Hassan Pen Drive Case: ಪ್ರಜ್ವಲ್‌ ಪೆನ್‌ಡ್ರೈವ್‌ ರಿಲೀಸ್‌ ಹಿಂದೆ ಎಚ್‌ಡಿಕೆ? ಡಿಕೆ ಬ್ರದರ್ಸ್‌ ಹೇಳಿದ ಸ್ಫೋಟಕ ಮಾಹಿತಿ ಏನು? - Vistara News

ಹಾಸನ

Hassan Pen Drive Case: ಪ್ರಜ್ವಲ್‌ ಪೆನ್‌ಡ್ರೈವ್‌ ರಿಲೀಸ್‌ ಹಿಂದೆ ಎಚ್‌ಡಿಕೆ? ಡಿಕೆ ಬ್ರದರ್ಸ್‌ ಹೇಳಿದ ಸ್ಫೋಟಕ ಮಾಹಿತಿ ಏನು?

Hassan Pen Drive Case: ಈ ಪ್ರಕರಣದಲ್ಲಿ ಹೆಣ್ಣು ಮಕ್ಕಳ ಸಮಸ್ಯೆ ಮುಖ್ಯವಾಗಿದೆ. ಯಾರು ಬಿಡುಗಡೆ ಮಾಡಿದರು ಎಂಬುದು ಅಲ್ಲ. ಕುಮಾರಸ್ವಾಮಿ ಅವರು ದಿನಕ್ಕೊಂದು ಹೇಳಿಕೆಯನ್ನು ಕೊಡುತ್ತಾ ಇರುತ್ತಾರೆ. ಡಿ.ಕೆ. ಶಿವಕುಮಾರ್‌ ಮೇಲೆ ಯಾವ ಆರೋಪ ಬಿಟ್ಟಿದ್ದಾರೆ? ಎಲ್ಲ ತರಹದ ಆರೋಪವನ್ನೂ ಮಾಡುತ್ತಾರೆ. ಇದರ ಹಿಂದೆ ಕುಮಾರಸ್ವಾಮಿ ಕೈವಾಡ ಇದೆ. ಹಾಸನ ನಾಯಕರ ಕೈವಾಡ ಇದೆ. ಈ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇತ್ತು ಎಂದು ಡಿ.ಕೆ. ಸುರೇಶ್‌ ಹೇಳಿದ್ದಾರೆ.

VISTARANEWS.COM


on

Hassan Pen Drive Case HDK behind Prajwal Pen Drive release DK Brothers allegations
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು/ಯಾದಗಿರಿ: ಹಾಸನ ಸಂಸದ (Hassan MP), ಜೆಡಿಎಸ್‌ ಮುಖಂಡ (JDS Leader), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣದ (Hassan Pen Drive Case) ಹಿಂದೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಇದ್ದಾರೆ. ಹಾಸನ ನಾಯಕರ ಕೈವಾಡ ಇದೆ. ಬಿಜೆಪಿ ಮುಖಂಡ ದೇವರಾಜೇಗೌಡ ಮೊದಲು ಭೇಟಿ ಮಾಡಿದ್ದು ಯಾರನ್ನು ಎಂದು ಡಿ.ಕೆ. ಸಹೋದರರು ಪ್ರಶ್ನೆ ಮಾಡಿದ್ದಾರೆ. ಈ ಮೂಲಕ ಎಚ್‌ಡಿಕೆ ವಿರುದ್ಧ ಡಿಸಿಎಂ ಡಿ.ಕೆ. ಶಿವಕುಮಾರ್‌ ಹಾಗೂ ಸಂಸದ ಡಿ.‌ಕೆ. ಸುರೇಶ್ ಹರಿಹಾಯ್ದಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಂಸದ ಡಿ.ಕೆ. ಸುರೇಶ್‌, ಕುಮಾರಸ್ವಾಮಿಗೆ ಡಿ‌.ಕೆ‌. ಶಿ‌ವಕುಮಾರ್‌ ಅವರನ್ನು ನೆನಪು ಮಾಡಿಕೊಳ್ಳದಿದ್ದರೆ ನಿದ್ದೆ ಬರಲ್ಲ, ಊಟ ಸೇರಲ್ಲ. ನಮ್ಮ ಹತ್ತಿರ ಪೆನ್‌ಡ್ರೈವ್‌ ಇದ್ದಿದ್ದರೆ, ಅದನ್ನು ಚುನಾವಣೆಗೆ ಮೊದಲೇ ಬಿಡುಗಡೆ ಮಾಡುತ್ತಿದ್ದೆವು. ಇಲ್ಲೀಗ ವ್ಯವಸ್ಥಿತವಾಗಿ ನುಣುಚಿಕೊಳ್ಳುವ ಪ್ರಯತ್ನವನ್ನು ಮಾಡುತ್ತಾ ಇದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

ಈ ಪ್ರಕರಣದಲ್ಲಿ ಹೆಣ್ಣು ಮಕ್ಕಳ ಸಮಸ್ಯೆ ಮುಖ್ಯವಾಗಿದೆ. ಯಾರು ಬಿಡುಗಡೆ ಮಾಡಿದರು ಎಂಬುದು ಅಲ್ಲ. ಕುಮಾರಸ್ವಾಮಿ ಅವರು ದಿನಕ್ಕೊಂದು ಹೇಳಿಕೆಯನ್ನು ಕೊಡುತ್ತಾ ಇರುತ್ತಾರೆ. ಡಿ.ಕೆ. ಶಿವಕುಮಾರ್‌ ಮೇಲೆ ಯಾವ ಆರೋಪ ಬಿಟ್ಟಿದ್ದಾರೆ? ಎಲ್ಲ ತರಹದ ಆರೋಪವನ್ನೂ ಮಾಡುತ್ತಾರೆ. ಇದರ ಹಿಂದೆ ಕುಮಾರಸ್ವಾಮಿ ಕೈವಾಡ ಇದೆ. ಹಾಸನ ನಾಯಕರ ಕೈವಾಡ ಇದೆ. ಈ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇತ್ತು ಎಂದು ಡಿ.ಕೆ. ಸುರೇಶ್‌ ಹೇಳಿದರು.

ಬಹಳ ಮುಂಚೆಯಿಂದ ಈ ಸುದ್ದಿ ಇತ್ತು. ವಿಡಿಯೊ ಬಿಡುಗಡೆ ಆಗಿರಲಿಲ್ಲ. ಬಿಡುಗಡೆ ಆದ ಮೇಲೆ ಚರ್ಚೆ ಆಗುತ್ತಿದೆ. ಸುಮ್ಮನೆ ಪ್ರಜ್ವಲ್ ರೇವಣ್ಣ ಅವರನ್ನು ಅಮಾನತು ಮಾಡಿದ್ದಾರೆ. ಅದು ಕುಟುಂಬದ ಪಾರ್ಟಿ, ಯಾವಾಗ ಬೇಕಾದರೂ ತೆಗೆದುಕೊಳ್ಳುತ್ತಾರೆ. ಬೇಕಾದಾಗ ಪಾರ್ಟಿಯಿಂದ ಬಿಡುತ್ತಾರೆ ಎಂದು ಡಿ.ಕೆ. ಸುರೇಶ್‌ ವ್ಯಂಗ್ಯವಾಡಿದರು.

ದೇವರಾಜೇಗೌಡ ಮೊದಲು ಯಾರನ್ನು ಭೇಟಿ ಮಾಡಿದ್ದ? ಡಿಕೆಶಿ ಪ್ರಶ್ನೆ

ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ಯಾದಗಿರಿಯ ಸುರಪುರ ತಾಲೂಕಿನ ದೇವತ್ಗಲ್‌ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್‌, ಮೊದಲು ದೇವರಾಜೇಗೌಡ ಯಾರನ್ನು ಭೇಟಿ ಮಾಡಿದ್ದ? ನಮಗೆ ಗೊತ್ತಿರುವ ಮಾಹಿತಿ ಪ್ರಕಾರ ಮೊದಲಿಗೆ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದ. ಅದಾದ ಮೇಲೆ ಬಿಜೆಪಿ ಅವರಿಗೆ ಪೆನ್‌ ಡ್ರೈವ್ ಕೊಟ್ಟಿದ್ದ. ನಾವು ಮಾಡಬೇಕು ಅಂದಿದ್ದರೆ ಹೇಗೆ ಮಾಡಬೇಕು ಅಂತ ಗೊತ್ತಿತ್ತು. ನಮಗೆ ಅಂತಹ ಕೆಲಸದ ಅವಶ್ಯಕತೆ ಇಲ್ಲ. ಕುಮಾರಸ್ವಾಮಿ ನಾರಿ ಶಕ್ತಿ ಬಗ್ಗೆ, ತಂದೆ ತಾಯಿ ಬಗ್ಗೆ ಗೌರವವಿದೆ ಅಂತ ಹೇಳುತ್ತಾರಲ್ಲ. ಬಿಜೆಪಿಯವರೂ ಹೇಳುತ್ತಾರಲ್ಲವಾ? ಮೊದಲು ಆ ತಾಯಂದಿರಲ್ಲಿ ಹೋಗಿ ಗೌರವ ಕೊಟ್ಟು ಸಾಂತ್ವನ ಹೇಳಿ, ಧೈರ್ಯ ತುಂಬುವ ಕೆಲಸ ಮಾಡಲಿ ಎಂದು ಹೇಳಿದರು.

ಮಹಾನಾಯಕ ಎಂಬ ಎಚ್.ಡಿ. ಕುಮಾರಸ್ವಾಮಿ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್‌, ಯಾವ ನಾಯಕ ಅಂತಾದರೂ ಹೇಳಲಿ, ನಾನು ಮಾತನಾಡುತ್ತೇನೆ. ಸುಮ್ಮನೆ ಕುಳಿತುಕೊಳ್ಳುವ ವ್ಯಕ್ತಿ ನಾನಲ್ಲ. ಸೂರಜ್ ರೇವಣ್ಣ ಅವರು ಬಂದಿದ್ದರು. ಏನೇನು ಮಾತನಾಡಿದ್ದರು ಅಂತ ಅವರನ್ನೇ ಕೇಳಿ ಎಂದು ಹೇಳಿದರು.

