Murder case: ಹೆಂಡ್ತಿ ಮೇಲೆ ಸಂಶಯ; ಕುಡಿದು ಬಂದು ಕೊಡಲಿಯಿಂದ ಕೊಚ್ಚಿ ಕೊಂದ - Vistara News

ಕ್ರೈಂ

Murder case: ಹೆಂಡ್ತಿ ಮೇಲೆ ಸಂಶಯ; ಕುಡಿದು ಬಂದು ಕೊಡಲಿಯಿಂದ ಕೊಚ್ಚಿ ಕೊಂದ

Murder Case : ಕಂಠ ಪೂರ್ತಿ ಕುಡಿದು ಬಂದು ರಾತ್ರಿ ಎಲ್ಲ ಪತ್ನಿ ಜತೆಗೆ ಜಗಳವಾಡಿದ್ದ. ಬೆಳಗಾಗುವಷ್ಟರಲ್ಲಿ ಕೊಡಲಿಯಿಂದ ಹೊಡೆದು ಪತ್ನಿಯನ್ನೆ ಕೊಂದು ಹಾಕಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ದೌಡಾಯಸಿದ್ದು, ಸಂಶಯ ಪಿಶಾಚಿ ಪತಿಯನ್ನು ಬಂಧಿಸಿದ್ದಾರೆ.

VISTARANEWS.COM

on

Murder case in dharwad
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಧಾರವಾಡ: ಪತ್ನಿ ಮೇಲೆ ಸಂಶಯ ಪಟ್ಟ ಪಾಪಿ ಪತಿಯೊಬ್ಬ ಕೊಂದೆ (Murder Case) ಬಿಟ್ಟಿದ್ದಾನೆ. ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಆಯಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ. ಮಲ್ಲವ್ವ ಬಳ್ಳೂರ ಮೃತ ದುರ್ದೈವಿ. ಶಿವಪ್ಪ ಬಳ್ಳೂರ ಎಂಬಾತ ಪತ್ನಿ ಕೊಂದವನು.

ಶುಕ್ರವಾರ ರಾತ್ರಿ ಕುಡಿದು ಬಂದ ಶಿವಪ್ಪ ಪತ್ನಿ ಮಲ್ಲವ್ವಳ ಜತೆಗೆ ಜಗಳ ಮಾಡಿದ್ದಾನೆ. ನಂತರ ಶನಿವಾರ ಬೆಳಗಿನ ಜಾವ ಕೊಡಲಿಯಿಂದ ಪತ್ನಿಯನ್ನು ಕೊಚ್ಚಿ ಕೊಂದಿದ್ದಾನೆ. ಮದುವೆ ಆಗಿ 15 ವರ್ಷವಾದರೂ ಶಿವಪ್ಪ ನಿತ್ಯ ಪತ್ನಿ ಮೇಲೆ ಸಂಶಯ ಪಡುತ್ತಿದ್ದ. ಶುಕ್ರವಾರ ರಾತ್ರಿಯಿಡೀ ಜಗಳ ಮಾಡಿ ಬೆಳಗ್ಗೆ ಸಿಟ್ಟಿನಲ್ಲಿ ಪತ್ನಿಯನ್ನು ಕೊಂದು ಮನೆಯಲ್ಲಿಯೇ ಇದ್ದ.

ಅಕ್ಕ-ಪಕ್ಕದ ಮನೆಯವರು ಬಂದು ನೋಡಿದಾಗ ರಕ್ತಸಿಕ್ತವಾಗಿ ಬಿದ್ದಿದ್ದ ಮಲ್ಲವ್ವಳನ್ನು ಕಂಡು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ನವಲಗುಂದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಹಿಳೆಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಕೊಲೆಯಾದ ಜಾಗದಲ್ಲೇ ಕುಳಿತಿದ್ದ ಶಿವಪ್ಪನನ್ನು ಪೊಲೀಸರು ವಶಕ್ಕೆ ಪಡೆದು ತನಿಖೆಯನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ: Snake Bite: ತೋಟದ ಮನೆಯಲ್ಲಿ ಆಟವಾಡುತ್ತಿದ್ದ ಬಾಲಕಿಯ ಕಚ್ಚಿದ ಹಾವು; ಕ್ಷಣಾರ್ಧದಲ್ಲೆ ಹಾರಿಹೋಯ್ತು ಪ್ರಾಣ

ತುಮಕೂರಿನಲ್ಲಿ ಮಹಿಳೆ ಶವ ಪತ್ತೆ

ತಲೆ ಜಜ್ಜಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಕಮಲಮ್ಮ (35) ಕೊಲೆಯಾದವರು. ತುಮಕೂರು ಜಿಲ್ಲೆ ಶಿರಾ ತಾಲೂಕಿನ ಬುಕ್ಕಾಪಟ್ಟಣ ಹೋಬಳಿಯ ಕರೆಮಾದೇನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ಕರೆಮಾದೇನಹಳ್ಳಿ ಗ್ರಾಮದ ಚಂದ್ರಣ್ಣನ ಪತ್ನಿ ಕಮಲಮ್ಮ ತಡರಾತ್ರಿ ಹೊರಗೆ ಹೋಗಿದ್ದರು. ಈ ವೇಳೆ ಯಾರೋ ಹಂತಕರು ಕಲ್ಲಿನಿಂದಲ್ಲೋ ಅಥವಾ ಮಾರಾಕಸ್ತ್ರದಿಂದಲ್ಲೋ ತಲೆ ಜಜ್ಜಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಸ್ಥಳಕ್ಕೆ ಶಿರಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆ ಸಂಬಂಧ ಶಿರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಕೈ ಕೊಂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Prajwal Revanna Case: ವಿದೇಶದಲ್ಲಿಯೇ ಮೊಬೈಲ್‌ ನಾಶ ಮಾಡಿದರಾ ಪ್ರಜ್ವಲ್?

Prajwal Revanna Case: ಏಪ್ರಿಲ್‌ 26ರಂದು ತರಾತುರಿಯಲ್ಲಿ ವಿದೇಶಕ್ಕೆ ಹಾರಿದ್ದ ಪ್ರಜ್ವಲ್‌, ಮೊಬೈಲ್‌ ಅನ್ನೂ ಜೊತೆಗೆ ಕೊಂಡೊಯ್ದಿದ್ದರು. ಇದೀಗ ಪ್ರಜ್ವಲ್‌ ಜೇಬಿನಲ್ಲಿ ಎಸ್‌ಐಟಿ ಅಧಿಕಾರಿಗಳು ಮೊದಲಿಗೆ ತಡಕಾಡಿರುವುದೇ ಮೊಬೈಲ್‌ಗಾಗಿ. ಅಶ್ಲೀಲ ವಿಡಿಯೋಗಳನ್ನು ಚಿತ್ರೀಕರಿಸಿಕೊಂಡಿರುವ ಮೊಬೈಲ್‌ ಈ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಯಾಗಿದ್ದು, ಅದು ಇನ್ನೂ ಎಸ್‌ಐಟಿ ಅಧಿಕಾರಿಗಳಿಗೆ ದೊರೆತಿಲ್ಲ ಎನ್ನಲಾಗುತ್ತಿದೆ.

VISTARANEWS.COM

on

prajwal revanna case mobile
Koo

ಬೆಂಗಳೂರು: ಬೆಂಗಳೂರು: ಅಶ್ಲೀಲ ವಿಡಿಯೋ (obscene video) ಹಾಗೂ ಲೈಂಗಿಕ ದೌರ್ಜನ್ಯ (physical abuse) ಪ್ರಕರಣದಲ್ಲಿ ನಿನ್ನೆ ರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (kempegowda international airport) ಆರೆಸ್ಟ್ ಆಗಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ (Hassan MP Prajwal revanna Case) ಅವರಿಂದ ಪ್ರಕರಣದ ವಿಚಾರಣೆಗೆ ಅಗತ್ಯವಾಗಿರುವ ಸಾಕ್ಷ್ಯಗಳನ್ನು (ವಶಪಡಿಸಿಕೊಳ್ಳಲು ಎಸ್‌ಐಟಿ ಮುಂದಾಗಿದೆ. ಅಶ್ಲೀಲ ವಿಡಿಯೋಗಳನ್ನು ಚಿತ್ರೀಕರಿಸಿಕೊಂಡಿರುವ ಮೊಬೈಲ್‌ ಈ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಯಾಗಿದ್ದು, ಅದು ಇನ್ನೂ ಎಸ್‌ಐಟಿ ಅಧಿಕಾರಿಗಳಿಗೆ ದೊರೆತಿಲ್ಲ ಎನ್ನಲಾಗುತ್ತಿದೆ.

