Maoists killed: ಭದ್ರತಾ ಪಡೆಗಳ ಜತೆ ಗುಂಡಿನ ಚಕಮಕಿ, ಏಳು ಮಾವೋವಾದಿಗಳು ಫಿನಿಶ್ - Vistara News

ಪ್ರಮುಖ ಸುದ್ದಿ

Maoists killed: ಭದ್ರತಾ ಪಡೆಗಳ ಜತೆ ಗುಂಡಿನ ಚಕಮಕಿ, ಏಳು ಮಾವೋವಾದಿಗಳು ಫಿನಿಶ್

Maoists killed: ಹೆಚ್ಚಾಗಿ ನಕ್ಸಲೀಯರ ಓಡಾಟವಿರುವ ನಾರಾಯಣಪುರ-ಕಂಕೇರ್ ಗಡಿಯಲ್ಲಿರುವ ಅಬುಜ್ಮದ್ ಕಾಡಿನಲ್ಲಿ ಈ ಘರ್ಷಣೆ ನಡೆಯಿತು. ಅಲ್ಲಿ ಮೀಸಲು ಪೊಲೀಸ್ ಮಹಾನಿರ್ದೇಶನಾಲಯ (ಡಿಆರ್‌ಜಿ) ಮತ್ತು ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಸಿಬ್ಬಂದಿ ಮಂಗಳವಾರ ಬೆಳಿಗ್ಗೆ ಶಂಕಿತ ಮಾವೋವಾದಿಗಳೊಂದಿಗೆ ಗುಂಡಿನ ಚಕಮಕಿ ನಡೆಸಿದರು.

VISTARANEWS.COM


on

maoists killed bastar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೊಸದಿಲ್ಲಿ:‌ ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ (Security forces) ನಡೆದ ಗುಂಡಿನ ಚಕಮಕಿಯಲ್ಲಿ (encounter) ಕನಿಷ್ಠ ಏಳು ಮಾವೋವಾದಿಗಳು (Maoists killed) ಹತರಾಗಿದ್ದಾರೆ. ಕಂಕೇರ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಭೀಕರ ಗುಂಡಿನ ಚಕಮಕಿಯ ನಂತರ ಇಬ್ಬರು ಮಹಿಳಾ ಕಾರ್ಯಕರ್ತರು ಸೇರಿದಂತೆ ಏಳು ಮಾವೋವಾದಿಗಳ ಮೃತದೇಹಗಳು ಪತ್ತೆಯಾಗಿವೆ.

ಹೆಚ್ಚಾಗಿ ನಕ್ಸಲೀಯರ ಓಡಾಟವಿರುವ ನಾರಾಯಣಪುರ-ಕಂಕೇರ್ ಗಡಿಯಲ್ಲಿರುವ ಅಬುಜ್ಮದ್ ಕಾಡಿನಲ್ಲಿ ಈ ಘರ್ಷಣೆ ನಡೆಯಿತು. ಅಲ್ಲಿ ಮೀಸಲು ಪೊಲೀಸ್ ಮಹಾನಿರ್ದೇಶನಾಲಯ (ಡಿಆರ್‌ಜಿ) ಮತ್ತು ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಸಿಬ್ಬಂದಿ ಮಂಗಳವಾರ ಬೆಳಿಗ್ಗೆ ಶಂಕಿತ ಮಾವೋವಾದಿಗಳೊಂದಿಗೆ ಗುಂಡಿನ ಚಕಮಕಿ ನಡೆಸಿದರು.

“ನಾರಾಯಣಪುರ-ಕಂಕೇರ್ ಗಡಿ ಪ್ರದೇಶದ ಅಬುಜ್ಮದ್‌ನಲ್ಲಿ ಇಂದು ಬೆಳಿಗ್ಗೆಯಿಂದ ಡಿಆರ್‌ಜಿ ಮತ್ತು ಎಸ್‌ಟಿಎಫ್ ಮತ್ತು ನಕ್ಸಲೀಯರ ನಡುವೆ ಎನ್‌ಕೌಂಟರ್ ನಡೆಯುತ್ತಿದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ಎಎನ್‌ಐಗೆ ತಿಳಿಸಿದ್ದಾರೆ. “ಎಲ್ಲಾ ಭದ್ರತಾ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ. ಎನ್‌ಕೌಂಟರ್ ಇನ್ನೂ ನಡೆಯುತ್ತಿದೆ. ಸಾವುನೋವುಗಳ ಅಂತಿಮ ಸಂಖ್ಯಯನ್ನು ಈಗ ಹೇಳಲು ಆಗದು” ಎಂದು ಅಧಿಕಾರಿ ತಿಳಿಸಿದ್ದಾರೆ.

ಇತ್ತೀಚೆಗೆ ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಭೀಕರ ಎನ್‌ಕೌಂಟರ್‌ನಲ್ಲಿ 29 ಮಾವೋವಾದಿಗಳು ಹತರಾದ ಕೆಲವು ದಿನಗಳ ನಂತರ ಈ ಕಾರ್ಯಾಚರಣೆ ನಡೆದಿದೆ. ಅವರಲ್ಲಿ ಹಿರಿಯ ಮಾವೋವಾದಿ ನಾಯಕರಾದ ಶಂಕರ್ ರಾವ್ ಮತ್ತು ಲಲಿತಾ ಮೆರವಿ ಅವರ ತಲೆಯ ಮೇಲೆ ₹8 ಲಕ್ಷ ಬಹುಮಾನವನ್ನು ಘೋಷಿಸಲಾಗಿತ್ತು. ಇದಾದ ಬಳಿಕ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ನಕ್ಸಲರನ್ನು ಹತ್ಯೆಗೈದ ಭದ್ರತಾ ಸಿಬ್ಬಂದಿಯನ್ನು ಅಭಿನಂದಿಸಿದ್ದು, ಸದ್ಯದಲ್ಲೇ ಛತ್ತೀಗಢ ಮತ್ತು ಭಾರತ ನಕ್ಸಲ್‌ ಮುಕ್ತವಾಗಲಿದೆ ಎಂದು ಹೇಳಿದ್ದರು.

