Lok Sabha Election 2024: ಒವೈಸಿ ಪ್ರಕಾರ ಮುಸ್ಲಿಮರೇ ಹೆಚ್ಚು ಕಾಂಡೋಮ್ ಬಳಸುತ್ತಾರಂತೆ! - Vistara News

Lok Sabha Election 2024

Lok Sabha Election 2024: ಒವೈಸಿ ಪ್ರಕಾರ ಮುಸ್ಲಿಮರೇ ಹೆಚ್ಚು ಕಾಂಡೋಮ್ ಬಳಸುತ್ತಾರಂತೆ!

Lok Sabha Election 2024: ಧಾನ ಮಂತ್ರಿ ನರೇಂದ್ರ ಮೋದಿ ಅವರ ʼಮುಸ್ಲಿಮರು ಹೆಚ್ಚಿನ ಮಕ್ಕಳನ್ನು ಹೊಂದಿರುತ್ತಾರೆʼ ಎನ್ನುವ ಹೇಳಿಕೆ ವಿರುದ್ಧ ವಾಗ್ದಾಳಿ ನಡೆಸಿದ ಹೈದರಾಬಾದ್‌ನ ಸಂಸದ ಅಸಾದುದ್ದೀನ್ ಒವೈಸಿ, ಸಂಸದ ಅಸಾದುದ್ದೀನ್ ಒವೈಸಿ (Asaduddin Owaisi), ʼʼಮುಸ್ಲಿಂ ಸಮುದಾಯದ ಪುರುಷರು ಕಾಂಡೋಮ್ ಅನ್ನು ಹೆಚ್ಚು ಬಳಸುತ್ತಾರೆ ಮತ್ತು ಮಕ್ಕಳ ಅಂತರದಲ್ಲಿ ಉತ್ತಮ ದಾಖಲೆಯನ್ನು ಹೊಂದಿದ್ದಾರೆʼʼ ಎಂದು ಹೇಳಿದ್ದಾರೆ. “ಮುಸ್ಲಿಮರ ಫಲವತ್ತತೆ ದರ ಕುಸಿಯುತ್ತಿದೆ. ಆದರೆ ನರೇಂದ್ರ ಮೋದಿ ಅವರು ನಮ್ಮ ಹಿಂದೂ ಸಹೋದರರಲ್ಲಿ ಭಯವನ್ನು ಸೃಷ್ಟಿಸಲು ದ್ವೇಷ ಹರಡುತ್ತಿದ್ದಾರೆʼʼ ಎಂದು ಅವರು ಟೀಕಿಸಿದ್ದಾರೆ.

VISTARANEWS.COM


on

Lok Sabha Election 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೈದರಾಬಾದ್‌: ಚುನಾವಣಾ ಕಣದಲ್ಲಿ (Lok Sabha Election 2024) ಪ್ರಮುಖ ರಾಜಕೀಯ ನಾಯಕರ ವಾಕ್ಸಮರ ತಾರಕಕ್ಕೇರಿದೆ. ಇದೀಗ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರ ʼಮುಸ್ಲಿಮರು ಹೆಚ್ಚಿನ ಮಕ್ಕಳನ್ನು ಹೊಂದಿರುತ್ತಾರೆʼ ಎನ್ನುವ ಹೇಳಿಕೆ ವಿರುದ್ಧ ವಾಗ್ದಾಳಿ ನಡೆಸಿದ ಹೈದರಾಬಾದ್‌ನ ಎಐಎಂಐಎಂ (AIMIM Hyderabad) ಸಂಸದ ಅಸಾದುದ್ದೀನ್ ಒವೈಸಿ (Asaduddin Owaisi), ʼʼಮುಸ್ಲಿಂ ಸಮುದಾಯದ ಪುರುಷರು ಕಾಂಡೋಮ್ ಅನ್ನು ಹೆಚ್ಚು ಬಳಸುತ್ತಾರೆ ಮತ್ತು ಮಕ್ಕಳ ಅಂತರದಲ್ಲಿ ಉತ್ತಮ ದಾಖಲೆಯನ್ನು ಹೊಂದಿದ್ದಾರೆʼʼ ಎಂದು ಹೇಳಿದ್ದಾರೆ.

ʼʼಮುಸ್ಲಿಮರು ಹೆಚ್ಚು ಮಕ್ಕಳನ್ನು ಪಡೆಯುತ್ತಾರೆ ಎಂದು ಮೋದಿ ಹೇಳುತ್ತಿದ್ದಾರೆ. ನರೇಂದ್ರ ಮೋದಿ ಅವರಿಗೆ ಆರು ಜನ ಸಹೋದರರಿದ್ದಾರೆ. ಅಮಿತ್ ಶಾ ಅವರಿಗೆ ಆರು ಸಹೋದರಿಯರು ಮತ್ತು ಆರ್‌ಎಸ್‌ಎಸ್‌ ಮುಖ್ಯಸ್ಥರಿಗೆ ಸುಮಾರು 10-12 ಸಹೋದರಿಯರು ಮತ್ತು ಸಹೋದರರು ಇದ್ದಾರೆ” ಎಂದು ಒವೈಸಿ ಟೀಕಿಸಿದ್ದಾರೆ.

“ಮುಸ್ಲಿಮರ ಫಲವತ್ತತೆ ದರ ಕುಸಿಯುತ್ತಿದೆ. ಆದರೆ ನರೇಂದ್ರ ಮೋದಿ ಅವರು ನಮ್ಮ ಹಿಂದೂ ಸಹೋದರರಲ್ಲಿ ಭಯವನ್ನು ಸೃಷ್ಟಿಸಲು ದ್ವೇಷ ಹರಡುತ್ತಿದ್ದಾರೆ. ಈ ದೇಶದಲ್ಲಿ ಮುಸ್ಲಿಮರು ಎಂದಿಗೂ ಬಹುಸಂಖ್ಯಾತರಾಗುವುದಿಲ್ಲ. ನರೇಂದ್ರ ಮೋದಿ, ಮುಸ್ಲಿಮರ ಬಗೆಗಿನ ಈ ಭಯವನ್ನು ನೀವು ಎಷ್ಟು ದಿನ ಮುಂದುವರಿಸುತ್ತೀರಿ?ʼʼ ಎಂದು ಚುನಾವಣಾ ರ‍್ಯಾಲಿಯಲ್ಲಿ ಓವೈಸಿ ಪ್ರಶ್ನಿಸಿದ್ದಾರೆ.

