Lok Sabha Election 2024: ಕಾಂಗ್ರೆಸ್‌ ಅಧಿಕಾರಕ್ಕೆ ಬಂದೆ ದೇಶದಲ್ಲಿ ಶರಿಯಾ ಕಾನೂನು ಜಾರಿ; ಯೋಗಿ ಆದಿತ್ಯನಾಥ್ ವಾಗ್ದಾಳಿ - Vistara News

Lok Sabha Election 2024

Lok Sabha Election 2024: ಕಾಂಗ್ರೆಸ್‌ ಅಧಿಕಾರಕ್ಕೆ ಬಂದೆ ದೇಶದಲ್ಲಿ ಶರಿಯಾ ಕಾನೂನು ಜಾರಿ; ಯೋಗಿ ಆದಿತ್ಯನಾಥ್ ವಾಗ್ದಾಳಿ

Lok Sabha Election 2024: ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ಆಸ್ತಿ ಮರು ಹಂಚಿಕೆ ಮಾಡುವ ಬಗ್ಗೆ ಪ್ರಸ್ತಾವಿಸಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಬಳಿಕ ಇದೀಗ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರೂ ಆರೋಪಿಸಿದ್ದಾರೆ. ʼʼಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ದೇಶದಲ್ಲಿ ‘ಶರಿಯಾ ಕಾನೂನನ್ನು’ ಜಾರಿಗೆ ತರುವ ಮತ್ತು ಜನರ ಆಸ್ತಿಯನ್ನು ಮರುಹಂಚಿಕೆ ಮಾಡುವ ಉದ್ದೇಶವನ್ನು ವ್ಯಕ್ತಪಡಿಸಿದೆʼʼ ಎಂದು ಹೇಳಿದ್ದಾರೆ. ಉತ್ತರ ಪ್ರದೇಶದ ಅಮ್ರೋಹದಲ್ಲಿ ನಡೆದ ಚುನಾವಣಾ ರ‍್ಯಾಲಿಯಲ್ಲಿ ಅವರು ಮಾತನಾಡಿ ಈ ವಿಚಾರ ಪ್ರಸ್ತಾವಿಸಿದ್ದಾರೆ.

VISTARANEWS.COM


on

Yogi Adityanath
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಕ್ನೋ: ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿನ ಸಂಪತ್ತು ಮರು ಹಂಚಿಕೆ ವಿಚಾರವನ್ನು ಪ್ರಸ್ತಾವಿಸಿದೆ ಎಂದು ಆರೋಪಿಸಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕೈ ಪಡೆಯ ವಿರುದ್ಧ ವಾಗ್ದಾಳಿ ನಡೆಸಿದ ಬಳಿಕ ಇದೀಗ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ (Yogi Adityanath) ಅವರ ಸರದಿ. ಯೋಗಿ ಆದಿತ್ಯನಾಥ್ ಮಂಗಳವಾರ ಕಾಂಗ್ರೆಸ್ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿ, ʼʼಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ದೇಶದಲ್ಲಿ ‘ಶರಿಯಾ ಕಾನೂನನ್ನು’ ಜಾರಿಗೆ ತರುವ ಮತ್ತು ಜನರ ಆಸ್ತಿಯನ್ನು ಮರುಹಂಚಿಕೆ ಮಾಡುವ ಉದ್ದೇಶವನ್ನು ವ್ಯಕ್ತಪಡಿಸಿದೆʼʼ ಎಂದು ಹೇಳಿದ್ದಾರೆ (Lok Sabha Election 2024).

ಉತ್ತರ ಪ್ರದೇಶದ ಅಮ್ರೋಹದಲ್ಲಿ ನಡೆದ ಚುನಾವಣಾ ರ‍್ಯಾಲಿಯಲ್ಲಿ ಮಾತನಾಡಿದ ಅವರು, “ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ದೇಶಕ್ಕೆ ದ್ರೋಹ ಬಗೆದಿವೆ ಮತ್ತು ಮತ್ತೊಮ್ಮೆ ತಮ್ಮ ತಪ್ಪಾದ ಪ್ರಣಾಳಿಕೆಯೊಂದಿಗೆ ನಿಮ್ಮ ಬಳಿಗೆ ಬಂದಿವೆ. ನೀವು ಕಾಂಗ್ರೆಸ್ ಪ್ರಣಾಳಿಕೆಯನ್ನು ಗಮನಿಸಿದರೆ ಅದರಲ್ಲಿ ಅವರು ತಾವು ಸರ್ಕಾರ ರಚಿಸಿದರೆ, ಶರಿಯಾ ಕಾನೂನನ್ನು ಜಾರಿಗೆ ತರುತ್ತೇವೆ ಎಂದು ಹೇಳುತ್ತಾರೆ. ನೀವು ಹೇಳಿ ಈ ದೇಶವನ್ನು ಡಾ.ಬಿ.ಆರ್‌.ಅಂಬೇಡ್ಕರ್ ರಚಿಸಿದ ಸಂವಿಧಾನದ ಆಧಾರದಲ್ಲಿ ನಡೆಸಬೇಕೆ ಅಥವಾ ಶರಿಯತ್‌ನಿಂದ ನಡೆಸಬೇಕೆ?” ಎಂದು ಅವರು ಪ್ರಶ್ನಿಸಿದ್ದಾರೆ.

ಪ್ರಧಾನಿ ಮೋದಿ ಅವರು ಈ ಹಿಂದೆ ತಮ್ಮ ಚುನಾವಣಾ ರ‍್ಯಾಲಿಗಳಲ್ಲಿ ಮಾತನಾಡಿ, ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಜನರ ಆಸ್ತಿಯ ಮರು ಹಂಚಿಕೆಯನ್ನು ಸೇರಿಸಿದೆ ಎಂದು ಆರೋಪಿಸಿದ್ದರು.

ಯೋಗಿ ಆದಿತ್ಯನಾಥ್ ಹೇಳಿದ್ದೇನು?

ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ವ್ಯಕ್ತಿಗತ ಕಾನೂನು (Vyaktigat kanoon) ಜಾರಿಗೊಳಿಸುತ್ತೇವೆ ಎಂದು ಭರವಸೆ ನೀಡಿದೆ. ಶರಿಯಾ ಕಾನೂನು ಜಾರಿ ಎನ್ನುವುದೇ ಇದರ ಅರ್ಥ. ಯಾಕೆಂದರೆ ಮೋದಿ ತ್ರಿವಳಿ ತಲಾಖ್‌ ಕಾನೂನನ್ನು ದೇಶದಲ್ಲಿ ನಿಷೇಧಿಸಿದ್ದಾರೆʼʼ ಎಂದು ಆದಿತ್ಯನಾಥ್‌ ಹೇಳಿದ್ದಾರೆ. ಮುಂದುವರಿದು, ʼʼಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಜನರ ಆಸ್ತಿಯನ್ನು ವಶಪಡಿಸಿಕೊಂಡು ಹಂಚುವ ಬಗ್ಗೆ ಪ್ರಸ್ತಾವಿಸಲಾಗಿದೆ. ಕಾಂಗ್ರೆಸ್‌ ಮತ್ತು ಸಮಾಜವಾದಿ ಪಾರ್ಟಿಗಳು ನಿಮ್ಮ ಆಸ್ತಿಯನ್ನು ಕೊಳ್ಳೆ ಹೊಡೆಯಲು ಅನುಮತಿ ನೀಡುತ್ತೀರಾ? ಅವರ ಇಬ್ಬಗೆಯ ನೀತಿಯತ್ತ ಗಮನ ಹರಿಸಿ. ಅವರು ಒಂದು ಕಡೆ ನಿಮ್ಮ ಆಸ್ತಿಯ ಮೇಲೆ ಕಣ್ಣಿಡುತ್ತಾರೆ. ಇನ್ನೊಂದು ಕಡೆ ಮಾಫಿಯಾ ಮತ್ತು ಅಪರಾಧಿಗಳಿಗೆ ನೆರವು ನೀಡುತ್ತಿದ್ದಾರೆʼʼ ಎಂದು ವಾಗ್ದಾಳಿ ನಡೆಸಿದ್ದಾರೆ.

