Yogi Adityanath:"ಕಾಂಗ್ರೆಸ್‌ ಅಧಿಕಾರಕ್ಕೆ ಬಂದ್ರೆ ಮುಸ್ಲಿಮರಿಗೆ ಬೀಫ್‌ ಸೇವನೆ ಹಕ್ಕು"- ಮತ್ತೆ ಗುಡುಗಿದ ಯೋಗಿ - Vistara News

ರಾಜಕೀಯ

Yogi Adityanath:”ಕಾಂಗ್ರೆಸ್‌ ಅಧಿಕಾರಕ್ಕೆ ಬಂದ್ರೆ ಮುಸ್ಲಿಮರಿಗೆ ಬೀಫ್‌ ಸೇವನೆ ಹಕ್ಕು”- ಮತ್ತೆ ಗುಡುಗಿದ ಯೋಗಿ

Yogi Adityanath:ಬೀಫ್‌ ಸೇವನೆಗೆ ಪ್ರೋತ್ಸಾಹ ಕೊಡುವುದೇ ಇಂಡಿಯಾ ಒಕ್ಕೂಟದ ಪ್ರಮುಖ ಉದ್ದೇಶ. ಗೋವನ್ನು ತಾಯಿ ಎಂಬಂತೆ ಪೂಜಿಸುವ ಹಿಂದೂಗಳು ಬೀಫ್‌ ಸೇವನೆಯನ್ನು ಬಲವಾಗಿ ವಿರೋಧಿಸುತ್ತಾರೆ. ಆದರೆ ಕಾಂಗ್ರೆಸ್‌ ಮಾತ್ರ ಈ ವಿಚಾರದಲ್ಲಿ ಮುಸ್ಲಿಮರಿಗೆ ವಿನಾಯಿತಿಯನ್ನು ಕೊಡುವ ಪ್ರಯತ್ನ ನಡೆಸುತ್ತಿರುವುದು ಖಂಡನೀಯ ಎಂದು ಕಿಡಿ ಕಾರಿದರು.

VISTARANEWS.COM


on

Yogi Adityanath
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಕ್ನೋ: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಿದರೆ ದೇಶಾದ್ಯಂತ ಬೀಫ್‌ ಸೇವನೆ ಹಕ್ಕನ್ನು ನೀಡುವುದೇ ಅದರ ಪ್ರಮುಖ ಗುರಿಯಾಗಿದೆ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯಾನಾಥ್‌ (Yogi Adityanath) ಆರೋಪಿಸಿದ್ದಾರೆ. ಲಕ್ನೋದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್‌ ಪ್ರಣಾಳಿಕೆ(Congress Manifesto)ಗೆ ಬಗ್ಗೆ ಪ್ರಸ್ತಾಪಿಸಿ ವಾಗ್ದಾಳಿ ನಡೆಸಿದ ಅವ್ರು, ಬೀಫ್‌ ಸೇವನೆಗೆ(Beef consumption) ಪ್ರೋತ್ಸಾಹ ಕೊಡುವುದೇ ಇಂಡಿಯಾ ಒಕ್ಕೂಟದ(INDIA) ಪ್ರಮುಖ ಉದ್ದೇಶ. ಗೋವನ್ನು ತಾಯಿ ಎಂಬಂತೆ ಪೂಜಿಸುವ ಹಿಂದೂಗಳು ಬೀಫ್‌ ಸೇವನೆಯನ್ನು ಬಲವಾಗಿ ವಿರೋಧಿಸುತ್ತಾರೆ. ಆದರೆ ಕಾಂಗ್ರೆಸ್‌ ಮಾತ್ರ ಈ ವಿಚಾರದಲ್ಲಿ ಮುಸ್ಲಿಮರಿಗೆ ವಿನಾಯಿತಿಯನ್ನು ಕೊಡುವ ಪ್ರಯತ್ನ ನಡೆಸುತ್ತಿರುವುದು ಖಂಡನೀಯ ಎಂದು ಕಿಡಿ ಕಾರಿದರು.

ಶುಕ್ರವಾರ ನಡೆದ ಚುನಾವಣಾ ಪ್ರಚಾರದಲ್ಲೂ ಕಾಂಗ್ರೆಸ್‌ ವಿರುದ್ಧ ಗುಡುಗಿದ್ದ ಯೋಗಿ, ಅಲ್ಪಸಂಖ್ಯಾತರಿಗೆ ಬೀಫ್‌ ಸೇವನೆಯ ಹಕ್ಕನ್ನು ನೀಡಲು ಕಾಂಗ್ರೆಸ್‌ ಶತಾಯಗತಾಯ ಪ್ರಯತ್ನ ನಡೆಸುತ್ತಿದೆ ಎಂದು ಆಕ್ರೋಶ ಹೊರ ಹಾಕಿದ್ದರು. ಗಮನಾರ್ಹ ವಿಚಾರ ಅಂದರೆ, ಉತ್ತರಪ್ರದೇಶದಲ್ಲಿ ಈಗಾಗಲೇ ಗೋಹತ್ಯೆ ವಿರುದ್ಧ ಕಠಿಣ ಕಾನೂನು ಜಾರಿಗೊಳಿಸಲಾಗಿದ್ದು, ಅದನ್ನು ಉಲ್ಲಂಘಿಸಿದಲ್ಲಿ 10 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ₹ 5 ಲಕ್ಷದವರೆಗೆ ದಂಡ ವಿಧಿಸಲಾಗುತ್ತದೆ. ಇನ್ನು ಗೋವುಗಳ ಮೇಲೆ ಹಿಂಸಾಕೃತ್ಯಗಳಿಗೆ ಏಳು ವರ್ಷಗಳ ಜೈಲು ಶಿಕ್ಷೆ ಮತ್ತು ₹ 3 ಲಕ್ಷದವರೆಗೆ ದಂಡ ವಿಧಿಸುವ ಅವಕಾಶವಿದೆ.

ಯೋಗಿ ಆದಿತ್ಯನಾಥ್ ಅವರು, ದೇಶದ ಮೇಲೆ ಶರಿಯಾ ಕಾನೂನನ್ನು ಹೇರಲು ಕಾಂಗ್ರೆಸ್ ಬಯಸಿದೆ ಎಂದು ಹೇಳಿದ್ದರು. “ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳು ದೇಶಕ್ಕೆ ದ್ರೋಹ ಬಗೆದಿವೆ. ಮತ್ತೊಮ್ಮೆ ತಮ್ಮ ಸುಳ್ಳು ಪ್ರಣಾಳಿಕೆಯೊಂದಿಗೆ ನಿಮ್ಮ ಬಳಿಗೆ ಬಂದಿವೆ. ನೀವು ಕಾಂಗ್ರೆಸ್‌ನ ಪ್ರಣಾಳಿಕೆಯನ್ನು ನೋಡಿದರೆ, ಅವರು ಸರ್ಕಾರ ರಚಿಸಿದರೆ ಶರಿಯಾ ಕಾನೂನನ್ನು ಜಾರಿಗೆ ತರಲು ಉದ್ದೇಶಿಸಿರುವುದು ಗೊತ್ತಾಗುತ್ತದೆ” ಎಂದು ಯೋಗಿ ಆರೋಪಿಸಿದ್ದರು.

