Road Accident : ಟೈರ್‌ ಸ್ಫೋಟಕ್ಕೆ ಕ್ರೂಸರ್ ವಾಹನ ಪಲ್ಟಿ; ಮೂವರು ಮಹಿಳೆಯರ ದುರ್ಮರಣ - Vistara News

ಬೆಳಗಾವಿ

Road Accident : ಟೈರ್‌ ಸ್ಫೋಟಕ್ಕೆ ಕ್ರೂಸರ್ ವಾಹನ ಪಲ್ಟಿ; ಮೂವರು ಮಹಿಳೆಯರ ದುರ್ಮರಣ

Road Accident : ಚಲಿಸುತ್ತಿದ್ದಾಗಲೇ ಕ್ರೂಸರ್‌ ವಾಹನದ ಟೈರ್‌ ಸ್ಫೋಟಗೊಂಡು ಪಲ್ಟಿಯಾಗಿದೆ. ಪರಿಣಾಮ ಕ್ರೂಸರ್‌ ವಾಹನದಲ್ಲಿದ್ದ ಮಹಿಳೆ ಪ್ರಯಾಣಿಕರು ದಾರುಣವಾಗಿ ಮೃತಪಟ್ಟಿದ್ದಾರೆ. ಹಲವರಿಗೆ ಗಾಯವಾಗಿದ್ದು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.

VISTARANEWS.COM


on

Road Accident in chikodi maharashtra
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಿಕ್ಕೋಡಿ: ಮಹಾರಾಷ್ಟ್ರದ ಸಾಂಗೋಲಾ- ಜತ್ತ ಮಾರ್ಗದ ಬಳಿ ಕ್ರೂಸರ್ ವಾಹನ ಪಲ್ಟಿಯಾಗಿದ್ದು, ಮೂವರು ಮಹಿಳೆಯರು ಸ್ಥಳದಲ್ಲೇ (Road Accident ) ದುರ್ಮರಣ ಹೊಂದಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬಳ್ಳಿಗೇರಿ ಗ್ರಾಮದ ಮಹಿಳೆಯರು ಮೃತರಾಗಿದ್ದಾರೆ.

ಬಳ್ಳಿಗೇರಿ ಗ್ರಾಮದ ನಿವಾಸಿಗಳಾದ ಮಹಾದೇವಿ ಚೌಗಲಾ, ಗೀತಾ ದೊಡಮನಿ, ಕಸ್ತೂರಿ ಮೃತ ದುರ್ದೈವಿಗಳು. ಬಳ್ಳಿಗೇರಿ ಗ್ರಾಮದಿಂದ ಮಹಾರಾಷ್ಟ್ರಕ್ಕೆ ಕೆಲಸಕ್ಕೆ ಹೋಗುವ ಸಂದರ್ಭದಲ್ಲಿ ಕ್ರೂಸರ್ ವಾಹನದ ಎಡಬದಿಯ ಟೈರ್ ಸ್ಫೋಟಗೊಂಡಿದೆ.

ಟೈರ್ ಸ್ಫೋಟಗೊಂಡ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್‌ ವಾಹನ ಪಲ್ಟಿಯಾಗಿದೆ. ಕ್ರೂಸರ್ ಪಲ್ಟಿಯಾದ ಪರಿಣಾಮ ಮೂವರು ಮಹಿಳೆಯರು ಗಂಭೀರ ಗಾಯಗೊಂಡು ಮೃತಪಟ್ಟರೆ, ಹಲವರು ಗಾಯಗೊಂಡಿದ್ದಾರೆ.

ಸ್ಥಳೀಯರು ಸಹಾಯಕ್ಕೆ ಧಾವಿಸಿ ಚೆಲ್ಲಾಪಿಲ್ಲಿಯಾಗಿದ್ದ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಬಳ್ಳಿಗೇರಿ ಗ್ರಾಮದಲ್ಲಿ ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆ ಬಳಿಕ ಹಸ್ತಾಂತರ ಮಾಡಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: Accident Case : ಬ್ಯಾನರ್‌ ಕಟ್ಟುವಾಗ ಕರೆಂಟ್‌ ಶಾಕ್‌ಗೆ ವ್ಯಕ್ತಿ ಸಾವು; ಡಿವೈಡರ್‌ಗೆ ಗುದ್ದಿ ಪಲ್ಟಿಯಾದ ಕಾರು

