ವಿಸ್ತಾರ ಸಂಪಾದಕೀಯ: ಸ್ತ್ರೀಯರ ಘನತೆಗೆ ಹಾನಿ ಎಸಗಿದವರಿಗೆ ಕಠಿಣ ಶಿಕ್ಷೆಯಾಗಲಿ - Vistara News

ಸಂಪಾದಕೀಯ

ವಿಸ್ತಾರ ಸಂಪಾದಕೀಯ: ಸ್ತ್ರೀಯರ ಘನತೆಗೆ ಹಾನಿ ಎಸಗಿದವರಿಗೆ ಕಠಿಣ ಶಿಕ್ಷೆಯಾಗಲಿ

ಸಂಸದ ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಮಾಡಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ನೀಡಿದ ದೂರಿನ ಅನ್ವಯ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಆರೋಪ ಸಾಬೀತಾದರೆ ಏಳು ವರ್ಷದವರೆಗೂ ಜೈಲು ಶಿಕ್ಷೆ ಹಾಗೂ ದಂಡ ಆಗಬಹುದು. ತನ್ನ ಮೇಲೆ ರೇಪ್‌ ನಡೆದಿದೆ ಎಂದು ಆರೋಪ ನೀಡಿದವರು ಬಲವಾಗಿ ಕೋರ್ಟ್‌ನಲ್ಲಿ ವಾದಿಸಿದರೆ ಆರೋಪಿಯನ್ನು ಯಾರೂ ಕಾಪಾಡಲಾರರು. ಆದರೆ ಅಧಿಕಾರದಲ್ಲಿ ಇರುವವರ ಮುಂದೆ ಬಡ ಆರೋಪಿಗಳು ನಿಲ್ಲಲು ಸಾಧ್ಯವೇ ಎಂಬುದೇ ಆತಂಕದ ಪ್ರಶ್ನೆ.

VISTARANEWS.COM


on

Vistara Editorial
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹಾಸನದಲ್ಲಿ ಹುಟ್ಟಿಕೊಂಡು ರಾಜ್ಯಾದ್ಯಂತ, ದೇಶಾದ್ಯಂತ ಸುದ್ದಿಯಾಗುತ್ತಿರುವ ಲೈಂಗಿಕ ದೌರ್ಜನ್ಯದ ಅಶ್ಲೀಲ ವಿಡಿಯೋಗಳ ಪೆನ್‌ಡ್ರೈವ್‌ ಪ್ರಕರಣ ಈಗಾಗಲೇ ಸಾಕಷ್ಟು ರಾಜಕೀಯ ಕೋಲಾಹಲ ಎಬ್ಬಿಸಿದೆ. ಈ ಪ್ರಕರಣವನ್ನು ಸಾರ್ವಜನಿಕಗೊಳಿಸಿದ ಸಂದರ್ಭ, ಇದರ ಹಿಂದೆ ಮುಂದೆ ಇರುವ ರಾಜಕೀಯ ಲೆಕ್ಕಾಚಾರಗಳು, ಈಗ ನಡೆಯುತ್ತಿರುವ ಪ್ರತಿಭಟನೆಗಳು, ಎಲ್ಲವೂ ಕುತೂಹಲಕರವಾಗಿವೆ. ಆರೋಪಿ ಎನಿಸಿಕೊಂಡಿರುವ ಹಾಸನದ ಸಂಸದ ಪ್ರಜ್ವಲ್‌ ರೇವಣ್ಣ, ಈಗಾಗಲೇ ದೇಶ ಬಿಟ್ಟು ಜರ್ಮನಿಗೆ ತೆರಳಿದ್ದಾರೆ. “ತನಿಖೆಗೆ ಕರೆದಾಗ ಬರುತ್ತಾರೆ” ಎಂದು ಅವರ ತಂದೆ ಎಚ್‌ಡಿ ರೇವಣ್ಣ ಹೇಳಿದ್ದಾರೆ. ಆದರೆ ಬಹುಶಃ ನಿರೀಕ್ಷಣಾ ಜಾಮೀನು ದೊರೆಯುವವರೆಗೂ ಪ್ರಜ್ವಲ್‌ ಮರಳುವುದು ಅನುಮಾನವೇ ಅನಿಸುತ್ತದೆ. “ತನಿಖೆ ನಡೆಯಲಿ, ತಪ್ಪು ಮಾಡಿದ್ದರೆ ಶಿಕ್ಷೆಯಾಗಲಿ” ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ. ಇದು ಎಲ್ಲರ ಮಾತೂ ಹೌದು.

ಸಂಸದ ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಮಾಡಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ನೀಡಿದ ದೂರಿನ ಅನ್ವಯ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಐಪಿಸಿ ಸೆಕ್ಷನ್ 354A, 354D, 506, 509 ಅಡಿ ಕೇಸ್‌ ದಾಖಲಾಗಿದ್ದು, ಆರೋಪ ಸಾಬೀತಾದರೆ ಏಳು ವರ್ಷದವರೆಗೂ ಜೈಲು ಶಿಕ್ಷೆ ಹಾಗೂ ದಂಡ ಆಗಬಹುದು. ತನ್ನ ಮೇಲೆ ರೇಪ್‌ ನಡೆದಿದೆ ಎಂದು ಆರೋಪ ನೀಡಿದವರು ಬಲವಾಗಿ ಕೋರ್ಟ್‌ನಲ್ಲಿ ವಾದಿಸಿದರೆ ಆರೋಪಿಯನ್ನು ಯಾರೂ ಕಾಪಾಡಲಾರರು. ಆದರೆ ಶ್ರೀಮಂತರು, ಪ್ರಭಾವಿಗಳು ಹಾಗೂ ಅಧಿಕಾರದಲ್ಲಿ ಇರುವವರ ಮುಂದೆ ಬಡ ಆರೋಪಿಗಳು ನಿಲ್ಲಲು ಸಾಧ್ಯವೇ? ಇದು ಕಾನೂನು ಹಾಗೂ ನ್ಯಾಯಾಂಗದ ಪಾರದರ್ಶಕತೆ, ತನಿಖಾ ಸಂಸ್ಥೆಗಳ ಪ್ರಾಮಾಣಿಕತೆ ಹಾಗೂ ಸಾಕ್ಷಿಗಳನ್ನು ಕಲೆಹಾಕುವ ಪರಿಶ್ರಮ ಇವುಗಳನ್ನೆಲ್ಲ ಅವಲಂಬಿಸಿದೆ.

ಪ್ರಕರಣದ ತನಿಖೆಗಾಗಿ ಎಸ್‌ಐಟಿ ರಚನೆಗೆ ಸಿಎಂ ಸಿದ್ದರಾಮಯ್ಯ ಅವರು ಆದೇಶಿಸಿದ್ದು, ಅಧಿಕೃತವಾಗಿ ಎಡಿಜಿಪಿ ಬಿ.ಕೆ. ಸಿಂಗ್ ನೇತೃತ್ವದಲ್ಲಿ ಎಸ್‌ಐಟಿ ರಚಿಸಲಾಗಿದೆ. ಇದರಲ್ಲಿ ಇಬ್ಬರು ಮಹಿಳಾ ಐಪಿಎಸ್‌ ಅಧಿಕಾರಿಗಳು ಇದ್ದಾರೆ. ಎಡಿಜಿಪಿ ಬಿ.ಕೆ. ಸಿಂಗ್ ಎಸ್‌ಐಟಿ ಮುಖ್ಯಸ್ಥರಾಗಿದ್ದು, ಎಸ್‌ಪಿ ಸುಮನ್ ಡಿ ಪನ್ನೇಕರ್, ಎಸ್‌ಪಿ ಸೀಮಾ ಲಾಟ್ಕರ್ ಸದಸ್ಯರಾಗಿದ್ದಾರೆ. ಸಿಐಡಿಯಲ್ಲಿ ಎಡಿಜಿಪಿಯಾಗಿರುವ ಬಿ.ಕೆ ಸಿಂಗ್ ಅವರು, ಈ ಹಿಂದೆ ಗೌರಿ ಲಂಕೇಶ್ ಕೊಲೆ ಕೇಸ್‌ ತನಿಖೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಪ್ರಭಾವಿ ರಾಜಕಾರಣಿಗಳು ಅನೇಕ ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿರುವ ಬಗ್ಗೆ ಚಿತ್ರೀಕರಣ ಮಾಡಿದ ವ್ಯಕ್ತಿಗಳು ಮತ್ತು ಅದನ್ನು ಸಾರ್ವಜನಿಕ ಪಡಿಸಿದ ವ್ಯಕ್ತಿಗಳನ್ನು ತನಿಖೆಗೆ ಒಳಪಡಿಸುವ ಮೂಲಕ ಮಹಿಳೆಯರ ಘನತೆ ಹಾಗೂ ಅಸ್ತಿತ್ವಕ್ಕೆ ಹಾನಿ ಉಂಟು ಮಾಡುತ್ತಿರುವವರನ್ನು ಶೀಘ್ರವಾಗಿ ಪತ್ತೆಹಚ್ಚಿ ಆರೋಪಿಗಳ ವಿರುದ್ಧ ಕಠಿಣ ಕಾನೂನಾತ್ಮಕ ಕ್ರಮ ಕೈಗೊಳ್ಳುವಂತೆ ರಾಜ್ಯ ಮಹಿಳಾ ಆಯೋಗ ಕೋರಿದೆ. ಮಹಿಳಾ ಸಂಘಟನೆಗಳು, ಮಹಿಳಾ ಹಕ್ಕುಗಳ ಆಯೋಗ ಕೂಡ ಈ ಪ್ರಕರಣದ ಆರೋಪಿಗಳ ಹೆಡೆಮುರಿ ಕಟ್ಟಲು ಒತ್ತಾಯಿಸಿ ಪ್ರತಿಭಟನೆಗಳನ್ನು ನಡೆಸಿದೆ.