ಉತ್ತರ ಪ್ರದೇಶ ಸರ್ಕಾರವು 2020 ರಲ್ಲಿ ಗೋಹತ್ಯೆ ಕುರಿತು ಸುಗ್ರೀವಾಜ್ಞೆಯನ್ನು ಜಾರಿಗೊಳಿಸುವ ಮೂಲಕ ಕಾನೂನನ್ನು ರೂಪಿಸಿತು. ಗೋಹತ್ಯೆ ತಡೆ (ತಿದ್ದುಪಡಿ) ಕಾಯಿದೆ 2020 ರ ಮೂಲಕ, ಗೋ ಹತ್ಯೆ ಮತ್ತು ಗೋವುಗಳ ಅಕ್ರಮ ಸಾಗಾಟದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಅನುಕೂಲವಾಗುವಂತಹ ಸೆಕ್ಷನ್‌ಗಳನ್ನು ಸೇರ್ಪಡೆ ಮಾಡಲಾಯಿತು. ಈ ಹೊಸ ಕಾನೂನಿನ ಪ್ರಕಾರ ಹಸುಗಳ ಕಳ್ಳಸಾಗಣಿಕೆ ಪ್ರಕರಣಗಳಲ್ಲಿ ಪುನರಾವರ್ತಿತ ಅಪರಾಧಿಗಳಿಗೆ ಶಿಕ್ಷೆಯನ್ನು ದ್ವಿಗುಣಗೊಳಿಸಬಹುದು ಮತ್ತು 10 ವರ್ಷಗಳವರೆಗೆ ಜೈಲು ಶಿಕ್ಷೆಯನ್ನು ವಿಸ್ತರಿಸಬಹುದು.

ಇದನ್ನೂ ಓದಿ: Narendra Modi : ಇಂದು, ನಾಳೆ ರಾಜ್ಯದಲ್ಲಿ ಮೋದಿಯಿಂದ ಅಬ್ಬರದ ಪ್ರಚಾರ; ಬಹಿರಂಗ ಭಾಷಣದ ವಿವರ ಇಲ್ಲಿದೆ

ತಿದ್ದುಪಡಿ ಮಾಡಲಾದ ಕಾನೂನಿನ ಪ್ರಕಾರ, ಕಳ್ಳಸಾಗಣೆ ಮಾಡುತ್ತಿದ್ದ ಹಸು ಕಂಡುಬಂದರೆ, ಒಂದು ವರ್ಷದವರೆಗೆ ಅದರ ನಿರ್ವಹಣೆಗೆ ತಗಲುವ ವೆಚ್ಚವನ್ನು ಆರೋಪಿಯಿಂದ ವಸೂಲಿ ಮಾಡಲಾಗುತ್ತದೆ. ಹಸುಗಳು ಅಥವಾ ಅವುಗಳ ಮಾಂಸವನ್ನು ಸಾಗಿಸುವ ವಾಹನಗಳು, ಅವುಗಳ ಮಾಲೀಕರು ಅಥವಾ ಚಾಲಕರ ವಿರುದ್ಧ ಕ್ರಮಕ್ಕೆ ಸಂಬಂಧಿಸಿದಂತೆ ಹಿಂದಿನ ಕಾನೂನಿಗೆ ಸ್ಪಷ್ಟತೆ ಇರಲಿಲ್ಲ. ತಿದ್ದುಪಡಿ ಮಾಡಲಾದ ಕಾನೂನಿನ ಅಡಿಯಲ್ಲಿ, ಅವರನ್ನು ಸಹ ತಪ್ಪಿತಸ್ಥರೆಂದು ಪರಿಗಣಿಸಲಾಗುತ್ತದೆ. ಹೆಚ್ಚುವರಿಯಾಗಿ, ಚಾಲಕ ಮತ್ತು ನಿರ್ವಾಹಕರನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆ ಮತ್ತು ಅವರ ವಾಹನಗಳನ್ನು ಜಪ್ತಿ ಮಾಡಲಾಗುತ್ತದೆ. ಈ ಕಾನೂನಿನ ಅಡಿಯಲ್ಲಿ ಎಲ್ಲಾ ಅಪರಾಧಗಳು ಜಾಮೀನು ರಹಿತವಾಗಿರುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Lok Sabha Election : ಶತಕ ಬಾರಿಸಿದ ಕಾಂಗ್ರೆಸ್​​; ಪಕ್ಷೇತರನ ಬೆಂಬಲದೊಂದಿಗೆ ಕಾಂಗ್ರೆಸ್​ನ ಸೀಟ್​ಗಳ ಸಂಖ್ಯೆ 100ಕ್ಕೆ ಏರಿಕೆ

Lok Sabha Election : ಉದ್ಧವ್ ಠಾಕ್ರೆ ಈ ಸ್ಥಾನವನ್ನು ಕಾಂಗ್ರೆಸ್​ಗೆ ಬಿಟ್ಟುಕೊಡಲು ನಿರಾಕರಿಸಿದ್ದರು. ಹೀಗಾಗಿ ಪಾಟಿಲ್​ ಪಕ್ಷೇತರರಾಗಿ ಸ್ಪರ್ಧಿಸಿದ್ದರು. ಅವರು ತಮ್ಮ ಸಮೀಪದ ಬಿಜೆಪಿಯ ಸಂಜಯ್ ಪಾಟೀಲ್ ಅವರನ್ನು 1,00,053 ಮತಗಳಿಂದ ಸೋಲಿ ಸಿದ್ದರು. ಇಲ್ಲಿ ಶಿವಸೇನೆ ಅಭ್ಯರ್ಥಿ ಚಂದ್ರಹರ್ ಪಾಟೀಲ್ ಕೇವಲ 60,860 ಮತಗಳನ್ನು ಪಡೆದಿದ್ದರು.

VISTARANEWS.COM


on

Lok Sabha Election
Koo

ನವದೆಹಲಿ: ಲೋಕ ಸಭಾ ಚುನಾವಣೆಯಲ್ಲಿ (Lok Sabha Election) ಮಹಾರಾಷ್ಟ್ರದಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿದ್ದ ಗೆದ್ದಿದ್ದ ಸಂಸದರೊಬ್ಬರು ಗುರುವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಆ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಹೀಗಾಗಿ ಹಳೆ ಪಕ್ಷದ ಒಟ್ಟು ಸದಸ್ಯರ 100ಕ್ಕೆ ಏರಿಕೆಯಾಗಿದೆ. ಈ ಮೂಲಕ ಕಾಂಗ್ರೆಸ್ ಪಕ್ಷ ಶತಕದ ಸಂಭ್ರವನ್ನಾಚರಿಸಿದೆ. ಲೋಕಸಭಾ ಚುನಾವಣೆಗೆ ಸೀಟು ಹಂಚಿಕೆ ಒಪ್ಪಂದದ ಅಡಿಯಲ್ಲಿ ಮಹಾ ವಿಕಾಸ್ ಅಘಾಡಿ ಮೈತ್ರಿ ಪಾಲುದಾರ ಶಿವಸೇನೆ (ಯುಬಿಟಿ) ಗೆ ಟಿಕೆಟ್​ ನೀಡಿದ್ದಕ್ಕೆ ಬೇಸರಗೊಂಡಿದ್ದ ಕಾಂಗ್ರೆಸ್ ಮುಖಂಡ ವಿಶಾಲ್ ಪಾಟೀಲ್ ಸಾಂಗ್ಲಿಯಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದಿದ್ದರು. ಇದೀಗ ಅವರು ಮಾತೃಪಕ್ಷಕ್ಕೆ ವಾಪಸಾಗಿರುವ ಕಾರಣ ಕಾಂಗ್ರೆಸ್ ಸದಸ್ಯರ ಸಂಖ್ಯೆ ಹೆಚ್ಚಿದೆ.

