Tsering Namgyal: ಲಡಾಕ್‌ನಲ್ಲಿ ತ್ಸೆರಿಂಗ್‌ ನಾಮ್‌ಗ್ಯಾಲ್‌ಗೆ ಟಿಕೆಟ್‌ ಕೊಟ್ಟ ಕಾಂಗ್ರೆಸ್; ಭಾರಿ ಹೈಡ್ರಾಮಾ - Vistara News

ದೇಶ

Tsering Namgyal: ಲಡಾಕ್‌ನಲ್ಲಿ ತ್ಸೆರಿಂಗ್‌ ನಾಮ್‌ಗ್ಯಾಲ್‌ಗೆ ಟಿಕೆಟ್‌ ಕೊಟ್ಟ ಕಾಂಗ್ರೆಸ್; ಭಾರಿ ಹೈಡ್ರಾಮಾ

Tsering Namgyal: ತ್ಸೆರಿಂಗ್‌ ನಾಮ್‌ಗ್ಯಾಲ್‌ ಅವರೀಗ ಗುರುವಾರ ಕಾಂಗ್ರೆಸ್‌ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಐದನೇ ಹಂತದಲ್ಲಿ ಅಂದರೆ ಮೇ 20ರಂದು ಲಡಾಕ್‌ನಲ್ಲಿ ಮತದಾನ ನಡೆಯಲಿದೆ.

VISTARANEWS.COM


on

Tsering Namgyal
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಕಾಂಗ್ರೆಸ್‌ ನಾಯಕ ತ್ಸೆರಿಂಗ್‌ ನಾಮ್‌ಗ್ಯಾಲ್‌ (Tsering Namgyal) ಅವರು ಲಡಾಕ್‌ (Ladakh) ಲೋಕಸಭೆ ಕ್ಷೇತ್ರದಲ್ಲಿ ಗುರುವಾರ (ಮೇ 2) ಕಾಂಗ್ರೆಸ್‌ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಇವರು ಕಾಂಗ್ರೆಸ್‌ನಿಂದ ಸ್ಪರ್ಧಿಸಲು ಚುನಾವಣೆ ಆಯೋಗವೂ ಅನುಮತಿ ನೀಡಿದೆ. ತ್ಸೆರಿಂಗ್‌ ನಾಮ್‌ಗ್ಯಾಲ್‌ ಅವರು ನಾಮಪತ್ರ ಸಲ್ಲಿಸುತ್ತಲೇ ತುಸು ಗೊಂದಲ ಉಂಟಾಗಿತ್ತು. ಇದಾದ ಬಳಿಕ ಚುನಾವಣೆ ಆಯೋಗವು ತ್ಸೆರಿಂಗ್‌ ನಾಮ್‌ಗ್ಯಾಲ್‌ ಅವರು ಕಾಂಗ್ರೆಸ್‌ನಿಂದ ಸ್ಪರ್ಧಿಸಬಹುದು ಎಂದು ತಿಳಿಸಿದೆ. ಲಡಾಕ್‌ನಲ್ಲಿ ಮೇ 20ರಂದು ಮತದಾನ ನಡೆಯಲಿದೆ.

ಲಡಾಕ್‌ನಲ್ಲಿ ಹೈಡ್ರಾಮಾ

ಲೋಕಸಭೆ ಚುನಾವಣೆಯ ಎರಡು ಹಂತದ ಮತದಾನ ಮುಗಿದರೂ, ಲಡಾಕ್‌ನಲ್ಲಿ ರಾಜಕೀಯ ಹೈಡ್ರಾಮಾ ಮಾತ್ರ ಮುಂದುವರಿದಿದೆ. ಲಡಾಕ್‌ನಲ್ಲಿ ಕಾಂಗ್ರೆಸ್‌ ಹಾಗೂ ನ್ಯಾಷನಲ್‌ ಕಾನ್ಫರೆನ್ಸ್‌ ಪಕ್ಷಗಳ ಜಂಟಿ ಅಭ್ಯರ್ಥಿಯಾಗಿ ಹಾಜಿ ಹನಿಫಾ ಅವರು ಹೊರಹೊಮ್ಮಿದ್ದರು. ಆದರೆ, ಗುರುವಾರ (ಮೇ 2) ಬೆಳಗ್ಗೆ ತ್ಸೆರಿಂಗ್‌ ನಾಮ್‌ಗ್ಯಾಲ್‌ ಅವರು ಕಾಂಗ್ರೆಸ್‌ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಇದು ಹೈಡ್ರಾಮಾಗೆ ಕಾರಣವಾಗಿತ್ತು. ಗೊಂದಲದ ಬಳಿಕ ಕಾಂಗ್ರೆಸ್‌ ನಾಯಕ ರಿಗ್ಜಿನ್‌ ಜೋರಾ ಅವರು ತ್ಸೆರಿಂಗ್‌ ನಾಮ್‌ಗ್ಯಾಲ್‌ ಅವರು ಕಾಂಗ್ರೆಸ್‌ ಅಭ್ಯರ್ಥಿ ಎಂಬುದಾಗಿ ಘೋಷಿಸಿದರು.

ಬಿಜೆಪಿಯಿಂದ ತಾಶಿ ಗ್ಯಾಲ್ಸನ್‌ ಅವರು ಬುಧವಾರ (ಮೇ 1) ನಾಮಪತ್ರ ಸಲ್ಲಿಸಿದ್ದಾರೆ. ಇನ್ನು ಬಿಜೆಪಿ ಸಂಸದ ತ್ಸೆರಿಂಗ್‌ ನಾಮ್‌ಗ್ಯಾಲ್‌ ಅವರು ಲಡಾಕ್‌ನಲ್ಲಿ ಬಿಜೆಪಿಯ ಪ್ರಮುಖ ನಾಯಕರಾಗಿದ್ದು, ಇತ್ತೀಚೆಗೆ ಪಕ್ಷದಲ್ಲಿಯೇ ಅವರನ್ನು ಮರೆಗೆ ಸರಿಸಲಾಗುತ್ತಿತ್ತು. ಅಲ್ಲದೆ, ಅವರಿಗೆ ಟಿಕೆಟ್‌ ಕೂಡ ನಿರಾಕರಿಸಿದ ಕಾರಣ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ. ಮೇ 3 ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಕಾರಣ ಬಿಜೆಪಿ ಸಂಸದ ಪಕ್ಷೇತರರಾಗಿ ಸ್ಪರ್ಧಿಸಲಿದ್ದಾರೆಯೇ ಎಂಬ ಕುತೂಹಲ ಮೂಡಿದೆ.

