Prajwal Revanna Case: ನಿನ್ನ ಮಗನಿಂದ ಇಂಥ ಕಪ್ಪು ಚುಕ್ಕೆ ಬಂತು; ರೇವಣ್ಣ ಮೇಲೆ ಮುಗಿಬಿದ್ದ ಎಚ್‌ಡಿಡಿ, ಎಚ್‌ಡಿಕೆ - Vistara News

ಕ್ರೈಂ

Prajwal Revanna Case: ನಿನ್ನ ಮಗನಿಂದ ಇಂಥ ಕಪ್ಪು ಚುಕ್ಕೆ ಬಂತು; ರೇವಣ್ಣ ಮೇಲೆ ಮುಗಿಬಿದ್ದ ಎಚ್‌ಡಿಡಿ, ಎಚ್‌ಡಿಕೆ

Prajwal Revanna Case: “ನಿನ್ನ ಮಗ ಮಾಡಿದ ಕೃತ್ಯಕ್ಕೆ ನಾವು ತಲೆ ತಗ್ಗಿಸಬೇಕು. ಇಡೀ ಪ್ರಪಂಚಕ್ಕೆ ಗೊತ್ತಾಗುವ ಕೆಲಸ ಮಾಡಿ ಹೋದ. ದೇಶದಲ್ಲಿ ತಲೆ ಎತ್ತಿಕೊಳ್ಳದಂತೆ ಮಾಡಿ ಹೋದ” ಎಂದು ಎಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರೂ ಸಹ ಇದೇ ವೇಳೆ ತಮ್ಮ ಅಸಮಾಧಾನ ಹೊರಹಾಕಿದ್ದು, ನನ್ನ ರಾಜಕೀಯ ಜೀವನದಲ್ಲಿ ಇಂತಹ ಪರಿಸ್ಥಿತಿಯನ್ನು ಎದುರಿಸಿರಲಿಲ್ಲ ಎಂದು ಹರಿಹಾಯ್ದಿದ್ದಾರೆ.

VISTARANEWS.COM


on

Prajwal Revanna Case HD DeveGowda and HD Kumaraswamy slams HD Revanna
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಹಾಸನ ಸಂಸದ (Hassan MP), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna Case) ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಎಚ್‌.ಡಿ. ರೇವಣ್ಣ ವಿರುದ್ಧ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ನಿನ್ನ ಮಗನಿಂದ ತಲೆ ತಗ್ಗಿಸಬೇಕಾಗಿ ಬಂತು. ನಿನ್ನ ಮಗನಿಂದ ಇಂತಹ ಕಪ್ಪು ಚುಕ್ಕೆ ಬಂತು ಎಂದು ಹರಿಹಾಯ್ದಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಎಚ್‌.ಡಿ. ದೇವೇಗೌಡ ನಿವಾಸದಲ್ಲಿ ಸಭೆ ನಡೆದಿದ್ದು, ಪ್ರಜ್ವಲ್ ಪ್ರಕರಣದಲ್ಲಿ ರಾಜಕೀಯ ವಿರೋಧಿಗಳ ವಿರುದ್ಧ ಕಾನೂನು ಹೋರಾಟದ ಬಗ್ಗೆ ಚರ್ಚೆಯನ್ನು ನಡೆಸಲಾಗಿದೆ. ದೇವೇಗೌಡರ ಸಮ್ಮುಖದಲ್ಲಿ ಹಲವು ವಿಚಾರಗಳ ಬಗ್ಗೆ ಮಾತುಕತೆ ನಡೆದಿದೆ ಎನ್ನಲಾಗಿದೆ. ಈ ವೇಳೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಸಿಟ್ಟಾಗಿ ರೇವಣ್ಣ ಮೇಲೆ ಕಿಡಿಕಾರಿದ್ದಾರೆ ಎನ್ನಲಾಗಿದೆ.

“ನಿನ್ನ ಮಗ ಮಾಡಿದ ಕೃತ್ಯಕ್ಕೆ ನಾವು ತಲೆ ತಗ್ಗಿಸಬೇಕು. ಇಡೀ ಪ್ರಪಂಚಕ್ಕೆ ಗೊತ್ತಾಗುವ ಕೆಲಸ ಮಾಡಿ ಹೋದ. ದೇಶದಲ್ಲಿ ತಲೆ ಎತ್ತಿಕೊಳ್ಳದಂತೆ ಮಾಡಿ ಹೋದ” ಎಂದು ಎಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರೂ ಸಹ ಇದೇ ವೇಳೆ ತಮ್ಮ ಅಸಮಾಧಾನ ಹೊರಹಾಕಿದ್ದು, ನನ್ನ ರಾಜಕೀಯ ಜೀವನದಲ್ಲಿ ಇಂತಹ ಪರಿಸ್ಥಿತಿಯನ್ನು ಎದುರಿಸಿರಲಿಲ್ಲ. ಇಂತಹ ಕಪ್ಪು ಚುಕ್ಕೆ ನಮ್ಮ ವಿರುದ್ಧ ಬಂದಿರಲಿಲ್ಲ. ನಿನ್ನ ಮಗನಿಂದ ಇಂತಹ ಕಪ್ಪು ಚುಕ್ಕೆ ಬಂತು. ಮಗನನ್ನು ಬೆಳೆಸುವ ವಿಚಾರದಲ್ಲಿ ನೀನು ಎಡವಿದ್ದೀಯಾ ಎಂದು ಗರಂ ಆಗಿದ್ದಾರೆ ಎನ್ನಲಾಗಿದೆ.

ರಾಜಕೀಯ ಮತ್ತು ಕಾನೂನಾತ್ಮಕ ಹೋರಾಟದ ಚರ್ಚೆ

ಬಳಿಕ ಈ ಪ್ರಕರಣದಲ್ಲಿ ರಾಜಕೀಯ ವಿರೋಧಿಗಳಿಗೂ ಖಡಕ್ ಎಚ್ಚರಿಕೆ ಕೊಡಬೇಕು. ಅಲ್ಲದೆ, ನಮ್ಮ ತಂಟೆಗೆ ಬಂದ ಡಿ.ಕೆ. ಬ್ರದರ್ಸ್‌ಗೆ ತಿರುಗೇಟು ಕೊಡಬೇಕು. ಕೇವಲ ರಾಜಕೀಯವಾಗಿ ಅಷ್ಟೇ ಅಲ್ಲ. ಕಾನೂನಾತ್ಮಕವಾಗಿ ಹೋರಾಟ ಮಾಡಲು ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ. ಆ ವಿಡಿಯೊಗಳನ್ನು ಬಿಡುಗಡೆ ಮಾಡಿದವರು ಯಾರು? ಇದರ ಹಿಂದೆ ಇರುವ ಶಕ್ತಿಗಳ ವಿರುದ್ಧ ಕಾನೂನು ಹೋರಾಟ ಮಾಡಲು ತಂತ್ರಗಾರಿಕೆ ರೂಪಿಸಲಾಗಿದೆ ಎನ್ನಲಾಗಿದೆ.