ಛತ್ತೀಸ್‌ಗಢವು ಹಲವು ದಶಕಗಳಿಂದ ನಕ್ಸಲೈಟ್‌, ಮಾವೋವಾದಿಗಳ ಭೀತಿ ಎದುರಿಸುತ್ತಿದೆ. ವಿಶೇಷವಾಗಿ ಬಸ್ತಾರ್ ಪ್ರದೇಶವು ನಕ್ಸಲ್ ಚಟುವಟಿಕೆಗಳ ಕೇಂದ್ರ ಸ್ಥಾನವಾಗಿದೆ. ಇಲ್ಲಿ ಆಗಾಗ ಹಿಂಸಾಚಾರ ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್‌ ನಡೆಯುತ್ತಲೇ ಇರುತ್ತದೆ. ನಕ್ಸಲರ ಹಾವಳಿಯನ್ನು ತಡೆಗಟ್ಟಲು ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ.

ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತಾ ಪಡೆಗಳನ್ನು ನಿಯೋಜಿಸುವುದು, ಸ್ಥಳೀಯ ಅಭಿವೃದ್ಧಿಗೆ ಆದ್ಯತೆ ನೀಡುವುದು ಮತ್ತು ಶರಣಾಗುವ ನಕ್ಸಲರಿಗೆ ಪುನರ್ವಸತಿ ಕಲ್ಪಿಸುವುದು ಸೇರಿದಂತೆ ವಿವಿಧ ಯೋಜನೆಗಳನ್ನು ಹಮ್ಮಿಕೊಂಡಿದೆ. ಆದಾಗ್ಯೂ ಈ ಪ್ರಯತ್ನಗಳ ಹೊರತಾಗಿಯೂ ರಾಜ್ಯದಲ್ಲಿ ನಕ್ಸಲ್ ಹಾವಳಿ ಮುಂದುವರಿದಿದೆ.

ಇದನ್ನೂ ಓದಿ: Kanker Encounter: ಎನ್‌ಕೌಂಟರ್‌ನಲ್ಲಿ 29 ಮಾವೋವಾದಿಗಳ ಹತ್ಯೆಗೈದ ಭದ್ರತಾ ಪಡೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Actor Chetan Ahimsa: ಬಿಜೆಪಿ ಸಂವಿಧಾನ ಬದಲಿಸಲ್ಲ; ಭ್ರಷ್ಟಾಚಾರದಲ್ಲಿ ಕಾಂಗ್ರೆಸ್ ಏನೂ ಕಮ್ಮಿ ಇಲ್ಲ ಎಂದ ನಟ ಚೇತನ್!

Actor Chetan Ahimsa: ಬಿಜೆಪಿ ಸಂವಿಧಾನ ಬದಲಾವಣೆ ಮಾಡುತ್ತೆ ಎಂಬ ಕಾಂಗ್ರೆಸ್ ಆರೋಪಗಳ ಬಗ್ಗೆ ಮಡಿಕೇರಿಯಲ್ಲಿ ನಟ, ಹೋರಾಟಗಾರ ಚೇತನ್ ಅಹಿಂಸಾ ಪ್ರತಿಕ್ರಿಯಿಸಿದ್ದಾರೆ. ಇನ್ನು ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದಲ್ಲಿ ಸಿಎಂ ಸೂಚನೆಗೆ ಮೊದಲೇ ಸಚಿವ ನಾಗೇಂದ್ರ ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದ್ದಾರೆ.

VISTARANEWS.COM


on

Actor Chetan Ahimsa
Koo

ಕೊಡಗು: ಬಿಜೆಪಿ ಸಂವಿಧಾನ ಬದಲಾವಣೆ ಮಾಡುತ್ತದೆ ಎಂಬುವುದು ವಿರೋಧ ಪಕ್ಷಗಳ ಗುಮ್ಮ, ಆ ಆರೋಪಗಳನ್ನು ನಾನೂ ಒಪ್ಪಲ್ಲ. ಕಾಂಗ್ರೆಸ್ ಕೂಡ ಸಂವಿಧಾನ ವಿರೋಧಿಯಾಗಿದ್ದು, ಸಂವಿಧಾನ ಹೈಜಾಕ್ ಮಾಡಲು ಕಾಂಗ್ರೆಸ್‌ಗೆ ಯಾವುದೇ ನೈತಿಕ ಹಕ್ಕಿಲ್ಲ. ಇನ್ನು ಭ್ರಷ್ಟಾಚಾರದಲ್ಲಿ ಕಾಂಗ್ರೆಸ್ ಏನೂ ಕಡಿಮೆಯಿಲ್ಲ ಎಂದು ನಟ, ಹೋರಾಟಗಾರ ಚೇತನ್ ಅಹಿಂಸಾ (Actor Chetan Ahimsa) ಹೇಳಿದ್ದಾರೆ.

ಬಿಜೆಪಿ ಸಂವಿಧಾನ ಬದಲಾವಣೆ ಮಾಡುತ್ತೆ ಎಂಬ ಕಾಂಗ್ರೆಸ್ ಆರೋಪಗಳ ಬಗ್ಗೆ ಮಡಿಕೇರಿಯಲ್ಲಿ ಪ್ರತಿಕ್ರಿಯಿಸಿ, ಕೇಂದ್ರದಲ್ಲಿ ಮತ್ತೊಮ್ಮೆ ಎನ್‌ಡಿಎ ಸರ್ಕಾರ ಬರುತ್ತದೆ ಎಂದು ಎಕ್ಸಿಟ್ ಪೋಲ್ ಫಲಿತಾಂಶದಲ್ಲಿ ತಿಳಿದುಬಂದಿದೆ. ಆದ್ದರಿಂದ ಎಲ್ಲರೂ ಇದನ್ನು ಒಪ್ಪಬೇಕಾಗುತ್ತದೆ. ಈ ಬಾರಿಯೂ ಮೋದಿ‌ ಸರಕಾರ ಬರುತ್ತದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | Lok Sabha Election 2024: ವಿಜಯೋತ್ಸವಕ್ಕೆ ಬಿಜೆಪಿ ಪ್ಲ್ಯಾನ್‌ ಹೇಗಿದೆ? ಈಗಿನಿಂದಲೇ ಶುರು ಭರ್ಜರಿ ತಯಾರಿ

ಬಿಜೆಪಿ ಸಂವಿಧಾನ ಬದಲಾವಣೆ ಮಾಡುತ್ತದೆ ಎಂಬುವುದು ಬಿಜೆಪಿ ವಿರೋಧಿ ಪಕ್ಷಗಳ ಗುಮ್ಮ. ಅದನ್ನು ನಾನೂ ಒಪ್ಪಲ್ಲ. ಬಿಜೆಪಿ ಎಷ್ಟೋ ವಿಚಾರದಲ್ಲಿ ಸಂವಿಧಾನ ವಿರೋಧಿ ಇದೆ, ಅದೇ ರೀತಿ ಕಾಂಗ್ರೆಸ್ ಕೂಡ. ಆದರೆ, ಸಂವಿಧಾನ ಉಳಿಸುತ್ತಿರುವವರು ನಮ್ಮಂತಹ ಸಮಾನತವಾದಿಗಳು. ಸಂವಿದಾನ ಹೈಜಾಕ್ ಮಾಡಲು ಕಾಂಗ್ರೆಸ್‌ಗೆ ಯಾವುದೇ ನೈತಿಕ ಹಕ್ಕಿಲ್ಲ ಎಂದು ಕಿಡಿಕಾರಿದ್ದಾರೆ.