ಉದ್ಧವ್ ಠಾಕ್ರೆ ಈ ಸ್ಥಾನವನ್ನು ಕಾಂಗ್ರೆಸ್​ಗೆ ಬಿಟ್ಟುಕೊಡಲು ನಿರಾಕರಿಸಿದ್ದರು. ಹೀಗಾಗಿ ಪಾಟಿಲ್​ ಪಕ್ಷೇತರರಾಗಿ ಸ್ಪರ್ಧಿಸಿದ್ದರು. ಅವರು ತಮ್ಮ ಸಮೀಪದ ಬಿಜೆಪಿಯ ಸಂಜಯ್ ಪಾಟೀಲ್ ಅವರನ್ನು 1,00,053 ಮತಗಳಿಂದ ಸೋಲಿ ಸಿದ್ದರು. ಇಲ್ಲಿ ಶಿವಸೇನೆ ಅಭ್ಯರ್ಥಿ ಚಂದ್ರಹರ್ ಪಾಟೀಲ್ ಕೇವಲ 60,860 ಮತಗಳನ್ನು ಪಡೆದಿದ್ದರು.

ಮಹಾರಾಷ್ಟ್ರದ ಜನರು ದ್ರೋಹ, ಅಹಂಕಾರ ಮತ್ತು ವಿಭಜನೆಯ ರಾಜಕೀಯವನ್ನು ಸೋಲಿಸಿದ್ದಾರೆ. ಸಾಮಾಜಿಕ ನ್ಯಾಯ, ಸಮಾನತೆ ಮತ್ತು ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜ್, ಮಹಾತ್ಮ ಜ್ಯೋತಿಬಾ ಫುಲೆ ಮತ್ತು ಬಾಬಾ ಸಾಹೇಬ್ ಡಾ.ಅಂಬೇಡ್ಕರ್ ಅವರಂತಹ ನಮ್ಮ ಪ್ರೇರಣಾದಾಯಕ ನಾಯಕರಿಗೆ ಇದು ಸೂಕ್ತ ಗೌರವವಾಗಿದೆ. ಸಾಂಗ್ಲಿಯ ಚುನಾಯಿತ ಸಂಸದ ಶ್ರೀ ವಿಶಾಲ್ ಪಾಟೀಲ್ (@patilvishalvp) ಅವರು ಕಾಂಗ್ರೆಸ್ ಪಕ್ಷಕ್ಕೆ ನೀಡಿದ ಬೆಂಬಲವನ್ನು ಸ್ವಾಗತಿಸುತ್ತೇನೆ. ಸಂವಿಧಾನ ದೀರ್ಘಕಾಲ ಸುರಕ್ಷಿತವಾಗಿರಲಿ ಎಂದು ಬರೆಯಲಾಗಿದೆ.

ಪಾಟೀಲ್ ಅವರ ಬೆಂಬಲವು ಲೋಕಸಭೆಯಲ್ಲಿ 99 ಸ್ಥಾನಗಳನ್ನು ಗೆದ್ದ ಕಾಂಗ್ರೆಸ್​ಗೆ ಗಮನಾರ್ಹ ಉತ್ತೇಜನ ಸಿಕ್ಕಿದೆ. ಈ ಪಕ್ಷ ಹಿಂದಿನ ಚುನಾವಣೆಯಲ್ಲಿ ಪಡೆದಿದ್ದ 52 ರಿಂದ ತನ್ನ ಸಂಖ್ಯೆಯನ್ನು ದುಪ್ಪಟ್ಟು ಮಾಡಿದೆ. ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಮಹಾರಾಷ್ಟ್ರದ 48 ಸ್ಥಾನಗಳಲ್ಲಿ 30 ಸ್ಥಾನಗಳನ್ನು ಗೆದ್ದಿವೆ. ಮತ್ತೊಂದೆಡೆ, ಬಿಜೆಪಿ-ಎನ್ಸಿಪಿ-ಶಿವಸೇನೆ ಮಹಾಯುತಿ ಮೈತ್ರಿಕೂಟವು ಕೇವಲ 17 ಸ್ಥಾನಗಳನ್ನು ಗಳಿಸಿತ್ತು.

ಇದನ್ನೂ ಓದಿ: Kangana Ranaut : ಪಂಜಾಬ್​ನಲ್ಲಿ ಭಯೋತ್ಪಾದನೆ ಹೆಚ್ಚುತ್ತಿದೆ; ತಮ್ಮ ಮೇಲೆ ಹಲ್ಲೆ ನಡೆಸಿದ ಬಗ್ಗೆ ಕಂಗನಾ ಪ್ರತಿಕ್ರಿಯೆ ಹೀಗಿತ್ತು

ಲೋಕಸಭಾ ಚುನಾವಣಾ ಫಲಿತಾಂಶದ ಬಗ್ಗೆ ಚರ್ಚಿಸಲು ಇಂಡಿಯಾ ಬಣದ ಸದಸ್ಯರು ಬುಧವಾರ ರಾಷ್ಟ್ರ ರಾಜಧಾನಿಯಲ್ಲಿ ಸಭೆ ಸೇರಿದರು. “ನಮ್ಮ ಮೈತ್ರಿಕೂಟಕ್ಕೆ ದೊರೆತ ಅಪಾರ ಬೆಂಬಲಕ್ಕಾಗಿ ಇಂಡಿಯಾ ಬಣದ ಘಟಕಗಳು ಭಾರತದ ಜನರಿಗೆ ಧನ್ಯವಾದ ಅರ್ಪಿಸುತ್ತವೆ. ಜನಾದೇಶವು ಬಿಜೆಪಿ ಮತ್ತು ಅವರ ದ್ವೇಷ ಮತ್ತು ಭ್ರಷ್ಟಾಚಾರದ ರಾಜಕೀಯಕ್ಕೆ ಸೂಕ್ತ ಉತ್ತರ ನೀಡಿದೆ” ಎಂದು ಖರ್ಗೆ ಸಭೆಯ ನಂತರ ಹೇಳಿದರು.

“ಇದು ಭಾರತದ ಸಂವಿಧಾನವನ್ನು ರಕ್ಷಿಸಲು ಮತ್ತು ಬೆಲೆ ಏರಿಕೆ, ನಿರುದ್ಯೋಗ ಮತ್ತು ಕ್ರೋನಿ ಕ್ಯಾಪಿಟಲಿಸಂ ವಿರುದ್ಧ ಮತ್ತು ಪ್ರಜಾಪ್ರಭುತ್ವವನ್ನು ಉಳಿಸಲು ಜನಾದೇಶವಾಗಿದೆ. ಮೋದಿ ನೇತೃತ್ವದ ಬಿಜೆಪಿಯ ಫ್ಯಾಸಿಸ್ಟ್ ಆಡಳಿತದ ವಿರುದ್ಧ ಭಾರತ ಬಣವು ಹೋರಾಟವನ್ನು ಮುಂದುವರಿಸುತ್ತದೆ” ಎಂದು ಅವರು ಹೇಳಿದರು.

Continue Reading

ಪ್ರಮುಖ ಸುದ್ದಿ

Kangana Ranaut: ಕಂಗನಾಗೆ ಮಹಿಳಾ ಪೇದೆ ಹೊಡೆಯಲು ಕಾರಣವೇನು? ರೈತರ ಬಗ್ಗೆ ಅವರು ನೀಡಿದ ವಿವಾದಾತ್ಮಕ ಹೇಳಿಕೆ ಏನು?

