Prajwal Revanna Case: ಪ್ರಜ್ವಲ್‌ ರೇವಣ್ಣ ಪತ್ತೆಗೆ ಬ್ಲೂ ಕಾರ್ನರ್‌ ನೋಟೀಸ್!‌ ಏನಿದರ ಅಗತ್ಯ? - Vistara News

ಪ್ರಮುಖ ಸುದ್ದಿ

Prajwal Revanna Case: ಪ್ರಜ್ವಲ್‌ ರೇವಣ್ಣ ಪತ್ತೆಗೆ ಬ್ಲೂ ಕಾರ್ನರ್‌ ನೋಟೀಸ್!‌ ಏನಿದರ ಅಗತ್ಯ?

Prajwal Revanna Case: ಆರೋಪಿಯ ಚಲನವಲನಗಳ ಬಗ್ಗೆ ಮಾಹಿತಿಯನ್ನು ಕಲೆ ಹಾಕಲು ಬ್ಲ್ಯೂ ಕಾರ್ನರ್ ನೋಟೀಸ್‌ ಜಾರಿಗೊಳಿಸಲಾಗುತ್ತದೆ. ಆರೋಪಿ ಬಗ್ಗೆ ಸುಳಿವು ಸಿಕ್ಕ ಬಳಿಕ ಆ ಮಾಹಿತಿಯನ್ನು ಸಿಐಡಿಗೆ ಸಿಬಿಐ ನೀಡಲಿದೆ. ಮತ್ತೆ ಇದನ್ನು ಆಧರಿಸಿ ಕೋರ್ಟ್‌ಗೆ ಮಾಹಿತಿ ‌ನೀಡಿ ರೆಡ್ ಕಾರ್ನರ್ ನೊಟೀಸ್ ಜಾರಿ ಮಾಡಲು ಎಸ್ಐಟಿ ಮನವಿ ಮಾಡಬೇಕಿದೆ. ಸಿಬಿಐ, ಇಂಟರ್‌ಫೋಲ್‌ಗೆ ಮನವಿ ಮಾಡಿ ರೆಡ್ ಕಾರ್ನರ್ ನೊಟೀಸ್ ಪಡೆಯಲಿದೆ.

VISTARANEWS.COM


on

prajwal revanna case blue corner notice
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಲೈಂಗಿಕ ಹಗರಣದ (Pen Drive Case) ಪ್ರಮುಖ ಆರೋಪಿ ಪ್ರಜ್ವಲ್ ರೇವಣ್ಣ (Prajwal Revanna case) ಪತ್ತೆಗೆ ಬ್ಲೂ ಕಾರ್ನರ್ ನೊಟೀಸ್ (Blue Corner Notice) ಜಾರಿ ಮಾಡಲು ಎಸ್ಐಟಿ (SIT) ಅಧಿಕಾರಿಗಳಿಂದ ಮನವಿ ಮಾಡಲಾಗಿದೆ. ಸಿಬಿಐಗೆ (CBI) ಈ ಕುರಿತು ಎಸ್‌ಐಟಿ ಮನವಿ ಮಾಡಿದ್ದು, ಇಂಟರ್‌ಪೋಲ್‌ (Interpol) ಮೂಲಕ ಇದನ್ನು ಜಾರಿ ಮಾಡಬೇಕಿದೆ.

ಆರೋಪಿಯ ಚಲನವಲನಗಳ ಬಗ್ಗೆ ಮಾಹಿತಿಯನ್ನು ಕಲೆ ಹಾಕಲು ಬ್ಲ್ಯೂ ಕಾರ್ನರ್ ನೋಟೀಸ್‌ ಜಾರಿಗೊಳಿಸಲಾಗುತ್ತದೆ. ಆರೋಪಿ ಬಗ್ಗೆ ಸುಳಿವು ಸಿಕ್ಕ ಬಳಿಕ ಆ ಮಾಹಿತಿಯನ್ನು ಸಿಐಡಿಗೆ ಸಿಬಿಐ ನೀಡಲಿದೆ. ಮತ್ತೆ ಇದನ್ನು ಆಧರಿಸಿ ಕೋರ್ಟ್‌ಗೆ ಮಾಹಿತಿ ‌ನೀಡಿ ರೆಡ್ ಕಾರ್ನರ್ ನೊಟೀಸ್ ಜಾರಿ ಮಾಡಲು ಎಸ್ಐಟಿ ಮನವಿ ಮಾಡಬೇಕಿದೆ. ಸಿಬಿಐ, ಇಂಟರ್‌ಫೋಲ್‌ಗೆ ಮನವಿ ಮಾಡಿ ರೆಡ್ ಕಾರ್ನರ್ ನೊಟೀಸ್ ಪಡೆಯಲಿದೆ.

ಸದ್ಯ ಪ್ರಜ್ವಲ್ ರೇವಣ್ಣ ಎಲ್ಲಿದ್ದಾರೆ ಎಂಬ ಮಾಹಿತಿಯ ಪತ್ತೆಗೆ ಎಸ್‌ಐಟಿ ಅಧಿಕಾರಿಗಳು ಮುಂದಾಗಿದ್ದಾರೆ. ಯಾವ ದೇಶದಲ್ಲಿ ಇದ್ದಾರೆ ಎನ್ನುವುದು ಪತ್ತೆಯಾಗಬೇಕಿದೆ. ಈ ಬಗ್ಗೆ ಸಿಬಿಐಗೆ ಈಗಾಗಲೇ ಮನವಿ ಮಾಡಲಾಗಿದೆ. ಬ್ಲೂ ಕಾರ್ನರ್ ನೊಟೀಸ್ ಜಾರಿ ಮಾಡುವಂತೆ ಸಿಬಿಐಗೆ ಮನವಿ ಮಾಡಲಾಗಿದೆ. ನಿನ್ನೆಯವರೆಗೂ ಪ್ರಜ್ವಲ್‌ ಜರ್ಮನಿಯಲ್ಲಿ ಇದ್ದರು ಎಂಬ ಮಾಹಿತಿ ಇತ್ತು. ನಿನ್ನೆ ದುಬೈಗೆ ತೆರಳಿದ್ದಾರೆ ಎಂದು ಹೇಳಲಾಗಿದೆ. ಪ್ರಜ್ವಲ್‌ ತಮ್ಮಲ್ಲಿರುವ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಬಳಸಿ ವಿದೇಶಯಾನ ಮಾಡುತ್ತಿದ್ದಾರೆ ಎಂದು ಗೊತ್ತಾಗಿದೆ.

ಬ್ಲೂ ಕಾರ್ನರ್ ನೊಟೀಸ್ ಜಾರಿಯಾದ ಬಳಿಕ ಇಂಟರ್‌ಪೋಲ್ ಇತರ ಕಡೆಗಳಿಗೂ ಆರೋಪಿಯ ಮಾಹಿತಿಯನ್ನು ಕಳಿಸಿ, ಆರೋಪಿಯ ನೆಲೆಯ ಬಗ್ಗೆ ಮಾಹಿತಿ ಸಂಗ್ರಹಿಸುತ್ತದೆ. ಯಾವ ದೇಶದಲ್ಲಿ ಇದ್ದಾರೆ, ಎಲ್ಲಿ ಲೊಕೇಟ್ ಆಗಿದ್ದಾರೆ ಅನ್ನುವ ಚಲನವಲನ ಪತ್ತೆ ಮಾಡುತ್ತಾರೆ. ಬಳಿಕ ಸಿಬಿಐಗೆ ಆರೋಪಿಯ ಚಲನವಲನ ಬಗ್ಗೆ ಮಾಹಿತಿ ನೀಡುತ್ತಾರೆ. ಸಿಬಿಐ ಮೂಲಕ ಎಸ್ಐಟಿಗೆ ಪ್ರಜ್ವಲ್ ಎಲ್ಲಿದ್ದಾರೆ ಅನ್ನುವ ಮಾಹಿತಿ ಸಿಗುತ್ತದೆ. ಹೀಗಾಗಿ ಈ ನೋಟೀಸ್‌, ಸುಳಿವು ಪಡೆಯಲು ಮುಖ್ಯವಾಗಿದೆ.