ಸಿಎಂ ಸೂಚನೆಗೆ ಮೊದಲೇ ಸಚಿವ ನಾಗೇಂದ್ರ ರಾಜೀನಾಮೆ ಕೊಡಲಿ

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದ ಬಗ್ಗೆ ನಟ ಚೇತನ್ ಪ್ರತಿಕ್ರಿಯಿಸಿ, ಸಿಎಂ ಸೂಚನೆಗೆ ಮೊದಲೇ ಸಚಿವ ನಾಗೇಂದ್ರ ರಾಜೀನಾಮೆ ಕೊಡಬೇಕು, ತಪ್ಪಿತಸ್ಥರಿಗೆ ಸರಿಯಾದ ಶಿಕ್ಷೆ ಆಗಬೇಕು. ಸಚಿವ ನಾಗೇಂದ್ರ ಮೈನಿಂಗ್ ಮಾಫಿಯದಲ್ಲಿದ್ದವರು, ಸಚಿವರಾಗಲು ಅವರಿಗೇನು ಯೋಗ್ಯತೆ ಇದೆ? ಭ್ರಷ್ಟಾಚಾರದಲ್ಲಿ ಬಿಜೆಪಿಗಿಂತ ಕಾಂಗ್ರೆಸ್ ಏನೂ ಕಡಿಮೆಯಿಲ್ಲ. ಪ್ರಕರಣವನ್ನು ಸಿಬಿಐಗೆ ಕೊಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ | Prajwal Revanna Case: ಹೈಕೋರ್ಟ್‌ಗೆ ಮತ್ತೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ ಭವಾನಿ ರೇವಣ್ಣ

ಮೀಸಲಾತಿ ಹೆಚ್ಚಳ ಮಾಡಿದ್ದೆ ಬಿಜೆಪಿ; ಸಿಎಂ ವಿರುದ್ಧ ಕಿಡಿ

ಮೀಸಲಾತಿ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ನಟ ಚೇತನ್ ವಾಗ್ದಾಳಿ ನಡೆಸಿದ್ದು, ಸಿದ್ದರಾಮಯ್ಯ ಅವರು ಬಿಜೆಪಿ ಮೀಸಲಾತಿ ವಿರೋಧಿ ಎನ್ನುತ್ತಾರೆ. ಆದರೆ, ಮೀಸಲಾತಿ ಹೆಚ್ಚಳ ಮಾಡಿದ್ದೆ ಬಿಜೆಪಿ. ಬೊಮ್ಮಾಯಿ ಸರ್ಕಾರದಲ್ಲಿ ಒಳಮೀಸಲಾತಿ ಸಮಿತಿ ಮಾಡಲಾಗಿತ್ತು. ಈಗಿನ ಸರ್ಕಾರ ಎಲ್ಲವನ್ನು ಕಾರ್ಯರೂಪಕ್ಕೆ ತರಬೇಕು, ಜಾತಿಜನಗಣತಿ ಹೊರಗೆ ಬರಬೇಕು. ಆದರೆ, ಸಿದ್ದರಾಮಯ್ಯ ಇದರಲ್ಲಿ ಮೀನಮೇಷ ಎಣಿಸುತ್ತಿದ್ದಾರೆ. ಲಿಂಗಾಯತ, ಒಕ್ಕಲಿಗರ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದಾರೆ. ಸಿಎಂ ಎಸ್‌ಸಿ- ಎಸ್‌ಟಿ ಒಳ ಮೀಸಲಾತಿಗೆ ಸಮಿತಿ ರಚನೆ ಮಾಡಬೇಕು. ಈ ಮೂಲಕ 49 ಸಮುದಾಯಕ್ಕೆ ನ್ಯಾಯ ಸಿಗಬೇಕು ಎಂದ ಆಗ್ರಹಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೀಡೆ

Nataša Stanković: ಹಾರ್ದಿಕ್ ಪಾಂಡ್ಯ ಜತೆ ವಿಚ್ಛೇದನ?; ಅನುಮಾನಕ್ಕೆ ತೆರೆ ಎಳೆದ ಪತ್ನಿ ನತಾಶಾ

Nataša Stanković: ನತಾಶಾ ಅವರು ಪಾಂಡ್ಯ ಜತೆಗಿನ ಮದುವೆಯ ಹಲವು ಸುಂದರ ಫೋಟೊಗಳನ್ನು ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡು ನಮ್ಮ ಮಧ್ಯೆ ಯಾವುದೇ ಮನಸ್ತಾಪವಿಲ್ಲ ಎನ್ನುವಂತೆ ಎಲ್ಲ ಅನುಮಾನಕ್ಕೆ ತೆರೆ ಎಳೆದಿದ್ದಾರೆ.

VISTARANEWS.COM


on

Nataša Stanković
Koo

ಮುಂಬಯಿ: ಹಾರ್ದಿಕ್ ಪಾಂಡ್ಯ(Hardik Pandya) ಮತ್ತು ನತಾಶಾ ಸ್ಟಾನ್‌ಕೋವಿಕ್‌(Nataša Stanković) ಅವರ ವಿವಾಹ ಮುರಿದು ಬಿದ್ದಿದೆಯೇ?, ಈ ಜೋಡಿ ವಿಚ್ಛೇದನಕ್ಕೆ ಪಡೆಯಲಿದೆಯೇ? ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಕೆಲವು ದಿನಗಳ ಹಿಂದೆ ಭಾರಿ ಚರ್ಚೆಯಾಗುತ್ತಿತ್ತು. ಇದರ ಮಧ್ಯ ಈ ಜೋಡಿಯ ಸಾಮಾಜಿಕ ಜಾಲತಾಣಗಳ ಒಂದೊಂದು ಪೋಸ್ಟ್​ಗಳು ಕೂಡ ಹಲವು ಅನುಮಾನಕ್ಕೆ ಎಡೆಮಾಡಿಕೊಟ್ಟಿತ್ತು. ಆದರೆ, ಇದೀಗ ಈ ಜೋಡಿಯ ಮಧ್ಯೆ ಯಾವುದೇ ಬಿರುಕು ಮೂಡಿಲ್ಲ ಎನ್ನುವ ವಿಚಾರ ಬೆಳಕಿಗೆ ಬಂದಿದೆ.

