Vinay Gowda: ಕಿಚ್ಚ ಸುದೀಪ್‌ ಜತೆ ವಿನಯ್‌ ಗೌಡ ಭರ್ಜರಿ ಭೋಜನ! - Vistara News

ಸಿನಿಮಾ

Vinay Gowda: ಕಿಚ್ಚ ಸುದೀಪ್‌ ಜತೆ ವಿನಯ್‌ ಗೌಡ ಭರ್ಜರಿ ಭೋಜನ!

Vinay Gowda: ಸುದೀಪ್ ಕುಟುಂಬದ ಜತೆ ವಿನಯ್ ಅವರು ಊಟ ಸವಿದಿದ್ದಾರೆ. ಸುದೀಪ್, ಪತ್ನಿ ಪ್ರಿಯಾ ಹಾಗೂ ಮಗಳು ಸಾನ್ವಿ ಜತೆ ಇರುವ ಫೋಟೊವನ್ನು ವಿನಯ್‌ ಹಂಚಿಕೊಂಡಿದ್ದಾರೆ. ಬಿಗ್‌ ಬಾಸ್‌ ಸೀಸನ್‌ 10ರಲ್ಲಿ ವಿನಯ್‌ ಅವರು ಮೂರನೇ ರನ್ನರ್ ಅಪ್ ಆದರು. ವಿನಯ್ ಗೌಡ ಅವರು ಈ ಸೀಸನ್‌ನಲ್ಲಿ ಮೂಡಿಸಿರುವ ಹೆಜ್ಜೆಗುರುತು ಸಣ್ಣದೇನಲ್ಲ. ಅದು ಅಳಿಸಲಾಗದಂಥ ಛಾಪು. ಬಿಗ್‌ಬಾಸ್‌ ಈ ಸೀಸನ್‌ನ ಆರಂಭದಲ್ಲಿದ್ದ ಕೋಪಿಷ್ಠ ‘ವಿಲನ್’ ವಿನಯ್ ಮಾಯವಾಗಿ ಪ್ರಬುದ್ಧ, ಸ್ನೇಹಪರ, ಮೃದುಹೃದಯಿ, ಭಾವುಕ ‘ಹೀರೊ’ ವಿನಯ್‌ ಜನರ ಮನಸಲ್ಲಿ ಸ್ಥಾನ ಪಡೆದುಕೊಂಡಿದ್ದರು.

VISTARANEWS.COM


on

Vinay Gowda Lunch With Kichcha Sudeep
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಬಿಗ್‌ ಬಾಸ್‌ ಸೀಸನ್‌ 10ರ ಪ್ರಬಲ ಸ್ಪರ್ಧಿ ವಿನಯ್‌ ಗೌಡ (Vinay Gowda). ಕಿಚ್ಚ ಸುದೀಪ್‌ (Kichcha sudeep) ಅವರಿಗೆ ವಿನಯ್‌ ಕಂಡರೆ ಬಹಳ ಅಚ್ಚುಮೆಚ್ಚು. ಈಗ ಸುದೀಪ್ ಕುಟುಂಬದ ಜತೆ ವಿನಯ್ ಅವರು ಊಟ ಸವಿದಿದ್ದಾರೆ. ಸುದೀಪ್, ಪತ್ನಿ ಪ್ರಿಯಾ ಹಾಗೂ ಮಗಳು ಸಾನ್ವಿ ಜತೆ ಇರುವ ಫೋಟೊವನ್ನು ವಿನಯ್‌ ಹಂಚಿಕೊಂಡಿದ್ದಾರೆ.

