Lok Sabha Election 2024: ಏ. 26ಕ್ಕೆ ವೋಟ್‌ ಹಾಕಿ ಈ ಹೋಟೆಲ್‌ಗಳಿಗೆ ಬನ್ನಿ; ಏನೇ ತಿಂದ್ರೂ 10 ಪರ್ಸೆಂಟ್‌ ಡಿಸ್ಕೌಂಟ್‌! - Vistara News

Lok Sabha Election 2024

Lok Sabha Election 2024: ಏ. 26ಕ್ಕೆ ವೋಟ್‌ ಹಾಕಿ ಈ ಹೋಟೆಲ್‌ಗಳಿಗೆ ಬನ್ನಿ; ಏನೇ ತಿಂದ್ರೂ 10 ಪರ್ಸೆಂಟ್‌ ಡಿಸ್ಕೌಂಟ್‌!

Lok Sabha Election 2024: ಲೋಕಸಭಾ ಚುನಾವಣೆಗೆ ದಿನಗಣನೆ ಶುರುವಾಗಿದೆ. ಹೀಗಾಗಿ ಮತ ಹಾಕುವವರಿಗೆ ಆಫರ್ ಮೇಲೆ ಆಫರ್‌ಗಳು ಬರುತ್ತಿವೆ. ಈ ಬಗ್ಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ಬೆನ್ನಲ್ಲೇ ಮತದಾನ ಮಾಡಿದವರಿಗೆ ಆಫರ್ ನೀಡಲಾಗಿದೆ. ಬಹುತೇಕ ಹೋಟೆಲ್‌ಗಳಲ್ಲಿ 10% ಆಫರ್ ನೀಡಲಾಗಿದೆ. ಮತ ಚಲಾವಣೆ ಪ್ರತಿಯೊಬ್ಬರ ಕರ್ತವ್ಯವಾಗಿದೆ. ಹೀಗಾಗಿ ನಮ್ಮದೊಂದು ಸಣ್ಣ ಪ್ರಯತ್ನ ಎಂದು ಹೋಟೆಲ್‌ ಮಾಲೀಕರು ಹೇಳುತ್ತಾರೆ.

VISTARANEWS.COM


on

Lok Sabha Election 2024 Vote on April 26 and get 10 percent discount on these hotels
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಮತದಾನ ಹೆಚ್ಚಳ ಮಾಡಲು ನಾನಾ ಕಸರತ್ತುಗಳು ನಡೆಯುತ್ತಿವೆ. ಸರ್ಕಾರಿ ಕಚೇರಿ, ಐಟಿ ಕಂಪನಿಗಳಿಗೆ ವೇತನ ಸಹಿತ ರಜೆ ಘೋಷಣೆ ಮಾಡಲಾಗಿದೆ. ಇನ್ನು ಬೆಂಗಳೂರಿನಲ್ಲಿ ಕೆಲವು ಹೋಟೆಲ್‌ ಮಾಲೀಕರು ತಮ್ಮದೊಂದು ಪ್ರಯತ್ನಕ್ಕೆ ಕೈಹಾಕಿದ್ದಾರೆ. ಏಪ್ರಿಲ್‌ 26ರ ಮೊದಲ ಹಂತದ ಚುನಾವಣೆ ದಿನ ಬೆಂಗಳೂರಿನಲ್ಲಿ ಮತ ಹಾಕಿ, ತಮ್ಮ ಹೋಟೆಲ್‌ಗಳಿಗೆ ಬಂದರೆ ಶೇಕಡಾ 10ರಷ್ಟು ರಿಯಾಯಿತಿ (Discounts in Hotels) ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಮತ ಹಾಕಿ, ಬೆರಳು ತೋರಿಸಿ. ಪ್ರತಿ ಐಟಂ ಮೇಲೆ ಶೇಕಡಾ 10 ಡಿಸ್ಕೌಂಟ್‌ ಪಡೆಯಿರಿ ಎಂದು ಹೇಳಿದ್ದಾರೆ.

ಲೋಕಸಭಾ ಚುನಾವಣೆಗೆ ದಿನಗಣನೆ ಶುರುವಾಗಿದೆ. ಹೀಗಾಗಿ ಮತ ಹಾಕುವವರಿಗೆ ಆಫರ್ ಮೇಲೆ ಆಫರ್‌ಗಳು ಬರುತ್ತಿವೆ. ಈ ಬಗ್ಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ಬೆನ್ನಲ್ಲೇ ಮತದಾನ ಮಾಡಿದವರಿಗೆ ಆಫರ್ ನೀಡಲಾಗಿದೆ. ಬಹುತೇಕ ಹೋಟೆಲ್‌ಗಳಲ್ಲಿ 10% ಆಫರ್ ನೀಡಲಾಗಿದೆ. ಮತ ಚಲಾವಣೆ ಪ್ರತಿಯೊಬ್ಬರ ಕರ್ತವ್ಯವಾಗಿದೆ. ಹೀಗಾಗಿ ಅವರಲ್ಲಿ ಜಾಗೃತಿ ಮೂಡಿಸಲು (Voter awareness) ನಮ್ಮದೊಂದು ಸಣ್ಣ ಪ್ರಯತ್ನ ಎಂದು ಹೋಟೆಲ್‌ ಮಾಲೀಕರು ಹೇಳುತ್ತಾರೆ.

ನಿಸರ್ಗ ಗ್ರ್ಯಾಂಡ್‌, ಕೆಫೆ ಉಡುಪಿ ರುಚಿ, ಅಯ್ಯಂಗಾರ್‌ ವೆನ್‌ ಫ್ರೆಶ್‌, ಕಾಮತ್‌ ಸೇರಿದಂತೆ ಹಲವು ಹೋಟೆಲ್‌ಗಳು ಆಫರ್‌ಗಳನ್ನು ನೀಡಿವೆ.

Lok Sabha Election 2024 Vote on April 26 and get 10 percent discount on these hotels