ವಿಚ್ಛೇದನದ ಸುದ್ದಿಯ ನಡುವೆ, ನತಾಶಾ ಮೊದಲ ಬಾರಿಗೆ ಪಾಪರಾಜಿಗಳ ಕ್ಯಾಮರಾದಲ್ಲಿ ಸೆರೆಯಾಗಿದ್ದರು. ಬಾಲಿವುಡ್ ಉದಯೋನ್ಮುಖ ನಟಿ ದಿಶಾ ಪಟಾನಿ ಅವರ ಬಾಯ್​ಫ್ರೆಂಡ್​ ಎಂದು ಹೇಳಿಕೊಳ್ಳಲಾಗುತ್ತಿರುವ ವ್ಯಕ್ತಿಯ ಜತೆ ಕಾಣಿಸಿಕೊಂಡಿದ್ದರು. ಈ ವೇಳೆ ನತಾಶಗೆ ಪಾಪರಾಜಿಗಳು ಪಾಂಡ್ಯ ಬಗ್ಗೆ ಪ್ರಶ್ನೆ ಕೇಳಲಾಗಿತ್ತು. ಇದಕ್ಕೆ ನತಾಶ ಯಾವುದೇ ಪ್ರತಿಕ್ರಿಯೆ ನೀಡದೆ ತೆರಳಿದ್ದರು.

ಇದಾಗ ಬಳಿಕ ನತಾಶಾ ಸ್ಟಾನ್‌ಕೋವಿಕ್‌ ಅವರು ಯೇಸುವಿನ ಚಿತ್ರವನ್ನು ಹಂಚಿಕೊಂಡಿದ್ದರು. ಯೇಸು ತನ್ನ ಜಾಡನ್ನು ಹಿಂಬಾಲಿಸಿದಾಗ ಕುರಿಮರಿ ಮುಂದಾಳತ್ವ ವಹಿಸುತ್ತಿರುವ ಫೋಟೊ ಇದಾಗಿತ್ತು. ಈ ಫೋಟೊವನ್ನು ಕಂಡಾಗ ಈ ಜೋಡಿ ಶೀಘ್ರದಲ್ಲೇ ದೂರವಾಗುವುದು ಖಚಿತ ಎನ್ನುವಂತಿತ್ತು. ಅಲ್ಲದೆ ವಿಚ್ಛೇದನದ ಸಂದರ್ಭದಲ್ಲಿ ಹಾರ್ದಿಕ್ ಪಾಂಡ್ಯ ತನ್ನ ಆಸ್ತಿಯಲ್ಲಿ ಶೇ. 70 ಪ್ರತಿಶತವನ್ನು ನತಾಶಾಗೆ ನೀಡಬೇಕಾಗಬಹುದು ಎಂದು ವರದಿಯಾಗಿತ್ತು. ಈ ಎಲ್ಲ ಅನುಮಾನಗಳಿಗೆ ಇದೀಗ ತೆರೆಬಿದ್ದಂತಿದೆ. ಹೌದು, ನತಾಶಾ ಅವರು ಪಾಂಡ್ಯ ಜತೆಗಿನ ಮದುವೆಯ ಹಲವು ಸುಂದರ ಫೋಟೊಗಳನ್ನು ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡು ನಮ್ಮ ಮಧ್ಯೆ ಯಾವುದೇ ಮನಸ್ತಾಪವಿಲ್ಲ ಎನ್ನುವುದನ್ನು ತೋರಿಸಿಕೊಟ್ಟಿದ್ದಾರೆ.

ಇದನ್ನೂ ಓದಿ Hardik Pandya: ಕೌಟುಂಬಿಕ ಸಮಸ್ಯೆ ಬದಿಗೊತ್ತಿ ಭಾರತ ತಂಡದ ಯಶಸ್ಸಿಗಾಗಿ ಕ್ರಿಕೆಟ್​ ಅಭ್ಯಾಸ ಆರಂಭಿಸಿದ ಹಾರ್ದಿಕ್​ ಪಾಂಡ್ಯ

ಪ್ರಚಾರಕ್ಕಾಗಿ ಮಾಡಿದ್ದೇ?


ಕೆಲ ಮೂಲಗಳ ಪ್ರಕಾರ ವಿಚ್ಚೇದನದ ಸುದ್ದಿ ಪಿಆರ್‌ ತಂಡ ಮಾಡಿದ ಪಬ್ಲಿಕ್‌ ಸ್ಟಂಟ್‌ ಎಂದು ಹೇಳಲಾಗಿದೆ. ಇದೇ ಕಾರಣಕ್ಕೆ ನತಾಶ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪಾಂಡ್ಯ ಜತೆಗಿನ ಫೋಟೊಗಳನ್ನು ಡಿಲೀಟ್​ ಮಾಡಿ ಈಗ ಹಳೆಯ ಫೋಟೋಗಳನ್ನು ರೀಸ್ಟೋರ್‌ ಮಾಡುತ್ತಿರುವುದಾಗಿ ತಿಳಿದುಬಂದಿದೆ.