2006ರಲ್ಲಿ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರು ನೀಡಿದ ಹೇಳಿಕೆಯನ್ನು ಉಲ್ಲೇಖಿಸಿದ ಯೋಗಿ ಆದಿತ್ಯನಾಥ್, “ಡಾ.ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ, ದೇಶದ ಸಂಪನ್ಮೂಲಗಳ ಮೇಲೆ ಮುಸ್ಲಿಮರಿಗೆ ಮೊದಲ ಹಕ್ಕು ಇದೆ ಎಂದು ಹೇಳಿದ್ದರು. ಹಾಗಾದರೆ ನಮ್ಮ ದಲಿತರು, ಹಿಂದುಳಿದ ವರ್ಗಗಳು, ಬಡವರು ಮತ್ತು ರೈತರು ಎಲ್ಲಿಗೆ ಹೋಗುತ್ತಾರೆ? ತಾಯಂದಿರು ಮತ್ತು ಸಹೋದರಿಯರು ಎಲ್ಲಿಗೆ ಹೋಗುತ್ತಾರೆ? ಯುವಕರು ಎಲ್ಲಿಗೆ ಹೋಗುತ್ತಾರೆ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ನಿಮ್ಮ ಮಂಗಳಸೂತ್ರವೂ ಸುರಕ್ಷಿತವಲ್ಲ; ಮತ್ತೆ ಸಂಪತ್ತು ಹಂಚಿಕೆ ವಿಷಯ ಪ್ರಸ್ತಾಪಿಸಿ ಕಾಂಗ್ರೆಸ್ ವಿರುದ್ಧ ಮೋದಿ ವಾಗ್ದಾಳಿ

ಮೋದಿ ಸರ್ಕಾರದ ಅವಧಿಯಲ್ಲಿ ಭಾರತದಲ್ಲಿ ಭಯೋತ್ಪಾದನೆ ಕೊನೆಗೊಂಡಿದೆ ಎಂದು ಅವರು ಹೇಳಿದ್ದಾರೆ. “10 ವರ್ಷಗಳ ಹಿಂದೆ ದೇಶದಲ್ಲಿ ಭಯದ ವಾತಾವರಣವಿತ್ತು. 2014ರ ನಂತರ ಭಯೋತ್ಪಾದನೆಯನ್ನು ನಿಯಂತ್ರಿಸಲಾಯಿತು ಮತ್ತು 2019ರ ಹೊತ್ತಿಗೆ ಮೋದಿ ಭಯೋತ್ಪಾದನೆಯ ಮೂಲವನ್ನು ಜಮ್ಮು ಕಾಶ್ಮೀರದ 370ನೇ ವಿಧಿಯನ್ನು ರದ್ದುಗೊಳಿಸಿದರು. ಇಂದು ಭಾರತದಲ್ಲಿ ಭಯೋತ್ಪಾದನೆ ನಾಶವಾಗಿದೆ” ಎಂದು ಅವರು ಹೇಳಿದ್ದಾರೆ. ಅಮ್ರೋಹಾದಲ್ಲಿ ಏಪ್ರಿಲ್ 26ರಂದು ಎರಡನೇ ಹಂತದಲ್ಲಿ ಮತದಾನ ನಡೆಯಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Lok Sabha Election 2024: ʼನನ್ನ ಸ್ಟೈಲು ಬೇರೇನೆ…ʼ; ಕತ್ತೆ ಮೂಲಕ ಪ್ರಚಾರ ನಡೆಸುವ ಅಭ್ಯರ್ಥಿಯ ಕಾರ್ಯ ವೈಖರಿ ಈಗ ವೈರಲ್‌

Lok Sabha Election 2024: ಬಿಹಾರದ ಗೋಪಾಲ್‌ಗಂಜ್‌ ಕ್ಷೇತ್ರದಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುತ್ತಿರುವ ಸತ್ಯೇಂದ್ರ ಬೈಥಾ ಚುನಾವಣಾ ಪ್ರಚಾರಕ್ಕೆ ಕತ್ತೆ ಮೇಲೆ ತೆರಳುವ ಮೂಲಕ ಗಮನ ಸೆಳೆದಿದ್ದಾರೆ. ನಾಮಪತ್ರ ಸಲ್ಲಿಕೆಗೂ ಕತ್ತೆ ಮೇಲೆಯೇ ತೆರಳಿದ್ದರು. ಸತ್ಯೇಂದ್ರ ಬೈಥಾ ಆಗಮಿಸುತ್ತಿದ್ದಂತೆ ಅನೇಕರು ಮನೆಯಿಂದ ಹೊರಗೆ ಬಂದು ಅವರ ಜತೆ ಫೋಟೊ ಕ್ಲಿಕ್ಕಿಸುತ್ತಿದ್ದಾರೆ.

VISTARANEWS.COM


on

Lok Sabha Election 2024
Koo

ಪಟನಾ: ಲೋಕಸಭಾ ಚುನಾವಣೆಯ (Lok Sabha Election 2024) 4 ಹಂತಗಳ ಮತದಾನ ಈಗಾಗಲೇ ಪೂರ್ಣಗೊಂಡಿದೆ. ಇನ್ನುಳಿದ 3 ಹಂತಗಳಿಗೆ ಭರದ ಸಿದ್ದತೆ ನಡೆಯುತ್ತಿದೆ. ಅಭ್ಯರ್ಥಿಗಳೂ ನಾಮಪತ್ರ ಸಲ್ಲಿಕೆ, ಪ್ರಚಾರದ ಭರಾಟೆಯಲ್ಲಿ ನಿರತರಾಗಿದ್ದಾರೆ. ಕೆಲವು ಕ್ಷೇತ್ರಗಳು ಘಟಾನುಘಟಿ ಸ್ಪರ್ಧಿಗಳ ಕಾರಣದಿಂದ ದೇಶದ ಗಮನ ಸೆಳೆದರೆ, ಇನ್ನು ಹಲವೆಡೆ ಅಭ್ಯರ್ಥಿಗಳು ಮತದಾರರನ್ನು ಸೆಳೆಯಲು ವಿಭಿನ್ನ ಕಸರತ್ತು ನಡೆಸಿ ಸುದ್ದಿಯಾಗುತ್ತಿದ್ದಾರೆ. ಇದೇ ರೀತಿ ಇಲ್ಲಿಯೊಬ್ಬರು ಸ್ಪರ್ಧಿ ತಮ್ಮ ವಿಶಿಷ್ಟ ಪ್ರಚಾರದಿಂದ ಇಂಟರ್‌ನೆಟ್‌ನಲ್ಲಿ ಸದ್ದು ಮಾಡುತ್ತಿದ್ದಾರೆ. ಚುನಾವಣಾ ಪ್ರಚಾರಕ್ಕೆ ಕತ್ತೆ ಮೇಲೆ ತೆರಳುವ ಮೂಲಕ ಬಿಹಾರದ ಸ್ವತಂತ್ರ ಅಭ್ಯರ್ಥಿಯೊಬ್ಬರು ಇಡೀ ದೇಶವೇ ತಮ್ಮ ತಿರುಗಿ ನೋಡುವಂತೆ ಮಾಡಿದ್ದಾರೆ. ಸದ್ಯ ಈ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ (Viral Video).