ʼನುಸುಳುಕೋರರುʼ ಎಂಬ ಪದ ಬಳಕೆಗೆ ಅವರು ಪ್ರಧಾನಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. “ಪ್ರಧಾನಿ ನರೇಂದ್ರ ಮೋದಿ ಅವರು 17 ಕೋಟಿ ಭಾರತೀಯ ಮುಸ್ಲಿಮರನ್ನು ಗುಸ್ಪೆಟಿಯಾ (ಒಳನುಸುಳುಕೋರರು) ಎಂದು ಕರೆದಿದ್ದಾರೆ. ನೀವು ಗುಸ್ಪೆಟಿಯಾ ಆಗಿದ್ದೀರಾ?” ಎಂದು ಪ್ರಶ್ನಿಸಿದ ಅವರು, “ದಲಿತರು ಮತ್ತು ಮುಸ್ಲಿಮರ ವಿರುದ್ಧ ಪ್ರಧಾನಿ ಮೋದಿ ದ್ವೇಷ ಹರಡುತ್ತಿದ್ದಾರೆ” ಎಂದು ಟೀಕಿಸಿದ್ದಾರೆ.

ಮಾಧವಿ ಲತಾ ವಿರುದ್ಧವೂ ವಾಗ್ದಾಳಿ

ಇದಕ್ಕೂ ಮುನ್ನ ಹೈದರಾಬಾದ್ ಬಿಜೆಪಿ ಲೋಕಸಭಾ ಅಭ್ಯರ್ಥಿ ಮಾಧವಿ ಲತಾ ವಿರುದ್ಧವೂ ಒವೈಸಿ ವಾಗ್ದಾಳಿ ನಡೆಸಿದ್ದಾರೆ. ʼʼಹೈದರಾಬಾದ್‌ನ ಓಲ್ಡ್ ಸಿಟಿಯ ಮಸೀದಿಯೊಂದರ ಮೇಲೆ ಬಾಣ ಹೂಡುವಂತೆ ಮಾಧವಿ ಲತಾ ಅವರು ಸನ್ನೆ ಮಾಡಿದ್ದಾರೆ. ಬಿಜೆಪಿಯ ಮೆರವಣಿಗೆಯ ವಿಡಿಯೊದಲ್ಲಿ ಇದು ಸ್ಪಷ್ಟವಾಗಿ ಕಂಡು ಬಂದಿದೆ. ಇದು ಮಸೀದಿಯ ಮೇಲೆ ಹೂಡಿದ ಬಾಣವಲ್ಲ, ಬದಲಾಗಿ ನಗರದಲ್ಲಿ ಶಾಂತಿಯನ್ನು ಹಾಳು ಮಾಡುವ ಉದ್ದೇಶಿತ ಪ್ರಯತ್ನ” ಎಂದು ಅವರು ಟೀಕಿಸಿದ್ದಾರೆ.

ಮೋದಿ ಹೇಳಿದ್ದೇನು?

ರಾಜಸ್ಥಾನದಲ್ಲಿ ನಡೆದ ರ‍್ಯಾಲಿಯಲ್ಲಿ ಮಾತನಾಡಿದ ಮೋದಿ ʼʼದೇಶದ ಸಂಪತ್ತಿನಲ್ಲಿ ಮುಸ್ಲಿಮರಿಗೆ ಮೊದಲ ಹಕ್ಕು ಇದೆ ಎಂದು ಕಾಂಗ್ರೆಸ್ ಈ ಹಿಂದೆ ಹೇಳಿತ್ತು. ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ದೇಶದ ಆಸ್ತಿಯನ್ನು ವಿತರಿಸುವುದಾಗಿ ಹೇಳಿದೆ. ಯಾರಿಗೆ? ಈ ಹಿಂದೆ, ಅವರ (ಕಾಂಗ್ರೆಸ್) ಸರ್ಕಾರ ಅಧಿಕಾರದಲ್ಲಿದ್ದಾಗ, ದೇಶದ ಆಸ್ತಿಯಲ್ಲಿ ಮುಸ್ಲಿಮರಿಗೆ ಮೊದಲ ಹಕ್ಕು ಇದೆ ಎಂದು ಹೇಳಿದ್ದರು. ಇದರರ್ಥ ಅವರು ಸಂಪತ್ತನ್ನು ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ, ಒಳನುಸುಳುವವರಿಗೆ ವಿತರಿಸುತ್ತಾರೆ. ನೀವು ಕಷ್ಟಪಟ್ಟು ಸಂಪಾದಿಸಿದ ಹಣ ನುಸುಳುಕೋರರಿಗೆ ಹೋಗಬೇಕೇ? ನೀವು ಇದನ್ನು ಒಪ್ಪುತ್ತೀರಾ?” ಎಂದು ಮೋದಿ ಕೇಳಿದ್ದರು. ಜತೆಗೆ ದೇಶದ ಸಂಪನ್ಮೂಲಗಳ ಮೇಲೆ ಅಲ್ಪಸಂಖ್ಯಾತ ಸಮುದಾಯಕ್ಕೆ ಮೊದಲ ಹಕ್ಕು ಇದೆ ಎಂಬ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಹೇಳಿಕೆಯನ್ನೂ ಅವರು ಉಲ್ಲೇಖಿಸಿದ್ದರು. ಈ ಹೇಳಿಕೆಗೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು.

ಇದನ್ನೂ ಓದಿ: Narendra Modi : ಹೆಚ್ಚು ಮಕ್ಕಳಿದ್ದವರಿಗೆ ಕಾಂಗ್ರೆಸ್​ನಿಂದ ಸಂಪತ್ತು ವಿತರಣೆ; ಮೋದಿ ಹೇಳಿಕೆಗೆ ಕೈ ಪಕ್ಷದ ಆಕ್ಷೇಪ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Narendra Modi: ಭಾನುವಾರ ಸಂಜೆ 7.15ಕ್ಕೆ ಮೋದಿ ಪ್ರಮಾಣವಚನ‌; ಹಲವು ಸಂಸದರಿಗೂ ಮಂತ್ರಿ ಭಾಗ್ಯ!

