Lok Sabha Election: ಬಿಜೆಪಿಗೆ 350 ಸೀಟು ಖಚಿತ ಎಂದ ಖ್ಯಾತ ಅರ್ಥಶಾಸ್ತ್ರಜ್ಞ; ಅವರ ಪ್ರಿಡಿಕ್ಷನ್‌ ಹೀಗಿದೆ - Vistara News

ದೇಶ

Lok Sabha Election: ಬಿಜೆಪಿಗೆ 350 ಸೀಟು ಖಚಿತ ಎಂದ ಖ್ಯಾತ ಅರ್ಥಶಾಸ್ತ್ರಜ್ಞ; ಅವರ ಪ್ರಿಡಿಕ್ಷನ್‌ ಹೀಗಿದೆ

Lok Sabha Election: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯೊಂದೇ ಈ ಬಾರಿ 2014, 2019ಕ್ಕಿಂತ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂಬುದಾಗಿ ಅರ್ಥಶಾಸ್ತ್ರಜ್ಞ ಸುರ್ಜಿತ್‌ ಭಲ್ಲಾ ಅವರು ಸಂದರ್ಶನದ ವೇಳೆ ತಿಳಿಸಿದ್ದಾರೆ. ಈಗಾಗಲೇ, ಹಲವು ಸಮೀಕ್ಷೆಗಳು ಕೂಡ ಮೋದಿ ಅವರು ಹ್ಯಾಟ್ರಿಕ್‌ ಸಾಧಿಸುವುದು ನಿಶ್ಚಿತ ಎಂದಿವೆ. ಈಗ ಆರ್ಥಿಕ ತಜ್ಞರೂ ಮೋದಿ ಮತ್ತೆ ಪ್ರಧಾನಿಯಾಗುವುದು ಖಚಿತ ಎಂದು ಹೇಳುತ್ತಿದ್ದಾರೆ.

VISTARANEWS.COM


on

Phalody Satta Bazar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ದೇಶಾದ್ಯಂತ ಲೋಕಸಭೆ ಚುನಾವಣೆ (Lok Sabha Election 2024) ಭರಾಟೆ ಜೋರಾಗಿದೆ. ನರೇಂದ್ರ ಮೋದಿ (Narendra Modi) ಹ್ಯಾಟ್ರಿಕ್‌ ಸಾಧಿಸುವ ವಿಶ್ವಾಸದಲ್ಲಿದ್ದರೆ, ಕೇಂದ್ರದಲ್ಲಿ ಬಿಜೆಪಿಯನ್ನು (BJP) ಕಾಂಗ್ರೆಸ್‌ ಸೇರಿ ಇಂಡಿಯಾ ಒಕ್ಕೂಟದ ಎಲ್ಲ‌ ಪಕ್ಷಗಳು ಸಜ್ಜಾಗಿವೆ. ಇದರ ಬೆನ್ನಲ್ಲೇ, ಚುನಾವಣೆ ಪೂರ್ವ ಸಮೀಕ್ಷೆಗಳು ಪ್ರಕಟವಾಗುತ್ತಿದ್ದು, ದೇಶದಲ್ಲಿ ಮೋದಿ ಅಲೆ ಇದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ದೇಶದ ಖ್ಯಾತ ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕರೂ ಆದ ಸುರ್ಜಿತ್‌ ಭಲ್ಲಾ (Surjit Bhalla) ಅವರು ಕೂಡ ಈ ಬಾರಿಯೂ ಬಿಜೆಪಿಯೇ ಅಧಿಕಾರಕ್ಕೆ ಬರಲಿದೆ ಎಂದಿದ್ದಾರೆ. ಅದರಲ್ಲೂ, ಬಿಜೆಪಿಯೊಂದೇ 330-350 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಹೇಳಿದ್ದಾರೆ.

ಸುರ್ಜಿತ್‌ ಭಲ್ಲಾ ಅವರು ಹೌ ವಿ ವೋಟ್‌ (How We Vote) ಎಂಬ ಪುಸ್ತಕ ರಚಿಸಿದ್ದು, ಎನ್‌ಡಿಟಿವಿಗೆ ನೀಡಿದ ಸಂದರ್ಶನದ ವೇಳೆ ಪುಸ್ತಕ, ಲೋಕಸಭೆ ಚುನಾವಣೆ ಫಲಿತಾಂಶ ಸೇರಿ ಹಲವು ವಿಷಯಗಳನ್ನು ಪ್ರಸ್ತಾಪಿಸಿದ್ದಾರೆ. “ನರೇಂದ್ರ ಮೋದಿ ನೇತೃತ್ವದ ಬಿಜೆಪಿಯು ಈ ಬಾರಿ ಹೆಚ್ಚಿನ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ಎನ್‌ಡಿಎ ಮೈತ್ರಿಕೂಟ ಅಲ್ಲ, ಬಿಜೆಪಿಯೊಂದೇ 330-350 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ಕ್ಷೇತ್ರವಾರು ಲೆಕ್ಕದಲ್ಲಿಯೇ ಬಿಜೆಪಿಯ ಕ್ಷೇತ್ರಗಳ ಸಂಖ್ಯೆ ಈ ಬಾರಿ ಶೇ.5-7ರಷ್ಟು ಹೆಚ್ಚಾಗಲಿವೆ” ಎಂದು ಹೇಳಿದ್ದಾರೆ.

ಕಾಂಗ್ರೆಸ್‌ಗೆ ಬರೀ 44 ಕ್ಷೇತ್ರ

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಕೇವಲ 44 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂಬುದಾಗಿ ಸುರ್ಜಿತ್‌ ಭಲ್ಲಾ ಹೇಳಿದ್ದಾರೆ. ಪ್ರತಿಪಕ್ಷಗಳ ಒಕ್ಕೂಟದಲ್ಲಿ ನಾಯಕತ್ವದ ಸಮಸ್ಯೆ ಇದೆ. ಆರ್ಥಿಕ ಸ್ಥಿತಿ ಮೊದಲನೆಯದ್ದಾದರೆ, ಎರಡನೆಯದ್ದಾಗಿ ನಾಯಕತ್ವವು ಪ್ರಮುಖ ಪಾತ್ರ ನಿರ್ವಹಿಸುತ್ತದೆ. ಆದರೆ, ಎರಡೂ ಸಂಗತಿಗಳು ಬಿಜೆಪಿ ಪರವಾಗಿವೆ. ಪ್ರತಿಪಕ್ಷಗಳ ಒಕ್ಕೂಟವು ಒಬ್ಬ ಮಾಸ್‌ ಲೀಡರ್‌ನನ್ನು ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸಿದ್ದರೆ, ನಿಜವಾಗಿಯೂ ಬಿಜೆಪಿಗೆ ಸ್ಪರ್ಧೆಯೊಡ್ಡಬಹುದಾಗಿತ್ತು” ಎಂದು ಹೇಳಿದ್ದಾರೆ.