ಬಿಹಾರದ ಗೋಪಾಲ್‌ಗಂಜ್‌ ಕ್ಷೇತ್ರದಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುತ್ತಿರುವ ಸತ್ಯೇಂದ್ರ ಬೈಥಾ ಈ ರೀತಿ ಗಮನ ಸೆಳೆದವರು. ಗೋಪಾಲ್‌ಗಂಜ್‌ ಶ್ಯಾಮ್‌ಪುರ ನಿವಾಸಿಯಾದ ಅವರು ಚುನಾವಣಾ ಪ್ರಚಾರ ಮಾತ್ರವಲ್ಲ ನಾಮಪತ್ರ ಸಲ್ಲಿಕೆಗೂ ಕತ್ತೆ ಮೇಲೆಯೇ ತೆರಳಿದ್ದರು. ಸದ್ಯ ಅವರು ನಾಮಪತ್ರ ಸಲ್ಲಿಕೆಗೆ ಕತ್ತೆ ಮೇಲೆ ಮೆರವಣಿಗೆ ಮೂಲಕ ಸಾಗುತ್ತಿರುವ ವಿಡಿಯೊ ನೋಡಿ ನೆಟ್ಟಿಗರು ಅಚ್ಚರಿ ವ್ಯಕ್ತಪಡಿಸುತ್ತಿದ್ದಾರೆ.

ಸತ್ಯೇಂದ್ರ ಬೈಥಾ ಹೇಳೋದೇನು?

ಹೊಸ ರೀತಿಯ ಪ್ರಚಾರ ಶೈಲಿಯ ಬಗ್ಗೆ ಮಾತನಾಡುವ ಸತ್ಯೇಂದ್ರ ಬೈಥಾ, ʼʼದೇಶದಲ್ಲಿ ಪೆಟ್ರೋಲ್‌ ಮತ್ತು ಡೀಸೆಲ್‌ ದರ ಹೆಚ್ಚಾಗಿದೆ. ಹೀಗಾಗಿ ದುಬಾರಿ ಹಣ ಪಾವತಿಸಿ ನನ್ನಂತಹ ಅದೆಷ್ಟೋ ಜನರಿಗೆ ವಾಹನದಲ್ಲಿ ಸಂಚರಿಸಲು ಕಷ್ಟವಾಗುತ್ತಿದೆ. ಹೀಗಾಗಿ ಕತ್ತೆ ಮೇಲೆ ಮನೆ ಮನೆಗೆ ತೆರಳಿ ಪ್ರಚಾರ ನಡೆಸಲು ನಿರ್ಧರಿಸಿದ್ದೇನೆ ನಾಮಪತ್ರ ಸಲ್ಲಿಕೆಗೂ ನಾನು ಕತ್ತೆ ಮೇಲೆಯೇ ತೆರಳಿದ್ದೆʼʼ ಎಂದು ಅವರು ವಿವರಿಸಿದ್ದಾರೆ. ಸತ್ಯೇಂದ್ರ ಬೈಥಾ ಆಗಮಿಸುತ್ತಿದ್ದಂತೆ ಅನೇಕರು ಮನೆಯಿಂದ ಹೊರಗೆ ಬಂದು ಅವರ ಜತೆ ಫೋಟೊ ಕ್ಲಿಕ್ಕಿಸುತ್ತಿದ್ದಾರೆ.

ಭರವಸೆ

ಒಂದು ವೇಳೆ ಚುನಾವಣೆಯಲ್ಲಿ ಗೆದ್ದರೆ ಜನರಿಗಾಗಿ ಯಾವೆಲ್ಲ ಕೆಲಸಗಳನ್ನು ಮಾಡ ಬಯಸುತ್ತೀರಿ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ʼʼಜಿಲ್ಲೆಯಲ್ಲಿ ಸಕ್ಕರೆ ಖಾರ್ಖಾನೆ ಮತ್ತು ವಿಶ್ವ ವಿದ್ಯಾನಿಲಯ ತೆರೆಯಲು ಆದ್ಯತೆ ಮೇರೆಗೆ ಕ್ರಮ ಕೈಗೊಳ್ಳುತ್ತೇನೆ. ಶುಚಿತ್ವಕ್ಕೂ ನಾನು ಒತ್ತು ಕೊಡುತ್ತೇನೆ. ಈ ಹಿಂದೆ ಅನೇಕ ಅಭ್ಯರ್ಥಿಗಳು ಚುನಾವಣೆಯಲ್ಲಿ ಗೆದ್ದ ನಂತರ ಐದು ವರ್ಷಗಳ ಕಾಲ ಜಿಲ್ಲೆಯಲ್ಲಿ ಕಾಣಿಸಿಕೊಂಡಿರಲಿಲ್ಲ. ಅವರು ದೆಹಲಿ ಅಥವಾ ಪಾಟನಾದಲ್ಲಿ ವಾಸಿಸುತ್ತಿದ್ದರು. ಆದರೆ ನಾನು ಹಾಗಲ್ಲ. ನಾನು ಸ್ಥಳೀಯ ನಿವಾಸಿಯಾಗಿದ್ದು, ಸಾರ್ವಜನಿಕರಿಗೆ ದಿನದ 24 ಗಂಟೆಯೂ ಲಭ್ಯವಿರಲಿದ್ದೇನೆʼʼ ಎಂದು ಭರವಸೆ ನೀಡಿದ್ದಾರೆ.

ನೆಟ್ಟಿಗರ ಪ್ರತಿಕ್ರಿಯೆ

ಇನ್ನು ಕತ್ತೆ ಸವಾರಿಗೆ ನೆಟ್ಟಿಗರು ವಿದ ವಿಧವಾಗಿ ಪ್ರತಿಕ್ರಿಯಿಸಿದ್ದಾರೆ. ʼʼಇದು ಬಹಳ ಮಜವಾಗಿದೆʼʼ ಎಂದು ಒಬ್ಬರು ಹೇಳಿದ್ದಾರೆ. ʼʼಪಾಪದ ಪ್ರಾಣಿಗೆ ಈ ರೀತಿಯ ಹಿಂಸೆ ನೀಡುತ್ತಿರುವುದು ಎಷ್ಟು ಸರಿ?ʼʼ ಎಂದು ಮತ್ತೊಬ್ಬರು ಪ್ರಶ್ನಿಸಿದ್ದಾರೆ. ʼʼಈ ರೀತಿ ಪ್ರಾಣಿ ಬಳಕೆಗೆ ಅನುಮತಿ ಇದೆಯೇ?ʼʼ ಎಂದು ಇನ್ನೊಬ್ಬರು ಕಮೆಂಟ್‌ ಮಾಡಿದ್ದಾರೆ. ಒಟ್ಟಿನಲ್ಲಿ ಈ ವಿಡಿಯೊ ಚರ್ಚೆ ಹುಟ್ಟು ಹಾಕಿದ್ದಂತೂ ಸತ್ಯ.

ಗೋಪಾಲ್‌ಗಂಜ್‌ನಲ್ಲಿ ಮೇ 25ರಂದು 6ನೇ ಹಂತದಲ್ಲಿ ಮತದಾನ ನಡೆಯಲಿದೆ. ಎನ್‌ಡಿಎ ಅಭ್ಯರ್ಥಿಯಾಗಿ ಅಲೋಕ್‌ ಕುಮಾರ್‌ ಸುಮನ್‌ ಮತ್ತು ವಿಪಕ್ಷಗಳ ʼಇಂಡಿಯಾʼ ಮೈತ್ರಿಕೂಟದಿಂದ ಚಂಚಲ್‌ ಕುಮಾರ್‌ ಪಾಸ್ವಾನ್‌ ಸ್ಪರ್ಧಿಸುತ್ತಿದ್ದಾರೆ.

