HD Devegowda) ಕುಟುಂಬಕ್ಕೆ ಕೆಟ್ಟ ಹೆಸರು ತರುವ ಪೆನ್ ಡ್ರೈವ್ ಸಂಚಿನಲ್ಲಿ ನೇರವಾಗಿ ಭಾಗಿಯಾಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ಕೂಡಲೇ ರಾಜೀನಾಮೆ ಕೊಡಬೇಕು. ಪೆನ್ ಡ್ರೈವ್ ಮೊದಲು ತಲುಪಿದ್ದೇ ಡಿಕೆಶಿಗೆ ಎಂದು ಆರೋಪ ಮಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಅವರು, ಜೈಲಿನಲ್ಲಿ ವಕೀಲ, ಬಿಜೆಪಿ ಮುಖಂಡ ದೇವರಾಜೇಗೌಡ ಅವರಿಗೆ ಜೀವ ಭಯ ಇದೆ ಎಂದು ಆತಂಕವನ್ನು ವ್ಯಕ್ತಪಡಿಸಿದ್ದಾರೆ. ಅದಕ್ಕೆ ಏನು ಕಾರಣ ಎಂದೂ ಹೇಳಿದ್ದಾರೆ.

ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರ ಜತೆ ಮಾತನಾಡಿದ ಎಚ್.ಡಿ. ಕುಮಾರಸ್ವಾಮಿ, ಜೈಲಿನಲ್ಲಿ ವಕೀಲ ದೇವೇರಾಜೇಗೌಡರಿಗೆ ಜೀವ ಭಯ ಇದೆ ಎಂಬ ಮಾಜಿ ಶಾಸಕ ಸುರೇಶ್ ಗೌಡ ಹೇಳಿಕೆಯನ್ನು ಸಮರ್ಥಿಸಿಕೊಂಡರು. ಈ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ದೇವರಾಜೇಗೌಡ ಅವರಿಗೆ ಜೈಲಿನಲ್ಲಿ ಜೀವ ಬೆದರಿಕೆ ಇರಬಹುದು. ಈ ಸರ್ಕಾರದಲ್ಲಿ ಇರುವ ಬಹಳ ಜನರು ಯಾವ ಹಿನ್ನೆಲೆಯಿಂದ ಬಂದಿದ್ದಾರೆ ಎನ್ನುವ ಹಿನ್ನೆಲೆಯನ್ನು ನೋಡಿದರೆ ನಿಜ ಇರಬಹುದು. ಹೀಗಾಗಿ ನಮ್ಮ ಪಕ್ಷದ ಮಾಜಿ ಶಾಸಕ ಸುರೇಶ್ ಗೌಡ ಅವರು ಹೇಳಿರಬಹುದು ಎಂದು ಕುಮಾರಸ್ವಾಮಿ ಸಮರ್ಥನೆ ಮಾಡಿಕೊಂಡರು.

ಡಿಕೆಶಿ ವಜಾಕ್ಕೆ ಆಗ್ರಹ

ಆಡಿಯೊ ಸಂಭಾಷಣೆಯಲ್ಲಿ ಡಿ.ಕೆ. ಶಿವಕುಮಾರ್ ಪಾತ್ರ ಸ್ಪಷ್ಟವಾಗಿದೆ. ಅವರು ರಾಜೀನಾಮೆ ಕೊಡಲೇಬೇಕು. ಇಲ್ಲವಾದರೆ ಸಿಎಂ ಅವರೇ ಸಂಪುಟದಿಂದ ವಜಾ ಮಾಡಬೇಕು ಎಂದು ಎಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದರು.

ಇದನ್ನೂ ಓದಿ: CM Siddaramaiah: ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಬಿಜೆಪಿ ವಿರುದ್ಧ ಹರಿಹಾಯ್ದ ಸಿಎಂ ಸಿದ್ದರಾಮಯ್ಯ

