SSLC Result 2024: ಕರ್ನಾಟಕದ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಣೆಗೆ ದಿನ ಫಿಕ್ಸ್ - Vistara News

ಪ್ರಮುಖ ಸುದ್ದಿ

SSLC Result 2024: ಕರ್ನಾಟಕದ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಣೆಗೆ ದಿನ ಫಿಕ್ಸ್

SSLC Result 2024: ಎಸ್ಸೆಸ್ಸೆಲ್ಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪ್ರಕ್ರಿಯೆ ಸಂಪೂರ್ಣಗೊಂಡಿದ್ದು, ಫಲಿತಾಂಶದ ಕ್ರೋಢೀಕರಣದ ಕಾರ್ಯ ಅಂತಿಮ ಹಂತದಲ್ಲಿದೆ. ಮೇ 8ರಂದು ಪ್ರಕಟಿಸಲು ಮಂಡಳಿ ನಿರ್ಧರಿಸಿದೆ. ಕಂಪ್ಯೂಟರ್ ಕೆಲಸದಲ್ಲಿ ವಿಳಂಬವಾದರೆ ಮಾತ್ರವೇ ಫಲಿತಾಂಶ ಪ್ರಕಟಿಸುವ ದಿನಾಂಕ ಬದಲಾಗುವ ಸಾಧ್ಯತೆ ಇದೆ.

VISTARANEWS.COM


on

karnataka SSLC result 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿರುವ ಎಸ್ಸೆಸ್ಸೆಲ್ಸಿ 2024ರ (SSLC Result 2024) ಪರೀಕ್ಷೆ- 1ರ ಫಲಿತಾಂಶದ (SSLC exam Result 2024) ಸಮಯ ಸನ್ನಿಹಿತವಾಗಿದೆ. ಲಕ್ಷಾಂತರ ವಿದ್ಯಾರ್ಥಿಗಳು (Students) ಕಾತರದಿಂದ ಕಾಯುತ್ತಿರುವ ಫಲಿತಾಂಶ ಪ್ರಕಟಣೆಗೆ ಮಂಡಳಿ ಮುಹೂರ್ತ ಫಿಕ್ಸ್‌ ಮಾಡಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಮೇ 8ರಂದು ಎಸ್ಸೆಸ್ಸೆಲ್ಸಿ ರಿಸಲ್ಟ್‌ (SSLC result) ಪ್ರಕಟಿಸುವ ಸಾಧ್ಯತೆಗಳಿವೆ.

ಎಸ್ಸೆಸ್ಸೆಲ್ಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪ್ರಕ್ರಿಯೆ ಸಂಪೂರ್ಣಗೊಂಡಿದ್ದು, ಫಲಿತಾಂಶದ ಕ್ರೋಢೀಕರಣದ ಕಾರ್ಯ ಅಂತಿಮ ಹಂತದಲ್ಲಿದೆ. ಮೇ 8ರಂದು ಪ್ರಕಟಿಸಲು ಮಂಡಳಿ ನಿರ್ಧರಿಸಿದೆ. ಕಂಪ್ಯೂಟರ್ ಕೆಲಸದಲ್ಲಿ ವಿಳಂಬವಾದರೆ ಮಾತ್ರವೇ ಫಲಿತಾಂಶ ಪ್ರಕಟಿಸುವ ದಿನಾಂಕ ಬದಲಾಗುವ ಸಾಧ್ಯತೆ ಇದೆ.

2023 & 2024ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯು ಮಾ.25ರಿಂದ ಏ.6ರ ವರೆಗೆ ನಡೆದಿತ್ತು. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಒಟ್ಟು 2750 ಪರೀಕ್ಷಾ ಕೇಂದ್ರಗಳಲ್ಲಿ 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. ಇದರಲ್ಲಿ 4.41 ಲಕ್ಷ ಬಾಲಕರು & 4.28 ಲಕ್ಷ ಬಾಲಕಿಯರು ಸೇರಿದ್ದರು. ಸಾಮಾನ್ಯ ವಿದ್ಯಾರ್ಥಿಗಳ ಜೊತೆಯಲ್ಲಿ 18,225 ಖಾಸಗಿ ವಿದ್ಯಾರ್ಥಿಗಳು & 41,375 ರೀ ಎಕ್ಸಾಮ್ ಬರೆದಿದ್ದ ವಿದ್ಯಾರ್ಥಿಗಳು ಕೂಡ ಸೇರಿದ್ದಾರೆ.

ರಿಸಲ್ಟ್ ಎಲ್ಲಿ ನೋಡಬಹುದು?

ಕರ್ನಾಟಕದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಫಲಿತಾಂಶವನ್ನು ಕರ್ನಾಟಕ ಶಾಲೆ ಪರೀಕ್ಷೆ & ಮೌಲ್ಯ ನಿರ್ಣಯ ಮಂಡಳಿ ವೆಬ್‌ಸೈಟ್‌ನಲ್ಲಿ ನೋಡಬಹುದು. ಮೊದಲಿಗೆ ತಮ್ಮ ರಿಜಿಸ್ಟರ್ ನಂಬರ್/ ರೋಲ್‌ ನಂಬರ್ ಹೊಂದಿರಬೇಕು. ಪರೀಕ್ಷಾ ಪ್ರವೇಶ ಪತ್ರದಲ್ಲಿ ನೀಡಿರುವ ರಿಜಿಸ್ಟರ್ ನಂಬರ್ (ನೋಂದಣಿ ಸಂಖ್ಯೆ) ಮೂಲಕ ಕರ್ನಾಟಕ ಶಾಲೆ ಪರೀಕ್ಷೆ & ಮೌಲ್ಯ ನಿರ್ಣಯ ಮಂಡಳಿ ವೆಬ್‌ಸೈಟ್‌ನಲ್ಲಿ ಫಲಿತಾಂಶ ನೋಡಬಹುದು. ಇದಕ್ಕೆ ನೀವು kseab.karnataka.gov.in ಗೆ ಭೇಟಿ ನೀಡಬಹುದು.

