Lok Sabha Election 2024: ಚುನಾವಣಾ ಪ್ರಚಾರದ ವೇಳೆ ಮಹಿಳೆಯ ಕೆನ್ನೆಗೆ ಹೊಡೆದ ಕಾಂಗ್ರೆಸ್‌ ಅಭ್ಯರ್ಥಿ; ವಿಡಿಯೊ ಇಲ್ಲಿದೆ - Vistara News

Lok Sabha Election 2024

Lok Sabha Election 2024: ಚುನಾವಣಾ ಪ್ರಚಾರದ ವೇಳೆ ಮಹಿಳೆಯ ಕೆನ್ನೆಗೆ ಹೊಡೆದ ಕಾಂಗ್ರೆಸ್‌ ಅಭ್ಯರ್ಥಿ; ವಿಡಿಯೊ ಇಲ್ಲಿದೆ

Lok Sabha Election 2024: ದೇಶದಲ್ಲಿ ಲೋಕಸಭಾ ಚುನಾವಣೆಯ ಕಾವು ರಂಗೇರಿದೆ. ಈ ಮಧ್ಯೆ ಪ್ರಚಾರದ ವೇಳೆ ನಾಯಕರು ಎಡವಟ್ಟು ಮಾಡಿಕೊಂಡು ವಿವಾದ ಮೈಮೇಲೆ ಎಳೆದುಕೊಳ್ಳುತ್ತಿದ್ದಾರೆ. ಇದಕ್ಕೆ ಇತ್ತೀಚಿನ ಉದಾಹರಣೆ ಕಾಂಗ್ರೆಸ್‌ ನಾಯಕ, ನಿಜಾಮಾಬಾದ್ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಟಿ.ಜೀವನ್‌ ರೆಡ್ಡಿ. ಅರ್ಮೂರ್ ವಿಧಾನಸಭಾ ಕ್ಷೇತ್ರದ ಗ್ರಾಮವೊಂದರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜೀವನ್‌ ರೆಡ್ಡಿ ಇತರ ಕೆಲವು ನಾಯಕರೊಂದಿಗೆ ಪ್ರಚಾರ ನಡೆಸುತ್ತಿದ್ದಾಗ ಮಹಿಳೆಯ ಕೆನ್ನೆಗೆ ಹೊಡೆದಿದ್ದು, ವಿವಾದ ಹುಟ್ಟು ಹಾಕಿದೆ. ಸದ್ಯ ಈ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ.

VISTARANEWS.COM


on

Lok Sabha Election 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೈದರಾಬಾದ್‌: ದೇಶದಲ್ಲಿ ಲೋಕಸಭಾ ಚುನಾವಣೆ (Lok Sabha Election 2024)ಯ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈಗಾಗಲೇ ಎರಡು ಹಂತದ ಮತದಾನ ಮುಗಿದಿದ್ದು, ಮೂರನೇ ಹಂತದ ಮತದಾನ ಮೇ 7ರಂದು ನಡೆಯಲಿದೆ. ಹೀಗಾಗಿ ರಾಜಕಾರಣಿಗಳು ಬಿರುಸಿನಿಂದ ಪ್ರಚಾರದಲ್ಲಿ ತೊಡಗಿದ್ದಾರೆ. ಈ ಮಧ್ಯೆ ಕೆಲವು ನಾಯಕರು ವಿವಾದವನ್ನೂ ಮೈ ಮೇಲೆ ಎಳೆದುಕೊಳ್ಳುತ್ತಿದ್ದಾರೆ. ಅದಕ್ಕೆ ಉತ್ತಮ ಉದಾಹರಣೆ ತೆಲಂಗಾಣದ ನಿಜಾಮಾಬಾದ್ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಹಾಗೂ ಕಾಂಗ್ರೆಸ್‌ ಹಿರಿಯ ನಾಯಕ ಟಿ.ಜೀವನ್‌ ರೆಡ್ಡಿ (T. Jeevan Reddy). ಚುನಾವಣಾ ಪ್ರಚಾರದ ಮೇಲೆ ಮಹಿಳೆಯ ಕೆನ್ನೆಗೆ ಅವರು ಹೊಡೆದಿದ್ದು, ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ (Viral Video). ಜತೆಗೆ ಅವರ ನಡೆಗೆ ವ್ಯಾಪಕ ಟೀಕೆಯೂ ವ್ಯಕ್ತವಾಗುತ್ತಿದೆ.

ಮಾಜಿ ಸಚಿವರೂ ಆದ ಜೀವನ್‌ ರೆಡ್ಡಿ ಪ್ರಚಾರದ ವೇಳೆ ಸಾರ್ವಜನಿಕವಾಗಿಯೇ ಮಹಿಳೆಯ ಕೆನ್ನೆಗೆ ಬಾರಿಸುವ ಮೂಲಕ ವಿವಾದ ಹುಟ್ಟು ಹಾಕಿದ್ದಾರೆ. ಅರ್ಮೂರ್ ವಿಧಾನಸಭಾ ಕ್ಷೇತ್ರದ ಗ್ರಾಮವೊಂದರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜೀವನ್‌ ರೆಡ್ಡಿ ಇತರ ಕೆಲವು ನಾಯಕರೊಂದಿಗೆ ಪ್ರಚಾರ ನಡೆಸುತ್ತಿದ್ದಾಗ ಈ ಘಟನೆ ನಡೆದಿದೆ.

ವಿಡಿಯೊದಲ್ಲಿ ಏನಿದೆ?

ಜೀವನ್‌ ರೆಡ್ಡಿ ಮತ್ತು ಕಾಂಗ್ರೆಸ್‌ ನಾಯಕರು ಪ್ರಚಾರ ನಡೆಸುತ್ತ ಅರ್ಮೂರ್‌ನ ಗ್ರಾಮೀಣ ಪ್ರದೇಶಕ್ಕೆ ತೆರಳಿದ್ದರು. ಈ ವೇಳೆ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೂಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರ ಬಳಿ, ಮೇ 13ರಂದು ನಡೆಯಲಿರುವ ಚುನಾವಣೆಯಲ್ಲಿ ತಮಗೆ ಮತ ಹಾಕಬೇಕೆಂದು ಜೀವನ್‌ ರೆಡ್ಡಿ ಹೇಳಿದ್ದರು. ಆದರೆ ಆ ಮಹಿಳೆ ತಾನು ‘ಹೂವು’ ಚಿಹ್ನೆಗೆ ವೋಟು ಮಾಡುವುದಾಗಿ ತಿಳಿಸಿದ್ದರು. ಇದರಿಂದ ಸಿಟ್ಟಿಗೆದ್ದ ಜೀವನ್‌ ರೆಡ್ಡಿ ಎಲ್ಲರೆದುರೆ ಮಹಿಳೆಗೆ ಕೆನ್ನೆಗೆ ಹೊಡೆದಿದ್ದಾರೆ. ಕಾಂಗ್ರೆಸ್‌ ಮುಖಂಡರು ನೋಡುತ್ತಿರುವಂತೆಯೇ ಈ ಘಟನೆ ನಡೆದಿದ್ದು, ಈ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಮಹಿಳೆ ಹೇಳಿದ್ದೇನು?

ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮತ ಹಾಕಿದ್ದೆ. ಆದರೆ ಪಿಂಚಣಿ ಸಿಗುತ್ತಿಲ್ಲ ಎಂದು ಮಹಿಳೆ ಕಾರಣ ನೀಡಿ ಈ ಬಾರಿ ಬಿಜೆಪಿಗೆ ವೋಟು ಹಾಕಲಿದ್ದೇನೆ ಎಂದು ಹೇಳಿದ್ದರೆಂದು ಮೂಲಗಳು ತಿಳಿಸಿವೆ. ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪಿ.ವಿನಯ್ ಕುಮಾರ್ ರೆಡ್ಡಿ ಅವರು ಅರ್ಮೂರ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಪರಾಭವಗೊಂಡಿದ್ದರು. ನಿಜಾಮಾಬಾದ್‌ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಏಳು ವಿಧಾನಸಭಾ ಕ್ಷೇತ್ರಗಳ ಪೈಕಿ ಅರ್ಮೂರ್ ಕೂಡ ಒಂದು. ಪ್ರಸ್ತು ಇಲ್ಲಿ ಬಿಜೆಪಿಯ ಡಿ.ಅರವಿಂದ್‌ ಸಂಸದರಾಗಿದ್ದು, ಅವರ ವಿರುದ್ಧ ಜೀವನ್‌ ರೆಡ್ಡಿ ಕಣಕ್ಕಿಳಿದಿದ್ದಾರೆ.

ಇದನ್ನೂ ಓದಿ: Narendra Modi: ಅಮೇಥಿ ಬದಲು ರಾಯ್‌ ಬರೇಲಿಯಿಂದ ರಾಹುಲ್‌ ಗಾಂಧಿ ಸ್ಪರ್ಧೆ; ಓಡಬೇಡಿ ಎಂದು ವ್ಯಂಗ್ಯವಾಡಿದ ಮೋದಿ

ನೆಟ್ಟಿಗರಿಂದ ತರಾಟೆ

ಜೀವನ್‌ ರೆಡ್ಡಿ ಅವರ ನಡೆಗೆ ನೆಟ್ಟಿಗರು ಕೆಂಡ ಕಾರಿದ್ದಾರೆ. ʼʼನಾಚಿಕೆ ಇಲ್ಲದ ವ್ಯಕ್ತಿ. ಈ ಬಾರಿ ಹೀನಾಯವಾಗಿ ಸೋಲುತ್ತಾರೆʼʼ ಎಂದು ಒಬ್ಬರು ಹೇಳಿದ್ದಾರೆ. ʼʼಏನು ನಡೆಯುತ್ತಿದೆ?ʼʼ ಎಂದು ಇನ್ನೊಬ್ಬರು ಆಘಾತ ವ್ಯಕ್ತಪಡಿಸಿದ್ದಾರೆ. ಈ ಮಧ್ಯೆ ಕೆಲವರು ಜೀವನ್‌ ರೆಡ್ಡಿ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ. ಅವರು ತಮಾಷೆಗಾಗಿ ಮಾಡಿದ್ದಾರೆ. ನಿಜವಾಗಿಯೂ ಅವರು ಹೊಡೆದಿಲ್ಲ ಎಂದು ಹೇಳಿದ್ದಾರೆ. ಏನೇ ಇರಲಿ ಸಾರ್ವಜನಿಕವಾಗಿ ಹೀಗೆ ವರ್ತಿಸಿದ್ದು ತಪ್ಪು ಎನ್ನವುದು ಇನ್ನು ಹಲವರ ವಾದ. ಒಟ್ಟಿನಲ್ಲಿ ಈ ಘಟನೆ ಭಾರೀ ಸದ್ದು ಮಾಡುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Amartya Sen: ಭಾರತ ಹಿಂದೂ ರಾಷ್ಟ್ರವಲ್ಲ ಎನ್ನುವುದಕ್ಕೆ ಲೋಕಸಭೆ ಚುನಾವಣೆ ಫಲಿತಾಂಶವೇ ಸಾಕ್ಷಿ: ಅಮರ್ತ್ಯ ಸೇನ್

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಹಿಂದಿನ ಅವಧಿಯಲ್ಲಿ ಜನರನ್ನು ವಿಚಾರಣೆಯಿಲ್ಲದೆ ಕಂಬಿಗಳ ಹಿಂದೆ ಹಾಕುವುದು ಮತ್ತು ಶ್ರೀಮಂತರು ಮತ್ತು ಬಡವರ ನಡುವಿನ ಅಂತರವನ್ನು ಹೆಚ್ಚಿಸುವಂತಹ ಕೆಲವು ಘಟನೆಗಳು ಇನ್ನೂ ಮುಂದುವರಿದಿದೆ. ಅದನ್ನು ನಿಲ್ಲಿಸಿ ಎಂದು ಖ್ಯಾತ ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್ (Amartya Sen) ಹೇಳಿದರು. ಈ ಬಾರಿಯ ಲೋಕಸಭೆ ಚುನಾವಣೆಯ ಫಲಿತಾಂಶವು ಭಾರತ ಹಿಂದೂ ರಾಷ್ಟ್ರ ಅಲ್ಲ ಎನ್ನುವುದನ್ನು ಸಾರಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

VISTARANEWS.COM


on

By

Amartya Sen
Koo

ಕೋಲ್ಕತ್ತಾ: ಇತ್ತೀಚಿನ ಲೋಕಸಭಾ ಚುನಾವಣಾ (Lok Sabha Election) ಫಲಿತಾಂಶವು ಭಾರತ (India) ಹಿಂದೂ ರಾಷ್ಟ್ರವಲ್ಲ (Hindu Rashtra) ಎಂಬುದನ್ನು ಸೂಚಿಸುತ್ತದೆ ಎಂದು ನೋಬೆಲ್ ಪ್ರಶಸ್ತಿ ಪುರಸ್ಕೃತ (Nobel laureate) ಖ್ಯಾತ ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್ (Amartya Sen) ಪ್ರತಿಪಾದಿಸಿದರು. ಯುಎಸ್‌ನಿಂದ (US) ಕೋಲ್ಕತ್ತಾಗೆ (Kolkata) ಆಗಮಿಸಿದ ಅವರು ನೇತಾಜಿ ಸುಭಾಸ್ ಚಂದ್ರ ಬೋಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಪ್ರತಿ ಚುನಾವಣೆಯ ಅನಂತರ ನಾವು ಯಾವಾಗಲೂ ಬದಲಾವಣೆಯನ್ನು ಕಾಣುತ್ತೇವೆ ಎಂದ ಅವರು, ಭಾರತವು ಹಿಂದೂ ರಾಷ್ಟ್ರ ಅಲ್ಲ ಎಂಬುದು ಚುನಾವಣಾ ಫಲಿತಾಂಶಗಳಲ್ಲಿ ಪ್ರತಿಫಲಿಸುತ್ತದೆ ಎಂದರು.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಹಿಂದಿನ ಅವಧಿಯಲ್ಲಿ ಜನರನ್ನು ವಿಚಾರಣೆಯಿಲ್ಲದೆ ಕಂಬಿಗಳ ಹಿಂದೆ ಹಾಕುವುದು ಮತ್ತು ಶ್ರೀಮಂತರು ಮತ್ತು ಬಡವರ ನಡುವಿನ ಅಂತರವನ್ನು ಹೆಚ್ಚಿಸುವಂತಹ ಕೆಲವು ಘಟನೆಗಳು ಇನ್ನೂ ಮುಂದುವರೆದಿದೆ. ಅದನ್ನು ನಿಲ್ಲಿಸಿ ಎಂದು ಅವರು ಹೇಳಿದರು.

ಭಾರತವು ಜಾತ್ಯತೀತ ಸಂವಿಧಾನವನ್ನು ಹೊಂದಿರುವ ಜಾತ್ಯತೀತ ರಾಷ್ಟ್ರವಾಗಿರುವಾಗ ರಾಜಕೀಯವಾಗಿ ಮುಕ್ತ ಮನಸ್ಸಿನ ಅವಶ್ಯಕತೆಯಿದೆ. ಭಾರತವನ್ನು ಹಿಂದೂ ರಾಷ್ಟ್ರವಾಗಿ ಪರಿವರ್ತಿಸುವ ಕಲ್ಪನೆಯು ಸೂಕ್ತವಲ್ಲ ಎಂದು ನಾನು ಭಾವಿಸುತ್ತೇನೆ ಎಂದು ತಿಳಿಸಿದ ಅವರು, ಹೊಸ ಕೇಂದ್ರ ಸಚಿವ ಸಂಪುಟವು ಹಿಂದಿನ ಸಂಪುಟದ ನಕಲು ಎಂದು ಅಭಿಪ್ರಾಯಪಟ್ಟರು.