ಇದೆಲ್ಲವೂ ಒಂದು ಕಡೆಗಾದರೆ, ಪ್ರಕರಣದ ಇನ್ನೊಂದು ಆಯಾಮವನ್ನೂ ನೋಡಬೇಕು. ಲೈಂಗಿಕ ಕಿರುಕುಳದ ವಿಡಿಯೋಗಳನ್ನು ಹಾದಿಬೀದಿಯಲ್ಲಿ ಎಲ್ಲರಿಗೂ ಸಿಗುವಂತೆ ಹಂಚಿದವರು ಯಾರು? ಯಾಕೆ ಅದನ್ನು ಚುನಾವಣೆಯ ಸಂದರ್ಭದಲ್ಲಿಯೇ ಹೊರಬಿಡಲಾಯಿತು? ಜೆಡಿಎಸ್‌ ಹಾಗೂ ಬಿಜೆಪಿ ಪಕ್ಷಗಳು ರಾಜಕೀಯ ಮೈತ್ರಿ ಮಾಡಿಕೊಂಡಿರುವ ಸಮಯವನ್ನೇ ಆಯ್ದುಕೊಂಡು ಈ ವಿಡಿಯೋಗಳನ್ನು ಹರಿದಾಡುವಂತೆ ಮಾಡುವ ಹಿನ್ನೆಲೆಯಲ್ಲಿ ಚುನಾವಣಾ ಅಭ್ಯರ್ಥಿಯೊಬ್ಬರ ಸೋಲಿಗಾಗಿ ನಡೆಸಿದ ಸಂಚು ಕೂಡ ಇಲ್ಲವೇ? ಇದು ಸಮಯಸಾಧಕತನವಲ್ಲ, ಇದರ ಹಿಂದೆ ರಾಜಕೀಯ ಇಲ್ಲ ಎನ್ನುವುದು ತೀರಾ ಮುಗ್ಧತೆಯೂ ಅಲ್ಲ, ಭಂಡತನವಾಗುತ್ತದೆ. ಆರೋಪಿಗಳಿಗೆ ಶಿಕ್ಷೆಯಾಗಬೇಕು ನಿಜ; ಆದರೆ ಸಂತ್ರಸ್ತ ಅಮಾಯಕ ಮಹಿಳೆಯರ ಗುರುತನ್ನು ಸಾರ್ವಜನಿಕಗೊಳಿಸಿದವರೂ ಆರೋಪಿಗಳೇ ಅಲ್ಲವೇ? ಅವರಿಗೂ ಶಿಕ್ಷೆಯಾಗಬೇಕಿದೆ. ಇದು ಮಹಿಳೆಯ ಘನತೆಗೆ ಕುಂದು ತರುವ ಸಂಚು.

ಘಟನೆಯ ಹಿನ್ನೆಲೆಯಲ್ಲಿ ಜೆಡಿಎಸ್‌ ಪಕ್ಷದೊಳಗೆ ಪ್ರಜ್ವಲ್‌ ರೇವಣ್ಣ ಅವರ ವಿರುದ್ಧ ಯಾವ ಕ್ರಮ ತೆಗೆದುಕೊಳ್ಳುತ್ತಾರೋ ತಿಳಿಯದು. ಅದು ಪಕ್ಷದ ಆಂತರಿಕ ವಿಚಾರ. ಪಕ್ಷದಿಂದ ಅವರ ಉಚ್ಚಾಟನೆಗೆ ತೀರ್ಮಾನಿಸಲಾಗಿದೆ ಎಂದು ಎಚ್‌ಡಿಕೆ ಹೇಳಿದ್ದಾರೆ. ಹಾಗೆ ಆದರೆ ಪಕ್ಷ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ ಎನ್ನಬೇಕು. ಬಿಜೆಪಿ ಕೂಡ ಜೆಡಿಎಸ್‌ ಜೊತೆಗೆ ಮೈತ್ರಿ ಮಾಡಿಕೊಂಡಿರುವುದರಿಂದ, ಪ್ರಕರಣದ ಬಗ್ಗೆ ಬಿಜೆಪಿ ನಾಯಕರ ನಿಲುವು ಏನಿದೆ ಎಂದು ಸಾರ್ವಜನಿಕರು ತಿಳಿಯಲು ಬಯಸಿದರೆ ತಪ್ಪಾಗದು. ಹಾಗೆಯೇ ಹಾಸನ ಲೋಕಸಭೆ ಕ್ಷೇತ್ರದ ಮತದಾರರ ಮನಸ್ಸಿನಲ್ಲಿ ಈ ಪ್ರಕರಣ ಯಾವ ರೀತಿ ಕೆಲಸ ಮಾಡಿದೆ, ಫಲಿತಾಂಶ ಹೇಗಿದ್ದೀತು ಎಂದು ತಿಳಿಯುವುದಕ್ಕೆ ಫಲಿತಾಂಶದವರೆಗೂ ಕಾಯಬೇಕಾದೀತು. ಬಿಕೆ ಸಿಂಗ್‌ ನೇತೃತ್ವದ ಎಸ್‌ಐಟಿ ಪ್ರಾಮಾಣಿಕವಾಗಿ ಕೆಲಸ ಮಾಡಿದರೆ ಪ್ರಕರಣ ತಾರ್ಕಿಕ ಕೊನೆ ಮುಟ್ಟಬಹುದು. ತನಿಖೆ ನಡೆದು ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ ಎಂದು ಹಾರೈಸೋಣ.

ಇದನ್ನೂ ಓದಿ: DK Shivakumar: ಪ್ರಜ್ವಲ್‌ ರೇವಣ್ಣ ಪ್ರಕರಣದ ಬಗ್ಗೆ ಬಿಜೆಪಿ ನಿಲುವೇನು; ಶಿವಕುಮಾರ್ ಪ್ರಶ್ನೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ: ನಡುರಸ್ತೆಯಲ್ಲೇಕೆ ನಮಾಜ್‌ ಮಾಡಬೇಕು?

Namaz On Road: ಹಿಂದೂ ಧರ್ಮೀಯರು ಕೂಡ ವೈಯಕ್ತಿಕ ಪೂಜೆ, ನಿತ್ಯಪೂಜೆಯಂಥ ಆಚರಣೆಗಳನ್ನು ಮನೆಯೊಳಗೆ, ದೇವರ ಕೋಣೆಯಲ್ಲಿ ಮಾಡಿಕೊಳ್ಳುತ್ತಾರೆ. ಎಂದೂ ಇತರರಿಗೆ ತೊಂದರೆ ಮಾಡುವಂತೆ ನೆರವೇರಿಸುವುದಿಲ್ಲ. ಇನ್ನು ಮುಸ್ಲಿಂ ಸಮುದಾಯದ ಉರೂಸ್‌ನಂಥ ಸಾರ್ವಜನಿಕ ಧಾರ್ಮಿಕ ಕಾರ್ಯಕ್ರಮಗಳಿಗೆ ಎಲ್ಲರೂ ಸೇರುವಂತಹ ವಿಶಾಲ ಮೈದಾನಗಳಲ್ಲಿ ನಡೆಸುವ ಅವಕಾಶವಿದ್ದೇ ಇದೆ. ಇದಕ್ಕೆ ಯಾರೂ ಅಡ್ಡಿಪಡಿಸಿಲ್ಲ. ಮಸೀದಿಗಳಲ್ಲಿ ಪ್ರತಿದಿನ ಐದು ಬಾರಿ ನಡೆಸುವ ಆಜಾನ್‌ ಅನ್ನು ಕೂಡ ಧ್ವನಿವರ್ಧಕದಲ್ಲಿ ಪ್ರಸಾರ ಮಾಡುವುದನ್ನು ಕೂಡ ಬಹುತೇಕ ಹಿಂದೂಗಳು ಯಾವುದೇ ರೀತಿಯಲ್ಲಿ ಆಕ್ಷೇಪಿಸಿಲ್ಲ. ಹೀಗಿರುವಾಗ ನಡುರಸ್ತೆಯಲ್ಲಿ ನಮಾಜ್ ಮಾಡಿ ಶಾಂತಿ ಕದಡುವುದು ಎಷ್ಟು ಸರಿ?