ಶೈಕ್ಷಣಿಕ ಗುಣಮಟ್ಟದ ವಿಚಾರದಲ್ಲಿ ಕರ್ನಾಟಕ ದೇಶದಲ್ಲಿ ದೊಡ್ಡ ಹೆಸರು ಪಡೆದಿದೆ. ಹೀಗಾಗಿ ಕರ್ನಾಟಕದ ಎಸ್‌ಎಸ್‌ಎಲ್‌ ಫಲಿತಾಂಶವು, ಇಡೀ ದೇಶದ ಗಮನವನ್ನ ಸೆಳೆಯುತ್ತಿದೆ. ಕರ್ನಾಟಕದಲ್ಲಿ ಮುಖ್ಯವಾಗಿ ಬೆಂಗಳೂರಿನಲ್ಲಿ ಬೇರೆ ಬೇರೆ ರಾಜ್ಯದ ವಿದ್ಯಾರ್ಥಿಗಳು ಕೂಡ ಓದುತ್ತಿದ್ದಾರೆ. ಪ್ರತಿಯೊಬ್ಬ ವಿದ್ಯಾರ್ಥಿಯ ಬದುಕಿನಲ್ಲೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಮುಖ ಹಂತವಾಗಿರುವುದರಿಂದ, ಕಾತರ ಹೆಚ್ಚಿದೆ. ಫಲಿತಾಂಶ ಬಿಡುಗಡೆಗೆ ಸಕಲ ಸಿದ್ಧತೆ ನಡೆದಿದ್ದು, ಪರೀಕ್ಷಾ ಮಂಡಳಿ ಅಧಿಕಾರಿಗಳು ಕೂಡ ರಿಸಲ್ಟ್ ರಿವೀಲ್ ಮಾಡಲು ಅಂತಿಮ ಹಂತದ ಸಿದ್ಧತೆ ನಡೆಸಿದ್ದಾರೆ.

ಮೂರು ಅವಕಾಶ

ಈ ಬಾರಿ ಮೂರು ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳಿಗೆ ಅವಕಾಶ ನೀಡಲಾಗಿದೆ. ಆ ಮೂರೂ ಪರೀಕ್ಷೆ ಬರೆದವರು ಹೆಚ್ಚು ಅಂಕಗಳು ಯಾವ ಪರೀಕ್ಷೆಯಲ್ಲಿ ಬಂದಿರುತ್ತದೋ ಆ ಫಲಿತಾಂಶವನ್ನು ಉಳಿಸಿಕೊಳ್ಳುವ ಅವಕಾಶ ದೊರೆಯಲಿದೆ. ಪ್ರತಿ ವಿದ್ಯಾರ್ಥಿಗಳು ಮೂರೂ ಪರೀಕ್ಷೆ ಬರೆಯುವುದು ಕಡ್ಡಾಯವಲ್ಲ. ಮೊದಲ ಅಥವಾ ವಾರ್ಷಿಕ ಪರೀಕ್ಷೆಯಲ್ಲಿ ಬಂದ ಫಲಿತಾಂಶದಲ್ಲಿ ಸಮಾಧಾನವಿದ್ದರೆ ಎರಡನೇ ಪರೀಕ್ಷೆ ಬರೆಯುವ ಅಗತ್ಯವಿಲ್ಲ. ಸಮಾಧಾನ ಇಲ್ಲದಿದ್ದರೆ ಅಥವಾ ಕಡಿಮೆ ಅಂಕಗಳು ಬಂದಿದ್ದರೆ ಎರಡನೇ ಪರೀಕ್ಷೆ ಬರೆಯಬಹುದು. ಎರಡನೇ ಪರೀಕ್ಷೆಯ ಫಲಿತಾಂಶದಲ್ಲೂ ಸಮಾಧಾನ ಇಲ್ಲದಿದ್ದರೆ ಮೂರನೇ ಪರೀಕ್ಷೆ ಬರೆಯಬಹುದು. ಈ ರೀತಿ ಮೂರೂ ಪರೀಕ್ಷೆ ಬರೆದರೂ ಮೂರರಲ್ಲಿ ಯಾವ ಫಲಿತಾಂಶವನ್ನು ಬೇಕಾದರೂ ಅಥವಾ ಮೂರೂ ಪರೀಕ್ಷೆಗಳಲ್ಲಿ ಹೆಚ್ಚು ಅಂಕ ಪಡೆದಿರುವ ಬೇರೆ ಬೇರೆ ವಿಷಯಗಳ ಫಲಿತಾಂಶಗಳನ್ನು ಒಟ್ಟಾರೆ ಫಲಿತಾಂಶಕ್ಕೆ ಪರಿಗಣಿಸಬಹುದಾಗಿದೆ.

ಹಾಲಿ ಇರುವ ಪರೀಕ್ಷಾ ಪದ್ಧತಿಯು ವಿದ್ಯಾರ್ಥಿಗಳ ಮೇಲೆ ಹೆಚ್ಚು ಒತ್ತಡ ಮತ್ತು ಪರೀಕ್ಷಾ ಆತಂಕವನ್ನು ಸೃಷ್ಟಿಸುತ್ತಿದೆ. ಆದರಿಂದ ವಿದ್ಯಾರ್ಥಿಗಳ ಜ್ಞಾನಧಾರಣೆ, ಅರ್ಥಪೂರ್ಣ ಕಲಿಕೆ ಹಾಗೂ ಶೈಕ್ಷಣಿಕ ಪ್ರಗತಿಗಾಗಿ ಈ ಸುಧಾರಣಾ ಕ್ರಮ ಕೈಗೊಳ್ಳಲಾಗಿದೆ. ಇದುವರೆಗೆ ವಾರ್ಷಿಕ ಪರೀಕ್ಷೆಯಲ್ಲಿ ಪಡೆದ ಫಲಿತಾಂಶದಲ್ಲಿ ಸಮಾಧಾನವಾಗದಿದ್ದರೆ ವಿದ್ಯಾರ್ಥಿ ಅದನ್ನು ತಿರಸ್ಕರಿಸಿ ಪೂರಕ ಪರೀಕ್ಷೆ ಬರೆಯಬಹುದಿತ್ತು. ಆದರೆ, ಪೂರಕ ಪರೀಕ್ಷೆಯಲ್ಲೇನಾದರೂ ಇನ್ನೂ ಕಳಪೆ ಫಲಿತಾಂಶ ಬಂದರೆ ಅಥವಾ ಫೇಲಾದರೆ ವಾರ್ಷಿಕ ಪರೀಕ್ಷೆಯ ಫಲಿತಾಂಶ ಉಳಿಸಿಕೊಳ್ಳಲು ಅವಕಾಶವಿರಲಿಲ್ಲ. ಈಗ ಮೂರರಲ್ಲಿ ಯಾವ ಫಲಿತಾಂಶವನ್ನು ಬೇಕಾದರೂ ಉಳಿಸಿಕೊಳ್ಳಬಹುದು.