ಇನ್ನಷ್ಟು ಸಿಬ್ಬಂದಿ

ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿಗೆ ಇನ್ನಷ್ಟು ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಮತ್ತೆ ಎಂಟು ಮಂದಿ ಅಧಿಕಾರಿ ಸಿಬ್ಬಂದಿಗಳ ನಿಯೋಜನೆ ಮಾಡಲಾಗಿದೆ. ಮೂವರು ಇನ್ಸ್‌ಪೆಕ್ಟರ್ ಹಾಗೂ ಮಹಿಳಾ ಸಿಬ್ಬಂದಿ ಸೇರಿದಂತೆ ಐವರು ಸಿಬ್ಬಂದಿ ನಿಯೋಜಿಸಲಾಗಿದ್ದು, ಕೂಡಲೇ ಸಿಐಡಿ ಕಚೇರಿಯ ಎಸ್ಐಟಿಯಲ್ಲಿ ವರದಿ ಮಾಡಿಕೊಳ್ಳಲು ಆದೇಶಿಸಲಾಗಿದೆ. ಓರ್ವ ಎಸ್ಪಿ, ಇಬ್ಬರು ಇನ್ಸ್ಪೆಕ್ಟರ್ ಗಳು, ಒರ್ವ ಸಬ್ ಇನ್ಸ್ಪೆಕ್ಟರ್ ಹಾಗೂ ನಾಲ್ವರು ಸಿಬ್ಬಂದಿ ಸೇರಿ ಎಂಟು ಜನರ ನೇಮಕ ಮಾಡಲಾಗಿದೆ.

ರೇವಣ್ಣ ಮೇಲೂ ಲುಕೌಟ್‌ ನೋಟೀಸ್‌

ಎಚ್‌.ಡಿ. ರೇವಣ್ಣ (HD Revanna) ವಿರುದ್ಧವೂ ಎಸ್‌ಐಟಿ ಲುಕ್‌ಔಟ್‌ ನೋಟಿಸ್‌ ಜಾರಿ ಮಾಡಿದೆ. ದೇಶ ಬಿಟ್ಟು ಹೋಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಲುಕ್‌ಔಟ್ ನೋಟಿಸ್ (Lookout Notice) ಜಾರಿ ಮಾಡಲಾಗಿದೆ ಎನ್ನಲಾಗಿದೆ. ಈಗಾಗಲೇ ಮಾಜಿ ಸಚಿವ ಎಚ್.ಡಿ. ರೇವಣ್ಣ ವಿರುದ್ಧವೂ ಲೈಂಗಿಕ ದೌರ್ಜನ್ಯ ಹಾಗೂ ಅಪಹರಣ ಪ್ರಕರಣ ದಾಖಲಾಗಿದೆ. ಕಳೆದ ಎರಡು ದಿನಗಳಿಂದ ಎಚ್.ಡಿ. ರೇವಣ್ಣ ಕಾಣಿಸಿಕೊಂಡಿಲ್ಲ. ಈ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಲುಕ್‌ಔಟ್ ನೋಟಿಸ್‌ ಅನ್ನು ಜಾರಿ ಮಾಡಿದ್ದಾರೆ.

ಕೆ. ಆರ್. ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಡಿ ಲುಕ್ ಔಟ್ ನೋಟಿಸ್‌ ಅನ್ನು ಜಾರಿ ಮಾಡಲಾಗಿದೆ. ಈಗ ಎಚ್.ಡಿ. ರೇವಣ್ಣ ಸಹ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದ್ದು, ದೇಶ ಬಿಟ್ಟು ಹೋಗುವ ಸಾಧ್ಯತೆ ಇದೆ. ಒಂದು ವೇಳೆ ಅವರು ದೇಶ ಬಿಟ್ಟು ಹೋದರೆ ರಾಜ್ಯ ಸರ್ಕಾರಕ್ಕೆ ತೀವ್ರ ಮುಖಭಂಗವಾಗಲಿದೆ. ಇದೊಂದು ಹೈಪ್ರೊಫೈಲ್‌ ಕೇಸ್‌ ಆಗಿದ್ದು, ಸೂಕ್ಷ್ಮವಾಗಿ ತನಿಖೆ ನಡೆಸಬೇಕಿದೆ. ಹೀಗಾಗಿ ಎಸ್‌ಐಟಿ ಅಧಿಕಾರಿಗಳು ಎಲ್ಲ ಆಯಾಮಗಳಲ್ಲಿಯೂ ತನಿಖೆ ಮಾಡುತ್ತಿದ್ದಾರೆ.

ಇದರ ಜತೆಗೆ ರೇವಣ್ಣ ಅವರಿಗೆ ಈಗಾಗಲೇ ವಿಚಾರಣೆಗೆ ಹಾಜರಾಗುವಂತೆ ಹಲವು ಬಾರಿ ನೋಟಿಸ್‌ ನೀಡುತ್ತಲೇ ಬರಲಾಗಿದೆ. ಇಷ್ಟಾದರೂ ಅವರು ಎಲ್ಲಿಯೂ ಕಾಣಿಸಿಕೊಂಡಿಲ್ಲ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಎಸ್‌ಐಟಿ ಲುಕ್‌ಔಟ್‌ ನೋಟಿಸ್‌ ಜಾರಿಗೊಳಿಸಿದೆ.

ಇದನ್ನೂ ಓದಿ: Prajwal Revanna Case: ಮೊಮ್ಮಗನ ದೆಸೆಯಿಂದ ದೇವೇಗೌಡರ ಆರೋಗ್ಯ ಏರುಪೇರು, ಕುಟುಂಬದಿಂದ ತೀವ್ರ ನಿಗಾ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಾಣಿಜ್ಯ

PMAY: ಸ್ವಂತ ಮನೆ ಹೊಂದುವ ನಿಮ್ಮ ಕನಸು ಪ್ರಧಾನ್ ಮಂತ್ರಿ ಆವಾಸ್ ಯೋಜನೆ ಮೂಲಕ ನನಸು; ಹೀಗೆ ಅಪ್ಲೈ ಮಾಡಿ

PMAY: ಮಧ್ಯಮ ಮತ್ತು ಬಡ ವರ್ಗದ ಕುಟುಂಬದವರ ಸ್ವಂತ ಸೂರಿನ ಕನಸು ನನಸು ಮಾಡಲೆಂದೇ ಸರ್ಕಾರ ಜಾರಿಗೆ ತಂದ ಯೋಜನೆ ಪಿಎಂಎವೈ (ಪ್ರಧಾನ ಮಂತ್ರಿ ಆವಾಸ್ ಯೋಜನೆ). ಈ ಯೋಜನೆ ಮೂಲಕ ನಗರ ಮತ್ತು ಗ್ರಾಮೀಣ ಪ್ರದೇಶದ ಬಡವರಿಗಾಗಿ ಮನೆ ನಿರ್ಮಿಸಿ ಕೊಡುತ್ತಿದೆ. ಹಾಗಾದರೆ ಏನಿದು ಯೋಜನೆ? ಯಾರು ಅರ್ಹರು? ಅರ್ಜಿ ಸಲ್ಲಿಸುವುದು ಹೇಗೆ ಮುಂತಾದ ವಿವರ ಇಲ್ಲಿದೆ.

