Neha Murder Case: ನೇಹಾ ಹತ್ಯೆ ಖಂಡಿಸಿದ ನಟರಾದ ದರ್ಶನ್‌, ರಿಷಬ್‌, ಶಿವಣ್ಣ - Vistara News

ಕ್ರೈಂ

Neha Murder Case: ನೇಹಾ ಹತ್ಯೆ ಖಂಡಿಸಿದ ನಟರಾದ ದರ್ಶನ್‌, ರಿಷಬ್‌, ಶಿವಣ್ಣ

Neha Murder Case: ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ, ನಟಿ ಪ್ರಿಯಾ ಸವದಿ, ನಟಿ ಕಾವ್ಯಾ ಶಾಸ್ತ್ರಿ, ರಚಿತಾ ರಾಮ್‌. ರಿಷಬ್‌ ಶೆಟ್ಟಿ, ಶಿವಣ್ಣ ಪೋಸ್ಟ್‌ ಬೆನ್ನಲ್ಲೇ ಇದೀಗ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಈ ಬಗ್ಗೆ ಧ್ವನಿ ಎತ್ತಿದ್ದಾರೆ. “ಪ್ರೀತಿಯ ಹೆಸರಲ್ಲಿ ಇಂತ ಅಮಾನುಷಕರವಾದ ಕೃತ್ಯ ಮಾಡಿರುವವರಿಗೆ ನ್ಯಾಯಾಂಗದ ಅನುಸಾರವಾಗಿ ತಕ್ಕ ಶಿಕ್ಷೆ ಸಿಗಲಿ” ಎಂದು ಬರೆದುಕೊಂಡಿದ್ದಾರೆ.

VISTARANEWS.COM


on

Neha Murder Case darshan shivanna Rishab React
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ (Neha Murder Case) ಬರ್ಬರ ಕೊಲೆ ಪ್ರಕರಣ ರಾಜ್ಯಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಆರೋಪಿ ಫಯಾಜ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಸಿನಿಮಾ ತಾರೆಯರು ಕೂಡ ಧ್ವನಿ ಎತ್ತಿದ್ದಾರೆ. ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ, ನಟಿ ಪ್ರಿಯಾ ಸವದಿ, ನಟಿ ಕಾವ್ಯಾ ಶಾಸ್ತ್ರಿ, ರಚಿತಾ ರಾಮ್‌. ರಿಷಬ್‌ ಶೆಟ್ಟಿ, ಶಿವಣ್ಣ ಪೋಸ್ಟ್‌ ಬೆನ್ನಲ್ಲೇ ಇದೀಗ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಈ ಬಗ್ಗೆ ಧ್ವನಿ ಎತ್ತಿದ್ದಾರೆ. “ಪ್ರೀತಿಯ ಹೆಸರಲ್ಲಿ ಇಂತ ಅಮಾನುಷಕರವಾದ ಕೃತ್ಯ ಮಾಡಿರುವವರಿಗೆ ನ್ಯಾಯಾಂಗದ ಅನುಸಾರವಾಗಿ ತಕ್ಕ ಶಿಕ್ಷೆ ಸಿಗಲಿ” ಎಂದು ಬರೆದುಕೊಂಡಿದ್ದಾರೆ.

ದರ್ಶನ್‌ ಪೋಸ್ಟ್‌ನಲ್ಲಿ ʻʻಪ್ರೀತಿಯ ಹೆಸರಲ್ಲಿ ಇಂತ ಅಮಾನುಷಕರವಾದ ಕೃತ್ಯ ಮಾಡಿರುವವರಿಗೆ ನ್ಯಾಯಾಂಗದ ಅನುಸಾರವಾಗಿ ತಕ್ಕ ಶಿಕ್ಷೆ ಸಿಗಲಿ. ಇನ್ನು ಬಾಳಿ ಬದುಕಬೇಕಿದ್ದ 23 ವಯಸ್ಸಿನ ನೇಹಾ ಹಿರೇಮಠ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಈ ನೋವನ್ನು ಸಹಿಸಿಕೊಳ್ಳುವ ಶಕ್ತಿ ಅವರ ಕುಟುಂಬಕ್ಕೆ ದೇವರು ನೀಡಲಿʼʼಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Neha Murder Case: ನೇಹಾ-ಫಯಾಜ್ ಪ್ರೀತಿಗೆ ನ್ಯಾಯ ಕೊಡಿಸಿ ಎಂದು ಪೋಸ್ಟ್ ಮಾಡಿದ ಇಬ್ಬರು ವಶಕ್ಕೆ

ರಿಷಬ್‌ ಶೆಟ್ಟಿ ಪೋಸ್ಟ್‌ನಲ್ಲಿ ʻʻನೇಹಾ ಹೀರೆಮಠ ಅವರ ಘಟನೆ ಅಮಾನವೀಯವಾಗಿದೆ. ಇಂತಹ ಘಟನೆ ಮರುಕಳಿಸದಂತೆ ಕಾನೂನು ಕ್ರಮಗಳನ್ನು ತಪ್ಪಿತಸ್ಥರ ಮೇಲೆ ಕೈಗೊಳ್ಲಬೇಕೆಂದು ವಿನಂತಿಸುತ್ತಾ, ನೇಹಾ ಅವರ ಕುಟುಂಬಕ್ಕೆ ಈ ದುಃಖ ಭರಿಸುಬ ಸಕ್ತಿ ದೇವರು ಕೊಡಲಿ ಎಂದು ಪ್ರಾರ್ಥಿಸುತ್ತೇನೆʼʼಎಂದು ಬರೆದುಕೊಂಡಿದ್ದಾರೆ.

ಶಿವರಾಜ್‌ ಕುಮಾರ್‌ ಅವರು ಪೋಸ್ಟ್‌ನಲ್ಲಿ ʻʻಈ ರೀತಿಯ ಅಮಾನುಷ ಘಟನೆ ಮತ್ತೆಂದೂ ಮರುಕಳಿಸದಿರಲಿ. ಮಗಳನ್ನು ಕಳೆದುಕೊಂಡ ಆ ತಂದೆ ತಾಯಿಯ ಆಕ್ರಂದನ ನೋಡಲಾಗದು. ನಮ್ಮ ಸರ್ಕಾರ, ನ್ಯಾಯಾಂಗ ವ್ಯವಸ್ಥೆ, ಹಾಗೂ ಪೊಲೀಸ್ ಆದಷ್ಟು ಬೇಗ ನೇಹಾ ಹಿರೇಮಠ ಸಾವಿಗೆ ನ್ಯಾಯ ದೊರಕುವಂತೆ ಮಾಡಲಿ ಎನ್ನುವುದು ನನ್ನ ಕಳಕಳಿಯ ವಿನಂತಿ” ಎಂದು ಬರೆದುಕೊಂಡಿದ್ದಾರೆ.