ಎಸ್‌ಐಟಿ ಎದುರು 24 ಗಂಟೆಯೊಳಗೆ ಹಾಜರಾಗದೇ ಇದ್ದರೆ ಪ್ರಜ್ವಲ್‌, ರೇವಣ್ಣ ಅರೆಸ್ಟ್?

ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಈಗಾಗಲೇ 24 ಗಂಟೆಯೊಳಗೆ ವಿಚಾರಣೆಗೆ ಹಾಜಾರಾಗುವಂತೆ ಎಸ್‌ಐಟಿ ನೋಟಿಸ್‌ ನೀಡಿದೆ. ಒಂದು ವೇಳೆ ಗಡುವಿನೊಳಗೆ ವಿಚಾರಣೆಗೆ ಹಾಜರಾಗದೇ ಇದ್ದರೆ ಬಂಧಿಸುವ ಅಧಿಕಾರ ಎಸ್‌ಐಟಿಗೆ ಇದೆ. ಇಲ್ಲವೇ ಇನ್ನೂ ಎರಡು ಬಾರಿ ನೋಟಿಸ್‌ ನೀಡಿ ಕಾಯಬಹುದಾಗಿದೆ. ಈ ಎಲ್ಲವೂ ತನಿಖಾಧಿಕಾರಿಯ ವಿವೇಚನೆಗೆ ಬಿಟ್ಟ ವಿಷಯವಾಗಿದೆ.

ಪ್ರಜ್ವಲ್ ರೇವಣ್ಣ ಹಾಗೂ ರೇವಣ್ಣ ವಿರುದ್ಧ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು (ಬುಧವಾರ – ಮೇ 1) ವಿಚಾರಣೆಗೆ ಹಾಜರಾಗಬೇಕು. ಕಾರಣ, ಸಿಆರ್‌ಪಿಸಿ 41ಎ ಅಡಿಯಲ್ಲಿ ಎಸ್‌ಐಟಿ ನೋಟಿಸ್ ಜಾರಿ ಮಾಡಿದೆ. ಇದೇ ವೇಳೆ 24 ಗಂಟೆ ಒಳಗೆ ವಿಚಾರಣೆಗೆ ಹಾಜರಾಗದೆ ಹೋದಲ್ಲಿ ಮತ್ತೊಂದು ನೋಟಿಸ್‌ ಅನ್ನು ಎಸ್‌ಐಟಿ ನೀಡಲಿದೆ. ಇಲ್ಲವೇ ನೋಟಿಸ್‌ ನೀಡದೆಯೂ ಬಂಧಿಸುವ ಅಧಿಕಾರವಿದೆ.

ಸದ್ಯ ಆರೋಪಿಗಳು ವಿಚಾರಣೆಗೆ ಬರುವ ನಿರೀಕ್ಷೆಯಲ್ಲಿ ಎಸ್ಐಟಿ ಇದೆ. ಇನ್ನು ಪ್ರಜ್ವಲ್ ರೇವಣ್ಣ ವಿದೇಶದಲ್ಲಿರುವ ಕಾರಣ ನೋಟಿಸ್‌ನಲ್ಲಿ ಸಮಯ ನಿಗದಿ ಮಾಡಲಾಗಿಲ್ಲ.

ಹೊಳೆನರಸೀಪುರದ ಮನೆಯಲ್ಲಿ ಹೋಮ ಮಾಡಿಸಿದ ರೇವಣ್ಣ

ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರು ಹೊಳೆನರಸೀಪುರದ ನಿವಾಸಲ್ಲಿ ಹೋಮ ಮಾಡಿಸಿದ್ದಾರೆ ಎನ್ನಲಾಗಿದೆ. ಯಾವ ಹೋಮವನ್ನು ನಡೆಸಿದ್ದಾರೆ ಎಂಬ ಬಗ್ಗೆ ಮಾಹಿತಿ ಇಲ್ಲ. ಬುಧವಾರ ಹೋಮ ಪೂರ್ಣಗೊಂಡ ಬಳಿಕ ಅಲ್ಲಿಂದ ಬೆಂಗಳೂರಿನತ್ತ ವಾಪಸ್‌ ಆಗಿದ್ದಾರೆ.

ಮೊದಲ ನೋಟಿಸ್‌ಗೆ ಪ್ರಜ್ವಲ್‌ ಗೈರು ಪಕ್ಕಾ

ಎಸ್‌ಐಟಿ ನೀಡಿರುವ ಮೊದಲ ನೋಟಿಸ್‌ಗೆ ಪ್ರಜ್ವಲ್‌ ರೇವಣ್ಣ ಗೈರಾಗುವುದು ಪಕ್ಕಾ ಆಗಿದೆ. ಏಕೆಂದರೆ, ಜರ್ಮನಿಯಿಂದ ಬೆಂಗಳೂರು ತಲುಪಬೇಕಾದರೆ ಕನಿಷ್ಠ 9ರಿಂದ 10 ಗಂಟೆ ಪ್ರಯಾಣ ಮಾಡಬೇಕು. 10 ಗಂಟೆ ಪ್ರಯಾಣ ಮಾಡಿದರೂ ನೋಟಿಸ್ ನೀಡಿದ 24 ಗಂಟೆಗಳ‌ ಒಳಗೆ ತಲುಪಲು ಅಸಾಧ್ಯ. ಮೊದಲ ನೋಟಿಸ್‌ಗೆ ಗೈರಾದರೆ ಎರಡನೇ ನೋಟಿಸ್ ನೀಡುವ ಸಾಧ್ಯತೆ ಇದೆ. ಹೀಗೆ ಮೂರು ಬಾರಿ ಆರೋಪಿ ಸ್ಥಾನದಲ್ಲಿರುವವರಿಗೆ ನೋಟಿಸ್‌ ನೀಡಲಾಗುವುದು.

ಮೂರು ನೋಟಿಸ್‌ಗೂ ಸ್ಪಂದಿಸದೇ ಇದ್ದರೆ?

ಎಸ್‌ಐಟಿ ಮೂರು ಬಾರಿ ನೋಟಿಸ್‌ ನೀಡಿದರೂ ಆರೋಪಿಗಳು ಸ್ಪಂದಿಸದೇ ಇದ್ದಿದ್ದರೆ ಕೋರ್ಟ್‌ ಮುಖಾಂತರ ವಾರೆಂಟ್‌ ತಂದು ಬಂಧಿಸುವ ಅವಕಾಶವೂ ಇದೆ. ಇನ್ನು ಎರಡನೇ ನೋಟಿಸ್‌ಗೆ ಸ್ಪಂದಿಸಿ ವಿಚಾರಣೆಗೆ ಹಾಜರಾದರೆ, ತನಿಖಾಧಿಕಾರಿಗಳ ಮುಂದೆ ಸೂಕ್ತ ಕಾರಣ ನೀಡಬೇಕಾಗುತ್ತದೆ. ಈ ಪ್ರಕರಣದಲ್ಲಿ ದಾಖಲಾಗಿರುವ ಸೆಕ್ಷನ್‌ನಲ್ಲಿ ಜಾಮೀನು ಮಂಜೂರು ಆಗುವ ಸಾಧ್ಯತೆ ಇದೆ. ಇಂದು (ಬುಧವಾರ) ರಜೆಯಾಗಿರುವುದರಿಂದ ಗುರುವಾರ (ಮೇ 2) ಜಾಮೀನು ಅರ್ಜಿ ವಿಚಾರಣೆಗೆ ಬರಲಿದೆ. ಗಾಗಿಯೇ ವಿಚಾರಣೆಗೆ ಹಾಜರಾಗದೆ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ತಪ್ಪಿಸಿಕೊಂಡಿರಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.

ಪ್ರಜ್ವಲ್‌ ರೇವಣ್ಣ ವಿರುದ್ಧ ದಾಖಲಾಗುತ್ತಾ ಪೋಕ್ಸೋ ಕೇಸ್‌; ಬಾಲಕಿ ಉಲ್ಟಾ ಹೊಡೆದರೆ?

ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಪ್ರಜ್ವಲ್ ರೇವಣ್ಣ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗುವ ಸಾಧ್ಯತೆ ಹೆಚ್ಚಿದೆ.

ಈ ಸಂಬಂಧ ಮಕ್ಕಳ ಹಕ್ಕು ಆಯೋಗದಿಂದ ಪತ್ರ ಬರೆಯಲಾಗಿದೆ. ದೂರುದಾರೆಯ ಮಗಳ ಹೇಳಿಕೆಯನ್ನು ಪಡೆಯಲು ತಯಾರಿ ನಡೆಸಲಾಗುತ್ತಿದೆ. ಮಕ್ಕಳ ಹಕ್ಕು ಆಯೋಗದ ಕೌನ್ಸಿಲರ್‌ಗಳ ಸಮ್ಮುಖದಲ್ಲಿ ಹೇಳಿಕೆ ಪಡೆಯಲು ಸಿದ್ಧತೆ ನಡೆಸಲಾಗಿದೆ. ಇಂದು ಸಂಜೆ ಅಥವಾ ನಾಳೆ (ಮೇ 1 – 2) ಸಂತ್ರಸ್ತೆಯ ಮಗಳ ಹೇಳಿಕೆ ಪಡೆಯಲು ಮುಂದಾಗಲಾಗುತ್ತಿದೆ ಎನ್ನಲಾಗಿದೆ.

ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆಗಿದ್ದರೆ ಈ ಸಂಬಂಧ ಹೇಳಿಕೆಯನ್ನು ಪಡೆಯುವಾಗ ಕಡ್ಡಾಯವಾಗಿ ಮಕ್ಕಳ ಹಕ್ಕು ಆಯೋಗದ ಸದಸ್ಯರು ಇರಬೇಕು. ನೇರವಾಗಿ ಪೊಲೀಸರು ಹೇಳಿಕೆ ಪಡೆಯಲು ಸಾಧ್ಯವಿಲ್ಲ. ಹೀಗಾಗಿ ಇಂದು ಅಥವಾ ನಾಳೆ ಸಂಜೆಯೊಳಗೆ ಅಧಿಕಾರಿಗಳು ಹೇಳಿಕೆ ಪಡೆಯಲು ಮುಂದಾಗಿದ್ದಾರೆ ಎನ್ನಲಾಗಿದೆ. ಆದರೆ, ಈ ವೇಳೆ ಏನಾದರೂ ಸಂತ್ರಸ್ತೆಯ ಮಗಳು ವ್ಯತಿರಿಕ್ತ ಹೇಳಿಕೆ ನೀಡಿದಲ್ಲಿ ಇಡಿ ಪ್ರಕರಣವೇ ಉಲ್ಟಾ ಆಗಲಿದೆ.

SIT ತನಿಖೆಗೆ ಸಂತ್ರಸ್ತೆಯರ ಹಿಂದೇಟು; ವಿಚಾರಣೆ ಅಂತ ತೊಂದರೆ ಕೊಟ್ಟರೆ ಸೂಸೈಡ್‌ ಬೆದರಿಕೆ!

ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್‌ಐಟಿಗೆ ಮಾಹಿತಿ ನೀಡಲು ಸಂತ್ರಸ್ತೆಯರು ಹಿಂದೇಟು ಹಾಕುತ್ತಿದ್ದಾರೆ. “ನನಗೆ ತೊಂದರೆ ಕೊಟ್ಟರೆ ಸೂಸೈಡ್ ಮಾಡಿಕೊಳ್ಳುತ್ತೇವೆ” ಎಂದು ಬೆದರಿಕೆ ಒಡ್ಡುತ್ತಿದ್ದಾರೆ ಎಂಬ ಅಂಶ ಬೆಳಕಿಗೆ ಬಂದಿದೆ.

ಪ್ರಜ್ವಲ್‌ ರೇವಣ್ಣ ಒಬ್ಬ ಸಂಸದ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ವಂಶದ ಕುಡಿ. ಈ ಹಿನ್ನೆಲೆಯಲ್ಲಿ ಇದೊಂದು ಹೈ ಪ್ರೊಫೈಲ್‌ ಕೇಸ್‌ ಆಗಿದೆ. ಇದರ ಜತೆಗೆ ವಿಡಿಯೊ ಲೀಕ್‌ ವೇಳೆ ಸಂತ್ರಸ್ತೆಯರ ಮುಖವನ್ನು ಬ್ಲರ್‌ ಮಾಡಲಾಗಿಲ್ಲ. ಇದರಿಂದ ಅದೆಷ್ಟೋ ಹೆಣ್ಣು ಮಕ್ಕಳು ಹೊರಗಡೆ ತಲೆ ಎತ್ತಿ ತಿರುಗುವಂತೆ ಆಗುತ್ತಿಲ್ಲ. ಈ ಮಧ್ಯೆ ಎಸ್‌ಐಟಿ ಅಧಿಕಾರಿಗಳು ತನಿಖೆಗಾಗಿ ಅವರನ್ನು ಭೇಟಿ ಮಾಡಿ ಹೇಳಿಕೆ ಪಡೆಯಲು ಹೋದರೆ ಮೊದಲೇ ನೊಂದಿರುವ ನಮ್ಮನ್ನು ಮತ್ತಷ್ಟು ನೋಯಿಸಬೇಡಿ. ಈ ಬಗ್ಗೆ ನಮ್ಮ ಬಳಿ ಏನನ್ನೂ ಕೇಳಬೇಡಿ. ಇದು ನಮ್ಮ ಜೀವನದ ಪ್ರಶ್ನೆಯಾಗಿದೆ. ಅಷ್ಟಕ್ಕೂ ನೀವು ಒತ್ತಾಯ ಮಾಡಿದ್ದೇ ಆದರೆ ಆತ್ಮಹತ್ಯೆ ಮಾಡಿಕೊಳ್ಳಬೇಕಾದೀತು ಎಂಬ ಎಚ್ಚರಿಕೆಯನ್ನು ನೀಡಿದ್ದಾರೆ ಎಂದು ತಿಳಿದುಬಂದಿದೆ.

ದೂರುದಾರೆ ಹೊರತುಪಡಿಸಿ ಉಳಿದವರು ನೋ ರೆಸ್ಪಾನ್ಸ್!

ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ವಿಡಿಯೊದಲ್ಲಿರುವ ಮಹಿಳೆಯರನ್ನು ಸಂಪರ್ಕಿಸಲು ಎಸ್‌ಐಟಿ ತಂಡವು ಸಾಕಷ್ಟು ಪ್ರಯತ್ನಪಟ್ಟಿದೆ. ಎಷ್ಟೇ ಪ್ರಯತ್ನ ಪಟ್ಟರೂ ಸಂತ್ರಸ್ತೆಯರು ಮಾತ್ರ ಇವರಿಗೆ ಸ್ಪಂದಿಸುತ್ತಿಲ್ಲ. ನಾವು ಏನೂ ಹೇಳಲ್ಲ, ಏನನ್ನೂ ಕೇಳಬೇಡಿ ಎಂದು ಸಂತ್ರಸ್ತೆಯರು ಹೇಳುತ್ತಿದ್ದಾರೆ.

ನಾವೇನು ದೂರು ಕೊಟ್ಟಿಲ್ಲ, ನಮ್ಮನ್ನು ಯಾಕೆ ಎಳೆದು ತರುತ್ತೀರಿ? ನಮ್ಮನ್ನು ನಮ್ಮ ಪಾಡಿಗೆ ಬಿಟ್ಟುಬಿಡಿ ಎಂದು ಹೇಳುತ್ತಿರುವುದರಿಂದ ಎಸ್‌ಐಟಿ ತನಿಖೆಗೆ ಸ್ವಲ್ಪ ಹಿನ್ನಡೆಯಾಗಿದೆ. ಹೀಗಾಗಿ ಸದ್ಯಕ್ಕೆ ದೂರುದಾರೆ ಸಂತ್ರಸ್ತೆಯ ಮಾಹಿತಿ ಆಧರಿಸಿ ತನಿಖೆಯನ್ನು ಮುನ್ನಡೆಸುವ ತೀರ್ಮಾನಕ್ಕೆ ಬರಲಾಗಿದೆ.

ಮೇ 3ರಂದು ಪ್ರಜ್ವಲ್‌ ರೇವಣ್ಣ ಬೆಂಗಳೂರಿಗೆ, ಬಂದ ತಕ್ಷಣ ಎಸ್‌ಐಟಿ ವಶಕ್ಕೆ?

ಅಶ್ಲೀಲ ವಿಡಿಯೋದಲ್ಲಿರುವ (Obscene video) ಪ್ರಧಾನ ಆರೋಪಿ, ಹಾಸನ ಸಂಸದ (Hassan MP) ಪ್ರಜ್ವಲ್‌ ರೇವಣ್ಣ (Prajwal Revanna) ಮೇ 3ರಂದು ತಡರಾತ್ರಿ ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂದು ಗೊತ್ತಾಗಿದೆ. ಸದ್ಯ ಅವರು ಜರ್ಮನಿಯ ಫ್ರಾಂಕ್‌ಫರ್ಟ್‌ನಲ್ಲಿದ್ದಾರೆ.

ಲುಪ್ತಾನ್ಸಾ ಏರ್‌ಲೈನ್ಸ್‌ನಲ್ಲಿ ಮೇ 3ರ ಪ್ರಯಾಣಕ್ಕೆ ಪ್ರಜ್ವಲ್‌ ಟಿಕೆಟ್ ಬುಕ್ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಮೇ 3 ಮಧ್ಯರಾತ್ರಿ ಕೆಂಪೇಗೌಡ ಏರ್‌ಪೋರ್ಟ್‌ಗೆ ಅವರು ಆಗಮಿಸಬಹುದು. ಮೇ 4ರಂದು ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ. ಅಥವಾ ಅವರು ವಿಮಾನದಿಂದ ಇಳಿದ ಕೂಡಲೇ ಅವರನ್ನು ವಿಶೇಷ ತನಿಖಾ ತಂಡ (SIT) ವಶಕ್ಕೆ ಪಡೆಯುವ ಸಾಧ್ಯತೆ ಇದೆ.

ಮೊದಲ ಹಂತದ ಮತದಾನದ ದಿನವೇ ಪ್ರಜ್ವಲ್‌ ಅವರು ದೇಶ ಬಿಟ್ಟು ತೆರಳಿದ್ದರು. ಬ್ಯುಸಿನೆಸ್‌ ವೀಸಾವನ್ನು ಅವರು ಹೊಂದಿದ್ದಾರೆ. ಟೂರಿಸ್ಟ್‌ ವೀಸಾದಲ್ಲಿ ಅವರು ಜರ್ಮನಿಗೆ ತೆರಳಿದ್ದು, ಇದರ ಅವಧಿ 90 ದಿನಗಳ ಕಾಲ ಚಾಲೂ ಇರುತ್ತದೆ. CRPC41A ಸೆಕ್ಷನ್‌ ಪ್ರಕಾರ, ಅವರು ನೋಟಿಸ್‌ಗೆ ಸ್ಪಂದಿಸಿ ಹಾಜರಾಗದೆ ಇದ್ದರೆ ಅವರನ್ನು ಬಂಧಿಸಬಹುದಾಗಿದೆ.

