Vijayanagara News: ಕೊಟ್ಟೂರಿನಲ್ಲಿ ವಿಶ್ವ ಪುಸ್ತಕ, ಕೃತಿ ಸ್ವಾಮ್ಯ ದಿನ ಆಚರಣೆ - Vistara News

ವಿಜಯನಗರ

Vijayanagara News: ಕೊಟ್ಟೂರಿನಲ್ಲಿ ವಿಶ್ವ ಪುಸ್ತಕ, ಕೃತಿ ಸ್ವಾಮ್ಯ ದಿನ ಆಚರಣೆ

Vijayanagara News: ಕೊಟ್ಟೂರು ಪಟ್ಟಣದ ಸಾರ್ವಜನಿಕ ಗ್ರಂಥಾಲಯದಲ್ಲಿ ವಿಶ್ವ ಪುಸ್ತಕ ಮತ್ತು ಕೃತಿ ಸ್ವಾಮ್ಯ ದಿನಾಚರಣೆಯ ಅಂಗವಾಗಿ ಮಂಗಳವಾರ ಪುಸ್ತಕ ಪ್ರದರ್ಶನ ಏರ್ಪಡಿಸಲಾಗಿತ್ತು

VISTARANEWS.COM


on

World Book and Copyright Day celebration at Kottur
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೊಟ್ಟೂರು: ಪಟ್ಟಣದ ಸಾರ್ವಜನಿಕ ಗ್ರಂಥಾಲಯದಲ್ಲಿ ವಿಶ್ವ ಪುಸ್ತಕ ಮತ್ತು ಕೃತಿ ಸ್ವಾಮ್ಯ ದಿನಾಚರಣೆಯ ಅಂಗವಾಗಿ ಮಂಗಳವಾರ ಪುಸ್ತಕ ಪ್ರದರ್ಶನ (Vijayanagara News) ಏರ್ಪಡಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಭಾರತೀಯ ಗ್ರಂಥಾಲಯ ಪಿತಾಮಹ, ಪದ್ಮಶ್ರೀ ಡಾ. ಎಸ್.ಆರ್. ರಂಗನಾಥನ್ ಮತ್ತು ಶಾರದಾಂಬೆಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪ ಅರ್ಪಿಸಿ, ನಮಿಸಲಾಯಿತು.

ಇದನ್ನೂ ಓದಿ: Karnataka Weather : ಬಿರುಗಾಳಿ ಮಳೆಗೆ ಜನರು ತತ್ತರ; ಸಿಡಿಲಿಗೆ ಎತ್ತುಗಳು ಬಲಿ, ನೆಲಕಚ್ಚಿದ ಬೆಳೆಗಳು

ಶಾಖಾ ಗ್ರಂಥಾಲಯ ಅಧಿಕಾರಿ ಮಲ್ಲಪ್ಪ ಗುಡ್ಲಾನೂರ್ ಮಾತನಾಡಿ, ವ್ಯಕ್ತಿತ್ವವನ್ನು ಬೆಳೆಸಲು ಪುಸ್ತಕಗಳ ಪಾತ್ರ ಮಹತ್ವದ್ದು, ವೈಜ್ಞಾನಿಕವಾಗಿ ಆಲೋಚಿಸಲು ಪುಸ್ತಕಗಳು ಸಹಾಯಕವಾಗುತ್ತವೆ, ಪುಸ್ತಕಗಳನ್ನು ಓದುತ್ತಾ ಇದ್ದರೆ ಏಕಾಗ್ರತೆ, ನೆಮ್ಮದಿ, ಸಮಾಧಾನ ಸಿಗುತ್ತದೆ ಎಂದರು.

ಪ್ರೌಢಶಾಲಾ ಶಿಕ್ಷಕ ಸಿದ್ದೇಶ್ ಗೌಡ ಮಾತನಾಡಿ, ಉತ್ತಮ ಜೀವನ ಮೌಲ್ಯಗಳನ್ನು ತಿಳಿಯಲು ಮತ್ತು ಸಾಧನೆ ಮಾಡಲು ಪುಸ್ತಕಗಳು ಸಹಾಯಕವಾಗುತ್ತವೆ ಎಂದು ಹೇಳಿದರು.