VISTARANEWS.COM


on

PMAY
Koo

ಬೆಂಗಳೂರು: ಸ್ವಂತ ಮನೆ ಹೊಂದಬೇಕು ಎನ್ನುವ ಕನಸು ಯಾರಿಗೆ ಇಲ್ಲ ಹೇಳಿ? ಆದರೆ ಈ ದುಬಾರಿ ದುನಿಯಾದಲ್ಲಿ ಸ್ವಂತದ್ದೊಂದು ಸೂರು ಕಟ್ಟಿಕೊಳ್ಳುವ ಆಸೆ ದುಬಾರಿಯೇ ಸರಿ. ಅದರಲ್ಲಿಯೂ ಮಧ್ಯಮ ಮತ್ತು ಬಡ ವರ್ಗದ ಕುಟುಂಬದವರಂತೂ ಇದಕ್ಕಾಗಿ ಜೀವಮಾನವಿಡೀ ದುಡಿದಿದ್ದನ್ನು ಮೀಸಲಿಡಬೇಕಾದ ಸ್ಥಿತಿ ಇದೆ. ಆದರೆ ಗೊತ್ತಿರಲಿ ಇಂತಹವರಿಗೆಂದೇ ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಆವಾಸ್ ಯೋಜನೆ (Pradhan Mantri Awas Yojana-PMAY) ಜಾರಿಗೆ ತಂದಿದೆ. ಅಂದರೆ ಕೇಂದ್ರ ಸರ್ಕಾರ ಈ ಯೋಜನೆ ಮೂಲಕ ನಗರ ಮತ್ತು ಗ್ರಾಮೀಣ ಪ್ರದೇಶದ ಬಡವರಿಗಾಗಿ ಮನೆ ನಿರ್ಮಿಸಿ ಕೊಡುತ್ತಿದೆ. ಹಾಗಾದರೆ ಏನಿದು ಯೋಜನೆ? ಯಾರು ಅರ್ಹರು? ಅರ್ಜಿ ಸಲ್ಲಿಸುವುದು ಹೇಗೆ ಮುಂತಾದ ವಿವರ ಇಲ್ಲಿದೆ (How To Apply For PMAY).

ಏನಿದು ಯೋಜನೆ?

ದೇಶದ ಎಲ್ಲರಿಗೂ ಸೂರು ಒದಗಿಸಬೇಕು ಎನ್ನುವ ಗುರಿಯೊಂದಿಗೆ ಕೇಂದ್ರ ಸರ್ಕಾರ 2015-16ರಲ್ಲಿ ಈ ಯೋಜನೆಯನ್ನು ಪರಿಚಯಿಸಿದೆ. ಈ ಮೂಲಕ ನಗರ ಮತ್ತು ಗ್ರಾಮೀಣದ ಪ್ರದೇಶದ ಬಡ ಜನರಿಗೆ ಅಗತ್ಯ ಮೂಲ ಸೌಕರ್ಯಗಳನ್ನು ಹೊಂದಿರುವ ಮನೆ ನಿರ್ಮಿಸಿ ಕೊಡಲಾಗುತ್ತದೆ. ಈ ಯೋಜನೆಯಡಿ ವಾರ್ಷಿಕ ಶೇ. 6.50ರ ಬಡ್ಡಿದರದಲ್ಲಿ ಸಾಲ ಲಭ್ಯವಾಗುತ್ತದೆ. 10 ವರ್ಷಗಳಲ್ಲಿ ಈ ಯೋಜನೆ ಮೂಲಕ ಸುಮಾರು 4.21 ಮನೆಗಳನ್ನು ನಿರ್ಮಿಸಲಾಗಿದೆ. ಈ ಬಾರಿ ಅಧಿಕಾರಕ್ಕೆ ಬಂದ ಎನ್‌ಡಿಎ ಸರ್ಕಾರ 3 ಕೋಟಿ ಮನೆಗಳನ್ನು ನಿರ್ಮಿಸಿ ಕೊಡುವ ತೀರ್ಮಾನವನ್ನು ಈಗಾಗಲೇ ಪ್ರಕಟಿಸಿದೆ. ಮೊದಲ ಸಂಪುಟ ಸಭೆಯಲ್ಲಿಯೇ ಈ ನಿರ್ಧಾರ ಕೈಗೊಳ್ಳಲಾಗಿದೆ.

ಮನೆಯಲ್ಲಿ ಏನಿರಲಿದೆ?

ಸರ್ಕಾರ ನಿರ್ಮಿಸಿ ಕೊಡುವ ಈ ಮನೆ ಅಗತ್ಯ ಮೂಲ ಸೌಕರ್ಯಗಳನ್ನು ಒಳಗೊಂಡಿರುತ್ತದೆ. ಶೌಚಾಲಯ, ಎಲ್‌ಪಿಜಿ ಕನೆಕ್ಷನ್‌, ವಿದ್ಯುತ್‌ ಸಂಪರ್ಕ ಮತ್ತು ನೀರಿನ ಸೌಲಭ್ಯ ಹೊಂದಿರುತ್ತದೆ. ಪ್ರಧಾನ್ ಮಂತ್ರಿ ಆವಾಸ್ ಯೋಜನೆಯಲ್ಲಿ ನಗರ ಮತ್ತು ಗ್ರಾಮೀಣ ಎನ್ನುವ ಎರಡು ವಿಧವಿದೆ.

ಈ ಯೋಜನೆಯನ್ನು ಫಲಾನುಭವಿಗಳ ವಾರ್ಷಿಕ ಆದಾಯದ ಆಧಾರದಲ್ಲಿ 4 ವರ್ಗಗಳನ್ನಾಗಿ ವಿಂಗಡಿಸಲಾಗಿದೆ.
ಆರ್ಥಿಕವಾಗಿ ಹಿಂದುಳಿದ ವರ್ಗ (EWS)- 3 ಲಕ್ಷ ರೂ.ವರೆಗೆ ಆದಾಯ
ಕಡಿಮೆ ಆದಾಯದ ಗುಂಪು (LIG): 3 ಲಕ್ಷ ರೂ.- 6 ರೂ. ಆದಾಯ
ಮಧ್ಯಮ ಆದಾಯದ ಗುಂಪು-1 (MIG-1): 6 ಲಕ್ಷ ರೂ.- 12 ರೂ. ಆದಾಯ
ಮಧ್ಯಮ ಆದಾಯದ ಗುಂಪು-1 (MIG-2): 12 ಲಕ್ಷ ರೂ.- 18 ರೂ. ಆದಾಯ

ಯಾರೆಲ್ಲ ಅರ್ಹರು?

  • ಫಲಾನುಭವಿ ಭಾರತದ ನಿವಾಸಿಯಾಗಿರಬೇಕು.
  • ಫಲಾನುಭವಿ ಶಾಶ್ವತ ಮನೆ ಹೊಂದಿರಬಾರದು.
  • ಫಲಾನುಭವಿ 18 ವರ್ಷಕ್ಕಿಂತ ಮೇಲ್ಪಟ್ಟವರಾಗಿರಬೇಕು.
  • ಫಲಾನುಭವಿಯ ಹೆಸರು ಪಡಿತರ ಚೀಟಿ ಅಥವಾ ಪಿಬಿಎಲ್ ಪಟ್ಟಿಯಲ್ಲಿರಬೇಕು.
  • ಫಲಾನುಭವಿ ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಿರಬೇಕು. ಅಲ್ಲದೆ ಯಾವುದೇ ಮಾನ್ಯ ಗುರುತಿನ ಚೀಟಿಯನ್ನು ಹೊಂದಿರಬೇಕು (ಅಧಾರ್‌ ಕಾರ್ಡ್‌, ಲೈಸನ್ಸ್‌ ಇತ್ಯಾದಿ).
  • ಫಲಾನುಭವಿಯ ಕುಟುಂಬದವರು ಸರ್ಕಾರಿ ಉದ್ಯೋಗದಲ್ಲಿ ಇರಬಾರದು.