ಇಬ್ಬರೂ ಲವ್‌ ಮಾಡ್ತಿದ್ದರು ಅನ್ನೋದು ಸತ್ಯ ಎಂದ ಫಯಾಜ್‌ ತಾಯಿ

ಏ.18ರಂದು ಹುಬ್ಬಳ್ಳಿಯ ಬಿವಿಬಿ ಕಾಲೇಜು (Hubballi BVB College) ಆವರಣದಲ್ಲೇ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಮಗಳು ನೇಹಾ ಹಿರೇಮಠ ಬರ್ಬರವಾಗಿ (Neha Murder Case) ಕೊಲೆಯಾಗಿದ್ದಳು. ಪಾಗಲ್‌ ಪ್ರೇಮಿಯ ಕೃತ್ಯಕ್ಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆಗಳು ಮುಂದುವರಿದಿದೆ. ಆರೋಪಿಯನ್ನು ಎನ್‌ಕೌಂಟರ್ ಮಾಡಿ ಬಿಸಾಕಿ ಎಂದು ಆಕ್ರೋಶಗಳು ಕೇಳಿಬರುತ್ತಿವೆ. ಈ ನಡುವೆ ಘಟನೆ ಬಗ್ಗೆ ಆರೋಪಿ ಫಯಾಜ್‌ ತಾಯಿ ಮಮ್ತಾಜ್ ಪ್ರತಿಕ್ರಿಯಿಸಿದ್ದು, ಫಯಾಜ್‌ಗೆ ಶಿಕ್ಷೆ ಆಗಬೇಕೆಂದು ಕಣ್ಣೀರು ಹಾಕಿದ್ದಾರೆ.

ನನ್ನ ಮಗ ಫಯಾಜ್‌ ಮಾಡಿದ ಕೃತ್ಯಕ್ಕೆ ತಕ್ಕ ಶಿಕ್ಷೆ ಆಗಬೇಕು. ಆತನ ತಪ್ಪಿಗೆ ನಾನು ರಾಜ್ಯದ ಜನತೆಗೆ ಹಾಗೂ ನೇಹಾಳ ತಂದೆ-ತಾಯಿಗೂ ಕ್ಷಮೆಯಾಚಿಸುತ್ತೆನೆ. ಅವರಿಗೆ ಎಷ್ಟು ದುಃಖ ಆಗಿದ್ದೀಯೋ ಅಷ್ಟೇ ನೋವನ್ನು ನಾವು ಅನುಭವಿಸುತ್ತಿದ್ದೇವೆ. ಯಾವ ಮಕ್ಕಳು ತಪ್ಪು ಮಾಡಿದರೂ ತಪ್ಪೇ.. ನನ್ನ ಮಗ ಮಾಡಿದ ತಪ್ಪಿಗೆ ಈ ನೆಲದ ಕಾನೂನು ಏನು ಶಿಕ್ಷೆ ವಿಧಿಸುತ್ತೋ ಆ ಪ್ರಕಾರ ಶಿಕ್ಷೆ ಆಗಲಿ ಎಂದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು ಗ್ರಾಮಾಂತರ

Road Accident : ಡಿವೈಡರ್‌ಗೆ ಡಿಕ್ಕಿ ಹೊಡೆದು ಪಕ್ಕದ ಹೆದ್ದಾರಿಗೆ ಹಾರಿದ ಕೆಎಸ್‌ಆರ್‌ಟಿಸಿ ಬಸ್; ಬೈಕ್‌ನಿಂದ ಎಗರಿ ಬಿದ್ದ ಬಾಲಕ ಸಾವು

Road Accident : ತುಮಕೂರು ರಸ್ತೆ ಮಾದಾವರ ಫ್ಲೈಓವರ್ ಸಮೀಪ ಭೀಕರ ಅಪಘಾತ ಸಂಭವಿಸಿದೆ. ಡಿವೈಡರ್‌ಗೆ ಡಿಕ್ಕಿ ಹೊಡೆದ ಕೆಎಸ್‌ಆರ್‌ಟಿಸಿ ಬಸ್‌ ಪಕ್ಕದ ಹೆದ್ದಾರಿಗೆ ಹಾರಿದೆ. ಪರಿಣಾಮ ಬಸ್ಸಿನಲ್ಲಿದ್ದ ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದಾರೆ.

VISTARANEWS.COM


on

By

Road Accident
Koo

ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಸಮೀಪದ ಅಡಕಮಾರನಹಳ್ಳಿಯ ತುಮಕೂರು ರಸ್ತೆ ಮಾದಾವರ ಫ್ಲೈಓವರ್ ಬಳಿ ಭಾರೀ ದುರಂತವೊಂದು (Road Accident) ತಪ್ಪಿದೆ. ಚಾಲಕನ ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್‌ ಡಿವೈಡರ್‌ಗೆ ಡಿಕ್ಕಿ ಹೊಡೆದು ಹೆದ್ದಾರಿಯ ಪಕ್ಕದ ರಸ್ತೆಗೆ ಹಾರಿದ ಘಟನೆ ನಡೆದಿದೆ.