ಪ್ರಜ್ವಲ್‌ ಅರೆಸ್ಟ್‌ ಆದಲ್ಲಿ ಎಸ್‌ಐಟಿ ಕೇಳುವ ಪ್ರಶ್ನೆಗಳಿವು! ರೇವಣ್ಣಗೂ ತಟ್ಟುವ ಬಿಸಿ

ಪ್ರಜ್ವಲ್‌ ಎಸ್ಐಟಿ ಅಧಿಕಾರಿಗಳ ಮುಂದೆ ಹಾಜರಾದಲ್ಲಿ ಇಲ್ಲವೇ ಅವರನ್ನು ಬಂಧಿಸಿ ಕರೆತಂದಲ್ಲಿ ಅವರಿಗೆ ಸರಣಿ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಈಗಾಗಲೇ ಹಲವು ಪ್ರಶ್ನೆಗಳನ್ನು ಎಸ್‌ಐಟಿ ಸಿದ್ಧಪಡಿಸಿಟ್ಟುಕೊಂಡಿದೆ ಎನ್ನಲಾಗಿದೆ. ಪ್ರಕರಣ ಸಂಬಂಧ ಸಣ್ಣ ಸಣ್ಣ ಪ್ರಶ್ನೆಗಳನ್ನೂ ಕೇಳಿ ಪ್ರಜ್ವಲ್‌ ಹೇಳಿಕೆಯನ್ನು ದಾಖಲು ಮಾಡಿಕೊಳ್ಳಲಾಗುತ್ತದೆ. ಪ್ರಜ್ವಲ್‌ ಅವರ ವಯಸ್ಸಿನಿಂದ ಹಿಡಿದು ಹಲವು ಪ್ರಶ್ನೆಗಳನ್ನು ಕೇಳಲಿದ್ದಾರೆ. ಆರೋಪಗಳ ಬಗ್ಗೆ ಏನು ಹೇಳುತ್ತೀರಿ? ನೀವೇ ರೆಕಾರ್ಡ್‌ ಮಾಡಿಕೊಂಡಿದ್ದೀರಿ ಎಂಬ ಆರೋಪ ಇದೆ. ರೆಕಾರ್ಡ್‌ಗೆ ಯಾವ ಸಾಧನವನ್ನು ಬಳಸಿಕೊಂಡಿದ್ದೀರಿ. ಡಿಯೋ ಇಟ್ಕೊಂಡು ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದಿರಾ? ಎಂಬಿತ್ಯಾದಿ ಪ್ರಶ್ನೆಗಳನ್ನು ಕೇಳಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಅದೇ ರೀತಿ ಪ್ರಜ್ವಲ್‌ ರೇವಣ್ಣ ಅವರ ತಂದೆ ಎಚ್.ಡಿ. ರೇವಣ್ಣ ಅವರಿಗೂ ಹಲವು ಪ್ರಶ್ನೆಗಳನ್ನು ಕೇಳಲು ಎಸ್‌ಐಟಿ ರೆಡಿಯಾಗಿದೆ. ನಿಮ್ಮ ಪುತ್ರನ ಮೇಲೆ ಆರೋಪಿವಿರುವುದು ಗಮನಕ್ಕೆ ಬಂದಿತ್ತಾ? ನಿಮ್ಮ ಗಮನಕ್ಕೆ ಬಂದಿದ್ರೆ ಅದರ ಬಗ್ಗೆ ಪ್ರಜ್ವಲ್‌‌ ಜತೆ ಚರ್ಚಿಸಿದ್ದಿರಾ? ಒಂದು ವೇಳೆ ಚರ್ಚೆ ಮಾಡಿದರೆ ನಿಮ್ಮ ಪುತ್ರ ಏನು ಹೇಳಿದ್ದರು? ಎಂಬಿತ್ಯಾದಿ ಪ್ರಶ್ನೆಗಳನ್ನು ಕೇಳಲಾಗುತ್ತದೆ ಎಂದು ಹೇಳಲಾಗಿದೆ.

ಪ್ರಜ್ವಲ್ ರೇವಣ್ಣಗೆ SIT ಕೇಳುವ ಸಂಭಾವ್ಯ ಪ್ರಶ್ನೆಗಳು

1- ಪ್ರಜ್ವಲ್ ಅವರೇ ನಿಮಗೆ ವಯಸ್ಸು ಎಷ್ಟು?
2- ನೀವು ಏನು ಓದಿದ್ದೀರಿ? ಎಲ್ಲಿ ಓದಿದ್ದು?
3- ಎಲೆಕ್ಷನ್ ಮುಗಿದ ತಕ್ಷಣ ತಾವು ಎಲ್ಲಿಗೆ ಹೋದಿರಿ?
4- ನೀವು ಹೆಚ್ಚಾಗಿ ವಾಸವಿರೋದು ಹಾಸನವಾ? ದೆಹಲಿಯಾ? ಅಥವಾ ಬೆಂಗಳೂರಲ್ಲೋ?
5- ನಿಮ್ಮ ಮೇಲೆ ಕೇಳಿ ಬಂದಿರುವ ಆರೋಪಗಳ ಬಗ್ಗೆ ಏನಂತೀರಿ?
6- ಅಸಲಿಗೆ ಅವು ನಿಮ್ಮ ವಿಡಿಯೊಗಳಾ?
7- ವಿಡಿಯೋದಲ್ಲಿರುವ ಧ್ವನಿ ನಿಮ್ಮದಲ್ಲವೇ?
8- ನಿಮ್ಮಿಂದಲೇ ರೆಕಾರ್ಡ್‌ ಎನ್ನಲಾಗುತ್ತಿದೆ, ಹೌದೇ?
9- ರೆಕಾರ್ಡ್ ಮಾಡಲು ಬಳಸಿದ ಸಾಧನ ಯಾವುದು?
10- ನೀವೇ ರೆಕಾರ್ಡ್ ಮಾಡಿದ್ದಂತೆ. ಯಾಕೆ ಮಾಡಿದಿರಿ?
11 – ವಿಡಿಯೋ ಇಟ್ಕೊಂಡು ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದಿರಾ?
12- ನಿಮ್ಮ ಮೋಜಿಗೆ ವಿಡಿಯೊಗಳನ್ನು ಮಾಡಿಕೊಳ್ಳುತ್ತಿದ್ದಿರಾ?
13- ರೆಕಾರ್ಡ್ ಮಾಡುವುದು ತಪ್ಪು ಎಂದು ನಿಮಗೆ ಗೊತ್ತಿಲ್ವೆ?
14- ದೃಶ್ಯಗಳಲ್ಲಿ ಇರುವ ಮಹಿಳೆಯರು ನಿಮಗೆ ಪರಿಚಯವೇ?
15- ಆ ಮಹಿಳೆಯರನ್ನು ನೀವು ಎಲ್ಲಿ ಭೇಟಿ ಮಾಡಿದಿರಿ?
16- ದೈಹಿಕ ಸಂಪರ್ಕ ಬೆಳೆಸಲು ಏನಾದರೂ ಆಮಿಷ ಒಡ್ಡಿದ್ರಾ?
17 – ಅದು ಅತ್ಯಾಚಾರಕ್ಕೆ ಸಮ ಎಂದು ಗೊತ್ತಿದೆಯೇ?
18- ಪ್ರಮೋಷನ್, ಕೆಲಸದ ನೆಪದಲ್ಲಿ ದೈಹಿಕ ಸಂಪರ್ಕ ಮಾಡಿದಿರಾ?
19- ನಿಮಗೇನಾದರೂ ಮಾನಸಿಕ ಸಮಸ್ಯೆ ಇದೆಯಾ?
20- ನೀವು ದೌರ್ಜನ್ಯ ನಡೆಸುತ್ತಿರುವಂತಿದೆ, ಏನಂತೀರಿ?
21- ನೋಟಿಸ್ ಕೊಟ್ಟರೂ 7 ದಿನ ಟೈಮ್ ಯಾಕೆ ಕೇಳಿದಿರಿ?
22- ನೀವು ದೃಶ್ಯ ಶೂಟ್ ಮಾಡಲು ಬಳಸಿದ ಸಾಧನ ಎಲ್ಲಿದೆ?
23- ಬೇರೆ ಯಾರ ಬಳಿಯಾದರೂ ವಿಡಿಯೊ ಶೇರ್ ಮಾಡಿದಿರಾ?
24- ಖಾಸಗಿ ದೃಶ್ಯಗಳು ಹೇಗೆ ಹೊರಗೆ ಬಂದವು ಹೇಳಬಹುದಾ?
25- ನಿಮಗೆ ಕಾರ್ತಿಕ್ ಎಂಬ ವ್ಯಕ್ತಿ ಗೊತ್ತಾ?
26 – ನಿಮಗೂ ಕಾರ್ತಿಕ್‌ಗೂ ಸ್ನೇಹವಿತ್ತಾ?
27 – ನಿಮ್ಮ ವಿರುದ್ಧ ಸುದ್ದಿ ಪ್ರಸಾರವಾಗದಂತೆ ತಡೆ ತಂದಿದ್ದಿರಿ ಯಾಕೆ?
28 – ನಿಮ್ಮ ಮೇಲಿನ ಪಿತೂರಿ ಅಂತಾದರೆ ನೀವ್ಯಾಕೆ ದೂರು ನೀಡಲಿಲ್ಲ?
29 – ನಿಮ್ಮ ವಿರುದ್ಧ ಆರೋಪ ಬಂದ ಕೂಡಲೇ ಯಾಕೆ ದೇಶ ಬಿಟ್ಟು ಹೋದಿರಿ?
30 – ಮನೆಯಲ್ಲಿ ಯಾರ ಬಳಿಯಾದರೂ ಈ ವಿಷಯಗಳನ್ನು ಹೇಳಿಕೊಳ್ಳುತ್ತಿದ್ದಿರಾ?
31 – ಕೆಲಸದಾಕೆಯ ಆರೋಪದ ಬಗ್ಗೆ ಏನಂತೀರಿ?
32 – ಪ್ರಜ್ವಲ್ ನೀವು ತನಿಖೆಗೆ ಸಹಕರಿಸಬೇಕು
33 – ತನಿಖೆ ಪೂರ್ಣವಾಗುವವರೆಗೂ ದೇಶ ಬಿಟ್ಟು ಹೋಗಬೇಡಿ