ಏಕಾಏಕಿ ಬಂಧನವಿಲ್ಲ: ಪರಮೇಶ್ವರ್‌

ಆದರೆ ಹಾಗೆ ಏಕಾಏಕಿ ಯಾರನ್ನೂ ಬಂಧಿಸಲು ಮುಂದಾಗುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್‌ ಇಂದು ಬೆಳಗ್ಗೆ ಹೇಳಿದ್ದಾರೆ. “ಅದಕ್ಕೆ ಪುರಾವೆಗಳು, ದೂರು, ದೂರಿನಲ್ಲಿ ಏನು ಹೇಳಿರುತ್ತಾರೆ ಅನ್ನೋದು ಮುಖ್ಯ. ಯಾವ ಸೆಕ್ಷನ್ ಬರುತ್ತೆ, ಅದರಲ್ಲಿ ‌ಅರೆಸ್ಟ್ ಮಾಡಬಹುದಾ, ಬೇಲ್ ಕೇಸಾ, ನಾನ್ ಬೇಲ್ ಕೇಸಾ ಅಂತ ನೋಡಬೇಕು. ಅದಕ್ಕೆ 41A CRPC ಸೆಕ್ಷನ್ ಅಡಿ‌ ನೋಟಿಸ್ ಕೊಟ್ಟಿದ್ದಾರೆ. ಅವರು 24 ಗಂಟೆ ಒಳಗೆ ಒಂದು ಹಾಜರಾಗಬೇಕು. ಹಾಜರಾಗದೇ ಹೋದರೆ SITಯವರು ಮುಂದಿನ ಪ್ರಕ್ರಿಯೆ ಮಾಡ್ತಾರೆ” ಎಂದಿದ್ದಾರೆ.

ಪ್ರಜ್ವಲ್‌ ತನಿಖೆ ಮುಖ್ಯ

ಸದ್ಯ ಪ್ರಜ್ವಲ್ ತನಿಖೆ ಎಸ್‌ಐಟಿಗೆ ತುಂಬಾ ಮುಖ್ಯವಾಗಿದೆ. ಎ1 ರೇವಣ್ಣ ಆಗಿದ್ದರೂ ಪ್ರಕರಣಗಳು ಹೊರಬಂದಿದ್ದು ಪ್ರಜ್ವಲ್ ರೇವಣ್ಣ ವಿಡೀಯೋಗಳಿಂದ ಆಗಿದೆ. ಹೀಗಾಗಿ ಪ್ರಜ್ವಲ್ ರೇವಣ್ಣ ಸ್ಟೇಟ್‌ಮೆಂಟ್ ಇಲ್ಲಿ ಅಗತ್ಯವಿದೆ. ಮಾಜಿ ಸಚಿವ ಎಚ್‌.ಡಿ ರೇವಣ್ಣ (HD Revanna) ಹಾಗೂ ಪ್ರಜ್ವಲ್ ರೇವಣ್ಣ (Hassan MP Prajwal Revanna) ಇವರಿಬ್ಬರ ಹೊಳೆನರಸೀಪುರ ಮನೆಯ ಬಾಗಿಲಿಗೆ ಇಂದು ನೊಟೀಸ್ (Notice) ಅನ್ನು ಎಸ್‌ಐಟಿ (SIT) ಟೀಂ ಅಂಟಿಸಿದೆ. ಮನೆಯಲ್ಲಿ ಯಾರೂ ಇಲ್ಲದ ಕಾರಣ ಮನೆಯ ಬಾಗಿಲಿಗೆ ನೊಟೀಸ್ ಅಂಟಿಸಿದ್ದು, ಎಸ್‌ಐಟಿ ತನಿಖೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ ಎನ್ನಲಾಗಿದೆ.

ತನಿಖೆಗೆ ಬೇಕು ಎಂದರೆ ಪ್ರಜ್ವಲ್ ಹಾಜರಾಗ್ತಾನೆ ಎಂದು ಎಚ್.ಡಿ ರೇವಣ್ಣ ಹೇಳಿದ್ದಾರೆ. ಪ್ರಜ್ವಲ್ ಬಾರದಿದ್ದಲ್ಲಿ ತನಿಖೆ ನಿಧಾನಗತಿಯಲ್ಲಿ ಸಾಗಬಹುದು. ಆದರೆ ಈಗಾಗಲೇ ಎಸ್‌ಐಟಿ ವಿಚಾರಣೆ ನೋಟಿಸ್‌ ಜಾರಿ ಮಾಡಿದೆ. ಇದಕ್ಕೆ ಉತ್ತರಿಸದೆ ತಲೆ ಮರೆಸಿಕೊಂಡರೆ ಆರೋಪಿಗೆ ಇಂಟರ್‌ಪೋಲ್ ಮುಖಾಂತರ ರೆಡ್ ಕಾರ್ನರ್ ಅಥವಾ ಲುಕ್ ಔಟ್ ನೋಟಿಸ್ ಜಾರಿ ಮಾಡುವ ಸಾಧ್ಯತೆಯೂ ಎಸ್‌ಐಟಿ ಮುಂದಿದೆ.

ಈಗಾಗಲೇ ಡ್ರೈವರ್ ಕಾರ್ತಿಕ್‌ನನ್ನು ಎಸ್‌ಐಟಿ ವಿಚಾರಣೆಗೊಳಪಡಿಸಿದೆ. ಸಂತ್ರಸ್ತೆಯ ಹೇಳಿಕೆಯನ್ನೂ ದಾಖಲಿಸಿದೆ. ನಾಳೆ ಅಥವಾ ನಾಡಿದ್ದು CRPC 164 ಅಡಿಯಲ್ಲಿ ಸ್ಟೆಟ್ಮೆಂಟ್ ಪಡೆಯಲಿದೆ. ವಿಚಾರಣೆ ಬಳಿಕ ಕಾರ್ತಿಕ್ ಮೊಬೈಲ್ ಸೀಜ್ ಮಾಡಿ ಎಫ್ಎಸ್ಎಲ್‌ಗೆ ವಿಧಿವಿಜ್ಞಾನ ಪರಿಶೀಲನೆಗಾಗಿ ಕಳಿಸಲಾಗಿದೆ.

ಇದನ್ನೂ ಓದಿ: Hassan Pen Drive Case: ಹೊಳೆನರಸೀಪುರದ ಮನೆ ಬಾಗಿಲಿಗೆ ನೋಟಿಸ್‌ ಅಂಟಿಸಿ ಎಸ್‌ಐಟಿ ವಾಪಸ್!‌

ಹೋಮ ಮಾಡಿಸುತ್ತಿರುವ ರೇವಣ್ಣ

ತಮ್ಮ ವಿರುದ್ಧ ಎಸ್ಐಟಿ ತನಿಖೆ ಚುರುಕುಗೊಂಡಿರುವ ನಡುವೆ ರೇವಣ್ಣ ದೇವರು ದಿಂಡಿರ ಮೊರೆ ಹೋಗಿದ್ದಾರೆ. ಹೊಳೆನರಸೀಪುರದ ಅವರ ಮನೆಯಲ್ಲಿ ಹೋಮ ಹವನ ಮಾಡಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಎದುರಾದ ಸಂಕಷ್ಟ ನಿವಾರಣೆಗಾಗಿ ಮನೆಯೊಳಗೇ ಹೋಮ ಕುಂಡ ನಿರ್ಮಿಸಿ ಬೆಳಗ್ಗೆಯಿಂದ ಪೂಜೆ ಸಲ್ಲಿಸಲಾಗುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

Karnataka Weather Forecast: ಭಾರಿ ಮಳೆಗೆ (Rain News) ಗುಡ್ಡ ಕುಸಿದಿದೆ. ಪರಿಣಾಮ ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಈ ಮೂಲಕ ಕರಾವಳಿಯಲ್ಲಿ ಮಳೆಗೆ ಮೊದಲ ಬಲಿಯಾಗಿದೆ.

VISTARANEWS.COM


on

By

karnataka Weather Forecast
Koo

ಉಡುಪಿ: ಕರಾವಳಿಯಲ್ಲಿ ಭಾರಿ ಮಳೆಗೆ (Karnataka Weather) ಮೊದಲ (Rain News) ಬಲಿಯಾಗಿದೆ. ಉಡುಪಿಯ ಕೊಲ್ಲೂರು ಗ್ರಾಮದ ಸೊಸೈಟಿ ಗುಡ್ಡೆ ಎಂಬಲ್ಲಿ ಗುಡ್ಡ ಕುಸಿದು ಮಹಿಳೆ ಮೃತಪಟ್ಟಿದ್ದಾರೆ. ಹಳ್ಳಿ ಬೇರು ನಿವಾಸಿ ಅಂಬಾ (45) ಮೃತಪಟ್ಟವರು.

ಏಕಾಏಕಿ ಗುಡ್ಡ ಕುಸಿದು ಬಿದ್ದ ಪರಿಣಾಮ ಅಂಬಾ ಮಣ್ಣಿನ ಅಡಿ ಸಿಲುಕಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಸ್ಥಳೀಯರ ಸಹಾಯದಿಂದ ಮಣ್ಣು ಸರಿಸಿ ಮೃತ ದೇಹವನ್ನು ಮೇಲೆ ಎತ್ತಲಾಗಿದೆ. ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಆಗುಂಬೆಯಲ್ಲಿ 25 ಸೆಂ.ಮೀ ಮಳೆ ದಾಖಲು

ನೈರುತ್ಯ ಮಾನ್ಸೂನ್ ಕರಾವಳಿಯಲ್ಲಿ ಸಕ್ರಿಯವಾಗಿದ್ದರೆ, ಒಳಭಾಗದಲ್ಲಿ ಸಾಮಾನ್ಯವಾಗಿತ್ತು. ಆಗುಂಬೆ (ಶಿವಮೊಗ್ಗ ಜಿಲ್ಲೆ) 25, ಗೇರ್ಸೊಪ್ಪ (ಉತ್ತರ ಕನ್ನಡ ಜಿಲ್ಲೆ) 24, ಸಿದ್ದಾಪುರ (ಉಡುಪಿ ಜಿಲ್ಲೆ) 23, ಕಮ್ಮರಡಿ (ಚಿಕ್ಕಮಗಳೂರು) 20 ಸೆಂ.ಮೀ ಮಳೆಯಾಗಿತ್ತು. ಲಿಂಗನಮಕ್ಕಿ (ಶಿವಮೊಗ್ಗ ಜಿಲ್ಲೆ) 19, ಕದ್ರಾ (ಉತ್ತರ ಕನ್ನಡ ಜಿಲ್ಲೆ) 15, ಸಿದ್ದಾಪುರ (ಉತ್ತರ ಕನ್ನಡ ಜಿಲ್ಲೆ) 15, ಶೃಂಗೇರಿ (ಜಿಲ್ಲೆ ಚಿಕ್ಕಮಗಳೂರು) 15, ಕುಂದಾಪುರ (ಉಡುಪಿ ಜಿಲ್ಲೆ) 13, ಮಂಕಿ (ಉತ್ತರ ಕನ್ನಡ ಜಿಲ್ಲೆ) 12 ಸೆಂ.ಮೀ ಮಳೆಯಾಗಿತ್ತು.

