Raj B Shetty: ದುನಿಯಾ ವಿಜಯ್‌ ಜತೆ ತೆರೆ ಹಂಚಿಕೊಳ್ಳುತ್ತಿದ್ದಾರಂತೆ ರಾಜ್ ಬಿ ಶೆಟ್ಟಿ! - Vistara News

ಸ್ಯಾಂಡಲ್ ವುಡ್

Raj B Shetty: ದುನಿಯಾ ವಿಜಯ್‌ ಜತೆ ತೆರೆ ಹಂಚಿಕೊಳ್ಳುತ್ತಿದ್ದಾರಂತೆ ರಾಜ್ ಬಿ ಶೆಟ್ಟಿ!

Raj B Shetty: ಸದ್ಯಕ್ಕೆ ಪ್ರೊಡಕ್ಷನ್ ನಂ 2. ಟೈಟಲ್ ಮೂಲಕ ಸಿನಿಮಾ ಚಿತ್ರೀಕರಣ ಚಾಲನೆ ದೊರೆತಿದೆ. ಸತ್ಯ ಪ್ರಕಾಶ್ ನಿರ್ಮಾಪಕರಾಗಿ, ಸಹ ನಿರ್ಮಾಪಕರಾಗಿ ಸೂರಜ್ ಗೌಡ ಇದ್ದಾರೆ. ಕೋಲಾರ ಸುತ್ತಮುತ್ತ ಸಿನಿಮಾದ ಕಥೆ ನಡೆಯಲಿದೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ನೈಜ್ಯ ಕಥೆಯನ್ನು ಆಧರಿಸಿದ ಸಿನಿಮಾ ಎಂದು ಹೇಳಿಕೊಂಡಿದೆ. ಕೋಲಾರ ಭಾಷೆಯಲ್ಲಿ ಚಿತ್ರದ ಡೈಲಾಗ್ ಇರಲಿದೆ.

VISTARANEWS.COM


on

Raj B Shetty entry in duniya Vijay Movie
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಟ ರಾಜ್‌ ಬಿ ಶೆಟ್ಟಿ (Raj B Shetty) ಅವರ `ಟೋಬಿ’ ಸಿನಿಮಾ ಬಿಡುಗಡೆಯಾಗಿ, ಅಷ್ಟೇನೂ ಕಲೆಕ್ಷನ್‌ ಮಾಡಿರಲಿಲ್ಲ. ಅಷ್ಟೋತ್ತಿಗಾಗಲೇ ರಾಜ್‌ ಅವರು ಮಲಯಾಳಂ ಸಿನಿಮಾದಲ್ಲಿ ಬ್ಯುಸಿಯಾದರು. ಮೊದಲ ಮಾಲಿವುಡ್ ಸಿನಿಮಾ ‘ರುಧೀರಂ’ ಶೂಟಿಂಗ್ ಕೂಡ ಮುಗಿದು ರಿಲೀಸ್‌ಗೂ ರೆಡಿಯಾಗಿದೆ. ಮಲಯಾಳಂ ಸ್ಟಾರ್ ಮಮ್ಮುಟ್ಟಿ ಹೊಸ ಸಿನಿಮಾ ‘ಟರ್ಬೊ’ದಲ್ಲಿ ರಾಜ್‌ ಬಿ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಅರ್ಜುನ್ ಜನ್ಯ ಮೊದಲ ಬಾರಿಗೆ ನಿರ್ದೇಶಿಸುತ್ತಿರುವ ’45’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಮಧ್ಯೆ ದುನಿಯಾ ವಿಜಯ್ (Duniya Vijay) ಜತೆ ಸೇರಿ ಒಂದು ಚಿತ್ರದಲ್ಲಿ ನಟಿಸುವುದಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ. ದುನಿಯಾ ವಿಜಯ್ 29ನೇ ಸಿನಿಮಾ ಇತ್ತೀಚೆಗಷ್ಟೇ ಸೆಟ್ಟೇರಿತ್ತು. ಆ ಸಿನಿಮಾದಲ್ಲಿ ರಚಿತಾ ರಾಮ್ ನಾಯಕಿಯಾಗಿ ಕಾಣಿಸಿಕೊಳ್ಳುತ್ತಾರೆ. ಈ ಚಿತ್ರದ ಮತ್ತೊಂದು ಪ್ರಮುಖ ಪಾತ್ರದಲ್ಲಿ ರಾಜ್ ಬಿ ಶೆಟ್ಟಿ ನಟಿಸಲಿದ್ದಾರೆ ಎನ್ನಲಾಗಿದೆ.

ಸದ್ಯಕ್ಕೆ ಪ್ರೊಡಕ್ಷನ್ ನಂ 2. ಟೈಟಲ್ ಮೂಲಕ ಸಿನಿಮಾ ಚಿತ್ರೀಕರಣ ಚಾಲನೆ ದೊರೆತಿದೆ. ಸತ್ಯ ಪ್ರಕಾಶ್ ನಿರ್ಮಾಪಕರಾಗಿ, ಸಹ ನಿರ್ಮಾಪಕರಾಗಿ ಸೂರಜ್ ಗೌಡ ಇದ್ದಾರೆ. ಕೋಲಾರ ಸುತ್ತಮುತ್ತ ಸಿನಿಮಾದ ಕಥೆ ನಡೆಯಲಿದೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ನೈಜ್ಯ ಕಥೆಯನ್ನು ಆಧರಿಸಿದ ಸಿನಿಮಾ ಎಂದು ಹೇಳಿಕೊಂಡಿದೆ. ಕೋಲಾರ ಭಾಷೆಯಲ್ಲಿ ಚಿತ್ರದ ಡೈಲಾಗ್ ಇರಲಿದೆ. ಇದು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಕೋಟ ಶಿವರಾಮ ಕಾರಂತರು ಬರೆದಿರುವ ‘ಚೋಮನ ದುಡಿ’ ಕಾದಂಬರಿ ಪ್ರೇರಿತ ಸಿನಿಮಾ ಎನ್ನಲಾಗಿದೆ. ಜಡೇಶ ಹಂಪಿ ಈ ಸಿನಿಮಾಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಜಡೇಶ್‍ ಹಂಪಿ ಅವರಿಗೆ ನಿರ್ದೇಶನದಲ್ಲಿ ಅನುಭವ ಇದೆ. ‘ರಾಜಹಂಸ’, ‘ಜಂಟಲ್‍ಮ್ಯಾನ್‍’, ‘ಗುರು ಶಿಷ್ಯರು’ ಸಿನಿಮಾಗಳನ್ನು ಅವರು ನಿರ್ದೇಶಿಸಿದ್ದರು. ದುನಿಯಾ ವಿಜಯ್ ಮುಂದಿನ ಸಿನಿಮಾಗೆ ಅವರೇ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.

