Dharwad News: ರಥೋತ್ಸವ ವೇಳೆ ದುರಂತ; ರಥದ ಚಕ್ರಕ್ಕೆ ಸಿಲುಕಿ ಭಕ್ತ ಸಾವು - Vistara News

ಕ್ರೈಂ

Dharwad News: ರಥೋತ್ಸವ ವೇಳೆ ದುರಂತ; ರಥದ ಚಕ್ರಕ್ಕೆ ಸಿಲುಕಿ ಭಕ್ತ ಸಾವು

Dharwad News: ಬಸವ ಜಯಂತಿ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ಮಜ್ಜಿಗುಡ್ಡ ಗ್ರಾಮದಲ್ಲಿ ನಡೆದ ರಥೋತ್ಸವ ವೇಳೆ ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಬಾಬುಸಾಬ ಮಕಾಸಿ ಎಂದು ಗುರುತಿಸಲಾಗಿದೆ. ರಥಕ್ಕೆ ಎಸೆಯುವ ಉತ್ತುತ್ತಿ ಅರಸಿಕೊಳ್ಳುವ ವೇಳೆ ಬಾಬುಸಾಬ ಅವರು ಆಯತಪ್ಪಿ ಕೆಳಗೆ ಬಿದ್ದಿದ್ದಾರೆ ಎನ್ನಲಾಗಿದೆ. ಈ ವೇಳೆ ರಥದ ಚಕ್ರ ಅವರ ಮೇಲೆ ಹರಿದು ಗಂಭೀರ ಗಾಯಗೊಂಡಿದ್ದರು. ತಕ್ಷಣ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

VISTARANEWS.COM


on

Dharwad News
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಧಾರವಾಡ: ಬಸವ ಜಯಂತಿ (Basava Jayanti) ಹಿನ್ನೆಲೆಯಲ್ಲಿ ಶುಕ್ರವಾರ ನಡೆದ ಬಸವೇಶ್ವರ ಜಾತ್ರೆಯಲ್ಲಿ ದುರಂತವೊಂದು ಸಂಭವಿಸಿದ್ದು, ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ (Dharwad News). ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ಮಜ್ಜಿಗುಡ್ಡ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೃತರನ್ನು ಬಾಬುಸಾಬ ಮಕಾಸಿ ಎಂದು ಗುರುತಿಸಲಾಗಿದೆ.

ಮಜ್ಜಿಗುಡ್ಡ ಗ್ರಾಮದಲ್ಲಿ ಬಸವೇಶ್ವರ ಜಾತ್ರೆ ಆಯೋಜಿಸಲಾಗಿತ್ತು. ಸಂಜೆ ನಡೆದ ರಥೋತ್ಸವ ವೇಳೆ ರಥಕ್ಕೆ ಎಸೆಯುವ ಉತ್ತುತ್ತಿ ಅರಸಿಕೊಳ್ಳುವ ವೇಳೆ ಬಾಬುಸಾಬ ಅವರು ಆಯತಪ್ಪಿ ಕೆಳಗೆ ಬಿದ್ದಿದ್ದಾರೆ ಎನ್ನಲಾಗಿದೆ. ಈ ವೇಳೆ ರಥದ ಚಕ್ರ ಅವರ ಮೇಲೆ ಹರಿದು ಗಂಭೀರ ಗಾಯಗೊಂಡಿದ್ದರು. ತಕ್ಷಣ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಅಣ್ಣಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತೇರಿನ ಚಕ್ರಕ್ಕೆ ಸಿಲುಕಿ ಹೋಂಗಾರ್ಡ್ ದುರ್ಮರಣ

ಕೆಲವು ದಿನಗಳ ಹಿಂದೆ ಕಲಬುರಗಿಯಲ್ಲಿಯೂ ಇಂತಹದ್ದೇ ಘಟನೆ ನಡೆದಿತ್ತು. ರಥದ ಚಕ್ರಕ್ಕೆ ಸಿಲುಕಿ ಹೋಂಗಾರ್ಡ್ ಸಿಬ್ಬಂದಿ ಮೃತಪಟ್ಟಿದ್ದರು. ಕಲಬುರಗಿ ನಗರದಲ್ಲಿ ನಡೆದ ಶ್ರೀ ಶರಣ ಬಸವೇಶ್ವರ ಜಾತ್ರಾ ಮಹೋತ್ಸವದ ಭಾಗವಾಗಿ ಆಯೋಜಿಸಿದ್ದ ಉಚ್ಚಾಯಿ ರಥೋತ್ಸವದಲ್ಲಿ ತೇರಿನ ಚಕ್ರಕ್ಕೆ ಸಿಲುಕಿ ಹೋಂಗಾರ್ಡ್ ಸಿಬ್ಬಂದಿ, ಬೀದರ್ ಜಿಲ್ಲೆ ಇಟಗಾ ಗ್ರಾಮದ ರಾಮು ಸಿದ್ದಪ್ಪ (28) ದುರ್ಮರಣ ಹೊಂದಿದ್ದರು. ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಉಂಟಾದ ಗದ್ದಲದ ವೇಳೆ ದುರಂತ ಸಂಭವಿಸಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ಬೆಂಗಳೂರಿನಲ್ಲಿ ಒಂಟಿ ಮಹಿಳೆಯ ಕತ್ತು ಹಿಸುಕಿ ಕೊಲೆ

ಬೆಂಗಳೂರು: ಒಂಟಿ ಮಹಿಳೆಯ ಕತ್ತು ಹಿಸುಕು ಕೊಲೆ‌ ಮಾಡಿರುವ ಘಟನೆ ನಗರದ ಹೊರವಲಯದ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಕೋನಸಂದ್ರದಲ್ಲಿ ನಡೆದಿದೆ. ಮನೆ ಬಾಡಿಗೆ ಕೇಳುವ ನೆಪದಲ್ಲಿ ದುಷ್ಕರ್ಮಿಯೊಬ್ಬ ಕೃತ್ಯ ಎಸಗಿದ್ದಾರೆ. ಸ್ಥಳಕ್ಕೆ ಕೆಂಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದಿವ್ಯಾ (32) ಕೊಲೆಯಾದ ಮಹಿಳೆ. ಮಹಿಳೆಯ ಗಂಡ ಗುರುಮೂರ್ತಿ ಕೆಲಸಕ್ಕೆಂದು ಸಲೂನ್‌ ಹೋಗಿದ್ದರು. ಈ ವೇಳೆ ಆರೋಪಿ, ಮಹಿಳೆಯ ಕತ್ತು ಹಿಸುಕಿ ಕೊಲೆಗೈದು ಕುತ್ತಿಯಲ್ಲಿದ್ದ ಚೈನ್ ಕದ್ದು ಪರಾರಿಯಾಗಿದ್ದಾನೆ. ಮಹಿಳೆಯ ಮೃತದೇಹವನ್ನು ಆರ್.ಆರ್. ಆಸ್ಪತ್ರೆಗೆ ರವಾನಿಸಲಾಗಿದೆ.