ಪೆನ್ ಡ್ರೈವ್ ಸೃಷ್ಟಿಕರ್ತ ಕಾರ್ತಿಕ್ ಗೌಡ ಮೊತ್ತ ಮೊದಲು ಈ ವಿಡಿಯೊಗಳನ್ನು ತಂದು ಕೊಟ್ಟಿದ್ದೇ ಡಿಕೆ ಶಿವಕುಮಾರ್‌ಗೆ. ಆ ಸಂದರ್ಭದಲ್ಲಿ ಅವರ ಪಕ್ಷದ ಹಾಸನದ ಅಭ್ಯರ್ಥಿಯೂ ಇದ್ದರು. ಪ್ರಕರಣದಲ್ಲಿ ಇಷ್ಟೆಲ್ಲ ಭಾಗಿಯಾದ ಮೇಲೂ ಅವರನ್ನು ಸಂಪುಟದಲ್ಲಿ ಮುಂದುವರಿಸುವುದು ಸರಿಯಲ್ಲ. ಅವರು ಅಧಿಕಾರ ದುರ್ಬಳಕೆ ಮಾಡಿಕೊಂಡಿರುವುದು ಸ್ಪಷ್ಟ. ಸರ್ಕಾರ ಇಂತಹ ತಪ್ಪಿತಸ್ಥರಿಗೆ ರಕ್ಷಣೆ ಕೊಡಬಾರದು, ದುರಂತಕ್ಕೆ ಸಿಎಂ ಸೇರಿದಂತೆ ಇಡಿ ಸರ್ಕಾರವೇ ಅವರ ರಕ್ಷಣೆಗೆ ನಿಂತಿದೆ ಎಂದು ಎಚ್.ಡಿ. ಕುಮಾರಸ್ವಾಮಿ ದೂರಿದರು.

ದೊಡ್ಡ ಬೆಲೆ ತೆರಬೇಕಾದೀತು ಎಚ್ಚರ

ರಾಜಕೀಯ ಸ್ವಾರ್ಥಕ್ಕಾಗಿ, ವಾಮಮಾರ್ಗದಲ್ಲಿ ಚುನಾವಣೆ ಗೆಲ್ಲಬೇಕೆಂಬ ಕಾರಣಕ್ಕೆ ಡಿಕೆಶಿ ಹೂಡಿರುವ ಸಂಚು ಏನು ಎಂಬುದು ಜಗಜ್ಜಾಹೀರಾಗಿದೆ. ಇಡೀ ದೇಶವೇ ಆ ವ್ಯಕ್ತಿಯ ಹೀನ ಕೆಲಸದ ಬಗ್ಗೆ ಮಾತನಾಡುತ್ತಿದೆ. ನೊಂದ ಮಹಿಳೆಯರ ಜೀವನಕ್ಕೆ ಕೊಳ್ಳಿ ಇಟ್ಟ ಈ ವ್ಯಕ್ತಿಯನ್ನು ರಕ್ಷಣೆ ಮಾಡುವ ಕೆಲಸ ಮಾಡಲಾಗುತ್ತಿದೆ. ಒಂದು ವೇಳೆ ಸರ್ಕಾರ ಈ ಕಳಂಕಿತ ಸಚಿವನನ್ನು ರಕ್ಷಣೆ ಮಾಡಿದರೆ ಭಾರೀ ದೊಡ್ಡ ಬೆಲೆ ತೆರಬೇಕಾಗುತ್ತದೆ ಎಂದು ಎಚ್.ಡಿ. ಕುಮಾರಸ್ವಾಮಿ ಎಚ್ಚರಿಸಿದರು.

ದೇವೇಗೌಡರ ಕುಟುಂಬ ನಿರ್ನಾಮಕ್ಕೆ ಸಂಚು

ದೇವರಾಜೇಗೌಡ, ಶಿವರಾಮೇಗೌಡ ನಡುವಿನ ಮೊಬೈಲ್ ಸಂಭಾಷಣೆ ಹೊರಬಂದಾಗಿನಿಂದ ಡಿಕೆಶಿ ಮಾತನಾಡುತ್ತಿಲ್ಲ. ಅದಕ್ಕೆ ನಾನು ಕೇಳಿದ್ದು, ತನಿಖೆ ಯಾವ ದಿಕ್ಕಿನಲ್ಲಿ ನಡೆಯುತ್ತಿದೆ ಎಂದು. ಇದಕ್ಕೆ ನಾವು ಕಾನೂನು ವ್ಯಾಪ್ತಿಯಲ್ಲಿ ಹೋರಾಟ ಮಾಡುತ್ತೇವೆ. ನಾನು ಮೊದಲಿನಿಂದಲೂ ಹೇಳಿದ್ದೇನೆ, ಯಾರೇ ತಪ್ಪು ಮಾಡಿದ್ದರೂ ಶಿಕ್ಷೆ ಆಗಬೇಕು ಎಂದಿದ್ದೇನೆ. ತಪ್ಪಿತಸ್ಥರನ್ನು ರಕ್ಷಣೆ ಮಾಡಲು ನಾವು ಹೋಗುವುದಿಲ್ಲ. ಆದರೆ, ಈ ವಿಷಯದಲ್ಲಿ ಸರ್ಕಾರ ನಡೆದುಕೊಳ್ಳುತ್ತಿರುವ ರೀತಿ ನೋಡಿದರೆ ದೇವೆಗೌಡರ ಕುಟುಂಬವನ್ನು ರಾಜಕೀಯವಾಗಿ ನಿರ್ನಾಮ ಮಾಡಬೇಕು ಎಂದು ಸಂಚು ನಡೆಯುತ್ತಿದೆ ಎಂದು ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದರು.