ತಮಿಳುನಾಡಿನಲ್ಲಿ ಬಿಜೆಪಿಗೆ ಬಲ

ದಕ್ಷಿಣ ಭಾರತದಲ್ಲಿ ಕರ್ನಾಟಕ ಹೊರತುಪಡಿಸಿ ಬಿಜೆಪಿಯು ಬೇರೆ ರಾಜ್ಯಗಳಲ್ಲಿ ಬಲಿಷ್ಠವಾಗಿಲ್ಲ. ಆದರೆ, ಈ ಬಾರಿ ಬಿಜೆಪಿಯು ತಮಿಳುನಾಡಿನಲ್ಲಿ 5 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂಬುದಾಗಿ ಅರ್ಥಶಾಸ್ತ್ರಜ್ಞ ತಿಳಿಸಿದ್ದಾರೆ. “ತಮಿಳುನಾಡಿನಲ್ಲಿ ಬಿಜೆಪಿ ನೆಲೆಯೂರಲಿದೆ. ಸುಮಾರು 5 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂಬುದು ನನ್ನ ಲೆಕ್ಕಾಚಾರವಾಗಿದೆ. ಇನ್ನು ಕೇರಳದಲ್ಲೂ ಬಿಜೆಪಿಯ ಒಬ್ಬ ಅಥವಾ ಇಬ್ಬರು ಅಭ್ಯರ್ಥಿಗಳು ಗೆಲುವು ಸಾಧಿಸಬಹುದು. ದೇಶವು ಏಳಿಗೆಯತ್ತ ಸಾಗುತ್ತಿದೆ. ತಲಾದಾಯ ಜಾಸ್ತಿಯಾಗಿದೆ. ಜನ ಬಡತನ ರೇಖೆಯಿಂದ ಹೊರಬರುತ್ತಿದ್ದಾರೆ. ಇಂತಹ ಹತ್ತಾರು ವಿಷಯಗಳು ಬಿಜೆಪಿ ಗೆಲುವಿಗೆ ಕಾರಣವಾಗಲಿವೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Trust Of The Nation 2024 : ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿಯಾಗುವುದು ಖಚಿತ; ಡೈಲಿಹಂಟ್ ಸಮೀಕ್ಷೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Physical Assault : ಅಶ್ಲೀಲ ವಿಡಿಯೊಗಳನ್ನು ನೋಡಿ 9 ವರ್ಷದ ತಂಗಿಯನ್ನು ಅತ್ಯಾಚಾರ ಮಾಡಿ ಕೊಂದ 13 ವರ್ಷದ ಬಾಲಕ!

Physical Assault: ವರದಿಯ ಪ್ರಕಾರ, ಮೂರು ತಿಂಗಳ ಹಿಂದೆ ರೇವಾದ ಜಾವಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಆರೋಪಿ ರಾತ್ರಿ ತನ್ನ ಮೊಬೈಲ್ ಫೋನ್ ನಲ್ಲಿ ಪೋರ್ನ್ ವಿಡಿಯೊ ನೋಡಿದ್ದಾನೆ. ಬಳಿಕ ತನ್ನ ಪಕ್ಕದಲ್ಲಿ ಮಲಗಿದ್ದ ಸಹೋದರಿಯನ್ನು ಲೈಂಗಿಕವಾಗಿ ಶೋಷಿಸಿದ್ದಾನೆ. ಆಕೆ ತಂದೆಗೆ ಹೇಳುವುದಾಗಿ ಹೇಳಿದಾಗ ಕೊಲೆ ಮಾಡಿದ್ದ.

VISTARANEWS.COM


on

Physical Assault
Koo

ಭೋಪಾಲ್: 13 ವರ್ಷದ ಬಾಲಕನೊಬ್ಬ ತನ್ನ 9 ವರ್ಷದ ತಂಗಿಯ ಮೇಲೆ ಅತ್ಯಾಚಾರ ಎಸಗಿ (Physical Assault) ಕೊಲೆ ಮಾಡಿರುವ ಘಟನೆ ಮಧ್ಯಪ್ರದೇಶದ ರೇವಾದಲ್ಲಿ ನಡೆದಿದೆ. ತನಿಖಾಧಿಕಾರಿಗಳು 3 ತಿಂಗಳಲ್ಲಿ ನಡೆಸಿದ 50 ಕ್ಕೂ ಹೆಚ್ಚು ಡಿಎನ್ಎ ಪರೀಕ್ಷೆಗಳ ಬಳಿಕ , ಬಾಲಕಿ ಖಾಸಗಿ ಭಾಗಗಳಲ್ಲಿ ಕಂಡುಬಂದ ವೀರ್ಯ ಆಕೆಯ ಹಿರಿಯ ಸಹೋದರನ ವೀರ್ಯದೊಂದಿಗೆ ಹೊಂದಿಕೆಯಾದ ಬಳಿಕ ಆತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅಚ್ಚರಿಯ ಸಂಗತಿಯೆಂದರೆ, ಎಲ್ಲವನ್ನೂ ತಿಳಿದಿದ್ದ ತಾಯಿ ಮತ್ತು ಇಬ್ಬರು ಹಿರಿಯ ಸಹೋದರಿಯರು ಆರೋಪಿಗಳನ್ನು ರಕ್ಷಿಸಲು ಪ್ರಯತ್ನಿಸಿದ್ದಾರೆ. ಹೀಗಾಗಿ ಆರೋಪಿಗಳು, ಆತನ ತಾಯಿ ಮತ್ತು ಇಬ್ಬರು ಅಕ್ಕಂದಿರನ್ನು ಬಂಧಿಸಲಾಗಿದೆ.