Narendra Modi: ನರೇಂದ್ರ ಮೋದಿ ಅವರೊಂದಿಗೆ ಪ್ರಮಾಣವಚನ ಸ್ವೀಕರಿಸುವ ಸಂಸದರು ಯಾರು ಎಂಬುದರ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಇನ್ನು, ನರೇಂದ್ರ ಮೋದಿ ಮಾತ್ರವಲ್ಲ, ಎನ್‌ಡಿಎ ಮೈತ್ರಿಕೂಟದ ಹಲವು ಸದಸ್ಯರು ಕೂಡ ರಾಷ್ಟ್ರಪತಿ ಅವರನ್ನು ಭೇಟಿಯಾದರು. ಬಿಹಾರ ಸಿಎಂ ನಿತೀಶ್‌ ಕುಮಾರ್‌, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು, ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಅವರು ಕೂಡ ಇದ್ದರು.

VISTARANEWS.COM


on

Narendra Modi
Koo

ನವದೆಹಲಿ: ನರೇಂದ್ರ ಮೋದಿ ಅವರು ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾಗಿದ್ದು, ಇದಕ್ಕೆ ಎನ್‌ಡಿಎ ಮೈತ್ರಿಕೂಟದ ಎಲ್ಲ ಪಕ್ಷಗಳು ಸಮ್ಮತಿ ಸೂಚಿಸಿವೆ. ಇದಾದ ಬಳಿಕ ನರೇಂದ್ರ ಮೋದಿ (Narendra Modi) ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರನ್ನು ಭೇಟಿಯಾಗಿ, ಸರ್ಕಾರ ರಚನೆ ಕುರಿತು ಹಕ್ಕು ಮಂಡಿಸಿದ್ದಾರೆ. ಇನ್ನು, ಜೂನ್‌ 9ರಂದು (ಭಾನುವಾರ) ಸಂಜೆ 7.15ಕ್ಕೆ ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾಗಿ ಪ್ರಮಾಣವಚನ (Oath) ಸ್ವೀಕರಿಸಲಿದ್ದಾರೆ.

ಹೌದು, ನರೇಂದ್ರ ಮೋದಿ ಅವರು ಪ್ರಮಾಣವಚನ ಸ್ವೀಕರಿಸುವ ಕುರಿತು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೇ ಅಧಿಕೃತ ಮಾಹಿತಿ ನೀಡಿದ್ದಾರೆ. “ನರೇಂದ್ರ ಮೋದಿ ಅವರು ಪ್ರಧಾನಿಯಾಗಿ, ಹಲವು ಸಂಸದರು ಸಚಿವರಾಗಿ ಜೂನ್‌ 9ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಮಾಣವಚನ ಬೋಧಿಸಲಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ಕಾರ್ಯಕ್ರಮ ನಡೆಯಲಿದೆ” ಎಂದು ರಾಷ್ಟ್ರಪತಿಯವರ ಕಚೇರಿಯು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದೆ.

ನರೇಂದ್ರ ಮೋದಿ ಅವರೊಂದಿಗೆ ಪ್ರಮಾಣವಚನ ಸ್ವೀಕರಿಸುವ ಸಂಸದರು ಯಾರು ಎಂಬುದರ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಇನ್ನು, ನರೇಂದ್ರ ಮೋದಿ ಮಾತ್ರವಲ್ಲ, ಎನ್‌ಡಿಎ ಮೈತ್ರಿಕೂಟದ ಹಲವು ಸದಸ್ಯರು ಕೂಡ ರಾಷ್ಟ್ರಪತಿ ಅವರನ್ನು ಭೇಟಿಯಾದರು. ಬಿಹಾರ ಸಿಎಂ ನಿತೀಶ್‌ ಕುಮಾರ್‌, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು, ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ನೂತನ ಸಂಸದ ಡಾ.ಸಿ.ಎನ್‌.ಮಂಜುನಾಥ್‌ ಸೇರಿ ಹಲವು ನಾಯಕರು ಇದ್ದರು.

ಸರ್ಕಾರ ರಚನೆಗೆ ಹಕ್ಕು ಮಂಡಿಸುವ ಮುನ್ನ ನಡೆದ ಎನ್‌ಡಿಎ ಸಭೆಯಲ್ಲಿ ನರೇಂದ್ರ ಮೋದಿ ಅವರನ್ನು ನಿತೀಶ್‌ ಕುಮಾರ್‌ ಅವರು ಹೊಗಳಿದರು. “ಮುಂದಿನ ಸಲವೂ ನೀವೇ ಸ್ಪರ್ಧೆಗೆ ನಿಂತರೆ, ಈಗ ಅಲ್ಲಲ್ಲಿ ಗೆಲುವು ಸಾಧಿಸಿರುವ ಇಂಡಿಯಾ ಒಕ್ಕೂಟದ ಯಾವೊಬ್ಬರೂ ಗೆಲ್ಲುವುದಿಲ್ಲ. ಎಲ್ಲರೂ ನಿಮ್ಮೆದುರು ಸೋತು ಹೋಗುತ್ತಾರೆ. ಅವರು ಎಂದಿಗೂ ದೇಶಕ್ಕಾಗಿ ಕೆಲಸ ಮಾಡಿಲ್ಲ. ಅವರಿಂದ ದೇಶಕ್ಕೆ ಯಾವ ಸೇವೆಯೂ ಸಿಕ್ಕಿಲ್ಲ. ನರೇಂದ್ರ ಮೋದಿ ಅವರ ನೇತೃತ್ವದಲ್ಲಿಯೇ ದೇಶ ಏಳಿಗೆ ಹೊಂದುತ್ತಿದೆ” ಎಂಬುದಾಗಿ ನಿತೀಶ್‌ ಕುಮಾರ್‌ ಹೇಳಿದರು. ಆಗ ನರೇಂದ್ರ ಮೋದಿ ಅವರು ಗಹಗಹಿಸಿ ನಕ್ಕರು. ಸಭೆಯಲ್ಲಿದ್ದ ಎಲ್ಲರೂ ನಗೆಗಡಲಲ್ಲಿ ತೇಲಾಡಿದರು.