ಆಡಿಯೊದಲ್ಲೇನಿದೆ?

ಪೆನ್ ಡ್ರೈವ್ ಸೃಷ್ಟಿ ಮಾಡಿ ಅದನ್ನೆಲ್ಲ ಹೊರಗೆ ತಂದು ಮಹಿಳೆಯರಿಗೆ ಕಂಟಕರಾದವರೇ ಇವತ್ತು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಪ್ರಶ್ನೆ ಮಾಡುತ್ತಿದ್ದಾರೆ. ಎನ್‌ಡಿಎ ಮೈತ್ರಿಕೂಟದಿಂದ ಜೆಡಿಎಸ್ ಪಕ್ಷವನ್ನು ಯಾವಾಗ ಹೊರಕ್ಕೆ ಹಾಕುತ್ತೀರಿ ಎಂದು ಕೇಳುತ್ತಾರೆ. ಆಡಿಯೊ ಸಂಭಾಷಣೆಯಲ್ಲಿ ಈ ಅಂಶವೂ ಇದೆ. ಅಲ್ಲಿಗೆ ಇವರ ದುರುದ್ದೇಶ ಏನು ಎನ್ನುವುದು ಅರ್ಥ ಆಯಿತಲ್ಲವೇ ಎಂದು ಕುಮಾರಸ್ವಾಮಿ ಖಾರವಾಗಿ ಪ್ರಶ್ನಿಸಿದರು.

ಡಿಕೆಶಿ ವಿರುದ್ಧ ನೇರ ಆರೋಪ

ಈ ಪ್ರಕರಣಕ್ಕೆ ಇಷ್ಟು ದೊಡ್ಡ ಪ್ರಮಾಣದಲ್ಲಿ ಪ್ರಚಾರ ಕೊಡಿಸಿ ಅದನ್ನು ದೇಶ ವಿದೇಶದಲ್ಲಿಯೂ ಹರಡುವಂತೆ ಮಾಡಿದವರೇ ಕಾಂಗ್ರೆಸ್‌ನವರು. ಬಿಜೆಪಿ ಜೆಡಿಎಸ್ ಮೈತ್ರಿ ಆಗದೇ ಇದ್ದಿದ್ದರೆ ಅವರು ರಾಜ್ಯದಲ್ಲಿ 20 ಲೋಕಸಭೆ ಕ್ಷೇತ್ರಗಳನ್ನು ಗೆಲ್ಲುವ ಭ್ರಮೆಯಲ್ಲಿ ಇದ್ದರು. ಅವರ ಕನಸು ನುಚ್ಚು ನೂರಾಗಿದೆ. ಚುನಾವಣೆ ಫಲಿತಾಂಶ ಹೇಗೆ ಬರುತ್ತದೆ ಎನ್ನುವ ಹತಾಶೆಯಲ್ಲಿ ಅವರು ಇದ್ದಾರೆ. ಬಿಜೆಪಿ-ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡ ದಿನವೇ ಅವರಿಗೆ ಅರ್ಥವಾಯಿತು, ನಮ್ಮ ಓಟಕ್ಕೆ ‌ಕಡಿವಾಣ ಬಿತ್ತು ಎಂದುಕೊಂಡರು. ಈ ಆತಂಕಕ್ಕೆ ಒಳಗಾಗಿ ಈ ಪ್ರಕರಣವನ್ನು ಸೃಷ್ಟಿಸಿ ಇಡೀ ರಾಜ್ಯವೇ ತಲೆ ತಗ್ಗಿಸುವಂತೆ ಮಾಡಿದ್ದೆ ಇದೇ ಡಿ.ಕೆ. ಶಿವಕುಮಾರ್ ಎಂದು ಅವರು ನೇರ ಆರೋಪ ಮಾಡಿದರು.

