Samantha Ruth Prabhu: ಸಮಂತಾಗೆ ಜನುಮ ದಿನದ ಸಂಭ್ರಮ! ಈ ನಟಿಯ ಸೀಕ್ರೆಟ್‌ ಸಂಗತಿಗಳಿವು! - Vistara News

ಟಾಲಿವುಡ್

Samantha Ruth Prabhu: ಸಮಂತಾಗೆ ಜನುಮ ದಿನದ ಸಂಭ್ರಮ! ಈ ನಟಿಯ ಸೀಕ್ರೆಟ್‌ ಸಂಗತಿಗಳಿವು!

Samantha Ruth Prabhu: ಸಮಂತಾ ತಮ್ಮ ವೃತ್ತಿಪರ ಮತ್ತು ವೈಯಕ್ತಿಕ ಜೀವನದ ಬಗ್ಗೆ ಆಗಾಗ ಶೇರ್‌ ಮಾಡಿಕೊಳ್ಳುತ್ತಲೇ ಇರುತ್ತಾರೆ. ನಾಗ ಚೈತನ್ಯ ಅವರೊಂದಿಗಿನ ಅವರ ಪ್ರೇಮಕಥೆಯಿಂದ ಹಿಡಿದು ವಿಚ್ಛೇದನದದ ವರೆಗೆ ಹಲವು ವಿಚಾರಗಳನ್ನು ಹೇಳಿಕೊಂಡಿದ್ದಾರೆ. ಸಮಂತಾ ಕ್ರಿಶ್ಚಿಯನ್ ಆಗಿದ್ದರೂ ಆಗಾಗ ದೇವಾಲಯಗಳಿಗೆ ಭೇಟಿ ಕೊಡುತ್ತಲೇ ಇರುತ್ತಾರೆ. ಇದಲ್ಲದೇ ಮುಖಕ್ಕೆ ಸರ್ಜರಿ ಕೂಡ ಮಾಡಿಸಿದ್ದರು ನಟಿ.

VISTARANEWS.COM


on

Samantha Ruth Prabhu shocking secrets
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಟಾಲಿವುಡ್‌ ನಟ ಸಮಂತಾ ರುತ್ ಪ್ರಭು (Samantha Ruth Prabhu) ಅವರಿಗೆ ಇಂದು (ಏ.28) ಜನುಮದಿನ ಸಂಭ್ರಮ. ಸಮಂತಾ ಅವರಿಗೆ ಅಪಾರವಾದ ಫ್ಯಾನ್ಸ್‌ ಬಳಗವಿದೆ. ಈ ಹಿಂದೆ ಸಮಂತಾ ಅವರ ಜನುಮದಿನವೇ ಆಂಧ್ರಪ್ರದೇಶದ ಬಾಪಟ್ಲಾದಲ್ಲಿರುವ (Bapatla, Andhra Pradesh) ಅಭಿಮಾನಿ ಯುವಕ ಸಂದೀಪ್‌ ನಟಿಗಾಗಿ ದೇವಸ್ಥಾನ ನಿರ್ಮಿಸಿದ್ದ. ಸಮಂತಾ ಮೇಲಿನ ಅಭಿಮಾನದಿಂದ ಸಂದೀಪ್ ಅವರು ತಿರುಪತಿ, ಚೆನ್ನೈ, ನಾಗಪಟ್ಟಣಂ ದೇವಸ್ಥಾನಗಳಿಗೆ ನಟಿಯ (Samantha Birthday) ಹೆಸರಲ್ಲಿ ತೀರ್ಥಯಾತ್ರೆ ಮಾಡಿದ್ದ. ಸಮಂತಾ ಮಯೋಸಿಟಿಸ್ ಕಾಯಿಲೆಯಿಂದ ಚೇತರಿಸಿಕೊಂಡ ನಂತರ ಸಂದೀಪ್ ಈ ಯಾತ್ರೆ ಮಾಡಿದ್ದ. ಇದೆಲ್ಲದರ ಜತೆಗೆ ನಟಿಯ ಬಗ್ಗೆ ಹಲವು ವಿಚಾರಗಳು ಕುತೂಹಲಕರವಾಗಿವೆ.

ಸಮಂತಾರನ್ನು ಹುಚ್ಚನಂತೆ ಪ್ರೀತಿಸುತ್ತಿದ್ದರು ನಟ ಸಿದ್ಧಾರ್ಥ್

ಸಮಂತಾ ತಮ್ಮ ವೃತ್ತಿಪರ ಮತ್ತು ವೈಯಕ್ತಿಕ ಜೀವನದ ಬಗ್ಗೆ ಆಗಾಗ ಶೇರ್‌ ಮಾಡಿಕೊಳ್ಳುತ್ತಲೇ ಇರುತ್ತಾರೆ. ನಾಗ ಚೈತನ್ಯ ಅವರೊಂದಿಗಿನ ಅವರ ಪ್ರೇಮಕಥೆಯಿಂದ ಹಿಡಿದು ವಿಚ್ಛೇದನದವರೆಗೆ ಹಲವು ವಿಚಾರಗಳನ್ನು ಹೇಳಿಕೊಂಡಿದ್ದಾರೆ. ಸದ್ಯ ಅದಿತಿ ರಾವ್ ಹೈದರಿ ಅವರೊಂದಿಗೆ ಡೇಟಿಂಗ್ ಮಾಡುತ್ತಿರುವ ತಮಿಳು ನಟ ಸಿದ್ಧಾರ್ಥ್ ಅವರು ಸಮಂತಾರನ್ನು ಹುಚ್ಚನಂತೆ ಪ್ರೀತಿಸುತ್ತಿದ್ದರು. ಇಬ್ಬರೂ ಮದುವೆಯಾಗಬೇಕು ಎಂದು ಅಂದುಕೊಂಡಿದ್ದರು. ಆದರೆ ಜೋಡಿ ಮಧ್ಯೆ ಏನು ಆಯ್ತೋ ಏನೋ! ಸಿದ್ಧಾರ್ಥ್ ಜತೆ ನಟಿ ಬ್ರೇಕಪ್‌ ಮಾಡಿಕೊಂಡು ನಾಗ ಚೈತನ್ಯ ಅವರನ್ನು ಪ್ರೀತಿಸಲು ಶುರು ಮಾಡಿದರು.

ಇದನ್ನೂ ಓದಿ: Samantha Ruth Prabhu: ಮದುವೆ ಗೌನ್‌ ಕತ್ತರಿಸಿ ಹೊಸ ಉಡುಪು ತಯಾರಿಸಿದ ಸಮಂತಾ!

ವರದಿಗಳ ಪ್ರಕಾರ ಸಮಂತಾಗೂ ಮೊದಲು ಸಿದ್ಧಾರ್ಥ್ ನಟಿ ಶ್ರುತಿ ಹಾಸನ್ ಮತ್ತು ಆಂಡ್ರಿಯಾ ಅವರೊಂದಿಗೆ ಸಂಬಂಧ ಹೊಂದಿದ್ದರು. ಈ ಕಾರಣಗಳಿಂದಾಗಿ ಸಮಂತಾ ಬ್ರೇಕಪ್‌ ಮಾಡಿಕೊಂಡರು ಎಂಬ ವರದಿಯಾಗಿದೆ.