ಕಾರು ಪಲ್ಟಿ ಮೂವರು ಗಂಭೀರ

ರಸ್ತೆ ಡಿವೈಡರ್‌ಗೆ ಗುದ್ದಿ ಕಾರು ಪಲ್ಟಿ ಆಗಿದೆ. ಪರಿಣಾಮ ಕಾರಲ್ಲದ್ದ ಮೂವರಿಗೆ ಗಂಭೀರ ಗಾಯವಾಗಿದೆ. ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಅಮಲಾಪುರ ಗ್ರಾಮ ಬಳಿ ರಾ. ಹೆ 50ರಲ್ಲಿ ಘಟನೆ ನಡೆದಿದೆ. ಬೆಂಗಳೂರಿನಿಂದ ಕೊಪ್ಪಳ ‌ಕಡೆ ಚಲಿಸುತ್ತಿದ್ದ ಕಾರು ಪಲ್ಟಿಯಾಗಿದೆ.

ಘಟನೆಯಲ್ಲಿ ಇಬ್ಬರ ಸ್ಥಿತಿ ಚಿಂತಾಜನಕ‌ವಾಗಿದ್ದು, ಮತ್ತೋರ್ವ ವ್ಯಕ್ತಿಗೆ ಸಣ್ಣ ಪುಟ್ಟ ಗಾಯವಾಗಿದೆ. ಘಟನಾ ಸ್ಥಳಕ್ಕೆ ಕಾನಾ ಹೊಸಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಕಾನಾ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕಾರು, ಬೈಕ್ ನಡುವೆ ಭೀಕರ ಅಪಘಾತ; ಸವಾರ ಸಾವು

ಬೆಂಗಳೂರು ಗ್ರಾಮಾಂತರದ ದೇವನಹಳ್ಳಿ ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಯನಗುಂಟೆ ಬಳಿ ಕಾರು ಹಾಗೂ ಬೈಕ್‌ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೆ ದುರ್ಮರಣ ಹೊಂದಿದ್ದಾರೆ. ಯನಗುಂಟೆ ಗ್ರಾಮದ ಕೃಷ್ಣಪ್ಪ‌ ( 70 ) ಮೃತರು.

ಕೃಷ್ಣಪ್ಪ ಹೊಸಕೋಟೆಯಿಂದ ಗ್ರಾಮದ ಕಡೆಗೆ ಬರುತ್ತಿದ್ದಾಗ, ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಬೈಕ್‌ನಿಂದ ಕೆಳಗೆ ಬಿದ್ದ ವೃದ್ಧ ಕೃಷ್ಣಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೂ ಕಾರಿನ ಮುಂಭಾಗ ನಜ್ಜು ಗುಜ್ಜಾಗಿದ್ದು, ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸೂಲಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಮಳೆ

Karnataka Weather : ಭಾರಿ ಮಳೆ ಹಿನ್ನೆಲೆ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Karnataka Weather Forecast : 7 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್‌ ಘೋಷಣೆ (Rain News) ಮಾಡಲಾಗಿದೆ. ಕೆಲವೊಮ್ಮೆ ಗಾಳಿ ವೇಗವು ಬೀಸಲಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಇಂದು ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ (Rain News) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಚಿತ್ರದುರ್ಗ, ದಾವಣಗೆರೆ, ತುಮಕೂರು, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯಲ್ಲಿ ಚದುರಿದ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನಲ್ಲಿ ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ರಾಯಚೂರು ಮತ್ತು ಬೀದರ್‌ ಚದುರಿದಂತೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Dina Bhavishya: ಈ ರಾಶಿಯವರಿಗೆ ಆತುರದಲ್ಲಿ ಆಡಿದ ಮಾತು ಅಪಾಯ ತಂದಿತು ಎಚ್ಚರ

ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನದಲ್ಲಿ ಭಾರಿ ಮಳೆಯಾಗಲಿದೆ. ಕರಾವಳಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲೂ ವ್ಯಾಪಕ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.

ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಾಳಿ 30-40 ಕಿ.ಮೀ ವೇಗದಲ್ಲಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೀದರ್, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ರಾಜ್ಯಾದ್ಯಂತ ಭಾರಿ ಮಳೆ ಮುನ್ಸೂಚನೆ; ಆರೆಂಜ್‌ ಅಲರ್ಟ್‌ ಘೋಷಣೆ

Karnataka Weather Forecast : ರಾಜ್ಯಾದ್ಯಂತ ಇಂದಿನಿಂದ ಮೂರು ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದ್ದು, ಕರಾವಳಿಗೆ ಆರೆಂಜ್‌ ಅಲರ್ಟ್‌ ಹಾಗೂ ಉತ್ತರ ಒಳನಾಡಿನಲ್ಲಿ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

VISTARANEWS.COM


on

By

karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಕರ್ನಾಟಕದ ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ (Heavy Rain alert) ಸಾಧ್ಯತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ರಾಮನಗರದಲ್ಲಿ ಸಾಧಾರಣದೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಚದುರಿದಂತೆ ಮತ್ತು ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಇನ್ನೂ ಉತ್ತರ ಒಳನಾಡಿನಲ್ಲಿ ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ರಾಯಚೂರು ಮತ್ತು ಬೀದರ್ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಉಳಿದ ಜಿಲ್ಲೆಗಳಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾದರೆ, ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗಲಿದೆ.

ಇದನ್ನೂ ಓದಿ: Electric shock : ಕರೆಂಟ್‌ ಶಾಕ್‌ನಿಂದ ಎಂಜಿನಿಯರ್‌ ಸಾವು; ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ

ಬೆಂಗಳೂರಿನಲ್ಲಿ ಸಾಧಾರಣ ಮಳೆ

ಬೆಂಗಳೂರು ವ್ಯಾಪ್ತಿಯಲ್ಲಿ ಸಾಧಾರಣ ಮಳೆಯಾಗಲಿದ್ದು, ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಆರೆಂಜ್‌ ಅಲರ್ಟ್‌

ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಗಾಳಿ ವೇಗವು 30-40 ಕಿ.ಮೀ ಇರಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಇನ್ನೂ ಬಾಗಲಕೋಟೆ, ಬೆಳಗಾವಿ, ಧಾರವಾಡ, ರಾಯಚೂರು, ಯಾದಗಿರಿ, ಬಳ್ಳಾರಿ, ದಾವಣಗೆರೆ ಮತ್ತು ಹಾಸನ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಇಂದು ಧ್ವಜಾರೋಹಣ ಆಯ್ತು, ನಾಳೆ ವರಮಹಾಲಕ್ಷ್ಮಿ ಹಬ್ಬಕ್ಕೂ ಮಳೆ ಅಡ್ಡಿ; ಬೆಂಗಳೂರು ಸೇರಿ ಕರಾವಳಿ, ಮಲೆನಾಡಿಗೆ ಅಲರ್ಟ್‌

Karnataka Weather Forecast: ವರಮಹಾಲಕ್ಷ್ಮಿ ಹಬ್ಬದ (Varamahalakshim Fest) ಸಂಭ್ರಮಕ್ಕೆ ಮಳೆ ಅಡ್ಡಿಯಾಗುವ ಎಲ್ಲ ಸಾಧ್ಯತೆಯೂ ಇದೆ. ಬೆಂಗಳೂರು ಸೇರಿದಂತೆ ಕರಾವಳಿ, ಮಲೆನಾಡಿನಲ್ಲಿ ಮತ್ತೆ ಮಳೆ ಅಬ್ಬರ ಶುರುವಾಗಲಿದ್ದು, ಆರೆಂಜ್‌ ಅಲರ್ಟ್‌ ನೀಡಲಾಗಿದೆ.

VISTARANEWS.COM


on

By

karnataka Weather Forecast
ಜಲಾವೃತಗೊಂಡ ಸರ್ಕಾರಿ ಪ್ರಾಥಮಿಕ ಶಾಲೆ.. ನಿಂತ ನೀರಲ್ಲೇ ಧ್ವಜಾರೋಹಣ ಮಾಡಿದ ಮಕ್ಕಳು
Koo

ಚಿಕ್ಕೋಡಿ: ಗುರುವಾರ ಸಂಜೆ ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯಲ್ಲಿ ಮಳೆ (Rain news) ಅಬ್ಬರ ಜೋರಾಗಿತ್ತು. ಚಿಕ್ಕೋಡಿ, ನಿಪ್ಪಾಣಿ ಹಾಗೂ ಹುಕ್ಕೇರಿ ತಾಲೂಕುಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ. ಕಳೆದ ಒಂದು ವಾರದಿಂದ ವಿರಾಮ ನೀಡಿದ್ದ ಮಳೆ (karnataka weather Forecast) ಅಬ್ಬರಿಸಿತ್ತು.