ಏಪ್ರಿಲ್‌ 26ರಂದು ತರಾತುರಿಯಲ್ಲಿ ವಿದೇಶಕ್ಕೆ ಹಾರಿದ್ದ ಪ್ರಜ್ವಲ್‌, ಮೊಬೈಲ್‌ ಅನ್ನೂ ಜೊತೆಗೆ ಕೊಂಡೊಯ್ದಿದ್ದರು. ಇದೀಗ ಪ್ರಜ್ವಲ್‌ ಜೇಬಿನಲ್ಲಿ ಎಸ್‌ಐಟಿ ಅಧಿಕಾರಿಗಳು ಮೊದಲಿಗೆ ತಡಕಾಡಿರುವುದೇ ಮೊಬೈಲ್‌ಗಾಗಿ. ವಿಡಿಯೋಗಳನ್ನು ಈಗಾಗಲೇ ನಾಶ ಮಾಡಿರಬಹುದಾದರೂ, ಮೊಬೈಲ್‌ ಸಿಕ್ಕಿದರೆ ಅವುಗಳನ್ನು ರಿಟ್ರೀವ್‌ ಮಾಡುವ ಅವಕಾಶ ಇದೆ. ಸಾಧನವೇ ಸಿಗದೇ ಹೋದರೆ ಏನೂ ಮಾಡಲು ಸಾಧ್ಯವಿಲ್ಲ. ಹೀಗಾಗಿ ಮೊಬೈಲ್‌ ಅಧಿಕಾರಿಗಳ ಕೈಗೆ ಸಿಗದಂತೆ ಪ್ರಜ್ವಲ್‌ ಎಚ್ಚರ ವಹಿಸಿರಬಹುದು ಎನ್ನಲಾಗಿದೆ.

ಪ್ರಜ್ವಲ್ ರೇವಣ್ಣ ತಾವು ಬಳಸುತ್ತಿದ್ದ ಮೊಬೈಲ್ ಅನ್ನು ವಿದೇಶದಲ್ಲಿಯೇ ನಾಶ ಮಾಡಿರುವ ಸಾಧ್ಯತೆ ಇದೆ. ಪ್ರಕರಣ ದಾಖಲಾಗಿ ಎಸ್‌ಐಟಿ ರಚನೆಯಾಗುತ್ತಿದ್ದಂತೆಯೇ ಇದರ ತೀವ್ರತೆ ಅರಿತುಕೊಂಡ ಪ್ರಜ್ವಲ್‌, ಜರ್ಮನಿಯಲ್ಲಿಯೇ ಅಡಗಿಕೊಂಡಿದ್ದರು. ಅಲ್ಲಿಯೇ ಮೊಬೈಲ್ ಬಿಸಾಕಿರುವ ಸಾಧ್ಯತೆ ಇದೆ. ಮೊಬೈಲ್‌ ಬಚ್ಚಿಟ್ಟಿದ್ದರೆ ಅದನ್ನು ಆನ್‌ ಮಾಡಿದಾಗ ಲೊಕೇಶನ್‌ ಪತ್ತೆಯಾಗಲಿದೆ. ಹೀಗಾಗಿ ಮೊಬೈಲ್‌ ಅನ್ನು ನಾಶ ಮಾಡಿರುವ ಸಾಧ್ಯತೆಯೇ ಅಧಿಕವಾಗಿದೆ. ಈ ಎಲ್ಲದರ ಬಗ್ಗೆಯೂ ಎಸ್‌ಐಟಿ ತನಿಖೆ ನಡೆಸಲಿದೆ.

ಪ್ರಮುಖ ಆರೋಪಿ ತಲೆ ಮರೆಸಿಕೊಂಡಿದ್ದ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆಯಲ್ಲಿ ಸಾಕಷ್ಟು ಹಿನ್ನೆಡೆ ಆಗಿತ್ತು. ಇಂದಿನಿಂದ ಪ್ರಜ್ವಲ್ ರೇವಣ್ಣ ಅಸಲಿ ತನಿಖೆ ಶುರುವಾಗಲಿದೆ. ಈಗಾಗಲೇ ಬಂಧಿತರಾಗಿರುವ ಪ್ರಜ್ವಲ್‌ರನ್ನು ನೇರವಾಗಿ ಎಸ್ಐಟಿ ಕಚೇರಿಗೆ ಕರೆತಂದಿರುವ ಅಧಿಕಾರಿಗಳು, ಇಂದು ಬೆಳಗ್ಗೆ ಬೌರಿಂಗ್‌ ಆಸ್ಪತ್ರೆಗೆ ಕರೆದೊಯ್ದು, ಆರೋಪಿಯ ದೈಹಿಕ ಹಾಗೂ ಮಾನಸಿಕ ಆರೋಗ್ಯಗಳನ್ನು ದಾಖಲಿಸಿಕೊಳ್ಳಲಿದ್ದಾರೆ. ಆರೋಪಿ ತನಿಖಾಧಿಕಾರಿಗಳ ಮುಂದೆ ನೀಡುವ ಹೇಳಿಕೆಗಳನ್ನು ಪೂರ್ಣ ಮಾನಸಿಕ ಆರೋಗ್ಯದ ಸ್ಥಿತಿಯಲ್ಲಿ ನೀಡಿದ್ದಾನೆ ಎಂದು ಇವು ಖಚಿತಪಡಿಸಲಿವೆ.

ಈಗಾಗಲೇ ಪ್ರಜ್ವಲ್ ರೇವಣ್ಣ ಬಳಿ ಇರುವ ವಸ್ತುಗಳುನ್ನು, ವಿಮಾನದಲ್ಲಿ ಬಂದ ಲಗ್ಗೇಜ್‌ ಅನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಜ್ವಲ್‌ ಬಳಸುತ್ತಿದ್ದ ಮೊಬೈಲ್ ಸೇರಿ ಆತನ ಬಳಿ ಇದ್ದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಆದರೆ ಇದು ಯಾವ ಮೊಬೈಲ್‌ ಎಂದು ಗೊತ್ತಾಗಿಲ್ಲ. ನಿನ್ನೆ ರಾತ್ರಿ ಎಸ್‌ಐಟಿ ಕಚೇರಿಯಲ್ಲಿಯೇ ಕಳೆದಿರುವ ಪ್ರಜ್ವಲ್‌ ಅವರನ್ನು ಇಂದು ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿದ್ದು, ವೈದ್ಯಕೀಯ ಪರೀಕ್ಷೆಯ ಬಳಿಕ ನ್ಯಾಯಾಲಯದ ಮುಂದೆ ಹಾಜರುಪಡಿಸಿ ಪೊಲೀಸ್‌ ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ. ಪ್ರಜ್ವಲ್‌ ಪರ ವಕೀಲರು ಈಗಾಗಲೇ ಪೊಲೀಸ್‌ ಕಸ್ಟಡಿ ನಿರಾಕರಿಸುವ ವಾದಗಳನ್ನು ಸಿದ್ಧ ಮಾಡಿಕೊಂಡಿದ್ದಾರೆ.