ಕ್ರಿಶ್ಚಿಯನ್ ಆಗಿದ್ದರೂ ದೇವಾಲಯಗಳಿಗೆ ಭೇಟಿ

ಸಮಂತಾ ಕ್ರಿಶ್ಚಿಯನ್ ಆಗಿದ್ದರೂ ಆಗಾಗ ದೇವಾಲಯಗಳಿಗೆ ಭೇಟಿ ಕೊಡುತ್ತಲೇ ಇರುತ್ತಾರೆ. ಇದಲ್ಲದೇ ಮುಖಕ್ಕೆ ಸರ್ಜರಿ ಕೂಡ ಮಾಡಿಸಿಕೊಂಡಿದ್ದರು ನಟಿ. ಇನ್ನು ನಾಗಚೈತ್ಯ ಜತೆ ನಟಿ ಪ್ರೀತಿಸಿ ಮದುವೆ ಕೂಡ ಆದರು. ಟಾಲಿವುಡ್‌ನಲ್ಲಿ ʻಪವರ್ ಜೋಡಿʼ ಎಂದು ಅನ್ನಿಸಿಕೊಂಡಿದ್ದರು. ಮದುವೆಯಾದ ನಾಲ್ಕು ವರ್ಷಗಳ ಬಳಿಕ ಜೋಡಿ ಡಿವೋರ್ಸ್‌ ಪಡೆದುಕೊಂಡಿತ್ತು. ಜೋಡಿ ಇದುವೆರೆಗೆ ತಾವು ಏಕೆ ಬೇರೆಯಾದೆವು ಎಂಬ ಕಾರಣ ಕೂಡ ನೀಡಿಲ್ಲ. ಸದ್ಯ ನಾಗಚೈತನ್ಯ ಕೂಡ ನಟಿ ಶೋಭಿತಾ ಜತೆಗೆ ಡೇಟಿಂಗ್‌ ಮಾಡುತ್ತಿದ್ದಾರೆ ಎಂದು ವರದಿಯಾಗಿದೆ.

ಮೈಯೋಸಿಟಿಸ್‌ ಕಾಯಿಲೆ ವಿರುದ್ಧ ಹೋರಾಟ

ಸಮಂತಾ ರುತ್ ಪ್ರಭು (Samantha Ruth Prabhu) ಅವರು ಮೈಯೋಸಿಟಿಸ್‌ ಕಾಯಿಲೆ ವಿರುದ್ಧ ಹೋರಾಟ ಮಾಡುತ್ತಲೇ ಇದ್ದಾರೆ. ಆಸ್ಪತ್ರೆಯಲ್ಲಿ ಇಂದಿಗೂ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಆರೋಗ್ಯ ಮತ್ತು ಫಿಟ್‌ನೆಸ್ ಪ್ರಯಾಣದ ಬಗ್ಗೆ ವಿವರವಾಗಿ ಮಾತನಾಡುತ್ತಿದ್ದಾರೆ. ಆರೋಗ್ಯದ ಬಗ್ಗೆ ತಮ್ಮ ಅಭಿಮಾನಿಗಳಿಗೆ ಸಾಮಾಜಿಕ ಮಾಧ್ಯಮದಲ್ಲಿ ಆಗಾಗ ತಿಳಿಸುತ್ತಿದ್ದಾರೆ. ಸದ್ಯ ನಟಿ ಒಂದು ವರ್ಷ ನಟನೆಯಿಂದ ಹಿಂದೆ ಸರಿದಿದ್ದಾರೆ. ಆರೋಗ್ಯದತ್ತ ಗಮನ ಹರಿಸಿದ್ದಾರೆ.

ಇದನ್ನೂ ಓದಿ: Samantha Ruth Prabhu: ಮದುವೆ ಗೌನ್‌ ಕತ್ತರಿಸಿ ಹೊಸ ಉಡುಪು ತಯಾರಿಸಿದ ಸಮಂತಾ!

ನಟನೆಯಿಂದ ಹಿಂದೆ ಸರಿದ ನಟಿ

ನಟಿ ಈಗಾಗಲೇ ʻಸಿಟಾಡೆಲ್ ಇಂಡಿಯಾ: ಹನಿ ಬನ್ನಿʼ ವೆಬ್ ಸರಣಿಯಲ್ಲಿ ನಟಿಸಿದ್ದು, ಅದರ ಬಿಡುಗಡೆಗಾಗಿ ಕಾಯುತ್ತಿದ್ದಾರೆ. ಇದರಲ್ಲಿ ಸಮಂತಾ ಜತೆ ವರುಣ್ ಧವನ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಜತೆಗೆ ಸಿಕಂದರ್ ಖೇರ್, ಸಾಕಿಬ್ ಸಲೀಮ್ ಮತ್ತು ಕೇ ಕೇ ಮೆನನ್ ಪೋಷಕ ಪಾತ್ರಗಳನ್ನು ನಿರ್ವಹಿಸಿದ್ದಾರೆ.

ರಾಜ್ ಮತ್ತು ಡಿಕೆ ಮತ್ತು ಸೀತಾ ಆರ್ ಮೆನನ್ ನಿರ್ದೇಶನದ ʼಸಿಟಾಡೆಲ್ ಇಂಡಿಯಾ: ಹನಿ ಬನ್ನಿʼ ಯುಎಸ್ ಶೋನ ಭಾರತೀಯ ಸ್ಪಿನ್ ಆಫ್ ಆಗಿದೆ. ಇದರಲ್ಲಿ ಪ್ರಿಯಾಂಕ ಚೋಪ್ರಾ ಮತ್ತು ರಿಚರ್ಡ್ ಮ್ಯಾಡೆನ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಟಾಲಿವುಡ್

Miss You First Look Out: ಆಶಿಕಾ ರಂಗನಾಥ್‌ಗೆ ʻಮಿಸ್ ಯುʼ ಎಂದ ನಟ ಸಿದ್ಧಾರ್ಥ್!

Miss You First Look Out: ಸಿದ್ಧಾರ್ಥ್ ʻಇಂಡಿಯನ್ 2ʼ ಸಿನಿಮಾದಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ ಎಂಬ ವರದಿ ಇದೆ. ವರದಿ ಪ್ರಕಾರ, ಅವರು ಕಮಲ್ ಹಾಸನ್ ಪಾತ್ರದಲ್ಲಿ ಮೊಮ್ಮಗನಾಗಿ ಕಾಣಿಸಿಕೊಳ್ಳಲಿದ್ದಾರೆ. 2003ರಲ್ಲಿ ತಮಿಳು ಚಲನಚಿತ್ರ ಬಾಯ್ಸ್‌ ಸಿನಿಮಾದಲ್ಲಿ ಸಿದ್ಧಾರ್ಥ್‌ ನಟಿಸಿದ್ದರು. ವಿಶೇಷ ಅಂದರೆ ಈ ಸಿನಿಮಾ ನಿರ್ದೇಶಿಸಿದ್ದು ಶಂಕರ್.