ʻʻವಿನಮ್ರ ಕುಟುಂಬ. ಅದ್ಭುತವಾದ ಊಟ. ಡೆಸರ್ಟ್ ಅತ್ಯುತ್ತಮವಾಗಿತ್ತುʼʼ ಎಂದು ವಿನಯ್‌ ಫೋಟೊ ಶೇರ್‌ ಮಾಡಿಕೊಂಡಿದ್ದಾರೆ. ಈ ಪೋಸ್ಟ್​ಗೆ ಸಾನ್ವಿ ಅವರು ರಿಪ್ಲೈ ಮಾಡಿದ್ದು, ಹಾರ್ಟ್ ಎಮೋಜಿ ಹಾಕಿದ್ದಾರೆ. ಸ್ಟಾರ್‌ ಸುವರ್ಣ ವಾಹಿನಿಯಲ್ಲಿ ಸುಮಾರು 2 ವರ್ಷಗಳ ಕಾಲ ಪ್ರಸಾರವಾದ ʼಹರ ಹರ ಮಹಾದೇವʼ ಧಾರಾವಾಹಿಯಲ್ಲಿ ಶಿವನ ಪಾತ್ರದ ಮೂಲಕ ವಿನಯ್‌ ಗೌಡ ಗಮನ ಸೆಳೆದಿದ್ದರು. ಬಳಿಕ ʼಉಘೇ ಉಘೇ ಮಾದೇವ’, ‘ಜೈ ಹನುಮಾನ್’ ʼಯಡಿಯೂರು ಸಿದ್ಧಲಿಂಗೇಶ್ವರ’ ಧಾರಾವಾಹಿಗಳಲ್ಲಿ ಅವರು ಅಭಿನಯಿಸಿದ್ದಾರೆ. ‘‘ಬಿಗ್‌ಬಾಸ್‌ವರೆಗೂ ಒಂದು ಜರ್ನಿ ಬಿಗ್ ಬಾಸ್ ನಂತರವೇ ಇನ್ನೊಂದು ಜರ್ನಿ’’ ಅನ್ನೋದು ಅವರ ಮಾತು. ಬಾಡಿ ಬಿಲ್ಡಿಂಗ್​ ಪ್ರೀತಿಸುವ ವಿನಯ್‌, ಜಿಮ್‌ನಲ್ಲಿ ಮಾತ್ರವೇ ನನ್ನದು ‘ಮೀ ಟೈಮ್’ ಅನ್ನುತ್ತಾರೆ. ಕುಟುಂಬದೊಳಗಿನ ನೋವಿನಿಂದ ಬೇಸತ್ತು ಮನೆಬಿಟ್ಟು ಹೊರಟು ಬದುಕಿಗಾಗಿ ಹೋರಾಡಿ ಈ ಹಂತಕ್ಕೆ ಬಂದಿರುವ ವಿನಯ್‌ ಅವರಿಗೆ ಪತ್ನಿಯೇ ಸರ್ವಸ್ವ ಹದಿನಾಲ್ಕು ವರ್ಷದ ಮುದ್ದು ರಿಷಭ್‌ ಎಂದರೆ ಪಂಚಪ್ರಾಣ.

ಇದನ್ನೂ ಓದಿ: Vinaya Kulkarni : 30 ದಿನ ಧಾರವಾಡದಲ್ಲಿರಲು ಬಿಡಿ, ಕೋರ್ಟ್‌ಗೆ ವಿನಯ ಕುಲಕರ್ಣಿ ಮನವಿ, ನಾಳೆ ತೀರ್ಮಾನ ಸಾಧ್ಯತೆ