ಏ.26ರಂದು ಬೆಂಗಳೂರು ಸೇರಿ 3 ನಗರಗಳಲ್ಲಿ ಮತದಾರರಿಗೆ ರ‍್ಯಾಪಿಡೋದಿಂದ ಉಚಿತ ರೈಡ್‌ ಆಫರ್‌

ಲೋಕಸಭಾ ಚುನಾವಣೆಯಲ್ಲಿ (Lok Sabha Election 2024) ಮತದಾನ ಪ್ರೋತ್ಸಾಹಿಸಲು ಉಚಿತ ಹಾಗೂ ರಿಯಾಯಿತಿ ದರದಲ್ಲಿ ಊಟ, ತಿಂಡಿ ವಿತರಣೆಗೆ ಹಲವು ಹೋಟೆಲ್‌ಗಳಲ್ಲಿ ಮುಂದಾಗಿದೆ. ಅದೇ ರೀತಿ ಮತದಾರರು ತಮ್ಮ ಹಕ್ಕು ಚಲಾವಣೆ ಮಾಡಲು ಅನುಕೂಲವಾಗಲು ಭಾರತದ ಅಗ್ರಗಣ್ಯ ಪ್ರಯಾಣ ಅಪ್ಲಿಕೇಶನ್ ರ‍್ಯಾಪಿಡೋ ಸಂಸ್ಥೆ “ಸವಾರಿ ಜಿಮ್ಮೆದಾರಿ ಕಿ” ಉಪಕ್ರಮದ ಭಾಗವಾಗಿ ಏ.26ರಂದು ಬೆಂಗಳೂರು, ಮೈಸೂರು ಹಾಗೂ ಮಂಗಳೂರು ನಗರದಲ್ಲಿ ಮತದಾರರಿಗೆ ರ‍್ಯಾಪಿಡೋ ಉಚಿತ ಬೈಕ್‌ ಸವಾರಿ (Rapido Bike Taxi) ಒದಗಿಸುವಾಗಿ ಘೋಷಿಸಿದೆ. ವಿಶೇಷವಾಗಿ ಬೆಂಗಳೂರಿನಲ್ಲಿ ವಿಶೇಷಚೇತನರು ಮತ್ತು ಹಿರಿಯ ನಾಗರಿಕ ಮತದಾರರಿಗೆ ಉಚಿತ ಆಟೋ ಮತ್ತು ಕ್ಯಾಬ್ ರೈಡ್‌ ಸೌಲಭ್ಯ ಸಿಗಲಿದೆ.

ಭಾರತದ ಚುನಾವಣಾ ಆಯೋಗ (ಇಸಿಐ) ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸಹಯೋಗದೊಂದಿಗೆ ರ‍್ಯಾಪಿಡೋ, ಭಾರತದ ಸಾರ್ವತ್ರಿಕ ಚುನಾವಣೆ-2024 ಸಂದರ್ಭದಲ್ಲಿ ಬೆಂಗಳೂರಿನಲ್ಲಿರುವ ವಿಶೇಷಚೇತನರು ಮತ್ತು ಹಿರಿಯ ನಾಗರಿಕ ಮತದಾರರಿಗೆ ಉಚಿತ ಆಟೋ ಮತ್ತು ಕ್ಯಾಬ್ ರೈಡ್‌ ಒದಗಿಸಲು ನಿರ್ಧರಿಸಿದೆ. ಹೀಗಾಗಿ ಏ.26ರಂದು ಬೆಂಗಳೂರಿನ ಮತದಾರರು ರ‍್ಯಾಪಿಡೋ ಉಚಿತ ಸವಾರಿ ಅನುಕೂಲ ಪಡೆಯಬಹುದಾಗಿದೆ.

ಮತದಾನದ (ಏ.26) ದಿನದಂದು, ಮತದಾರರು ‘VOTENOW’ ಕೋಡ್ ಅನ್ನು ಬಳಸಿಕೊಂಡು ರ‍್ಯಾಪಿಡೋ ಅಪ್ಲಿಕೇಶನ್‌ನಲ್ಲಿ ಉಚಿತ ಸವಾರಿಗಳನ್ನು ಪಡೆಯಬಹುದು ಮತ್ತು ತಮ್ಮ ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಬಹುದು. ಈ ಉಪಕ್ರಮವು ನಿವಾಸಿಗಳ ಮತದಾನದ ಹಕ್ಕು ಚಲಾವಣೆ ಸುಲಭಗೊಳಿಸುವ ಗುರಿ ಹೊಂದಿದೆ. ಚುನಾವಣಾ ದಿನದಂದು ಉಚಿತ ಸವಾರಿಗಳನ್ನು ಒದಗಿಸಲು 100ಕ್ಕೂ ಹೆಚ್ಚು ನಗರಗಳಲ್ಲಿ 10 ಲಕ್ಷಕ್ಕೂ ಹೆಚ್ಚು ಕ್ಯಾಪ್ಟನ್‌ಗಳನ್ನು ರ‍್ಯಾಪಿಡೋ ನಿಯೋಜಿಸುತ್ತದೆ. ಭಾರತದ ಚುನಾವಣಾ ಆಯೋಗ ಬೆಂಬಲದೊಂದಿಗೆ, ರ‍್ಯಾಪಿಡೋ ಕರ್ನಾಟಕದ ಮತದಾರರಿಗೆ ಬೆಂಗಳೂರು, ಮೈಸೂರು ಮತ್ತು ಮಂಗಳೂರು ನಗರಗಳಾದ್ಯಂತ ಚುನಾವಣಾ ದಿನದಂದು ಉಚಿತ ಬೈಕ್ ಟ್ಯಾಕ್ಸಿ ಸವಾರಿಗಳನ್ನು ನೀಡಲಿದೆ.

ಕರ್ನಾಟಕ ರಾಜ್ಯ ಚುನಾವಣಾ ಆಯೋಗದೊಂದಿಗಿನ ರ‍್ಯಾಪಿಡೋ ಪಾಲುದಾರಿಕೆಯು ಉತ್ತಮ ಸಮಾಜಕ್ಕಾಗಿ ಧನಾತ್ಮಕ ಬದಲಾವಣೆಯನ್ನು ಪ್ರೇರೇಪಿಸುವ ಬದ್ಧತೆ ಹೊಂದಿದೆ. ಈ ಕುರಿತು ರ‍್ಯಾಪಿಡೋ ಸಹ-ಸಂಸ್ಥಾಪಕ ಪವನ್ ಗುಂಟುಪಲ್ಲಿ ಮಾತನಾಡಿ, “ಭಾರತೀಯ ಸಾರ್ವತ್ರಿಕ ಚುನಾವಣೆ 2024 ರಲ್ಲಿ ಮತದಾನ ಮಾಡುವ ಮೂಲಕ ಬೆಂಗಳೂರು, ಮೈಸೂರು ಮತ್ತು ಮಂಗಳೂರಿನ ಪ್ರತಿಯೊಬ್ಬ ಮತದಾರರು ತಮ್ಮ ನಾಗರಿಕ ಕರ್ತವ್ಯವನ್ನು ಯಶಸ್ವಿಯಾಗಿ ಪೂರೈಸಲು ನಾವು ಈ ಉಪಕ್ರಮವನ್ನು ಕೈಗೊಳ್ಳುತ್ತಿದ್ದೇವೆ. ಬೆಂಗಳೂರಿನ ಮತದಾರರು ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸುವುದನ್ನು ಖಚಿತಪಡಿಸಿಕೊಳ್ಳಲು ನಾವು ಲಭ್ಯವಿರುವ ಎಲ್ಲಾ ಸಂಪನ್ಮೂಲಗಳನ್ನು ನಿಯೋಜಿಸಿದ್ದೇವೆ. ವಿಶೇಷವಾಗಿ ವಿಶೇಷಚೇತನರು ಮತ್ತು ಹಿರಿಯ ನಾಗರಿಕ ಮತದಾರರು ತಮ್ಮ ಪ್ರಜಾಸತ್ತಾತ್ಮಕ ಹಕ್ಕನ್ನು ಚಲಾಯಿಸಲು ಸಮಾನ ಅವಕಾಶ ಹೊಂದಿದ್ದಾರೆ ಎಂದು ನಾವು ನಿರ್ದಿಷ್ಟವಾಗಿ ಖಚಿತಪಡಿಸಿಕೊಳ್ಳಲು ಬಯಸುತ್ತೇವೆ. ಅವರಿಗೆ ಉಚಿತ ಆಟೋ ಮತ್ತು ಕ್ಯಾಬ್ ಸವಾರಿಗಳನ್ನು ವಿಸ್ತರಿಸುವ ಮೂಲಕ, ನಾವು ಒಳಗೊಳ್ಳುವಿಕೆ ಮತ್ತು ಸಾಮಾಜಿಕ ಜವಾಬ್ದಾರಿಗೆ ನಮ್ಮ ಬದ್ಧತೆಯನ್ನು ದ್ವಿಗುಣಗೊಳಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಮುಂದುವರೆದು, ಈ ಉಚಿತ ಸವಾರಿಗಳನ್ನು ನೀಡುವ ಮೂಲಕ, ನಾವು ಕರ್ನಾಟಕದಲ್ಲಿ ನಮ್ಮ ರ‍್ಯಾಪಿಡೋ ನಾಯಕರು ಕೇವಲ ಚಾಲಕರಿಗಿಂತ ಹೆಚ್ಚಿನ ಮತದಾರರು, ಹೆಚ್ಚಿನ ಮತದಾನವನ್ನು ಸಕ್ರಿಯಗೊಳಿಸುತ್ತಾರೆ ಮತ್ತು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದಲ್ಲಿ ಹೆಚ್ಚು ಪ್ರಾತಿನಿಧಿಕ ಚುನಾವಣಾ ವ್ಯವಸ್ಥೆಯನ್ನು ಉತ್ತೇಜಿಸುತ್ತಾರೆ ಎಂದರು.