ಎಂಬಿತ್ಯಾದಿ ಪ್ರಶ್ನೆಗಳನ್ನು ಎಸ್‌ಐಟಿ ಕೇಳಲಿದೆ. ಒಂದು ವೇಳೆ ಇವುಗಳಿಗೆ ಆರೋಪಿ ಪ್ರಜ್ವಲ್‌ ಸ್ಪಂದಿಸದೆ ಸಮರ್ಪಕ ಉತ್ತರ ನೀಡಿದ್ದರೆ ಮುಂದಿನ ಕ್ರಮದ ಬಗ್ಗೆ ಎಸ್‌ಐಟಿ ಚಿಂತನೆ ನಡೆಸಲಿದೆ ಎನ್ನಲಾಗಿದೆ.

ಇದನ್ನೂ ಓದಿ: Prajwal Revanna Case: SIT ಮುಂದೆ ಹಾಜರಾಗಲು ವಿನಾಯಿತಿ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕಾರ? ತನಿಖೆಗೆ ಆತುರ ಏಕೆ?

ಎಚ್‌‌‌‌.ಡಿ.ರೇವಣ್ಣಗೆ SIT ಕೇಳುವ ಸಂಭಾವ್ಯ ಪ್ರಶ್ನೆಗಳು!

1) ನಿಮ್ಮ ಹೆಸರೇನು..? ಏನು ಕೆಲಸ ಮಾಡಿಕೊಂಡಿದ್ದೀರಿ..?
2) ಯಾವ ವಿಳಾಸದಲ್ಲಿ ವಾಸವಾಗಿದ್ದೀರಾ? ಎಷ್ಟು ವರ್ಷ..?
3) ನಿಮ್ಮ ಮೇಲೆ ಸಂತ್ರಸ್ತೆ ನೀಡಿದ ದೂರಿನ ಬಗ್ಗೆ ಮಾಹಿತಿ ಇದೆಯಾ?
4) ದೂರು ನೀಡಿರುವ ಮಹಿಳೆ ಪರಿಚಯಸ್ಥರಾ? ಸಂಬಂಧಿನಾ?
5) ಎಷ್ಟು ವರ್ಷಗಳಿಂದ ನಿಮ್ಮ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದಾರೆ..?
6) ದೂರಿನಲ್ಲಿ ಉಲ್ಲೇಖಿಸಿದಂತೆ ಲೈಂಗಿಕ ದೌರ್ಜನ್ಯ ಎಸಗಿದ್ದೀರಾ?
7) ನಿಮ್ಮ ಪುತ್ರನ ಮೇಲೂ ಆರೋಪಿವಿದೆ ಗಮನಕ್ಕೆ ಬಂದಿತ್ತಾ..?
8) ನಿಮ್ಮ ಗಮನಕ್ಕೆ ಬಂದಿದ್ದರೆ ಅದರ ಬಗ್ಗೆ ಪ್ರಜ್ವಲ್‌‌ ಜತೆ ಚರ್ಚಿಸಿದ್ದಿರಾ?
9) ಒಂದು ವೇಳೆ ಚರ್ಚೆ ಮಾಡಿದ್ದರೆ ನಿಮ್ಮ ಪುತ್ರ ಏನು ಹೇಳಿದ್ದರು?
10) ನಿಮ್ಮ ಪುತ್ರನ ಕಾರು ಚಾಲಕ ಕಾರ್ತಿಕ್ ಎಷ್ಟು ವರ್ಷಗಳಿಂದ ಕೆಲಸ ಮಾಡುತ್ತಿದ್ದ ?
11) ನಿಮ್ಮ ಡ್ರೈವರ್ ಕಾರ್ತಿಕ್ ಜತೆ ಏನಾದರೂ ಗಲಾಟೆ ಆಗಿತ್ತಾ?
12) ವಿಡಿಯೊ ನಾನೇ ಕೊಟ್ಟಿದ್ದು ಎಂದು ಕಾರ್ತಿಕ್ ಹೇಳಿಕೆ ನೀಡಿದ್ದಾರಲ್ವಾ, ಇದು ಸತ್ಯನಾ?
13) ಪೆನ್‌ಡ್ರೈವ್‌ನಲ್ಲಿರೋ ವಿಡಿಯೊ ಪ್ರಜ್ವಲ್ ರೇವಣ್ಣನವರೆದ್ದೇನಾ..?
14) ಇಲ್ಲ ಅಂದಾದರೆ ಕೋರ್ಟ್‌ನಲ್ಲಿ ಸ್ಟೇ ತಂದಿದ್ದು ಯಾಕೆ?
15) ಮನೆ ಕೆಲಸದವಳು ಮಾಡುವ ಆರೋಪಕ್ಕೆ ನಿಮ್ಮ ಪ್ರತಿಕ್ರಿಯೆ ಏನು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಚಿಕ್ಕಮಗಳೂರು

Electric shock : ನೇರಳೆ ಮರವೇರಿದ ಬಾಲಕನಿಗೆ ಕರೆಂಟ್‌ ಶಾಕ್‌; ಕೆಳಗೆ ಬಿದ್ದೊಡನೆ ಹಾರಿಹೋಯ್ತು ಪ್ರಾಣಪಕ್ಷಿ

Electric shock : ಸ್ನೇಹಿತರೆಲ್ಲರೂ ಮರವೇರಿ ನೇರಳೆ ಹಣ್ಣು ಕೀಳುವಾಗ ಕರೆಂಟ್‌ ಶಾಕ್‌ ಹೊಡೆದಿದ್ದು, ಕೆಳಗೆ ಬಿದ್ದ ಬಾಲಕನೊರ್ವ ದಾರುಣವಾಗಿ ಮೃತಪಟ್ಟಿದ್ದಾನೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

VISTARANEWS.COM


on

By

Electric shock
Koo

ಚಿಕ್ಕಮಗಳೂರು: ವಿದ್ಯುತ್ ಶಾಕ್‌ನಿಂದ (Electric shock) 7ನೇ ತರಗತಿ ವಿದ್ಯಾರ್ಥಿಯೊಬ್ಬ ಮೃತಪಟ್ಟಿದ್ದಾನೆ. ಚಿಕ್ಕಮಗಳೂರಿನ ಕಡೂರು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಘಟನೆ ನಡೆದಿದೆ. ಆಕಾಶ್ (13) ಮೃತ ದುರ್ದೈವಿ.