ಬಿಗ್‌ ಬಾಸ್‌ ಸೀಸನ್‌ 10ರಲ್ಲಿ ವಿನಯ್‌ ಅವರು ಮೂರನೇ ರನ್ನರ್ ಅಪ್ ಆದರು. ವಿನಯ್ ಗೌಡ ಅವರು ಈ ಸೀಸನ್‌ನಲ್ಲಿ ಮೂಡಿಸಿರುವ ಹೆಜ್ಜೆಗುರುತು ಸಣ್ಣದೇನಲ್ಲ. ಅದು ಅಳಿಸಲಾಗದಂಥ ಛಾಪು. ಬಿಗ್‌ಬಾಸ್‌ ಈ ಸೀಸನ್‌ನ ಆರಂಭದಲ್ಲಿದ್ದ ಕೋಪಿಷ್ಠ ‘ವಿಲನ್’ ವಿನಯ್ ಮಾಯವಾಗಿ ಪ್ರಬುದ್ಧ, ಸ್ನೇಹಪರ, ಮೃದುಹೃದಯಿ, ಭಾವುಕ ‘ಹೀರೊ’ ವಿನಯ್‌ ಜನರ ಮನಸಲ್ಲಿ ಸ್ಥಾನ ಪಡೆದುಕೊಂಡಿದ್ದರು. . ಮೂರನೇ ರನ್ನರ್‌ ಅಪ್‌ (4ನೇ ಸ್ಥಾನ ಪಡೆದ) ಆಗಿದ ವಿನಯ್‌ ಗೌಡ ಅವರಿಗೆ 5 ಲಕ್ಷ ರೂಪಾಯಿ ಬಹುಮಾನ ಸಿಕ್ಕಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಜೂನಿಯರ್‌ ಡಾಲಿ ಎಂಟ್ರಿ.. ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ

VISTARANEWS.COM


on

ಸ್ಯಾಂಡಲ್‌ವುಡ್‌ನ ಜನಪ್ರಿಯ ನಟ ‘ಡಾಲಿ’ ಧನಂಜಯ್ ಹಾಗೂ ಧನ್ಯತಾ ದಂಪತಿಗೆ ಗಂಡು ಮಗುವಿನ ಜನನವಾಗಿದೆ. ಗಂಡು ಮಗು ಜನಿಸಿದ ವಿಚಾರವನ್ನು ಧನಂಜಯ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಮಗುವಿನ ಪುಟ್ಟ ಕೈಗಳ ಫೋಟೋ ಶೇರ್‌ ಮಾಡಿದ್ದಾರೆ. ನಟ ಧನಂಜಯ್ ಹಾಗೂ ವೈದ್ಯೆ ಧನ್ಯತಾ 2025ರ ಫೆಬ್ರವರಿ 16ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಯಾದ ಒಂದು ವರ್ಷದ ಸಂಭ್ರಮದ ಬೆನ್ನಲ್ಲೇ ಈ ಜೋಡಿ ಈಗ ಗಂಡು ಮಗುವನ್ನು ಸ್ವಾಗತಿಸಿದೆ.

Continue Reading

Latest

ಜಪಾನ್‌ಗೆ ಲಗ್ಗೆ ಇಡಲು ಸಜ್ಜಾದ ʼಧುರಂಧರ್’

VISTARANEWS.COM


on

ಜಪಾನ್‌ಗೆ ಲಗ್ಗೆ ಇಡಲು ಸಜ್ಜಾದ ʼಧುರಂಧರ್'

ಆದಿತ್ಯ ಧರ್ ನಿರ್ದೇಶನದ ʼಧುರಂಧರ್’ (ಭಾಗ 1) ಈಗ ಜಪಾನ್‌ನಲ್ಲಿ ಬಿಡುಗಡೆಯಾಗಲು ಸಿದ್ಧವಾಗಿದೆ. 2025ರ ಡಿಸೆಂಬರ್‌ನಲ್ಲಿ ಬಿಡುಗಡೆಯಾಗಿದ್ದ ಈ ಚಿತ್ರ ಬರೋಬ್ಬರಿ 1328 ಕೋಟಿ ರೂಪಾಯಿಗಳಿಗೂ ಹೆಚ್ಚು ಸಂಗ್ರಹ ಮಾಡಿ ದಾಖಲೆ ಬರೆದಿತ್ತು. ಇದೀಗ ಜುಲೈ 10, 2026 ರಂದು ಜಪಾನ್‌ನಲ್ಲಿ ಅದ್ಧೂರಿಯಾಗಿ ತೆರೆಗೆ ಬರಲಿದೆ ಎಂದು ಚಿತ್ರತಂಡ ಅಧಿಕೃತವಾಗಿ ಘೋಷಿಸಿದೆ. ರಣವೀರ್ ಸಿಂಗ್ ಅವರ ಪವರ್‌ಫುಲ್ ಆಕ್ಷನ್ ಮತ್ತು ಅದ್ಭುತ ಮೇಕಿಂಗ್‌ನಿಂದಾಗಿ ಈ ಸಿನಿಮಾ ಜಪಾನ್ ಪ್ರೇಕ್ಷಕರನ್ನು ಸೆಳೆಯುವ ಭರವಸೆ ಮೂಡಿಸಿದೆ. ಈ ಚಿತ್ರದಲ್ಲಿ ರಣವೀರ್ ಸಿಂಗ್ ಜೊತೆಗೆ ಸಂಜಯ್ ದತ್, ಅಕ್ಷಯ್ ಖನ್ನಾ, ಆರ್. ಮಾಧವನ್ ಮತ್ತು ಅರ್ಜುನ್ ರಾಂಪಾಲ್ ಅವರಂತಹ ಘಟಾನುಘಟಿ ಕಲಾವಿದರು ಅಭಿನಯಿಸಿದ್ದಾರೆ.

