ಪ್ರಜ್ವಲ್‌ ರೇವಣ್ಣ ವಿಡಿಯೊಗಳ ಕುರಿತು ಕೆಲ ತಿಂಗಳ ಮೊದಲೇ ಎಚ್ಚರಿಸಿದ್ದ ಬಿಜೆಪಿ ನಾಯಕ! ಯಾರವರು? - Vistara News

ಕರ್ನಾಟಕ

ಪ್ರಜ್ವಲ್‌ ರೇವಣ್ಣ ವಿಡಿಯೊಗಳ ಕುರಿತು ಕೆಲ ತಿಂಗಳ ಮೊದಲೇ ಎಚ್ಚರಿಸಿದ್ದ ಬಿಜೆಪಿ ನಾಯಕ! ಯಾರವರು?

ಹಾಸನ ಜಿಲ್ಲೆಯ ಬಿಜೆಪಿ ಮುಖಂಡ, 2023ರ ವಿಧಾನಸಭೆ ಚುನಾವಣೆಯಲ್ಲಿ ಹೊಳೆನರಸೀಪುರ ಬಿಜೆಪಿ ಅಭ್ಯರ್ಥಿಯಾಗಿದ್ದ ಜಿ. ದೇವರಾಜೇಗೌಡ ಅವರು 2023ರ ಡಿಸೆಂಬರ್‌ 8ರಂದೇ ಬಿಜೆಪಿ ನಾಯಕರಿಗೆ ಪತ್ರ ಬರೆದು, ಪ್ರಜ್ವಲ್‌ ರೇವಣ್ಣ ವಿಡಿಯೊಗಳ ಕುರಿತು ಪ್ರಸ್ತಾಪಿಸಿದ್ದರು. ಇದು ಪಕ್ಷಕ್ಕೆ ಮುಜುಗರ ತರುತ್ತದೆ ಎಂದು ಕೂಡ ಎಚ್ಚರಿಸಿದ್ದರು. ಅದರಂತೆ ಈಗ, ಜೆಡಿಎಸ್‌ ಹಾಗೂ ಬಿಜೆಪಿಯು ಪ್ರಕರಣದಲ್ಲಿ ಮುಜುಗರಕ್ಕೀಡಾಗಿದೆ.

VISTARANEWS.COM


on

Prajwal Revanna Case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna) ಅವರು ಲೈಂಗಿಕ ದೌರ್ಜನ್ಯ ಎಸಗಿರುವ, ಅಶ್ಲೀಲ ವಿಡಿಯೊಗಳ ವೈರಲ್‌ ಆಗಿರುವ ಪ್ರಕರಣವು ಕರ್ನಾಟಕ ಮಾತ್ರವಲ್ಲ ದೇಶಾದ್ಯಂತ ಸುದ್ದಿಯಾಗಿದೆ. ಲೈಂಗಿಕ ದೌರ್ಜನ್ಯ ಮಾಡಿದ್ದಾರೆ ಎಂದು ಆರೋಪಿಸಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಮಹಿಳೆಯೊಬ್ಬರು ನೀಡಿದ ದೂರಿನ ಅನ್ವಯ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ (Hassan Pen Drive Case) ದಾಖಲಾಗಿದ್ದು, ಜೆಡಿಎಸ್‌ ಜತೆಗೆ ಮೈತ್ರಿ ಪಕ್ಷವಾದ ಬಿಜೆಪಿಗೂ ಇದು ಮುಜುಗರ ಉಂಟು ಮಾಡಿದೆ. ಇದರ ಬೆನ್ನಲ್ಲೇ, ಪ್ರಜ್ವಲ್‌ ರೇವಣ್ಣ ವಿಡಿಯೊಗಳ ಕುರಿತು ಬಿಜೆಪಿ ನಾಯಕರೊಬ್ಬರು ಕೆಲ ತಿಂಗಳ ಹಿಂದೆಯೇ ಎಚ್ಚರಿಸಿದ್ದರು. ಆದರೂ, ಪ್ರಜ್ವಲ್‌ ರೇವಣ್ಣಗೇ ಟಿಕೆಟ್‌ ಸಿಕ್ಕಿತು ಎಂಬ ವಿಷಯವೀಗ ಬಹಿರಂಗವಾಗಿದೆ.

ಹೌದು, ಹಾಸನ ಜಿಲ್ಲೆಯ ಬಿಜೆಪಿ ಮುಖಂಡ, 2023ರ ವಿಧಾನಸಭೆ ಚುನಾವಣೆಯಲ್ಲಿ ಹೊಳೆನರಸೀಪುರ ಬಿಜೆಪಿ ಅಭ್ಯರ್ಥಿಯಾಗಿದ್ದ ಜಿ. ದೇವರಾಜೇಗೌಡ ಅವರು 2023ರ ಡಿಸೆಂಬರ್‌ 8ರಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಪತ್ರ ಬರೆದಿದ್ದರು. ಪ್ರಜ್ವಲ್‌ ರೇವಣ್ಣ ಅವರು ಲೈಂಗಿಕ ದೌರ್ಜನ್ಯ ಎಸಗಿರುವ ವಿಡಿಯೊಗಳು ಇವೆ. ಅವರಿಗೆ ಟಿಕೆಟ್‌ ನೀಡುವುದು ಒಳ್ಳೆಯದಲ್ಲ ಎಂಬುದಾಗಿ ಅವರು ಪತ್ರದಲ್ಲಿ ಉಲ್ಲೇಖಿಸಿದ್ದರು. ಅಷ್ಟೇ ಅಲ್ಲ, ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್‌ ಅವರಿಗೂ ದೇವರಾಜೇಗೌಡ ಅವರು ಪತ್ರ ಬರೆದಿದ್ದರು. ಇಷ್ಟಾದರೂ, ಮೈತ್ರಿ ಅಭ್ಯರ್ಥಿಯಾಗಿ ಪ್ರಜ್ವಲ್‌ ರೇವಣ್ಣ ಕಣಕ್ಕಿಳಿದರು. ಈಗ ಇದು ಜೆಡಿಎಸ್‌ ಹಾಗೂ ಬಿಜೆಪಿಗೆ ಮುಜುಗರ ಉಂಟುಮಾಡಿದೆ.