ಇದಕ್ಕೂ ಮೊದಲು ಬಿಜೆಪಿ ಸಂಸದ ತ್ಸೆರಿಂಗ್‌ ನಾಮ್‌ಗ್ಯಾಲ್‌ ಅವರೇ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ ಎಂದು ಹೇಳಲಾಗುತ್ತಿತ್ತು. ಕೆಲ ಮಾಧ್ಯಮಗಳಲ್ಲಿ ಕಾಂಗ್ರೆಸ್‌ ಮಾಸ್ಟರ್‌ ಸ್ಟ್ರೋಕ್‌ ಎಂದೇ ವರದಿಯಾಗಿತ್ತು. ಆದರೆ, ಕೆಲ ಹೊತ್ತಿನ ಬಳಿಕ ಕಣಕ್ಕಿಳಿದವರು ಕಾಂಗ್ರೆಸ್‌ ನಾಯಕನೇ ಹೊರತು, ಬಿಜೆಪಿ ಸಂಸದ ಅಲ್ಲ ಎಂಬ ವಿಷಯ ಗೊತ್ತಾಯಿತು. ಇಬ್ಬರ ಹೆಸರೂ ಒಂದೇ ಇರುವುದರಿಂದ ಗೊಂದಲ ಉಂಟಾಗಿತ್ತು.

ಇದನ್ನೂ ಓದಿ: ಲೈಂಗಿಕ ಕಿರುಕುಳ ಆರೋಪಿ ಬ್ರಿಜ್‌ ಭೂಷಣ್‌ಗಿಲ್ಲ ಟಿಕೆಟ್‌; ಮಗನಿಗೆ ಮಣೆ, ರಾಯ್‌ಬರೇಲಿಗೂ ಅಭ್ಯರ್ಥಿ ಘೋಷಿಸಿದ ಬಿಜೆಪಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Assembly Election Results 2024: ಅಸ್ಸಾಂ ಬಿಜೆಪಿಗೆ, ಸಿಕ್ಕಿಂನಲ್ಲಿ SKMಗೆ ಪ್ರಚಂಡ ಗೆಲುವು

Assembly Election Results 2024: ಚುನಾವಣಾ ಆಯೋಗದ ಪ್ರಕಾರ ಅರುಣಾಚಲ ಪ್ರದೇಶದಲ್ಲಿ 60 ಕ್ಷೇತ್ರಗಳ ಪೈಕಿ 42ಸ್ಥಾನಗಳನ್ನು ಬಿಜೆಪಿ ಪಡೆದಿದೆ. 10 ಕ್ಷೇತ್ರಗಳಲ್ಲಿ ಬಿಜೆಪಿ ಅವಿರೋಧವಾಗಿ ಆಯ್ಕೆಯಾಗಿದೆ. ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್‌ಪಿಇಪಿ) ಎರಡು ಸ್ಥಾನಗಳನ್ನು ಗೆದ್ದು, ಒಂದರಲ್ಲಿ ಮುನ್ನಡೆ ಸಾಧಿಸಿದೆ. ಪೀಪಲ್ಸ್ ಪಾರ್ಟಿ ಆಫ್ ಅರುಣಾಚಲ (ಪಿಪಿಎ) ಎರಡು ಸ್ಥಾನಗಳನ್ನು ಗೆದ್ದಿದ್ದರೆ, ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ಒಂದನ್ನು ಪಡೆದುಕೊಂಡು ಎರಡು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಇಸಿಐ ಅಂಕಿಅಂಶಗಳ ಪ್ರಕಾರ ಸ್ವತಂತ್ರ ಅಭ್ಯರ್ಥಿಗಳು ಮೂರು ಸ್ಥಾನಗಳನ್ನು ಗೆದ್ದಿದ್ದಾರೆ.

VISTARANEWS.COM


on

Assembly election 2024
Koo

ನವದೆಹಲಿ: ಲೋಕಸಭೆ ಚುನಾವಣೆ(Lok Sabha Election 2024)ಯಷ್ಟೇ ದೇಶದ ಗಮನ ಸೆಳೆದಿದ್ದ ಅರುಣಾಚಲ ಪ್ರದೇಶ(Aruchal Pradesh) ಮತ್ತು ಸಿಕ್ಕಿಂ(Sikkim) ವಿಧಾನಸಭೆ ಚುನಾವಣೆ(Assembly Election Results 2024) ಫಲಿತಾಂಶ ಹೊರಬಿದ್ದಿದೆ. ಅರುಣಾಚಲಪ್ರದೇಶದಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆಯುವ ಮೂಲಕ ಮೂರನೇ ಬಾರಿ ಗದ್ದುಗೆ ಹಿಡಿದಿದೆ. ಮತ್ತೊಂದೆಡೆ ಸಿಕ್ಕಿಂನಲ್ಲಿ ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ(SKM) 32 ಕ್ಷೇತ್ರಗಳ ಪೈಕಿ 31 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, ಆಮೂಲಕ SKM ಈ ಬಾರಿ ಪ್ರಚಂಡ ಗೆಲುವಿನೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ. ಇನ್ನು ದೇಶ ಅತಿ ಹೆಚ್ಚು ಅವಧಿ ಸಿಎಂ ಆಗಿ ಸೇವೆ ಸಲ್ಲಿಸಿದ್ದ ಪವನ್‌ ಕುಮಾರ್‌ ಚಾರ್ಮ್ಲಿಂಗ್‌ ಪೋಕ್ಲೋಕ್-ಕಮ್ರಾಂಗ್ ಕ್ಷೇತ್ರದಲ್ಲಿ ಮೊದಲ ಬಾರಿಗೆ ಸೋಲುಂಡಿದ್ದಾರೆ.

ಚುನಾವಣಾ ಆಯೋಗದ ಪ್ರಕಾರ ಅರುಣಾಚಲ ಪ್ರದೇಶದಲ್ಲಿ 60 ಕ್ಷೇತ್ರಗಳ ಪೈಕಿ 42ಸ್ಥಾನಗಳನ್ನು ಬಿಜೆಪಿ ಪಡೆದಿದೆ. 10 ಕ್ಷೇತ್ರಗಳಲ್ಲಿ ಬಿಜೆಪಿ ಅವಿರೋಧವಾಗಿ ಆಯ್ಕೆಯಾಗಿದೆ. ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್‌ಪಿಇಪಿ) ಎರಡು ಸ್ಥಾನಗಳನ್ನು ಗೆದ್ದು, ಒಂದರಲ್ಲಿ ಮುನ್ನಡೆ ಸಾಧಿಸಿದೆ. ಪೀಪಲ್ಸ್ ಪಾರ್ಟಿ ಆಫ್ ಅರುಣಾಚಲ (ಪಿಪಿಎ) ಎರಡು ಸ್ಥಾನಗಳನ್ನು ಗೆದ್ದಿದ್ದರೆ, ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ಒಂದನ್ನು ಪಡೆದುಕೊಂಡು ಎರಡು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಇಸಿಐ ಅಂಕಿಅಂಶಗಳ ಪ್ರಕಾರ ಸ್ವತಂತ್ರ ಅಭ್ಯರ್ಥಿಗಳು ಮೂರು ಸ್ಥಾನಗಳನ್ನು ಗೆದ್ದಿದ್ದಾರೆ.