ಇದನ್ನೂ ಓದಿ: Job Alert: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಮೇ 4ರೊಳಗೆ ಅಪ್ಲೈ ಮಾಡಿ

ಈ ಸಂದರ್ಭದಲ್ಲಿ ದುರುಗೇಶ್, ವೀರಭದ್ರಪ್ಪ, ಕೊಪ್ಪಳದ ಮಾಮನಿ ಈಶ್ವರಪ್ಪ, ಅಕ್ಕಮಹಾದೇವಿ, ಹನುಮಕ್ಕ, ಮಮತಾ ಎಚ್., ಗ್ರಂಥಾಲಯ ಸದಸ್ಯರು ಹಾಗೂ ಇತರರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಬೆಂಗಳೂರು ಗ್ರಾಮಾಂತರ

Road Accident : ಡಿವೈಡರ್‌ಗೆ ಡಿಕ್ಕಿ ಹೊಡೆದು ಪಕ್ಕದ ಹೆದ್ದಾರಿಗೆ ಹಾರಿದ ಕೆಎಸ್‌ಆರ್‌ಟಿಸಿ ಬಸ್; ಬೈಕ್‌ನಿಂದ ಎಗರಿ ಬಿದ್ದ ಬಾಲಕ ಸಾವು

Road Accident : ತುಮಕೂರು ರಸ್ತೆ ಮಾದಾವರ ಫ್ಲೈಓವರ್ ಸಮೀಪ ಭೀಕರ ಅಪಘಾತ ಸಂಭವಿಸಿದೆ. ಡಿವೈಡರ್‌ಗೆ ಡಿಕ್ಕಿ ಹೊಡೆದ ಕೆಎಸ್‌ಆರ್‌ಟಿಸಿ ಬಸ್‌ ಪಕ್ಕದ ಹೆದ್ದಾರಿಗೆ ಹಾರಿದೆ. ಪರಿಣಾಮ ಬಸ್ಸಿನಲ್ಲಿದ್ದ ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದಾರೆ.

VISTARANEWS.COM


on

By

Road Accident
Koo

ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಸಮೀಪದ ಅಡಕಮಾರನಹಳ್ಳಿಯ ತುಮಕೂರು ರಸ್ತೆ ಮಾದಾವರ ಫ್ಲೈಓವರ್ ಬಳಿ ಭಾರೀ ದುರಂತವೊಂದು (Road Accident) ತಪ್ಪಿದೆ. ಚಾಲಕನ ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್‌ ಡಿವೈಡರ್‌ಗೆ ಡಿಕ್ಕಿ ಹೊಡೆದು ಹೆದ್ದಾರಿಯ ಪಕ್ಕದ ರಸ್ತೆಗೆ ಹಾರಿದ ಘಟನೆ ನಡೆದಿದೆ.

ಕೆಎಸ್‌ಆರ್‌ಟಿಸಿ ಬಸ್‌ವೊಂದು ಪ್ರಯಾಣಿಕರನ್ನು ಹೊತ್ತು ಸೋಮವಾರ ಪೇಟೆಯಿಂದ ಬೆಂಗಳೂರಿಗೆ ಬರುತ್ತಿತ್ತು. ನೆಲಮಂಗಲ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರ ಸಮೀಪ ಬಂದಾಗ ಚಾಲಕನ ನಿಯಂತ್ರಣ ತಪ್ಪಿದ ಬಸ್‌ ಡಿವೈಡರ್‌ಗೆ ಡಿಕ್ಕಿ ಹೊಡೆದು, ಹೆದ್ದಾರಿಯ ತಡೆಗೋಡೆಯನ್ನು ಹಾರಿ ಪಕ್ಕದ ರಸ್ತೆಗೆ ಬಂದು ನಿಂತಿತ್ತು. ಇದು 40 ಅಡಿ ಎತ್ತರದ ಫ್ಲೈಓವರ್‌ನಲ್ಲಿ ಘಟನೆ ನಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಒಂದು ವೇಳೆ ಬಸ್‌ ಏನಾದರೂ 40 ಅಡಿ ಎತ್ತರದಿಂದ ಕೆಳಗೆ ಬಿದ್ದಿದ್ದರೆ, ಪ್ರಯಾಣಿಕರ ಜೀವಕ್ಕೆ ಕುತ್ತು ಬರುತ್ತಿತ್ತು. ಮಾತ್ರವಲ್ಲದೇ ರಸ್ತೆಯಲ್ಲಿ ಸಂಚರಿಸುತ್ತಿದ್ದ ಇತರೆ ವಾಹನ ಸವಾರರು ಪ್ರಾಣವನ್ನೇ ಕಳೆದುಕೊಳ್ಳಬೇಕಿತ್ತು.

Road accidents in Bengaluru  Vijayanagar

ಅಪಘಾತದಲ್ಲಿ ನಾಲ್ವರಿಗೆ ಗಂಭೀರ ಗಾಯವಾಗಿದ್ದು, ಓರ್ವನ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗುತ್ತಿದೆ. ಚಾಲಕ ನಿರ್ವಾಹಕ ಸೇರಿದಂತೆ ಆರು ಮಂದಿಗೆ ಗಾಯವಾಗಿದ್ದು, ಅವರನ್ನೆಲ್ಲ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನೂ ಅಪಘಾತದಿಂದಾಗಿ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತವಾಗಿತ್ತು. ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪಕ್ಕದ ರಸ್ತೆಗೆ ಹಾರಿದ್ದ ಬಸ್‌ ಅನ್ನು ತೆರವುಗೊಳಿಸುತ್ತಿದ್ದಾರೆ.