Prajwal Revanna Hassan Pen Drive Case What will SIT probe look like

ಪತ್ರದಲ್ಲಿ ಏನಿತ್ತು?

“ಪ್ರಜ್ವಲ್‌ ರೇವಣ್ಣ ಸೇರಿ ಎಚ್‌.ಡಿ.ದೇವೇಗೌಡ ಕುಟುಂಬದ ಹಲವರ ವಿರುದ್ಧ ಹತ್ತಾರು ಆರೋಪಗಳಿವೆ. ಪ್ರಜ್ವಲ್‌ ರೇವಣ್ಣ ಅವರ 2,976 ಅಶ್ಲೀಲ ವಿಡಿಯೊಗಳು ಇರುವ ಪೆನ್‌ಡ್ರೈವ್‌ ನನಗೆ ಸಿಕ್ಕಿದೆ. ಅವರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪಗಳು, ಅದಕ್ಕೆ ಸಾಕ್ಷ್ಯಗಳು ಇವೆ. ಹಾಗಾಗಿ, ಹಾಸನದಲ್ಲಿ ಪ್ರಜ್ವಲ್‌ ರೇವಣ್ಣ ಅವರು ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದರೆ ಬಿಜೆಪಿಗೆ ಮುಜುಗರ ಉಂಟಾಗುತ್ತದೆ. ಅವರ ವಿಡಿಯೊಗಳೇ ಮುಂದೆ ನಮ್ಮ ವಿರುದ್ಧ ಬ್ರಹ್ಮಾಸ್ತ್ರವನ್ನಾಗಿ ಬಳಸಲಾಗುತ್ತದೆ. ಹಾಗಾಗಿ, ಟಿಕೆಟ್‌ ಘೋಷಣೆ ಮಾಡುವ ಮುನ್ನ ಯೋಚನೆ ಮಾಡುವುದು ಒಳಿತು” ಎಂಬುದಾಗಿ ಡಿ. ದೇವರಾಜೇಗೌಡ ಪತ್ರದ ಮೂಲಕ ಎಚ್ಚರಿಸಿದ್ದರು ಎಂದು ತಿಳಿದುಬಂದಿದೆ.

ಆರೋಪ ಸಾಬೀತಾದರೆ ಏನು ಶಿಕ್ಷೆ?

ಐಪಿಸಿ ಸೆಕ್ಷನ್ 354A, 354D, 506, 509 ಅಡಿ ಕೇಸ್‌ ದಾಖಲಾಗಿದ್ದು, ಆರೋಪ ಸಾಬೀತಾದರೆ ಏನೆಲ್ಲಾ ಶಿಕ್ಷೆ ಆಗುತ್ತದೆ ಎಂಬ ಚರ್ಚೆಗಳು ನಡೆಯುತ್ತಿವೆ. ಮಹಿಳೆಯ ಜತೆ ಲೈಂಗಿಕ ಸಂಪರ್ಕ ಬೆಳೆಸುವುದು, ಲೈಂಗಿಕ‌ ಅನುಕೂಲಕ್ಕಾಗಿ ಬೇಡಿಕೆ ಇಡುವುದು. ಮಹಿಳೆಗೆ ಇಚ್ಛೆಗೆ ವಿರುದ್ಧವಾಗಿ ಅಶ್ಲೀಲತೆ ತೋರಿಕೆ ಮಾಡಿದವರ ವಿರುದ್ಧ ಐಪಿಸಿ ಸೆಕ್ಷನ್ 354A ಅಡಿ ಸೆಕ್ಷನ್ ದಾಖಲು ಮಾಡಲಾಗುತ್ತದೆ. ಈ ಸೆಕ್ಷನ್ ಅಡಿ ಆರೋಪಿತ ವ್ಯಕ್ತಿಗೆ ಒಂದು ವರ್ಷ ಜೈಲು ಅಥವಾ ದಂಡ ವಿಧಿಸಲಾಗುತ್ತದೆ.

ಐಪಿಸಿ ಸೆಕ್ಷನ್ 354D– ಪದೇ ಪದೇ ಮಹಿಳೆಯರ ಸಂಪರ್ಕ ಬೆಳೆಸಲು ಪ್ರಯತ್ನ, ಇಂಟರ್ನೆಟ್ ಅಥವಾ ಇಮೇಲ್ ಅಥವಾ ವಿಡಿಯೊ ಕಾಲ್ ಸಂವಹನ ಮಾಡಿದರೆ ಈ ಸೆಕ್ಷನ್ ಅಡಿ ಪ್ರಕರಣ ದಾಖಲಾಗುತ್ತದೆ. ಇದಕ್ಕೆ ದಂಡ ಅಥವಾ ಮೂರು ವರ್ಷ ಜೈಲು ವಿಧಿಸುವ ಸಾಧ್ಯತೆ.