ಶಾಲಾ ಆವರಣದಲ್ಲಿ ನಿಂತ ನೀರು

ರಾತ್ರಿ ಸುರಿದ ಮಳೆಯು ಅವಾಂತರವೇ ಸೃಷ್ಟಿಯಾಗಿದೆ. ಶಾಲಾ ಆವರಣದಲ್ಲಿ ನಿಂತ ನೀರಲ್ಲೇ ವಿದ್ಯಾರ್ಥಿಗಳು ಧ್ವಜಾರೋಹಣ ನೆರವೇರಿಸಿದರು. ಬಾಗಲಕೋಟೆಯ ಜಮಖಂಡಿಯ ಲಿಂಗದಕಟ್ಟಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದೆ.

ಇತ್ತ ನಿನ್ನೆ ಬುಧವಾರ ತಡರಾತ್ರಿ ಸುರಿದ ಧಾರಾಕಾರ ಮಳೆಗೆ ಬೆಳೆಗಳು ಜಲಾವೃತಗೊಂಡಿತ್ತು. ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಗುಂಡಾ ಗ್ರಾಮ ಹೊಲಗಳಿಗೆ ಹಳ್ಳದ ನೀರು ನುಗ್ಗಿತ್ತು. ರೈತ ಬಸವರಾಜ್ ಎಂಬುವವರಿಗೆ ಸೇರಿದ ನಾಲ್ಕೈದು ಎಕರೆ ಜಮೀನು ಜಲಾವೃತಗೊಂಡಿದೆ. ಹಿರೆಹಳ್ಳ ಒಡೆದು ಜಮೀನಿಗೆ ನೀರು ನುಗ್ಗಿದ ಪರಿಣಾಮ ಬೋರ್ ವೆಲ್ ಪೈಪ್ ಗಳು ಸೇರಿ ಮೆಕ್ಕೆಜೋಳ ಬೆಳೆ ಕೊಚ್ಚಿ ಹೋಗಿದೆ. ಮಳೆಗಾಲದಲ್ಲಿ ಹಳ್ಳದ ಮೂಲಕ ಗಣಿ ತ್ಯಾಜ್ಯ ಸಹ ಹರಿದು ಬಂದು ಜಮೀನುಗಳಲ್ಲಿ ಶೇಕರಣೆ ಆಗುತ್ತಿದೆ. ಇದರಿಂದಾಗಿ ಭೂಮಿ ಬೆಳೆ ಬೆಳೆಯಲು ಯೋಗ್ಯ ಇಲ್ಲದಂತಾಗಿದೆ.

ಇತ್ತ ಭಾರಿ ಮಳೆಯಿಂದ ನಾಗಲಾಪುರ ಹಳ್ಳ ಮೈದುಂಬಿ ಹರಿಯುತ್ತಿದ್ದು, ನಾಗಲಾಪೂರ- ಬ್ಯಾಲಕುಂದಿ ಸೇತುವೆ ಮುಳುಗಡೆಯಾಗಿದೆ. ಸೇತುವೆ ಮುಳುಗಡೆಯಿಂದ 5 ಹಳ್ಳಿಗಳ ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ. ಸೇತುವೆ ಮೇಲ್ಭಾಗದಲ್ಲಿ 7 ಅಡಿಗಳಷ್ಟು ಹರಿಯುತ್ತಿರುವ ನೀರಿನಿಂದಾಗಿ ನಾಗಲಾಪುರ, ನಾಗಲಾಪುರ ತಾಂಡಾ, ಬ್ಯಾಲಕುಂದಿ, ಗೊಲ್ಲರಹಳ್ಳಿ ಹಾಗೂ ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ.

ಇದನ್ನೂ ಓದಿ: Electric shock : ಕರೆಂಟ್‌ ಶಾಕ್‌ನಿಂದ ಎಂಜಿನಿಯರ್‌ ಸಾವು; ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ

ಈ ಜಿಲ್ಲೆಗಳಲ್ಲಿ ನಾಳೆ ಭಾರಿ ಮಳೆ

ಶುಕ್ರವಾರದಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.

ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಹಾಸನ, ಬಳ್ಳಾರಿ, ತುಮಕೂರು, ಮೈಸೂರು, ಕೊಡಗು ಜಿಲ್ಲೆಗಳಲ್ಲೂ ಪ್ರತ್ಯೇಕವಾಗಿ ಭಾರಿ ವರ್ಷಾಧಾರೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಹಾಸನ

Self Harming : ಮಗಳೊಂದಿಗೆ ಹೇಮಾವತಿ ನಾಲೆಗೆ ಹಾರಿ ದಂಪತಿ ಆತ್ಮಹತ್ಯೆ

Self Harming : ಹಾಸನದಲ್ಲಿ ಸಾಲಭಾದೆ ತಾಳಲಾರದೆ ಒಂದೇ ಕುಟುಂಬದ ಮೂವರು ಏಕಾಏಕಿ ನಾಪತ್ತೆಯಾಗಿದ್ದರು. ಇದೀಗ ಹೇಮಾವತಿ ನಾಲೆಯಲ್ಲಿ ಇಬ್ಬರ ಮೃತದೇಹ ಪತ್ತೆಯಾಗಿದ್ದು, ಬಾಲಕಿಯ ಶವಕ್ಕಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

VISTARANEWS.COM


on

By

Self Harming
Koo

ಹಾಸನ: ಸಾಲಭಾದೆ ತಾಳಲಾರದೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ (Self Harming) ಶರಣಾಗಿದ್ದಾರೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕೆರೆಬೀದಿಯಲ್ಲಿ ಘಟನೆ ನಡೆದಿದೆ. 13 ವರ್ಷದ ಮಗಳೊಂದಿಗೆ ಹೇಮಾವತಿ ನಾಲೆಗೆ ಹಾರಿ ಆತ್ಮಹತ್ಯೆ ದಂಪತಿ ಮೃತಪಟ್ಟಿದ್ದಾರೆ. ಶ್ರೀನಿವಾಸ್ (43), ಶ್ವೇತಾ (36) ಹಾಗೂ ನಾಗಶ್ರೀ (13) ಮೃತ ದುರ್ದೈವಿಗಳು.

ಶ್ರೀನಿವಾಸ್‌ ಕಾರು ಚಾಲಕರಾಗಿದ್ದರೆ, ಶ್ವೇತಾ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದರು. ಶ್ರೀನಿವಾಸ್‌ ಸಾಕಷ್ಟು ಸಾಲ ಮಾಡಿಕೊಂಡಿದ್ದರು. ಕಳೆದ ಮಂಗಳವಾರ ಈ ಮೂವರು ಏಕಾಏಕಿ ಕಾಣಿಯಾಗಿದ್ದರು. ಸಂಬಂಧಿಗಳು ಎಲ್ಲೆಡೆ ಹುಡುಕಾಟ ನಡೆಸಿದ್ದರು. ಆದರೆ ಇವರ ಸುಳಿವು ಸಿಕ್ಕಿರಲಿಲ್ಲ.

ಕುಟುಂಬಸ್ಥರು ನಂತರ ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ನಿನ್ನೆ ಬುಧವಾರ ಸಂಜೆ ಬಾಗೂರು ಹೋಬಳಿ, ಮುದ್ಲಾಪುರ ಬಳಿಯ ನಾಲೆಯಲ್ಲಿ ಶ್ರೀನಿವಾಸ್, ಶ್ವೇತಾ ಶವ ಪತ್ತೆಯಾಗಿದೆ. ಹೇಮಾವತಿ ನಾಲೆಗೆ ಹಾರಿ ಮೂವರು ಆತ್ಮಹತ್ಯೆಗೆ ಶರಣಾಗಿರುವುದು ಗೊತ್ತಾಗಿದೆ.

ಅಗ್ನಿಶಾಮಕ ದಳದ‌ ಸಿಬ್ಬಂದಿ ಹಾಗೂ ಪೊಲೀಸರು ದಂಪತಿಯ ಶವವನ್ನು ಹೊರ ತೆಗೆದಿದ್ದಾರೆ. ಸದ್ಯ ಬಾಲಕಿ ನಾಗಶ್ರೀ ಮೃತದೇಹಕ್ಕಾಗಿ ಶೋಧಕಾರ್ಯ ಮುಂದುವರಿದಿದೆ. ಸ್ಥಳಕ್ಕೆ ಎಸ್‌ಪಿ ಮಹಮದ್ ಸುಜೀತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನುಗ್ಗೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Bike Wheeling: ಸ್ವಾತಂತ್ರ್ಯ ದಿನಾಚರಣೆ ಹೆಸರಲ್ಲಿ ಹೈವೇಯಲ್ಲಿ ಡೆಡ್ಲಿ ವ್ಹೀಲಿಂಗ್‌!