Kangana Ranaut : 2020 ರಲ್ಲಿ, ಕಂಗನಾ ರನೌತ್ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದ ಪಂಜಾಬ್​ನ ಮಹಿಳೆಯೊಬ್ಬರನ್ನು ತಪ್ಪಾಗಿ ಅಂದಾಜಿಸಿದ್ದರು. ಅದಕ್ಕಿಂತ ಹಿಂದೆ ಶಾಹೀನ್ ಬಾಗ್​ನಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾನೂನು (ಸಿಎಎ) ವಿರೋಧಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಬಿಲ್ಕಿಸ್ ಬಾನೊ ಅವರು ಎಂದುಕೊಂಡಿದ್ದರು. ಪ್ರತಿಭಟನೆಗೆ ಬರುವ ಮಹಿಳೆಯರೆಲ್ಲರೂ 100 ರೂಪಾಯಿಗೆ ಸಿಗುತ್ತಾರೆ ಎಂದು ಹೇಳಿದ್ದರು.

VISTARANEWS.COM


on

Kangana Ranaut
Koo

ನವದೆಹಲಿ: ಲೋಕ ಸಭಾ ಚುನಾವಣೆಯಲ್ಲಿ ಹಿಮಾಚಲ ಪ್ರದೇಶದ ಮಂಡಿಯಿಂದ ಸಂಸದರಾಗಿ ಆಯ್ಕೆಯಾದ ಕಂಗನಾ ರಣಾವತ್​ (Kangana Ranaut), 2020-21 ರಲ್ಲಿ ನಡೆದ ರೈತರ ಪ್ರತಿಭಟನೆಯ ಬಗ್ಗೆ ಹಿಂದೆ ನೀಡಿದ ಹೇಳಿಕೆಯಿಂದ ಕೆರಳಿದ್ದ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಮಹಿಳಾ ಸಿಬ್ಬಂದಿಯೊಬ್ಬರು ಗುರುವಾರ ಅವರು ಎದುರು ಸಿಕ್ಕಾಗ ಕಪಾಳಮೋಕ್ಷ ಮಾಡಿದ್ದರು. ನಟಿ ಹಾಗೂ ಸಂಸದೆಯ ವಿರುದ್ಧ ಕೈ ಮಾಡಿದ ಕುಲ್ವಿಂದರ್​ ಕೌರ್​ ವಿ ರುದ್ದ ಪ್ರಕರಣ ದಾಖಲಾಗಿದೆ. ಇದೇ ವೇಳೆ ನಟಿ ಈ ಹಿಂದೆ ನೀಡಿದ್ದ ಹೇಳಿಕೆಯೂ ಮುನ್ನೆಲೆಗೆ ಬಂದಿದೆ.

ನರೇಂದ್ರ ಮೋದಿ ಸರ್ಕಾರವು ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದ ಮೂರು ಕಾನೂನುಗಳನ್ನ ಜಾರಿಗೆ ತರಲು ಮುಂದಾದಾಗ ಅದರ ವಿರುದ್ಧ ಆಂದೋಲನ ನಡೆಸುತ್ತಿದ್ದ ಪ್ರತಿಭಟನಾಕಾರರನ್ನು ‘ಖಲಿಸ್ತಾನಿ ಬೆಂಬಲಿಗರು’ ಎಂದು ಒಂದು ಗುಂಪು ಕರೆದಿತ್ತು. ಈ ವಿವಾದಕ್ಕೆ ಈಡಾದಾಗ ಕಂಗಾನಾ ಆ ಗಾಯಕ್ಕೆ ಉಪ್ಪು ಸವರುವಂಥ ಹೇಳಿಕೆ ನೀಡಿದ್ದರು.

2020 ರಲ್ಲಿ, ಕಂಗನಾ ರನೌತ್ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದ ಪಂಜಾಬ್​ನ ಮಹಿಳೆಯೊಬ್ಬರನ್ನು ತಪ್ಪಾಗಿ ಅಂದಾಜಿಸಿದ್ದರು. ಅದಕ್ಕಿಂತ ಹಿಂದೆ ಶಾಹೀನ್ ಬಾಗ್​ನಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾನೂನು (ಸಿಎಎ) ವಿರೋಧಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಬಿಲ್ಕಿಸ್ ಬಾನೊ ಅವರು ಎಂದುಕೊಂಡಿದ್ದರು. ಪ್ರತಿಭಟನೆಗೆ ಬರುವ ಮಹಿಳೆಯರೆಲ್ಲರೂ 100 ರೂಪಾಯಿಗೆ ಸಿಗುತ್ತಾರೆ ಎಂದು ಹೇಳಿದ್ದರು. ಇದು ದೊಡ್ಡ ವಿವಾದ ಸೃಷ್ಟಿಸಿತ್ತು. ಅಂದ ಹಾಗೆ ಕಂಗನಾಗೆ ಹೊಡೆದ ಕಾನ್​ಸ್ಟೇಬಲ್​ ಕುಲ್ವಿಂದರ್ ಕೌರ್​ ತಾಯಿಯೂ ಆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಕಂಗನಾ ಹೇಳಿಕೆಯಿಂದ ಕೋಪಗೊಂಡಿದ್ದ ಅವರು ಪ್ರತಿಕಾರ ತೀರಿಸಲು ಕಾದಿದ್ದರು. ಅಂತೆಯೇ ಚಂಡಿಗಢದಲ್ಲಿ ತಪಾಸಣಾ ಕೇಂದ್ರಕ್ಕೆ ಬರುತ್ತಿದ್ದಂತೆ ಕಪಾಳ ಮೋಕ್ಷ ಮಾಡಿದ್ದಾರೆ.

100 ರೂಪಾಯಿಗೆ ಸಿಗುವ ಮಹಿಳೆಯರು ಎಂದು ಕಂಗನಾ ಕೊಟ್ಟಿರುವ ಹೇಳಿಕೆಯು ಎಕ್ಸ್ ನಲ್ಲಿ(ಟ್ವಿಟರ್​) ಕಂಗನಾ ಮತ್ತು ಗಾಯಕ-ನಟ ದಿಲ್ಜೀತ್ ದೋಸಾಂಜ್ ನಡುವೆ ಗಲಾಟೆಗೆ ಕಾರಣವಾಗಿತ್ತು.

ರಿಹಾನ್ನಾ ಬಗ್ಗೆಯೂ ಟೀಕೆ

ಫೆಬ್ರವರಿ 2021 ರಲ್ಲಿ, ಅಂತರರಾಷ್ಟ್ರೀಯ ಪಾಪ್ ಸೆನ್ಸೇಷನ್ ರಿಹಾನ್ನಾ ಅವರು ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದರು. ಅದಕ್ಕೆ ಪ್ರತಿಕ್ರಿಯಿಸಿದ್ದ ಕಂಗನಾ ರನೌತ್ ಪ್ರತಿಭಟನಾಕಾರರನ್ನು “ಭಯೋತ್ಪಾದಕರು” ಎಂದು ಕರೆದಿದ್ದರು ಮತ್ತು ಅವರು ಭಾರತವನ್ನು ವಿಭಜಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದರು.