ಐಪಿಸಿ ಸೆಕ್ಷನ್ 509: ಮಹಿಳೆಯ ನಮ್ರತೆಯನ್ನು ಅವಮಾನಿಸುವ ಉದ್ದೇಶದಿಂದ ಪದ, ಸನ್ನೆ ಅಥವಾ ಕ್ರಿಯೆ.ಈ ಸೆಕ್ಷನ್ ಅಡಿ 3ವರ್ಷ ಸರಳ ಜೈಲು ಅಥವಾ ದಂಡ ವಿಧಿಸುವ ಸಾಧ್ಯತೆ ಇದೆ. ಸದ್ಯ ಈ ಎಲ್ಲಾ ಸೆಕ್ಷನ್‌ಗಳ ಅಡಿ ಸಂಸದ ಪ್ರಜ್ವಲ್‌ ವಿರುದ್ಧ ಎಫ್ಐಆರ್ ದಾಖಲಾಗಿದೆ. ಹೀಗಾಗಿ ಪ್ರಕರಣದ ಬಗ್ಗೆ ಎಸ್‌ಐಟಿ ಅಧಿಕಾರಿಗಳು ಎಲ್ಲಾ ಮಾಹಿತಿ ಪಡೆಯುತ್ತಿದ್ದಾರೆ.

ಇದನ್ನೂ ಓದಿ: Hassan Pen Drive Case: ಪ್ರಜ್ವಲ್‌ ರೇವಣ್ಣ ಕೇಸ್‌; ಎಸ್‌ಐಟಿ ತನಿಖೆ ಹೇಗಿರುತ್ತೆ? ತಪ್ಪಿಸಿಕೊಳ್ಳೋಕೆ ಇರೋ ಚಾನ್ಸ್‌ ಏನು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

ಬೈಕ್‌ ಮರೆತು ಬಂದಿದ್ದನ್ನು ಪ್ರಶ್ನಿಸಿದ ಮಗನನ್ನೇ ಕೊಂದ ತಂದೆ; ಕುಡಿದ ಮತ್ತಲ್ಲಿ ನಡೆಯಿತು ದುರಂತ!

ಬೆಂಗಳೂರಿನ ಅನ್ನಪೂರ್ಣೇಶ್ವರಿ ಪೊಲೀಸ್‌ ಠಾಣಾ ವ್ಯಾಪ್ತಿಯ ಮುದ್ದಿನಪಾಳ್ಯದಲ್ಲಿ ಬೈಕ್‌ ವಿಚಾರವಾಗಿ ತಂದೆ ಹಾಗೂ ಮಗನ ಮಧ್ಯೆ ಜಗಳ ನಡೆದಿದೆ. ಬೈಕ್‌ನಲ್ಲಿ ಹೊರಗಡೆ ಹೋದ ತಂದೆಯು ವಾಪಸ್‌ ಬರುವಾಗ ಬೈಕ್‌ ತರದಿದ್ದಕ್ಕೆ ಮಗ ಪ್ರಶ್ನಿಸಿದ್ದಾನೆ. ಆಗ ಇಬ್ಬರ ಮಧ್ಯೆ ಜಗಳ ನಡೆದಿದ್ದು, ಸಿಟ್ಟಿನಲ್ಲಿ ತಂದೆಯು ಮಗನಿಗೆ ಚಾಕು ಇರಿದಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಮಗ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

VISTARANEWS.COM


on

Bengaluru Crime News
Koo

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೈಕ್‌ ವಿಚಾರವಾಗಿ ತಂದೆಯೊಬ್ಬ ಮಗನನ್ನೇ ಕೊಲೆ ಮಾಡಿದ್ದಾನೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್‌ ಠಾಣೆ ವ್ಯಾಪ್ತಿಯ ಮುದ್ದಿನಪಾಳ್ಯದಲ್ಲಿ ಸೋಮವಾರ (ಜೂನ್‌ 10) ಘಟನೆ ನಡೆದಿದೆ. ಬೈಕ್‌ ತೆಗೆದುಕೊಂಡು ಹೊರಗೆ ಹೋದ ತಂದೆ, ಬೈಕ್‌ನ ಕೀ ಕಳೆದುಕೊಂಡು, ಅದನ್ನು ಮನೆಗೆ ತೆಗೆದುಕೊಂಡು ಹೋಗದೆ, ಬರಿಗೈಯಲ್ಲಿ ಮನೆಗೆ ತೆರಳಿದ್ದಾನೆ. ಇದೇ ವಿಚಾರವಾಗಿ ಮಗ ಹಾಗೂ ತಂದೆ ಮಧ್ಯೆ ಜಗಳ ನಡೆದಿದ್ದು, ಅದು ಕೊಲೆಯಲ್ಲಿ ಅಂತ್ಯವಾಗಿದೆ.