ಇದನ್ನೂ ಓದಿ: Nitish Kumar: ಮುಂದಿನ ಸಲ ನಿಮ್ಮೆದುರು ಪ್ರತಿಪಕ್ಷಗಳ ಎಲ್ಲರಿಗೂ ಸೋಲು; ನಿತೀಶ್‌ ಮಾತಿಗೆ ನಕ್ಕ ಮೋದಿ!

Continue Reading

ದೇಶ

Nitish Kumar: ಮುಂದಿನ ಸಲ ನಿಮ್ಮೆದುರು ಪ್ರತಿಪಕ್ಷಗಳ ಎಲ್ಲರಿಗೂ ಸೋಲು; ನಿತೀಶ್‌ ಮಾತಿಗೆ ನಕ್ಕ ಮೋದಿ!

Nitish Kumar: ಎನ್‌ಡಿಎ ಮಿತ್ರಪಕ್ಷಗಳ ಸಭೆಯಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿದರು. ಮೋದಿ ನೇತೃತ್ವದಲ್ಲಿ ಮಾತ್ರ ದೇಶವು ಅಭಿವೃದ್ಧಿ ಹೊಂದಲಿದೆ ಎಂಬುದಾಗಿ ತಿಳಿಸಿದರು. ಇದೇ ವೇಳೆ ಇಂಡಿಯಾ ಒಕ್ಕೂಟಕ್ಕೆ ಟಾಂಗ್‌ ಕೊಟ್ಟ ಅವರು, “ಮುಂದಿನ ಬಾರಿಯೂ ಮೋದಿ ಅವರು ಚುನಾವಣೆಗೆ ನಿಂತರೆ, ಪ್ರತಿಪಕ್ಷಗಳ ಎಲ್ಲರೂ ಸೋಲುತ್ತಾರೆ” ಎಂದರು. ಆಗ ಮೋದಿ ಅವರು ಗಹಗಹಿಸಿ ನಕ್ಕರು.

VISTARANEWS.COM


on

Nitish Kumar
Koo

ನವದೆಹಲಿ: ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾಗಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರನ್ನು ಭೇಟಿಯಾಗಿದ್ದು, ಸರ್ಕಾರ ರಚಿಸಲು ಹಕ್ಕು ಮಂಡಿಸಿದ್ದಾರೆ. ಇದಕ್ಕೂ ಮೊದಲು ಎನ್‌ಡಿಎ ಪಕ್ಷಗಳ ಸಭೆ ನಡೆದಿದ್ದು, ನರೇಂದ್ರ ಮೋದಿ ಅವರನ್ನು ಶಾಸಕಾಂಗ ಪಕ್ಷದ ನಾಯಕನನ್ನಾಗಿ ಘೋಷಣೆ ಮಾಡಲಾಯಿತು. ಇನ್ನು ಸಭೆಯ ವೇಳೆ, ನಿತೀಶ್‌ ಕುಮಾರ್‌ ಅವರು ಆಡಿದ ಮಾತಿಗೆ ನರೇಂದ್ರ ಮೋದಿ ಅವರು ಗಹಗಹಿಸಿ ನಕ್ಕಿದ್ದಾರೆ.

“ಮುಂದಿನ ಸಲವೂ ನೀವೇ ಸ್ಪರ್ಧೆಗೆ ನಿಂತರೆ, ಈಗ ಅಲ್ಲಲ್ಲಿ ಗೆಲುವು ಸಾಧಿಸಿರುವ ಇಂಡಿಯಾ ಒಕ್ಕೂಟದ ಯಾವೊಬ್ಬರೂ ಗೆಲ್ಲುವುದಿಲ್ಲ. ಎಲ್ಲರೂ ನಿಮ್ಮೆದುರು ಸೋತು ಹೋಗುತ್ತಾರೆ. ಅವರು ಎಂದಿಗೂ ದೇಶಕ್ಕಾಗಿ ಕೆಲಸ ಮಾಡಿಲ್ಲ. ಅವರಿಂದ ದೇಶಕ್ಕೆ ಯಾವ ಸೇವೆಯೂ ಸಿಕ್ಕಿಲ್ಲ. ನರೇಂದ್ರ ಮೋದಿ ಅವರ ನೇತೃತ್ವದಲ್ಲಿಯೇ ದೇಶ ಏಳಿಗೆ ಹೊಂದುತ್ತಿದೆ” ಎಂಬುದಾಗಿ ನಿತೀಶ್‌ ಕುಮಾರ್‌ ಹೇಳಿದರು. ಆಗ ನರೇಂದ್ರ ಮೋದಿ ಅವರು ಗಹಗಹಿಸಿ ನಕ್ಕರು. ಸಭೆಯಲ್ಲಿದ್ದ ಎಲ್ಲರೂ ನಗೆಗಡಲಲ್ಲಿ ತೇಲಾಡಿದರು.

ಮೋದಿಯ ಪಾದ ಮುಟ್ಟಿ, ನಮಸ್ಕರಿಸಲು ಮುಂದಾದ ನಿತೀಶ್

ಸಂಸದೀಯ ಪಕ್ಷದ ಸಭೆಯಲ್ಲಿ ರಾಜನಾಥ್‌ ಸಿಂಗ್‌ ಅವರು ನರೇಂದ್ರ ಮೋದಿ ಅವರ ಹೆಸರನ್ನು ಶಾಸಕಾಂಗ ಪಕ್ಷದ ನಾಯಕ ಎಂಬುದಾಗಿ ಪ್ರಸ್ತಾಪಿಸಿದರು. ಇದಕ್ಕೆ, ಎನ್‌ಡಿಎ ಮೈತ್ರಿಕೂಟದ ಸದಸ್ಯರೆಲ್ಲರೂ ಚಪ್ಪಾಳೆ ತಟ್ಟಿ ಬೆಂಬಲ ವ್ಯಕ್ತಪಡಿಸಿದರು. ಇದಾದ ಬಳಿಕ ನಿತೀಶ್‌ ಕುಮಾರ್‌ ಅವರು ನರೇಂದ್ರ ಮೋದಿ ಅವರ ಪಾದ ಮುಟ್ಟಿ ನಮಸ್ಕರಿಸಲು ಮುಂದಾದರು. ಆಗ ಮೋದಿ ಅವರು ಅದಕ್ಕೆ ಅವಕಾಶ ಮಾಡಿಕೊಡಲಿಲ್ಲ. ನರೇಂದ್ರ ಮೋದಿ ಅವರಿಗೆ 73 ವರ್ಷ ವಯಸ್ಸಾಗಿದ್ದರೆ, ನಿತೀಶ್‌ ಕುಮಾರ್‌ ಅವರು ವಯಸ್ಸು ಕೂಡ 73 ವರ್ಷವಾಗಿದೆ. ಇಬ್ಬರೂ ಸಮಕಾಲೀನ ನಾಯಕರಾಗಿದ್ದಾರೆ.‌