ಇದನ್ನೂ ಓದಿ: Stock market Crash : ಜೂ. 4ರ ಷೇರುಪೇಟೆ ಕುಸಿತ ಮೋದಿ, ಅಮಿತ್​ ಶಾ ನಡೆಸಿದ ಮಹಾ ಹಗರಣ; ರಾಹುಲ್ ಗಾಂಧಿ ಆರೋಪ

ರಿಹಾನ್ನಾ ಅವರ ಎಕ್ಸ್​ ಪೋಸ್ಟ್​ಗೆ ಉತ್ತರಿಸಿದ ಕಂಗನಾ ರನೌತ್ ” ಅವರು ರೈತರಲ್ಲ, ಅವರು ಭಾರತವನ್ನು ವಿಭಜಿಸಲು ಪ್ರಯತ್ನಿಸುತ್ತಿರುವ ಭಯೋತ್ಪಾದಕರು. ಇವರಿಂದಾಗಿ ದುರ್ಬಲವಾಗುತ್ತಿರುವ ನಮ್ಮ ದೇಶವನ್ನು ಚೀನಾ ಸ್ವಾಧೀನಪಡಿಸಿಕೊಳ್ಳಬಹುದು. ಚೀನಾದ ವಸಾಹತು ಮಾಡಬಹುದು. ನೀವು ನಮ್ಮ ಬಗ್ಗೆ ಹೇಳಲು ಬರಬೇಡಿ ಎಂದು ಹೇಳಿಕೆ ನೀಡಿದ್ದರು.

ರಿಹಾನ್ನಾ ವಿರುದ್ಧದ ಮತ್ತು ₹ 100 ಪೋಸ್ಟ್​​ಗಳನ್ನು ಕಂಗನಾ ರಣಾವತ್​ ಅಳಿಸಿದ್ದರು. 2021 ರ ಡಿಸೆಂಬರ್​ನಲ್ಲಿ ಕೃಷಿ ಕಾನೂನುಗಳನ್ನು ರದ್ದುಪಡಿಸಲಾಯಿತು ಮತ್ತು ಕೆಲವು ದಿನಗಳ ನಂತರ, ರೈತರ ವಿರುದ್ಧದ ಹೇಳಿಕೆಗಳಿಗೆ ಕ್ಷಮೆಯಾಚಿಸುವಂತೆ ಒತ್ತಾಯಿಸಿ ಪ್ರತಿಭಟನಾಕಾರರು ಕಂಗನಾ ಅರ ಕಾರನ್ನು ಪಂಜಾಬ್​ನ ಕಿರಾತ್ಪುರ್ ಸಾಹಿಬ್​ನಲ್ಲಿ ತಡೆದಿದ್ದರು.

ಕಂಗನಾ ಪ್ರತಿಕ್ರಿಯೆ ಏನು?

ನಾನು ಸುರಕ್ಷಿತವಾಗಿದ್ದೇನೆ. ವಿಮಾನ ನಿಲ್ದಾಣದಲ್ಲಿ ಭದ್ರತಾ ತಪಾಸಣೆಯ ಸಮಯದಲ್ಲಿ ಈ ಘಟನೆ ನಡೆದಿದೆ. ತಪಾಸಣೆ ಮುಗಿದ ಕ್ಷಣ, ಬೇರೆ ಕ್ಯಾಬಿನ್​ನಲ್ಲಿದ್ದ ಸಿಐಎಸ್ಎಫ್​​ನ ಮಹಿಳಾ ಕಾನ್​ಸ್ಟೆಬಲ್​ ನನ್ನ ಬಳಿಗೆ ಬಂದು ನನ್ನ ಮುಖಕ್ಕೆ ಬದಿಯಿಂದ ಹೊಡೆದು ನಿಂದಿಸಿದಳು. ನೀವು ಇದನ್ನು ಏಕೆ ಮಾಡಿದ್ದೀರಿ ಎಂದು ನಾನು ಅವಳನ್ನು ಕೇಳಿದೆ. ಆಕೆ ರೈತರ ಪ್ರತಿಭಟನೆ ಬಗ್ಗೆ ನಾನು ನೀಡಿದ ಹೇಳಿಕೆಗಾಗಿ ಅಂದಳು ಎಂದು ನಟಿ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪಂಜಾಬ್​​ನಲ್ಲಿ ಭಯೋತ್ಪಾದನೆ ಹೆಚ್ಚುತ್ತಿದೆ. ಇದನ್ನು ಹೇಗೆ ನಿಭಾಯಿಸಬೇಕು ಎಂಬುದು ನನಗೆ ಕಳವಳಕಾರಿಯಾಗಿದೆ ಎಂದೂ ಕಂಗನಾ ಹೇಳಿದ್ದಾರೆ.

Continue Reading

ದೇಶ

Lok Sabha Election 2024: ಈ 17 ಸಂಸದರು ಎನ್‌ಡಿಎಯಲ್ಲೂ ಇಲ್ಲ, ಇಂಡಿ ಕೂಟದಲ್ಲೂ ಇಲ್ಲ!

2024ರ ಲೋಕಸಭಾ ಚುನಾವಣೆಯಲ್ಲಿ (Lok Sabha Election 2024) ಗೆದ್ದಿರುವ ಈ 17 ಅಭ್ಯರ್ಥಿಗಳು ಎನ್ ಡಿ ಎನಲ್ಲೂ ಇಲ್ಲ ಇಂಡಿಯಾ ಮೈತ್ರಿಕೂಟಕ್ಕೂ ಸೇರಿಲ್ಲ. ಇದರಲ್ಲಿ 7 ಅಭ್ಯರ್ಥಿಗಳು ಸ್ವತಂತ್ರರು, ನಾಲ್ವರು ವೈಎಸ್‌ಆರ್‌ಸಿಪಿ ಪಕ್ಷಕ್ಕೆ ಸೇರಿದವರು. ಅಂತಿಮವಾಗಿ ಇವರ ಬೆಂಬಲ ಯಾರಿಗೆ ಸಿಗುತ್ತದೆ ಎಂಬುದು ಕುತೂಹಲಕರವಾಗಿದೆ.

VISTARANEWS.COM


on

By

Lok Sabha Election 2024
Koo

ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಈ ಬಾರಿ ಭಾರತೀಯ ಜನತಾ ಪಕ್ಷ (BJP) ಬಹುಮತದ ಸಂಖ್ಯೆಯನ್ನು ದಾಟಲು ವಿಫಲವಾದರೂ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA) ಮ್ಯಾಜಿಕ್ ಸಂಖ್ಯೆಯನ್ನು ಭದ್ರಪಡಿಸುವಲ್ಲಿ ಯಶಸ್ವಿಯಾಯಿತು. ಇಂಡಿ ಒಕ್ಕೂಟದ (India alliance) ಅದ್ಭುತ ಪ್ರದರ್ಶನದಿಂದಾಗಿ 400ರ ಗುರಿ ತಲುಪುವ ಎನ್ ಡಿ ಎ ಯ ಕನಸು ನುಚ್ಚುನೂರಾಯಿತು.

ಬಿಜೆಪಿ 543 ಸ್ಥಾನಗಳಲ್ಲಿ 240 ಸ್ಥಾನಗಳನ್ನು ಗೆದ್ದಿದ್ದು 2019 ರ ಲೆಕ್ಕಾಚಾರದಿಂದ 60ಕ್ಕೂ ಹೆಚ್ಚು ಸ್ಥಾನಗಳನ್ನು ಕಳೆದುಕೊಂಡಿದೆ. ಆದರೆ ಆಂಧ್ರಪ್ರದೇಶದಲ್ಲಿ ಎನ್. ಚಂದ್ರಬಾಬು ನಾಯ್ಡು ಅವರ ತೆಲುಗು ದೇಶಂ ಪಕ್ಷ (ಟಿಡಿಪಿ) ಮತ್ತು ಬಿಹಾರದಲ್ಲಿ ನಿತೀಶ್ ಕುಮಾರ್ ಅವರ ಜನತಾ ದಳದ (ಯು) ಬೆಂಬಲದಿಂದ ಎನ್ ಡಿ ಎ ಸಂಖ್ಯೆ 292ಕ್ಕೆ ತಲುಪಿದೆ. 16 ಸ್ಥಾನಗಳ ಗೆಲುವುಗಳೊಂದಿಗೆ ಟಿಡಿಪಿ ಎನ್‌ಡಿಎಯಲ್ಲಿ ದೊಡ್ಡ ಪಕ್ಷಗಳಲ್ಲಿ ಒಂದಾಗಿ ಹೊರಹೊಮ್ಮಿದೆ.