ಇಂದು ನಡೆಯಲಿದೆ ಪುರಯಷತ್ವ ಪರೀಕ್ಷೆ

ಪ್ರಕರಣದ ತನಿಖೆ ಹಾಗೂ ವಿಚಾರಣೆಗೆ ಎಲ್ಲಾ ರೀತಿಯ ಸಿದ್ಧತೆಯನ್ನು ಎಸ್‌ಐಟಿ ನಡೆಸಿದೆ. ಒಂದು ವೇಳೆ, ವಿಡಿಯೋದಲ್ಲಿ ಇರುವಂಥ ಕಾಮಕಾಂಡ ತಾನೇನೂ ಮಾಡಿಲ್ಲ ಎಂದು ಪ್ರಜ್ವಲ್ ಅಫಿಡವಿಟ್ ಸಲ್ಲಿಸಿದರೆ, ಪ್ರಜ್ವಲ್ ರೇವಣ್ಣಗೆ ಪುರುಷತ್ವ ಪರೀಕ್ಷೆ ನಡೆಸುವ ಸಾಧ್ಯತೆ ಇದೆ. ತಾನು ಅತ್ಯಾಚಾರ ಮಾಡಿಲ್ಲ ಎಂದು ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸುವ ಸಾಧ್ಯತೆಯೂ ಇರುವುದರಿಂದ, ಮುಂದಿನ ಹಂತದಲ್ಲಿ ಪ್ರಜ್ವಲ್ ರೇವಣ್ಣರ ಪುರುಷತ್ವ ಪರೀಕ್ಷೆಯನ್ನು ಎಸ್‌ಐಟಿ ಮಾಡಿಸಲಿದೆ.

ನಂತರ ಹಾಸನ ಸಂಸದರ ನಿವಾಸದಲ್ಲಿ ಸಂಗ್ರಹಿಸಲಾದ ಹಾಸಿಗೆ- ಹೊದಿಕೆ ಇತ್ಯಾದಿಗಳಲ್ಲಿ ಕಂಡುಬಂದಿರುವ ಡಿಎನ್‌ಎಗೂ, ಪ್ರಜ್ವಲ್‌ ಡಿಎನ್‌ಎಗೂ ಮ್ಯಾಚ್‌ ಮಾಡಲಾಗುತ್ತದೆ. ಒಟ್ಟು ಮೂರು ಹಂತದಲ್ಲಿ ಪ್ರಜ್ವಲ್ ರೇವಣ್ಣ ವೈದ್ಯಕೀಯ ಪರೀಕ್ಷೆ ನಡೆಯಲಿದೆ. ಈ ಹಿಂದೆಯೂ ಅನೇಕರಿಗೆ ಅತ್ಯಾಚಾರ ಪ್ರಕರಣದಲ್ಲಿ ಪುರುಷತ್ವ ಪರೀಕ್ಷೆ ನಡೆಸಲಾಗಿತ್ತು. ಸ್ವಾಮಿ ನಿತ್ಯಾನಂದ, ಮುರುಘಾ ಶ್ರೀ, ಅಸಾರಾಂ ಬಾಪು ಸೇರಿದಂತೆ ಹಲವರಿಗೆ ಪುರುಷತ್ವ ಪರೀಕ್ಷೆ ನಡೆಸಲಾಗಿತ್ತು.

ಹಾಗಿದ್ರೆ ಹೇಗೆ ನಡೆಯುತ್ತೆ ಪುರುಷತ್ವ ಪರೀಕ್ಷೆ?

ಇದು ಲೈಂಗಿಕ ಸಾಮರ್ಥ್ಯ ಸಾಬೀತು ಪಡಿಸುವ ಪರೀಕ್ಷೆ. ಲೈಂಗಿಕ ಕಿರುಕುಳ, ಅತ್ಯಾಚಾರ ಮುಂತಾದ ದೂರುಗಳು ಕೇಳಿ ಬಂದಾಗ ಆರೋಪಿ ಪುರುಷತ್ವ ಪರೀಕ್ಷೆ ನಡೆಸಲಾಗುತ್ತೆ. ಪ್ರಾಥಮಿಕ ಹಂತದಲ್ಲಿ ಮೂರು ರೀತಿ ಪರೀಕ್ಷೆ ನಡೆಸಲಾಗುತ್ತದೆ.

1) ಪುರುಷರ ಜನನಾಂಗ ನಿಮಿರುವಿಕೆ, ವೀರ್ಯ ವಿಶ್ಲೇಷಣೆ, ಶಿಶ್ನಕ್ಕೆ ಪೂರೈಕೆಯಾಗುವ ರಕ್ತನಾಳಗಳ ಪರೀಕ್ಷೆಯನ್ನು ಮುಖ್ಯವಾಗಿ ನಡೆಸಲಾಗುತ್ತದೆ. ಆಂಡ್ರೋಲಜಿಸ್ಟ್ ಸೇರಿದಂತೆ ನಾಲ್ವರು ತಜ್ಞ ವೈದ್ಯರ ತಂಡ ಈ ಪರೀಕ್ಷೆ ನಡೆಸುತ್ತಾರೆ.

2) ನಂತರ ವೀರ್ಯ ವಿಶ್ಲೇಷಣೆ (A Semen Analysis) ನಡೆಯುತ್ತದೆ. ಪುರುಷನ ವೀರ್ಯ ಮತ್ತು ವೀರ್ಯಾಣುಗಳ ಗುಣಲಕ್ಷಣಗಳ ಮೌಲ್ಯಮಾಪನ ನಡೆಸುವ ಪರೀಕ್ಷೆ ಇದು.

3) ಡಾಪ್ಲರ್ ಅಲ್ಟ್ರಾಸೌಂಡ್ ಪರೀಕ್ಷೆ (Penile Doppler Ultrasound) ನಡೆಯಲಿದೆ. ಆರೋಪಿಯ ಖಾಸಗಿ ಅಂಗಕ್ಕೆ ಸರಿಯಾಗಿ ರಕ್ತ ಪೂರೈಕೆಯಾಗುತ್ತಿದೆಯೆ? ಕ್ತದ ಪ್ರಮಾಣ ಎಷ್ಟಿದೆ? ಎಂಬುದು ತಿಳಿಯುವ ಟೆಸ್ಟ್. ವಯಾಗ್ರಾದಂಥ ಮೆಡಿಸಿನ್ ಸೇವಿಸಿದರೂ ಕೂಡ ಈ ಪರೀಕ್ಷೆಯಲ್ಲಿ ಗೊತ್ತಾಗುತ್ತೆ.

4) Nocturnal Penile Tumescence (NPT) Test. ಆಸ್ಪತ್ರೆಯ ನಿದ್ರಾ ಪ್ರಯೋಗಶಾಲೆಯಲ್ಲಿ ನಡೆಯುವ ಪರೀಕ್ಷೆ ಇದು. ಆರೋಪಿಯ ಖಾಸಗಿ ಅಂಗ ರಾತ್ರಿ ನಿದ್ರೆಯಲ್ಲಿ ಯಾವ ರೀತಿ ಪ್ರತಿಕ್ರಿಯಿಸುತ್ತೆ ಎಂದು ಎನ್‌ಪಿಟಿ ಪರೀಕ್ಷೆಯಲ್ಲಿ ಪರಿಶೀಲನೆ ನಡೆಸಲಾಗುತ್ತದೆ. ಈ ಪರೀಕ್ಷೆ ಸಾಮಾನ್ಯವಾಗಿ ಆಸ್ಪತ್ರೆಯ ನಿದ್ರಾ ಪ್ರಯೋಗಶಾಲೆಯಲ್ಲಿ ನಡೆಯುತ್ತದೆ. ಆರೋಪಿಯ ಅರಿವಿಗೆ ಬಾರದಂತೆ ನಡೆಯುವ ಪರೀಕ್ಷೆ ಇದು. ಈ ಮೂರು ಟೆಸ್ಟ್ ಮೂಲಕ ಆರೋಪಿಯ ಪುರುಷತ್ವ ಪರೀಕ್ಷೆ ನಡೆಯುತ್ತವೆ. ಈ ಟೆಸ್ಟ್‌ನ ರಿಪೋರ್ಟ್‌ಗಳು ಅತ್ಯಾಚಾರ ಪ್ರಕರಣದಲ್ಲಿ ಬಹಳ ಮುಖ್ಯವಾಗುತ್ತವೆ.