ಇದನ್ನೂ ಓದಿ: Zakir Naik: ಹಿಂದುಗಳನ್ನು ಮತಾಂತರಗೊಳಿಸುವ ಜಾಕೀರ್ ನಾಯ್ಕ್‌ನನ್ನು ಭಾರತದ ಚಕ್ರವರ್ತಿಯನ್ನಾಗಿಸಬೇಕು; ವಿವಾದ ಹುಟ್ಟುಹಾಕಿದ ಮೌಲ್ವಿ

Continue Reading

ದೇಶ

Kanhaiya Kumar: ಪ್ರಚಾರದ ವೇಳೆ ಕಾಂಗ್ರೆಸ್‌ ಅಭ್ಯರ್ಥಿ ಕನ್ಹಯ್ಯ ಕುಮಾರ್‌ ಮೇಲೆ ಹಲ್ಲೆ; ವಿಡಿಯೊ ಇಲ್ಲಿದೆ

Kanhaiya Kumar: ದೆಹಲಿಯ ಕರ್ತಾರ್‌ ನಗರದಲ್ಲಿರುವ ಪಕ್ಷದ ಕಚೇರಿಯಿಂದ ಕನ್ಹಯ್ಯ ಕುಮಾರ್‌ ಅವರು ಹೊರಗೆ ಹೋಗುತ್ತಿದ್ದರು. ಇದೇ ವೇಳೆ ಏಳೆಂಟು ಜನ ಹಾರ ಹಿಡಿದುಕೊಂಡು ಬಂದರು. ಹಾರ ಹಾಕುವ ನೆಪದಲ್ಲಿ ಅವರು ಕನ್ಹಯ್ಯ ಕುಮಾರ್‌ ಮೇಲೆ ಹಲ್ಲೆ ನಡೆಸಿದರು. ಅವರ ಮೇಲೆ ಮಸಿ ಎರಚುವ ಜತೆಗೆ ತಳ್ಳಿದರು. ಘಟನೆಯಲ್ಲಿ ನಾಲ್ವರು ಮಹಿಳೆಯರಿಗೆ ಗಾಯಗಳಾಗಿವೆ. ಪತ್ರಕರ್ತರೊಬ್ಬರು ಬಿದ್ದು ಗಾಯ ಮಾಡಿಕೊಂಡಿದ್ದಾರೆ ಎಂಬುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.

VISTARANEWS.COM


on

Kanhaiya Kumar
Koo

ನವದೆಹಲಿ: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಈಶಾನ್ಯ ದೆಹಲಿ ಕಾಂಗ್ರೆಸ್‌ ಅಭ್ಯರ್ಥಿ ಕನ್ಹಯ್ಯ ಕುಮಾರ್‌ (Kanhaiya Kumar) ಅವರು ಪ್ರಚಾರ ಮಾಡುವ ವೇಳೆ ಅವರ ಮೇಲೆ ಕೆಲ ಕಿಡಿಗೇಡಿಗಳು ಹಲ್ಲೆ ನಡೆಸಿದ್ದಾರೆ. ಪೂರ್ವ ದೆಹಲಿಯ ನ್ಯೂ ಉಸ್ಮಾನ್‌ಪುರ ಪ್ರದೇಶದಲ್ಲಿ ಕನ್ಹಯ್ಯ ಕುಮಾರ್‌ ಅವರು ಚುನಾವಣೆ ಪ್ರಚಾರ ನಡೆಸುತ್ತಿದ್ದರು. ಇದೇ ವೇಳೆ, ಏಳೆಂಟು ಜನ ಅವರಿಗೆ ಹಾರ ಹಾಕಲು ಬಂದಿದ್ದು, ಹಾರ ಹಾಕಿದ ಕೂಡಲೇ ಕಾಂಗ್ರೆಸ್‌ ಅಭ್ಯರ್ಥಿ ಮೇಲೆ ಹಲ್ಲೆ ನಡೆಸಿದ್ದಾರೆ. ಕೆಲವು ಜನ ಅವರ ಮೇಲೆ ಮಸಿ ಎರಚಿದ್ದಾರೆ.

ಕನ್ಹಯ್ಯ ಕುಮಾರ್‌ ಅವರ ಮೇಲೆ ಹಲ್ಲೆ ನಡೆದ ಬಳಿಕ ಬ್ರಹ್ಮಪುರಿಯ ಆಪ್‌ ಕೌನ್ಸಿಲರ್‌ ಛಾಯಾ ಗೌರವ್‌ ಶರ್ಮಾ ಅವರು ದೂರು ದಾಖಲಿಸಿದ್ದಾರೆ. “ಕರ್ತಾರ್‌ ನಗರದಲ್ಲಿರುವ ಪಕ್ಷದ ಕಚೇರಿಯಿಂದ ಕನ್ಹಯ್ಯ ಕುಮಾರ್‌ ಅವರು ಹೊರಗೆ ಹೋಗುತ್ತಿದ್ದರು. ಇದೇ ವೇಳೆ ಏಳೆಂಟು ಜನ ಹಾರ ಹಿಡಿದುಕೊಂಡು ಬಂದರು. ಹಾರ ಹಾಕುವ ನೆಪದಲ್ಲಿ ಅವರು ಕನ್ಹಯ್ಯ ಕುಮಾರ್‌ ಮೇಲೆ ಹಲ್ಲೆ ನಡೆಸಿದರು. ಅವರ ಮೇಲೆ ಮಸಿ ಎರಚುವ ಜತೆಗೆ ತಳ್ಳಿದರು. ಘಟನೆಯಲ್ಲಿ ನಾಲ್ವರು ಮಹಿಳೆಯರಿಗೆ ಗಾಯಗಳಾಗಿವೆ. ಪತ್ರಕರ್ತರೊಬ್ಬರು ಬಿದ್ದು ಗಾಯ ಮಾಡಿಕೊಂಡಿದ್ದಾರೆ” ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಕನ್ಹಯ್ಯ ಕುಮಾರ್‌ ಮೇಲೆ ದಾಳಿ ನಡೆಸಿದ ಏಳೆಂಟು ಜನರಲ್ಲಿ ಇಬ್ಬರು ವಿಡಿಯೊ ಬಿಡುಗಡೆ ಮಾಡಿದ್ದಾರೆ. ಕೆಲ ವರ್ಷಗಳ ಹಿಂದೆ ಕನ್ಹಯ್ಯ ಕುಮಾರ್‌ ದೇಶ ಒಡೆಯುವ (ಟುಕ್ಡೆ ಗ್ಯಾಂಗ್‌ ಎಂದೇ ಖ್ಯಾತಿ) ಹೇಳಿಕೆ ನೀಡಿದ್ದು, ಸೇನೆಯ ವಿರುದ್ಧ ಮಾತನಾಡಿದ ಹಿನ್ನೆಲೆಯಲ್ಲಿ ಅವರು ಕನ್ಹಯ್ಯ ಕುಮಾರ್‌ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬದಾಗಿ ಹೇಳಿದ್ದಾರೆ ಎನ್ನಲಾಗಿದೆ. ಆದಾಗ್ಯೂ, ದಾಳಿಗೆ ನಿಖರ ಕಾರಣ ಗೊತ್ತಾಗಿಲ್ಲ.

ಕನ್ಹಯ್ಯ ಸ್ಪರ್ಧೆಗೆ ಪಕ್ಷದಲ್ಲೇ ವಿರೋಧ

ಕನ್ಹಯ್ಯ ಕುಮಾರ್‌ ಅವರಿಗೆ ಕಾಂಗ್ರೆಸ್‌ ಟಿಕೆಟ್‌ ನೀಡಿರುವುದಕ್ಕೆ ಕೆಲ ದಿನಗಳ ಹಿಂದೆ ಕಾಂಗ್ರೆಸ್‌ನಲ್ಲಿಯೇ ವಿರೋಧ ವ್ಯಕ್ತವಾಗಿತ್ತು. ಪಕ್ಷದ ಪ್ರಧಾನ ಕಚೇರಿ ಎದುರು ಜಮಾನಿಸಿದ ನೂರಾರು ಕಾಂಗ್ರೆಸ್‌ ಕಾಂಗ್ರೆಸಿಗರು ಹೊರಗಿನವರು ಬೇಡ, ಸ್ಥಳೀಯರನ್ನೇ ಕಣಕ್ಕಿಳಿಸಿ ಎಂದು ಒತ್ತಾಯಿಸಿದ್ದರು. ಮೌಜ್‌ಪುರ ಮೆಟ್ರೋ ಸ್ಟೇಷನ್ ಬಳಿ ಪ್ರತಿಭಟನೆ ನಡೆದಿದ್ದು, ನಮಗೆ ಸ್ಥಳೀಯ ನಾಯಕರೇ ಬೇಕು ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದಿದ್ದರು.‌