ಕಡೂರು ತಾಲೂಕಿನ ಕುಪ್ಪಾಳು ಗ್ರಾಮದ ಮೊರಾರ್ಜಿ ವಸತಿ ಶಾಲೆ ಆವರಣದ ನೇರಳೆ ಮರದಲ್ಲಿ ಹಣ್ಣು ಕೀಳಲು ಆಕಾಶ್ ಮರ ಹತ್ತಿದ್ದ. ಈತನ ಜತೆಗೆ ಮೂವರು ವಿದ್ಯಾರ್ಥಿಗಳು ಮರ ಹತ್ತಿದ್ದರು. ಹಣ್ಣು ಕೀಳುವಾಗ ಆಕಾಶ್‌ ಮರದಿಂದ ಜಾರಿ ಬೀಳುತ್ತಿದ್ದ. ಈ ವೇಳೆ ಅಚಾನಕ್‌ ಆಗಿ ವಿದ್ಯುತ್ ತಂತಿ ಹಿಡಿದಿದ್ದಾನೆ.

ವಿದ್ಯುತ್‌ ತಂತಿ ಹಿಡಿಯುತ್ತಿದ್ದಂತೆ ಕರೆಂಟ್‌ ಶಾಕ್‌ನಿಂದ ಕೆಳಗೆ ಬಿದ್ದಿದ್ದಾನೆ. ಕೂಡಲೇ ಅಲ್ಲಿದ್ದವರು ಆಕಾಶ್‌ನನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಕಾಶ್ ಮೃತಪಟ್ಟಿದ್ದಾನೆ. ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: Actor Darshan : ಸಂಕಷ್ಟ ನಿವಾರಣೆಗಾಗಿ ದೇವರ ಮೊರೆ ಹೋದ ನಟ ದರ್ಶನ್‌ ಕುಟುಂಬಸ್ಥರು

ನಿದ್ದೆಗೆ ಜಾರಿದ 3 ವರ್ಷದ ಬಾಲಕನನ್ನು ಕಚ್ಚಿ ಸಾಯಿಸಿದ ನಾಗರಹಾವು

ಚಿಕ್ಕಬಳ್ಳಾಪುರ: ನಾಗರಹಾವು ಕಚ್ಚಿ (Snake Bite) 3 ವರ್ಷದ ಬಾಲಕ ಮೃತಪಟ್ಟಿದ್ದಾನೆ. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಗುಮ್ಮವಾರಂಡ್ಲಪಲ್ಲಿ ಗ್ರಾಮದಲ್ಲಿ ಘಟನೆ ನಡೆದಿದೆ. ದೀಕ್ಷಿತ್ (3) ಮೃತ ದುರ್ದೈವಿ.

ಮಾಲತಿ-ಸುರೇಶ ದಂಪತಿಯ ಏಕೈಕ ಪುತ್ರ ದೀಕ್ಷಿತ್ ಮನೆಯ ಕಾಂಪೌಂಡ್‌ನ ಮುಂದೆ ಮಲಗಿದ್ದಾಗ ನಾಗರಹಾವು ಕಚ್ಚಿದೆ. ಕೂಡಲೇ ಅಸ್ವಸ್ಥಗೊಂಡಿದ್ದ ದೀಕ್ಷಿತ್‌ನನ್ನು ಆಸ್ಪತ್ರೆಗೆ ಕರೆತರಲಾಗಿದೆ. ಆದರೆ ಸಕಾಲಕ್ಕೆ ಬಾಗೇಪಲ್ಲಿ ಆಸ್ಪತ್ರೆಯ ಸ್ಟಾಪ್ ನರ್ಸ್ ಬೋಮ್ಮಣ್ಣ ಸ್ಪಂದಿಸಿಲ್ಲ ಎಂಬ ಆರೋಪ ಕೇಳಿ ಬಂದಿದೆ. ವೈದ್ಯರು ಬಂದು ನೋಡುವಷ್ಟರಲ್ಲಿ ಮಗುವಿನ ಸ್ಥಿತಿ ಚಿಂತಾಜನಕವಾಗಿತ್ತು ಎಂದು ಪೋಷಕರು ಗೋಳಾಡಿದ್ದಾರೆ.

ಮೀನು ಹಿಡಿಯಲು ನದಿಗೆ ಇಳಿದವನು ನಾಪತ್ತೆ

ಕೃಷ್ಣ ನದಿಯಲ್ಲಿ ಮೀನುಗಾರಿಕೆಗೆ ಇಳಿದ ವ್ಯಕ್ತಿಯೊಬ್ಬ ನಾಪತ್ತೆಯಾಗಿದ್ದಾರೆ. ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಕುಲ್ಲಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಬಾವುಸಾಬ್ ಗಬಾಡೆ ನಾಪತ್ತೆಯಾದವರು.

Sanke Bite.. Drowned in water
ನಾಪತ್ತೆಯಾಗಿರುವ ಬಾವುಸಾಬ್‌ಗಾಗಿ ಹುಡುಕಾಟ

ನದಿಯಲ್ಲಿ ನಾಪತ್ತೆಯಾದ ಮೀನುಗಾರ ಬಾವುಸಾಬ್‌ ಗಬಾಡೆಗಾಗಿ ಅಗ್ನಿಶಾಮಕ ಸಿಬ್ಬಂದಿ ಹುಡುಕಾಟ ನಡೆಸಿದ್ದಾರೆ. ಸ್ಥಳಕ್ಕೆ ಬನಹಟ್ಟಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನದಿಯಲ್ಲಿ ಶೋಧಕಾರ್ಯ ಮುಂದುವರಿದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಸ್ಯಾಂಡಲ್ ವುಡ್

Actor Darshan: ಎಲ್ಲ ಖರ್ಚು ನೋಡಿಕೊಳ್ತೇನೆ, ನೀವು ಸರೆಂಡರ್‌ ಆಗಿ ಎಂದಿದ್ದ ದರ್ಶನ್ ತಾನೇ ಪೊಲೀಸ್‌ ಬೋನಿಗೆ ಬಿದ್ದ!

Actor Darshan: ಇಂದು ಆರೋಪಿಗಳನ್ನು ಪೊಲೀಸರು ಹಾಜರುಪಡಿಸಲಿದ್ದಾರೆ. ಪ್ರಮುಖ ಆರೋಪಿಗಳನ್ನು ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ. ಪ್ರಮುಖ ಆರೋಪಿಗಳಾದ ದರ್ಶನ್, ಪವಿತ್ರಾ, ಪವನ್, ವಿನಯ್, ರಾಘವೇಂದ್ರ, ಪ್ರದೋಶ್ ಮಾತ್ರ ಮತ್ತೆ ಕಸ್ಟಡಿಗೆ ಪಡೆಯಲು ನಿರ್ಧಾರ ಆಗಿದೆ ಎನ್ನಲಾಗಿದೆ. ದರ್ಶನ್ ಹೇಳಿದಂತೆ ನಡೆದುಕೊಂಡಿದ್ದರಿಂದ ಅನೇಕರು ತೊಂದರೆ ಅನುಭವಿಸಿದ್ದಾರೆ. ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್, ಪವಿತ್ರಾ, ವಿನಯ್, ಪವನ್ ಸೇರಿ ಹಲವರು ಅರೆಸ್ಟ್ ಆಗಿದ್ದಾರೆ.