ಯೋಜನೆ ವೈಶಿಷ್ಟ್ಯ

  • ಈ ಯೋಜನೆ ದೇಶದ ಎಲ್ಲ ಗ್ರಾಮೀಣ ಮತ್ತು ನಗರ ಪ್ರದೇಶಗಳಿಗೆ ಅನ್ವಯವಾಗುತ್ತದೆ
  • ಈ ಯೋಜನೆಯಡಿ, ಎಲ್ಲ ಫಲಾನುಭವಿಗಳಿಗೆ ವಾರ್ಷಿಕ ಶೇ. 6.50 ಬಡ್ಡಿದರದಲ್ಲಿ 20 ವರ್ಷಗಳವರೆಗೆ ವಸತಿ ಸಾಲ ಲಭ್ಯ.
  • ನೆಲ ಮಹಡಿಯಲ್ಲಿರುವ ಮನೆಗಳು ಅಂಗವಿಕಲರಿಗೆ ಮತ್ತು ಹಿರಿಯ ನಾಗರಿಕರಿಗೆ ಮೀಸಲು.
  • ಗೃಹ ನಿರ್ಮಾಣದಲ್ಲಿ ಸುಸ್ಥಿರ, ಪರಿಸರ ಸ್ನೇಹಿ ತಂತ್ರಜ್ಞಾನ ಬಳಕೆ.
  • ಮನೆ ಅಗತ್ಯ ಮೂಲ ಸೌಕರ್ಯ ಹೊಂದಿದ್ದು, ಹೆಚ್ಚುವರಿ ಕಾಮಗಾರಿ ಬೇಕಾದರೆ ಕೈಗೊಳ್ಳಬಹುದಾಗಿದೆ.

ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ವಿಧಾನ

  • ಅಧಿಕೃತ ವೆಬ್‌ಸೈಟ್‌ https://pmaymis.gov.in/ಗೆ ಭೇಟಿ ನೀಡಿ
  • ಅಥವಾ ಇಲ್ಲಿ ಕ್ಲಿಕ್‌ ಮಾಡಿ.
  • ಹೋಮ್‌ಪೇಜ್‌ನಲ್ಲಿ ಕಂಡು ಬರುವ PM Awas Yojana ಆಯ್ಕೆ ಮೇಲೆ ಕ್ಲಿಕ್‌ ಮಾಡಿ.
  • ಅಗತ್ಯ ಮಾಹಿತಿ ನೀಡಿ ಹೆಸರು ನೋಂದಾಯಿಸಿ.
  • ಅಗತ್ಯ ದಾಖಲೆಗಳನ್ನು ಅಪ್‌ಲೋಡ್‌ ಮಾಡಿ.
  • ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ Submit ಬಟನ್‌ ಕ್ಲಿಕ್‌ ಮಾಡಿ.

ಆಫ್‌ಲೈನ್‌ ಮೂಲಕವೂ ನೀವು ಅರ್ಜಿ ಸಲ್ಲಿಬಹುದು. ಇದಕ್ಕಾಗಿ ನೀವು ಅಗತ್ಯ ದಾಖಲೆಗಳೊಂದಿಗೆ ಹತ್ತಿರದ ಸಾಮಾನ್ಯ ಸೇವಾ ಕೇಂದ್ರಕ್ಕೆ (Common Service Center) ಭೇಟಿ ನೀಡಿ. ಹೆಚ್ಚಿನ ಮಾಹಿತಿಗಾಗಿ 1800-11-3377, 1800-11-3388 ನಂಬರ್‌ಗೆ ಕರೆ ಮಾಡಿ.

ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು

  • ಆಧಾರ್ ಕಾರ್ಡ್ ಅಥವಾ ಆಧಾರ್ ಸಂಖ್ಯೆ.
  • ಅರ್ಜಿದಾರರ ಫೋಟೊ
  • ಫಲಾನುಭವಿಯ ಜಾಬ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಸಂಖ್ಯೆ.
  • ಬ್ಯಾಂಕ್ ಪಾಸ್‌ಬುಕ್.
  • ಸ್ವಚ್ಛ ಭಾರತ್ ಮಿಷನ್ (SBM) ನೋಂದಣಿ ಸಂಖ್ಯೆ.
  • ಮೊಬೈಲ್ ನಂಬರ್.

ಇದನ್ನೂ ಓದಿ: Money Guide: ಅಸಂಘಟಿತ ವಲಯದ ಕಾರ್ಮಿಕರು ಪ್ರತಿ ತಿಂಗಳು 3 ಸಾವಿರ ರೂ. ಪಿಂಚಣಿ ಪಡೆಯಲು ಹೀಗೆ ಮಾಡಿ

Continue Reading

ಕರ್ನಾಟಕ

Foeticide: ಬೆಳಗಾವಿಯಲ್ಲಿ ನಕಲಿ ವೈದ್ಯನಿಂದ ಭ್ರೂಣಗಳ ಹತ್ಯೆ; ಜಮೀನಲ್ಲಿ ಸಿಕ್ಕಿತು ಶಿಶುವಿನ ಶವ

Foeticide: ಕಿತ್ತೂರು ಪಟ್ಟಣದಲ್ಲಿ ಭ್ರೂಣ ಲಿಂಗ ಪತ್ತೆ, ಭ್ರೂಣಗಳನ್ನು ಹತ್ಯೆ ಕೃತ್ಯದಲ್ಲಿ ತೊಡಗಿರುವ ನಕಲಿ ವೈದ್ಯ ಅಬ್ದುಲ್‌ ಗಫಾರ್‌ ಲಾಡಖಾನ್‌ಗೆ ರೋಹಿತ್‌ ಕುಪ್ಪಸಗೌಡರ್‌ ಹಲವು ವರ್ಷಗಳಿಂದ ಸಹಾಯಕನಾಗಿ ಕೆಲಸ ಮಾಡುತ್ತಿದ್ದಾನೆ. ತಿಗಡೊಳ್ಳಿ ಗ್ರಾಮದ ಬಳಿ ಇರುವ ಫಾರ್ಮ್‌ಹೌಸ್‌ನಲ್ಲಿ ಭ್ರೂಣಗಳನ್ನು ಹೂಳುವುದೇ ರೋಹಿತ್‌ ಕುಪ್ಪಸಗೌಡರ ಕೆಲಸವಾಗಿತ್ತು ಎಂದು ತಿಳಿದುಬಂದಿದೆ.