VISTARANEWS.COM


on

namaz on road
Koo

ಮಂಗಳೂರು ನಗರದ ರಸ್ತೆಯಲ್ಲಿ ನಮಾಜ್ (Namaz On Road) ಮಾಡಿದ ವಿಚಾರಕ್ಕೆ ಬಿಜೆಪಿ ನಾಯಕರು ಹಾಗೂ ಹಿಂದು ಸಂಘಟನೆಗಳು ಅಸಮಾಧಾನ ಹೊರಹಾಕಿದ ಬೆನ್ನಲ್ಲೇ ನಮಾಜ್ ಮಾಡಿದವರ ವಿರುದ್ಧ ಕದ್ರಿ ಠಾಣೆಯ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಐಪಿಸಿ ಕಲಂ 341, 283, 143 ಜೊತೆಗೆ 149ರಡಿ ಸುಮೋಟೊ ಪ್ರಕರಣ ದಾಖಲಾಗಿದೆ. ಮೇ 24ರಂದು ನಗರದ ಕಂಕನಾಡಿಯ ಮಸೀದಿ ಎದುರು ಯುವಕರ ತಂಡ ನಮಾಜ್‌ ಮಾಡಿತ್ತು. ಸಾರ್ವಜನಿಕ ಸ್ಥಳದಲ್ಲಿ ಓಡಾಡಲು ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆ ಆಗಿತ್ತು. ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು. ಈ ಘಟನೆ ಬಗ್ಗೆ ಹಿಂದು ಸಂಘಟನೆಗಳು ಹಾಗೂ ಬಿಜೆಪಿ ನಾಯಕರು ಕಿಡಿಕಾರಿದ್ದರು. ಇಂತಹ ಘಟನೆ ಮರುಕಳಿಸಿದರೆ ಅದೇ ವೇಳೆಯಲ್ಲಿ ಸಾಮೂಹಿಕ ಹನುಮಾನ್ ಚಾಲೀಸಾ ಪಠಣ ಮಾಡುವುದಾಗಿ ವಿಶ್ವ ಹಿಂದೂ ಪರಿಷದ್‌ ಎಚ್ಚರಿಕೆ ನೀಡಿತ್ತು. ಇದರ ಬೆನ್ನಲ್ಲೇ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪೊಲೀಸರ ಸಕ್ರಿಯತೆ ಮೆಚ್ಚಬೇಕಾದ ಸಂಗತಿ.

ಕೆಲವರು ಇದನ್ನು ಸಾರ್ವಜನಿಕ ತಾಣಗಳಲ್ಲಿ ನಡೆಯುವ ಹಿಂದೂ ಧಾರ್ಮಿಕ ಆಚರಣೆಗಳ ಜೊತೆಗೆ ಹೋಲಿಸುತ್ತಿದ್ದಾರೆ. ನಮಾಜ್‌ ಸಂಪೂರ್ಣ ವೈಯಕ್ತಿಕ ಸಂಗತಿ ಹಾಗೂ ಅದೊಂದು ವೈಯಕ್ತಿಕ ಧಾರ್ಮಿಕ ಆಚರಣೆ. ಅದೇನೂ ಸಾರ್ವಜನಿಕ ಪ್ರಾರ್ಥನೆಯಾಗಲೀ, ಸಾರ್ವಜನಿಕ ಸತ್ಯನಾರಾಯಣ ಪೂಜೆಯಂತಹ ಕಾರ್ಯಕ್ರಮವಾಗಲೀ, ಮೊಸರು ಕುಡಿಕೆಯಂಥ ಮನರಂಜನಾ ಕಾರ್ಯಕ್ರಮವಾಗಲೀ ಅಲ್ಲ. ಆದ್ದರಿಂದ ಅದನ್ನು ಹಿಂದೂ ಧಾರ್ಮಿಕ ಆಚರಣೆಗಳ ಜೊತೆಗೆ ಹೋಲಿಸಲು ಸಾಧ್ಯವಿಲ್ಲ. ಯಾವುದೇ ಹಿಂದೂ ಹಬ್ಬಕ್ಕೆ ಸಂಬಂಧಿಸಿದ ಆಚರಣೆಯನ್ನೇ ಮಾಡುವುದಿದ್ದರೂ ರಸ್ತೆಯನ್ನು ಬಂದ್‌ ಮಾಡಿ ಯಾರೂ ಮಾಡುವುದಿಲ್ಲ. ಸಾರ್ವಜನಿಕ ಮೈದಾನ ಅಥವಾ ವೈಯಕ್ತಿಕ ಖಾಲಿ ಜಾಗಗಳಲ್ಲಿ, ರಸ್ತೆಯಲ್ಲಿ ಯಾವುದೇ ಅಡೆತಡೆಯಾಗದಂತೆ ಆಚರಿಸುತ್ತಾರೆ. ರಾಮನವಮಿಯಲ್ಲಿ ನಡೆಯುವ ಪಾನಕ ಪನಿವಾರ ವಿತರಣೆ ಕೂಡ ರಸ್ತೆಯಲ್ಲಿ ಹೋಗಿ ಬರುವವರ ದಣಿವನ್ನು ತಣಿಸುವಂತೆ ಆಪ್ಯಾಯಮಾನವಾಗಿರುತ್ತದೆಯೇ ಹೊರತು, ಕಿರಿಕಿರಿ ಮಾಡುವಂತೆ ಇರುವುದಿಲ್ಲ. ಆದ್ದರಿಂದ ಇದನ್ನು ಹಿಂದೂ ಆಚರಣೆಗಳ ಜೊತೆಗೆ ಹೋಲಿಸುವುದು ಕುತರ್ಕ.

ಇದನ್ನೂ ಓದಿ: ವಿಸ್ತಾರ ಸಂಪಾದಕೀಯ: ಕುಡುಕ ಬಾಲಕನಿಂದ ಅಪಘಾತ ಪ್ರಕರಣ; ಪುಣೆ ಪೊಲೀಸರ ದಿಟ್ಟ ಕ್ರಮ ಶ್ಲಾಘನೀಯ

ಹಿಂದೂ ಧರ್ಮೀಯರು ಕೂಡ ವೈಯಕ್ತಿಕ ಪೂಜೆ, ನಿತ್ಯಪೂಜೆಯಂಥ ಆಚರಣೆಗಳನ್ನು ಮನೆಯೊಳಗೆ, ದೇವರ ಕೋಣೆಯಲ್ಲಿ ಮಾಡಿಕೊಳ್ಳುತ್ತಾರೆ. ಎಂದೂ ಇತರರಿಗೆ ತೊಂದರೆ ಮಾಡುವಂತೆ ನೆರವೇರಿಸುವುದಿಲ್ಲ. ಇನ್ನು ಮುಸ್ಲಿಂ ಸಮುದಾಯದ ಉರೂಸ್‌ನಂಥ ಸಾರ್ವಜನಿಕ ಧಾರ್ಮಿಕ ಕಾರ್ಯಕ್ರಮಗಳಿಗೆ ಎಲ್ಲರೂ ಸೇರುವಂತಹ ವಿಶಾಲ ಮೈದಾನಗಳಲ್ಲಿ ನಡೆಸುವ ಅವಕಾಶವಿದ್ದೇ ಇದೆ. ಇದಕ್ಕೆ ಯಾರೂ ಅಡ್ಡಿಪಡಿಸಿಲ್ಲ. ಮಸೀದಿಗಳಲ್ಲಿ ಪ್ರತಿದಿನ ಐದು ಬಾರಿ ನಡೆಸುವ ಆಜಾನ್‌ ಅನ್ನು ಕೂಡ ಧ್ವನಿವರ್ಧಕದಲ್ಲಿ ಪ್ರಸಾರ ಮಾಡುವುದನ್ನು ಕೂಡ ಬಹುತೇಕ ಹಿಂದೂಗಳು ಯಾವುದೇ ರೀತಿಯಲ್ಲಿ ಆಕ್ಷೇಪಿಸಿಲ್ಲ. ಆದರೆ ಯಾವಾಗ ರಸ್ತೆಯಲ್ಲಿ ನಮಾಜ್‌ ಎಂಬುದು ಹೊಸದಾಗಿ ಆರಂಭವಾಯಿತೋ ಆಗ ಸ್ಥಳೀಯರು ಆತಂಕಕ್ಕೆ ಒಳಗಾಗುವುದು ಸಹಜ. ಇದೊಂದು ನಿತ್ಯದ ಪರಿಪಾಠವೇ ಆಗಿಬಿಟ್ಟರೆ, ಆಗ ನಿತ್ಯವೂ ದಾರಿಹೋಕರು ಕಿರಿಕಿರಿ ಅನುಭವಿಸಬೇಕಾಗುತ್ತದೆ. ಪ್ರತಿದಿನ ನಿರ್ದಿಷ್ಟ ಹೊತ್ತಿಗೆ ಇಂತಿಂಥ ರಸ್ತೆಯಲ್ಲಿ ಹೋಗಬಾರದು ಎಂಬ ಅಘೋಷಿತ ಕರ್ಫ್ಯೂ ಸೃಷ್ಟಿಯಾಗಿಬಿಡುತ್ತದೆ.