ಇದನ್ನೂ ಓದಿ: Prajwal Revanna Case: ಮೇ 31ರಂದೇ ಪ್ರಜ್ವಲ್‌ ರೇವಣ್ಣ ಭಾರತಕ್ಕೆ ಬರಲು ಕಾರಣವೇನು? ಇಲ್ಲಿದೆ ಇಂಟರೆಸ್ಟಿಂಗ್‌ ಸ್ಟೋರಿ

Continue Reading

ಕ್ರೈಂ

Prajwal Revanna Case: ಪ್ರಜ್ವಲ್ ರೇವಣ್ಣಗೆ ಮೊದಲು ನಡೆಯೋದೇ ಆ ಟೆಸ್ಟ್‌ ! ಹೇಗೆ ನಡೆಯುತ್ತೆ ಪುರುಷತ್ವ ಪರೀಕ್ಷೆ?

Prajwal Revanna Case: ಪ್ರಕರಣದ ತನಿಖೆ ಹಾಗೂ ವಿಚಾರಣೆಗೆ ಎಲ್ಲಾ ರೀತಿಯ ಸಿದ್ಧತೆಯನ್ನು ಎಸ್‌ಐಟಿ ನಡೆಸಿದೆ. ಒಂದು ವೇಳೆ, ವಿಡಿಯೋದಲ್ಲಿ ಇರುವಂಥ ಕಾಮಕಾಂಡ ತಾನೇನೂ ಮಾಡಿಲ್ಲ ಎಂದು ಪ್ರಜ್ವಲ್ ಅಫಿಡವಿಟ್ ಸಲ್ಲಿಸಿದರೆ, ಪ್ರಜ್ವಲ್ ರೇವಣ್ಣಗೆ ಪುರುಷತ್ವ ಪರೀಕ್ಷೆ ನಡೆಸುವ ಸಾಧ್ಯತೆ ಇದೆ.

VISTARANEWS.COM

on

prajwal revanna case airport arrest
Koo

ಬೆಂಗಳೂರು: ಅಶ್ಲೀಲ ವಿಡಿಯೋ (obscene video) ಹಾಗೂ ಲೈಂಗಿಕ ದೌರ್ಜನ್ಯ (physical abuse) ಪ್ರಕರಣದಲ್ಲಿ ನಿನ್ನೆ ರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (kempegowda international airport) ಆರೆಸ್ಟ್ ಆಗಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ (Hassan MP Prajwal revanna Case) ಅವರನ್ನು ಇಂದು ಮೊದಲು ವೈದ್ಯಕೀಯ ಪರೀಕ್ಷೆಗೆ (Medical test) ಒಳಪಡಿಸಲು ಎಸ್‌ಐಟಿ (SIT) ಮುಂದಾಗಿದೆ. ಆರೋಪಿ ತನಿಖೆಗೆ ಸಹಕರಿಸಲು ದೈಹಿಕ- ಮಾನಸಿಕವಾಗಿ ಸಿದ್ಧನಾಗಿದ್ದಾನೆಯೇ ಎಂಬುದನ್ನು ಈ ಪರೀಕ್ಷೆಗಳ ಮೂಲಕ ತಿಳಿದುಕೊಳ್ಳಲಾಗುತ್ತದೆ.

ಪ್ರಕರಣದ ತನಿಖೆ ಹಾಗೂ ವಿಚಾರಣೆಗೆ ಎಲ್ಲಾ ರೀತಿಯ ಸಿದ್ಧತೆಯನ್ನು ಎಸ್‌ಐಟಿ ನಡೆಸಿದೆ. ಒಂದು ವೇಳೆ, ವಿಡಿಯೋದಲ್ಲಿ ಇರುವಂಥ ಕಾಮಕಾಂಡ ತಾನೇನೂ ಮಾಡಿಲ್ಲ ಎಂದು ಪ್ರಜ್ವಲ್ ಅಫಿಡವಿಟ್ ಸಲ್ಲಿಸಿದರೆ, ಪ್ರಜ್ವಲ್ ರೇವಣ್ಣಗೆ ಪುರುಷತ್ವ ಪರೀಕ್ಷೆ ನಡೆಸುವ ಸಾಧ್ಯತೆ ಇದೆ. ತಾನು ಅತ್ಯಾಚಾರ ಮಾಡಿಲ್ಲ ಎಂದು ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸುವ ಸಾಧ್ಯತೆಯೂ ಇರುವುದರಿಂದ, ಮುಂದಿನ ಹಂತದಲ್ಲಿ ಪ್ರಜ್ವಲ್ ರೇವಣ್ಣರ ಪುರುಷತ್ವ ಪರೀಕ್ಷೆಯನ್ನು ಎಸ್‌ಐಟಿ ಮಾಡಿಸಲಿದೆ.

ನಂತರ ಹಾಸನ ಸಂಸದರ ನಿವಾಸದಲ್ಲಿ ಸಂಗ್ರಹಿಸಲಾದ ಹಾಸಿಗೆ- ಹೊದಿಕೆ ಇತ್ಯಾದಿಗಳಲ್ಲಿ ಕಂಡುಬಂದಿರುವ ಡಿಎನ್‌ಎಗೂ, ಪ್ರಜ್ವಲ್‌ ಡಿಎನ್‌ಎಗೂ ಮ್ಯಾಚ್‌ ಮಾಡಲಾಗುತ್ತದೆ. ಒಟ್ಟು ಮೂರು ಹಂತದಲ್ಲಿ ಪ್ರಜ್ವಲ್ ರೇವಣ್ಣ ವೈದ್ಯಕೀಯ ಪರೀಕ್ಷೆ ನಡೆಯಲಿದೆ. ಈ ಹಿಂದೆಯೂ ಅನೇಕರಿಗೆ ಅತ್ಯಾಚಾರ ಪ್ರಕರಣದಲ್ಲಿ ಪುರುಷತ್ವ ಪರೀಕ್ಷೆ ನಡೆಸಲಾಗಿತ್ತು. ಸ್ವಾಮಿ ನಿತ್ಯಾನಂದ, ಮುರುಘಾ ಶ್ರೀ, ಅಸಾರಾಂ ಬಾಪು ಸೇರಿದಂತೆ ಹಲವರಿಗೆ ಪುರುಷತ್ವ ಪರೀಕ್ಷೆ ನಡೆಸಲಾಗಿತ್ತು.

ಹಾಗಿದ್ರೆ ಹೇಗೆ ನಡೆಯುತ್ತೆ ಪುರುಷತ್ವ ಪರೀಕ್ಷೆ?

ಇದು ಲೈಂಗಿಕ ಸಾಮರ್ಥ್ಯ ಸಾಬೀತು ಪಡಿಸುವ ಪರೀಕ್ಷೆ. ಲೈಂಗಿಕ ಕಿರುಕುಳ, ಅತ್ಯಾಚಾರ ಮುಂತಾದ ದೂರುಗಳು ಕೇಳಿ ಬಂದಾಗ ಆರೋಪಿ ಪುರುಷತ್ವ ಪರೀಕ್ಷೆ ನಡೆಸಲಾಗುತ್ತೆ. ಪ್ರಾಥಮಿಕ ಹಂತದಲ್ಲಿ ಮೂರು ರೀತಿ ಪರೀಕ್ಷೆ ನಡೆಸಲಾಗುತ್ತದೆ.

1) ಪುರುಷರ ಜನನಾಂಗ ನಿಮಿರುವಿಕೆ, ವೀರ್ಯ ವಿಶ್ಲೇಷಣೆ, ಶಿಶ್ನಕ್ಕೆ ಪೂರೈಕೆಯಾಗುವ ರಕ್ತನಾಳಗಳ ಪರೀಕ್ಷೆಯನ್ನು ಮುಖ್ಯವಾಗಿ ನಡೆಸಲಾಗುತ್ತದೆ. ಆಂಡ್ರೋಲಜಿಸ್ಟ್ ಸೇರಿದಂತೆ ನಾಲ್ವರು ತಜ್ಞ ವೈದ್ಯರ ತಂಡ ಈ ಪರೀಕ್ಷೆ ನಡೆಸುತ್ತಾರೆ.

2) ನಂತರ ವೀರ್ಯ ವಿಶ್ಲೇಷಣೆ (A Semen Analysis) ನಡೆಯುತ್ತದೆ. ಪುರುಷನ ವೀರ್ಯ ಮತ್ತು ವೀರ್ಯಾಣುಗಳ ಗುಣಲಕ್ಷಣಗಳ ಮೌಲ್ಯಮಾಪನ ನಡೆಸುವ ಪರೀಕ್ಷೆ ಇದು.