VISTARANEWS.COM


on

darshan give sopports to arrested people
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ (Renuka Swamy murder case) ಕೊಲೆ ಆರೋಪದಲ್ಲಿ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಕಂಬಿ ಎಣಿಸುತ್ತಿದ್ದಾರೆ ನಟ ದರ್ಶನ್‌. ದರ್ಶನ್ ಹೇಳಿದಂತೆ ನಡೆದುಕೊಂಡಿದ್ದರಿಂದ ಅನೇಕರು ತೊಂದರೆ ಅನುಭವಿಸಿದ್ದಾರೆ. ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್, ಪವಿತ್ರಾ, ವಿನಯ್, ಪವನ್ ಸೇರಿ ಹಲವರು ಅರೆಸ್ಟ್ ಆಗಿದ್ದಾರೆ. ಈಗಾಗಲೇ ಜೈಲಿನಲ್ಲಿರುವ ಎ7 ಆರೋಪಿ ಅನುಕುಮಾರ್​ ತಂದೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಶರಣಾಗುವ ಮುನ್ನ ನಾಲ್ಕು ಆರೋಪಿಗಳು ಎರಡೆರಡು ಬಾರಿ ದರ್ಶನ್ ಜತೆ ಮಾತುಕತೆ ನಡೆಸಿದ್ದರು ಎಂದು ಪೊಲೀಸರು ಈಗ ಮಾಹಿತಿ ಹಂಚಿಕೊಂಡಿದ್ದಾರೆ. ಮಾತ್ರವಲ್ಲ ದರ್ಶನ್‌ ಅವರು ಆರೋಪಿಗಳಿಗೆ ʻಯಾವುದೇ ತೊಂದರೆ ನಿಮಗೆ ಆಗದಂತೆ ನೋಡಕೇಳುತ್ತೇನೆʼʼ ಎಂದು ಭರವಸೆ ಕೂಡ ನೀಡಿದ್ದರಂತೆ.

ರೇಣುಕಾ ಸ್ವಾಮಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಬೆಳಗ್ಗೆ ನಾಲ್ಕು ಆರೋಪಿಗಳು ಪೊಲೀಸರ ಎದುರು ಶರಣಾಗಬೇಕಿತ್ತು. ಆದರೆ ಬೆಳಗ್ಗೆ ಎದ್ದ ಕೂಡಲೇ ಆರೋಪಿಗಳಿಗೆ ಭಯ ಕಾಡ್ತಿತ್ತಂತೆ. ಹೀಗಾಗಿ ಮೈಸೂರಿನಲ್ಲಿರುವ ತಮ್ಮ ಬಾಸ್‌, ಅಂದರೆ ದರ್ಶನ್‌ ಅವರನ್ನು ಭೇಟಿ ಮಾಡಲು ಆರೋಪಿಗಳು ರೆಡಿಯಾಗಿದ್ದರು. ಈ ವೇಳೆ ಪ್ರದೂಶ್ ಕೂಡಲೇ ಆರೋಪಿಗಳನ್ನು ದರ್ಶನ್‌ ಅವರೊಂದಿಗೆ ಭೇಟಿ ಮಾಡಲು ಕರೆದುಕೊಂಡು ಹೋಗಿದ್ದ. ಆಗ ದರ್ಶನ್‌ ಆರೋಪಿಗಳಿಗೆ `ಎಲ್ಲ ಖರ್ಚು ವೆಚ್ಚ ನಾನು ನೋಡಿಕೊಳ್ತೇನೆ. ನಿಮಗೆ ಯಾವುದೇ ತೊಂದರೆ ಆಗಲ್ಲ’ ಎಂದು ಭರವಸೆ ಬೇರೆ ಕೊಟ್ಟಿದ್ದರಂತೆ.

ಇದನ್ನೂ ಓದಿ: Actor Darshan : ಸಂಕಷ್ಟ ನಿವಾರಣೆಗಾಗಿ ದೇವರ ಮೊರೆ ಹೋದ ನಟ ದರ್ಶನ್‌ ಕುಟುಂಬಸ್ಥರು

ಶರಣಾಗುವ ಮುನ್ನ ಎರಡೆರಡು ಬಾರಿ ದರ್ಶನ್ ಜತೆ ಆರೋಪಿಗಳ ಮಾತುಕತೆ!

ರಾತ್ರಿ ಪೊಲೀಸರ ಮುಂದೆ ಶರಣಾಗುತ್ತೇನೆ ಎಂದ ಆರೋಪಿಗಳು ಬೆಳಗ್ಗೆ ಉಲ್ಟಾ ಹೊಡೆದಿದ್ರು. ಪುನಃ ಮತ್ತೆ ದರ್ಶನ್ ಭೇಟಿಗೆ ಮೈಸೂರಿಗೆ ಹೋಗಿದ್ದರು ಆರೋಪಿಗಳು. ದರ್ಶನ್ ಭೇಟಿಯಾಗಿ ವಾಪಸ್ಸು ಬಂದು ಪೊಲೀಸರ ಮುಂದೆ ಶರಣಾಗಿದ್ದಾರೆ. ಪ್ರಕರಣದಲ್ಲಿ ಶರಣಾಗಲು ಭಾನುವಾರವೇ ರಾತ್ರಿ ಆರೋಪಿಗಳು ಮಾತುಕತೆ ನಡೆಸಿದ್ದರು. ಅದರಂತೆ ದರ್ಶನ್‌ಗೆ ಆರೋಪಿಗಳು ಮಾತುಕೊಟ್ಟ ನಂತರ ವಾಪಸ್ಸು ಬೆಂಗಳೂರಿಗೆ ಬಂದು ಸರೆಂಡರ್‌ ಆಗಿದ್ದಾರೆ.

ಇಂದು ಆರೋಪಿಗಳನ್ನು ಪೊಲೀಸರು ಹಾಜರುಪಡಿಸಲಿದ್ದಾರೆ. ಪ್ರಮುಖ ಆರೋಪಿಗಳನ್ನು ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ. ಪ್ರಮುಖ ಆರೋಪಿಗಳಾದ ದರ್ಶನ್, ಪವಿತ್ರಾ, ಪವನ್, ವಿನಯ್, ರಾಘವೇಂದ್ರ, ಪ್ರದೋಶ್ ಮಾತ್ರ ಮತ್ತೆ ಕಸ್ಟಡಿಗೆ ಪಡೆಯಲು ನಿರ್ಧಾರ ಆಗಿದೆ ಎನ್ನಲಾಗಿದೆ. ಕೊಲೆ ಪ್ರಕರಣದಲ್ಲಿ ಈ ಆರೋಪಿಗಳು ಹೆಚ್ಚು ಭಾಗಿಯಾದ ಕಾರಣ ಓಪನ್ ಕೋರ್ಟ್‌ನ ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಮತ್ತೆ ಕೆಲವು ದಿನಗಳ ಕಾಲ ವಶಕ್ಕೆ ಪಡೆಯಲು ನಿರ್ಧಾರ ಮಾಡಲಾಗುತ್ತಿದೆ ಎಂದು ಮೂಲ ತಿಳಿಸಿದೆ.

Continue Reading

ಸ್ಯಾಂಡಲ್ ವುಡ್

Actor Darshan: ಎರಡೇ ಎರಡೇಟು ಬಿಟ್ಟಿದ್ದೆ, ಹಿಂಗಾಗೋಯ್ತು ಸಾರ್‌! ಪೊಲೀಸರ ಮುಂದೆ ದರ್ಶನ್‌ ಹೇಳಿಕೆ!