ಸಿಕ್ಕಿಂನಲ್ಲಿ ಸಂಭ್ರಮಾಚರಣೆ

ಸಿಕ್ಕಿಂನ 32 ಸ್ಥಾನಗಳಲ್ಲಿ ಆಡಳಿತಾರೂಢ ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ 31 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುತ್ತಿದ್ದಂತೆ ರಾಜ್ಯಾದ್ಯಂತ ಸಂಭ್ರಮಾಚರಣೆಗಳು ಆರಂಭವಾಗಿವೆ. ಇಲ್ಲಿ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್‌ ತಮ್ಮ ಖಾತೆ ತೆರೆಯುವಲ್ಲಿ ವಿಫಲವಾಗಿದೆ. ಇನ್ನು ಒಂದು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ. ಹೀಗಾಗಿ ಸಿಕ್ಕಿಂನಲ್ಲಿ ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ ಕ್ಲೀನ್‌ ಸ್ವೀಪ್‌ ಮಾಡೋದ್ರಲ್ಲಿ ಡೌಟೇ ಇಲ್ಲ.

ಅವಿರೋಧ ಆಯ್ಕೆ ಆದ ಬಿಜೆಪಿ ಶಾಸಕರು ಯಾರು?

ಮುಕ್ತೋ ಕ್ಷೇತ್ರದಲ್ಲಿ ಪೇಮಾ ಖಂಡು, ಬೊಮ್ಡಿಲದಲ್ಲಿ ಡೊಂಗ್ರು ಸಿಯೊಂಗ್ಜು, ಚೌಕಂನಲ್ಲಿ ಚೌನಾ ಮೇ ಹಯುಲಿಯಾಂಗ್‌ನಲ್ಲಿ ದಸಾಂಗ್ಲು ಪುಲ್, ಇಟಾನಗರದಲ್ಲಿ ಟೆಚಿ ಕಾಸೊ, ರೋಯಿಂಗ್‌ದಲ್ಲಿ ಮುಚ್ಚು ಮಿಥಿ, ಸಾಗಲೀ ಕ್ಷೇತ್ರದಲ್ಲಿ ರತು ಟೆಚಿ, ತಾಲಿ ಕ್ಷೇತ್ರದಲ್ಲಿ ಜಿಕ್ಕೆ ಟಾಕೊ, ತಾಲಿಹಾದಲ್ಲಿ ನ್ಯಾತೋ ದುಕಮ್ ಜಿರೋ, ಹಾಪೋಲಿ ಕ್ಷೇತ್ರದಲ್ಲಿ ಹಗೆ ಅಪ್ಪಾ ಅವಿರೋಧವಾಗಿ ಆಯ್ಕೆ ಆಗಿದ್ದಾರೆ.

Continue Reading

ದೇಶ

West Bengal: ಬಿಜೆಪಿ ಕಾರ್ಯಕರ್ತನ ಬರ್ಬರ ಹತ್ಯೆ; ಗುಂಡಿಕ್ಕಿ ಕೊಂದು, ರುಂಡ ಕಡಿದು ಒಯ್ದ ದುಷ್ಕರ್ಮಿಗಳು

West Bengal: ಪಶ್ಚಿಮ ಬಂಗಾಳದ ನಾದಿಯಾ ಜಿಲ್ಲೆಯ ಚಂದಾಪುರದಲ್ಲಿ ಈ ಘಟನೆ ನಡೆದಿದ್ದು, ಕೊಲೆಯಾದ ದುರ್ದೈವಿಯನನು ಹಫೀಜ್‌ ಶೇಖ್‌ ಎಂದು ಗುರುತಿಸಲಾಗಿದೆ. ಹಫೀಜ್‌ ಶೇಖ್‌ ಇತ್ತೀಚೆಗಷ್ಟೇ ಬಿಜೆಪಿ ಸೇರ್ಪಡೆಗೊಂಡಿದ್ದ. ಇದೇ ಕಾರಣಕ್ಕೆ ಆತನನ್ನು ಕೊಲೆ ಮಾಡಲಾಗಿದೆ ಎಂದು ಹೇಳಲಾಗಿದೆ. ಅಂಗಡಿಯೊಂದ ಬಳಿ ಇದ್ದ ಹಫೀಜ್‌ ಮೇಲೆ ಬೈಕ್‌ನಲ್ಲಿ ಬಂದಿದ್ದ ಸುಮಾರು 10 ಜನ ದುಷ್ಕರ್ಮಿಗಳು ಏಕಾಏಕಿ ಗುಂಡು ಹಾರಿಸಿ ಕೊಂದಿದ್ದರು. ಬಳಿಕ ಆತನ ರುಂಡವನ್ನು ದೇಹದಿಂದ ಕತ್ತರಿಸಿ ಎಸೆದು ವಿಕೃತಿ ಮೆರೆದಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸಿದಾಗ ದೇಹ ಒಂದು ಕಡೆ ರುಂಡ ರಸ್ತೆ ಬದಿಯಲ್ಲಿ ಬಿದ್ದಿತ್ತು.

VISTARANEWS.COM


on

West Bengal
Koo

ಪಶ್ಚಿಮ ಬಂಗಾಳ: ಚುನಾವಣೆ ಮುಗಿದರೂ ಪಶ್ಚಿಮ ಬಂಗಾಳ(West Bengal)ದಲ್ಲಿ ಹಿಂಸಾಚಾರ(Violence) ಮಾತ್ರ ನಿಲ್ಲುತ್ತಲೇ ಇಲ್ಲ. ನಿನ್ನೆ ತಡೆ ರಾತ್ರಿಯೂ ಭೀಕರ ಘಟನೆಯೊಂದು ನಡೆದಿದ್ದು, ಬಿಜೆಪಿ ಕಾರ್ಯಕರ್ತನ ಬರ್ಬರ ಹತ್ಯೆ ನಡೆದಿದೆ. ತೃಣಮೂಲ ಕಾಂಗ್ರೆಸ್‌ (TMC) ಗೂಂಡಾಗಳು ಬಿಜೆಪಿ ಕಾರ್ಯಕರ್ತನನ್ನು ಬರ್ಬರವಾಗಿ ಕೊಲೆಗೈದು ಆತನ ರುಂಡವನ್ನು ದೇಹದಿಂದ ಬೇರ್ಪಡಿಸಿ ವಿಕೃತಿ ಮೆರೆದಿದ್ದಾರೆ.