ವರದಿಯ ಪ್ರಕಾರ, ಮೂರು ತಿಂಗಳ ಹಿಂದೆ ರೇವಾದ ಜಾವಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಆರೋಪಿ ರಾತ್ರಿ ತನ್ನ ಮೊಬೈಲ್ ಫೋನ್ ನಲ್ಲಿ ಪೋರ್ನ್ ವಿಡಿಯೊ ನೋಡಿದ್ದಾನೆ. ಬಳಿಕ ತನ್ನ ಪಕ್ಕದಲ್ಲಿ ಮಲಗಿದ್ದ ಸಹೋದರಿಯನ್ನು ಲೈಂಗಿಕವಾಗಿ ಶೋಷಿಸಿದ್ದಾನೆ. ಆಕೆ ತಂದೆಗೆ ಹೇಳುವುದಾಗಿ ಹೇಳಿದಾಗ ಕೊಲೆ ಮಾಡಿದ್ದ.

3 ತಿಂಗಳಲ್ಲಿ 55 ಜನರ ಡಿಎನ್ಎ ಪರೀಕ್ಷೆ

ಪೊಲೀಸರು 55 ಜನರ ಡಿಎನ್ಎ ಪರೀಕ್ಷೆಗಳನ್ನು ನಡೆಸಿದ್ದರು. ಆದರೆ ಬಾಲಕಿಯ ದೇಹದಲ್ಲಿ ಕಂಡುಬಂದ ಮಾದರಿಯು ಯಾವುದಕ್ಕೂ ಹೋಲಿಕೆಯಾಗಿರಲಿಲ್ಲ. ಕಿರಿಯ ಮಗಳನ್ನು ಕಳೆದುಕೊಂಡು ಈಗಾಗಲೇ ಮೂರು ತಿಂಗಳುಗಳು ಕಳೆದರೂ ಪೊಲೀಸರು ನಿರ್ಲಕ್ಷ್ಯ ತೋರಿದ್ದಾರೆ ಎಂದು ಕುಟುಂಬ ಆರೋಪಿಸಿದ್ದರು. ಅಂತಿಮವಾಗಿ ಪೊಲೀಸರು ಸಹೋದರನನ್ನು ಪರೀಕ್ಷೆಗೆ ಕರೆದೊಯ್ದ ಆತನ ವೀರ್ಯವು ಮಾದರಿ ಪರಿಶೀಲನೆ ನಡೆಸಿದಾಗ ಹೊಂದಿಕೆಯಾಗಿತ್ತು.

ಇದನ್ನೂ ಓದಿ: Karnataka Rain : ಮಳೆಗೆ ಮನೆ ಮುಳುಗಡೆಯಾದ ಸುದ್ದಿ ಕೇಳಿ ಮನೆ ಯಜಮಾನ ಹೃದಯಾಘಾತದಿಂದ ಸಾವು

ಪೊಲೀಸರು ಪ್ರಶ್ನಿಸಿದ ಬಳಿಕ ಆತ ತನ್ನ ಅಪರಾಧ ಒಪ್ಪಿಕೊಂಡಿದ್ದಾನೆ. ಮೊಬೈಲ್​​ನಲ್ಲಿ ಅಶ್ಲೀಲ ಚಿತ್ರವನ್ನು ನೋಡಿದ್ದೆ. ತನ್ನ ಕಾಮಕ್ಕೆ ಮಣಿದು ಆಕೆ ಮೇಲೆ ಅತ್ಯಾಚಾರ ಎಸಗಿದೆ ಎಂದು ಹೇಳಿಕೊಂಡಿದ್ದಾನೆ. ಎಲ್ಲವನ್ನೂ ತಂದೆಗೆ ಹೇಳುತ್ತೇನೆ ಎಂದು ಹೇಳಿದಾಗ ಕೊಂದಿದ್ದೇನೆ ಎಂದು ಹೇಳಿಕೊಂಡಿದ್ದಾನೆ.

ಆರೋಪಿ ತನ್ನ ತಾಯಿ ಮತ್ತು ಹಿರಿಯ ಸಹೋದರಿಯರಿಗೆ ಎಲ್ಲವನ್ನೂ ಹೇಳಿ. ಅವರು ಸೇರಿಕೊಂಡು ತಂದೆ ಮತ್ತು ಪೊಲೀಸರಿಂದ ರಕ್ಷಿಸಿದ್ದರು.

ಭಾರತೀಯ ದಂಡ ಸಂಹಿತೆಯಡಿ ಅತ್ಯಾಚಾರ, ಕೊಲೆ ಮತ್ತು ಸಾಕ್ಷ್ಯಗಳನ್ನು ಮರೆಮಾಚಿದ್ದಕ್ಕಾಗಿ ಪ್ರಕರಣ ದಾಖಲಾಗಿದ್ದು, ನಾಲ್ವರನ್ನು ಜೈಲಿಗೆ ಕಳುಹಿಸಲಾಗಿದೆ. ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಆರೋಪದ ಮೇಲೆ ಇಬ್ಬರು ಅಪ್ರಾಪ್ತರು ಸೇರಿದಂತೆ ನಾಲ್ವರನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Continue Reading

ದೇಶ

Rahul Gandhi: ನೀಟ್‌ನಲ್ಲಿ ‘ಎಷ್ಟು ವೋಟ್‌’ ಪಡೆದಿರಿ ಎಂದು ವಿದ್ಯಾರ್ಥಿಗಳಿಗೆ ಕೇಳಿದ ರಾಹುಲ್‌ ಗಾಂಧಿ; Video ವೈರಲ್

Rahul Gandhi: ರಾಹುಲ್‌ ಗಾಂಧಿ ಅವರು ಕಾರಿನಲ್ಲಿ ತೆರಳುವಾಗ ಮಾರ್ಗ ಮಧ್ಯೆ ನೀಟ್‌ ಅಭ್ಯರ್ಥಿಗಳ ಜತೆ ಮಾತುಕತೆ ನಡೆಸಿ, ಅವರ ಸಮಸ್ಯೆ, ಪ್ರಶ್ನೆಪತ್ರಿಕೆ ಸೋರಿಕೆ ಬಗ್ಗೆ ಕೇಳಿದ್ದಾರೆ. ಇದೇ ವೇಳೆ, ಪರೀಕ್ಷೆಯಲ್ಲಿ ಎಷ್ಟು ವೋಟ್‌ ಪಡೆದಿದ್ದೀರಿ ಎಂಬುದಾಗಿ ಬಾಯಿತಪ್ಪಿ ಕೇಳಿದ್ದಾರೆ. ಈ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ.