ಇದನ್ನೂ ಓದಿ: Raj B Shetty: ಒಟಿಟಿಯಲ್ಲಿ ಅಬ್ಬರಿಸಲಿದೆ ʻಟೋಬಿʼ!

ರಾಜ್‌ ಬಿ ಶೆಟ್ಟಿ ಅವರು ʼಸ್ವಾತಿ ಮುತ್ತಿನ ಮಳೆ ಹನಿಯೇʼ ಸಿನಿಮಾದಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದರು. ಮಮ್ಮುಟ್ಟಿ ಹೊಸ ಸಿನಿಮಾ ‘ಟರ್ಬೊ’ದಲ್ಲಿ ರಾಜ್‌ ಬಿ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ʻಟರ್ಬೊ’ ಸಿನಿಮಾ ನಿರ್ದೇಶಕ ವೈಶಾಖ್ ಜತೆ ಇದು ಮೂರನೇ ಬಾರಿ ಮಮ್ಮುಟ್ಟಿ ಜತೆ ಕೈ ಜೋಡಿಸುತ್ತಿದ್ದಾರೆ. ಪೊಕ್ಕಿರಿ ರಾಜ ಮತ್ತು ಮಧುರ ರಾಜ ಸಿನಿಮಾಗಳ ಬಳಿಕ ಮಮ್ಮುಟ್ಟಿಯವರ ಮೂರನೇ ಚಿತ್ರವಾಗಿದೆ. ಚಲನಚಿತ್ರ ನಿರ್ಮಾಪಕ ಮಿಧುನ್ ಮ್ಯಾನುಯೆಲ್ ಥಾಮಸ್ ಬರೆದ ಚಿತ್ರಕಥೆಯನ್ನು ಈ ಸಿನಿಮಾ ಆಧರಿಸಿದೆ. ಟರ್ಬೊದಲ್ಲಿ ತೆಲುಗು ನಟ ಸುನಿಲ್ ಕೂಡ ಕಾಣಿಸಿಕೊಂಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Kannada New Movie: `ಸಂಭವಾಮಿ ಯುಗೇಯುಗೇ’ ಚಿತ್ರದ ಕ್ಯಾರೆಕ್ಟರ್ ಮೋಷನ್ ಪೋಸ್ಟರ್ ಬಿಡುಗಡೆ

ಚಿತ್ರೀಕರಣ ಹಾಗೂ ಪೋಸ್ಟ್ ಪ್ರೊಡಕ್ಷನ್ ವರ್ಕ್ ಮುಕ್ತಾಯವಾಗಿದೆ. ಚನ್ನಪಟ್ಟಣದ ಸುತ್ತಮುತ್ತ ಹೆಚ್ಚಿನ ಚಿತ್ರೀಕರಣ ನಡೆದಿದೆ. ಚಿತ್ರದ ಪ್ರಚಾರ ಕಾರ್ಯವನ್ನು ಆರಂಭಿಸಿರುವ ಚಿತ್ರತಂಡ ಮೊದಲಹೆಜ್ಜೆಯಾಗಿ ಕ್ಯಾರೆಕ್ಟರ್ ಮೋಷನ್ ಪೋಸ್ಟರ್ ಬಿಡುಗಡೆ ಮಾಡಿದೆ. ಪ್ರಾಂಕ್ರಿನ್ ರಾಖಿ ಅವರ ಹಿನ್ನೆಲೆ ಸಂಗೀತ, ರಾಜು ಹೆಮ್ಮಿಗೆಪುರ ಛಾಯಾಗ್ರಹಣ, ರವೀಶ್ ಆತ್ಮಾರಾಮ್ ಸಂಕಲನ, ನರಸಿಂಹ ಸಾಹಸ ನಿರ್ದೇಶನ ಹಾಗೂ ಗೀತಾ ಮಾಸ್ಟರ್ ಅವರ ನೃತ್ಯ ನಿರ್ದೇಶನವಿರುವ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು ದಿನೇಶ್ ರಾಜನ್.

VISTARANEWS.COM


on

Kannada New Movie Sambavami Yuge Yuge 4K Motion Poster
Koo

ಬೆಂಗಳೂರು: ಶ್ರೀಕೃಷ್ಣ ಭಗವದ್ಗೀತೆಯಲ್ಲಿ “ಸಂಭವಾಮಿ ಯುಗೇಯುಗೇ” (Kannada New Movie) ಎಂಬ ಮಾತನ್ನು ಹೇಳಿದ್ದಾನೆ. ಅಧರ್ಮ ಹೆಚ್ಚಾದಾಗ ನಾನು ಪುನಃ ಪುನಃ ಬರುತ್ತಿರುತ್ತೇನೆ ಎಂದು ಈ ಮಾತಿನ ಅರ್ಥ. ಕೃಷ್ಣ ಹೇಳಿದ ಈ ಮಾತೇ ಈಗ ಚಿತ್ರದ ಶೀರ್ಷಿಕೆಯಾಗಿದೆ.

ರಾಜಲಕ್ಷ್ಮಿ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರತಿಭಾ ಅವರು ನಿರ್ಮಿಸುತ್ತಿರುವ, ಚೇತನ್ ಚಂದ್ರಶೇಖರ್ ಶೆಟ್ಟಿ ನಿರ್ದೇಶನದಲ್ಲಿ ಜಯ್ ಶೆಟ್ಟಿ ನಾಯಕನಾಗಿ ನಟಿಸಿರುವ “ಸಂಭಾವಮಿ ಯುಗೇಯುಗೇ” ಚಿತ್ರದ ಕ್ಯಾರೆಕ್ಟರ್ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ. ಮೋಷನ್ ಪೋಸ್ಟರ್ ಗೆ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ‌. ಭಗವದ್ಗೀತೆಯ ಈ ವಾಕ್ಯವನೇ ಆದರ್ಶವಾಗಿಟ್ಟುಕೊಂಡು ನಿರ್ದೇಶಕರು ಕಥೆ ಬರೆದಿದ್ದಾರೆ. ಚಿತ್ರಕಥೆ ಹಾಗೂ ಸಂಭಾಷಣೆ ಕೂಡ ಚೇತನ್ ಚಂದ್ರಶೇಖರ್ ಶೆಟ್ಟಿ ಅವರದೆ.