ಸೀಡಿ ಶಿವು ಇದನ್ನೆಲ್ಲ ಮಾಡಿದ್ದಾರೆ

ಡಿ.ಕೆ.ಶಿವಕುಮಾರ್ ಮತ್ತು ಇವರ ಪಟಾಲಂಗಳು ಇದನ್ನು ಮಾಡಿದ್ದಾರೆ. ‘ಸೀಡಿ ಶಿವು’ ಅವರೇ ಇದನ್ನೆಲ್ಲ ಮಾಡಿದ್ದಾರೆ. ಆದರೆ, ಇದುವರೆಗೂ ಯಾರ ಮೇಲೆಯೂ ಕ್ರಮ ಇಲ್ಲ. ಈ ನೆಲದ ಕಾನೂನಿನ ಪ್ರಕಾರ ಯಾರೇ ಆದರೂ ನ್ಯಾಯಕ್ಕೆ ತಲೆ ಬಾಗಲೇಬೇಕು. ನಿತ್ಯವೂ ಹಣ, ಅಧಿಕಾರದ ದುರುಪಯೋಗ ಮಾಡಿಕೊಂಡು ಮೆರೆಯುವ ವ್ಯಕ್ತಿಗಳು ಬಹಳ ದಿನ ಮೆರೆಯುವುದಕ್ಕೆ ಸಾಧ್ಯ ಇಲ್ಲ. ಪ್ರತಿಯೊಂದಕ್ಕೂ ಅಂತಿಮ ದಿನಗಳು ಬಂದೇ ಬರುತ್ತವೆ ಎಂದು ಕುಮಾರಸ್ವಾಮಿ ಅವರು ಡಿ.ಕೆ. ಶಿವಕುಮಾರ್ ವಿರುದ್ಧ ಕಿಡಿಕಾರಿದರು.

ಪೆನ್ ಡ್ರೈವ್ ಹಂಚಿಕೆ ಪ್ರಕರಣದ ತನಿಖೆ ಸಿಬಿಐ ಕೊಡಲಿ ಎನ್ನುವ ಉದ್ದೇಶದಿಂದ ಯಾರೋ ಒಬ್ಬರು ಹೈಕೋರ್ಟ್ ಮೊರೆ ಹೋಗುವ ವಿಚಾರದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು; ಈ ಬಗ್ಗೆ ಸಿಬಿಐ ತನಿಖೆ ನಡೆಯಬೇಕು. ನಾವು ಕೂಡ ಏನು ಮಾಡಬೇಕು ಎಂಬ ಬಗ್ಗೆ ಕಾನೂ‌ನು ತಜ್ಞರ ಜತೆ ಚರ್ಚೆ ಮಾಡುತ್ತೇವೆ. ಈ ವಿಷಯದಲ್ಲಿ ಕಾನೂನು ಚೌಕಟ್ಟಿನಲ್ಲಿ, ದೇಶದ ಕಾನೂನು ವ್ಯವಸ್ಥೆಯಲ್ಲಿ ಸತ್ಯಾಂಶ ಹೊರಗೆ ತರಲು ಏನೇನು ಕ್ರಮ ತೆಗೆದುಕೊಳ್ಳಬೇಕೋ ಕೈಗೊಳ್ಳುತ್ತೇವೆ ಎಂದು ಕುಮಾರಸ್ವಾಮಿ ‌ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ವಾಪಸ್ ಬರುವಂತೆ ಮತ್ತೆ ಪ್ರಜಲ್‌ಗೆ ಹೇಳಿದ ಎಚ್‌ಡಿಕೆ