ಹಾರ್ದಿಕ್‌ ಮತ್ತು ನತಾಶಾ ಕಳೆದ 2020ರಲ್ಲೇ ರಿಜಿಸ್ಟರ್‌ ರೀತಿಯಲ್ಲಿ ವಿವಾಹವಾಗಿದ್ದರು. ಮದುವೆಗೂ ಮುನ್ನವೇ ನತಾಶಾ ಅವರು ಗರ್ಭಿಣಿ ಆಗಿದ್ದರು. ಈ ಜೋಡಿಗೆ ಒಬ್ಬ ಪುತ್ರನಿದ್ದಾನೆ. ಈತನ ಹೆಸರು ಅಗಸ್ತ್ಯ. ಕಳೆದ ವರ್ಷ ಫೆ.14 ರಂದು ರಾಜಸ್ಥಾನದ ಉದಯ್‌ಪುರದಲ್ಲಿ ಕ್ರಿಷ್ಚಿಯನ್‌ ಸಂಪ್ರದಾಯದಂತೆ ಹಾರ್ದಿಕ್‌ ಮತ್ತು ನತಾಶಾ ಮತ್ತೊಮ್ಮೆ ಅದ್ದೂರಿಯಾಗಿ ಪುನರ್‌ ವಿವಾಹವಾಗಿದ್ದರು. ಕುಟುಂಬಸ್ಥರು ಮತ್ತು ಗೆಳೆಯರ ಸಮ್ಮುಖದಲ್ಲಿ ಮತ್ತೊಮ್ಮೆ ವಿವಾಹವಾಗಿದ್ದರು. ಇವರ ವಿವಾಹ ಸಮಾರಂಭದಲ್ಲಿ ಕೊಹ್ಲಿ-ಅನುಷ್ಕಾ, ರಾಹುಲ್‌-ಅಥಿಯಾ, ರಾಕಿಣಗ್​ ಸ್ಟಾರ್ ಯಶ್​ ಸೇರಿ ಹಲವು ಗಣ್ಯರೂ ಭಾಗಿಯಾಗಿದ್ದರು. ಪುನರ್‌ ವಿವಾಹವಾಗಿದ್ದ ಫೋಟೊವನ್ನೇ ಈಗ ನತಾಶ ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿರುವುದು.

Continue Reading

ಪ್ರಮುಖ ಸುದ್ದಿ

Tumkur Lok Sabha Constituency: ತುಮಕೂರಿನ ಅದೃಷ್ಟ ಪರೀಕ್ಷೆಯಲ್ಲಿ ಗೆಲ್ಲುವರೇ ವಿ. ಸೋಮಣ್ಣ?

Tumkur Lok Sabha Constituency: ಈ ಬಾರಿ ಬೆಂಗಳೂರಿನ ಗೋವಿಂದರಾಜನಗರದ ಮಾಜಿ ಶಾಸಕ ವಿ.ಸೋಮಣ್ಣ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. 2014ರ ಚುನಾವಣೆಯಲ್ಲಿ ಬಿಜೆಪಿಯಿಂದ ವಿ.ಸೋಮಣ್ಣ ವಿರುದ್ಧ ಸ್ಪರ್ಧಿಸಿದ್ದ ಎಸ್.ಪಿ.ಮುದ್ದಹನುಮೇಗೌಡ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ.

VISTARANEWS.COM


on

Tumkur Lok Sabha Constituency
Koo

ತುಮಕೂರು ಲೋಕಸಭಾ ಕ್ಷೇತ್ರವು ಬೆಂಗಳೂರಿನಿಂದ 70 ಕಿ.ಮೀ ದೂರದಲ್ಲಿದೆ. ತುಮಕೂರು ನಗರವು ರೇಷ್ಮೆ ಮತ್ತು ಹತ್ತಿ, ಜೊತೆಗೆ ಹಾಲು ಮತ್ತು ಡೈರಿ ಉತ್ಪನ್ನಗಳ ಉತ್ಪಾದನೆಗೆ ಹೆಸರುವಾಸಿ. ತುಮಕೂರು ಲೋಕಸಭಾ ಕ್ಷೇತ್ರವು ಆರಂಭದಲ್ಲಿ ಮೈಸೂರು ರಾಜ್ಯದ ಭಾಗವಾಗಿತ್ತು, ಆದರೆ 1977ರ ನಂತರ ಇದನ್ನು ಕರ್ನಾಟಕಕ್ಕೆ ಸೇರಿಸಲಾಯಿತು. ಒಟ್ಟು 16 ಲೋಕಸಭಾ ಚುನಾವಣೆಗಳಲ್ಲಿ ಕಾಂಗ್ರೆಸ್ 10 ಬಾರಿ ಗೆಲುವು ಸಾಧಿಸಿದ್ದರೆ, ತುಮಕೂರು ಕ್ಷೇತ್ರವನ್ನು ಬಿಜೆಪಿ 4 ಬಾರಿ ವಶಪಡಿಸಿಕೊಂಡಿದೆ. ಈ ಬಾರಿ ಬೆಂಗಳೂರಿನ ಗೋವಿಂದರಾಜನಗರದ ಮಾಜಿ ಶಾಸಕ ವಿ. ಸೋಮಣ್ಣ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. 2014ರ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಎಸ್.ಪಿ.ಮುದ್ದಹನುಮೇಗೌಡ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ.

ತುಮಕೂರು ಲೋಕಸಭಾ ಕ್ಷೇತ್ರವನ್ನು ವಿಶೇಷವಾಗಿ ಕಾಂಗ್ರೆಸ್ ನ ಭದ್ರಕೋಟೆ ಎಂದು ಪರಿಗಣಿಸಲಾಗಿದೆ. ಆದರೆ ಕಳೆದ ಮೂರು ದಶಕಗಳಲ್ಲಿ ಬಿಜೆಪಿ ಈ ಸ್ಥಾನವನ್ನು ನಾಲ್ಕು ಬಾರಿ ಗೆದ್ದಿದೆ. ಅಲ್ಲದೆ, 2019ರ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಹಾಗೂ ಮಾಜಿ ಪ್ರಧಾನಿ ಎಚ್ .ಡಿ.ದೇವೇಗೌಡ ಅವರೇ ಸೋತಿದ್ದರು. ಬಿಜೆಪಿಯ ಜಿ. ಎಸ್ ಬಸವರಾಜು ಅವರು ಗೆಲುವು ಕಂಡಿದ್ದರು.

ಹಿಂದಿನ ಫಲಿತಾಂಶಗಳು

2019ರ ಸಾರ್ವತ್ರಿಕ ಚುನಾವಣೆಯಲ್ಲಿ ಜಿ.ಎಸ್.ಬಸವರಾಜು ಅವರು ಜೆಡಿಎಸ್​ನ ಅಭ್ಯರ್ಥಿ ಎಚ್.ಡಿ.ದೇವೇಗೌಡ ಅವರನ್ನು 13,339 ಮತಗಳ ಅಂತರದಿಂದ ಸೋಲಿಸಿದ್ದರು. 2019ರ ಚುನಾವಣೆಯಲ್ಲಿ ಬಿಜೆಪಿ ಶೇ.47.86ರಷ್ಟು ಮತಗಳನ್ನು ಪಡೆದಿತ್ತು.