ಈಶಾನ್ಯ ದೆಹಲಿಯಿಂದ ಕನ್ಹಯ್ಯ ಕುಮಾರ್ ಸ್ಪರ್ಧಿಸುತ್ತಿದ್ದು, ಬಿಜೆಪಿಯ ಮನೋಜ್ ತಿವಾರಿ ವಿರುದ್ಧ ಕಣಕ್ಕೆ ಇಳಿದಿದ್ದಾರೆ. 37 ವರ್ಷದ ಕುಮಾರ್ ಎರಡನೇ ಬಾರಿಗೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. 2019ರಲ್ಲಿ, ಅವರು ಬಿಹಾರದ ಬೆಗುಸರಾಯ್​ನಿಂದ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಅಲ್ಲಿ ಅವರು ಕೇಂದ್ರ ಸಚಿವ ಮತ್ತು ಭಾರತೀಯ ಜನತಾ ಪಕ್ಷದ ನಾಯಕ ಗಿರಿರಾಜ್ ಸಿಂಗ್ ವಿರುದ್ಧ ಸೋತಿದ್ದರು. ಅವರು 2021ರಲ್ಲಿ ಕಾಂಗ್ರೆಸ್ ಸೇರಿದ್ದರು.

ಇದನ್ನೂ ಓದಿ: Amit Shah: ಪ್ರಚಾರದ ವೇಳೆ ಕೇಜ್ರಿವಾಲ್‌ ನೀಡಿದ ಹೇಳಿಕೆಯಿಂದ ನ್ಯಾಯಾಂಗ ನಿಂದನೆ; ಅಮಿತ್‌ ಶಾ ವಾಗ್ದಾಳಿ

Continue Reading

ದೇಶ

Narendra Modi: ಕಾಂಗ್ರೆಸ್‌ ಗೆದ್ದರೆ ಬುಲ್ಡೋಜರ್‌ನಿಂದ ರಾಮಮಂದಿರ ನೆಲಸಮ ಎಂದ ಮೋದಿ!

Narendra Modi: ಕಾಂಗ್ರೆಸ್‌ ಹಾಗೂ ಸಮಾಜವಾದಿ ಪಕ್ಷ ಅಧಿಕಾರಕ್ಕೆ ಬಂದರೆ, ಅವರು ಬುಲ್ಡೋಜರ್‌ಗಳನ್ನು ಕಳುಹಿಸಿ ರಾಮಮಂದಿರವನ್ನು ನೆಲಸಮಗೊಳಿಸುತ್ತಾರೆ. ಪೀಳಿಗೆಗಳಿಂದ ತ್ಯಾಗ ಮಾಡಿದ ಫಲವಾಗಿ, 500 ವರ್ಷಗಳ ಹೋರಾಟದ ಫಲವಾಗಿ ರಾಮಮಂದಿರ ನಿರ್ಮಾಣ ಮಾಡಲಾಗಿದೆ. ನೀವು ನಮಗೆ ಮತ ನೀಡಿದ ಕಾರಣ ಇದೆಲ್ಲ ಸಾಧ್ಯವಾಗಿದೆ. ಆದರೆ, ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ, ರಾಮಮಂದಿರವನ್ನು ನೆಲಸಮಗೊಳಿಸುತ್ತದೆ ಎಂದು ನರೇಂದ್ರ ಮೋದಿ ಹೇಳಿದರು.

VISTARANEWS.COM


on

Narendra modi
Koo

ಲಖನೌ: ಲೋಕಸಭೆ ಚುನಾವಣೆಯ (Lok Sabha Election 2024) ನಾಲ್ಕು ಹಂತದ ಮತದಾನ ಮುಗಿದರೂ ಚುನಾವಣೆ ಅಬ್ಬರ ಮಾತ್ರ ಮುಗಿದಿಲ್ಲ. ಇನ್ನೂ ಮೂರು ಹಂತದ ಮತದಾನ ಬಾಕಿ ಇರುವುದರಿಂದ ರಾಜಕೀಯ ನಾಯಕರು ತೀಕ್ಷ್ಣ ಹೇಳಿಕೆ, ವಾಗ್ದಾಳಿ, ಆರೋಪ, ಪ್ರತ್ಯಾರೋಪ ಮಾಡುತ್ತಿದ್ದಾರೆ. ಅದರಲ್ಲೂ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ರಾಮಮಂದಿರ ಸೇರಿ ಹಲವು ವಿಷಯಗಳನ್ನು ಪ್ರಸ್ತಾಪಿಸಿ ಕಾಂಗ್ರೆಸ್‌ ಸೇರಿ ಎಲ್ಲ ಪ್ರತಿಪಕ್ಷಳ ವಿರುದ್ಧ ವಾಗ್ಬಾಣ ಬಿಡುತ್ತಿದ್ದಾರೆ. “ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ, ಬುಲ್ಡೋಜರ್‌ನಿಂದ ರಾಮಮಂದಿರವನ್ನು (Ram Mandir) ನೆಲಸಮಗೊಳಿಸುತ್ತಾರೆ” ಎಂದು ಶುಕ್ರವಾರ (ಮೇ 17) ವಾಗ್ದಾಳಿ ನಡೆಸಿರುವುದೇ ಇದಕ್ಕೆ ಸಾಕ್ಷಿಯಾಗಿದೆ.

ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ನಡೆದ ಚುನಾವಣೆ ರ‍್ಯಾಲಿಯಲ್ಲಿ ನರೇಂದ್ರ ಮೋದಿ ಮಾತನಾಡಿದರು. “ದೇಶದಲ್ಲಿ ಕಾಂಗ್ರೆಸ್ ಹಾಗೂ ಸಮಾಜವಾದಿ ಪಕ್ಷಗಳು ಅಧಿಕಾರಕ್ಕೆ ಬಂದರೆ ಅವರು ರಾಮಲಲ್ಲಾನನ್ನು ಮತ್ತೆ ಟೆಂಟ್‌ಗೆ ಕಳುಹಿಸುತ್ತಾರೆ. ಅವರು ಬುಲ್ಡೋಜರ್‌ಗಳನ್ನು ಕಳುಹಿಸಿ ರಾಮಮಂದಿರವನ್ನು ನೆಲಸಮಗೊಳಿಸುತ್ತಾರೆ. ಪೀಳಿಗೆಗಳಿಂದ ತ್ಯಾಗ ಮಾಡಿದ ಫಲವಾಗಿ, 500 ವರ್ಷಗಳ ಹೋರಾಟದ ಫಲವಾಗಿ ರಾಮಮಂದಿರ ನಿರ್ಮಾಣ ಮಾಡಲಾಗಿದೆ. ನೀವು ನಮಗೆ ಮತ ನೀಡಿದ ಕಾರಣ ಇದೆಲ್ಲ ಸಾಧ್ಯವಾಗಿದೆ. ಆದರೆ, ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ, ರಾಮಮಂದಿರವನ್ನು ನೆಲಸಮಗೊಳಿಸುತ್ತದೆ” ಎಂದು ಹೇಳಿದರು.