ಅಂಜನ್‌ ಕುಮಾರ್‌ (27) ಹತ್ಯೆಗೀಡಾದ ಯುವಕ. ಕೊಲೆ ಆರೋಪಿ ವೆಂಕಟೇಶ್‌ (57) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಭಾನುವಾರ (ಜೂನ್‌ 9) ಸಂಜೆ ವೆಂಕಟೇಶ್‌ ಬೈಕ್‌ ತೆಗೆದುಕೊಂಡು ಹೋಗಿದ್ದರು. ಸಂಜೆ ಹೊರಗೆ ಹೋಗಿ ಮದ್ಯಪಾನ ಮಾಡಿದ್ದ ಅವರು ಅದೇ ನಶೆಯಲ್ಲಿ ಬೈಕ್‌ ಕೀ ಕಳೆದುಕೊಂಡಿದ್ದರು. ಇದೇ ಕಾರಣಕ್ಕಾಗಿ ಬೈಕ್‌ ಬಿಟ್ಟು ಮನೆಗೆ ತೆರಳಿದ್ದರು. ಸೋಮವಾರ ಬೆಳಗ್ಗೆ ಮಗ ಅಂಜನ್‌ ಬೈಕ್‌ ಎಲ್ಲಿ ಎಂದು ಪ್ರಶ್ನಿಸಿದ್ದ. ಆಗ ಇಬ್ಬರ ಮಧ್ಯೆ ಜಗಳ ನಡೆದಿದೆ.

ವೆಂಕಟೇಶ್‌ ಅವರಿಗೆ ಪುತ್ರಿಯೂ ಇದ್ದು, ಆಕೆಗಾಗಿ ಸ್ಕೂಟಿ ಕೊಡಿಸಿದ್ದರು. ರಿಯಲ್‌ ಎಸ್ಟೇಟ್‌ ಉದ್ಯಮಿಯಾಗಿರುವ ವೆಂಕಟೇಶ್‌, ಮಗಳಿಗಾಗಿ ಖರೀದಿಸಿದ ಸ್ಕೂಟಿಯನ್ನು ಮರೆತುಬಂದಿದ್ದರು. ಇದನ್ನು ಅಂಜನ್‌ ಪ್ರಶ್ನಿಸಿದಾಗ ಇಬ್ಬರ ಮಧ್ಯೆ ಜಗಳ ನಡೆದಿದೆ. ಸಿಟ್ಟಿನಲ್ಲಿ ತಂದೆ ಎಂಬುದನ್ನೂ ನೋಡದ ಅಂಜನ್‌ ಹೆಲ್ಮೆಟ್‌ನಿಂದ ಹಲ್ಲೆ ಮಾಡಿದ್ದರು. ಇದರಿಂದ ಕುಪಿತಗೊಂಡ ವೆಂಕಟೇಶ್‌, ಅಡುಗೆ ಮನೆಯಿಂದ ಚಾಕು ತಂದು ಅಂಜನ್‌ಗೆ ಇರಿದಿದ್ದಾರೆ.

ಅಂಜನ್‌ನ ಎಡಭಾಗಕ್ಕೆ ಚಾಕು ಇರಿದ ಕಾರಣ ತೀವ್ರ ರಕ್ತಸ್ರಾವದಿಂದ ಆತ ಮೃತಪಟ್ಟಿದ್ದಾನೆ. ಅನ್ನಪೂರ್ಣೇಶ್ವರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿ ವೆಂಕಟೇಶ್‌ನನ್ನು ಬಂಧಿಸಿದ್ದಾರೆ. ಬೈಕ್‌ ವಿಚಾರವಾಗಿ ಆರಂಭದಲ್ಲಿ ವಾಗ್ವಾದ ನಡೆದಿದೆ. ವಾಗ್ವಾದವು ಜಗಳಕ್ಕೆ ತಿರುಗಿದ್ದು, ಮೊದಲು ಅಂಜನ್‌ ಹಲ್ಲೆ ನಡೆಸಿದ್ದಾನೆ. ಇದಾದ ಬಳಿಕ ವೆಂಕಟೇಶ್‌ ಚಾಕು ಇರಿದಿದ್ದಾನೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Murder Case : ಮೈಸೂರಿನಲ್ಲಿ ಅನ್ನದಾನೇಶ್ವರ ಮಠದ ಹಿರಿಯ ಸ್ವಾಮೀಜಿಯ ಬರ್ಬರ ಕೊಲೆ

Continue Reading

ಕರ್ನಾಟಕ

Shakti Scheme: ಉಚಿತ ಪ್ರಯಾಣದ ಶಕ್ತಿ ಯೋಜನೆಗೆ 1 ವರ್ಷ; ಖರ್ಚಾಗಿದ್ದೆಷ್ಟು? ಉಪಯೋಗ ಪಡೆದವರೆಷ್ಟು?

Shakti Scheme: ಹೆಣ್ಣುಮಕ್ಕಳು ಸಾರಿಗೆ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾದ ಶಕ್ತಿ ಯೋಜನೆಗೆ ಸೋಮವಾರ ಒಂದು ವರ್ಷ ತುಂಬಿದೆ. ಯೋಜನೆ ಜಾರಿ ಆರಂಭದಲ್ಲಿ ಸಂಚಲನ ಮೂಡಿಸಿದ, ಗೊಂದಲ, ಗಲಾಟೆಗಳಿಗೂ ಕಾರಣವಾದ ಯೋಜನೆ ಈಗ ಯಶಸ್ವಿಯಾಗಿದೆ. ಇದರಿಂದ ಕೋಟ್ಯಂತರ ಹೆಣ್ಣುಮಕ್ಕಳು ಲಾಭವನ್ನೂ ಪಡೆದಿದ್ದಾರೆ.