ಒಂದು ಸಮಾಜದಲ್ಲಿ ಅಸಹನೆ ಬೇರೂರಲು ಆರಂಭವಾಗುವುದು ಇಂಥ ಸಣ್ಣ, ಆದರೆ ಮೊಳಕೆಯಲ್ಲೇ ನಾವು ಹತ್ತಿಕ್ಕಬೇಕಾದ ಸಂಗತಿಗಳಿಂದಲೇ. ರಸ್ತೆಯಲ್ಲಿ ನಮಾಜ ಮಾಡುವುದನ್ನು ಸಾಂಪ್ರದಾಯಿಕ ಮುಸ್ಲಿಮರು ಕೂಡ ಸಮರ್ಥಿಸುವುದಿಲ್ಲ. ಮಸೀದಿಯ ಒಳಗೆ ಅಥವಾ ಮನೆಯ ಒಳಗೆ ನಡೆಯಬೇಕಾದ ಒಂದು ಖಾಸಗಿ ಧಾರ್ಮಿಕ ಸಂಗತಿಯನ್ನು ಸಾರ್ವಜನಿಕ ಮಾಡಿದರೆ ಅದರ ಘನತೆ ಕಳೆದುಹೋಗುತ್ತದೆ. ಅದಕ್ಕಿರಬಹುದಾದ ಪವಿತ್ರ ಆವರಣವೂ ನಾಶವಾಗುತ್ತದೆ. ನಮಾಜ್‌ ಎಂಬುದು ಮುಸ್ಲಿಮರಿಗೆ ಹೇಗೋ ಹಾಗೆಯೇ ಹಿಂದೂಗಳು ಕೂಡ ಗೌರವಿಸಬೇಕಾದ ಸಂಗತಿ. ಆ ಗೌರವ ಇರುವುದರಿಂದಲೇ, ರಸ್ತೆಯಲ್ಲಿ ಮಾಡುವ ಮೂಲಕ ಅದರ ಘನತೆಯನ್ನು ನಾಶ ಮಾಡದಿರಿ ಎಂಬ ಸಂದೇಶವನ್ನು ಹಿಂದೂ ಸಮಾಜದ ಹಲವರು ನೀಡುತ್ತಿದ್ದಾರೆ ಎಂದು ತಿಳಿಯಬೇಕು. ಈ ಮಾತನ್ನು ಮುಸ್ಲಿಂ ಸಮುದಾಯ ಒಪ್ಪಿ ಗೌರವಿಸಿದರೆ ಸಮಾಜದ ಸಾಮರಸ್ಯ ಕದಡದು.

Continue Reading

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ: ಕುಡುಕ ಬಾಲಕನಿಂದ ಅಪಘಾತ ಪ್ರಕರಣ; ಪುಣೆ ಪೊಲೀಸರ ದಿಟ್ಟ ಕ್ರಮ ಶ್ಲಾಘನೀಯ

ವಿಸ್ತಾರ ಸಂಪಾದಕೀಯ: ಪೊಲೀಸ್ ವ್ಯವಸ್ಥೆಯನ್ನು ಪ್ರಾಮಾಣಿಕವಾಗಿ ಕೆಲಸ ಮಾಡಲು ಪ್ರಚೋದಿಸಿದಾಗ, ಪ್ರಭಾವ ಬಳಸಿ ಅಥವಾ ಅಧಿಕಾರ ಬಳಸಿ ದಾರಿ ತಪ್ಪಿಸಲು ಪ್ರಯತ್ನಿಸದೆ ಇದ್ದರೆ, ಸರಿಯಾಗಿಯೇ ಕೆಲಸ ಮಾಡುತ್ತಾರೆ. ಅದಕ್ಜೆ ಪುಣೆ ಪ್ರಕರಣವೇ ಉದಾಹರಣೆ.

VISTARANEWS.COM


on

Porsche car accident ವಿಸ್ತಾರ ಸಂಪಾದಕೀಯ
Koo

ಪುಣೆಯಲ್ಲಿ ಕಂಠಮಟ್ಟ ಮದ್ಯಪಾನ (Drink and drive) ಮಾಡಿ, ಅಪ್ಪ ಕೊಡಿಸಿದ ಐಷಾರಾಮಿ ಪೋರ್ಷೆ ಕಾರನ್ನು (Pune Porsche car accident) ಯದ್ವಾತದ್ವಾ ಓಡಿಸಿ ಇಬ್ಬರ ಜೀವ ತೆಗೆದ ಅಪ್ರಾಪ್ತ ವಯಸ್ಕನ (Juvenile) ಪ್ರಕರಣದಲ್ಲಿ ಹಲವು ಬೆಳವಣಿಗೆಗಳು ಆಗಿವೆ. 17 ವರ್ಷದ ವೇದಾಂತ್‌ ಅಗರ್‌ವಾಲ್‌ ಐಷಾರಾಮಿ ಪೋರ್ಷೆ ಕಾರನ್ನು ಗಂಟೆಗೆ 200 ಕಿ.ಮೀ. ವೇಗದಲ್ಲಿ ಓಡಿಸಿ ಬೈಕ್‌ಗೆ ಡಿಕ್ಕಿ ಹೊಡೆಸಿದ್ದ. ಪರಿಣಾಮ ಬೈಕ್‌ನಲ್ಲಿ ಸಂಚರಿಸುತ್ತಿದ್ದ ಮಧ್ಯಪ್ರದೇಶದ ಎಂಜಿನಿಯರ್‌ಗಳಾದ (Engineers) 24 ವರ್ಷದ ಅನೀಶ್ ಅವಧಿ ಮತ್ತು ಅಶ್ವಿನಿ ಕೊಶ್ತಾ ಸ್ಥಳದಲ್ಲಿಯೇ ಮೃತಪಟ್ಟಿದ್ದರು. ಘಟನೆಯ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಅಪಘಾತ ಆಗುತ್ತಿದ್ದಂತೆ ಸ್ಥಳೀಯರೆಲ್ಲ ಒಟ್ಟುಗೂಡಿ ಸೆರೆ ಹಿಡಿದು ಥಳಿಸಿ ಅವನನ್ನು ಪೊಲೀಸರಿಗೆ ಒಪ್ಪಿಸಿದ್ದರು. ದುರಂತ ಎಂದರೆ ವೇದಾಂತ್‌ ಅಗರ್‌ವಾಲ್‌ನ ಬಂಧನವಾದ ಕೇವಲ 15 ಗಂಟೆಗಳಲ್ಲೇ ಬಾಲಾಪರಾಧಿ ನ್ಯಾಯ ಮಂಡಳಿ ಆತನಿಗೆ ಜಾಮೀನು ಮಂಜೂರು ಮಾಡಿತ್ತು. ಜಾಮೀನು ನಿರಾಕರಿಸುವಷ್ಟು ಅಪರಾಧವು ಗಂಭೀರವಾಗಿಲ್ಲ ಎಂದು ಅಭಿಪ್ರಾಯಪಟ್ಟ ನ್ಯಾಯಾಲಯ, ಅಪಘಾತಗಳ ಬಗ್ಗೆ 300 ಪದಗಳ ಪ್ರಬಂಧ ಬರೆಯಲು ಹೇಳಿತ್ತು. ಈ ಹಾಸ್ಯಾಸ್ಪದ ತೀರ್ಪಿಗೆ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು.