Actor Darshan: ಮೃತ ರೇಣುಕಾಸ್ವಾಮಿ ಹಲ್ಲೆ ಮಾಡಲು ಲಾಠಿ, ರೀಪಿಸ್ ಪಟ್ಟಿ, ದೊಣ್ಣೆ, ಬೆಲ್ಟ್ ಬಳಕೆಯಾಗಿತ್ತು. ಕೈ ಕಾಲುಗಳನ್ನು ಕಟ್ಟಿಹಾಕಿ ಲಾಠಿಯಿಂದ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಎರಡು ಮೂರು ಲಾಠಿಗಳು ಒಡೆದು ಹೋದ್ರು ಸಹ ಬಿಡದೆ ಹಲ್ಲೆ ನಡೆಸಿದ್ದರು ಎನ್ನಲಾಗಿದೆ. ಹೀಗಾಗಿ ಕೃತ್ಯದ ಸಮಯದಲ್ಲಿ ಆರೋಪಿಗಳು ಧರಿಸಿದ್ದ ಬಟ್ಟೆ ಶೂಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಲಾಠಿ ಯಲ್ಲಿ ರಕ್ತದ ಕಲೆಗಳು ಪತ್ತೆ ಯಾಗಿದೆ.

VISTARANEWS.COM


on

Actor Darshan new statement to police
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ (Renuka Swamy murder case) ಕೊಲೆ ಆರೋಪದಲ್ಲಿ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಕಂಬಿ ಎಣಿಸುತ್ತಿರುವ ನಟ ದರ್ಶನ್‌ (Actor Darshan) ಮತ್ತು ಅವರ ಗೆಳತಿ ಪವಿತ್ರಾ ಗೌಡ ಇಂದೇ (ಜೂನ್‌ 15) ಪರಪ್ಪನ ಅಗ್ರಹಾರಕ್ಕೆ ಶಿಫ್ಟ್‌ ಆಗುವ ಸಾಧ್ಯತೆ ಇದೆ. ಇದೀಗ ಬಂದಿರುವ ಮಾಹಿತಿ ಪ್ರಕಾರ ಇಲ್ಲಿಯವರೆಗೂ ದರ್ಶನ್‌ ಪೊಲೀಸರ ಮುಂದೆ ಹೇಳೋದು ಒಂದೇ ಮಾತು ಅದು ಏನೆಂದರೆ ʻʻಸರ್ ನನಗೇನೂ ಗೊತ್ತಿಲ್ಲ. ರೇಣುಕಾ ಸ್ವಾಮಿನ ಕರ್ಕೊಂಡು ಬಂದಿದ್ದ ದಿನ ಸ್ಟೋನಿ ಬ್ರೂಕ್ ರೆಸ್ಟೋರೆಂಟ್‌ನಲ್ಲಿದ್ದೆ, ನನ್ನ ಇಂಟೆನ್ಷನ್ ಅವನನ್ನ ಕೊಲೆ ಮಾಡಬೇಕು ಎಂದು ಇರಲಿಲ್ಲʼʼ ಎಂದು ಪದೇಪದೇ ಇದೇ ಹೇಳಿಕೆ ಹೇಳುತ್ತಿದ್ದಾರಂತೆ.

ದರ್ಶನ್‌ ಪೊಲೀಸರು ಮುಂದೆ ಮಾತನಾಡಿದ್ದು ಹೀಗೆ: ʻʻಸರ್ ನನಗೇನೂ ಗೊತ್ತಿಲ್ಲ. ರೇಣುಕಾನನ್ನ ಕರ್ಕೊಂಡ್ ಬಂದಿರೋದು ನನಗೆ ಗೊತ್ತಿಲ್ಲ. ರೇಣುಕಾಸ್ವಾಮಿ ಕರ್ಕೊಂಡ್ ಬಂದಿದ್ದ ದಿನ ಸ್ಟೋನಿ ಬ್ರೂಕ್ ರೆಸ್ಟೋರೆಂಟ್‌ನಲ್ಲಿ ಇದ್ದೆ. ಹುಡುಗರ ಜತೆ ಎಣ್ಣೆ ಹಾಕ್ತಿದ್ದಾಗ ಪವನ್‌ ಅಲ್ಲಿಗೆ ಬಂದಿದ್ದ. ನನ್ನ ಕಿವಿಯಲ್ಲಿ ರೇಣುಕಾಸ್ವಾಮಿ ಕರ್ಕೊಂಡ್ ಬಂದಿರೋದಾಗಿ ಹೇಳಿದ್ದ. ನಾನು ಸೀದಾ ಅಲ್ಲಿಂದ ಮನೆಗೆ ಹೋಗಿ ಪವಿತ್ರಾನಾ ಕರ್ಕೊಂಡು ಶೆಡ್‌ಗೆ ಹೋದೆ. ನನ್ನ ಇಂಟೆನ್ಷನ್ ಅವನನ್ನ ಕೊಲೆ ಮಾಡಬೇಕು ಎಂದು ಇರಲಿಲ್ಲ. ನಾಲ್ಕು ಏಟು ಬಿಟ್ಟು ಅವನ ಕೈಯಿಂದ ಸಾರಿ ಕೇಳಿಸಬೇಕು ಎಂದು ಇದ್ದೆ. ಅದೇ ರೀತಿ ಅಲ್ಲಿಗೆ ಹೋದಾಗ ನನ್ನ ಹಾಗೂ ಪವಿತ್ರಾನ ನೋಡುತ್ತಿದ್ದಂತೆ ಅವನು ತಪ್ಪಾಯ್ತು ಎಂದು ಕೇಳಿಕೊಂಡ. ಆಮೇಲೆ ನಾನು ಅವನಿಗೆ ಎರಡು ಏಟು ಹೊಡೆದೆ. ಅವನಿಗೆ ಊಟಕ್ಕೆ ಕಾಸ್ ಕೊಟ್ಟು ಊಟ ಮಾಡ್ಕೋಂಡು ಊರಿಗೆ ಹೋಗು ಎಂದು ಹೇಳಿ ಬಂದೆ. ನಾನು ಅಲ್ಲಿಂದ ಬಂದ ಮೇಲೆ ಇವ್ರೆಲ್ಲಾ ಸೇರಿ ಹೀಗ್ ಮಾಡಿ ನನ್ನ ತಲೆ ತಂದಿದ್ದಾರೆ. ಅಷ್ಟೆ ಸರ್ʼʼ ಎಂದು ದರ್ಶನ್‌ ಪೊಲೀಸರ ಮುಂದೆ ಪದೇಪದೇ ಹೇಳಿದ್ದಾರೆ.

ಇದನ್ನೂ ಓದಿ: Actor Darshan:  ರೇಣುಕಾಸ್ವಾಮಿ ಕುಟುಂಬಕ್ಕೆ ಸಾಂತ್ವನ ಹೇಳಲು ಹೊರಟ ಚಲನಚಿತ್ರ ವಾಣಿಜ್ಯ ಮಂಡಳಿ

ಸ್ಕಾರ್ಪಿಯೋ ಕಾರಿನ ಮೇಲಿದ್ದ ಗುರುತು ತೆಗಿಸಿದ್ದ ಆರೋಪಿಗಳು!

ಇನ್ನು ಶವ ಸಾಗಿಸಿದ ಸ್ಕಾರ್ಪಿಯೋ ಕಾರಿನ ಮೇಲೆ ಮೊದಲು ದರ್ಶನ್‌ ಫೋಟೊ ಇತ್ತು. ಆ ಬಳಿಕ ಆರೋಪಿಗಳು ಮಾಸ್ಟರ್‌ ಪ್ಲ್ಯಾನ್‌ ಮಾಡಿ ಕಾರಿನ ಗುರುತು ಸಿಗಬಾರದು ಎಂದು ಕಾರಿನ ಮೇಲಿದ್ದ ಡಿ ಬಾಸ್‌ ಫೋಟೊ ಹಾಗೂ ಗುರುತುಗಳನ್ನು ನಾಶ ಮಾಡಿದ್ದರು. ಸಂಚಾರ ಪೊಲೀಸರ ಟ್ರಾಫಿಕ್ ವೈಲೇಶನ್ ರೆಕಾರ್ಡ್‌ನಲ್ಲಿ ಈ ಕಾರಿನ ಫೋಟೊ ಸೆರೆಯಾಗಿದೆ.