VISTARANEWS.COM


on

Foeticide
Koo

ಬೆಳಗಾವಿ: ಬೆಂಗಳೂರು ಹಾಗೂ ಮಂಡ್ಯದಲ್ಲಿ ಕೆಲ ತಿಂಗಳ ಹಿಂದೆ ಹೆಣ್ಣು ಭ್ರೂಣಹತ್ಯೆಯ ಬೃಹತ್‌ ಜಾಲವೊಂದು ಪತ್ತೆಯಾದ ಬೆನ್ನಲ್ಲೇ ಬೆಳಗಾವಿ (Belagavi) ಜಿಲ್ಲೆಯಲ್ಲೂ ನಕಲಿ ವೈದ್ಯನು ಭ್ರೂಣ ಹತ್ಯೆ (Foeticide) ಮಾಡಿರುವ ಪ್ರಕರಣವು ಬಯಲಾಗಿದೆ. ಜಿಲ್ಲೆಯ ಕಿತ್ತೂರು ಪಟ್ಟಣದಲ್ಲಿ ನಕಲಿ ವೈದ್ಯ ಅಬ್ದುಲ್‌ ಗಫಾರ್‌ ಲಾಡಖಾನ್‌ ಎಂಬಾತನು ಭ್ರೂಣಹತ್ಯೆ ಮಾಡಿದ್ದು, ಜಿಲ್ಲೆಯ ಕಿತ್ತೂರು ತಾಲೂಕಿನ ತಿಗಡೊಳ್ಳಿ ಗ್ರಾಮದ ಫಾರ್ಮ್‌ಹೌಸ್‌ನಲ್ಲಿ ಭ್ರೂಣದ ಶವವೊಂದು ಪತ್ತೆಯಾಗಿದೆ. ಇನ್ನಷ್ಟು ಭ್ರೂಣಗಳಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ.

ನಕಲಿ ವೈದ್ಯ ಅಬ್ದುಲ್‌ ಗಫಾರ್‌ ಲಾಡಖಾನ್‌ನ ಸಹಾಯಕನಾಗಿರುವ ರೋಹಿತ್ ಕುಪ್ಪಸಗೌಡರ್ ಎಂಬಾತನನ್ನು ಕರೆದುಕೊಂಡು ಹೋಗಿರುವ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ. ನಕಲಿ ವೈದ್ಯನ ಜಮೀನಿನಲ್ಲಿ ಭ್ರೂಣದ ಶವ ಪತ್ತೆಯಾಗಿದೆ. ಡಿಎಚ್ಒ ಡಾ.ಮಹೇಶ ಕೋಣಿ, ಎಸಿ ಪ್ರಭಾವತಿ ಫಕೀರಪುರ, ಡಿಎಎಸ್‌ಪಿ ರವಿ ನಾಯ್ಕ ನೇತೃತ್ವದಲ್ಲಿ ಶೋಧ ಕಾರ್ಯ ನಡೆಯುತ್ತಿದೆ. ಭ್ರೂಣಗಳನ್ನು ಹೂಳುತ್ತಿದ್ದ ರೋಹಿತ್‌ ಕುಪ್ಪಸಗೌಡರ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯ ಆತ ತೋರಿಸಿದ ಜಾಗದಲ್ಲಿ ಶೋಧ ನಡೆಸಲಾಗುತ್ತಿದೆ.

ಫಾರ್ಮ್‌ಹೌಸ್‌ನಲ್ಲಿ ಭ್ರೂಣ ಹೂತಿದ್ದ ಜಾಗ.

ಕಿತ್ತೂರು ಪಟ್ಟಣದಲ್ಲಿ ಭ್ರೂಣ ಲಿಂಗ ಪತ್ತೆ, ಭ್ರೂಣಗಳನ್ನು ಹತ್ಯೆ ಕೃತ್ಯದಲ್ಲಿ ತೊಡಗಿರುವ ನಕಲಿ ವೈದ್ಯ ಅಬ್ದುಲ್‌ ಗಫಾರ್‌ ಲಾಡಖಾನ್‌ಗೆ ರೋಹಿತ್‌ ಕುಪ್ಪಸಗೌಡರ್‌ ಹಲವು ವರ್ಷಗಳಿಂದ ಸಹಾಯಕನಾಗಿ ಕೆಲಸ ಮಾಡುತ್ತಿದ್ದಾನೆ. ತಿಗಡೊಳ್ಳಿ ಗ್ರಾಮದ ಬಳಿ ಇರುವ ಫಾರ್ಮ್‌ಹೌಸ್‌ನಲ್ಲಿ ಭ್ರೂಣಗಳನ್ನು ಹೂಳುವುದೇ ರೋಹಿತ್‌ ಕುಪ್ಪಸಗೌಡರ ಕೆಲಸವಾಗಿತ್ತು ಎಂದು ತಿಳಿದುಬಂದಿದೆ. ಈತನನ್ನು ಫಾರ್ಮ್‌ಹೌಸ್‌ಗೆ ಕರೆದುಕೊಂಡು ಹೋಗಿರುವ ಅಧಿಕಾರಿಗಳು, ಶೋಧ ನಡೆಸುತ್ತಿದ್ದಾರೆ. ರೋಹಿತ್‌ ತೋರಿಸಿದ ಜಾಗದಲ್ಲಿಯೇ ಒಂದು ಭ್ರೂಣ ಪತ್ತೆಯಾಗಿರುವ ಕಾರಣ ಇನ್ನಷ್ಟು ಭ್ರೂಣಗಳು ಇರಬಹುದು ಎಂಬ ಶಂಕೆಯಿಂದ ಶೋಧ ಕಾರ್ಯ ಮುಂದುವರಿಸಲಾಗಿದೆ.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಅಬ್ದುಲ್‌ ಗಫಾರ್‌ ಲಾಡಖಾನ್‌ ಹಿಂದೆ ಯಾರಿದ್ದಾರೆ? ಜಾಲದಲ್ಲಿ ಯಾರೆಲ್ಲ ತೊಡಗಿಸಿಕೊಂಡಿದ್ದಾರೆ? ಫಾರ್ಮ್‌ಹೌಸ್‌ ಸೇರಿ ಇನ್ನೂ ಹಲವು ಪ್ರದೇಶಗಳಲ್ಲಿ ಭ್ರೂಣಗಳನ್ನು ಹೂಳಲಾಗಿದೆಯೇ ಎಂಬುದು ಸೇರಿ ಹತ್ತಾರು ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕೆಲ ದಿನಗಳ ಹಿಂದೆ ಬಾಗಲಕೋಟೆಯಲ್ಲೂ ಭ್ರೂಣ ಹತ್ಯೆ ಪ್ರಕರಣಗಳು ಬಯಲಾಗಿದ್ದವು.

ಇದನ್ನೂ ಓದಿ: Foeticide Case: ಬಾಗಲಕೋಟೆಯಲ್ಲಿ ಮತ್ತೊಂದು ಭ್ರೂಣ ಹತ್ಯೆ: ಗಾಢ ನಿದ್ರೆಯಲ್ಲಿದ್ದಾರಾ ಅಧಿಕಾರಿಗಳು?

Continue Reading

ಕ್ರೀಡೆ

SCO vs AUS: ಆಸೀಸ್​ಗೆ 5 ವಿಕೆಟ್​ ಗೆಲುವು; ಸೂಪರ್​-8ಗೆ ಲಗ್ಗೆಯಿಟ್ಟ ಇಂಗ್ಲೆಂಡ್​

SCO vs AUS: ಆಸ್ಟ್ರೇಲಿಯಾದ ಈ ಗೆಲುವಿನಿಂದಾಗಿ ಹಾಲಿ ಚಾಂಪಿಯನ್​ ಇಂಗ್ಲೆಂಡ್​ ತಂಡ ಸೂಪರ್​-8ಗೆ ಪ್ರವೇಶ ಪಡೆಯುವಂತಾಯಿತು. ಸ್ಕಾಟ್ಲೆಂಡ್​ ಮತ್ತು ಇಂಗ್ಲೆಂಡ್​ ‘ಬಿ’ ಗುಂಪಿನಲ್ಲಿ ತಲಾ 5 ಅಂಕ ಪಡೆದಿದ್ದರೂ ಕೂಡ ರನ್​ ರೇಟ್​ ಆಧಾರದಲ್ಲಿ ಇಂಗ್ಲೆಂಡ್​ ಮುಂದಿದ್ದ ಕಾರಣ ಈ ಲಾಭ ಜಾಸ್​ ಬಟ್ಲರ್​ ಪಡೆಗೆ ಲಭಿಸಿತು.