2014ರ ಸಾರ್ವತ್ರಿಕ ಚುನಾವಣೆಯಲ್ಲಿ ಮುದ್ದಹನುಮೇಗೌಡ ಎಸ್.ಪಿ ಅವರು ಬಿಜೆಪಿಯ ಜಿ.ಎಸ್.ಬಸವರಾಜು ಅವರನ್ನು 74,041 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. ಕಾಂಗ್ರೆಸ್ 39.03% ಮತಗಳನ್ನು ಗಳಿಸಿದೆ.

2009ರ ಸಾರ್ವತ್ರಿಕ ಚುನಾವಣೆಯಲ್ಲಿ ಜಿ.ಎಸ್.ಬಸವರಾಜು ಅವರು ಜೆಡಿಎಸ್​ನ ಮುದ್ದಹನುಮೇಗೌಡ ಅವರನ್ನು 21,445 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. ಈ ಕ್ಷೇತ್ರದಲ್ಲಿ ಬಿಜೆಪಿ ಶೇ.36.78ರಷ್ಟು ಮತಗಳನ್ನು ಪಡೆದಿತ್ತು.

ವಿಧಾನ ಸಭಾ ಕ್ಷೇತ್ರಗಳು ಎಷ್ಟಿವೆ?

ತುಮಕೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಎಂಟು ವಿಧಾನಸಭಾ ಕ್ಷೇತ್ರಗಳಿವೆ. ಅವುಗಳೆಂದರೆ ಚಿಕ್ಕನಾಯಕನಹಳ್ಳಿ, ತಿಪಟೂರು, ತುರುವೇಕೆರೆ, ತುಮಕೂರು ನಗರ, ತುಮಕೂರು ಗ್ರಾಮಾಂತರ, ಕೊರಟಗೆರೆ, ಗುಬ್ಬಿ ಮತ್ತು ಮಧುಗಿರಿ. ಕಾಂಗ್ರೆಸ್ 4, ಬಿಜೆಪಿ 2, ಜೆಡಿಎಸ್ 2 ಸ್ಥಾನಗಳನ್ನು ಹೊಂದಿವೆ.

ಇದನ್ನೂ ಓದಿ: Chitradurga Lok Sabha Constituency : ಚಿತ್ರದುರ್ಗ ಕ್ಷೇತ್ರವನ್ನು ಮರು ವಶಪಡಿಸಿಕೊಳ್ಳುವುದೇ ಕಾಂಗ್ರೆಸ್​?

2011 ರ ಜನಗಣತಿಯ ಪ್ರಕಾರ ತುಮಕೂರು 2678980 ಜನಸಂಖ್ಯೆಯನ್ನು ಹೊಂದಿತ್ತು. ಸರಾಸರಿ ಸಾಕ್ಷರತಾ ಪ್ರಮಾಣವು 75.14% – ಮಹಿಳೆಯರಲ್ಲಿ 67.38% ಮತ್ತು ಪುರುಷರಲ್ಲಿ 82.81% ಆಗಿತ್ತು. ಸುಮಾರು 1207608 ಗ್ರಾಮೀಣ ಮತದಾರರು ಮತದಾರರಲ್ಲಿ ಸುಮಾರು 75% ರಷ್ಟಿದ್ದಾರೆ. ಎಸ್ಸಿ ಮತ್ತು ಎಸ್ಟಿ ಮತದಾರರು ಕ್ರಮವಾಗಿ 18% ಮತ್ತು 7.4% ರಷ್ಟಿದ್ದಾರೆ.

Continue Reading

ಕರ್ನಾಟಕ

Prajwal Revanna Case: ಹೈಕೋರ್ಟ್‌ಗೆ ಮತ್ತೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ ಭವಾನಿ ರೇವಣ್ಣ

Prajwal Revanna Case: ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಲ್ಲಿ ಜಾಮೀನು ಅರ್ಜಿ ವಜಾಗೊಂಡ ಹಿನ್ನೆಲೆಯಲ್ಲಿ ಹೈಕೋರ್ಟ್‌ಗೆ ನಿರೀಕ್ಷಣಾ ಜಾಮೀನು ಕೋರಿ ಭವಾನಿ ರೇವಣ್ಣ ಅರ್ಜಿ ಸಲ್ಲಿಸಿದ್ದಾರೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಪ್ರಕರಣಕ್ಕೆ ಸಂಬಂಧಿಸಿ ಕೆ.ಆರ್.ನಗರ ಸಂತ್ರಸ್ತೆ ಕಿಡ್ನ್ಯಾಪ್ ಕೇಸ್‌ನಲ್ಲಿ ಬಂಧನ ಭೀತಿಯಲ್ಲಿರುವ ಭವಾನಿ ರೇವಣ್ಣ, ಮತ್ತೆ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಲ್ಲಿ ಜಾಮೀನು ಅರ್ಜಿ ವಜಾಗೊಂಡ ಹಿನ್ನೆಲೆಯಲ್ಲಿ ಹೈಕೋರ್ಟ್‌ಗೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.

ಹೈಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನಿಗಾಗಿ ಭವಾನಿ ರೇವಣ್ಣ ಪರ ವಕೀಲ ಗಿರೀಶ್ ಕುಮಾರ್ ಬಿ.ಎಂ. ಅರ್ಜ ಸಲ್ಲಿಸಿದ್ದಾರೆ. ಸದ್ಯ ಕೇಸ್ ಸ್ವೀಕರಿಸಿ ಕೋರ್ಟ್‌ ಎಫ್ಆರ್ ನಂಬರ್ ನೀಡಿದೆ. ಇನ್ನು ಕೇಸ್ ನಂಬರ್ ನೀಡಿದ ಬಳಿಕ ಪೀಠಕ್ಕೆ ಅರ್ಜಿ ರವಾನೆಯಾಗುತ್ತದೆ. ಸೋಮವಾರ ಬೆಳಗ್ಗೆ 11:30ಕ್ಕೆ ಭವಾನಿ ರೇವಣ್ಣ ಪರ ಅರ್ಜಿ ಸಲ್ಲಿಕೆ ಮಾಡಲಾಗಿದೆ.