ಕರ್ನಾಟಕ ರಾಜ್ಯ ಚುನಾವಣಾ ಆಯೋಗದೊಂದಿಗೆ ರ‍್ಯಾಪಿಡೋ ಪಾಲುದಾರಿಕೆಯು ಉತ್ತಮ ಸಮಾಜಕ್ಕಾಗಿ ಬದಲಾವಣೆಯನ್ನು ಪ್ರೇರೇಪಿಸುವ ಬ್ರಾಂಡ್ ಆಗಿರುವ ಅದರ ಬದ್ಧತೆಯನ್ನು ಒತ್ತಿಹೇಳುತ್ತದೆ. ಈ ರೀತಿಯ ಉಪಕ್ರಮಗಳ ಮೂಲಕ, ರ‍್ಯಾಪಿಡೋ ದೇಶಾದ್ಯಂತ ಜನರ ಜೀವನದಲ್ಲಿ ಅರ್ಥಪೂರ್ಣ ಬದಲಾವಣೆಯನ್ನು ಮಾಡುವ ತನ್ನ ಸಮರ್ಪಣೆಯನ್ನು ಪ್ರದರ್ಶಿಸುವುದನ್ನು ಮುಂದುವರೆಸಿದೆ. ಈ ಉಪಕ್ರಮವು ತಮ್ಮ ಮತ ಚಲಾಯಿಸುವ ಮೂಲಕ ತಮ್ಮ ಪ್ರಜಾಸತ್ತಾತ್ಮಕ ಹಕ್ಕನ್ನು ಚಲಾಯಿಸಲು ಕರ್ನಾಟಕದ ಮತದಾರರ ಜನಸಂಖ್ಯೆಯನ್ನು ಸಶಕ್ತಗೊಳಿಸಲು ಮತ್ತು ಉತ್ತೇಜಿಸಲು ರ‍್ಯಾಪಿಡೋ ಅವರ ಸಮರ್ಪಣೆಯನ್ನು ಒತ್ತಿಹೇಳುತ್ತದೆ.

ಇದನ್ನೂ ಓದಿ | Bike Taxi Services: ಬೈಕ್ ಟ್ಯಾಕ್ಸಿ ಸವಾರರಿಗೆ ಕಿರುಕುಳ ನೀಡುವವರ ವಿರುದ್ಧ ಕ್ರಮಕ್ಕೆ ಹೈಕೋರ್ಟ್‌ ಸೂಚನೆ

ನಾಗರಿಕ ಒಗ್ಗೂಡುವಿಕೆ ಪೂರ್ವಭಾವಿ ಹೆಜ್ಜೆಯಲ್ಲಿ, ರ‍್ಯಾಪಿಡೋ ತನ್ನ ಎಲ್ಲಾ ಸಂಪನ್ಮೂಲಗಳನ್ನು ಭಾರತೀಯ ಚುನಾವಣಾ ಆಯೋಗದೊಂದಿಗೆ (ಇಸಿಐ) ಕೈಜೋಡಿಸುವ ಮೂಲಕ ಬೆಂಗಳೂರಿನ ಮತದಾರರಿಗೆ ಉಚಿತ ಬೈಕ್ ಟ್ಯಾಕ್ಸಿ, ಆಟೋ ಮತ್ತು ಕ್ಯಾಬ್ ರೈಡ್‌ಗಳನ್ನು ನೀಡುತ್ತಿದೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

Liquor ban : ಐದು ದಿನ ಮದ್ಯ ಮಾರಾಟಕ್ಕೆ ಬ್ರೇಕ್! ಜೂನ್‌ 1ರಿಂದ ಸಿಗಲ್ಲ ಎಣ್ಣೆ

Liquor ban: ಬೆಂಗಳೂರಿನಲ್ಲಿ ಜೂನ್‌ ಮೊದಲ ವಾರ ಎಣ್ಣೆ (ಮದ್ಯ) ಬೇಕು ಸಿಗುವುದಿಲ್ಲ. ಯಾಕೆಂದರೆ ಜೂ. 1ರಿಂದ ಐದು ದಿನಗಳ ಕಾಲ ಮದ್ಯ ಮಾರಾಟವನ್ನು ನಿಷೇಧ ಮಾಡಲಾಗಿದೆ. ಹೀಗಾಗಿ ಐದು ದಿನ ಮೊದಲೇ ಎಣ್ಣೆ ಪ್ರಿಯರು ಮದ್ಯ ಖರೀದಿಸಿ ಸ್ಟಾಕ್‌ ಮಾಡಲು (Dry day order) ಮುಂದಾಗಿದ್ದಾರೆ.