VISTARANEWS.COM


on

Rahul Gandhi
Koo

ನವದೆಹಲಿ: ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗೆ ನಡೆದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET UG 2024) ‌ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ. ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ (NTA) ಛೀಮಾರಿ ಹಾಕಿದೆ. ಪ್ರತಿಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿವೆ. ಇದರ ಬೆನ್ನಲ್ಲೇ, ನೀಟ್‌ ಅಭ್ಯರ್ಥಿಗಳಿಗೆ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ (Rahul Gandhi) ಅವರು ಕೇಳಿದ ಪ್ರಶ್ನೆ ಈಗ ಭಾರಿ ವೈರಲ್‌ ಆಗಿದೆ.

ಹೌದು, ರಾಹುಲ್‌ ಗಾಂಧಿ ಅವರು ಕಾರಿನಲ್ಲಿ ತೆರಳುವಾಗ ಮಾರ್ಗ ಮಧ್ಯೆ ನೀಟ್‌ ಅಭ್ಯರ್ಥಿಗಳ ಜತೆ ಮಾತುಕತೆ ನಡೆಸಿ, ಅವರ ಸಮಸ್ಯೆ, ಪ್ರಶ್ನೆಪತ್ರಿಕೆ ಸೋರಿಕೆ ಬಗ್ಗೆ ಕೇಳಿದ್ದಾರೆ. “ನೀಟ್‌ನಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಆಗಿದೆಯೇ” ಎಂಬುದಾಗಿ ರಾಹುಲ್‌ ಗಾಂಧಿ ಅವರು ವಿದ್ಯಾರ್ಥಿಗಳಿಗೆ ಕೇಳಿದ್ದಾರೆ. ಇದೇ ವೇಳೆ ವಿದ್ಯಾರ್ಥಿಗಳು ಹೌದು ಎಂದಿದ್ದಾರೆ. ಆಗ, ರಾಹುಲ್‌ ಗಾಂಧಿ ಅವರು, “ಪರೀಕ್ಷೆಯಲ್ಲಿ ಎಷ್ಟು ವೋಟು ಗಳಿಸಿದ್ದೀರಿ” ಎಂಬುದಾಗಿ ಪ್ರಶ್ನಿಸಿದ್ದಾರೆ. ಎಷ್ಟು ಅಂಕ ಪಡೆದಿದ್ದೀರಿ ಎಂಬುದಾಗಿ ಹೇಳುವ ಬದಲು ಅವರು ಎಷ್ಟು ವೋಟು ಗಳಿಸಿದ್ದೀರಿ ಎಂದು ಪ್ರಶ್ನಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊ ವೈರಲ್‌ ಆಗುತ್ತಲೇ ಜನ ತಮಾಷೆಯಾಗಿ ಪ್ರತಿಕ್ರಿಯಿಸಿದ್ದಾರೆ. “ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗಳಿಸಿದ 240 ಎಂಬುದಾಗಿ ವಿದ್ಯಾರ್ಥಿ ಹೇಳಬೇಕಿತ್ತು” ಎಂದು ವ್ಯಕ್ತಿಯೊಬ್ಬರು ಪ್ರತಿಕ್ರಿಯಿಸಿದ್ದಾರೆ. “ಚುನಾವಣೆ ಮುಗಿದರೂ ರಾಹುಲ್‌ ಗಾಂಧಿ ಅವರು ಇನ್ನೂ ಅದರಿಂದ ಹೊರಬಂದಿಲ್ಲ” ಎಂಬುದಾಗಿ ಮತ್ತೊಬ್ಬರು ಕಾಲೆಳೆದಿದ್ದಾರೆ. ಹೀಗೆ ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ವಿಡಿಯೊಗೆ ಕಮೆಂಟ್‌ ಮಾಡಿದ್ದಾರೆ.

ಏನಿದು ನೀಟ್‌ ಪ್ರಕರಣ?

ದೇಶಾದ್ಯಂತ 571 ನಗರಗಳಲ್ಲಿ ಹಾಗೂ ಹೊರಗಿನ 14 ನಗರಗಳು ಸೇರಿದಂತೆ 4750 ವಿವಿಧ ಕೇಂದ್ರಗಳಲ್ಲಿ 05 ಮೇ 2024 ರಂದು ನೀಟ್‌ ಯುಜಿ ಪರೀಕ್ಷೆಯನ್ನು ನಡೆಸಲಾಗಿತ್ತು. ಪರೀಕ್ಷೆಯನ್ನು 13 ಭಾಷೆಗಳಲ್ಲಿ (ಅಸ್ಸಾಮಿ, ಬಂಗಾಳಿ, ಇಂಗ್ಲಿಷ್, ಗುಜರಾತಿ, ಹಿಂದಿ, ಕನ್ನಡ, ಮಲಯಾಳಂ, ಮರಾಠಿ, ಒಡಿಯಾ, ಪಂಜಾಬಿ, ತಮಿಳು, ತೆಲುಗು, ಮತ್ತು ಉರ್ದು) ನಡೆಸಲಾಗಿತ್ತು. ನೀಟ್‌ ಪರೀಕ್ಷೆಗೆ 24,06,079 ಅಭ್ಯರ್ಥಿಗಳ ನೋಂದಾಯಿಸಿಕೊಂಡಿದ್ದರು. ಅದರಲ್ಲಿ 23,33,297 ಪರೀಕ್ಷೆ ಹಾಜರಾಗಿದ್ದು, 72782 ಗೈರು ಹಾಜರಾಗಿದ್ದರು. ಇದರಲ್ಲಿ ಬಾಲಕರು 10,29,154 ಹಾಗೂ ಬಾಲಕಿಯರು 13,76,831, ತೃತೀಯ ಲಿಂಗಿಗಳು 18 ಮಂದಿ ಪರೀಕ್ಷೆಯನ್ನು ಬರೆದಿದ್ದರು.