ಕೆಎಸ್‌ಆರ್‌ಟಿಸಿ ಬಸ್‌ವೊಂದು ಪ್ರಯಾಣಿಕರನ್ನು ಹೊತ್ತು ಸೋಮವಾರ ಪೇಟೆಯಿಂದ ಬೆಂಗಳೂರಿಗೆ ಬರುತ್ತಿತ್ತು. ನೆಲಮಂಗಲ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರ ಸಮೀಪ ಬಂದಾಗ ಚಾಲಕನ ನಿಯಂತ್ರಣ ತಪ್ಪಿದ ಬಸ್‌ ಡಿವೈಡರ್‌ಗೆ ಡಿಕ್ಕಿ ಹೊಡೆದು, ಹೆದ್ದಾರಿಯ ತಡೆಗೋಡೆಯನ್ನು ಹಾರಿ ಪಕ್ಕದ ರಸ್ತೆಗೆ ಬಂದು ನಿಂತಿತ್ತು. ಇದು 40 ಅಡಿ ಎತ್ತರದ ಫ್ಲೈಓವರ್‌ನಲ್ಲಿ ಘಟನೆ ನಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಒಂದು ವೇಳೆ ಬಸ್‌ ಏನಾದರೂ 40 ಅಡಿ ಎತ್ತರದಿಂದ ಕೆಳಗೆ ಬಿದ್ದಿದ್ದರೆ, ಪ್ರಯಾಣಿಕರ ಜೀವಕ್ಕೆ ಕುತ್ತು ಬರುತ್ತಿತ್ತು. ಮಾತ್ರವಲ್ಲದೇ ರಸ್ತೆಯಲ್ಲಿ ಸಂಚರಿಸುತ್ತಿದ್ದ ಇತರೆ ವಾಹನ ಸವಾರರು ಪ್ರಾಣವನ್ನೇ ಕಳೆದುಕೊಳ್ಳಬೇಕಿತ್ತು.

Road accidents in Bengaluru  Vijayanagar

ಅಪಘಾತದಲ್ಲಿ ನಾಲ್ವರಿಗೆ ಗಂಭೀರ ಗಾಯವಾಗಿದ್ದು, ಓರ್ವನ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗುತ್ತಿದೆ. ಚಾಲಕ ನಿರ್ವಾಹಕ ಸೇರಿದಂತೆ ಆರು ಮಂದಿಗೆ ಗಾಯವಾಗಿದ್ದು, ಅವರನ್ನೆಲ್ಲ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನೂ ಅಪಘಾತದಿಂದಾಗಿ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತವಾಗಿತ್ತು. ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪಕ್ಕದ ರಸ್ತೆಗೆ ಹಾರಿದ್ದ ಬಸ್‌ ಅನ್ನು ತೆರವುಗೊಳಿಸುತ್ತಿದ್ದಾರೆ.

Road accidents in Bengaluru  Vijayanagar

ಇದನ್ನೂ ಓದಿ: Robbery Case : ಕ್ಯಾಂಟರ್‌ ಅಡ್ಡಗಟ್ಟಿದ ದರೋಡೆಕೋರರು; ಖಾರದ ಪುಡಿ ಎರಚಿ 32 ಲಕ್ಷ ರೂ. ದೋಚಿ ಪರಾರಿ

ವಿಜಯನಗರದಲ್ಲಿ ಬೈಕ್‌ಗಳ ಮುಖಾಮುಖಿ ಡಿಕ್ಕಿ; ಎಗರಿ ಬಿದ್ದ ಬಾಲಕ ಸಾವು

ಬೈಕ್‌ಗಳ ಮುಖಾಮುಖಿ ಡಿಕ್ಕಿಯಾಗಿದ್ದು, ಡಿಕ್ಕಿ ರಭಸಕ್ಕೆ ಬೈಕ್ ಹಿಂದೆ ಕುಳಿತಿದ್ದ ಬಾಲಕ ಎಗರಿ ಬಿದ್ದು ಮೃತಪಟ್ಟಿದ್ದಾನೆ. ಘಟನೆಯಲ್ಲಿ ಮೂವರಿಗೆ ಸಣ್ಣ-ಪುಟ್ಟ ಗಾಯವಾಗಿದೆ. ವಿಜಯನಗರದ ಹರಪನಹಳ್ಳಿ – ಕೂಡ್ಲಿಗಿ ರಸ್ತೆಯ ಹರಾಳು ಕ್ರಾಸ್ ಬಳಿ ಘಟನೆ ನಡೆದಿದೆ. ಕೂಡ್ಲಿಗಿ ತಾಲೂಕಿನ ನಿವಾಸಿ ಮಹಮದ್ (13) ಮೃತ ದುರ್ದೈವಿ.

ಮಹಮದ್‌ ತಂದೆ ಅಸ್ಲಾಂ ಭಾಷಾ ಅವರು ಕೆಎಸ್‌ಆರ್‌ಸಿಟಿ ಬಸ್‌ ಓವರ್ ಟೆಕ್ ಮಾಡಲು ಹೋಗಿದ್ದಾರೆ. ಈ ವೇಳೆ ಬೈಕ್‌ನಲ್ಲಿ ಬರುತ್ತಿದ್ದ ರೇವಣಸಿದ್ದಪ್ಪ ಎಂಬುವವರ ಬೈಕ್‌ಗೆ ಗುದ್ದಿದ್ದಾರೆ. ಪರಿಣಾಮ ಡಿಕ್ಕಿ ರಭಸಕ್ಕೆ ಹಿಂಬದಿ ಕುಳಿತಿದ್ದ ಮಹಮದ್‌ ಹಾರಿ ಬಿದ್ದು ಮೃತಪಟ್ಟಿದ್ದಾನೆ. ಅಸ್ಲಾಂ ಭಾಷಾ, ಮತ್ತೊಬ್ಬ ಪುತ್ರ ಮಹಮದ್ ಫರಾನ್ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಆದರೆ ಮಹಮದ್‌ ತಾಯಿ ಬಸ್ ಚಾಲಕನನ್ನು ದೂರಿದ್ದಾರೆ. ಬಸ್ ಸ್ಪೀಡ್ ಆಗಿ ಬಂದಾಗ ಬೈಕ್ ಬ್ಯಾಲೆನ್ಸ್ ತಪ್ಪಿ ಮತ್ತೊಂದು ಬೈಕ್‌ಗೆ ಡಿಕ್ಕಿಯಾಗಿದೆ. ಬಸ್‌ ಮಗನಿಗೂ ಡಿಕ್ಕಿ ಹೊಡೆದಿದೆ. ನನ್ನ ಮಗನ ಸಾವಿಗೆ ಬಸ್ ಚಾಲಕ ಶಿವಕುಮಾರ್ ಕೂಡಾ ಕಾರಣ ಎಂದು ದೂರು ದಾಖಲಿಸಿದ್ದಾರೆ. ಸದ್ಯ ಈ ಸಂಬಂಧ ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ವಿಜಯಪುರ

Robbery Case : ಕ್ಯಾಂಟರ್‌ ಅಡ್ಡಗಟ್ಟಿದ ದರೋಡೆಕೋರರು; ಖಾರದ ಪುಡಿ ಎರಚಿ 32 ಲಕ್ಷ ರೂ. ದೋಚಿ ಪರಾರಿ

Robbery Case : ಮಿಡ್‌ನೈಟ್‌ನಲ್ಲಿ ಬೊಲೆರೋದಲ್ಲಿ ಬಂದ‌ ದುಷ್ಕರ್ಮಿಗಳು ಕ್ಯಾಂಟರ್‌ ವಾಹನಕ್ಕೆ ಅಡ್ಡಗಟ್ಟಿ, ಕಲ್ಲು ತೂರಾಟ ನಡೆಸಿದ್ದಾರೆ. ನಂತರ ಕಣ್ಣಿಗೆ ಖಾರದ ಪುಡಿ ಎರಚಿ, ಹಲ್ಲೆ ಮಾಡಿ 32 ಲಕ್ಷ ರೂ. ಕದ್ದು ಪರಾರಿ ಆಗಿದ್ದಾರೆ.