ಬಾವಿಯಲ್ಲಿ ಅಪರಿಚಿತ ಶವ ಪತ್ತೆ

ಕಪಿಲೇಶ್ವರ ಮಂದಿರ ಬಾವಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಮೃತನ ಗುರುತು ಪತ್ತೆಯಾಗಿಲ್ಲ. ಕುಡಿದ ಮತ್ತಿನಲ್ಲಿ ಬಾವಿಗೆ ಬಿದ್ದಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಬೆಳಗ್ಗೆ ಪಾಲಿಕೆಯ ಪೌರ ಕಾರ್ಮಿಕರು ಶುಚಿಗೊಳಿಸುವಾಗ ಶವ ಪತ್ತೆಯಾಗಿದೆ. ಮಾರ್ಕೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟ‌ನೆ ನಡೆದಿದೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Rishabh Pant
ಕ್ರಿಕೆಟ್2 mins ago

Rishabh Pant: ಕೀಪಿಂಗ್​ ಬಿಟ್ಟು ಬೌಲಿಂಗ್​ ನಡೆಸಿದ ರಿಷಭ್​ ಪಂತ್​; ವಿಡಿಯೊ ವೈರಲ್​

Physical abuse
ಬೆಂಗಳೂರು10 mins ago

Physical Abuse : ಕೋರಮಂಗಲದ ಪಬ್‌ನಿಂದ ಮನೆಗೆ ಹೋಗುತ್ತಿದ್ದ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

P Susheela hospitalized Legendary playback singer
ಸ್ಯಾಂಡಲ್ ವುಡ್11 mins ago

P Susheela: ಖ್ಯಾತ ಗಾಯಕಿ ಪಿ. ಸುಶೀಲಾ ಆಸ್ಪತ್ರೆಗೆ ದಾಖಲು

Gold Rate Today
ಚಿನ್ನದ ದರ27 mins ago

Gold Rate Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ; ಇಂದಿನ ಬೆಲೆ ಚೆಕ್‌ ಮಾಡಿ

Bigg boss Hindi list of contestants
ಬಿಗ್ ಬಾಸ್34 mins ago

Bigg boss Hindi: ಬಿಗ್ ಬಾಸ್ 18ರ ಸಂಭಾವ್ಯ ಸ್ಪರ್ಧಿಗಳ ಪಟ್ಟಿ ಇಲ್ಲಿದೆ; ಯಾವಾಗಿಂದ ಶುರು? 

karnataka weather Forecast
ಮಳೆ44 mins ago

Karnataka Weather : ಭಾರಿ ಮಳೆ ಹಿನ್ನೆಲೆ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

TNIT Media Awards
ಕರ್ನಾಟಕ46 mins ago

TNIT Media Award : ವಿಸ್ತಾರ ನ್ಯೂಸ್​​ಗೆ ಟಿಎನ್​ಐಟಿ ಸೌತ್ ಇಂಡಿಯಾ ಮೀಡಿಯಾ ಅವಾರ್ಡ್ಸ್​​ನ 3 ಪ್ರಶಸ್ತಿಗಳ ಗರಿ

ಕ್ರೀಡೆ54 mins ago

WTC 2025: ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ ಫೈನಲ್​ ಪ್ರವೇಶಿಸಬೇಕಿದ್ದರೆ ಭಾರತಕ್ಕೆ ಇನೆಷ್ಟು ಗೆಲುವು ಬೇಕು?

Doctors Strike
ದೇಶ58 mins ago

Doctors Strike: ನಾವು ಮುಂದಿನ ಸಂತ್ರಸ್ತರಾಗಲು ಬಯಸುವುದಿಲ್ಲ; ಪ್ರತಿಭಟನಾನಿರತ ವೈದ್ಯರ ಕಿಡಿನುಡಿ

Dina Bhavishya
ಭವಿಷ್ಯ1 hour ago

Dina Bhavishya: ಈ ರಾಶಿಯವರಿಗೆ ಆತುರದಲ್ಲಿ ಆಡಿದ ಮಾತು ಅಪಾಯ ತಂದಿತು ಎಚ್ಚರ

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ1 week ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 week ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 week ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