ಸ್ವಾತಂತ್ರ್ಯ ಹೋರಾಟವನ್ನು ಉಲ್ಲೇಖಿಸಿ ಮೋದಿ ಕಾಂಗ್ರೆಸ್‌ಗೆ ಕುಟುಕಿದರು. “ದೇಶಾದ್ಯಂತ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಯುವಾಗ ದೇಶವನ್ನು ವಿಭಜನೆ ಮಾಡಲಾಗುತ್ತದೆ ಎಂಬ ಮಾತು ಕೇಳಿಬಂತು. ಆಗ ಇಡೀ ದೇಶ ಅಚ್ಚರಿಗೀಡಾಯಿತು. ದೇಶವನ್ನು ವಿಭಜನೆ ಮಾಡಲಾಗುತ್ತದೆಯೇ ಎಂಬ ಆತಂಕ ಮೂಡಿತು. ಆದರೆ, ಕಾಂಗ್ರೆಸಿಗರು ದೇಶವನ್ನು ಇಬ್ಭಾಗ ಮಾಡಿದರು. ಅವರು ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡುತ್ತಾರೆ. ಕಾಂಗ್ರೆಸಿಗರಿಗೆ ದೇಶ ಮುಖ್ಯವಲ್ಲ. ಅವರಿಗೆ ತಮ್ಮ ಕುಟುಂಬ ಮುಖ್ಯ, ಅಧಿಕಾರ ಮುಖ್ಯ” ಎಂದು ಟೀಕಿಸಿದರು.

ಬೀಗ ಜಡಿಯುತ್ತಾರೆ ಎಂದಿದ್ದ ಮೋದಿ

ಕೆಲ ದಿನಗಳ ಹಿಂದೆಯೂ ಮೋದಿ ಅವರು ರಾಮಮಂದಿರ ಹಾಗೂ ಕಾಂಗ್ರೆಸ್‌ ಬಗ್ಗೆ ಮಾತನಾಡಿದ್ದರು. “ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು 400 ಕ್ಷೇತ್ರಗಳಲ್ಲಿ ಗೆಲ್ಲಿಸಿ ಎಂಬುದಾಗಿ ನಾನು ನಿಮ್ಮಲ್ಲಿ ಮನವಿ ಮಾಡಲು ಹಲವು ಕಾರಣಗಳಿವೆ. ನೀವು ಬಹುಮತ ನೀಡಿದ ಕಾರಣಕ್ಕಾಗಿಯೇ ನಾವು 370ನೇ ವಿಧಿಯನ್ನು ರದ್ದುಗೊಳಿಸಿದೆವು. ಹಾಗಾಗಿ, ಕಾಂಗ್ರೆಸ್‌ 370ನೇ ವಿಧಿಯನ್ನು ಮತ್ತೆ ಜಾರಿಗೆ ತರಬಾರದು, ಅಯೋಧ್ಯೆಯ ರಾಮಮಂದಿರಕ್ಕೆ ಬಾಬ್ರಿ ಮಸೀದಿ ಬೀಗ ಜಡಿಯಬಾರದು, ನಮ್ಮ ದೇಶದ ದ್ವೀಪಗಳನ್ನು ಬೇರೆ ದೇಶಗಳಿಗೆ ನೀಡಬಾರದು, ಒಬಿಸಿ ಮೀಸಲಾತಿಯನ್ನು ಕಿತ್ತು ಧರ್ಮದ ಆಧಾರದ ಮೇಲೆ ಅಲ್ಪಸಂಖ್ಯಾತರಿಗೆ ನೀಡಬಾರದು ಎಂಬ ಕಾರಣಕ್ಕಾಗಿ ಬಿಜೆಪಿಗೆ ಬಹುಮತ ನೀಡಿ” ಎಂದಿದ್ದರು.

ಇದನ್ನೂ ಓದಿ: ಪಾಕ್‌ ಬಳಿ ಅಣು ಬಾಂಬ್‌ ಇದೆ, ಆದ್ರೆ, ಮೆಂಟೇನ್ ಮಾಡೋಕೂ ಅವರ ಬಳಿ ದುಡ್ಡಿಲ್ಲ ಎಂದ ಮೋದಿ; ಕಾಂಗ್ರೆಸ್‌ಗೆ ಚಾಟಿ

Continue Reading

ದೇಶ

Uttar Pradesh: ಉತ್ತರ ಪ್ರದೇಶದಲ್ಲಿ ಲೋಕಸಭೆ ಸಮರ; ನೀವು ತಿಳಿಯಲೇಬೇಕಾದ 5 ಕುತೂಹಲಕರ ಅಂಶಗಳು ಇಲ್ಲಿವೆ

Uttar Pradesh: 2014ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯು ಉತ್ತರ ಪ್ರದೇಶದಲ್ಲಿ 71 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. 2019ರಲ್ಲಿ 62 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ಇದು ಕೇಂದ್ರದಲ್ಲಿ ಬಿಜೆಪಿಯು ಅಧಿಕಾರಕ್ಕೆ ಬರಲು ಕಾರಣವಾಗಿತ್ತು. ಆದರೆ, ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದ ರಾಜಕೀಯ ಸ್ಥಿತಿಗತಿ ಹೇಗಿದೆ ಎಂಬುದರ ಮಾಹಿತಿ ಇಲ್ಲಿದೆ.

VISTARANEWS.COM


on

Uttar Pradesh
Koo

ಲಖನೌ: ಲೋಕಸಭೆ ಚುನಾವಣೆಯ (Lok Sabha Election 2024) ನಾಲ್ಕನೇ ಹಂತದ ಮತದಾನ ಮುಕ್ತಾಯಗೊಂಡಿದೆ. ಅದರಲ್ಲೂ, ದೇಶದ ಗಮನವೀಗ ಉತ್ತರ ಪ್ರದೇಶದ (Uttar Pradesh) ರಾಜಕೀಯ ಸ್ಥಿತಿಗತಿಗಳ ಮೇಲೆ ನಿಂತಿದೆ. ಮೊದಲಿನಿಂದಲೂ, ಉತ್ತರ ಪ್ರದೇಶದಲ್ಲಿ ಅತಿ ಹೆಚ್ಚು ಲೋಕಸಭೆ ಕ್ಷೇತ್ರಗಳನ್ನು ಗೆಲ್ಲುವ ಪಕ್ಷವು ಕೇಂದ್ರದಲ್ಲಿ ಅಧಿಕಾರ ಗಳಿಸುತ್ತದೆ ಎಂಬ ಮಾತಿದೆ. ಅದು ಬಹುತೇಕ ಚುನಾವಣೆಗಳಲ್ಲಿ ನಿಜವೂ ಆಗಿದೆ. ಉತ್ತರ ಪ್ರದೇಶದಲ್ಲಿ 80 ಲೋಕಸಭೆ ಕ್ಷೇತ್ರಗಳು ಇರುವುದೇ ಇದಕ್ಕೆ ಕಾರಣವಾಗಿದ್ದು, ಈ ಬಾರಿಯೂ ಕದನ ಕುತೂಹಲ ಮೂಡಿದೆ. ಹಾಗಾದರೆ, ಉತ್ತರ ಪ್ರದೇಶದಲ್ಲಿ ಲೋಕಸಭೆ ಚುನಾವಣೆ ಸಮರ ಹೇಗೆ ನಡೆಯುತ್ತಿದೆ? ಯಾವ ಪಕ್ಷಕ್ಕೆ ಗೆಲುವಾಗಬಹುದು? ಯಾವ ಪಕ್ಷಗಳ ರಾಜಕೀಯ ತಂತ್ರಗಾರಿಕೆ ಹೇಗಿದೆ ಎಂಬುದರ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.