ಪ್ರಜ್ವಲ್ ಗೆ ಈಗಾಗಲೇ ವಾಪಸ್ ಬರುವಂತೆ ಮನವಿ ಮಾಡಿದ್ದೇನೆ. ಎಲ್ಲೇ ಇದ್ದರೂ ಬಂದು SIT ಮುಂದೆ ಹಾಜರಾಗು ಎಂದು ಸಂದೇಶ ನೀಡಿದ್ದೇನೆ ಎಂದ ಅವರು; ನನಗೆ ಪ್ರಜ್ವಲ್ ಸಂಪರ್ಕದಲ್ಲಿ ಇಲ್ಲ. ಆ ಕಾರಣಕ್ಕೆ ಸಾರ್ವಜನಿಕವಾಗಿ ಮಾಧ್ಯಮಗಳ ಮೂಲಕ ಮನವಿ ಮಾಡಿದ್ದೇನೆ.ನಾನೂ ಕೂಡ ವಾಪಸ್ ಬರುತ್ತಾನೆ ಎಂದು ನಿರೀಕ್ಷೆ ಇಟ್ಟುಕೊಂಡಿದ್ದೇನೆ. ದೇವೇಗೌಡರು ಹಾಗೂ ನಮ್ಮ ಪಕ್ಷದ ಕಾರ್ಯಕರ್ತರ ಮೇಲೆ ಗೌರವ ಎನ್ನುವುದು ಇದ್ದರೆ ವಾಪಸ್ ಬಾ.. ಎಂದು ಹೇಳಿದ್ದೇನೆ. ಈ ಕೂಡಲೇ ವಾಪಸ್ ಬಾ.. ಎಂದು ಮತ್ತೆ ನಿಮ್ಮ (ಮಾಧ್ಯಮಗಳು) ಮೂಲಕ ಮನವಿ ಮಾಡುತ್ತೇನೆ ಎಂದರು.

ಸಾಕ್ಷ್ಯ ಬೇಕೆಂದ ಸಿಎಂ ವಿರುದ್ಧ ಕಿಡಿ

ಪೆನ್ ಡ್ರೈವ್ ಕೇಸ್‌ನಲ್ಲಿ ಸಾಕ್ಷ್ಯ ಕೇಳಿದ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ, ಮಾಧ್ಯಮಗಳಲ್ಲಿ ಬಿಡುಗಡೆ ಆಗಿರುವ ಶಿವರಾಮೇಗೌಡ, ದೇವರಾಜೇಗೌಡ, ಡಿ.ಕೆ.ಶಿವಕುಮಾರ್ ನಡುವಿನ ಮೊಬೈಲ್ ಸಂಭಾಷಣೆಗಿಂತ ಬೇರೆ ಸಾಕ್ಷ್ಯ ಬೇಕಾ? ಎಂದು ತೀಕ್ಷ್ಣವಾಗಿ ಪ್ರಶ್ನಿಸಿದರು.

ಡಿ.ಕೆ.ಶಿವಕುಮಾರ್ ಅವರೇ ಅರ್ಧ ನಿಮಿಷ ಮಾತಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಅಷ್ಟು ಮಾತನಾಡಿರುವುದೇ ಸಾಲದೇ? ಆದರೆ, ಸಿಎಂ ಅವರು ಸಾಕ್ಷ್ಯ ಕೊಡಿ, ಸಾಕ್ಷ್ಯ ಕೊಡಿ ಎಂದು ಕೇಳುತ್ತಿದ್ದಾರೆ. SIT ತಂಡ 7-8 ಜನರನ್ನು ಬಂಧನ ಮಾಡಿ ಕರೆದುಕೊಂಡು ಬಂದಿದ್ದಾರೆ. ಯಾವ ಸಾಕ್ಷ್ಯಗಳ ಆಧಾರದಲ್ಲಿ ಅವರನ್ನು ಕರೆದುಕೊಂಡು ಬಂದಿದ್ದಾರೆ. ಅವರಿಗೂ ಪ್ರಕರಣಕ್ಕೂ ಏನು ಸಂಬಂಧ? ಸ್ಪಷ್ಟವಾಗಿ ಕಣ್ಣಿಗೆ ಕಟ್ಟಿದ ಹಾಗೇ ಇದೆ, ಇದೆಲ್ಲವನ್ನೂ ಡಿ.ಕೆ.ಶಿವಕುಮಾರ್ ಅವರೇ ಮಾಡಿರುವುದು ಎಂದು ಎಚ್.ಡಿ. ಕುಮಾರಸ್ವಾಮಿ ನೇರ ಆರೋಪ ಮಾಡಿದರು.