ಮೃತ ರೇಣುಕಾಸ್ವಾಮಿ ಹಲ್ಲೆ ಮಾಡಲು ಲಾಠಿ, ರೀಪಿಸ್ ಪಟ್ಟಿ, ದೊಣ್ಣೆ, ಬೆಲ್ಟ್ ಬಳಕೆಯಾಗಿತ್ತು. ಕೈ ಕಾಲುಗಳನ್ನು ಕಟ್ಟಿಹಾಕಿ ಲಾಠಿಯಿಂದ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಎರಡು ಮೂರು ಲಾಠಿಗಳು ಒಡೆದು ಹೋದರೂ ಬಿಡದೆ ಹಲ್ಲೆ ನಡೆಸಿದ್ದರು ಎನ್ನಲಾಗಿದೆ. ಹೀಗಾಗಿ ಕೃತ್ಯದ ಸಮಯದಲ್ಲಿ ಆರೋಪಿಗಳು ಧರಿಸಿದ್ದ ಬಟ್ಟೆ ಶೂಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಲಾಠಿ ಯಲ್ಲಿ ರಕ್ತದ ಕಲೆಗಳು ಪತ್ತೆಯಾಗಿದೆ. ಇದೀಗ ಆರೋಪಿಗಳು ಬಳಸಿದ ಈ ಎಲ್ಲ ವಸ್ತುಗಳನ್ನು ಎಫ್ ಎಸ್ ಎಲ್‌ಗೆ ಕಳುಹಿಸಿ ವರದಿ ಪಡೆಯಲು ನಿರ್ಧಾರ ಆಗಿದೆ ಎನ್ನಲಾಗಿದೆ.

Continue Reading

ಚಿಕ್ಕಬಳ್ಳಾಪುರ

Snake Bite : ನಿದ್ದೆಗೆ ಜಾರಿದ 3 ವರ್ಷದ ಬಾಲಕನನ್ನು ಕಚ್ಚಿ ಸಾಯಿಸಿದ ನಾಗರಹಾವು

Snake Bite : ಮನೆ ಮುಂದಿನ ಜಾಗದಲ್ಲಿ ಮಲಗಿದ್ದ 3 ವರ್ಷದ ಬಾಲಕನನ್ನು ನಾಗರ ಹಾವು ಕಚ್ಚಿದೆ. ಕೂಡಲೇ ಪೋಷಕರು ಬಾಲಕನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಆದಾಗಲೇ ವಿಷವೇರಿ ಬಾಲಕ ಮೃತಪಟ್ಟಿದ್ದಾನೆ.

VISTARANEWS.COM


on

By

snake bite
ಸಾಂದರ್ಭಿಕ ಚಿತ್ರ
Koo

ಚಿಕ್ಕಬಳ್ಳಾಪುರ: ನಾಗರಹಾವು ಕಚ್ಚಿ (Snake Bite) 3 ವರ್ಷದ ಬಾಲಕ ಮೃತಪಟ್ಟಿದ್ದಾನೆ. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಗುಮ್ಮವಾರಂಡ್ಲಪಲ್ಲಿ ಗ್ರಾಮದಲ್ಲಿ ಘಟನೆ ನಡೆದಿದೆ. ದೀಕ್ಷಿತ್ (3) ಮೃತ ದುರ್ದೈವಿ.

ಮಾಲತಿ-ಸುರೇಶ ದಂಪತಿಯ ಏಕೈಕ ಪುತ್ರ ದೀಕ್ಷಿತ್ ಮನೆಯ ಕಾಂಪೌಂಡ್‌ನ ಮುಂದೆ ಮಲಗಿದ್ದಾಗ ನಾಗರಹಾವು ಕಚ್ಚಿದೆ. ಕೂಡಲೇ ಅಸ್ವಸ್ಥಗೊಂಡಿದ್ದ ದೀಕ್ಷಿತ್‌ನನ್ನು ಆಸ್ಪತ್ರೆಗೆ ಕರೆತರಲಾಗಿದೆ. ಆದರೆ ಸಕಾಲಕ್ಕೆ ಬಾಗೇಪಲ್ಲಿ ಆಸ್ಪತ್ರೆಯ ಸ್ಟಾಪ್ ನರ್ಸ್ ಬೋಮ್ಮಣ್ಣ ಸ್ಪಂದಿಸಿಲ್ಲ ಎಂಬ ಆರೋಪ ಕೇಳಿ ಬಂದಿದೆ. ವೈದ್ಯರು ಬಂದು ನೋಡುವಷ್ಟರಲ್ಲಿ ಮಗುವಿನ ಸ್ಥಿತಿ ಚಿಂತಾಜನಕವಾಗಿತ್ತು ಎಂದು ಪೋಷಕರು ಗೋಳಾಡಿದ್ದಾರೆ.

ಮೀನು ಹಿಡಿಯಲು ನದಿಗೆ ಇಳಿದವನು ನಾಪತ್ತೆ

ಕೃಷ್ಣ ನದಿಯಲ್ಲಿ ಮೀನುಗಾರಿಕೆಗೆ ಇಳಿದ ವ್ಯಕ್ತಿಯೊಬ್ಬ ನಾಪತ್ತೆಯಾಗಿದ್ದಾರೆ. ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಕುಲ್ಲಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಬಾವುಸಾಬ್ ಗಬಾಡೆ ನಾಪತ್ತೆಯಾದವರು.

Sanke Bite.. Drowned in water
ನಾಪತ್ತೆಯಾಗಿರುವ ಬಾವುಸಾಬ್‌ಗಾಗಿ ಹುಡುಕಾಟ

ನದಿಯಲ್ಲಿ ನಾಪತ್ತೆಯಾದ ಮೀನುಗಾರ ಬಾವುಸಾಬ್‌ ಗಬಾಡೆಗಾಗಿ ಅಗ್ನಿಶಾಮಕ ಸಿಬ್ಬಂದಿ ಹುಡುಕಾಟ ನಡೆಸಿದ್ದಾರೆ. ಸ್ಥಳಕ್ಕೆ ಬನಹಟ್ಟಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನದಿಯಲ್ಲಿ ಶೋಧಕಾರ್ಯ ಮುಂದುವರಿದಿದೆ.

ಇದನ್ನೂ ಓದಿ: Tumkur Murder : ಬೈಕ್ ಆ್ಯಕ್ಸಿಡೆಂಟ್ ಕೇಸ್‌ಗೆ ಬಿಗ್ ಟ್ವಿಸ್ಟ್; ಎದುರಾಳಿಯನ್ನು ಕೊಂದ ಹಂತಕರು ಅರೆಸ್ಟ್‌

ಉಡುಪಿ: ಕಾರು ಪಲ್ಟಿಯಾಗಿ ಗಾಯ

ಉಡುಪಿ: ಡಿವೈಡರ್ ಕಲ್ಲುಗಳಿಗೆ ಬಡಿದ ಕಾರು ಪಲ್ಟಿಯಾದ ಘಟನೆ ಉಡುಪಿ-ಮಣಿಪಾಲ ಮಧ್ಯದ ಇಂದ್ರಾಳಿಯಲ್ಲಿ ನಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರಿಗೆ ತೀವ್ರ ಗಾಯಗಳಾಗಿದ್ದು, ಈ ಪೈಕಿ ಓರ್ವನ ಸ್ಥಿತಿ ಗಂಭೀರವಾಗಿದೆ. ಮಣಿಪಾಲದಿಂದ ಉಡುಪಿಯತ್ತ ತೆರಳುತ್ತಿದ್ದ ಫೋರ್ಡ್ ಫಿಗೊ ಕಾರು ಅಪಘಾತಕ್ಕೀಡಾಗಿದೆ ಎಂದು ಮೂಲಗಳು ತಿಳಿಸಿವೆ.