3) ಡಾಪ್ಲರ್ ಅಲ್ಟ್ರಾಸೌಂಡ್ ಪರೀಕ್ಷೆ (Penile Doppler Ultrasound) ನಡೆಯಲಿದೆ. ಆರೋಪಿಯ ಖಾಸಗಿ ಅಂಗಕ್ಕೆ ಸರಿಯಾಗಿ ರಕ್ತ ಪೂರೈಕೆಯಾಗುತ್ತಿದೆಯೆ? ಕ್ತದ ಪ್ರಮಾಣ ಎಷ್ಟಿದೆ? ಎಂಬುದು ತಿಳಿಯುವ ಟೆಸ್ಟ್. ವಯಾಗ್ರಾದಂಥ ಮೆಡಿಸಿನ್ ಸೇವಿಸಿದರೂ ಕೂಡ ಈ ಪರೀಕ್ಷೆಯಲ್ಲಿ ಗೊತ್ತಾಗುತ್ತೆ.

4) Nocturnal Penile Tumescence (NPT) Test. ಆಸ್ಪತ್ರೆಯ ನಿದ್ರಾ ಪ್ರಯೋಗಶಾಲೆಯಲ್ಲಿ ನಡೆಯುವ ಪರೀಕ್ಷೆ ಇದು. ಆರೋಪಿಯ ಖಾಸಗಿ ಅಂಗ ರಾತ್ರಿ ನಿದ್ರೆಯಲ್ಲಿ ಯಾವ ರೀತಿ ಪ್ರತಿಕ್ರಿಯಿಸುತ್ತೆ ಎಂದು ಎನ್‌ಪಿಟಿ ಪರೀಕ್ಷೆಯಲ್ಲಿ ಪರಿಶೀಲನೆ ನಡೆಸಲಾಗುತ್ತದೆ. ಈ ಪರೀಕ್ಷೆ ಸಾಮಾನ್ಯವಾಗಿ ಆಸ್ಪತ್ರೆಯ ನಿದ್ರಾ ಪ್ರಯೋಗಶಾಲೆಯಲ್ಲಿ ನಡೆಯುತ್ತದೆ. ಆರೋಪಿಯ ಅರಿವಿಗೆ ಬಾರದಂತೆ ನಡೆಯುವ ಪರೀಕ್ಷೆ ಇದು. ಈ ಮೂರು ಟೆಸ್ಟ್ ಮೂಲಕ ಆರೋಪಿಯ ಪುರುಷತ್ವ ಪರೀಕ್ಷೆ ನಡೆಯುತ್ತವೆ. ಈ ಟೆಸ್ಟ್‌ನ ರಿಪೋರ್ಟ್‌ಗಳು ಅತ್ಯಾಚಾರ ಪ್ರಕರಣದಲ್ಲಿ ಬಹಳ ಮುಖ್ಯವಾಗುತ್ತವೆ.

ಇದನ್ನೂ ಓದಿ: Prajwal Revanna Case: ಮೇ 31ರಂದೇ ಪ್ರಜ್ವಲ್‌ ರೇವಣ್ಣ ಭಾರತಕ್ಕೆ ಬರಲು ಕಾರಣವೇನು? ಇಲ್ಲಿದೆ ಇಂಟರೆಸ್ಟಿಂಗ್‌ ಸ್ಟೋರಿ

Continue Reading

ಪ್ರಮುಖ ಸುದ್ದಿ

Murder News : ಬಾಯ್​ಫ್ರೆಂಡ್​ ಜತೆ ಸೇರಿ ಅಪ್ಪ, ತಮ್ಮನನ್ನು ಕೊಂದು ಕತ್ತರಿಸಿ ಫ್ರಿಜ್​ನಲ್ಲಿಟ್ಟಿದ್ದ 16ರ ಬಾಲಕಿ

Murder News: ಬಾಲಕಿಯನ್ನು ಪಟ್ಟಣದಲ್ಲಿ ಪತ್ತೆ ಹಚ್ಚಿದ ಬಳಿಕ ಮಂಗಳವಾರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು ಎಂದು ಹರಿದ್ವಾರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಪ್ರಮೇಂದ್ರ ದೋಭಾಲ್ ತಿಳಿಸಿದ್ದಾರೆ. ತಾನು ತನ್ನ ಗೆಳೆಯನೊಂದಿಗೆ ಹರಿದ್ವಾರಕ್ಕೆ ಬಂದಿದ್ದೇನೆ ಎಂದು ವಿಚಾರಣೆಯ ಸಮಯದಲ್ಲಿ ಬಹಿರಂಗಪಡಿಸಿದ್ದಾಳೆ

VISTARANEWS.COM

on

Murder News
Koo

ಡೆಹ್ರಾಡೂನ್: ತನ್ನ ಪ್ರೀತಿಗೆ ವಿರೋಧ ಮಾಡಿದ್ದ ತಂದೆ ಹಾಗೂ ತಮ್ಮನನ್ನು ಕೊಲೆ ಮಾಡಿ ತುಂಡಾಗಿ ಕತ್ತರಿಸಿ ಫ್ರಿಜ್​ನಲ್ಲಿಟ್ಟಿದ್ದ 16ರ ಬಾಲಕಿಯೊಬ್ಬಳನ್ನು (Murder News) ಹರಿದ್ವಾರ ಪೊಲೀಸರು ಬಂಧಿಸಿದ್ದಾರೆ. ಆಕೆ 19 ವರ್ಷದ ಬಾಯ್​ಫ್ರೆಂಡ್​ ಜತೆ ಸೇರಿಕೊಂಡು ಇಬ್ಬರನ್ನು ಕತ್ತರಿಸಿ ಫ್ರಿಜ್​ನಲ್ಲಿಟ್ಟು ಪರಾರಿಯಾಗಿದ್ದಳು. ಒಂದು ತಿಂಗಳ ಬಳಿಕ ಘಟನೆ ಬೆಳಕಿಗೆ ಬಂದಿದ್ದು ಬಳಿಕ ಆಕೆಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಮಾರ್ಚ್ 15 ರಂದು ಮಧ್ಯಪ್ರದೇಶದ ಜಬಲ್ಪುರದಲ್ಲಿ ಈ ಕೊಲೆ ನಡೆದಿದ್ದು, ಅಂದಿನಿಂದ ಬಾಲಕಿ ಪರಾರಿಯಾಗಿದ್ದಳು. ಆಕೆಯ 19 ವರ್ಷದ ಗೆಳೆಯ ಕೂಡ ಈ ಪ್ರಕರಣದಲ್ಲಿ ಆರೋಪಿಯಾಗಿದ್ದು, ಇನ್ನೂ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕಿಯನ್ನು ಪಟ್ಟಣದಲ್ಲಿ ಪತ್ತೆ ಹಚ್ಚಿದ ಬಳಿಕ ಮಂಗಳವಾರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು ಎಂದು ಹರಿದ್ವಾರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಪ್ರಮೇಂದ್ರ ದೋಭಾಲ್ ತಿಳಿಸಿದ್ದಾರೆ. ತಾನು ತನ್ನ ಗೆಳೆಯನೊಂದಿಗೆ ಹರಿದ್ವಾರಕ್ಕೆ ಬಂದಿದ್ದೇನೆ ಎಂದು ವಿಚಾರಣೆಯ ಸಮಯದಲ್ಲಿ ಬಹಿರಂಗಪಡಿಸಿದ್ದಾಳೆ ಎಂದು ಅಧಿಕಾರಿ ತಿಳಿಸಿದ್ದಾರೆ.