Continue Reading

Latest

ಡಾಲಿ ಧನಂಜಯ್ ಅಭಿಮಾನಿಗಳಿಗೆ ಸಿಹಿ ಸುದ್ದಿ: ಮೊದಲ ಮಗುವಿನ ನಿರೀಕ್ಷೆಯಲ್ಲಿ ಸ್ಯಾಂಡಲ್‌ವುಡ್ ಸ್ಟಾರ್ ದಂಪತಿ!

VISTARANEWS.COM


on

ಡಾಲಿ ಧನಂಜಯ್ ಅಭಿಮಾನಿಗಳಿಗೆ ಸಿಹಿ ಸುದ್ದಿ: ಮೊದಲ ಮಗುವಿನ ನಿರೀಕ್ಷೆಯಲ್ಲಿ ಸ್ಯಾಂಡಲ್‌ವುಡ್ ಸ್ಟಾರ್ ದಂಪತಿ!

ಸ್ಯಾಂಡಲ್‌ವುಡ್‌ನ ಪ್ರತಿಭಾವಂತ ನಟ ಡಾಲಿ ಧನಂಜಯ್ ಹಾಗೂ ಅವರ ಪತ್ನಿ ಡಾ. ಧನ್ಯತಾ ಈಗ ಹೊಸ ಸಂಭ್ರಮದಲ್ಲಿದ್ದಾರೆ. ಮದುವೆಯಾದ ಕೆಲವು ತಿಂಗಳುಗಳ ನಂತರ ಈ ದಂಪತಿ ತಾವು ಮೊದಲ ಮಗುವಿನ ನಿರೀಕ್ಷೆಯಲ್ಲಿರುವುದಾಗಿ ಸಾಮಾಜಿಕ ಜಾಲತಾಣದ ಮೂಲಕ ಅಧಿಕೃತವಾಗಿ ತಿಳಿಸಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ಸುಂದರವಾದ ಪೋಸ್ಟ್ ಹಂಚಿಕೊಂಡಿರುವ ಅವರು, Our universe is expanding ಎಂದು ಬರೆಯುವ ಮೂಲಕ ತಂದೆ-ತಾಯಿ ಆಗುತ್ತಿರುವ ಸಂತಸದ ವಿಷಯವನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.

ನಟ ಧನಂಜಯ್ ಅವರು 2025ರ ಫೆಬ್ರವರಿ 16ರಂದು ಮೈಸೂರಿನಲ್ಲಿ ಡಾ. ಧನ್ಯತಾ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಇವರ ಅದ್ಧೂರಿ ಮದುವೆಯಲ್ಲಿ ಚಿತ್ರರಂಗ ಹಾಗೂ ರಾಜಕೀಯದ ಗಣ್ಯರು ಭಾಗವಹಿಸಿ ಶುಭ ಹಾರೈಸಿದ್ದರು. ಇದೀಗ ಡಾಲಿ ದಂಪತಿ ನೀಡಿರುವ ಈ ಗುಡ್ ನ್ಯೂಸ್ ಕೇಳಿ ಅವರ ಅಭಿಮಾನಿಗಳು ಮತ್ತು ಸ್ಯಾಂಡಲ್‌ವುಡ್‌ನ ಕಲಾವಿದರು ಸಾಮಾಜಿಕ ಜಾಲತಾಣದಲ್ಲಿ ಶುಭಾಶಯಗಳ ಮಳೆ ಸುರಿಸುತ್ತಿದ್ದಾರೆ.