VISTARANEWS.COM


on

Miss You First Look Out Siddharth unveils intriguing poster
Koo

ಬೆಂಗಳೂರು: ಸಿದ್ಧಾರ್ಥ್ (Siddharth) ಅವರ ಮುಂದಿನ ಚಿತ್ರ `ಇಂಡಿಯನ್ 2′ ಬಿಡುಗಡೆಗೆ ಸಜ್ಜಾಗಿದ್ದಾರೆ. ಇದೀಗ ನಟ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಸಿದ್ಧಾರ್ಥ್ ಅವರ ಮುಂದಿನ ಚಿತ್ರ, ʻಮಿಸ್ ಯುʼ ಸಿನಿಮಾ (Miss You First Look Out). ಇದೀಗ ಮಿಸ್‌ ಯು ಸಿನಿಮಾ ಚಿತ್ರತಂಡ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಅನಾವರಣಗೊಳಿಸಿದೆ ಪೋಸ್ಟರ್‌ನಲ್ಲಿ ನಟ ಟ್ರಾವೆಲ್‌ ಮೂಡ್‌ನಲ್ಲಿ ಇರುವಂತಿದೆ.

ʻಮಿಸ್ ಯುʼ ಚಿತ್ರದ ಫಸ್ಟ್ ಲುಕ್ ಪೋಸ್ಟರ್‌ಗೆ ಆರ್ ಮಾಧವನ್ ತಮಾಷೆಯ ಶೀರ್ಷಿಕೆಯನ್ನು ಬರೆದಿದ್ದಾರೆ, ʻಚಾಕ ಲೇಟ್ ಬಾಯ್ ಅಲ್ಲ.. ಆದರೆ ಲವರ್ ಮ್ಯಾನ್ ಸಿದ್ ಹೇಗೆ ಮರಳಿದ್ದಾರೆ ನೋಡಿʼʼಎಂದು ಬರೆದುಕೊಂಡಿದ್ದಾರೆ. ಆಶಿಕಾ ರಂಗನಾಥ್ ನಾಯಕಿಯಾಗಿ ನಟಿಸಲಿದ್ದಾರೆ. ಈ ಚಿತ್ರದ ಫಸ್ಟ್ ಲುಕ್ ನಟ ಶಿವ ಕಾರ್ತಿಕೇಯನ್ ಅವರು ಬಿಡುಗಡೆ ಮಾಡಿದರು. ಈ ಪೋಸ್ಟರ್ ನೋಡಿದರೆ ಸಿದ್ಧಾರ್ಥ್ ರೈಲ್ವೇ ನಿಲ್ದಾಣದಿಂದ ಹೊರ ಬರುತ್ತಿರುವಂತೆ ಕಾಣುತ್ತಿದ್ದಾರೆ.

7 ಮೈಲ್ಸ್ ಪರ್ ಸೆಕೆಂಡ್ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಸ್ಯಾಮ್ಯುಯೆಲ್ ಮ್ಯಾಥ್ಯೂ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ ಈ ಚಿತ್ರಕ್ಕೆ ಗಿಬ್ರಾನ್ ಸಂಗೀತ ಸಂಯೋಜಿಸುತ್ತಿದ್ದಾರೆ. ಕರುಣಾಕರನ್, ಬಾಲಾ, ಸಾಸ್ತಿಕಾ ರಾಜೇಂದ್ರನ್ ಮುಂತಾದವರು ಈ ಸಿನಿಮಾಗಳಲ್ಲಿ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ.

ಇದನ್ನೂ ಓದಿ: Indian 2 : ‘ಇಂಡಿಯನ್ 2ʼ ಸಿನಿಮಾದಲ್ಲಿ ಸಿದ್ಧಾರ್ಥ್: ಫಸ್ಟ್‌ ಲುಕ್‌ ಔಟ್‌!

ʻಇಂಡಿಯನ್ 2ʼ ಸಿನಿಮಾದಲ್ಲಿ ಪ್ರಮುಖ ಪಾತ್ರ

ಸಿದ್ಧಾರ್ಥ್ ʻಇಂಡಿಯನ್ 2ʼ ಸಿನಿಮಾದಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ ಎಂಬ ವರದಿ ಇದೆ. ವರದಿ ಪ್ರಕಾರ, ಅವರು ಕಮಲ್ ಹಾಸನ್ ಪಾತ್ರದಲ್ಲಿ ಮೊಮ್ಮಗನಾಗಿ ಕಾಣಿಸಿಕೊಳ್ಳಲಿದ್ದಾರೆ. 2003ರಲ್ಲಿ ತಮಿಳು ಚಲನಚಿತ್ರ ಬಾಯ್ಸ್‌ ಸಿನಿಮಾದಲ್ಲಿ ಸಿದ್ಧಾರ್ಥ್‌ ನಟಿಸಿದ್ದರು. ವಿಶೇಷ ಅಂದರೆ ಈ ಸಿನಿಮಾ ನಿರ್ದೇಶಿಸಿದ್ದು ಶಂಕರ್. ಇದೀಗ ಎರಡನೇ ಬಾರಿಗೆ ಶಂಕರ್‌ ಹಾಗೂ ಸಿದ್ಧಾರ್ಥ್‌ ಒಟ್ಟಿಗೆ ಕೆಲಸ ಮಾಡುವಂತಾಗಿದೆ. ಸಿದ್ಧಾರ್ಥ್ ಇತ್ತೀಚೆಗೆ ನಟಿ ಅದಿತಿ ರಾವ್ ಹೈದರಿ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡರು. ಅದಿತಿ ಅವರು ನೆಟ್‌ಫ್ಲಿಕ್ಸ್ ಸಿರೀಸ್‌ ಹೀರಾಮಂಡಿ: ದಿ ಡೈಮಂಡ್ ಬಜಾರ್‌ನಲ್ಲಿ ಕಾಣಿಸಿಕೊಂಡಿದ್ದರು.

ಸಿದ್ಧಾರ್ಥ್‌ ಸಂದರ್ಶನದಲ್ಲಿ ಈ ಬಗ್ಗೆ ಮಾತನಾಡಿ ʻʻಯಾವುದೇ ಭಾಷೆಯಲ್ಲಿ ಈ ಸಿನಿಮಾ ಬಿಡುಗಡೆಯಾದರೂ, ಬ್ಲಾಕ್ ಬಸ್ಟರ್ ಆಗಲಿದೆ. ಈ ಸಿನಿಮಾಕ್ಕೆ ನನ್ನನ್ನು ಆಯ್ಕೆ ಮಾಡಿಕೊಂಡಿರುವ ಬಗ್ಗೆ ನನಗೆ ಸಂತೋಷವಿದೆ. ಇಷ್ಟು ವರ್ಷಗಳ ನಂತರ ಮತ್ತೆ ನಿರ್ದೇಶಕರಾದ ಶಂಕರ್‌ ಹಾಗೂ ಕಮಲ್ ಹಾಸನ್‌ ಅವರೊಂದಿಗೆ ಕೆಲಸ ಮಾಡುತ್ತಿರುವುದು ನನ್ನ ಅದೃಷ್ಟ. ನಿರ್ದೇಶಕರಿಗೆ ನಾನು ಯಾವಾಗಲೂ ಕೃತಜ್ಞರಾಗಿರುತ್ತೇನೆʼʼ ಎಂದು ಸಿದ್ಧಾರ್ಥ್ ಹೇಳಿಕೊಂಡಿದ್ದರು.