ಪಕ್ಕಾ ಕಮರ್ಷಿಯಲ್ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಥ್ರಿಲ್ಲರ್, ಆಕ್ಷನ್, ಲವ್, ಸೆಂಟಿಮೆಂಟ್ ಸೇರಿದಂತೆ ನೋಡುಗನಿಗೆ ಬೇಕಾದ ಎಲ್ಲಾ ಅಂಶಗಳು ಇದೆ ಎನ್ನುತ್ತಾರೆ ನಿರ್ದೇಶಕರು.

ಇದನ್ನೂ ಓದಿ: Kannada New Movie: `ಅನರ್ಥ’ ಸಿನಿಮಾ ಟೀಸರ್‌ ಔಟ್‌!

ಚಿತ್ರೀಕರಣ ಹಾಗೂ ಪೋಸ್ಟ್ ಪ್ರೊಡಕ್ಷನ್ ವರ್ಕ್ ಮುಕ್ತಾಯವಾಗಿದೆ. ಚನ್ನಪಟ್ಟಣದ ಸುತ್ತಮುತ್ತ ಹೆಚ್ಚಿನ ಚಿತ್ರೀಕರಣ ನಡೆದಿದೆ. ಚಿತ್ರದ ಪ್ರಚಾರ ಕಾರ್ಯವನ್ನು ಆರಂಭಿಸಿರುವ ಚಿತ್ರತಂಡ ಮೊದಲಹೆಜ್ಜೆಯಾಗಿ ಕ್ಯಾರೆಕ್ಟರ್ ಮೋಷನ್ ಪೋಸ್ಟರ್ ಬಿಡುಗಡೆ ಮಾಡಿದೆ.

“ಸಂಭಾವಮಿ ಯುಗೇಯಗೇ” ಚಿತ್ರದಲ್ಲಿ ನಾಲ್ಕು ಹಾಡುಗಳಿದೆ. ಪುರಾನ್ ಶೆಟ್ಟಿಗಾರ್ ಸಂಗೀತ ನೀಡಿದ್ದಾರೆ. ಪ್ರಾಂಕ್ರಿನ್ ರಾಖಿ ಅವರ ಹಿನ್ನೆಲೆ ಸಂಗೀತ, ರಾಜು ಹೆಮ್ಮಿಗೆಪುರ ಛಾಯಾಗ್ರಹಣ, ರವೀಶ್ ಆತ್ಮಾರಾಮ್ ಸಂಕಲನ, ನರಸಿಂಹ ಸಾಹಸ ನಿರ್ದೇಶನ ಹಾಗೂ ಗೀತಾ ಮಾಸ್ಟರ್ ಅವರ ನೃತ್ಯ ನಿರ್ದೇಶನವಿರುವ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು ದಿನೇಶ್ ರಾಜನ್.

ಜಯ್ ಶೆಟ್ಟಿ ಅವರಿಗೆ ನಾಯಕಿಯಾಗಿ ನಿಶಾ ರಜಪೂತ್ ಅಭಿನಯಿಸಿದ್ದಾರೆ. ಪ್ರಮೋದ್ ಶೆಟ್ಟಿ, ಸುಧಾರಾಣಿ, ಭವ್ಯ, ಅಶೋಕ್ ಕುಮಾರ್, ಮಧುರಗೌಡ ಪ್ರಮುಖಪಾತ್ರದಲ್ಲಿದ್ದಾರೆ. ಅಭಯ್ ಪುನೀತ್, ಬಾಲ ರಾಜವಾಡಿ, ಅಶ್ವಿನ್ ಹಾಸನ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

Continue Reading

ಸ್ಯಾಂಡಲ್ ವುಡ್

IPL 2024 : ʻಅಶ್ವಿನಿ ದೊಡ್ಮನೆಯ ಅದೃಷ್ಟ ದೇವತೆ’: ತುಚ್ಛ ಪದ ಬಳಸಿದವರಿಗೆ ಭಾರೀ ತಿರುಗೇಟು!

IPL 2024: ಸೋತಾಗ ಅಶ್ವಿನಿ ಪುನೀತ್ ರಾಜ್ ಕುಮಾರನ್ನ ಹೀಯಾಳಿಸಿದವರಿಗೆ ಜನ ತಿರುಗೇಟು ನೀಡುತ್ತಿದ್ದಾರೆ. ಆರ್ ಸಿ ಬಿ ಗೆಲುವಿನ ಬೆನ್ನಲ್ಲೇ ಅಶ್ವಿನಿ ಪುನೀತ್ ರಾಜ್ ಕುಮಾರ್ ಫೋಟೋ ವೈರಲ್ ಆಗುತ್ತಿದೆ. ದೊಡ್ಮನೆಯ ಅದೃಷ್ಟ ದೇವತೆಯಿಂದ ಪ್ಲೇ ಆಫ್‌ಗೆ ಎಂಟ್ರಿ ಕೊಡುತ್ತಿದೆ. ಅದೃಷ್ಟ ತಂದ ಹೆಣ್ಣು ಎಂದು ಅಶ್ವಿನಿ ಪುನೀತ್ ರಾಜ್ ಕುಮಾರ್ ಫೋಟಿ ಹಾಕಿ ಪೋಸ್ಟ್ ಮಾಡಲಾಗುತ್ತಿದೆ.

VISTARANEWS.COM


on

IPL 2024 The people paid revenge for the controversial post ashwini Puneeth Rajkumar
Koo

ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಐಪಿಎಲ್ 2024ರ 68ನೇ ಪಂದ್ಯದಲ್ಲಿ ಚೆನ್ನೈ ಸೂಪರ್​ ಕಿಂಗ್ಸ್ (CSK) ವಿರುದ್ಧ 27 ರನ್‌ಗಳಿಂದ ಜಯಗಳಿಸಿದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) 4ನೇ ತಂಡವಾಗಿ ಪ್ಲೇ ಆಫ್‌ ಪ್ರವೇಶಿಸಿದೆ. ಈಗಾಗಲೇ ಕೋಲ್ಕತ್ತಾ ನೈಟ್ ರೈಡರ್ಸ್ (KKR), ರಾಜಸ್ಥಾನ್ ರಾಯಲ್ಸ್ (RR) ಮತ್ತು ಸನ್‌ ರೈಸರ್ಸ್‌ ಹೈದರಾಬಾದ್ (SRH) ಪ್ಲೇ ಆಫ್‌ನಲ್ಲಿ ಸ್ಥಾನ ಪಡೆದಿವೆ. ಸೋಶಿಯಲ್ ಮೀಡಿಯಾದಲ್ಲಿ ಅಭಿನಂದನೆಗಳ ಮಹಾಪೂರವೇ ಹರಿದು ಬರ್ತಿದೆ. ಇದೆಲ್ಲದರ ನಡುವೆ ಗಜಪಡೆ ಪೋಸ್ಟ್ ಟ್ರೆಂಡ್ ಆಗುತ್ತಿದೆ. ಟೂರ್ನಿ ಆರಂಭದಲ್ಲಿ ಆರ್‌ಸಿಬಿ ತಂಡ ಕಳಪೆ ಪ್ರದರ್ಶನ ತೋರಿತ್ತು. ಹಾಗಾಗಿ ಭಾರೀ ಟೀಕೆ, ಟ್ರೋಲ್ ಎದುರಿಸುವಂತಾಗಿತ್ತು. ಅಂತಹ ಸಮಯದಲ್ಲೇ ಕಿಡಿಗೇಡಿ ಒಬ್ಬ ಇದಕ್ಕೆ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಹೆಸರು ಎಳೆದು ತಂಡ ಅವಹೇಳಕಾರಿ ಪೋಸ್ಟ್ ಮಾಡಿದ್ದ. ಇದೀಗ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಅವರು ದೊಡ್ಮನೆಯ ಅದೃಷ್ಟ ದೇವತೆ ಎಂದು ಜನರು ಟ್ವೀಟ್‌ ಮಾಡುತ್ತಿದ್ದಾರೆ.

ಸೋತಾಗ ಅಶ್ವಿನಿ ಪುನೀತ್ ರಾಜ್ ಕುಮಾರನ್ನ ಹೀಯಾಳಿಸಿದವರಿಗೆ ಜನ ತಿರುಗೇಟು ನೀಡುತ್ತಿದ್ದಾರೆ. ಆರ್ ಸಿ ಬಿ ಗೆಲುವಿನ ಬೆನ್ನಲ್ಲೇ ಅಶ್ವಿನಿ ಪುನೀತ್ ರಾಜ್ ಕುಮಾರ್ ಫೋಟೋ ವೈರಲ್ ಆಗುತ್ತಿದೆ. ದೊಡ್ಮನೆಯ ಅದೃಷ್ಟ ದೇವತೆಯಿಂದ ಪ್ಲೇ ಆಫ್‌ಗೆ ಎಂಟ್ರಿ ಕೊಡುತ್ತಿದೆ. ಅದೃಷ್ಟ ತಂದ ಹೆಣ್ಣು ಎಂದು ಅಶ್ವಿನಿ ಪುನೀತ್ ರಾಜ್ ಕುಮಾರ್ ಫೋಟಿ ಹಾಕಿ ಪೋಸ್ಟ್ ಮಾಡಲಾಗುತ್ತಿದೆ.

ಇದನ್ನೂ ಓದಿ: IPL 2024 : ಐಪಿಎಲ್‌ ಬೆಟ್ಟಿಂಗ್‌ಗಾಗಿ ಮೈ ತುಂಬಾ ಸಾಲ; ನೇಣಿಗೆ ಶರಣಾದ ಯುವಕ

ಆರ್‌ಸಿಬಿ ಅನ್‌ಬಾಕ್ಸ್ ಈವೆಂಟ್‌ಗೆ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅತಿಥಿಯಾಗಿ ಹೋಗಿದ್ದರು. “ಗಂಡ ಇಲ್ಲದ ಮಹಿಳೆಯನ್ನು ಶುಭ ಕಾರ್ಯಕ್ಕೆ ಕರೆಸಿದ್ದರಿಂದಲೇ ಆರ್‌ಸಿಬಿ ಪದೇ ಪದೆ ಸೋಲುತ್ತಿದೆ” ಎಂದು ಗಜಪಡೆ ಟ್ವಿಟರ್‌ ಪೇಜ್‌ನಲ್ಲಿ ಪೋಸ್ಟ್ ಮಾಡಲಾಗಿತ್ತು. ಸದ್ಯ ಆರ್‌ಸಿಬಿ ತಂಡ ಪ್ಲೇ ಆಫ್‌ಗೆ ಹೋಗುವುದು ಖಚಿತವಾಗುತ್ತಿದ್ದಂತೆ ಹಲವರು ಅವಹೇಳಕಾರಿ ಪೋಸ್ಟ್ ನೆನಪಿಸಿ ತಿರುಗೇಟು ನೀಡುತ್ತಿದ್ದಾರೆ.

ಇದನ್ನೂ ಓದಿ: IPL 2024 : ಐಪಿಎಲ್‌ ಬೆಟ್ಟಿಂಗ್‌ಗಾಗಿ ಮೈ ತುಂಬಾ ಸಾಲ; ನೇಣಿಗೆ ಶರಣಾದ ಯುವಕ

ಏನಿದು ಘಟನೆ?

ಗಂಡ ಇಲ್ಲದ ಮಹಿಳೆಯನ್ನು ಶುಭ ಕಾರ್ಯಕ್ಕೆ ಕರೆಸಿದ್ದು ಸರಿ ಅಲ್ಲ, ಇದಕ್ಕಾಗಿಯೇ ಆರ್​ಸಿಬಿ ಸೋಲುತ್ತಿದೆ ಎಂದು ‘ಗಜಪಡೆ’ (@GAJAPADE6) ಹೆಸರಿನ ಟ್ವಿಟರ್ ಅಕೌಂಟ್ ಕೀಳು ಮಟ್ಟದ ಟ್ವೀಟ್ ಮಾಡಿತ್ತು. ಆರ್​ಸಿಬಿ ಸೋಲುವುದಕ್ಕೂ, ಅಶ್ವಿನಿ ಪುನೀತ್​ ರಾಜ್​ಕುಮಾರ್​ಗೂ ಏನು ಸಂಬಂಧ? ಎಂದು ಅಪ್ಪು ಫ್ಯಾನ್ಸ್‌ ಆಕ್ರೋಶ ಹೊರಹಾಕಿ, ಈಗಾಗಲೇ ಅಪ್ಪು ಫ್ಯಾನ್ಸ್‌ ಕಾನೂನು ಕ್ರಮ ಮುಂದಾಗಿದ್ದರು.