VISTARANEWS.COM


on

By

Robbery case
Koo

ವಿಜಯಪುರ: ಕ್ಯಾಂಟರ್ ವಾಹನಕ್ಕೆ ಅಡ್ಡಗಟ್ಟಿದ ದುಷ್ಕರ್ಮಿಗಳು 32 ಲಕ್ಷ ನಗದು ದರೋಡೆ ಮಾಡಿ (Robbery Case) ಪರಾರಿ ಆಗಿದ್ದಾರೆ. ವಿಜಯಪುರ ಜಿಲ್ಲೆ ಕೊಲ್ಹಾರ ಪಟ್ಟಣದ ಹೊರ ಭಾಗದಲ್ಲಿ ಶುಕ್ರವಾರ (ಮೇ 17) ತಡರಾತ್ರಿ ದರೋಡೆ ನಡೆದಿದೆ. ಹತ್ತಿ ಮಾರಾಟ ಮಾಡಿ ವಾಪಸ್ ಹಣ ತೆಗೆದುಕೊಂಡು ಹೋಗುತ್ತಿದ್ದಾಗ ದರೋಡೆ ನಡೆದಿದೆ.

ಕಲಬುರಗಿ ಜಿಲ್ಲೆ ಜೀವರ್ಗಿ ಪಟ್ಟಣದ ಹತ್ತಿ ವ್ಯಾಪಾರಿ ಚಂದ್ರಕಾಂತ ಕುಂಬಾರ ಎಂಬುವವರ ಹಣವನ್ನು ದರೋಡೆ ಮಾಡಿದ್ದಾರೆ. ಚಂದ್ರಕಾಂತ ಅವರು ಧಾರವಾಡ ತಾಲೂಕಿನ ಅಮ್ಮಿನಭಾವಿ ಗ್ರಾಮದಲ್ಲಿರುವ ಕಾರ್ಖಾನೆಗೆ ಹತ್ತಿ ಮಾರಾಟ ಮಾಡಿ 32 ಲಕ್ಷ ರೂ. ನಗದು ಜತೆಗೆ ವಾಪಸ್ ಜೀವರ್ಗಿಗೆ ತೆರಳುತ್ತಿದ್ದರು.

ಇದನ್ನೂ ಓದಿ: Accident Case : ಟ್ರ್ಯಾಕ್ಟರ್ ರೋಟವೇಟರ್‌ಗೆ ಸಿಲುಕಿ ಬಾಲಕನ ದೇಹ ಛಿದ್ರ ಛಿದ್ರ

ಕೊಲ್ಹಾರ ಪಟ್ಟಣದ ಬಳಿ ಬರುವಾಗ ಬುಲೆರೋ ವಾಹನದಿಂದ ಬಂದ ದರೋಡೆಕೋರರು ಕ್ಯಾಂಟರ್‌ ವಾಹನಕ್ಕೆ ಅಡ್ಡಗಟ್ಟಿದ್ದಾರೆ. ನಂತರ ಏಕಾಏಕಿ ಕ್ಯಾಂಟರ್‌ ಗಾಜಿಗೆ ಕಲ್ಲು ಎಸೆದು, ರಾಡ್‌ನಿಂದ ಹೊಡೆದು ಹಲ್ಲೆ ಮಾಡಿದ್ದಾರೆ. ನಂತರ ಕಣ್ಣಿಗೆ ಖಾರದ ಪುಡಿ ಎರಚಿ ಕ್ಯಾಂಟರ್‌ನಲ್ಲಿಟ್ಟಿದ್ದ 32 ಲಕ್ಷ ರೂಪಾಯಿ ದರೋಡೆ ಮಾಡಿ ಪರಾರಿ ಆಗಿದ್ದಾರೆ.

ದರೋಡೆಕೋರರಿಂದ ಹಲ್ಲೆಗೀಡಾದ ವ್ಯಾಪಾರಿ ಚಂದ್ರಕಾಂತ ಅವರ ಕ್ಯಾಂಟರ್ ಚಾಲಕ ಮಹಾಂತೇಶ ಕುಂಬಾರ ಹಾಗೂ ಸಹಾಯಕ ಮಲ್ಲು ಕೊಡಚಿ ಅವರನ್ನು ಕೊಲ್ಹಾರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಕೊಲ್ಹಾರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ದರೋಡೆಕೋರರ ಪತ್ತೆಗೆ ಮುಂದಾಗಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಳಗಾವಿ

Gas Cylinder Blast: ಲೈಟ್ ಆನ್ ಮಾಡುತ್ತಿದ್ದಂತೆ ಸಿಲಿಂಡರ್‌ ಸ್ಫೋಟ; ಪತಿ- ಪತ್ನಿ ಗಂಭೀರ

Gas Cylinder Blast : ಗ್ಯಾಸ್‌ ಸಿಲಿಂಡರ್‌ ಸೋರಿಕೆ ಆಗಿದ್ದು, ಅಡುಗೆ ಮನೆಯ ಲೈಟ್‌ ಆನ್‌ ಮಾಡುತ್ತಿದ್ದಂತೆ ಸಿಲಿಂಡರ್‌ ಸ್ಫೋಟಗೊಂಡಿದೆ. ಪರಿಣಾಮ ಮನೆಯಲ್ಲಿದ್ದ ವೃದ್ಧರಿಬ್ಬರಿಗೆ ಗಂಭೀರ ಗಾಯವಾಗಿದದೆ. ಸ್ಫೋಟದ ತೀವ್ರತೆಗೆ ಅಕ್ಕ ಪಕ್ಕದ ಮನೆಯವರು ಬೆಚ್ಚಿ ಬಿದ್ದಿದ್ದಾರೆ.