ಈ ಪ್ರಕರಣದಲ್ಲಿ ನ್ಯಾಯಾಂಗದ ಬಗ್ಗೆ ಬಂದ ಕಟು ಟೀಕೆಯ ನಂತರ ಪೊಲೀಸರು ಹಾಗೂ ನ್ಯಾಯಾಂಗವೂ ಎಚ್ಚೆತ್ತುಕೊಂಡಂತಿದೆ. ಪೊಲೀಸರು ಚುರುಕಾಗಿ ಕಾರ್ಯಪ್ರವೃತ್ತರಾಗಿದ್ದಾರೆ. ನ್ಯಾಯಾಂಗವೂ ಈ ಜಾಮೀನನ್ನು ರದ್ದುಪಡಿಸಿದ್ದು, ಆರೋಪಿ ಬಾಲಕನನ್ನು ರಿಮ್ಯಾಂಡ್‌ ಹೋಂಗೆ ಕಳುಹಿಸಿದೆ. ಈತನನ್ನು ವಯಸ್ಕನಂತೆ ಪರಿಗಣಿಸಿ ವಿಚಾರಣೆ ಮಾಡಲಾಗುತ್ತದೆ ಎಂದಿದ್ದಾರೆ ಪೊಲೀಸರು. ಈ ಪ್ರಕರಣದಲ್ಲಿ ಲೈಸೆನ್ಸ್‌ ರಹಿತ ಅಪ್ರಾಪ್ತನಿಗೆ ಕಾರನ್ನು ಓಡಿಸಲು ಕೊಟ್ಟ ಅಪ್ಪನೂ ಅಪರಾಧಿ, ಆತ ತಪ್ಪಿಸಿಕೊಳ್ಳಲು ಅವಕಾಶ ಮಾಡಿಕೊಟ್ಟ ಅಜ್ಜನೂ ಅಪರಾಧಿಯಾಗಿದ್ದು, ಇಬ್ಬರನ್ನೂ ಬಂಧಿಸಲಾಗಿದೆ. ಅಪಘಾತವಾದಾಗ ಕಾರನ್ನು ತಾನು ಓಡಿಸುತ್ತಿದ್ದೆ ಎಂದು ಹೇಳಿಕೊಳ್ಳುವಂತೆ ಕಾರು ಚಾಲಕನನ್ನು ಬಲವಂತ ಮಾಡಿದ್ದು ಕೂಡ ಬೆಳಕಿಗೆ ಬಂದಿದ್ದು, ಅದೂ ಕೂಡ ಒಂದು ಅಪರಾಧ. ಅಪಘಾತಕ್ಕೂ ಮುನ್ನ ಅಪ್ರಾಪ್ತ ವಯಸ್ಕ ಮದ್ಯ ಸೇವಿಸಿದ ಎರಡು ಬಾರ್‌ಗಳ ಮಾಲೀಕರು ಮತ್ತು ನೌಕರರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಸರ್ಕಾರಿ ಆಸ್ಪತ್ರೆಯ ವೈದ್ಯರಿಬ್ಬರು ಬಾಲಾಪರಾಧಿಯ ರಕ್ತದ ಮಾದರಿಯನ್ನು ಬದಲಾಯಿಸಿ ಆರೋಪಿಯನ್ನು ಬಚಾವ್‌ ಮಾಡಲು ಯತ್ನಿಸಿರುವುದು ಬೆಳಕಿಗೆ ಬಂದಿದ್ದು, ಇಬ್ಬರನ್ನೂ ಅರೆಸ್ಟ್‌ ಮಾಡಲಾಗಿದೆ. ದುಡ್ಡಿಗಾಗಿ ರಕ್ತದ ಮಾದರಿಯನ್ನು ಡಸ್ಟ್‌ ಬಿನ್‌ಗೆ ಎಸೆದ ಲ್ಯಾಬ್‌ ಗುಮಾಸ್ತನನ್ನೂ ವಶಕ್ಕೆ ಪಡೆಯಲಾಗಿದೆ.

ಈ ಪ್ರಕರಣದಲ್ಲಿ ಪೊಲೀಸರು ಕೆಲ ಆರಂಭಿಕ ಜಡತೆಗಳ ನಂತರ, ಸಾಕಷ್ಟು ಚುರುಕಾಗಿ ಹಾಗೂ ಸಮಗ್ರವಾಗಿಯೇ ಕಾರ್ಯ ನಿರ್ವಹಿಸಿದ್ದಾರೆ ಎನ್ನಬೇಕು. ಹೀಗೆ ಒಂದು ಅಪರಾಧದ ಎಲ್ಲ ಮಗ್ಗುಲುಗಳಲ್ಲಿಯೂ ತನಿಖೆ ನಡೆಸಿ, ಸಾಕ್ಷ್ಯಗಳನ್ನು ಸಂಗ್ರಹಿಸಿ, ವಿವರವಾದ ಹಾಗೂ ಗಟ್ಟಿಯಾದ ಚಾರ್ಜ್‌ಶೀಟ್‌ ಸಲ್ಲಿಸಿದಾಗ ಮಾತ್ರ ನಿಜವಾದ ಅಪರಾಧಿಗಳಿಗೆ ಶಿಕ್ಷೆಯಾಗಲು ಸಾಧ್ಯ. ನ್ಯಾಯಾಂಗವೂ ಅಷ್ಟೆ, ಆರಂಭದಲ್ಲಿ ಪ್ರಕರಣದ ಗಂಭೀರತೆಯನ್ನು ಅರ್ಥ ಮಾಡಿಕೊಂಡಿರಲಿಲ್ಲ; ದೇಶಾದ್ಯಂತ ಅಸಮಾಧಾನ ವ್ಯಕ್ತವಾದಾಗ ಅದಕ್ಕೂ ಈ ಪ್ರಕರಣದ ಗಂಭೀರತೆ ಅರ್ಥವಾದಂತಿದೆ. ಶ್ರೀಮಂತರ ಮಕ್ಕಳು ಉದ್ದೇಶರಹಿತ ಹಾಗೂ ನಿರಂಕುಶವಾಗಿ ಬೆಳೆದಾಗ ಇಂಥ ಸನ್ನಿವೇಶ ಸೃಷ್ಟಿಯಾಗುತ್ತದೆ. ಸರಿಯಾದ ಶಿಕ್ಷಣ ಹಾಗೂ ಸಂಸ್ಕಾರ ಕೊಡಿಸದ ಪೋಷಕರೂ ಈ ಘೋರ ಅಪರಾಧದ ಹೊಣೆಯನ್ನು ಹೊರಬೇಕಾಗುತ್ತದೆ. ಇಂಥ ಅಪ್ರಾಪ್ತರನ್ನು ವಯಸ್ಕರೆಂದೇ ಪರಿಗಣಿಸಿ ಶಿಕ್ಷಿಸಬೇಕಾದ ಅಗತ್ಯವಿದೆ. ದಿಲ್ಲಿ ನಿರ್ಭಯಾ ರೇಪ್ ಮತ್ತು ಕಗ್ಗೊಲೆ ಪ್ರಕರಣದಲ್ಲಿ ಅಪ್ರಾಪ್ತ ವಯಸ್ಕ ಆರೋಪಿಯೇ ಅತಿ ಬರ್ಬರವಾಗಿ ನಡೆದುಕೊಂಡಿದ್ದ ಎಂಬುದನ್ನು ನೆನಪಿಸಿಕೊಳ್ಳಬೇಕು.

ಪೊಲೀಸ್ ವ್ಯವಸ್ಥೆಯನ್ನು ಪ್ರಾಮಾಣಿಕವಾಗಿ ಕೆಲಸ ಮಾಡಲು ಪ್ರಚೋದಿಸಿದಾಗ, ಪ್ರಭಾವ ಬಳಸಿ ಅಥವಾ ಅಧಿಕಾರ ಬಳಸಿ ದಾರಿ ತಪ್ಪಿಸಲು ಪ್ರಯತ್ನಿಸದೆ ಇದ್ದರೆ, ಸರಿಯಾಗಿಯೇ ಕೆಲಸ ಮಾಡುತ್ತಾರೆ. ಅದಕ್ಜೆ ಪುಣೆ ಪ್ರಕರಣವೇ ಉದಾಹರಣೆ. ಇನ್ನು ವಿಚಾರಣೆಯ ಹಂತದಲ್ಲಿ ಆರೋಪಿಯ ಅಪರಾಧವನ್ನು ರುಜುವಾತುಪಡಿಸುವ ಸಾಕ್ಷ್ಯಾಧಾರಗಳನ್ನು ನ್ಯಾಯಾಲಯದ ಮುಂದೆ ಸಮರ್ಪಕವಾಗಿ ಮಂಡಿಸಿ, ಪಾತಕಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕಿದೆ.