ಮತ್ತೊಂದೆಡೆ ಕಾಂಗ್ರೆಸ್ ತನ್ನ 2019ರಲ್ಲಿದ್ದ ಸಂಖ್ಯೆಯನ್ನು ದ್ವಿಗುಣಗೊಳಿಸಿದೆ. ಸಮಾಜವಾದಿ ಪಕ್ಷವು ಉತ್ತರ ಪ್ರದೇಶದಲ್ಲಿ ತನ್ನ ಭದ್ರಕೋಟೆಯನ್ನು ಮರಳಿ ಪಡೆದುಕೊಂಡಿದ್ದು, ಭಾರತ ಬ್ಲಾಕ್ ನ ಸಂಖ್ಯೆ 234 ಸ್ಥಾನಗಳಿಗೇರಲು ಸಹಾಯವಾಯಿತು.

ನಿತೀಶ್ ಮತ್ತು ನಾಯ್ಡು ಈ ಹಿಂದೆ ಬಿಜೆಪಿ ವಿರೋಧಿ ಮೈತ್ರಿಯಲ್ಲಿದ್ದ ಕಾರಣ ಇಂಡಿ ಬಣದ ಕೆಲವು ಪಕ್ಷಗಳು ಕೇಂದ್ರದಲ್ಲಿ ಸರ್ಕಾರ ರಚಿಸಲು ಪ್ರಯತ್ನಗಳನ್ನು ಮಾಡಲು ಬಯಸಿದ್ದವು. ಆದರೆ ಬಹುಮತದ ಹಕ್ಕು ಬೆಂಬಲಿಸಲು ಇಂಡಿ ಬ್ಲಾಕ್‌ನಲ್ಲಿ ಇಲ್ಲದ ಮತ್ತಷ್ಟು ಪಕ್ಷಗಳ ಬೆಂಬಲದ ಅಗತ್ಯವಿದೆ.

ಇಂಡಿಯಾ ಮತ್ತು ಎನ್ ಡಿ ಎನಲ್ಲಿ ಇವರಿಲ್ಲ!

ಕಾಂಗ್ರೆಸ್ ಮೈತ್ರಿ ಪಕ್ಷ ಇಂಡಿ ಒಕ್ಕೂಟ ಹಾಗೂ ಬಿಜೆಪಿ ನೇತೃತ್ವದ ಎನ್ ಡಿ ಎ ಒಕ್ಕೂಟ ಈ ಎರಡಕ್ಕೂ ಸೇರದ 17 ಮಂದಿ ಲೋಕಸಭೆ ಚುನಾವಣೆ 2024ರಲ್ಲಿ ಗೆದ್ದು ಸಂಸತ್ತು ಪ್ರವೇಶಿಸಿದ್ದಾರೆ.

ಸ್ವತಂತ್ರರು 7

ಬಿಹಾರ ಪೂರ್ನಿಯಾದ ಕ್ರಿಮಿನಲ್‌ ರಾಜೇಶ್ ರಂಜನ್ ಅಲಿಯಾಸ್ ಪಪ್ಪು ಯಾದವ್, ಮಹಾರಾಷ್ಟ್ರ ಸಾಂಗ್ಲಿಯ ವಿಶಾಲ್ (ದಾದಾ) ಪ್ರಕಾಶಬಾಪು ಪಾಟೀಲ್ , ಪಂಜಾಬ್ ಖಾದೂರ್ ಸಾಹಿಬ್‌ನ ಸಿಖ್‌ ಪ್ರತ್ಯೇಕತಾವಾದಿ ಅಮೃತಪಾಲ್ ಸಿಂಗ್, ಫರೀದ್ಕೋಟ್‌ನ ಸರಬ್ಜೀತ್ ಸಿಂಗ್ ಖಾಲ್ಸಾ, ದಮನ್ ಮತ್ತು ದಿಯು (UT)ನ ಪಟೇಲ್ ಉಮೇಶಭಾಯ್ ಬಾಬುಭಾಯ್ , ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದ ಪ್ರತ್ಯೇಕತಾವಾದಿ ಅಬ್ದುಲ್ ರಶೀದ್ ಶೇಖ್, ಲಡಾಖ್‌ನ ಮೊಹಮ್ಮದ್ ಹನೀಫಾ.

ವೈಎಎಸ್‌ಆರ್‌ಸಿಪಿ 4

ಆಂಧ್ರಪ್ರದೇಶದ ಅರಕು(ಎಸ್ಟಿ) ಕ್ಷೇತ್ರದ ಗುಮ್ಮ ತನುಜಾ ರಾಣಿ, ಕಡಪದ ವೈ.ಎಸ್. ಅವಿನಾಶ್ ರೆಡ್ಡಿ, ತಿರುಪತಿ(SC)ಯ ಗುರುಮೂರ್ತಿ ಮಡ್ಡಿಲ, ರಾಜಂಪೇಟೆಯ ಪಿವಿ ಮಿಧುನ್ ರೆಡ್ಡಿ

ಇದನ್ನೂ ಓದಿ: Agnipath Scheme: ಸರ್ಕಾರ ರಚನೆಗೂ ಮುನ್ನ ನಿತೀಶ್‌ ಕುಮಾರ್‌ ಬಿಗ್‌ ಡಿಮ್ಯಾಂಡ್‌! ಬಿಜೆಪಿಗೆ ʼಅಗ್ನಿʼ ಪರೀಕ್ಷೆ ಗ್ಯಾರಂಟಿ!

ಎಐಎಂಐಎಂ 1

ತೆಲಂಗಾಣದ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ

ಆಜಾದ್ ಸಮಾಜ ಪಕ್ಷ (ಕಾನ್ಶಿ ರಾಮ್) 1

ಉತ್ತರಪ್ರದೇಶ ನಾಗಿನಾದ ಚಂದ್ರಶೇಖರ್

ಶಿರೋಮಣಿ ಅಕಾಲಿದಳ 1

ಪಂಜಾಬ್ ಭಟಿಂಡಾದ ಹರ್ಸಿಮ್ರತ್ ಕೌರ್ ಬಾದಲ್

ಭಾರತ್ ಆದಿವಾಸಿ ಪಕ್ಷ 1

ರಾಜಸ್ಥಾನದ ಬನ್ಸ್ವಾರಾದ ರಾಜ್ ಕುಮಾರ್ ರೋಟ್

ಜೋರಾಮ್ ಪೀಪಲ್ಸ್ ಮೂವ್ಮೆಂಟ್ 1

ಮಿಜೋರಾಂನ ರಿಚರ್ಡ್ ವನ್ಲಾಲ್ಮಂಗೈಹ

ವಾಯ್ಸ್ ಆಫ್ ದಿ ಪೀಪಲ್ ಪಾರ್ಟಿ 1

ಮೇಘಾಲಯ ಶಿಲಾಂಗ್‌ನ ಡಾ ರಿಕಿ ಆಂಡ್ರ್ಯೂ ಜೆ ಸಿಂಗಾನ್

Continue Reading

ಕರ್ನಾಟಕ

MLC Election Results: ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಎಸ್.ಎಲ್.ಭೋಜೇಗೌಡ ಜಯಭೇರಿ

MLC Election Results: ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಎಸ್.ಎಲ್.ಭೋಜೇಗೌಡ ಅವರು, ಕಾಂಗ್ರೆಸ್ ಅಭ್ಯರ್ಥಿ ಕೆ.ಕೆ. ಮಂಜುನಾಥ್ ವಿರುದ್ಧ 5,267 ಮತಗಳ ಅಂತರದಿಂದ ಗೆಲುವು ಪಡೆದಿದ್ದಾರೆ.