Continue Reading

ಟಾಲಿವುಡ್

Aishwarya Arjun: ಅರ್ಜುನ್ ಸರ್ಜಾ ಪುತ್ರಿ ವಿವಾಹ; ಅದ್ಧೂರಿಯಾಗಿ ನಡೆಯಲಿದೆ ಆರತಕ್ಷತೆ ಕಾರ್ಯಕ್ರಮ

Aishwarya Arjun: ಇದೀಗ ನಟ ಅರ್ಜುನ್ ಸರ್ಜಾ ಸದ್ಯ ಮೊದಲನೇ ಮಗಳು ಐಶ್ವರ್ಯಾ ಮದುವೆ ಮಾಡುವುದಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ.ಇಬ್ಬರ ಮದುವೆ ಚೆನ್ನೈನಲ್ಲೇ ನಡೆಯಲಿದ್ದು, ಜೂನ್ 10ರಂದು ಸಂಪ್ರದಾಯಬದ್ಧವಾಗಿ ಮದುವೆ ಮಾಡುತ್ತಿದ್ದಾರೆ ಎಂದು ವರದಿಯಾಗಿದೆ.ಈ ಮದುವೆಯಲ್ಲಿ ಸಂಬಂಧಿಕರು ಹಾಗೂ ಚಿತ್ರರಂಗದ ಗಣ್ಯರು ಪಾಲ್ಗೊಳ್ಳಲಿದ್ದಾರೆ.ತಮಿಳು ಹಾಗೂ ಕನ್ನಡ ಚಿತ್ರರಂಗದ ಗಣ್ಯರು ಪಾಲ್ಗೊಳ್ಳುತ್ತಿದ್ದಾರೆ.

VISTARANEWS.COM


on

Aishwarya Arjun reception dates out
Koo

ಬೆಂಗಳೂರು: ಕರ್ನಾಟಕ ಮೂಲದ ದಕ್ಷಿಣ ಭಾರತದ ಖ್ಯಾತ ನಟ, ‘ಆ್ಯಕ್ಷನ್ ಕಿಂಗ್’ (Action King) ಅರ್ಜುನ್ ಸರ್ಜಾ (Arjun Sarja) ಪುತ್ರಿ ಐಶ್ವರ್ಯಾ (Aishwarya Sarja) ಅವರ ನಿಶ್ಚಿತಾರ್ಥವು ತಮಿಳುನಾಡಿನ ಚೆನ್ನೈನಲ್ಲಿ ನಟ ತಂಬಿ ರಾಮಯ್ಯ ಅವರ ಪುತ್ರ (Aishwarya Arjun ಉಮಾಪತಿ ರಾಮಯ್ಯ(umapathy ramaiah) ಜತೆಗೆ ಆಗಿತ್ತು.ಇದೀಗ ಜೋಡಿ ಜೂನ್ 10 ರಂದು ಚೆನ್ನೈನ ಹನುಮಾನ್ ದೇವಸ್ಥಾನದಲ್ಲಿ ವಿವಾಹವಾಗಲಿದೆ. ನಿಶ್ಚಿತಾರ್ಥ ಆದ ಸ್ಥಳದಲ್ಲಿಯೇ ವಿವಾಹ ನಡೆಯಲಿದೆ. ಜೂನ್ 14 ರಂದು ಚೆನ್ನೈನಲ್ಲಿ ಆರತಕ್ಷತೆಯನ್ನು ಕುಟುಂಬ ಆಯೋಜಿಸಿದೆ ಎಂದು ವರದಿಯಾಗಿದೆ.

ಇದೀಗ ನಟ ಅರ್ಜುನ್ ಸರ್ಜಾ ಸದ್ಯ ಮೊದಲನೇ ಮಗಳು ಐಶ್ವರ್ಯಾ ಮದುವೆ ಮಾಡುವುದಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ.ಇಬ್ಬರ ಮದುವೆ ಚೆನ್ನೈನಲ್ಲೇ ನಡೆಯಲಿದ್ದು, ಜೂನ್ 10ರಂದು ಸಂಪ್ರದಾಯಬದ್ಧವಾಗಿ ಮದುವೆ ಮಾಡುತ್ತಿದ್ದಾರೆ ಎಂದು ವರದಿಯಾಗಿದೆ.ಈ ಮದುವೆಯಲ್ಲಿ ಸಂಬಂಧಿಕರು ಹಾಗೂ ಚಿತ್ರರಂಗದ ಗಣ್ಯರು ಪಾಲ್ಗೊಳ್ಳಲಿದ್ದಾರೆ.ತಮಿಳು ಹಾಗೂ ಕನ್ನಡ ಚಿತ್ರರಂಗದ ಗಣ್ಯರು ಪಾಲ್ಗೊಳ್ಳುತ್ತಿದ್ದಾರೆ.

ಇದನ್ನೂ ಓದಿ: Aishwarya Arjun: ಅರ್ಜುನ್ ಸರ್ಜಾ ಪುತ್ರಿ ಮದುವೆ ಮುಹೂರ್ತ ಫಿಕ್ಸ್!

ತಂಬಿ ರಾಮಯ್ಯ ಅವರ ಪುತ್ರ ಉಮಾಪತಿ ರಾಮಯ್ಯ ಕೂಡ ನಟನೆಯಲ್ಲಿ ಬ್ಯುಸಿಯಾಗಿದ್ದಾರೆ. ನಟಿ ಯಶಿಕಾ ಆನಂದ್ ಜತೆ ಉಮಾಪತಿ ರಾಮಯ್ಯ ಸಂಬಂಧ ಹೊಂದಿದ್ದರು ಎಂಬ ಊಹಾಪೋಹಗಳು ಇದ್ದವು. ಅರ್ಜುನ್ ಸ್ವತಃ ಹೋಸ್ಟ್ ಮಾಡಿದ ರಿಯಾಲಿಟಿ ಟಿವಿ ಶೋ “ಸರ್ವೈವರ್ ತಮಿಳು” ನಲ್ಲಿ ಉಮಾಪತಿ ಸ್ಪರ್ಧಿಯಾಗಿ ಭಾಗವಹಿಸಿದ್ದರು, ಈ ಮೂಲಕ ಅರ್ಜುನ್‌ ಫ್ಯಾಮಿಲಿಗೆ ಉಮಾಪತಿ ರಾಮಯ್ಯ ಹತ್ತಿರವಾಗಿದ್ದಾರೆ ಎನ್ನಲಾಗಿದೆ. ಈ ಮೂಲಕ ಇವರಿಬ್ಬರ ನಡುವೆ ಸ್ನೇಹವಾಗಿ ಬಳಿಕ ಪ್ರೇಮಕ್ಕೆ ತಿರುಗಿದೆ ಎಂದು ವರದಿಯಾಗಿದೆ.