ಇದನ್ನೂ ಓದಿ: ವಿಸ್ತಾರ ಸಂಪಾದಕೀಯ: ಗುಜರಾತ್ ಬೆಂಕಿ ದುರಂತ ನಮಗೆ ಎಚ್ಚರಿಕೆಯ ಪಾಠವಾಗಲಿ

Continue Reading

ಸಂಪಾದಕೀಯ

ವಿಸ್ತಾರ ಸಂಪಾದಕೀಯ: ಗುಜರಾತ್ ಬೆಂಕಿ ದುರಂತ ನಮಗೆ ಎಚ್ಚರಿಕೆಯ ಪಾಠವಾಗಲಿ

ಕಾರ್ಖಾನೆಗಳು, ಸಾರ್ವಜನಿಕ ತಾಣಗಳಲ್ಲಿ ಸುರಕ್ಷತೆಯ ಕ್ರಮಗಳನ್ನು ತೆಗೆದುಕೊಳ್ಳುವುದು ನಮ್ಮಲ್ಲಿ ಇನ್ನೂ ರೂಢಿಯಾಗಿಲ್ಲ. ನಮ್ಮಲ್ಲಿ ನಗರಗಳು ಜನದಟ್ಟಣೆಯ ಕೇಂದ್ರಗಳಾಗಿವೆ. ಆದರೆ ಸೂಕ್ತ ನಗರ ಯೋಜನೆಯ ಕೊರತೆಯಿದೆ. ಕಟ್ಟಡಗಳ ನಡುವೆ ಸಾಕಷ್ಟು ಸೆಟ್‌ಬ್ಯಾಕ್ ಬಿಡಬೇಕು ಎಂಬುದು ನಿಯಮ. ಈ ನಿಯಮದ ಪಾಲನೆ ಆಗದಿರುವುದರಿಂದ, ಒಂದು ಕಟ್ಟಡಕ್ಕೆ ಹಾನಿ ಅಥವಾ ಅಗ್ನಿ ಆಕಸ್ಮಿಕ‌ ಸಂಭವಿಸಿದರೆ ಇನ್ನೊಂದು ಕಟ್ಟಡಕ್ಕೂ ಹಾನಿಯಾಗುತ್ತದೆ. ಇಂತಹ ಹಲವು ಸಂಗತಿಗಳ ಬಗ್ಗೆ ನಾವು ಎಚ್ಚರಿಕೆ ವಹಿಸಲೇಬೇಕಿದೆ.

VISTARANEWS.COM


on

Fire Accident
Koo

ಗುಜರಾತ್‌ನ ರಾಜ್‌ಕೋಟ್‌ (Rajkot) ನಗರದಲ್ಲಿರುವ ಗೇಮಿಂಗ್‌ ಜೋನ್‌ (Gaming Zone) ಒಂದರಲ್ಲಿ ಶನಿವಾರ (ಮೇ 25) ಸಂಜೆ ಭೀಕರ ಅಗ್ನಿ ದುರಂತ (Fire Accident) ಸಂಭವಿಸಿದ್ದು, ಮಹಿಳೆಯರು, ಮಕ್ಕಳು ಸೇರಿ 24 ಮಂದಿ ಮೃತಪಟ್ಟಿದ್ದಾರೆ. ಏಕಾಏಕಿ ಹೊತ್ತಿಕೊಂಡ ಬೆಂಕಿಯು ಇಡೀ ಕಟ್ಟಡದ ತುಂಬ ಆವರಿಸಿಕೊಂಡಿದ್ದು, ಇನ್ನೂ ಹಲವರು ಅಗ್ನಿಯ ಕೆನ್ನಾಲಗೆಯಲ್ಲಿ ಸಿಲುಕಿದ್ದಾರೆ ಎಂದು ತಿಳಿದುಬಂದಿದೆ. ಅಗ್ನಿಶಾಮಕ ದಳದ ಸಿಬ್ಬಂದಿಯು ಬೆಂಕಿ ನಂದಿಸಲು ಇನ್ನಿಲ್ಲದ ಹರಸಾಹಸ ಪಡುತ್ತಿದ್ದಾರೆ. ಗೇಮಿಂಗ್‌ ಜೋನ್‌ ಕಟ್ಟಡದಲ್ಲಿ ವೀಕೆಂಡ್ ಆದ ಕಾರಣ ನೂರಾರು ಮಕ್ಕಳು ಹಾಗೂ ಅವರ ತಾಯಂದಿರು ಇದ್ದರು. ಇದೇ ವೇಳೆ ಏಕಾಏಕಿ ಅಗ್ನಿದುರಂತ ಸಂಭವಿಸಿದ ಕಾರಣ 24 ಜನ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಇವರಲ್ಲಿ ಮಹಿಳೆಯರು ಹಾಗೂ ಮಕ್ಕಳು ಕೂಡ ಸೇರಿದ್ದಾರೆ. ಘಟನೆ ಸಂಭವಿಸುತ್ತಲೇ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್‌ ಅವರು ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇದುವರೆಗೆ 15-20 ಮಕ್ಕಳನ್ನು ರಕ್ಷಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಇದೊಂದು ದಾರುಣ ವಿಷಾದನೀಯ ದುರಂತ.

ಕೆಲ ದಿನಗಳ ಹಿಂದಷ್ಟೇ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಪಟಾಕಿ ಕಾರ್ಖಾನೆಯೊಂದರಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, 11 ಮಂದಿ ಮೃತಪಟ್ಟಿದ್ದರು. ಸುಮಾರು 15 ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಧ್ಯಾಹ್ನ ಕೆಲಸ ಮಾಡುವಾಗಲೇ ಬಾಯ್ಲರ್‌ ಒಂದರಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಇದಾದ ಕ್ಷಣಮಾತ್ರದಲ್ಲೇ ಭೀಕರ ಸ್ಫೋಟ ಸಂಭವಿಸಿತ್ತು. ಈ ಪ್ರಕರಣಗಳಲ್ಲಿ ಆಕಸ್ಮಿಕಕ್ಕೆ ಕಾರಣ ಹುಡುಕುವುದು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ಮಾಡುವುದು ಅಗತ್ಯ.

ಕಾರ್ಖಾನೆಗಳು, ಸಾರ್ವಜನಿಕ ತಾಣಗಳಲ್ಲಿ ಸುರಕ್ಷತೆಯ ಕ್ರಮಗಳನ್ನು ತೆಗೆದುಕೊಳ್ಳುವುದು ನಮ್ಮಲ್ಲಿ ಇನ್ನೂ ರೂಢಿಯಾಗಿಲ್ಲ. ನಮ್ಮಲ್ಲಿ ನಗರಗಳು ಜನದಟ್ಟಣೆಯ ಕೇಂದ್ರಗಳಾಗಿವೆ. ಆದರೆ ಸೂಕ್ತ ನಗರ ಯೋಜನೆಯ ಕೊರತೆಯಿದೆ. ಕಟ್ಟಡಗಳ ನಡುವೆ ಸಾಕಷ್ಟು ಸೆಟ್‌ಬ್ಯಾಕ್ ಬಿಡಬೇಕು ಎಂಬುದು ನಿಯಮ. ಈ ನಿಯಮದ ಪಾಲನೆ ಆಗದಿರುವುದರಿಂದ, ಒಂದು ಕಟ್ಟಡಕ್ಕೆ ಹಾನಿ ಅಥವಾ ಅಗ್ನಿ ಆಕಸ್ಮಿಕ‌ ಸಂಭವಿಸಿದರೆ ಇನ್ನೊಂದು ಕಟ್ಟಡಕ್ಕೂ ಹಾನಿಯಾಗುತ್ತದೆ. ಮಾಲ್‌ಗಳು, ನಿಲ್ದಾಣಗಳು, ಹೆಚ್ಚು ಜನ ಸೇರುವ ಸಾರ್ವಜನಿಕ ತಾಣಗಳಲ್ಲಿ ಅಗ್ನಿ ಸುರಕ್ಷತಾ ಕ್ರಮಗಳನ್ನು ಅಳವಡಿಸುವುದು ಕಡ್ಡಾಯ. ಆದರೆ ಎಷ್ಟು ಜನ ಇದನ್ನು ಪಾಲಿಸುತ್ತಾರೆ? ದೊಡ್ಡ ಕಂಪನಿಗಳ ಸಿಬ್ಬಂದಿಗೆ ಆಗಾಗ ಅಣಕು ಅಗ್ನಿ ಸುರಕ್ಷತಾ ಡ್ರಿಲ್‌ಗಳನ್ನು ಮಾಡಿಸುವುದು ಅಗತ್ಯ. ಆದರೆ ತುಂಬಾ ಕಡೆ ಮಾಡಿಸುವುದಿಲ್ಲ.

ಬೆಂಗಳೂರು ನಗರ ಕೂಡ ಅಡ್ಡಾದಿಡ್ಡಿಯಾಗಿ ಬೆಳೆದಿದೆ. ಇಂಥ ಆಕಸ್ಮಿಕಗಳು ನಮಗೆ ಎಚ್ಚರಿಕೆಯ ಪಾಠ ಆಗಬೇಕು. ದುರಂತಗಳು ನಮಗೆ ಸುರಕ್ಷತೆಯ ನಿಯಮಗಳನ್ನು ನೆನಪಿಸಬೇಕು. ಪ್ರತಿ ಕಟ್ಟಡದಲ್ಲೂ ಫೈರ್ ಎಕ್ಸಿಟ್‌ಗಳು, ಅಗ್ನಿಶಾಮಕ ಸಿಲಿಂಡರ್‌ಗಳು ಸೇರಿದಂತೆ ಸುರಕ್ಷತಾ ಸಾಧನಗಳಿರಬೇಕು. ಸೆಕ್ಯುರಿಟಿ ಸಿಬ್ಬಂದಿ ಹಾಗೂ ನಿವಾಸಿಗಳಿಗೆ ತರಬೇತಿ ನೀಡುತ್ತಿರಬೇಕು. ತುರ್ತು ಕಾರ್ಯಾಚರಣೆ ವ್ಯವಸ್ಥೆಯ ಅರಿವಿರಬೇಕು. ಗ್ಯಾಸ್ ಸಿಲಿಂಡರ್‌ಗಳು, ಎಲೆಕ್ಟ್ರಿಕ್ ವ್ಯವಸ್ಥೆಗಳ ಸುರಕ್ಷತೆಯನ್ನು ಕಾಲಕಾಲಕ್ಕೆ ಗಮನಿಸುತ್ತಿರಬೇಕು. ಹೀಗೆಲ್ಲ ಇದ್ದಾಗ ಮಾತ್ರ ಇಂಥ ದುರಂತಗಳಿಂದ ಪಾರಾಗಬಹುದು.