ಇದನ್ನೂ ಓದಿ: Which is best after SSLC: ಎಸ್‌ಎಸ್ಎಲ್‌ಸಿ ನಂತರ ಮುಂದೇನು? ಇಲ್ಲಿದೆ ಉಪಯುಕ್ತ ಮಾಹಿತಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

BS Yediyurappa: ಪೋಕ್ಸೊ ಕೇಸ್; ಯಡಿಯೂರಪ್ಪ ವಿರುದ್ಧ ಅರೆಸ್ಟ್‌ ವಾರಂಟ್, ಶೀಘ್ರವೇ ಬಂಧನ?

BS Yediyurappa: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಪೋಕ್ಸೊ ಕೇಸ್‌ ದಾಖಲಾಗಿದೆ. ಇದಕ್ಕೆ ಸಂಬಂಧಿಸಿದಂತೆ, ನ್ಯಾಯಾಲಯವೀಗ ಜಾಮೀನು ರಹಿತ ವಾರಂಟ್‌ ಹೊರಡಿಸಿದ್ದು, ಮಾಜಿ ಸಿಎಂಗೆ ಬಂಧನದ ಭೀತಿ ಎದುರಾಗಿದೆ.

VISTARANEWS.COM


on

BS Yediyurappa
Koo

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (BS Yediyurappa) ಅವರಿಗೆ ಸಂಕಷ್ಟ ಎದುರಾಗಿದೆ. ಪೋಕ್ಸೊ ಪ್ರಕರಣದಲ್ಲಿ ಬಿ.ಎಸ್‌.ಯಡಿಯೂರಪ್ಪ ಅವರ ವಿರುದ್ಧ ಬೆಂಗಳೂರಿನ 1ನೇ ತ್ವರಿತಗತಿ ನ್ಯಾಯಾಲಯವು ಜಾಮೀನು ರಹಿತ ವಾರಂಟ್‌ ಹೊರಡಿಸಿದ್ದು, ಶೀಘ್ರದಲ್ಲೇ ಅವರನ್ನು ಬಂಧಿಸಲಾಗುತ್ತದೆ ಎಂದು ತಿಳಿದುಬಂದಿದೆ. ನ್ಯಾಯಾಧೀಶ ಎನ್‌.ಎಂ.ರಮೇಶ್‌ ಅವರು ಯಡಿಯೂರಪ್ಪ ಅವರ ವಿರುದ್ಧ ಅರೆಸ್ಟ್ ವಾರಂಟ್‌ ಹೊರಡಿಸಲು ಆದೇಶಿಸಿದ್ದಾರೆ. ಮತ್ತೊಂದೆಡೆ, ಯಡಿಯೂರಪ್ಪ ಅವರು ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್‌ ಮೊರೆ ಹೋಗಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು 17 ವರ್ಷದ ಬಾಲಕಿಯನ್ನು ಕೋಣೆಯೊಳಗೆ ಕರೆದುಕೊಂಡು ಹೋಗಿ, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿದೆ. ಅಷ್ಟೇ ಅಲ್ಲ, ಬಾಲಕಿಯ ತಾಯಿಯು ಮಾರ್ಚ್‌ 17ರಂದು ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಸದಾಶಿವನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ನಂತರ ಪೊಲೀಸರು ಪೋಕ್ಸೊ ಕಾಯ್ದೆ ಅಡಿಯಲ್ಲಿ ಯಡಿಯೂರಪ್ಪ ಅವರ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದರು.

BS Yediyurappa: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಜಾಮೀನು ರಹಿತ ವಾರಂಟ್‌ ಹೊರಡಿಸಲಾಗಿದೆ. ಇದರಿಂದಾಗಿ ಮಾಜಿ ಸಿಎಂಗೆ ಬಂಧನದ ಭೀತಿ ಎದುರಾಗಿದೆ.

ಎಫ್‌ಐಆರ್‌ ದಾಖಲಾದ ಮೂರು ತಿಂಗಳ ಬಳಿಕ ಪ್ರಕರಣವೀಗ ಮತ್ತೆ ಮುನ್ನೆಲೆಗೆ ಬಂದಿದೆ. ಜೂನ್‌ 12ರಂದೇ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಬೇಕು ಎಂಬುದಾಗಿ ಜೂನ್‌ 11ರಂದೇ ಸಿಐಡಿ ಅಧಿಕಾರಿಗಳು ನೋಟಿಸ್‌ ನೀಡಿದ್ದರು. ಈಗಾಗಲೇ, ಬಂಧನದಿಂದ ರಕ್ಷಣೆ ಹಾಗೂ ಪ್ರಕರಣವನ್ನು ರದ್ದುಗೊಳಿಸಬೇಕು ಎಂಬುದಾಗಿ ಯಡಿಯೂರಪ್ಪ ಅವರು ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಕಳೆದ ಏಪ್ರಿಲ್‌ನಲ್ಲಿ ಯಡಿಯೂರಪ್ಪ ಅವರು ಸಿಐಡಿ ವಿಚಾರಣೆಗೂ ಹಾಜರಾಗಿದ್ದರು.

ದೆಹಲಿಯಲ್ಲಿದ್ದಾರೆ ಮಾಜಿ ಸಿಎಂ

ಬಿ.ಎಸ್‌.ಯಡಿಯೂರಪ್ಪ ಅವರು ಸದ್ಯ ದೆಹಲಿಯಲ್ಲಿದ್ದು, ಗುರುವಾರ ಬೆಂಗಳೂರಿಗೆ ಆಗಮಿಸುವ ಸಾಧ್ಯತೆ ಇದೆ. ಮೂರು ದಿನಗಳ ಹಿಂದೆಯೇ ಯಡಿಯೂರಪ್ಪ ಅವರು ದೆಹಲಿಗೆ ತೆರಳಿದ್ದಾರೆ. ಪೋಕ್ಸೊ ಪ್ರಕರಣದ ರದ್ದು ಕೋರಿ ಯಡಿಯೂರಪ್ಪ ಅವರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದು, ಶುಕ್ರವಾರ (ಜೂನ್‌ 14) ವಿಚಾರಣೆಗೆ ಬರುವ ಸಾಧ್ಯತೆ ಇದೆ. ಒಂದು ಕಡೆ ಅವರ ವಿರುದ್ಧ ಜಾಮೀನು ರಹಿತ ವಾರಂಟ್‌ ಜಾರಿಯಾಗಿದೆ. ಮತ್ತೊಂದು ಕಡೆ, ಶುಕ್ರವಾರ ನ್ಯಾಯಾಲಯದ ತೀರ್ಪು ಯಡಿಯೂರಪ್ಪ ಅವರಿಗೆ ಮಹತ್ವದ್ದಾಗಿದೆ. ಇದು ಯಡಿಯೂರಪ್ಪ ಅವರನ್ನು ತುಸು ಚಿಂತೆಯಲ್ಲಿ ಮುಳುಗಿಸಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Actor Darshan: ಕೊಲೆ ಕೇಸ್‌ನಲ್ಲಿ ದರ್ಶನ್‌ ಬಂಧನ; ನಟಿ ಸಂಜನಾಗೆ ಶಾಕ್‌, ರಕ್ಷಿತಾ ಹಾರ್ಟ್‌ಬ್ರೇಕ್, ದೇವರಲ್ಲಿ ಪ್ರಾರ್ಥನೆ!