VISTARANEWS.COM


on

Shakti Scheme
Koo

ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರವು ಹೆಣ್ಣುಮಕ್ಕಳ ಅನುಕೂಲಕ್ಕಾಗಿ ಜಾರಿಗೆ ತಂದ ಶಕ್ತಿ ಯೋಜನೆ ಜಾರಿಯಾಗಿ ಸೋಮವಾರಕ್ಕೆ (ಜೂನ್‌ 11) ಒಂದು ವರ್ಷ ತುಂಬಿದೆ. ಹೆಣ್ಣುಮಕ್ಕಳು ರಾಜ್ಯದ ಸಾರಿಗೆ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದಾದ, ರಾಜ್ಯ ಸರ್ಕಾರದ ಐದು ಜನಪ್ರಿಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ಜಾರಿಯಿಂದ ಜೂನ್‌ 9ರವರೆಗೆ 225 ಕೋಟಿ ಬಾರಿ ಮಹಿಳೆಯರು ಸಾರಿಗೆ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಿದ್ದಾರೆ.

2023ರ ಜೂನ್‌ 11ರಂದು ರಾಜ್ಯ ಸರ್ಕಾರವು ಶಕ್ತಿ ಯೋಜನೆಯನ್ನು ಜಾರಿಗೆ ತಂದಿದೆ. ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳಾದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಕೆಕೆಆರ್‌ಟಿಸಿ ಹಾಗೂ ಎನ್‌ಡಬ್ಲ್ಯೂಕೆಆರ್‌ಟಿಸಿ ಬಸ್‌ಗಳಲ್ಲಿ ಜೂನ್‌ 9ರವರೆಗೆ 225.15 ಕೋಟಿ ಬಾರಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. ಶಕ್ತಿ ಯೋಜನೆಯ ಅನುಷ್ಠಾನಕ್ಕಾಗಿ ರಾಜ್ಯ ಸರ್ಕಾರವು ಜೂನ್‌ 9ರವರೆಗೆ 5,481.40 ಕೋಟಿ ರೂಪಾಯಿಯನ್ನು ನಾಲ್ಕೂ ನಿಗಮಗಳಿಗೆ ವಿನಿಯೋಗ ಮಾಡಿದೆ.

Shakti scheme and CM Siddaramaiah

2023ರ ವಿಧಾನಸಭೆ ಚುನಾವಣೆಗೂ ಮುನ್ನ ಐದು ಗ್ಯಾರಂಟಿ ಯೋಜನೆಗಳನ್ನು ಕರ್ನಾಟಕ ಕಾಂಗ್ರೆಸ್‌ ಘೋಷಣೆ ಮಾಡಿತ್ತು. ಚುನಾವಣೆ ವೇಳೆ ಗ್ಯಾರಂಟಿ ಯೋಜನೆಗಳ ಕುರಿತು ಅಬ್ಬರದ ಪ್ರಚಾರ ಕೈಗೊಂಡಿತ್ತು. ಐದು ಯೋಜನೆಗಳಲ್ಲಿ ಮಹಿಳೆಯರು ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾದ ಶಕ್ತಿ ಯೋಜನೆಯೂ ಒಂದಾಗಿತ್ತು. ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುತ್ತಲೇ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿತು. ಅದರಂತೆ, ಶಕ್ತಿ ಯೋಜನೆಯು ಒಂದು ವರ್ಷವನ್ನು ಯಶಸ್ವಿಯಾಗಿ ಪೂರೈಸಿದೆ. ಇದರಿಂದ ಕೋಟ್ಯಂತರ ಮಹಿಳೆಯರು ಲಾಭ ಪಡೆದಿದ್ದಾರೆ.

ಶಕ್ತಿ ಯೋಜನೆಗೆ ಆರಂಭದಲ್ಲಿ ಭಾರಿ ವಿರೋಧ ವ್ಯಕ್ತವಾಗಿತ್ತು. ಇನ್ನು ಬಸ್‌ಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಹೆಣ್ಣುಮಕ್ಕಳು ಓಡಾಟ ಆರಂಭಿಸಿದ ಕಾರಣ ಬಸ್‌ನಲ್ಲಿ ಕಂಡಕ್ಟರ್‌ ಜತೆ ಜಗಳ, ಪ್ರಯಾಣಿಕರೇ ಬಡಿದಾಡಿಕೊಂಡ ಪ್ರಕರಣಗಳು ಸುದ್ದಿಯಾಗಿದ್ದವು. ಇದಾದ ಬಳಿಕ ಪರಿಸ್ಥಿತಿಯು ನಿಯಂತ್ರಣಕ್ಕೆ ಬಂದಿದೆ. ಶಕ್ತಿ ಯೋಜನೆ ಜಾರಿಗೂ ಮೊದಲು ಕರ್ನಾಟಕದ ಸಾರಿಗೆ ಬಸ್‌ಗಳಲ್ಲಿ ನಿತ್ಯ 84.5 ಲಕ್ಷ ಜನ ಪ್ರಯಾಣಿಸುತ್ತಿದ್ದರು. ಆದರೆ, ಯೋಜನೆ ಜಾರಿ ಬಳಿಕ ನಿತ್ಯ ಬಸ್‌ಗಳಲ್ಲಿ ಪ್ರಯಾಣಿಸುವವರ ಸಂಖ್ಯೆ 1.06 ಕೋಟಿಗೆ ಏರಿಕೆಯಾಗಿದೆ. ಇದರಿಂದ ಸಾರಿಗೆ ನಿಗಮಗಳಿಗೂ ಲಾಭವಾಗಿದೆ.