ನೀಟ್‌ ಪರೀಕ್ಷೆಯಲ್ಲಿ ರ‍್ಯಾಂಕ್‌ ಪಡೆದ 67 ವಿದ್ಯಾರ್ಥಿಗಳಲ್ಲಿ 44 ವಿದ್ಯಾರ್ಥಿಗಳು ಗ್ರೇಸ್‌ ಮಾರ್ಕ್ಸ್‌ ಆಧಾರದ ಮೇಲೆ ಟಾಪರ್‌ಗಳಾಗಿದ್ದರು. ಇನ್ನು, ಹರಿಯಾಣದಲ್ಲಿ ಒಂದೇ ಕೇಂದ್ರದಲ್ಲಿ ಪರೀಕ್ಷೆ ಬರೆದ ಆರು ವಿದ್ಯಾರ್ಥಿಗಳು ಜಂಟಿಯಾಗಿ ಟಾಪ್‌ ಸ್ಥಾನ ಪಡೆದಿದ್ದಾರೆ. ಇದರಿಂದಾಗಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ, ಪ್ರಶ್ನೆಪತ್ರಿಕೆ ಸೋರಿಕೆ ಮಾಡಲಾಗಿದೆ ಎಂಬುದಾಗಿ ಕೆಲವು ಪೋಷಕರು ಆರೋಪ ಮಾಡಿದ್ದಾರೆ. ಗ್ರೇಸ್‌ ಮಾರ್ಕ್ಸ್‌ ಪಡೆದ 1,500 ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಯನ್ನೂ ನಡೆಸಲಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ ಮಾಸ್ಟರ್‌ ಮೈಂಡ್‌ ಅಮಿತ್‌ ಆನಂದ್‌ ಸೇರಿ ಹಲವರನ್ನು ಬಂಧಿಸಲಾಗಿದ್ದು, ಕ್ಷಿಪ್ರವಾಗಿ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: Rahul Gandhi: ಚಮ್ಮಾರನ ಅಂಗಡಿಗೆ ದಿಢೀರ್‌ ಭೇಟಿ ನೀಡಿ, ಚಪ್ಪಲಿ ಹೊಲಿದ ರಾಹುಲ್‌ ಗಾಂಧಿ; Video ಇಲ್ಲಿದೆ

Continue Reading

ದೇಶ

Chandipura Virus: ಗುಜರಾತ್‌ನಲ್ಲಿ ತೀವ್ರವಾದ ಎನ್ಸೆಫಾಲಿಟಿಸ್ ಸಿಂಡ್ರೋಮ್‌ಗೆ 48 ಬಲಿ; 39 ಮಂದಿಗೆ ಚಾಂದಿಪುರ ವೈರಸ್ ದೃಢ

Chandipura Virus: ಕಳೆದ ಒಂದು ತಿಂಗಳಲ್ಲಿ ಗುಜರಾತ್‌ನಲ್ಲಿ ಮಾರಣಾಂತಿಕ ತೀವ್ರವಾದ ಎನ್ಸೆಫಾಲಿಟಿಸ್ ಸಿಂಡ್ರೋಮ್‌ನಿಂದ ಕನಿಷ್ಠ 48 ಮಂದಿ ಮೃತಪಟ್ಟಿದ್ದಾರೆ. ಆ ಪೈಕಿ ಹೆಚ್ಚಿನವರ ಸಾವಿಗೆ ಚಾಂದಿಪುರ ವೈರಸ್ ಕಾರಣ ಎಂದು ರಾಜ್ಯ ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಗುಜರಾತ್‌ನಲ್ಲಿ ಜುಲೈ 26ರವರೆಗೆ ಒಟ್ಟು 127 ಎಇಎಸ್ (AES) ಪ್ರಕರಣಗಳು ವರದಿಯಾಗಿವೆ.

VISTARANEWS.COM


on

Koo

ಗಾಂಧಿನಗರ: ಕಳೆದ ಒಂದು ತಿಂಗಳಲ್ಲಿ ಗುಜರಾತ್‌ (Gujarat)ನಲ್ಲಿ ಮಾರಣಾಂತಿಕ ತೀವ್ರವಾದ ಎನ್ಸೆಫಾಲಿಟಿಸ್ ಸಿಂಡ್ರೋಮ್ (Acute Encephalitis Syndrome)ನಿಂದ ಕನಿಷ್ಠ 48 ಮಂದಿ ಮೃತಪಟ್ಟಿದ್ದಾರೆ. ಆ ಪೈಕಿ ಹೆಚ್ಚಿನವರ ಸಾವಿಗೆ ಚಾಂದಿಪುರ ವೈರಸ್ (Chandipura Virus) ಕಾರಣ ಎಂದು ರಾಜ್ಯ ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಗುಜರಾತ್‌ನಲ್ಲಿ ಜುಲೈ 26ರವರೆಗೆ ಒಟ್ಟು 127 ಎಇಎಸ್ (AES) ಪ್ರಕರಣಗಳು ವರದಿಯಾಗಿವೆ. ಈ ಪೈಕಿ 39 ಮಂದಿಗೆ ಚಾಂದಿಪುರ ವೈರಸ್ (CHPV) ಇರುವುದು ದೃಢಪಟ್ಟಿದೆ. ಪಾಸಿಟಿವ್ ಪ್ರಕರಣಗಳನ್ನು ಹೊಂದಿರುವ ಸಬರ್ಕಾಂತ ಮತ್ತು ಪಚ್ಮಹಲ್‌ನಲ್ಲಿ ತಲಾ 6, ಅರಾವಳಿ ಮತ್ತು ಖೇಡಾದಲ್ಲಿ ತಲಾ 3, ಮೆಹ್ಸಾನಾದಲ್ಲಿ 4, ಅಹಮದಾಬಾದ್ ನಗರದಲ್ಲಿ 3 ಮತ್ತು ದಾಹೋಡ್‌ನಲ್ಲಿ 2 ಪ್ರಕರಣಗಳು ವರದಿಯಾಗಿವೆ.