ಹಲವು ಸಚಿವರಿಗೆ ಅವರ ಖಾತೆಗಳನ್ನು ಮುಂದುವರಿಸಲಾಗಿದೆ. ಸ್ವಲ್ಪಮಟ್ಟಿಗೆ ಪುನರ್ರಚನೆಯ ಹೊರತಾಗಿಯೂ, ರಾಜಕೀಯವಾಗಿ ಪ್ರಬಲರು ಇನ್ನೂ ಪ್ರಬಲರಾಗಿದ್ದಾರೆ ಎಂದು ಅವರು ಅಭಿಪ್ರಾಯಪಟ್ಟರು.

ಭಾರತವು ಬ್ರಿಟಿಷರ ಆಳ್ವಿಕೆಯಲ್ಲಿದ್ದಾಗ ಜನರನ್ನು ಯಾವುದೇ ವಿಚಾರಣೆಯಿಲ್ಲದೆ ಜೈಲಿನಲ್ಲಿಡಲಾಗಿತ್ತು ಎಂದು ತಮ್ಮ ಬಾಲ್ಯದ ದಿನಗಳನ್ನು ಸೇನ್ ನೆನಪಿಸಿಕೊಂಡರು.

ನಾನು ಚಿಕ್ಕವನಿದ್ದಾಗ ನನ್ನ ಅನೇಕ ಚಿಕ್ಕಪ್ಪಂದಿರು ಮತ್ತು ಸೋದರಸಂಬಂಧಿಗಳನ್ನು ವಿಚಾರಣೆಯಿಲ್ಲದೆ ಜೈಲಿಗೆ ಹಾಕಲಾಯಿತು. ಭಾರತವು ಇದರಿಂದ ಮುಕ್ತವಾಗುತ್ತದೆ ಎಂದು ನಾವು ಭಾವಿಸಿದ್ದೇವೆ. ಇದು ನಿಲ್ಲದಿದ್ದಕ್ಕೆ ಕಾಂಗ್ರೆಸ್ ಕೂಡ ಕಾರಣ. ಅವರು ಅದನ್ನು ಬದಲಾಯಿಸಲಿಲ್ಲ. ಆದರೆ, ಪ್ರಸ್ತುತ ಸರ್ಕಾರದ ಅಡಿಯಲ್ಲಿ ಇದು ಹೆಚ್ಚು ಆಚರಣೆಯಲ್ಲಿದೆ ಎಂದು ಹೇಳಿದರು.

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಹೊರತಾಗಿಯೂ ಬಿಜೆಪಿ ಫೈಜಾಬಾದ್ ಲೋಕಸಭಾ ಸ್ಥಾನವನ್ನು ಕಳೆದುಕೊಂಡಿರುವ ಬಗ್ಗೆ ಸೇನ್, ದೇಶದ ನಿಜವಾದ ಗುರುತನ್ನು ಮರೆಮಾಚುವ ಪ್ರಯತ್ನಗಳು ನಡೆದಿವೆ ಎಂದು ಹೇಳಿದರು.

ಇದನ್ನೂ ಓದಿ: Parliament Sessions: ಸಂಸತ್‌ ಅಧಿವೇಶನದಲ್ಲಿ ಇಂದು ರಾಷ್ಟ್ರಪತಿ ಭಾಷಣ; Live ನೋಡಿ

ಮಹಾತ್ಮ ಗಾಂಧಿ, ರವೀಂದ್ರನಾಥ ಟ್ಯಾಗೋರ್ ಮತ್ತು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ದೇಶದಲ್ಲಿ ಈ ರೀತಿ ನಡೆಯಬಾರದಿತ್ತು. ಭಾರತವನ್ನು ಹಿಂದೂ ರಾಷ್ಟ್ರ’ ಎಂದು ಬಿಂಬಿಸಲು ತುಂಬಾ ಹಣ ಖರ್ಚು ಮಾಡಿ ರಾಮ ಮಂದಿರವನ್ನು ನಿರ್ಮಿಸಲಾಗುತ್ತಿದೆ. ಇದು ಭಾರತದ ನಿಜವಾದ ಗುರುತನ್ನು ನಿರ್ಲಕ್ಷಿಸುವ ಪ್ರಯತ್ನವನ್ನು ತೋರಿಸುತ್ತದೆ ಮತ್ತು ಇದು ಬದಲಾಗಬೇಕು ಅವರು ಹೇಳಿದರು.

ಭಾರತದಲ್ಲಿ ನಿರುದ್ಯೋಗ ಹೆಚ್ಚುತ್ತಿದೆ ಮತ್ತು ಪ್ರಾಥಮಿಕ ಶಿಕ್ಷಣ ಮತ್ತು ಪ್ರಾಥಮಿಕ ಆರೋಗ್ಯದಂತಹ ಕ್ಷೇತ್ರಗಳನ್ನು ನಿರ್ಲಕ್ಷಿಸಲಾಗುತ್ತಿದೆ ಎಂದು ಸೇನ್ ಹೇಳಿದರು.

Continue Reading

Latest

Members of Parliament: ಸಂಸದರು ಪ್ರಮಾಣ ವಚನ ಸ್ವೀಕರಿಸದಿದ್ದರೆ ಏನಾಗುತ್ತದೆ? ಜೈಲಿನಲ್ಲಿದ್ದವರ ಕತೆಯೇನು?

ಲೋಕ ಸಭಾ ಚುನಾವಣೆ ಬಳಿಕ ಸಂಸದರಾಗಿ (Members of Parliament) ಆಯ್ಕೆಯಾಗುವವರು ಯಾವ ರೀತಿ ಪ್ರಮಾಣ ವಚನ ಸ್ವೀಕರಿಸಬೇಕು ಎಂಬುದನ್ನು ಸಂವಿಧಾನದಲ್ಲಿ ಸ್ಪಷ್ಟವಾಗಿ ನಿರ್ದಿಷ್ಟಪಡಿಸದಿದ್ದರೂ ಸಂಸದೀಯ ಪಾತ್ರವನ್ನು ಪೂರೈಸುವಲ್ಲಿ ಪ್ರಮಾಣ ವಚನ ಸ್ವೀಕಾರವು ಮೊದಲ ಮತ್ತು ಪ್ರಮುಖ ಹೆಜ್ಜೆಯಾಗಿದೆ. ಆದರೂ ಕೆಲವು ಸಂಸದರು ಪ್ರಮಾಣ ವಚನ ಸ್ವೀಕರಿಸಲು ಸಾಧ್ಯವಾಗದೇ ಇದ್ದರೆ ಮುಂದಿನ ನಡೆ ಹೇಗಿರುತ್ತದೆ ಎಂಬಿತ್ಯಾದಿ ಸಂಪೂರ್ಣ ವಿವರ ಇಲ್ಲಿದೆ.