ಇದನ್ನೂ ಓದಿ: Road Accident : ಪ್ರತ್ಯೇಕ ಅಪಘಾತದಲ್ಲಿ ಇಬ್ಬರು ಸಾವು; ಕರೆಂಟ್‌ ವೈರ್‌ ತಾಗಿ ವ್ಯಕ್ತಿ ಮೃತ್ಯು

ಮದುವೆಗೆ ನೋ ಎಂದ ಪ್ರಿಯಕರ; ಮನನೊಂದು ಯುವತಿ ಆತ್ಮಹತ್ಯೆ‌

ಕಲಬುರಗಿ: ಪ್ರಿಯಕರ ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿ ಮನನೊಂದು ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕೋಟನೂರು (ಡಿ) ಬಳಿ ಶುಕ್ರವಾರ ನಡೆದಿದೆ. ಪುಷ್ಪಾ (26) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವತಿ. ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಕೌಲಗಾ ಗ್ರಾಮದ ಪುಷ್ಪಾ ಪದವಿ ವ್ಯಾಸಂಗ ಮುಗಿಸಿದ್ದು, ಆಳಂದ ತಾಲೂಕಿನ ಕೌಲಗಾ ಗ್ರಾಮದಿಂದ ಕಲಬುರಗಿ ನಗರಕ್ಕೆ ಬಂದು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಳು. ಹೀಗಾಗಿ ಕೋಟನೂರು ಬಳಿ ಬಾಡಿಗೆ ರೂಮ್‌ ಪಡೆದು ವಾಸವಾಗಿದ್ದಳು. ಈಕೆಯು ಕಳೆದ ನಾಲ್ಕು‌ ವರ್ಷದಿಂದ ಕಲಬುರಗಿಯ ಗಾಂಧಿನಗರದ ನಿವಾಸಿ ಕಿರಣ್ ಎಂಬುವರೊಂದಿಗೆ ಪರಸ್ಪರ ಪ್ರೀತಿಸುತ್ತಿದ್ದರು ಎಂದು ತಿಳಿದುಬಂದಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Physical Abuse : 16 ವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿದ 69 ವರ್ಷದ ಮುದುಕ

Physical Abuse :

VISTARANEWS.COM


on

Physical Abuse
Koo

ಇಂದೋರ್​: ಮಧ್ಯಪ್ರದೇಶದ ಶಹದೋಲ್ ಜಿಲ್ಲೆಯಲ್ಲಿ 69 ವರ್ಷದ ಮುದುಕನೊಬ್ಬ 16 ವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿದ ಘಟನೆ ನಡೆದಿದೆ. ಬಾಲಕಿಯ ಪೋಷಕರು ನೀಡಿದ ದೂರಿನ ಪ್ರಕಾರ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಆಗಸ್ಟ್ 14 ರಂದು ಬಿಯೋಹರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಮರುದಿನ ಪೊಲೀಸರಿಗೆ ದೂರು ನೀಡಲಾಗಿದೆ.

16 ವರ್ಷದ ಬಾಲಕಿ ಮನೆಯಲ್ಲಿ ಒಬ್ಬಳೇ ಇರುವುದನ್ನು ಕಂಡು ಆರೋಪಿ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಬಿಯೋಹರಿ ಪೊಲೀಸ್ ಠಾಣೆಯ ಉಸ್ತುವಾರಿ ಅರುಣ್ ಪಾಂಡೆ ತಿಳಿಸಿದ್ದಾರೆ. ಬಾಲಕಿ ಮತ್ತು ಆಕೆಯ ಕುಟುಂಬ ಸದಸ್ಯರು ಆಗಸ್ಟ್ 15 ರಂದು ಸ್ಥಳೀಯ ಪೊಲೀಸರನ್ನು ಸಂಪರ್ಕಿಸಿ ಈ ಬಗ್ಗೆ ದೂರು ದಾಖಲಿಸಿದ್ದಾರೆ.

ಆರೋಪಿಯನ್ನು ಆಗಸ್ಟ್ 16 ರಂದು ಬಂಧಿಸಲಾಗಿದೆ. ಭಾರತೀಯ ನ್ಯಾಯ ಸಂಹಿತಾ (ಬಿಎನ್ಎಸ್) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಕೋಲ್ಕತಾ ಆಸ್ಪತ್ರೆಯಲ್ಲಿ ತರಬೇತಿ ವೈದ್ಯೆಯ ಭೀಕರ ಅತ್ಯಾಚಾರ-ಕೊಲೆಯ ಬಗ್ಗೆ ಹೆಚ್ಚುತ್ತಿರುವ ಆಕ್ರೋಶದ ಮಧ್ಯೆ ಈ ಬೆಳವಣಿಗೆ ನಡೆದಿದೆ.