ಜುಲೈ 17ರಂದು ಅರಾವಳಿಯ ಮೋಟಾ ಕಾಂತರಿಯಾ ಎಂಬ ನಾಲ್ಕು ವರ್ಷದ ಮಗು ಸಬರ್ಕಾಂತದ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದ. ಇದು ಚಾಂದಿಪುರ ವೈರಸ್‌ನಿಂದ ರಾಜ್ಯದಲ್ಲಿ ಸಂಭವಿಸಿದ ಮೊದಲ ಸಾವಿನ ಪ್ರಕರಣ ಎಂದು ಗುಜರಾತ್ ಸರ್ಕಾರ ದೃಢಪಡಿಸಿತ್ತು. ಮುಖ್ಯವಾಗಿ 15 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಮೇಲೆ ಪರಿಣಾಮ ಬೀರುವ ಚಾಂದಿಪುರ ವೈರಸ್ ಸದ್ಯ ಆತಂಕಕ್ಕೆ ಕಾರಣವಾಗಿದೆ. ಸೋಂಕು ತಗುಲಿದಾಗ ಜ್ವರ ಕಾಣಿಸಿಕೊಳ್ಳುತ್ತದೆ. ಕೆಲವೊಮ್ಮೆ ಮಾರಣಾಂತಿಕವಾಗುತ್ತದೆ.

ಮೆದುಳಿನ ಉರಿಯೂತ

ಎಇಎಸ್ ಮೆದುಳಿನ ಉರಿಯೂತವನ್ನು ಉಂಟು ಮಾಡುತ್ತದೆ. ಜತೆಗೆ ತೀವ್ರವಾದ ಎನ್ಸೆಫಾಲಿಟಿಕ್ ಕಾಯಿಲೆಗೆ ಕಾರಣವಾಗುತ್ತದೆ. ಇದು ಹರ್ಪಿಸ್ ಸಿಂಪ್ಲೆಕ್ಸ್ ವೈರಸ್, ಎಂಟರೊವೈರಸ್‌, ಮತ್ತು ಚಾಂದಿಪುರ ವೈರಸ್‌ಗಳಿಂದ ಕಾಣಿಸಿಕೊಳ್ಳುತ್ತದೆ. ಪ್ರಸ್ತುತ ಈ ರೋಗ ಲಕ್ಷಣವಿರುವ 54 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. 26 ಮಂದಿ ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

ರೋಗ ಲಕ್ಷಣ

ಚಾಂದಿಪುರ ವೈರಸ್ ಸೋಂಕು ಬಾಧಿತರಲ್ಲಿ ಸಾಮಾನ್ಯ ಜ್ವರದ ಲಕ್ಷಣವೇ ಕಂಡು ಬರುತ್ತದೆ. ಬಾಧಿತರಲ್ಲಿ ದಿಢೀರ್ ಜ್ವರ, ತೀವ್ರ ತಲೆನೋವು, ವಾಂತಿ, ಸ್ನಾಯು ಸೆಳೆತ, ಪ್ರಜ್ಞಾಹೀನತೆ, ಅರೆನಿದ್ರಾವಸ್ಥೆ ಕಂಡು ಬರುತ್ತದೆ. ತಕ್ಷಣ ಸೂಕ್ತ ಚಿಕಿತ್ಸೆ ಪಡೆಯದಿದ್ದರೆ ಮಾರಣಾಂತಿಕವಾಗಬಹುದು ಎಂದು ಆರೋಗ್ಯ ತಜ್ಞರು ಎಚ್ಚರಿಸಿದ್ದಾರೆ. ರಾಬ್ಡೋವೆರಿಡೆ ವರ್ಗಕ್ಕೆ ಸೇರಿದ ವೈರಸ್ ಈ ರೋಗಕ್ಕೆ ಕಾರಣ.

ಆರೋಗ್ಯ ಅಧಿಕಾರಿಗಳಿಂದ ಕ್ರಮ

ಆರೋಗ್ಯ ಅಧಿಕಾರಿಗಳು ಸಕ್ರಿಯವಾಗಿ ಕಾರ್ಯ ಪ್ರವೃತ್ತರಾಗಿದ್ದು, ರೋಗ ನಿಯಂತ್ರಣಕ್ಕೆ ಕ್ರಮ ಕೈಗೊಂಡಿದ್ದಾರೆ. ರಾಜ್ಯವು ಕ್ಷಿಪ್ರ ಪ್ರತಿಕ್ರಿಯೆ ತಂಡಗಳನ್ನು ಸಜ್ಜುಗೊಳಿಸಿದೆ. ಪೀಡಿತ ಪ್ರದೇಶಗಳು 41,000ಕ್ಕೂ ಹೆಚ್ಚು ಮನೆಗಳನ್ನು ಒಳಗೊಂಡಿದೆ. ರಾಜ್ಯಾದ್ಯಂತ ಸುಮಾರು 5,00,000 ಮನೆಗಳು, 19,000ಕ್ಕೂ ಹೆಚ್ಚು ಶಾಲೆಗಳು ಮತ್ತು 21,000ಕ್ಕೂ ಹೆಚ್ಚು ಅಂಗನವಾಡಿಗಳಲ್ಲಿ ಕೀಟನಾಶಕಗಳನ್ನು ಸಿಂಪಡಿಸುವ ಕಾರ್ಯ ನಡೆಯುತ್ತಿದೆ. ಮಲಾಥಿಯಾನ್ ಫಾಗಿಂಗ್, ಸ್ಯಾಂಡ್ ಫ್ಲೈಗಳು ಮತ್ತು ಸೊಳ್ಳೆಗಳ ಸಂಖ್ಯೆಯನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ವಿಶೇಷವಾಗಿ ಹೆಚ್ಚಿನ ಪ್ರಕರಣಗಳು ವರದಿಯಾದ ಪ್ರದೇಶಗಳಲ್ಲಿ ತಡೆಗಟ್ಟುವ ಕ್ರಮಗಳನ್ನು ಜಾರಿಗೆ ತರಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: Chandipura Virus: ಡೆಂಗ್ಯೂ ಹಾವಳಿ ನಡುವೆ ಕಾಡುತ್ತಿದೆ ಚಾಂದಿಪುರ ವೈರಸ್; ಇದುವರೆಗೆ 6 ಮಕ್ಕಳು ಬಲಿ: ಏನಿದರ ಲಕ್ಷಣ?