VISTARANEWS.COM


on

By

Liquor ban Dry day
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಮೊನ್ನೆ ಬೆಂಗಳೂರು ಜಿಲ್ಲಾಡಳಿತದ ಅದೊಂದು ಆದೇಶಕ್ಕೆ ಮದ್ಯ ಪ್ರಿಯರು ಮದ್ಯದಂಗಡಿಗಳಿಗೆ ಮುಗಿಬೀಳುತ್ತಿದ್ದಾರೆ. 5 ದಿನಗಳ ಕಾಲ ಮದ್ಯದಂಗಡಿಗಳು ಕ್ಲೋಸ್‌‌ (Liquor ban) ಆಗುವ ಕಹಿ ಸುದ್ದಿಯನ್ನು ಕೇಳಿದ್ದೆ ತಡ ಮದ್ಯಪ್ರಿಯರು ಈಗಿನಿಂದಲೇ ಎಣ್ಣೆ ಸ್ಟಾಕ್‌ ಇಟ್ಟುಕೊಳ್ಳಲು ಮುಂದಾಗುತ್ತಿದ್ದಾರೆ.

ಅಂದಹಾಗೇ ಲೋಕಸಭಾ ಚುನಾವಣೆ ಹಾಗೂ ವಿಧಾನ ಪರಿಷತ್‌ ಚುನಾವಣೆಯ ಫಲಿತಾಂಶ ಹೊರಬೀಳಲಿರುವ ಕಾರಣ ರಾಜಧಾನಿ ಬೆಂಗಳೂರಲ್ಲಿ ಒಂದು ವಾರದ ಕಾಲ ಮದ್ಯ ಮಾರಾಟದ ಮೇಲೆ ನಿಷೇಧ ಹೇರಲಾಗಿದೆ. ಮತ ಎಣಿಕೆ ಸಮಯದಲ್ಲಿ ಯಾವುದೇ ಅಹಿತಕರ ಘಟನೆ ನಡೆಯಬಾರದೆಂದು ಮುಂಜಾಗ್ರತಾ ಕ್ರಮವಾಗಿ ಮದ್ಯ ಮಾರಾಟವನ್ನು ನಿಷೇಧ (Liquor Bandh) ಮಾಡಿ ಮದ್ಯ ಮಾರಾಟ ರಹಿತ ದಿನಗಳೆಂದು (Dry day) ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ: Theft Case : ಚಿನ್ನ ಕದಿಯಲು ಬಂದು ಮದುವೆ ಮನೆಯವರಿಂದ ಧರ್ಮದೇಟು ತಿಂದ ಕಳ್ಳ

ಜೂನ್ 3 ರಂದು ಪದವೀಧರ ಕ್ಷೇತ್ರ ಚುನಾವಣೆಗೆ ಮತದಾನ ನಡೆಯಲಿದೆ. ಹೀಗಾಗಿ ಜೂನ್ 1ರ ಸಂಜೆ 4 ಗಂಟೆಯಿಂದ ಜೂನ್ 3 ರವರೆಗೆ ಬಾರ್ ಬಂದ್ ಬಂದ್‌ ಆಗಲಿದೆ. ಅದೇ ರೀತಿ, ಜೂನ್ 4 ರಂದು ದೇಶದಾದ್ಯಂತ ನಡೆದಿದ್ದ ಲೋಕಸಭಾ ಚುನಾವಣೆಯ ಮತ ಎಣಿಕೆ ಇದೆ. ಹಾಗಾಗಿ ಅಂದೂ ಸಹ ಮದ್ಯ ಮಾರಾಟ ಸಂಪೂರ್ಣ ಬಂದ್ ಆಗಲಿದೆ.

ಇನ್ನು ಜೂನ್ 6 ರಂದು ವಿಧಾನ ಪರಿಷತ್ತಿನ ಚುನಾವಣೆ ಮತ ಎಣಿಕೆ ಇರುವ ಕಾರಣ ಆ ದಿನವು ಬಾರ್ ಬಂದ್ ಮಾಡುವಂತೆ ಬೆಂಗಳೂರು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ. ಹೀಗಾಗಿ ಜೂನ್ ಮೊದಲ ವಾರ ಮದ್ಯ ಪ್ರಿಯರಿಗೆ ಎಣ್ಣೆ ಸಿಗುವುದು ಕಷ್ಟವಾಗಿದೆ. ಹೀಗಾಗಿ ಮದ್ಯಪ್ರಿಯರು ಈಗಿನಿಂದಲೇ ಎಣ್ಣೆ ಸ್ಟಾಕ್‌ ಇಟ್ಟುಕೊಳ್ಳೋಕೆ ಮುಗಿಬೀಳುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದೇಶ

Subramanian Swamy: ಮೋದಿ ವಿರೋಧಿ ಸುಬ್ರಮಣಿಯನ್‌ ಸ್ವಾಮಿ ವೋಟ್‌ ಹಾಕಿದ್ದು ಯಾರಿಗೆ‌ ನೋಡಿ!

Subramanian Swamy:ನಿನ್ನೆ ದೆಹಲಿಯ ಎಲ್ಲಾ 7ಕ್ಷೇತ್ರಗಳಲ್ಲೂ ಮತದಾನ ನಡೆದಿತ್ತು. ನಿಜಾಮುದ್ದೀನ್‌ ಪ್ರದೇಶದಲ್ಲಿ ಸುಬ್ರಮಣಿಯನ್‌ ಸ್ವಾಮಿ ಮತ ಚಲಾಯಿಸಿದ್ದರು. ಮತದಾನದ ಬಳಿಕ ಎಕ್ಸ್‌ನಲ್ಲಿ ಟ್ವೀಟ್‌ ಮಾಡಿರುವ ಸ್ವಾಮಿ, ಪೂರ್ವ ದೆಹಲಿಯ ಅಭ್ಯರ್ಥಿ, ಮಾಜಿ ಡೆಪ್ಯೂಟಿ ಮೇಯರ್‌ ಹರ್ಷ್‌ ಮಲ್ಹೋತ್ರ ಅವರಿಗೆ ನಾನು ವೋಟ್‌ ಮಾಡಿದ್ದೇನೆ. ಅವರು ಗೆದ್ದೇ ಗೆಲ್ಲುತ್ತಾರೆ ಎಂಬ ವಿಶ್ವಾಸ ಇದೆ ಎಂದು ಬಹಿರಂಗಪಡಿಸಿದ್ದಾರೆ.