ಪಶ್ಚಿಮ ಬಂಗಾಳದ ನಾದಿಯಾ ಜಿಲ್ಲೆಯ ಚಂದಾಪುರದಲ್ಲಿ ಈ ಘಟನೆ ನಡೆದಿದ್ದು, ಕೊಲೆಯಾದ ದುರ್ದೈವಿಯನನು ಹಫೀಜ್‌ ಶೇಖ್‌ ಎಂದು ಗುರುತಿಸಲಾಗಿದೆ. ಹಫೀಜ್‌ ಶೇಖ್‌ ಇತ್ತೀಚೆಗಷ್ಟೇ ಬಿಜೆಪಿ ಸೇರ್ಪಡೆಗೊಂಡಿದ್ದ. ಇದೇ ಕಾರಣಕ್ಕೆ ಆತನನ್ನು ಕೊಲೆ ಮಾಡಲಾಗಿದೆ ಎಂದು ಹೇಳಲಾಗಿದೆ. ಅಂಗಡಿಯೊಂದ ಬಳಿ ಇದ್ದ ಹಫೀಜ್‌ ಮೇಲೆ ಬೈಕ್‌ನಲ್ಲಿ ಬಂದಿದ್ದ ಸುಮಾರು 10 ಜನ ದುಷ್ಕರ್ಮಿಗಳು ಏಕಾಏಕಿ ಗುಂಡು ಹಾರಿಸಿ ಕೊಂದಿದ್ದರು. ಬಳಿಕ ಆತನ ರುಂಡವನ್ನು ದೇಹದಿಂದ ಕತ್ತರಿಸಿ ಎಸೆದು ವೀಕೃತಿ ಮೆರೆದಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸಿದಾಗ ದೇಹ ಒಂದು ಕಡೆ ರುಂಡ ರಸ್ತೆ ಬದಿಯಲ್ಲಿ ಬಿದ್ದಿತ್ತು.

ಇನ್ನು ಘಟನೆ ಬಗ್ಗೆ ಹಫೀಜ್‌ನ ಸಹೋದರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಹಫೀಜ್‌ ಕ್ಯಾರಮ್‌ ಆಡುತ್ತಿದ್ದಾಗ ಅಲ್ಲಿಗೆ ಬಂದಿದ್ದ ತೃಣಮೂಲಕ ಕಾಂಗ್ರೆಸ್‌ನ ಕಾರ್ಯಕರ್ತರು ಆತನ ಮೇಲೆ ಗುಂಡು ಹಾರಿಸಿದ್ದಾರೆ. ಇದಾದ ಬಳಿಕ ಆತನ ರುಂಡವನ್ನು ಕತ್ತರಿಸಿ ಕೊಂಡೊಯ್ಯುವ ಮೂಲಕ ಕ್ರೌರ್ಯ ಮೆರೆದಿದ್ದಾರೆ. ಈ ಕೃತ್ಯವನ್ನು ಎಸಗಿದವರು ಸಮಾಜ ಘಾತುಕರು. ಅವರು ಇಷ್ಟು ಮಾತ್ರವಲ್ಲದೇ ಮತ್ತೊರ್ವ ಬಿಜೆಪಿ ಕಾರ್ಯಕರ್ತರ ಮನೆಗೆ ಬಾಂಬ್‌ ಎಸೆದಿದ್ದಾರೆ. ನನ್ನ ಸಹೋದರ ಬಹಳ ಒಳ್ಳೆಯವನು. ಖಾಸಿಂ, ಸೊಹೋಜ್‌, ನಸೀಂ, ಸೊಬುಜ್‌, ಅಲಿ, ಬಂದು ಸೇರಿದಂತೆ ಹಲವರು ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ. ನನ್ನ ಸಹೋಹರನ ಹತ್ಯೆ ಬಗ್ಗೆ ಸಿಬಿಐ ತನಿಖೆ ನಡೆಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಬಾಂಬ್‌ ಸ್ಫೋಟ

ಚುನಾವಣೆ ಮುಗಿಯುತ್ತಿದ್ದಂತೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಸಂಘರ್ಷ ಹೆಚ್ಚಾಗಿದ್ದು, ಭಾತ್ಪರಾ ಮತ್ತು ನೈಹಾತಿ ಪ್ರದೇಶಗಳಲ್ಲಿ ನಿನ್ನೆ ಬಾಂಬ್‌ ಸ್ಫೋಟಗೊಂಡಿದೆ. ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಿ ಬಾಂಬ್‌ ಸ್ಫೋಟ ನಡೆಸಿದ್ದು, ಈ ಭೀಕರ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಮತ್ತೊಂದೆಡೆ ತೃಣಮೂಲ ಕಾಂಗ್ರೆಸ್‌ ಕಚೇರಿ ಎದುರೇ ಬಾಂಬ್‌ ಸ್ಫೋಟಗೊಂಡಿದೆ.

ಕಳೆದ ವಾರ ಇಂತಹದ್ದೇ ಒಂದು ಘಟನೆ ನಂದಿಗ್ರಾಮದಲ್ಲಿ ನಡೆದಿತ್ತು. ನಂದಿಗ್ರಾಮ ಜಿಲ್ಲೆಯಲ್ಲಿ ನಿನ್ನೆ ಸಂಜೆ ಬಿಜೆಪಿ ಕಾರ್ಯಕರ್ತೆಯೊಬ್ಬರ ಹತ್ಯೆ ನಡೆದಿದ್ದು, ಇದರಲ್ಲಿ ಟಿಎಂಸಿ(TMC) ಮುಖಂಡರದ್ದೇ ಕೈವಾಡ ಇದೆ ಎಂದು ಆರೋಪಿಸಿ ಬಿಜೆಪಿ(BJP) ಪ್ರತಿಭಟನೆ ನಡೆಸಿತ್ತು. ಪ್ರತಿಭಟನೆ ಹಿಂಸೆಗೆ ತಿರುಗಿದ್ದು, ಪರಿಸ್ಥಿತಿ ನಿಯಂತ್ರಣ ತರಲು ಪೊಲೀಸರು ಲಾಠಿಚಾರ್ಜ್‌ ಮಾಡಿದ್ದರು.

ಬಿಜೆಪಿ ಕಾರ್ಯಕರ್ತರ ಮೇಲೆ ಟಿಎಂಸಿ ಗೂಂಡಾಗಳು ದಾಳಿ ನಡೆಸಿದ್ದು, ದಾಳಿಯಲ್ಲಿ ರೋತಿಬಾಲಾ ಅರಿ ಎಂಬ ಮಹಿಳೆಯ ಮೃತಪಟ್ಟಿದ್ದಾಳೆ. ಉಳಿದ ಏಳು ಜನರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಘಟನೆ ಖಂಡಿಸಿ ಬಿಜೆಪಿ ನಂದಿಗ್ರಾಮದಲ್ಲಿ 12ಗಂಟೆಗಳ ಕಾಲ ಬಂದ್‌ಗೆ ಕರೆಕೊಟ್ಟು ಪ್ರತಿಭಟನೆ ನಡೆಸಿದೆ. ಈ ವೇಳೆ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಉದ್ರಿಕ್ತರ ಗುಂಪು ರಸ್ತೆ ತಡೆದು ಟಯರ್‌ಗೆ ಬೆಂಕಿ ಹಚ್ಚಿ ಆಕ್ರೋಶ ಹೊರ ಹಾಕಿದ್ದರು.. ಇನ್ನು ಜಿಲ್ಲೆಯ ಸೋನಾಚೂರ ಪ್ರದೇಶದಲ್ಲಿ ಹಿಂಸಾಚಾರದ ತೀವ್ರತೆ ಹೆಚ್ಚಾಗುತ್ತಿದ್ದಂತೆ ಪೊಲೀಸರು ಲಾಠಿಚಾರ್ಜ್‌ ಮಾಡಿದ್ದಾರೆ.