ಕೀಳುಮಟ್ಟದ ಟ್ವೀಟ್‌ ಬಗ್ಗೆ ಸಮಾಧಾನವಾಗಿಯೇ ಉತ್ತರ ಕೊಟ್ಟಿದ್ದ ದೊಡ್ಮನೆ ಸೊಸೆ!

ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ಈ ಬಗ್ಗೆ ಪರೋಕ್ಷವಾಗಿ ಮಾತನಾಡಿದ್ದರು. ʻʻಬೇರೆ ಆಯ್ಕೆ ಇಲ್ಲ.. ಜೀವನ ಅಂದುಕೊಂಡಷ್ಟು ಸುಲಭವಿಲ್ಲ, ಜೀವನ ಹೇಗೋ ನಡೆದುಕೊಂಡು ಹೋಗುತ್ತಿದೆ. ಕಷ್ಟ ಇದ್ದರೂ ಎಲ್ಲವನ್ನು ಸ್ವೀಕರಿಸಬೇಕುʼʼಎಂದು ಹೇಳಿದ್ದರು.

Continue Reading

ಸ್ಯಾಂಡಲ್ ವುಡ್

Kannada New Movie: `ಅನರ್ಥ’ ಸಿನಿಮಾ ಟೀಸರ್‌ ಔಟ್‌!

Kannada New Movie: ಯಶಸ್ವಿ ಧಾರವಾಹಿಗಳಾದ ’ಅರ್ಧ ಸತ್ಯ’ ಧಾರವಾಹಿಯನ್ನು ನಿರ್ದೇಶಿಸಿ ಅತ್ಯುತ್ತಮ ಆರ್ಯಭಟ ಪ್ರಶಸ್ತಿಯನ್ನು ಪಡೆದು, ನಂತರ ’ಗುಪ್ತಗಾಮಿನಿ’ ’ಪ್ರೀತಿ ಇಲ್ಲದ ಮೇಲೆ’ ಯಶಸ್ವಿ ಧಾರವಾಹಿಗಳಾದ ಮೊದಲ ಕಂತುಗಳ ನಿರ್ದೇಶನ ಮಾಡಿ, ಆ ನಂತರ ಸುಮಾರು 3500 ಕಂತುಗಳ ಅನೇಕ ಧಾರವಾಹಿಗಳಾದ ’ಶಿವ’ ’ಕದನ’ ’ಲಕುಮಿ’ ’ಚುಕ್ಕಿ’ ’ಗೋಕುಲದಲ್ಲಿ ಸೀತೆ’ ನಿರ್ದೇಶಿಸಿರುತ್ತಾರೆ. ’ಮೆಲ್ಲುಸಿರೆ ಸವಿಗಾನ’ ಚಿತ್ರವನ್ನು ನಿರ್ದೇಶನ ಮಾಡಿರುವ ರಮೇಶ್ ಕೃಷ್ಣ ಸಿನಿಮಾಕ್ಕೆ ಕಥೆ, ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ.

VISTARANEWS.COM


on

Kannada New Movie anartha cinema teaser Out
Koo

ಬೆಂಗಳೂರು: ’ಬಲಹೀನತೆಯಿಂದ ಕ್ರೂರತನ ಹುಟ್ಟುತ್ತದೆ’ ಎಂಬ ವಾಕ್ಯವನ್ನು ರೋಮ್ ಫಿಲಾಸಫರ್ ಅಂದೇ ಹೇಳಿದ್ದರು. ಇಂತಹುದೆ ಅಂಶಗಳನ್ನು ಹೆಕ್ಕಿಕೊಂಡು ’ಅನರ್ಥ’ (Kannada New Movie) ಎನ್ನುವ ಸಿನಿಮಾದ ಅಡಿಬರಹಕ್ಕೆ ಬಳಸಲಾಗಿದೆ. ಸೆನ್ಸಾರ್‌ನಿಂದ ಪ್ರಶಂಸೆ ಪಡೆದುಕೊಂಡಿದೆ. ಪ್ರಚಾರದ ಮೊದಲ ಹಂತವಾಗಿ ಟೀಸರ್ ಹಾಗೂ ಸಾಂಗ್, ರೇಣುಕಾಂಬ ಸ್ಟುಡಿಯೊದಲ್ಲಿ ಕಿಕ್ಕಿರಿದ ಜನರು ಎದುರು ಲೋಕಾರ್ಪಣೆಗೊಂಡಿತು. ನಿರ್ದೇಶಕರು ಮಾಧ್ಯಮಮಿತ್ರರನ್ನು ಮುಖ್ಯ ಅತಿಥಿ ಎಂದು ಪರಿಗಣಿಸಿದ್ದರಿಂದ, ಹಿರಿಯ ಪತ್ರಕರ್ತರಿಂದ ಟೀಸರ್ ಹಾಗೂ ಸಹ ನಿರ್ಮಾಪಕಿ ಜೆ.ಅಂಜಲಿ ಪುತ್ರಿಯರಾದ ಕುಮಾರಿ ಜಯಕೀರ್ತಿ ಮತ್ತು ಜಯಕನ್ನಿಕ ಜಂಟಿಯಾಗಿ ಹಾಡನ್ನು ಬಿಡುಗಡೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಯಶಸ್ವಿ ಧಾರವಾಹಿಗಳಾದ ’ಅರ್ಧ ಸತ್ಯ’ ಧಾರವಾಹಿಯನ್ನು ನಿರ್ದೇಶಿಸಿ ಅತ್ಯುತ್ತಮ ಆರ್ಯಭಟ ಪ್ರಶಸ್ತಿಯನ್ನು ಪಡೆದು, ನಂತರ ’ಗುಪ್ತಗಾಮಿನಿ’ ’ಪ್ರೀತಿ ಇಲ್ಲದ ಮೇಲೆ’ ಯಶಸ್ವಿ ಧಾರವಾಹಿಗಳಾದ ಮೊದಲ ಕಂತುಗಳ ನಿರ್ದೇಶನ ಮಾಡಿ, ಆ ನಂತರ ಸುಮಾರು 3500 ಕಂತುಗಳ ಅನೇಕ ಧಾರವಾಹಿಗಳಾದ ’ಶಿವ’ ’ಕದನ’ ’ಲಕುಮಿ’ ’ಚುಕ್ಕಿ’ ’ಗೋಕುಲದಲ್ಲಿ ಸೀತೆ’ ನಿರ್ದೇಶಿಸಿರುತ್ತಾರೆ. ’ಮೆಲ್ಲುಸಿರೆ ಸವಿಗಾನ’ ಚಿತ್ರವನ್ನು ನಿರ್ದೇಶನ ಮಾಡಿರುವ ರಮೇಶ್ ಕೃಷ್ಣ ಸಿನಿಮಾಕ್ಕೆ ಕಥೆ, ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ.