Road accidents in Bengaluru  Vijayanagar

ಇದನ್ನೂ ಓದಿ: Robbery Case : ಕ್ಯಾಂಟರ್‌ ಅಡ್ಡಗಟ್ಟಿದ ದರೋಡೆಕೋರರು; ಖಾರದ ಪುಡಿ ಎರಚಿ 32 ಲಕ್ಷ ರೂ. ದೋಚಿ ಪರಾರಿ

ವಿಜಯನಗರದಲ್ಲಿ ಬೈಕ್‌ಗಳ ಮುಖಾಮುಖಿ ಡಿಕ್ಕಿ; ಎಗರಿ ಬಿದ್ದ ಬಾಲಕ ಸಾವು

ಬೈಕ್‌ಗಳ ಮುಖಾಮುಖಿ ಡಿಕ್ಕಿಯಾಗಿದ್ದು, ಡಿಕ್ಕಿ ರಭಸಕ್ಕೆ ಬೈಕ್ ಹಿಂದೆ ಕುಳಿತಿದ್ದ ಬಾಲಕ ಎಗರಿ ಬಿದ್ದು ಮೃತಪಟ್ಟಿದ್ದಾನೆ. ಘಟನೆಯಲ್ಲಿ ಮೂವರಿಗೆ ಸಣ್ಣ-ಪುಟ್ಟ ಗಾಯವಾಗಿದೆ. ವಿಜಯನಗರದ ಹರಪನಹಳ್ಳಿ – ಕೂಡ್ಲಿಗಿ ರಸ್ತೆಯ ಹರಾಳು ಕ್ರಾಸ್ ಬಳಿ ಘಟನೆ ನಡೆದಿದೆ. ಕೂಡ್ಲಿಗಿ ತಾಲೂಕಿನ ನಿವಾಸಿ ಮಹಮದ್ (13) ಮೃತ ದುರ್ದೈವಿ.

ಮಹಮದ್‌ ತಂದೆ ಅಸ್ಲಾಂ ಭಾಷಾ ಅವರು ಕೆಎಸ್‌ಆರ್‌ಸಿಟಿ ಬಸ್‌ ಓವರ್ ಟೆಕ್ ಮಾಡಲು ಹೋಗಿದ್ದಾರೆ. ಈ ವೇಳೆ ಬೈಕ್‌ನಲ್ಲಿ ಬರುತ್ತಿದ್ದ ರೇವಣಸಿದ್ದಪ್ಪ ಎಂಬುವವರ ಬೈಕ್‌ಗೆ ಗುದ್ದಿದ್ದಾರೆ. ಪರಿಣಾಮ ಡಿಕ್ಕಿ ರಭಸಕ್ಕೆ ಹಿಂಬದಿ ಕುಳಿತಿದ್ದ ಮಹಮದ್‌ ಹಾರಿ ಬಿದ್ದು ಮೃತಪಟ್ಟಿದ್ದಾನೆ. ಅಸ್ಲಾಂ ಭಾಷಾ, ಮತ್ತೊಬ್ಬ ಪುತ್ರ ಮಹಮದ್ ಫರಾನ್ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಆದರೆ ಮಹಮದ್‌ ತಾಯಿ ಬಸ್ ಚಾಲಕನನ್ನು ದೂರಿದ್ದಾರೆ. ಬಸ್ ಸ್ಪೀಡ್ ಆಗಿ ಬಂದಾಗ ಬೈಕ್ ಬ್ಯಾಲೆನ್ಸ್ ತಪ್ಪಿ ಮತ್ತೊಂದು ಬೈಕ್‌ಗೆ ಡಿಕ್ಕಿಯಾಗಿದೆ. ಬಸ್‌ ಮಗನಿಗೂ ಡಿಕ್ಕಿ ಹೊಡೆದಿದೆ. ನನ್ನ ಮಗನ ಸಾವಿಗೆ ಬಸ್ ಚಾಲಕ ಶಿವಕುಮಾರ್ ಕೂಡಾ ಕಾರಣ ಎಂದು ದೂರು ದಾಖಲಿಸಿದ್ದಾರೆ. ಸದ್ಯ ಈ ಸಂಬಂಧ ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಈ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌; ಬಿರುಗಾಳಿ ಸಹಿತ ಭಾರಿ ಮಳೆ ಎಚ್ಚರಿಕೆ