ಇದನ್ನೂ ಓದಿ: Chemical Factory: ಕೆಮಿಕಲ್‌ ಕಾರ್ಖಾನೆಯಲ್ಲಿ ಭಾರಿ ಸ್ಫೋಟ; ನಾಲ್ವರ ಸಾವು, 25 ಮಂದಿಗೆ ಗಾಯ

Continue Reading

ಸಂಪಾದಕೀಯ

ವಿಸ್ತಾರ ಸಂಪಾದಕೀಯ: ಮುಂಗಾರಿಗೆ ಮುನ್ನವೇ ರಾಜಕಾಲುವೆ ಒತ್ತುವರಿ ತೆರವಾಗಲಿ

ಮೂಲಸೌಕರ್ಯ ಸರಿಯಿಲ್ಲ ಎಂದು ಇತರ ನಗರಗಳು ಬೆಂಗಳೂರಿನ ಅವಕಾಶವನ್ನು ಕಸಿಯುತ್ತವೆ. ನಾಲ್ಕಾರು ಕಂಪನಿಗಳು ಬೆಂಗಳೂರಿನ ಮೂಲಸೌಕರ್ಯ ಕಳಪೆ ಎಂದು ಒಂದು ಮಾತು ಹೇಳಿದರೂ ಅದು ವಾಣಿಜ್ಯಾತ್ಮಕವಾಗಿ ಕಪ್ಪು ಚುಕ್ಕೆ. ಆದ್ದರಿಂದ, ಮುಂಗಾರಿಗೆ ಮುನ್ನವೇ ಈ ಮುನ್ನೆಚ್ಚರಿಕೆ ವ್ಯವಸ್ಥೆಗಳನ್ನು ರೂಪಿಸಿಕೊಂಡು ಸನ್ನದ್ಧರಾಗಬೇಕಿದೆ.

VISTARANEWS.COM


on

Rajakaluve
Koo

ರಾಜಕಾಲುವೆ ಒತ್ತುವರಿಯಾಗಿದ್ದರೆ ಎಷ್ಟೇ ಪ್ರಭಾವಿಗಳಾಗಿದ್ದರೂ ತೆರವುಗೊಳಿಸಲು ಸೂಚಿಸಲಾಗಿದೆ. ಯಾವ ಪ್ರಬಲ ರಾಜಕಾರಣಿಯೇ ಇರಲಿ, ಬೇರೆ ಯಾರೇ ಇರಲಿ ಮುಲಾಜಿಲ್ಲದೆ ತೆರವುಗೊಳಿಸಲಾಗುವುದು. ಬೆಂಗಳೂರಿನಲ್ಲಿ 400 ಕೆರೆಗಳಿದ್ದವು. ಅನೇಕ ಕೆರೆಗಳು ಹೂಳಿನಿಂದ ತುಂಬಿವೆ ಹಾಗೂ ಒತ್ತುವರಿಯಾಗಿವೆ. ಒತ್ತುವರಿ ತೆರವು ಮಾಡಿ ನೀರು ಹರಿಯಲು ಕಾಲುವೆ ನಿರ್ಮಾಣ ಮಾಡಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ಇಂದು ಮುಖ್ಯಮಂತ್ರಿಗಳು ನಗರದ ವಿವಿಧೆಡೆ ಭೇಟಿ ನೀಡಿ, ಅಭಿವೃದ್ಧಿ ಕಾಮಗಾರಿ ಮತ್ತು ಮಳೆಯಿಂದ ಸಮಸ್ಯೆಗಳಿಗೆ ಒಳಗಾದ ಪ್ರದೇಶಗಳನ್ನು ಪರಿಶೀಲನೆ ನಡೆಸಿ ಬಳಿಕ ಇದನ್ನು ಹೇಳಿದ್ದಾರೆ.

ಜೂನ್ ತಿಂಗಳಿನಿಂದ ಮುಂಗಾರು ಪ್ರಾರಂಭವಾಗಲಿದೆ. ವಾಡಿಕೆ ಮಳೆಗಿಂತ ಹೆಚ್ಚು ಮಳೆಯಾಗಿ ಪ್ರವಾಹ ಉಂಟಾಗಲಿದೆ ಎಂದು ವರದಿಯಾಗಿರುವ ಹಿನ್ನೆಲೆಯಲ್ಲಿ ಸಿಟಿ ರೌಂಡ್ಸ್ ನಡೆಸಲಾಗಿದೆ. ಇತ್ತೀಚೆಗೆ ಸುರಿದ ಮಳೆಗೆ ಯಲಹಂಕದಲ್ಲಿ 20 ಮನೆಗಳಿಗೆ ನೀರು ನುಗ್ಗಿದೆ. ಮುಯಮಂತ್ರಿಗಳು ತಿಳಿಸುವ ಪ್ರಕಾರ, ಬೆಂಗಳೂರು ನಗರದಲ್ಲಿ 860 ಕಿಮೀ ರಾಜಕಾಲುವೆ ಇದೆ. ಸಿದ್ದರಾಮಯ್ಯನವರ ಹಿಂದಿನ ಅವಧಿಯಲ್ಲಿ 491 ಕಿಮೀ ರಾಜಕಾಲುವೆಯನ್ನು ತೆರವು ಮಾಡಲಾಗಿತ್ತು. ಹಿಂದಿನ ಸರ್ಕಾರ 193 ಕಿಮೀ ತೆರವು ಮಾಡಿದೆ. ಸದ್ಯ ರಾಜಕಾಲುವೆ ತೆರವಿಗೆ 1800 ಕೋಟಿ ರೂ. ವೆಚ್ಚವಾಗುತ್ತಿದೆ. 174 ಕಿಮೀ ಉಳಿದಿದೆ. ವಿಶ್ವ ಬ್ಯಾಂಕ್ ಸುಮಾರು 2000 ಕೋಟಿ ರೂಪಾಯಿ ನೀಡಲಿದೆ. 12.15 ಕಿಮೀ ದೂರದ ಕಾಲುವೆ ಪ್ರಕರಣ ಸಿವಿಲ್ ನ್ಯಾಯಾಲಯದಲ್ಲಿವೆ.

ಜೂನ್‌ ಇನ್ನೇನು ಒಂದು ವಾರದಲ್ಲಿ ಬರಲಿದೆ. ಮುಂಗಾರು ಆರಂಭವಾಗಲಿದೆ. ಮಲೆನಾಡು ಹಾಗೂ ಬಯಲುಸೀಮೆಯ ಕೃಷಿಕ ಜನತೆಗೆ ಇರುವ ಮುಂಗಾರಿನ ಸಿದ್ಧತೆಯ ಜ್ಞಾನ ನಗರದ ಮಹಾಜನತೆಗೆ ಇಲ್ಲ. ಹೀಗಾಗಿ ಮುಂಗಾರಿನ ಆರಂಭದಲ್ಲಿ ಅಪ್ಪಳಿಸುವ ಮಳೆಗೆ, ಮಹಾನಗರ ಸಿದ್ಧವಾಗಿರುವುದಿಲ್ಲ. ಹೀಗಾಗಿಯೇ ರಾಜಕಾಲುವೆಗಳು ಕಸ ತುಂಬಿ ಕಟ್ಟಿಕೊಳ್ಳುವುದು, ರಸ್ತೆಗಳಲ್ಲಿ ನೀರು ನಿಲ್ಲುವುದು ಹಳೆಯ ಹಾಗೂ ದುರ್ಬಲ ಮರಗಳು ಬೀಳುವುದು, ಶಿಥಿಲ ಟ್ರಾನ್ಸ್‌ಫಾರ್ಮರ್‌ಗಳು ಹಾಗೂ ವಿದ್ಯುತ್‌ ಕಂಬಗಳು, ತೆರೆದ ಮ್ಯಾನ್‌ಹೋಲ್‌ಗಳು ಸಾವಿನರಮನೆಗಳಾಗುವುದನ್ನು ಕಾಣುತ್ತೇವೆ. ವಿಳಂಬವಾಗಿರುವ ರಾಜಕಾಲುವೆ ತೆರವು ಹಾಗೂ ಸ್ವಚ್ಛತೆ ಕಾಮಗಾರಿಗಳನ್ನು ತ್ವರಿತಗೊಳಿಸಬೇಕು, ಹೂಳೆತ್ತಬೇಕು. ರಾಜಕಾಲುವೆಗೆ ಕಸ ಹಾಕುವುದನ್ನು ತಡೆಗಟ್ಟಲು ಕಠಿಣ ಕ್ರಮ ಕೈಗೊಳ್ಳಬೇಕು. ಬೆಂಗಳೂರು ನಗರದಲ್ಲಿ ವಾರ್ಡ್ ರಸ್ತೆಗಳಲ್ಲಿ 5500 ಗುಂಡಿಗಳು ಬಿದ್ದಿವೆ ಎಂಬ ಲೆಕ್ಕ ಇವೆ. ನಾಲ್ಕು ಮಳೆಗೆ ರಸ್ತೆಗುಂಡಿಗಳು ಮರಣಕೂಪಗಳಾಗುತ್ತವೆ. ಇವುಗಳನ್ನು ಮುಚ್ಚಿಸಬೇಕು.