ಐಶ್ವರ್ಯಾ ಅರ್ಜುನ್ 2013ರಲ್ಲಿ ವಿಶಾಲ್ ಅವರ ‘ಪಟ್ಟತ್ತು ಯಾನೈ’ ಚಿತ್ರದ ಮೂಲಕ ಸಿನಿರಂಗಕ್ಕೆ ಪದಾರ್ಪಣೆ ಮಾಡಿದರು. ಅವರು ಕೊನೆಯ ಬಾರಿಗೆ ತಂದೆ ಅರ್ಜುನ್ ಸರ್ಜಾ ನಿರ್ದೇಶನದ ‘ಪ್ರೇಮ ಬರಹ’ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ಉಮಾಪತಿ ಅವರು 2017 ರಲ್ಲಿ ‘ಅದಗಪ್ಪಟ್ಟದ್ದು ಮಗಜನಂಗಳೆ’ ಮೂಲಕ ನಟನೆಗೆ ಪದಾರ್ಪಣೆ ಮಾಡಿದರು. ತಂಬಿ ರಾಮಯ್ಯ ಬರೆದು ನಿರ್ದೇಶಿಸಿದ ‘ಮಣಿಯಾರ್ ಕುಟುಂಬ’ದಲ್ಲಿ ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

Continue Reading

ರಾಜಕೀಯ

Anna Lezhneva: ಚುನಾವಣೆ ಗೆದ್ದು ಬಂದ ಪವನ್‌ಗೆ ತಿಲಕವಿಟ್ಟು ಸ್ವಾಗತಿಸಿದ ಈ ವಿದೇಶಿ ಮಹಿಳೆ ಯಾರು?

ಮೊದಲ ಎರಡು ಮದುವೆ ವಿಫಲವಾದ ಬಳಿಕ ನಟ-ರಾಜಕಾರಣಿ ಪವನ್ ಕಲ್ಯಾಣ್ 2013ರಲ್ಲಿ ಅನ್ನಾ ಲೆಜ್ನೆವಾ ಅವರನ್ನು ವಿವಾಹವಾದರು. ಅನ್ನಾ ಅವರಿಗೂ ಈ ಹಿಂದೆ ವಿವಾಹವಾಗಿ ಮಗಳನ್ನು ಹೊಂದಿದ್ದರು. ಈ ಮಗುವನ್ನು ಪವನ್ ದತ್ತು ಪಡೆದಿದ್ದಾರೆ. ಇವತ್ತು ಚುನಾವಣೆ ಗೆದ್ದು ಬಂದ ಪವನ್ ಗೆ ಅನ್ನಾ ಲೆಜ್ನೆವಾ (Anna Lezhneva) ಆರತಿ ಮಾಡಿ, ತಿಲಕವಿಟ್ಟು ಸ್ವಾಗತಿಸಿದ್ದಾರೆ.

VISTARANEWS.COM


on

By

Anna Lezhneva
Koo

ಲೋಕಸಭಾ ಚುನಾವಣೆ-2024ರಲ್ಲಿ (Loksabha election-2024) ಆಂಧ್ರಪ್ರದೇಶದಲ್ಲಿ (andrapradesh) ಭರ್ಜರಿ ಗೆಲುವು ಸಾಧಿಸಿ ಮನೆಗೆ ಬಂದ ತೆಲುಗು ನಟ (Telugu actor), ರಾಜಕಾರಣಿ (politician) ಪವನ್ ಕಲ್ಯಾಣ್ (Pawan Kalyan) ಅವರನ್ನು ಪತ್ನಿ (wife) ಅನ್ನಾ ಲೆಜ್ನೆವಾ (Anna Lezhneva) ಆರತಿ ಮಾಡಿ, ತಿಲಕವಿಟ್ಟು ಸ್ವಾಗತಿಸಿದ್ದು ಸಾಮಾಜಿಕ ಜಾಲತಾಣದಲ್ಲಿ (social media) ವೈರಲ್ (viral news) ಆಗಿದೆ. ಈ ನಡುವೆ ಅವರ ಬಗ್ಗೆ ತಿಳಿದುಕೊಳ್ಳುವ ಕುತೂಹಲವೂ ಅಭಿಮಾನಿಗಳಲ್ಲಿ ಹೆಚ್ಚಾಗಿದೆ.

ಆಂಧ್ರಪ್ರದೇಶ ರಾಜ್ಯ ಚುನಾವಣೆಯಲ್ಲಿ ಜನಸೇನಾ ಪಕ್ಷದ (ಜೆಎಸ್‌ಪಿ) ನಾಯಕ ತೆಲುಗು ನಟ- ರಾಜಕಾರಣಿ ಪವನ್ ಕಲ್ಯಾಣ್ ಅವರ ಐತಿಹಾಸಿಕ ಗೆಲುವು ಅವರ ಅಭಿಮಾನಿಗಳು ಮತ್ತು ಕುಟುಂಬ ಸದಸ್ಯರಲ್ಲಿ ಹರ್ಷ ಮೂಡಿಸಿದೆ. ಫಲಿತಾಂಶದ ಅನಂತರ ಪವನ್ ಮನೆಗೆ ಮರಳಿದ್ದು, ಅವರನ್ನು ಅವರ ಪತ್ನಿ ಅನ್ನಾ ಲೆಜ್ನೆವಾ ಸ್ವಾಗತಿಸಿದರು. ರಾಜಕೀಯ ಪಯಣದುದ್ದಕ್ಕೂ ಪವನ್ ಜೊತೆಯಾಗಿ ನಿಂತಿರುವ ಅನ್ನಾ ಅವರು ಪವನ್ ಅವರನ್ನು ಸ್ವಾಗತಿಸಿದ ಕ್ಷಣವನ್ನು ಸೆರೆಹಿಡಿಯಲಾಗಿದೆ ಮತ್ತು ಅವರ ವಿಡಿಯೋ ಅಂತರ್ಜಾಲದಲ್ಲಿ ವೈರಲ್ ಆಗಿದೆ.

ಅನ್ನಾ ಲೆಜ್ನೆವಾ ಯಾರು?

ರಷ್ಯಾದ ರೂಪದರ್ಶಿ ಮತ್ತು ನಟಿಯಾಗಿರುವ ಅನ್ನಾ ಲೆಜ್ನೆವಾ ಅವರು 2011ರ ತೀನ್ ಮಾ ಚಿತ್ರದ ಚಿತ್ರೀಕರಣದಲ್ಲಿದ್ದಾಗ ಮೊದಲ ಬಾರಿಗೆ ಪವನ್ ಅವರನ್ನು ಭೇಟಿಯಾಗಿದ್ದರು. ಶೀಘ್ರದಲ್ಲೇ ಅವರು ಪ್ರೀತಿಸುವುದಾಗಿ ಪ್ರಕಟಿಸಿ 2013ರ ಸೆಪ್ಟೆಂಬರ್ 30ರಂದು ಮದುವೆಯಾದರು. ಇದಕ್ಕೂ ಮೊದಲು ಎರಡು ವರ್ಷಗಳ ಕಾಲ ಡೇಟಿಂಗ್ ಮಾಡಿದರು. ಪವನ್ ಕಲ್ಯಾಣ್ ಅವರ ಮೂರನೇ ಪತ್ನಿ ಅನ್ನಾ.