VISTARANEWS.COM


on

By

Members of Parliament
Koo

18ನೇ ಲೋಕಸಭೆಯ (loksabha election) ಮೊದಲ ಅಧಿವೇಶನ ಪ್ರಾರಂಭವಾಗುತ್ತಿದ್ದಂತೆ ಹೊಸದಾಗಿ ಚುನಾಯಿತರಾದ ಸಂಸತ್ ಸದಸ್ಯರು (Members of Parliament) ಸೋಮವಾರದಿಂದ ಪ್ರಮಾಣ ವಚನ (taking oath) ಸ್ವೀಕರಿಸಲು ಆರಂಭಿಸಿದ್ದಾರೆ. ಎರಡು ದಿನಗಳಲ್ಲಿ ಕೆಳಮನೆಯ (lower house) 543 ಸಂಸದರು ಪ್ರಮಾಣ ವಚನ ಸ್ವೀಕರಿಸಿದರು. ಜೂನ್ 26ರಂದು ನೂತನ ಲೋಕಸಭಾ ಸ್ಪೀಕರ್ (Speaker) ಆಯ್ಕೆ ನಡೆಯಲಿದೆ.

ಪ್ರಮಾಣ ವಚನ ಬೋಧಿಸುವವರು ಯಾರು?

ಸಂಸದೀಯ ಪದ್ಧತಿಗಳ ಪ್ರಕಾರ ಪ್ರತಿ ಸಾರ್ವತ್ರಿಕ ಚುನಾವಣೆಯ ಅನಂತರ ಲೋಕಸಭೆಗೆ ಹೊಸದಾಗಿ ಚುನಾಯಿತರಾದ ಸದಸ್ಯರಿಗೆ ಹಂಗಾಮಿ ಸ್ಪೀಕರ್ ಪ್ರಮಾಣ ವಚನ ಸ್ವೀಕರಿಸುವ ಹೊಣೆ ನಿರ್ವಹಿಸುತ್ತಾರೆ. ಲೋಕಸಭೆಯ ನೂತನ ಸ್ಪೀಕರ್ ಆಯ್ಕೆಯನ್ನು ನಡೆಸುವ ಜವಾಬ್ದಾರಿ ಕೂಡ ಈ ಹಂಗಾಮಿ ಸ್ಪೀಕರ್‌ದೇ ಆಗಿರುತ್ತದೆ.

ಸಂವಿಧಾನದಲ್ಲಿ ಸ್ಪಷ್ಟವಾಗಿ ನಿರ್ದಿಷ್ಟಪಡಿಸದಿದ್ದರೂ ಸಂಸದೀಯ ಪಾತ್ರವನ್ನು ಪೂರೈಸುವಲ್ಲಿ ಪ್ರಮಾಣ ವಚನ ಸ್ವೀಕಾರವು ಮೊದಲ ಹೆಜ್ಜೆಯಾಗಿದೆ. ಆದರೂ ಕೆಲವು ಸಂಸದರು ಅನಾರೋಗ್ಯದ ಕಾರಣ ಅಥವಾ ಅವರ ಸ್ಥಳದಿಂದ ತೆರಳಲು ಸಾಧ್ಯವಾಗದ ಕಾರಣ ಪ್ರಮಾಣ ವಚನ ಸ್ವೀಕರಿಸದಿರುವ ಸಾಧ್ಯತೆಯಿದೆ.

ಸಂಸದರು ಪ್ರಮಾಣ ವಚನ ಸ್ವೀಕರಿಸದಿದ್ದರೆ ಏನಾಗುತ್ತದೆ?

1. ಮೊದಲ ದಿನ ಪ್ರಮಾಣ ವಚನ ಅಥವಾ ದೃಢೀಕರಣವನ್ನು ಮಾಡದ ಚುನಾಯಿತ ಸಂಸದರು ಸದನದ ಅಧಿವೇಶನದ ಪ್ರಾರಂಭದಲ್ಲಿ ಅದೇ ಅಧಿವೇಶನದಲ್ಲಿ ಅಥವಾ ಅನಂತರದ ಅಧಿವೇಶನದಲ್ಲಿ ಯಾವುದೇ ನಂತರದ ದಿನದಲ್ಲಿ ಪ್ರಮಾಣ ವಚನ ಸ್ವೀಕರಿಸಬಹುದು.

2. ಸಂಸದರ ಕೋರಿಕೆಯ ಮೇರೆಗೆ ಸಭಾಧ್ಯಕ್ಷರ ಚೇಂಬರ್‌ನಲ್ಲಿ ಮಧ್ಯಂತರ ಅವಧಿಯಲ್ಲಿ ಪ್ರಮಾಣ ವಚನ ಸ್ವೀಕರಿಸಲು ಅವಕಾಶ ನೀಡಲಾಗುತ್ತದೆ.

3. ಅನಾರೋಗ್ಯದಿಂದ ಬಳಲುತ್ತಿರುವವರು, ಸದನಕ್ಕೆ ಬರಲು ಸಾಧ್ಯವಾಗದ ಸಂದರ್ಭದಲ್ಲಿ ಅವರು ಬಯಸಿದಲ್ಲಿ ಪ್ರಮಾಣ ಅಥವಾ ದೃಢೀಕರಣವನ್ನು ಮಾಡಬಹುದು. ಈ ಸಂದರ್ಭದಲ್ಲಿ ಸಂಬಂಧಿತ ಅಧಿಕಾರಿಯು ಸದಸ್ಯರಿಗೆ ಸಂಬಂಧಿತ ಪ್ರಮಾಣ ಅಥವಾ ದೃಢೀಕರಣ ಕಾರ್ಡ್ ಅನ್ನು ನೀಡುತ್ತಾರೆ.

4. ಸಂವಿಧಾನದ ಪ್ರಕಾರ ಚುನಾಯಿತ ಸಂಸದರು 60 ದಿನಗಳವರೆಗೆ ಸಂಸತ್ತಿಗೆ ಹಾಜರಾಗದಿದ್ದರೆ ಅವರ ಸ್ಥಾನವನ್ನು ಖಾಲಿ ಎಂದು ಘೋಷಿಸಬಹುದು. ಇದೇ ಆಧಾರದಲ್ಲಿ ನ್ಯಾಯಾಲಯಗಳು ಜೈಲಿನಲ್ಲಿರುವ ಸಂಸದರಿಗೆ ಪ್ರಮಾಣ ವಚನ ಸ್ವೀಕರಿಸುವುದಕ್ಕಾಗಿ ಸಂಸತ್‌ಗೆ ಬರಲು ಅವಕಾಶ ನೀಡಬಹುದು. ಆದರೆ ಪ್ರಮಾಣ ವಚನ ಸ್ವೀಕರಿಸಿದ ಅನಂತರ ಅವರು ಮತ್ತೆ ಜೈಲಿಗೆ ಮರಳಬೇಕಾಗುತ್ತದೆ.

5. ದೃಷ್ಟಿ ಸಮಸ್ಯೆಯಿಂದ ಸದಸ್ಯರಿಗೆ ಸಹಿ ಮಾಡಲು, ಪ್ರಮಾಣ ಪತ್ರ ಓದಲು ಸಾಧ್ಯವಾಗದೇ ಇದ್ದರೆ ಇನ್ನೊಬ್ಬ ಸದಸ್ಯರು ಇವರಿಗೆ ಓದಿ ಹೇಳಬಹುದಾಗಿದೆ.

6. ನ್ಯಾಯಾಲಯದ ಆದೇಶದ ಪರಿಣಾಮವಾಗಿ ಒಬ್ಬ ವ್ಯಕ್ತಿಯು ಸದಸ್ಯರಾಗುವುದನ್ನು ತಡೆದರೆ ಮತ್ತು ಅವರ ಸ್ಥಾನದಲ್ಲಿ ಇನ್ನೊಬ್ಬರು ಚುನಾಯಿತರೆಂದು ಘೋಷಿಸಲ್ಪಟ್ಟರೆ ಮತ್ತೆ ಹೊಸದಾಗಿ ಪ್ರಮಾಣವಚನ ಅಥವಾ ದೃಢೀಕರಣವನ್ನು ಮಾಡಬೇಕು.