19 ವರ್ಷದ ಯುವಕನೊಂದಿಗಿನ ಸಂಬಂಧವನ್ನು ಅಪ್ಪ ವಿರೋಧಿಸಿದ ಕಾರಣ ಅವರನ್ನು ಮೊದಲು ಕೊಂದಿದ್ದಳು. ಅದನ್ನು ನೋಡಿದ ಸಹೋದರನನ್ನೂ ಅಪರಾಧಕ್ಕೆ ಸಾಕ್ಷಿಯಾಗುತ್ತಾನೆ ಹೆದರಿ ಕೊಂದಿದ್ದಾರೆ ಎಂದು ದೋಭಾಲ್ ಹೇಳಿದ್ದಾರೆ. ಅವರು ಶವಗಳನ್ನು ತುಂಡುಗಳಾಗಿ ಕತ್ತರಿಸಿ ಫ್ರಿಜ್​ನಲ್ಲಿಟ್ಟು ತುಂಬಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಕಿಯ ಪ್ರಕಾರ ಆಕೆಯ ಗೆಳೆಯ ಕೊಗೆ ಸಂಚು ರೂಪಿಸಿದ್ದ. ಬಾಲಕಿಯನ್ನು ಮಧ್ಯಪ್ರದೇಶ ಪೊಲೀಸರಿಗೆ ಹಸ್ತಾಂತರಿಸಲಾಗಿದ್ದು, ಆಕೆಯ ಪ್ರಿಯಕರನಿಗಾಗಿ ಶೋಧ ನಡೆಯುತ್ತಿದೆ ಎಂದು ದೋಭಾಲ್ ತಿಳಿಸಿದ್ದಾರೆ.

ಇದನ್ನೂ ಓದಿ: Viral Video: ಪ್ರಜ್ಞೆ ಕಳೆದುಕೊಂಡು ಬಿದ್ದ ಕೋತಿಗೆ ಮರುಜೀವ ನೀಡಿದ ಪೊಲೀಸ್ ಅಧಿಕಾರಿ; ಮನ ಮಿಡಿಯೋ ವಿಡಿಯೊ ಇಲ್ಲಿದೆ

ಸಿಸಿಬಿ ತೆಕ್ಕೆಗೆ ವಕೀಲೆ ಚೈತ್ರಾ ಡೆತ್ ಕೇಸ್; 15 ದಿನಗಳ ಸಿಸಿಟಿವಿ ಪರಿಶೀಲನೆ

ಬೆಂಗಳೂರು: ವಕೀಲೆ ಚೈತ್ರಾ ಅವರ (Advocate Chaitra Gowda Case) ಸಾವು ಅವರ ಆಪ್ತರಿಗೆ ಇನ್ನೂ ಕೂಡ ನಿಗೂಢವಾಗಿಯೇ ಇದೆ. ಪೊಲೀಸರ ವರದಿಯಲ್ಲಿ ಇದೊಂದು ಆತ್ಮಹತ್ಯೆ ಎಂದರೂ ಕೂಡ ಅದನ್ನು ಚೈತ್ರಾ ಆಪ್ತರು ಒಪ್ಪುವ ಸ್ಥಿತಿಯಲ್ಲಿಲ್ಲ. ಹೀಗಾಗಿ ಈ ಪ್ರಕರಣವನ್ನು ಸಿಸಿಬಿ ತೆಕ್ಕೆಗೆ (Suspicious Death) ವಹಿಸಲಾಗಿದೆ.

ಇದೇ ತಿಂಗಳ ಮೇ 11ರಂದು ಚೈತ್ರಾ ಗೌಡ ಅವರ ಮೃತದೇಹ ಪತ್ತೆಯಾಗಿತ್ತು. ಮೇಲ್ನೋಟಕ್ಕೆ ಇದೊಂದದು ಆತ್ಮಹತ್ಯೆ ಎಂದು ಹೇಳಲಾಗಿತ್ತು. ಪೋಸ್ಟ್‌ ಮಾರ್ಟಮ್‌ ರಿಪೋರ್ಟ್‌ನಲ್ಲಿ ಚೈತ್ರಾ ಸಾವು ಆತ್ಮಹತ್ಯೆಯಿಂದಲೇ (Self Harming) ಆಗಿದೆ ಎಂಬುದು ದೃಢಪಟ್ಟಿತ್ತು. ಆದರೆ ಅವರ ಆಪ್ತ ವಲಯ ಚೈತ್ರಾಗೌಡ ಅವರ ಸಾವು ಸಹಜವಲ್ಲ ಎಂದು ಇಂದಿಗೂ ಕೂಡ ವಾದಿಸುತ್ತಲೆ ಇದೆ. ಹೀಗಾಗಿ ವಕೀಲರ ಸಂಘದವರು ಪೊಲೀಸ್ ಆಯುಕ್ತರಿಗೆ ಪತ್ರ ಬರೆದು ಈ ಸಾವಿನ ಬಗ್ಗೆ ತನಿಖೆ ನಡೆಸಿ ಎಂದಿದ್ದರು. ಇದರ ಫಲವಾಗಿ ಪ್ರಕರಣದ ಹೆಚ್ಚಿನ ತನಿಖೆಗೆ ಪೊಲೀಸ್ ಆಯುಕ್ತರು ಸಿಸಿಬಿಗೆ ವರ್ಗಾವಣೆ ಮಾಡಿದ್ದಾರೆ.

ಈ ಹಿನ್ನೆಲೆಯಲ್ಲಿ ತನಿಖೆ ಕೈಗೆತ್ತಿಕೊಂಡಿರುವ ಸಿಸಿಬಿ ಪೊಲೀಸರು ಮೊದಲು ಆಕೆಯ ಸಾವಿನ 15 ದಿನಗಳ ಹಿಂದಿನ ಸಿಸಿಟಿವಿಗಳನ್ನು ಕಲೆ ಹಾಕುವ ಕೆಲಸ ಶುರು ಮಾಡಿದೆ. ಜತೆಗೆ ಚೈತ್ರಾರ ಮೊಬೈಲ್‌ಗೆ ಬಂದ ಕರೆಗಳ ಸಿಡಿಆರ್‌ಗಳನ್ನು ಸಂಗ್ರಹಿಸಿದೆ. ಚೈತ್ರಾರಿಗೆ ಯಾರಾದರೂ ತೊಂದರೆ ಕೊಟ್ಟಿರುವುದು ಅಥವಾ ಬೆದರಿಕೆ ಹಾಕಿದ್ದರಾ ಎಂಬುದನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಹೀಗಾಗಿ ಚೈತ್ರ ಗೌಡ ಅವರ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದೆ.

Continue Reading

ಬೆಂಗಳೂರು

Suspicious Death: ಸಿಸಿಬಿ ತೆಕ್ಕೆಗೆ ವಕೀಲೆ ಚೈತ್ರಾ ಡೆತ್ ಕೇಸ್; 15 ದಿನಗಳ ಸಿಸಿಟಿವಿ ಪರಿಶೀಲನೆ

Advocate Chaitra Gowda Case : ಕಳೆದ ಮೇ 11ರಂದು ಹೈಕೋರ್ಟ್‌ ವಕೀಲೆ ಚೈತ್ರಾ ಅವರ ಮೃತದೇಹವು ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಪೋಸ್ಟ್‌ ಮಾರ್ಟಮ್‌ ರಿಪೋರ್ಟ್‌ನಲ್ಲಿ ಚೈತ್ರಾ ಸಾವು ಆತ್ಮಹತ್ಯೆಯಿಂದಲೇ (Self Harming) ಆಗಿದೆ ಎಂಬುದು ದೃಢಪಟ್ಟಿತ್ತು. ಆದರೆ ಇದೀಗ ಅವರ ಸಾವಿನ ಕುರಿತು ಆಪ್ತರು ಅನುಮಾನ ವ್ಯಕ್ತಪಡಿಸಿದ ಕಾರಣಕ್ಕೆ ಸಿಸಿಬಿ ವರ್ಗಾವಣೆ ಮಾಡಲಾಗಿದೆ.