ರಾಜಕಾಲುವೆಗಳ ನಿರ್ವಹಣೆಗೆ ಶಾಶ್ವತವಾದ ಒಂದು ವ್ಯವಸ್ಥೆಯನ್ನೇ ರೂಪಿಸಬೇಕಿದೆ. ರಾಜಕಾಲುವೆ ಹಾಗೂ ಒಳಚರಂಡಿ ವ್ಯವಸ್ಥೆಗಳು ಪ್ರತ್ಯೇಕವಾಗಿರಬೇಕು. ಆದರೆ ನಗರದ ಎಷ್ಟೋ ಕಡೆ ಅವು ಒಟ್ಟಾಗಿವೆ. ಇದು ತಪ್ಪಬೇಕು. ಇನ್ನು ರಾಜಕಾಲುವೆಯ ಒತ್ತುವರಿ ಪ್ರಭಾವಿಗಳಿಂದಲೇ ಆಗಿರುವುದು ಹೆಚ್ಚು. ಕಾನೂನಾತ್ಮಕ ಅಡ್ಡಿಆತಂಕಗಳನ್ನು ಸೃಷ್ಟಿಸುವವರೂ ಇವರೇ. ಇವರನ್ನು ಎದುರಿಸಲು ಸರ್ಕಾರ ಇನ್ನಷ್ಟು ಸನ್ನದ್ಧವಾಗಬೇಕು. ಮನೆಗಳಲ್ಲಿ ಮಳೆ ನೀರು ಕೊಯ್ಲಿಗೆ ವ್ಯವಸ್ಥೆಯಾದರೂ ಇರಬೇಕು. ಇಲ್ಲವಾದರೆ ರಾಜಕಾಲುವೆಗಳಿಗಾದರೂ ಅದು ಸೇರಬೇಕು. ಎರಡೂ ಇಲ್ಲದೆ ಹೋದರೆ ಕೃತಕ ಪ್ರವಾಹ ಸೃಷ್ಟಿಯಾಗುತ್ತದೆ. ಈ ಕೃತಕ ಪ್ರವಾಹಗಳಿಂದ ಜನಜೀವನ ಅಸ್ತವ್ಯಸ್ಥಗೊಂಡು, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ವಲಯದಲ್ಲಿಯೂ ರಾಜಧಾನಿಗೆ ಕೆಟ್ಟ ಹೆಸರು ಬರುತ್ತದೆ. ಮೂಲಸೌಕರ್ಯ ಸರಿಯಿಲ್ಲ ಎಂದು ಇತರ ನಗರಗಳು ನಮ್ಮ ಅವಕಾಶವನ್ನು ಕಸಿಯುತ್ತವೆ. ನಾಲ್ಕಾರು ಕಂಪನಿಗಳು ಬೆಂಗಳೂರಿನ ಇನ್‌ಫ್ರಾಸ್ಟ್ರಕ್ಚರ್‌ ಕಳಪೆ ಎಂದು ಒಂದು ಮಾತು ಹೇಳಿದರೂ ಅದು ವಾಣಿಜ್ಯಾತ್ಮಕವಾಗಿ ಕಪ್ಪು ಚುಕ್ಕೆ. ಆದ್ದರಿಂದ, ಮುಂಗಾರಿಗೆ ಮುನ್ನವೇ ಈ ಮುನ್ನೆಚ್ಚರಿಕೆ ವ್ಯವಸ್ಥೆಗಳನ್ನು ರೂಪಿಸಿಕೊಂಡು ಸನ್ನದ್ಧರಾಗಬೇಕಿದೆ.

ಇದನ್ನೂ ಓದಿ: PM Narendra Modi: ಅಡಿಕೆ, ಸಿರಿಧಾನ್ಯ, ಮೀನುಗಾರಿಕೆ ಪ್ರಸ್ತಾಪಿಸಿ ಕೃಷಿಕರ ಮನ ಗೆದ್ದ ಮೋದಿ

Continue Reading
Advertisement
Nataša Stanković
ಕ್ರೀಡೆ9 mins ago

Nataša Stanković: ಹಾರ್ದಿಕ್ ಪಾಂಡ್ಯ ಜತೆ ವಿಚ್ಛೇದನ?; ಅನುಮಾನಕ್ಕೆ ತೆರೆ ಎಳೆದ ಪತ್ನಿ ನತಾಶಾ

Drowns in Lake
ಕರ್ನಾಟಕ18 mins ago

Drowns in Lake: ಕೆರೆಯಲ್ಲಿ ಮುಳುಗಿ ಯುವಕ ಸಾವು; ಸಾಲ ಬಾಧೆ ತಾಳಲಾರದೆ ರೈತ ಆತ್ಮಹತ್ಯೆ

Vijayanagara SP Shriharibabu drives to blood donation camp in Hosapete
ಆರೋಗ್ಯ19 mins ago

Vijayanagara News: ಹೊಸಪೇಟೆಯಲ್ಲಿ ರಕ್ತದಾನ ಶಿಬಿರಕ್ಕೆ ಎಸ್ಪಿ ಶ್ರೀಹರಿಬಾಬು ಚಾಲನೆ

Mantralaya Sri Subudhendra Theertha Swamiji ashirvachan
ಮೈಸೂರು20 mins ago

Mysore News: ಶಾಸ್ತ್ರ ಜ್ಞಾನಕ್ಕೆ ಪ್ರಪಂಚದ ಎಲ್ಲೆಡೆ ಮಾನ್ಯತೆ: ಮಂತ್ರಾಲಯ ಶ್ರೀ

Tumkur Lok Sabha Constituency
ಪ್ರಮುಖ ಸುದ್ದಿ35 mins ago

Tumkur Lok Sabha Constituency: ತುಮಕೂರಿನ ಅದೃಷ್ಟ ಪರೀಕ್ಷೆಯಲ್ಲಿ ಗೆಲ್ಲುವರೇ ವಿ. ಸೋಮಣ್ಣ?

Prajwal Revanna Case
ಕರ್ನಾಟಕ47 mins ago

Prajwal Revanna Case: ಹೈಕೋರ್ಟ್‌ಗೆ ಮತ್ತೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ ಭವಾನಿ ರೇವಣ್ಣ

Road Accident
ಶಿವಮೊಗ್ಗ48 mins ago

Road Accident : ಎದುರಿಗೆ ಬಂದ ಬೈಕ್‌ ತಪ್ಪಿಸಲು ಹೋಗಿ ಮಹಿಳೆಗೆ ಗುದ್ದಿದ ಕಾರು; ಎಗರಿ ಬಿದ್ದವಳು ಸ್ಥಳದಲ್ಲೇ ಸಾವು

Anant-Radhika Bash legendary singer Andrea Bocelli performs
ಬಾಲಿವುಡ್50 mins ago

Anant-Radhika Bash: ಪ್ರಿ ವೆಡ್ಡಿಂಗ್‌ನಲ್ಲಿ ಮಿಂಚಿದ ರಾಧಿಕಾ ಮರ್ಚಂಟ್‌; ಸಂಗೀತ ಪ್ರದರ್ಶನಕ್ಕೆ ಮನಸೋತ ಅತಿಥಿಗಳು!

PM Narendra Modi
ರಾಜಕೀಯ54 mins ago

PM Narendra Modi: ವಿಕಸಿತ ಭಾರತಕ್ಕೆ ಭದ್ರ ಅಡಿಪಾಯ; ದೇಶದ ಜನತೆಗೆ ಮೋದಿ ಭಾವುಕ ಪತ್ರ

Election Commission of india
ದೇಶ57 mins ago

Election Commission of India: “64 ಕೋಟಿ ಜನರಿಂದ ಮತದಾನ; ವಿಶ್ವದಾಖಲೆ ಬರೆದ ಭಾರತ”- ಚು.ಆಯೋಗ ಶ್ಲಾಘನೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 day ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು2 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ4 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ6 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು6 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ7 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 week ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ2 weeks ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

ಟ್ರೆಂಡಿಂಗ್‌