Continue Reading

ಉದ್ಯೋಗ

Job Alert: ಪದವೀಧರರಿಗೆ ಗುಡ್‌ನ್ಯೂಸ್‌; ಪಶುವೈದ್ಯ ಸೇವಾ ಇಲಾಖೆಯಲ್ಲಿದೆ 400 ವೈದ್ಯಾಧಿಕಾರಿ ಹುದ್ದೆ

Job Alert: ಕರ್ನಾಟಕದಲ್ಲೇ ಉದ್ಯೋಗ ನಿರ್ವಹಿಸಬೇಕು ಎನ್ನುವ ಕನಸು ಕಾಣುತ್ತಿದ್ದೀರಾ? ಹಾಗಾದರೆ ಇಲ್ಲಿದೆ ಸುವರ್ಣಾವಕಾಶ. ಪಶುಪಾಲನೆ ಮತ್ತು ಪಶುವೈದ್ಯ ಸೇವಾ ಇಲಾಖೆ ಖಾಲಿ ಇರುವ ಬರೋಬ್ಬರಿ 400 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಪದವಿ ಪಡೆದವರು ಅರ್ಜಿ ಸಲ್ಲಿಸಲು ಅರ್ಹರು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಜೂನ್‌ 14ರಿಂದ ಅಪ್ಲೈ ಮಾಡಬೇಕಿದ್ದು, ಕೊನೆಯ ದಿನಾಂಕ ಜೂನ್‌ 24.

VISTARANEWS.COM


on

Job Alert
Koo

ಬೆಂಗಳೂರು: ಒಂದೊಳ್ಳೆ ಉದ್ಯೋಗದ ಹುಡುಕಾಟದಲ್ಲಿದ್ದೀರಾ? ಕರ್ನಾಟಕದಲ್ಲೇ ಉದ್ಯೋಗ ನಿರ್ವಹಿಸಬೇಕು ಎನ್ನುವ ಕನಸು ಕಾಣುತ್ತಿದ್ದೀರಾ? ಹಾಗಾದರೆ ಇಲ್ಲಿದೆ ಸುವರ್ಣಾವಕಾಶ. ಪಶುಪಾಲನೆ ಮತ್ತು ಪಶುವೈದ್ಯ ಸೇವಾ ಇಲಾಖೆ (Animal Husbandry & Veterinary Services Karnataka) ಖಾಲಿ ಇರುವ ಬರೋಬ್ಬರಿ 400 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ (AHVS Karnataka Recruitment 2024). ಪಶು ವೈದ್ಯಾಧಿಕಾರಿ ಹುದ್ದೆ ಇದಾಗಿದ್ದು, ಗುತ್ತಿಗೆ ಆಧಾರದಲ್ಲಿ ನೇಮಿಸಲಾಗುತ್ತದೆ. ಪದವಿ ಪಡೆದವರು ಅರ್ಜಿ ಸಲ್ಲಿಸಲು ಅರ್ಹರು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಜೂನ್‌ 14ರಿಂದ ಅಪ್ಲೈ ಮಾಡಬೇಕಿದ್ದು, ಕೊನೆಯ ದಿನಾಂಕ ಜೂನ್‌ 24 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಒಟ್ಟು 400 ಹುದ್ದೆಗಳಿದ್ದು, ಈ ಪೈಕಿ ಕಲ್ಯಾಣ ಕರ್ನಾಟಕಕ್ಕೆ 14 ಪೋಸ್ಟ್‌ ಮೀಸಲಿಡಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅಂಗೀಕೃತ ಪಶುವೈದ್ಯಕೀಯ ವಿಜ್ಞಾನ ವಿಶ್ವ ವಿದ್ಯಾನಿಲಯ ಅಥವಾ ಕೃಷಿ ವಿಶ್ವ ವಿದ್ಯಾನಿಲಯದಿಂದ ಬಿ.ವಿ.ಎಸ್‌.ಸಿ. / ಬಿ.ವಿ.ಎಸ್‌.ಸಿ ಆ್ಯಂಡ್‌ ಎಎಚ್‌ ಪದವಿ ಪಡೆದಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ವಯೋಮಿತಿ

ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ರಿಯಾಯಿತಿ ಲಭ್ಯ. ಪ್ರವರ್ಗ 2 ಎ, 2 ಬಿ, ಪ್ರವರ್ಗ 3 ಎ ಮತ್ತು 3 ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಪ್ರವರ್ಗ 1ರ ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಇದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ 52,640 ರೂ. ಮಾಸಿಕ ವೇತನ ದೊರೆಯಲಿದೆ.

AHVS Karnataka Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸಲುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (ahvs.karnataka.gov.in).
  • ಹೆಸರು, ಫೋನ್‌ ನಂಬರ್‌ ನೀಡಿ ನಿಮ್ಮ ಹೆಸರು ನೋಂದಾಯಿಸಿ.
  • ಲಾಗಿನ್‌ ಆಗಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ದಾಖಲೆ, ಫೋಟೊಗಳನ್ನು ಸೂಕ್ತ ಅಳತೆಯಲ್ಲಿ ಅಪ್‌ಲೋಡ್‌ ಮಾಡಿ.
  • ಭರ್ತಿ ಮಾಡಿದ ಮಾಹಿತಿಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.