Continue Reading

ದೇಶ

Road Accident: ಕಣಿವೆಗೆ ಉರುಳಿದ ಕಾರು; ಐವರು ಮಕ್ಕಳು ಸೇರಿ 8 ಮಂದಿ ಸಾವು

Road Accident: ಜಮ್ಮು-ಕಾಶ್ಮೀರದ ದಕ್ಸುಮ್‌ ಪ್ರದೇಶದಿಂದ ಸುಮಾರು 20 ಕಿಲೋಮೀಟರ್‌ ದೂರದಲ್ಲಿರುವ ಆರ್ಶುನ್‌ ಹಟ್‌ ಎಂಬ ಪ್ರದೇಶದಲ್ಲಿ ಕಾರು ಸಂಚರಿಸುವಾಗ ಚಾಲಕನ ನಿಯಂತ್ರಣ ತಪ್ಪಿದೆ. ಕಾರು ಕಣಿವೆಗೆ ಉರುಳುತ್ತಲೇ ಅವರ ರಕ್ಷಣೆಗೆ ಕಾರ್ಯಾಚರಣೆ ಆರಂಭಿಸಲಾಗಿದೆ.

VISTARANEWS.COM


on

Road Accident
Koo

ಶ್ರೀನಗರ: ಜಮ್ಮು-ಕಾಶ್ಮೀರದ (Jammu Kashmir) ಅನಂತ್‌ನಾಗ್‌ ಜಿಲ್ಲೆಯಲ್ಲಿ ಭೀಕರ ಅಪಘಾತ (Road Accident) ಸಂಭವಿಸಿದೆ. ಟಾಟಾ ಸುಮೋ ಕಾರೊಂದು ಕಣಿವೆಗೆ ಉರುಳಿದ್ದು, ಐವರು ಮಕ್ಕಳು ಸೇರಿ 8 ಮಂದಿ ದಾರುಣವಾಗಿ ಸಾವಿಗೀಡಾಗಿದ್ದಾರೆ. ಜಮ್ಮು-ಕಾಶ್ಮೀರದ ದಕ್ಸುಮ್‌ ಪ್ರದೇಶದಲ್ಲಿ ಕಾರು ನಿಯಂತ್ರಣ ತಪ್ಪಿ, ಕಣಿವೆಗೆ ಉರುಳಿದೆ ಎಂಬುದಾಗಿ ತಿಳಿದುಬಂದಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ಮೂಲಗಳು ತಿಳಿಸಿವೆ.

ದಕ್ಸುಮ್‌ ಪ್ರದೇಶದಿಂದ ಸುಮಾರು 20 ಕಿಲೋಮೀಟರ್‌ ದೂರದಲ್ಲಿರುವ ಆರ್ಶುನ್‌ ಹಟ್‌ ಎಂಬ ಪ್ರದೇಶದಲ್ಲಿ ಕಾರು ಸಂಚರಿಸುವಾಗ ಚಾಲಕನ ನಿಯಂತ್ರಣ ತಪ್ಪಿದೆ. ಕಾರು ಕಣಿವೆಗೆ ಉರುಳುತ್ತಲೇ ಅವರ ರಕ್ಷಣೆಗೆ ಕಾರ್ಯಾಚರಣೆ ಆರಂಭಿಸಲಾಗಿದೆ. ಇನ್ನೂ ಕಾರನ್ನು ಮೇಲಕ್ಕೆ ಎತ್ತಿಲ್ಲ. ಶವಗಳನ್ನು ಕೂಡ ಮೇಲೆ ಎತ್ತುವ ಕಾರ್ಯಾಚರಣೆ ನಡೆಯುತ್ತಿದೆ. ಮೃತರ ಕುರಿತು ಕೂಡ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

ಜಮ್ಮು-ಕಾಶ್ಮೀರವು ಕಣಿವೆ ಪ್ರದೇಶವಾದ ಕಾರಣ ವಾಹನಗಳು ಹೆಚ್ಚಾಗಿ ಕಣಿವೆಗೆ ಉರುಳುತ್ತವೆ. ರಾಜೌರಿ ಜಿಲ್ಲೆಯಲ್ಲಿ ಕಳೆದ ಜೂನ್‌ನಲ್ಲಿ ಸೇನೆಯ ವಾಹನವೊಂದು ಕಂದಕಕ್ಕೆ ಉರಳಿ ಒಬ್ಬ ಯೋಧ ಮೃತಪಟ್ಟಿದ್ದರು ಹಾಗೆಯೇ, ನಾಲ್ವರು ಸೈನಿಕರು ಗಾಯಗೊಂಡಿದ್ದಾರೆ. ಗಾಯಗೊಂಡಿರುವ ಯೋಧರನ್ನು ಸೇನೆಯ ಆಸ್ಪತ್ರೆಗೆ ರವಾನಿಸಿ, ಚಿಕಿತ್ಸೆ ನೀಡಲಾಗಿತ್ತು.

ನೌಶೇರಾ ಸೆಕ್ಟರ್‌ ಬಳಿಯ ಗಡಿ ನಿಯಂತ್ರಣ ರೇಖೆಗೆ ಸಮೀಪದಲ್ಲಿರುವ ಭವಾನಿ ಗ್ರಾಮದ ಮೂಲಕ ಸೇನಾ ವಾಹನವು ಸಂಜೆ ತೆರಳುತ್ತಿತ್ತು. ವಾಹದಲ್ಲಿ ಐವರು ಯೋಧರು ಇದ್ದರು. ಇದೇ ವೇಳೆ, ವಾಹನವು ಚಾಲಕನ ನಿಯಂತ್ರಣ ತಪ್ಪಿದ್ದು, ಕಂದಕಕ್ಕೆ ಉರುಳಿತ್ತು. ದುರಂತ ಸಂಭವಿಸುತ್ತಲೇ ಐವರೂ ಯೋಧರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ, ಅಷ್ಟೊತ್ತಿಗಾಗಲೇ ಒಬ್ಬ ಯೋಧ ಮೃತಪಟ್ಟಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದರು.