ಸಭೆಯಲ್ಲಿ ಮಾತನಾಡಿದ ನರೇಂದ್ರ ಮೋದಿ ಅವರು ನಿತೀಶ್‌ ಕುಮಾರ್‌, ಪವನ್‌ ಕಲ್ಯಾಣ್‌ ಸೇರಿ ಹಲವರನ್ನು ಹೊಗಳಿದರು. ಯೋಗಿ ಆದಿತ್ಯನಾಥ್‌ ಅವರ ಬೆನ್ನನ್ನೂ ತಟ್ಟಿದರು. ಇದೇ ವೇಳೆ, ದಕ್ಷಿಣ ಭಾರತದ ಫಲಿತಾಂಶದ ಕುರಿತು ಕೂಡ ಮೋದಿ ಪ್ರಸ್ತಾಪಿಸಿದರು.

“ದಕ್ಷಿಣ ಭಾರತದಲ್ಲಿ ಎನ್‌ಡಿಎ ಬುನಾದಿ ಭದ್ರವಾಗಿದ್ದು, ಹೊಸ ರಾಜಕೀಯಕ್ಕೆ ಇದು ನಾಂದಿಯಾಗಿದೆ. ಕರ್ನಾಟಕ ಹಾಗೂ ತೆಲಂಗಾಣವನ್ನೇ ತೆಗೆದುಕೊಳ್ಳಿ, ಇತ್ತೀಚೆಗೆ ಬೇರೆ ಪಕ್ಷಗಳ ಸರ್ಕಾರಗಳು ಅಲ್ಲಿ ಆಡಳಿತಕ್ಕೆ ಬಂದಿವೆ. ಆದರೆ, ಜನರು ಭ್ರಮೆಯಿಂದ ಹೊರಬಂದು ಎನ್‌ಡಿಎ ಮೈತ್ರಿಕೂಟವನ್ನು ಬೆಂಬಲಿಸಿದ್ದಾರೆ. ಕರ್ನಾಟಕ ಹಾಗೂ ತೆಲಂಗಾಣದಲ್ಲಿ ಜನ ಎನ್‌ಡಿಎ ಮೈತ್ರಿಕೂಟವನ್ನು ಸ್ವೀಕರಿಸಿದ್ದಾರೆ. ಇದು ಎನ್‌ಡಿಎ ಮೇಲೆ ಜನ ಇಟ್ಟಿರುವ ವಿಶ್ವಾಸಕ್ಕೆ ಸಾಕ್ಷಿಯಾಗಿದೆ” ಎಂದು ಹೇಳಿದರು.

ಇದನ್ನೂ ಓದಿ: Narendra Modi: ರಾಷ್ಟ್ರಪತಿಯನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಮೋದಿ; ಈಗ ಹಂಗಾಮಿ ಪ್ರಧಾನಿ!

Continue Reading

ದೇಶ

Narendra Modi: ರಾಷ್ಟ್ರಪತಿಯನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಮೋದಿ; ಈಗ ಹಂಗಾಮಿ ಪ್ರಧಾನಿ!

Narendra Modi: ಜೂನ್‌ 9ರಂದು ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಹಾಗಾಗಿ, ಶುಕ್ರವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಯಾದ ನರೇಂದ್ರ ಮೋದಿ, ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ. ಇದೇ ವೇಳೆ, ನರೇಂದ್ರ ಮೋದಿ ಅವರನ್ನು ಹಂಗಾಮಿ ಪ್ರಧಾನಿಯನ್ನಾಗಿ ದ್ರೌಪದಿ ಮುರ್ಮು (Droupadi Murmu) ಅವರು ನೇಮಿಸಿದ್ದಾರೆ.

VISTARANEWS.COM


on

Narendra Modi
Koo

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಎನ್‌ಡಿಎ ಮೈತ್ರಿಕೂಟವು 292 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, ಎನ್‌ಡಿಎ ಸಭೆಯಲ್ಲಿ (NDA Meeting) ನರೇಂದ್ರ ಮೋದಿ (Narendra Modi) ಅವರು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ. ಜೂನ್‌ 9ರಂದು ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಹಾಗಾಗಿ, ಶುಕ್ರವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಯಾದ ನರೇಂದ್ರ ಮೋದಿ, ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ. ಇದೇ ವೇಳೆ, ನರೇಂದ್ರ ಮೋದಿ ಅವರನ್ನು ಹಂಗಾಮಿ ಪ್ರಧಾನಿಯನ್ನಾಗಿ ದ್ರೌಪದಿ ಮುರ್ಮು (Droupadi Murmu) ಅವರು ನೇಂಮಿಸಿದ್ದಾರೆ.

ದ್ರೌಪದಿ ಮುರ್ಮು ಅವರನ್ನು ಭೇಟಿಯಾದ ಬಳಿಕ ಮೋದಿ ಮಾತನಾಡಿದರು. “ರಾಷ್ಟ್ರಪತಿ ಅವರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದೆ. ಜೂನ್‌ 9ರಂದು ಪ್ರಮಾಣವಚನ ಸ್ವೀಕರಿಸಲು ಮನವಿ ಮಾಡಲಾಗಿದೆ. ಇನ್ನುಳಿದ ಮಾಹಿತಿಯನ್ನು ರಾಷ್ಟ್ರಪತಿ ಭವನ ನೀಡಲಿದೆ. ಸಾಮಾನ್ಯ ಜನರ ಕನಸು ಪೂರ್ತಿಗೊಳಿಸಲು ನಾವು ನಿರಂತರವಾಗಿ ಕೆಲಸ ಮಾಡುತ್ತೇವೆ. ಇನ್ನಷ್ಟು ವೇಗದೊಂದಿಗೆ ಕೆಲಸ ಮುಂದುವರಿಸೋಣ. 2014 ರಲ್ಲಿ ನಾನು ಹೊಸಬನಾಗಿದ್ದೆ. ಈಗ ನನಗೆ ಅನುಭವ ಸಿಕ್ಕಿದೆ, ಹೀಗಾಗಿ ಕೂಡಲೇ ಆರಂಭಿಸಲಿದ್ದೇವೆ. ಈ ಅನುಭವ ದೇಶದ ಸೇವೆಗೆ ಸಿಗಲಿದೆ” ಎಂದು ತಿಳಿಸಿದರು.