ಇದನ್ನೂ ಓದಿ: Karnataka Rain : ಉಕ್ಕಿ ಹರಿದ ಚಂಡಿಕಾ ಹೊಳೆಯಲ್ಲಿ ಸಿಲುಕಿಕೊಂಡ ಬಸ್‌; ಪ್ರಯಾಣಿಕರು ಕಂಗಾಲು

ಚಾರ್ಮಾಡಿ ಹೆದ್ದಾರಿ ತಡೆಗೋಡೆಗಳಲ್ಲಿ ಬಿರುಕು

ಚಿಕ್ಕಮಗಳೂರಿನಲ್ಲಿ ಮಳೆ ಮುಂದುವರಿದ್ದು, ಚಾರ್ಮಾಡಿ ಹೆದ್ದಾರಿಯ ತಡೆಗೋಡೆಗಳಲ್ಲಿ ಬಿರುಕು ಬಿಟ್ಟಿದೆ. ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಅಲ್ಲಲ್ಲಿ ತಡೆಗೋಡೆಗಳಲ್ಲಿ ಬಿರುಕು ಬಿಟ್ಟಿದ್ದು, ಅಪಾಯಕ್ಕೆ ಆಹ್ವಾನಿಸುತ್ತಿದೆ. ಹೊಸ ಕಾಮಗಾರಿ ನಡೆದ ಸ್ಥಳದಲ್ಲೇ ಬಿರುಕು ಕಾಣಿಸಿಕೊಂಡಿದೆ. ಮಳೆ ಹಾಗೂ ಮಂಜಿನ ನಡುವೆ ರಸ್ತೆ ಬಿರುಕು ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಓಡಾಡುವಂತಾಗಿದೆ. ರಸ್ತೆಗೆ ಕೋಟ್ಯಂತರ ರೂಪಾಯಿ ವ್ಯಯಿಸಿದರೂ ಪ್ರಯೋಜನವಾಗಿಲ್ಲ. ಕಳಪೆ ಗುಣಮಟ್ಟದ ಕಾಮಗಾರಿ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಇತ್ತ ರಾತ್ರಿಯಿಡೀ ಸುರಿದ ಮಳೆಗೆ ಸೇತುವೆ ಮೇಲೆ ನೀರು ಉಕ್ಕಿ ಹರಿಯುತ್ತಿದೆ. ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಬಾಳೆ ಗದ್ದೆ ಬಿಳ್ಳೂರು ಗ್ರಾಮದಲ್ಲಿ ಬಿಳ್ಳೂರು- ಮುಲ್ಲರ ಹಳ್ಳಿ ಸೇರಿ ಹಲವು ಹಳ್ಳಿಗಳ ಸಂಪರ್ಕ ಕಡಿತಗೊಂಡಿದೆ. ಸೇತುವೆ ಮೇಲೆ ನೀರು ನದಿಯಂತೆ ಉಕ್ಕಿ ಹರಿಯುತ್ತಿದೆ. ಒಂದು ಕಡೆಯಿಂದ ಮತ್ತೊಂದು ಕಡೆ ಹೋಗಲು ಗ್ರಾಮಸ್ಥರು ಪರದಾಟ ಅನುಭವಿಸುತ್ತಿದ್ದು, ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಸ್ಥಗಿತಗೊಂಡಿದೆ.

ಶೃಂಗೇರಿಯ ಕೆರೆಕಟ್ಟೆ ಘಟ್ಟಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ಶೃಂಗೇರಿ ಶಾರದಾಂಭೆ ತಟದಲ್ಲಿ ತುಂಗಾ ನದಿ ದೊಡ್ಡ ಪ್ರಮಾಣದಲ್ಲಿ ಹರಿಯುತ್ತಿದೆ. ತುಂಗಾ ನದಿ ಇಕ್ಕೆಲಗಳ ತೋಟಗಳು ಜಲಾವೃತ‌ವಾಗುವ ಸಾಧ್ಯತೆ ಇದೆ. ಇತ್ತ ಅಪಾಯದ ಮಟ್ಟ ಮೀರಿದ ಭದ್ರಾ ನದಿಯಿಂದಾಗಿ ಕಳಸ ತಾಲೂಕಿನ ಹೆಬ್ಬಾಳೆ ಸೇತುವೆ ಮುಳುಗುವ ಹಂತ ತಲುಪಿದೆ.

ಹೆಬ್ಬಾಳೆ ಸೇತುವೆಯ ಮೇಲ್ಪದರಕ್ಕೆ ಭದ್ರಾ ನೀರು ಅಪ್ಪಳಿಸುತ್ತಿದೆ. ಸೇತುವೆ ಮುಳುಗಡೆಯಾದರೆ ಹತ್ತಾರು ಹಳ್ಳಿಗಳ ಸಂಪರ್ಕ ಬಂದ್ ಆಗಲಿದೆ. ಕಳಸ-ಹೊರನಾಡು ಅನ್ನಪೂರ್ಣೇಶ್ವರಿ ದೇಗುಲದ ಮಾರ್ಗವೂ ಬಂದ್ ಆಗಲಿದೆ. ಹೀಗಾಗಿ ಮುಂಜಾಗೃತ ಕ್ರಮವಾಗಿ ಪ್ರವಾಸಿಗರು ಹಾಗೂ ಸ್ಥಳೀಯರ ಓಡಾಟಕ್ಕೆ ತಡೆಹಿಡಿಯಲಾಗಿದೆ. ಯಾವುದೇ ಕ್ಷಣದಲ್ಲಾದರೂ ಸೇತುವೆ ಮೇಲೆ ನೀರು ಉಕ್ಕುವ ಸಾಧ್ಯತೆ ಇದೆ. ಹೀಗಾಗಿ ಸ್ಥಳದಲ್ಲಿಯೇ ಕಳಸ ಪೊಲೀಸರು ಮೊಕ್ಕಾಂ ಹೂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

Karnataka Weather Forecast : ಅಬ್ಬರಿಸುತ್ತಿರುವ ಮಳೆಯಿಂದಾಗಿ ನಾನಾ ಅವಾಂತರವೇ ಸೃಷ್ಟಿ ಆಗಿದೆ. ಮಳೆಗೆ (Rain News) ಲಾರಿಗಳ ನಡುವೆ ಮುಖಾಮುಖಿ (Road Accident) ಡಿಕ್ಕಿಯಾದರೆ, ಮತ್ತೊಂದು ಕಡೆ ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್‌ ಮರ ಬಿದ್ದು ಜಖಂಗೊಂಡಿದೆ. ಹಲವಾರು ಗ್ರಾಮಗಳು ನೀರಿನಿಂದ ಮುಳುಗಡೆಯಾಗಿದೆ.

VISTARANEWS.COM


on

By

karnataka Rain
Koo

ಬೆಳಗಾವಿ/ಶಿವಮೊಗ್ಗ/ಉಡುಪಿ: ಧಾರಾಕಾರವಾಗಿ ಸುರಿಯುತ್ತಿರುವ ಮಳೆಯು (Karnataka rain) ಅವಾಂತರವನ್ನೇ (Rain Effect) ಸೃಷ್ಟಿಸಿದೆ. ತೀವ್ರ ಮಳೆಯಿಂದಾಗಿ ಚಾಲಕರ ನಿಯಂತ್ರಣ ತಪ್ಪಿ ಲಾರಿಗಳ ಮಧ್ಯೆ ಮುಖಾಮುಖಿ (Road Accident) ಡಿಕ್ಕಿಯಾಗಿದೆ. ಬೆಳಗಾವಿ ತಾಲೂಕಿನ ಹಲಗಾ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಲಾರಿ ಚಾಲಕರಿಬ್ಬರಿಗೂ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಡಿಕ್ಕಿಯ ರಭಸಕ್ಕೆ ಲಾರಿಗಳು ಸಂಪೂರ್ಣವಾಗಿ ನುಜ್ಜು ಗುಜ್ಜಾಗಿವೆ. ಹಿರೇಬಾಗೇವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Karnataka Rain

ಮಳೆಗೆ ಕಾರಿನ ಮೇಲೆ ಬಿದ್ದ ಬೃಹತ್‌ ಮರ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಭಾಗದಲ್ಲಿ ಭಾರೀ ಗಾಳಿಯೊಂದಿಗೆ ಮಳೆಯಾಗತ್ತಿದೆ. ಪರಿಣಾಮ ಚಲಿಸುತ್ತಿದ್ದ ಓಮಿನಿ ಕಾರಿನ ಮೇಲೆ ಬೃಹತ್ ಮರ ಬಿದ್ದಿದೆ. ಆಗುಂಬೆ ಘಾಟಿಯ ನಾಲ್ಕನೇ ತಿರುವಿನಲ್ಲಿ ಘಟನೆ ನಡೆದಿದೆ. ಅದೃಷ್ಟವಶಾತ್ ಓಮಿನಿಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಓಮಿನಿ ಚಾಲಕನಿಗೆ ಸಣ್ಣಪುಟ್ಟ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಾರಿನ ಮೇಲೆ ಮರ ಬಿದ್ದ ಹಿನ್ನೆಲೆಯಲ್ಲಿ ಆಗುಂಬೆ ಘಾಟಿಯಲ್ಲಿ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.

karnataka Rain

ಉಡುಪಿಯಲ್ಲಿ ಮುಳುಗಡೆಯಾದ ಗ್ರಾಮಗಳು

ಪ್ರತಿ ವರ್ಷದಂತೆ ಈ ವರ್ಷವೂ ಉಡುಪಿಯ ಬೈಂದೂರು ತಾಲೂಕಿನಲ್ಲಿ ನೆರೆಹಾವಳಿ ಸೃಷ್ಟಿಯಾಗಿದೆ. ತಾಲೂಕಿನ ನಾವುಂದ, ಬಡಾಕೇರಿ, ಮರವಂತೆ, ಸಾಲ್ಬುಡ, ಅರೆಹೊಳೆ ಕೋಣ್ಕಿ ಹಾಗೂ ಕುದ್ರು ಚಿಕ್ಕಳ್ಳಿ ಪಡುಕೋಣೆ ಭಾಗದಲ್ಲಿ ನೆರೆಹಾವಳಿಗೆ ತುತ್ತಾಗಿವೆ.