ರಾಮಮಂದಿರ ವಿಷಯ ಪ್ರಧಾನ

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಆಗಿರುವುದು ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಯ ಪ್ರಮುಖ ಅಸ್ತ್ರವಾಗಿದೆ. ಪ್ರಧಾನಿ ನರೇಂದ್ರ ಮೋದಿ, ಯೋಗಿ ಆದಿತ್ಯನಾಥ್‌ ಅವರು ಅಬ್ಬರದ ಪ್ರಚಾರದ ವೇಳೆ ರಾಮಮಂದಿರ ನಿರ್ಮಾಣ, ಅದು ಹೇಗೆ ಉತ್ತರ ಪ್ರದೇಶದ ಅಸ್ಮಿತೆ ಎಂಬುದರ ಕುರಿತು ಹಲವು ಬಾರಿ ಪ್ರಸ್ತಾಪಿಸಿದ್ದಾರೆ. ಇದರಿಂದಾಗಿ, ಪ್ರತಿಪಕ್ಷಗಳೂ ರಾಮನ ಜಪ ಮಾಡುವಂತಾಗಿದೆ. ವಾರಾಣಸಿಯಲ್ಲಿ ನಾಮಪತ್ರ ಸಲ್ಲಿಕೆಗೆ ಮೊದಲು ನರೇಂದ್ರ ಮೋದಿ ಅವರು ರಾಮಮಂದಿರಕ್ಕೆ ಭೇಟಿ ನೀಡಿರುವುದೂ ಪ್ರಮುಖ ಅಂಶವಾಗಿದೆ. ಅಷ್ಟರಮಟ್ಟಿಗೆ, ಉತ್ತರ ಪ್ರದೇಶದಲ್ಲಿ ರಾಮಮಂದಿರವು ಲೋಕಸಭೆ ಚುನಾವಣೆಯ ಪ್ರಬಲ ವಿಷಯವಾಗಿದೆ.

Ram Mandir

ಕಾಂಗ್ರೆಸ್‌-ಎಸ್‌ಪಿ ಮೈತ್ರಿಯ ರಣತಂತ್ರವೇನು?

ಇಂಡಿಯಾ ಒಕ್ಕೂಟದ ಸದಸ್ಯ ಪಕ್ಷಗಳೂ ಆದ ಬಿಜೆಪಿ ಹಾಗೂ ಸಮಾಜವಾದಿ ಪಕ್ಷವು ಉತ್ತರ ಪ್ರದೇಶದಲ್ಲಿ ಮೈತ್ರಿ ಮಾಡಿಕೊಂಡಿದ್ದು, ಸೀಟುಗಳನ್ನು ಹಂಚಿಕೊಂಡು ಚುನಾವಣೆ ಕಣಕ್ಕಿಳಿದಿವೆ. 2019ರಲ್ಲಿ ಬಿಎಸ್‌ಪಿ ಜತೆ ಮೈತ್ರಿ ಮಾಡಿಕೊಂಡು, ಎಡವಿದ ಸಮಾಜವಾದಿ ಪಕ್ಷವು ಈ ಬಾರಿ ಹೊಸ ಹುರುಪಿನೊಂದಿಗೆ ಕಣಕ್ಕಿಳಿದಿದೆ. 2022ರ ವಿಧಾನಸಭೆ ಚುನಾವಣೆಯಲ್ಲಿ ಶೇ.3ರಷ್ಟು ಮತ ಪಡೆದರೂ ಕಾಂಗ್ರೆಸ್‌ ಉತ್ಸಾಹದಿಂದ ಪ್ರಚಾರ ಕೈಗೊಳ್ಳುತ್ತಿದೆ. ಉತ್ತರ ಪ್ರದೇಶದಲ್ಲಿ ಶೇ.20ರಷ್ಟು ಮುಸ್ಲಿಮರ ಮತಗಳಿದ್ದು, ಇವುಗಳನ್ನು ಪಡೆಯಲು ಸಮಾಜವಾದಿ ಪಕ್ಷವು ರಣತಂತ್ರ ರೂಪಿಸುತ್ತಿದೆ. ಕಾಂಗ್ರೆಸ್‌ ಹಾಗೂ ಎಸ್‌ಪಿ ಮೈತ್ರಿಕೂಟದ ಅಭ್ಯರ್ಥಿಗಳು, ನಾಯಕರು ಜತೆಗೂಡಿ ದಲಿತರು, ಮುಸ್ಲಿಮರು ಹಾಗೂ ಹಿಂದುಳಿದವರ ಮತಗಳನ್ನು ಸೆಳೆಯಲು ಕಸರತ್ತು ನಡೆಸುತ್ತಿದ್ದಾರೆ. ಇದು ಚುನಾವಣೆಯಲ್ಲಿ ಹೇಗೆ ಫಲ ನೀಡಲಿದೆ ಎಂಬುದು ಫಲಿತಾಂಶದ ಬಳಿಕವೇ ಗೊತ್ತಾಗಲಿದೆ.

ಮಾಯಾವತಿ ಮಾಡುವರೇ ಕಮಾಲ್?‌

ಬಹುಜನ ಸಮಾಜ ಪಕ್ಷದ ಮಾಯಾವತಿ ಅವರು ಒಂದು ಕಾಲದಲ್ಲಿ ಇಡೀ ರಾಜ್ಯಾದ್ಯಂತ ಪ್ರಾಬಲ್ಯ ಹೊಂದಿದ್ದರು. ಆದರೀಗ, ಅವರ ವರ್ಚಸ್ಸು, ಪಕ್ಷದ ಹಿಡಿತ ಸಡಿಲವಾಗಿದೆ. 2014ರ ಲೋಕಸಭೆ ಚುನಾವಣೆಯಲ್ಲಿ ಶೇ.19.70ರಷ್ಟು ಮತಗಳನ್ನು ಪಡೆದರೂ ಬಿಎಸ್‌ಪಿ ಒಂದೇ ಒಂದು ಸೀಟು ಗೆದ್ದಿರಲಿಲ್ಲ. ಇನ್ನು, 2019ರ ಲೋಕಸಭೆ ಚುನಾವಣೆಯಲ್ಲಿ ಎಸ್‌ಪಿ ಜತೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದರೂ 10 ಸೀಟುಗಳು ಮಾತ್ರ ಲಭಿಸಿದ್ದವು. ಇನ್ನು 2022ರ ವಿಧಾನಸಭೆ ಚುನಾವಣೆಯಲ್ಲಿ ಬಿಎಸ್‌ಪಿ ಮತ ಪ್ರಮಾಣವು ಶೇ.12.8ಕ್ಕೆ ಕುಸಿದಿದೆ. ಮುಸ್ಲಿಮರ ಮತಗಳು ಎಂದೋ ಬಿಎಸ್‌ಪಿಯಿಂದ ದೂರಾಗಿವೆ. ಈಗೇನಿದ್ದರೂ ದಲಿತರು, ಹಿಂದುಳಿದವರ ಮತಗಳೇ ಬಿಎಸ್‌ಪಿಯ ಆಧಾರವಾಗಿವೆ. ಇಷ್ಟಾದರೂ, ಟಕ್ಕರ್‌ ಕೊಡಲು ಮಾಯಾವತಿ ರೆಡಿಯಾಗಿದ್ದಾರೆ.

Mayavati

ಯೋಗಿ ಎಂಬ ಬಲಿಷ್ಠ ನಾಯಕ

ಫೈರ್‌ಬ್ರ್ಯಾಂಡ್‌ ನಾಯಕ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ದೇಶದಲ್ಲಿಯೇ ಪ್ರಧಾನಿ ನರೇಂದ್ರ ಮೋದಿ, ಅಮಿತ್‌ ಶಾ ನಂತರ ಬಿಜೆಪಿಯಲ್ಲಿ ಹೆಚ್ಚು ವರ್ಚಸ್ಸು ಇರುವ ನಾಯಕರಾಗಿದ್ದಾರೆ. ಹಾಗಾಗಿಯೇ, ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ 109 ರ‍್ಯಾಲಿ ಸೇರಿ ಬಿಹಾರ, ಮಧ್ಯಪ್ರದೇಶ, ರಾಜಸ್ಥಾನ, ಪಶ್ಚಿಮ ಬಂಗಾಳ, ಉತ್ತರಾಖಂಡ ಹಾಗೂ ಜಮ್ಮು-ಕಾಶ್ಮೀರದಲ್ಲಿ ಒಟ್ಟು 135 ಚುನಾವಣೆ ಸಮಾವೇಶಗಳನ್ನು ಕೈಗೊಂಡಿದ್ದಾರೆ. ಅದರಲ್ಲೂ, 2017ರಿಂದಲೂ ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿರುವ ಯೋಗಿ ಆದಿತ್ಯನಾಥ್‌ ಅವರು ರಾಜ್ಯದಲ್ಲಿ ಅಪರಾಧವನ್ನು ನಿಯಂತ್ರಿಸುವ ಜತೆಗೆ ಅಭಿವೃದ್ಧಿಗೂ ಆದ್ಯತೆ ನೀಡಿ ವರ್ಚಸ್ವಿ ನಾಯಕ ಎನಿಸಿದ್ದಾರೆ. ರಾಜ್ಯದಲ್ಲಿ ಇವರ ನಾಯಕತ್ವವೂ ಬಿಜೆಪಿಗೆ ವರದಾನವಾಗಿದೆ.