ಸಂಸದೀಯ ಪಕ್ಷದ ಸಭೆಯಲ್ಲಿ ರಾಜನಾಥ್‌ ಸಿಂಗ್‌ ಅವರು ನರೇಂದ್ರ ಮೋದಿ ಅವರ ಹೆಸರನ್ನು ಶಾಸಕಾಂಗ ಪಕ್ಷದ ನಾಯಕ ಎಂಬುದಾಗಿ ಪ್ರಸ್ತಾಪಿಸಿದರು. ಇದಕ್ಕೆ, ಎನ್‌ಡಿಎ ಮೈತ್ರಿಕೂಟದ ಸದಸ್ಯರೆಲ್ಲರೂ ಚಪ್ಪಾಳೆ ತಟ್ಟಿ ಬೆಂಬಲ ವ್ಯಕ್ತಪಡಿಸಿದರು. ಇದಾದ ಬಳಿಕ ನಿತೀಶ್‌ ಕುಮಾರ್‌ ಅವರು ನರೇಂದ್ರ ಮೋದಿ ಅವರ ಪಾದ ಮುಟ್ಟಿ ನಮಸ್ಕರಿಸಲು ಮುಂದಾದರು. ಆಗ ಮೋದಿ ಅವರು ಅದಕ್ಕೆ ಅವಕಾಶ ಮಾಡಿಕೊಡಲಿಲ್ಲ. ನರೇಂದ್ರ ಮೋದಿ ಅವರಿಗೆ 73 ವರ್ಷ ವಯಸ್ಸಾಗಿದ್ದರೆ, ನಿತೀಶ್‌ ಕುಮಾರ್‌ ಅವರು ವಯಸ್ಸು ಕೂಡ 73 ವರ್ಷವಾಗಿದೆ. ಇಬ್ಬರೂ ಸಮಕಾಲೀನ ನಾಯಕರಾಗಿದ್ದಾರೆ.

ಸಭೆಯಲ್ಲಿ ಮಾತನಾಡಿದ ನರೇಂದ್ರ ಮೋದಿ ಅವರು ನಿತೀಶ್‌ ಕುಮಾರ್‌, ಪವನ್‌ ಕಲ್ಯಾಣ್‌ ಸೇರಿ ಹಲವರನ್ನು ಹೊಗಳಿದರು. ಯೋಗಿ ಆದಿತ್ಯನಾಥ್‌ ಅವರ ಬೆನ್ನನ್ನೂ ತಟ್ಟಿದರು. ಇದೇ ವೇಳೆ, ದಕ್ಷಿಣ ಭಾರತದ ಫಲಿತಾಂಶದ ಕುರಿತು ಕೂಡ ಮೋದಿ ಪ್ರಸ್ತಾಪಿಸಿದರು.

“ದಕ್ಷಿಣ ಭಾರತದಲ್ಲಿ ಎನ್‌ಡಿಎ ಬುನಾದಿ ಭದ್ರವಾಗಿದ್ದು, ಹೊಸ ರಾಜಕೀಯಕ್ಕೆ ಇದು ನಾಂದಿಯಾಗಿದೆ. ಕರ್ನಾಟಕ ಹಾಗೂ ತೆಲಂಗಾಣವನ್ನೇ ತೆಗೆದುಕೊಳ್ಳಿ, ಇತ್ತೀಚೆಗೆ ಬೇರೆ ಪಕ್ಷಗಳ ಸರ್ಕಾರಗಳು ಅಲ್ಲಿ ಆಡಳಿತಕ್ಕೆ ಬಂದಿವೆ. ಆದರೆ, ಜನರು ಭ್ರಮೆಯಿಂದ ಹೊರಬಂದು ಎನ್‌ಡಿಎ ಮೈತ್ರಿಕೂಟವನ್ನು ಬೆಂಬಲಿಸಿದ್ದಾರೆ. ಕರ್ನಾಟಕ ಹಾಗೂ ತೆಲಂಗಾಣದಲ್ಲಿ ಜನ ಎನ್‌ಡಿಎ ಮೈತ್ರಿಕೂಟವನ್ನು ಸ್ವೀಕರಿಸಿದ್ದಾರೆ. ಇದು ಎನ್‌ಡಿಎ ಮೇಲೆ ಜನ ಇಟ್ಟಿರುವ ವಿಶ್ವಾಸಕ್ಕೆ ಸಾಕ್ಷಿಯಾಗಿದೆ” ಎಂದು ಹೇಳಿದರು.

ಇದನ್ನೂ ಓದಿ: NDA Meeting: ಎನ್‌ಡಿಎ ಸಭೆಯಲ್ಲಿ ಮೋದಿಯ ಪಾದ ಮುಟ್ಟಿ ನಮಸ್ಕರಿಸಲು ಹೋದ ನಿತೀಶ್ ಕುಮಾರ್! ವಿಡಿಯೊ ನೋಡಿ

Continue Reading

ದೇಶ

NDA Meeting: ಎನ್‌ಡಿಎ ಸಭೆಯಲ್ಲಿ ಮೋದಿಯ ಪಾದ ಮುಟ್ಟಿ ನಮಸ್ಕರಿಸಲು ಹೋದ ನಿತೀಶ್ ಕುಮಾರ್! ವಿಡಿಯೊ ನೋಡಿ

NDA Meeting: ಬಳಿಕ ನಿತೀಶ್‌ ಕುಮಾರ್‌ ಅವರು ನರೇಂದ್ರ ಮೋದಿ ಅವರ ಪಾದ ಮುಟ್ಟಿ ನಮಸ್ಕರಿಸಲು ಮುಂದಾದರು. ಆಗ ಮೋದಿ ಅವರು ಅದಕ್ಕೆ ಅವಕಾಶ ಮಾಡಿಕೊಡಲಿಲ್ಲ. ನರೇಂದ್ರ ಮೋದಿ ಅವರಿಗೆ 73 ವರ್ಷ ವಯಸ್ಸಾಗಿದ್ದರೆ, ನಿತೀಶ್‌ ಕುಮಾರ್‌ ಅವರು ವಯಸ್ಸು ಕೂಡ 73 ವರ್ಷವಾಗಿದೆ. ಇಬ್ಬರೂ ಸಮಕಾಲೀನ ನಾಯಕರಾಗಿದ್ದಾರೆ.