Physical Abuse: ಮತ್ತೊಂದು ಪೈಶಾಚಿಕ ಕೃತ್ಯ; ಬಸ್‌ನಲ್ಲಿ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ

ಡೆಹ್ರಾಡೂನ್‌: ದೇಶದಲ್ಲಿ ಮಹಿಳೆಯರ ಸುರಕ್ಷತೆ ಬಗ್ಗೆ ಆತಂಕ ಎದುರಾಗಿದ್ದು, ಕೋಲ್ಕತ್ತಾದಲ್ಲಿ ಟ್ರೈನಿ ವೈದ್ಯೆಯ ಮೇಲಿನ ಅತ್ಯಾಚಾರ, ಕೊಲೆ ಪ್ರಕರಣದ ಬೆನ್ನಿಗೆ ಉತ್ತರಾಖಂಡದಲ್ಲಿ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಪ್ರಕರಣ ಬೆಳಕಿಗೆ ಬಂದಿದೆ (Physical Abuse). ಉತ್ತರ ಪ್ರದೇಶದ ಮೊರಾದಾಬಾದ್​ನಿಂದ ಡೆಹ್ರಾಡೂನ್​ಗೆ ಬಸ್‌ನಲ್ಲಿ ಹೊರಟಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಐವರು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಈ ಘಟನೆ ಆಗಸ್ಟ್ 13ರಂದು ನಡೆದಿದೆ ಎನ್ನಲಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ಬಾಲಕಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಪಂಜಾಬ್‌ ಮೂಲದ ಬಾಲಕಿ ಡೆಹ್ರಾಡೂನ್‌ಗೆ ತೆರಳಲು ಆಗಸ್ಟ್‌ 12ರಂದು ಉತ್ತರಾಖಂಡದ ಅಂತಾರಾಜ್ಯ ಸರ್ಕಾರಿ ಬಸ್‌ ಏರಿದ್ದಳು. ಆಗಸ್ಟ್‌ 13ರ ಮುಂಜಾನೆ ನಿಲ್ಲಿಸಿದ್ದ ಬಸ್‌ನಲ್ಲಿ ಯಾರೂ ಇಲ್ಲದ ವೇಳೆ ಐವರು ಬಾಲಕಿ ಮೇಲೆ ಎರಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ವೈದ್ಯಕೀಯ ವರದಿ ಇನ್ನಷ್ಟೇ ಕೈ ಸೇರಬೇಕಿದೆ.

ಅಧಿಕಾರಿಗಳು ಹೇಳಿದ್ದೇನು?

ಮಕ್ಕಳ ಕಲ್ಯಾಣ ಸಮಿತಿ (Child Welfare Committee-CWC)ಯ ಅಧಿಕಾರಿಗಳು ಘಟನೆ ಬಗ್ಗೆ ಮಾಹಿತಿ ನೀಡಿ, ಆಗಸ್ಟ್‌ 13ರ ಮುಂಜಾನೆ ಸುಮಾರು 2-2.30ರ ವೇಳೆಗೆ ಬಾಲಕಿ ಪತ್ತೆಯಾಗಿದ್ದಳು. ಈ ವೇಳೆ ಅವಳ ಮಾನಸಿಕವಾಗಿ ಬಹಳ ಕುಗ್ಗಿ ಹೋಗಿದ್ದಳು. ಆಕೆಯ ದೇಹದಲ್ಲಿ ಹೊರ ಭಾಗದಲ್ಲಿ ಯಾವುದೇ ಗಾಯ ಕಂಡು ಬಂದಿರಲಿಲ್ಲ. ಬಳಿಕ ಆಕೆಯನ್ನು ಮಕ್ಕಳ ಕಲ್ಯಾಣ ಕೇಂದ್ರಕ್ಕೆ ಕರೆದುಕೊಂಡು ಬಂದು ಆಸ್ಪತ್ರೆಗೆ ದಾಖಲಿಸಲಾಯಿತುʼʼ ಎಂದು ತಿಳಿಸಿದ್ದಾರೆ.

ಬಸ್‌ನ ಚಾಲಕ, ನಿರ್ವಾಹಕ ಸೇರಿ ಇದುವರೆಗೆ 6 ಮಂದಿಯನ್ನು ವಶಕ್ಕೆ ಪಡೆಯಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ. ಮೂಲಗಳ ಪ್ರಕಾರ ಪಂಜಾಬ್‌ನ ಈ ಬಾಲಕಿ ಅನಾಥೆಯಾಗಿದ್ದು, ತನ್ನ ಸಹೋದರಿ ಮತ್ತು ಭಾವನೊಂದಿಗೆ ವಾಸವಾಗಿದ್ದಳು. ಆಗಸ್ಟ್‌ 11ರಂದು ಅಕ್ಕ-ಭಾವ ಸೇರಿ ಆಕೆಯನ್ನು ಮನೆಯಿಂದ ಹೊರ ಹಾಕಿದ್ದರು. ಇದರಿಂದ ದಿಕ್ಕೇ ತೋಚದಂತಾದ ಆಕೆ ದಿಲ್ಲಿಗೆ ಬಂದು ಅಲ್ಲಿಂದ ಉತ್ತರಪ್ರದೇಶದ ಮೊರಾದಾಬಾದ್‌ಗೆ ಆಗಮಿಸಿದ್ದಳು. ಬಳಿಕ ಅಲ್ಲಿಂದ ಡೆಹ್ರಾಡೂನ್‌ ತಲುಪಿದ್ದಳು.

ಇದನ್ನೂ ಓದಿ: Heart Attack : ಬೈಕ್‌ನಲ್ಲಿ ತೆರಳುತ್ತಿದ್ದಾಗಲೇ ಬಡಿತ ನಿಲ್ಲಿಸಿದ ಹೃದಯ; ಯೋಧನ ಸಾವಿನ ಕೊನೆ ಕ್ಷಣ ಸೆರೆ

ಘಟನೆ ವಿವರ

ದಿಲ್ಲಿಯಿಂದ ಉತ್ತರ ಪ್ರದೇಶದ ಸಾರಿಗೆ ಬಸ್‌ ಮೂಲಕ ಮೊರಾದಾಬಾದ್‌ಗೆ ತಲುಪಿದ ಬಾಲಕಿ ಅಲ್ಲಿಂದ ಆಗಸ್ಟ್‌ 12ರಂದು ಅಂತಾರಾಜ್ಯ ಬಸ್‌ ಹತ್ತಿ ಡೆಹ್ರಾಡೂನ್‌ ತಲುಪಿದ್ದಳು. ಬಸ್‌ನಿಂದ ಎಲ್ಲರೂ ಇಳಿದು ಹೋದ ಬಳಿಕ ಆಕೆಯೊಬ್ಬಳೇ ಉಳಿದಿಕೊಂಡಿದ್ದಳು. ಆಕೆ ಒಬ್ಬಳೇ ಇರುವುದನ್ನು ಗಮನಿಸಿದ ಐವರು ಆಗಸ್ಟ್‌ 13ರಂದು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಬಸ್‌ನಿಂದ ಹೊರಗೆ ಎಸೆದು ಪರಾರಿಯಾಗಿದ್ದರು ಎಂದು ವರದಿಯೊಂದು ತಿಳಿಸಿದೆ. ಸದ್ಯ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ದುಷ್ಕರ್ಮಿಗಳ ಪತ್ತೆಗೆ ಸಿಸಿಟಿವಿ ಕ್ಯಾಮೆರಾ ಪರಿಶೀಲಿಸುತ್ತಿದ್ದಾರೆ.