ಬೈಕ್‌ಗೆ ಹಾನಿ

ಆರಂಭದಲ್ಲಿ ಕಾರು ಡಿವೈಡರ್ ಕಲ್ಲಿಗೆ ಡಿಕ್ಕಿ ಹೊಡೆದಿತ್ತು. ತಕ್ಷಣ ಕಲ್ಲಿನ ತುಂಡು ಹಾರಿ ಸಮೀಪದಲ್ಲಿದ್ದ ಬೈಕ್‌ ಮೇಲೆ ಬಿದ್ದಿದೆ. ಇದರಿಂದ ಬೈಕಿಗೂ ತೀವ್ರ ಹಾನಿಯಾಗಿದ್ದು, ಅದೃಷ್ಟವಶಾತ್‌ ಬೈಕ್‌ ಸವಾರ ಬಚಾವಾಗಿದ್ದಾನೆ. ರಸ್ತೆ ಮಧ್ಯೆ ವಿಭಜಕವಾಗಿ ಬಳಸುತ್ತಿದ್ದ ಕಲ್ಲುಗಳು ಎಗರಿದ್ದು, ಟ್ರಾಫಿಕ್ ಪೊಲೀಸ್ ಮತ್ತು ಹೈವೇ ಅಥಾರಿಟಿ ನಿರ್ಲಕ್ಷ್ಯದಿಂದ ಇಂತಹ ಘಟನೆ ನಡೆಯುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

ಚಿತ್ರದುರ್ಗದಲ್ಲಿ ಭೀಕರ ಅಪಘಾತ; ನಾಲ್ಕು ಮಂದಿ ಸಾವು

ಚಿತ್ರದುರ್ಗ: ಶನಿವಾರ ಮುಂಜಾನೆ ಚಿತ್ರದುರ್ಗ ತಾಲೂಕಿನ ಚಿಕ್ಕಬೆನ್ನೂರು ಗ್ರಾಮದಲ್ಲಿ ಹಾದು ಹೋಗುವ NH 4 ರಲ್ಲಿ ಭೀಕರ ಅಪಘಾತ ನಡೆದಿದೆ. ನ್ಯಾಷನಲ್​ ಹೈವೇನಲ್ಲಿ ಚಲಿಸುತ್ತಿದ್ದ ಕಾರೊಂದಕ್ಕೆ ಹಿಂಬದಿಂದ ಲಾರಿಯೊಂದು ರಭಸದಿಂದ ಗುದ್ದಿದ ಪರಿಣಾಮ ಇಬ್ಬರು ಮಕ್ಕಳು ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಭರಮಸಾಗರ ಹೋಬಳಿಯ ಚಿಕ್ಕಬೆನ್ನೂರು ಗ್ರಾಮದ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಲಾರಿ ಮತ್ತು ಕಾರು ಚಿತ್ರದುರ್ಗ ಕಡೆಯಿಂದ ದಾವಣಗೆರೆ ಕಡೆಗೆ ಹೊರಟಿತ್ತು. ಈ ವೇಳೆ ಅತಿ ವೇಗದಲ್ಲಿ ಬಂದ ಲಾರಿ ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಭರಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ. ಕಾರಿನಲ್ಲಿದ್ದವರು ಒಂದೇ ಕುಟುಂಬಕ್ಕೆ ಸೇರಿದವರು ಇರಬೇಕು ಎಂದು ಸ್ಥಳೀಯರು ಅಂದಾಜಿಸಿದ್ದಾರೆ. ಶನಿವಾರವಾಗಿದ್ದ ಕಾರಣ ಮುಂಜಾನೆ ತಮ್ಮ ಪ್ರಯಾಣ ಆರಂಭಿಸಿರಬಹುದು ಎಂದು ಹೇಳಲಾಗಿದೆ. 

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Viral Video
ಕ್ರಿಕೆಟ್3 mins ago

Viral Video: ಪಾಕ್​ ಕ್ರಿಕೆಟಿಗ ವಾಸಿಂ ಅಕ್ರಮ್ ಜತೆ​ ಬ್ರೇಕ್​ ಡ್ಯಾನ್ಸ್​ ಮಾಡಿದ ಸುನಿಲ್ ಗಾವಸ್ಕರ್

ಪ್ರಮುಖ ಸುದ್ದಿ4 mins ago

Karnataka Politics: ಶಾಸಕ ಸ್ಥಾನಕ್ಕೆ ಎಚ್‌.ಡಿ. ಕುಮಾರಸ್ವಾಮಿ, ಬೊಮ್ಮಾಯಿ ರಾಜೀನಾಮೆ

Kannappa Teaser Kannada Vishnu Manchu Mohan Babu
ಟಾಲಿವುಡ್22 mins ago

Kannapp Teaser : ವಿಷ್ಣು ಮಂಚು ನಾಯಕನಾಗಿ ನಟಿಸಿರುವ `ಕಣ್ಣಪ್ಪ’ ಚಿತ್ರದ ಟೀಸರ್‌ ಬಿಡುಗಡೆ

RSS V/S BJP
Lok Sabha Election 202424 mins ago

RSS V/S BJP: ಮೋಹನ್ ಭಾಗವತ್ ʼಅಹಂಕಾರʼದ ಹೇಳಿಕೆ ಮೋದಿ ವಿರುದ್ಧವೆ? ಆರ್‌ಎಸ್‌ಎಸ್ ಸ್ಪಷ್ಟನೆ ಇದು!

Electric shock
ಚಿಕ್ಕಮಗಳೂರು34 mins ago

Electric shock : ನೇರಳೆ ಮರವೇರಿದ ಬಾಲಕನಿಗೆ ಕರೆಂಟ್‌ ಶಾಕ್‌; ಕೆಳಗೆ ಬಿದ್ದೊಡನೆ ಹಾರಿಹೋಯ್ತು ಪ್ರಾಣಪಕ್ಷಿ

NEET UG 2024
ಕರ್ನಾಟಕ45 mins ago

NEET UG 2024: ವಿದ್ಯಾರ್ಥಿಗಳಿಗೆ ಅನ್ಯಾಯ; ನೀಟ್ ಮರು ಪರೀಕ್ಷೆ, ತನಿಖೆಗೆ ಸಿಎಂ ಆಗ್ರಹ

Paris Olympics 2024
ಕ್ರೀಡೆ55 mins ago

Paris Olympics 2024: ಒಲಿಂಪಿಕ್ಸ್ ಆಯೋಜನೆ; ಫ್ರಾನ್ಸ್​ ಅಧ್ಯಕ್ಷರಿಗೆ ಶುಭ ಕೋರಿದ ಪ್ರಧಾನಿ ಮೋದಿ

Maoists Killed
ದೇಶ57 mins ago

Maoists Killed: ಛತ್ತೀಸ್‌ಗಢದಲ್ಲಿ 8 ಮಾವೋವಾದಿಗಳನ್ನು ಹೊಡೆದುರುಳಿಸಿದ ಭದ್ರತಾ ಪಡೆ; ಓರ್ವ ಯೋಧ ಹುತಾತ್ಮ

Progress Review Meeting by Safai Karmachari National Commission Chairman M Venkatesan at hosapete
ವಿಜಯನಗರ59 mins ago

Vijayanagara News: ಪೌರ ಕಾರ್ಮಿಕರ ಉತ್ತಮ ಆರೋಗ್ಯಕ್ಕಾಗಿ ಆರೋಗ್ಯ ಶಿಬಿರ ನಡೆಸಲು ಸೂಚನೆ

Viral News
Latest1 hour ago

Viral News: 80ರ ಅಜ್ಜನನ್ನು ಪ್ರೀತಿಸಿ ಮದುವೆಯಾದ 23ರ ಸುಂದರಿ! ಆಕೆ ಕೊಟ್ಟ ಕಾರಣ ಮಜವಾಗಿದೆ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ20 hours ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು21 hours ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು21 hours ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ22 hours ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ4 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ4 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ4 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ4 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

ಟ್ರೆಂಡಿಂಗ್‌