7. ಮೊದಲ ಸುತ್ತಿನಲ್ಲಿ ಪ್ರಮಾಣವಚನಕ್ಕೆ ಹಾಜರಾಗದ ಸದಸ್ಯರ ಹೆಸರನ್ನು ಕೊನೆಯಲ್ಲಿ ಮತ್ತೆ ಕರೆಯಲಾಗುತ್ತದೆ.

ಯಾವ ಪ್ರಮಾಣ ವಚನ ಸ್ವೀಕರಿಸುತ್ತಾರೆ?

ಸಂವಿಧಾನದ ಮೂರನೇ ಶೆಡ್ಯೂಲ್ ಸಂಸತ್ತಿನ ಪ್ರಮಾಣ ವಚನದ ಪಠ್ಯವನ್ನು ಒಳಗೊಂಡಿದೆ. ಅದು ಹೀಗೆ ಹೇಳುತ್ತದೆ: ನಾನು…. ಚುನಾಯಿತನಾದ ಅಥವಾ ನಾಮನಿರ್ದೇಶನಗೊಂಡ ಸದಸ್ಯರ ಸಂಸತ್‌ ಸದಸ್ಯನಾಗಿ ದೇವರ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆ. ನಾನು ಕಾನೂನಿನ ಮೂಲಕ ಸ್ಥಾಪಿಸಿದಂತೆ ಭಾರತದ ಸಂವಿಧಾನಕ್ಕೆ ನಿಜವಾದ ನಂಬಿಕೆ ಮತ್ತು ನಿಷ್ಠೆಯನ್ನು ಹೊಂದುತ್ತೇನೆ ಎಂದು ಸ್ಪಷ್ಟವಾಗಿ ದೃಢಪಡಿಸುತ್ತೇನೆ. ನಾನು ಭಾರತದ ಸಾರ್ವಭೌಮತ್ವ ಮತ್ತು ಸಮಗ್ರತೆಯನ್ನು ಎತ್ತಿಹಿಡಿಯುತ್ತೇನೆ. ನನ್ನ ಕರ್ತವ್ಯವನ್ನು ನಿಷ್ಠೆಯಿಂದ ನಿರ್ವಹಿಸುತ್ತೇನೆ.

ಪ್ರಮಾಣ ವಚನ ಏಕೆ ಮಹತ್ವದ್ದಾಗಿದೆ?

ಲೋಕಸಭೆಯಲ್ಲಿ ಚರ್ಚೆ ಮತ್ತು ಮತ ಚಲಾಯಿಸುವ ಅಧಿಕಾರವನ್ನು ಪಡೆಯಲು ಸಂವಿಧಾನದಲ್ಲಿ (ಆರ್ಟಿಕಲ್ 99) ಸೂಚಿಸಿದಂತೆ ಸಂಸದರು ಪ್ರಮಾಣ ವಚನ ಸ್ವೀಕರಿಸಬೇಕು.

ಕೇವಲ ಚುನಾವಣೆಯಲ್ಲಿ ಗೆದ್ದು ಅವಧಿಯನ್ನು ಪ್ರಾರಂಭಿಸುವುದರಿಂದ ಅವರು ಸದನದ ಕಲಾಪಗಳಲ್ಲಿ ಭಾಗವಹಿಸಲು ಸ್ವಯಂಚಾಲಿತವಾಗಿ ಸಾಧ್ಯವಾಗುವುದಿಲ್ಲ.

ಹೇಗೆ ಪ್ರಮಾಣ ವಚನ ಸ್ವೀಕರಿಸುತ್ತಾರೆ?

ಸಂಸದರು ಮೊದಲು ತಮ್ಮ ಚುನಾವಣಾ ಪ್ರಮಾಣಪತ್ರವನ್ನು ಲೋಕಸಭೆಯ ಸಿಬ್ಬಂದಿಗೆ ಸಲ್ಲಿಸಬೇಕಾಗುತ್ತದೆ. 1957ರಲ್ಲಿ ನಡೆದ ಘಟನೆಯ ಅನಂತರ ಸಂಸತ್ತು ಈ ಸುರಕ್ಷತೆಯನ್ನು ಸೇರಿಸಿತು. ಮಾನಸಿಕವಾಗಿ ಅಸ್ವಸ್ಥ ವ್ಯಕ್ತಿಯೊಬ್ಬರು ಸಂಸದರೆಂದು ಪೋಸ್ ನೀಡಿ ಸದನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದರು!

ಪ್ರಮಾಣಪತ್ರದ ಜೊತೆಗೆ ಸಂಸದರು ಪ್ರಮಾಣ ವಚನ ಅಥವಾ ದೃಢೀಕರಣವನ್ನು ಮಾಡಲು ಬಯಸಿದ ಭಾಷೆಯನ್ನು ಸಹ ನಮೂದಿಸಬೇಕು.

ಸದಸ್ಯರು ಪ್ರಮಾಣ ವಚನ ಮಾಡುವಾಗ ಹಂಗಾಮಿ ಸ್ಪೀಕರ್ ಜೊತೆ ಹಸ್ತಲಾಘವ ಮಾಡುತ್ತಾರೆ. ಅನಂತರ ಅವರು ಸದನದಲ್ಲಿ ತಮ್ಮ ಆಸನದಲ್ಲಿ ಕುಳಿತುಕೊಳ್ಳಲು ಸದಸ್ಯರಿಗೆ ಸ್ಪೀಕರ್‌ ಅನುಮತಿ ನೀಡುತ್ತಾರೆ. ಸದಸ್ಯರು ದಾಖಲಾತಿ ಪುಸ್ತಕದಲ್ಲಿ ಸಹಿ ಮಾಡುತ್ತಾರೆ.

ಯಾವ ಭಾಷೆಗಳಲ್ಲಿ ಪ್ರಮಾಣ ವಚನ ಸ್ವೀಕರಿಸಬಹುದು?

ಸಂಸದರು ಇಂಗ್ಲಿಷ್ ಅಥವಾ ಅಸ್ಸಾಮಿ, ಬೆಂಗಾಲಿ, ಬೋಡೋ, ಡೋಗ್ರಿ, ಗುಜರಾತಿ, ಹಿಂದಿ, ಕನ್ನಡ, ಕಾಶ್ಮೀರಿ, ಕೊಂಕಣಿ, ಮೈಥಿಲಿ, ಮಲಯಾಳಂ, ಮಣಿಪುರಿ, ಮರಾಠಿ, ನೇಪಾಳಿ, ಒಡಿಯಾ, ಪಂಜಾಬಿ, ಸಂಸ್ಕೃತ, ಸಂತಾಲಿ, ಸಿಂಧಿ, ತಮಿಳು, ತೆಲುಗು ಮತ್ತು ಉರ್ದು.. ಹೀಗೆ 22 ಭಾಷೆಗಳಲ್ಲಿ ಪ್ರಮಾಣವಚನವನ್ನು ಸ್ವೀಕರಿಸಬಹುದು.

ಅರ್ಧದಷ್ಟು ಸಂಸದರು ಹಿಂದಿ ಅಥವಾ ಇಂಗ್ಲಿಷ್‌ನಲ್ಲಿ ಪ್ರಮಾಣ ವಚನ ಸ್ವೀಕರಿಸುತ್ತಾರೆ. ಹಿಂದಿನ ಎರಡು ಲೋಕಸಭೆಯಲ್ಲಿ ಸಂಸ್ಕೃತವು ಜನಪ್ರಿಯ ಭಾಷೆಯಾಗಿ ಮಾರ್ಪಟ್ಟಿದ್ದು, ಹಲವು ಸಂಸದರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಇದನ್ನೂ ಓದಿ: Bansuri Swaraj: ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿ ಸುಷ್ಮಾ ಸ್ವರಾಜ್‌ರನ್ನು ನೆನಪಿಸಿದ ಮಗಳು! ವಿಡಿಯೊ ನೋಡಿ

ಯಾವಾಗ ಸದನದ ಸದಸ್ಯರಾಗುತ್ತಾರೆ?