Karnataka Weather Forecast : ರಾಜ್ಯಾದ್ಯಂತ ಮಳೆಯಾಗುವ ನಿರೀಕ್ಷೆ ಇದ್ದು, 8 ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಗುಡುಗು, ಮಿಂಚಿನ ಮಳೆಯಾಗಲಿದ್ದು (Rain alert) ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗಲಿದ್ದು, ರಾಜ್ಯಾದ್ಯಂತ ಪ್ರತ್ಯೇಕವಾಗಿ ಭಾರಿ ಮಳೆಯಾಗುವ (Heavy Rain) ಸಾಧ್ಯತೆಯಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಗುಡುಗು, ಮಿಂಚು ಸಹಿತ ಮಳೆಯಾಗುವ (Karnataka Weather Forecast) ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ದಾವಣಗೆರೆ, ಚಿತ್ರದುರ್ಗದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ತುಮಕೂರು, ರಾಮನಗರ, ಚಾಮರಾಜನಗರ, ಮೈಸೂರು, ಮಂಡ್ಯ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರದಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಉಳಿದ ಭಾಗಗಳಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಈ ಪ್ರದೇಶದ ಉಳಿದ ಭಾಗಗಳಲ್ಲಿ ವ್ಯಾಪಕವಾಗಿ ಮಧ್ಯಮ ಮಳೆಯಾಗಲಿದೆ. ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ ಜಿಲ್ಲೆಯಾದ್ಯಂತ ಸಾಧಾರಣ ಮಳೆಯಾಗಲಿದೆ.

ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ನಿರೀಕ್ಷೆ ಇದ್ದರೆ, ಉಳಿದ ಭಾಗಗಳಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಕೂಡಿರಲಿದೆ. ಬೆಂಗಳೂರು ವ್ಯಾಪ್ತಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ಉಷ್ಣಾಂಶ 31 ಮತ್ತು 22 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಭಾರೀ ಮಳೆಗೆ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ. ಗಾಳಿಯು ಗಂಟೆಗೆ 40-50 ಕಿ.ಮೀ ಇರಲಿದೆ. ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ವಿಜಯನಗರ

Vijayanagara News: ಗಂಡಬೊಮ್ಮನಹಳ್ಳಿಯ ಗೋಶಾಲೆಗೆ ಉಪ ವಿಭಾಗಾಧಿಕಾರಿ ಭೇಟಿ, ಪರಿಶೀಲನೆ

Vijayanagara News: ಕೂಡ್ಲಿಗಿ ತಾಲೂಕಿನ ಗುಡೆಕೋಟೆ ಹೋಬಳಿಯ ಗಂಡಬೊಮ್ಮನಹಳ್ಳಿ ಗ್ರಾಮದಲ್ಲಿರುವ ಗೋಶಾಲೆಗೆ ವಿಜಯನಗರ ಉಪವಿಭಾಗಾಧಿಕಾರಿ ನೊಂಗ್ಡಾಯ್‌ ಮಹಮ್ಮದ್‌ ಅಲಿ ಅಕ್ರಂ ಷಾ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಗೋಶಾಲೆಯಲ್ಲಿರುವ ಜಾನುವಾರುಗಳಿಗೆ ಮೇವಿನ ಕೊರತೆ ಮತ್ತು ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಧಿಕಾರಿಗಳು ನಿಗಾವಹಿಸಬೇಕು ಎಂದು ಅವರು ಸೂಚಿಸಿದರು.

VISTARANEWS.COM


on

AC visited Gandabommanahalli Goshala and inspected
Koo

ಕೂಡ್ಲಿಗಿ: ತಾಲೂಕಿನ ಗುಡೆಕೋಟೆ ಹೋಬಳಿಯ ಗಂಡಬೊಮ್ಮನಹಳ್ಳಿ ಗ್ರಾಮದಲ್ಲಿರುವ ಗೋಶಾಲೆಗೆ ವಿಜಯನಗರ ಉಪವಿಭಾಗಾಧಿಕಾರಿ ನೊಂಗ್ಡಾಯ್‌ ಮಹಮ್ಮದ್‌ ಅಲಿ ಅಕ್ರಂ ಷಾ ಭೇಟಿ ನೀಡಿ, ಪರಿಶೀಲನೆ (Vijayanagara News) ನಡೆಸಿದರು.

ಇದನ್ನೂ ಓದಿ: Tatkal Tickets: ಕೊನೆ ಘಳಿಗೆಯಲ್ಲಿ ರೈಲು ಪ್ರಯಾಣಕ್ಕೆ ತತ್ಕಾಲ್‌ ಟಿಕೆಟ್‌ ಪಡೆಯುವುದು ಹೇಗೆ?

ಗಂಡಬೊಮ್ಮನಹಳ್ಳಿಯಲ್ಲಿ ಈಗಾಗಲೆ ಮೇವು ಬ್ಯಾಂಕ್‌ ಸ್ಥಾಪಿಸಲಾಗಿದ್ದು, ಜಾನುವಾರುಗಳಿಗೆ ಅಗತ್ಯವಿರುವ ಮೇವು ದಾಸ್ತಾನು ಮಾಡಲಾಗಿದೆ. ಗೋಶಾಲೆಯಲ್ಲಿ ಜಾನುವಾರುಗಳಿಗೆ ಅಗತ್ಯ ಮೇವು, ನೀರು, ನೆರಳಿನ ವ್ಯವಸ್ಥೆಯನ್ನು ಕೈಗೊಂಡಿರುವ ಕುರಿತು ಅವರು ಪರಿಶೀಲನೆ ನಡೆಸಿದರು.