VISTARANEWS.COM

on

By

Suspicious Death Advocate Chaitra Gowda Case
Koo

ಬೆಂಗಳೂರು: ವಕೀಲೆ ಚೈತ್ರಾ ಅವರ (Advocate Chaitra Gowda Case) ಸಾವು ಅವರ ಆಪ್ತರಿಗೆ ಇನ್ನೂ ಕೂಡ ನಿಗೂಢವಾಗಿಯೇ ಇದೆ. ಪೊಲೀಸರ ವರದಿಯಲ್ಲಿ ಇದೊಂದು ಆತ್ಮಹತ್ಯೆ ಎಂದರೂ ಕೂಡ ಅದನ್ನು ಚೈತ್ರಾ ಆಪ್ತರು ಒಪ್ಪುವ ಸ್ಥಿತಿಯಲ್ಲಿಲ್ಲ. ಹೀಗಾಗಿ ಈ ಪ್ರಕರಣವನ್ನು ಸಿಸಿಬಿ ತೆಕ್ಕೆಗೆ (Suspicious Death) ವಹಿಸಲಾಗಿದೆ.

ಇದೇ ತಿಂಗಳ ಮೇ 11ರಂದು ಚೈತ್ರಾ ಗೌಡ ಅವರ ಮೃತದೇಹ ಪತ್ತೆಯಾಗಿತ್ತು. ಮೇಲ್ನೋಟಕ್ಕೆ ಇದೊಂದದು ಆತ್ಮಹತ್ಯೆ ಎಂದು ಹೇಳಲಾಗಿತ್ತು. ಪೋಸ್ಟ್‌ ಮಾರ್ಟಮ್‌ ರಿಪೋರ್ಟ್‌ನಲ್ಲಿ ಚೈತ್ರಾ ಸಾವು ಆತ್ಮಹತ್ಯೆಯಿಂದಲೇ (Self Harming) ಆಗಿದೆ ಎಂಬುದು ದೃಢಪಟ್ಟಿತ್ತು. ಆದರೆ ಅವರ ಆಪ್ತ ವಲಯ ಚೈತ್ರಾಗೌಡ ಅವರ ಸಾವು ಸಹಜವಲ್ಲ ಎಂದು ಇಂದಿಗೂ ಕೂಡ ವಾದಿಸುತ್ತಲೆ ಇದೆ. ಹೀಗಾಗಿ ವಕೀಲರ ಸಂಘದವರು ಪೊಲೀಸ್ ಆಯುಕ್ತರಿಗೆ ಪತ್ರ ಬರೆದು ಈ ಸಾವಿನ ಬಗ್ಗೆ ತನಿಖೆ ನಡೆಸಿ ಎಂದಿದ್ದರು. ಇದರ ಫಲವಾಗಿ ಪ್ರಕರಣದ ಹೆಚ್ಚಿನ ತನಿಖೆಗೆ ಪೊಲೀಸ್ ಆಯುಕ್ತರು ಸಿಸಿಬಿಗೆ ವರ್ಗಾವಣೆ ಮಾಡಿದ್ದಾರೆ.

ಈ ಹಿನ್ನೆಲೆಯಲ್ಲಿ ತನಿಖೆ ಕೈಗೆತ್ತಿಕೊಂಡಿರುವ ಸಿಸಿಬಿ ಪೊಲೀಸರು ಮೊದಲು ಆಕೆಯ ಸಾವಿನ 15 ದಿನಗಳ ಹಿಂದಿನ ಸಿಸಿಟಿವಿಗಳನ್ನು ಕಲೆ ಹಾಕುವ ಕೆಲಸ ಶುರು ಮಾಡಿದೆ. ಜತೆಗೆ ಚೈತ್ರಾರ ಮೊಬೈಲ್‌ಗೆ ಬಂದ ಕರೆಗಳ ಸಿಡಿಆರ್‌ಗಳನ್ನು ಸಂಗ್ರಹಿಸಿದೆ. ಚೈತ್ರಾರಿಗೆ ಯಾರಾದರೂ ತೊಂದರೆ ಕೊಟ್ಟಿರುವುದು ಅಥವಾ ಬೆದರಿಕೆ ಹಾಕಿದ್ದರಾ ಎಂಬುದನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಹೀಗಾಗಿ ಚೈತ್ರ ಗೌಡ ಅವರ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದೆ.

ಇದನ್ನೂ ಓದಿ: BMTC Driver : ಬಿಎಂಟಿಸಿ ಎಲೆಕ್ಟ್ರಿಕಲ್‌ ಬಸ್‌ಗೆ ಪರಭಾಷಿಕರ ನೇಮಕ; ಡಿಸಿ ಕಚೇರಿಗೆ ನುಗ್ಗಿ ಕನ್ನಡಿಗರ ಆಕ್ರೋಶ

ಏನಿದು ಪ್ರಕರಣ?

2016ರಲ್ಲಿ ಮದುವೆ ಆಗಿದ್ದ ಶಿವಕುಮಾರ್ ಹಾಗೂ ಚೈತ್ರಾ ದಂಪತಿಗೆ 5 ವರ್ಷದ ಒಂದು ಮಗು ಇದೆ. ಈ ದಂಪತಿ ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಸವಾಗಿದ್ದರು. ಚೈತ್ರಾ ಹೈಕೋರ್ಟ್ ವಕೀಲೆ ಆಗಿದ್ದರೆ, ಶಿವಕುಮಾರ್ ಕೆಐಡಿಬಿಯಲ್ಲಿ ಉಪವಿಭಾಗಾಧಿಕಾರಿ ಆಗಿದ್ದರು. ಸಂಜಯನಗರದ ಅಣ್ಣಯ್ಯಪ್ಪ ಲೇಔಟ್‌ನ ಅಪಾರ್ಟ್‌ಮೆಂಟ್‌ನ ಮೂರು ಫ್ಲಾಟ್‌ನಲ್ಲಿ ಒಂದರಲ್ಲಿ ಚೈತ್ರಾ ಕುಟುಂಬ ಹಾಗೂ ಇನ್ನೊಂದು ಫ್ಲಾಟ್‌ನಲ್ಲಿ ಮೃತಳ ತಮ್ಮ ವಾಸವಾಗಿದ್ದರು. ಮೇ 11ರ ಶನಿವಾರ ಬೆಳಗ್ಗೆ ಹತ್ತು ಗಂಟೆ ಸುಮಾರಿಗೆ ಪತಿ ಶಿವಕುಮಾರ್ ಜತೆ ನಂತರ ತಮ್ಮನನೊಟ್ಟಿಗೂ ಚೈತ್ರಾ ಮಾತನಾಡಿದ್ದ ಚೈತ್ರಾ 11 ಗಂಟೆ ಯಾರ ಫೋನ್‌ ಕರೆಗೂ ಸ್ಪಂದಿಸಿರಲಿಲ್ಲ. ಹೀಗಾಗಿ ಕಿಟಕಿಯಲ್ಲಿ ನೋಡಿದಾಗ ಫ್ಯಾನ್‌ಗೆ ವೇಲ್‌ನಿಂದ ನೇಣು ಬಿಗಿದುಕೊಂಡಿರುವುದು ಕಂಡು ಬಂದಿತ್ತು. ಕೂಡಲೇ ಚೈತ್ರಾಳ ಸಹೋದರ ಪೊಲೀಸರಿಗೆ ಮಾಹಿತಿ ನೀಡಿದ್ದರು.

ಚೈತ್ರಾರ ಬೆಡ್‌ ರೂಮಿನಲ್ಲಿ ಒಂದು ಪುಟದ ಡೆತ್ ನೋಟ್ ಪತ್ತೆಯಾಗಿತ್ತು. ಆದರೆ ಅದು ಮೂರು ತಿಂಗಳ ಹಿಂದೆ ಅಂದರೆ ಮಾರ್ಚ್ 11ರಂದು ಬರೆಯಲಾಗಿತ್ತು. ಡೆತ್‌ನೋಟ್‌ನಲ್ಲಿ, ನನ್ನ ಪತಿ ತುಂಬಾ ಒಳ್ಳೆಯವರು. ನೀವೂ ಜೀವನವನ್ನು ಎಂಜಾಯ್ ಮಾಡಿ. ಮಗಳನ್ನು ಚೆನ್ನಾಗಿ ನೋಡಿಕೊಳ್ಳಿ. ನಾನು ಡಿಪ್ರೆಶನ್‌ನಿಂದ ಬಳಲುತ್ತಿದ್ದೇನೆ. ಅದರಿಂದ ಹೊರ ಬರಲು ಸಾಕಷ್ಟು ಪ್ರಯತ್ನ ಪಟ್ಟಿದ್ದೇನೆ. ಆದರೆ ಆಗುತ್ತಿಲ್ಲ, ನಾನು ನನ್ನ ಜೀವನವನ್ನು ಇಲ್ಲಿಗೆ ಕೊನೆಗೊಳಿಸುತ್ತಿದ್ದೆನೆ. ಮಗುವನ್ನು ಚೆನ್ನಾಗಿ ನೋಡಿಕೊಂಡು ಲೈಫ್ ಎಂಜಾಯ್ ಮಾಡಿ. ಸೂಸೈಡ್ ಮಾಡಿಕೊಳ್ಳುವುದು ತಪ್ಪು ಎಂದು ಗೊತ್ತಿದೆ. ಆದರೂ ಸಹ ಆತ್ಮಹತ್ಯೆಯನ್ನು ಮಾಡಿಕೊಂಡು ನನ್ನ ಜೀವನಕ್ಕೆ ಅಂತ್ಯವಾಡಿದ್ದೇನೆ ಎಂದು ಬರೆದಿದ್ದರು.