ಅವರೇ ಮೊಬೈಲ್ ಸಂಭಾಷಣೆಯಲ್ಲಿ ಇನ್ನು ಏನೇನು ಮಾಹಿತಿ, ಸಾಕ್ಷ್ಯ ಇದೆ ತೆಗೆದುಕೊಂಡು ಬಾ.. ಎಂದು ದೇವರಾಜೇ ಗೌಡನಿಗೆ ಹೇಳಿದ್ದಾರೆ. ಇದಕ್ಕಿಂತ ಇನ್ನೂ ಏನು ಸಾಕ್ಷ್ಯ ಬೇಕು? ಅವರ ಜತೆ ಮಾತನಾಡುವಾಗ ಡಿಕೆಶಿ, ಪೊಲೀಸ್ ದೂರನ್ನು ಕಷ್ಟ ಪಟ್ಟು ಕೊಡಿಸಿದ್ದೇವೆ ಎನ್ನುತ್ತಾರೆ. ಸಿಎಂಗೆ ಇದಕ್ಕಿಂತ‌ ಸಾಕ್ಷಿ ಬೇಕಾ? ಎಂದು ಸಿದ್ದರಾಮಯ್ಯ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ‌ಕಿಡಿಕಾರಿದರು.

ಸಿದ್ದರಾಮಯ್ಯ ಅವರು 6 ಪ್ರಶ್ನೆ ಇಟ್ಟಿದ್ದೇನೆ ಎಂದು ಹೇಳಿದ್ದಾರೆ. ಆದರೆ, ಆರೋಪಿ ಸ್ಥಾನದಲ್ಲಿರುವ ಪ್ರಜ್ವಲ್‌ನನ್ನು ಮುಖ್ಯಮಂತ್ರಿಗಳು ಅಪರಾಧಿ ಮಾಡಿ ಬಿಟ್ಟಿದ್ದಾರೆ. ಇನ್ನು ಪ್ರಜ್ವಲ್ ಆರೋಪಿ ಸ್ಥಾನದಲ್ಲಿ ‌ಇದ್ದಾನೆ. ಅಪರಾಧಿ ಅಂತ‌ ಇನ್ನು ಎಲ್ಲಿ ಸಾಬೀತಾಗಿದೆ? ತನಿಖಾ ತಂಡದವರೇ ಮಾಧ್ಯಮಗಳಿಗೆ ಮಾಹಿತಿ ಸೋರಿಕೆ ಮಾಡಿದ್ದಾರೆ. ವಿಡಿಯೊಗಳಲ್ಲಿ ಪುರುಷನ ಮುಖವೇ ಕಾಣಲ್ಲ ಎಂದು ಹೇಳಲಾಗಿದೆ. ಇದು ಸಿಎಂಗೆ ಗೊತ್ತಿಲ್ಲವೇ? ನೈತಿಕತೆ ಉಳಿಸಬೇಕು ಎಂದೇ ಆತನ ವಿರುದ್ಧ ಕೇಳಿ ಬಂದ ತಕ್ಷಣ ಪಕ್ಷದಿಂದ ಅಮಾನತು ಮಾಡಿದ್ದೇವೆ. ನಾವು ಸಿದ್ದರಾಮಯ್ಯ ತರಹ ಭಂಡತನ ಮಾಡಿಲ್ಲ. ಆ ಭಂಡತನದಲ್ಲಿ ನಿಮ್ಮ ಮಗನದ್ದು ನಡೆಯಿತಲ್ಲ.. ಅಪ್ಪ..ಅಪ್ಪ.. ನಾನು ಕೊಟ್ಟಿದ್ದೇ 5 ಹೆಸರು, 6 ಹೆಸರು ಎಲ್ಲಿಂದ ಬಂತು ಹೇಳಿ ಎಂದು ಕಥೆ ಕಟ್ಟಿದಿರಲ್ಲ? ನಿಮ್ಮ ಮಗನ ಹೆಸರು ಬಂದ ಕೂಡಲೇ ಅದಕ್ಕೆ ಸಿಎಸ್‌ಆರ್‌ ಫಂಡ್ ಎಂದು ಬಣ್ಣ ಹಚ್ಚಿದ್ದು ಗೊತ್ತಿಲ್ಲವೇ ಎಂದು ಎಚ್.ಡಿ. ಕುಮಾರಸ್ವಾಮಿ ಅವರು ಸಿಎಂಗೆ ತಿರುಗೇಟು ನೀಡಿದರು.

ಸಾಕ್ಷ್ಯ ನಾಶಕ್ಕೆ ನಿಮಗಿಂತ ಒಳ್ಳೆ ಉದಾಹರಣೆ ಬೇಕಾ?