Continue Reading

ಬೆಳಗಾವಿ

Heart Attack : ಬೈಕ್‌ನಲ್ಲಿ ತೆರಳುತ್ತಿದ್ದಾಗಲೇ ಬಡಿತ ನಿಲ್ಲಿಸಿದ ಹೃದಯ; ಯೋಧನ ಸಾವಿನ ಕೊನೆ ಕ್ಷಣ ಸೆರೆ

ಯೋಧರೊಬ್ಬರಿಗೆ ಅವರ ಹೃದಯವೇ (Heart Attack) ಯಮಪಾಶವಾಗಿತ್ತು. ಬೆಳಗಾವಿಯಲ್ಲಿ ಚಲಿಸುತ್ತಿದ್ದ ಬೈಕ್‌ನಲ್ಲೇ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. ಸಾವಿನ ಕೊನೆ ಕ್ಷಣವು ಸಿಸಿಕ್ಯಾಮೆರಾದಲ್ಲಿ ಸೆರೆಯಾಗಿದೆ.

VISTARANEWS.COM


on

By

Heart attack
Koo

ಬೆಳಗಾವಿ: ಯಾವುದೇ ಸೂಚನೆಯನ್ನು ನೀಡದೆ ಬರುವ ಜವರಾಯನ ಅಟ್ಟಹಾಸಕ್ಕೆ ಮಧ್ಯಮ ವಯಸ್ಸಿನವರ ಪ್ರಾಣಪಕ್ಷಿ ಹಾರಿಹೋಗುತ್ತಿದೆ. ಬದುಕು ಹೇಗೆಲ್ಲ ಅಂತ್ಯವಾಗುತ್ತೆ ಎಂಬುದನ್ನು ಅಂದಾಜಿಸಲೂ ಸಾಧ್ಯವಿಲ್ಲ. ಹೃದಯವು ಯಾವ ಕ್ಷಣದಲ್ಲಿ ಕೈಕೊಡುತ್ತೆ ಎಂಬುದು ಊಹಿಸಲು ಆಗುತ್ತಿಲ್ಲ. ನಿಂತ ನಿಲುವಿನಲ್ಲೇ ಬದುಕನ್ನು ಸ್ತಬ್ಧಗೊಳಿಸುವ ನಿರ್ನಾಮ ಶಕ್ತಿಯನ್ನು ಅದು ಹೊಂದಿದೆ. ಕುಳಿತಲ್ಲೇ ಕುಸಿಯುವುದು, ನಿಂತಲ್ಲೇ ಉರುಳಿ ಬೀಳುವುದು, ಮಲಗಿದಲ್ಲೇ ಮರಣಿಸುವುದು, ನೃತ್ಯ ಮಾಡುತ್ತಲೇ ಹೃದಯ (Heart Attack) ಸ್ತಬ್ಧವಾಗುವುದು. ಹೀಗೆ ಸಾವಿನ ಹತ್ತಾರು ಭಯಾನಕ ಸನ್ನಿವೇಶಗಳನ್ನು ನಾವು ನೋಡಿದ್ದೇವೆ. ಇದೀಗ ಬೆಳಗಾವಿಯಲ್ಲಿ ಯೋಧರೊಬ್ಬರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.

ಯೋಧ ಬೈಕ್‌ನಲ್ಲಿ ಹೋಗುತ್ತಿದ್ದಾಗ ಸಹಿಸಲು ಆಗದ ಎದೆನೋವು ಕಾಣಿಸಿಕೊಂಡಿದೆ. ಬೈಕ್‌ ನಿಧಾನಿಸಿ ಎದೆ ಸವಾರಿಕೊಂಡು ನಿಲ್ಲಲ್ಲು ಯತ್ನಿಸಿದ್ದಾರೆ. ಆದರೆ ಕರುಣೆಯೇ ಇಲ್ಲದ ಹೃದಯ ತನ್ನ ಬಡಿತವನ್ನು ನಿಲ್ಲಿಸಿತ್ತು. ನೋಡನೋಡುತ್ತಲೇ ಆ ಯೋಧ ರಸ್ತೆ ಬದಿಗೆ ಕುಸಿದು ಬಿದ್ದಿದ್ದರು. ಸಾವಿನ ಕ್ಷಣವು ಸಿಸಿಕ್ಯಾಮೆರಾದಲ್ಲಿ ಸೆರೆಯಾಗಿತ್ತು.

ಬೆಳಗಾವಿಯ ಎಂಎಲ್ಐಆರ್‌ಸಿ ಕ್ಯಾಂಪ್‌ನಲ್ಲಿ ಈ ಘಟನೆ ನಡೆದಿದೆ. ಹೃದಯಾಘಾತದಿಂದ ಸುನೀಲ್ ಸಲಾಂ (37) ಎಂಬುವವರು ಮೃತಪಟ್ಟಿದ್ದಾರೆ. ಸುನೀಲ್‌ ಮರಾಠ ಲಘು ಪದಾತಿದಳಲ್ಲಿ ಹವಾಲ್ದಾರ್ ಆಗಿ ಕೆಲಸ ಮಾಡುತ್ತಿದ್ದರು. ಬೈಕ್‌ನಲ್ಲಿ ತೆರಳುತ್ತಿದ್ದಾಗ ದಿಢೀರ್‌ ಹೃದಯಾಘಾತದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Heart attack
Heart attack