Continue Reading

Latest

ಜಾಮೀನು ಪಡೆಯಲು ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌.

VISTARANEWS.COM


on

ಜಾಮೀನು ಪಡೆಯಲು ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಗೆ ಅರ್ಜಿ ಸಲ್ಲಿಸಿದ್ದಾರೆ. ಏಪ್ರಿಲ್‌ 27 ರಂದು ದರ್ಶನ್ ಪರ ವಕೀಲ ರಂಜಿತ್ ರೋಹಟಗಿ ಅವರು ಸುಪ್ರೀಂ ಕೋರ್ಟ್‌ನಲ್ಲಿ ಮಧ್ಯಂತರ ಜಾಮೀನು ನೀಡುವಂತೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಈ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮೇ 4ಕ್ಕೆ ನಿಗದಿಪಡಿಸಿದೆ.

Continue Reading
Advertisement
Latest4 hours ago

ಮರು ಮತ ಎಣಿಕೆಯಲ್ಲೂ ಜಯ ಸಾಧಿಸಿದ ಶಾಸಕ ಟಿ.ಡಿ ರಾಜೇಗೌಡ

Latest9 hours ago

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ಬಾಂಗ್ಲಾದೇಶಕ್ಕೆ ಏಕೆ ಟೆನ್ಶನ್‌?

Latest11 hours ago

ಜೂನಿಯರ್‌ ಡಾಲಿ ಎಂಟ್ರಿ.. ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ

Latest1 day ago

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆ: ಒಂದೇ ದಿನ 993 ರೂ ಹೆಚ್ಚಳ

Latest2 days ago

ಜನಪ್ರಿಯತೆಯಲ್ಲಿ ಪ್ರಧಾನಿ ಮೋದಿ ಈಗಲೂ ನಂ.1

Latest2 days ago

ಕುರ್ಚಿ ಕದನಕ್ಕೆ ಹೊಸ ಟ್ವಿಸ್ಟ್ : ದಲಿತ ಸಿಎಂ ಕೂಗು ಜೋರು

Latest2 days ago

ಟಿವಿಕೆ-ಎನ್‌ಡಿಎ ಮೈತ್ರಿ?, ತಮಿಳುನಾಡಿನಲ್ಲಿ ಸಂಚಲನ, ಸ್ಟಾಲಿನ್‌ ಸಭೆ

Latest2 days ago

ಎಕ್ಸಿಟ್‌ ಪೋಲ್‌: ಅಸ್ಸಾಂ, ಪುದುಚೇರಿ ಪ.ಬಂಗಾಳದಲ್ಲಿ ಬಿಜೆಪಿ, ತ.ನಾಡಲ್ಲಿ ಡಿಎಂಕೆ, ಕೇರಳಂನಲ್ಲಿ ಯುಡಿಎಫ್‌

Latest2 days ago

ತಮಿಳುನಾಡಿನಲ್ಲಿ ದಳಪತಿಯೇ ಅಧಿಪತಿ? ಎಂಜಿಆರ್‌ ಆಗ್ತಾರಾ ವಿಜಯ್‌?

Latest2 days ago

ಪಂಚರಾಜ್ಯ ಚುನಾವಣಾ ಫಲಿತಾಂಶ: “ಎಕ್ಸಿಟ್ ಪೋಲ್‌ಗಿಂತ ಉತ್ತಮ ಪ್ರದರ್ಶನ ನಿರೀಕ್ಷೆ” – ಖರ್ಗೆ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