ಒಬ್ಬ ವ್ಯಕ್ತಿಯು ಚುನಾವಣಾ ಅಧಿಕಾರಿಯಿಂದ ಚುನಾಯಿತರೆಂದು ಘೋಷಿಸಲ್ಪಟ್ಟ ದಿನಾಂಕದಿಂದ ಸದನದ ಸದಸ್ಯರಾಗುತ್ತಾರೆ. ಸದನವನ್ನು ರಚಿಸುವ ಚುನಾವಣಾ ಆಯೋಗದ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ ಅವರು ಸಂಸದರಾಗಿ ಸಂಬಳವನ್ನು ಸ್ವೀಕರಿಸಲು ಪ್ರಾರಂಭಿಸುತ್ತಾರೆ. ಸಂಸದರು ಸದನದ ಅಧಿವೇಶನಗಳಿಗೆ ಗೈರುಹಾಜರಿಯನ್ನು ಕೇಳಬಹುದಾಗಿದೆ.

Continue Reading

ಪ್ರಮುಖ ಸುದ್ದಿ

Parliament Session 2024: ಇಂದಿನಿಂದ 18ನೇ ಲೋಕಸಭೆಯ ಮೊದಲ ಅಧಿವೇಶನ ಆರಂಭ

Parliament Session 2024: ಸಂಸತ್ತಿನ ಉಭಯ ಸದನಗಳನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು (Draupadi Murmu) ಅವರು ಭಾಷಣ ಮಾಡಲಿದ್ದಾರೆ. ನರೇಂದ್ರ ಮೋದಿ ಅವರು ಸೇರಿ ಎಲ್ಲರೂ ನೂತನ ಸಂಸದರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

VISTARANEWS.COM


on

Parliament session 2024
Koo

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ಅಧಿಕಾರಕ್ಕೆ ಬಂದಿದ್ದು, ಪ್ರಧಾನಿಯಾಗಿ ನರೇಂದ್ರ ಮೋದಿ (Narendra Modi) ಅವರು ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಇನ್ನು ನೂತನ ಸರ್ಕಾರ ರಚನೆಯಾದ ಬಳಿಕ, 18ನೇ ಲೋಕಸಭೆಯ ಮೊದಲ ಸಂಸತ್‌ ವಿಶೇಷ ಅಧಿವೇಶನವು (Parliament Session 2024) ಸೋಮವಾರದಿಂದ (ಜೂನ್‌ 24) ಆರಂಭವಾಗಲಿದೆ. ನರೇಂದ್ರ ಮೋದಿ ಅವರು ಸೇರಿ ಚುನಾವಣೆಯಲ್ಲಿ ಆಯ್ಕೆಯಾದ ಎಲ್ಲರೂ ಸಂಸದರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಸಂಸತ್ತಿನ ಉಭಯ ಸದನಗಳನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು (Draupadi Murmu) ಅವರು ಭಾಷಣ ಮಾಡಲಿದ್ದಾರೆ. ನರೇಂದ್ರ ಮೋದಿ ಅವರು ಸೇರಿ ಎಲ್ಲರೂ ನೂತನ ಸಂಸದರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಹಾಗೆಯೇ, ನೂತನ ಸ್ಪೀಕರ್‌ ಆಯ್ಕೆಯ ಪ್ರಕ್ರಿಯೆಯೂ ನಡೆಯಲಿದೆ. ಸೋಮವಾರ ಬೆಳಗ್ಗೆ 11 ಗಂಟೆಗೆ ನರೇಂದ್ರ ಮೋದಿ ಹಾಗೂ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನಂತರ ದೇಶದ ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಸಂಸದರು ಅಲ್ಫಾಬೆಟಿಕಲ್‌ (ABCD ಆಧಾರದಂತೆ) ಆರ್ಡರ್‌ನಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಉದಾಹರಣೆಗೆ, ಅಸ್ಸಾಂ ಸದಸ್ಯರು ಮೊದಲಿಗೆ, ಪಶ್ಚಿಮ ಬಂಗಾಳ ಸದಸ್ಯರು ಕೊನೆಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

Narendra Modi

ಸಂಸತ್‌ ವಿಶೇಷ ಅಧಿವೇಶನದ ಮೊದಲ ದಿನ ಅಂದರೆ, ಜೂನ್‌ 24ರಂದು ಮೋದಿ, ಸಚಿವರು ಸೇರಿ ಒಟ್ಟು 280 ಸದಸ್ಯರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಮಂಗಳವಾರ ಅಂದರೆ ಜೂನ್‌ 25ರಂದು 264 ಸದಸ್ಯರು ಪದಗ್ರಹಣ ಮಾಡಲಿದ್ದಾರೆ. ಜೂನ್‌ 24ರಿಂದ ಜುಲೈ 3ರವರೆಗೆ ಸಂಸತ್‌ ವಿಶೇಷ ಅಧಿವೇಶನ ನಡೆಯಲಿದೆ. ಯಾವುದೇ ವಿಧೇಯಕಗಳ ಮಂಡನೆ ಕುರಿತು ಮಾಹಿತಿ ಲಭ್ಯವಾಗಿಲ್ಲ.

ಯಾರಾಗ್ತಾರೆ ಸ್ಪೀಕರ್?‌

ಲೋಕಸಭೆಯ ಸ್ಪೀಕರ್‌ ಆಗಿ ಯಾರನ್ನು ಆಯ್ಕೆ ಮಾಡಲಾಗುತ್ತದೆ ಎಂಬುದು ತೀವ್ರ ಕುತೂಹಲ ಕೆರಳಿಸಿದೆ. ಈಗಾಗಲೇ ಹಂಗಾಮಿ ಸ್ಪೀಕರ್‌ ಆಗಿ ಭಾರ್ತೃಹರಿ ಮಹತಾಬ್‌ ಅವರು ನೇಮಕಗೊಂಡಿದ್ದಾರೆ. ಜೂನ್‌ 26ರಂದು ಸ್ಪೀಕರ್‌ ಆಯ್ಕೆ ನಡೆಯುವ ಸಾಧ್ಯತೆ ಇದೆ. ಸ್ಪೀಕರ್‌ ಹುದ್ದೆಯ ಮೇಲೆ ಎನ್‌ಡಿಎ ಮೈತ್ರಿಕೂಟದ ಮಿತ್ರಪಕ್ಷಗಳಾದ ಜೆಡಿಯು ಹಾಗೂ ಟಿಡಿಪಿ ಕಣ್ಣಿಟ್ಟಿವೆ. ಬಿಜೆಪಿ ಅಭ್ಯರ್ಥಿಯನ್ನೇ ಸ್ಪೀಕರ್‌ ಸ್ಥಾನಕ್ಕೆ ಕೂರಿಸುವುದು ಆ ಪಕ್ಷದ ಉದ್ದೇಶವಾಗಿದೆ. ಸ್ಪೀಕರ್‌ ಸ್ಥಾನಕ್ಕೆ ಬಿಜೆಪಿಯ ಕಿರಣ್‌ ರಿಜಿಜು ಅವರ ಹೆಸರುಗಳು ಕೂಡ ಕೇಳಿಬರುತ್ತಿವೆ. ಹಾಗಾಗಿ, ಕುತೂಹಲ ಹೆಚ್ಚಾಗಿದೆ.

ಇದನ್ನೂ ಓದಿ: Pro Tem Speaker: ಲೋಕಸಭೆ ಹಂಗಾಮಿ ಸ್ಪೀಕರ್‌ ಆಗಿ ಬಿಜೆಪಿಯ ಭಾರ್ತೃಹರಿ ಮಹತಾಬ್ ನೇಮಕ

Continue Reading

ದೇಶ

Ayodhya Ram Mandir: ಅಯೋಧ್ಯೆ ಜನರ ಮನವೊಲಿಕೆಗೆ ಮುಂದಾದ ಬಿಜೆಪಿ; ಜಾಗ ಕಳೆದುಕೊಂಡ ವರ್ತಕರಿಗೆ ಭರ್ಜರಿ ಆಫರ್‌!