VISTARANEWS.COM


on

SCO vs AUS
Koo

ಗ್ರಾಸ್‌ ಐಲೆಟ್‌ (ಸೇಂಟ್‌ ಲೂಸಿಯಾ): ಸೂಪರ್​-8 ಪ್ರವೇಶಕ್ಕೆ ಗೆಲ್ಲಲೇ ಬೇಕಿದ್ದ ಪಂದ್ಯದಲ್ಲಿ ಸ್ಕಾಟ್ಲೆಂಡ್(SCO vs AUS)​ ತಂಡ ಆಸ್ಟ್ರೇಲಿಯಾ ವಿರುದ್ಧ 5 ವಿಕೆಟ್​ ಅಂತರದ ಸೋಲು ಕಾಣುವ ಮೂಲಕ ಟೂರ್ನಿಯಿಂದ ಹೊರಬಿದ್ದಿದೆ. ಆಸ್ಟ್ರೇಲಿಯಾದ ಈ ಗೆಲುವಿನಿಂದಾಗಿ ಹಾಲಿ ಚಾಂಪಿಯನ್​ ಇಂಗ್ಲೆಂಡ್​ ತಂಡ ಸೂಪರ್​-8ಗೆ ಪ್ರವೇಶ ಪಡೆಯುವಂತಾಯಿತು. ಸ್ಕಾಟ್ಲೆಂಡ್​ ಮತ್ತು ಇಂಗ್ಲೆಂಡ್​ ‘ಬಿ’ ಗುಂಪಿನಲ್ಲಿ ತಲಾ 5 ಅಂಕ ಪಡೆದಿದ್ದರೂ ಕೂಡ ರನ್​ ರೇಟ್​ ಆಧಾರದಲ್ಲಿ ಇಂಗ್ಲೆಂಡ್​ ಮುಂದಿದ್ದ ಕಾರಣ ಈ ಲಾಭ ಜಾಸ್​ ಬಟ್ಲರ್​ ಪಡೆಗೆ ಲಭಿಸಿತು.

ಇಲ್ಲಿನ ಸೇಂಟ್‌ ಲೂಸಿಯಾದ ಡ್ಯಾರೆನ್​ ಶಮಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಸ್ಕಾಟ್ಲೆಂಡ್​ ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್​ಗೆ 180 ರನ್​ಗಳ ಬೃಹತ್​ ಮೊತ್ತ ಪೇರಿಸಿತು. ಈ ದೊಡ್ಡ ಮೊತ್ತವನ್ನು ಬೆನ್ನಟ್ಟಿದ ಆಸ್ಟ್ರೇಲಿಯಾ 19.4 ಓವರ್​ಗಳಲ್ಲಿ 5 ವಿಕೆಟ್​ಗೆ 186 ರನ್​ ಬಾರಿಸಿ ಗೆಲುವು ದಾಖಲಿಸಿತು. ಆಸೀಸ್​ ಬ್ಯಾಟಿಂಗ್​ ಸರದಿಯಲ್ಲಿ ಆರಂಭಿಕ ಆಟಗಾರ ಟ್ರಾವಿಸ್​ ಹೆಡ್​(68) ಮತ್ತು ಮಧ್ಯಮ ಕ್ರಮಾಂಕದ ಬ್ಯಾಟರ್​ ಮಾರ್ಕಸ್​ ಸ್ಟೋಯಿನಿಸ್​(59) ಅರ್ಧಶತಕ ಬಾರಿಸಿ ಮಿಂಚಿದರು. ಉಳಿದಂತೆ ಟಿಮ್​ ಡೇವಿಡ್​ ಅಜೇಯ 24 ರನ್​ ಬಾರಿಸಿದರು. ಡೇವಿಡ್​ ವಾರ್ನರ್​(1) ಮತ್ತು ನಾಯಕ ಮಿಚೆಲ್​ ಮಾರ್ಷ್(8) ಮತ್ತೆ ವಿಫಲರಾದರು.​

ಪಂದ್ಯದ ತಿರುವು


17 ಓವರ್​ ತನಕ ಪಂದ್ಯ ಸ್ಕಾಟ್ಲೆಂಡ್ ತಂಡದ ಪರ ಇತ್ತು. ಆದರೆ 18ನೇ ಓವರ್​ನಲ್ಲಿ ಪಂದ್ಯದ ಚಿತ್ರಣವೇ ಬದಲಾಯಿತು. ಬ್ರಾಡ್ ವೀಲ್ ಓವರ್​ನಲ್ಲಿ ಕ್ಯಾಮರೂನ್​ ಗ್ರೀನ್​ ಹ್ಯಾಟ್ರಿಕ್​ ಬೌಂಡರಿ ಬಾರಿಸಿ ಒಟ್ಟು 13 ರನ್​ ಕಸಿದರು. ಇದಕ್ಕೂ ಮುನ್ನ 2 ಓವರ್​ ನಡೆಸಿ ಒಂದು ಮೇಡನ್​ ಸಹಿತ ವಿಕೆಟ್ ಕಿತ್ತಿದ್ದ ಬ್ರಾಡ್ ವೀಲ್ ಈ ಓವರ್​ನಲ್ಲಿ ದುಬಾರಿಯಾದರು. ಇದು ಸ್ಕಾಟ್ಲೆಂಡ್​ ತಂಡದ ಸೋಲಿಗೆ ಪ್ರಮುಖ ಕಾರಣವಾಯಿತು. ಒಂದೊಮ್ಮೆ ಈ ಓವರ್​ ಕಂಟ್ರೋಲ್​ ಆಗುತ್ತಿದ್ದರೆ ಸ್ಕಾಟ್ಲೆಂಡ್​ಗೆ ಗೆಲುವಿನ ಅವಕಾಶ ಇರುತ್ತಿತ್ತು.

ಇದನ್ನೂ ಓದಿ T20 World Cup 2024 Super 8: ಸೂಪರ್​-8 ಪಂದ್ಯಗಳ ವೇಳಾಪಟ್ಟಿ ಪ್ರಕಟ; ಭಾರತಕ್ಕೆ ಆಫ್ಘಾನ್​ ಮೊದಲ ಎದುರಾಳಿ