VISTARANEWS.COM


on

By

Gas Cylinder Blast
Koo

ಬೆಳಗಾವಿ: ಬೆಳ್ಳಂಬೆಳಿಗ್ಗೆ ಭೀಕರ ಗ್ಯಾಸ್‌ ಸಿಲಿಂಡರ್ ಸ್ಫೋಟ (LPG Cylinder Blast) ಸಂಭವಿಸಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಬೆಳಗಾವಿಯ ಸುಳಗಾದಲ್ಲಿ ಈ ಭೀಕರ ಸ್ಫೋಟ (Gas Cylinder Blast) ಸಂಭವಿಸಿದೆ.

ಕಲ್ಲಪ್ಪ ಪಾಟೀಲ್ (62), ಸುಮನ್ ಪಾಟೀಲ್(60) ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಲ್ಲಪ್ಪ ಹಾಗೂ ಸುಮನ್ ಅವರಿಗೆ ಶೇ.70ರಷ್ಟು ಸುಟ್ಟ ಗಾಯಗಳಾಗಿವೆ. ಸ್ಥಳೀಯರು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಮುಂದುವರಿದಿದೆ.

ಬೆಳಗ್ಗೆ 4 ಗಂಟೆಗೆ ಸುಮನ್‌ ಪಾಟೀಲ್‌ ಅವರು ಎದ್ದು, ಅಡುಗೆ ಮನೆಗೆ ಹೋಗಲು ಲೈಟ್ ಸ್ವಿಚ್ ಆನ್ ಮಾಡಿದ್ದಾರೆ. ಈ ವೇಳೆ ಏಕಾಏಕಿ ಸಿಲಿಂಡರ್‌ ಬ್ಲಾಸ್ಟ್ ಆಗಿದೆ. ಗ್ಯಾಸ್‌ ಸಿಲಿಂಡರ್ ಸಮೀಪ ಹೋಗದಿದ್ದರೂ ಸ್ಫೋಟಗೊಂಡಿದೆ. ಗ್ಯಾಸ್‌ ಲಿಂಕ್‌ ಆಗಿದ್ದರಿಂದ ಏಕಾಏಕಿ ಲೈಟ್‌ ಆನ್‌ ಮಾಡಿದ್ದರಿಂದ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

ಎಲ್‌ಪಿಜಿ ಗ್ಯಾಸ್‌ ಸಿಲಿಂಡರ್ ಸಿಡಿದ ತೀವ್ರತೆಗೆ ಮನೆಯು ಡ್ಯಾಮೇಜ್ ಆಗಿದೆ. ಸಿಲಿಂಡರ್ ಸ್ಫೋಟಗೊಂಡ ತೀವ್ರತೆಗೆ ಮನೆಯ ವಸ್ತುಗಳೆಲ್ಲ ಚಲ್ಲಾಪಿಲ್ಲಿಯಾಗಿದೆ. ಸ್ಫೋಟದ ತೀವ್ರತೆಗೆ ಜನತೆ ಬೆಚ್ಚಿಬಿದ್ದಿದ್ದಾರೆ. ಮನೆಯ ಇಂಟೀರಿಯರ್ ವಸ್ತುಗಳು ಸಂಪೂರ್ಣ ಸುಟ್ಟು ಕರಕಲಾಗಿದೆ. ಟ್ರಜರಿ,ವಸ್ತ್ರ ದವಸ ಧಾನ್ಯಗಳು ಮನೆಯ ತುಂಬ ಚಲ್ಲಾಪಿಲ್ಲಿಯಾಗಿ ಬಿದ್ದಿವೆ. ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Accident Case : ಟ್ರ್ಯಾಕ್ಟರ್ ರೋಟವೇಟರ್‌ಗೆ ಸಿಲುಕಿ ಬಾಲಕನ ದೇಹ ಛಿದ್ರ ಛಿದ್ರ

ಬಾಲಕನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್‌, ಮೊಬೈಲ್‌ ಗೀಳಿಗಾಗಿ ಅಣ್ಣನೇ ಕೊಂದ

ಆನೇಕಲ್: ಬೆಂಗಳೂರು ಹೊರವಲಯ (Bangalore rural) ಆನೇಕಲ್ ತಾಲ್ಲೂಕಿನ ಸರ್ಜಾಪುರದಲ್ಲಿ (Sarjapura murder) ನಿನ್ನೆ ನಡೆದ ಹದಿನೈದು ವರ್ಷದ ಬಾಲಕನ ಕೊಲೆ ಪ್ರಕರಣದಲ್ಲಿ (boy murder case) ಆರೋಪಿಯನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ತಮ್ಮನನ್ನೇ ಕೊಲೆಗೈದ ಪಾಪಿ ಅಣ್ಣ (brother) ಅಂದರ್ ಆಗಿದ್ದಾನೆ.

ಪ್ರಾಣೇಶ್ (15) ಕೊಲೆಯಾಗಿದ್ದ ಬಾಲಕ. ಶಿವಕುಮಾರ್ (18) ಕೊಲೆ ಮಾಡಿದ ಪಾಪಿ ಸಹೋದರ. ಆನ್ಲೈನ್ ಗೇಮ್ ಆಡಲು ಮೊಬೈಲ್ ನೀಡಲಿಲ್ಲ ಅಂತ ಪಾತಕಿ, ತಮ್ಮನನ್ನು ಸಾಯಿಸಿದ್ದಾನೆ. ಕೊಲೆ ಆರೋಪಿಯನ್ನು ಸರ್ಜಾಪುರ ಪೊಲೀಸರು ಬಂಧಿಸಿದ್ದಾರೆ.