ಸಾಕ್ಷ್ಯ ನಾಶ ಯಾವ ರೀತಿ ಮಾಡಬಹುದು ಎನ್ನುವುದಕ್ಕೆ ನಿಮಗಿಂತ ಒಳ್ಳೆಯ ಉದಾಹರಣೆ ಬೇಕಾ? ಅಧಿಕಾರ ದುರ್ಬಳಕೆ ಮಾಡಿಕೊಂಡು ಸಾಕ್ಷ್ಯಗಳನ್ನು ಯಾವ ರೀತಿ ತಿದ್ದಬಹುದು ಎಂದು ಸಾಬೀತು ಮಾಡಿದ್ದೀರಿ. ಈಗಲೂ ನೀವು ಮಾಡುತ್ತಿರುವುದು ಅದೇ ಕೆಲಸ. ಅಷ್ಟು ಸ್ಪಷ್ಟವಾಗಿ ಒಬ್ಬ ಡಿಸಿಎಂ ಮಾತನಾಡಿರುವುದು ಕಣ್ಣ ಮುಂದೆಯೇ ಇದೆ, ಆದರೂ ಸಾಕ್ಷ್ಯ ಕೇಳುತ್ತಿದ್ದೀರಿ ಎಂದು ಎಚ್.ಡಿ. ಕುಮಾರಸ್ವಾಮಿ ಟೀಕಿಸಿದರು.

ಇದನ್ನೂ ಓದಿ: ‌DK Shivakumar: ಕೆಪಿಸಿಸಿ ಅಧ್ಯಕ್ಷನಾಗಿ ಎಷ್ಟು ದಿನ ಇರುತ್ತೇನೋ ಗೊತ್ತಿಲ್ಲ; ಡಿಕೆಶಿ ಹೀಗೆ ಹೇಳಿದ್ಯಾಕೆ?

ಸಿಎಂ ಉತ್ತರ ಕೊಡಬೇಕು

ಕಾರ್ತಿಕ್ ಗೌಡ, ನವೀನ್ ಗೌಡ ಸೇರಿ ಪೆನ್ ಡ್ರೈವ್ ಹಂಚಿದ ಕಿಡಿಗೇಡಿಗಳನ್ನು ಇವತ್ತಿನವರೆಗೂ ಬಂಧಿಸಿಲ್ಲ. ಎಸ್‌ಐಟಿಗೆ ಹೇಳಿಕೆ ನೀಡಿದ್ದಾನೆ ಎನ್ನುತ್ತೀರಿ, ಹಾಗಾದರೆ ಅವನು ಯಾರ ವಶದಲ್ಲಿ ಇದ್ದಾನೆ. ಯಾವತ್ತೂ ಅವನು ತನಿಖಾ ತಂಡಕ್ಕೆ ಹೇಳಿಕೆ ಕೊಟ್ಟ? ಅವನನ್ನು ಯಾಕೆ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಿಲ್ಲ? ಇದರಲ್ಲಿ‌ ಏನೋ ಹುನ್ನಾರ ಇದೆ. ಮುಖ್ಯಮಂತ್ರಿ ಇದಕ್ಕೆ ಉತ್ತರ ಕೊಡಬೇಕು ಎಂದು ಎಚ್.ಡಿ. ಕುಮಾರಸ್ವಾಮಿ ಒತ್ತಾಯಿಸಿದರು.

ಸಿಎಂ ಅವರು ಇಷ್ಟು ಲಘುವಾಗಿ ಮಾತಾಡೋದು ಬೇಡ. ಅವರು ನಮ್ಮ ‌ಪ್ರಶ್ನೆಗಳಿಗೆ ಉತ್ತರ ಕೊಡದೇ ನುಣಿಚಿಕೊಳ್ಳುತ್ತಿದ್ದಾರೆ. ಈ ಪ್ರಕರಣವನ್ನು ಪ್ರಚಾರಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ. ಯಾರಿಗೂ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ತನಿಖೆ ನಡೆಯುತ್ತಿಲ್ಲ. ಇದು SIT ತಂಡ ಅಲ್ಲ. ಇದು SIT ದಂಡ! ಸುಖಾಸುಮ್ಮನೆ ದಂಡಕ್ಕೆ ಇದನ್ನು ರಚನೆ ಮಾಡಲಾಗಿದೆ. SIT ದಂಡವನ್ನು ತಮಗೆ ಆಗದವರ ಮೇಲೆ ಪ್ರಯೋಗ ಮಾಡಲು ಇಟ್ಟುಕೊಂಡಿದ್ದಾರೆ ಎಂದು ಕುಮಾರಸ್ವಾಮಿ ‌ಆಕ್ರೋಶ ವ್ಯಕ್ತಪಡಿಸಿದರು.