ಇದನ್ನೂ ಓದಿ:Assembly Election Results 2024: ಇಂದು ಅರುಣಾಚಲ ಪ್ರದೇಶ & ಸಿಕ್ಕಿಂ ರಿಸಲ್ಟ್‌; 10 ಅಭ್ಯರ್ಥಿಗಳು ಅವಿರೋಧ ಆಯ್ಕೆ

Continue Reading

ದೇಶ

PM Narendra Modi: ಎಕ್ಸಿಟ್‌ ಪೋಲ್‌ ರಿಸಲ್ಟ್‌ ಬೆನ್ನಲ್ಲೇ ಪ್ರಧಾನಿ ಮೋದಿ ಬ್ಯಾಕ್‌ ಟು ಬ್ಯಾಕ್‌ ಮೀಟಿಂಗ್‌

PM Narendra Modi: ಪ್ರಧಾನಿ ಮೋದಿ ಇಂದು 7 ಸಭೆಗಳನ್ನು ಕರೆದಿದ್ದಾರೆ. ಈ ಸಭೆಯಲ್ಲಿ ಅಧಿಕಾರಕ್ಕೆ ಬಂದ ಮೊದಲ 100ದಿನಗಳಲ್ಲಿ ಕೈಗೆತ್ತಿಕೊಳ್ಳಬಹುದಾದ ಯೋಜನೆ ಹಾಗೂ ದೇಶಾದ್ಯಂತ ತಲೆದೋರಿರುವ ಬಿಸಿಗಾಳಿ ಸಮಸ್ಯೆ ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ. ಅಧಿಕೃತ ಮೂಲಗಳ ಪ್ರಕಾರ ಪ್ರಧಾನಿ ಮೋದಿಯವರು ಮೊದಲಿಗೆ ಈಶಾನ್ಯ ರಾಜ್ಯಗಳಲ್ಲಿ ಚಂಡ ಮಾರುತದ ನಂತರ ಸ್ಥಿತಿಗತಿಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಇದಾದ ಬಳಿಕ ಅವರು ಬಿಸಿಗಾಳಿ ಸಮಸ್ಯೆ ಬಗ್ಗೆ ಸಭೆ ನಡೆಸಲಿದ್ದಾರೆ. ಅಷ್ಟೇ ಅಲ್ಲದೇ ಪರಿಸರ ದಿನಾಚರಣೆಗೆ ತಯಾರಿ ಬಗ್ಗೆಯೂ ಸಭೆ ನಡೆಸಲಾಗುತ್ತದೆ ಎಂದು ಹೇಳಿದೆ.

VISTARANEWS.COM


on

PM Narendra Modi
Koo

ನವದೆಹಲಿ: ಲೋಕಸಭಾ ಚುನಾವಣೆಯ(Lok Sabha Election 2024) ಏಳನೇ ಹಂತದ ಮತದಾನ ಪೂರ್ಣಗೊಂಡು, ಬಳಿಕ ಎಕ್ಸಿಟ್‌ ಪೋಲ್‌ ಫಲಿತಾಂಶ(Exit Poll 2024)ವೂ ಹೊರಬಿದ್ದಿವೆ. ಬಹುತೇಕ ಎಲ್ಲಾ ಸಮೀಕ್ಷೆಗಳು ಪ್ರಧಾನಿ ನರೇಂದ್ರ ಮೋದಿ(PM Narendra Modi) ನೇತೃತ್ವ ಸರ್ಕಾರ ಮೂರನೇ ಬಾರಿ ಗದ್ದುಗೆ ಏರುವ ಬಗ್ಗೆ ಭವಿಷ್ಯ ನುಡಿದಿವೆ. ಇದರ ಬೆನ್ನಲ್ಲೇ ಇದೀಗ ಪ್ರಧಾನಿ ಮೋದಿ ಇಂದು 7 ಸಭೆಗಳನ್ನು ಕರೆದಿದ್ದಾರೆ. ಈ ಸಭೆಯಲ್ಲಿ ಅಧಿಕಾರಕ್ಕೆ ಬಂದ ಮೊದಲ 100 ದಿನಗಳಲ್ಲಿ ಕೈಗೆತ್ತಿಕೊಳ್ಳಬಹುದಾದ ಯೋಜನೆ ಹಾಗೂ ದೇಶಾದ್ಯಂತ ತಲೆದೋರಿರುವ ಬಿಸಿಗಾಳಿ ಸಮಸ್ಯೆ ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ.

ಅಧಿಕೃತ ಮೂಲಗಳ ಪ್ರಕಾರ ಪ್ರಧಾನಿ ಮೋದಿಯವರು ಮೊದಲಿಗೆ ಈಶಾನ್ಯ ರಾಜ್ಯಗಳಲ್ಲಿ ಚಂಡ ಮಾರುತದ ನಂತರ ಸ್ಥಿತಿಗತಿಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಇದಾದ ಬಳಿಕ ಅವರು ಬಿಸಿಗಾಳಿ ಸಮಸ್ಯೆ ಬಗ್ಗೆ ಸಭೆ ನಡೆಸಲಿದ್ದಾರೆ. ಅಷ್ಟೇ ಅಲ್ಲದೇ ಪರಿಸರ ದಿನಾಚರಣೆಗೆ ತಯಾರಿ ಬಗ್ಗೆಯೂ ಸಭೆ ನಡೆಸಲಾಗುತ್ತದೆ ಎಂದು ಹೇಳಿದೆ.

ಇನ್ನು ಎಕ್ಸಿಟ್‌ ಪೋಲ್‌ ಫಲಿತಾಂಶ ಹೊರ ಬರುತ್ತಿದ್ದಂತೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಮೋದಿ, ಭಾರತ ಮತ ಹಾಕಿದೆ! ತಮ್ಮ ಮತ ಚಲಾಯಿಸಿದ ಎಲ್ಲರಿಗೂ ಹೃತ್ಪೂರ್ವಕ ಧನ್ಯವಾದಗಳು. ಅವರ ಸಕ್ರಿಯ ಪಾಲ್ಗೊಳ್ಳುವಿಕೆ ನಮ್ಮ ಪ್ರಜಾಪ್ರಭುತ್ವದ ಮೂಲಾಧಾರವಾಗಿದೆ. ಅವರ ಬದ್ಧತೆ ಮತ್ತು ಸಮರ್ಪಣೆ ನಮ್ಮ ರಾಷ್ಟ್ರದಲ್ಲಿ ಪ್ರಜಾಸತ್ತಾತ್ಮಕ ಚೈತನ್ಯವನ್ನು ವೃದ್ಧಿಸುತ್ತದೆ. ನಾನು ಭಾರತದ ನಾರಿ ಶಕ್ತಿ ಮತ್ತು ಯುವಶಕ್ತಿಯನ್ನು ವಿಶೇಷವಾಗಿ ಪ್ರಶಂಸಿಸಲು ಬಯಸುತ್ತೇನೆ. ಚುನಾವಣೆಯಲ್ಲಿ ಅವರ ಪ್ರಬಲ ಉಪಸ್ಥಿತಿಯು ಬಹಳ ಉತ್ತೇಜಕ ಸಂಕೇತವಾಗಿದೆ ಎಂದು ಹೇಳಿದರು.