ಇದನ್ನೂ ಓದಿ: Congress Guarantee: ಗ್ಯಾರಂಟಿ ನಿಲ್ಲಿಸುವ ಮಾತು ಬೇಡ: ಕೈ ನಾಯಕರಿಗೆ ಎಚ್.ಎಂ ರೇವಣ್ಣ ಎಚ್ಚರಿಕೆ

Continue Reading

ಕರ್ನಾಟಕ

Tax Devolution: ರಾಜ್ಯಗಳಿಗೆ 1.39 ಲಕ್ಷ ಕೋಟಿ ರೂ. ಹಂಚಿದ ಮೋದಿ ಸರ್ಕಾರ; ಕರ್ನಾಟಕಕ್ಕೆ ಸಿಕ್ಕಿದ್ದೆಷ್ಟು?

Tax Devolution: ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಪದಗ್ರಹಣ ಮಾಡಿದ ಬೆನ್ನಲ್ಲೇ ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ ಕೇಂದ್ರ ಸರ್ಕಾರವು ಜೂನ್‌ ತಿಂಗಳ ತೆರಿಗೆ ಹಂಚಿಕೆ ಮಾಡಿದೆ. ಕೇಂದ್ರ ಹಣಕಾಸು ಸಚಿವಾಲಯವು 1.39 ಲಕ್ಷ ಕೋಟಿ ರೂಪಾಯಿಯನ್ನು ಹಂಚಿಕೆ ಮಾಡಿದೆ. ಕರ್ನಾಟಕ ಸೇರಿ ಯಾವ ರಾಜ್ಯಗಳಿಗೆ ಎಷ್ಟು ಮೊತ್ತ ಸಿಕ್ಕಿದೆ ಎಂಬುದರ ಮಾಹಿತಿ ಇಲ್ಲಿದೆ.

VISTARANEWS.COM


on

Tax Devolution
Koo

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ (NDA) ಮೈತ್ರಿಕೂಟವು ಬಹುಮತ ಸಾಧಿಸಿದ ನರೇಂದ್ರ ಮೋದಿ (Narendra Modi) ಅವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಇದರ ಬೆನ್ನಲ್ಲೇ, ರೈತರಿಗೆ ಕಿಸಾನ್‌ ಸಮ್ಮಾನ್‌ ಯೊಜನೆಯ ನಿಧಿ ಬಿಡುಗಡೆ, 3 ಕೋಟಿ ಮನೆಗಳ ನಿರ್ಮಾಣಕ್ಕೆ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ. ಇದರ ಜತೆಗೆ, ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ ಜೂನ್‌ ತಿಂಗಳ ತೆರಿಗೆ ಹಂಚಿಕೆ (Tax Devolution) ಮಾಡಲಾಗಿದೆ. ಕೇಂದ್ರ ಹಣಕಾಸು ಸಚಿವಾಲಯವು 1.39 ಲಕ್ಷ ಕೋಟಿ ರೂಪಾಯಿಯನ್ನು ಹಂಚಿಕೆ ಮಾಡಿದೆ.

ರಾಜ್ಯಗಳ ಆರ್ಥಿಕ ಏಳಿಗೆ, ಪ್ರಗತಿಯ ದೃಷ್ಟಿಯಿಂದಾಗಿ ಕೇಂದ್ರ ಸರ್ಕಾರವು ತೆರಿಗೆ ಹಂಚಿಕೆ ಮಾಡಿದೆ. ಹಣಕಾಸು ಸಚಿವಾಲಯದ ಉನ್ನತ ಸಭೆಯಲ್ಲಿ ಈ ಕುರಿತು ತೀರ್ಮಾನ ತೆಗೆದುಕೊಳ್ಳಲಾಗಿದೆ. ಅದರಂತೆ, ಕರ್ನಾಟಕಕ್ಕೆ 5,096 ಕೋಟಿ ರೂ. ತೆರಿಗೆ ಹಂಚಿಕೆ ಲಭಿಸಿದೆ. ಹಾಗೆಯೇ, ಕೇಂದ್ರ ಸರ್ಕಾರವು ಮಧ್ಯಪ್ರದೇಶಕ್ಕೆ 10,970 ಕೋಟಿ ರೂ., ಬಿಹಾರ 14,056 ಕೋಟಿ ರೂ., ಆಂಧ್ರಪ್ರದೇಶ 5,655 ಕೋಟಿ ರೂ., ಗೋವಾಗೆ 539 ಕೋಟಿ ರೂ., ತೆಲಂಗಾಣ 2,937 ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡಲಾಗಿದೆ.

ದೇಶದ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಬಡವರಿಗೆ 3 ಕೋಟಿ ಮನೆಗಳನ್ನು ನಿರ್ಮಿಸಿಕೊಡುವ ಮಹತ್ವದ ತೀರ್ಮಾನವನ್ನು ಮೊದಲ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ. ಪ್ರಧಾನಮಂತ್ರಿ ಆವಾಸ್‌ ಯೋಜನೆ ಅಡಿಯಲ್ಲಿ 3 ಕೋಟಿ ಮನೆಗಳ ನಿರ್ಮಾಣಕ್ಕೆ ತೀರ್ಮಾನಿಸಲಾಗಿದೆ. ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಬಡವರು ಸ್ವಂತ ಮನೆ ಕನಸನ್ನು ನನಸು ಮಾಡುವ ದಿಸೆಯಲ್ಲಿ ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಆವಾಸ್‌ ಯೋಜನೆ ಜಾರಿಗೆ ತಂದಿದೆ. ಯೋಜನೆ ಅಡಿಯಲ್ಲಿ ಫಲಾನುಭವಿಗಳು ಬಯಲು ಪ್ರದೇಶದಲ್ಲಿ ಮನೆ ನಿರ್ಮಿಸಿಕೊಳ್ಳಲು 1.20 ಲಕ್ಷ ರೂ. ನೀಡಲಾಗುತ್ತದೆ. ಇನ್ನು ಗುಡ್ಡಗಾಡು ಪ್ರದೇಶದಲ್ಲಿ ಮನೆ ನಿರ್ಮಿಸಿಕೊಳ್ಳಲು 1.30 ಲಕ್ಷ ರೂ. ಸಹಾಯಧನ ನೀಡಲಾಗುತ್ತದೆ. ಕಳೆದ 10 ವರ್ಷಗಳಲ್ಲಿ ಕೇಂದ್ರ ಸರ್ಕಾರವು ಸುಮಾರು 4.21 ಕೋಟಿ ಮನೆಗಳನ್ನು ನಿರ್ಮಿಸಿಕೊಟ್ಟಿದೆ.

ಭಾನುವಾರ (ಜೂನ್‌ 9) ಸಂಜೆ ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ (ಜೂನ್‌ 10) ‘ಪಿಎಂ ಕಿಸಾನ್ ನಿಧಿ’ ಬಿಡುಗಡೆಯ ಕಡತಕ್ಕೆ ಸಹಿ ಹಾಕಿದರು. ಇದು ಅವರು ಮೂರನೇ ಅವಧಿಯಲ್ಲಿ ಸಹಿ ಹಾಕಿದ ಮೊದಲ ಫೈಲ್​. ಪಿಎಂ ಕಿಸಾನ್ ನಿಧಿಯ 17 ನೇ ಕಂತಿನ ಬಿಡುಗಡೆಗೆ ಅಧಿಕಾರ ನೀಡುವ ಕಡತಕ್ಕೆ ಅವರು ಸಹಿ ಹಾಕಿದರು. ಇದು 9.3 ಕೋಟಿ ರೈತರಿಗೆ ಪ್ರಯೋಜನ ನೀಡುವ ಸುಮಾರು 20,000 ಕೋಟಿ ರೂ. ಬಿಡುಗಡೆಯಾಗಲಿದೆ.

ಇದನ್ನೂ ಓದಿ: Modi 3.0 Cabinet: ಮೋದಿಗೆ ಬಾಹ್ಯಾಕಾಶ, ಅಮಿತ್‌ ಶಾಗೆ ಗೃಹ ಖಾತೆ; ಇಲ್ಲಿದೆ 72 ಸಚಿವರು ಹಾಗೂ ಖಾತೆಗಳ ಪಟ್ಟಿ

Continue Reading

ಮಳೆ

Karnataka Weather : ಬೆಂಗಳೂರಲ್ಲಿ ಭಾರಿ ಮಳೆ ಎಚ್ಚರಿಕೆ; ಮುಕ್ಕಾಲು ಕರ್ನಾಟಕಕ್ಕೆ ರೆಡ್‌ ಅಲರ್ಟ್‌

Karnataka Weather Forecast : ರಾಜ್ಯಾದ್ಯಂತ ಗುಡುಗು ಸಹಿತ ಭಾರಿ (Rain News) ಮಳೆಯಾಗಲಿದ್ದು, ಹಲವು ಜಿಲ್ಲೆಗಳಿಗೆ ರೆಡ್‌, ಯೆಲ್ಲೋ, ಆರೆಂಜ್‌ ಅಲರ್ಟ್‌ಗಳನ್ನು ನೀಡಲಾಗಿದೆ. ಜೂನ್‌ 13ರವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ಉತ್ತರ ಒಳನಾಡು, ಕರಾವಳಿ ಹಾಗೂ ಮಲೆನಾಡಿನಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ (Rain News) ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಚದುರಿದಂತೆ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Karnataka Weather Forecast) ತಿಳಿಸಿದೆ.

ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ಬೆಳಗಾವಿ, ಧಾರವಾಡ, ಗದಗ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಯಾದಗಿರಿ, ರಾಯಚೂರು, ಬಳ್ಳಾರಿ, ವಿಜಯನಗರ ಮತ್ತು ಬಾಗಲಕೋಟೆ, ಹಾವೇರಿ, ವಿಜಯನಗರ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ಕರಾವಳಿಯ ಬಹುತೇಕ ಕಡೆಗಳಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನ ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ರಾಜಧಾನಿ ಬೆಂಗಳೂರಿನಲ್ಲಿ ವ್ಯಾಪಕವಾಗಿ ಮಧ್ಯಮದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

ಈ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

ಗುಡುಗು ಸಹಿತ ಭಾರೀ ಮಳೆಯಾಗಲಿದ್ದು, ಗಾಳಿ ವೇಗವು 55-65 ಕಿ.ಮೀ ಇರಲಿದೆ. ಹೀಗಾಗಿ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ನೀಡಲಾಗಿದೆ.