ಗೋಶಾಲೆಯಲ್ಲಿರುವ ಜಾನುವಾರುಗಳಿಗೆ ಮೇವಿನ ಕೊರತೆ ಮತ್ತು ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಧಿಕಾರಿಗಳು ನಿಗಾವಹಿಸಬೇಕು ಎಂದ ಅವರು, ಗೋಶಾಲೆಗೆ ಅವಶ್ಯವಿರುವ ಅನುದಾನವನ್ನು ಒದಗಿಸಲಾಗುವುದು ಎಂದು ಉಪವಿಭಾಗಾಧಿಕಾರಿ ನೊಂಗ್ಡಾಯ್‌ ಮಹಮ್ಮದ್‌ ಅಲಿ ಅಕ್ರಂ ಷಾ ತಿಳಿಸಿದರು.

ಇದನ್ನೂ ಓದಿ: Bengaluru News: ಬೆಂಗಳೂರಿನಲ್ಲಿ ಮೇ 19ರಂದು ವೀರಲೋಕ ಪ್ರಕಾಶನದ 7 ಕೃತಿಗಳ ಲೋಕಾರ್ಪಣೆ

ಈ ಸಂದರ್ಭದಲ್ಲಿ ತಹಸೀಲ್ದಾರ್ ರಾಜು ಪಿರಂಗಿ, ತಾಪಂ ಇಒ ವೈ. ರವಿಕುಮಾರ್, ಪಶುಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಲೋಹಿತ್ ಕುಮಾರ್‌, ಉಪ ತಹಸೀಲ್ದಾರ್ ಕೊಟ್ರಮ್ಮ, ಕಂದಾಯ ನಿರೀಕ್ಷಕ ಚೌಡಪ್ಪ, ಸಿಬ್ಬಂದಿಗಳಾದ ಯಶ್ವಂತ್, ವೀರೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Continue Reading

ಕ್ರೈಂ

Theft Case : ಪೊಲೀಸ್‌ ಬಸ್ಸನ್ನೇ ಕದಿಯಲು ಬಂದ ಕುಡುಕ; ಪೇಡ ಕೇಳಿದವ 15 ಕೆಜಿ ತುಪ್ಪ ಎಗರಿಸಿದ

theft Case : ಪ್ರತ್ಯೇಕ ಕಡೆಗಳಲ್ಲಿ ಕಳ್ಳರು ಕೈಚಳಕ ತೋರಿಸಿ ಪರಾರಿ ಆಗಿದ್ದಾರೆ. ಬೆಂಗಳೂರಲ್ಲಿ ಕಳ್ಳನೊಬ್ಬ ತುಪ್ಪ ಕದ್ದರೆ, ಕಲಬುರಗಿಯಲ್ಲಿ ಪೊಲೀಸರ ಬಸ್‌ನ್ನೇ ಎಗರಿಸಲು ಹೋಗಿ ಲಾಕ್‌ ಆಗಿದ್ದಾನೆ. ಹಾವೇರಿಯಲ್ಲಿ ಮನೆಗಳ್ಳತನ, ಬೆಂಗಳೂರಲ್ಲಿ ಸರಣಿ ಮೊಬೈಲ್‌ ಕಳ್ಳನ ಬಂಧನವಾಗಿದೆ. ವಿಜಯನಗರದಲ್ಲಿ ಮನೆ ಮಾಲೀಕರು ಟೆರೇಸ್‌ ಮೇಲೆ ಮಲಗಿದ್ದಾಗ ಕಳ್ಳತನವಾಗಿದೆ.

VISTARANEWS.COM


on

By

theft Case
Koo

ಬೆಂಗಳೂರು/ಕಲಬುರಗಿ: ಚಾಲಾಕಿ ಕಳ್ಳರು (Theft Case) ಹೇಗೆಲ್ಲ ಯಮಾರಿಸುತ್ತಾರೆ ಎಂಬುದಕ್ಕೆ ಈ ಪ್ರಕರಣಗಳೇ ಸಾಕ್ಷಿ.. ಬೆಂಗಳೂರಿನ ಕೆಂಗೇರಿ ಕೊಮ್ಮಘಟ್ಟ ನಂದಿನಿ ಪಾರ್ಲರ್‌ನಲ್ಲಿ ಚಾಲಾಕಿ ಕಳ್ಳನೊಬ್ಬ ಕೈಚಳಕ ತೋರಿದ್ದಾನೆ. ಪೇಡ ಖರೀದಿ ನೆಪದಲ್ಲಿ ಬಂದು 15 ಕೆ.ಜಿ ತುಪ್ಪವನ್ನು ಕದ್ದೊಯ್ದಿದ್ದಾನೆ.