ಇದನ್ನೂ ಓದಿ: Physical Abuse : ಕೋರಮಂಗಲದ ಪಬ್‌ನಿಂದ ಮನೆಗೆ ಹೋಗುತ್ತಿದ್ದ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

ಬೈಕ್‌ ಚಲಿಸುತ್ತಿದ್ದಾಗಲೇ ಎದೆ ನೋವು ಕಾಣಿಸಿಕೊಂಡಿದೆ. ಎದೆಯನ್ನು ಸವರಿಸಿಕೊಳ್ಳುತ್ತಲೇ ಬ್ರೇಕ್‌ ಹಿಡಿದು ಬೈಕ್‌ ನಿಧಾನ ಮಾಡಿದ್ದಾರೆ. ಆದರೆ ನಡುರಸ್ತೆಯಲ್ಲೇ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. ಸುನೀಲ್‌ ಅವರು ಬೈಕ್‌ನಿಂದ ರಸ್ತೆ ಬದಿಗೆ ಬೀಳುವ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಸದ್ಯ ಸುನೀಲ್‌ ಮೃತದೇಹವನ್ನು ಮಹಾರಾಷ್ಟ್ರದ ಚಂದಗಡ ತಾಲೂಕಿನ ಘುಳೇವಾಡಿಗೆ ರವಾನಿಸಿದ್ದು, ಸಕಲ ಸರ್ಕಾರಿ ಗೌರವಗೊಂದಿಗೆ ಯೋಧನ ಅಂತ್ಯಕ್ರಿಯೆ ನಡೆದಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದೇಶ

Physical Abuse: ಮತ್ತೊಂದು ಪೈಶಾಚಿಕ ಕೃತ್ಯ; ಬಸ್‌ನಲ್ಲಿ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ

Physical Abuse: ಉತ್ತರಖಂಡದಲ್ಲಿ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಪ್ರಕರಣ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಮೊರಾದಾಬಾದ್​ನಿಂದ ಡೆಹ್ರಾಡೂನ್​ಗೆ ಬಸ್‌ನಲ್ಲಿ ಹೊರಟಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಐವರು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಈ ಘಟನೆ ಆಗಸ್ಟ್ 13ರಂದು ನಡೆದಿದೆ ಎನ್ನಲಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ಬಾಲಕಿಗೆ ಚಿಕಿತ್ಸೆ ನೀಡಲಾಗುತ್ತಿದೆ.

VISTARANEWS.COM


on

Physical Abuse
Koo

ಡೆಹ್ರಾಡೂನ್‌: ದೇಶದಲ್ಲಿ ಮಹಿಳೆಯರ ಸುರಕ್ಷತೆ ಬಗ್ಗೆ ಆತಂಕ ಎದುರಾಗಿದ್ದು, ಕೋಲ್ಕತ್ತಾದಲ್ಲಿ ಟ್ರೈನಿ ವೈದ್ಯೆಯ ಮೇಲಿನ ಅತ್ಯಾಚಾರ, ಕೊಲೆ ಪ್ರಕರಣದ ಬೆನ್ನಿಗೆ ಉತ್ತರಾಖಂಡದಲ್ಲಿ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಪ್ರಕರಣ ಬೆಳಕಿಗೆ ಬಂದಿದೆ (Physical Abuse). ಉತ್ತರ ಪ್ರದೇಶದ ಮೊರಾದಾಬಾದ್​ನಿಂದ ಡೆಹ್ರಾಡೂನ್​ಗೆ ಬಸ್‌ನಲ್ಲಿ ಹೊರಟಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಐವರು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಈ ಘಟನೆ ಆಗಸ್ಟ್ 13ರಂದು ನಡೆದಿದೆ ಎನ್ನಲಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ಬಾಲಕಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಪಂಜಾಬ್‌ ಮೂಲದ ಬಾಲಕಿ ಡೆಹ್ರಾಡೂನ್‌ಗೆ ತೆರಳಲು ಆಗಸ್ಟ್‌ 12ರಂದು ಉತ್ತರಾಖಂಡದ ಅಂತಾರಾಜ್ಯ ಸರ್ಕಾರಿ ಬಸ್‌ ಏರಿದ್ದಳು. ಆಗಸ್ಟ್‌ 13ರ ಮುಂಜಾನೆ ನಿಲ್ಲಿಸಿದ್ದ ಬಸ್‌ನಲ್ಲಿ ಯಾರೂ ಇಲ್ಲದ ವೇಳೆ ಐವರು ಬಾಲಕಿ ಮೇಲೆ ಎರಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ವೈದ್ಯಕೀಯ ವರದಿ ಇನ್ನಷ್ಟೇ ಕೈ ಸೇರಬೇಕಿದೆ.

ಅಧಿಕಾರಿಗಳು ಹೇಳಿದ್ದೇನು?

ಮಕ್ಕಳ ಕಲ್ಯಾಣ ಸಮಿತಿ (Child Welfare Committee-CWC)ಯ ಅಧಿಕಾರಿಗಳು ಘಟನೆ ಬಗ್ಗೆ ಮಾಹಿತಿ ನೀಡಿ, ಆಗಸ್ಟ್‌ 13ರ ಮುಂಜಾನೆ ಸುಮಾರು 2-2.30ರ ವೇಳೆಗೆ ಬಾಲಕಿ ಪತ್ತೆಯಾಗಿದ್ದಳು. ಈ ವೇಳೆ ಅವಳ ಮಾನಸಿಕವಾಗಿ ಬಹಳ ಕುಗ್ಗಿ ಹೋಗಿದ್ದಳು. ಆಕೆಯ ದೇಹದಲ್ಲಿ ಹೊರ ಭಾಗದಲ್ಲಿ ಯಾವುದೇ ಗಾಯ ಕಂಡು ಬಂದಿರಲಿಲ್ಲ. ಬಳಿಕ ಆಕೆಯನ್ನು ಮಕ್ಕಳ ಕಲ್ಯಾಣ ಕೇಂದ್ರಕ್ಕೆ ಕರೆದುಕೊಂಡು ಬಂದು ಆಸ್ಪತ್ರೆಗೆ ದಾಖಲಿಸಲಾಯಿತುʼʼ ಎಂದು ತಿಳಿಸಿದ್ದಾರೆ.