ಮೊದಲು ಬ್ಯಾಟಿಂಗ್​ ನಡೆಸಿದ ಸ್ಕಾಟ್ಲೆಂಡ್​ ಬಿರುಸಿನ ಆಟಕ್ಕೆ ಒತ್ತು ನೀಡಿ ದೊಡ್ಡ ಮೊತ್ತವನ್ನು ಕಲೆಹಾಕಿತು. ಆರಂಭಿಕ ಆಟಗಾರ ಜಾರ್ಜ್ ಮುನ್ಸಿ ಆರಂಭದಿಂದಲೇ ಆಸೀಸ್​ ಬೌಲರ್​ಗಳ ಮೇಲೆರಗಿ ಮೂರು ಸಿಕ್ಸರ್ ಮತ್ತು 2 ಸಿಕ್ಸರ್​ ನೆರವಿನಿಂದ 35 ರನ್​ ಬಾರಿಸಿ ತಂಡಕ್ಕೆ ಉತ್ತಮ ಆರಂಭ ಒದಗಿಸಿದರು. ಈ ವಿಕೆಟ್​ ಪತನದ ಬಳಿಕ ಬಂದ ಬ್ರಾಂಡನ್ ಮೆಕ್‌ಮುಲ್ಲೆನ್ ಕೂಡ ಆಕ್ರಮಣಕಾರಿ ಬ್ಯಾಟಿಂಗ್​ ನಡೆಸಿ ಗಮನಸೆಳೆದರು. ಕೇವಲ 34 ಎಸೆತಗಳಿಂದ 60 ರನ್​ ಬಾರಿಸಿ ಅರ್ಧಶತಕ ಪೂರ್ತಿಗೊಳಿಸಿದರು. ಇವರ ಈ ಸೊಗಸಾದ ಬ್ಯಾಟಿಂಗ್​ ವೇಳೆ ಬರೋಬ್ಬರಿ 6 ಸಿಕ್ಸರ್​ ಮತ್ತು 2 ಬೌಂಡರಿ ಸಿಡಿಯಿತು. ಇವರಿಗೆ ಮತ್ತೊಂದು ತುದಿಯಲ್ಲಿ ನಾಯಕ ರಿಚಿ ಬೆರಿಂಗ್ಟನ್ ಕೂಡ ಉತ್ತಮ ಸಾಥ್​ ನೀಡಿದರು. ಬೆರಿಂಗ್ಟನ್ 31 ಎಸೆತಗಳಿಂದ 42 ರನ್​ ಬಾರಿಸಿ ಅಜೇಯರಾಗಿ ಉಳಿದರು. ಆದರೆ ಪಂದ್ಯ ಸೋತ ಕಾರಣ ಇವರ ಬ್ಯಾಟಿಂಗ್​ ಸಾಹಸ ವ್ಯರ್ಥಗೊಂಡಿತು. ಆಸೀಸ್​ ಪರ ಗ್ಲೆನ್​ ಮ್ಯಾಕ್ಸ್​ವೆಲ್​ 44 ರನ್​ ವೆಚ್ಚದಲ್ಲಿ 2 ವಿಕೆಟ್​ ಕಿತ್ತರು.

Continue Reading

ಕರ್ನಾಟಕ

Darshan Arrested: ಕೊಲೆ ಬಳಿಕ ಮೈಸೂರಲ್ಲಿ ಕೂತು ಕೇಸ್‌ ಮುಚ್ಚಿಹಾಕಲು ದರ್ಶನ್‌ ಯತ್ನ; ಇಂದು ಸ್ಥಳ ಮಹಜರು!

Darshan Arrested: ಡೆವಿಲ್‌ ಸಿನಿಮಾದ ಚಿತ್ರೀಕರಣದ ಹಿನ್ನೆಲೆಯಲ್ಲಿ ದರ್ಶನ್‌ ಮೈಸೂರಿನಲ್ಲಿಯೇ ಬೀಡುಬಿಟ್ಟಿದ್ದರು. ರೇಣುಕಾಸ್ವಾಮಿ ಕೊಲೆಯ ಬಳಿಕವೂ ಮೈಸೂರಿಗೆ ತೆರಳಿದ ದರ್ಶನ್‌, ಅಲ್ಲಿಂದಲೇ ಗಣ್ಯರು ಹಾಗೂ ಆಪ್ತರಿಗೆ ಕರೆ ಮಾಡಿ ಪ್ರಕರಣವನ್ನು ಮುಚ್ಚಿಹಾಕುವ ಸಾಧ್ಯತೆ ಇದೆ ಎನ್ನಲಾಗಿದೆ. ಹಾಗಾಗಿ, ಪೊಲೀಸರು ದರ್ಶನ್‌ ಸೇರಿ ಹಲವು ಆರೋಪಿಗಳನ್ನು ಮೈಸೂರಿಗೆ ಕರೆದುಕೊಂಡು ಹೋಗಿ ಸ್ಥಳ ಮಹಜರು ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

VISTARANEWS.COM


on

Darshan Arrested
Koo

ಮೈಸೂರು: ಚಿತ್ರದುರ್ಗ ನಿವಾಸಿ ರೇಣುಕಾಸ್ವಾಮಿ ಕೊಲೆ (Renukaswamy Murder Case) ಪ್ರಕರಣಕ್ಕೆ ಸಂಬಂಧಿಸಿಂದತೆ ಬಗೆದಷ್ಟೂ ಮಾಹಿತಿ ಬಹಿರಂಗವಾಗುತ್ತಿದೆ. ದರ್ಶನ್‌ ಹಾಗೂ ಗ್ಯಾಂಗ್‌ನನ್ನು ಮತ್ತೆ 5 ದಿನ ಕಸ್ಟಡಿಗೆ ಪಡೆದಿರುವ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಭಾನುವಾರ ಮೈಸೂರಿನಲ್ಲಿ (Mysore) ಸ್ಥಳ ಮಹಜರು ನಡೆಸಲಿದ್ದಾರೆ. ರೇಣುಕಾಸ್ವಾಮಿ ಹತ್ಯೆಯ ಬಳಿಕ ಮೈಸೂರಿಗೆ ತೆರಳಿದ ನಟ ದರ್ಶನ್‌ (Actor Darshan) ಅಲ್ಲಿಂದಲೇ ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ. ಇದರ ಕುರಿತು ಕೂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಡೆವಿಲ್‌ ಸಿನಿಮಾದ ಚಿತ್ರೀಕರಣದ ಹಿನ್ನೆಲೆಯಲ್ಲಿ ದರ್ಶನ್‌ ಮೈಸೂರಿನಲ್ಲಿಯೇ ಬೀಡುಬಿಟ್ಟಿದ್ದರು. ರೇಣುಕಾಸ್ವಾಮಿ ಕೊಲೆಯ ಬಳಿಕವೂ ಮೈಸೂರಿಗೆ ತೆರಳಿದ ದರ್ಶನ್‌, ಅಲ್ಲಿಂದಲೇ ಗಣ್ಯರು ಹಾಗೂ ಆಪ್ತರಿಗೆ ಕರೆ ಮಾಡಿ ಪ್ರಕರಣವನ್ನು ಮುಚ್ಚಿಹಾಕುವ ಸಾಧ್ಯತೆ ಇದೆ ಎನ್ನಲಾಗಿದೆ. ಪ್ರಕರಣ ಮುಚ್ಚಿಹಾಕಲು ಯತ್ನಿಸಿದ ನಟ, ಜಿಮ್‌ನಲ್ಲಿ ವರ್ಕೌಟ್‌ ಮಾಡುವ ಮೂಲಕ ಏನೂ ನಡೆದೇ ಇಲ್ಲ ಎಂಬಂತೆ ತೋರಿಸಿಕೊಳ್ಳಲು ಪ್ರಯತ್ನ ಮಾಡಿದ್ದಾರೆ. ಇದೆಲ್ಲದರ ಕುರಿತು ಪೊಲೀಸರು ತನಿಖೆ ನಡೆಸಲಿದ್ದಾರೆ.