ಇದನ್ನೂ ಓದಿ | Food Poisoning : ಮೈಸೂರಲ್ಲಿ ಗೃಹ ಪ್ರವೇಶದ ಊಟ ತಿಂದ ವೃದ್ಧೆ ಸಾವು; 20ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಭವಾನಿ ರೇವಣ್ಣ ಕಣ್ಣಾಮುಚ್ಚಾಲೆ ಆಟ

ಪ್ರಜ್ವಲ್ ರೇವಣ್ಣ (Prajwal Revanna) ಸೆಕ್ಸ್ ಸ್ಕ್ಯಾಂಡಲ್‌ಗೆ ಸಂಬಂಧಿಸಿ ಮಹಿಳೆಯೊಬ್ಬಳ ಅಪಹರಣಕ್ಕೆ ಕುಮ್ಮಕ್ಕು ನೀಡಿದ ಪ್ರಕರಣದಲ್ಲಿ ಭವಾನಿ ರೇವಣ್ಣ ಪೊಲೀಸರ ಕಣ್ಣಿಂದ ತಪ್ಪಿಸಿಕೊಂಡು ಓಡಾಡುತ್ತಿದ್ದಾರೆ. ಭವಾನಿಯನ್ನು (Bhavani Revanna) ವಶಕ್ಕೆ ಪಡೆಯಲು ಪೊಲೀಸರ ನಾಲ್ಕು ವಿಶೇಷ ತಂಡಗಳನ್ನು ರಚಿಸಲಾಗಿದೆ. ಅವರ ವಿರುದ್ಧ ಅರೆಸ್ಟ್ ವಾರಂಟ್ ಕೂಡ ಜಾರಿ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ಪ್ರಕರಣಕ್ಕೆ ಸಂಬಂಧಿಸಿ ನಿಯಮದ 41a ಅಡಿ ಭವಾನಿ ರೇವಣ್ಣಗೆ ಎಸ್ ಐ ಟಿ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ನೀಡಲಾಗಿತ್ತು. ಪ್ರಜ್ವಲ್‌ಗೂ 41a ಅಡಿ ನೊಟೀಸ್ ನೀಡಿದ್ದ ಎಸ್ಐಟಿ ಆ ಬಳಿಕ ಬಂಧಿಸಿತ್ತು. ಪ್ರಜ್ವಲ್ ರೇವಣ್ಣ ವಿಚಾರಣೆಗೆ ಹಾಜರಾಗದ ಹಿನ್ನೆಲೆ ಅರೆಸ್ಟ್ ವಾರೆಂಟ್ ಜಾರಿ ಮಾಡಲಾಗಿತ್ತು. ಈಗ ಭವಾನಿ ರೇವಣ್ಣಗೂ ಅರೆಸ್ಟ್ ವಾರೆಂಟ್ ಜಾರಿ ಮಾಡುವ ಸಾಧ್ಯತೆ ಇದೆ. ತಾವೇ ಎಸ್ ಐ ಟಿ ಕಚೇರಿಗೆ ಬರುವುದಾಗಿ ಹೇಳಿದ್ದ ಭವಾನಿ ರೇವಣ್ಣ ಆ ಬಳಿಕ ಬರದೇ ತಲೆತಪ್ಪಿಸಿಕೊಂಡು ಓಡಾಡುತ್ತಿದ್ದಾರೆ. ಭವಾನಿ ರೇವಣ್ಣ ವಿರುದ್ಧ ಜನಾಕ್ರೋಶವೂ ಹೆಚ್ಚುತ್ತಿದೆ. ಭವಾನಿ ರೇವಣ್ಣಗಾಗಿ ಪೊಲೀಸರು ಹುಡುಕಾಟ ಮುಂದುವರಿಸಿದ್ದಾರೆ.

ಮೂರು ಜಿಲ್ಲೆ, ನಾಲ್ಕು ತಂಡ, ಸತತ ಹುಡುಕಾಟ

ಪೊಲೀಸರ ನಾಲ್ಕು ವಿಶೇಷ ತಂಡಗಳಿಂದ ಭವಾನಿ ರೇವಣ್ಣಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಬೆಂಗಳೂರು, ಮೈಸೂರು, ಹಾಸನ ಈ ಮೂರು ಜಿಲ್ಲೆಗಳಲ್ಲಿ ಭವಾನಿ ರೇವಣ್ಣಗಾಗಿ ಮುಖ್ಯವಾಗಿ ಹುಡುಕಾಟ ನಡೆಸಲಾಗುತ್ತಿದೆ. ಈ ಮೂರು ಜಿಲ್ಲೆಗಳಲ್ಲಿ ಮೂರು ಪೊಲೀಸ್ ತಂಡಗಳು ಬೀಡುಬಿಟ್ಟಿವೆ. ನಾಲ್ಕನೇ ಟೆಕ್ನಿಕಲ್ ತಂಡದಿಂದಲೂ ಭವಾನಿ ರೇವಣ್ಣ ಬಗ್ಗೆ ಟ್ರ್ಯಾಕಿಂಗ್ ನಡೆಯುತ್ತಿದೆ. ಈ ತಾಂತ್ರಿಕ ತಂಡ ಭವಾನಿ ರೇವಣ್ಣ ಅವರ ಮೊಬೈಲ್ ಟ್ರ್ಯಾಕ್ ಮಾಡುತ್ತಿದೆ. ಟವರ್ ಡಂಪ್ ಲೊಕೇಷನ್, ಸಿಡಿಆರ್ ಪರಿಶೀಲನೆ ನಡೆಸುತ್ತಿದೆ.

ಎಲ್ಲವೂ ಗೊತ್ತಿದ್ದೂ ಕಣ್ಣಾ ಮುಚ್ಚಾಲೆ ಆಡ್ತಿದ್ದಾರಾ ಭವಾನಿ ರೇವಣ್ಣ?