ಬಸ್‌ನ ಚಾಲಕ, ನಿರ್ವಾಹಕ ಸೇರಿ ಇದುವರೆಗೆ 6 ಮಂದಿಯನ್ನು ವಶಕ್ಕೆ ಪಡೆಯಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ. ಮೂಲಗಳ ಪ್ರಕಾರ ಪಂಜಾಬ್‌ನ ಈ ಬಾಲಕಿ ಅನಾಥೆಯಾಗಿದ್ದು, ತನ್ನ ಸಹೋದರಿ ಮತ್ತು ಭಾವನೊಂದಿಗೆ ವಾಸವಾಗಿದ್ದಳು. ಆಗಸ್ಟ್‌ 11ರಂದು ಅಕ್ಕ-ಭಾವ ಸೇರಿ ಆಕೆಯನ್ನು ಮನೆಯಿಂದ ಹೊರ ಹಾಕಿದ್ದರು. ಇದರಿಂದ ದಿಕ್ಕೇ ತೋಚದಂತಾದ ಆಕೆ ದಿಲ್ಲಿಗೆ ಬಂದು ಅಲ್ಲಿಂದ ಉತ್ತರಪ್ರದೇಶದ ಮೊರಾದಾಬಾದ್‌ಗೆ ಆಗಮಿಸಿದ್ದಳು. ಬಳಿಕ ಅಲ್ಲಿಂದ ಡೆಹ್ರಾಡೂನ್‌ ತಲುಪಿದ್ದಳು.

ಘಟನೆ ವಿವರ

ದಿಲ್ಲಿಯಿಂದ ಉತ್ತರ ಪ್ರದೇಶದ ಸಾರಿಗೆ ಬಸ್‌ ಮೂಲಕ ಮೊರಾದಾಬಾದ್‌ಗೆ ತಲುಪಿದ ಬಾಲಕಿ ಅಲ್ಲಿಂದ ಆಗಸ್ಟ್‌ 12ರಂದು ಅಂತಾರಾಜ್ಯ ಬಸ್‌ ಹತ್ತಿ ಡೆಹ್ರಾಡೂನ್‌ ತಲುಪಿದ್ದಳು. ಬಸ್‌ನಿಂದ ಎಲ್ಲರೂ ಇಳಿದು ಹೋದ ಬಳಿಕ ಆಕೆಯೊಬ್ಬಳೇ ಉಳಿದಿಕೊಂಡಿದ್ದಳು. ಆಕೆ ಒಬ್ಬಳೇ ಇರುವುದನ್ನು ಗಮನಿಸಿದ ಐವರು ಆಗಸ್ಟ್‌ 13ರಂದು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಬಸ್‌ನಿಂದ ಹೊರಗೆ ಎಸೆದು ಪರಾರಿಯಾಗಿದ್ದರು ಎಂದು ವರದಿಯೊಂದು ತಿಳಿಸಿದೆ. ಸದ್ಯ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ದುಷ್ಕರ್ಮಿಗಳ ಪತ್ತೆಗೆ ಸಿಸಿಟಿವಿ ಕ್ಯಾಮೆರಾ ಪರಿಶೀಲಿಸುತ್ತಿದ್ದಾರೆ.

ಇದನ್ನೂ ಓದಿ: Physical Abuse : ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ನರ್ಸ್​ ಮೇಲೆ ಅತ್ಯಾಚಾರ ನಡೆಸಿ ಕೊಲೆ

ಬೆಂಗಳೂರಿನಲ್ಲಿಯೂ ಪೈಶಾಚಿಕ ಕೃತ್ಯ

ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯುವತಿ ಮೇಲೆ ಅತ್ಯಾಚಾರ ನಡೆದಿದೆ. ನಾಗಲ್ಯಾಂಡ್‌ ಮೂಲದ ಯುವತಿಯ ಸ್ಥಿತಿ ತೀರ ಗಂಭೀರವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಎಚ್ಎಸ್ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ. ಆಟೋದಲ್ಲೇ ಯುವತಿ ಮೇಲೆ ಅತ್ಯಾಚಾರ ನಡೆದಿದೆ ಎನ್ನಲಾಗಿದೆ.

Continue Reading

ಚಿತ್ರದುರ್ಗ

Road Accident : ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿ; ರಕ್ತಕಾರಿ ಸತ್ತ ಸವಾರ, ಮತ್ತೊಬ್ಬ ಗಂಭೀರ

Road Accident : ಪ್ರತ್ಯೇಕ ಕಡೆಗಳಲ್ಲಿ ಅಪಘಾತ ನಡೆದಿದ್ದು, ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟರೆ, 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.

VISTARANEWS.COM


on

By

Road Accident
Koo

ಚಿತ್ರದುರ್ಗ: ಚಲಿಸುತ್ತಿದ್ದ ಲಾರಿಗೆ ವೇಗವಾಗಿ ಬಂದ ಬೈಕ್‌ವೊಂದು ಹಿಂಬದಿಯಿಂದ (Road Accident) ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟರೆ, ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ. ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮುರು ತಾಲೂಕಿನ ನಾಗ ಸಮುದ್ರದ ಬಳಿ ಅಪಘಾತ ನಡೆದಿದೆ.

ಗಾಯಾಳನ್ನು ರಾಂಪುರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನಾ ಸ್ಥಳಕ್ಕೆ ರಾಂಪುರ ಪಿಎಸ್ಐ ಮಹೇಶ್ ಹೊಸಪೇಟ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಲಾಗಿದೆ. ರಾಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.