ಪವನ್ ಕಲ್ಯಾಣ್ ಅವರ ಹಿಂದಿನ ಮದುವೆಗಳು

ʼಗಬ್ಬರ್ ಸಿಂಗ್ʼ ಪವನ್ ಮೊದಲ ಬಾರಿಗೆ 1997ರಲ್ಲಿ 19 ವರ್ಷದ ಹುಡುಗಿ ನಂದಿನಿಯನ್ನು ವಿವಾಹವಾದರು. 2001ರಲ್ಲಿ ಪವನ್ ನಟಿ ರೇಣು ದೇಸಾಯಿ ಅವರೊಂದಿಗೆ ವಾಸ ಮಾಡಲು ತೊಡಗಿದರು. ಅವರಿಬ್ಬರಿಗೆ ಗಂಡು ಮಗುವಾಗಿತ್ತು. ಪವನ್ ತನ್ನ ಮೊದಲ ಹೆಂಡತಿಗೆ ಕಾನೂನುಬದ್ಧವಾಗಿ ವಿಚ್ಛೇದನ ನೀಡದ ಕಾರಣ ಸಾಕಷ್ಟು ತೊಂದರೆಯನ್ನು ಎದುರಿಸಬೇಕಾಯಿತು. ಅನಂತರ ನ್ಯಾಯಾಲಯವು 2008ರಲ್ಲಿ ಅವರಿಗೆ ವಿಚ್ಛೇದನವನ್ನು ನೀಡಿತು. ಅವರ ಎರಡನೇ ಮದುವೆಯು 2009ರಲ್ಲಿ ನಡೆಯಿತು. ಬಳಿಕ ಪವನ್ ಮತ್ತು ರೇಣು ದಂಪತಿ ತಮ್ಮ ಎರಡನೇ ಮಗುವನ್ನು ಸ್ವಾಗತಿಸಿದರು. ದುರದೃಷ್ಟವಶಾತ್ ಇವರಿಬ್ಬರ ವೈವಾಹಿಕ ಜೀವನ 2012 ರಲ್ಲಿ ವಿಚ್ಛೇದನದ ಮೂಲಕ ಕೊನೆಯಾಯಿತು.


ಪವನ್ ಕಲ್ಯಾಣ್ ಮತ್ತು ಅನ್ನಾ ಲೆಜ್ನೆವಾ

ಅನ್ನಾ ಮತ್ತು ಪವನ್ ದಂಪತಿ 2017ರಲ್ಲಿ ಮಾರ್ಕ್ ಶಂಕರ್ ಪವನೋವಿಚ್ ಎಂಬ ಗಂಡು ಮಗುವಿಗೆ ಪೋಷಕರಾದರು. ಅನ್ನಾ ಅವರ ಮೊದಲ ಮದುವೆ ವಿಫಲವಾಗಿ ಹೆಣ್ಣು ಮಗುವಿನ ತಾಯಿಯಾಗಿದ್ದರು. ಈ ಮಗು ಪೋಲೆನಾ ಅಂಜನಾ ಪವನ್ನೋವಾಳನ್ನು ಪವನ್ ತನ್ನ ಸ್ವಂತ ಮಗಳಂತೆ ಸ್ವೀಕರಿಸಿದ್ದಾರೆ. ಈಗ ಇವರು ಮೂವರು ಮಕ್ಕಳ ಪೋಷಕರಾಗಿದ್ದಾರೆ.

ವಿಚ್ಛೇದನದ ವದಂತಿ

ಕಳೆದ ವರ್ಷ ಅನ್ನಾ ಮತ್ತು ಪವನ್ ನಡುವೆ ಎಲ್ಲವೂ ಸರಿಯಿಲ್ಲ ಎಂಬ ಸುದ್ದಿ ಇತ್ತು. ಇಬ್ಬರೂ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ ಎಂದು ವರದಿಯಾಗಿತ್ತು. ತೆಲುಗು ತಾರೆ ವರುಣ್ ತೇಜ್ ಮತ್ತು ಲಾವಣ್ಯ ತ್ರಿಪಾಠಿ ಅವರ ನಿಶ್ಚಿತಾರ್ಥ ಸಮಾರಂಭದಲ್ಲಿ ಅನ್ನಾ ಲೆಜ್ನೆವಾ ಹಾಜರಾಗದಿದ್ದಾಗ ಈ ಗುಲ್ಲು ಹಬ್ಬಿತ್ತು. ರಾಮ್ ಚರಣ್ ಮತ್ತು ಉಪಾಸನಾ ಅವರ ಮಗಳು ಕ್ಲಿನ್ ಕಾರಾ ಕೊನಿಡೆಲಾ ಅವರ ತೊಟ್ಟಿಲು ಸಮಾರಂಭವನ್ನು ಇವರು ತಪ್ಪಿಸಿಕೊಂಡರು. ಇದರಿಂದ ಅವರ ಪ್ರತ್ಯೇಕತೆಯ ವದಂತಿಗಳಿಗೆ ಉತ್ತೇಜನ ಸಿಕ್ಕಿತು. ಆದರೂ ಇತ್ತೀಚಿನ ವಿಡಿಯೋ ಗಳು ಈ ವದಂತಿಗಳನ್ನು ತಳ್ಳಿ ಹಾಕುವಂತೆ ಮಾಡಿದೆ.

ಇದನ್ನೂ ಓದಿ: Odisha Assembly Result 2024: ಬಿಜೆಡಿ ಭದ್ರ ಕೋಟೆಗೆ ಬಿಜೆಪಿ ಗ್ರ್ಯಾಂಡ್‌ ಎಂಟ್ರಿ! ಹಳೇ ದೋಸ್ತಿಗೆ ಸಕತ್‌ ಠಕ್ಕರ್‌ ಕೊಟ್ಟ ಕೇಸರಿ ಬಣ

ಆಂಧ್ರಪ್ರದೇಶದ ರಾಜ್ಯ ಚುನಾವಣೆಯಲ್ಲಿ ಪವನ್ ಕಲ್ಯಾಣ್ ಗೆದ್ದ ಅನಂತರ ಅನ್ನಾ ಲೆಜ್ನೇವಾ ಮತ್ತು ಪವನ್ ಕಲ್ಯಾಣ್ ಮತ್ತು ಅವರ ಮಾಜಿ ಪತ್ನಿ ರೇಣು ದೇಸಾಯಿ ಅವರ ಪುತ್ರ ಅಕಿರಾ ನಂದನ್ ಸೇರಿದಂತೆ ಪವನ್ ಕಲ್ಯಾಣ್ ಅವರ ಅಭಿಮಾನಿಗಳಿಗೆ ಶುಭ ಹಾರೈಸಿದ್ದಾರೆ.

Continue Reading

ಟಾಲಿವುಡ್

Venu Swamy: ನನ್ನ ಹೇಳಿಕೆ ಸುಳ್ಳಾಯ್ತು, ಟಿಡಿಪಿ ಪಕ್ಷ ಗೆದ್ದಿತು; ಇನ್ನೆಂದೂ ಭವಿಷ್ಯ ನುಡಿಯಲಾರೆ ಎಂದ ಖ್ಯಾತ ಜ್ಯೋತಿಷಿ!