ಕಳೆದ ವರ್ಷ ಜಮ್ಮು-ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಸುಮಾರು 55 ಜನರನ್ನು ಹೊತ್ತೊಯ್ಯುತ್ತಿದ್ದ ಬಸ್‌ ಒಂದು 300 ಅಡಿ ಆಳದ ಕಣಿವೆಗೆ ಬಿದ್ದು, 38 ಜನ ಮೃತಪಟ್ಟಿದ್ದರು. ಅಸ್ಸಾರ್‌ ಪ್ರದೇಶದ ತ್ರುಂಗಲ್‌ ಬಳಿ ಚಲಿಸುತ್ತಿದ್ದ ಬಸ್‌ ಕಂದಕಕ್ಕೆ ಉರುಳಿತ್ತು. ಕಿಶ್ತ್‌ವಾರ್‌ನಿಂದ ಜಮ್ಮುವಿಗೆ ತೆರಳುತ್ತಿದ್ದ ವೇಳೆ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಬಿದ್ದಿತ್ತು.

ಇದನ್ನೂ ಓದಿ: Viral Video: ಅಪಘಾತವಾದ ಲಾರಿಯಿಂದ ಜ್ಯೂಸ್‌ ಪ್ಯಾಕ್‌ ಎತ್ತಿಕೊಂಡ ಐಫೋನ್‌ಧಾರಿ! ದೊಡ್ಡವರ ಸಣ್ಣತನ ಎಂದ ನೆಟ್ಟಿಗರು

Continue Reading
Advertisement
Paris Olympics 2024
ಪ್ರಮುಖ ಸುದ್ದಿ54 seconds ago

Paris Olympics 2024 : ಶೂಟಿಂಗ್​ನಲ್ಲಿ ಭಾರತಕ್ಕೆ ಖುಷಿ ಸುದ್ದಿ; ಮಹಿಳೆಯರ 10 ಮೀಟರ್ ಏರ್​ ಪಿಸ್ತೂಲ್ ವಿಭಾಗದಲ್ಲಿ ಮನು ಭಾಕರ್​ ಫೈನಲ್​ಗೆ

Paris Olympics 2024
ಫ್ಯಾಷನ್4 mins ago

Paris Olympics 2024: ಭಾರತೀಯ ಅಥ್ಲೀಟ್‌ಗಳ ಡ್ರೆಸ್‌ ಕೋಡ್‌ ವಿನ್ಯಾಸಕ್ಕೆ ಜನರ ಮಿಶ್ರ ಪ್ರತಿಕ್ರಿಯೆ

Vaccin for Hiv
ಆರೋಗ್ಯ37 mins ago

Vaccine for HIV: ವರ್ಷಕ್ಕೆರಡು ಬಾರಿ ಈ ಇಂಜೆಕ್ಷನ್‌ ತೆಗೆದುಕೊಂಡರೆ ಎಚ್‌ಐವಿ ಭಯವೇ ಬೇಡ!

Physical Assault
ದೇಶ45 mins ago

Physical Assault : ಅಶ್ಲೀಲ ವಿಡಿಯೊಗಳನ್ನು ನೋಡಿ 9 ವರ್ಷದ ತಂಗಿಯನ್ನು ಅತ್ಯಾಚಾರ ಮಾಡಿ ಕೊಂದ 13 ವರ್ಷದ ಬಾಲಕ!

Paris Olympics
ಕ್ರೀಡೆ1 hour ago

Paris Olympics: ಕ್ರೀಡಾ ಗ್ರಾಮದಲ್ಲಿ ಭಾರತದ ಅಥ್ಲೀಟ್ಸ್‌ಗೆ ಆಹಾರ ಕೊರತೆ; ರೆಸ್ಟೋರೆಂಟ್​ನಿಂದ ರೋಟಿ, ದಾಲ್‌ ತರಿಸಿದ ಬಾಕ್ಸರ್​

karnataka Rain
ಮಳೆ1 hour ago

Karnataka Rain : ಮಳೆಗೆ ಮನೆ ಮುಳುಗಡೆಯಾದ ಸುದ್ದಿ ಕೇಳಿ ಮನೆ ಯಜಮಾನ ಹೃದಯಾಘಾತದಿಂದ ಸಾವು

Rahul Gandhi
ದೇಶ1 hour ago

Rahul Gandhi: ನೀಟ್‌ನಲ್ಲಿ ‘ಎಷ್ಟು ವೋಟ್‌’ ಪಡೆದಿರಿ ಎಂದು ವಿದ್ಯಾರ್ಥಿಗಳಿಗೆ ಕೇಳಿದ ರಾಹುಲ್‌ ಗಾಂಧಿ; Video ವೈರಲ್

Gautam Gambhir
ಕ್ರೀಡೆ1 hour ago

Gautam Gambhir : ಗೌತಮ್​ ಗಂಭೀರ್​ಗೆ ವಿಶೇಷ ಸಂದೇಶ ಕಳುಹಿಸಿದ ದ್ರಾವಿಡ್​; ಭಾವುಕರಾದ ನೂತನ ಕೋಚ್​!

Kannada New Movie Nava Digantha latest news
ಸಿನಿಮಾ1 hour ago

Kannada New Movie: ನೆರವೇರಿತು ’ನವ ದಿಗಂತ’ ಚಿತ್ರದ ಮುಹೂರ್ತ

DK Shivakumar
ಕರ್ನಾಟಕ2 hours ago

Brand Bengaluru: ‘ಬ್ರ್ಯಾಂಡ್‌ ಬೆಂಗಳೂರು’ ನಿರ್ಮಾಣಕ್ಕೆ ಡಿಕೆಶಿ ಮಾಸ್ಟರ್‌ಪ್ಲಾನ್;‌ ಇಲ್ಲಿದೆ ಸಭೆಯ ವಿವರ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

ramanagara news
ರಾಮನಗರ4 hours ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ5 hours ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ23 hours ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ1 day ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ1 day ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ1 day ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ2 days ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

ಟ್ರೆಂಡಿಂಗ್‌