ಹಾವೇರಿಯಲ್ಲಿ ಬಸ್‌ಗಳ ಮುಖಾಮುಖಿ ಡಿಕ್ಕಿ

ಎರಡು ಬಸ್‌ಗಳ ನಡುವೆ ಮುಖಾ-ಮುಖಿ ಡಿಕ್ಕಿಯಾಗಿದೆ. 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯವಾಗಿದೆ. ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಯಲವಿಗಿ ಅಂಡರ್ ಪಾಸ್ ಬಳಿ ಅಪಘಾತ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

ಬಸ್‌ನಲ್ಲಿ ಸಿಲುಕಿದ್ದ ಗಾಯಾಳುಗಳನ್ನು ಸ್ಥಳೀಯರು ರಕ್ಷಣೆ ಮಾಡಿದ್ದು, ಸವಣೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸವಣೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪೊಲೀಸರು ಎರಡು ಬಸ್‌ಗಳನ್ನು ತೆರವು ಮಾಡಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

ಇದನ್ನೂ ಓದಿ: Nandi Hills : ಬೆಂಗಳೂರಿಗರ ವಾರಾಂತ್ಯದ ವಿನೋದಕ್ಕೆ ಅಡಚಣೆ; ಮರದ ಟೊಂಗೆ ಬಿದ್ದು ನಂದಿ ಹಿಲ್ಸ್​ನಲ್ಲಿ 5 ಕಿ.ಮೀ ಟ್ರಾಫಿಕ್ ಜಾಮ್​

ನರಗುಂದದಲ್ಲಿ ಭೀಕರ ಅಪಘಾತ; ಸಾರಿಗೆ ಬಸ್​ ಗುದ್ದಿ ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರ ದುರ್ಮರಣ

ಗದಗ : ಭಾನುವಾರ ಮುಂಜಾನೆ ವೇಳೆ ಸಾರಿಗೆ ಬಸ್​ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ (Accident News ) ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ. ಅಪಘಾತದ ರಭಸಕ್ಕೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ದೇಹಗಳು ಛಿದ್ರಗೊಂಡಿವೆ. ಮೃತಪಟ್ಟವರೆಲ್ಲರೂ ದೇವಸ್ಥಾನಕ್ಕೆ ಹೊರಟಿದ್ದರು. ನೇರವಾದ ರಸ್ತೆಯಲ್ಲಿ ಎರಡೂ ವಾಹನಗಳು ಪರಸ್ಪರ ಅಪ್ಪಳಿಸಿದ್ದು ಸಣ್ಣ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ.

ಗದಗ ಜಿಲ್ಲೆ ನರಗುಂದ ತಾಲೂಕು ಕೊಣ್ಣೂರ ಗ್ರಾಮದ ಹೊರವಲಯದಲ್ಲಿ ಘಟನೆ ನಡೆದಿದೆ. ಹಾವೇರಿ ಮೂಲದ ರುದ್ರಪ್ಪ ಅಂಗಡಿ(55), ಪತ್ನಿ ರಾಜೇಶ್ವರಿ (45), ಮಗಳು ಐಶ್ವರ್ಯ (16), ಮಗ ವಿಜಯ(12) ಮೃತಪಟ್ಟವರಾಗಿದ್ದಾರೆ. ಬಸ್​​ ಇಳಕಲ್​ನಿಂದ ಹುಬ್ಬಳ್ಳಿ ಗೆ ಹೊರಟ್ಟಿತ್ತು. ಕಾರು ಹಾವೇರಿಯಿಂದ ಕಲ್ಲಾಪೂರ ಕಡೆಗೆ ಸಾಗುತ್ತಿತ್ತು. ಕಲ್ಲಾಪೂರ ಬಸವೇಶ್ವರ ದೇವಸ್ಥಾನಕ್ಕೆ ಕುಟುಂಬವು ಹೊರಟಿತ್ತು. ಕೊಣ್ಣೂರು ಬಳಿಕ ಎರಡು ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಆಘಾತಕ್ಕೆ ಕಾರಿನಲ್ಲಿದ್ದವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕಾರು ಸಂಪೂರ್ಣ ನಜ್ಜುಗುಜ್ಜು

ಅಫಘಾತಕ್ಕೆ ಯಾರ ನಿಲ್ಷಕ್ಷ್ಯ ಎಂಬುದು ಪ್ರಾಥಮಿಕ ಅವಲೋಕನದಲ್ಲಿ ತಿಳಿದುಬಂದಿಲ್ಲ. ಆದರೆ, ಬಸ್​​ನ ಆಘಾತಕ್ಕೆ ಕಾರಿನ ರೂಫ್​ ಸಂಪೂರ್ಣವಾಗಿ ಹಾರಿ ಹೋಗಿದೆ. ಅದರೊಳಗೆ ಇದ್ದ ಪ್ರಯಾಣಿಕರು ಸಂಪೂರ್ಣವಾಗಿ ಜರ್ಜರಿತಗೊಂಡು ಮೃತಪಟ್ಟಿದ್ದಾರೆ. ಕಾರಿನ ಮುಂಭಾಗದಲ್ಲಿ ಸೀಟಿನಲ್ಲಿ ದುದ್ರಪ್ಪ ಹಾಗೂ ಪುತ್ರ ವಿಜಯ್ ಕುಳಿತಿದ್ದರೆ, ಹಿಂದಿನ ಸೀಟಿನಲ್ಲಿ ರಾಜೇಶ್ವರಿ ಹಾಗೂ ಐಶ್ವರ್ಯಾ ಕುಳಿತಿದ್ದು. ಎಲ್ಲರೂ ಕುಳಿತಿದ್ದ ಸ್ಥಿತಿಯಲ್ಲೇ ಮೃತಪಟ್ಟಿರುವುದು ಭೀಕರತೆಗೆ ಸಾಕ್ಷಿಯಾಗಿದೆ.

ಹಳ್ಳಕ್ಕೆ ಇಳಿದ ಬಸ್​​: ಅಪಘಾತದ ಬಳಿಕ ಬಸ್​​ ನಿಯಂತ್ರಣ ಪಡೆದುಕೊಳ್ಳದೆ ಹಳ್ಳವೊಂದಕ್ಕೆ ಇಳಿದಿದೆ. ನೇರ ರಸ್ತೆಯಲ್ಲಿ ಎರಡೂ ವಾಹನಗಳು ಗರಿಷ್ಠ ವೇಗದಲ್ಲಿ ಸಾಗುತ್ತಿದ್ದ ಸಾಧ್ಯತೆಗಳು ಕಾಣಿಸುತ್ತಿದೆ. ಕಾರಿಗೆ ಗುದ್ದಿದ ಬಸ್​ನ ಮುಂಭಾಗದಲ್ಲಿ ಸ್ವಲ್ಪ ಪ್ರಮಾಣದ ಹಾನಿ ಉಂಟಾಗಿದೆ. ಬಳಿಕ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಕೆಳಕ್ಕೆ ಜಾರಿ ಹಳ್ಳಕ್ಕೆ ಇಳಿದಿದೆ. ಬಸ್​ನಲ್ಲಿ ಎಷ್ಟು ಪ್ರಯಾಣಿಕರು ಇದ್ದರು ಎಂಬ ಕುರಿತು ಮಾಹಿತಿ ಲಭ್ಯವಿಲ್ಲ. ಸ್ಥಳೀಯರು ಹಾಗೂ ಪೊಲೀಸರ ನೆರವಿನಿಂದ ಮೃತದೇಹಗಳನ್ನು ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಸಾಗಿಸಲಾಗಿದೆ.