ಇದನ್ನು ಗಮನಿಸಿ

  • ಈ ನೇಮಕಾತಿ ಗುತ್ತಿಗೆ ಆಧಾರದಲ್ಲಿ ನಡೆಯುತ್ತಿದ್ದು, ತಾತ್ಕಾಲಿಕವಾಗಿರುತ್ತದೆ.
  • ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಕರ್ನಾಟಕದಲ್ಲಿ ವಾಸವಾಗಿರಬೇಕು.
  • ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನಿಗದಿಪಡಿಸಿರುವ ಮಾಸಿಕ ವೇತನಕ್ಕಿಂತ ಹೊರತುಪಡಿಸಿ ಬೇರೆ ಭತ್ಯೆ ನೀಡಲಾಗುವುದಿಲ್ಲ.
  • ನಿಯುಕ್ತಿಗೊಳಿಸುವ ಸ್ಥಳದಲ್ಲಿಯೇ ಅಭ್ಯರ್ಥಿಗಳು ಕರ್ತವ್ಯ ನಿರ್ವಹಿಸಬೇಕು.
  • ಉದ್ಯೋಗ ತ್ಯಜಿಸುವುದಿದ್ದರೆ 1 ತಿಂಗಳು ಮುಂಚಿತವಾಗಿಯೇ ತಿಳಿಸಬೇಕು.
  • ಅಭ್ಯರ್ಥಿಗಳು ಕಡ್ಡಾಯವಾಗಿ ಗ್ರಾಮೀಣ ಪ್ರದೇಶದಲ್ಲಿ ಕರ್ತವ್ಯ ನಿರ್ವಹಿಸಲು ಬದ್ಧರಾಗಿರಬೇಕು.

ಹೆಚ್ಚಿನ ಮಾಹಿತಿಗೆ, ಯಾವುದೇ ಸಂಶಯ ನಿವಾರಣೆಗೆ ದೂರವಾಣಿ ಸಂಖ್ಯೆ 080-23414446ಕ್ಕೆ ಕರೆ ಮಾಡಿ.

ಇದನ್ನೂ ಓದಿ: Job Alert: ಎಚ್‌ಎಎಲ್‌ನಲ್ಲಿದೆ ಉದ್ಯೋಗಾವಕಾಶ; ಡಿಪ್ಲೋಮಾ ಪಾಸಾದವರು ಅಪ್ಲೈ ಮಾಡಿ

Continue Reading

ದೇಶ

Narendra Modi: ಕಾಶ್ಮೀರಲ್ಲಿ ಉಗ್ರರ ದಾಳಿ ಬೆನ್ನಲ್ಲೇ ದೋವಲ್‌ ಜತೆ ಮೋದಿ ಸಭೆ; ಉಗ್ರರ ನಿರ್ನಾಮಕ್ಕೆ ಸೂಚನೆ!

Narendra Modi: ರಿಯಾಸಿಯಲ್ಲಿ ಉಗ್ರರ ದಾಳಿ ಸೇರಿ ಕಳೆದ ನಾಲ್ಕು ದಿನಗಳಲ್ಲಿ ಮೂರು ಕಡೆ ಉಗ್ರರು ದಾಳಿಗಳನ್ನು ನಡೆಸಿದ್ದಾರೆ. ಇದಾದ ನಂತರ ದೋಡಾದಲ್ಲಿ ಸೇನಾ ನೆಲೆಯ ಮೇಲೆ ಉಗ್ರರು ದಾಳಿ ನಡೆಸಿದ್ದು, ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿತ್ತು. ಇದೇ ವೇಳೆ ಒಬ್ಬ ಯೋಧ ಹುತಾತ್ಮರಾಗಿದ್ದರು. ಅಲ್ಲದೆ, ಕಥುವಾದಲ್ಲಿಯೂ ಉಗ್ರರು ನಡೆಸಿದ ದಾಳಿಯಲ್ಲಿ ಒಬ್ಬ ನಾಗರಿಕ ಮೃತಪಟ್ಟಿದ್ದರು. ಹಾಗಾಗಿ, ಮೋದಿ ಅವರು ಭದ್ರತಾ ಪರಿಶೀಲನೆ ಸಭೆ ನಡೆಸಿದ್ದಾರೆ.

VISTARANEWS.COM


on

Narendra Modi
Koo

ನವದೆಹಲಿ: ಜಮ್ಮು-ಕಾಶ್ಮೀರದಲ್ಲಿ (Jammu Kashmir) ಇತ್ತೀಚೆಗೆ ಉಗ್ರರ ದಾಳಿಗಳು ಜಾಸ್ತಿಯಾಗಿವೆ. ಅದರಲ್ಲೂ, ಯಾತ್ರೆಗೆ ತೆರಳುವ ಹಿಂದುಗಳು, ನಾಗರಿಕರನ್ನು ಗುರಿಯಾಗಿಸಿ ಉಗ್ರರು ದಾಳಿ ಮಾಡುತ್ತಿದ್ದು, ಕಣಿವೆಯಲ್ಲಿ ಭದ್ರತೆ ಕುರಿತು ಆತಂಕ ಎದುರಾಗಿದೆ. ಇದರ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್‌ ಸೇರಿ ಹಲವರೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದ್ದು, ಕಾಶ್ಮೀರದಲ್ಲಿ ಉಗ್ರರ ನಿರ್ನಾಮಕ್ಕೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

ಜಮ್ಮು-ಕಾಶ್ಮೀರ ಲೆಫ್ಟಿನೆಂಟ್‌ ಗವರ್ನರ್‌ ಮನೋಜ್‌ ಸಿನ್ಹಾ, ಎನ್‌ಎಸ್‌ಎ ಅಜಿತ್‌ ದೋವಲ್‌ ಸೇರಿ ಹಲವು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಮೋದಿ ಅವರು ಕಣಿವೆಯ ಭದ್ರತೆಯನ್ನು ಪರಿಶೀಲಿಸಿದರು. ಕಣಿವೆಯಲ್ಲಿ ಶಾಂತಿ ಸ್ಥಾಪನೆಯಾಗಬೇಕು. ಉಗ್ರರ ದಾಳಿಗಳನ್ನು ನಿಗ್ರಹಿಸಬೇಕು. ಗಡಿಯುದ್ದಕ್ಕೂ ಹೆಚ್ಚಿನ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಬೇಕು. ಸೂಕ್ಷ್ಮ ನೆಲೆಗಳಲ್ಲಿ ಹೆಚ್ಚಿನ ಭದ್ರತೆ ಕೈಗೊಳ್ಳಬೇಕು ಎಂದು ಸೂಚಿಸುವ ಜತೆಗೆ ಆಧುನಿಕ ತಂತ್ರಜ್ಞಾನದ ಬಳಕೆ, ಉಗ್ರರ ನಿಗ್ರಹಕ್ಕೆ ಇದುವರೆಗೆ ತೆಗೆದುಕೊಂಡ ಕ್ರಮಗಳ ಕುರಿತು ಕೂಡ ಮೋದಿ ಅವರು ಪರಿಶೀಲನೆ ನಡೆಸಿದರು ಎಂದು ತಿಳಿದುಬಂದಿದೆ.