ತನಿಖೆಗೆ ಸಹಕರಿಸ್ತೀವಿ, ನೊಟೀಸ್ ಕೊಟ್ರೆ ವಿಚಾರಣೆಗೆ ಹಾಜರಾಗ್ತೀವಿ ಎಂದಿದ್ದ ಮಾಜಿ ಸಚಿವ ಎಚ್ ಡಿ ರೇವಣ್ಣ ಪತ್ನಿ ಭವಾನಿ ಈಗ ಕೋರ್ಟ್ ನಲ್ಲಿ ಜಾಮೀನು ಅರ್ಜಿ ತಿರಸ್ಕಾರ ಆಗುತ್ತಿದ್ದಂತೆ ಎಸ್ಕೇಪ್ ಆಗಿದ್ದಾರೆ. ಅವರ ಮನೆಗೆ ಹೋಗಿ ಭವಾನಿ ರೇವಣ್ಣರನ್ನ ವಿಚಾರಣೆ ‌ನಡೆಸಲು ಎಸ್ ಐ ಟಿ ಮುಂದಾಗಿತ್ತು. ಆದರೆ ಮನೆಯಿಂದ ಹೊರಬಂದು ಅಜ್ಞಾತ ಸ್ಥಳದಲ್ಲಿ ಅಡಗಿಕೊಂಡಿದ್ದಾರೆ. ಎಸ್ ಐ ಟಿ ನೊಟೀಸ್ ಗೆ ಉತ್ತರವನ್ನೂ ಕೊಟ್ಟಿಲ್ಲ‌ ಸಂಬಂಧಿಕರೊಬ್ಬರ ಮನೆಯಲ್ಲಿ ತಲೆ ಮರೆಸಿಕೊಂಡಿರುವ ಸಾಧ್ಯತೆ ಇದೆ.

ಇದನ್ನೂ ಓದಿ | Prajwal Revanna Case: ಇಂದು ರಹಸ್ಯವಾಗಿ ಪುರುಷತ್ವ ಪರೀಕ್ಷೆ, ನಾಳೆ ಎಲೆಕ್ಷನ್‌ ರಿಸಲ್ಟ್:‌ ಪ್ರಜ್ವಲ್‌ಗೆ ಡಬಲ್ ಟೆ‌ನ್ಷನ್!‌

ಯಾವ ಕ್ಷಣದಲ್ಲಾದ್ರೂ ಭವಾನಿ ರೇವಣ್ಣ ವಶ

ಭವಾನಿ ರೇವಣ್ಣ ಎಲ್ಲಿದ್ದಾರೆ ಎಂಬ ಮಾಹಿತಿ ಕಲೆ‌ ಹಾಕುತ್ತಿರುವ ಎಸ್ ಐ ಟಿ ಯಾವುದೇ ಕ್ಷಣದಲ್ಲಿ ಅವರನ್ನು ಬಂಧಿಸುವ ಸಾಧ್ಯತೆ ಇದೆ. ಅವರನ್ನು ಬಂಧಿಸಲು ಇನ್ಸ್ಪೆಕ್ಟರ್ ಹೇಮಂತ್ ಕುಮಾರ್ ತಂಡ ಸಜ್ಜಾಗಿದೆ.

Continue Reading
Advertisement
Snake Rescue Snakes spotted in heavy rain
ಮಳೆ1 min ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Riyan Parag
ಕ್ರಿಕೆಟ್15 mins ago

Riyan Parag: ಟಿ20 ವಿಶ್ವಕಪ್​ ನೋಡಲಾರೆ ಎಂದ ‘ಹಾಟ್​ ಫೇವರಿಟ್’ ರಿಯಾನ್​ ಪರಾಗ್

Actor Chetan Ahimsa
ಪ್ರಮುಖ ಸುದ್ದಿ20 mins ago

Actor Chetan Ahimsa: ಬಿಜೆಪಿ ಸಂವಿಧಾನ ಬದಲಿಸಲ್ಲ; ಭ್ರಷ್ಟಾಚಾರದಲ್ಲಿ ಕಾಂಗ್ರೆಸ್ ಏನೂ ಕಮ್ಮಿ ಇಲ್ಲ ಎಂದ ನಟ ಚೇತನ್!

World Bicycle Day
ಆರೋಗ್ಯ38 mins ago

World Bicycle Day: ಸೈಕಲ್‌ ಹೊಡೆಯುವುದರ ಲಾಭಗಳು ನಾವು ಅಂದುಕೊಂಡಿದ್ದಕ್ಕಿಂತ ಹೆಚ್ಚು!

Battery Life Tips
ಗ್ಯಾಜೆಟ್ಸ್39 mins ago

Battery Life Tips: ಈ 5 ಸಲಹೆ ಪಾಲಿಸಿ; ನಿಮ್ಮ ಸ್ಮಾರ್ಟ್‌ಫೋನ್ ಬ್ಯಾಟರಿ ಸಾಮರ್ಥ್ಯ ಹೆಚ್ಚಿಸಿ!

MP Renukacharya
ಕ್ರೈಂ46 mins ago

MP Renukacharya : ಎಂ.ಪಿ ರೇಣುಕಾಚಾರ್ಯ, ಪುತ್ರನಿಗೆ ಫೋನ್‌ನಲ್ಲಿ ಕೊಲೆ ಬೆದರಿಕೆ

Nataša Stanković
ಕ್ರೀಡೆ56 mins ago

Nataša Stanković: ಹಾರ್ದಿಕ್ ಪಾಂಡ್ಯ ಜತೆ ವಿಚ್ಛೇದನ?; ಅನುಮಾನಕ್ಕೆ ತೆರೆ ಎಳೆದ ಪತ್ನಿ ನತಾಶಾ

Drowns in Lake
ಕರ್ನಾಟಕ1 hour ago

Drowns in Lake: ಕೆರೆಯಲ್ಲಿ ಮುಳುಗಿ ಯುವಕ ಸಾವು; ಸಾಲ ಬಾಧೆ ತಾಳಲಾರದೆ ರೈತ ಆತ್ಮಹತ್ಯೆ

Vijayanagara SP Shriharibabu drives to blood donation camp in Hosapete
ಆರೋಗ್ಯ1 hour ago

Vijayanagara News: ಹೊಸಪೇಟೆಯಲ್ಲಿ ರಕ್ತದಾನ ಶಿಬಿರಕ್ಕೆ ಎಸ್ಪಿ ಶ್ರೀಹರಿಬಾಬು ಚಾಲನೆ

Mantralaya Sri Subudhendra Theertha Swamiji ashirvachan
ಮೈಸೂರು1 hour ago

Mysore News: ಶಾಸ್ತ್ರ ಜ್ಞಾನಕ್ಕೆ ಪ್ರಪಂಚದ ಎಲ್ಲೆಡೆ ಮಾನ್ಯತೆ: ಮಂತ್ರಾಲಯ ಶ್ರೀ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Snake Rescue Snakes spotted in heavy rain
ಮಳೆ2 mins ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 day ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು2 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ4 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ6 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು6 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ7 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 week ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

ಟ್ರೆಂಡಿಂಗ್‌