VISTARANEWS.COM


on

Koo

ಮೈಸೂರು: ವಿಧಾನ ಪರಿಷತ್ ಚುನಾವಣೆಯ ನೈರುತ್ಯ ಶಿಕ್ಷಕರ ಕ್ಷೇತ್ರದ (MLC Election Results) ಮತ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, ಜೆಡಿಎಸ್ ಅಭ್ಯರ್ಥಿ ಎಸ್.ಎಲ್.ಭೋಜೇಗೌಡ ಅವರು ಮೊದಲ ಪ್ರಾಶಸ್ತ್ಯ ಮತದಲ್ಲೇ ಗೆಲುವು ಸಾಧಿಸಿದ್ದಾರೆ. ಇವರು ಮತ ಕಾಂಗ್ರೆಸ್ ಅಭ್ಯರ್ಥಿ ಕೆ.ಕೆ. ಮಂಜುನಾಥ್ ವಿರುದ್ಧ 5,267 ಮತಗಳ ಭಾರಿ ಅಂತರದಿಂದ ಜಯಭೇರಿ ಮೊಳಗಿಸಿದ್ದಾರೆ.

ಕ್ಷೇತ್ರದಲ್ಲಿ 19,479 ಒಟ್ಟು ಚಲಾವಣೆ ಆಗಿದ್ದು, ಇದರಲ್ಲಿ 821 ಮತ ತಿರಸ್ಕೃತಗೊಂಡಿವೆ. ಇನ್ನುಳಿದ 18,658 ಮತಗಳಲ್ಲಿ 9,330 ಕೋಟಾ ನಿಗದಿಯಾಗಿತ್ತು. 9829 ಮೊದಲ ಪ್ರಾಶಸ್ತ್ಯ ಮತಗಳನ್ನು ಪಡೆದು ಭೋಜೇಗೌಡ ಗೆಲುವು ಸಾಧಿಸಿದ್ದು,
ಕಾಂಗ್ರೆಸ್ ಅಭ್ಯರ್ಥಿ ಕೆ.ಕೆ. ಮಂಜುನಾಥ್ ಗೆ 4,562 ಮತಗಳುನ್ನು ಪಡೆದಿದ್ದಾರೆ.

ವಿಜೇತ ಮೈತ್ರಿ ಅಭ್ಯರ್ಥಿ ಎಸ್.ಎಲ್. ಭೋಜೇಗೌಡ ಮಾತನಾಡಿ, ಈ ಬಾರಿ ಮೊದಲ ಪ್ರಾಶಸ್ತ್ಯ ಮತಗಳಲ್ಲೇ ಬಹಳ ಅಭೂತಪೂರ್ವ ಗೆಲುವನ್ನು ಶಿಕ್ಷಕರು ತಂದು ಕೊಟ್ಟಿದ್ದಾರೆ. ಹಾಗಾಗಿ ಈ ಗೆಲುವನ್ನು ಶಿಕ್ಷಕ ಸಮುದಾಯಕ್ಕೆ ಸರ್ಮಪಿಸುತ್ತೇನೆ. ನಮ್ಮ ಶಿಕ್ಷಕರು ಬಹಳ ಶ್ರಮಪಟ್ಟು ಗೆಲುವನ್ನು ತಂದುಕೊಟ್ಟಿದ್ದಾರೆ. ಬಹಳ ವಿಶ್ವಾಸವಿಟ್ಟು ಮೊದಲ ಪ್ರಾಶಸ್ತ್ಯ ಮತಗಳನ್ನು ನೀಡಿ ಗೆಲ್ಲಿಸಿದ್ದಾರೆ. ಹಾಗಾಗಿ ನನ್ನ ಗೆಲುವನ್ನು ಅವರಿಗೆ ಅರ್ಪಿಸುತ್ತೇನೆ ಎಂದು ತಿಳಿಸಿದರು.

ಈ ಚುನಾವಣೆಯಲ್ಲಿ ನೂರಕ್ಕೆ ನೂರರಷ್ಟು ಗೆಲ್ಲುವ ವಿಶ್ವಾಸವಿತ್ತು, ಅದರಂತೆಯೇ ಆಗಿದೆ. ಬಿಜೆಪಿ-ಜೆಡಿಎಸ್ ಮೈತ್ರಿ ಒಂದಾಗಿದ್ದರಿಂದ ನಮ್ಮ ಬಲ ಹೆಚ್ಚಾಗಿದೆ. ಹೊಂದಾಣಿಕೆ ಕೆಲಸ ಮಾಡಿದೆ, ಕಳೆದ ಬಾರಿಯೇ ನಾನು ಜೆಡಿಎಸ್‌ನಿಂದ ಏಕಾಂಗಿಯಾಗಿ ನಿಂತು ಗೆದ್ದಿದ್ದೆ. ಈ ಬಾರಿ ಬಿಜೆಪಿ ಜತೆಗಿನ ಹೊಂದಾಣಿಕೆಯಿಂದ ಬಲ ಇನ್ನಷ್ಟು ಹೆಚ್ಚಿದೆ. ಬಿಜೆಪಿ ಜೆಡಿಎಸ್ ಮೈತ್ರಿ ಫಲಪ್ರದವಾಗಿದೆ. ಬಿಜೆಪಿ-ಜೆಡಿಎಸ್‌ನ ಎಲ್ಲಾ ಹಿರಿಯ ನಾಯಕರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಹೇಳಿದರು.

ದಕ್ಷಿಣ ಶಿಕ್ಷಕರ ಕ್ಷೇತ್ರ; ಮೊದಲ ಪ್ರಾಶಸ್ತ್ಯ ಮತದಲ್ಲೇ ಮೈತ್ರಿ ಅಭ್ಯರ್ಥಿ ವಿವೇಕಾನಂದ ಭರ್ಜರಿ ಗೆಲುವು

MLC Election Results

ಮೈಸೂರು: ವಿಧಾನ ಪರಿಷತ್‌ನ ಪದವೀಧರರು ಮತ್ತು ಶಿಕ್ಷಕರ 6 ಕ್ಷೇತ್ರಗಳ ಚುನಾವಣೆಯ (MLC Election Results) ಮತ ಎಣಿಕೆ ಗುರುವಾರ ನಡೆದಿದ್ದು, ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಕೆ. ವಿವೇಕಾನಂದ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಚುನಾವಣಾ ಇತಿಹಾಸದಲ್ಲೇ ಮೊದಲ ಪ್ರಾಶಸ್ತ್ಯ ಮತದಲ್ಲಿ ಮೊದಲ ಗೆಲುವು ಇದಾಗಿದೆ.