ಇದನ್ನೂ ಓದಿ: Kannada New Movie: ಬ್ಯಾಂಕ್‌ ಆಫ್‌ ಭಾಗ್ಯಲಕ್ಷ್ಮೀ ಸಿನಿಮಾದ ಪೋಸ್ಟರ್ ಔಟ್‌; ಶೀಘ್ರದಲ್ಲೇ ತೆರೆಗೆ

ಈ ಸಂದರ್ಭದಲ್ಲಿ ಮಾತನಾಡಿದ ಅವರು ʻʻಅವಕಾಶ್-ಆಕೃತಿ ಎರಡು ಪಾತ್ರಗಳ ಸುತ್ತ ಚಿತ್ರವು ಸಾಗುತ್ತದೆ. ಇಬ್ಬರು ಒಂದು ಮಟ್ಟಕ್ಕೆ ಪ್ರೀತಿಸಿರುತ್ತಾರೆ. ನಾವುಗಳು ಬ್ರೇಕ್‌ಅಪ್ ಎನ್ನುವ ಪದವನ್ನು ನಮ್ಮ ಮನಸ್ಸಿನಿಂದ ಅಳಿಸಿ ಹಾಕಿದ ನಂತರ, ಅಮವ್ಯಾಸೆಯ ದಿನ ಯಮಗಂಡ ಕಾಲದಲ್ಲಿ ಮದುವೆಯಾಗಲು ನಿರ್ಧರಿಸಿ ಒಬ್ಬರನ್ನೊಬ್ಬರು ಅರಿತುಕೊಳ್ಳಲು ಒಂದು ಸ್ಥಳಕ್ಕೆ ಹೋಗುತ್ತಾರೆ. ಅಲ್ಲಿಗೆ ಹೋದಾಗ ಏನಾಗುತ್ತದೆ. ನೋಡುಗರಿಗೆ ಊಹಿಸಲಾಗದ ತಿರುವುಗಳಿವೆ. ಕ್ಲೈಮಾಕ್ಸ್‌ದಲ್ಲಿ ಹೀಗೂ ಆಗಬಹುದು ಎನ್ನುವಲ್ಲಿಗೆ ಶುಭಂ ಬರುತ್ತದೆ. ನಮ್ಮ ಚಿತ್ರವು ಎಲ್ಲಾ ಕಮರ್ಷಿಯಲ್ ಸಿನಿಮಾಗಳ ಅಂಶಗಳನ್ನು ಹೊಂದಿದ್ದರೂ, ಒಂದು ಅಂಶವು ಖಂಡಿತ ಭಿನ್ನವಾಗಿದೆ. ಅದನ್ನು ತಿಳಿಯಲು ನೀವುಗಳು ಚಿತ್ರಮಂದಿರಕ್ಕೆ ಬನ್ನಿರೆಂದುʼʼ ಕೋರಿದರು.



ನಾಯಕನಾಗಬೇಕೆಂದು ಆಸೆ ಪಟ್ಟಿದ್ದೆ. ಉದ್ಯಮದಲ್ಲಿ ಯಶಸ್ಸು ಕಂಡು, ಈಗ ತೇಜಸ್ ಸಿನಿ ಕ್ರಿಯೇಶನ್ಸ್ ಮೂಲಕ ನಿರ್ಮಾಪಕನಾಗಿದ್ದೇನೆ ಎನ್ನುತ್ತಾರೆ ಶ್ರೀಧರ್.ಎನ್.ಸಿ.ಹೊಸಮನೆ. ನಟ ಮಂಡ್ಯರಮೇಶ್ ಬಳಿ ತರಭೇತಿ ಪಡೆದುಕೊಂಡಿರುವ ವಿಶಾಲ್ ಮಣ್ಣೂರು ನಾಯಕ. ಮೆಡಿಕಲ್ ವ್ಯಾಸಂಗ ಮಾಡುತ್ತಿರುವ ಮಂಡ್ಯದ ವಿಹಾನಿ, ಕಿರುಚಿತ್ರಗಳಲ್ಲಿ ನಟಿಸಿ, ಈಗ ನಾಯಕಿಯಾಗಿ ಬಡ್ತಿಗೊಂಡಿದ್ದಾರೆ. ಉಳಿದಂತೆ ಸಿ.ವಿಜಯ್‌ಕುಮಾರ್, ರಕ್ಷಿತ್, ಗಣೇಶ್, ಪ್ರಸನ್ನ ಬಾಗೀನ, ಅರ್ಪಿತ ಮುಂತಾದವರು ನಟಿಸಿದ್ದಾರೆ.

ಸಾಹಿತ್ಯ-ಸಂಗೀತ ಡಾ.ವಿ.ನಾಗೇಂದ್ರಪ್ರಸಾದ್, ಛಾಯಾಗ್ರಹಣ ಕುಮಾರ್‌ಗೌಡನಾಗವಾರ, ಸಂಕಲನ ನಿಷಿತ್‌ಪೂಜಾರಿ-ವಿನಯ್, ಹಿನ್ನಲೆ ಶಬ್ದ ನಿತಿನ್, ಸಾಹಸ ಕುಂಗು ಫು ಚಂದ್ರು ಅವರದಾಗಿದೆ. ವಿತರಕ ಎಂ.ರಮೇಶ್ ಒಡೆತನದ ಅಕ್ಷರ ಫಿಲಿಂಸ್ ಮುಖಾಂತರ ಚಿತ್ರವು ಜೂನ್ ತಿಂಗಳಲ್ಲಿ ತೆರೆಗೆ ಬರುವ ಸಾಧ್ಯತೆ ಇದೆ.