ಇತ್ತ ಚೈತ್ರಾ ಕುಟುಂಬಸ್ಥರು ಇದು ಕೊಲೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದರು. ದೂರಿನನ್ವಯ ಚೈತ್ರಾ ಪತಿ,‌ ಕೆಎಎಸ್ ಅಧಿಕಾರಿ ಶಿವಕುಮಾರ್ ಅವರನ್ನು ಪೊಲೀಸರು ವಿಚಾರಣೆ ಮಾಡಿದ್ದರು. ವಿಚಾರಣೆ ವೇಳೆ, ಪತ್ನಿಯೊಂದಿಗೆ ಯಾವುದೇ ವೈಷಮ್ಯ ಇರಲಿಲ್ಲ. ಜತೆಗೆ ಯಾವುದೇ ಹಣಕಾಸಿನ ಸಮಸ್ಯೆ ಕೂಡ ಇರಲಿಲ್ಲ ಎಂದು ಶಿವಕುಮಾರ್‌ ತಿಳಿಸಿದ್ದರು. ಆದರೆ ಪ್ರಾಪರ್ಟಿ ವಿಚಾರವಾಗಿ ಆಗಾಗ್ಗೆ ಸ್ವಲ್ಪ ಜಗಳ ನಡೀತಾ ಇತ್ತು. ಇದರಿಂದ ಖಿನ್ನತೆಗೊಳಗಾಗಿದ್ದಳು ಎಂದು ಮಾಹಿತಿ ನೀಡಿದ್ದರು.

ಇದರೊಟ್ಟಿಗೆ ಮರಣೋತ್ತರ ಪರೀಕ್ಷೆಯಲ್ಲಿ ಇದು ಆತ್ಮಹತ್ಯೆ ಎಂದು ಕಂಡುಬಂದಿತ್ತು. ಜತೆಗೆ ಮನೆಯಲ್ಲಿ ಸಿಕ್ಕ ಡೆತ್ ನೋಟ್ ಕೂಡ ಚೈತ್ರಾ ಬರೆದಿರುವುದು ಖಚಿತವಾಗಿತ್ತು. ಚೈತ್ರಾ, ತಮ್ಮ ಕುಟುಂಬಸ್ಥರ ಬಳಿ ಮೂರು ತಿಂಗಳ ಹಿಂದೆಯೇ ತಾವು ಸಾಯುವುದಾಗಿ ಮಾತಾಡಿದ್ದರು. ಈ ಮಾತಾಡಿದ ಬಳಿಕವೇ ಡೆತ್‌ ನೋಟ್‌ ಬರೆದಿಟ್ಟಿರುವುದು ಗೊತ್ತಾಗಿತ್ತು. ಆದರೂ ಈಕೆಯ ಸಾವಿನ ಕುರಿತು ಆಪ್ತರು, ವಕೀಲ ಸಂಘದವರು ಅನುಮಾನವನ್ನು ವ್ಯಕ್ತಪಡಿಸುತ್ತಿದ್ದಾರೆ. ಹೀಗಾಗಿ ನಗರ ಪೊಲೀಸ್‌ ಆಯುಕ್ತರು ಪ್ರಕರಣವನ್ನು ಸಿಸಿಬಿಗೆ ವರ್ಗಾವಣೆ ಮಾಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Heat Wave
ದೇಶ14 seconds ago

Heat Wave: ಬಿಸಿ ಗಾಳಿ ಶಾಖಕ್ಕೆ ತತ್ತರಿಸಿದ ಬಿಹಾರ; ಎರಡೇ ಗಂಟೆಗಳಲ್ಲಿ 16 ಮಂದಿ ಸಾವು

prajwal revanna case mobile
ಪ್ರಮುಖ ಸುದ್ದಿ29 mins ago

Prajwal Revanna Case: ವಿದೇಶದಲ್ಲಿಯೇ ಮೊಬೈಲ್‌ ನಾಶ ಮಾಡಿದರಾ ಪ್ರಜ್ವಲ್?

Cervical Cancer
ಆರೋಗ್ಯ1 hour ago

Cervical Cancer: ಗರ್ಭಕೊರಳಿನ ಕ್ಯಾನ್ಸರ್‌ಗೆ ಮುನ್ನೆಚ್ಚರಿಕೆಯೇ ಮದ್ದು

prajwal revanna case airport arrest
ಕ್ರೈಂ1 hour ago

Prajwal Revanna Case: ಪ್ರಜ್ವಲ್ ರೇವಣ್ಣಗೆ ಮೊದಲು ನಡೆಯೋದೇ ಆ ಟೆಸ್ಟ್‌ ! ಹೇಗೆ ನಡೆಯುತ್ತೆ ಪುರುಷತ್ವ ಪರೀಕ್ಷೆ?

Karnataka Weather
ಮಳೆ2 hours ago

Karnataka Weather : ರಾಜ್ಯದಲ್ಲಿಂದು ಭಾರಿ ಮಳೆಗೆ ಗುಡುಗು, ಮಿಂಚು ಸಾಥ್‌

Prajwal Revanna Case
ಕರ್ನಾಟಕ2 hours ago

Prajwal Revanna Case: ಮೇ 31ರಂದೇ ಪ್ರಜ್ವಲ್‌ ರೇವಣ್ಣ ಭಾರತಕ್ಕೆ ಬರಲು ಕಾರಣವೇನು? ಇಲ್ಲಿದೆ ಇಂಟರೆಸ್ಟಿಂಗ್‌ ಸ್ಟೋರಿ

ICMR Guidelines
ಆರೋಗ್ಯ2 hours ago

ICMR Guidelines: ಶಿಶು ಆಹಾರ ಹೇಗಿರಬೇಕು? ಐಸಿಎಂಆರ್‌ ಮಾರ್ಗಸೂಚಿ ಹೀಗಿದೆ

Prajwal revanna Case
ಪ್ರಮುಖ ಸುದ್ದಿ3 hours ago

Prajwal Revanna Case : ಪೆನ್​ಡ್ರೈವ್ ಸಾರ್ವಜನಿಕ ಸ್ಥಳಗಳಲ್ಲಿ ಸಿಗುವುದರಿಂದ ಹಿಡಿದು ಪ್ರಜ್ವಲ್ ಬಂಧನದವರೆಗೆ; ಪ್ರಕರಣದ ಟೈಮ್​ಲೈನ್​ ಇಲ್ಲಿದೆ

Dina Bhavishya
ಭವಿಷ್ಯ3 hours ago

Dina Bhavishya : ಉದ್ಯೋಗಿಗಳಿಗೆ ತೆರೆಯಲಿದೆ ಅದೃಷ್ಟದ ಬಾಗಿಲು; ಪ್ರೇಮಿಗಳಿಗೆ ಶುಭ ಸೂಚನೆ

Prajwal Revanna Case
ಕರ್ನಾಟಕ7 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಕೊನೆಗೂ ಬಂಧನ; ಮುಂದೇನಾಗುತ್ತದೆ? ಏನಿದೆ ಪ್ರಕ್ರಿಯೆ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ19 hours ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ3 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು3 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ4 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ5 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು5 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