ಲೋಕಸಭೆ ಚುನಾವಣೆಯ ನಾಲ್ಕನೇ ಹಂತದ ಮತದಾನ ಪೂರ್ಣಗೊಳ್ಳುತ್ತಿದ್ದಂತೆ ಇನ್ನು ಮೂರು ಹಂತಗಳ ಮತದಾನ ಬಾಕಿ ಇರುವಾಗಲೇ ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ಕೂಡಲೇ ಮೊದಲ ನೂರು ದಿನಗಳ ಯೋಜನೆ ನೀಲನಕ್ಷೆಯನ್ನು ಬಹಿರಂಗಪಡಿಸಿದ್ದರು. ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ತಮ್ಮ ಮೊದಲ 100 ದಿನಗಳ ಯೋಜನೆ ಬಗ್ಗೆ ಪ್ರಸ್ತಾಪಿಸಿದ್ದು, ಈ ಬಾರಿ ಯುವಕರನ್ನೇ ಗುರಿಯನ್ನಾಗಿಸಿ ಯೋಜನೆ ರೂಪಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿ ಕಳೆದೆರಡು ಬಾರಿಯಂತೆ ಈ ಬಾರಿ ಮೊದಲ 100 ದಿನಗಳ ಯೋಜನೆಗಳನ್ನು ಕೈಗೆತ್ತಿಕೊಂಡಿದ್ದಾರೆ. ಈ ಬಾರಿ ಯುವಕರನ್ನು ಗುರಿಯಾಗಿಸಿಯೇ ಯೋಜನೆಯನ್ನು ಕೈಗೆತ್ತಿಕೊಂಡಿದ್ದು ಇದನ್ನು ಹೆಚ್ಚುವರಿ 25 ದಿನಗಳವರೆಗೆ ವಿಸ್ತರಿಸಲಾಗುತ್ತದೆ. ಈ 125 ದಿನಗಳವರೆಗೆ ಮೊದಲ ಬಾರಿಗೆ ಮತದಾನ ಮಾಡಿದವರು, ಯುವಜನತೆಯನ್ನು ಗುರಿಯಾಗಿಸಿ ವಿವಿಧ ಕಾರ್ಯಕ್ರಮಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಕನಸಿನ ಯೋಜನೆಯಾಗಿರುವ ವಿಕ್ಷಿತ್‌ ಭಾರತ್‌ಗೆ ಯುವಕರು ತಮ್ಮ ಹೊಸ ಐಡಿಯಾಗಳ ಮೂಲಕ ಕೊಡುಗೆ ನೀಡಬಹುದಾಗಿದೆ ಎಂದು ಅವರು ತಿಳಿಸಿದ್ದರು.

ಈಗಾಗಲೇ ನಾನು 100ದಿನಗಳ ಯೋಜನೆ ರೂಪಿಸಿ ಆಗಿದೆ. ಇದೀಗ ನಾನು ಯುವಕರಿಗಾಗಿ ಹೆಚ್ಚುವರಿಯಾಗಿ 25ಗಳವರೆಗೆ ಈ ಯೋಜನೆಯನ್ನು ವಿಸ್ತರಿಸಲು ನಿರ್ಧರಿಸಿದ್ದೇನೆ. ಒಟ್ಟು 125 ದಿನಗಳಲ್ಲಿ 25 ದಿನಗಳನ್ನು ಯುವಕರಿಗಾಗಿ ಮೀಸಲಿಟ್ಟಿದ್ದೇನೆ. ಈ ಯೋಜನೆಯಲ್ಲಿ ಯುವಕರು ಸಕ್ರಿಯವಾಗಿ ಭಾಗಿಯಾಗಿ ತಮ್ಮ ಅಭಿಪ್ರಾಯ, ಚಿಂತನೆಯನ್ನು ಹಂಚಿಕೊಳ್ಳಬಹುದಾಗಿದೆ. ಈ ಬಗ್ಗೆ 20 ಲಕ್ಷಕ್ಕೂ ಅಧಿಕ ಜನರಿಂದ ಅಭಿಪ್ರಾಯ ಸಂಗ್ರಹಿಸಲಾಗಿದೆ ಎಂದು ಅವರು ಹೇಳಿದ್ದರು.

ಇದನ್ನೂ ಓದಿ:Hassan MP Prajwal Revanna case: ಮೊಂಡಾಟ ಬಿಡದ ಪ್ರಜ್ವಲ್‌; ಇಂದೇ ಸ್ಥಳ ಮಹಜರಿಗೆ SIT ಪ್ಲ್ಯಾನ್‌

Continue Reading

ದೇಶ

Exit poll 2024: ಮೂರು ಎಕ್ಸಿಟ್ ಪೋಲ್ ಪ್ರಕಾರ ಬಿಜೆಪಿ ಸೀಟು 400 ದಾಟಲಿದೆ!

Exit poll 2024:ಮೂರು ಸಮೀಕ್ಷಾ ವರದಿಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ 400 ಟಾರ್ಗೆಟ್‌ ದಾಟಲಿದೆ ಎಂಬುದು ಬಯಲಾಗಿದೆ. ಇಂಡಿಯಾ ಟಿವಿ ನೀಡಿರುವ ಸಮೀಕ್ಷಾ ವರದಿ ಪ್ರಕಾರ ಎನ್‌ಡಿಎ 371-401 ಹಾಗೂ ಇಂಡಿಯಾ ಒಕ್ಕೂಟ 109-139 ಸ್ಥಾನಗಳನ್ನು ಗಳಿಸಲಿವೆ. ಆಕ್ಸಿಸ್ ಮೈ ಇಂಡಿಯಾ ನಡೆಸಿರುವ ಸಮೀಕ್ಷೆಯಂತೆ ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ಸಾಧಿಸಲಿದೆ. ಈ ಸಂಸ್ಥೆಯ ಚುನಾವಣೋತ್ತರ ಸಮೀಕ್ಷೆಯ ಪ್ರಕಾರ ಒಟ್ಟು 543 ಸಂಸದೀಯ ಸ್ಥಾನಗಳಲ್ಲಿ ಎನ್‌ಡಿಎ 361 ರಿಂದ 401 ಸ್ಥಾನಗಳನ್ನು ಪಡೆಯುವ ನಿರೀಕ್ಷೆಯಿದೆ. ಅಷ್ಟೇ ಅಲ್ಲದೇ ಚಾಣಾಕ್ಯ ವರದಿ ಪ್ರಕಾರವೂ ಎನ್ಡಿಎಗೆ 400ಕ್ಕೂ ಅಧಿಕ ಸ್ಥಾನಗಳು ದೊರೆಯಲಿದೆ.