Actor Darshan ACP Chandan Kumar work salute by people

ಮೈಸೂರಿನ ಇಟ್ಟಿಗೆಗೂಡಿನಲ್ಲಿರುವ ರ‍್ಯಾಡಿಷನ್‌ ಹೋಟೆಲ್‌, ಕುವೆಂಪು ನಗರದ ಗೋಲ್ಡ್‌ ಜಿಮ್‌ ಸೇರಿದಂತೆ ಪೊಲೀಸರು ಹಲವು ಸ್ಥಳಗಳನ್ನು ಮಹಜರು ಮಾಡಲಿದ್ದಾರೆ. ನಟ ದರ್ಶನ್‌ ಸೇರಿ ಹಲವು ಆರೋಪಿಗಳನ್ನು ಕರೆದುಕೊಂಡು ಹೋಗಿ ಮಹಜರು ಮಾಡಲಿದ್ದಾರೆ. ಮೈಸೂರಿನಲ್ಲಿ ದರ್ಶನ್‌ ಯಾರಿಗೆ ಕರೆ ಮಾಡಿದ್ದರು? ಯಾರ ಮೂಲಕ ಪ್ರಭಾವ ಬೀರಲು ಪ್ರಯತ್ನಿಸಿದರು ಎಂಬುದು ಸೇರಿ ಹಲವು ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

ತನಿಖೆಯ ಟೀಮ್‌ಗೆ ಇನ್ಸ್‌ಪೆಕ್ಟರ್‌ ಗಿರೀಶ್‌ ನಾಯ್ಕ್‌ ಸೇರ್ಪಡೆ

ಆರೋಪಿ ದರ್ಶನ್‌ನನ್ನು ಮೈಸೂರಿನಲ್ಲಿ ವಶಕ್ಕೆ ಪಡೆದುಕೊಂಡು, ಬೆಂಗಳೂರಿಗೆ ಕರೆತಂದಿದ್ದ ಇನ್ಸ್‌ಪೆಕ್ಟರ್‌ ಗಿರೀಶ್‌ ನಾಯ್ಕ್‌ ಅವರು ಮತ್ತೆ ತನಿಖಾ ತಂಡವನ್ನು ಸೇರಿಕೊಂಡಿದ್ದು, ತನಿಖೆಗೆ ಬಲ ಬಂದಂತಾಗಿದೆ. ಎಸಿಪಿ ಚಂದನ್‌ ಹಾಗೂ ಗಿರೀಶ್‌ ನಾಯ್ಕ್‌ ಅವರು ದರ್ಶನ್‌ನನ್ನು ಮೈಸೂರಿನಿಂದ ಕರೆತಂದಿದ್ದರು. ಆರಂಭದಲ್ಲಿ ಗಿರೀಶ್‌ ನಾಯ್ಕ್‌ ಅವರೇ ಕೊಲೆ ಪ್ರಕರಣದ ತನಿಖಾಧಿಕಾರಿಯಾಗಿದ್ದರು. ಚುನಾವಣೆ ನಿಮಿತ್ತ ಕಾಮಾಕ್ಷಿಪಾಳ್ಯ ಪೊಲೀಸ್‌ ಠಾಣೆಗೆ ವರ್ಗಾವಣೆಯಾಗಿದ್ದರು. ಬಳಿಕ ಮತ್ತೆ ಸಿ.ಕೆ.ಅಚ್ಚುಕಟ್ಟು ಪೊಲೀಸ್‌ ಠಾಣೆಗೆ ವರ್ಗಾವಣೆಯಾಗಿದ್ದರು.

ಇದನ್ನೂ ಓದಿ: Actor Darshan: ದರ್ಶನ್‌ ಬಂಧಿಸಿದ ಎಸಿಪಿ ಚಂದನ್ ಕುಮಾರ್‌ ಕೆಲಸಕ್ಕೆ ಸೆಲ್ಯೂಟ್‌ ಎಂದ ಗ್ರಾಮಸ್ಥರು!

Continue Reading
Advertisement
Tata Motors SUV Tata Nexon 7th Anniversary Benefit up to Rs 1 lakh for customers
ವಾಣಿಜ್ಯ6 mins ago

Tata Motors: ಎಸ್‌ಯುವಿ ಟಾಟಾ ನೆಕ್ಸಾನ್‌ನ 7ನೇ ವಾರ್ಷಿಕೋತ್ಸವ; ಗ್ರಾಹಕರಿಗೆ 1 ಲಕ್ಷ ರೂ.ವರೆಗೆ ಉಳಿತಾಯ!

murder case
ಚಿಕ್ಕಬಳ್ಳಾಪುರ8 mins ago

Murder Case : ಚಿಕ್ಕಬಳ್ಳಾಪುರದಲ್ಲಿ ತಲೆ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯ ಬರ್ಬರ ಹತ್ಯೆ

David Wiese Retirement
ಕ್ರೀಡೆ28 mins ago

David Wiese Retirement: ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ ಡೇವಿಡ್ ವೈಸ್

Money Guide
ಮನಿ-ಗೈಡ್35 mins ago

Money Guide: ಹಿರಿಯ ನಾಗರಿಕರಿಗಾಗಿ ಅತ್ಯಾಕರ್ಷಕ ಉಳಿತಾಯ ಯೋಜನೆ

PMAY
ವಾಣಿಜ್ಯ36 mins ago

PMAY: ಸ್ವಂತ ಮನೆ ಹೊಂದುವ ನಿಮ್ಮ ಕನಸು ಪ್ರಧಾನ್ ಮಂತ್ರಿ ಆವಾಸ್ ಯೋಜನೆ ಮೂಲಕ ನನಸು; ಹೀಗೆ ಅಪ್ಲೈ ಮಾಡಿ

Bahaddur movie is re released on June 21
ಕರ್ನಾಟಕ37 mins ago

Bahaddur Movie: ಹತ್ತು ವರ್ಷಗಳ ನಂತರ ಬೆಳ್ಳಿತೆರೆಯ ಮೇಲೆ ಮತ್ತೆ “ಬಹದ್ದೂರ್”!

Darshan Arrested renuka shed like hell more murders here
ಸ್ಯಾಂಡಲ್ ವುಡ್40 mins ago

Darshan Arrested: ಬಡ್ಡಿ ಕಟ್ಟದವರಿಗೆ ‘ನರಕ’ ಆಗಿತ್ತೇ ಈ ಶೆಡ್? ಇಲ್ಲಿ ನಡೆದಿವೆಯೇ ಇನ್ನಷ್ಟು ಕೊಲೆಗಳು?

Foeticide
ಕರ್ನಾಟಕ47 mins ago

Foeticide: ಬೆಳಗಾವಿಯಲ್ಲಿ ನಕಲಿ ವೈದ್ಯನಿಂದ ಭ್ರೂಣಗಳ ಹತ್ಯೆ; ಜಮೀನಲ್ಲಿ ಸಿಕ್ಕಿತು ಶಿಶುವಿನ ಶವ

SCO vs AUS
ಕ್ರೀಡೆ1 hour ago

SCO vs AUS: ಆಸೀಸ್​ಗೆ 5 ವಿಕೆಟ್​ ಗೆಲುವು; ಸೂಪರ್​-8ಗೆ ಲಗ್ಗೆಯಿಟ್ಟ ಇಂಗ್ಲೆಂಡ್​

Darshan Arrested vinish write special message for darshan fathers day
ಸ್ಯಾಂಡಲ್ ವುಡ್1 hour ago

Darshan Arrested: `ಅಪ್ಪ, ನೀವೇ ನನ್ನ ಹೀರೊʼಎಂದ ದರ್ಶನ್‌ ಪುತ್ರ; ಫಾದರ್ಸ್‌ ಡೇಗೆ ಭಾವುಕ ಪೋಸ್ಟ್‌!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಯಾದಗಿರಿ21 hours ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ2 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ2 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ5 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ5 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ5 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ5 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

ಟ್ರೆಂಡಿಂಗ್‌