VISTARANEWS.COM


on

NDA Meeting
Koo

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಎನ್‌ಡಿಎ ಮೈತ್ರಿಕೂಟವು 292 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, ಎನ್‌ಡಿಎ ಸಭೆಯಲ್ಲಿ (NDA Meeting) ನರೇಂದ್ರ ಮೋದಿ (Narendra Modi) ಅವರು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ. ಜೂನ್‌ 9ರಂದು ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇನ್ನು, ಶುಕ್ರವಾರ ನಡೆದ ಎನ್‌ಡಿಎ ಸಭೆಯಲ್ಲಿ ನಿತೀಶ್‌ ಕುಮಾರ್‌ (Nitish Kumar) ಅವರು ನರೇಂದ್ರ ಮೋದಿ ಅವರ ಪಾದ ಮುಟ್ಟಿ ನಮಸ್ಕರಿಸಲು ಮುಂದಾದರು. ಆಗ ನರೇಂದ್ರ ಮೋದಿ ಅವರು ಅವರನ್ನು ತಡೆದರು. ಈ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ.

ಸಂಸದೀಯ ಪಕ್ಷದ ಸಭೆಯಲ್ಲಿ ರಾಜನಾಥ್‌ ಸಿಂಗ್‌ ಅವರು ನರೇಂದ್ರ ಮೋದಿ ಅವರ ಹೆಸರನ್ನು ಶಾಸಕಾಂಗ ಪಕ್ಷದ ನಾಯಕ ಎಂಬುದಾಗಿ ಪ್ರಸ್ತಾಪಿಸಿದರು. ಇದಕ್ಕೆ, ಎನ್‌ಡಿಎ ಮೈತ್ರಿಕೂಟದ ಸದಸ್ಯರೆಲ್ಲರೂ ಚಪ್ಪಾಳೆ ತಟ್ಟಿ ಬೆಂಬಲ ವ್ಯಕ್ತಪಡಿಸಿದರು. ಇದಾದ ಬಳಿಕ ನಿತೀಶ್‌ ಕುಮಾರ್‌ ಅವರು ನರೇಂದ್ರ ಮೋದಿ ಅವರ ಪಾದ ಮುಟ್ಟಿ ನಮಸ್ಕರಿಸಲು ಮುಂದಾದರು. ಆಗ ಮೋದಿ ಅವರು ಅದಕ್ಕೆ ಅವಕಾಶ ಮಾಡಿಕೊಡಲಿಲ್ಲ. ನರೇಂದ್ರ ಮೋದಿ ಅವರಿಗೆ 73 ವರ್ಷ ವಯಸ್ಸಾಗಿದ್ದರೆ, ನಿತೀಶ್‌ ಕುಮಾರ್‌ ಅವರು ವಯಸ್ಸು ಕೂಡ 73 ವರ್ಷವಾಗಿದೆ. ಇಬ್ಬರೂ ಸಮಕಾಲೀನ ನಾಯಕರಾಗಿದ್ದಾರೆ.

ಸಭೆಯಲ್ಲಿ ಮಾತನಾಡಿದ ನರೇಂದ್ರ ಮೋದಿ ಅವರು ನಿತೀಶ್‌ ಕುಮಾರ್‌, ಪವನ್‌ ಕಲ್ಯಾಣ್‌ ಸೇರಿ ಹಲವರನ್ನು ಹೊಗಳಿದರು. ಯೋಗಿ ಆದಿತ್ಯನಾಥ್‌ ಅವರ ಬೆನ್ನನ್ನೂ ತಟ್ಟಿದರು. ಇದೇ ವೇಳೆ, ದಕ್ಷಿಣ ಭಾರತದ ಫಲಿತಾಂಶದ ಕುರಿತು ಕೂಡ ಮೋದಿ ಪ್ರಸ್ತಾಪಿಸಿದರು.

“ದಕ್ಷಿಣ ಭಾರತದಲ್ಲಿ ಎನ್‌ಡಿಎ ಬುನಾದಿ ಭದ್ರವಾಗಿದ್ದು, ಹೊಸ ರಾಜಕೀಯಕ್ಕೆ ಇದು ನಾಂದಿಯಾಗಿದೆ. ಕರ್ನಾಟಕ ಹಾಗೂ ತೆಲಂಗಾಣವನ್ನೇ ತೆಗೆದುಕೊಳ್ಳಿ, ಇತ್ತೀಚೆಗೆ ಬೇರೆ ಪಕ್ಷಗಳ ಸರ್ಕಾರಗಳು ಅಲ್ಲಿ ಆಡಳಿತಕ್ಕೆ ಬಂದಿವೆ. ಆದರೆ, ಜನರು ಭ್ರಮೆಯಿಂದ ಹೊರಬಂದು ಎನ್‌ಡಿಎ ಮೈತ್ರಿಕೂಟವನ್ನು ಬೆಂಬಲಿಸಿದ್ದಾರೆ. ಕರ್ನಾಟಕ ಹಾಗೂ ತೆಲಂಗಾಣದಲ್ಲಿ ಜನ ಎನ್‌ಡಿಎ ಮೈತ್ರಿಕೂಟವನ್ನು ಸ್ವೀಕರಿಸಿದ್ದಾರೆ. ಇದು ಎನ್‌ಡಿಎ ಮೇಲೆ ಜನ ಇಟ್ಟಿರುವ ವಿಶ್ವಾಸಕ್ಕೆ ಸಾಕ್ಷಿಯಾಗಿದೆ” ಎಂದು ಹೇಳಿದರು.