Venu Swamy: ಇದೀಗ ಜ್ಯೋತಿಷಿ ವೇಣುಸ್ವಾಮಿ ವಿಡಿಯೊ ಮೂಲಕ ಕ್ಷಮೆ ಕೇಳಿದ್ದಾರೆ. ತೆಲುಗು ಚಿತ್ರರಂಗದವರ (Tollywood), ರಾಜಕಾರಣಿಗಳ ಭವಿಷ್ಯ ಹೇಳಿ ಜನಪ್ರಿಯವಾಗಿದ್ದ ಸೆಲೆಬ್ರಿಟಿ ಜ್ಯೋತಿಷಿ ವೇಣುಸ್ವಾಮಿ ನಾನು ಹೇಳಿದ ಭವಿಷ್ಯ ಈ ಬಾರಿ ತಪ್ಪಾಗಿದೆ ಎಂದು ಒಪ್ಪಿಕೊಂಡಿದ್ದಾರೆ.

VISTARANEWS.COM


on

Venu Swamy Wrong Prediction on Jagan in AP Polls
Koo

ಬೆಂಗಳೂರು: ಜ್ಯೋತಿಷಿ ವೇಣುಸ್ವಾಮಿ (Venu Swamy) ಆಂಧ್ರಪ್ರದೇಶ ವಿಧಾನಸಭೆ ಚುನಾವಣೆಗೆ ಮುನ್ನ, ಜಗನ್​ ಪಕ್ಷ ಮತ್ತೆ ಗೆಲ್ಲುತ್ತದೆ, ಮತ್ತೆ ಜಗನ್ ಸಿಎಂ ಆಗುತ್ತಾರೆ ಎಂದು ಭವಿಷ್ಯ ನುಡಿದಿದ್ದರು. ಅವರ ಭವಿಷ್ಯ ಸುಳ್ಳಾಗಿದೆ. ಜಗನ್​ ಅವರ ವೈಸಿಪಿ ಪಕ್ಷ ಹೀನಾಯ ಸೋಲು ಕಂಡಿದ್ದು ಟಿಡಿಪಿ ಪಕ್ಷ ಭಾರಿ ವಿಜಯ ದಾಖಲಿಸಿದೆ. ಇದೀಗ ಜ್ಯೋತಿಷಿ ವೇಣುಸ್ವಾಮಿ ವಿಡಿಯೊ ಮೂಲಕ ಕ್ಷಮೆ ಕೇಳಿದ್ದಾರೆ. ತೆಲುಗು ಚಿತ್ರರಂಗದವರ (Tollywood), ರಾಜಕಾರಣಿಗಳ ಭವಿಷ್ಯ ಹೇಳಿ ಜನಪ್ರಿಯವಾಗಿದ್ದ ಸೆಲೆಬ್ರಿಟಿ ಜ್ಯೋತಿಷಿ ವೇಣುಸ್ವಾಮಿ, ನಾನು ಹೇಳಿದ ಭವಿಷ್ಯ ಈ ಬಾರಿ ತಪ್ಪಾಗಿದೆ ಎಂದು ಒಪ್ಪಿಕೊಂಡಿದ್ದಾರೆ.

ರಾಜಕೀಯ ಮತ್ತು ಚಿತ್ರರಂಗದ ಗಣ್ಯರ ವೈಯಕ್ತಿಕ ಜೀವನದ ಬಗ್ಗೆ ಇನ್ನು ಮುಂದೆ ಭವಿಷ್ಯ ಹೇಳುವುದಿಲ್ಲ ಎಂದು ಜ್ಯೋತಿಷಿ ವೇಣು ಸ್ವಾಮಿ ವಿಡಿಯೊ ಮೂಲಕ ಹೇಳಿಕೊಂಡಿದ್ದಾರೆ.

ʻʻಜಗನ್ ಮತ್ತೆ ಗೆಲ್ಲುತ್ತಾರೆ ಎಂದಿದ್ದೆ. ನಾನು ಕಲಿತ ವಿದ್ಯೆಗಳ ಆಧಾರದಲ್ಲಿ ಈ ಭವಿಷ್ಯವನ್ನು ನಾನು ನುಡಿದಿದ್ದೆ. ನನ್ನ ಭವಿಷ್ಯದಲ್ಲಿ ಮೊದಲನೆಯದು ನಿಜವಾಗಿದೆ. ಮೋದಿಯವರ ಫ್ರಭಾವ ತಗ್ಗಿರುವುದು ಫಲಿತಾಂಶದಿಂದ ಗೊತ್ತಾಗುತ್ತಿದೆ. ನಾನು ಹೇಳಿದ ಭವಿಷ್ಯ ಈ ಬಾರಿ ತಪ್ಪಾಗಿದೆ. ನಾನು ಅದನ್ನು ಒಪ್ಪಿಕೊಳ್ಳುತ್ತೇನೆ. ನಾನು ಆಂಧ್ರ ರಾಜಕೀಯದ ಬಗ್ಗೆ ಹೇಳಿರುವ ಭವಿಷ್ಯ ತಪ್ಪಾಗಿರುವ ಕಾರಣ, ಇಂದಿನಿಂದ ರಾಜಕೀಯ ಹಾಗೂ ಸಿನಿಮಾ ವ್ಯಕ್ತಿಗಳ ಬಗ್ಗೆ ಎಲ್ಲಿಯೂ ಭವಿಷ್ಯ ನುಡಿಯುವುದಿಲ್ಲʼʼ ಎಂದು ನಿರ್ಧಾರ ಮಾಡಿರುವುದಾಗಿ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: Kakolu Venugopalaswamy Temple: ಏ.11ರಿಂದ ಕಾಕೋಳು ವೇಣುಗೋಪಾಲಸ್ವಾಮಿ 91ನೇ ಬ್ರಹ್ಮರಥೋತ್ಸವ

ರಶ್ಮಿಕಾ, ಸಮಂತಾ, ನಯನತಾರಾ ಹೀಗೆ ಹಲವು ಟಾಪ್‌ ನಟಿಯರ ಭವಿಷ್ಯ ನುಡಿದು ಫೇಮಸ್‌ ಆದವರು ವೇಣುಸ್ವಾಮಿ. ಕೆಲವು ದಿನಗಳ ಹಿಂದೆ ನಟಿ ಶ್ರೀಲೀಲಾ ಬಗ್ಗೆ ಭವಿಷ್ಯ ನುಡಿದಿದ್ದರು. ಟಾಲಿವುಡ್ ಟಾಪ್ ನಟಿಯರಾಗಿ ಗುರುತಿಸಿಕೊಂಡಿರುವ ಸಮಂತಾ, ರಶ್ಮಿಕಾ ಮಂದಣ್ಣ, ಪೂಜಾ ಹೆಗ್ಡೆ ಅವರಂತೆ ಶ್ರೀಲೀಲಾ ಅವರಿಗೂ ಒಳ್ಳೆಯ ಹೆಸರು ಬರಲಿದೆ. ಆದರೆ ಸೌತ್ ಸಿನಿಮಾಗಳಲ್ಲಿ ಶ್ರೀಲೀಲಾ ನಂಬರ್ 1 ನಟಿಯಾಗುತ್ತಾರೆ ಎಂದು ವೇಣುಸ್ವಾಮಿ ಜ್ಯೋತಿಷ್ಯ ಹೇಳಿದ್ದರು. ವೇಣುಸ್ವಾಮಿ, ಟಾಲಿವುಡ್​ನ ಹಲವು ಸ್ಟಾರ್ ನಟ-ನಟಿಯರ ಭವಿಷ್ಯ ಹೇಳಿದ್ದರು. ಸಮಂತಾ-ನಾಗಚೈತನ್ಯ ಬೇರೆಯಾಗುತ್ತಾರೆ ಎಂದು ಸಹ ಭವಿಷ್ಯ ನುಡಿದಿದ್ದರು.