VISTARANEWS.COM


on

Exit Poll 2024
Koo

ನವದೆಹಲಿ: ಲೋಕಸಭಾ ಚುನಾವಣಾ(Lok Sabha Election 2024) ಕೊನೆಗೊಂಡಿದ್ದು, ಎಕ್ಸಿಟ್‌ ಪೋಲ್‌(Exit Poll 2024) ಫಲಿತಾಂಶವೂ ಹೊರಬಿದ್ದಾಗಿದೆ. ಚುನಾವಣೆಗೂ ಮುನ್ನ ಅಬ್‌ ಕೀ ಬಾರ್‌ 400 ಪಾರ್‌(400 ಕ್ಕೂ ಅಧಿಕ ಸೀಟು) ಅಂತಾ ಹೇಳುತ್ತಲೇ ಬಂದಿರುವ ಬಿಜೆಪಿ ಕನಸು ನನಸಾಗುವುದು ಬಹುತೇಕ ಖಚಿತವಾಗಿದೆ. ಅದಕ್ಕೆ ಪೂರಕ ಎಂಬಂತೆ ನಿನ್ನೆ ಹೊರಬಿದ್ದಿರುವ ಎಕ್ಸಿಟ್‌ ಪೋಲ್‌ ಫಲಿತಾಂಶಗಳಲ್ಲಿ ಮೂರು ಚುನಾವಣೋತ್ತರ ಸಮೀಕ್ಷೆಗಳು ಬಿಜೆಪಿ ನೇತೃತ್ವದ ಎನ್‌ಡಿಎ ಈ ಬಾರಿ 400ಕ್ಕೂ ಅಧಿಕ ಸೀಟ್‌ ಗೆಲ್ಲಲಿದೆ ಎಂದು ಭವಿಷ್ಯ ನುಡಿದಿವೆ.

ಇಂಡಿಯಾ ನ್ಯೂಸ್ ಡೈನಾಮಿಕ್ಸ್ ಸಮೀಕ್ಷಾ ವರದಿ ಎನ್‌ಡಿಎ 371,ಇಂಡಿಯಾ ಮೈತ್ರಿ 125 ಇತರರು 47 ಸ್ಥಾನಗಳನ್ನು ಪಡೆದರೆ, ಜನ್ ಕಿ ಬಾತ್ ಸಮೀಕ್ಷಾ ವರದಿ ಪ್ರಕಾರ ಎನ್‌ಡಿಎ 377, ಇಂಡಿಯಾ ಒಕ್ಕೂಟ 151, ಇತರರು 15, ಎನ್‌ಡಿಟಿವಿ ಇಂಡಿಯಾ ಸಮೀಕ್ಷಾ ವರದಿ ಪ್ರಕಾರ ಎನ್‌ಡಿಎ 365, ಇಂಡಿಯಾ ಒಕ್ಕೂಟ 142, ಇತರರು 36, ನ್ಯೂಸ್ ನೇಷನ್ ಸಮೀಕ್ಷಾ ವರದಿ ಪ್ರಕಾರ, ಎನ್‌ಡಿಎ 342-378, ಇಂಡಿಯಾ ಒಕ್ಕೂಟ 153-169, ಇತರರು 21-23, ರಿಪ್ಲಬಿಕ್ ಭಾರ್ ಮ್ಯಾಟ್ರಿಜ್ ಸಮೀಕ್ಷಾ ವರದಿ ಪ್ರಕಾರ ಎನ್‌ಡಿಎ 353-368, ಇಂಡಿಯಾ ಒಕ್ಕೂಟ 118-133, ಇತರರು 43-48 ಸ್ಥಾನಗಳನ್ನು ಗಳಿಸಲಿದೆ. ಇನ್ನು ಪಿಮಾರ್ಕ್ ಸಮೀಕ್ಷಾ ವರದಿ ಪ್ರಕಾರ ಎನ್‌ಡಿಎ 359, ಇಂಡಿಯಾ ಒಕ್ಕೂಟ 154, ಇತರರು 30 ಕ್ಷೇತ್ರಗಳಲ್ಲಿ ಗೆಲ್ಲಲಿದೆ.

ಇನ್ನು ನ್ಯೂಸ್ 18 ಮೆಗಾ ಎಕ್ಸಿಟ್ ಪೋಲ್ ಪ್ರಕಾರ, ರಾಜ್ಯದ ಒಟ್ಟು 28 ಕ್ಷೇತ್ರಗಳಲ್ಲಿ ಎನ್‌ಡಿಎ ಮೈತ್ರಿಕೂಟಕ್ಕೆ 23-26 ಸ್ಥಾನ ಬರಲಿದೆ. ಕಾಂಗ್ರೆಸ್ ಕೇವಲ 3-7 ಸ್ಥಾನಗಳಲ್ಲಿ ಕಾಂಗ್ರೆಸ್ ತನ್ನ ಗೆಲುವು ದಾಖಲಿಸಬಹುದು ಎಂದು ಹೇಳಿದೆ. ರಿಪಬ್ಲಿಕ್ ಟೀವಿ ಸಮೀಕ್ಷೆ ಪ್ರಕಾರ ಬಿಜೆಪಿ ಜೆಡಿಎಸ್ 22, ಕಾಂಗ್ರೆಸ್ 6 ಸ್ಥಾನ ಗೆಲ್ಲಲಿವೆ. ಇಂಡಿಯಾ ಟುಡೇ, ಎಬಿಪಿ ನ್ಯೂಸ್ ಎರಡೂಸಮೀಕ್ಷೆಗಳುಎನ್‌ಡಿಗೆ 23-25,ಕಾಂಗ್ರೆಸ್ ಗೆ 3-5 ಸ್ಥಾನ ನೀಡಿವೆ.

ಸಕ್ಸಸ್‌ ಆಗುತ್ತಾ ಬಿಜೆಪಿಯ 400 ಟಾರ್ಗೆಟ್‌?