Continue Reading

ಸಿನಿಮಾ

Kannada New Movie: ಬ್ಯಾಂಕ್‌ ಆಫ್‌ ಭಾಗ್ಯಲಕ್ಷ್ಮೀ ಸಿನಿಮಾದ ಪೋಸ್ಟರ್ ಔಟ್‌; ಶೀಘ್ರದಲ್ಲೇ ತೆರೆಗೆ

Kannada New Movie: ‘ರಂಗಿ ತರಂಗʼ, ‘ಅವನೇ ಶ್ರೀಮನ್ನಾರಾಯಣ’ಸಿನಿಮಾ ಖ್ಯಾತಿಯ ನಿರ್ಮಾಪಕ ಎಚ್.ಕೆ ಪ್ರಕಾಶ್ ನಿರ್ಮಾಣದ 5ನೇ ಸಿನಿಮಾ ಬ್ಯಾಂಕ್‌ ಆಫ್‌ ಭಾಗ್ಯಲಕ್ಷ್ಮೀ ಚಿತ್ರದ ಪೋಸ್ಟರ್ ಈಚೆಗೆ ಬಿಡುಗಡೆಯಾಯಿತು. ನಿರ್ದೇಶಕ ಸಿಂಪಲ್ ಸುನಿ, ʼಬ್ಯಾಂಕ್‌ ಆಫ್‌ ಭಾಗ್ಯಲಕ್ಷ್ಮೀʼ ಸಿನಿಮಾದ ಪೋಸ್ಟರ್ ಬಿಡುಗಡೆ ಮಾಡಿದರು.

VISTARANEWS.COM


on

Bank of Bhagyalakshmi movie poster released
Koo

ಬೆಂಗಳೂರು: ‘ರಂಗಿ ತರಂಗʼ, ‘ಅವನೇ ಶ್ರೀಮನ್ನಾರಾಯಣ’ ಸಿನಿಮಾ ಖ್ಯಾತಿಯ ನಿರ್ಮಾಪಕ ಎಚ್.ಕೆ. ಪ್ರಕಾಶ್ ನಿರ್ಮಾಣದ 5ನೇ ಸಿನಿಮಾ ʼಬ್ಯಾಂಕ್‌ ಆಫ್‌ ಭಾಗ್ಯಲಕ್ಷ್ಮೀʼ ಚಿತ್ರದ ಪೋಸ್ಟರ್ (Kannada New Movie) ಬಿಡುಗಡೆಯಾಯಿತು.

ಕಾರ್ಯಕ್ರಮದಲ್ಲಿ ನಿರ್ದೇಶಕ ಸಿಂಪಲ್ ಸುನಿ ಅವರು ಬ್ಯಾಂಕ್‌ ಆಫ್‌ ಭಾಗ್ಯಲಕ್ಷ್ಮೀ ಸಿನಿಮಾದ ಪೋಸ್ಟರ್ ಬಿಡುಗಡೆ ಮಾಡಿದರು.

ದೀಕ್ಷಿತ್ ಶೆಟ್ಟಿ ಅಭಿನಯದ ಚಿತ್ರ‌

ದಿಯಾ , ದಸರಾ, ಕೆಟಿಎಂ ಹಾಗೂ ಬ್ಲಿಂಕ್ ಸಿನಿಮಾಗಳಲ್ಲಿ ಅಭಿನಯದಲ್ಲಿ ಹೆಸರು ಮಾಡಿ, ತೆಲುಗು, ಮಲಯಾಳಂಗಳಲ್ಲಿ ಚಿತ್ರಗಳಲ್ಲಿ ನಟಿಸಿ ಜನಪ್ರಿಯರಾಗಿರುವ ದೀಕ್ಷಿತ್ ಶೆಟ್ಟಿ ಈ ಸಿನಿಮಾದಲ್ಲಿ ನಾಯಕನಾಗಿ ನಟಿಸುತ್ತಿದ್ದಾರೆ. ಬೃಂದಾ ಆಚಾರ್ಯ ಸಿನಿಮಾದ ನಾಯಕಿಯಾಗಿದ್ದಾರೆ.

ಇದನ್ನೂ ಓದಿ: Inspirational Story: 25 ವರ್ಷಗಳ ಹಿಂದೆ ಕಸದ ತೊಟ್ಟಿಯಲ್ಲಿ ಸಿಕ್ಕ ಅಂಧ ಹೆಣ್ಣುಮಗುವಿನ ಸಾಧನೆ ನೋಡಿ!

ಚಿತ್ರಕ್ಕೆ ನವ ನಿರ್ದೇಶಕ ಅಭಿಷೇಕ ಎಂ. ಅವರ ನಿರ್ದೇಶನವಿದೆ. ನಿರ್ದೇಶಕ ಸಿಂಪಲ್ ಸುನಿ ಜತೆ ‘ಸಿಂಪಲ್ ಆಗಿ ಒಂದ್ ಲವ್ ಸ್ಟೋರಿ’, ‘ಬಹುಪರಾಕ್’ ಮತ್ತು ‘ಆಪರೇಷನ್ ಅಲಮೇಲಮ್ಮ’ ಸಿನಿಮಾಗಳಿಗೆ ಸಹ ನಿರ್ದೇಶಕನಾಗಿ ಹಾಗು ಕೆಲ ಸಿನಿಮಾಗಳಿಗೆ ಸಂಕಲನ ಮಾಡಿದ ಅನುಭವ ಇವರಿಗಿದೆ. ‘ಪಿನಾಕ’ ಎಂಬ ವಿಎಫ್‌ಎಕ್ಸ್‌ (VFX) ಸ್ಟುಡಿಯೋ ಕೂಡ ಹೊಂದಿರುವ ಅಭಿಷೇಕ್ ಎಂ. ‘ಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿ ಮೂಲಕ ಚೊಚ್ಚಲ ಬಾರಿಗೆ ನಿರ್ದೇಶನಕ್ಕೆ ಇಳಿದಿದ್ದಾರೆ.

ಹಾಸ್ಯ ಪ್ರಧಾನ ಕಥಾಹಂದರ

ಬ್ಯಾಂಕ್‌ವೊಂದನ್ನು ದರೋಡೆ ಮಾಡಲು ಹೊರಟವರ ಸುತ್ತ ಹೆಣೆಯಲಾದ ಹಾಸ್ಯ ಪ್ರಧಾನ ಕಥಾಹಂದರವನ್ನು ಈ ಚಿತ್ರವು ಒಳಗೊಂಡಿದೆ. ಸಹ ಕಲಾವಿದರಾಗಿ ಸಾಧುಕೋಕಿಲ, ಗೋಪಾಲ ಕೃಷ್ಣ ದೇಶಪಾಂಡೆ, ಉಷಾ ಭಂಡಾರಿ, ಭರತ್, ವಿಶ್ವನಾಥ್, ಹರೀಶ್ ಸಮಷ್ಟಿ, ಅಶ್ವಿನ್ ರಾವ್ ಪಲ್ಲಕ್ಕಿ, ಶ್ರೇಯಸ್ ಶರ್ಮಾ, ಶ್ರೀ ವತ್ಸ, ವಿನುತ್ ಸೇರಿದಂತೆ ಮುಂತಾದ ಬಹುದೊಡ್ಡ ತಾರಾಗಣ ಚಿತ್ರದಲ್ಲಿದೆ.