ಇವರಿಬ್ಬರೂ ಮೂಲತಃ ಆಂಧ್ರ ಮೂಲದ ಸೂಳೆಕೆರಿ ಗ್ರಾಮದ ಚನ್ನಮ್ಮ ಮತ್ತು ಬಸವರಾಜ್ ದಂಪತಿಯ ಮಕ್ಕಳು. ಈ ಕುಟುಂಬ ಕೆಲಸ ಅರಸಿಕೊಂಡು ಕಳೆದ ಮೂರು ತಿಂಗಳ ಹಿಂದೆ ನೆರಿಗಾ ಗ್ರಾಮಕ್ಕೆ ಬಂದಿತ್ತು. ಪತಿ-ಪತ್ನಿ ಹಾಗೂ ಹಿರಿಯ ಮಗ ಶಿವಕುಮಾರ್ ಗಾರೆ ಕೆಲಸ ಮಾಡಿಕೊಂಡಿದ್ದರು. ಸರ್ಕಾರಿ ಶಾಲೆಯಲ್ಲಿ ಏಳನೇ ತರಗತಿ ಓದುತ್ತಿದ್ದ ದ್ವಿತೀಯ ಪುತ್ರ ಪ್ರಾಣೇಶ್ ಸೂಳಕೆರೆ ಗ್ರಾಮದಲ್ಲಿ ಅಜ್ಜಿಯ ಜೊತೆಗೆ ವಾಸವಿದ್ದ.

ಬೇಸಿಗೆ ರಜೆಗೆ ನೆರಿಗಾ ಗ್ರಾಮದಲ್ಲಿನ ತಂದೆ ತಾಯಿ ಬಳಿಗೆ ಪ್ರಾಣೇಶ್‌ ಬಂದಿದ್ದ. ಮನೆಯಲ್ಲಿದ್ದ ಮೊಬೈಲಿನಲ್ಲಿ ಶಿವಕುಮಾರ್ ಯಾವಾಗ್ಲೂ ಆನ್ಲೈನ್ ಗೇಮ್ ಆಡುತ್ತಿದ್ದ. ಪ್ರಾಣೇಶ್ ಮನೆಗೆ ಬಂದವನೇ ಮೊಬೈಲ್‌ನಲ್ಲಿ ತಾನು ಗೇಮ್ ಆಡಲು ಶುರು ಮಾಡಿದ್ದ. ಪ್ರಾಣೇಶ್ ಬಳಿ ಮೊಬೈಲ್ ನೀಡುವಂತೆ ಶಿವಕುಮಾರ್ ಕೇಳುತ್ತಿದ್ದ. ಆದರೆ ಪ್ರಾಣೇಶ್‌ ಮೊಬೈಲ್ ನೀಡುತ್ತಿರಲಿಲ್ಲ.

ನನಗೆ ಆನ್ಲೈನ್ ಗೇಮ್ ಆಡಲು ಮೊಬೈಲ್ ಸಿಗುತ್ತಿಲ್ಲ ಎಂದು ಶಿವಕುಮಾರ ಕುಪಿತಗೊಂಡಿದ್ದ. ಇಬ್ಬರೂ ಮೊಬೈಲ್‌ಗಾಗಿ ಆಗಾಗಾ ಗಲಾಟೆ ಮಾಡಿಕೊಳ್ಳುತ್ತಿದ್ದರು. ಕಳೆದ ಹದಿನೈದನೇ ತಾರೀಕು ಗಾರೆ ಕೆಲಸಕ್ಕೆ ಹೋದ ಶಿವಕುಮಾರ ತಮ್ಮನನ್ನು ಕೊಲೆ ಮಾಡಲು ಸ್ಕೆಚ್ ಹಾಕಿದ್ದ. ಕೆಲಸ ಮಾಡುತ್ತಿದ್ದ ಜಾಗದಿಂದ ಸಣ್ಣ ಸುತ್ತಿಗೆಯನ್ನು ಜೇಬಿನಲ್ಲಿ ಇಟ್ಟುಕೊಂಡು ಬಂದಿದ್ದ.

ಬಯಲು ಶೌಚಕ್ಕೆ ಹೋಗಿದ್ದ ಪ್ರಾಣೇಶನನ್ನು ಹಿಂಬಾಲಿಸಿಕೊಂಡು ಹೋಗಿದ್ದ ಶಿವಕುಮಾರ್, ಅಲ್ಲಿ ಸುತ್ತಿಗೆಯಿಂದ ತಲೆ ಹಾಗೂ ಎದೆ ಭಾಗಕ್ಕೆ ಹಲ್ಲೆ ನಡೆಸಿದ್ದ. ಗಂಭೀರವಾಗಿ ಗಾಯಗೊಂಡಿದ್ದ ಪ್ರಾಣೇಶ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದ. ತಂದೆ ತಾಯಿ ಸಂಜೆ ಮನೆಗೆ ಬಂದು ಎಲ್ಲೆಡೆ ಹುಡುಕಾಡಿದ್ದರು. ಈ ವೇಳೆ ತಮ್ಮನ ಶವ ಬಿದ್ದಿದೆ ಎಂದು ಓಡೋಡಿ ಬಂದು ಪೋಷಕರಿಗೆ ತಿಳಿಸಿದ್ದ ಶಿವಕುಮಾರ.

ಸರ್ಜಾಪುರ ಪೋಲೀಸರು ಪ್ರಕರಣ ದಾಖಲು ಮಾಡಿಕೊಂಡು ತನಿಖೆಗೆ ಇಳಿದಿದ್ದರು. ತಮ್ಮನ ಶವವನ್ನು ನಾನೇ ಮೊದಲು ನೋಡಿದೆ ಎಂದು ಹೇಳುತ್ತಿದ್ದ ಶಿವಕುಮಾರನ ಮೇಲೆ ಪೋಲೀಸರಿಗೆ ಅನುಮಾನ ಮೂಡಿತ್ತು. ವಿಚಾರಣೆ ನಡೆಸಿದಾಗ ಆರೋಪಿ ಬಾಯಿ ಬಿಟ್ಟಿದ್ದಾನೆ. ಆರೋಪಿ ಶಿವಕುಮಾರ್‌ನನ್ನು ಬಂಧಿಸಿದ ಸರ್ಜಾಪುರ ಪೋಲೀಸರು ಜೈಲಿಗೆ ಕಳುಹಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Crimes in Karnataka: 4 ತಿಂಗಳಲ್ಲಿ ಮಿತಿಮೀರಿದ ಕ್ರೈಂ; ಸ್ತ್ರೀಯರೇ ಹೆಚ್ಚಿನ ಟಾರ್ಗೆಟ್!‌ ʼಗೃಹ ಇಲಾಖೆ ಇದೆಯಾ?ʼ ಎಂದು ಪ್ರಶ್ನಿಸಿದ ಎಚ್‌ಡಿಕೆ

Crimes in Karnataka: ಸ್ತ್ರೀಯರ ಮೇಲೆ ನಡೆಯುವ ಅಪರಾಧಗಳ ಸಂಖ್ಯೆ ಹೆಚ್ಚಿದೆ. ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ, ಅಂಜಲಿ ಕೊಲೆ ಪ್ರಕರಣ, ಕೊಡಗಿನ ಮೀನಾ ಕೊಲೆ ಪ್ರಕರಣಗಳು ಇದಕ್ಕೆ ನಿದರ್ಶನಗಳಾಗಿವೆ. ಇದನ್ನು ನೋಡುತ್ತಿದ್ದರೆ ರಾಜ್ಯದಲ್ಲಿ ಜನರಿಗೆ ರಕ್ಷಣೆಯೇ ಇಲ್ಲವೇ ಎಂಬ ಪ್ರಶ್ನೆ ಮೂಡುವಂತಿದೆ.