ಜೆಡಿಎಸ್‌ ಅಭ್ಯರ್ಥಿ ವಿವೇಕಾನಂದಗೆ 10,823 ಮತ ಬಂದಿದ್ದು, ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡಗೆ 6,201 ಮತ ಬಂದಿವೆ, ವಾಟಾಳ್ ನಾಗರಾಜ್ 84 ಮತ ಗಳಿಸಿದ್ದಾರೆ. ಈ ಮೂಲಕ 4,622 ಮತಗಳ ಭಾರಿ ಅಂತರದಿಂದ ಮೊದಲ ಪ್ರಾಶಸ್ತ್ಯ ಮತಗಳಲ್ಲೇ ಜೆಡಿಎಸ್‌ ಅಭ್ಯರ್ಥಿ ವಿವೇಕಾನಂದ ಗೆಲುವು ದಾಖಲಿಸಿದ್ದಾರೆ. ಕ್ಷೇತ್ರದಲ್ಲಿ 1049 ಕುಲಗೆಟ್ಟ ಮತಗಳು (ತಿರಸ್ಕೃತ) ದಾಖಲಾಗಿವೆ.

ಇದನ್ನೂ ಓದಿ | MLC Election: ವಿಧಾನ ಪರಿಷತ್ ಚುನಾವಣೆ; ಯತೀಂದ್ರ, ಸಿ.ಟಿ.ರವಿ ಸೇರಿ 11 ಅಭ್ಯರ್ಥಿಗಳ ಅವಿರೋಧ ಆಯ್ಕೆ, ಯಾವ ಪಕ್ಷಕ್ಕೆ ಎಷ್ಟು ಸ್ಥಾನ?

ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ (south teachers constituency) ಮೈಸೂರು, ಮಂಡ್ಯ, ಹಾಸನ ಹಾಗೂ ಚಾಮರಾಜನಗರ ಜಿಲ್ಲೆಗಳು ಬರುತ್ತವೆ. ಒಟ್ಟು 20,549 ಮತದಾರರ ಪೈಕಿ 18,979 ಮತಗಳು ಚಲಾವಣೆಯಾಗಿದ್ದವು. ಈ ಚುನಾವಣೆಯಲ್ಲಿ ವಿವೇಕಾನಂದ ಹಾಗೂ ಮರಿತಿಬ್ಬೇಗೌಡ ನಡುವೆ ನೇರ ಪೈಪೋಟಿ ಏರ್ಪಟ್ಟಿತ್ತು.

ನೈರುತ್ಯ ಪದವೀಧರರ ಕ್ಷೇತ್ರದಲ್ಲಿ 3ನೇ ಸ್ಥಾನಕ್ಕೆ ಕುಸಿದ ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್‌

ಮೈಸೂರು: ನೈರುತ್ಯ ಪದವೀಧರರ ಕ್ಷೇತ್ರ ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್‌ ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ. ಇದುವರೆಗೂ 14 ಸಾವಿರ ಮತಗಳ ಎಣಿಕೆ ಆಗಿದ್ದು, ಮೈತ್ರಿ ಅಭ್ಯರ್ಥಿ ಡಾ.ಧನಂಜಯ ಸರ್ಜಿಗೆ 6,693 ಮತ, ಬಿಜೆಪಿ ಬಂಡಾಯ ಅಭ್ಯರ್ಥಿ ರಘುಪತಿ ಭಟ್‌ಗೆ 3,054 ಮತ ಹಾಗೂ ಆಯನೂರು ಮಂಜುನಾಥ್‌ಗೆ 2397 ಮತ ಬಂದಿವೆ.

Continue Reading
Advertisement
Unemployment Rate
ಪ್ರಮುಖ ಸುದ್ದಿ3 mins ago

Unemployment Rate : ಭಾರತದಲ್ಲಿ ನಿರುದ್ಯೋಗ ಸಮಸ್ಯೆ ಒಂದೇ ವರ್ಷದಲ್ಲಿ ಶೇಕಡಾ 4 ಇಳಿಕೆ; ವರದಿ

Lok Sabha Election
ಪ್ರಮುಖ ಸುದ್ದಿ27 mins ago

Lok Sabha Election : ಶತಕ ಬಾರಿಸಿದ ಕಾಂಗ್ರೆಸ್​​; ಪಕ್ಷೇತರನ ಬೆಂಬಲದೊಂದಿಗೆ ಕಾಂಗ್ರೆಸ್​ನ ಸೀಟ್​ಗಳ ಸಂಖ್ಯೆ 100ಕ್ಕೆ ಏರಿಕೆ

Valmiki Corporation Scam
ಕರ್ನಾಟಕ49 mins ago

Valmiki Corporation Scam: ಸಿಎಂ ಸಿದ್ದರಾಮಯ್ಯಗೆ ರಾಜೀನಾಮೆ ಪತ್ರ ಸಲ್ಲಿಸಿದ ಬಿ.ನಾಗೇಂದ್ರ

Kangana Ranaut
ಪ್ರಮುಖ ಸುದ್ದಿ51 mins ago

Kangana Ranaut : ಪಂಜಾಬ್​ನಲ್ಲಿ ಭಯೋತ್ಪಾದನೆ ಹೆಚ್ಚುತ್ತಿದೆ; ತಮ್ಮ ಮೇಲೆ ಹಲ್ಲೆ ನಡೆಸಿದ ಬಗ್ಗೆ ಕಂಗನಾ ಪ್ರತಿಕ್ರಿಯೆ ಹೀಗಿತ್ತು

Kangana Ranaut
ಪ್ರಮುಖ ಸುದ್ದಿ2 hours ago

Kangana Ranaut: ಕಂಗನಾಗೆ ಮಹಿಳಾ ಪೇದೆ ಹೊಡೆಯಲು ಕಾರಣವೇನು? ರೈತರ ಬಗ್ಗೆ ಅವರು ನೀಡಿದ ವಿವಾದಾತ್ಮಕ ಹೇಳಿಕೆ ಏನು?

Lok Sabha Election 2024
ದೇಶ2 hours ago

Lok Sabha Election 2024: ಈ 17 ಸಂಸದರು ಎನ್‌ಡಿಎಯಲ್ಲೂ ಇಲ್ಲ, ಇಂಡಿ ಕೂಟದಲ್ಲೂ ಇಲ್ಲ!

Viral Video
ವೈರಲ್ ನ್ಯೂಸ್2 hours ago

Viral Video: ಏಕಾಏಕಿ ಕುಸಿದು ಸಾವನ್ನಪ್ಪಿದ ಮೆಡಿಕಲ್ ಸಿಬ್ಬಂದಿ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಕರ್ನಾಟಕ2 hours ago

MLC Election Results: ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಎಸ್.ಎಲ್.ಭೋಜೇಗೌಡ ಜಯಭೇರಿ

ಬೆಂಗಳೂರು3 hours ago

Bangalore News : ಕೇಳಚಂದ್ರ ಕಾಫಿಗೆ ಎಚ್​ಆರ್​ಡಿ ಮುಖ್ಯಸ್ಥರಾಗಿ ಡಾ.ಪಿ.ಕುರಿಯನ್ ರಾಫೆಲ್ ನೇಮಕ

MLC Election Results
ಪ್ರಮುಖ ಸುದ್ದಿ3 hours ago

MLC Election Results: ದಕ್ಷಿಣ ಶಿಕ್ಷಕರ ಕ್ಷೇತ್ರ; ಮೊದಲ ಪ್ರಾಶಸ್ತ್ಯ ಮತದಲ್ಲೇ ಮೈತ್ರಿ ಅಭ್ಯರ್ಥಿ ವಿವೇಕಾನಂದ ಭರ್ಜರಿ ಗೆಲುವು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ9 hours ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ3 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ3 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ3 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ4 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು5 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

ಟ್ರೆಂಡಿಂಗ್‌