ಅಯೋಧ್ಯೆ ಪಟ್ಟಣದಲ್ಲಿ (Ayodhya Ram Mandir) ಸರ್ಕಾರ ನಿರ್ಮಿಸಿದ ಅಂಗಡಿಗಳ ಬೆಲೆಯನ್ನು ಶೇ. 30ರಷ್ಟು ಕಡಿತಗೊಳಿಸುವ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ. ಇದಲ್ಲದೆ, ಬಡ್ಡಿ ರಹಿತವಾಗಿ 20 ವರ್ಷಗಳ ಸುಲಭ ಕಂತಿನಲ್ಲಿ ಮಳಿಗೆಗಳನ್ನು ಹಂಚಿಕೆದಾರರಿಗೆ ಹಸ್ತಾಂತರಿಸಲಾಗುವುದು ಎಂದು ಅಯೋಧ್ಯೆ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಗೌರವ್ ದಯಾಳ್ ತಿಳಿಸಿದ್ದಾರೆ.

VISTARANEWS.COM


on

By

Ayodhya Ram Mandir
Koo

ಲಕ್ನೋ: ಉತ್ತರ ಪ್ರದೇಶದ (uttarapradesha) ಅಯೋಧ್ಯೆಯಲ್ಲಿ ರಾಮ ಮಂದಿರದ (Ayodhya Ram Mandir) ನಿರ್ಮಾಣದ ವೇಳೆ ಅಯೋಧ್ಯೆ (ayodhya) ಅಭಿವೃದ್ಧಿ ಪ್ರಾಧಿಕಾರವು (ADA) ಕೈಗೊಂಡ ರಸ್ತೆ ವಿಸ್ತರಣೆ ಕಾಮಗಾರಿಗಾಗಿ (road widening project) ಸ್ಥಳಾಂತರಗೊಂಡ ಅಂಗಡಿ ಮಾಲೀಕರಿಗೆ ಹಂಚಿಕೆಯಾಗಿರುವ ಅಂಗಡಿಗಳ ಬೆಲೆಯನ್ನು ಶೇ. 30ರಷ್ಟು ಕಡಿತಗೊಳಿಸಿದೆ ಎಂದು ಸರ್ಕಾರಿ ಅಧಿಕಾರಿಗಳು ತಿಳಿಸಿದ್ದಾರೆ. ಇಷ್ಟೇ ಅಲ್ಲ, ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಲಾದ 500 ಅಂಗಡಿಗಳನ್ನು ಪಡೆಯುವವರಿಗೆ ಬಡ್ಡಿ ರಹಿತವಾಗಿ 20 ವರ್ಷಗಳ ಸುಲಭ ಕಂತುಗಳಲ್ಲಿ ಹಣ ಪಾವತಿಸುವ ಆಫರ್‌ ಕೂಡ ನೀಡಲಾಗಿದೆ.

ಕಳೆದ ಲೋಕಸಭೆ ಚುನಾವಣೆಯಲ್ಲಿ ಅಯೋಧ್ಯೆ ಇರುವ ಫೈಜಾಬಾದ್‌ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಹೀನಾಯವಾಗಿ ಸೋತು ಹೋಗಿತ್ತು. ಅಭಿವೃದ್ಧಿ ಕಾಮಗಾರಿಗಾಗಿ ಸ್ಥಳ ಕಳೆದುಕೊಂಡ ಜನ ಸರ್ಕಾರದಿಂದ ಸೂಕ್ತ ಪರಿಹಾರ ಮತ್ತು ಸ್ಪಂದನೆ ಸಿಗದೆ ಆಕ್ರೋಶಗೊಂಡಿದ್ದರು. ಇದರಿಂದ ಕಳವಳಗೊಂಡಿರುವ ಬಿಜೆಪಿ, ಅಯೋಧ್ಯೆಯ ಜನರ ಮನವೊಲಿಸಲು ಮುಂದಾಗಿದೆ.

ಈ ಕುರಿತು ಅಯೋಧ್ಯೆ ಅಭಿವೃದ್ಧಿ ಪ್ರಾಧಿಕಾರವು ಉತ್ತರ ಪ್ರದೇಶ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಿದೆ ಎಂದು ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅಯೋಧ್ಯೆ ವಿಭಾಗೀಯ ಆಯುಕ್ತ ಹಾಗೂ ಅಯೋಧ್ಯೆ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಗೌರವ್ ದಯಾಳ್ ತಿಳಿಸಿದ್ದಾರೆ. ಅಂಗಡಿಗಳ ಬೆಲೆಯನ್ನು ಶೇ. 30ರಷ್ಟು ಕಡಿತಗೊಳಿಸುವ ಪ್ರಸ್ತಾವನೆಗೆ ಅನುಮೋದನೆ ನೀಡಿದ್ದೇವೆ. ಇದಲ್ಲದೆ, ಬಡ್ಡಿ ರಹಿತವಾಗಿ 20 ವರ್ಷಗಳ ಸುಲಭ ಕಂತಿನಲ್ಲಿ ಮಳಿಗೆಗಳನ್ನು ಹಂಚಿಕೆದಾರರಿಗೆ ಹಸ್ತಾಂತರಿಸಲಾಗುವುದು ಎಂದು ದಯಾಳ್ ಹೇಳಿದರು.

ರಾಮ್ ಪಥ್ ಎಂದು ಹೆಸರಿಸಲಾದ ಸಹದತ್‌ಗಂಜ್‌ನಿಂದ ನಯಾ ಘಾಟ್‌ವರೆಗಿನ 13 ಕಿ.ಮೀ. ರಸ್ತೆ ವಿಸ್ತರಣೆ ಯೋಜನೆಯಲ್ಲಿ ಸುತ್ತಲಿನ ಅಂಗಡಿದಾರರು ಸ್ಥಳಾಂತರಗೊಂಡಿದ್ದಾರೆ. ಯೋಜನೆಯು ಡಿಸೆಂಬರ್ 2023ರಲ್ಲಿ ಪೂರ್ಣಗೊಂಡಿತು. ಈ ಮೊದಲು, ಅಂಗಡಿಗಳನ್ನು ಸ್ವಾಧೀನಪಡಿಸಿಕೊಳ್ಳಲು ಅಂಗಡಿ ಮಾಲೀಕರು ಸಂಪೂರ್ಣ ಹಣವನ್ನು ಎಡಿಎಗೆ ಪಾವತಿಸಬೇಕಾಗಿತ್ತು.

ಈ ಅಂಗಡಿಗಳ ಬೆಲೆ ಸುಮಾರು 15ರಿಂದ 20 ಲಕ್ಷ ರೂಪಾಯಿಗಳಾಗಿದ್ದು, ಅಂಗಡಿದಾರರು ಈ ದೊಡ್ಡ ಮೊತ್ತವನ್ನು ಪಾವತಿಸಲು ಸಾಧ್ಯವಾಗಲಿಲ್ಲ. ಅವರ ಮುಂದಿದ್ದ ಏಕೈಕ ಆಯ್ಕೆ ಬ್ಯಾಂಕ್‌ ಸಾಲ. ಕಳೆದ ವರ್ಷ ಡಿಸೆಂಬರ್‌ನಲ್ಲಿ ಈ ಅಂಗಡಿಗಳು ಸಿದ್ಧವಾಗಿದ್ದವು. ಆದರೆ ಹಣಕಾಸಿನ ಅಡಚಣೆಯಿಂದಾಗಿ ಕಳೆದ ತಿಂಗಳವರೆಗೆ ಸುಮಾರು 75 ಅಂಗಡಿದಾರರು ಮಾತ್ರ ಅಂಗಡಿಗಳನ್ನು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ.