VISTARANEWS.COM


on

subramanian swamy
Koo

ನವದೆಹಲಿ: ಸ್ವಪಕ್ಷ ನಾಯಕರು, ಪ್ರಧಾನಿ ಮೋದಿ(PM Narendra Modi) ವಿರುದ್ಧವೇ ಅಚ್ಚರಿಕೆಯ ಹೇಳಿಕೆ ನೀಡುವ ಮೂಲಕ ಸದಾ ಸುದ್ದಿಯಲ್ಲಿರುವ ಮಾಜಿ ಕೇಂದ್ರ ಸಚಿವ ಹಿರಿಯ ಬಿಜೆಪಿ ನಾಯಕ(BJP Leader) ಸುಬ್ರಮಣಿಯನ್‌ ಸ್ವಾಮಿ(Subramanian Swamy) ಮತ್ತೆ ಸದ್ದು ಮಾಡಿದ್ದಾರೆ. ಲೋಕಸಭೆ ಚುನಾವಣೆ(Lok Sabha Elections 2024)ಯ ಆರನೇ ಹಂತದ ಮತದಾನದ ವೇಳೆ ತಾವು ಯಾವ ಅಭ್ಯರ್ಥಿಗೆ ವೋಟ್‌ ಮಾಡಿರೋದಾಗಿ ಬಹಿರಂಗಪಡಿಸಿದ್ದಾರೆ. ಮತದಾನ ಅನ್ನೋದು ಅತ್ಯಂತ ಗೌಪ್ಯ ವಿಚಾರ. ಅದಾಗ್ಯೂ ಸ್ವಾಮಿ ತಮ್ಮ ಎಕ್ಸ್‌ ಖಾತೆಯಲ್ಲಿ ತಾವು ಯಾರಿಗೆ ಮತ ಚಲಾಯಿಸಿದ್ದು ಮತ್ತು ಆ ಅಭ್ಯರ್ಥಿ ಗೆದ್ದೇ ಗೆಲ್ಲುತ್ತಾರೆ ಎಂಬ ಭರವಸೆ ವ್ಯಕ್ತಪಡಿಸುವ ಮೂಲಕ ಭಾರೀ ಸುದ್ದಿಯಾಗಿದ್ದಾರೆ. ಮೋದಿಯನ್ನು ಬೈಯುತ್ತಲೇ ಅವರು ಬಿಜೆಪಿ ಪರ ಮತ ಚಲಾಯಿಸಿದ್ದಾರೆ.

ಸ್ವಾಮಿಯ ಟ್ವೀಟ್‌ನಲ್ಲಿ ಏನಿದೆ?

ನಿನ್ನೆ ದೆಹಲಿಯ ಎಲ್ಲಾ 7ಕ್ಷೇತ್ರಗಳಲ್ಲೂ ಮತದಾನ ನಡೆದಿತ್ತು. ನಿಜಾಮುದ್ದೀನ್‌ ಪ್ರದೇಶದಲ್ಲಿ ಸುಬ್ರಮಣಿಯನ್‌ ಸ್ವಾಮಿ ಮತ ಚಲಾಯಿಸಿದ್ದರು. ಮತದಾನದ ಬಳಿಕ ಎಕ್ಸ್‌ನಲ್ಲಿ ಟ್ವೀಟ್‌ ಮಾಡಿರುವ ಸ್ವಾಮಿ, ಪೂರ್ವ ದೆಹಲಿಯ ಬಿಜೆಪಿ ಅಭ್ಯರ್ಥಿ, ಮಾಜಿ ಡೆಪ್ಯೂಟಿ ಮೇಯರ್‌ ಹರ್ಷ್‌ ಮಲ್ಹೋತ್ರ ಅವರಿಗೆ ನಾನು ವೋಟ್‌ ಮಾಡಿದ್ದೇನೆ. ಅವರು ಗೆದ್ದೇ ಗೆಲ್ಲುತ್ತಾರೆ ಎಂಬ ವಿಶ್ವಾಸ ಇದೆ ಎಂದು ಬಹಿರಂಗಪಡಿಸಿದ್ದಾರೆ.

ಮತದಾನಕ್ಕೆ ಎರಡು ದಿನ ಮೊದಲೂ ಇಂತಹದ್ದೇ ಒಂದು ಪೋಸ್ಟ್‌ ಮಾಡಿದ್ದ ಅವರು ಹರ್ಷ್‌ ಮಲ್ಹೋತ್ರಾ ಅವರನ್ನು ಹೊಗಳಿದ್ದರು. “ಇದೇ ಬರುವ ಶನಿವಾರ ಬೆಳಗ್ಗೆ ನಾನು ಮತ ಚಲಾಯಿಸುತ್ತಿದ್ದೇನೆ. ನನ್ನ ಮತ ಪೂರ್ವ ದೆಹಲಿಯ ಬಿಜೆಪಿ ಅಭ್ಯರ್ಥಿ, ಮಾಜಿ ಡೆಪ್ಯೂಟಿ ಮೇಯರ್‌ ಹರ್ಷ್‌ ಮಲ್ಹೋತ್ರ ಅವರಿಗೆ. ಅವರೊಬ್ಬ ದಕ್ಷ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ದಾಖಲೆ ಇದೆ. ಸಂಸದರಾಗುವ ಎಲ್ಲಾ ಅರ್ಹತೆ ಅವರಿಗೆ ಇದೆ. ನಾನು ಪೂರ್ವ ನಿಜಾಮುದ್ಧೀನ್‌ ಪ್ರದೇಶದಲ್ಲಿ ವಾಸವಾಗಿದ್ದೇನೆ ಎಂದು ಟ್ವೀಟ್‌ ಮಾಡಿದ್ದರು.

ಇನ್ನು ಸ್ವಾಮಿಯವರ ಟ್ವೀಟ್‌ಗೆ ನೆಟ್ಟಿಗರು ವಿವಿಧ ರೀತಿಯಲ್ಲಿ ಕಮೆಂಟ್‌ ಮಾಡಿದ್ದು, ಶಾಹಿ ಹಾಕಿರುವ ಬೆರಳಿನೊಂದಿಗೆ ಫೊಟೋ ತೆಗೆದು ಅಪ್‌ಲೋಡ್‌ ಮಾಡಿ ಎಂದು ಅನೇಕ ಮನವಿ ಮಾಡಿದ್ದಾರೆ.

ಈ ಹಿಂದೆ ಸುಬ್ರಮಣಿಯನ್‌ ಸ್ವಾಮಿ, ಟ್ವಿಟರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಫಾಲೋ ಮಾಡುತ್ತಿರುವವರು ಮೂರ್ಖರು. ನರೇಂದ್ರ ಮೋದಿ ಅವರು ನನ್ನನ್ನು ಸಂಸದನನ್ನಾಗಿ ಮಾಡುವುದಿಲ್ಲ ಎಂದು ಫಾಲೋವರ್‌ಗಳು ಯಾವಾಗಲೂ ಹೇಳುತ್ತಿರುತ್ತಾರೆ. ಆದರೆ, ಮೂರ್ಖರಿಗೆ ಇದು ಗೊತ್ತಿಲ್ಲ. ನಾನು ಈಗಾಗಲೇ ಸಂಸತ್ತನ್ನು ಆರು ಬಾರಿ ಪ್ರವೇಶಿಸಿದ್ದೇನೆ. ಮೂರು ಬಾರಿ ಲೋಕಸಭೆ ಸದಸ್ಯನಾಗಿ, ಮೂರು ಬಾರಿ ರಾಜ್ಯಸಭೆ ಸದಸ್ಯನಾಗಿದ್ದೇನೆ. ನಾನು ಮನಸ್ಸು ಮಾಡಿದರೆ ವಾರಾಣಸಿಯಿಂದಲೇ ಸ್ಪರ್ಧಿಸಿ ಏಳನೇ ಬಾರಿ ಲೋಕಸಭೆ ಪ್ರವೇಶಿಸಬಲ್ಲೆ” ಎಂದು ಟ್ವೀಟ್‌ ಮಾಡಿದ್ದರು.