ಸ್ಥಳೀಯ ಯುವಕರು ನೆರೆಹಾವಳಿ ಪೀಡಿತ ಪ್ರದೇಶಗಳಿಗೆ ತೆರಳಿ ಅಗತ್ಯ ನೆರವು ನೀಡುತ್ತಿದ್ದಾರೆ. ಮೂರು ದೋಣಿಗಳನ್ನು ಬಳಸಿ ರಕ್ಷಣಾ ಕಾರ್ಯದ ಜತೆಗೆ ಅಗತ್ಯ ವಸ್ತು ಪೂರೈಸುತ್ತಿದ್ದಾರೆ. ಹೆಚ್ಚುವರಿಯಾಗಿ ಬೈಂದೂರು ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನೆರೆಪೀಡಿತ ಪ್ರದೇಶಕ್ಕೆ ಕುಂದಾಪುರ ಸಹಾಯಕ ಕಮೀಶನರ್ ರಶ್ಮಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

ಮನೆಗಳು ಜಲಾವೃತ

ಉತ್ತರ ಕನ್ನಡ ಜಿಲ್ಲೆಯಲ್ಲಿ ಅಬ್ಬರದ ಮಳೆಯಿಂದಾಗಿ ಅಂಕೋಲಾ ತಾಲೂಕಿನ ಬಿಳೆಹೊಂಯ್ಗಿ, ಮಂಜಗುಣಿ ಸೇರಿದಂತೆ 5ಕ್ಕೂ ಹೆಚ್ಚು ಗ್ರಾಮಗಳಿಗೆ ನೀರು ನುಗ್ಗಿದೆ. ಹೊನ್ನೆಬೈಲ್ ಗ್ರಾಮದಲ್ಲಿ 20 ಮನೆಗಳು ಜಲಾವೃತಗೊಂಡಿದೆ. ಅಂಕೋಲಾ ತಾಲೂಕಿನ 5 ಗ್ರಾಮಗಳಲ್ಲಿ ರಸ್ತೆ ನೀರಿನಿಂದ ಮುಳುಗಿದೆ. ಹೀಗಾಗಿ ಬಿಳೆಹೊಂಯ್ಗಿ, ಹೊನ್ನೆಬೈಲು, ಶಿಂಗನಮಕ್ಕಿ, ಮಂಜಗುಣಿ ಶಾಲೆಗಳಲ್ಲಿ ಕಾಳಜಿ ಕೇಂದ್ರವನ್ನು ಜಿಲ್ಲಾಡಳಿತ ತೆರೆದಿದೆ. ನೆರೆ ಪರಿಸ್ಥಿತಿ ಹಿನ್ನೆಲೆಯಲ್ಲಿ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

karnataka rain

50ಕ್ಕೂ ಅಧಿಕ ನಿವಾಸಿಗಳು ಕಾಳಜಿ ಕೇಂದ್ರಕ್ಕೆ ರವಾನೆಯಾಗಿದ್ದಾರೆ. ಎಡಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ನದಿ, ಹಳ್ಳ-ಕೊಳ್ಳಗಳು ಉಕ್ಕಿ ಹರಿಯುತ್ತಿದೆ. ವರುಣನ ಅಬ್ಬರಕ್ಕೆ ತಗ್ಗು ಪ್ರದೇಶದ ನಿವಾಸಿಗಳಲ್ಲಿ ಆತಂಕ ಹೆಚ್ಚಿದೆ. ಇತ್ತ ಭಟ್ಕಳದಲ್ಲೂ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನೀರು ನಿಂತು ಹೆದ್ದಾರಿಯಲ್ಲಿ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮಳೆ ಹಿನ್ನಲೆ ಭಟ್ಕಳ ರಂಗಿನಕಟ್ಟೆ ಪ್ರದೇಶ ಹೊಳೆಯಂತಾಗಿದೆ. ಭಟ್ಕಳ ತಹಸೀಲ್ದಾರ ನಾಗರಾಜ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪುರಸಭಾ ಸಿಬ್ಬಂದಿ ಚರಂಡಿಯಲ್ಲಿ ತುಂಬಿರುವ ಮಣ್ಣು, ಕಲ್ಲನ್ನು ತೆರವುಗೊಳಿಸುತ್ತಿದ್ದಾರೆ. ಪಟ್ಟಣದ ಜಾಮೀಯಾಬಾದ್‌ ನಲ್ಲಿಯೂ ಮನೆಗಳಿಗೆ ನೀರು ನುಗ್ಗಿದೆ. ಕೋಗ್ತಿ ರೋಡ್, ಡೊಂಗರಪಳ್ಳಿ, ಆಝಾದ್‌ನಗರ, ಕಾರಗದ್ದೆ ರಸ್ತೆ ಜಲಾವೃತಗೊಂಡಿದೆ.

ಉಡುಪಿಯಲ್ಲಿ ಉಕ್ಕಿಹರಿದ ಮಡಿಸಾಲು ಹೊಳೆ

ಬ್ರಹ್ಮಾವರ ತಾಲೂಕಿನ ಆಲೂರು ಬಳಿ ಮಡಿಸಾಲು ಹೊಳೆಯು ಉಕ್ಕಿಹರಿದಿದೆ. ಆರೂರು- ಬೆಳ್ಮಾರು ಗ್ರಾಮದ ಮಧ್ಯ ಹರಿಯಲಿದ್ದು, ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನೆರೆಹಾವಳಿ ಸೃಷ್ಟಿಯಾಗಿದೆ. ಕೃಷಿಕರಿಗೆ ಜೀವನದಿಯಾಗಿದ್ದ ಮಡಿಸಾಲು ಹೊಳೆ ಉಕ್ಕಿ ಹರಿಯುತ್ತಿದೆ. ಇದರಿಂದಾಗಿ ಹೊಳೆಯ ಪಕ್ಕದ ಎಕರೆಗಟ್ಟಲೆ ಕೃಷಿ ಭೂಮಿ ಜಲಾವೃತಗೊಂಡಿದೆ. ಕೆಲವು ದಿನಗಳ ಹಿಂದೆಯಷ್ಟೆ ಭತ್ತದ ನಾಟಿ ಮಾಡಿ ಮಾಡಿದ್ದ ಪ್ರದೇಶದಲ್ಲಿ ಈಗ ನೆರೆಹಾವಳಿ ಸೃಷ್ಟಿಯಾಗಿದೆ. ನೆರೆಯಿಂದಾಗಿ ಆರೂರು ಬೆಳ್ಮಾರು ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ. ಮತ್ತೆ ಮಳೆ ಮುಂದುವರಿದರೆ ಕಿರು ಸೇತುವೆ ಮುಳುಗಡೆಯಾಗುವ ಭೀತಿ ಇದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು ಗ್ರಾಮಾಂತರ

Wild Animal Attack : ಮಾಗಡಿಯಲ್ಲಿ ರೈತನ ತಲೆ ಬಗೆದ ಕರಡಿ; ಮಲೆನಾಡಿನಲ್ಲಿ ಆನೆಗಳ ಹಾವಳಿ

Wild Animal Attack : ಮತ್ತೆ ಕಾಡು ಪ್ರಾಣಿಗಳು ಹಾವಳಿ ನೀಡುತ್ತಿದ್ದು, ಗ್ರಾಮದೊಳಗೆ ಎಲ್ಲೆಂದರಲ್ಲಿ ಕಾಣಿಸಿಕೊಳ್ಳುತ್ತಿದೆ. ಮಾಗಡಿಯಲ್ಲಿ ರೈತನ ಮೇಲೆ ಕರಡಿಯೊಂದು ದಾಳಿ ಮಾಡಿದ್ದರೆ, ಕೊಡಗು, ಹಾಸನ, ಚಿಕ್ಕಮಗಳೂರಲ್ಲಿ ಕಾಡಾನೆಗಳು ಪ್ರತ್ಯಕ್ಷಗೊಂಡಿವೆ.

VISTARANEWS.COM


on

By

wild animal attack
Koo

ಮಾಗಡಿ: ಇತ್ತೀಚೆಗೆ ರಾಜ್ಯದ ಹಲವೆಡೆ ಕರಡಿ ಹಾವಳಿ (Wild Animal Attack ) ಹೆಚ್ಚಾಗಿದೆ. ಆಹಾರ ಅರಸಿ ಕಾಡು ಬಿಟ್ಟು ನಾಡಿಗೆ ಬರುತ್ತಿರುವ ಕರಡಿ (Bear Attack) ಸಿಕ್ಕ ಸಿಕ್ಕವರ ಮೇಲೆ ದಾಳಿ ಮಾಡುತ್ತಿದೆ. ಚಿರತೆ, ಹುಲಿ, ಕಾಡಾನೆ ಬಳಿಕ ಕರಡಿ ಕಾಟಕ್ಕೆ ಜನರು ಬೇಸತ್ತು ಹೋಗಿದ್ದಾರೆ. ಗುರುವಾರ ಬೆಳಗಿನ ಜಾವ ರೈತರೊಬ್ಬರು ಜಮೀನಿಗೆ ತೆರಳುವಾಗ ಕರಡಿ ದಾಳಿ ಮಾಡಿದ್ದು, ಗಂಭೀರ ಗಾಯಗೊಂಡಿದ್ದಾರೆ.