ಆಂಧ್ರಪ್ರದೇಶ ಪ್ರಮುಖ ಅಭ್ಯರ್ಥಿಗಳು

ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ (ವೈಎಸ್‌ಆರ್‌ಸಿಪಿ), ಎನ್. ಚಂದ್ರಬಾಬು ನಾಯ್ಡು (ಟಿಡಿಪಿ), ಪವನ್ ಕಲ್ಯಾಣ್ (ಜೆಎಸ್‌ಪಿ), ಕಿಲ್ಲಿ ಕೃಪಾರಾಣಿ (ಕಾಂಗ್ರೆಸ್), ಧರ್ಮನಾ ಪ್ರಸಾದ ರಾವ್ (ವೈಎಸ್‌ಆರ್‌ಸಿಪಿ), ಧರ್ಮನಾ ಕೃಷ್ಣ ದಾಸ್ (ವೈಎಸ್‌ಆರ್‌ಸಿಪಿ), ಪಾಮುಲಾ ಪುಷ್ಪ ಶ್ರೀವಾಣಿ ( ವೈಎಸ್‌ಆರ್‌ಸಿಪಿ), ನಲ್ಲಮಿಲ್ಲಿ ರಾಮಕೃಷ್ಣ ರೆಡ್ಡಿ (ಬಿಜೆಪಿ), ರಘು ರಾಮ ಕೃಷ್ಣರಾಜು (ಟಿಡಿಪಿ), ಚಿಂತಾಮನೇನಿ ಪ್ರಭಾಕರ್ (ಟಿಡಿಪಿ), ವೈಎಸ್ ಚೌಧರಿ (ಬಿಜೆಪಿ), ನಾದೆಂಡ್ಲ ಮನೋಹರ್ (ಜೆಎಸ್‌ಪಿ), ಕನ್ನಾ ಲಕ್ಷ್ಮೀನಾರಾಯಣ (ಟಿಡಿಪಿ), ಅದಾಲ ಪ್ರಭಾಕರ ರೆಡ್ಡಿ (ವೈಎಸ್‌ಆರ್‌ಸಿಪಿ), ಅಮ್ಜತ್ ಬಾಷಾ ಶೇಕ್ ಬೇಪಾರಿ (ವೈಎಸ್‌ಆರ್‌ಸಿಪಿ), ನಂದಮೂರಿ ಬಾಲಕೃಷ್ಣ (ಟಿಡಿಪಿ), ನಲ್ಲಾರಿ ಕಿಶೋರ್ ಕುಮಾರ್ ರೆಡ್ಡಿ (ಟಿಡಿಪಿ), ನಾರಾ ಲೋಕೇಶ್ (ಟಿಡಿಪಿ) ಮತ್ತಿತರರು ಆಂಧ್ರಪ್ರದೇಶದ ವಿಧಾನಸಭಾ ಕಣದಲ್ಲಿರುವ ಕೆಲವು ಪ್ರಮುಖ ಅಭ್ಯರ್ಥಿಗಳು.

Continue Reading
Advertisement
Environment awareness programme by NCC team in Bengaluru
ಬೆಂಗಳೂರು7 mins ago

World Environment Day: ಬೆಂಗಳೂರಿನಲ್ಲಿ ಎನ್‌ಸಿಸಿ ತಂಡದಿಂದ ವಿಶೇಷ ಪರಿಸರ ಜಾಗೃತಿ ಕಾರ್ಯಕ್ರಮ

SIT feels it would be better for Minister Nagendra to resign
ಕರ್ನಾಟಕ11 mins ago

Valmiki Corporation Scam: ಸಚಿವ ನಾಗೇಂದ್ರ ರಾಜೀನಾಮೆ ಪಡೆಯುವುದು ಉತ್ತಮ; ಸರ್ಕಾರಕ್ಕೆ ಅಭಿಪ್ರಾಯ ತಿಳಿಸಿದ ಎಸ್‌ಐಟಿ?

Encounter in UP
ದೇಶ19 mins ago

Encounter in UP: ಮೋಸ್ಟ್‌ ವಾಂಟೆಡ್‌ ಗ್ಯಾಂಗ್‌ಸ್ಟರ್‌ ಎನ್‌ಕೌಂಟರ್‌ಗೆ ಬಲಿ! ಯೋಗಿ ನಾಡಿನಲ್ಲಿ ಮತ್ತೆ ಗುಂಡಿನ ಸದ್ದು

Pradeep Eshwar
ಪ್ರಮುಖ ಸುದ್ದಿ22 mins ago

Pradeep Eshwar: ಪ್ರದೀಪ್‌ ಈಶ್ವರ್‌ ರಾಜೀನಾಮೆಗೆ ಒತ್ತಾಯಿಸಿದ ಕಾಂಗ್ರೆಸ್‌ ನಾಯಕ ಪಕ್ಷದಿಂದಲೇ ಉಚ್ಚಾಟನೆ!

Gold Rate Today
ಚಿನ್ನದ ದರ35 mins ago

Gold Rate Today: ಕೈ ಸುಡುತ್ತಿದೆ ಚಿನ್ನದ ಬೆಲೆ; ಆಭರಣ ಖರೀದಿಗೆ ಮುನ್ನ ಬೆಲೆ ಹೆಚ್ಚಳ ಗಮನಿಸಿ

T20 World Cup 2024
ಕ್ರೀಡೆ36 mins ago

T20 World Cup 2024: ನಸೌ ಪಿಚ್​ ಬಗ್ಗೆ ಕಳವಳ ವ್ಯಕ್ತಪಡಿಸಿದ ಟೀಮ್​ ಇಂಡಿಯಾ ಆಟಗಾರರು

Sunil Lahri aka Lakshman of Ramayan lashes out at Ayodhya citizens
ಬಾಲಿವುಡ್45 mins ago

Sunil Lahri: ಅಯೋಧ್ಯೆಯಲ್ಲಿ ಬಿಜೆಪಿಗೆ ದಾರುಣ ಸೋಲು; ಅಲ್ಲಿಯ ಜನರ ವಿರುದ್ಧ ರಾಮಾಯಣದ ಲಕ್ಷ್ಮಣ ಕೆಂಡಾಮಂಡಲ!

Karnataka Rain
ಮಳೆ45 mins ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Miss You First Look Out Siddharth unveils intriguing poster
ಟಾಲಿವುಡ್54 mins ago

Miss You First Look Out: ಆಶಿಕಾ ರಂಗನಾಥ್‌ಗೆ ʻಮಿಸ್ ಯುʼ ಎಂದ ನಟ ಸಿದ್ಧಾರ್ಥ್!

Narendra Modi
ದೇಶ1 hour ago

Narendra Modi: ಜೂ.8ರಂದು ಮೋದಿ ಪ್ರಮಾಣವಚನ; ದೇಶ ವಿದೇಶಗಳ ಗಣ್ಯರು ಭಾಗಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ45 mins ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ2 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ3 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ3 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ4 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು5 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

ಟ್ರೆಂಡಿಂಗ್‌