ಇದನ್ನೂ ಓದಿ: IndiGo Flight: ಗಾಂಜಾ ಮತ್ತಿನಲ್ಲಿ ಹಾರುತ್ತಿದ್ದ ವಿಮಾನದ ಬಾಗಿಲು ತೆರೆಯಲು ಯತ್ನಿಸಿದ ಕಿಡಿಗೇಡಿ; ಮುಂದೇನಾಯ್ತು?

Continue Reading

ದೇಶ

Lok Sabha Election: 6ನೇ ಹಂತದಲ್ಲಿ 59% ಮತದಾನ ; ಬಂಗಾಳದಲ್ಲಿ ವೋಟಿಂಗ್‌ ಹೆಚ್ಚು, ಹಿಂಸೆಯ ಕಿಚ್ಚು

Lok Sabha Election: ರಾಷ್ಟ್ರಪತಿ ದ್ರೌಪದಿ ಮುರ್ಮು, ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌.ಜೈಶಂಕರ್‌, ಕ್ರಿಕೆಟಿಗ ಗೌತಮ್‌ ಗಂಭೀರ್‌, ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ, ನಾಯಕ ರಾಹುಲ್‌ ಗಾಂಧಿ ಸೇರಿ ಹಲವರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಮತದಾನ ಮಾಡಿದರು. ಇದರೊಂದಿಗೆ ಆರನೇ ಹಂತದ ಮತದಾನ ಮುಕ್ತಾಯಗೊಂಡಿದ್ದು, ಜೂನ್‌ 1ರಂದು ಏಳನೇ ಅಥವಾ ಕೊನೆಯ ಹಂತದ ಮತದಾನ ನಡೆಯಲಿದೆ.

VISTARANEWS.COM


on

Lok Sabha Election
Koo

ನವದೆಹಲಿ: ಲೋಕಸಭೆ ಚುನಾವಣೆಯು (Lok Sabha Election 2024) ಅಂತಿಮ ಹಂತಕ್ಕೆ ಬಂದಿದೆ. ಶನಿವಾರ ಆರನೇ ಹಂತದಲ್ಲಿ 8 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾನ ನಡೆದಿದ್ದು, ಸಂಜೆ 5 ಗಂಟೆ ಸುಮಾರಿಗೆ ಶೇ.59.05ರಷ್ಟು ಮತದಾನ (Voter Turnout) ನಡೆದಿದೆ. ದೆಹಲಿಯಲ್ಲಿ ಶೇ.54.48ರಷ್ಟು ಮತದಾನ ದಾಖಲಾದರೆ, ಪಶ್ಚಿಮ ಬಂಗಾಳದಲ್ಲಿ (West Bengal) 78.19ರಷ್ಟು ಮತದಾನ ದಾಖಲಾಗಿದೆ. ಆ ಮೂಲಕ ಆರನೇ ಹಂತದಲ್ಲಿ ಅತಿಹೆಚ್ಚು ಮತದಾನ ದಾಖಲಾದ ರಾಜ್ಯ ಎಂಬ ಖ್ಯಾತಿ ಪಶ್ಚಿಮ ಬಂಗಾಳದ್ದಾಗಿದೆ.

ರಾಷ್ಟ್ರಪತಿ ದ್ರೌಪದಿ ಮುರ್ಮು, ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌.ಜೈಶಂಕರ್‌, ಕ್ರಿಕೆಟಿಗ ಗೌತಮ್‌ ಗಂಭೀರ್‌, ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ, ನಾಯಕ ರಾಹುಲ್‌ ಗಾಂಧಿ ಸೇರಿ ಹಲವರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಮತದಾನ ಮಾಡಿದರು. ಇದರೊಂದಿಗೆ ಆರನೇ ಹಂತದ ಮತದಾನ ಮುಕ್ತಾಯಗೊಂಡಿದ್ದು, ಜೂನ್‌ 1ರಂದು ಏಳನೇ ಅಥವಾ ಕೊನೆಯ ಹಂತದ ಮತದಾನ ನಡೆಯಲಿದೆ. ಜೂನ್‌ 4ರಂದು ಸಾರ್ವತ್ರಿಕ ಚುನಾವಣೆ ಹಾಗೂ ಆಂಧ್ರಪ್ರದೇಶ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಲಿದೆ.

ಯಾವ ರಾಜ್ಯದಲ್ಲಿ ಎಷ್ಟು ಮತದಾನ?

ರಾಜ್ಯಮತದಾನ ಪ್ರಮಾಣ
ಬಿಹಾರ53.30%
ಹರಿಯಾಣ58.37%
ಜಮ್ಮು-ಕಾಶ್ಮೀರ52.28%
ಜಾರ್ಖಂಡ್62.74%
ದೆಹಲಿ54.48%
ಒಡಿಶಾ60.07%
ಉತ್ತರ ಪ್ರದೇಶ54.03%
ಪಶ್ಚಿಮ ಬಂಗಾಳ78.19%

ಯಾವ ರಾಜ್ಯಗಳ ಎಷ್ಟು ಕ್ಷೇತ್ರಗಳಲ್ಲಿ ಮತದಾನ?

ಆರನೇ ಹಂತದಲ್ಲಿ 5.84 ಕೋಟಿ ಪುರುಷರು, 5.29 ಕೋಟಿ ಮಹಿಳೆಯರು, 5120 ತೃತೀಯ ಲಿಂಗಿಗಳು ಸೇರಿ ಒಟ್ಟು 11.13 ಕೋಟಿ ಮತದಾರರು ನೋಂದಣಿ ಮಾಡಿಕೊಂಡಿದ್ದರು. 8 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ 58 ಕ್ಷೇತ್ರಗಳಿಗೆ ಮತದಾನ ನಡೆದಿದೆ. ಬಿಹಾರದ 8 ಸ್ಥಾನಗಳು, ಹರಿಯಾಣದ ಎಲ್ಲ 10 ಸ್ಥಾನ, ಜಾರ್ಖಂಡ್‌ 4, ಜಮ್ಮು-ಕಾಶ್ಮೀರ 1, ದೆಹಲಿಯ ಎಲ್ಲ 7 ಸ್ಥಾನ, ಒಡಿಶಾ 6, ಉತ್ತರ ಪ್ರದೇಶ 14 ಹಾಗೂ ಪಶ್ಚಿಮ ಬಂಗಾಳದ 8 ಕ್ಷೇತ್ರಗಳಲ್ಲಿ ವೋಟಿಂಗ್‌ ನಡೆದಿದೆ. ಒಟ್ಟು 889 ಅಭ್ಯರ್ಥಿಗಳು ಚುನಾವಣಾ ಅಖಾಡದಲ್ಲಿ ಇದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ

ಪಶ್ಚಿಮ ಬಂಗಾಳದಲ್ಲಿ ಎಂದಿನಂತೆ ಕೆಲವೆಡೆ ಹಿಂಸಾಚಾರ ನಡೆದಿದೆ. ಅದರಲ್ಲೂ ಝಾರ್‌ಗ್ರಾಮ್‌ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಣತ್‌ ತುಡು ಅವರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಮಂಗಳಪೋಟಾ ಗ್ರಾಮದಲ್ಲಿ ಅವರ ಮೇಲೆ ಕಲ್ಲುತೂರಾಟ ನಡೆಸಿದ್ದಾರೆ. ಭದ್ರತಾ ಸಿಬ್ಬಂದಿಯು ಅವರಿಗೆ ಭದ್ರತೆ ಒದಗಿಸಿದರೂ, ಕೆಲ ದುಷ್ಕರ್ಮಿಗಳು ಅವರನ್ನು ಬೆನ್ನತ್ತಿ, ಅವರ ಮೇಲೆ ಕಲ್ಲುತೂರಾಟ ನಡೆಸಿದ್ದಾರೆ. ಪ್ರಣತ್‌ ತುಡು, ಭದ್ರತಾ ಸಿಬ್ಬಂದಿ ಹಾಗೂ ಪತ್ರಕರ್ತರು ಓಡಿ ಹೋಗುವ ವಿಡಿಯೊ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಇದನ್ನೂ ಓದಿ: Narendra Modi: 10 ವರ್ಷ ಬಲಿಷ್ಠ ಪ್ರತಿಪಕ್ಷ ಇರಲಿಲ್ಲ ಎಂಬುದೇ ನೋವು ತಂದಿದೆ; ಮೋದಿ ಬೇಸರ

Continue Reading

ಪ್ರಮುಖ ಸುದ್ದಿ

West Bengal: ಬಂಗಾಳದಲ್ಲಿ ಎಲೆಕ್ಷನ್‌ ಹಿಂಸಾಚಾರ; ಬಿಜೆಪಿ ಅಭ್ಯರ್ಥಿಯನ್ನು ಕಲ್ಲೆಸೆದು ಓಡಿಸಿದ ಟಿಎಂಸಿ ಕಾರ್ಯಕರ್ತರು, Video ಇದೆ

West Bengal: ಪಶ್ಚಿಮ ಬಂಗಾಳದ ಝಾರ್‌ಗ್ರಾಮ್‌ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಣತ್‌ ತುಡು ಅವರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಮಂಗಳಪೋಟಾ ಗ್ರಾಮದಲ್ಲಿ ಅವರ ಮೇಲೆ ಕಲ್ಲುತೂರಾಟ ನಡೆಸಿದ್ದಾರೆ. ಭದ್ರತಾ ಸಿಬ್ಬಂದಿಯು ಅವರಿಗೆ ಭದ್ರತೆ ಒದಗಿಸಿದರೂ, ಕೆಲ ದುಷ್ಕರ್ಮಿಗಳು ಅವರನ್ನು ಬೆನ್ನತ್ತಿ, ಅವರ ಮೇಲೆ ಕಲ್ಲುತೂರಾಟ ನಡೆಸಿದ್ದಾರೆ. ಪ್ರಣತ್‌ ತುಡು, ಭದ್ರತಾ ಸಿಬ್ಬಂದಿ ಹಾಗೂ ಪತ್ರಕರ್ತರು ಓಡಿ ಹೋಗುವ ವಿಡಿಯೊ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

VISTARANEWS.COM


on

West Bengal
Koo

ಕೋಲ್ಕೊತಾ: ಪಶ್ಚಿಮ ಬಂಗಾಳದಲ್ಲಿ (West Bengal) ಚುನಾವಣೆ ಇರಲಿ, ಮತ ಎಣಿಕೆ ದಿನವೇ ಇರಲಿ, ಹಿಂಸಾಚಾರ ನಡೆದೇ ನಡೆಯುತ್ತವೆ. ಮತಯಂತ್ರಗಳನ್ನು ಧ್ವಂಸಗೊಳಿಸುವುದು, ಎದುರಾಳಿ ಪಕ್ಷದ ಅಭ್ಯರ್ಥಿ ಮೇಲೆ ಹಲ್ಲೆ ನಡೆಸುವುದು ಸೇರಿ ಹಲವು ರೀತಿಯಲ್ಲಿ ಹಿಂಸಾಚಾರ ನಡೆಯುತ್ತವೆ. ಇದಕ್ಕೆ ನಿದರ್ಶನ ಎಂಬಂತೆ, ಲೋಕಸಭೆ ಚುನಾವಣೆಯ (Lok Sabha Election 2024) ಆರನೇ ಹಂತದ ಮತದಾನದ ವೇಳೆ ಟಿಎಂಸಿ ಪಕ್ಷದ ದುಷ್ಕರ್ಮಿಗಳು ಬಿಜೆಪಿ ಅಭ್ಯರ್ಥಿಯ (BJP Candidate) ಮೇಲೆಯೇ ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದ ಗಲಿಬಿಲಿಗೊಂಡ ಬಿಜೆಪಿ ಅಭ್ಯರ್ಥಿಯು ಗ್ರಾಮದಿಂದಲೇ ಓಡಿ ಹೋಗುವಂತಾಯಿತು.

ಹೌದು, ಝಾರ್‌ಗ್ರಾಮ್‌ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಣತ್‌ ತುಡು ಅವರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಮಂಗಳಪೋಟಾ ಗ್ರಾಮದಲ್ಲಿ ಅವರ ಮೇಲೆ ಕಲ್ಲುತೂರಾಟ ನಡೆಸಿದ್ದಾರೆ. ಭದ್ರತಾ ಸಿಬ್ಬಂದಿಯು ಅವರಿಗೆ ಭದ್ರತೆ ಒದಗಿಸಿದರೂ, ಕೆಲ ದುಷ್ಕರ್ಮಿಗಳು ಅವರನ್ನು ಬೆನ್ನತ್ತಿ, ಅವರ ಮೇಲೆ ಕಲ್ಲುತೂರಾಟ ನಡೆಸಿದ್ದಾರೆ. ಪ್ರಣತ್‌ ತುಡು, ಭದ್ರತಾ ಸಿಬ್ಬಂದಿ ಹಾಗೂ ಪತ್ರಕರ್ತರು ಓಡಿ ಹೋಗುವ ವಿಡಿಯೊ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಇದರ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದ್ದು, ಇದೆಲ್ಲ ಟಿಎಂಸಿ ಕೃತ್ಯ ಎಂದು ದೂರಿದೆ.