ಬೆಂಗಳೂರು ಗ್ರಾಮಾಂತರದ ಮಾಗಡಿ ತಾಲೂಕಿನ ಚಕ್ಕಳ್ಳಿ ಗ್ರಾಮದ ಟಿಎನ್‌ ಕೆರೆ ಬಳಿ ಘಟನೆ ನಡೆದಿದೆ. ಮಹೇಂದ್ರ (45) ಕರಡಿ ದಾಳಿಯಿಂದ ಗಾಯಗೊಂಡವರು. ಮಹೇಂದ್ರ ಅವರು ಬೆಳಗ್ಗೆ ಜಮೀನಿಗೆ ತೆರಳುವಾಗ ಏಕಾಏಕಿ ಹಿಂದಿನಿ ಬಂದು ದಾಳಿ ಮಾಡಿದೆ.

ಕರಡಿ ದಾಳಿಯಿಂದ ಮುಗ್ಗರಿಸಿ ಕೆಳಗೆ ಬಿದ್ದ ಮಹೇಂದ್ರ ಅವರ ತಲೆಗೆ ಬಾಯಿ ಹಾಕಿ ಗಾಯಗೊಳಿಸಿದೆ. ಜೋರಾಗಿ ಕಿರುಚಾಡಿದ ಕಾರಣಕ್ಕೆ ಕರಡಿ ಅಲ್ಲಿಂದ ಕಾಲ್ಕಿತ್ತಿದೆ. ಸದ್ಯ ತಲೆ ಭಾಗಕ್ಕೆ ಗಂಭೀರ ಗಾಯವಾಗಿದ್ದು, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸ್ಥಳಕ್ಕೆ ತಾಲೂಕು ಅರಣ್ಯಾಧಿಕಾರಿ ಚೈತ್ರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕರಡಿಯನ್ನು ಹಿಡಿದು ಕಾಡಿಗೆ ಸ್ಥಳಾಂತರ ಮಾಡುವಂತೆ ಗ್ರಾಮಾಸ್ಥರು ಮನವಿ ಮಾಡಿದ್ದಾರೆ.

ಇದನ್ನೂ ಓದಿ: Chikkaballapura News : ಒಂದು ವರ್ಷದ ಮಗು ಬಿಟ್ಟು ಕ್ಷಣಾರ್ಧದಲ್ಲಿ ತಾಯಿ ಎಸ್ಕೇಪ್!

wild animal attack

ಕೊಡಗಿನಲ್ಲಿ ಕಾಡಾನೆ ಪ್ರತ್ಯಕ್ಷ

ಕೊಡಗಿನ ಆನೆಕಾಡು ಬಳಿಯ ಮೆಟ್ನಳನ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಕಾಡಾನೆಯೊಂದು ಪ್ರತ್ಯಕ್ಷಗೊಂಡಿತ್ತು. ಹೆದ್ದಾರಿಯಲ್ಲಿ ಸಾಗಿದ ಕಾಡಾನೆಯಿಂದ ಕೆಲಕಾಲ‌ ಆತಂಕ ಸೃಷ್ಟಿಯಾಗಿತ್ತು. ಆಹಾರ ಅರಸಿ ಕಾಡಿನಿಂದ ನಾಡಿಗೆ ಸಲಗವೊಂದು ಲಗ್ಗೆ ಇಟ್ಟಿತ್ತು. ಕಾಡಾನೆ ಓಡಾಟದ ದೃಶ್ಯವನ್ನು ಸ್ಥಳೀಯರು ತಮ್ಮ ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ.

ಹಾಸನನಲ್ಲೂ ಕಾಡಾನೆಗಳ ಉಪಟಳ

ಹಾಸನ ಜಿಲ್ಲೆಯಲ್ಲಿ ಕಾಡಾನೆಗಳ ಉಪಟಳ ಮುಂದುವರಿದಿದೆ. ಆನೆಗಳ ದಾಳಿಗೆ ಅಪಾರ ಪ್ರಮಾಣದ ಬಾಳೆ, ಕಾಫಿ ಬೆಳೆ ನಾಶವಾಗಿವೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹೊಂಗಡಹಳ್ಳ ಗ್ರಾಮದ ಅಂಬೇಡ್ಕರ್ ನಗರದಲ್ಲಿ ಘಟನೆ ನಡೆದಿದೆ.

ಪರಮೇಶ್ ಎಂಬುವವರ ಮನೆಯ ಸಮೀಪವೇ ಬಂದಿದ್ದ ಕಾಡಾನೆಗಳು, ಬಾಳೆ ಮತ್ತು ಕಾಫಿ ತೋಟವನ್ನು ಸಂಪೂರ್ಣ ನಾಶಪಡಿಸಿವೆ. ಬೆಳೆ ಕಳೆದುಕೊಂಡು ಪರಮೇಶ್ ಕಂಗಾಲಾಗಿದ್ದಾರೆ. ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ. ಗ್ರಾಮದ ಅನತಿ ದೂರದಲ್ಲೇ ಕಾಡಾನೆಗಳ ಹಿಂಡು ಬೀಡುಬಿಟ್ಟಿವೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಆಗಮಿಸಿ ಸೂಕ್ರ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

wild animal attack

ಬಿಳಿಗಿರಿರಂಗನ ಬೆಟ್ಟಕ್ಕೆ ಕಾಡಾನೆ ಎಂಟ್ರಿ

ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟದಲ್ಲಿ ಕಾಡಾನೆಯೊಂದು ಪ್ರತ್ಯಕ್ಷಗೊಂಡಿತ್ತು. ಪದೆ ಪದೇ ಬಿಳಿಗಿರಿರಂಗನ ಬೆಟ್ಟಕ್ಕೆ ಕಾಡಾನೆ ಬರುತ್ತಿದ್ದು, ಜನರು ಆತಂಕದಲ್ಲೇ ದಿನದೂಡುವಂತಾಗಿದೆ. ಬಿಳಿಗಿರಿರಂಗನ ಬೆಟ್ಟದ ಹಾಡಿಯಲ್ಲಿ ಕಾಡಾನೆ ಸಂಚಾರ ಮಾಡುತ್ತಿದ್ದು, ಸ್ಥಳೀಯರು ಸೈರನ್ ಹಾಕಿ ಓಡಿಸುತ್ತಿದ್ದಾರೆ. ಕೆಲ ದಿನಗಳ ಹಿಂದೆಯೂ ಕೂಡ ಪೋಡಿಯಲ್ಲಿ ಆನೆಯೊಂದು ಕಾಣಿಸಿಕೊಂಡಿತ್ತು. ಇದೀಗ ಎಲ್ಲೆಂದರಲ್ಲಿ ಕಾಡಾನೆ ಸಂಚಾರದಿಂದ ಸ್ಥಳೀಯರು ಆತಂಕಗೊಂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಹಾಸನ

Hassan News: ಆಲೂರಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಉಚಿತ ನೋಟ್‌ಬುಕ್‌, ಬ್ಯಾಗ್‌ ವಿತರಣೆ

Hassan News: ಬೆಂಗಳೂರಿನ ಹಂಜಳಿಗೆ ಕಾಳಿಂಗಪ್ಪ ವೆಲ್ಪೇರ್‌ ಅಸೋಸಿಯೇಷನ್‌ನ ಸಂಸ್ಥಾಪಕ ಎಚ್‌.ಕೆ. ಮಂಜುನಾಥ್‌, 30 ಸಾವಿರ ನೋಟ್ ಪುಸ್ತಕಗಳು, 1100 ಶಾಲಾ ಬ್ಯಾಗ್‌ಗಳನ್ನು ಹಾಸನ ಜಿಲ್ಲೆಯ ಆಲೂರು ತಾಲೂಕಿನ ಎಲ್ಲ ಸರ್ಕಾರಿ ಕಿರಿಯ ಹಾಗೂ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಉಚಿತವಾಗಿ ವಿತರಿಸಿದ್ದಾರೆ.

VISTARANEWS.COM


on

Hassan News Distribution of free notebook bag to government primary schools in Alur
Koo

ಹಾಸನ: ಬೆಂಗಳೂರಿನ ಹಂಜಳಿಗೆ ಕಾಳಿಂಗಪ್ಪ ವೆಲ್ಪೇರ್‌ ಅಸೋಸಿಯೇಷನ್ ವತಿಯಿಂದ ಹಾಸನ ಜಿಲ್ಲೆಯ (Hassan News) ಆಲೂರು ತಾಲೂಕಿನ ಎಲ್ಲ ಸರ್ಕಾರಿ ಕಿರಿಯ ಹಾಗೂ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಉಚಿತ ನೋಟ್ ಪುಸ್ತಕ, ಶಾಲಾ ಬ್ಯಾಗ್‌ಗಳನ್ನು ವಿತರಿಸಲಾಯಿತು.

ಬೆಂಗಳೂರಿನ ಹಂಜಳಿಗೆ ಕಾಳಿಂಗಪ್ಪ ವೆಲ್ಪೇರ್‌ ಅಸೋಸಿಯೇಷನ್‌ನ ಸಂಸ್ಥಾಪಕ ಎಚ್‌.ಕೆ. ಮಂಜುನಾಥ್‌ ಅವರು, “ನಮ್ಮ ನಡಿಗೆ ಸರ್ಕಾರಿ ಶಾಲೆಯ ಕಡೆಗೆ ” ಎಂಬ ಅಭಿಯಾನವನ್ನು ಹಮ್ಮಿಕೊಂಡು ಸರ್ಕಾರಿ ಶಾಲೆಗಳ ಸಬಲೀಕರಣಗೊಳಿಸಲು ಕಳೆದ 12 ವರ್ಷಗಳಿಂದ ಈ ಕಾಯಕವನ್ನು ಮಾಡಿಕೊಂಡು ಬರುತಿದ್ದಾರೆ.