ಇನ್ನು ಮೂರು ಸಮೀಕ್ಷಾ ವರದಿಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ 400 ಟಾರ್ಗೆಟ್‌ ದಾಟಲಿದೆ ಎಂಬುದು ಬಯಲಾಗಿದೆ. ಇಂಡಿಯಾ ಟಿವಿ ನೀಡಿರುವ ಸಮೀಕ್ಷಾ ವರದಿ ಪ್ರಕಾರ ಎನ್‌ಡಿಎ 371-401 ಹಾಗೂ ಇಂಡಿಯಾ ಒಕ್ಕೂಟ 109-139 ಸ್ಥಾನಗಳನ್ನು ಗಳಿಸಲಿವೆ. ಆಕ್ಸಿಸ್ ಮೈ ಇಂಡಿಯಾ ನಡೆಸಿರುವ ಸಮೀಕ್ಷೆಯಂತೆ ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ಸಾಧಿಸಲಿದೆ. ಈ ಸಂಸ್ಥೆಯ ಚುನಾವಣೋತ್ತರ ಸಮೀಕ್ಷೆಯ ಪ್ರಕಾರ ಒಟ್ಟು 543 ಸಂಸದೀಯ ಸ್ಥಾನಗಳಲ್ಲಿ ಎನ್‌ಡಿಎ 361 ರಿಂದ 401 ಸ್ಥಾನಗಳನ್ನು ಪಡೆಯುವ ನಿರೀಕ್ಷೆಯಿದೆ. ಅಷ್ಟೇ ಅಲ್ಲದೇ ಚಾಣಾಕ್ಯ ವರದಿ ಪ್ರಕಾರವೂ ಎನ್ಡಿಎಗೆ 400ಕ್ಕೂ ಅಧಿಕ ಸ್ಥಾನಗಳು ದೊರೆಯಲಿದೆ.

ಹಿಂದೊಮ್ಮೆ ನಡೆದಿತ್ತು ಚಾರ್‌ ಸೌ ಪಾರ್‌

ದೇಶದ ಚುನಾವಣಾ ಇತಿಹಾಸದಲ್ಲಿ ಕೇವಲ ಒಂದೇ ಒಂದು ಬಾರಿ ಪಕ್ಷವೊಂದು 400ಕ್ಕೂ ಅಧಿಕ ಸ್ಥಾನಗಳನ್ನು ಗಳಿಸಿ ಪ್ರಚಂಡ ಗೆಲುವು ಸಾಧಸಿತ್ತು. ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರ ಹತ್ಯೆಯ ನಂತರ ಕಾಂಗ್ರೆಸ್ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ 541 ಸ್ಥಾನಗಳಲ್ಲಿ 414 ಸ್ಥಾನಗಳನ್ನು ಗಳಿಸಿತು. ಇದು ಕಾಂಗ್ರೆಸ್‌ನ ಐತಿಹಾಸಿಕ ಗೆಲವಾಗಿತ್ತು. ಇದೀಗ ಈ ಬಾರಿ ಎನ್‌ಡಿಎ ಮತ್ತೊಮ್ಮೆ ಈ ಇತಿಹಾಸ ಬರೆಯುತ್ತದೋ ಅನ್ನೋದನ್ನು ಕಾದು ನೋಡಬೇಕಾಗಿದೆ.

ಇದನ್ನೂ ಓದಿ:Exit Poll 2024 : ಟಿಎಂಸಿಯ ಭದ್ರಕೋಟೆಗೆ ಕಮಲ ಪಕ್ಷದ ಲಗ್ಗೆ; ಮಮತಾ ಬ್ಯಾನರ್ಜಿಗೆ ಮುಖಭಂಗ?

Continue Reading
Advertisement
Assembly election 2024
ದೇಶ26 mins ago

Assembly Election Results 2024: ಅಸ್ಸಾಂ ಬಿಜೆಪಿಗೆ, ಸಿಕ್ಕಿಂನಲ್ಲಿ SKMಗೆ ಪ್ರಚಂಡ ಗೆಲುವು

MLC Election
ಕರ್ನಾಟಕ50 mins ago

MLC Election: ವಿಧಾನ ಪರಿಷತ್‌ ಚುನಾವಣೆ; ಸಿ.ಟಿ.ರವಿ, ಎನ್.ರವಿಕುಮಾರ್‌ ಸೇರಿ ಮೂವರಿಗೆ ಬಿಜೆಪಿ ಟಿಕೆಟ್‌

Actor Dhanush unveils new poster from Ilaiyaraaja biopic
ಕಾಲಿವುಡ್1 hour ago

Actor Dhanush: ಇಳಯರಾಜ ಬಯೋಪಿಕ್‌ ಹೊಸ ಪೋಸ್ಟರ್‌ ಔಟ್‌; ಸಹೋದರರು ಎಂದು ಕಮಲ್‌ ಹಾಸನ್‌ ಹೇಳಿದ್ಯಾರಿಗೆ?

Murder Case
ಚಾಮರಾಜನಗರ1 hour ago

Murder Case : ಚಾಮರಾಜನಗರದಲ್ಲಿ ಅತ್ತಿಗೆ ಮೇಲಿನ ಮೋಹಕ್ಕೆ ಅಣ್ಣನನ್ನೇ ಕೊಂದ ಕಾಮುಕ ತಮ್ಮ

Venkatesh Iyer Marriage
ಕ್ರೀಡೆ1 hour ago

Venkatesh Iyer Marriage: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕ್ರಿಕೆಟಿಗ ವೆಂಕಟೇಶ್​ ಅಯ್ಯರ್​

West Bengal
ದೇಶ1 hour ago

West Bengal: ಬಿಜೆಪಿ ಕಾರ್ಯಕರ್ತನ ಬರ್ಬರ ಹತ್ಯೆ; ಗುಂಡಿಕ್ಕಿ ಕೊಂದು, ರುಂಡ ಕಡಿದು ಒಯ್ದ ದುಷ್ಕರ್ಮಿಗಳು

Electric shock Electronic City
ಬೆಂಗಳೂರು ಗ್ರಾಮಾಂತರ2 hours ago

Electric Shock: ಪಲ್ಲಕ್ಕಿ ಹೊತ್ತಿದ್ದ ಟ್ರ್ಯಾಕ್ಟರ್‌ಗೆ ಪ್ರವಹಿಸಿದ ವಿದ್ಯುತ್‌; ಕ್ಷಣಾರ್ಧದಲ್ಲೇ ಇಬ್ಬರು ಸುಟ್ಟು ಕರಕಲು

Udupi Pocso case
ಪ್ರಮುಖ ಸುದ್ದಿ2 hours ago

Udupi Pocso case: ಉಡುಪಿಯಲ್ಲಿ ಪ್ರಜ್ವಲ್ ರೇವಣ್ಣ ಮಾದರಿಯ ಕೇಸ್‌; 8-9 ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ!

Aaron Jones
ಕ್ರಿಕೆಟ್2 hours ago

Aaron Jones: 17 ವರ್ಷಗಳ ಹಿಂದಿನ ಟಿ20 ವಿಶ್ವಕಪ್​ ದಾಖಲೆ ಸರಿಗಟ್ಟಿದ ಯುಎಸ್​ಎ ಬ್ಯಾಟರ್​ ಆರೋನ್ ಜೋನ್ಸ್

Indian 2 Audio Launch Kamal Haasan Simbu Kajal Aggarwal
ಕಾಲಿವುಡ್2 hours ago

Indian 2 Audio Launch: ಅದ್ಧೂರಿಯಾಗಿ ನೆರವೇರಿತು ʼಇಂಡಿಯನ್‌ 2ʼ ಸಿನಿಮಾದ ಆಡಿಯೊ ಲಾಂಚ್‌!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ4 hours ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು22 hours ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ3 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ5 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು5 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ6 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ7 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು7 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

ಟ್ರೆಂಡಿಂಗ್‌