ಶೀಘ್ರದಲ್ಲೇ ಚಿತ್ರೀಕರಣ ಮುಕ್ತಾಯ

ಬೆಂಗಳೂರು, ತುಮಕೂರು ಹಾಗೂ ಚಿತ್ರದುರ್ಗ ಸುತ್ತಮುತ್ತ ಶೇ.80 ರಷ್ಟು ಸಿನಿಮಾದ ಚಿತ್ರೀಕರಣ ಮುಗಿದಿದ್ದು, ಮುಂದಿನ ತಿಂಗಳಿನೊಳಗೆ ಚಿತ್ರೀಕರಣ ಮುಕ್ತಾಯವಾಗಲಿದೆ. ಆದಷ್ಟು ಬೇಗ ಸಿನಿಮಾ ಬಿಡುಗಡೆ ಮಾಡಲು ಚಿತ್ರತಂಡ ತಯಾರಿ ನಡೆಸುತ್ತಿದೆ.

ಇದನ್ನೂ ಓದಿ: Russia Tourism: ವೀಸಾ ಇಲ್ಲದೆ ಭಾರತೀಯರಿನ್ನು ರಷ್ಯಾಕ್ಕೆ ಭೇಟಿ ನೀಡಬಹುದು!

ಇನ್ನು ʼಬ್ಯಾಂಕ್‌ ಆಫ್‌ ಭಾಗ್ಯಲಕ್ಷ್ಮೀʼ ಸಿನಿಮಾವನ್ನು ನಿರ್ಮಾಪಕ ಎಚ್.ಕೆ ಪ್ರಕಾಶ್, ಕನ್ನಡದ ಜತೆಗೆ ತೆಲುಗಿನಲ್ಲಿ ತೆರೆ ಮೇಲೆ ತರಲು ಸಜ್ಜಾಗಿದ್ದಾರೆ. ಜ್ಯೂಡಾ ಸ್ಯಾಂಡಿ ಸಂಗೀತ ನಿರ್ದೇಶನ, ಅಭಿಷೇಕ್ ಜಿ. ಕಾಸರಗೋಡು ಅವರ ಕ್ಯಾಮೆರಾ ನಿರ್ದೇಶನ, ರಘು ಮೈಸೂರ್ ಅವರ ಕಲಾ ನಿರ್ದೇಶನ, ಭೂಷಣ್ ಮಾಸ್ಟರ್ ನೃತ್ಯ ಈ ಚಿತ್ರಕ್ಕಿದೆ.

Continue Reading
Advertisement
Kundapur News
ಕರ್ನಾಟಕ6 mins ago

Kundapur News: ಅನಾರೋಗ್ಯದಿಂದ ತಾಯಿ ಸಾವು, ಶವದ ಜತೆ 4 ದಿನ ಕಳೆದ ಬುದ್ಧಿಮಾಂದ್ಯ ಪುತ್ರಿಯೂ ಮೃತ್ಯು!

RCB vs CSK
ಕ್ರಿಕೆಟ್19 mins ago

RCB vs CSK: ಧೋನಿ ವರ್ತನೆಗೆ ‘ಇಟ್‌ ಹರ್ಟ್ಸ್‌​’ ಎಂದ ಆರ್​ಸಿಬಿ ಅಭಿಮಾನಿಗಳು; ಧೋನಿ ಮಾಡಿದ ತಪ್ಪೇನು?

Congress Manifesto
ದೇಶ21 mins ago

Congress Manifesto: ಕಾಂಗ್ರೆಸ್‌ ಪ್ರಣಾಳಿಕೆ ಬಗ್ಗೆ ಅಪಪ್ರಚಾರ; ವ್ಯಕ್ತಿ ಅರೆಸ್ಟ್‌-ಬಿಜೆಪಿ ಕಿಡಿ

Prajwal Revanna Case
ಕರ್ನಾಟಕ32 mins ago

Prajwal Revanna Case: ಡಿಕೆಶಿ 100 ಕೋಟಿ ರೂ. ಆಫರ್;‌ ಬೆಂಕಿ ಇಲ್ಲದೆ ಹೊಗೆಯಾಡಲ್ಲ ಎಂದ ಆರ್.‌ ಅಶೋಕ್

Karnataka Rain
ಮಳೆ35 mins ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

FSSAI alert
ಆರೋಗ್ಯ43 mins ago

FSSAI Warning: ನೀವು ತಿನ್ನುವ ಮಾವಿನ ಹಣ್ಣು ಸುರಕ್ಷಿತವಾಗಿದೆಯೇ?

Kannada New Movie Sambavami Yuge Yuge 4K Motion Poster
ಸಿನಿಮಾ52 mins ago

Kannada New Movie: `ಸಂಭವಾಮಿ ಯುಗೇಯುಗೇ’ ಚಿತ್ರದ ಕ್ಯಾರೆಕ್ಟರ್ ಮೋಷನ್ ಪೋಸ್ಟರ್ ಬಿಡುಗಡೆ

Prajwal Revanna Case
ಕರ್ನಾಟಕ1 hour ago

Prajwal Revanna Case: ಪೆನ್​​ಡ್ರೈವ್ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ; ದೇವರಾಜೇಗೌಡ ತಪ್ಪು ಮಾಹಿತಿ ನೀಡಿದ್ದಾರೆ: ಶಿವರಾಮೇಗೌಡ

Cholera
ಕರ್ನಾಟಕ1 hour ago

Cholera: ಸಿದ್ದರಾಮಯ್ಯ ತವರು ಕ್ಷೇತ್ರದಲ್ಲಿ ಕಾಲರಾ ಅಟ್ಟಹಾಸ; ಕಲುಷಿತ ನೀರು ಕುಡಿದು 114 ಜನಕ್ಕೆ ಕಾಯಿಲೆ!

RCB vs CSK
ಕ್ರೀಡೆ1 hour ago

RCB vs CSK: ಚೆನ್ನೈ ಸೋಲಿಗೆ ಧೋನಿ ಬಾರಿಸಿದ ಔಟ್​ ಆಫ್​ದಿ ಸ್ಟೇಡಿಯಂ ಸಿಕ್ಸರ್​ ಕಾರಣ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ35 mins ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ1 hour ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ3 hours ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ2 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ2 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ3 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು3 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ4 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

ಟ್ರೆಂಡಿಂಗ್‌