ಜಮ್ಮು-ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಜೂನ್ 9ರಂದು ನಡೆದ ಭಯೋತ್ಪಾದಕರ ಗುಂಡಿನ ದಾಳಿಯ ಸಂದರ್ಭದಲ್ಲಿ, ಪುಟ್ಟ ಕಂದಮ್ಮನೂ ಸೇರಿ 10 ಮಂದಿ ಮೃತಪಟ್ಟಿದ್ದಾರೆ. ಜಮ್ಮು-ಕಾಶ್ಮೀರದಲ್ಲಿರುವ ಶಿವ ಖೋರಿ ದೇವಸ್ಥಾನಕ್ಕೆ ಹಿಂದು ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದರು. ಪಾಕಿಸ್ತಾನದ ಲಷ್ಕರೆ ತಯ್ಬಾ ಉಗ್ರ ಸಂಘಟನೆಯು ದಾಳಿ ನಡೆಸಿದ್ದು, ಉಗ್ರನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಅಲ್ಲದೆ, ಉಗ್ರನ ಕುರಿತು ಸುಳಿವು ನೀಡಿದರೆ 20 ಲಕ್ಷ ರೂ. ಬಹುಮಾನ ಘೋಷಣೆ ಮಾಡಲಾಗಿದೆ.

ರಿಯಾಸಿಯಲ್ಲಿ ಉಗ್ರರ ದಾಳಿ ಸೇರಿ ಕಳೆದ ನಾಲ್ಕು ದಿನಗಳಲ್ಲಿ ಮೂರು ಕಡೆ ಉಗ್ರರು ದಾಳಿಗಳನ್ನು ನಡೆಸಿದ್ದಾರೆ. ಇದಾದ ನಂತರ ದೋಡಾದಲ್ಲಿ ಸೇನಾ ನೆಲೆಯ ಮೇಲೆ ಉಗ್ರರು ದಾಳಿ ನಡೆಸಿದ್ದು, ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿತ್ತು. ಇದೇ ವೇಳೆ ಒಬ್ಬ ಯೋಧ ಹುತಾತ್ಮರಾಗಿದ್ದರು. ಅಲ್ಲದೆ, ಕಥುವಾದಲ್ಲಿಯೂ ಉಗ್ರರು ನಡೆಸಿದ ದಾಳಿಯಲ್ಲಿ ಒಬ್ಬ ನಾಗರಿಕ ಮೃತಪಟ್ಟಿದ್ದರು. ಇದರಿಂದಾಗಿ ಕಣಿವೆಯಲ್ಲಿ ಭದ್ರತೆ ಕುರಿತು ಜನರಲ್ಲಿ ಆತಂಕ ಹೆಚ್ಚಾಗಿದೆ.

ಇದನ್ನೂ ಓದಿ: Terrorist Attack : ಜಮ್ಮು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ; ಯೋಧ ಹುತಾತ್ಮ , ಆರು ಯೋಧರಿಗೆ ಗಾಯ

Continue Reading

ದೇಶ

Agniveer Scheme: ʼಅಗ್ನಿವೀರ್‌ʼ ಯೋಜನೆಯಲ್ಲಿನ ಈ ಎಲ್ಲ ಬದಲಾವಣೆಗೆ ಭಾರತೀಯ ಸೇನೆ ಸಲಹೆ

Agniveer Scheme: ಕೇಂದ್ರ ಸರ್ಕಾರ 2022ರಲ್ಲಿ ಪರಿಚಯಿಸಿದ, ಭಾರತೀಯ ಸೇನೆಯಲ್ಲಿ ಕಿರು ಅವಧಿಗೆ ಸೇವೆ ಸಲ್ಲಿಸುವ ‘ಅಗ್ನಿವೀರ್’‌ ಯೋಜನೆಗೆ ದೇಶಾದ್ಯಂತ ಭಾರಿ ಸ್ಪಂದನೆ ವ್ಯಕ್ತವಾಗುತ್ತಿದೆ. ಅಗ್ನಿಪಥ್ ಯೋಜನೆಯಡಿ ಸೇನೆಗೆ ಸೇರುವ ಯುವಕರನ್ನು ಅಗ್ನಿವೀರ್ ಎಂದು ಕರೆಯಲಾಗುತ್ತದೆ. ಇದರಲ್ಲಿ ಯುವಜನತೆಗೆ ನಾಲ್ಕು ವರ್ಷಗಳ ಅವಧಿಗೆ ಸಶಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸಲು ಅವಕಾಶ ಸಿಗುತ್ತದೆ. ಅದೇನು ಏನೇನು ಎನ್ನುವ ವಿವರ ಇಲ್ಲಿದೆ.

VISTARANEWS.COM


on

Agniveer Scheme
Koo

ನವದೆಹಲಿ: ಕೇಂದ್ರ ಸರ್ಕಾರ 2022ರಲ್ಲಿ ಪರಿಚಯಿಸಿದ, ಭಾರತೀಯ ಸೇನೆಯಲ್ಲಿ ಕಿರು ಅವಧಿಗೆ ಸೇವೆ ಸಲ್ಲಿಸುವ ‘ಅಗ್ನಿವೀರ್’‌ (Agniveer Scheme) ಯೋಜನೆಗೆ ದೇಶಾದ್ಯಂತ ಭಾರಿ ಸ್ಪಂದನೆ ವ್ಯಕ್ತವಾಗುತ್ತಿದೆ. ಅಗ್ನಿಪಥ್ ಯೋಜನೆಯಡಿ ಸೇನೆಗೆ ಸೇರುವ ಯುವಕರನ್ನು ಅಗ್ನಿವೀರ್ ಎಂದು ಕರೆಯಲಾಗುತ್ತದೆ. ಇದರಲ್ಲಿ ಯುವಜನತೆಗೆ ನಾಲ್ಕು ವರ್ಷಗಳ ಅವಧಿಗೆ ಸಶಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸಲು ಅವಕಾಶ ಸಿಗುತ್ತದೆ. 4 ವರ್ಷಗಳ ಕೆಲಸದ ಅವಧಿ ಪೂರ್ಣಗೊಂಡ ನಂತರ, ‘ಅಗ್ನಿವೀರ್’ ಗಳಿಗೆಗೆ ಒಂದು ದೊಡ್ಡ ಮೊತ್ತದ ‘ನಿವೃತ್ತಿ’ ಪ್ಯಾಕೇಜ್ ಸಹ ಪಾವತಿಸಲಾಗುತ್ತದೆ. ಇದೀಗ ಭಾರತೀಯ ಸೇನೆ ಈ ಅಗ್ನಿವೀರ್‌ ಯೋಜನೆಯಲ್ಲಿ ಕೆಲವು ಬದಲಾವಣೆಯನ್ನು ಸೂಚಿಸಿದೆ. ಅದೇನು ಏನೇನು ಎನ್ನುವ ವಿವರ ಇಲ್ಲಿದೆ.