VISTARANEWS.COM


on

crimes in karnataka
Koo

ಬೆಂಗಳೂರು: ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (National crime records bureau- NCRB) ಇತ್ತೀಚೆಗಿನ ಅಪರಾಧಗಳ ಅಂಕಿ ಅಂಶವನ್ನು ಪ್ರಕಟಿಸಿದ್ದು, ಕಳೆದ ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ ಅಪರಾಧ ಪ್ರಕರಣಗಳ (crimes) ಸಂಖ್ಯೆ ಮಿತಿ ಮೀರಿ ಹೆಚ್ಚಿರುವುದು ಕಂಡುಬಂದಿದೆ. ಈ ಕುರಿತ ವರದಿಯನ್ನು ʼಎಕ್ಸ್‌ʼನಲ್ಲಿ ಪೋಸ್ಟ್‌ ಮಾಡಿರುವ ಜೆಡಿಎಸ್‌ (JDS), ʼರಾಜ್ಯದಲ್ಲಿ ಗೃಹ ಇಲಾಖೆ ಇದೆಯೇʼ (Home ministry) ಎಂದು ಪ್ರಶ್ನಿಸಿದೆ.

ರಾಜ್ಯದಲ್ಲಿ ಕಳೆದ ಜನವರಿಯಿಂದ ಏಪ್ರಿಲ್‌ವರೆಗೆ ಏರಿಕೆ ಪ್ರಮಾಣದಲ್ಲಿ ಕೊಲೆ (murder), ಅತ್ಯಾಚಾರ (physical abuse), ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು (Pocso) ನಡೆದಿವೆ. ಕಳೆದ ಮೂರು ವರ್ಷಗಳಲ್ಲಿ ಕೊಲೆ, ಅತ್ಯಾಚಾರ, ಪೋಕ್ಸೋ ಕೇಸ್ ಹೆಚ್ಚಾಗಿವೆ. ಅಲ್ಲದೇ ಎನ್‌ಡಿಪಿಎಸ್ ಅಂದರೆ ಡ್ರಗ್ಸ್ ಕೇಸುಗಳು ಅಧಿಕವಾಗಿವೆ. ಲೈಂಗಿಕ ದೌರ್ಜನ್ಯ ಹಾಗೂ ಸೈಬರ್ ವಂಚನೆ (cyber crime) ಗಗನಕ್ಕೆ ಏರಿವೆ. ಹಲ್ಲೆ, ಮಾರಣಾಂತಿಕ ಹಲ್ಲೆ ಕೇಸ್‌ಗಳು ಅಧಿಕವಾಗುತ್ತಾ ಸಾಗುತ್ತಿವೆ.

ಸ್ತ್ರೀಯರ ಮೇಲೆ ನಡೆಯುವ ಅಪರಾಧಗಳ ಸಂಖ್ಯೆ ಹೆಚ್ಚಿದೆ. ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ, ಅಂಜಲಿ ಕೊಲೆ ಪ್ರಕರಣ, ಕೊಡಗಿನ ಮೀನಾ ಕೊಲೆ ಪ್ರಕರಣಗಳು ಇದಕ್ಕೆ ನಿದರ್ಶನಗಳಾಗಿವೆ. ಇದನ್ನು ನೋಡುತ್ತಿದ್ದರೆ ರಾಜ್ಯದಲ್ಲಿ ಜನರಿಗೆ ರಕ್ಷಣೆಯೇ ಇಲ್ಲವೇ ಎಂಬ ಪ್ರಶ್ನೆ ಮೂಡುವಂತಿದೆ.

ರಾಜ್ಯದಲ್ಲಿ ಕಳೆದ ನಾಲ್ಕು ತಿಂಗಳ ಅಪರಾಧ ಪ್ರಮಾಣ ಹೀಗಿದೆ:

ಕೊಲೆಗಳು
430
ಪೋಕ್ಸೋ ಕೇಸ್‌
1262
ಅತ್ಯಾಚಾರ 198
ಹಲ್ಲೆ 6063
ಡ್ರಗ್ಸ್ 1144
ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ
2327
ಸೈಬರ್ ಅಪರಾಧ
7421
ವಂಚನೆ
2243
ರಾಬರಿ
450
ಡಕಾಯಿತಿ 68


ರಾಷ್ಟ್ರೀಯ ಕ್ರೈಂ ರೆಕಾರ್ಡ್ ಬ್ಯೂರೋ ಅಂಕಿ ಅಂಶಗಳಲ್ಲಿ ರಾಜ್ಯದ ಅಪರಾಧ ಕೃತ್ಯಗಳ ಬಗ್ಗೆ ವಿವರ ತೆರೆದಿಟ್ಟಿದೆ. ಕಳೆದ ಮೂರು ವರ್ಷಗಳಲ್ಲಿ ಅಪರಾಧ ಪ್ರಕರಣಗಳು ಏರಿಕೆ ಕಂಡಿವೆ. ಕ್ರೈಂ ರೆಕಾರ್ಡ್ಸ್ ಬ್ಯೂರೋ ಅಂಕಿ ಅಂಶ ಹೀಗಿವೆ:

ಅಪರಾಧ
2022 2023 2024 ಏಪ್ರಿಲ್‌ವರೆಗೆ
ಕೊಲೆ
1370 1295 430
ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣ (ಪೋಕ್ಸೋ)
3192 38561262
ಅತ್ಯಾಚಾರ ಪ್ರಕರಣಗಳು
537609 198
ಹಲ್ಲೆ ಕೇಸ್
15372 174396063
ಡ್ರಗ್ಸ್
64606764 1144
ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಕೇಸ್
58626486 2327
ಸೈಬರ್ ಅಪರಾಧ ಪ್ರಕರಣಗಳು
12557
21895 7421
ವಿವಿಧ ರೀತಿಯ ವಂಚನೆಗಳು
6411 6921 2243
ರಾಬರಿಗಳು
1069 1248 450
ಡಕಾಯಿತಿಗಳು217 180 68

ಗೃಹ ಇಲಾಖೆ ಇದೆಯಾ?

“ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಬಿದ್ದಿದೆ. ಹಾದಿಬೀದಿಯಲ್ಲಿ ಕೊಲೆಗಳಾಗುತ್ತಿವೆ. ರಾಜ್ಯವು ಅತ್ಯಾಚಾರಿಗಳ ಆಡಂಬೋಲವಾಗಿದೆ. ಬೆಂಗಳೂರು ಮಹಾನಗರದಲ್ಲಿ ಮಾದಕ ವಸ್ತುಗಳ ದಂಧೆ ಅವ್ಯಾಹತವಾಗಿದೆ. ಕೇವಲ 4 ತಿಂಗಳಲ್ಲಿ ಇಷ್ಟೆಲ್ಲಾ ನಡೆದಿದೆ! ರಾಜ್ಯ ಗೃಹ ಇಲಾಖೆ ಎನ್ನುವುದು ಕೆಲಸ ಮಾಡುತ್ತಿದೆಯಾ? ಅಥವಾ ನಿದ್ದೆ ಮಾಡುತ್ತಿದೆಯಾ? ದಯಮಾಡಿ ಹೇಳುವಿರಾ @DrParameshwara ಅವರೇ?” ಎಂದು ಜೆಡಿಎಸ್‌ ಅಧಿಕೃತ ಖಾತೆಯಿಂದ ಸೋಶಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಲಾಗಿದೆ.

ಇದನ್ನೂ ಓದಿ: Prajwal Revanna Case: ಪೆನ್‌ಡ್ರೈವ್‌ ಕೇಸ್‌ನಲ್ಲಿ ಶಾಮೀಲಾಗಲು ಡಿಕೆಶಿಯಿಂದ 100 ಕೋಟಿ ರೂಪಾಯಿ ಆಫರ್; ದೇವರಾಜೇಗೌಡ ಆರೋಪ

Continue Reading
Advertisement
Road Accident
ಬೆಂಗಳೂರು ಗ್ರಾಮಾಂತರ4 mins ago

Road Accident : ಡಿವೈಡರ್‌ಗೆ ಡಿಕ್ಕಿ ಹೊಡೆದು ಪಕ್ಕದ ಹೆದ್ದಾರಿಗೆ ಹಾರಿದ ಕೆಎಸ್‌ಆರ್‌ಟಿಸಿ ಬಸ್; ಬೈಕ್‌ನಿಂದ ಎಗರಿ ಬಿದ್ದ ಬಾಲಕ ಸಾವು

Hyderabadi Biryani
ಪ್ರಮುಖ ಸುದ್ದಿ18 mins ago

Hyderabadi Biryani : ಎಸ್​ಆರ್​ಎಚ್​ ಅಭಿಮಾನಿಗಳೊಂದಿಗೆ ಹೈದ್ರಾಬಾದಿ ಬಿರಿಯಾನಿ ಸವಿದ ಹೇಡನ್ ಪುತ್ರಿ ಗ್ರೇಸ್​, ಇಲ್ಲಿದೆ ವಿಡಿಯೊ

Job Alert
ಉದ್ಯೋಗ22 mins ago

Job alert: ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ಆನ್‌ಲೈನ್‌ ಮೂಲಕ ಇಂದೇ ಅಪ್ಲೈ ಮಾಡಿ

Sangeetha Sringeri Wore Lioness Logo On Her Belt
ಬಿಗ್ ಬಾಸ್24 mins ago

Sangeetha Sringeri: ಸಂಗೀತಾ ಶೃಂಗೇರಿ ಸೊಂಟದಲ್ಲಿ ʻಸಿಂಹಿಣಿʼ; ಸ್ಯಾಂಡಲ್​ವುಡ್​ ನಟಿಯ ರಗಡ್‌ ಪೋಸ್‌ !

swati maliwal bibhav kumar
ಪ್ರಮುಖ ಸುದ್ದಿ38 mins ago

Swati Maliwal: ಆಪ್‌ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ನಡೆಸಿದ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ ಬಂಧನ

PM Modi wishes HD Deve Gowda on his 93rd birthday Jackfruit gift to former PM
ರಾಜಕೀಯ38 mins ago

HD Deve Gowda: ದೇವೇಗೌಡರಿಗೆ ಜನ್ಮದಿನ ಶುಭ ಕೋರಿದ ಮೋದಿ; ಮಾಜಿ ಪ್ರಧಾನಿಗೆ ಹಲಸಿನ ಹಣ್ಣು ಗಿಫ್ಟ್‌

Virat kohli
ಕ್ರೀಡೆ47 mins ago

Virat kohli : ತಮ್ಮ ಜೀವನದ ಎರಡು ಆಘಾತಕಾರಿ ಸಂದರ್ಭಗಳನ್ನು ವಿವರಿಸಿದ ವಿರಾಟ್ ಕೊಹ್ಲಿ

Robbery case
ವಿಜಯಪುರ55 mins ago

Robbery Case : ಕ್ಯಾಂಟರ್‌ ಅಡ್ಡಗಟ್ಟಿದ ದರೋಡೆಕೋರರು; ಖಾರದ ಪುಡಿ ಎರಚಿ 32 ಲಕ್ಷ ರೂ. ದೋಚಿ ಪರಾರಿ

Nitin Gadkari
Lok Sabha Election 20241 hour ago

Nitin Gadkari: ಯಾವ ಸರ್ಕಾರದಿಂದಲೂ ಸಂವಿಧಾನ ಬದಲಾಯಿಸಲು ಸಾಧ್ಯವಿಲ್ಲ: ನಿತಿನ್‌ ಗಡ್ಕರಿ

Mother Teresa Series life in the works
ಸಿನಿಮಾ1 hour ago

Mother Teresa Series: 30 ಕೋಟಿ ವೆಚ್ಚದಲ್ಲಿ ತಯಾರಾಗ್ತಿದೆ ‘ಮದರ್ ಥೆರೆಸಾʼ ಸಿರೀಸ್‌!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ17 hours ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ1 day ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ2 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು2 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ3 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ3 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ4 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20244 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