ನಂದಿನಿ ಪಾರ್ಲರ್‌ಗೆ ಬಂದ ಕಳ್ಳನೊಬ್ಬ ಮನೆಯಲ್ಲಿ ಫಂಕ್ಷನ್ ಇದೆ. ಹದಿನೈದು ಕೆ.ಜಿ ತುಪ್ಪ ಕೊಡಿ ಎಂದಿದ್ದ. ಖರೀದಿಸಿದ 15 ಕೆಜಿ ತುಪ್ಪವನ್ನು ಬ್ಯಾಗ್‌ಗೆ ಹಾಕಿಕೊಂಡು. ನಂತರ ಅಂಗಡಿ ಮಾಲೀಕನಿಗೆ ಪೇಡ ಕೊಡಿ ಎಂದಿದ್ದ. ಅಷ್ಟೇ ಅಂಗಡಿ ಮಾಲೀಕ ಪೇಡ ಕೊಡಲು ತಿರುಗಿದಾಗ 15 ಕೆಜಿ ತುಪ್ಪದ ಬ್ಯಾಗ್‌ ಜತೆ ಎಸ್ಕೇಪ್ ಆಗಿದ್ದಾನೆ. ಪೇಡದೊಂದಿಗೆ ಬಂದ ಮಾಲೀಕ ಗ್ರಾಹಕ ಇಲ್ಲದೆ ಇರುವುದನ್ನು ಗಮನಿಸಿ ಓಡಿದ್ದಾನೆ. ಆದರೆ ಕಳ್ಳನ ಪತ್ತೆಯಾಗಿಲ್ಲ. ಚಾಲಾಕಿ ಕಳ್ಳನ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸದ್ಯ ಅಂಗಡಿ ಮಾಲೀಕ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಕಲಬುರಗಿಯಲ್ಲಿ ಸಿಎಆರ್ ಪೊಲೀಸರ ಬಸ್ ಕಳ್ಳತನಕ್ಕೆ ಯತ್ನ

ಪೊಲೀಸ್ ಕಮಿಷನರ್ ಕಛೇರಿಯಲ್ಲಿ ನಿಲ್ಲಿಸಿದ್ದ ಸಿಎಆರ್‌ ಪೊಲೀಸರ ಬಸ್ ಕಳ್ಳತನಕ್ಕೆ ಯತ್ನಿಸಿರುವ ಘಟನೆ ಕಲಬುರಗಿ ನಗರದಲ್ಲಿರುವ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ನಡೆದಿದೆ. ಸೋಮವಾರ ಮಧ್ಯರಾತ್ರಿ ಕಳ್ಳತನಕ್ಕೆ ಯತ್ನಿಸಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಛತ್ತಿಸ್‌ಘಡ ಮೂಲದ ಸೋನು ಭಗಿರಥ ಎಂಬಾತ ಕಲಬುರಗಿಯಲ್ಲಿ ಸೆಂಟ್ರಿಂಗ್ ಕೆಲಸ ಮಾಡಿಕೊಂಡಿದ್ದ. ಸೋಮವಾರ ಮಧ್ಯರಾತ್ರಿ ಕುಡಿದ ನಶೆಯಲ್ಲಿ ಕಮಿಷನರ್ ಕಚೇರಿಗೆ ಬಂದಿದ್ದಾನೆ. ಬಸ್‌ನ ಕಿಟಕಿಯಲ್ಲಿ ನೇತು ಹಾಕಿದ್ದ ಪೊಲೀಸ್ ಕಾನ್ಸಟೇಬಲ್ ಜೇಬಿಗೆ ಕೈ ಹಾಕಿ ಬಸ್‌ ಕೀ ತೆಗೆದುಕೊಂಡಿದ್ದ.

ಬಳಿಕ ಡ್ರೈವರ್‌ ಸೀಟ್‌ ಏರಿದ ಕುಡುಕ ಸೋನು ಬಸ್ ಸ್ಟಾರ್ಟ್ ಮಾಡಲು ಮುಂದಾಗಿದ್ದ. ಮಧ್ಯರಾತ್ರಿ ಬಸ್‌ ಸೌಂಡ್‌ ಕೇಳಿ ಎಚ್ಚೆತ್ತುಕೊಂಡ ಪೊಲೀಸ್ ಕಾನ್ಸಟೇಬಲ್ ತಕ್ಷಣ ಆರೋಪಿ ಸೋನು ಭಗಿರಥನನ್ನು ಬಂಧಿಸಿದ್ದಾರೆ. ಸದ್ಯ ಈ ಸಂಬಂಧ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:Karnataka Weather : ತುಮಕೂರಲ್ಲಿ ಸಿಡಿಲಿಗೆ ಜಾನುವಾರು ಬಲಿ; ಚಿಕ್ಕಮಗಳೂರಲ್ಲಿ ಮಳೆ ಅವಾಂತರಕ್ಕೆ ಜನ ತತ್ತರ