Yogi Adityanath

ಜಾತಿ ರಾಜಕಾರಣದ ಸಮೀಕರಣ

ಉತ್ತರ ಪ್ರದೇಶದಲ್ಲಿ ದಶಕಗಳಿಂದಲೂ ಚುನಾವಣೆಗಳಲ್ಲಿ ಜಾತಿವಾರು ಮತಗಳ ಸಮೀಕರಣವೇ ನಿರ್ಣಾಯಕವಾಗಿದೆ. 1990ರಿಂದ 2012ರವರೆಗೆ ಉತ್ತರ ಪ್ರದೇಶದಲ್ಲಿ ದಲಿತರು ಹಾಗೂ ಒಬಿಸಿ ಮತಗಳು ಬಿಜೆಪಿಯಿಂದ ದೂರವೇ ಇದ್ದವು. ಆದರೆ, 2014ರಿಂದ ರಾಜ್ಯದಲ್ಲಿ ಜಾಟವರ ಹೊರತಾದ ದಲಿತರು, ಯಾದವರ ಹೊರತಾದ ಒಬಿಸಿಯವರು ಬಿಜೆಪಿಯ ಹಿಂದುತ್ವ ರಾಜಕಾರಣಕ್ಕೆ ಬಲ ತುಂಬುತ್ತಿದ್ದಾರೆ. ಮೇಲ್ವರ್ಗದವರ ಮತಗಳು ಬಿಜೆಪಿಗೆ ಸಲೀಸಾಗಿ ಲಭಿಸಲಿವೆ. ಆದರೆ, ಜಾತಿ ಗಣತಿ, ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ಬದಲಾಯಿಸುತ್ತದೆ, ಮೀಸಲಾತಿಯನ್ನು ಕಿತ್ತೊಗೆಯುತ್ತದೆ ಎಂದು ಪ್ರತಿಪಕ್ಷಗಳು ಅಬ್ಬರದ ಪ್ರಚಾರ ಮಾಡುತ್ತಿದ್ದು, ಈ ಅಂಶಗಳು ಯಾವ ರೀತಿಯ ಪರಿಣಾಮ ಬೀರಲಿವೆ ಎಂಬ ಕುತೂಹಲ ಮೂಡಿದೆ.

ಇದನ್ನೂ ಓದಿ: Narendra Modi: ನೆಹರು-ಗಾಂಧಿ ಕುಟುಂಬಸ್ಥರಿಂದ ಸಂವಿಧಾನಕ್ಕೆ ಧಕ್ಕೆ; ಪ್ರಧಾನಿ ಮೋದಿ ವಾಗ್ದಾಳಿ

Continue Reading
Advertisement
Singer Suchitra makes shocking aligeations against shahrukh khan
ಬಾಲಿವುಡ್8 mins ago

Singer Suchitra: ಶಾರುಖ್ – ಕರಣ್ ಸಲಿಂಗಿಗಳು ಎಂದು ಹೇಳಿ ವಿವಾದ ಸೃಷ್ಟಿಸಿದ ತಮಿಳು ಗಾಯಕಿ!

Lok Sabha Election 2024
ವೈರಲ್ ನ್ಯೂಸ್18 mins ago

Lok Sabha Election 2024: ʼನನ್ನ ಸ್ಟೈಲು ಬೇರೇನೆ…ʼ; ಕತ್ತೆ ಮೂಲಕ ಪ್ರಚಾರ ನಡೆಸುವ ಅಭ್ಯರ್ಥಿಯ ಕಾರ್ಯ ವೈಖರಿ ಈಗ ವೈರಲ್‌

IPL 2024
ಕ್ರೀಡೆ19 mins ago

IPL 2024 : ಹಾರ್ದಿಕ್ ಪಾಂಡ್ಯಗೆ ನಿಷೇಧ ಹೇರಿದ ಬಿಸಿಸಿಐ; ಮುಂದಿನ ಪಂದ್ಯದಲ್ಲಿ ಆಡದಂತೆ ತಾಕೀತು

natural ice cream 1 rajamarga coumn
ಅಂಕಣ26 mins ago

ರಾಜಮಾರ್ಗ ಅಂಕಣ: ಅವರ ನೆನಪೇ ನ್ಯಾಚುರಲ್‌ ಐಸ್‌ಕ್ರೀಂನ ತಾಜಾ ಹಣ್ಣಿನ ರುಚಿ, ಪರಿಮಳದಂತೆ!

naturals ic cream raghunandan kamath
ಶ್ರದ್ಧಾಂಜಲಿ52 mins ago

Raghunandan Kamath: ʼನ್ಯಾಚುರಲ್ಸ್‌ʼ ಖ್ಯಾತಿಯ ʼಐಸ್‌ಕ್ರೀಂ ಮ್ಯಾನ್‌ʼ ರಘುನಂದನ ಕಾಮತ್‌ ಇನ್ನಿಲ್ಲ

IPL 2024
ಪ್ರಮುಖ ಸುದ್ದಿ57 mins ago

IPL 2024 : ಸಹ ಆಟಗಾರ ರೊಮಾರಿಯೊ ಶೆಫರ್ಡ್​ಗೆ ಆಟೋಗ್ರಾಫ್​ ಕೊಟ್ಟ ರೋಹಿತ್​ , ಚಿತ್ರಗಳು ಇಲ್ಲಿವೆ

Kajal Aggarwal Kannappa Movie Entry
ಟಾಲಿವುಡ್1 hour ago

Kajal Aggarwal: ವಿಷ್ಣು ಮಂಚು `ಕಣ್ಣಪ್ಪ’ ಚಿತ್ರಕ್ಕೆ ಕಾಜಲ್ ಅಗರ್​ವಾಲ್​​ ಎಂಟ್ರಿ; ಪಾತ್ರ ಏನಿರಬಹುದು?

White House
ವಿದೇಶ1 hour ago

White House: ಭಾರತದಲ್ಲಿದೆ ಅತ್ಯುತ್ತಮ ಪ್ರಜಾಪ್ರಭುತ್ವ ವ್ಯವಸ್ಥೆ: ಅಮೆರಿಕದ ಮೆಚ್ಚುಗೆ; ಮೋದಿ ನಾಯಕತ್ವಕ್ಕೂ ಸಿಕ್ತು ಶಹಬ್ಬಾಸ್‌ಗಿರಿ

IPL 2024
ಕ್ರೀಡೆ1 hour ago

IPL 2024 : ಆರ್​ಸಿಬಿ- ಚೆನ್ನೈ ಪಂದ್ಯದ ವೇಳೆ ಮಳೆ ಬಂದು ರದ್ದಾದರೆ ಮುಂದೇನಾಗುವುದು?

hd deve gowda birthday
ಪ್ರಮುಖ ಸುದ್ದಿ1 hour ago

HD Deve Gowda: ಈ ಅವಮಾನದಿಂದ ಪಾರು ಮಾಡು: 93ರ ಜನ್ಮದಿನಂದು ದೇವೇಗೌಡರ ಮೌನ ಪ್ರಾರ್ಥನೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ14 hours ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ1 day ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ2 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು2 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ3 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ3 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ4 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20244 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