ಅಸೋಸಿಯೇಷನ್‌ನ ಸಂಸ್ಥಾಪಕ ಎಚ್‌.ಕೆ. ಮಂಜುನಾಥ್‌, 30 ಸಾವಿರ ನೋಟ್ ಪುಸ್ತಕಗಳು, 1100 ಶಾಲಾ ಬ್ಯಾಗ್‌ಗಳನ್ನು ಆಲೂರು ತಾಲೂಕಿನ ಎಲ್ಲ ಸರ್ಕಾರಿ ಕಿರಿಯ ಹಾಗೂ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ನೋಟ್ ಪುಸ್ತಕಗಳನ್ನು, ಬ್ಯಾಗ್‌ಗಳನ್ನು ಉಚಿತವಾಗಿ ವಿತರಿಸಿದರು.

ಇದನ್ನೂ ಓದಿ: Stock Market: ಷೇರು ಮಾರುಕಟ್ಟೆಯಲ್ಲಿ ಮುಂದುವರಿದ ಗೂಳಿಯ ಅಬ್ಬರ; ಸಾರ್ವಕಾಲಿಕ ಎತ್ತರಕ್ಕೆ ಜಿಗಿದ ಸೆನ್ಸೆಕ್ಸ್

ನೋಟ್ ಬುಕ್ಸ್‌ನ ಕವರ್ ಪೇಜ್‌ನಲ್ಲಿ ಮುದ್ರಿಸಿರುವ 5 ಪಂಚ ಸೂತ್ರಗಳು ವಿದ್ಯಾರ್ಥಿಗಳಿಗೆ ಸೂಕ್ತ ಮಾಹಿತಿಯನ್ನು ನೀಡುವುದಲ್ಲದೇ ಪ್ರತಿ ಶಾಲೆಯಲ್ಲಿ ಪ್ರಮಾಣ ವಚನ ಬೋಧಿಸುವುದರೊಂದಿಗೆ ನೀಡಲಾಯಿತು. ಗುರುಹಿರಿಯರಲ್ಲಿ ಭಕ್ತಿ ಭಾವ, ವಿನಯ, ತಂದೆ ತಾಯಿಯನ್ನು ಕೊನೆಯವರೆಗೂ ನೋಡಿಕೊಳ್ಳುವುದು, ಯಾವುದೇ ದುಶ್ಚಟಗಳಿಗೆ ಬಲಿಯಾಗದೆ ಇರುವುದು, ಶಾಲೆಯೊಂದಿಗೆ ನಿಕಟ ಸಂಪರ್ಕ, ಯಾವುದೇ ಸಂದರ್ಭದಲ್ಲಿಯೂ ಹಣದ ಆಮಿಷಕ್ಕೆ ಒಳಗಾಗದೆ ಇರುವುದು ಇವು ಪಂಚ ಸೂತ್ರಗಳಾಗಿವೆ.

ಈ ಸಂದರ್ಭದಲ್ಲಿ ಹಂಜಳಿಗೆ ಕಾಳಿಂಗಪ್ಪ ವೆಲ್ಪೇರ್‌ ಅಸೋಸಿಯೇಷನ್‌ನ ಸಂಸ್ಥಾಪಕ ಎಚ್‌.ಕೆ. ಮಂಜುನಾಥ್, ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ನೋಟ್‌ ಪುಸ್ತಕ, ಬ್ಯಾಗ್‌ಗಳನ್ನು ವಿತರಣೆ ಮಾಡಿ, ಬಳಿಕ ಮಾತನಾಡಿದರು.

ಇದನ್ನೂ ಓದಿ: Toyota Kirloskar Motor: ಮೊಬಿಲಿಟಿ ಎಂಜಿನಿಯರಿಂಗ್ ಲ್ಯಾಬ್ ಸ್ಥಾಪಿಸಲು ಐಐಎಸ್‌ಸಿಯೊಂದಿಗೆ ಕೈಜೋಡಿಸಿದ ಟಿಕೆಎಂ

ಕಾರ್ಯಕ್ರಮದಲ್ಲಿ ಪಿಯು ಕಾಲೇಜು ಪ್ರಾಚಾರ್ಯ ಕುಮಾರಪ್ಪ, ಎಚ್‌.ಎಂ. ಮಹಾದೇವಪ್ಪ, ಎಸ್‌ಡಿಎಂಸಿಯ ಶೇಖರ್, ಕಾಂತರಾಜ್, ರಾಜಣ್ಣ, ಶಾಲಾ ಶಿಕ್ಷಕರು, ಪೋಷಕರು ಪಾಲ್ಗೊಡಿದ್ದರು.

Continue Reading
Advertisement
Team India
ಪ್ರಮುಖ ಸುದ್ದಿ5 hours ago

Team India : ಮುಂಬೈನಲ್ಲಿ ನಡೆದ ಭಾರತ ತಂಡದ ವಿಜಯೋತ್ಸವ ನೋಡಿದರೆ ರೋಮಾಂಚನ ಖಾತರಿ

Viral Video
ದೇಶ5 hours ago

10 ರೂ.ಗಾಗಿ ಎಲ್ಲರ ಮುಂದೆ ಪ್ಯಾಂಟ್‌ ಬಿಚ್ಚಿ, ಆಟೋ ಡ್ರೈವರ್‌ ಮೇಲೆ ಮಂಗಳಮುಖಿ ಹಲ್ಲೆ; Video ಇಲ್ಲಿದೆ

A lorry collided with a bike Two persons died on the spot
ಕರ್ನಾಟಕ5 hours ago

Road Accident: ಬೈಕ್‌ಗೆ ಲಾರಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು!

Drowned In Water A woman died while crossing the kalu sanka
ಕರ್ನಾಟಕ6 hours ago

Drowned In Water: ಕಾಲು ಸಂಕ ದಾಟುವಾಗ ನೀರಲ್ಲಿ ಕೊಚ್ಚಿ ಹೋದ ಮಹಿಳೆ!

Fans came from Japan to Hyderabad to watch Prabhas starrer Kalki 2898 AD
ಕರ್ನಾಟಕ6 hours ago

Kalki 2898 AD: “ಕಲ್ಕಿ 2898 ಎಡಿ” ಸಿನಿಮಾ ನೋಡಲು ಜಪಾನ್‌ನಿಂದ ಹೈದರಾಬಾದ್‌ಗೆ ಬಂದ ಫ್ಯಾನ್ಸ್‌!

India's open-bus parade
ಪ್ರಮುಖ ಸುದ್ದಿ6 hours ago

India’s open-bus parade : ಮುಂಬೈನಲ್ಲಿ ನಡೆದ ಭಾರತ ಕ್ರಿಕೆಟ್​ ತಂಡದ ವಿಜಯೋತ್ಸವ ಕಾರ್ಯಕ್ರಮದ ಚಿತ್ರಗಳು ಇಲ್ಲಿವೆ

Dr Jitendra Singh
ದೇಶ6 hours ago

2025ರ ವೇಳೆಗೆ ಬಾಹ್ಯಾಕಾಶ, ಸಮುದ್ರದ ಆಳಕ್ಕೆ ಮಾನವ ಸಹಿತ ಮಿಷನ್;‌ ಕೇಂದ್ರ ಸಚಿವ ಮಹತ್ವದ ಘೋಷಣೆ

Rohit Sharma
ಕ್ರಿಕೆಟ್7 hours ago

Rohit Sharma : ವಾಂಖೆಡೆ ಸ್ಟೇಡಿಯಮ್​ನಲ್ಲಿ ಡಾನ್ಸ್ ಮಾಡಿದ ರೋಹಿತ್ ಶರ್ಮಾ

Mukesh Ambani
ದೇಶ7 hours ago

Mukesh Ambani: ಸೋನಿಯಾ ಗಾಂಧಿಯನ್ನು ಮಗನ ಮದುವೆಗೆ ಆಹ್ವಾನಿಸಿದ ಮುಕೇಶ್‌ ಅಂಬಾನಿ

India's open-bus parade
ಪ್ರಮುಖ ಸುದ್ದಿ8 hours ago

India’s open-bus parade : ಭಾರತ ತಂಡದ ವಿಜಯೋತ್ಸವ ಮೆರವಣಿಗೆಯಲ್ಲಿ ಭದ್ರತಾ ವೈಫಲ್ಯ; ಬಸ್​​ನಲ್ಲಿದ್ದ ಆಟಗಾರರು ಜಸ್ಟ್​ ಮಿಸ್​​

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ11 hours ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

karnataka Rain
ಮಳೆ12 hours ago

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

wild animal attack
ಬೆಂಗಳೂರು ಗ್ರಾಮಾಂತರ14 hours ago

Wild Animal Attack : ಮಾಗಡಿಯಲ್ಲಿ ರೈತನ ತಲೆ ಬಗೆದ ಕರಡಿ; ಮಲೆನಾಡಿನಲ್ಲಿ ಆನೆಗಳ ಹಾವಳಿ

Chikkaballapura News
ಚಿಕ್ಕಬಳ್ಳಾಪುರ15 hours ago

Chikkaballapura News : ಒಂದು ವರ್ಷದ ಮಗು ಬಿಟ್ಟು ಕ್ಷಣಾರ್ಧದಲ್ಲಿ ತಾಯಿ ಎಸ್ಕೇಪ್!

karnataka Rain
ಮಳೆ16 hours ago

Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

Karnataka Rain
ಮಳೆ17 hours ago

Karnataka Rain : ಉಕ್ಕಿ ಹರಿದ ಚಂಡಿಕಾ ಹೊಳೆಯಲ್ಲಿ ಸಿಲುಕಿಕೊಂಡ ಬಸ್‌; ಪ್ರಯಾಣಿಕರು ಕಂಗಾಲು

Tornado Effect in Udupi
ಉಡುಪಿ18 hours ago

Tornado Effect : ಉಡುಪಿಯ ರಟ್ಟಾಡಿಯಲ್ಲಿ ಭಾರಿ ಶಬ್ದದೊಂದಿಗೆ ಅಪ್ಪಳಿಸಿದ ಸುಂಟರಗಾಳಿ

karnataka weather Forecast
ಮಳೆ2 days ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ3 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ4 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

ಟ್ರೆಂಡಿಂಗ್‌