ಬೆಚ್ಚಿದ ಸ್ಥಳೀಯರು

ಭಾನುವಾರ ಮುಂಜಾನೆ ನಡೆದ ಅಪಘಾತಕ್ಕೆ ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ. ಬೆಳಗ್ಗೆದ್ದು ಶುಭ ವಾರ್ತೆಯನ್ನು ನಿರೀಕ್ಷಿಸಿದ್ದ ಸ್ಥಳೀಯ ನಿವಾಸಿಗಳು ಅಪಘಾತದ ದೃಶ್ಯಗಳನ್ನು ಕಂಡು ಬೇಸರ ವ್ಯಕ್ತಪಡಿಸಿದ್ದಾರೆ. ಒಂದೇ ಕುಟುಂಬದ ಎಲ್ಲರೂ ಕಾರಿನಲ್ಲಿ ಕುಳಿತ ಸ್ಥಿತಿಯಲ್ಲಿಯೇ ಮೃತಪಟ್ಟಿರುವುದು ಸ್ಥಳೀಯರ ಬೇಸರಕ್ಕೆ ಕಾರಣವಾಗಿದೆ. ಘಟನೆಯಲ್ಲಿ ಯಾರ ತಪ್ಪು ಹೆಚ್ಚಿದೆ ಎಂಬುದರ ಬಗ್ಗೆಯೂ ಅವರೆಲ್ಲೂ ಚರ್ಚೆ ನಡೆಸುತ್ತಿದ್ದಾರೆ. ಅಪಘಾತದ ಬಳಿಕ ಬಸ್​ ನ ಸಿಬ್ಬಂದಿ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಗ್ರಾಮಸ್ಥರು ಹೇಳಿದ್ದಾರೆ. ಸ್ಥಳಕ್ಕೆ ನರಗುಂದ ಪೊಲೀಸರ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Road Accident
ದೇಶ3 mins ago

Road Accident: ಭೀಕರ ರಸ್ತೆ ಅಪಘಾತ; ಖಾಸಗಿ ಬಸ್‌-ಟೆಂಪೊ ಡಿಕ್ಕಿಯಾಗಿ 10 ಮಂದಿ ಸಾವು

Sanju Samson
ಕ್ರೀಡೆ6 mins ago

Sanju Samson: ಬಾಸ್ಕೆಟ್‌ ಬಾಲ್‌ ಕೋರ್ಟ್​ನಲ್ಲಿ ಫುಟ್ಬಾಲ್​ ಆಡಿದ ಸಂಜು ಸ್ಯಾಮ್ಸನ್​; ವಿಡಿಯೊ ವೈರಲ್​

Physical Abuse
ಪ್ರಮುಖ ಸುದ್ದಿ16 mins ago

Physical Abuse : 16 ವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿದ 69 ವರ್ಷದ ಮುದುಕ

Champai Soren
ರಾಜಕೀಯ28 mins ago

Champai Soren: ಜಾರ್ಖಂಡ್‌ ರಾಜಕೀಯಲ್ಲಿ ಸಂಚಲನ; ಮಾಜಿ ಸಿಎಂ ಚಂಪೈ ಸೊರೆನ್ ಬಿಜೆಪಿ ಸೇರ್ಪಡೆ?

CM Siddaramaiah
ಪ್ರಮುಖ ಸುದ್ದಿ45 mins ago

CM Siddaramaiah : ಮುಡಾ ಆಘಾತದ ನಡುವೆ ಸಿಎಂ ಸಿದ್ದರಾಮಯ್ಯ ನಾಳೆ ಮಂತ್ರಾಲಯಕ್ಕೆ ಭೇಟಿ

Heart attack
ಬೆಳಗಾವಿ49 mins ago

Heart Attack : ಬೈಕ್‌ನಲ್ಲಿ ತೆರಳುತ್ತಿದ್ದಾಗಲೇ ಬಡಿತ ನಿಲ್ಲಿಸಿದ ಹೃದಯ; ಯೋಧನ ಸಾವಿನ ಕೊನೆ ಕ್ಷಣ ಸೆರೆ

MS Dhoni
ಕ್ರೀಡೆ55 mins ago

MS Dhoni: ಅಭಿಮಾನಿಯ ಬೈಕ್​ ಮೇಲೆ ಆಟೋಗ್ರಾಫ್​ ಹಾಕಿದ ಧೋನಿ; ಫೋಟೊ ವೈರಲ್​

Congress Protest
ಕರ್ನಾಟಕ55 mins ago

Congress Protest: ರಾಜ್ಯಪಾಲರ ನಡೆಗೆ ಕೆರಳಿದ ಕಾಂಗ್ರೆಸ್ ಪಡೆ; ನಾಳೆ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ

Physical Abuse
ದೇಶ1 hour ago

Physical Abuse: ಮತ್ತೊಂದು ಪೈಶಾಚಿಕ ಕೃತ್ಯ; ಬಸ್‌ನಲ್ಲಿ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ

Kannada New Movie vaikuntha samaradhane movie
ಸ್ಯಾಂಡಲ್ ವುಡ್2 hours ago

Kannada New Movie: ಹೊಸ ಪ್ರತಿಭೆಗಳ ಸಿನಿಮಾ ‘ವೈಕುಂಠ ಸಮಾರಾಧನೆʼ; ಕನ್ನಡದಲ್ಲಿ ಹೀಗೊಂದು ಚಿತ್ರ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ1 week ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 week ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 week ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