ಕೆಲವು ಜಿಲ್ಲೆಗಳಲ್ಲಿ ಮಳೆಯೊಂದಿಗೆ ಗಾಳಿ ವೇಗವು 40-50 ಕಿ.ಮೀ ಇರಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಸೇರಿದಂತೆ ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜೂನ್‌ 13ರವರೆಗೆ ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರು ಸಮುದ್ರ ಪ್ರದೇಶಗಳಿಗೆ ಹೋಗದಂತೆ ಸೂಚಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Smartphone Charging Tips
ತಂತ್ರಜ್ಞಾನ35 seconds ago

Smartphone Charging Tips: ನಿಮ್ಮ ಸ್ಮಾರ್ಟ್ ಪೋನ್ ಬ್ಯಾಟರಿ ಹೆಚ್ಚು ಬಾಳಿಕೆ ಬರಲು ಹೀಗೆ ಮಾಡಿ

Bengaluru Crime News
ಬೆಂಗಳೂರು6 mins ago

ಬೈಕ್‌ ಮರೆತು ಬಂದಿದ್ದನ್ನು ಪ್ರಶ್ನಿಸಿದ ಮಗನನ್ನೇ ಕೊಂದ ತಂದೆ; ಕುಡಿದ ಮತ್ತಲ್ಲಿ ನಡೆಯಿತು ದುರಂತ!

RSA vs BAN
ಕ್ರೀಡೆ7 mins ago

RSA vs BAN: ಹ್ಯಾಟ್ರಿಕ್​ ಗೆಲುವು ಸಾಧಿಸಿ ಸೂಪರ್​-8 ಹಂತಕ್ಕೆ ಲಗ್ಗೆಯಿಟ್ಟ ದಕ್ಷಿಣ ಆಫ್ರಿಕಾ

Delhi Tour
ಲೈಫ್‌ಸ್ಟೈಲ್9 mins ago

Delhi Tour: ದೆಹಲಿಗೆ ಪ್ರವಾಸಕ್ಕೆ ಹೋದಾಗ ಮಿಸ್ ಮಾಡದೇ ಈ ಅದ್ಭುತ ಸ್ಥಳಗಳಿಗೆ ಭೇಟಿ ನೀಡಿ!

Rashtrapati Bhavan
ದೇಶ20 mins ago

Rashtrapati Bhavan: ಮೋದಿ ಪ್ರಮಾಣ ವಚನ ಸಮಾರಂಭದ ವೇಳೆ ಕಾಣಿಸಿಕೊಂಡಿದ್ದು ಚಿರತೆಯಲ್ಲ; ಪೊಲೀಸರ ಸ್ಪಷ್ಟನೆ

salaries of prime minister
ಪ್ರಮುಖ ಸುದ್ದಿ21 mins ago

salaries of prime minister: ರಾಷ್ಟ್ರಪತಿ, ಪ್ರಧಾನಿಗೆ ಸಂಬಳ, ಸೌಲಭ್ಯ ಎಷ್ಟಿರುತ್ತವೆ ಗೊತ್ತೆ?

Vastu Tips
ಧಾರ್ಮಿಕ32 mins ago

Vastu Tips: ಮನೆಯಲ್ಲಿ ಧನಾತ್ಮಕ ಶಕ್ತಿ ಹೆಚ್ಚಿಸಿಕೊಳ್ಳಲು ಈ ವಾಸ್ತು ಸಲಹೆ ಪಾಲಿಸಿ

Shakti Scheme
ಕರ್ನಾಟಕ37 mins ago

Shakti Scheme: ಉಚಿತ ಪ್ರಯಾಣದ ಶಕ್ತಿ ಯೋಜನೆಗೆ 1 ವರ್ಷ; ಖರ್ಚಾಗಿದ್ದೆಷ್ಟು? ಉಪಯೋಗ ಪಡೆದವರೆಷ್ಟು?

Somnath Bharti
Lok Sabha Election 20241 hour ago

Somnath Bharti: ಮೋದಿ ಪ್ರಧಾನಿಯಾದರೆ ತಲೆ ಬೋಳಿಸುವುದಾಗಿ ಪ್ರತಿಜ್ಞೆ ಮಾಡಿದ್ದ ಆಪ್‌ ನಾಯಕ ಯೂ ಟರ್ನ್‌; ನೀಡಿದ ಸಮರ್ಥನೆ ಏನು?

Tax Devolution
ಕರ್ನಾಟಕ1 hour ago

Tax Devolution: ರಾಜ್ಯಗಳಿಗೆ 1.39 ಲಕ್ಷ ಕೋಟಿ ರೂ. ಹಂಚಿದ ಮೋದಿ ಸರ್ಕಾರ; ಕರ್ನಾಟಕಕ್ಕೆ ಸಿಕ್ಕಿದ್ದೆಷ್ಟು?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ16 hours ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ4 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ4 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ1 week ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ1 week ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ2 weeks ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

ಟ್ರೆಂಡಿಂಗ್‌