ಅಂಗಡಿಗಳ ಬೆಲೆಯನ್ನು ಶೇಕಡಾ 30ರಷ್ಟು ಇಳಿಸಿದ್ದಕ್ಕಾಗಿ ನಾವು ರಾಜ್ಯ ಸರ್ಕಾರಕ್ಕೆ ಕೃತಜ್ಞರಾಗಿರುತ್ತೇವೆ. ಮತ್ತು ಉಳಿದ ಮೊತ್ತವನ್ನು 20 ವರ್ಷಗಳ ಸುಲಭ ಬಡ್ಡಿ ರಹಿತ ಕಂತುಗಳಲ್ಲಿ ಪಾವತಿಸಲಾಗುವುದು ಎಂದು ಅಯೋಧ್ಯೆಯ ಬಿಜೆಪಿ ಶಾಸಕ ವೇದ್ ಪ್ರಕಾಶ್ ಗುಪ್ತಾ ತಿಳಿಸಿದ್ದಾರೆ.

ಇತ್ತೀಚೆಗೆ ಮುಕ್ತಾಯಗೊಂಡ ಸಂಸತ್ತಿನ ಚುನಾವಣೆಯಲ್ಲಿ ಫೈಜಾಬಾದ್ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ತನ್ನ ಅತ್ಯಂತ ಹೀನಾಯ ಸೋಲನ್ನು ಅನುಭವಿಸಿತು. ಎರಡು ಬಾರಿ ಸಂಸದರಾಗಿದ್ದ ಲಲ್ಲು ಸಿಂಗ್ ಅವರು ಸಮಾಜವಾದಿ ಪಕ್ಷದ ಅವದೇಶ್ ಪ್ರಸಾದ್ ವಿರುದ್ಧ ಸೋತರು. ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿ 54,567 ಮತಗಳ ಅಂತರದಿಂದ ಪ್ರತಿಷ್ಠಿತ ಸ್ಥಾನವನ್ನು ಗೆದ್ದಿದ್ದಾರೆ.

ಇದನ್ನೂ ಓದಿ: Ram Mandir: ರಾಮಮಂದಿರ ಆವರಣದಲ್ಲೇ ಗುಂಡು ತಗುಲಿ ಯೋಧ ಸಾವು; ರಾತ್ರಿ ಏನಾಯ್ತು?

ಈ ವರ್ಷದ ಜನವರಿ 22ರಂದು ಪ್ರಧಾನಿ ನರೇಂದ್ರ ಮೋದಿಯವರು ಅಯೋಧ್ಯೆಯಲ್ಲಿ ರಾಮಮಂದಿರವನ್ನು ಭವ್ಯವಾಗಿ ಉದ್ಘಾಟಿಸಿದ ಅನಂತರರೂ ಫೈಜಾಬಾದ್‌ನ ಜನರು ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಹೀನಾಯವಾಗಿ ಸೋಲಿಸಿದ್ದರು. ಅಯೋಧ್ಯೆ ಇರುವ ಈ ಕ್ಷೇತ್ರದಲ್ಲಿ ಪಕ್ಷದ ಸೋಲಿನ ಹಿಂದಿನ ಕಾರಣಗಳನ್ನು ತಿಳಿದುಕೊಳ್ಳಲು ರಾಜ್ಯ ಬಿಜೆಪಿ ಮುಖ್ಯಸ್ಥ ಭೂಪೇಂದ್ರ ಚೌಧರಿ ಬುಧವಾರ ಎರಡು ದಿನಗಳ ಭೇಟಿಗಾಗಿ ಅಯೋಧ್ಯೆಗೆ ಆಗಮಿಸಿದ್ದಾರೆ.

Continue Reading
Advertisement
cm siddaramaiah price hikes
ಕರ್ನಾಟಕ29 mins ago

CM Siddaramaiah: ₹2000 ಕೊಟ್ಟು ₹4740 ಕಿತ್ತುಕೊಳ್ಳುತ್ತಿರುವ ರಾಜ್ಯ ಸರಕಾರ! ನಿಮ್ಮ ಜೇಬಿಗೆ ಕತ್ತರಿ ಬೀಳುತ್ತಿರುವುದರ ಲೆಕ್ಕ ಇಲ್ಲಿದೆ ನೋಡಿ!

Mohan Yadav
ದೇಶ35 mins ago

Mohan Yadav: ಇನ್ಮುಂದೆ ಶಾಲಾ ಪಠ್ಯದಲ್ಲಿ ಇರಲಿದೆ ‘ತುರ್ತು ಪರಿಸ್ಥಿತಿ’ಯ ಅಧ್ಯಾಯ

Road Accident
ಕ್ರೈಂ46 mins ago

Road Accident : ರೈಲು ಬಡಿದು ವ್ಯಕ್ತಿ ಸಾವು;ನಿಂತಿದ್ದ ಬಸ್‌ಗೆ ಗುದ್ದಿ ಛಿದ್ರಗೊಂಡ ಹೊಸ ಕಾರು

Rohit Sharma
ಕ್ರೀಡೆ51 mins ago

Rohit Sharma : ಇಂಗ್ಲೆಂಡ್​ ಸೋಲಿಸುವ ಯೋಜನೆ ವಿವರಿಸಿದ ನಾಯಕ ರೋಹಿತ್ ಶರ್ಮಾ

Droupadi Murmu
ದೇಶ1 hour ago

Droupadi Murmu: ತುರ್ತು ಪರಿಸ್ಥಿತಿ ಸಂವಿಧಾನದ ಮೇಲೆ ನಡೆದಿರುವ ಅತಿದೊಡ್ಡ ದಾಳಿ; ದ್ರೌಪದಿ ಮುರ್ಮು

IND vs ENG
ಪ್ರಮುಖ ಸುದ್ದಿ1 hour ago

IND vs ENG : ಭಾರತದ ವಿರುದ್ಧ ಹೂಡಲಿರುವ ತಂತ್ರಗಳನ್ನು ವಿವರಿಸಿದ ಇಂಗ್ಲೆಂಡ್ ಕೋಚ್​ ಮ್ಯಾಥ್ಯೂ ಮಾಟ್​

karnataka Rains Effected
ಮಳೆ1 hour ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

Share Market
ವಾಣಿಜ್ಯ2 hours ago

Share Market: ಮೊದಲ ಬಾರಿಗೆ 79,000 ಅಂಕಗಳ ಗಡಿ ದಾಟಿದ ಸೆನ್ಸೆಕ್ಸ್; ಗರಿಷ್ಠ ಮಟ್ಟ ತಲುಪಿದ ನಿಫ್ಟಿ

pattanagere shed actor darshan renuka swamy murder
ಕ್ರೈಂ2 hours ago

Actor Darshan: ಪಟ್ಟಣಗೆರೆ ಶೆಡ್ಡಾ? ನಾವು ಅಲ್ಲಿಗೆ ಹೋಗೋಲ್ಲ ಅನ್ನುತ್ತಿರುವ ವಾಹನ ಮಾಲಿಕರು!

Chris Silverwood
ಪ್ರಮುಖ ಸುದ್ದಿ2 hours ago

Chris Silverwood : ಲಂಕಾ ಕೋಚ್​ ಕ್ರಿಸ್​ ಸಿಲ್ವರ್​ವುಡ್​​ ಏಕಾಏಕಿ ರಾಜೀನಾಮೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rains Effected
ಮಳೆ1 hour ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ3 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ6 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ6 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ7 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ2 weeks ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ2 weeks ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ2 weeks ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

ಟ್ರೆಂಡಿಂಗ್‌