ಹಾವೇರಿಯಲ್ಲಿ ಕಳ್ಳರ ಕೈಚಳಕ

ಹಾವೇರಿ ಜಿಲ್ಲೆಯ ಹಾನಗಲ್ ಪಟ್ಟಣದಲ್ಲಿ ಕಳ್ಳರು ಕೈಚಳಕ ತೋರಿಸಿದ್ದಾರೆ. ಹಾನಗಲ್ ಪಟ್ಟಣದ ಕೆಎಚ್‌ಬಿ ಕಾಲೋನಿಯ ವಿರೇಶ ಬಾಳಗೊಂಡರ ಹಾಗೂ ಕುಮಾರೇಶ್ವರ ನಗರದ ರವೀಂದ್ರ ಶಿರಗೋಡ ಎನ್ನುವರ ಮನೆಯಲ್ಲಿ ಕಳ್ಳತನವಾಗಿದೆ. ಸ್ಥಳಕ್ಕೆ ಹಾನಗಲ್ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರವೀಂದ್ರ ಮನೆಯಲ್ಲಿ 8 ತೊಲೆ ಬಂಗಾರ, ನಗದು ಹಾಗೂ ವಿರೇಶ ಮನೆಯಲ್ಲಿ 12 ತೊಲೆ ಬಂಗಾರ 50 ಸಾವಿರ ರೂ. ಕಳ್ಳತನ ಮಾಡಿದ್ದಾರೆ.

ಬೆಂಗಳೂರಲ್ಲಿ ಸರಣಿ ಮೊಬೈಲ್‌ ಕಳ್ಳನ ಬಂಧನ

ಬೆಂಗಳೂರಿನ ವಿವಿಧೆಡೆ ಸರಣಿ ಮೊಬೈಲ್‌ ಕಳ್ಳತನ‌ ನಡೆಸುತ್ತಿದ್ದ ಕಳ್ಳನ‌ ಬಂಧನವಾಗಿದೆ. ಸೈಯದ್ ಪರ್ವೀಜ್@ಪರ್ವೀಜ್(25) ಬಂಧಿತ ಆರೋಪಿಯಾಗಿದ್ದಾನ. ರಸ್ತೆ ಬದಿಯಲ್ಲಿ ಮೊಬೈಲ್‌ನಲ್ಲಿ ಮಾತಾನಾಡಿಕೊಂಡು ಹೋಗುವವರನ್ನೇ ಟಾರ್ಗೆಟ್ ಮಾಡುತ್ತಿದ್ದ ಸೈಯದ್‌ ಬೈಕ್‌ನಲ್ಲಿ ಬಂದು ಮೊಬೈಲ್ ಎಗರಿಸುತ್ತಿದ್ದ.

theft Case

ಆರೋಪಿಯಿಂದ ಒಟ್ಟು 5ಲಕ್ಷ ರೂ. ಬೆಲೆಬಾಳುವ 9 ಮೊಬೈಲ್ ಫೋನ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಕೃತ್ಯಕ್ಕೆ ಬಳಸುತ್ತಿದ್ದ ಸುಜುಕಿ ಆಕ್ಸೆಸ್ ಮತ್ತು ಟಿವಿಎಸ್ ಎನ್ಟಾರ್ಕ್ ವಾಹನವನ್ನು ವಶಕ್ಕೆ ಮಾಡಲಾಗಿದೆ. ಅನ್ನಪೂರ್ಣೇಶ್ವರಿ ನಗರ, ಜೆಪಿ ನಗರ, ಚಾಮರಾಜಪೇಟೆ ವ್ಯಾಪ್ತಿಯಲ್ಲಿ ಕಳ್ಳತನ ನಡೆಸುತ್ತಿದ್ದ. ಈ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ 10ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಆರೋಪಿಯಾಗಿದ್ದ. ಸದ್ಯ ಅನ್ನಪೂರ್ಣೇಶ್ವರಿ ನಗರ ಪೊಲೀಸರಿಂದ ಆರೋಪಿಯನ್ನು ಬಂಧಿಸಿದ್ದಾರೆ.