“ಕರ್ನಾಟಕ, ತೆಲಂಗಾಣದ ಜತೆಗೆ ತಮಿಳುನಾಡಿನ ತಂಡಕ್ಕೂ ನಾನು ಅಭಿನಂದನೆ ತಿಳಿಸುತ್ತೇನೆ. ನಾವು ಒಗ್ಗೂಡಿ ಹೋರಾಡಿದರೂ ಒಂದು ಸೀಟು ಕೂಡ ಗೆಲ್ಲಲು ಆಗಲಿಲ್ಲ. ಆದರೆ, ಎನ್‌ಡಿಎ ಮತಗಳಿಕೆಯ ಪ್ರಮಾಣವು ಜಾಸ್ತಿಯಾಗಿದೆ. ಇದರಿಂದ ಸ್ಪಷ್ಟ ಸಂದೇಶ ರವಾನೆಯಾದಂತಾಗಿದೆ. ಮುಂದಿನ ದಿನಗಳಲ್ಲಿ ತಮಿಳುನಾಡಿನಲ್ಲಿ ಎನ್‌ಡಿಎಗೆ ಜನಬೆಂಬಲ ಸಿಗುತ್ತದೆ ಎಂಬುದಕ್ಕೆ ಇದು ಸಂಕೇತವಾಗಿದೆ. ಕೇರಳದಲ್ಲಿ ನಮ್ಮ ನೂರಾರು ಕಾರ್ಯಕರ್ತರು ತ್ಯಾಗ, ಬಲಿದಾನ ಮಾಡಿದರು. ಇದೇ ಮೊದಲ ಬಾರಿಗೆ ಕೇರಳದಲ್ಲಿ ಎನ್‌ಡಿಎ ಖಾತೆ ತೆರೆದಿದೆ” ಎಂದು ತಿಳಿಸಿದರು.

ಇದನ್ನೂ ಓದಿ: Narendra Modi: ಕರ್ನಾಟಕದಲ್ಲಿ ಬಿಜೆಪಿ ಗೆಲುವಿನ ಬಗ್ಗೆ ನರೇಂದ್ರ ಮೋದಿ ಹೇಳಿದ್ದೇನು?

Continue Reading
Advertisement
Shreyas Iyer
ಕ್ರೀಡೆ6 mins ago

Shreyas Iyer : ಬಿಸಿಸಿಐ ಕೇಂದ್ರ ಗುತ್ತಿಗೆ ತಪ್ಪಿದ ಕುರಿತು ಮಾತನಾಡಿದ ಶ್ರೇಯಸ್ ಅಯ್ಯರ್​; ಏನಂದ್ರು ಅವರು?

assault case
ಕ್ರೈಂ14 mins ago

Assault Case: ಹರಿಹರದಲ್ಲಿ ನೈತಿಕ ಪೊಲೀಸ್ ಗಿರಿ; ಯುವಕನನ್ನು ರೂಮ್‌ನಲ್ಲಿ ಹಾಕಿ ಮನಸೋ ಇಚ್ಛೆ ಹಲ್ಲೆ

Narendra Modi
ದೇಶ47 mins ago

Narendra Modi: ಭಾನುವಾರ ಸಂಜೆ 7.15ಕ್ಕೆ ಮೋದಿ ಪ್ರಮಾಣವಚನ‌; ಹಲವು ಸಂಸದರಿಗೂ ಮಂತ್ರಿ ಭಾಗ್ಯ!

Niveditha Gowda
ಸಿನಿಮಾ53 mins ago

Niveditha Gowda : ಇನ್​ಸ್ಟಾಗ್ರಾಮ್​ನಲ್ಲಿ ಚಂದನ್ ಶೆಟ್ಟಿ ಅನ್​ಫಾಲೋ ಮಾಡಿದ ನಿವೇದಿತ ಗೌಡ

UG Neet 2024
ಕರ್ನಾಟಕ56 mins ago

NEET UG 2024: ಯುಜಿ ನೀಟ್: ರೋಲ್ ನಂಬರ್ ದಾಖಲಿಸಲು ಸದ್ಯದಲ್ಲೇ ಅವಕಾಶ

Niveditha Gowda
ಪ್ರಮುಖ ಸುದ್ದಿ1 hour ago

Niveditha Gowda : ಡಿವೋರ್ಸ್​ ಬಗ್ಗೆ ಅಧಿಕೃತ ಮಾಹಿತಿ ಹಂಚಿಕೊಂಡ ನಿವೇದಿತಾ ಗೌಡ, ಅವರ ಇನ್​ಸ್ಟಾಗ್ರಾಮ್ ಸಂದೇಶ ಇಲ್ಲಿದೆ

Hamare Baarah
ಸಿನಿಮಾ2 hours ago

Hamare Baarah: ಮುಸ್ಲಿಂ ಮಹಿಳೆಯರ ಕುರಿತ ಹಮಾರೆ ಬಾರಾ ಸಿನಿಮಾ ರಿಲೀಸ್‌ಗೆ ಕೋರ್ಟ್‌ ಗ್ರೀನ್‌ ಸಿಗ್ನಲ್!

Job News
ಕರ್ನಾಟಕ2 hours ago

Job News: ನಿಗಮ-ಮಂಡಳಿ ನೇಮಕಾತಿ; 684 ಹುದ್ದೆವಾರು ಪರಿಷ್ಕೃತ ಅಂಕಪಟ್ಟಿ ಪ್ರಕಟ

T20 World Cup
ಪ್ರಮುಖ ಸುದ್ದಿ2 hours ago

T20 World Cup : ಭಾರತ ತಂಡಕ್ಕೆ ಎಚ್ಚರಿಕೆ ನೀಡಿದ ಅಮೆರಿಕ ತಂಡ

All achievements in life are easy if there is Guru's grace says Sri Satyatmatirtha Swamiji
ಮೈಸೂರು2 hours ago

Mysore News: ಗುರುಗಳ ಅನುಗ್ರಹವಿದ್ದರೆ ಜೀವನದಲ್ಲಿ ಎಲ್ಲ ಸಾಧನೆಗಳು ಸುಲಭ; ಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ3 hours ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ5 hours ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ4 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ4 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ4 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ5 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು6 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