ಸಂಖ್ಯೆಯ ಹೆಚ್ಚಳ

ಪ್ರಸ್ತುತ 4 ವರ್ಷಗಳ ಸೇವಾ ಅವಧಿಯನ್ನು ಪೂರ್ಣಗೊಳಿಸಿದ ಶೇ. 25ರಷ್ಟು ಅಗ್ನಿವೀರರನ್ನು ಮಾತ್ರ ಉಳಿಸಿಕೊಳ್ಳುವ ನಿಯಮವಿದೆ. ಉಳಿದ ಶೇ. 75ರಷ್ಟು ಮಂದಿ ನಿವೃತ್ತಿ ಪಡೆಯುತ್ತಾರೆ. ಇದು ಬದಲಾಗಬೇಕಿದೆ. ಉಳಿಸಿಕೊಳ್ಳುವವರ ಸಂಖ್ಯೆಯನ್ನು ಶೇ. 25ರಿಂದ ಶೇ. 60-70ಕ್ಕೆ ಏರಿಸಬೇಕು. ಇದರಿಂದ ಭಾರತೀಯ ಸೇನೆಗೆ ಅನುಭವಿ ಯೋಧರು ಲಭ್ಯರಾಗುತ್ತಾರೆ.

ಸೇವಾ ಅವಧಿಯ ಹೆಚ್ಚಳ

ಸದ್ಯ ಅಗ್ನಿವೀರರು 4 ವರ್ಷಗಳ ಕಾಲ ಸೇವೆ ಸಲ್ಲಿಸುತ್ತಿದ್ದಾರೆ. ಈ ಪೈಕಿ 9 ತಿಂಗಳು ತರಬೇತಿಗೆ ಮೀಸಲಿಡಲಾಗಿದೆ. ತರಬೇತಿ ಕಳೆದು ಉಳಿದ ಅಭ್ಯರ್ಥಿಗಳು 3 ವರ್ಷ, 3 ತಿಂಗಳು ಸೇವೆ ಸಲ್ಲಿಸುತ್ತಾರೆ. ಇದು ಬದಲಾಗಬೇಕು. ಸೇವಾ ಅವಧಿಯನ್ನು 7-8 ವರ್ಷಗಳಾಗಿ ಹೆಚ್ಚಿಸಲು ಸೇನೆ ಶಿಫಾರಸ್ಸು ಮಾಡಿದೆ. ಈ ಅವಧಿಯಲ್ಲಿ ಅಗ್ನಿವೀರರು ಸಮಗ್ರ ತರಬೇತಿ ಮತ್ತು ಅನುಭವ ಪಡೆಯಲು ಸಾಧ್ಯವಾಗುತ್ತದೆ.

ತಾಂತ್ರಿಕ ವಿಭಾಗಗಳ ವಯೋಮಿತಿಯಲ್ಲಿ ಹೆಚ್ಚಳ

ಪ್ರಸ್ತುತ 17 ಮತ್ತು 21.5 ವಯೋಮಾನದವರನ್ನು ಅಗ್ನಿವೀರರನ್ನಾಗಿ ನೇಮಿಸಲಾಗುತ್ತದೆ. ಈ ಮಿತಿಯನ್ನು ಹೆಚ್ಚಿಸಲು ಸೇನೆ ಸಲಹೆ ನೀಡಿದೆ. ಸಿಗ್ನಲ್ಸ್‌, ಏರ್‌ ಡಿಫೆನ್ಸ್‌ ಮತ್ತು ಎಂಜಿನಿಯರ್‌ನಂತಹ ತಾಂತ್ರಿಕ ಹುದ್ದೆಗಳಿಗೆ ನೇಮಕ ಮಾಡುವಾಗ ವಯೋಮಿತಿಯನ್ನು 23 ವರ್ಷಕ್ಕೆ ಏರಿಸಬೇಕು ಎಂದು ಸಲಹೆ ನೀಡಲಾಗಿದೆ.

ಅಂಗವಿಕಲರಿಗೆ ಹೆಚ್ಚಿನ ನೆರವು

ಪ್ರಸ್ತುತ ತರಬೇತಿ ಅವಧಿಯಲ್ಲಿ ಅಂಗವಿಕಲರಾಗುವ ಅಗ್ನಿವೀರರಿಗೆ ಹೆಚ್ಚಿನ ಅನುಕೂಲ ಒದಗಿಸುವ ನಿಯಮಗಳಿಲ್ಲ. ಹೀಗಾಗಿ ತರಬೇತಿ ಅವಧಿಯಲ್ಲಿ ಅಂಗವೈಕಲ್ಯ ಅನುಭವಿಸುವವರಿಗೆ ಹೆಚ್ಚಿನ ಸೌಕರ್ಯ ಒದಗಿಸಬೇಕು. ಅಲ್ಲದೆ ಅಗ್ನಿವೀರರು ತಮ್ಮ ಸೇವಾ ಅವಧಿ ಪೂರ್ಣಗೊಳಿಸಿದ ಬಳಿಕ ಉತ್ತಮ ಉದ್ಯೋಗ ಹುಡುಕಿಕೊಳ್ಳಲು ನೆರವು ನೀಡಬೇಕು. ಇದಕ್ಕಾಗಿ ವೃತ್ತಿಪರ ಏಜೆನ್ಸಿ ಆರಂಭಿಸಬಹುದು.