ಬಿಜೆಪಿ ನಾಯಕ ಅಮಿತ್‌ ಮಾಳವೀಯ ಅವರು ಕಲ್ಲುತೂರಾಟದ ವಿಡಿಯೊವನ್ನು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಟಿಎಂಸಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಳದಲ್ಲಿ ಪ್ರಜಾಪ್ರಭುತ್ವವನ್ನು ಕೊಲೆ ಮಾಡುತ್ತಿದ್ದಾರೆ. ಟಿಎಂಸಿಯ ಗೂಂಡಾಗಳು ಬಿಜೆಪಿ ಅಭ್ಯರ್ಥಿ ಮೇಲೆ ಕಲ್ಲುತೂರಾಟ ನಡೆಸಿದ್ದಾರೆ. ಜನರು ಮತಗಟ್ಟೆಗಳಿಗೆ ಆಗಮಿಸಿ ಮತದಾನ ಮಾಡಲು ಅವಕಾಶ ನೀಡುತ್ತಿಲ್ಲ. ಇಷ್ಟಾದರೂ, ರಾಜ್ಯದಿಂದ ಟಿಎಂಸಿಯನ್ನು ಕಿತ್ತೆಸೆಯುವ ದಿಸೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಮತದಾನ ಮಾಡುತ್ತಿದ್ದಾರೆ” ಎಂಬುದಾಗಿ ಪೋಸ್ಟ್‌ ಮಾಡಿದ್ದಾರೆ.

ಪ್ರಸಕ್ತ ಲೋಕಸಭೆ ಚುನಾವಣೆಯ ಪ್ರತಿಯೊಂದು ಹಂತದ ಮತದಾನದ ವೇಳೆಯೂ ಪಶ್ಚಿಮ ಬಂಗಾಳದಲ್ಲಿ ಭಾರಿ ಹಿಂಸಾಚಾರ ಸಂಭವಿಸಿದೆ. ಮತಗಟ್ಟೆಗಳ ಬಳಿ ಜನ ಶಾಂತಿಯಿಂದ ಮತದಾನ ಮಾಡಲೂ ಆಗದಂತಹ ಪರಿಸ್ಥಿತಿಯೂ ನಿರ್ಮಾಣವಾಗಿದೆ. ವಿಧಾನಸಭೆ ಚುನಾವಣೆ ಫಲಿತಾಂಶದ ಬಳಿಕವೂ ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದ ಹಿಂಸಾಚಾರ ನಡೆದಿತ್ತು. ಸುಪ್ರೀಂ ಕೋರ್ಟ್‌ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುವ ಜತೆಗೆ ತನಿಖೆಗೂ ಆದೇಶಿಸಿತ್ತು.

ಇದನ್ನೂ ಓದಿ: Narendra Modi: 10 ವರ್ಷ ಬಲಿಷ್ಠ ಪ್ರತಿಪಕ್ಷ ಇರಲಿಲ್ಲ ಎಂಬುದೇ ನೋವು ತಂದಿದೆ; ಮೋದಿ ಬೇಸರ

Continue Reading
Advertisement
Constables
ದೇಶ18 mins ago

Constables: ಬಿಯರ್‌ ಸೇವಿಸಿ ಇಬ್ಬರು ಕಾನ್‌ಸ್ಟೆಬಲ್‌ಗಳ ಸಾವು; ಮದ್ಯ ಪ್ರಿಯರೇ ಇನ್ನಾದರೂ ಎಚ್ಚರ!

Rohit Sharma
ಕ್ರೀಡೆ25 mins ago

Rohit Sharma : ಬಾಲಿವುಡ್​ ಸಿನಿಮಾ ಸಾಂಗ್​ನಲ್ಲಿ ಕಾಣಿಸಿಕೊಂಡ ರೋಹಿತ್ ಶರ್ಮಾ

Karnataka Rain
ಮಳೆ42 mins ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

MS Dhoni
ಕ್ರೀಡೆ47 mins ago

M S Dhoni: ಫ್ರಾನ್ಸ್ ಮೂಲದ ಕಾರು ಕಂಪನಿಯ ಬ್ರಾಂಡ್​ ಅಂಬಾಸಿಡರ್ ಆಗಿ ನೇಮಕಗೊಂಡ ಲೆಜೆಂಡ್​ ಧೋನಿ

Karnataka Council Election
ಕರ್ನಾಟಕ60 mins ago

ವಿಧಾನ ಪರಿಷತ್‌ ಚುನಾವಣೆ: ಖರ್ಗೆ, ಸಿದ್ದು, ಡಿಕೆಶಿ ಆಪ್ತರಿಗೆ ಸ್ಥಾನ ಕೊಡಿಸಲು 2+2+2+1=7 ಫಾರ್ಮುಲಾ; ಏನಿದು?

Krishna Water Dispute
ಕರ್ನಾಟಕ1 hour ago

Krishna Water Dispute: ಕೃಷ್ಣಾ ನೀರಿನ ವಿಚಾರ ಮತ್ತೆ ಮಹಾ ಕ್ಯಾತೆ; ರಾಜ್ಯಕ್ಕೆ ಹರಿದು ಬರ್ತಿದ್ದ ನೀರು ತಡೆ ಹಿಡಿದ ಮಹಾರಾಷ್ಟ್ರ!

Latest1 hour ago

Shilpa Shetty : 3.5 ಕೋಟಿ ರೂಪಾಯಿ ಬೆಲೆಯ ರೇಂಜ್​ ರೋವರ್​​ ಕಾರು ಖರೀದಿಸಿದ ಶಿಲ್ಪಾ ಶೆಟ್ಟಿ; ವಿಡಿಯೊ ನೋಡಿ

Actor Darshan fans against forest officials Construction of Arjuna tomb
ಸ್ಯಾಂಡಲ್ ವುಡ್1 hour ago

Actor Darshan: ಅರ್ಜುನನ ಸಮಾಧಿ ನಿರ್ಮಾಣ: ಅರಣ್ಯಾಧಿಕಾರಿಗಳ ವಿರುದ್ಧ ದರ್ಶನ್ ಅಭಿಮಾನಿಗಳಿಂದ ಆಕ್ರೋಶ!

Mango Nail Art
ಫ್ಯಾಷನ್1 hour ago

Mango Nail Art: ಸಮ್ಮರ್‌ ಸೀಸನ್‌ನಲ್ಲಿ ಬಂತು ಮ್ಯಾಂಗೋ ನೇಲ್‌ ಆರ್ಟ್!

Viral News
ವೈರಲ್ ನ್ಯೂಸ್1 hour ago

Viral News: ಕಂಪನಿಯಲ್ಲಿ 1 ವರ್ಷ ವೇತನ ಸಹಿತ ರಜೆ ಪಡೆದ ಉದ್ಯೋಗಿ; ಈ ಲಕ್‌ ನಿಮ್ಮದಾಗಬೇಕೆ? ಹೀಗೆ ಮಾಡಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ42 mins ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು2 hours ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ4 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ4 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು5 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು5 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ6 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ1 week ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

ಟ್ರೆಂಡಿಂಗ್‌