ವಿಜಯನಗರದಲ್ಲಿ ಮನೆ ಮೇಲೆ ಮಲಗಿದ್ದಾಗ ಕಳ್ಳತನ

ವಿಪರೀತ ಸೆಕೆ ಎಂದು ಮನೆ ಮಾಲೀಕರು ರಾತ್ರಿ ಮನೆಯ ಟೆರೇಸ್‌ ಮೇಲೆ ಮಲಗಿದ್ದಾಗ ಕಳ್ಳನೊಬ್ಬ ಮನೆಗೆ ಕಳ್ಳತನ ಮಾಡಿದ್ದಾನೆ. ವಿಜಯನಗರದ ಹೊಸಪೇಟೆ ತಾಲೂಕಿನ ವಡ್ಡರಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಪ್ರದೀಪ್ ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿದೆ. ಒಂದೂವರೇ ತೊಲೆ ಬಂಗಾರ, 1 ಲಕ್ಷ ರೂ. ಹಣ, 750 ಗ್ರಾಂ ಬೆಳ್ಳಿ ಕಳ್ಳತನವಾಗಿದೆ. ಹೊಸಪೇಟೆಯ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ವಾನದಳದಿಂದಲೂ ಪರಿಶೀಲನೆ ನಡೆಸಿ ಪೊಲೀಸರು ಸಿಸಿಟಿವಿ ಫುಟೇಜ್ ಪರಿಶೀಲನೆ ಮಾಡುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Road Accident
ಬೆಂಗಳೂರು ಗ್ರಾಮಾಂತರ21 mins ago

Road Accident : ಡಿವೈಡರ್‌ಗೆ ಡಿಕ್ಕಿ ಹೊಡೆದು ಪಕ್ಕದ ಹೆದ್ದಾರಿಗೆ ಹಾರಿದ ಕೆಎಸ್‌ಆರ್‌ಟಿಸಿ ಬಸ್; ಬೈಕ್‌ನಿಂದ ಎಗರಿ ಬಿದ್ದ ಬಾಲಕ ಸಾವು

Hyderabadi Biryani
ಪ್ರಮುಖ ಸುದ್ದಿ35 mins ago

Hyderabadi Biryani : ಎಸ್​ಆರ್​ಎಚ್​ ಅಭಿಮಾನಿಗಳೊಂದಿಗೆ ಹೈದ್ರಾಬಾದಿ ಬಿರಿಯಾನಿ ಸವಿದ ಹೇಡನ್ ಪುತ್ರಿ ಗ್ರೇಸ್​, ಇಲ್ಲಿದೆ ವಿಡಿಯೊ

Job Alert
ಉದ್ಯೋಗ39 mins ago

Job alert: ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ಆನ್‌ಲೈನ್‌ ಮೂಲಕ ಇಂದೇ ಅಪ್ಲೈ ಮಾಡಿ

Sangeetha Sringeri Wore Lioness Logo On Her Belt
ಬಿಗ್ ಬಾಸ್41 mins ago

Sangeetha Sringeri: ಸಂಗೀತಾ ಶೃಂಗೇರಿ ಸೊಂಟದಲ್ಲಿ ʻಸಿಂಹಿಣಿʼ; ಸ್ಯಾಂಡಲ್​ವುಡ್​ ನಟಿಯ ರಗಡ್‌ ಪೋಸ್‌ !

swati maliwal bibhav kumar
ಪ್ರಮುಖ ಸುದ್ದಿ55 mins ago

Swati Maliwal: ಆಪ್‌ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ನಡೆಸಿದ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ ಬಂಧನ

PM Modi wishes HD Deve Gowda on his 93rd birthday Jackfruit gift to former PM
ರಾಜಕೀಯ55 mins ago

HD Deve Gowda: ದೇವೇಗೌಡರಿಗೆ ಜನ್ಮದಿನ ಶುಭ ಕೋರಿದ ಮೋದಿ; ಮಾಜಿ ಪ್ರಧಾನಿಗೆ ಹಲಸಿನ ಹಣ್ಣು ಗಿಫ್ಟ್‌

Virat kohli
ಕ್ರೀಡೆ1 hour ago

Virat kohli : ತಮ್ಮ ಜೀವನದ ಎರಡು ಆಘಾತಕಾರಿ ಸಂದರ್ಭಗಳನ್ನು ವಿವರಿಸಿದ ವಿರಾಟ್ ಕೊಹ್ಲಿ

Robbery case
ವಿಜಯಪುರ1 hour ago

Robbery Case : ಕ್ಯಾಂಟರ್‌ ಅಡ್ಡಗಟ್ಟಿದ ದರೋಡೆಕೋರರು; ಖಾರದ ಪುಡಿ ಎರಚಿ 32 ಲಕ್ಷ ರೂ. ದೋಚಿ ಪರಾರಿ

Nitin Gadkari
Lok Sabha Election 20241 hour ago

Nitin Gadkari: ಯಾವ ಸರ್ಕಾರದಿಂದಲೂ ಸಂವಿಧಾನ ಬದಲಾಯಿಸಲು ಸಾಧ್ಯವಿಲ್ಲ: ನಿತಿನ್‌ ಗಡ್ಕರಿ

Mother Teresa Series life in the works
ಸಿನಿಮಾ2 hours ago

Mother Teresa Series: 30 ಕೋಟಿ ವೆಚ್ಚದಲ್ಲಿ ತಯಾರಾಗ್ತಿದೆ ‘ಮದರ್ ಥೆರೆಸಾʼ ಸಿರೀಸ್‌!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ18 hours ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ1 day ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ2 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು2 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ3 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ3 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ4 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20244 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