ಕುಟುಂಬಗಳಿಗೆ ಸಹಾಯಹಸ್ತ

ಪ್ರಸ್ತುತ ಯುದ್ಧದಲ್ಲಿ ಮಡಿವ ಅಗ್ನಿವೀರರ ಕುಟುಂಬಗಳಿಗೆ ಆರ್ಥಿಕ ನೆರವು ನೀಡಲು ಯಾವುದೇ ಅವಕಾಶ, ನಿಯಮಗಳಿಲ್ಲ. ಹೀಗಾಗಿ ಹುತಾತ್ಮರಾಗುವ ಅಗ್ನಿವೀರರ ಕುಟುಂಬಕ್ಕೆ ನೆರವಾಗುವ ಭತ್ಯೆಯನ್ನು ಪರಿಚಯಿಸಲು ಸೇನೆ ಸಲಹೆ ನೀಡಿದೆ.

ಇದನ್ನೂ ಓದಿ: Agniveer: ಮೃತ ಅಗ್ನಿವೀರನ ಕುಟುಂಬಕ್ಕೆ ಸಲ್ಲುತ್ತಿದೆ ₹1.13 ಕೋಟಿ ಪರಿಹಾರ; ರಾಹುಲ್‌ ಆರೋಪ ಸುಳ್ಳು ಎಂದ ಸೇನೆ

ಹಲವರಿಂದ ವಿರೋಧ

ಅಲ್ಪಾವಧಿಗೆ ನೇಮಕಾತಿ ನಡೆಸಲಾಗುವ ಅಗ್ನಿಪಥ್ ಯೋಜನೆಯ ಬಗ್ಗೆ ಕೆಲವರು ಈ ಹಿಂದೆಯೇ ಅಪಸ್ವರ ಎತ್ತಿದ್ದಾರೆ. ಇದು ಉದ್ಯೋಗ ಅಭದ್ರತೆ ಮತ್ತು ಮಿಲಿಟರಿ ಸಿಬ್ಬಂದಿಯ ಅಪೂರ್ಣ ತರಬೇತಿಗೆ ಕಾರಣವಾಗಬಹುದು ಎಂದು ಕೆಲವರು ವಾದಿಸುತ್ತಾರೆ. ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ಭಾಗವಾಗಿರುವ ಜೆಡಿಯು ಮತ್ತು ಎಲ್‌ಜೆಪಿ (ಆರ್‌ವಿ) ಕೂಡ ಯೋಜನೆಯನ್ನು ಪರಿಶೀಲಿಸುವಂತೆ ಸೂಚಿಸಿದೆ.

Continue Reading
Advertisement
Shirt Fashion
ಫ್ಯಾಷನ್33 seconds ago

Shirt Fashion: ಮೆನ್ಸ್ ಹೈ ಫ್ಯಾಷನ್‌ಗೆ ಲಗ್ಗೆ ಇಟ್ಟ ಪ್ರಯೋಗಾತ್ಮಕ ರ‍್ಯಾಂಪ್‌ ಶರ್ಟ್

BS Yediyurappa
ಕರ್ನಾಟಕ51 seconds ago

BS Yediyurappa: ಪೋಕ್ಸೊ ಕೇಸ್; ಯಡಿಯೂರಪ್ಪ ವಿರುದ್ಧ ಅರೆಸ್ಟ್‌ ವಾರಂಟ್, ಶೀಘ್ರವೇ ಬಂಧನ?

Rohit Sharma
ಕ್ರೀಡೆ10 mins ago

Rohit Sharma: ನ್ಯೂಯಾರ್ಕ್‌ ಪಿಚ್‌ನಲ್ಲಿ ಆಡುವುದು ಸುಲಭವಲ್ಲ ಎಂದ ರೋಹಿತ್​

Bengalurus first double-decker flyover ready
ಬೆಂಗಳೂರು19 mins ago

Double Decker Flyover : ಬೆಂಗಳೂರಿನ ಮೊದಲ ಡಬಲ್‌ ಡೆಕ್ಕರ್‌ ಫ್ಲೈಓವರ್‌ ಕೊನೆಗೂ ಸಿದ್ಧ; ಯಾವಾಗಿಂದ ಸಂಚಾರಕ್ಕೆ ಅವಕಾಶ

Job Alert
ಉದ್ಯೋಗ20 mins ago

Job Alert: ಪದವೀಧರರಿಗೆ ಗುಡ್‌ನ್ಯೂಸ್‌; ಪಶುವೈದ್ಯ ಸೇವಾ ಇಲಾಖೆಯಲ್ಲಿದೆ 400 ವೈದ್ಯಾಧಿಕಾರಿ ಹುದ್ದೆ

Narendra Modi
ದೇಶ41 mins ago

Narendra Modi: ಕಾಶ್ಮೀರಲ್ಲಿ ಉಗ್ರರ ದಾಳಿ ಬೆನ್ನಲ್ಲೇ ದೋವಲ್‌ ಜತೆ ಮೋದಿ ಸಭೆ; ಉಗ್ರರ ನಿರ್ನಾಮಕ್ಕೆ ಸೂಚನೆ!

Duniya Vijay divorce filed was dismissed
ಸ್ಯಾಂಡಲ್ ವುಡ್49 mins ago

Duniya Vijay: ವಿಚ್ಛೇದನ ಕೋರಿ ದುನಿಯಾ ವಿಜಯ್ ಸಲ್ಲಿಸಿದ್ದ ಅರ್ಜಿ ವಜಾ

Drowned in water
ಮಂಡ್ಯ55 mins ago

Drowned in water : ಈಜಲು ಕಾವೇರಿ ನದಿಗಿಳಿದ ಬಾಲಕರಿಬ್ಬರು ಜಲ ಸಮಾಧಿ

Agniveer Scheme
ದೇಶ1 hour ago

Agniveer Scheme: ʼಅಗ್ನಿವೀರ್‌ʼ ಯೋಜನೆಯಲ್ಲಿನ ಈ ಎಲ್ಲ ಬದಲಾವಣೆಗೆ ಭಾರತೀಯ ಸೇನೆ ಸಲಹೆ

Rajal Arora
ಕ್ರೀಡೆ1 hour ago

Rajal Arora: ಟೀಮ್​ ಇಂಡಿಯಾ ಜತೆಗಿರುವ ಏಕೈಕ ಮಹಿಳಾ ಸಿಬ್ಬಂದಿ ಯಾರು? ಇವರ ಕೆಲಸವೇನು?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ2 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ2 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ2 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ2 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ6 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ6 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