Continue Reading
Advertisement
Drone Prathap Helping People To Get Eye Surgery on Birthday
ಸಿನಿಮಾ1 min ago

Drone Prathap: ಡಿಫರೆಂಟ್‌ ಆಗಿ ಬರ್ತ್‌ಡೇ ಸೆಲೆಬ್ರೇಷನ್‌ಗೆ ಡ್ರೋನ್ ಪ್ರತಾಪ್ ಪ್ಲ್ಯಾನ್‌: ವೋಟ್‌ ಹಾಕಿದ್ದು ಸಾರ್ಥಕ ಅಂದ್ರು ಫ್ಯಾನ್ಸ್‌!

Job Alert
ಉದ್ಯೋಗ23 mins ago

Job Alert: ಟಿಸಿಎಸ್‌ನಲ್ಲಿದೆ ಭರ್ಜರಿ ಉದ್ಯೋಗಾವಕಾಶ; ಇಂದೇ ಅರ್ಜಿ ಸಲ್ಲಿಸಿ

Hampi Monument falls
ಪ್ರಮುಖ ಸುದ್ದಿ35 mins ago

Hampi Monument: ಹಂಪಿಯಲ್ಲಿ ಭಾರಿ ಮಳೆಗೆ ಕುಸಿದು ಬಿದ್ದ ವಿಜಯನಗರ ಅರಸರ ಕಾಲದ ಕಲ್ಲು ಮಂಟಪ

Lok Sabha Election 2024
ದೇಶ1 hour ago

Lok Sabha Election 2024: ವಿವಿಪ್ಯಾಟ್‌ ಯಂತ್ರವನ್ನೇ ನೆಲಕ್ಕೆಸೆದು ಪುಡಿ ಪುಡಿ ಮಾಡಿದ ಶಾಸಕ; ವಿಡಿಯೋ ವೈರಲ್‌

rajamarga column mangalore flight crash 1
ಅಂಕಣ1 hour ago

ರಾಜಮಾರ್ಗ ಅಂಕಣ: ಅಳಿಸಲಾಗದ ನೋವು ಬಿಟ್ಟು ಹೋದ ಮಂಗಳೂರು ವಿಮಾನ ದುರಂತ!

food poisoning savadatthi
ಬೆಳಗಾವಿ1 hour ago

Food Poisoning: ಜಾತ್ರೆಯಲ್ಲಿ ಪ್ರಸಾದ ಸೇವಿಸಿ 46 ಜನ ಅಸ್ವಸ್ಥ, ಐವರು ಗಂಭೀರ

nanna desha nanna dani column ambedkar jinnah
ಅಂಕಣ2 hours ago

ನನ್ನ ದೇಶ ನನ್ನ ದನಿ ಅಂಕಣ: ಅಂಬೇಡ್ಕರ್, ಮುಸ್ಲಿಂ ಲೀಗ್ ಒತ್ತಾಯಿಸಿದರೂ ಜನಸಂಖ್ಯಾ ವಿನಿಮಯ ಆಗಲಿಲ್ಲ!

Health Tips Kannada
ಆರೋಗ್ಯ2 hours ago

Health Tips Kannada: ಸನ್‌ಸ್ಕ್ರೀನ್‌ ಕುರಿತು ನಿಮಗೆಷ್ಟು ಗೊತ್ತು?

Karnataka Weather Forecast
ಮಳೆ2 hours ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Sweat Problem
ಆರೋಗ್ಯ3 hours ago

Sweat Problem: ದುರ್ಗಂಧದ ಬೆವರಿನ ಸಮಸ್ಯೆಗೆ ಇಲ್ಲಿವೆ ನೈಸರ್ಗಿಕ ಪರಿಹಾರಗಳು!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ2 hours ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ15 hours ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು20 hours ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು21 hours ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ2 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ3 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ3 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ3 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ5 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ5 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

ಟ್ರೆಂಡಿಂಗ್‌